ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ತಪ್ಪಿತಸ್ಥ ಆರೋಪಿಗೆ 3 ವರ್ಷಗಳ ಕಠಿಣ ಕಾರಾಗೃಹವಾಸ ಶಿಕ್ಷೆ ಹಾಗೂ 50,000 ರೂಪಾಯಿ ದಂಡ ವಿಧಿಸಿ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.
2024ರಲ್ಲಿ ಶಿಕಾರಿಪುರ ತಾಲೂಕಿನ 23 ವರ್ಷದ ವ್ಯಕ್ತಿಯೊಬ್ಬರು, 15 ವರ್ಷದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕುರಿತು ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ಆಗಿನ ತನಿಖಾಧಿಕಾರಿಗಳಾದ ಶಿರಾಳಕೊಪ್ಪ ಪೊಲೀಸ್ ಠಾಣೆಯ ಪಿಎಸ್‌ಐ ಶ್ರೀಮತಿ ಪುಷ್ಪಾ ಅವರು ಪ್ರಕರಣದ ಸಮಗ್ರ ತನಿಖೆ ಪೂರ್ಣಗೊಳಿಸಿ, ಘನ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ (ಚಾರ್ಜ್‌ಶೀಟ್) ಸಲ್ಲಿಸಿದ್ದರು.
ಶಿವಮೊಗ್ಗದ ಘನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್‌ಟಿಎಸ್‌ಸಿ-1) ದಲ್ಲಿ ಪ್ರಕರಣದ ವಿಚಾರಣೆ ನಡೆಯಿತು.
ಸರ್ಕಾರಿ ಅಭಿಯೋಜಕರಾದ ಶ್ರೀಧರ್ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.
ವಾದ-ಪ್ರತಿವಾದಗಳನ್ನು ಆಲಿಸಿದ ಮಾನ್ಯ ನ್ಯಾಯಾಧೀಶರಾದ ನಿಂಗನಗೌಡ ಭ. ಪಾಟೀಲ್ ಅವರು ಆರೋಪಿಗೆ 03 ವರ್ಷ ಕಠಿಣ ಕಾರಾಗೃಹವಾಸ ಶಿಕ್ಷೆ ಹಾಗೂ ₹50,000/- ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ಅಪ್ರಾಪ್ತೆಗೆ ಲೈಂಗಿಕ ಕಿರುಕುಳ: ಆರೋಪಿಗೆ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು
ಈಗಲೂ ಕಾಲಮಿಂಚಿಲ್ಲ. ನೀಟ್ ಪರೀಕ್ಷೆ ಹಗರಣದ ಹಿನ್ನೆಯಲ್ಲಿ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನ ತಕ್ಷಣ ಸಚಿವ ಸಂಪುಟದಿಂದ ಕಿತ್ತುಹಾಕಿ -ಮಾಜಿ ಸೀಎಂ ಸಿದ್ಧರಾಮಯ್ಯ
ನೀಟ್ ಪರೀಕ್ಷೆ ಹಗರಣದ ಬಲಿಪಶು ವಿದ್ಯಾರ್ಥಿಗಳ ಶಾಂತಿಯುತ ಪ್ರತಿರೋಧದಿಂದ ನಡುಗಿಹೋಗಿರುವ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರ ಹತಾಶೆಯಿಂದ ಲಾಠಿ-ದೊಣ್ಣೆಗಳ ಮೂಲಕ ಪ್ರತಿಭಟನೆಯನ್ನು ದಮನಿಸಲು ಹೊರಟಿರುವುದನ್ನು ನೋಡಿದರೆ ದೇಶದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಘೋಷಣೆಯಾದಂತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನೀಟ್ ಹಗರಣದ ಪರಿಣಾಮಗಳ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.
ನೂರಾರು ಅಮಾಯಕ ಯುವಕ-ಯುವತಿಯರು ಪೊಲೀಸರ ನಿರ್ದಯ ಲಾಠಿ ಏಟಿನಿಂದಾಗಿ ಗಾಯಗೊಂಡಿದ್ದಾರೆ. ಕೇವಲ ದೆಹಲಿಯಲ್ಲಿ ಮಾತ್ರವಲ್ಲ, ಕರ್ನಾಟಕವೂ ಸೇರಿದಂತೆ ಇಡೀ ದೇಶದಲ್ಲಿ ಕೇಂದ್ರ ಸರ್ಕಾರದ ಶಿಕ್ಷಣ ಮತ್ತು ಯುವಜನ ವಿರೋಧಿ ನೀತಿಯ ವಿರುದ್ಧ ಯುವಜನರು ಸಿಡಿದೆದ್ದು ಬೀದಿಗಳಿದಿದ್ದಾರೆ. ಒಬ್ಬ ಅಸಮರ್ಥ ಮತ್ತು ಭ್ರಷ್ಟ ಶಿಕ್ಷಣ ಮಂತ್ರಿಯ ವಿರುದ್ದ ಕ್ರಮಕೈಗೊಳ್ಳಲು ಸಾಧ್ಯವಾಗದ ನರೇಂದ್ರ ಮೋದಿ ಅವರು ತಾವೊಬ್ಬ ದುರ್ಬಲ ಮತ್ತು ದುಷ್ಟರಕ್ಷಕ ಪ್ರಧಾನಿ ಎನ್ನುವುದನ್ನು ಸಾಬೀತುಪಡಿಸಿದ್ದಾರೆ. ನೊಂದ ಅಮಾಯಕ ವಿದ್ಯಾರ್ಥಿಗಳು ಮತ್ತು ಅವರ ಪೋಷಕರ ಕಣ್ಣೀರಿನ ಶಾಪದಿಂದಲೇ ಮೋದಿ ಸರ್ಕಾರ ಪತನಗೊಳ್ಳಲಿದೆ.
ನಿರ್ಲಕ್ಷ್ಯ, ಸುಳ್ಳು ಮತ್ತು ಅಪಪ್ರಚಾರದ ಮೂಲಕ ವಿದ್ಯಾರ್ಥಿ ಮತ್ತು ಯುವಜನರ ಆಂದೋಲನವನ್ನು ದಾರಿತಪ್ಪಿಸಬಹುದೆಂಬ ಭ್ರಮೆಯಲ್ಲಿದ್ದ ಪ್ರಧಾನಿ ಮೋದಿಯವರು ಇಂದು 20,000ಕ್ಕೂ ಹೆಚ್ಚು ಯುವಜನರು ಪ್ರಾಣದ ಹಂಗುತೊರೆದು ಸಂಸತ್ ಭವನದ ಮೇಲೆರಗಲು ಸಿದ್ಧರಾಗಿ ಬಂದಾಗ ದಿಕ್ಕುತೋಚದಂತಾಗಿದ್ದಾರೆ. ಕೊನೆಗೆ ಹಿಂಸೆಯ ಮೂಲಕ ಅಹಿಂಸಾ ಹೋರಾಟವನ್ನು ಹತ್ತಿಕ್ಕಲು ಹತಾಶ ಪ್ರಯತ್ನ ನಡೆಸಿ, ಅದರಲ್ಲಿಯೂ ವಿಫಲರಾಗಿದ್ದಾರೆ.
ಹನ್ನೆರಡು ವರ್ಷಗಳ ನರೇಂದ್ರ ಮೋದಿ ಅವರ ಸರ್ಕಾರದಿಂದ ಅತ್ಯಂತ ಹೆಚ್ಚು ಅನ್ಯಾಯಕ್ಕೊಳಗಾದವರು ಈ ದೇಶದ ವಿದ್ಯಾರ್ಥಿಗಳು ಮತ್ತು ಯುವಜನರು. ವರ್ಷಕ್ಕೆ ಎರಡು ಕೋಟಿ ಉದ್ಯೋಗ ನೀಡುವ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದಿರುವ ನರೇಂದ್ರ ಮೋದಿ ಅವರ ಸರ್ಕಾರದ ಆಡಳಿತದ ಅವಧಿಯಲ್ಲಿ ನಿರುದ್ಯೋಗದ ಪ್ರಮಾಣ ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದಿದೆ. ಇದರ ಜೊತೆಗೆ ಸಾಮಾನ್ಯವಾದ ಪರೀಕ್ಷೆಗಳನ್ನು ಕೂಡಾ ಕ್ರಮಬದ್ಧ ಹಾಗೂ ನ್ಯಾಯಯುತವಾಗಿ ನಡೆಸಲು ಸಾಧ್ಯವಾಗದಷ್ಟು ಆಡಳಿತ ಕುಲಗೆಟ್ಟು ಹೋಗಿದೆ.
ದೇಶಾದ್ಯಂತ ನಡೆಯುತ್ತಿರುವ ವಿದ್ಯಾರ್ಥಿ ಮತ್ತು ಯುವಜನರ ಆಂದೋಲನ ಕೇವಲ ನೀಟ್ ಪರೀಕ್ಷೆಯ ಹಗರಣಕ್ಕೆ ಸೀಮಿತವಾದುದಲ್ಲ. ಕೇಂದ್ರ ಸರ್ಕಾರದ ಭ್ರಷ್ಟಾಚಾರ, ದುರಾಡಳಿತ ಮತ್ತು ಸರ್ವಾಧಿಕಾರಿ ಧೋರಣೆಯಿಂದ ಜನ ಬೇಸತ್ತಿದ್ದಾರೆ. ರಚನಾತ್ಮಕವಾದ ಟೀಕೆ-ಟಿಪ್ಪಣಿಗಳನ್ನು ಸಹಿಸಲಾಗದಷ್ಟು ಅಸೈರಣೆ ಹೊಂದಿರುವ ನರೇಂದ್ರ ಮೋದಿ ಅವರ ಸರ್ಕಾರ ವಿರೋಧ ಪಕ್ಷಗಳ ದನಿಯನ್ನು ಸಾಂವಿಧಾನಿಕ ಸಂಸ್ಥೆಗಳ ದುರುಪಯೋಗದ ಮೂಲಕ ಹತ್ತಿಕ್ಕಿದ ರೀತಿಯಲ್ಲಿಯೇ ವಿದ್ಯಾರ್ಥಿ ಆಂದೋಲನವನ್ನೂ ದಮನಿಸಲು ಹೊರಟಿರುವುದು ಮುಂದಿನ ದಿನಗಳಲ್ಲಿ ದುಬಾರಿಯಾಗಲಿದೆ.
ಒಬ್ಬ ಸತ್ಯ ಮತ್ತು ನ್ಯಾಯನಿಷ್ಠ ಗಾಂಧಿವಾದಿ ಸೋನಮ್ ವಾಂಗ್ಚುಕ್ ಅವರ ಮೇಲೆ ಮೇಲೆ ಪೊಲೀಸರನ್ನು ಛೂಬಿಟ್ಟು, ಬಲಪ್ರಯೋಗದಿಂದ ಉಪವಾಸ ನಿಲ್ಲಿಸಲು ಪ್ರಯತ್ನಿಸುವ ಮೂಲಕ ದೇಶದೊಳಗೆ ಮಾತ್ರವಲ್ಲ ವಿದೇಶದಲ್ಲಿಯೂ ನರೇಂದ್ರ ಮೋದಿಯವರು ಖಂಡನೆಗೀಡಾಗಿದ್ದಾರೆ. ಮಹಾತ್ಮ ಗಾಂಧೀಜಿ ಅವರು ಹುಟ್ಟಿದ ರಾಜ್ಯಕ್ಕೆ ಸೇರಿದವರಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರು ನಾಥುರಾಮ್ ಗೋಡ್ಸೆ ಅನುಯಾಯಿಯಂತೆ ನಡೆದುಕೊಂಡಿರುವುದು ವಿಷಾದನೀಯ.
ನೀಟ್ ಪರೀಕ್ಷೆ ಹಗರಣ ಮತ್ತು ದಾರಿ ತಪ್ಪಿರುವ ದೇಶದ ಒಟ್ಟು ಶಿಕ್ಷಣ ವ್ಯವಸ್ಥೆಯ ವಿರುದ್ಧ ಜನಜಾಗೃತಿಗೊಳಿಸಲು ಈಗಾಗಲೇ ಕಾಂಗ್ರೆಸ್ ಪಕ್ಷ ಬೀದಿಗಿಳಿದಿದೆ. ನಮ್ಮ ಪಕ್ಷದ ಎಲ್ಲ ನಾಯಕರು ಮತ್ತು ಕಾರ್ಯಕರ್ತರು ನೀಟ್ ಪರೀಕ್ಷೆಯ ಹಗರಣದಿಂದ ನೊಂದವರ ಪರವಾಗಿ ದನಿ ಎತ್ತುವ ಕೆಲಸ ಮಾಡಬೇಕು. ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿಯವರು ಈಗಾಗಲೇ ಈ ಆಂದೋಲನಕ್ಕೆ ಚಾಲನೆ ನೀಡಿದ್ದಾರೆ.
ಈಗಲೂ ಕಾಲ ಮಿಂಚಿಲ್ಲ, ನೀಟ್ ಪರೀಕ್ಷೆ ಹಗರಣವೂ ಸೇರಿದಂತೆ ಶಿಕ್ಷಣ ಕ್ಷೇತ್ರವನ್ನು ಅಧೋಗತಿಗೆ ತಂದು ನಿಲ್ಲಿಸಿರುವ ಕೇಂದ್ರ ಶಿಕ್ಷಣ ಸಚಿವರಾದ ಧರ್ಮೇಂದ್ರ ಪ್ರಧಾನ್ ಅವರನ್ನು ಪ್ರಧಾನಿ ನರೇಂದ್ರ ಮೋದಿಯವರು ತಕ್ಷಣದಿಂದಲೇ ಸಂಪುಟದಿಂದ ಕಿತ್ತು ಹಾಕಬೇಕು. ವಿದ್ಯಾರ್ಥಿ ನಾಯಕರನ್ನು ಸಮಾಲೋಚನೆಗೆ ಕರೆದು ಅವರ ಸಮಸ್ಯೆಗಳನ್ನು ಆಲಿಸಿ, ಅವುಗಳಿಗೆ ಪರಿಹಾರವನ್ನು ಕಲ್ಪಿಸಲು ಮುಂದಾಗಬೇಕು. ಇದೇ ರೀತಿ ಬಲಪ್ರಯೋಗದ ಮೂಲಕವೇ ಶಾಂತಿಯುತವಾದ ಪ್ರತಿರೋಧವನ್ನು ಎದುರಿಸಲು ಹೊರಟರೆ ಕೇಂದ್ರ ಸರ್ಕಾರದ ಪತನದ ದಿನ ಎಣಿಕೆ ಶುರುವಾಗಲಿದೆ ಎಂದು ರಾಜ್ಯದ ಮಾಜಿ ಸೀಎಂ ಸಿದ್ಧರಾಮಯ್ಯನವರು ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Dr. G. Parameshwara ಎಸ್ ಐ ಆರ್ ಪ್ರಕ್ರಿಯೆ: ಜನರಿಗೆ ತೊಂದರೆಯಾಗದಂತೆ ಕ್ರಮ- ಡಾ.ಜಿ.ಪರಮೇಶ್ವರ
Dr. G. Parameshwara ಕೇಂದ್ರ ಸರ್ಕಾರದ ಎಸ್‌ಐಆರ್ ಪ್ರಕ್ರಿಯೆಗೆ ಅಗತ್ಯ ದಾಖಲೆಗಳನ್ನು ಜನರು ಸುಲಭವಾಗಿ ಒದಗಿಸುವ ಉದ್ದೇಶದಿಂದ ಮನೆ ಮನೆಗೆ ಉಚಿತ ಜಾತಿ ಪ್ರಮಾಣಪತ್ರ ಹಾಗೂ ಶಾಶ್ವತ ನಿವಾಸ ಪ್ರಮಾಣಪತ್ರ ವಿತರಿಸಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿಗಳಾದ ಡಾ.ಜಿ.ಪರಮೇಶ್ವರ ಅವರು ತಿಳಿಸಿದರು.
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗಾಗಿ ಮನೆ ಮನೆಗೆ ಜಾತಿ ಪ್ರಮಾಣ ಪತ್ರದ ಉಚಿತ ವಿತರಣೆ ಹಾಗೂ ಶಾಶ್ವತ ನಿವಾಸ ಪ್ರಮಾಣ ಪತ್ರವನ್ನು ವಿತರಿಸುವ ಕಾರ್ಯಕ್ರಮಕ್ಕೆ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಚಾಲನೆ ನೀಡಿದ ಬಳಿಕ ಅವರು ಮಾಧ್ಯಮಕ್ಕೆ ಮಾತನಾಡಿದರು.
ಸರ್ಕಾರದ ವಿವಿಧ ಸೌಲಭ್ಯಗಳನ್ನು ಪಡೆಯಲು ಮತ್ತು ಕರ್ನಾಟಕದ ಮೂಲ ನಿವಾಸಿ ಎಂದು ಸಾಬೀತು ಪಡಿಸಲು ಜನರಿಗೆ ಸುಲಭವಾಗಿಸುವ ನಿಟ್ಟಿನಲ್ಲಿ ಈ ಪ್ರಮಾಣಪತ್ರಗಳು ಸಹಾಯ ಮಾಡಲಿವೆ. ಶಾಶ್ವತ ನಿವಾಸ ಪ್ರಮಾಣಪತ್ರ ಪಡೆಯಲು ಕೆಲವು ಮಾನದಂಡಗಳನ್ನು ನಿಗದಿ ಪಡಿಸಿದ್ದೇವೆ ಎಂದರು.
ಮುಂದುವರೆದು, ಅರ್ಜಿದಾರರು ಕರ್ನಾಟಕದಲ್ಲಿ ಜನಿಸಿರಬೇಕು ಅಥವಾ ನಿಗದಿತ ಅರ್ಹತೆಗಳನ್ನು ಪೂರೈಸಿರಬೇಕು. ರಾಜ್ಯದಲ್ಲಿ ಕನಿಷ್ಠ 10 ವರ್ಷ ವಾಸಿಸಿರಬೇಕು. ಕರ್ನಾಟಕದಲ್ಲೇ ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಶಿಕ್ಷಣ ಪೂರ್ಣಗೊಳಿಸಿರಬೇಕು. ರಾಜ್ಯದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡಿರಬೇಕು. ಸರ್ಕಾರ ಅಥವಾ ಸ್ಥಳೀಯ ಸಂಸ್ಥೆಗಳಲ್ಲಿ ಕನಿಷ್ಠ 7 ವರ್ಷ ಸೇವೆ ಸಲ್ಲಿಸಿರಬೇಕು. ತಂದೆ, ತಾಯಿ, ಪತಿ ಅಥವಾ ಪತ್ನಿ ಕರ್ನಾಟಕದಲ್ಲಿ ಕನಿಷ್ಠ 10 ವರ್ಷ ವಾಸಿಸಿರುವ ದಾಖಲೆ ಇರಬೇಕು. ಕರ್ನಾಟಕದಲ್ಲಿ ಸ್ಥಿರಾಸ್ತಿ ಹೊಂದಿರಬೇಕು ಅಥವಾ ಕಾನೂನುಬದ್ಧವಾಗಿ ಉಪಯೋಗಿಸುತ್ತಿರಬೇಕು. ಮತದಾರರ ಪಟ್ಟಿಯಲ್ಲಿ ಹೆಸರು ಇರಬೇಕು. ಕರ್ನಾಟಕದ ನಿವಾಸಿಯನ್ನು ವಿವಾಹವಾಗಿದ್ದರೆ ರಾಜ್ಯದಲ್ಲೇ ವಾಸಿಸುತ್ತಿರಬೇಕು ಎಂಬೆಲ್ಲ ಅಂಶಗಳನ್ನು ಒಳಗೊಂಡಿರುವ ಮಾನದಂಡಗಳು ಇರುವುದಾಗಿ ವಿವರಿಸಿದರು.
ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿಯನ್ನು ಸರ್ಕಾರ ಹೇಗೆ ಎದುರಿಸುತ್ತಿದೆ ಎಂಬ ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿಗಳು, ಈ ವಿಚಾರವನ್ನು ನಾವು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ನಾನು ಮತ್ತು ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೇವೆ. ಆದರೆ ಇದುವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ತಿಳಿಸಿದರು.
Dr. G. Parameshwara ಕೇಂದ್ರ ಸರ್ಕಾರ ನಮ್ಮ ಮನವಿಗೆ ಸ್ಪಂದಿಸಬೇಕು. ಏಕೆಂದರೆ ಇದು ಕಳೆದ 150 ವರ್ಷಗಳಲ್ಲೇ ಕಂಡುಬಂದಿರುವ ಅತ್ಯಂತ ತೀವ್ರ ಬರ ಪರಿಸ್ಥಿತಿಯಾಗಿದೆ. ಕೇವಲ ಎರಡು ಅಥವಾ ಮೂರು ಜಿಲ್ಲೆಯಲ್ಲ, ಇಡೀ ರಾಜ್ಯವೇ ಬರವನ್ನು ಎದುರಿಸುತ್ತಿದೆ. ಪರಿಸ್ಥಿತಿಯ ಗಂಭೀರತೆಯನ್ನು ಮನಗಂಡೇ ನಾವು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿರುವುದು ಎಂದರು.
ನೀಟ್ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿ ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಹಾಗೂ ಸಂಸತ್ತಿನಲ್ಲಿಯೂ ಈ ವಿಚಾರ ಪ್ರಸ್ತಾಪವಾಗಿರುವ ಬಗ್ಗೆ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, ಇದು ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆ. ಮೊದಲ ಪ್ರಯತ್ನದಲ್ಲೇ ಉತ್ತೀರ್ಣರಾಗಿದ್ದ ಕೆಲ ವಿದ್ಯಾರ್ಥಿಗಳು ಎರಡನೇ ಬಾರಿ ಪರೀಕ್ಷೆ ಎದುರಿಸಿದಾಗ ಉರ್ತೀರ್ಣರಾಗಿಲ್ಲ. ಈ ಕುರಿತು ಮಾಧ್ಯಮಗಳೂ ವರದಿ ಮಾಡಿವೆ. ಯಾವುದೇ ಸಮಸ್ಯೆ ಉದ್ಭವಿಸದಂತೆ ಪರೀಕ್ಷೆಗಳನ್ನು ಕಟ್ಟುನಿಟ್ಟಾಗಿ ಮತ್ತು ಪಾರದರ್ಶಕವಾಗಿ ನಡೆಸುವುದು ಕೇಂದ್ರ ಸರ್ಕಾರದ ಕರ್ತವ್ಯವಾಗಿದೆ ಎಂದು ಹೇಳಿದರು.
ಮನೆಮನೆಗೆ ಬಿಎಲ್ ಓ ಗಳು ಭೇಟಿ ನೀಡಿ ಎಸ್ಐಆರ್ ಮುಂದಿನ ಪ್ರಕ್ರಿಯೆಪರೀಲಿಸಬೇಕು- ಅನ್ಬು ಕುಮಾರ್
ಹೊಸ ಮತದಾರರ ಸೇರ್ಪಡೆ, ಮೃತಪಟ್ಟ ಅಥವಾ ಸ್ಥಳಾಂತರಗೊಂಡ ಮತದಾರರ ಹೆಸರುಗಳನ್ನು ತೆಗೆದುಹಾಕುವುದು, ವಿವರಗಳ ತಿದ್ದುಪಡಿ ಸೇರಿದಂತೆ ಮತದಾರ ಪಟ್ಟಿಯ ಸಮಗ್ರ ವಿಶೇಷ ಪರಿಷ್ಕರಣೆ ಪ್ರಕ್ರಿಯೆಯನ್ನು ಶೇಕಡಾ 100% ರಷ್ಟು ಪೂರ್ಣಗೊಳಿಸಲು ಬೂತ್ ಮಟ್ಟದ ಅಧಿಕಾರಿಗಳು (BLO) ಮನೆಮನೆಗೆ ಭೇಟಿ ನೀಡಿ ಮಾಹಿತಿ ಪರಿಶೀಲಿಸಬೇಕು ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಅವರು ತಿಳಿಸಿದರು.
ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಇಂದು ಮತದಾರ ಪಟ್ಟಿಯ ಸಮಗ್ರ ವಿಶೇಷ ಪರಿಷ್ಕರಣೆ (SIR) ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿಯನ್ನು ವಿಶೇಷ ಪರಿಷ್ಕರಣೆ ನಡೆಸಲಾಗುತ್ತಿದ್ದು, ಮತದಾರರ ಪಟ್ಟಿಯ ಶುದ್ಧತೆಗಾಗಿ ಈ ಕ್ರಮ ಅಗತ್ಯವಿದೆ.
ಬೂತ್ ಮಟ್ಟದ ಅಧಿಕಾರಿಗಳ ಪರಿಷ್ಕರಣೆ ಕಾರ್ಯ ಚುರುಕುಗೊಳಿಸಬೇಕು ಎಂದು ತಿಳಿಸಿದರು .
ಮತದಾರರ ಪಟ್ಟಿ ಪರಿಷ್ಕರಣೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಮಾನ್ಯತೆ ಪಡೆದ ರಾಜಕೀಯ ಪಕ್ಷಗಳಿಗೆ ಸಕಾಲದಲ್ಲಿ ನೀಡಬೇಕು. ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆಯನ್ನು ಕಾಪಾಡುವ ಉದ್ದೇಶದಿಂದ ಪರಿಷ್ಕರಣೆ ಪ್ರಕ್ರಿಯೆಯ ಪ್ರತಿಯೊಂದು ಹಂತದ ಮಾಹಿತಿಯನ್ನು ಅಧಿಕೃತವಾಗಿ ಹಂಚಿಕೊಳ್ಳುಬೇಕು ಎಂದರು.
ರಾಜಕೀಯ ಪಕ್ಷಗಳಿಂದ ಸ್ವೀಕರಿಸಲ್ಪಡುವ ದೂರುಗಳು, ಆಕ್ಷೇಪಣೆಗಳು ಹಾಗೂ ಅರ್ಜಿಗಳನ್ನು ಸರಿಯಾಗಿ ನೋಂದಾಯಿಸಿ, ಅವುಗಳ ದಾಖಲೆ ಪ್ರತಿಗಳನ್ನು ವ್ಯವಸ್ಥಿತವಾಗಿ ಸಂಗ್ರಹಿಸಬೇಕು. ದೂರುಗಳ ವಿಲೇವಾರಿಯನ್ನು ಚುನಾವಣಾ ಆಯೋಗದ ನಿಯಮಾನುಸಾರ ತ್ವರಿತವಾಗಿ ಕೈಗೊಳ್ಳಬೇಕು ಎಂದು ತಿಳಿಸಿದರು.
ಪರಿಷ್ಕರಣೆ ಕಾರ್ಯದ ಪ್ರಗತಿ ಹಾಗೂ ಎದುರಾಗುವ ಸಮಸ್ಯೆಗಳ ಕುರಿತು ವಾರಕ್ಕೊಮ್ಮೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಬೇಕು. ಸಭೆಯಲ್ಲಿ ಪಡೆದ ಸಲಹೆಗಳು ಹಾಗೂ ಆಕ್ಷೇಪಣೆಗಳನ್ನು ದಾಖಲಿಸಿಕೊಂಡು ಅಗತ್ಯ ಕ್ರಮ ಕೈಗೊಳ್ಳಬೇಕು.
ಪ್ರಸ್ತುತ ಚುನಾವಣೆ ಪ್ರಕ್ರಿಯೆ ಸುಲಭವಾಗಿದೆ. ಪ್ರತಿ ಮಾಹಿತಿ ಬೂತ್ ಮಟ್ಟದ ಅಧಿಕಾರಿಗಳ ಕೈಗಳಲ್ಲಿದೆ. ಮನೇಲಿ ಬಹಳ ದಿನಗಳಿಂದ ಮತದಾರರು ಇಲ್ಲದೇ ಹೋದಲ್ಲಿ ಅಂತಹ ಪ್ರಕರಣಗಳ ಕುರಿತು ಸಮೀಪದ ಪೊಲೀಸ್ ಠಾಣೆಯಲ್ಲಿ ಮಾಹಿತಿ ಪಡೆಯಬೇಕು ಎಂದರು.
ಶೇಕಡಾ 100% ರಷ್ಟು ಪರಿಷ್ಕರಣೆಗೆ ಸೂಚನೆ :
ಪ್ರತಿ ತಾಲೂಕುಗಳಲ್ಲಿ ಮತದಾರರ ಪರಿಷ್ಕರಣೆ ಶೇಕಡ 50% ಕ್ಕಿಂತಲೂ ಕಡಿಮೆ ಇರದಂತೆ 100% ಗುರಿ ಸಾಧಿಸಬೇಕು.
ಬೂತ್ ಮಟ್ಟದ ಅಧಿಕಾರಿಗಳ ಸ್ಥಳೀಯವಾಗಿ ಏನಾದರೂ ಸಮಸ್ಯೆ ಎದುರಾದಲ್ಲಿ ಮೇಲಧಿಕಾರಿಗಳಿಗೆ ಕರೆ ಮಾಡಿ ಮಾಹಿತಿ ಪರಿಶೀಲಿಸಿಕೊಳ್ಳಬೇಕು.
ಶೇಕಡಾ 100% ರಷ್ಟು ಮತದಾರ ಪರಿಷ್ಕರಣೆ ಮಾಡುವ ಜವಾಬ್ದಾರಿ ಅಧಿಕಾರಿಗಳ ಮೇಲಿದೆ. ಮತದಾರ ಪರಿಷ್ಕರಣೆ ನಮೂನೆಯನ್ನು ವಿತರಣೆಯಾದ ಬಳಿಕ, ಸಂಗ್ರಹವಾದ ಮಾಹಿತಿಯನ್ನು ಕಾಲಕಾಲಕ್ಕೆ ಹಿರಿಯ ಅಧಿಕಾರಿಗಳಿಗೆ ಸಲ್ಲಿಸಬೇಕು.
ಜಿಲ್ಲೆಯ ಎಲ್ಲಾ ಬೂತ್ ಮಟ್ಟದ ಅಧಿಕಾರಿಗಳೊಂದಿಗೆ ಮತದಾರ ಪರಿಷ್ಕರಣೆಯಲ್ಲಿ ಹಾಗೂ ಮಾಹಿತಿ ಸಂಗ್ರಹಣೆಯಲ್ಲಿ ಆಗುವ ವಿವಿಧ ಸಮಸ್ಯೆಗಳ ಕುರಿತು ಮೇಲಾಧಿಕಾರಿಗಳು ಚರ್ಚಿಸಿ ಮಾಹಿತಿ ಪಡೆದುಕೊಳ್ಳಬೇಕು. ಆಗಸ್ಟ್ 8 ರವರೆಗೆ ಅವಕಾಶವಿದ್ದು, ಇನ್ನೂ ಕೆಲವಡೆ ವಿತರಣೆಯಾಗದ ಭಾಗದಲ್ಲಿ ಸಂಪೂರ್ಣ ಮತದಾರರ ಪರಿಷ್ಕರಣೆ ಮಾಡಬೇಕು ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ತಿಳಿಸಿದರು.
ಚುನಾವಣಾ ಆಯೋಗ ಹೊರಡಿಸಿರುವ ಎಲ್ಲಾ ಮಾರ್ಗಸೂಚಿಗಳು ಮತ್ತು ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಯಾವುದೇ ಲೋಪ ಅಥವಾ ನಿರ್ಲಕ್ಷ್ಯಕ್ಕೆ ಅವಕಾಶ ನೀಡದೆ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಅವರು ಅಧಿಕಾರಿಗಳಿಗೆ ತಿಳಿಸಿದರು.
ಪ್ರೊಬೇಷನರಿ ಐಎಎಸ್ ಅಧಿಕಾರಿ ರೋಹಿತ್ ಸಿಂಗ್,
ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, (ARO, AERO) ರಿಟರ್ನಿಂಗ್ ಅಧಿಕಾರಿಗಳು, ಸಹಾಯಕ ರಿಟರ್ನಿಂಗ್ ಅಧಿಕಾರಿಗಳು ಸೇರಿದಂತೆ ನಿಯೋಜಿತ ಚುನಾವಣಾ ಸಿಬ್ಬಂದಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಬೂತ್ ಮಟ್ಟದಲ್ಲಿ ಪರಿಶೀಲನೆ :
ಸಭೆಯ ಬಳಿಕ ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ವೈ. ಅನ್ಬುಕುಮಾರ್ ಮತ್ತು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಮೊಹಮ್ಮದ್ ರೋಷನ್ ಅವರು ವಡಗಾಂವ ಭಾಗದ ಖಾಸಬಾಗ ನಂಬರ್ 3 ಸರ್ಕಾರಿ ಶಾಲೆಗೆ ಭೇಟಿ ನೀಡಿ ಮತದಾರ ಪಟ್ಟಿ ಸಮಗ್ರ ವಿಶೇಷ ಪರಿಷ್ಕರಣೆ ಕುರಿತು ನಿಯೋಜಿತ ಬೂತ್ ಮಟ್ಟದ ಅಧಿಕಾರಿಗಳ ಜೊತೆ ಚರ್ಚಿಸಿ ಮಾಹಿತಿ ಪಡೆದುಕೊಂಡರು.
Rotary Club of Shivamogga ಮಹಿಳಾ ಉದ್ಯಮಿಗಳೆ, ನಿಮ್ಮ ಕನಸುಗಳನ್ನ ಆತ್ಮ ವಿಶ್ವಾಸದಿಂದ ಹಂಚಿಕೊಳ್ಳಿ : ಎನ್.ಗೋಪಿನಾಥ್
Rotary Club of Shivamogga ಆತ್ಮವಿಶ್ವಾಸದಿಂದ ಕನಸುಗಳನ್ನು ಹಂಚಿಕೊಳ್ಳಿ ಎಂದು ರೋಟರಿ ಕ್ಲಬ್ ಶಿವಮೊಗ್ಗದ ಅಧ್ಯಕ್ಷ ಎನ್. ಗೋಪಿನಾಥ್ ನುಡಿದರು. ಅವರು ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ಕಾಮರ್ಸ್ ಕಾಲೇಜಿನಲ್ಲಿ ರೋಟರಿ ಕ್ಲಬ್ ಶಿವಮೊಗ್ಗ ಹಾಗೂ ಸ್ವೇದ ಮಹಿಳಾ ಉದ್ಯಮಿಗಳ ಸಂಘದಿಂದ ಆಯೋಜಿಸಿದ್ಧ ಉದ್ಯಮಶೀಲತಾ ಅಭಿವೃದ್ಧಿಗಾಗಿ ಸರ್ಕಾರ ಹಾಗೂ ಸರ್ಕಾರೇತರ ಸಂಸ್ಥೆಗಳಿಂದ ವಿದ್ಯಾರ್ಥಿ/ ವಿದ್ಯಾರ್ಥಿನಿ ಯರಿಗಾಗಿ ಇರುವ ಯೋಜನೆಗಳ ಕುರಿತು ಅರಿವು ಕಾರ್ಯಾಗಾರ ದಲ್ಲಿ ಮಾತನಾಡುತಿದ್ದರು .
Rotary Club of Shivamogga ಸ್ವೇದ ಮಹಿಳಾ ಉದ್ಯಮಿಗಳ ಸಂಘದ ಅಧ್ಯಕ್ಷರು ಹಾಗೂ ರೋಟರಿ ಕ್ಲಬ್ ಶಿವಮೊಗ್ಗದ ಮಾಜಿ ಅಧ್ಯಕ್ಷರೂ ಆದ ಡಾ. ಬಿ. ವಿ. ಲಕ್ಷ್ಮೀದೇವಿ ಗೋಪಿನಾಥ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಉದ್ಯಮಿಗಳಾಗಲು ಇರುವ ಧನಸಹಾಯ ಹಾಗೂ ಮಾರ್ಗದರ್ಶನ ಸಹಾಯ ಇರುವ ಯೋಜನೆಗಳ ಕುರಿತು ಸಮಗ್ರ ಮಾಹಿತಿ ನೀಡಿ ಉದ್ಯಮಿಗಳಾಗಲು ಉತ್ತೇಜಿಸಿದರು.
ರೋಟರಿ ಕ್ಲಬ್ ಶಿವಮೊಗ್ಗದ ಕಾರ್ಯದರ್ಶಿ ಶ್ರೀ ಶೈಲಿನ್ ಬಾಬು, ಮಾಜಿ ಅಧ್ಯಕ್ಷರಾದ ವೀರಣ್ಣ ಹುಗ್ಗಿ ಸಹಕಾರ್ಯದರ್ಶಿ ವಿಜಯಕುಮಾರ್ ಶ್ರೀಮತಿ ಕಲಾಮೃತ ಶ್ರೀಮತಿ ಸ್ಮಿತಾ ರೂಪೇಶ್ ಉಪಸ್ಥಿತರಿದ್ದರು.
ವಿದ್ಯಾರ್ಥಿ ಸಂಘದ ಚುನಾವಣಾ ಪ್ರಕ್ರಿಯೆ ನಾಯಕತ್ವ ಗುಣಗಳನ್ನ ಬೆಳೆಸಲು ಸಹಕಾರಿ-ಸಿ.ಕೆ.ಶ್ರೀಧರ್
ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬೆಳೆಸಲು ಹಾಗೂ ನಾಯಕತ್ವ ಗುಣಗಳನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಶಾಲಾ ಚುನಾವಣೆ ಸಹಕಾರಿ ಎಂದು ಡಿವಿಎಸ್ ಸಂಯುಕ್ತ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಉಪ ಪ್ರಾಚಾರ್ಯ ಸಿ.ಕೆ.ಶ್ರೀಧರ್ ಹೇಳಿದರು.
ದೇಶೀಯ ವಿದ್ಯಾಶಾಲಾ ಸಮಿತಿಯ ಸಂಯುಕ್ತ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವತಿಯಿಂದ ಶಾಲಾ ಆವರಣದಲ್ಲಿ ಆಯೋಜಿಸಿದ್ದ ಶಾಲಾ ಚುನಾವಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮತದಾನದ ಮಹತ್ವದ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಇಂತಹ ಪ್ರಾಯೋಗಿಕ ಚುನಾವಣೆ ಕಾರ್ಯಕ್ರಮಗಳು ನೆರವಾಗುತ್ತದೆ. ಬಾಲ್ಯದಲ್ಲಿಯೇ ಚುನಾವಣಾ ಪ್ರಕ್ರಿಯೆ, ನಾಮಪತ್ರ ಸಲ್ಲಿಕೆ ಮತ್ತು ಆಯ್ಕೆ ಪ್ರಕ್ರಿಯೆ ಬಗ್ಗೆ ಜ್ಞಾನ ದೊರಕುತ್ತದೆ. ಉತ್ತಮ ನಾಯಕನ ಆಯ್ಕೆಯು ಅತ್ಯಂತ ಮಹತ್ವಪೂರ್ಣ ಆಗಿರುತ್ತದೆ ಎಂದು ತಿಳಿಸಿದರು.
ವಿದ್ಯಾರ್ಥಿಗಳಲ್ಲಿ ಜವಾಬ್ದಾರಿ, ಸಂವಹನ ಕೌಶಲ್ಯ, ನಿರ್ಧಾರ ತೆಗೆದುಕೊಳ್ಳುವ ಸಾಮಾರ್ಥ್ಯ ಮತ್ತು ನಾಯಕತ್ವದ ಗುಣಗಳನ್ನು ಪ್ರೋತ್ಸಾಹಿಸುವುದು ಪ್ರಮುಖ ಉದ್ದೇಶವಾಗಿದೆ. ಶಾಲಾಮಟ್ಟದ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳನ್ನು ಆಯೋಜಿಸಲು ಹಾಗೂ ಶಿಸ್ತಿನ ಮನೋಭಾವ ಬೆಳೆಸುವಲ್ಲಿ ಇಂತಹ ಕಾರ್ಯಕ್ರಮಗಳು ಸಹಕಾರಿಯಾಗುತ್ತವೆ ಎಂದು ಹೇಳಿದರು.
ದೇಶದ ಚುನಾವಣಾ ವ್ಯವಸ್ಥೆಯ ಬಗ್ಗೆ ಗೌರವ ಮತ್ತು ಸದೃಢ ಭಾರತ ನಿರ್ಮಾಣದಲ್ಲಿ ಮತದಾನದ ಮಹತ್ವದ ಬಗ್ಗೆ ಅರಿವು ಮೂಡುತ್ತದೆ. ವಿದ್ಯಾರ್ಥಿಗಳಿಗೆ ಶಿಕ್ಷಣದ ಜತೆಯಲ್ಲಿ ಸಮಾಜದ ಮಹತ್ತರ ಸಂಗತಿಗಳ ಬಗ್ಗೆ ಜ್ಞಾನ ಹೆಚ್ಚಾಗುತ್ತದೆ ಎಂದು ಹೇಳಿದರು.
ದೇಶೀಯ ವಿದ್ಯಾಶಾಲಾ ಸಮಿತಿಯ ಅಧ್ಯಕ್ಷ ಕೆ.ಬಸಪ್ಪ ಗೌಡ ಹಾಗೂ ಕಾರ್ಯದರ್ಶಿ ಎಸ್.ಪಿ.ದಿನೇಶ್ ಅವರು ವಿದ್ಯಾರ್ಥಿಗಳ ಶಾಲಾ ಚುನಾವಣಾ ಪ್ರಕ್ರಿಯೆಗೆ ಶುಭಕೋರಿದರು. ಎ ಮತ್ತು ಬಿ ತಂಡಗಳಾಗಿ ವಿದ್ಯಾರ್ಥಿಗಳಿಗೆ ಚುನಾವಣಾ ಪ್ರಕ್ರಿಯೆ ನಡೆಸಲಾಯಿತು.
ದೇಶೀಯ ವಿದ್ಯಾಶಾಲಾ ಸಮಿತಿಯ ಸಂಯುಕ್ತ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಎಸ್.ಕೇಶವಪ್ರಸಾದ್, ಆರ್.ಗಾಯಿತ್ರಿ, ಎನ್.ಎಸ್.ಜ್ಯೋತಿ, ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗ ಹಾಜರಿದ್ದರು.
Department of Kannada and Culture ಪರಿಶಿಷ್ಠ ಜಾತಿ/ ಪಂಗಡಗಳ ಉಪಯೋಜನೆಯಡಿ ಕಲಾವಿದರಿಗೆ ಸಹಾಯ ಧನ: ಅರ್ಜಿ ಆಹ್ವಾನ
Department of Kannada and Culture ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 2026-27ನೇ ಸಾಲಿನ ಸಾಮಾನ್ಯ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆಯಡಿ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳು ಮತ್ತು ಕಲಾವಿದರಿಗೆ ಸಹಾಯಧನ ನೀಡಲು ಅರ್ಜಿಗಳನ್ನು ಆಹ್ವಾನಿಸಿದೆ.
ನಾಡಿನ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ ಮತ್ತು ನೃತ್ಯ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸಲು ರಾಜ್ಯಾದ್ಯಂತ ಹಾಗೂ ಹೊರರಾಜ್ಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಘ-ಸಂಸ್ಥೆಗಳಿಗೆ ಧನಸಹಾಯ ನೀಡಲಾಗುವುದು.
ಜೊತೆಗೆ ಕಲಾವಿದರಿಗೆ ವಾದ್ಯಪರಿಕರ ಹಾಗೂ ವೇಷಭೂಷಣ خریدಿಸಲು ಮತ್ತು ಚಿತ್ರಕಲೆ/ಶಿಲ್ಪ ಕಲಾಕೃತಿಗಳ ಪ್ರದರ್ಶನ ಆಯೋಜಿಸಲು ಸಹಾಯಧನ ಒದಗಿಸಲಾಗುತ್ತದೆ.
ಅರ್ಜಿ ಸಲ್ಲಿಸಲು ಆಗಸಟ್ 20 ಕೊನೆಯ ದಿನಾಂಕವಾಗಿದ್ದು ಸೇವಾಸಿಂಧು ಪೋರ್ಟಲ್ sevasindhu.karnataka.gov.in ಮೂಲಕ ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಬೇಕು.
ಇಲಾಖೆಯ ಕಚೇರಿಯಲ್ಲಿ ನೇರವಾಗಿ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ನಿಗದಿತ ದಿನಾಂಕದ ನಂತರ ಬರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಅರ್ಜಿ ಸಲ್ಲಿಕೆಗೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ಸೇವಾಸಿಂಧು ಪೋರ್ಟಲ್ ಹಾಗೂ ಇಲಾಖೆಯ ಅಧಿಕೃತ ವೆಬ್‌ಸೈಟ್ www.kannadasiri.karnataka.gov.in ನಲ್ಲಿ ನೀಡಲಾಗಿದೆ.
Department of Kannada and Culture ಹೆಚ್ಚಿನ ಮಾಹಿತಿಗಾಗಿ
ದೂರವಾಣಿ ಸಂಖ್ಯೆಗಳು: 080-24410574 / 080-22213530 / 080-22241325 / 9986837037
ಶಿವಮೊಗ್ಗ ಜಿಲ್ಲಾ ಸಹಾಯಕ ನಿರ್ದೇಶಕರ ಕಚೇರಿ, ಕುವೆಂಪು ರಂಗಮಂದಿರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಥವಾ ಆಯಾ ಜಿಲ್ಲೆಯ ಸೇವಾಸಿಂಧು ವ್ಯವಸ್ಥಾಪಕರನ್ನು ಸಂಪರ್ಕಿಸಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ್ ಹೆಚ್ ತಿಳಿಸಿದ್ದಾರೆ.
ಮಗು ಕಾಣೆಯಾದ ತಕ್ಷಣವೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ- ಬಿ.ನಿಖಿಲ್
ಮಗು ಕಾಣೆಯಾದ ತಕ್ಷಣ ಯಾವುದೇ ವಿಳಂಬವಿಲ್ಲದೆ ಹತ್ತಿರದ ಪೊಲೀಸ್ ಠಾಣೆಯಲ್ಲಿ ದೂರು ಪಡೆದು, ತಕ್ಷಣ ಎಫ್.ಐ.ಆರ್ ದಾಖಲಿಸಿಕೊಳ್ಳಬೇಕು.
ಪ್ರಾಥಮಿಕ ಪ್ರಯತ್ನದಿಂದ ಪತ್ತೆ ಹಚ್ಚುವುದು ಸುಲಭವಾಗುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಖಿಲ್ ಬಿ ತಿಳಿಸಿದರು.
ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್,
ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಶಿವಮೊಗ್ಗ ಇವರುಗಳ ಸಂಯುಕ್ತಾಶ್ರಯದಲ್ಲಿ ಸೋಮವಾರ ನಗರದ ಡಿಎಆರ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಕಾಣೆಯಾದ ಮಕ್ಕಳ ಪತ್ತೆ ಹಚ್ಚಲು ವಿಶೇಷ ಕಾರ್ಯಪಡೆ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಗು ಕಾಣೆಯಾದ ತಕ್ಷಣ ಎಫ್ ಐ ಆರ್ ದಾಖಲಿಸಿಕೊಂಡು ಕಾರ್ಯೋನ್ಮುಖರಾಗಬೇಕು. ವಿಳಂಬ ಆದರೆ ಪತ್ತೆ ಹಚ್ಚುವುದು ಕಷ್ಟ.
ಮಗು ಕಾಣೆಯಾದ ತಕ್ಷಣವೇ ಆದ್ಯತೆಯ ಮೇರೆಗೆ ತನಿಖೆ ನಡೆಸಲು ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ವಿಶೇಷ ಪಡೆ ರಚಿಸಬೇಕು.
ಕಾಣೆಯಾದ ಮಗುವಿನ ಭಾವಚಿತ್ರ ಮತ್ತು ವಿವರಗಳನ್ನು ರಾಜ್ಯ ಹಾಗೂ ದೇಶದ ಎಲ್ಲಾ ಪೊಲೀಸ್ ಠಾಣೆಗಳಿಗೆ ತಕ್ಷಣವೇ ರವಾನಿಸಬೇಕು.
ಮಕ್ಕಳು ಕಾಣೆಯಾದ ಪ್ರಕರಣಗಳಲ್ಲಿ ಮೊದಲ ೨೪ ಗಂಟೆಗಳು ಅತ್ಯಂತ ನಿರ್ಣಾಯಕವಾಗಿದ್ದು, ಅಧಿಕಾರಿಗಳು ಯಾವುದೇ ರೀತಿಯ ನಿರ್ಲಕ್ಷ್ಯ ವಹಿಸದೆ ತಕ್ಷಣವೇ ಕಾರ್ಯಪ್ರವೃತ್ತರಾಗಬೇಕು ಎಂದು ಸೂಚನೆ ನೀಡಿದರು.
ಜಿಲ್ಲೆಯಲ್ಲಿ ೧೬೧೨ ಠಾಣೆಗಳಿದ್ದು ಪ್ರತಿ ಠಾಣೆಯ ಪೇದೆಗಳು ಹಾಗೂ ಅಧಿಕಾರಿಗಳಿಗೆ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ಸೇರಿಸಲು ಸೂಚಿಸಲಾಗಿದ್ದು, ಪೇದೆಗಳು ಸೇರಿದಂತೆ ಎಲ್ಲ ಪೊಲೀಸ್ ಅಧಿಕಾರಿಗಳು ಈ ಕೆಲಸವನ್ನು ದಕ್ಷತೆಯಿಂದ ಮಾಡುತ್ತಿದ್ದಾರೆಂದು ಶ್ಲಾಘಿಸಿದರು.
ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ದಾಖಲಿಸಿದ ಎರಡು ತಿಂಗಳ ನಂತರ ಶಾಲೆಗೆ ಸದರಿ ಮಕ್ಕಳು ಬರುತ್ತಿದ್ದಾರಾ ಎಂದು ಪರಿಶೀಲಿಸಬೇಕು ಎಂದು ತಿಳಿಸಿದರು.
ಕಾಣೆ ಮತ್ತು ಪತ್ತೆಯಾದ ಮಕ್ಕಳು: 2026 ರ ಜನವರಿ ರಿಂದ ಜೂನ್ ವರೆಗಿನ ಅವಧಿಯಲ್ಲಿ ಜಿಲ್ಲಾದ್ಯಂತ ಒಟ್ಟು 111 ಮಕ್ಕಳು ಕಾಣೆಯಾಗಿದ್ದು ಈ ಪೈಕಿ ಯಶಸ್ವಿಯಾಗಿ 100 ಮಕ್ಕಳನ್ನು (ಶೇ. 90 ಕ್ಕೂ ಹೆಚ್ಚು) ಪತ್ತೆ ಹಚ್ಚಲಾಗಿದೆ.ಕಾಣೆಯಾದ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 98 ಎಫ್ ಐ ಆರ್ ಗಳು ದಾಖಲಾಗಿವೆ.
ಪ್ರಸ್ತುತ 11 ಮಕ್ಕಳು ಪತ್ತೆಯಾಗಬೇಕಿದ್ದು, ಕಾರ್ಯಪಡೆಯು ಶೋಧ ಕಾರ್ಯವನ್ನು ಚುರುಕುಗೊಳಿಸಬೇಕು ಮತ್ತು ಬಾಲ್ಯವಿವಾಹ ಹಾಗೂ ಮಕ್ಕಳ ಕಳ್ಳಸಾಗಣೆಯಂತಹ ಅಪರಾಧಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಾಲ್ಯವಿವಾಹ ಪ್ರಕರಣಗಳಿಗೆ ಒಳಗಾಗಿ ಪತ್ತೆಯಾಗಿರುವ ಮಕ್ಕಳ ಸಂಖ್ಯೆ 34
ಮನುಷ್ಯ ಕಳ್ಳಸಾಗಣೆ ಯಿಂದ ರಕ್ಷಿಸಲ್ಪಟ್ಟ ಮಕ್ಕಳು 19 ಮತ್ತು
ಚಾರ್ಜ್‌ಶೀಟ್ ಸಲ್ಲಿಸಲಾದ ಪ್ರಕರಣಗಳು24 ಇದೆ ಎಂದು ತಿಳಿಸಿದ ಅವರು ಜೆಜೆ ಕಾಯ್ದೆಯಡಿಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಸರಿಯಾದ ಸಮಯಕ್ಕೆ ನೋಟಿಸ್ ನೀಡುವ ಕೆಲಸ ಆಗಬೇಕು ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ
ಸಂತೋಷ್ ಎಂ.ಎಸ್ ಮಾತನಾಡಿ, ಕಾಣೆಯಾದ ಮಕ್ಕಳ ಪ್ರಕರಣದಲ್ಲಿ ತಕ್ಷಣ ಎಫ್ ಐ ಆರ್ ಮಾಡಿಕೊಳ್ಳಬೇಕು.
ಈ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಪ್ರಾಥಮಿಕ ವಿಚಾರಣೆ ಅಗತ್ಯವಿಲ್ಲ. ಆದ್ದರಿಂದ ತಕ್ಷಣ ಕ್ರಮ ವಹಿಸಬೇಕು ಎಂದರು.
ಕಮ್ಯುನಿಟಿ ಮೀಡಿಯೇಷನ್ ಮೂಲಕ ಕೌಟುಂಬಿಕ ಹಾಗೂ ಇತರೆ ಸಣ್ಣಪುಟ್ಟ ವಿವಾದಗಳು, ಜಗಳಗಳು ಮತ್ತು ಭಿನ್ನಾಭಿಪ್ರಾಯಗಳನ್ನು ಕೋರ್ಟ್ ಮೆಟ್ಟಿಲೇರದೆ, ಪರಸ್ಪರ ಮಾತುಕತೆಯ ಮೂಲಕ ಶಾಂತಿಯುತವಾಗಿ ಬಗೆಹರಿಸಿಕೊಳ್ಳಬಹುದಾಗಿದೆ.ಇದರಿಂದ ಕೋರ್ಟ್ ಪ್ರಕರಣ ಕಡಿತಗೊಳಿಸಿ ವಿವಾದಗಳನ್ನು ಬಗೆಹರಿಸಿಕೊಳ್ಳಬಹುದು ಎಂದರು.
ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕಿ ಭಾರತಿ ಬಣಕಾರ್, ಡಿಡಿಪಿಐ ಮಂಜುನಾಥ್ ಎಸ್ ಆರ್, ಡಿವೈಎಸ್ ಪಿ ಸಂಜೀವ್ ಕುಮಾರ್, ಪೊಲೀಸ್ ಹಾಗೂ ಇತರೆ ಅಧಿಕಾರಿಗಳು, ನೌಕರರು ಹಾಜರಿದ್ದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಅಧಿಕಾರಿ ಶಶಿರೇಖಾ ಸ್ವಾಗತಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ 15 ಶುಶ್ರೂಷಾಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ
ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿಯಿರುವ 15 ಶುಶ್ರೂಷಾಧಿಕಾರಿ ಹುದ್ದೆಗಳನ್ನು ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ಶಾಲೆ/ಸಂಸ್ಥೆಗಳಲ್ಲಿ ನರ್ಸಿಂಗ್ ಶಿಕ್ಷಣ ಪೂರೈಸಿರಬೇಕು.
ಕರ್ನಾಟಕ ನರ್ಸಿಂಗ್ ಕೌನ್ಸಿಲ್ ನಲ್ಲಿ ಕಡ್ಡಾಯವಾಗಿ ನೋಂದಣಿಯಾಗಿರಬೇಕು.
ಈ ನೇಮಕಾತಿಯು ನಿಯಮಾನುಸಾರ ಷರತ್ತುಗಳಿಗೆ ಒಳಪಟ್ಟಿರುತ್ತದೆ.
ಅರ್ಜಿ ನಮೂನೆಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಬಿ.ಹೆಚ್. ರಸ್ತೆ, ಶಿವಮೊಗ್ಗವಿಲ್ಲಿ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಜುಲೈ 30 ರೊಳಗಾಗಿ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯನ್ನು ಖುದ್ದಾಗಿ ಭೇಟಿ ಮಾಡಬಹುದು ಅಥವಾ ದೂರವಾಣಿ ಸಂಖ್ಯೆ 08182-222382 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
Rotary Club of Shivamogga ನಿಯಮಿತ ವ್ಯಾಯಾಮ,ಪೌಷ್ಠಿಕ ಆಹಾರ,ಸಾಕಷ್ಟು ನಿದ್ರೆ ಹಾಗೂ ಒತ್ತಡ ರಹಿತ ಜೀವನ ಶೈಲಿಯಿಂದ ಆರೋಗ್ಯ ಜೀವನ – ರವಿ
Rotary Club of Shivamogga ರೋಟರಿ ಕ್ಲಬ್ ಶಿವಮೊಗ್ಗ ರಿವರ್ ಸೈಡ್ ಹಾಗೂ ಇನ್ನರ್ ವೀಲ್ ಸಹಯೋಗದೊಂದಿಗೆ ಮ್ಯಾಟರ್ನಲ್ ಅಂಡ್ ಚೈಲ್ಡ್ ಹೆಲ್ತ್ ಕಾರ್ಯಕ್ರಮವನ್ನು ನಗರದ ಶಕ್ತಿ ಸದನಲ್ಲಿ ಸೋಮವಾರ ಬಹಳ ಅರ್ಥಪೂರ್ಣವಾಗಿ ನಡೆಯಿತು.
ಈ ವೇಳೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ರೋಟರಿ ಅಧ್ಯಕ್ಷರಾದ ರವಿ ಮೂಡುಬಾಗಿಲು ಮಾತನಾಡಿ, ಉತ್ತಮ ಆರೋಗ್ಯವು ಕೇವಲ ರೋಗಗಳಿಲ್ಲದಿರುವುದಲ್ಲ, ಬದಲಿಗೆ ದೈಹಿಕ, ಮಾನಸಿಕ ಮತ್ತು ಸಾಮಾಜಿಕವಾಗಿ ಸಂಪೂರ್ಣವಾಗಿ ಸದೃಢವಾಗಿರುವುದಾಗಿದೆ. ನಿಯಮಿತ ವ್ಯಾಯಾಮ, ಪೌಷ್ಟಿಕ ಆಹಾರ, ಮತ್ತು ಸಾಕಷ್ಟು ನಿದ್ರೆ ಮತ್ತು ಒತ್ತಡ ರಹಿತ ಜೀವನಶೈಲಿಯಿಂದ ದೀರ್ಘಕಾಲದವರೆಗೆ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದು ಆಗಮಿಸಿದ್ದ ಗರ್ಭಿಣಿ ಬಾಣಂತಿಯರಿಗೆ ಕಿವಿ ಮಾತು ಹೇಳಿದರು.
ಕಾರ್ಯಕ್ರಮದಲ್ಲಿ ಗರ್ಭಿಣಿಯರಿಗೆ ಹಾಗೂ ಬಾಣಂತಿಯರಿಗೆ ಮೆಟರ್ನಲ್ ಕಿಟ್ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಇನ್ನರ್ ವಿಲ್ ಅಧ್ಯಕ್ಷರಾದ ರೂಪಾ ರವಿ ವಹಿಸಿದ್ದರು. ನಟರಾಜ್, ರಾಜೇಶ್, ದೇವೇಂದ್ರಪ್ಪ, ನವಲೇ ಈಶ್ವರಪ್ಪ, ಸತೀಶ್.ಎಸ್.ಬಿ, ಜಯಪ್ರಕಾಶ್, ಚಂದ್ರು, ಆಶಾ ಶಿವಾನಂದ್, ಶೀಲಾ ಸುರೇಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
