Sunday, May 17, 2026
Sunday, May 17, 2026
Home Blog Page 160

Keladi Shivappa Nayak University of Agricultural and Horticultural Sciences ಕೆಳದಿ ಶಿವಪ್ಪ ನಾಯಕ ವಿಶ್ವವಿದ್ಯಾಲಯದಲ್ಲಿ “ಸಾಂಬಾರು ಬೆಳೆಗಳ ಕೃಷಿ: ಕಾಳು ಮೆಣಸು ಮತ್ತು ಲವಂಗ ” ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮ

0

Keladi Shivappa Nayak University of Agricultural and Horticultural Sciences ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ, ವಿಸ್ತರಣಾ ನಿರ್ದೇಶನಾಲಯದ, ರೈತರ ತರಬೇತಿ ಸಂಸ್ಥೆಯು “ಸಾಂಬಾರು ಬೆಳೆಗಳ ಕೃಷಿ: ಕಾಳು ಮೆಣಸು ಮತ್ತು ಲವಂಗ “
ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿರುತ್ತದೆ.

ಈ ಕಾರ್ಯಕ್ರಮವನ್ನು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದ “ರೈತರ ತರಬೇತಿ ಸಂಸ್ಥೆ, ವರದಾ ಬ್ಲಾಕ್, ನೆಲ ಮಹಡಿ, ಇರುವಕ್ಕಿ” ಯಲ್ಲಿ ದಿನಾಂಕ: 16.12.2025 ರ ಬೆಳಗ್ಗೆ 10 ಗಂಟೆಗೆ ನೆರವೇರಿಸಲಾಗುತ್ತದೆ.

ಆದುದರಿಂದ ಆಸಕ್ತ ರೈತರು ಮತ್ತು ರೈತ ಮಹಿಳೆಯರು, ರೈತರ ತರಬೇತಿ ಸಂಸ್ಥೆಯ ಸಿಬ್ಬಂದಿಯವರಿಗೆ ಫೋನ್ ಮುಖಾಂತರ ಸಂಪರ್ಕಿಸಿ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಈ ತರಬೇತಿ ಕಾರ್ಯಕ್ರಮವು ಉಚಿತವಾಗಿರುತ್ತದೆ.

ತಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳಲು ಸಂಪರ್ಕಿಸಬೇಕಾದ ಮೊಬೈಲ್ ಸಂಖ್ಯೆಗಳು 9958324261/ 8618715599 / 9448312978

Keladi Shivappa Nayak University of Agricultural and Horticultural Sciences ತರಬೇತಿ ನಡೆಯುವ ಸ್ಥಳಕ್ಕೆ ಬರಲು ಈ ಕೋಡ್ ಪಿನ್ 44L-7L7-PJM6 ಅನ್ನು ಗೂಗಲ್ ಮ್ಯಾಪ್ ನಲ್ಲಿ ಉಪಯೋಗಿಸಬಹುದು.

Adichunchanagiri Mutt ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಠದಲ್ಲಿ ರಾಜ್ಯ ಮಟ್ಟದ ಉಚಿತ ಅರ್ಚಕ ತರಬೇತಿ ಶಿಬಿರ ಆಯೋಜನೆ

0

Adichunchanagiri Mutt ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದಿಂದ ಪ್ರತಿ ವರುಷದಂತೆ ಈ ಬಾರಿಯು ಡಿಸೆಂಬರ್ 16 ರಿಂದ 26 ರವರಗೆ 18 ನೇ ರಾಜ್ಯ ಮಟ್ಟದ ಉಚಿತ ಅರ್ಚಕ ತರಬೇತಿ ಶಿಬಿರವನ್ನು ಆಯೋಜಿಸಲಾಗುತ್ತಿದೆ. ಈ ಶಿಬಿರವು ಎಲ್ಲಾ ಜಾತಿ, ಧರ್ಮ ಮತ್ತು ಲಿಂಗಗಳ ಬೇಧವಿಲ್ಲದೆ ಸಂಪೂರ್ಣ ಉಚಿತವಾಗಿ ಜನರಿಗೆ ಕ್ಷೇತ್ರದ ಬಿಜಿಎಸ್ ಸಭಾ ಮಂಟಪದಲ್ಲಿ ನಡೆಯಲಿದೆ ಎಂದು ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿ ಹಾಗೂ ಶಿವಮೊಗ್ಗ ಶಾಖೆಯ ಕಾರ್ಯದರ್ಶಿಗಳು ಆದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ ತಿಳಿಸಿದ್ದಾರೆ.
ಪರಮ ಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ಬಾಲಗಂಗಾಧರನಾಥ ಮಹಾ ಸ್ವಾಮೀಜಿಗಳವರ ಆಶಯದಂತೆ 17 ವರ್ಷಗಳಿಂದ ರಾಜ್ಯ ಮಟ್ಟದ ಅರ್ಚಕ ವೃತ್ತಿ ಶಿಕ್ಷಣ ತರಬೇತಿಯನ್ನು ಆಯೋಜಿಸಿದ್ದು,ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ಆಶಿಸುತ್ತೇವೆ.
ಅಂದು ಶ್ರೀ ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಪರಮ ಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಯವರ ಸಾನಿಧ್ಯದಲ್ಲಿ,ಮಠದ ಪ್ರಧಾನ ಕಾರ್ಯದರ್ಶಿ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ ಹಾಗೂ ಶಾಖಾಮಠಗಳ ಶ್ರೀಗಳು ಪಾಲ್ಗೊಳ್ಳಲಿದ್ದಾರೆ.
ಯಾರು ಭಾಗವಹಿಸಬಹುದು:
14 ರಿಂದ 60 ವರ್ಷದೊಳಗಿನ ಯಾರಾದರೂ ಈ ಶಿಬಿರದಲ್ಲಿ ಭಾಗವಹಿಸಬಹುದು.
ಏನು ಒದಗಿಸಲಾಗುತ್ತದೆ:
ಉಚಿತ ಊಟ ಮತ್ತು ವಸತಿ,ಉಚಿತ ಸಮವಸ್ತ್ರ, ಪೂಜಾ ಪುಸ್ತಕಗಳು ಮತ್ತು ನೋಟ್‌ಬುಕ್‌ಗಳನ್ನು ವಿತರಿಸಲಾಗುವುದು.
ಏನು ತರಬೇಕು:
ತಟ್ಟೆ, ಲೋಟ, ಚಾಪೆ, ದಿಂಬು ಮತ್ತು ಹೊದಿಕೆ, ಉಡುಪು, ದಿನ ನಿತ್ಯ ಬಳಕೆ ವಸ್ತುಗಳು ಮತ್ತು ಲಘು ಹೊದಿಕೆಯನ್ನು ತರಬೇಕು.

Adichunchanagiri Mutt
ಶಿಬಿರದಲ್ಲಿ ಏನು ಕಲಿಸಲಾಗುತ್ತದೆ:
ಪೂಜಾ ವಿಧಾನಗಳು,ಸಂಕಲ್ಪ ಹೇಗೆ ಮಾಡುವುದು,ವೇದ ಮಂತ್ರಗಳನ್ನು ಹೇಗೆ ಪಠಿಸುವುದು,ಗಾಯತ್ರಿ ಮಂತ್ರ, ಧ್ಯಾನ ಶ್ಲೋಕಗಳು, ಪಂಚಾಂಗ (ಹಿಂದೂ ಕ್ಯಾಲೆಂಡರ್) ಅಧ್ಯಯನ, ನುರಿತ ಅಧ್ಯಾಪಕರಿಂದ ಭೋಧನೆ ಮತ್ತು ಉತ್ತಮ ವಾಗ್ಮಿಗಳಿಂದ ಉಪನ್ಯಾಸವಿರುವುದು ವಿಶೇಷ.
ಬಾಕ್ಸ್:
ಮುಖ್ಯ ಅಂಶಗಳು:

ಮೊದಲ ದಿನ ನೋಂದಣಿ ಕಡ್ಡಾಯ,
ಆಧಾರ್ ಕಾರ್ಡ್ ಜೆರಾಕ್ಸ್ ಮತ್ತು ಎರಡು ಪಾಸ್‌ಪೋರ್ಟ್ ಸೈಜ್ ಫೋಟೋಗಳನ್ನು ತರಬೇಕು.
ಪೂರ್ಣ ಕಾಲದಲ್ಲಿ ಶಿಬಿರದಲ್ಲಿ ಭಾಗವಹಿಸಬೇಕು.
ಪೂರ್ಣ ಕಾಲದಲ್ಲಿ ಭಾಗವಹಿಸಿದವರಿಗೆ ಪ್ರಮಾಣಪತ್ರ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ: 9481492311,9886958585,9448124141,9535601859

ಶಿವಮೊಗ್ಗದಲ್ಲಿ ವ್ಯಕ್ತಿ ಕಾಣೆ : ಪತ್ತೆಗೆ ಮನವಿ

0

ಮಂಜುನಾಥ ಹೂಗಾರ್, 36 ವರ್ಷ ಮಂಜುನಾಥ ಬಡಾವಣೆ, ಶಿವಮೊಗ್ಗ ಇವರು ಅ.27 ರಂದು ಬಸ್ ನಿಲ್ದಾಣದ ಬಳಿ ಇರುವ ಹೋಟೆಲ್‌ನಲ್ಲಿ ಊಟ ಮಾಡಿ ಹಿಂದಿರುಗುವಾಗ ಕಾಣೆಯಾಗಿರುತ್ತಾರೆ.
ಕಾಣೆಯಾದ ಮಂಜುನಾಥ್ ಸುಮಾರು 5.5 ಅಡಿ ಎತ್ತರ, ಕಪ್ಪು ಮೈಬಣ್ಣ, ತೆಳುವಾದ ಮೈಕಟ್ಟು, ಮುಂಭಾಗದ ತಲೆಯು ಭಾಗಶಃ ಬೋಳಾಗಿರುತ್ತದೆ. ಕನ್ನಡ ಭಾಷೆಯನ್ನು ಮಾತನಾಡುತ್ತಾರೆ. ಕಾಣೆಯಾದ ವೇಳೆ ಕಪ್ಪು ಬಣ್ಣದ ಪ್ಯಾಂಟ್ ಹಾಗೂ ಕೇಸರಿ ಬಣ್ಣದ ಶರ್ಟ್ನ್ನು ಧರಿಸಿರುತ್ತಾರೆ.
ಈ ವ್ಯಕ್ತಿಯ ಸುಳಿವು ಯಾರಿಗಾದರೂ ಕಂಡು ಬಂದಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆಗೆ ಮಾಹಿತಿ ನೀಡಬಹುದೆಂದು ಪ್ರಕಟಣೆ ತಿಳಿಸಿದೆ.

Women and Child Development Department ಕಿತ್ತೂರ ರಾಣಿ ಚೆನ್ನಮ್ಮ ಹಾಗೂ ವೀರಮಹಿಳೆ ಪ್ರಶಸ್ತಿಗಾಗಿ ಅರ್ಜಿ ಅಹ್ವಾನ

0

Women and Child Development Department ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಕಳೆದ ಐದು ವರ್ಷಗಳಿಂದ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅರ್ಹ ಸಂಸ್ಥೆಗಳಿಗೆ ಹಾಗೂ ವ್ಯಕ್ತಿಯನ್ನೊಳಗೊಂಡಂತೆ ಕಲೆ, ಶಿಕ್ಷಣ, ಸಾಹಿತ್ಯ ಮತ್ತು ಕ್ರೀಡಾ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರಿಗೆ 2025-26 ನೇ ಸಾಲಿನ ಕಿತ್ತೂರ ರಾಣಿ ಚೆನ್ನಮ್ಮ ಪ್ರಶಸ್ತಿ ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಅತ್ಮಸ್ಥೈರ್ಯದಿಂದ ಹೋರಾಡಿ ಜೀವನೋಪಾಯದಿಂದ ಪಾರು ಮಾಡಿದಂತಹ ಮಹಿಳೆಯರನ್ನು ಗುರುತಿಸಿ ವೀರ ಮಹಿಳಾ ಪ್ರಶಸ್ತಿಗಳನ್ನು ನೀಡಲು ಉದ್ದೇಶಿಸಿದ್ದು, ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವೀರಮಹಿಳೆ ಪ್ರಶಸ್ತಿಗೆ ಅರ್ಹತೆಗಳು : 18 ರಿಂದ 45ವರ್ಷ ವಯೋಮಿತಿಯೊಳಗಿನ ಒಬ್ಬ ಮಹಿಳೆ ಆಪತ್ಕಾಲದಲ್ಲಿರುವ ಮತ್ತೊಬ್ಬ ವ್ಯಕ್ತಿಯ ಜೀವ ಕಾಪಾಡುವಲ್ಲಿ ಅಥವಾ ಪ್ರಾಣ ರಕ್ಷಿಸುವಲ್ಲಿ ತನ್ನ ಜೀವದ ಹಂಗನ್ನು ತೊರೆದು ಸಮಯ ಪ್ರಜ್ಞೆಯಿಂದ ಧೈರ್ಯ ಸಾಹಸದೊಂದಿಗೆ ಅಪಾಯದಲ್ಲಿರುವ ವ್ಯಕ್ತಿಯ ಜೀವ ಕಾಪಾಡುವಂತಹ ಕಾರ್ಯವನ್ನು ಮಾಡಿದಲ್ಲಿ ಅಂತಹ ಮಹಿಳೆಯರನ್ನು ವೀರ ಮಹಿಳೆ ಎಂದು ಪರಿಗಣಿಸಲಾಗುವುದು. ತಾವು ಮಾಡಿದ ಸಾಧನೆ ಸಾರ್ವಜನಿಕರ ಗಮನಕ್ಕೆ ಬಂದಿರಬೇಕು ಹಾಗೂ ಸಾಧನೆಯು ಪ್ರಶಸ್ತಿ ಪಡೆಯುವ ಹಿಂದಿನ ವರ್ಷದ ಜನವರಿ 01 ರಿಂದ ಡಿಸೆಂಬರ್ 31ರೊಳಗಾಗಿ ಇರಬೇಕು. ವೀರಮಹಿಳೆ ಪ್ರಶಸ್ತಿ ಪಡೆಯುವ ಮಹಿಳೆಯು ವಿಶೇಷ ಶೌರ್ಯ ಹಾಗೂ ಸಾಧನೆ ಮಾಡಿರಬೇಕು. ಪ್ರಶಸ್ತಿಗೆ ಸಂಬಂಧಿಸಿದ ಮಹಿಳೆಯ ತಂದೆ/ತಾಯಿ ಪೋಷಕರು ಅರ್ಜಿಯನ್ನು ಸಲ್ಲಿಸಬಹುದಾಗಿದೆ. Women and Child Development Department ಈ ಪ್ರಶಸ್ತಿಗಾಗಿ ರಾಜ್ಯ ವತಿಯಿಂದ ಒಬ್ಬ ಮಹಿಳೆಗೆ ಮಾತ್ರ ರೂ. 25,000 ಗಳ ನಗದು ಹಾಗೂ ಪ್ರಶಸ್ತಿ ಪತ್ರ ನೀಡಲಾಗುವುದು. ಇದನ್ನು ಪ್ರತಿ ವರ್ಷ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ನೀಡಲಾಗುವುದು.
ಕಿತ್ತೂರ ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಹತೆಗಳು : ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ವೇತನ ಪಡೆಯುತ್ತಿರುವ ವ್ಯಕ್ತಿಗಳು ಅರ್ಹರಾಗಿರುವುದಿಲ್ಲ. ಪ್ರಶಸ್ತಿಗೆ ಬರುವ ಅರ್ಜಿಗಳ ಪರಿಶೀಲನೆ ಮತ್ತು ಆಯ್ಕೆಗೆ ಸಂಬಂಧಿಸಿದಂತೆ ಸಮಿತಿಯ ತೀರ್ಮಾನವೇ ಅಂತಿಮ. ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ಸ್ವಯಂ ಸೇವಾ ಸಂಸ್ಥೆ ಹಾಗೂ ವ್ಯಕ್ತಿಗಳು ಮಹಿಳೆಯರ ಅಭಿವೃದ್ಧಿಗಾಗಿ ಕನಿಷ್ಠ 5 ವರ್ಷಗಳ ಸೇವೆ ಸಲ್ಲಿಸಿರಬೇಕು. ಪ್ರಶಸ್ತಿಗೆ ಆಯ್ಕೆ ಮಾಡುವಾಗ ಸಂಸ್ಥೆ ಹಾಗೂ ವ್ಯಕ್ತಿ ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ಕೈಗೊಂಡ ಕಾರ್ಯಕ್ರಮಗಳ ಮತ್ತು ಇತರೆ ಕ್ಷೇತ್ರಗಳಾದ ಮಹಿಳಾ ಅಭಿವೃದ್ಧಿ, ಕ್ರೀಡೆ, ಕಲೆ, ಸಾಹಿತ್ಯ, ಶಿಕ್ಷಣ ಕ್ಷೇತ್ರಗಳಲ್ಲಿ ವ್ಯಕ್ತಿಗಳು ಶ್ರೇಷ್ಟ ಮಟ್ಟದ ಸಾಧನೆಗಳನ್ನು ಕೈಗೊಂಡಿರಬೇಕು. ಈ ಪ್ರಶಸ್ತಿಯನ್ನು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಥವಾ ಸರ್ಕಾರವು ನಿಗದಿಪಡಿಸುವ ದಿನಾಂಕ ಮತ್ತು ಸ್ಥಳಗಳಲ್ಲಿ ನೀಡಲಾಗುವುದು. ಪ್ರಶಸ್ತಿಗೆ ಆಯ್ಕೆಯಾದ ವ್ಯಕ್ತಿಗಳು ಪ್ರಶಸ್ತಿಗಳನ್ನು ಖುದ್ದಾಗಿ ಪಡೆಯಬೇಕು ಹಾಗೂ ಸಂಘ ಸಂಸ್ಥೆಗಳಿಗೆ ನೀಡುವ ಪ್ರಶಸ್ತಿಯನ್ನು ಸಂಘದ ಪಧಾಧಿಕಾರಿಗಳು ಸ್ವೀಕರಿಸಬಹುದು.
ಆಸಕ್ತರು ಅರ್ಜಿಯನ್ನು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, 100 ಅಡಿ ರಸ್ತೆ, ಆಲ್ಕೊಳ. ಶಿವಮೊಗ್ಗ ಇವರಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ದಿ:22/12/2025ರೊಳಗಾಗಿ ಸಲ್ಲಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-295514ನ್ನು ಸಂಪರ್ಕಿಸುವುದು.

Railway Shivamogga ರೈಲು ಗಾಡಿಯಿಂದ ಬಿದ್ದು ವ್ಯಕ್ತಿ ಸಾವು

0

Railway Shivamogga ನವೆಂಬರ್ 28 ರಂದು ಸುಮಾರು 40 ರಿಂದ 45 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಭದ್ರಾವತಿ ರೈಲ್ವೇ ನಿಲ್ದಾಣದ ಹತ್ತಿರ ರೈಲು ಗಾಡಿಯಿಂದ ಬಿದ್ದು ಗಾಯಗೊಂಡಿದ್ದು ಚಿಕಿತ್ಸೆಗಾಗಿ ಜಿಲ್ಲಾ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿ ಡಿ.10 ರಂದು ಚಿಕಿತ್ಸೆ ಫಲಕಾರಿಯಾದೇ ಮೃತಪಟ್ಟಿರುತ್ತಾರೆ.
Railway Shivamogga ಮೃತ ವ್ಯಕ್ತಿಯು ಸುಮಾರು 5.5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ಕೋಲುಮುಖ, ತಲೆಯಲ್ಲಿ ಸುಮಾರು 2-3 ಇಂಚು ಉದ್ದನೆಯ ಕಪ್ಪು ಮತ್ತು ಬಿಳಿ ಕೂದಲು, ಕುರುಚಲು ಗಡ್ಡ, ಮೀಸೆ ಬಿಟ್ಟಿರುತ್ತಾನೆ. ಈ ಮೃತನ ವಾರಸುದಾರರು ಯಾರಾದರೂ ಇದ್ದಲ್ಲಿ ರೈಲ್ವೇ ಪೊಲೀಸ್ ಸಬ್‌ಇನ್ಸ್ಪೆಕ್ಟರ್, ದೂ.ಸಂ: 08182-222974, ಮೊ.ಸಂ: 948082124 ನ್ನು ಸಂಪರ್ಕಿಸಬಹುದೆAದು ಶಿವಮೊಗ್ಗ ರೈಲ್ವೇ ಪೊಲೀಸ್ ಠಾಣೆಯ ಠಾಣಾಧಿಕಾರಿ ತಿಳಿಸಿದ್ದಾರೆ.

B. Y. Raghavendra ಕೇಂದ್ರ ವಿತ್ತ ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿದ ಶಿವಮೊಗ್ಗ ಸಂಸದರಾದ ಬಿ ವೈ ರಾಘವೇಂದ್ರ

0

B. Y. Raghavendra ಕೇಂದ್ರ ವಿತ್ತ ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರನ್ನ ಅವರ ಕಚೇರಿಯಲ್ಲಿ ಶಿವಮೊಗ್ಗ ಸಂಸದರಾದ ಬಿ ವೈ ರಾಘವೇಂದ್ರ ಅವರು ಭೇಟಿ ಮಾಡಿದರು. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದ ಪ್ರಮುಖ ವಿಷಯಗಳನ್ನು ವಿವರವಾಗಿ ಚರ್ಚಿಸಿದರು.

ಈ ಭೇಟಿಯ ಸಂದರ್ಭದಲ್ಲಿ ವಿಶೇಷವಾಗಿ ಕೊಲ್ಲೂರು ಕಾರಿಡಾರ್ ಅಭಿವೃದ್ಧಿ ಯೋಜನೆ ಹಾಗೂ ಶಿವಮೊಗ್ಗದ ಇಸ್ಲಾಪುರದಲ್ಲಿ ವಿಶ್ವದ ಅತ್ಯುನ್ನತ ಶ್ರೀ ಬಾಲ ಸುಬ್ರಹ್ಮಣ್ಯ ಸ್ವಾಮಿ ಪ್ರತಿಮೆ ನಿರ್ಮಾಣಕ್ಕೆ ಅಗತ್ಯವಿರುವ ಹಣಕಾಸು ಸಹಾಯ ಹಾಗು ಮೂಲಸೌಕರ್ಯ ಅಭಿವೃದ್ಧಿ ಕಾರ್ಯಗಳಿಗೆ ಕೇಂದ್ರ ಸರ್ಕಾರದ ನೆರವು ಒದಗಿಸಬೇಕೆಂದು ವಿನಂತಿಸಲಾಯಿತು.

B. Y. Raghavendra ಈ ಬೇಡಿಕೆಗಳನ್ನು ಗಮನದಿಂದ ಆಲಿಸಿದ ಕೇಂದ್ರ ವಿತ್ತ ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಅಗತ್ಯ ಸಹಕಾರದ ಭರವಸೆಯನ್ನು ನೀಡಿದ್ದಾರೆ.

Rotary Shimoga ಸಂತೃಪ್ತಿ ಜೀವನಕ್ಕೆ ಆರೋಗ್ಯವೇ ಮೂಲ ಕಾರಣ:ಡಾ.ವಿಎಲ್ ಎಸ್ ಕುಮಾರ್

0

Rotary Shimoga ಅತ್ಯುತ್ತಮ ಜೀವನಕ್ಕೆ, ಸಮಾಜಿಕ ಸೇವೆ, ಆತ್ಮೀಯರೊಂದಿಗೆ ಬೆರೆಯುವುದು, ಉತ್ತಮ ಜೀವನ ಶೈಲಿ, ಆಹಾರ, ನಿದ್ದೆ, ಸಂತೃಪ್ತಿ ಮಾನಸಿಕ ಅರೋಗ್ಯ, ವ್ಯಾಯಾಮ ದಿಂದ ಆರೋಗ್ಯಕರ ಜೀವನ ಗಳಿಸಲು ಸಾದ್ಯ ಎಂದು ರೋಟರಿ ಶಿವಮೊಗ್ಗ ಜ್ಯೂಬಿಲಿ ಕ್ಲಬ್ ವಾರದ ಸಭೆಯ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಅಂತರಾಷ್ಟ್ರೀಯ ವಿಪ್ಪತ್ತು ನಿರ್ವಣೆ ತರಬೇತುದಾರರಾದ ಶ್ರೀ ಡಾ.ವಿ.ಎಲ್.ಎಸ್.ಕುಮಾರ್ ಮಾತನಾಡುತ್ತಿದ್ದರು.
ಹಿರಿಯರು ಅತ್ಯುತ್ತಮ ಜೀವನ ಸಾಗಿಸುತ್ತಿದ್ದಾರೆ, ಆದರೆ ಯುವಕರು ತಮ್ಮ ಆರೋಗ್ಯದ ಬಗ್ಗೆ ಕಾಳಜಿಯೆ ಇಲ್ಲ. ಮೊಬೈಲ್, ಕಂಪ್ಯೂಟರ್, ಹವನಿಯಂತ್ರಿತ ಕೊಠಡಿ, ಲಿಪ್ಟ್, ದುಷ್ಟಚಟಗಳ ದಾಸರಾಗಿ ತಮ್ಮ ಆರೋಗ್ಯ ಹಾಳುಮಾಡಿಕೊಂಡು ಚಿಕ್ಕ ವಯಸಿನಲ್ಲಿಯೆ, ಪಾಲಕರ ಮುಂದೆಯೆ ಜೀವ ಕಳೆದುಕೊಳ್ಳುತ್ತಿದ್ದಾರೆ.
ಪ್ರಕೃತಿ ವಿಕೋಪ ವಾರದ ಮುಂಚೆಯೆ ತಿಳಿಯುತ್ತೆ, ಇದರಿಂದ ಜೀವ ಹಾನಿ ಕಡಿಮೆಯಾಗಿದೆ. ಪ್ರವಾಹದಿಂದ ಮುನ್ನೂರು, ಭೂಕುಸಿತ ದಿಂದ ಐವತ್ತು, ಸಿಡಲಿನಿಂದ ಹತ್ತು, ಅಫಘಾತದಿಂದ ಒಂದುಲಕ್ಷ ಎಂಬತ್ತು ಸಾವಿರ, ಹೃದಯಾಘತದಿಂದ ನಾಲ್ಕು ಲಕ್ಷ ಜನ ಪ್ರತಿ ವರ್ಷ ಭಾರತದಲ್ಲಿ ಸಾಯುತ್ತಾರೆ.
Rotary Shimoga ಅತ್ಯುತ್ತಮ ರಕ್ಷಣೆಯ ವಾಹನಗಳು ಇದ್ದರೂ, ವೇಗದ ಮಿತಿಯಿಲ್ಲದೆ ಅಫಘಾತ ಆಗುತ್ತವೆ. ನಿಮ್ಮನ್ನು ಹಿಂದಿಕ್ಕಲು ಬಂದವರಿಗೆ ಅವಕಾಶ ಮಾಡಿಕೊಡಿ, ಅವರನ್ನು ಮೀರಿಸುವ ದುಸ್ಸಾಹಸ ಮಾಡಬೇಡಿ. ಅಪಘಾತವಾದಾಗ ಸಹಾಯ ದೊರೆಯದೆ ಹೆಚ್ಚು ಜನ ಜೀವಕಳೆದು ಕೊಳ್ಳುತ್ತಾರೆ. ಕನಿಷ್ಟ ತಕ್ಷಣ ಆ್ಯಂಬುಲೆನ್ಸ್ ಕರೆದು ಆಸ್ವತ್ರೆಗೆ ಸೇರಿಸಿ. ನೀವೆ ಜೀವ ಹೊಗಿರಬಹುದು ಎಂದು ನಿರ್ಲಕ್ಷ ಮಾಡಬೇಡಿ. ರಸ್ತೆಯ ಬಲ ಬದಿಯಲ್ಲಿ ವಾಯುಸಂಚಾರ ಮಾಡಿ, ಸಂಗೀತ ಹಾಕಿ ಕೊಂಡು ನಡೆಯಬೇಡಿ‌.
ಎರಡು ದಿನ ಮುಂಚಿತವಾಗಿ ಹೃದಯಘಾತದ ಮುನ್ಸೂಚನೆ ದೊರಕುತ್ತದೆ. ಗ್ಯಾಸ್ಟಿಕ್ ಎಂದು ಸ್ವ-ಔಷದ ಉಪಚಾರ ಮಾಡಿಕೊಂಡು, ಅಪಾಯ ತಂದು ಕೊಳ್ಳುತ್ತಾರೆ. ಪ್ರಥಮ ಚಿಕಿತ್ಸೆ ಎಂದು ತಕ್ಷಣ ನೀರು ಕುಡಿಸುತ್ತಾರೆ, ಇದು ತಪ್ಪು. ಮಲಗಿಸದೆ, ಕಾಲುಚಾಚಿ ಕುಳ್ಳರಿಸಿ ಹೆಚ್ಚು ಗಾಳಿ ಬರಲು ಅವಕಾಶ ಇರಲಿ, ಮೆದಳಿಗೆ ರಕ್ತಚಲನೆ ಇಲ್ಲದೆ ಇದ್ದಾಗ ಜೀವ ಹೋಗುತ್ತದೆ
ಹೃದಯದಿಂದ ಮೆದುಳಿಗೆ ರಕ್ತಚಲನೆ ಆಗುತ್ತದೆ. ಅದರಲ್ಲಿ ವ್ಯತ್ಯಾಸವಾದಾಗ ಉಸಿರಾಟದ ತ್ತೊಂದರೆ ಯಾಗುತ್ತದೆ. ದೀರ್ಘ ಉಸಿರಾಡಲು ಹೇಳಿ. ಕೆಮ್ಮಲು ಹೇಳಬೇಡಿ, ಇದರಿಂದು ಅಮ್ಲುಜನಕ ಸಿಗುವುದಿಲ್ಲ.
ಇತ್ತೀಚೆಗೆ ನರರೋಗ ತಜ್ಞರಿಗೆ ಹೆಚ್ಚು ರೋಗಿಗಳು ಬರುತ್ತಿದ್ದಾರೆ. ರಕ್ತಹೆಪ್ಪು ಗಟ್ಟುವಿಕೆಯಿಂದ ಸ್ಟ್ರೋಕ್ ಆಗುತ್ತಿದೆ, ಉತ್ತಮ ಆಹಾರದ ಸೇವನೆ, ವ್ಯಾಯಾಮ, ದಿನದ ಎಂಟುಗಂಟೆ ಕೆಲಸ, ನಿದ್ರೆ, ಕುಟುಂಬ ದವರೊಂದಿಗೆ ಬೆರೆಯುವುದರಿಂದ ಉತ್ತಮ ಆರೋಗ್ಯ ಹೊಂದಲು ಸಾದ್ಯ ಎಂದರು.
ರೊ.ಬಿ.ಎಸ್.ಅಶ್ವಥ್ ಅಧ್ಯಕ್ಷತೆ ವಹಿಸಿದ್ದರು, ರೊ.ಉಮಾದೇವಿ ಸ್ವಾಗತಿಸಿದರು, ಕಾರ್ಯದರ್ಶಿ ರೊ.ರೇವಣಸಿದ್ದಪ್ಪ ವಂದಿಸಿದರು. ಭಾರದ್ವಾಜ್, ಪ್ರವೀಣ್ ಜವಳಿ, ಉಮೇಶ್, ವಾಗೇಶ್, ಗಂಗಾಧರಸ್ವಾಮಿ, ನವೀನ್ ಹೇಮಾಶೇಖರ್, ರಾಜಶೇಖರ್ ಮುಂತಾದವರಿದ್ದರು

Ananya Residential Public School ಪ್ರತಿಯೊಬ್ಬರಿಗೂ ಎಲ್ಲ ಹಕ್ಕುಗಳು ದೊರಕುವುದು ಮುಖ್ಯ : ಇ.ಡಿ.ಅಶ್ವಿನಿ

0

Ananya Residential Public School ಪ್ರತಿಯೊಬ್ಬ ಮನುಷ್ಯ ಸಮಾನವಾಗಿ ಸದೃಢವಾಗಿ ಬದುಕಬೇಕು. ಎಲ್ಲ ಹಕ್ಕುಗಳು ಮಾನವ ಹಕ್ಕುಗಳು. ಪ್ರತಿಯೊಬ್ಬ ಮನುಷ್ಯನು ನೆಮ್ಮದಿಯಿಂದ ಬದುಕಬೇಕು. ಅದೇ ವಿಶ್ವ ಮಾನವ ಹಕ್ಕುಗಳ ಮೂಲ ಉದ್ದೇಶ ಎಂದು ಉಪಪ್ರಧಾನ ಕಾನೂನು ನೆರವು ಅಭಿರಕ್ಷಕಿ ಇ.ಡಿ.ಅಶ್ವಿನಿ ಹೇಳಿದರು.
ಶಿವಮೊಗ್ಗ ನಗರದ ಅನನ್ಯ ರೆಸಿಡೆನ್ಸಿಯಲ್ ಪಬ್ಲಿಕ್ ಸ್ಕೂಲ್‌ನಲ್ಲಿ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಅಂಗವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕರ್ನಾಟಕ ಮಾನವ ಹಕ್ಕುಗಳ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪ್ರತಿಯೊಬ್ಬರೂ ಹಕ್ಕುಗಳ ಬಗ್ಗೆ ಅರಿತುಕೊಳ್ಳಬೇಕು. ಇನ್ನೊಬ್ಬರಿಗೆ ತೊಂದರೆ ಉಂಟು ಮಾಡಿ ಮಾನವನ ಹಕ್ಕುಗಳನ್ನು ಉಲ್ಲಂಘಿಸಿದರೆ ಶಿಕ್ಷೆಗೆ ಒಳಪಡಬೇಕಾಗುತ್ತದೆ. ಮಕ್ಕಳು ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಲೈಂಗಿಕ ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾರೆ. ಇದರ ಬಗ್ಗೆ ಸರ್ಕಾರವು ಹೆಚ್ಚು ನಿಗಾ ವಹಿಸಿದೆ. ಆದರಿಂದ ಮಕ್ಕಳು ಈ ಕಾನೂನುಗಳನ್ನು ಅರಿತುಕೊಳ್ಳಬೇಕು ಎಂದು ಕರೆ ನೀಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ ಮಾತನಾಡಿ, ಜಾಗೃತಿ ಕಾರ್ಯಕ್ರಮಗಳಿಂದ ವಿದ್ಯಾರ್ಥಿಗಳ ಜೀವನದಲ್ಲಿ ಬೆಳಕು ಚೆಲ್ಲುವುದರ ಜೊತೆಗೆ ಅನಾಹುತಗಳಿಂದ ತಪ್ಪಿಸಿಕೊಳ್ಳಬಹುದು. ಮಕ್ಕಳು ಕಾನೂನುಗಳನ್ನು ಸಹ ಆರಿತುಕೊಳ್ಳಬೇಕು ಎಂದರು.
ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಜಿ.ಆರ್.ರಾಘವೇಂದ್ರ ಸ್ವಾಮಿ ಮಾತನಾಡಿ, ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಕೇವಲ ಆಚರಣೆಗೆ ಸೀಮಿತವಾಗದೆ ಸಾರ್ವಜನಿಕರಲ್ಲಿ ಮತ್ತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.
ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುವಾರ್ ಮಾತನಾಡಿ, ಮಕ್ಕಳು ಶಿಕ್ಷಣದ ಜೊತೆಗೆ ಇಂತಹ ಕಾನೂನಿನ ಅರಿವಿನ ಕಾರ್ಯಕ್ರಮದಲ್ಲಿ ತೊಡಗಿಸಿಕೊಳ್ಳಬೇಕು. ಗುಡ್ ಟಚ್ ಮತ್ತು ಬ್ಯಾಡ್ ಟಚ್, ಪೋಕ್ಸೋ ಕಾಯ್ದೆಯ ಬಗ್ಗೆ ಮಾಹಿತಿ ತಿಳಿದುಕೊಳ್ಳಬೇಕು ಎಂದು ಹೇಳಿದರು.
ಕರ್ನಾಟಕ ಮಾನವ ಹಕ್ಕುಗಳ ಸಮಿತಿ ಬೆಂಗಳೂರು ಸಂಸ್ಥಾಪಕ ರಾಜ್ಯಾಧ್ಯಕ್ಷ ಶ್ರೀನಿವಾಸ ಗೌಡ ಮಾತನಾಡಿ, ಮಾನವ ಹಕ್ಕುಗಳ ಉಲ್ಲಂಘನೆ ಮಾಡಿದಲ್ಲಿ ಕಠಿಣ ಶಿಕ್ಷೆ ಎದುರಿಸಬೇಕಾಗುತ್ತದೆ. ಈಗಾಗಲೇ ನಮ್ಮ ಸಂಸ್ಥೆಯಿಂದ ಸಾಕಷ್ಟು ಪ್ರಕರಣಗಳಿಗೆ ನ್ಯಾಯ ಒದಗಿಸಿದ್ದೇವೆ ಎಂದರು.
ಅನನ್ಯ ರೆಸಿಡೆನ್ಸಿಯಲ್ ಪಬ್ಲಿಕ್ ಸ್ಕೂಲಿನ ಶಿಕ್ಷಕ ಆರ್.ಗಿರೀಶ್ ಅವರು ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಮಾಹಿತಿ ನೀಡಿದರು. ಹಿರಿಯ ವಕೀಲ ಡಿ.ಎನ್.ಹಾಲಸಿದ್ದಪ್ಪ, ಕರ್ನಾಟಕ ಮಾನವ ಹಕ್ಕುಗಳ ಸಮಿತಿಯ ಪ್ರದೀಪ್ ಮೀತ್ತಲ್, ಸಂತೋಷ್ ಪೂಜಾರಿ, ಎಂ.ಎಂ.ಗೋಪಿ, ಎ.ಆರ್.ರವಿಕುಮಾರ್, ಶಮೀರ್ ಪಾಷಾ ಎನ್, ಪ್ರಮೀಳಾ ಕೆ ಆರ್, ಶಾಜಿಯಾ ಬಾನು, ಜೀವನ್ ಡಿ, ಶರತ್ ಕುಮಾರ್ ಎ, ಸುಧಾಕರ ಕೆ ಜಿ, ರವಿಕುಮಾರ್ ಇತರರಿದ್ದರು.

Human Rights Commission ಹಕ್ಕು-ಕರ್ತವ್ಯ ಪಾಲನೆಯೊಂದಿಗೆ ಇತರರ ಹಕ್ಕುಗಳನ್ನು ಗೌರವಿಸಿ : ಹೇಮಂತ್ ಎನ್

0

Human Rights Commission ಎಲ್ಲರನ್ನು ಸಮಾನವಾಗಿ ಕಾಣುವುದು ಕೂಡ ಮಾನವ ಹಕ್ಕಾಗಿದ್ದು, ನಮ್ಮ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ಅರ್ಥ ಮಾಡಿಕೊಂಡು ಬೇರೆಯವರ ಮಾನವ ಹಕ್ಕುಗಳನ್ನೂ ಗೌರವಿಸಬೇಕೆಂದು ಜಿಲ್ಲಾ ಪಂಚಾಯತ್ ಸಿಇಓ ಹೇಮಂತ್ ಎನ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಮಾನವ ಹಕ್ಕುಗಳ ಆಯೋಗ, ಬೆಂಗಳೂರು, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ), ಡಿವಿಎಸ್ ಪದವಿಪೂರ್ವ(ಸ್ವತಂತ್ರ) ಕಾಲೇಜು, ಶಿವಮೊಗ್ಗ ಇವರ ಸಹಯೋಗದಲ್ಲಿ ಬುಧವಾರ ಡಿವಿಎಸ್ ಪಿಯು ಸ್ವತಂತ್ರ ಕಾಲೇಜಿನಲ್ಲಿ ಏರ್ಪಡಿಸಲಾಗಿದ್ದ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಜೀವಿಸುವ ಹಕ್ಕು, ಉಚಿತ ಶಿಕ್ಷಣದ ಹಕ್ಕು. ದೌರ್ಜನ್ಯ ವಿರುದ್ದ ಹಕ್ಕು, ಆರೋಗ್ಯ ಹಕ್ಕು, ಸಮಾನತೆಯ ಹಕ್ಕು ಸೇರಿದಂತೆ ಮಾನವ ಹಕ್ಕುಗಳ ವ್ಯಾಪ್ತಿ ಬಹು ವಿಸ್ತಾರವಾಗಿದೆ. ಎಲ್ಲರೂ ತಮ್ಮ ಹಕ್ಕುಗಳ ಜೊತೆಗೆ ಕರ್ತವ್ಯಗಳ ಬಗ್ಗೆ ತಿಳಿದುಕೊಂಡು ಇತರರ ಹಕ್ಕುಗಳನ್ನು ಗೌರವಿಸಬೇಕು ಎಂದ ಅವರು ವಿದ್ಯಾರ್ಥಿಗಳು ತಮ್ಮ ತಮ್ಮ ಗುರಿ ಸಾಧನೆ ಮಾಡುವುದು ಕೂಡ ಒಂದು ಕರ್ತವ್ಯವಾಗಿದೆ ಎಂದರು.
ವಿದ್ಯಾರ್ಥಿಗಳಾದ ನೀವು ನಿಮ್ಮ ವ್ಯಾಪ್ತಿಯಲ್ಲಿ ಎಲ್ಲಿಯಾದರೂ ಬಾಲ್ಯ ವಿವಾಹದ ಕುರಿತು ವಿಷಯ ತಿಳಿದಲ್ಲಿ, ಬಾಲ್ಯ ವಿವಾಹವಾಗುತ್ತಿರುವುದು ಕಂಡು ಬಂದಲ್ಲಿ ಸಂಸ್ಥೆಯ ಶಿಕ್ಷಕರು, ಮುಖ್ಯಸ್ಥರು ಹಾಗೂ ಯಾವುದೇ ಅಧಿಕಾರಿಗಳಿಗೆ ತಿಳಿಸಬೇಕು ಎಂದರು. ಗುರು ಹಿರಿಯರು, ತಂದೆ ತಾಯಿಯರೊಂದಿಗೆ ಗೌರವದಿಂದ ನಡೆದುಕೊಂಡು, ಉತ್ತಮ ಗುಣಗಳನ್ನು ಮೈಗೂಡಿಸಿಕೊಳ್ಳಬೆಕು. ದೊಡ್ಡ ಗುರಿಗಳನ್ನು ಹೊಂದಿ, ಸಾಧಿಸಿಯೇ ತೀರುತ್ತೇನೆಂದು ಪಣ ತೊಟ್ಟು ಈ ನಿಟ್ಟಿನಲ್ಲಿ ಸಾಗಿದರೆ ಶೇ.100 ರಷ್ಟು ಗುರಿಯನ್ನು ಸಾಧಿಸಬಹುದು. ಆ ಗುರಿ ಸಾಧನೆಗೆ ನಾವೇ ದಾರಿ ಕಂಡುಕೊಳ್ಳಬೇಕು. ಸಮಯಪಾಲನೆ, ಏಕಾಗ್ರತೆಯಿಂದ ಪಠ್ಯ ವಿಷಯಗಳನ್ನು ಕೇಳಿ, ಅಭ್ಯಾಸ ಮಾಡಬೇಕು. ಸಮಸ್ಯೆಗಳಿದ್ದರೆ ಶಿಕ್ಷಕರ ಗಮನಕ್ಕೆ ತರಬೇಕು ಎಂದು ಸಲಹೆ ನೀಡಿದರು.

2004 ರಲ್ಲಿ ನಾನು ಇದೇ ಡಿವಿಎಸ್ ಸ್ವತಂತ್ರ ಕಾಲೇಜಿನಲ್ಲಿ ಪಿಯುಸಿ ಮಾಡಿದ್ದೆ. ಅತ್ಯಂತ ಉತ್ತಮವಾಗಿ, ಶ್ರದ್ದೆಯಿಂದ ಪ್ರಾಮಾಣಿಕವಾಗಿ ಹಾಗೂ ಶಿಸ್ತುಬದ್ದವಾಗಿ ಕಲಿಸುತ್ತಿದ್ದರು. ಟ್ಯೂಷನ್‌ಗೆ ಹೋಗುವ ಅವಶ್ಯಕತೆಯೇ ಇರಲಿಲ್ಲ. ಇಂತಹ ಸಂಸ್ಥೆಗಳಲ್ಲಿ ಎಲ್ಲ ವರ್ಗದ ವಿದ್ಯಾರ್ಥಿಗಳು ಬರುತ್ತಾರೆ, ಶಿಕ್ಷಕರು ಸಹ ಎಲ್ಲರನ್ನು ಸಮಾನವಾಗಿ ಕಾಣುತ್ತಾರೆ. ಈ ಸಂದರ್ಭದಲ್ಲಿ ನನಗೆ ಪಾಠ ಮಾಡಿ ದಾರಿ ತೋರಿದ ಎಲ್ಲ ಗುರುಗಳನ್ನು ಸ್ಮರಿಸುತ್ತೇನೆ ಎಂದು ಜಿಲ್ಲಾ ಪಂಚಾಯತ್ ಸಿಇಒ ಆದ ಎನ್ ಹೇಮಂತ್ ಅವರು ತಿಳಿಸಿದ್ದಾರೆ.

Human Rights Commission ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ್ ಎಂ.ಎಸ್. ಮಾನವ ಹಕ್ಕುಗಳ ಕುರಿತು ವಿಶೇಷ ಉಪನ್ಯಾಸ ನೀಡಿ ಮಾತನಾಡಿ, ಮಾನವ ಹಕ್ಕುಗಳು ಎಂದರೆ ನೈಸರ್ಗಿಕವಾಗಿ ಬಂದಿರುವ ಹಕ್ಕುಗಳಾಗಿವೆ. ಮಾನವ ಹಕ್ಕುಗಳು ಮತ್ತು ಕರ್ತವ್ಯಗಳ ಬಗ್ಗೆ ತಿಳಿದು ಬೇರೆಯವರ ಹಕ್ಕುಗಳನ್ನು ಹಾಗೂ ನಿಬಂಧನೆಗಳನ್ನೂ ಗೌರವಿಸಬೇಕು.
ಪ್ರಸ್ತುತ ಜಗತ್ತಿನಲ್ಲಿ ಮಾಹಿತಿ ಸ್ಫೋಟವಾಗುತ್ತಿದೆ. ಒಂದು ವ್ಯವಸ್ಥೆಯಲ್ಲಿ ಒಳ್ಳೆಯದು, ಕೆಟ್ಟದ್ದು ಎರಡೂ ಇರುತ್ತದೆ. ಒಳ್ಳೆಯದಕ್ಕೆ ಹೆಚ್ಚಿನ ಮಹತ್ವ ನೀಡಬೇಕು. ಈಗಂತೂ ಸೋಷಿಯಲ್ ಮೀಡಿಯಾದಲ್ಲಿ ಕೆಟ್ಟ ವಿಷಯಗಳನ್ನು ಸಲೀಸಾಗಿ ಮತ್ತು ಅತಿ ಶೀಘ್ರವಾಗಿ ತಲುಪಿಸಬಹುದಾಗಿದೆ. ಆದ್ದರಿಂದ ವಿದ್ಯಾರ್ಥಿಗಳು ಅತಿ ಎಚ್ಚರಿಕೆಯಿಂದ ಇರಬೇಕು ಎಂದು ಕಿವಿಮಾತು ಹೇಳಿದರು. ವಾಹನ ಪರವಾನಗಿ ಇಲ್ಲದೇ ವಾಹನ ಚಲಾವಣೆ ಮಾಡಬಾರದು. ತಂದೆ ತಾಯಿಯೊಂದಿಗೆ ಹಠ ಮಾಡಿ ನೋಯಿಸಬಾರದು. ಹೀಗೆ ನೋಯಿಸುವುದು ಕೂಡ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತದೆ. ಉತ್ತಮ ಗುಣಗಳನ್ನು ಅಳವಡಿಸಿಕೊಂಡು ಗುರಿ ಸಾಧನೆಯೆಡೆ ಹೆಚ್ಚಿನ ಗಮನ ಹರಿಸಬೇಕೆಂದರು.

ನನ್ನ ಹಕ್ಕು ನಿಮ್ಮ ಕರ್ತವ್ಯ ಹಾಗೆಯೇ ನಿಮ್ಮ ಹಕ್ಕು ನನ್ನ ಕರ್ತವ್ಯ ಎನ್ನುವ ಹಾಗೆ ಬದುಕಬೇಕು. ಆಗ ಮಾನವ ಹಕ್ಕುಗಳು ಗೌರವಯುತವಾಗಿ ನೆಲೆಸಲು ಸಾಧ್ಯವಾಗುತ್ತದೆ. ಜೊತೆಗೆ ನಮ್ಮ ಹಕ್ಕುಗಳ ಮಿತಿಯನ್ನು ಅರಿತಾಗ ಉತ್ತಮವಾದ ಸಮಾಜ ರಕ್ಷಣೆ ಮಾಡಿ ಮುನ್ನಡೆಯಲು ಸಾಧ್ಯವಾಗುತ್ತದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಸಂತೋಷ್ ಎಂ. ಎಸ್. ತಿಳಿಸಿದ್ದಾರೆ.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಜಿ.ಆರ್.ರಾಘವೇಂದ್ರ ಸ್ವಾಮಿ ಮಾತನಾಡಿ, ಎಲ್ಲ ನಾಗರೀಕರು ತಮ್ಮ ಹಕ್ಕುಗಳ ಬಗ್ಗೆ ತಿಳಿದುಕೊಳ್ಳಬೇಕು. ವಿದ್ಯಾರ್ಥಿಗಳು ಶಿಕ್ಷಣದ ಹಕ್ಕಿನ ಬಗ್ಗೆ ಮುಖ್ಯವಾಗಿ ತಿಳಿದುಕೊಳ್ಳಬೇಕು. ಹಕ್ಕುಗಳೊಂದಿಗೆ ತಮ್ಮ ಕರ್ತವ್ಯಗಳ ಬಗ್ಗೆಯೂ ತಿಳಿದುಕೊಳ್ಳುವುದು ಅತಿ ಅವಶ್ಯಕ. ಮಾನವ ಹಕ್ಕುಳಗ ರಕ್ಷಣೆಗೆ ಅನೇಕ ಕಾನೂನುಗಳಿದ್ದು ಅವುಗಳನ್ನು ತಿಳಿದುಕೊಳ್ಳಬೇಕು ಎಂದ ಅವರು ನಮ್ಮ ಸಂವಿಧಾನವನ್ನು ಓದಿ ಅದರಂತೆ ನಡೆಯಬೇಕು ಎಂದರು.
ಕಾರ್ಯಕ್ರಮದಲ್ಲಿ ಮಾನವ ಹಕ್ಕುಗಳ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಕಾರ್ಯಕ್ರಮದಲ್ಲಿ ಎಎಸ್‌ಪಿ ರಮೇಶ್ ಕುಮಾರ್, ಡಿಡಿಪಿಯು ಚಂದ್ರಪ್ಪ ಎಸ್ ಗುಂಡಪಲ್ಲಿ
ಡಿವಿಎಸ್ ಅಧ್ಯಕ್ಷರಾದ ಕೆ.ಎನ್.ರುದ್ರಪ್ಪ ಕೊಳಲೆ, ಕಾರ್ಯದರ್ಶಿ ಎಸ್ ರಾಜಶೇಖರ್, ಸಹ ಕಾರ್ಯದರ್ಶಿ ಡಾ.ಎ.ಸತೀಶ್ ಕುಮಾರ್ ಶೆಟ್ಟಿ, ಡಿವಿಎಸ್ ಸ್ವತಂತ್ರ ಕಾಲೇಜಿನ ಪ್ರಾಂಶುಪಾಲರಾದ ಸವಿತ ಎನ್ ರಾವ್ ಉಪನ್ಯಾಸಕ ಮಂಜುನಾಥ ಬಣಕಾರ್, ಇತರೆ ಅಧಿಕಾರಿಗಳು, ವಿದ್ಯಾರ್ಥಿಗಳು ಹಾಜರಿದ್ದರು

ಉರುಳು ಹಾಕಿ ಪ್ರಾಣಿ ಬಲಿ ಪಡೆಯುತ್ತಿರುವವರ ವಿರುದ್ಧ ಕಠಿಣ ಕ್ರಮಕ್ಕೆ ಅರಣ್ಯ ಸಚಿವರು ಸೂಚನೆ

0

ಉರುಳು ಹಾಕಿ ಪ್ರಾಣಿ ಬಲಿ ಪಡೆಯುತ್ತಿರುವವರ ವಿರುದ್ಧ ಕಠಿಣ ಕ್ರಮಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ವನ್ಯಜೀವಿ ವಿಭಾಗಗಳಲ್ಲಿ ಕಳೆದ 7 ತಿಂಗಳುಗಳಲ್ಲಿ 11 ಕರಡಿ ಮತ್ತು 4 ಚಿರತೆಗಳು ಅಕ್ರಮವಾಗಿ ಅಳವಡಿಸಿದ್ದ ಉರುಳಿಗೆ ಸಿಲುಕಿ ಸಾವನಪ್ಪಿವೆ. ಈ ಪೈಕಿ 3 ಕರಡಿ ಹಾಗೂ 2 ಚಿರತೆಗಳು ಮೃತಪಟ್ಟಿರುವ ವಿಚಾರ ವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು
ಆನೆ ಕಂದಕಗಳ ಬಳಿ ಬೆಳೆದ ಹುಲ್ಲಿನ ನಡುವೆ ಉರುಳು ಅಳವಡಿಸಿ ಕಳ್ಳಬೇಟೆ ಪ್ರಯತ್ನ ನಡೆಯುತ್ತಿದ್ದು ಇದರಿಂದ ವನ್ಯಜೀವಿಗಳು ಸಂಕಷ್ಟಕ್ಕೆ ಸಿಲುಕುತ್ತಿವೆ ಎಂಬ ಮಾಹಿತಿ ಲಭ್ಯವಾಗಿದೆ. ಇದರ ಜೊತೆಗೆ ಭದ್ರಾವತಿ, ಚಿಕ್ಕಮಗಳೂರು ಭಾಗದಲ್ಲೂ ಈ ರೀತಿಯ ಸಮಸ್ಯೆ ಇರುವ ಬಗ್ಗೆ ದೂರುಗಳು ಬಂದಿವೆ. ಉರುಳು ಮತ್ತು ತಂತಿ ಬೇಲಿಗೆ ಅಕ್ರಮವಾಗಿ ಹರಿಸುವ ವಿದ್ಯುತ್‌ ಸ್ಪರ್ಶದಿಂದ ವನ್ಯಜೀವಿಗಳು ಸಾವಿಗೀಡಾಗುತ್ತಿರುವ ವಿಭಾಗಗಳಲ್ಲಿ ಒಂದು ವಿಶೇಷ ತಂಡ ರಚಿಸಿ ಕಾಡಿನಂಚಿನ ಗ್ರಾಮದ ಜನರಿಗೆ ಜಾಗೃತಿ ಮೂಡಿಸಿ, ಉರುಳುಗಳನ್ನು ತೆರವು ಮಾಡಿಸಲು. ಗಸ್ತು ಹೆಚ್ಚಿಸಿ ಉರುಳು ಮತ್ತು ತಂತಿ ಬೇಲಿಗೆ ಅಕ್ರಮ ವಿದ್ಯುತ್ ಸಂಪರ್ಕ ಅಳವಡಿಕೆಯ ಬಗ್ಗೆ ಪರಿಶೀಲನೆ ನಡೆಸಲು ಹಾಗೂ ವನ್ಯಜೀವಿಗಳ ಸಾವಿಗೆ ಕಾರಣರಾದವರ ವಿರುದ್ಧ ಪ್ರಕರಣ ದಾಖಲಿಸುಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ.