Friday, February 27, 2026
Friday, February 27, 2026
Home Blog Page 1603

ರೈತರ ಮನೆಬಾಗಿಲಿಗೇ ಪಶುವೈದ್ಯಕೀಯ ಅಂಬುಲೆನ್ಸ್ ಸೇವೆ

0

ರಾಜ್ಯದ ರೈತರಿಗೆ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ನೀಡಿದೆ. ಜಾನುವಾರುಗಳಿಗೆ ಮನೆಬಾಗಿಲಲ್ಲೇ ಚಿಕಿತ್ಸೆ ನೀಡಲು ಪಶು ಅಂಬುಲೆನ್ಸ್ ಸೇವೆ ಆರಂಭಿಸಲಾಗುತ್ತಿದೆ. ಮೇ 7 ರಂದು ಇದಕ್ಕೆ ಚಾಲನೆ ದೊರೆಯಲಿದೆ ಎಂದು ತಿಳಿದುಬಂದಿದೆ.

ವಿಕಾಸಸೌಧದಲ್ಲಿ ಸಂಚಾರಿ ಪಶು ಅಂಬುಲೆನ್ಸ್ ಅನ್ನು ಪರೀಕ್ಷಿಸಿದ ಬಳಿಕ ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್ ಈ ಮಾಹಿತಿ ನೀಡಿದ್ದಾರೆ.

ಮೇ 7ರಂದು ಕೇಂದ್ರ ಪಶುಸಂಗೋಪನಾ ಸಚಿವ ಪುರುಷೋತ್ತಮ ರೂಪಾಲ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಆಂಬುಲೆನ್ಸ್ ಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ ಎಂದು ತಿಳಿಸಿದರು.

ಒಟ್ಟು 275 ಪಶು ಅಂಬುಲೆನ್ಸ್ ಗಳನ್ನು ಬಿಡುಗಡೆ ಮಾಡಲು ಉದ್ದೇಶಿಸಲಾಗಿದ್ದು ಈ ಪೈಕಿ ಮೇ 7ರಂದು 70 ಅಂಬುಲೆನ್ಸ್ ಗಳನ್ನು ಜಾನುವಾರಗಳ ಸೇವೆಗೆ ಲೋಕಾರ್ಪಣೆ ಮಾಡುತ್ತಿರುವುದಾಗಿ ತಿಳಿಸಿದರು.

ಇದರಿಂದ ಜಾನುವಾರುಗಳನ್ನು ಸಾಕುತ್ತಿರುವ ರೈತರಿಗೆ ಅನುಕೂಲವಾಗಲಿದೆ ಎಂದರು.

ಆರ್ಥಿಕವಾಗಿ ಹಿಂದುಳಿದವರಿಗೆ ಕೈಗಾರಿಕಾ ನಿವೇಶನಕ್ಕೆಶೇ75 ರಿಯಾಯಿತಿ

0

ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಸಿಹಿಸುದ್ದಿ ನೀಡಿದೆ.

ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ ಉದ್ಯಮ ಸ್ಥಾಪಿಸಲು ಕೆಐಎಡಿಬಿಯಿಂದ ಕೈಗಾರಿಕಾ ನಿವೇಶನಕ್ಕೆ ಶೇ. 75 ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಬೃಹತ್ ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಅವರು ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಮುಕ್ತ ವಿವಿ ಘಟಿಕೋತ್ಸವ ಭವನದಲ್ಲಿ ನಡೆದ ಉದ್ಯಮಿಯಾಗು ಉದ್ಯೋಗ ನೀಡು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು,

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ದಿಮೆದಾರರಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉದ್ಯಮಶೀಲರಿಗೆ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಿಂದ ಕೈಗಾರಿಕೆ ನಿವೇಶನಕ್ಕೆ ಶೇ.75 ರಷ್ಟು ರಿಯಾಯಿತಿ ನೀಡಲಾಗುತ್ತದೆ ಎಂದು ಹೇಳಿದ್ದಾರೆ.

ಆರ್ಥಿಕವಾಗಿ ಹಿಂದುಳಿದವರಿಗೆ ಕೈಗಾರಿಕ ನಿವೇಶನಕ್ಕೆ ಶೇ. 75 ರಷ್ಟು ರಿಯಾಯಿತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಭದ್ರಾ ನಾಲಾ ನೀರು ನಿಲುಗಡೆ- ಮಾಹಿತಿ

0

ಬೇಸಿಗೆ ಬೆಳೆಗಳಿಗಾಗಿ ಭದ್ರಾ ಅಚ್ಚುಕಟ್ಟು ನಾಲೆಗಳಲ್ಲಿ ಹರಿಸಲಾಗುತ್ತಿರುವ ನೀರನ್ನು ಮೇ 15 ಕ್ಕೆ ನಿಲ್ಲಿಸಲಾಗುವುದು. ಹಾಗೂ ನೀರಿನ ಅವಶ್ಯಕತೆಗನುಸಾರವಾಗಿ ಮೇ 20 ರವರೆಗೆ ಹೆಚ್ಚುವರಿಯಾಗಿ ನೀರು ಹರಿಸಲಾಗುವುದು ಎಂದು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ತೀರ್ಮಾನಿಸಲಾಯಿತು.

ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಪವಿತ್ರಾ ರಾಮಯ್ಯ ಇವರ ಅಧ್ಯಕ್ಷತೆಯಲ್ಲಿ ಇಂದು ಮಲವಗೊಪ್ಪದ ಕಚೇರಿಯಲ್ಲಿ ನಡೆದ 80 ನೇ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.

ಅಧ್ಯಕ್ಷತೆ ವಹಿಸಿದ್ದ ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ ಮಾತನಾಡಿ, ನೀರು ಸಲಹಾ ಸಮಿತಿ ಮತ್ತು ರೈತ ಸಂಘಟನೆಗಳ ಮುಖಂಡರೊಂದಿಗೆ ಚರ್ಚಿಸಿ ಎಲ್ಲ ರೈತರ ಹಿತದೃಷಿಯಿಂದ ಭದ್ರಾ ಜಲಾಶಯದ ಬೇಸಿಗೆ ಬೆಳೆಗಳಿಗೆ ಹರಿಸುತ್ತಿದ್ದ ನೀರನ್ನು ಮೇ 15 ಕ್ಕೆ ನಿಲ್ಲಿಸಲಾಗುತ್ತಿದೆ. ಹಾಗೂ ನೀರಿನ ಅವಶ್ಯಕತೆಗನುಗುಣವಾಗಿ ಮೇ 20 ರವರೆಗೆ ನೀರನ್ನು ಹರಿಸಲು ಸಮಿತಿ ನಿರ್ಧಾರ ಕೈಗೊಂಡಿದೆ ಎಂದರು.

ನಾನು ಪ್ರಾಧಿಕಾರದ ಅಧ್ಯಕ್ಷೆಯಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೀನಿ. ಅಧಿಕಾರಿಗಳಿಗೆ ಚುರುಕು ಮುಟ್ಟಿಸಿ ಕೆಲಸ ಮಾಡಿಸಿದ್ದೇನೆ. ನಾವು ಕೇವಲ ಅಧಿಕಾರಿಗಳ ಮೇಲೆ ಅವಲಂಬಿತರಾಗದೇ ಕೆಲಸ ಮಾಡಬೇಕು. ಹಿಂದೆ ಬರ ಇಲ್ಲದಿದ್ದ ಸಮಯದಲ್ಲೂ ಸಹ ಕಡೆಯ ಭಾಗಕ್ಕೆ ನೀರು ಸಿಕ್ಕಿರಲಿಲ್ಲ. ಆದರೆ ಕಾಳಜಿ ಮತ್ತು ಜವಾಬ್ದಾರಿ ವಹಿಸಿದಲ್ಲಿ ಎಲ್ಲರಿಗೆ ನ್ಯಾಯ ಒದಗಿಸಬಹುದು. ಜೊತೆಗೆ ಅಧಿಕಾರಿಗಳು ಸರಿ ಹೋಗ್ತಾರೆ.

ಕಳೆದ ಬಾರಿ ಹಾಗೂ ಈ ಬಾರಿ ಎರಡೂ ಸಲ ಜಲಾಶಯದಲ್ಲಿ ನೀರು ಉಳಿಕೆ ಮಾಡಿದ್ದೇವೆ. ಅನಾವಶ್ಯಕವಾಗಿ ಹರಿಯುತ್ತಿದ್ದ ನೀರನ್ನು ವಾಣಿವಿಲಾಸ ಜಲಾಶಯಕ್ಕೆ ಹರಿಸಿದ್ದೇವೆ. ಭದ್ರಾ ಮೇಲ್ದಂಡೆ ಯೋಜನೆಯ ಡಿಪಿಆರ್ ನಲ್ಲಿ ಬದಲಾವಣೆ ಆಗಬೇಕು. ಶಾಸಕರು ಸಹ ಈ ಬಗ್ಗೆ ಇಚ್ಚಾಶಕ್ತಿ ತೋರಬೇಕೆಂದರು.

ಸಮಿತಿ ಸದಸ್ಯರು ಹಾಗೂ ರೈತ ಮುಖಂಡರಾದ ಹೆಚ್.ಆರ್.ಬಸವರಾಜಪ್ಪ ಮಾತನಾಡಿ, ಕಡೆಯ ಭಾಗದ ರೈತರು ಸೇರಿದಂತೆ ಎಲ್ಲರ ಹಿತದೃಷ್ಟಿಯಿಂದ ನೀರನ್ನು ಮೇ 15 ಕ್ಕೆ ನಿಲ್ಲಿಸುವ ನಿರ್ಧಾರಕ್ಕೆ ಬರಲಾಗಿದೆ. 29.9 ಟಿಎಂಸಿ ನೀರು ಹರಿಸುವ ಭದ್ರಾ ಮೇಲ್ದಂತೆ ಯೋಜನೆಗೆ ತುಂಗಾದಿಂದ 17.4 ಟಿಂಎಂಸಿ ಮತ್ತು ಭದ್ರಾ ಜಲಾಶಯದಿಂದ 12.5 ಟಿಎಂಸಿ ನೀರು ಬಿಡಬೇಕೆಂದು ಡಿಪಿಆರ್ ಆಗಿದೆ. ಆದರೆ ಭದ್ರಾದ ಬದಲಾಗಿ ಸಂಪೂರ್ಣ 29.9 ಟಿಎಂಸಿ ನೀರು ತುಂಗಾದಿಂದಲೇ ಹರಿಸುವಂತೆ ಆಗಬೇಕೆಂದು ಮನವಿ ಮಾಡಿದರು.

ರೈತರ ಹಿತವೇ ನಮ್ಮ ಮೂಲ ಉದ್ದೇಶ. ಕಾಡಾ ಅಧ್ಯಕ್ಷರು ಈ ಪ್ರಾಧಿಕಾರಕ್ಕೆ ಸೂಕ್ತವಾದ ವ್ಯಕ್ತಿಗಳಾಗಿದ್ದು, ಅತ್ಯುತ್ತಮವಾಗಿ ನೀರಿನ ನಿರ್ವಹಣೆ ಮಾಡಿ, ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದಾರೆ. ಭದ್ರಾ ಮೇಲ್ದಂಡೆ ಯೋಜನೆಗೆ ಸಂಪೂರ್ಣವಾಗಿ ತುಂಗಾದಿಂದಲೇ ನೀರು ಹರಿಸುವ ಸಂಬಂಧ ಹಾಗೂ ನೀರಾವರಿಗೆ ಸಂಬಂಧಿಸಿದ ಇತರೆ ಸಮಸ್ಯೆಗಳ ಕುರಿತು ನೀರಾವರಿ ಸಚಿವರೊಂದಿಗೆ ಮಾತನಾಡುತ್ತೇನೆ. ಹಾಗೂ ಅನುದಾನ, ಮತ್ತಿತರೆ ಸಮಸ್ಯೆಗಳ ಪರಿಹಾರದ ಕುರಿತು ಪ್ರಯತ್ನ ಮಾಡುತ್ತೇನೆ ಹಾಗೂ ಈ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ಸಹ ತರುತ್ತೇನೆ. ನನ್ನ ಸಹಕಾರ ಸದಾ ಪ್ರಾಧಿಕಾರಕ್ಕೆ ಇದೆ ಎಂದು ವಿಧಾನಪರಿಷತ್ ಶಾಸಕರಾದ ಡಿ.ಎಸ್. ಅರುಣ್ ಅವರು ತಿಳಿಸಿದರು.

ಸಮಿತಿ ಸದಸ್ಯರಾದ ಷಡಕ್ಷರಪ್ಪ ಗೌಡ್ರು ಮಾತನಾಡಿ, ಸಭೆಗೆ ಕೃಷಿ ಇಲಾಖೆ ಅಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು ಸಮರ್ಪಕ ಮಾಹಿತಿಯೊಂದಿಗೆ ಹಾಜರಾಗಬೇಕೆಂದು ಠರಾವು ಮಾಡಿ ಸರ್ಕಾರಕ್ಕೆ ಕಳುಹಿಸಬೇಕು ಹಾಗೂ ಶಾಸಕರೂ ಸಹ ಸಭೆಗೆ ಹಾಜರಾಗಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಸದಸ್ಯರಾದ ಲಿಂಗರಾಜ್ ಮಾತನಾಡಿ, ಭದ್ರಾ ಮೇಲ್ದಂಡೆ ಯೋಜನೆ ಎಂಬ ಹೆಸರಿನಿಂದ ಕರೆಯಲಾಗುತ್ತಿರುವ ಈ ಯೋಜನೆಯು ಏತ ನೀರಾವರಿ ಆಗಿರುವುದರಿಂದ ಸದರಿ ಯೋಜನೆಗೆ ಭದ್ರಾ ಏತ ನೀರಾವರಿ ಯೋಜನೆ ಎಂದು ನೇಮಕ ಮಾಡಬೇಕೆಂದು ಸಲಹೆ ನೀಡಿದರು.

ಸದಸ್ಯರಾದ ತೇಜಸ್ವಿ ಪಟೇಲ್, ವೈ.ಸಿ.ಮಲ್ಲಿಕಾರ್ಜುನ, ರುದ್ರಮೂರ್ತಿ, ಮಂಜುನಾಥ್ ರೆಡ್ಡಿ, ಮಹೇಶ್ ಇತರೆ ಸದಸ್ಯರು ಹಾಗೂ ರೈತ ಸಂಘಟನೆ ಪದಾಧಿಕಾರಿಗಳು, ರೈತ ಮುಖಂಡರು ಮಾತನಾಡಿ. ಸಲಹೆ ಸೂಚನೆಗಳನ್ನು ನೀಡಿದರು.

ಸಭೆಯಲ್ಲಿ ಭದ್ರಾ ನೀರಾವರಿ ಸಲಹಾ ಸಮಿತಿ ಸದಸ್ಯರು, ರೈತ ಮುಖಂಡರು, ಆಡಳಿತಾಧಿಕಾರಿ ಅರುಣ್, ಕನೀನಿನಿ ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರ ಚಂದ್ರಹಾಸ್, ಇತರೆ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದರು.

ಮುಸ್ಲೀಂ ಮನೆಯಂಗಳದಲ್ಲೇ ಹಿಂದೂ ಕುಟುಂಬದ ಮದುವೆ ಮಂಟಪ

0

ಇಂದಿನ ದಿನಮಾನಗಳಲ್ಲಿ ದೇಶದೆಲ್ಲೆಡೆ ಸಾಕಷ್ಟು ಕೋಮು ಸಂಬಂಧಿತ ಜಟಾಪಟಿಗಳು ನಡೆಯುತ್ತಿವೆ.

ಸಮಾಜದಲ್ಲಿ ಹಿಂದಿನಿಂದ ನೆಲೆಯೂರಿ ಬರುತ್ತಿದ್ದ ಶಾಂತಿ-ನೆಮ್ಮದಿಗಳಿಗೆ ಮತ್ತೆ ಸವಾಲು ಹಾಕುತ್ತಿರುವಂತಹ ಪರಿಸ್ಥಿತಿ ಮೂಡುತ್ತಿರುವುದು ದುರದೃಷ್ಟಕರ.

ಧಾರ್ಮಿಕ ಸೌಹಾರ್ದತೆಯ ಪರಂಪರೆಯುಳ್ಳ ನಮ್ಮ ದೇಶದಲ್ಲಿ ಮತ್ತೆ ಆ ಭಾವನೆ ಗಟ್ಟಿಯಾಗಿ ಎಲ್ಲರಲ್ಲೂ ಒಡಮೂಡಬೇಕಿದೆ. ಅಂತಹ ಸಾಮರಸ್ಯ ಭಾವನೆ ಮೂಡುವಂತೆ ಉತ್ತರ ಪ್ರದೇಶದಲ್ಲಿ ನಡೆದ ಈ ಘಟನೆ ಎಲ್ಲರಿಗೂ ಮಾದರಿಯಾಗಲಿ.

ಉತ್ತರ ಪ್ರದೇಶ ನಿವಾಸಿ ಪೂಜಾ ಎಂಬಾಕೆಯ ವಿವಾಹವು ಏಪ್ರಿಲ್ 22ರಂದು ನಿಶ್ಚಯವಾಗಿತ್ತು. ಆದರೆ, ಆಕೆಯ ಮದುವೆಯ ಸಮಯ ಹತ್ತಿರ ಬರುತ್ತಿದ್ದಂತೆ ಪೂಜಾಳ ಸಂಬಂಧಿಕರು ಆಕೆಯ ಮದುವೆಗಾಗಿ ಕಲ್ಯಾಣ ಮಂಟಪವೊಂದನ್ನು ಬುಕ್ ಮಾಡಲು ಪ್ರಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ಆರ್ಥಿಕವಾಗಿ ಅವರ ಬಳಿ ಸಾಕಷ್ಟು ಹಣವಿರದ ಕಾರಣ ಅವರಿಗೆ ಕಲ್ಯಾಣ ಮಂಟಪ ಬುಕ್ ಮಾಡಲು ಆಗಿಲ್ಲ.

ಕೊನೆಗೆ ಪೂಜಾ ಅವರ ಅಂಕಲ್ ರಾಜೇಶ್ ಚೌರಾಸಿಯಾ ಎಂಬುವವರು ಪೂಜಾ ಮನೆಯ ಪಕ್ಕದಲ್ಲಿ ವಾಸವಿದ್ದ ಮುಸ್ಲಿಂ ಕುಟುಂಬದವರನ್ನು ಭೇಟಿ ಮಾಡಿ ಅವರಿಂದ ತಮಗೇನಾದರೂ ಸಹಾಯವಾಗಬಲ್ಲದೇ ಎಂದು ವಿನಂತಿಸಿದಾಗ ರಮ್ಜಾನಿನ ಈ ಪವಿತ್ರ ಮಾಸದಲ್ಲಿ ನಿಜಕ್ಕೂ ಆ ಮುಸ್ಲಿಂ ಕುಟುಂಬ ಒಂದು ಪವಿತ್ರ ಕೆಲಸ ಮಾಡಿ ಸಮಾಜದಲ್ಲಿ ಐಕ್ಯತೆಯ ಸಂದೇಶ ರವಾನಿಸಿದೆ.

ಪೂಜಾಳ ಮದುವೆ ದಿಬ್ಬಣಕ್ಕಾಗಿ ಹಾಗೂ ಅತಿಥಿಗಳ ಉಪಚಾರಕ್ಕಾಗಿ ಆ ಮುಸ್ಲಿಂ ಕುಟುಂಬ ತಮ್ಮ ಮನೆಯನ್ನು ಆತಿಥ್ಯಕ್ಕೆಂದು ನೀಡಿ ಪೂಜಾಳ ಮದುವೆ ಮೆರವಣಿಗೆಯಲ್ಲಿ ಆ ಕುಟುಂಬವೂ ಭಾಗಿಯಾಗಿದೆ. ಪೂಜಾ ತಂದೆ ಕೋವಿಡ್ ಮೊದಲನೆ ಅಲೆಯಲ್ಲಿ ಸೋಂಕಿಗೆ ಒಳಗಾಗಿ ಪ್ರಾಣ ಕಳೆದುಕೊಂಡಿದ್ದರಿಂದ ಆಕೆಯ ಅಂಕಲ್ ಹಾಗೂ ಉಳಿದ ಕುಟುಂಬದ ಮಹಿಳೆಯರು ಪೂಜಾರ ಮದುವೆಯ ಜವಾಬ್ದಾರಿ ಹೊತ್ತಿತ್ತೆಂದು ತಿಳಿದುಬಂದಿದೆ.

ಈ ಘಟನೆಗೆ ಸಂಬಂಧಿಸಿದಂತೆ ಪೂಜಾ ಅಂಕಲ್ ಚೌರಾಸಿಯಾ”ನಮಗೆ ಮಂಟಪ ಸಿಗುವುದು ಕಷ್ಟವಾದಾಗ ನಾನು ನಮ್ಮ ನೆರೆಯಲ್ಲಿ ವಾಸವಿದ್ದ ಪರ್ವೇಜ್ ಅವರ ಬಳಿ ಬಂದು ಸಹಾಯ ಕೇಳಿದೆ. ತಕ್ಷಣ ಅವರು ಯಾವುದೇ ಹಿಂಜರಿಕೆಯಿಲ್ಲದೆ ತಮ್ಮ ಮನೆಯ ಅಂಗಳವನ್ನೇ ಮಂಟಪವನ್ನಾಗಿ ಬಳಸಲು ಅನುಮತಿ ನೀಡಿದ್ದಲ್ಲದೆ, ಪರ್ವೇಜ್ ಅವರ ಕುಟುಂಬವೇ ಅಲ್ಲಿ ಮಂಟಪವನ್ನೂ ಸಹ ನಿರ್ಮಿಸಿದರು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪರ್ವೇಜ್ ಅವರ ಪತ್ನಿಯಾದ ನಾದಿರಾ ಅವರು ಮಾತನಾಡಿ, ನಮಗೆ ಪೂಜಾ ಮದುವೆ ವಿಷಯ ಗೊತ್ತಾದ ಬಳಿಕ ನಮ್ಮ ಕೈಲಾದಷ್ಟು ಅವರಿಗೆ ಸಹಾಯ ಮಾಡಬೇಕೆಂದುಕೊಂಡಿದ್ದೆವು ಹಾಗೂ ಪೂಜಾ ಸಹ ನಮಗೆ ಮಗಳ ರೀತಿಯಲ್ಲೇ ಇರುವುದರಿಂದ ಈ ಪವಿತ್ರ ರಮ್ಜಾನ್ ಮಾಸದಲ್ಲಿ ಆಕೆಯ ಈ ಶುಭ ವಿವಾಹ ಕಾರ್ಯಕ್ಕೆ ನೆರವಾದ ಸಂಗತಿಗಿಂತ ಯಾವುದೂ ದೊಡ್ಡದಲ್ಲ ಎಂದು ನುಡಿದಿದ್ದಾರೆ.

ಅವರ ಕುಟುಂಬದ ಪುರುಷ ಸದಸ್ಯರು ಮದುವೆಗೆ ಬಂದ ಅತಿಥಿಗಳನ್ನು ಉಪಚರಿಸುತ್ತ ಕೂರುವ ವ್ಯವಸ್ಥೆ ಮಾಡಿದರೆ ಹೆಣ್ಣು ಸದಸ್ಯರು ಮದುವೆಯ ಗೀತೆಗಳನ್ನು ಹಾಡುವಲ್ಲಿ ನಿರತರಾಗಿದ್ದರು. ಅವರ ಈ ಸಹಾಯದಿಂದಾಗಿ ನಮಗೆ ಮದುವೆಗೆ ಸಂಬಂಧಿಸಿದ ಇತರೆ ಕಾರ್ಯಗಳನ್ನು ನಿರಾಯಾಸವಾಗಿ ನಿರ್ವಹಿಸಲು ಸಾಕಷ್ಟು ಅನುಕೂಲವಾಯಿತು ಎಂದು ಸಂತಸ ವ್ಯಕ್ತಪಡಿಸಿದರು.

ರಾಜೇಶ್ ಚೌರಾಸಿಯಾ ಅವರ ಪ್ರಕಾರ, ಪರ್ವೇಜ್ ಅವರ ಕುಟುಂಬವು ತಮ್ಮ ಮನೆಯ ಪ್ರಾಂಗಣವನ್ನು ಮಂಟಪಕ್ಕಾಗಿ ಸಿದ್ಧಪಡಿಸಿತು. ಆನಂತರ ಅಲ್ಲಿ ಬರುವ ಅತಿಥಿಗಳನ್ನು ಸತ್ಕರಿಸಲು ಸಕಲ ವ್ಯವಸ್ಥೆಗಳನ್ನು ಮಾಡಿದರಲ್ಲದೆ, ಬಂದ ಅತಿಥಿಗಳಿಗೆ ಕಾಣಿಕೆಗಳನ್ನೂ ಸಹ ನೀಡಲಾಯಿತು. ಈ ಎಲ್ಲ ಕಾರ್ಯವನ್ನು ಪರ್ವೇಜ್ ಅವರ ಕುಟುಂಬ ತುಂಬಾ ಅನ್ಯೋನ್ಯವಾಗಿ ನೋಡಿಕೊಂಡಿದೆ ಎಂದು ತಿಳಿಸಿದರು.

ಅಲ್ಲದೆ, ಈ ಸಂದರ್ಭದಲ್ಲಿ ಪರ್ವೇಜ್ ಅವರ ಕುಟುಂಬ ಪೂಜಾಗೆ ಬಂಗಾರದ ನೆಕ್ಲೇಸ್‌ ಒಂದನ್ನು ಉಡುಗೊರೆಯಾಗಿ ನೀಡಿ, ಆಶಿರ್ವದಿಸಿದ್ದಾರೆ ಎಂದು ತಿಳಿದುಬಂದಿದೆ.

545ಪಿಎಸ್ ಐ ಹುದ್ದೆ ಅಕ್ರಮ, ಮರು ಪರೀಕ್ಷೆಗೆ ಸರ್ಕಾರ ತೀರ್ಮಾನ- ಜ್ಞಾನೇಂದ್ರ

0

545 ಪಿ ಎಸ್ ಐ ಹುದ್ದೆ ನೇಮಕಾತಿಯಲ್ಲಿ ಅಕ್ರಮ ಹಿನ್ನೆಲೆಯಲ್ಲಿ ಮರು ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಬೆಂಗಳೂರಿನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ನಡೆದಿದ್ದ ಪಿಎಸ್ ಐ ಹುದ್ದೆ ನೇಮಕಾತಿ ಫಲಿತಾಂಶವನ್ನು ರದ್ದುಪಡಿಸಲಾಗಿದೆ. ಅಕ್ರಮದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಮರು ಪರೀಕ್ಷೆಗೆ ನಿರ್ಧರಿಸಲಾಗಿದೆ ಎಂದು ಆರಗ ಜ್ಞಾನೇಂದ್ರ ಅವರು ಹೇಳಿದ್ದಾರೆ.

ಆರೋಪಿಗಳಿಗೆ ಮರುಪರೀಕ್ಷೆಗೆ ಯಾವುದೇ ಅವಕಾಶವಿಲ್ಲ. ಪ್ರಾಮಾಣಿಕ ಅಭ್ಯರ್ಥಿಗಳಿಗೆ ಅನ್ಯಾಯವಾಗದಂತೆ ಪರೀಕ್ಷೆ ನಡೆಯಲಿದೆ. ಶೀಘ್ರವೇ ಪಿ ಎಸ್ ಐ ಹುದ್ದೆ ಮರು ಪರೀಕ್ಷೆ ದಿನಾಂಕ ಪ್ರಕಟಿಸಲಾಗುತ್ತದೆ ಎಂದು ಆರಗ ಜ್ಞಾನೇಂದ್ರ ಅವರು ತಿಳಿಸಿದರು.

ಹಿಂದಿ ಹೇರಲು ಪ್ರಯತ್ನಿಸಿಲ್ಲ. ಪ್ರಾದೇಶಿಕ ಭಾಷೆಗಳಿಗೇ ಪ್ರಾಮುಖ್ಯತೆ-ಪ್ರಧಾನ್

0

ಹಿಂದಿ ರಾಷ್ಟ್ರ ಭಾಷೆಯಲ್ಲ ಎಂದು ನಟ ಸುದೀಪ್ ನೀಡಿದ ಖಡಕ್ ಅಭಿಪ್ರಾಯ ದೇಶದಲ್ಲೇ ಸದ್ದು ಮಾಡುತ್ತಿದೆ. ಇದೇ ವೇಳೆ ರಾಜಕೀಯ ನಾಯಕರ ಅಭಿಪ್ರಾಯ ಕೇಳುವ ತವಕ‌ ಅನೇಕರಿಗಿರುತ್ತದೆ. ಅವರು ಹೌದು ಎಂದರೂ ತಪ್ಪು, ಇಲ್ಲ ಎಂದರೂ ತಪ್ಪು, ರಾಜಕೀಯವಾಗಿ ಪರಿಣಾಮ ಬೀರಲಿದೆ.

ಈ ಸಂದರ್ಭದಲ್ಲಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಬೆಂಗಳೂರಲ್ಲಿ ತಮ್ಮ ಅಭಿಪ್ರಾಯ ನೀಡಿದ್ದಾರೆ. ಹಿಂದಿ ರಾಷ್ಟ್ರೀಯ ಭಾಷೆ ಎಂದು ಕೇಂದ್ರ ಸರ್ಕಾರ ಎಲ್ಲಿಯೂ ಹೇಳಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಹಿಂದಿ ಎಂದಿಗೂ ನಮ್ಮ ರಾಷ್ಟ್ರ ಭಾಷೆಯಾಗುವುದಿಲ್ಲ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಕೂಡ ಹೇಳಿದರು.
ಜೆಡಿಎಸ್ ನಾಯಕ ಎಚ್‌.ಡಿ. ಕುಮಾರಸ್ವಾಮಿ, ಹೆಚ್ಚಿನ ಜನಸಂಖ್ಯೆಯು ಹಿಂದಿ ಮಾತನಾಡುವುದರಿಂದ ಅದು ರಾಷ್ಟ್ರೀಯ ಭಾಷೆಯಾಗುವುದಿಲ್ಲ ಹೇಳಿದರು.

ನಾವು ಹಿಂದಿ ಹೇರಲು ಪ್ರಯತ್ನಿಸುತ್ತಿಲ್ಲ. ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿಯೂ ಪ್ರಾದೇಶಿಕ ಭಾಷೆಗಳಿಗೆ ಪ್ರಾಮುಖ್ಯತೆ ನೀಡಿದ್ದೇವೆ. ಯಾರೂ ಯಾರ ಮೇಲೂ ಯಾವುದೇ ಭಾಷೆಯನ್ನು ಹೇರುವಂತಿಲ್ಲ ಎಂದರು.

ಹಿಂದಿಯ ವಿಷಯವಾಗಿ ಬಾಲಿವುಡ್ ನಟ ದೇವಗನ್ ಹೇಳಿದ ಹಾಗೂ ಸುದೀಪ್ ನಡುವೆ ನಡೆದ ಟಗ್‌ ಆಫ್‌ ವಾರ್ ನಡೆದಿದ್ದು ದೇಶದ ಗಮನ ಸೆಳೆದಿದೆ. ಸುದೀಪ್ ಹೇಳಿದ್ದು ಸರಿಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಭಾಷಾವಾರು ರಾಜ್ಯಗಳ ಮರು ಹಂಚಿಕೆಯ ನಂತರ ಮಾತೃಭಾಷೆ ಅಥವಾ ಪ್ರಾದೇಶಿಕ ಭಾಷೆ ಮುಖ್ಯವಾಗುತ್ತದೆ ಮತ್ತು ರಾಜ್ಯಗಳಲ್ಲಿ ಆ ಭಾಷೆ ಸರ್ವೋಚ್ಚ. ಅದನ್ನು ಎಲ್ಲರೂ ಅರ್ಥಮಾಡಿಕೊಳ್ಳಬೇಕು ಮತ್ತು ಗೌರವಿಸಬೇಕು ಎಂದು ಬೊಮ್ಮಾಯಿ ಹೇಳಿದರು.

ನಾವು ಹಿಂದಿ ಹೇರಲು ಪ್ರಯತ್ನಿಸುತ್ತಿಲ್ಲ. ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿಯೂ ಪ್ರಾದೇಶಿಕ ಭಾಷೆಗಳಿಗೆ ಪ್ರಾಮುಖ್ಯತೆ ನೀಡಿದ್ದೇವೆ. ಯಾರೂ ಯಾರ ಮೇಲೂ ಯಾವುದೇ ಭಾಷೆಯನ್ನು ಹೇರುವಂತಿಲ್ಲ ಎಂದರು.

ಲಸಿಕೆ ಪರಿಣಾಮ ಶೇ80ರಷ್ಟು ಸಾವುಗಳ ನಿಯಂತ್ರಣ- ಅಮೆರಿಕ ವರದಿ

0

ಲಸಿಕೆಯ ಪರಿಣಾಮ ಕೊರೋನಾನಿಂದ ಸಂಭವಿಸಬಹುದಾಗಿದ್ದ ಶೇ. 80ಕ್ಕಿಂತ ಹೆಚ್ಚು ಸಾವುಗಳು ನಿಯಂತ್ರಣಕ್ಕೆ ಬಂದಿವೆ ಎಂದು ಅಮೆರಿಕದ ಅಧ್ಯಯನ ತನ್ನ ವರದಿಯಲ್ಲಿ ತಿಳಿಸಿದೆ.

ಅಮೆರಿಕದ 48 ರಾಜ್ಯಗಳು ಹಾಗೂ 2558 ಕೌಂಟಿಗಳನ್ನು ಒಳಗೊಂಡ ಈ ಅಧ್ಯಯನದಲ್ಲಿ ಲಸಿಕೆ ಪಡೆಯದ ಕೌಂಟಿಗಳಿಗೆ ಹೋಲಿಸಿದರೆ, ಲಸಿಕೆ ಪಡೆದ ಕೌಂಟಿಗಳಲ್ಲಿ ಸಾವಿನ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಕಡಿಮೆಯಿದೆ ಎಂದು ಉಲ್ಲೇಖಿಸಲಾಗಿದೆ.

2022ರ ಏಪ್ರಿಲ್ 11ರವರೆಗೆ ಜಾಗತಿಕವಾಗಿ 1,100 ಕೋಟಿ ಕೊರೋನಾ ಲಸಿಕೆಗಳನ್ನು ನೀಡಲಾಗಿದೆ. 2022ರ ಮಧ್ಯಂತರ ಅವಧಿ ವೇಳೆಗೆ ವಿಶ್ವದ ಒಟ್ಟಾರೆ ಜನಸಂಖ್ಯೆಯ ಪೈಕಿ ಶೇ.70ರಷ್ಟು ಮಂದಿಗೆ ಲಸಿಕೆ ನೀಡುವುದು ವಿಶ್ವ ಆರೋಗ್ಯ ಸಂಸ್ಥೆಯ ಗುರಿಯಾಗಿದೆ.

ಜನಾಭಿಪ್ರಾಯ ಆಧರಿಸಿ ಬಿಜೆಪಿ ಸೇರ್ಪಡೆ ನಿರ್ಧಾರ- ಸುಮಲತಾ

0

ನಾನು ಬಿಜೆಪಿಗೆ ಸೇರುವ ಬಗ್ಗೆ ಎಲ್ಲೂ ಹೇಳಿಲ್ಲ. ಬಿಜೆಪಿ ಮುಖಂಡರನ್ನು ಭೇಟಿಯಾಗಿದ್ರೆ, ಅಭಿವೃದ್ಧಿಯ ವಿಚಾರವಾಗಿ ಅಷ್ಟೇ. ಅವರ ಜೊತೆ ಅಭಿವೃದ್ಧಿ ವಿಚಾರವನ್ನಷ್ಟೇ ಮಾತನಾಡಿದ್ದೇನೆ ಎಂದು ಸಂಸದೆ ಸುಮಲತಾ ಅಂಬರೀಶ್ ಅವರು ಹೇಳಿದ್ದಾರೆ.

ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಳೆದ 2 ವರ್ಷಗಳಿಂದ ಸಂಸದರ ನಿಧಿ ಬಂದಿರಲಿಲ್ಲ. ಈಗ ಸಂಸದರ ನಿಧಿ ಬಿಡುಗಡೆಯಾಗಿದೆ. ಈ‌ ಕಾರಣದಿಂದ ಮುಖಂಡರನ್ನು ನಿಧಿ ಬಗ್ಗೆ ತಿಳಿಸುತ್ತಿದ್ದೇನೆ. ಮುಖಂಡರು ಹಿಂದೆ ಫಂಡ್ ಬಗ್ಗೆ ಕೇಳಿದ್ದರು. ಈ ಬಗ್ಗೆ ಪ್ರಸ್ತಾಪ ಮಾಡಲು ಅವರನ್ನು ಸಭೆ ಕರೆದಿದ್ದೇನೆ. ಈ ಸಭೆ ಬಿಜೆಪಿ ಸೇರುವ ಬಗ್ಗೆ ಅಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಅಶ್ವತ್ಥ್ ನಾರಾಯಣ್ ಪಕ್ಷಕ್ಕೆ ಬಂದ್ರೆ ಸ್ವಾಗತ ಎಂದಿದ್ದಾರೆ. ನನಗೆ ಈಗ ಸದ್ಯಕ್ಕೆ ಅವಶ್ಯಕತೆ ಇಲ್ಲ. ಈಗ ಚುನಾವಣೆಯೂ ಇಲ್ಲ. ಈಗ ಈ ಪ್ರಸ್ತಾಪ ಇಲ್ಲ. ಪಕ್ಷ ಸೇರ್ಪಡೆ ವಿಚಾರವಾಗಿ ಜನರ ಅಭಿಪ್ರಾಯ ಸಂಗ್ರಹಿಸುತ್ತಿದ್ದೇನೆ. ಇದನ್ನು ಬಹಿರಂಗವಾಗಿ ಹೇಳಲು ಆಗಲ್ಲ. ಜನರು ಏನು ಅಭಿಪ್ರಾಯ ಹೇಳಿದ್ದಾರೆ. ಅದನ್ನು ಹೇಳಲ್ಲ. ನನ್ನ ಬೆಂಬಲಿಗರು ಬಿಜೆಪಿ ಸೇರ್ಪಡೆ ಬಗ್ಗೆ ನಾನು ಏನು ಹೇಳಲ್ಲ. ಎಲ್ಲರೂ ಸ್ವತಂತ್ರರು ಯಾವ ಪಕ್ಷಕ್ಕಾದ್ರು ಸೇರಬಹುದು. ನನ್ನ ಚುನಾವಣೆ ಸಂದರ್ಭದಲ್ಲಿ ಎಲ್ಲಾ ಪಕ್ಷದವರು ದುಡಿದಿದ್ದಾರೆ ಎಂದು ತಿಳಿಸಿದ್ದಾರೆ.

ಸದ್ಯದಲ್ಲೇ ಎಲೆಕ್ಟ್ರಿಕ್ ವಾಹನಗಳ ಬಗ್ಗೆ ಕೇಂದ್ರದ ಮಾರ್ಗಸೂಚಿ

0

ಇತ್ತೀಚಿನ ದಿನಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಅಗ್ನಿ ಅವಘಡ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದೆ. ಆದ್ದರಿಂದ,ಕೇಂದ್ರ ರಸ್ತೆ ಸಾರಿಗೆ ಸಚಿವಾಲಯವು ತಮ್ಮ ಹೊಸ ದ್ವಿಚಕ್ರ ವಾಹನಗಳ ಬಿಡುಗಡೆ ಯೋಜನೆಗಳನ್ನು ಮುಂದೂಡುವಂತೆ ಎಲೆಕ್ಟ್ರಿಕ್ ವಾಹನಗಳ ಉತ್ಪಾದಕ ಕಂಪನಿಗಳ ಸಭೆಯಲ್ಲಿ ಮೌಖಿಕವಾಗಿ ಸೂಚಿಸಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಯಾವುದೇ ಒಂದು ವಾಹನಕ್ಕೆ ಬೆಂಕಿ ತಗುಲಿದ ವರದಿ ಬಂದರೆ ಸಂಪೂರ್ಣ ಬ್ಯಾಚ್‌ನ ವಾಹನಗಳನ್ನು ಹಿಂಪಡೆದುಕೊಳ್ಳುವಂತೆ ಸೂಚಿಸಲಾಗಿದೆ.

ತನಿಖಾ ವರದಿಗಳ ಆಧಾರದ ಮೇಲೆ ಎಲೆಕ್ಟ್ರಿಕ್ ವಾಹನಗಳಿಗೆ ನೂತನ ಮಾರ್ಗಸೂಚಿಗಳನ್ನು ರೂಪಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಹೊಸ ವಾಹನಗಳ ಬಿಡುಗಡೆ ಮುಂದೂಡುವಂತೆ ಮನವಿ ಮಾಡಲಾಗಿದೆ ಎಂದು ಸಚಿವಾಲಯದ ಅಧಿಕಾರಿಯೊಬ್ಬರು ಮಾಹಿತಿ ತಿಳಿಸಿದ್ದಾರೆ.

ವಾಹನಗಳಿಗೆ ಬೆಂಕಿ ಹೊತ್ತಿಕೊಳ್ಳಲು ಕಾರಣವೇನು, ಇದರಲ್ಲಿ ವಾಹನ ತಯಾರಕರ ಅಥವಾ ಗ್ರಾಹಕರ ಪ್ರಮಾದ ಇದೆಯೇ ಎಂಬ ಕುರಿತು ಸರ್ಕಾರ ಸ್ಪಷ್ಟನೆ ಬಯಸಿದೆ. ತನಿಖಾ ವರದಿಯನ್ನು ಆಧರಿಸಿ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ ಮತ್ತು ಮಾರಾಟ ಕುರಿತು ಹೊಸ ನಿಯಮಾವಳಿ ರೂಪಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ವರದಿಗಳಿಂದ ತಿಳಿದು ಬಂದಿದೆ.

ಸಚಿವಾಲಯದ ಮನವಿಗೆ ಎಲೆಕ್ಟ್ರಿಕ್ ವಾಹನ ಉತ್ಪಾದಕ ಕಂಪನಿಗಳು ಧನಾತ್ಮಕವಾಗಿ ಸ್ಪಂದಿಸಿದೆ. ಸಂಪೂರ್ಣ ಸಹಕಾರದ ಭರವಸೆ ನೀಡಿವೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಚಾರ್ಜಿಂಗ್ ಸುರಕ್ಷತೆ ಹಾಗೂ ಅಗ್ನಿ ಅವಘಡಗಳನ್ನು ತಪ್ಪಿಸುವುದು ಹೇಗೆ? ಎಂಬ ಬಗ್ಗೆ ಗ್ರಾಹಕರಿಗೆ ತಿಳುವಳಿಕೆ ನೀಡುವಂತೆ ಸಚಿವಾಲಯ ಕೋರಿದೆ.

ಅಗ್ನಿ ಅವಘಡಗಳ ನಂತರ ಕೇಂದ್ರ ಸರ್ಕಾರ ರಚಿಸಿರುವ ತಜ್ಞರ ಸಮಿತಿಗಳು ಎಲೆಕ್ಟ್ರಿಕ್ ವಾಹನಗಳ ತಯಾರಿಕಾ ಘಟಕಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಎಲ್ಲಾ ಶ್ಯಾಮಮಯ, ಧಾರ್ಮಿಕ ಸೌಹಾರ್ದಕ್ಕೆ ಮಾದರಿ

0

ನಮ್ಮ ಭಾರತೀಯ ಭೂಮಿ ಎಲ್ಲ ಧರ್ಮಗಳ ನೆಲೆಬೀಡು. ಸರ್ವದೇವ ನಮಸ್ಕಾರಃ ಕೇಶವಂ ಪ್ರತಿಗಚ್ಛತಿ ಎಂದು ಅತ್ಯಂತ ವಿಶಾಲ ಮನೋ‌ಭಾವ ರೂಪಿಸಿದ ತಾಣ. ಕೇಶವ ಅಂದರೆ ಹರಿ ಎಂದೇ ಆಗಬೇಕಿಲ್ಲ .ಅವರವರ ಪಾಲಿಗೆ ಅವರು ನಂಬಿದ ಉನ್ನತ ದೈವ ಅಷ್ಟೆ. ಹೀಗೆ ಮುಂಚಿನಿಂದಲೂ ಈ ರೀತಿಯ ಭಾವೈಕ್ಯತೆ ಬೀಜ ನಮ್ಮ ನೆಲದಲ್ಲಿದೆ.
ಈಗ ಅಂತಹ ಸ್ವಾರಸ್ಯ ತಾಣವೊಂದರ ಪರಿಚಯ ನಿಮಗೆ ಮಾಡಿಕೊಡಲಿದ್ದೇವೆ.

ತಾವರಗೇರಾ ಪಟ್ಟಣದ ಆರಾಧ್ಯ ದೈವ ಶ್ಯಾಮೀದ್ ಅಲಿ ದರ್ಗಾ ಹಿಂದೂ-ಮುಸ್ಲಿಮರ ಸಾಮರಸ್ಯದ ತಾಣವಾಗಿದೆ.

ಪಟ್ಟಣದ ಹಿಂದೂ ಸಮುದಾಯದರು ತಮ್ಮ ಮಕ್ಕಳಿಗೆ ಮೊದಲಿನಿಂದಲೂ ಶ್ಯಾಮಣ್ಣ, ಶ್ಯಾಮಪ್ಪ, ಶ್ಯಾಮ್, ಶ್ಯಾಮ್ ಸುಂದರ, ಶ್ಯಾಮೂರ್ತಿ, ಸಣ್ಣ ಶ್ಯಾಮಣ್ಣ, ದೊಡ್ಡ ಶ್ಯಾಮಣ್ಣ….
ಹೆಣ್ಣು ಮಕ್ಕಳಾದರೆ ಶ್ಯಾಮವ್ವ, ಶ್ಯಾಮಲಾ, ಶ್ಯಾಮಲಾಬಾಯಿ, ಸಣ್ಣ ಶ್ಯಾಮವ್ವ, ದೊಡ್ಡ ಶ್ಯಾಮವ್ವ ಎಂದು ಹೆಸರಿಡುತ್ತಾರೆ.

ಮುಸ್ಲಿಂ ಸಮುದಾಯದವರು ಶ್ಯಾಮೀದ್ ಸಾಬ್, ಶ್ಯಾಮೀದ್ ಅಲಿ, ಶ್ಯಾಮೀದ್, ಶ್ಯಾಮೀದ್ ಬೀ… ಎಂಬ ಹೆಸರನ್ನು ತಮ್ಮ ಮಕ್ಕಳಿಗೆ ಇಡುತ್ತಾರೆ. ಈ ಮೂಲಕ ಎರಡೂ ಧರ್ಮೀಯರು ಶ್ಯಾಮೀದ್ ಅಲಿಯನ್ನು ಆರಾಧಿಸಿ ಪೂಜಿ ಸುತ್ತಾರೆ. ಬೇಡಿದ ವರ ಕರುಣಿಸುತ್ತಾನೆ ಎಂಬ ನಂಬಿಕೆ ದರ್ಗಾ ಭಕ್ತರದು.

ಐತಿಹಾಸಿಕ ದರ್ಗಾದಲ್ಲಿ ಹಿಂದೂ- ಮುಸ್ಲಿಮರ ಏಕತೆ ಸಾರುವ ಸಂಪ್ರದಾಯವನ್ನು ಶತಮಾನಗಳಿಂದ ಆಚರಿಸಿಕೊಂಡು ಬರಲಾಗುತ್ತಿದೆ.

600ಕ್ಕೂ ಹೆಚ್ಚು ವರ್ಷಗಳ ಇತಿಹಾಸ ಹೊಂದಿರುವ ಶ್ಯಾಮೀದ್ ಅಲಿ ದರ್ಗಾಕ್ಕೆ ಹಿಂದೂ-ಮುಸ್ಲಿಂ ಸೇರಿದಂತೆ ಎಲ್ಲಾ ಧರ್ಮದವರು ಭೇಟಿ ನೀಡುತ್ತಾರೆ. ಎಲ್ಲಾ ಸಮುದಾಯವರ ಪಾಲಿಗೆ ಇದೊಂದು ಸಾಮರಸ್ಯದ ನೆಲೆಯಾಗಿದೆ.

ಉರುಸ್ ಆಚರಣೆಗೆ ಸುತ್ತಲಿನ ಜಿಲ್ಲೆ, ನೆರೆಯ ರಾಜ್ಯಗಳಿಂದಲೂ ಭಕ್ತರು ಬರುತ್ತಾರೆ. ಪ್ರತಿ ಗುರುವಾರ ಹಾಗೂ ಅಮವಾಸ್ಯೆಯಂದು ಭಕ್ತರ ದಟ್ಟಣೆ ಹೆಚ್ಚಿರುತ್ತದೆ.

ಮೂರು ದಿನ ನಡೆಯುವ ಉರುಸ್‌ಗೆ ಸಾವಿರಾರು ಭಕ್ತರು ಬಂದು ತಮ್ಮ ಹರಕೆ ತೀರಿಸುತ್ತಾರೆ. ಶ್ಯಾಮೀದ್ ಅಲಿ ಪವಾಡ ಮತ್ತು ಭಕ್ತರ ಕಷ್ಟಗಳನ್ನು ಪರಿಹರಿಸುವ ದೈವ ಎಂಬ ನಂಬಿಕೆಯಿಂದ ಭಕ್ತರು ನಮಿಸುತ್ತಾರೆ ಎಂದು ಭಕ್ತಾದಿಗಳು ತಿಳಿಸಿದ್ದಾರೆ.