Friday, February 27, 2026
Friday, February 27, 2026
Home Blog Page 1605

ಮೇ ಮೊದಲ ವಾರದಲ್ಲಿ ಕೋವಿಡ್ ಅಲೆ ಭೀಕರ- ಡಾ.ಮಂಜುನಾಥ್

0

ಕೊರೊನಾ ಮಹಾಮಾರಿ ಹೋಗಿದೆ ಎಂದು ಜನರೆಲ್ಲಾ ನಿರಾಳರಾಗಿದ್ದಾರೆ. ಎಷ್ಟೋ ಜನ ಮಾಸ್ಕ್ ಹಾಕಿಕೊಳ್ಳದೆ ಓಡಾಡುತ್ತಾರೆ. ಮೇ ಮೊದಲ ವಾರದಲ್ಲೇ​ ಕೋವಿಡ್ ನಾಲ್ಕನೇ ಅಲೆ ಕಾಣಿಸಿಕೊಳ್ಳುವ ಮುನ್ಸೂಚನೆ ಇದೆ ಎಂದು ಡಾ.
ಸಿ.ಎನ್‌.ಮಂಜುನಾಥ್‌ ತಿಳಿಸಿದ್ದಾರೆ.

ರಾಜ್ಯವು ಅಗತ್ಯವಾದ ಜಾಗೃತಿಯನ್ನು ಮೂಡಿಸಬೇಕು ಮಾಸ್ಕ್​ ಧರಿಸುವುದು, ಎಲ್ಲಾ ಸಾರ್ವಜನಿಕ ಪ್ರದೇಶಗಳು, ಸಭೆಗಳಲ್ಲಿ ದೈಹಿಕ ಅಂತರವನ್ನು ಕಾಪಾಡಿಕೊಳ್ಳುವಂತೆ ನೋಡಿಕೊಳ್ಳುವಂತೆ ಎಚ್ಚರಿಕೆ ನೀಡಲಾಗಿದೆ.

ಈ ಬಾರಿ ಮೊದಲ ಅಲೆಗಿಂತ ಹೆಚ್ಚೆಚ್ಚು ಸೋಂಕು ವರದಿಯಾಗಲಿದೆ. ಮೇ ಮೊದಲ ವಾರದ ವೇಳೆಗೆ ನಿತ್ಯ 25 ಸಾವಿರ ಕೇಸ್‌ ವರದಿಯಾಗಲಿದೆ. ಸಾವು ಕೂಡಾ ಮೊದಲು ಅಲೆಗಿಂತ ಕಡಿಮಯಿಲ್ಲದೇ ವರದಿಯಾಗಲಿದೆ. ಹೀಗಾಗಿ ಮುನ್ನೆಚ್ಚರಿಕೆ ಅಗತ್ಯ ಎಂದು ಕೊರೊನಾ ತಾಂತ್ರಿಕ ಸಮಿತಿ ಸದಸ್ಯರಾದ ಡಾ. ಸಿ.ಎನ್‌.ಮಂಜುನಾಥ್‌ ತಿಳಿಸಿದ್ದಾರೆ.

ಕಣಿವೆ ರಾಜ್ಯವನ್ನು ಕರ್ನಾಟಕ ಮಾಡದಿರಿ- ಓಮರ್ ಅಬ್ದುಲ್ಲ

0

ಕಣಿವೆ ರಾಜ್ಯವನ್ನು ಕರ್ನಾಟಕ ಮಾಡುವ ಪ್ರಯತ್ನವನ್ನು ತಡೆಯಬೇಕಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಸಿ.ಎಂ ಹಾಗೂ ನ್ಯಾಷನಲ್‌ ಕಾನ್ಫರೆನ್ಸ್‌ ಪಕ್ಷದ ಉಪಾಧ್ಯಕ್ಷ ಒಮರ್‌ ಅಬ್ದುಲ್ಲಾ ಅವರು ತಿಳಿಸಿದರು.

ಶ್ರೀನಗರದಲ್ಲಿ ಪಕ್ಷದ ಯುವ ಮುಖಂಡರೊಂದಿಗೆ ಸಂವಾದದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ನಮ್ಮ ಜೀವನ ಶೈಲಿಯೇ ನಿಮಗೆ ಸಮಸ್ಯೆಯಾಗಿದೆ ಯಾಕೆ? ಆಜಾನ್‌ಗಾಗಿ ಲೌಡ್‌ ಸ್ವೀಕರ್‌ ಬಳಸಬೇಡಿ ಎಂದು ಹೇಳುತ್ತಿರುವುದೇಕೆ? ನಾವು ದೇವಸ್ಥಾನಗಳಲ್ಲಿ ಧ್ವನಿವರ್ಧಕ ಬಳಸಬೇಡಿ ಎಂದೂ ಹೇಳಿಲ್ಲ. ಹಲಾಲ್‌ ಕಟ್‌ ಮಾಂಸ ಖರೀದಿಸಬೇಡಿ ಎಂದು ಹೇಳುತ್ತಿದ್ದೀರೇಕೆ? ಹಲಾಲ್‌ ಮಾಂಸ ತಿನ್ನುವಂತೆ ನಿಮ್ಮನ್ನು ಒತ್ತಾಯಪಡಿಸಿಲ್ಲ. ಮುಸ್ಲಿಂತೇರರಿಗೆ ಹಲಾಲ್‌ ಕಟ್‌ ಮಾಂಸ ತಿನ್ನುವಂತೆ ಒತ್ತಾಯಪಡಿಸಿದ ಯಾವುದಾದರೂ ಒಬ್ಬ ಮುಸ್ಲಿಮನನ್ನು ತೋರಿಸಿ ಎಂದು ಸವಾಲು ಹಾಕಿದರು.

ದೇಶದಲ್ಲಿ ಪ್ರತಿಯೊಬ್ಬರಿಗೂ ಅವರವರ ಧರ್ಮವನ್ನು ಪಾಲಿಸುವ ಹಕ್ಕನ್ನು ನಮ್ಮ ಸಂವಿಧಾನ ನೀಡಿದೆ. ಸಂವಿಧಾನದಲ್ಲಿ ನಮ್ಮದು ಜಾತ್ಯತೀತ ದೇಶ ಎಂದು ಪ್ರತಿಪಾದಿಸಲಾಗಿದೆ. ಇದರ ಪ್ರಕಾರ ಎಲ್ಲ ಧರ್ಮಗಳು ಒಂದೇ. ಎಲ್ಲ ಧರ್ಮಗಳನ್ನು ಸಮಾನವಾಗಿ ಸ್ವೀಕರಿಸಿರುವ ಜಾತ್ಯತೀತ ಭಾರತವನ್ನು ಜಮ್ಮು -ಕಾಶ್ಮೀರ ಸೇರಿಕೊಂಡಿದೆ. ನಾವು ಒಪ್ಪಿಕೊಂಡ ದೇಶವಾಗಿ ಇಂದು ಭಾರತ ಉಳಿದಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.

ಕರ್ನಾಟಕದ ಶೈಕ್ಷಣಿಕ ಸಂಸ್ಥೆಗಳಲ್ಲಿ ಹಿಜಾಬ್‌ಗೆ ನಿರ್ಬಂಧ ಹೇರಿ ವಿವಾದ ಎಬ್ಬಿಸಲಾಗಿದೆ.
ಧರ್ಮದ ವಿಚಾರದಲ್ಲಿ ಮೂಗು ತೂರಿಸುವ ಕೆಲಸವನ್ನು ಯಾವುದೇ ಸರ್ಕಾರಗಳು ಮಾಡಬಾರದು ಎಂದು ಸಲಹೆ ನೀಡಿದರು.

ಒಂದು ಧರ್ಮವು ಮತ್ತೊಂದು ಧರ್ಮಕ್ಕಿಂತ ಶ್ರೇಷ್ಠವೆಂದು ಪರಿಗಣಿಸುವುದಾಗಿ ನಮಗೆ ಹೇಳಿಲ್ಲ. ಒಂದು ವೇಳೆ ಹಾಗೆ ಹೇಳಿದ್ದರೆ ನಮ್ಮ ನಿರ್ಧಾರವೂ ಬೇರೆಯಾಗಿರುತ್ತಿತ್ತೇನೊ’ ಎಂದು ಅವರು ಹೇಳಿದರು.

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿ ರದ್ದುಪಡಿಸಿರುವ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಗಳನ್ನು ಬೇಸಿಗೆಯ ರಜೆ ನಂತರ ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂಕೋರ್ಟ್‌ ಹೇಳಿರುವುದು ಸ್ವಾಗತಾರ್ಹ.

ಮುಖ್ಯ ನ್ಯಾಯಮೂರ್ತಿಗಳು ತ್ವರಿತಗತಿಯಲ್ಲಿ ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಿದರು.

ಬಿಲಾವಲ್ ಪಾಕ್ ನ ಕಿರಿಯ ವಯಸ್ಸಿನ ವಿದೇಶಾಂಗ ಸಚಿವ

0

ಪಾಕಿಸ್ತಾನದ ಮಾಜಿ ಅಧ್ಯಕ್ಷರು, ಮಾಜಿ ಪ್ರಧಾನಿಗಳ ಕುಟುಂಬಕ್ಕೆ ಸೇರಿದ ಬಿಲಾವಲ್ ಭುಟ್ಟೋ ಜರ್ದಾರಿ ಅವರು ಪಾಕಿಸ್ತಾನದ ನೂತನ ವಿದೇಶಾಂಗ ಸಚಿವರಾಗಿದ್ದಾರೆ.
33 ವರ್ಷದ ಬಿಲಾವಲ್ ಅವರಿಗೆ ಇದು ಮೊದಲ ಆಡಳಿತ ಜವಾಬ್ದಾರಿಯಾಗಿದೆ.

ಪಾಕಿಸ್ತಾನದ ಇತಿಹಾಸದಲ್ಲೇ ಅತ್ಯಂತ ಕಿರಿಯ ವಯಸ್ಸಿನಲ್ಲಿ ವಿದೇಶಾಂಗ ಸಚಿವರಾದ ದಾಖಲೆ ಅವರದ್ದಾಗಿದೆ. ಹಣಕಾಸು ಪರಿಸ್ಥಿತಿ, ಅಂತರರಾಷ್ಟ್ರೀಯ ಸಂಬಂಧ ವಿಚಾರಗಳಲ್ಲಿ ಬಹಳ ಸವಾಲುಗಳನ್ನ ಎದುರಿಸುತ್ತಿರುವ ಪಾಕಿಸ್ತಾನಕ್ಕೆ ಸಣ್ಣ ವಯಸ್ಸಿನ ಬಿಲಾವಲ್ ಭುಟ್ಟೋ ಅವರು ಮಾರ್ಗೋಪಾಯಗಳನ್ನ ಕಂಡುಕೊಳ್ಳಬಲ್ಲರೇ ಎಂಬ ಪ್ರಶ್ನೆ ಕೇಳಿ ಬರುತ್ತಿದೆ.

ಪಾಕಿಸ್ತಾನ ಅಧ್ಯಕ್ಷ ಅರಿಫ್ ಅಲ್ವಿ ಇಂದು ಅಧ್ಯಕ್ಷೀಯ ಭವನದಲ್ಲಿ ನಡೆದ ಸಮಾರಂಭದಲ್ಲಿ ಬಿಲಾವಲ್ ಭುಟ್ಟೋ ಅವರಿಗೆ ಪ್ರಮಾಣ ವಚನ ಬೋಧಿಸಿದರು.

ಈ ಸಂದರ್ಭದಲ್ಲಿ ಪ್ರಧಾನಿ ಶಾಹಬಾಜ್ ಷರೀಫ್, ಮಾಜಿ ಅಧ್ಯಕ್ಷ ಅಸಿಫ್ ಅಲಿ ಜರ್ದಾರಿ ಹಾಗು ಇತರರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಚೀನಾದ ಶಾಂಘೈನಲ್ಲಿ ಕೋವಿಡ್ ಗಂಭೀರ ಪರಿಸ್ಥಿತಿ

0

ಕಳೆದ 24 ಗಂಟೆಗಳಲ್ಲಿ ಚೀನಾದಲ್ಲಿ ಹೊಸದಾಗಿ 1,494 ಕರೋನಾ ಪ್ರಕರಣಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ.

ಕಳೆದ 24 ಗಂಟೆಗಳಲ್ಲಿ ಸುಮಾರು 2,724 ಕೋವಿಡ್ ಸೋಂಕಿತರು ಚೇತರಿಸಿಕೊಂಡಿದ್ದಾರೆ. ಉಳಿದಂತೆ 25,506 ಕರೋನಾ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇತ್ತ ಸೋಂಕಿಗೆ 47 ಮಂದಿ ಸಾವನ್ನಪ್ಪಿದ್ದು, ಈ ಮೂಲಕ ಸಾವಿನ ಸಂಖ್ಯೆ 4,923 ಕ್ಕೆ ಏರಿಕೆಯಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.

ಇದರೊಂದಿಗೆ ಕೋವಿಡ್​ಗೆ 47 ಮಂದಿ ಸಾವನ್ನಪ್ಪಿದ್ದಾರೆ ಎಂದು ರಾಷ್ಟ್ರೀಯ ಆರೋಗ್ಯ ಆಯೋಗ ಮಾಹಿತಿ ನೀಡಿದೆ.

ಶಾಂಘೈನಲ್ಲಿ ಪ್ರಾಂತ್ಯದಲ್ಲಿ 1,292 ಪ್ರಕರಣಗಳು ವರದಿಯಾಗಿದ್ದು, ಉಳಿದಂತೆ 16 ಪ್ರದೇಶಗಳಲ್ಲಿ ಇತರೆ ಕೇಸ್​ಗಳು ವರದಿಯಾಗಿವೆ.
ಜಿಲಿನ್‌ನಲ್ಲಿ 56, ಬೀಜಿಂಗ್‌ನಲ್ಲಿ 48 ಮತ್ತು ಝೆಜಿಯಾಂಗ್‌ನಲ್ಲಿ 46 ಕೇಸ್​ಗಳು ವರದಿಯಾಗಿವೆ ಎಂದು ಆಯೋಗವನ್ನು ಉಲ್ಲೇಖಿಸಿ ಕ್ಸಿನ್‌ಹುವಾ ವರದಿ ಮಾಡಿದೆ.

ಕಳೆದ 24 ಗಂಟೆಗಳಲ್ಲಿ ಸುಮಾರು 2,724 ಕೋವಿಡ್ ಸೋಂಕಿತರು ಚೇತರಿಸಿಕೊಂಡಿದ್ದಾರೆ. ಉಳಿದಂತೆ 25,506 ಕರೋನಾ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇತ್ತ ಸೋಂಕಿಗೆ 47 ಮಂದಿ ಸಾವನ್ನಪ್ಪಿದ್ದು, ಈ ಮೂಲಕ ಸಾವಿನ ಸಂಖ್ಯೆ 4,923 ಕ್ಕೆ ಏರಿಕೆಯಾಗಿದೆ.

ಮೇ 1 ರವರೆಗೆ ಮಳೆ ಸುರಿಯಲಿದೆ- ಹವಾಮಾನ ವರದಿ

0

ಮೇ 1ರವರೆಗೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಳಗಾವಿ, ವಿಜಯಪುರ, ಕೊಪ್ಪಳ, ಹುಬ್ಬಳ್ಳಿ-ಧಾರವಾಡ, ಹಾವೇರಿ, ಗದಗ, ಬಳ್ಳಾರಿ, ಚಿತ್ರದುರ್ಗ, ತುಮಕೂರು, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಉಡುಪಿ, ಕೊಡಗಿನಲ್ಲಿ ಮಳೆಯಾಗಲಿದೆ. ಇಂದಿನಿಂದ ಮೇ 1ರವರೆಗೂ ರಾಜ್ಯದಲ್ಲಿ ಅಲ್ಲಲ್ಲಿ ತುಂತುರು ಮಳೆ, ಇನ್ನು ಕೆಲವೆಡೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಏಪ್ರಿಲ್ 30ರಿಂದ ಉತ್ತರ ಕರ್ನಾಟಕ ಭಾಗಗಳಲ್ಲಿ ಮಳೆ ಕಡಿಮೆಯಾಗಿ ದಕ್ಷಿಣ ಕರ್ನಾಟಕದ ಭಾಗಗಳಲ್ಲಿ ಮಳೆ ಹೆಚ್ಚಾಗಲಿದೆ.

ಇಂದು ಕರ್ನಾಟಕದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಮಡಿಕೇರಿ, ಸೋಮವಾರಪೇಟೆ, ಮೂಡಿಗೆರೆ, ಆಗುಂಬೆ, ಶೃಂಗೇರಿ, ಕೊಪ್ಪ, ಹೊಸನಗರ, ಸಾಗರ, ತೀರ್ಥಹಳ್ಳಿಯ ಸುತ್ತಮುತ್ತ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.

ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಗಡಿಯಲ್ಲೂ ಮಳೆಯಾಗಲಿದೆ.

ಕರ್ನಾಟಕದ ಬೆಳಗಾವಿ, ಕೊಪ್ಪಳ, ವಿಜಯಪುರ, ಹಾವೇರಿ, ಗದಗ, ಧಾರವಾಡ, ಬಳ್ಳಾರಿ, ಚಿತ್ರದುರ್ಗ, ತುಮಕೂರು, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಉಡುಪಿ ಜಿಲ್ಲೆಗಳಲ್ಲಿ ಇಂದು ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮೇ. 1ರವರೆಗೂ ಮಳೆ ಮುಂದುವರೆಯಲಿದೆ. ಹಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲುನೊಂದಿಗೆ ಭಾರೀ ಮಳೆಯಾಗಲಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ತಮಿಳುನಾಡು, ಕರ್ನಾಟಕ ಮತ್ತು ಕೇರಳದಲ್ಲಿ ಮಳೆ ಹೆಚ್ಚಾಗಲಿದೆ. ಇದಲ್ಲದೆ, ಕೇರಳದಲ್ಲಿ ಮಾರ್ಚ್ 31ರ ಅಂತ್ಯದ ವೇಳೆಗೆ ಮಳೆಯ ಪ್ರಮಾಣ ಶೇ. 98ರಷ್ಟು ಹೆಚ್ಚಾಗಿದೆ. ಮಧ್ಯ ಭಾರತ ಮತ್ತು ಉತ್ತರ ಭಾರತದಲ್ಲಿ ಈ ಬಾರಿ ಮುಂಗಾರು ಪೂರ್ವ ಮಳೆಯ ಚಟುವಟಿಕೆಯು ಕಳಪೆ ಮಟ್ಟದಲ್ಲಿದ್ದರೂ, ದಕ್ಷಿಣ ಭಾರತದಲ್ಲಿ ಮಳೆ ಉತ್ತಮವಾಗಿದೆ. ತಮಿಳುನಾಡಿನಲ್ಲಿ ಶೇ. 42, ಕರಾವಳಿ ಕರ್ನಾಟಕದಲ್ಲಿ ಶೇ. 143, ಉತ್ತರ ಒಳ ಕರ್ನಾಟಕದಲ್ಲಿ ಶೇ. 43, ದಕ್ಷಿಣ ಒಳನಾಡಿನಲ್ಲಿ ಶೇ. 84ರಷ್ಟು ಹೆಚ್ಚುವರಿ ಮಳೆಯಾಗಿದೆ.

10 ಲಕ್ಷ ಮನೆ ನಿರ್ಮಾಣಕ್ಕೆ ಸರ್ಕಾರ ಸಜ್ಜಾಗಿದೆ

0

ವಸತಿ ರಹಿತರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದೆ. ಗ್ರಾಮೀಣ ಪ್ರದೇಶದಲ್ಲಿ 5 ಲಕ್ಷ ಸೇರಿ ಒಟ್ಟು 10 ಲಕ್ಷ ಮನೆಗಳ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ.

ವಸತಿ ರಹಿತರಿಗೆ ಮನೆ ನೀಡಲು ರಾಜ್ಯದ ಪ್ರತಿ ಪಂಚಾಯತ್‌ ಸೂಚನೆ ನೀಡಲಾಗಿದ್ದು, ಏಪ್ರಿಲ್ 30ರೊಳಗೆ ಫಲಾನುಭವಿಗಳನ್ನು ಆಯ್ಕೆ ಮಾಡಿ ರಾಜೀವ್‌ ಗಾಂಧಿ ನಿಗಮಕ್ಕೆ ಪಟ್ಟಿ ಸಲ್ಲಿಸುವಂತೆ ತಿಳಿಸಲಾಗಿದೆ ಎಂದು ತಿಳಿದುಬಂದಿದೆ.

ರಾಜ್ಯ ಸರ್ಕಾರವು 2022-23ನೇ ಸಾಲಿನಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರದ ವಿವಿಧ ಆಶ್ರಯ ಯೋಜನೆಗಳಡಿ ಗ್ರಾಮೀಣ ಭಾಗದಲ್ಲಿ ಸುಮಾರು 5 ಲಕ್ಷಗಳ ಮನೆ ನಿರ್ಮಾಣ, ನಗರ ಪ್ರದೇಶದಲ್ಲಿ ಮುಖ್ಯಮಂತ್ರಿಗಳ 1 ಲಕ್ಷ ಮನೆ ನಿರ್ಮಾಣ ಹಾಗೂ ಕೇಂದ್ರ ಸರಕಾರ ದಿಂದ 1.4 ಲಕ್ಷ ಮನೆ, ಸ್ಲಂ ಬೋರ್ಡ್‌ನಡಿ 1 ಲಕ್ಷ ಮನೆಗಳ ಜತೆಗೆ ಕೇಂದ್ರದ ವತಿಯಿಂದ ಕನಿಷ್ಠ ಇನ್ನೂ 3 ಲಕ್ಷ ಮನೆಗಳನ್ನು ನಿರ್ಮಾಣ ಮಾಡಿ ಫ‌ಲಾನುಭವಿಗಳಿಗೆ ಹಂಚಿಕೆ ಮಾಡಲು ನಿರ್ಧರಿಸಿದೆ ಎನ್ನಲಾಗುತ್ತಿದೆ.

ಕೋವಿಡ್ ನಿಯಂತ್ರಣ ಕಾರ್ಯದ ಗುತ್ತಿಗೆ ನೌಕರರಿಗೆ ಸೇವೆ ವಿಸ್ತರಣೆ

0

ಕೋವಿಡ್ ಸೋಂಕು ಹರಡುವಿಕೆ ನಿಯಂತ್ರಣ ಕಾರ್ಯಕ್ಕೆ ಗುತ್ತಿಗೆ ಆಧಾರದಲ್ಲಿ ನೇಮಕಗೊಂಡಿದ್ದ ನೌಕರರಿಗೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಸಿಹಿಸುದ್ದಿ ನೀಡಿದ್ದಾರೆ. 6 ತಿಂಗಳ ಅವಧಿಗೆ ಸೇವೆ ವಿಸ್ತರಣೆ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ಇನ್ನು ರಾಜ್ಯದಲ್ಲಿ ಕೊರೊನಾ ಕುರಿತು ಆತಂಕ ಪಡಬೇಕಾದ ಪರಿಸ್ಥಿತಿ ಇಲ್ಲ.ತಕ್ಷಣ ಕಠಿಣ ಕ್ರಮ ಕೈಗೊಳ್ಳಬಹುದಾದ ಸ್ಥಿತಿಯೂ ವೈಜ್ಞಾನಿಕವಾಗಿ ಕಂಡುಬಂದಿಲ್ಲ. ರಾಜ್ಯ ಸರ್ಕಾರ ಹಾಗೂ ಆರೋಗ್ಯ ಇಲಾಖೆಯು ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ತಿಳಿಸಿದರು.

ಗುತ್ತಿಗೆ ಆಧಾರದ ಮೇಲೆ ಆರೋಗ್ಯ ಇಲಾಖೆ ಸೇವೆಗೆ ತೆಗೆದುಕೊಂಡಿದ್ದ ನೌಕರರ ಅವಧಿಯನ್ನು ಕೊರೊನಾ ಇಲ್ಲದಿದ್ದರೂ 18 ತಿಂಗಳು ಮುಂದುವರೆಸಿದ್ದೆವು. ಇದೀಗ ಆರ್ಥಿಕ ಇಲಾಖೆಗೆ ಪತ್ರ ಬರೆದು ಅವರ ಅವಧಿಯನ್ನು ಇನ್ನೂ 6 ತಿಂಗಳು ಮುಂದುವರೆಸಲು ಕೇಳಿದ್ದೇವೆ. ಆರ್ಥಿಕ ಇಲಾಖೆ ಅನುಮತಿ ನೀಡಿದರೆ ಮುಂದುವರೆಸಲಾಗುವುದು ಎಂದು ಹೇಳಿದರು.

ಉತ್ತರಪ್ರದೇಶದಲ್ಲಿ ಧ್ವನಿವರ್ಧಕ ಮಾರ್ಗಸೂಚಿ ಜಾರಿಗೆ

0

ಉತ್ತರ ಪ್ರದೇಶ ಸರ್ಕಾರದ ಸೂಚನೆ ಮೇರೆಗೆ ಧಾರ್ಮಿಕ ಸ್ಥಳಗಳಿಂದ ಅಕ್ರಮವಾಗಿ ಅಳವಡಿಸಲಾಗಿದ್ದ 11,000 ಧ್ವನಿವರ್ಧಕಗಳನ್ನು ತೆಗೆದು ಹಾಕಲಾಗಿದೆ ಎಂದು ತಿಳಿದುಬಂದಿದೆ.

ಜಿಲ್ಲಾಡಳಿತದಿಂದ ಸೂಕ್ತ ಅನುಮತಿ ಪಡೆಯದೇ ಅಳವಡಿಸಿರುವ ಅಥವಾ ಅನುಮತಿಗಿಂತ ಹೆಚ್ಚಿನ ಪ್ರಮಾಣದ ಶಬ್ದ ಇರುವ ಧ್ವನಿವರ್ಧಕಗಳನ್ನು ನಾವು ತೆರವುಗೊಳಿಸುತ್ತಿದ್ದೇವೆ. ಧ್ವನಿವರ್ಧಕಗಳ ನಿಯಮಗಳಿಗೆ ಸಂಬಂಧಿಸಿದಂತೆ ಹೈಕೋರ್ಟ್‌ನ ಆದೇಶವನ್ನು ಪರಿಗಣನೆಗೆ ತೆಗೆದುಕೊಂಡು ನಾವು ಕಾರ್ಯಾಚರಣೆ ಕೈಗೊಂಡಿದ್ದೇವೆ ಎಂದು ಪ್ರಶಾಂತ್ ಕುಮಾರ್ ತಿಳಿಸಿದರು.

ಪ್ರತಿಯೊಬ್ಬರಿಗೂ ಅವರವರ ಧಾರ್ಮಿಕ ನಂಬಿಕೆಗಳ ಪ್ರಕಾರ ಪೂಜೆ, ಪ್ರಾರ್ಥನೆ ಸಲ್ಲಿಸುವ ಸ್ವಾತಂತ್ರ್ಯವಿದೆ. ಆದರೆ, ಇತರರಿಗೆ ಯಾವುದೇ ತೊಂದರೆಯಾಗದಂತೆ ಧ್ವನಿವರ್ಧಕಗಳ ಶಬ್ದವು ಆವರಣದಿಂದ ಹೊರಗೆ ಹೋಗಬಾರದು ಎಂದು ಸಿಎಂ ಯೋಗಿ ಹೇಳಿದ್ದರು.

ಇದರೊಂದಿಗೆ 35,000 ಧ್ವನಿವರ್ಧಕಗಳ ಶಬ್ದವನ್ನು ಕಡಿಮೆ ಮಾಡಲಾಗಿದೆ.
ಧಾರ್ಮಿಕ ಸ್ಥಳಗಳಲ್ಲಿ ಅಕ್ರಮವಾಗಿ ಅಳವಡಿಸಲಾಗಿರುವ ಧ್ವನಿ ವರ್ಧಕಗಳನ್ನು ತೆಗೆದುಹಾಕಲು ಮತ್ತು ಕಾನೂನು ಬದ್ಧವಾಗಿ ಧ್ವನಿ ವರ್ಧಕಗಳ ಶಬ್ದವನ್ನು ಕಡಿಮೆ ಮಾಡಲು ರಾಜ್ಯಾದ್ಯಂತ ಅಭಿಯಾನ ನಡೆಸಲಾಗುತ್ತಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಪ್ರಶಾಂತ್ ಕುಮಾರ್ ತಿಳಿಸಿದ್ದಾರೆ.

ಅದರಂತೆ ಇಲ್ಲಿಯವರೆಗೆ 10,923 ಧ್ವನಿವರ್ಧಕಗಳನ್ನು ತೆಗೆದು ಹಾಕಲಾಗಿದೆ. 35,221 ಧ್ವನಿವರ್ಧಕಗಳ ಧ್ವನಿಯನ್ನು ಮಿತಿಗೊಳಿಸಲಾಗಿದೆ.
ನಾವು ತೆರವು ಮಾಡಿರುವ, ಮಾಡುತ್ತಿರುವ ಧ್ವನಿವರ್ಧಕಗಳು ಅನಧಿಕೃತವಾಗಿವೆ.

ಕಳೆದ ವಾರ ಹಿರಿಯ ಅಧಿಕಾರಿಗಳೊಂದಿಗೆ ಕಾನೂನು ಸುವ್ಯವಸ್ಥೆ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ನೀಡಿದ ಮಾರ್ಗಸೂಚಿಗಳ ಆಧಾರದ ಮೇಲೆ ಈ ಕ್ರಮ ಕೈಗೊಳ್ಳುತ್ತಿರುವುದು ಗಮನಾರ್ಹ ವಿಷಯವಾಗಿದೆ.

ಸಾಮಾಜಿಕ ಭದ್ರತೆ ಪ್ರಯೋಜನಕ್ಕೆಇ- ಶ್ರಮ್ ಕಾರ್ಡ್ ಅವಶ್ಯ-ಸೆಲ್ವಮಣಿ

0

ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ ಯೋಜನೆಗಳ ಪ್ರಯೋಜನಗಳನ್ನು ಪಡೆಯಲು ಅನುಕೂಲ ಮಾಡಿಕೊಡುವ ಇ-ಶ್ರಮ್ ತಂತ್ರಾಂಶದಲ್ಲಿ ಶಿವಮೊಗ್ಗ ಜಿಲ್ಲೆಯ ಎಲ್ಲ ಅರ್ಹ ಅಸಂಘಟಿತ ಕಾರ್ಮಿಕರು ನೋಂದಣಿ ಮಾಡಿಕೊಂಡು ಕಾರ್ಡ್ ಪಡೆಯುವಂತೆ ಜಿಲ್ಲಾಧಿಕಾರಿ ಡಾ.ಆರ್ ಸೆಲ್ವಮಣಿ ಅವರು ತಿಳಿಸಿದ್ದಾರೆ.

ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರನ್ನು ನೋಂದಣಿ ಮಾಡಿಸಿ ಕಾರ್ಡ್ ವಿತರಣೆ ಮಾಡಲು ಅಗತ್ಯವಾದ ಎಲ್ಲ ಕ್ರಮ ವಹಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಎನ್ ಡಿಯುಡಬ್ಯು:
ಭಾರತದಲ್ಲಿ 43.7 ಕೋಟಿ ಕಾರ್ಮಿಕರು ಅಸಂಘಟಿತ ವಲಯದಲ್ಲಿ ಕೆಲಸ ಮಾಡುತ್ತಿದ್ದಾರೆ. ಕಾರ್ಮಿಕ ಹಾಗೂ ಉದ್ಯೋಗ ಸಚಿವಾಲಯವು ಅಸಂಘಟಿತ ಕಾರ್ಮಿಕರ ಡೇಟಾಬೇಸ್‍ನ್ನು ರಚಿಸಿದೆ. ಅಸಂಘಟಿತ ಕಾರ್ಮಿಕರ ನೋಂದಣಿಗೆ https://eshram.gov.in/ ವೆಬ್‍ಸೈಟ್ ಬಿಡುಗಡೆ ಮಾಡಿದೆ. ಈ ಇ-ಶ್ರಮ್ ತಂತ್ರಾಂಶದಲ್ಲಿ ನೋಂದಾಯಿಸಿಕೊಂಡರೆ ಕಾರ್ಮಿಕರು ಒಂದು ವರ್ಷಕ್ಕೆ ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆ(ಪಿಎಂ-ಎಸ್‍ಬಿವೈ)ಯಡಿ ಆಕಸ್ಮಿಕವಾಗಿ ಸಾವು ಮತ್ತು ಪೂರ್ಣ ಅಂಗವೈಕಲ್ಯಕ್ಕೆ ರೂ. 2 ಲಕ್ಷ ಮತ್ತು ಭಾಗಶಃ ಅಂಗವೈಕಲ್ಯಕ್ಕೆ ರೂ.1 ಲಕ್ಷಗಳವರೆಗೆ ಪರಿಹಾರ ಪಡೆಯಬಹುದು.

ಈ ಡೇಟಾಬೇಸ್‍ನ ಆಧಾರದ ಮೇಲೆ ಸಾಮಾಜಿಕ ಭದ್ರತಾ ಯೋಜನೆಗಳನ್ನು ಸಚಿವಾಲಯಗಳು ಅಥವಾ ಸರ್ಕಾರಗಳು ಅನುಷ್ಠಾನಗೊಳಿಸುತ್ತಿವೆ. ಈ ಡೇಟಾಬೇಸ್ ಅಸಂಘಟಿತ ಕಾರ್ಮಿಕರಿಗೆ ನೀತಿ ಮತ್ತು ಕಾರ್ಯಕ್ರಮಗಳನ್ನು ರೂಪಿಸುವಲ್ಲಿ ಸರ್ಕಾರಕ್ಕೆ ಸಹಾಯ ಮಾಡುತ್ತದೆ.

ಕಾರ್ಮಿಕ ವಲಯ: ಅಸಂಘಟಿತ ಕಾರ್ಮಿಕ ವಲಯದಲ್ಲಿ ಮಹಾತ್ಮಾಗಾಂಧಿ ನರೇಗಾ, ಅಂಗನವಾಡಿ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರು, ಕೃಷಿ ಕಾರ್ಮಿಕರು, ಮೀನುಗಾರರು, ಸಣ್ಣ ಹಾಗೂ ಅತಿ ಸಣ್ಣ ರೈತರು, ಪಶುಸಂಗೋಪನಗಾರರು, ನೇಕಾರರು, ಬಡಗಿ ಕೆಲಸಗಾರರು, ಕ್ಷೌರಿಕರು, ಮನೆಕೆಲಸಗಾರರು, ಹೋಟೆಲ್ ಕಾರ್ಮಿಕರು, ವಲಸೆ ಕಾರ್ಮಿಕರು, ಮೆಕ್ಯಾನಿಕ್ ಕಾರ್ಮಿಕರು, ಆನ್‍ಲೈನ್ ಸೇವಾ ಕಾರ್ಮಿಕರು, ಹೋಟೆಲ್ ಕಾರ್ಮಿಕರು, ಚರ್ಮಗಾರರು, ಸಾರಿಗೆ ಕಾರ್ಮಿಕರು ಆಶಾ ಕಾರ್ಯಕರ್ತೆಯರು, ಮನೆಗೆಲಸ ಕಾರ್ಮಿಕರು, ಚಾಲಕರು, ಟೈಲರ್‍ಗಳು, ಬೀದಿಬದಿ ವ್ಯಾಪಾರಿಗಳು ಸೇರಿದಂತೆ ಕೇಂದ್ರ ಸರ್ಕಾರ ಗುರುತಿಸಿರುವ ಸುಮಾರು 379 ವರ್ಗಗಳ ಕಾರ್ಮಿಕರು ಒಳಗೊಳ್ಳುತ್ತಾರೆ.

ಇ-ಶ್ರಮ್ ತಂತ್ರಾಂಶದಲ್ಲಿ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರನ್ನು ಸಾಮಾನ್ಯ ಸೇವಾ ಕೇಂದ್ರ(ಸಿಎಸ್‍ಸಿ) ಹಾಗೂ ಗ್ರಾ.ಪಂ ಮಟ್ಟದಲ್ಲಿ ಹೆಚ್ಚಿನ ಪ್ರಚಾರ ಮಾಡುವ ಮೂಲಕ ಉಚಿತವಾಗಿ ನೋಂದಣಿ ಮಾಡಿಸಿ ಸ್ಥಳದಲ್ಲಿಯೇ ಗುರುತಿನ ಚೀಟಿಯನ್ನು ನೀಡುವಂತೆ ಇಲಾಖೆಯ ಅಧಿಕಾರಿಗಳಿಗೆ ಹಾಗೂ ಅಸಂಘಟಿತ ವಲಯದ ಸಂಘದ ಅಧ್ಯಕ್ಷರು ಕಾರ್ಯದರ್ಶಿಗಳಿಗೆ ತಿಳಿಸಿದ್ದಾರೆ.

ಇ-ಶ್ರಮ್ ನೋಂದಣಿ ಅರ್ಹತೆ : 16 ರಿಂದ 59 ವರ್ಷಗಳಾಗಿರಬೇಕು. ಆದಾಯ ತೆರಿಗೆ ಪಾವತಿದಾರರಾಗಿರಬಾರದು. ಇ.ಎಸ್.ಐ ಮತ್ತು ಪಿ.ಎಫ್ ಸದಸ್ಯರಾಗಿರಬಾರದು. ಅಸಂಘಟಿತ ಕಾರ್ಮಿಕರ ವರ್ಗಗಳಲ್ಲಿ ಕೆಲಸ ಮಾಡುತ್ತಿರಬೇಕು.

ಅವಶ್ಯಕ ದಾಖಲೆಗಳು : ಆಧಾರ್ ಕಾರ್ಡ್, ಆಧಾರ್ ಸಂಖ್ಯೆಗೆ ಜೋಡಣೆಯಾದ ಮೊಬೈಲ್ ಸಂಖ್ಯೆ ಹಾಗೂ ಬ್ಯಾಂಕ್ ಖಾತೆ ವಿವರಗಳನ್ನು ನೀಡಬೇಕು.

ನೋಂದಣಿ ಗುರಿ : ರಾಜ್ಯದಲ್ಲಿ 1,89,18,000 ಇ-ಶ್ರಮ್ ನೋಂದಣಿ ಗುರಿ ಹೊಂದಲಾಗಿದ್ದು ಈವರೆಗೆ 61,63,431 ಸಾಧನೆ ಮಾಡಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಈವರೆಗೆ 2,15,605 ನೋಂದಣಿ ಆಗಿದ್ದು, ಸ್ವತಃ ಕಾರ್ಮಿಕರು, ಜೊತೆಗೆ ಕಾರ್ಮಿಕರಿಗೆ ಸಂಬಂಧಿಸಿದ ಇಲಾಖೆಗಳು ಮತ್ತು ಕಾರ್ಮಿಕ ಸಂಘಟನೆಗಳು ನೋಂದಣಿ ಮಾಡಿಸಬಹುದು.

ಇ-ಶ್ರಮ್ ಅರಿವು ಮತು ಪ್ರಚಾರ : ಇ-ಶ್ರಮ್ ಯೋಜನೆಯಡಿ ಅಸಂಘಟಿತ ಕಾರ್ಮಿಕರ ನೋಂದಣಿಯ ಕುರಿತು ಅರಿವು ಮೂಡಿಸಲು ಆಟೋ ಪ್ರಚಾರ, ಪತ್ರಿಕಾ ಪ್ರಕಟಣೆ, ಗ್ರಾ.ಪಂ, ಸಿಎಸ್‍ಸಿ ಮತ್ತು ನಗರಗಳಲ್ಲಿ ನೋಂದಣಿ ಕುರಿತು ಕ್ಯಾಂಪ್‍ಗಳನ್ನು ಮಾಡಿ ಎಲ್ಲ ಅಸಂಘಟಿತ ಕಾರ್ಮಿಕರಿಗೆ ಇ-ಶ್ರಮ್ ಕಾರ್ಡ್ ವಿತರಣೆ ಮಾಡುವಂತೆ ತಿಳಿಸಿದ್ದಾರೆ.

ಮೊದಲು ಬಿಜೆಪಿ ಆಡಳಿತವಿರುವ ರಾಜ್ಯಗಳು ಇಂಧನ ದರ ಇಳಿಸಲಿ- ಡಿಕೆಶಿ

0

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಇಂಧನ ದರದ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಬೇಕು. ನಂತರ ವಿರೋಧ ಪಕ್ಷಗಳು ಆಡಳಿತದಲ್ಲಿರುವ ರಾಜ್ಯಗಳಿಗೆ ಸುಂಕ ಕಡಿತಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಸಲಹೆ ನೀಡಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ಮೊದಲು ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಸುಂಕ ಕಡಿತಗೊಳಿಸಿ ಮಾದರಿಯಾಗಲಿ ಎಂದು ಒತ್ತಾಯಿಸಿದರು.

ಪ್ರತಿ ಪೆಟ್ರೋಲ್‌ ಬಂಕ್‌ಗಳಲ್ಲೂ ಮೋದಿ ಅವರು ಸಿಲಿಂಡರ್‌ ನೀಡುವ ಫೋಟೋ ಹಾಕಲಾಗಿದೆ. ಆದರೆ ಅನಿಲ ಬೆಲೆ ಗಗನಕ್ಕೇರಿ ಜನ ಸಾಮಾನ್ಯರು ಸಂಕಷ್ಟ ಅನುಭವಿಸುವಂತಾಗಿದೆ. ಈಗ ಸಿಲಿಂಡರ್‌ಗಳ ಬೆಲೆ ಎಷ್ಟಿದೆ, ಸಿಲಿಂಡರ್‌ಗೆ ನೀಡುತ್ತಿದ್ದ ಸಬ್ಸಿಡಿ ಏನಾಯಿತು ಎಂಬುದನ್ನು ಜನತೆಗೆ ತಿಳಿಸಬೇಕು ಎಂದು ತಿಳಿಸಿದರು.

ಮೋದಿಯವರು ವಿರೋಧ ಪಕ್ಷಗಳು ಆಡಳಿತದಲ್ಲಿರುವ ರಾಜ್ಯಗಳಿಗೆ ಇಂಧನ ದರದ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸುವಂತೆ ಸಲಹೆ ನೀಡಿದ್ದಾರೆ. ನಾವು ಒಕ್ಕೂಟ ವ್ಯವಸ್ಥೆಯಲ್ಲಿದ್ದು, ಪ್ರಧಾನಿಗಳು ರಾಜ್ಯಗಳ ಬದಲು ದೇಶದ ವಿಚಾರವಾಗಿ ಮಾತನಾಡಬೇಕು ಎಂದರು.

ಫೋಟೋ ಹಾಕಿಕೊಳ್ಳುವುದಾದರೆ ಅದರ ಪಕ್ಕದಲ್ಲೇ ಅನಿಲ ಸಿಲಿಂಡರ್‌ ಬೆಲೆಯನ್ನೂ ಹಾಕಬೇಕು ಅಲ್ಲವೇ ಎಂದು ಪ್ರಶ್ನಿಸಿದರು.