Friday, February 27, 2026
Friday, February 27, 2026
Home Blog Page 1609

ಅಂಧಶಿಲ್ಪಿಗಳಿಂದ ಚಂದದ ರಥ

0

ಎರಡೂ ಕಣ್ಣು ಕಾಣದೆ ಅಂಧರಾಗಿರುವ ಶ್ರೀ ಮಹೇಶ ಮತ್ತು ಶ್ರೀ ಸುರೇಶ ಬಡಿಗೇರ ಇವರು ಅತ್ಯುನ್ನತ ರಾಜ್ಯ ಪ್ರಶಸ್ತಿ ವಿಜೇತರಾದ ಶ್ರೀ ಮಲ್ಲಪ್ಪ ಮಳೆಯಪ್ಪ ಬಡಿಗೇರ‌ರವರ ಸುಪುತ್ರರು.

ತಂದೆಯ ಗರಡಿಯಲ್ಲಿ ಶ್ರೀಶೈಲ, ಯಡಿಯೂರು, ಬೆಲೂರು ಹೀಗೆ 35 ಕ್ಕೂ ಹೆಚ್ಚು ಸುಪ್ರಸಿದ್ಧ ಕ್ಷೇತ್ರಗಳಲ್ಲಿ ರಥ ತಯಾರಿಸುವಲ್ಲಿ ಅನುಭವ ಪಡೆದ ಈ ಇಬ್ಬರು ಪ್ರಥಮವಾಗಿ ಕುಷ್ಟಗಿ ತಾಲ್ಲೂಕಿನ ಪಟ್ಟಲಚಿಂತಿಯಲ್ಲಿ ಸ್ವತಃ ಇವರೇ ತಯಾರಿಸಿದ ರಥವು ಇದೇ ತಿಂಗಳು 16ರಂದು ಲೋಕಾರ್ಪಣೆಯಾಗುತ್ತಿದೆ.

ಸಂಪೂರ್ಣವಾಗಿ ಎರಡೂ ಕಣ್ಣು ಕಾಣದಿರುವ ಇವರು ಯಾವುದೇ ತಂತ್ರೋಪಕರಣಗಳಿಲ್ಲದೆ ಬೆರಳುಗಳ ಸ್ಪರ್ಶದಿಂದಲೇ ಅದ್ಭುತ ಮೂರ್ತಿಗಳನ್ನು ನಿರ್ಮಿಸಿದ್ದಾರೆ.

ಇಂದು ಅವರು ಮಾಡಿರುವ ರಥವನ್ನು ಪ್ರತ್ಯಕ್ಷ ಕಂಡು ಒಂದು ಕ್ಷಣ ದಿಗ್ಭ್ರಮೆಗೊಂಡೆ. ಆರೋಗ್ಯವಂತರಾಗಿರುವ ಕೆಲ ಯುವಜನರು ಕೆಲಸವಿಲ್ಲವೆಂದು ಸೋಂಭೇರಿಗಳಾಗಿ ತಿರುಗುವ ಜನರ ಮಧ್ಯೆ ಇಂತಹ ಅಪರೂಪದ ಮಾಣಿಕ್ಯ ಇರುವುದು ಬಹಳ ವಿರಳ.‌ ಕಣ್ಣು ಕಾಣದ ಇವರು ತಂದೆ ಕಲಿಸಿಕೊಟ್ಟ ವಿದ್ಯೆಯನ್ನು ಛಲ ಬಿಡದೆ ಸದುಪಯೋಗ ಮಾಡಿಕೊಂಡು ದೊಡ್ಡ ಸಂಸಾರದ ಬಂಡಿಯನ್ನು ಸಾಗಿಸುತ್ತಿರುವ ಇವರಿಗೆ ಎಷ್ಟು ಸೆಲ್ಯೂಟ್ ಹೊಡೆದರೂ ಕಡಿಮೆಯೆ.

ಇವರೇ ನಿಜವಾದ ವಿಶ್ವಕರ್ಮರು. ದಯಮಾಡಿ ಇವರ ಕೌಶಲಕ್ಕೆ ನೀವು ಗೌರವ ಕೊಡುವುದಾರೆ ನಿಮ್ಮ ಸುತ್ತ-ಮುತ್ತಲಿನ ಗ್ರಾಮಗಳಲ್ಲಿ ರಥ ಮಾಡಿಸುವುದಿದ್ದರೆ ಇವರಿಗೆ ಅವಕಾಶ ಕೊಡಿಸಿ.

ಸುರೇಶ ಬಡಿಗೇರ ಮೊ.ನಂ (81479 01809)
ಮಹೇಶ ಬಡಿಗೇರ (96113 74828

ಕೃಪೆ :
ರಮೇಶ ಎಚ್. ಬಡಿಗೇರ

ವಿದ್ಯಾರ್ಥಿಗಳ ಸಮಸ್ಯೆಗೆ ಸ್ಪಂದಿಸದ ಚೀನಾಕ್ಕೆ ಭಾರತ ದಿಟ್ಟಕ್ರಮ

0

ಚೀನಾದ ಪ್ರಜೆಗಳಿಗೆ ನೀಡಲಾಗಿದ್ದ ಪ್ರವಾಸಿ ವೀಸಾವನ್ನು ಭಾರತ ಅಮಾನತುಗೊಳಿಸಿದೆ ಎಂದು ಜಾಗತಿಕ ವಿಮಾನಯಾನ ಸಂಸ್ಥೆಯ ಇಂಟರ್‌ನ್ಯಾಶನಲ್ ಏರ್ ಟ್ರಾನ್ಸ್‌ಪೋರ್ಟ್ ಅಸೋಸಿಯೇಷನ್ ತಿಳಿಸಿದೆ.

ಚೀನಾದ ವಿಶ್ವವಿದ್ಯಾನಿಲಯಗಳಲ್ಲಿ ದಾಖಲಾದ ಸುಮಾರು 22,000 ಭಾರತೀಯ ವಿದ್ಯಾರ್ಥಿಗಳು ಭೌತಿಕ ತರಗತಿಗಳಿಗೆ ಹಿಂತಿರುಗಲು ಸಾಧ್ಯವಾಗದ ಬಗ್ಗೆ ಭಾರತದ ಮನವಿಗಳಿಗೆ ಬೀಜಿಂಗ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ನೆರೆಯ ದೇಶವು ಇಲ್ಲಿಯವರೆಗೆ ಅವರನ್ನು ಪ್ರವೇಶಿಸಲು ನಿರಾಕರಿಸಿದೆ.

2020 ರ ಆರಂಭದಲ್ಲಿ ಕೊರೊನಾ ಸಾಂಕ್ರಾಮಿಕ ರೋಗವು ಪ್ರಾರಂಭವಾದಾಗ ಈ ವಿದ್ಯಾರ್ಥಿಗಳು ಚೀನಾದಲ್ಲಿ ತಮ್ಮ ಅಧ್ಯಯನ ತೊರೆದು ಭಾರತಕ್ಕೆ ಬಂದಿದ್ದರು.

ಭಾರತ ನೀಡಿದ ನಿವಾಸ ಪರವಾನಿಗೆ ಹೊಂದಿರುವ ಪ್ರಯಾಣಿಕರು, ಭಾರತದಿಂದ ನೀಡಿದ ವೀಸಾ ಅಥವಾ ಇ-ವೀಸಾ ಹೊಂದಿರುವ ಪ್ರಯಾಣಿಕರು, ಭಾರತದ ಸಾಗರೋತ್ತರ ನಾಗರಿಕ (OCI) ಕಾರ್ಡ್ ಅಥವಾ ಬುಕ್ಲೆಟ್ ಹೊಂದಿರುವ ಪ್ರಯಾಣಿಕರು, ಭಾರತೀಯ ಮೂಲದ ವ್ಯಕ್ತಿಗಳು (PIO) ಕಾರ್ಡ್ ಹೊಂದಿರುವ ಪ್ರಯಾಣಿಕರು, ರಾಜತಾಂತ್ರಿಕ ಪಾಸ್‌ಪೋರ್ಟ್‌ ಹೊಂದಿರುವ ಪ್ರಯಾಣಿಕರಿಗೆ ಅನುಮತಿ ಇದೆ.

ಭಾರತಕ್ಕೆ ಸಂಬಂಧಿಸಿದಂತೆ ಹೊರಡಿಸಲಾದ ಸುತ್ತೋಲೆಯಲ್ಲಿ, ಚೀನಾ ಪ್ರಜೆಗಳಿಗೆ ನೀಡಲಾದ ಪ್ರವಾಸಿ ವೀಸಾಗಳು ಇನ್ನು ಮುಂದೆ ಮಾನ್ಯವಾಗಿಲ್ಲ ಎಂದು ಐಎಟಿಎ ಹೇಳಿದೆ.

ಭೂತಾನ್‌, ಮಾಲ್ಡೀವ್ಸ್‌, ನೇಪಾಲ್‌ ಪ್ರಜೆಗಳು ಭಾರತಕ್ಕೆ ಪ್ರವಾಸ ಕೈಗೊಳ್ಳಬಹುದು ಎಂದು ತಿಳಿಸಲಾಗಿದೆ.

ಮಲೇರಿಯ ಜಾಗೃತಿ ವೈದ್ಯಕೀಯ ಕಾಲೇಜುಗಳಿಂದಲೂ ಆಗಬೇಕು- ಸುಧಾಕರ್

0

ಮನುಕುಲಕ್ಕೆ ಶಾಪವಾಗಿರುವ ಮಲೇರಿಯಾ ವಿರುದ್ಧ ಸರ್ಕಾರ ವಿವಿಧ ರೀತಿಯಲ್ಲಿ ಹೋರಾಟ ಮಾಡುತ್ತಿದೆ. ಕೇಂದ್ರ ಸರ್ಕಾರ 2030ಕ್ಕೆ ಮಲೇರಿಯಾ ಮುಕ್ತ ಭಾರತಕ್ಕೆ ಶ್ರಮಿಸುತ್ತಿದೆ. ಆದರೆ ಕರ್ನಾಟಕದಲ್ಲಿ 2027ರ ಹೊತ್ತಿಗೆ ಮಲೇರಿಯಾ ನಿರ್ಮೂಲನೆ ಆಗಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಕರೆ ಕೊಟ್ಟಿದ್ದಾರೆ.

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಆವರಣದಲ್ಲಿರುವ ಪಿಎಂಎಸ್ ಎಸ್ ವೈ ಆಸ್ಪತ್ರೆ ವಿಶ್ವ ಮಲೇರಿಯಾ ದಿನದ ಪ್ರಯುಕ್ತ ಹಮ್ಮಿಕೊಂಡಿದ್ದ ವಿಶೇಷ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಲೇರಿಯಾ ವಿರುದ್ಧ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯ ಆಗಬೇಕಿದೆ. ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳು ಜೊತೆಯಾಗಿ ಶ್ರಮ ಪಟ್ಟರೆ ಆರೋಗ್ಯಯುಕ್ತ ಕರ್ನಾಟಕದ ಕನಸು ನನಸಾಗಬಹುದು ಎಂದು ಹೇಳಿದರು.

ಏಪ್ರಿಲ್ 25ನ್ನು ವಿಶ್ವ ಮಲೇರಿಯಾ ದಿನವನ್ನಾಗಿ ಆಚರಿಸಲಾಗುತ್ತಿದೆ. ಸಾರ್ವಜನಿಕರಲ್ಲಿ ಮಲೇರಿಯಾ ಬಗ್ಗೆ ಅರಿವು ಮೂಡಿಸುವ ಕಾರ್ಯ ಜಾಥಾಗಳ ಮೂಲಕ ನಡೆಯುತ್ತಿದೆ. ಪ್ರತಿಯೊಂದು ತಾಲೂಕುಗಳಲ್ಲೂ ಮಲೇರಿಯಾ ಬಗ್ಗೆ ಅರಿವು ಮೂಡಿಸುವ ಕಾರ್ಯ ವಿಭಿನ್ನವಾಗಿ ನಡೆಯುತ್ತಿದೆ. ಆರೋಗ್ಯ ಕಾರ್ಯಕರ್ತರು ಮತ್ತು ಆಶಾ ಕಾರ್ಯಕರ್ತರು ಸ್ವಚ್ಛತೆಯ ಮಹತ್ವನ್ನು ಸಾರ್ವಜನಿಕರಿಗೆ ತಿಳಿಸುತ್ತಿದ್ದಾರೆ ಎಂದು ಅಭಿಪ್ರಾಯ ಪಟ್ಟರು.

ವಿಶ್ವ ಮಲೇರಿಯಾ ದಿನವನ್ನು ಆರಂಭದಲ್ಲಿ ಆಫ್ರಿಕಾ ಮಲೇರಿಯಾ ದಿನ ಎಂದು ಆಚರಣೆ ಮಾಡಲಾಗುತ್ತಿತ್ತು. ಬಿಸಿಲಿರುವ ಪ್ರದೇಶಗಳಲ್ಲಿ ಮಲೇರಿಯಾ ಹೆಚ್ಚಾಗಿತ್ತು. ಹೀಗಾಗಿ ಆಫ್ರಿಕಾ ದೇಶಗಳಲ್ಲಿ, ಏಷ್ಯಾಖಂಡದಲ್ಲಿ ಮಲೇರಿಯಾ ಸೋಂಕು ಹೆಚ್ಚಿದೆ. ಅಮೆರಿಕಾದಲ್ಲಿ ಪ್ರವಾಸಿಗರಿಂದಾಗಿ ಅಪರೂಪಕ್ಕೆ ಮಲೇರಿಯಾ ಪ್ರಕರಣಗಳು ಕಾಣಿಸಿಕೊಳ್ಳುತ್ತವೆ. ಐರೋಪ್ಯ ದೇಶಗಳಲ್ಲಿ ಮಲೇರಿಯಾ ಪ್ರಕರಣಗಳು ಅತೀ ಕಡಿಮೆ ಪ್ರಮಾಣದಲ್ಲಿ ದಾಖಲಾಗುತ್ತವೆ. ಏಷ್ಯಾ ಖಂಡದಲ್ಲಿ ಮಲೇರಿಯಾದಿಂದಾಗುವ ಸಾವುಗಳ ಪೈಕಿ ಅತೀ ಹೆಚ್ಚು ಸಾವು ಭಾರತದಲ್ಲೇ ಆಗುತ್ತದೆ. ಇದು ಗಂಭೀರ ವಿಚಾರ ಎಂದು ಹೇಳಿದರು.

ಭಾರತದಲ್ಲಿ 2030ರ ಒಳಗೆ ಮಲೇರಿಯಾ ನಿರ್ಮೂಲನೆ ಮಾಡಲು ಪ್ರಧಾನ ಮಂತ್ರಿ ನರೇಂದ್ರ ಮೋದಿ, ಸಂಕಲ್ಪ ತೊಟ್ಟಿದ್ದಾರೆ. ರಾಷ್ಟ್ರೀಯ ಆರೋಗ್ಯ ಅಭಿಯಾನದ ಮೂಲಕ ಅನೇಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಸರ್ಕಾರ ಮತ್ತು ಸಮಾಜ ಒಟ್ಟಾಗಿ ಪ್ರತಿರೋಧ ಒಡ್ಡಿದರೆ ಮಾತ್ರ ಯಶಸ್ಸು ಸಿಗುತ್ತದೆ. ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕೆಲಸ ಹೆಚ್ಚಾಗಿ ನಡೆಯಬೇಕು. ಎಲ್ಲಾ ಹಳ್ಳಿಗಳಲ್ಳೂ ಆಶಾ ಕಾರ್ಯಕರ್ತರು ಶುಚಿತ್ವ ಮತ್ತು ನೈರ್ಮಲ್ಯದ ಪ್ರಾಮುಖ್ಯತೆಯ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ. ವೈದ್ಯಕೀಯ ಕಾಲೇಜುಗಳು ತಮ್ಮ ವಿದ್ಯಾರ್ಥಿಗಳನ್ನು ಬಳಸಿಕೊಂಡು ಆಯಾ ಜಿಲ್ಲೆಗಳಲ್ಲಿ, ತಾಲೂಕುಗಳಲ್ಲಿ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕು. ಸಾರ್ವಜನಿಕ ಆರೋಗ್ಯ ಕಾಪಾಡುವ ಕೆಲಸ ಕೇವಲ ಆರೋಗ್ಯ ಇಲಾಖೆಯ ಕೆಲಸ ಮಾತ್ರವಲ್ಲ. ವೈದ್ಯಕಿಯ ಶಿಕ್ಷಣ ನೀಡುವ ವೈದ್ಯಕೀಯ ಕಾಲೇಜುಗಳು ಕೂಡ ಮಾಡಬೇಕು ಎಂದು ತಿಳಿಸಿದರು.

ಈಗಿಂದ ರಾಜ್ಯದಲ್ಲಿ ಮಾಸ್ಕ್ ಕಡ್ಡಾಯ, ಸರ್ಕಾರದ ತೀರ್ಮಾನ

0

ಇನ್ಮುಂದೆ ರಾಜ್ಯದಲ್ಲಿ ಮಾಸ್ಕ್‌ ಕಡ್ಡಾಯ ಮಾಡಲಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಈ ಬಗ್ಗೆ ಇಂದು ನಡೆದ ಸಿಎಂ ನೇತೃತ್ವದ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಾಗಿದೆ. ಈ ಬಗ್ಗೆ ಸಭೆ ಬಳಿಕ ಸಚಿವ ಸುಧಾಕರ್‌ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದರು. ಇದೇ ವೇಳೆ ಅವರು ಮಾತನಾಡಿ, ಲಸಿಕೆ ಅಭಿಯಾನಕ್ಕೆ ಒತ್ತು ನೀಡಲಾಗುವುದು, ಇದಲ್ಲದೇ ಸೋಂಕು ಹೆಚ್ಚು ಇರುವ ದೇಶದಿಂದ ಬರುವವರ ಮೇಲೆ ನಿಗ ಇಡಲಾಗುವುದು. ಇನ್ನೂ ಕೊರೊನಾ ಸೋಂಕಿನ ಬಗ್ಗೆ ಶೀಘ್ರದಲ್ಲಿ ಮಾರ್ಗಸೂಚನೆ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.

ಸದ್ಯ ಬೆಂಗಳೂರಿನಲ್ಲಿ ಪಾಸಿಟಿವ್‌ ರೇಟ್‌ ದರ ಹೆಚ್ಚಳವಾಗಿದ್ದು, ಎಲ್ಲ ರೀತಿಯಲ್ಲಿ ಈ ಬಗ್ಗೆ ಗಮನ ಹರಿಸಲಾಗುತ್ತಿದೆ. ಇದಲ್ಲದೇ ಸದ್ಯ ಮಾಸ್ಕ್‌ ಹಾಕದೇ ಇರುವವರಿಗೆ ದಂಡ ಹಾಕುವುದಿಲ್ಲ. ಮುಂಬರುವ ದಿನಗಳಲ್ಲಿ ಈ ಬಗ್ಗೆ ಚಿಂತನೆ ನಡೆಸಲಾಗುವುದು ಎಂದರು.

ಎಲ್ಲರೂ ಸಾಮಜಿಕ ಅಂತರ ಕಾಪಾಡಬೇಕು. ಸೋಂಕು ಹೆಚ್ಚಿರುವ ದೇಶಗಳಿಂದ ಬಂದವರ ಮೇಲೆ ನಿಗಾ ವಹಿಸಬೇಕು ಏರ್‌ಪೋರ್ಟ್‌ನಲ್ಲಿ ಎಚ್ಚರ ವಹಿಸಿ, ನಾಲ್ವನೇ ಸೋಂಕು ಬರುವವರೆಗೆ ಕಾಯಬೇಡಿ. ಲಸಿಕೆ ಹಾಕಿಸಿಕೊಳ್ಳಿ ಕಡ್ಡಾಯವಾಗಿ ಮಾಸ್ಕ್‌ ಧರಿಸಿಕೊಳ್ಳಿ. ಮಾಸ್ಕ್‌ ಬಗ್ಗೆ ಇನ್ನುಳಿದ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡುತ್ತೇವೆ ಎಂದು ಅವರು ತಿಳಿಸಿದರು.

ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಕೋವಿಡ್ ಸಾಂಕ್ರಾಮಿಕಕ್ಕೆ ಸಂಬಂಧಿಸಿದಂತೆ ಪರಿಶೀಲನಾ ಸಭೆ ಜರುಗಿತು. ಆರೋಗ್ಯ ಸಚಿವ ಡಾ: ಕೆ.ಸುಧಾಕರ್, ಕಂದಾಯ ಸಚಿವ ಆರ್.ಅಶೋಕ್, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್.ಪ್ರಸಾದ್, ಅಭಿವೃದ್ಧಿ ಆಯುಕ್ತೆ ಹಾಗೂ ಅಪರ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಕೋವಿಡ್ ಟಾಸ್ಕ್ ಫೋರ್ಸ್ ಸಮಿತಿ ಅಧ್ಯಕ್ಷ ಡಾ: ಎಂ.ಕೆ.ಸುದರ್ಶನ್, ರಾಷ್ಟ್ರೀಯ ಆರೋಗ್ಯ ಮಿಷನ್ ನಿರ್ದೇಶಕಿ ಡಾ: ಅರುಂಧತಿ ಚಂದ್ರಶೇಖರ್ ,ಆರೋಗ್ಯ ಇಲಾಖೆ ಆಯುಕ್ತ ಡಿ.ರಂದೀಪ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ, ಆಡಳಿತಾಧಿಕಾರಿ ರಾಕೇಶ್ ಸಿಂಗ್, ವಿಶೇಷ ಆಯುಕ್ತ (ಆರೋಗ್ಯ) ತ್ರಿಲೋಕಚಂದ್ರ ಮೊದಲಾದವರು ಉಪಸ್ಥಿತರಿದ್ದರು.

60 ಸಹಾಯಕ ನಗರ ಯೋಜಕರ ಹುದ್ದೆಗೆ ಕೆಪಿಎಸ್ ಸಿಅಧಿಸೂಚನೆ

0

ಕರ್ನಾಟಕ ಲೋಕಸೇವಾ ಆಯೋಗವು 2022ನೇ ಸಾಲಿಗೆ ಗ್ರೂಪ್-ಸಿ ವೃಂದದ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.

ಆಯೋಗವು 60 ಸಹಾಯಕ ನಗರ ಯೋಜಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು.
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಏಪ್ರಿಲ್ 30,2022 ರಿಂದ ಮೇ 30,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ನೇಮಕಾತಿ ಬಗೆಗೆ ಸಂಪೂರ್ಣ ಮಾಹಿತಿಯನ್ನು ಪಡೆಯಲು ಮುಂದೆ ಓದಿಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿಯ ಸಹಾಯಕ ನಗರ ಯೋಜಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿಯ ಸಹಾಯಕ ನಗರ ಯೋಜಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮೇ 30,2022ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 45 ವರ್ಷ ವಯೋಮಿತಿಯೊಳಗಿರಬೇಕು.

ಪ್ರವರ್ಗ-2ಎ, 2ಬಿ, 3ಎ, 3ಬಿ ಯ ಗರಿಷ್ಟ 38 ವರ್ಷ ಮತ್ತು ಪ.ಜಾ, ಪ.ಪಂ, ಪ್ರವರ್ಗ-1ರ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿಯ ಸಹಾಯಕ ನಗರ ಯೋಜಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ, ಕನ್ನಡ ಭಾಷಾ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿಯ ಸಹಾಯಕ ನಗರ ಯೋಜಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://kpsc.kar.nic.in/ ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಏಪ್ರಿಲ್ 30,2022 ರಿಂದ ಮೇ 30,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಆಶೀಷ್ ಮಿಶ್ರ ಪೋಲಿಸರಿಗೆ ಶರಣು

0

ಕೇಂದ್ರ ಸಚಿವ ಅಜಯ್​ ಮಿಶ್ರಾ ಅವರ ಪುತ್ರ ಆಶಿಷ್ ಮಿಶ್ರಾ ನಿನ್ನೆ (ಭಾನುವಾರ) ಪೊಲೀಸರಿಗೆ ಶರಣಾಗಿದ್ದಾರೆ.

ಲಖೀಂಪುರ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಆಶಿಷ್​ ಮಿಶ್ರಾ ಅವರ ಜಾಮೀನು ಅರ್ಜಿಯನ್ನು ಕಳೆದ ವಾರ ಸುಪ್ರೀಂ ಕೋರ್ಟ್​ ನಿರಾಕರಿಸಿದ ಹಿನ್ನಲೆಯಲ್ಲಿ ಇಂದು ಪೊಲೀಸರ ಮುಂದೆ ಹಾಜರಾಗಿದ್ದರು.

ಸದ್ಯ ಲಖೀಂಪುರ ಜೈಲಿಗೆ ಅವರನ್ನು ಕಳುಹಿಸಿಕೊಡಲಾಗಿದೆ. ಇಂದೇ (ಸೋಮವಾರ) ಶರಣಾಗತಿಗೆ ಕೊನೇ ದಿನವಾಗಿತ್ತು. ಪ್ರತಿಭಟನೆಯಲ್ಲಿ ತೊಡಗಿದ್ದ ರೈತರ ಮೇಲೆ ಜೀಪು ಹರಿಸಿದ್ದರು.

ತೀವ್ರ ಗಾಯಗೊಂಡ ನಾಲ್ವರು ರೈತರು ಮೃತಪಟ್ಟಿದ್ದರು.

ಹರಿಹರಪುರದಲ್ಲಿ ಮಹಾಕುಂಬಾಭಿಷೇಕ ಸಂಪನ್ನ

0

ಶ್ರೀ ಆದಿಶಂಕರಾಚಾರ್ಯರು ಸ್ಫಾಪಿಸಿದ ಮಲೆನಾಡಿನ ಶಕ್ತಿ ಪೀಠದಲ್ಲಿ ಕಳೆದ 14 ದಿನಗಳಿಂದಲೂ ಸಂಭ್ರಮವೂ ಸಂಭ್ರಮ. ಧಾರ್ಮಿಕ ಕಾರ್ಯಕ್ರದ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ಕೂ ಶ್ರೀ ಮಠ ಸಾಕ್ಷಿ ಆಗಿತ್ತು.

ಇಲ್ಲಿನ ಶ್ರೀ ಶಂಕರಾಚಾರ್ಯ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಸ್ವಾಮಿಗಳ ಮಾರ್ಗದರ್ಶನದಲ್ಲಿ ಧಾರ್ಮಿಕ ಕಾರ್ಯದ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮ ವೈಭವ್ಯದಿಂದ ಸಂಪನ್ನವಾಯಿತು.

ಮಲೆನಾಡಿನ ತುಂಗಾ ನದಿ ತೀರದಲ್ಲಿ ಹಲವು ಧಾರ್ಮಿಕ ಕೇಂದ್ರಗಳಿವೆ, ಇಲ್ಲಿನ ಧಾರ್ಮಿಕ ಕೇಂದ್ರಗಳು ಜಗತ್ ಪ್ರಸಿದ್ದಿ ಪಡೆದು ಸನಾತನ ಧರ್ಮವನ್ನು ಎಲ್ಲೆಡೆ ಪ್ರಸರಿಸುತ್ತಿದೆ.ಇದರ ಸಾಲಿನಲ್ಲೇ ಬರುವ ಹರಿಹರಪುರದ ಶ್ರೀ ಮಠವೂ ಒಂದು. ಕಳೆದ 12 ವರ್ಷಗಳಿಂದ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಹರಿಹರಪುರದ ಶ್ರಿ ಶಾರದಾ ಲಕ್ಷ್ಮಿನರಸಿಂಹ ದೇವಾಲಯದ ಪುನರ್ ನಿರ್ಮಾಣದ ಕಾರ್ಯ ಸಂಪನ್ನಗೊಂಡ ಬಳಿಕ ಮಹಾಕುಂಭಾಭಿಷೇಕಕ್ಕೆ ಸಾಕ್ಷಿಯಾಯಿತು. ನೂರಕ್ಕೂ ಹೆಚ್ಚು ಪುರೋಹಿತರಿಂದ ಹೋಮ ಹವನಗಳು ನಡೆದ್ರೆ ಧಾರ್ಮಿಕ ಕಾರ್ಯಕ್ರಮದಲ್ಲಿ ನಾಡಿನ ಗಣ್ಯಾತಿಗಣ್ಯರು ಆಗಮಿಸಿದರು. ಕಳೆದ 14 ದಿನಗಳಿಂದಲೂ ಮಲೆನಾಡಿನಲ್ಲೂ ಸಂಭ್ರಮದ ವಾತಾವರಣ ನಿರ್ಮಾಣವಾಗಿದೆ.

ಯುರೋಪ್& ಯುಎಸ್ ನಲ್ಲಿ ನಿಗೂಢ ಪಿತ್ತ ಜನಕಾಂಗದ ರೋಗ

0

ಯುರೋಪ್ ಮತ್ತು ಅಮೆರಿಕದಲ್ಲಿ ಮಕ್ಕಳ ಮೇಲೆ ಪರಿಣಾಮ ಬೀರುವ ನಿಗೂಢ ಪಿತ್ತಜನಕಾಂಗದ ಕಾಯಿಲೆಯಿಂದಾಗಿ ಮೊದಲ ಸಾವು ವರದಿಯಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.

ಒಂದು ಡಜನ್ ದೇಶಗಳಿಂದ ಇದುವರೆಗೆ ಕನಿಷ್ಠ 169 ಅಪರಿಚಿತ ಮೂಲದ ತೀವ್ರ ಹೆಪಟೈಟಿಸ್ ಪ್ರಕರಣಗಳ ವರದಿಗಳನ್ನ ಸ್ವೀಕರಿಸಲಾಗಿದೆ ಎಂದು ಡಬ್ಲ್ಯುಎಚ್‌ಒ ಶನಿವಾರ ಮಾಹಿತಿ ತಿಳಿಸಿದೆ.

ಒಂದು ತಿಂಗಳಿನಿಂದ 16 ವರ್ಷ ವಯಸ್ಸಿನ ಮಕ್ಕಳಲ್ಲಿ ಈ ಪ್ರಕರಣಗಳು ವರದಿಯಾಗಿದ್ದು, ಅನಾರೋಗ್ಯಕ್ಕೆ ಒಳಗಾದವರಲ್ಲಿ 17 ಜನರಿಗೆ ಯಕೃತ್ತು ಕಸಿ ಅಗತ್ಯವಿದೆ ಎಂದು ತಿಳಿಸಿದೆ. ಆದಾಗ್ಯೂ, ಡಬ್ಲ್ಯುಎಚ್‌ಒ ಸಾವು ವರದಿಯಾದ ದೇಶದ ಹೆಸರನ್ನ ಬಹಿರಂಗಪಡಿಸಿಲ್ಲ.

ಬ್ರಿಟನ್‌ನಲ್ಲಿ ಮೊದಲ ಪ್ರಕರಣಗಳು ದಾಖಲಾಗಿದೆ. ಅಲ್ಲಿನ 114 ಮಕ್ಕಳು ಅಸ್ವಸ್ಥರಾಗಿದ್ದಾರೆ. ಹೆಪಟೈಟಿಸ್ ಪ್ರಕರಣಗಳಲ್ಲಿ ಹೆಚ್ಚಳ ಕಂಡುಬಂದಿದೆಯೇ ಅಥವಾ ನಿರೀಕ್ಷಿತ ದರದಲ್ಲಿ ಸಂಭವಿಸುವ ಆದರೆ ಪತ್ತೆಯಾಗದ ಹೆಪಟೈಟಿಸ್ ಪ್ರಕರಣಗಳ ಜಾಗೃತಿಯಲ್ಲಿ ಹೆಚ್ಚಳವಾಗಿದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಎಂದು ಡಬ್ಲ್ಯುಎಚ್‌ಒ ಹೇಳಿಕೆಯಲ್ಲಿ ತಿಳಿಸಿದೆ.

ಈ ಪ್ರಕರಣಗಳು ಸಾಮಾನ್ಯವಾಗಿ ಶೀತಕ್ಕೆ ಸಂಬಂಧಿಸಿದ ವೈರಸ್‌ಗೆ ಸಂಬಂಧಿಸಿರಬಹುದು ಎಂದು ತಜ್ಞರು ಹೇಳುತ್ತಾರೆ. ಆದರೆ, ಹೆಚ್ಚಿನ ಸಂಶೋಧನೆ ನಡೆಯುತ್ತಿದೆ. ಅಡೆನೊವೈರಸ್ ಒಂದು ಸಂಭಾವ್ಯ ಊಹೆಯಾಗಿದ್ದರೂ, ರೋಗಕಾರಕ ಏಜೆಂಟ್ಗಾಗಿ ತನಿಖೆಗಳು ನಡೆಯುತ್ತಿವೆ. ಕನಿಷ್ಠ 74 ಪ್ರಕರಣಗಳಲ್ಲಿ ವೈರಸ್ ಪತ್ತೆಯಾಗಿದೆ ಎಂದು ಡಬ್ಲ್ಯುಎಚ್‌ಒ ಹೇಳಿದೆ.

ಕನಿಷ್ಠ 20 ಮಕ್ಕಳಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಬಾಧಿತ ದೇಶಗಳು ಮಕ್ಕಳಲ್ಲಿ ಹೆಪಟೈಟಿಸ್ ಪ್ರಕರಣಗಳ ಮೇಲೆ ಕಣ್ಗಾವಲು ಹೆಚ್ಚಿಸುತ್ತಿವೆ ಎಂದು ಡಬ್ಲ್ಯುಎಚ್‌ಒ ತಿಳಿಸಿದೆ.

ಶಿವಮೊಗ್ಗ ಏರ್ ಪೋರ್ಟಿಗೆ ನನ್ನ ಹೆಸರು ಬೇಡ- ಬಿಎಸ್ ವೈ

0

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( CM Basavaraj Bommai ) ಇತ್ತೀಚಿಗೆ ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡ ಸಂದರ್ಭದಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ವೀಕ್ಷಣೆಯ ಬಳಿಕ, ಈ ನಿಲ್ದಾಮಕ್ಕೆ ಬಿಎಸ್ ಯಡಿಯೂರಪ್ಪ ಅವರ ಹೆಸರನ್ನು ಇಡುತ್ತಿರೋದಾಗಿ ಘೋಷಣೆ ಮಾಡಿದ್ದರು.

ಇದೀಗ ನನ್ನ ಹೆಸರು ಇಡೋದು ಬೇಡ ಎಂಬುದಾಗಿ ಮಾಜಿ ಸಿ.
ಎಂ ಬಿ.ಎಸ್. ಯಡಿಯೂರಪ್ಪ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.

ಈ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು, ಶಿವಮೊಗ್ಗ ಜಿಲ್ಲೆಯ ಬಹುದಿನದ ಕನಸಾದ ವಿಮಾನ ನಿಲ್ದಾಣ ನನಸಾಗುತ್ತಿದೆ. ಸೋಗಾನೆಯಲ್ಲಿ ಹೊಸದಾಗಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣದ ಕಾಮಗಾರಿಯನ್ನು ಇತ್ತೀಚಿಗೆ ತಾವು ವೀಕ್ಷಣೆ ಮಾಡಿದ ಸಂದರ್ಭದಲ್ಲಿ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸಲು ಅಗತ್ಯವಾದ ಅನುದಾನವನ್ನು ತ್ವರಿತವಾಗಿ ಬಿಡುಗಡೆ ಮಾಡುವುದಾಗಿ ತಿಳಿಸಿರುವುದಕ್ಕೆ ತಮಗೆ ಧನ್ಯವಾದ ಎಂದು ತಿಳಿಸಿದ್ದಾರೆ.

ಮುಂದುವರೆದು, ರಾಷ್ಟ್ರದ ಅಭಿವೃದ್ಧಿಗೆ ಸೇವೆ ಸಲ್ಲಿಸಿದ ಅನೇಕ ಮಹನೀಯರು, ದೇಶಭಕ್ತರಿದ್ದಾರೆ. ಅವರು ನೀಡಿರುವ ಕೊಡುಗೆಗೆ ಹೋಲಿಸಿದರೆ ನನ್ನದೊಂದು ಅಳಿಲು ಸೇವೆ ಮಾತ್ರವಾಗಿದೆ. ನನ್ನನ್ನು ಸತತವಾಗಿ ಬೆಂಬಲಿಸಿ ಸಲುಹಿದ ಜಿಲ್ಲೆಯ ಜನತೆಗೆ ಸೇವೆ ಮಾಡಿದ್ದೇನೆಂಬ ಧನ್ಯತಾ ಭಾವ ನನ್ನದು. ಈ ಹಿನ್ನಲೆಯಲ್ಲಿ ನೂತನ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಸೂಕ್ತವಲ್ಲವೆಂದು ಭಾವಿಸುತ್ತೇನೆ ಎಂದು ಬಿ.ಎಸ್. ಯಡಿಯೂರಪ್ಪ ಅವರು ಹೇಳಿದ್ದಾರೆ.

ಈ ಎಲ್ಲಾ ಕಾರಣದಿಂದ ತಮ್ಮ ಈ ನಿರ್ಧಾರವನ್ನು ಪುನರ್ ಪರಿಶೀಲಿಸಿ, ಸೂಕ್ತ ವೇದಿಕೆಯಲ್ಲಿ ಚರ್ಚಿಸಿ, ರಾಷ್ಟ್ರದ, ನಾಡಿನ ಅಭಿವೃದ್ಧಿಗೆ ಹಾಗೂ ಇತಿಹಾಸಕ್ಕೆ ಕೊಡುಗೆ ನೀಡಿದಂತ ಮಹನೀಯರ ಹೆಸರನ್ನು ಈ ಹೊಸ ವಿಮಾನ ನಿಲ್ದಾಣಕ್ಕೆ ನಾಮಕರಣ ಮಾಡಬೇಕೆಂದು ಪತ್ರದಲ್ಲಿ ತಿಳಿಸಿದ್ದಾರೆ.

ಸಾಗರದಲ್ಲಿ ಭಾರತೀಯ ಧರ್ಮ….ಪುಸ್ತಕ ಬಿಡುಗಡೆ

0

ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸಾಗರದ ಪತ್ರಿಕಾ ಭವನದಲ್ಲಿ ಏ.24 ನೇಯ ಭಾನುವಾರ ಸಂಜೆ ಸಾಗರದ ಸಾಹಿತಿಗಳು, ಚಿಂತಕರಾದ ಡಾ. ಸಫ್ರಾರ್ಜ್ ಚಂದ್ರಗುತ್ತಿ ಅವರು ಬರೆದ ಭಾರತೀಯ ಧರ್ಮ, ಅಂತಃಸತ್ವದ ಹುಡುಕಾಟ ಕೃತಿಯ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು.

356 ಪುಟಗಳ ಈ ಕೃತಿಯನ್ನು ಬಿಡುಗಡೆ ಗೊಳಿಸಿ ಹಿರಿಯ ಸಾಹಿತಿಗಳು, ವಿಮರ್ಶಕರು, ಚಿಂತಕರಾದ ಪ್ರೊ. ರಾಜೇಂದ್ರ ಚನ್ನಿ ಮಾತನಾಡಿದರು. ನಿವೃತ್ತ ಪ್ರಿನ್ಸಿಪಾಲ್ ರು ಸಾಹಿತಿಗಳಾದ ಡಾ. ಎಚ್. ಟಿ. ಕೃಷ್ಣಮೂರ್ತಿ ಪ್ರತಿಸ್ಪಂದನೆ ನೀಡಿದರು. ಜಿಲ್ಲಾ ಕಸಾಪ ಅಧ್ಯಕ್ಷರಾದ ಡಿ. ಮಂಜುನಾಥ ಅಧ್ಯಕ್ಷತೆ ವಹಿಸಿದ್ದರು. ಡಾ. ಸಫ್ರಾರ್ಜ್ ಚಂದ್ರಗುತ್ತಿ, ಮಹಾದೇವಿ, ಡಿ. ಗಣೇಶ್ ಉಪಸ್ಥಿತರಿದ್ದರು.