Sunday, May 17, 2026
Sunday, May 17, 2026
Home Blog Page 161

ಅಬಕಾರಿ ದಾಳಿ: 51.75 ಲೀ ಗೋವಾ ಮದ್ಯ ಪತ್ತೆ

0

ಶಿವಮೊಗ್ಗ ತಾಲೂಕು ಗೋವಿಂದಪುರ ಗ್ರಾಮದ ಶಿವಕುಮಾರ್ ಬಿನ್ ವರದರಾಜ್ ಇವರಿಗೆ ಸೇರಿದ ಶೆಡ್ ಮೇಲೆ ಶಿವಮೊಗ್ಗ ಅಬಕಾರಿ ಇಲಾಖೆ ಸಿಬ್ಬಂದಿಗಳು ಡಿ.10 ರಂದು ದಾಳಿ ನಡೆಸಿ, ಅನಧಿಕೃತವಾಗಿ ಮಾರಾಟ ಮಾಡುವ ಸಲುವಾಗಿ ದಾಸ್ತಾನು ಮಾಡಿದ್ದ 51.75 ಲೀ ಗೋವಾ ಮದ್ಯವನ್ನು ವಶಪಡಿಸಿಕೊಂಡು, ಆರೋಪಿಯನ್ನು ದಸ್ತಗಿರಿ ಮಾಡಿ ಪ್ರಕರಣ ದಾಖಲಿಸಿದ್ದಾರೆ.
ಅಬಕಾರಿ ನಿರೀಕ್ಷಕ ಶ್ರೀನಾಥ್ ಆರ್. ರವರ ನೇತೃತ್ವದಲ್ಲಿ ಪುಟ್ಟಪ್ಪ-ಅ.ಉ.ನಿ, ಶಿವಮೂರ್ತಿ ನಾಯ್ಕ್, ಗಣಪತಿ ಮತ್ತು ಅರ್ಜುನ್ ಇವರುಗಳು ಈ ದಾಳಿಯನ್ನು ನಡೆಸಿದ್ದಾರೆ.

Sahyadri Narayana Hospital ವೈದ್ಯರ ಚಿಕಿತ್ಸೆಯಿಂದ ತಾಯಿಗೆ ದೃಷ್ಟಿ, ಅವಧಿಪೂರ್ವ ಮಗುವಿಗೆ ಜೀವದಾನ

0

Sahyadri Narayana Hospital 25 ವರ್ಷದ ಯುವತಿ ಗಂಡನ ಜೊತೆ ಸಂತೋಷವಾಗಿದ್ದಳು. ತಮ್ಮ ಮೊದಲ ಮಗು ಬರಲಿರುವ ಖುಷಿಯಲ್ಲಿದ್ದಾಗ, ಅವರ ಜೀವನದಲ್ಲಿ ದೊಡ್ಡ ಸಂಕಷ್ಟ ಎದುರಾಯಿತು. ಗರ್ಭಿಣಿಯಾಗಿ ಎಲ್ಲವೂ ಸರಿಯಾಗಿದ್ದರೂ, ಅವರ ರಕ್ತದೊತ್ತಡ ಮಾತ್ರ ನಿಯಂತ್ರಣಕ್ಕೆ ಬರುತ್ತಿರಲಿಲ್ಲ. ಏಳನೇ ತಿಂಗಳಿಗೆ ಕಾಲಿಟ್ಟಾಗ, ಅವರಿಗೆ ದಿಢೀರನೇ ಕಣ್ಣು ಕಾಣಿಸದಂತಾಯಿತು. ಪರಿಸ್ಥಿತಿ ತೀವ್ರ ಹದಗೆಡುತ್ತಿದ್ದರಿಂದ, ತಮ್ಮ ಹಳ್ಳಿಯ ಆಸ್ಪತ್ರೆಯಿಂದ ಅನೇಕ ಖಾಸಗಿ ಆಸ್ಪತ್ರೆಗಳಿಗೆ ಹೋಗಿ, ಕೊನೆಗೆ ಸುಧಾರಿತ ಚಿಕಿತ್ಸೆಗಾಗಿ ಅವರನ್ನು ಸಹ್ಯಾದ್ರಿ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಕರೆತರಲಾಯಿತು.

ಆಸ್ಪತ್ರೆಗೆ ಬಂದಾಗ ರೋಗಿಯ ಸ್ಥಿತಿ ಗಂಭೀರವಾಗಿತ್ತು. ತೀವ್ರವಾದ ಅಧಿಕ ರಕ್ತದೊತ್ತಡದಿಂದಾಗಿ ‘ಎಕ್ಲಾಂಪ್ಸಿಯಾ’ (ಭಾರೀ ಮೂರ್ಛೆ ಬರುವ ಸ್ಥಿತಿ) ಅಪಾಯದಲ್ಲಿದ್ದರು. ತಕ್ಷಣವೇ ತುರ್ತು ಚಿಕಿತ್ಸೆ ಆರಂಭಿಸಿದ ತಂಡ, ಹೈ-ರಿಸ್ಕ್ ಗರ್ಭಾವಸ್ಥೆಗಳನ್ನು ನಿಭಾಯಿಸುವುದರಲ್ಲಿ ಹೆಸರುವಾಸಿಯಾದ ಹಿರಿಯ ಸ್ತ್ರೀರೋಗ ತಜ್ಞ ಡಾ. ರಾಘವೇಂದ್ರ ಭಟ್ ಅವರನ್ನು ತುರ್ತಾಗಿ ಕರೆಸಲಾಯಿತು. ತಕ್ಷಣವೇ ಅಗತ್ಯ ಪರೀಕ್ಷೆಗಳನ್ನು ನಡೆಸಲಾಯಿತು.

ಪರೀಕ್ಷೆಗಳಿಂದ ಗೊತ್ತಾದ ವಿಷಯ ಏನು ಅಂದರೆ, ಅವರಿಗೆ ತೀವ್ರವಾದ ‘ಪ್ರೀ-ಎಕ್ಲಾಂಪ್ಸಿಯಾ’ ಇತ್ತು ಮತ್ತು ದೃಷ್ಟಿ ಕಳೆದುಕೊಳ್ಳಲು ಕಾರಣವಾಗಿದ್ದ ‘ರೆಟಿನಾ ಡಿಟ್ಯಾಚ್‌ಮೆಂಟ್’ (ಕಣ್ಣಿನ ಪರದೆಯ ಬೇರ್ಪಡಿಕೆ) ಸಮಸ್ಯೆ ಇತ್ತು. ಕೂಡಲೇ ನಿರ್ಧಾರ ತೆಗೆದುಕೊಂಡ ಡಾ. ಭಟ್ ಅವರ ತಂಡ, ತಾಯಿಯ ಜೀವ ಉಳಿಸಲು ತುರ್ತಾಗಿ ಶಸ್ತ್ರಚಿಕಿತ್ಸೆ (ಸಿಸೇರಿಯನ್) ಮಾಡಿ ಮಗುವನ್ನು ಹೊರತೆಗೆಯಲು ತೀರ್ಮಾನಿಸಿತು. ಅಂದು ರಾತ್ರಿ, ಕೇವಲ 1 ಕೆ.ಜಿ ತೂಕದ ಅವಧಿಪೂರ್ವ (Premature) ಶಿಶುವಿಗೆ ಆ ತಾಯಿ ಜನ್ಮ ನೀಡಿದರು.

ಡಾ. ಭಟ್ ಅವರ ಪ್ರಕಾರ, ತಾಯಿ ಮತ್ತು ಮಗು ಇಬ್ಬರೂ ಐಸಿಯುನಲ್ಲಿ (ICU) ತೀವ್ರ ಆರೋಗ್ಯ ಸವಾಲುಗಳನ್ನು ಎದುರಿಸಿದರು. ತಾಯಿಗೆ ನಂತರ ಮೆದುಳಿನ ತೊಂದರೆಯಾದ ‘ಎನ್ಸೆಫಲೋಪತಿ’ ಕಾಣಿಸಿಕೊಂಡಾಗ, ಸಹ್ಯಾದ್ರಿ ನಾರಾಯಣ ಆಸ್ಪತ್ರೆ ಯ ನರರೋಗ ತಜ್ಞರಾದ ಡಾ. ರೂಪಾ ಅವರು ಅದನ್ನೂ ಯಶಸ್ವಿಯಾಗಿ ಸರಿಪಡಿಸಿದರು. ಐಸಿಯುನಲ್ಲಿ ನಾಲ್ಕು ದಿನ ಇದ್ದ ನಂತರ, ತಾಯಿಯನ್ನು ವಾರ್ಡ್‌ಗೆ ಸ್ಥಳಾಂತರಿಸಲಾಯಿತು. ಮೂರು ದಿನಗಳಲ್ಲಿ ಆಕೆಯ ದೃಷ್ಟಿ ಸುಧಾರಿಸಿ ಅವರು ಮನೆಗೆ ಹೋದರು.

ಅವಧಿ ಪೂರ್ವ ಜನಿಸಿದ ಮಗುವನ್ನು ಶಿಶು ರೋಗ ತಜ್ಞ ಡಾ. ಶಶಿಧರ್ ಹೆಗ್ಡೆ ಅವರ ಮೇಲ್ವಿಚಾರಣೆಯಲ್ಲಿ ಎನ್ಐಸಿಯುನಲ್ಲಿ (NICU) ಇಡಲಾಯಿತು. ಡಾ. ಶಶಿಧರ್ ಹೇಳಿದಂತೆ, ಮಗುವಿನ ಬಹುತೇಕ ಅಂಗಗಳು ಪೂರ್ಣವಾಗಿ ಬೆಳೆದಿಲ್ಲದ ಕಾರಣ, ಅದನ್ನು ಸುಮಾರು 45 ದಿನಗಳ ಕಾಲ ತೀವ್ರ ನಿಗಾದಲ್ಲಿ ಇಡಬೇಕಾಯಿತು. ಹೃದಯ ಬಡಿತ ಕಡಿಮೆ ಇತ್ತು, ಉಸಿರಾಡಲು ಕಷ್ಟವಿತ್ತು. ಹಾಗಾಗಿ, ಮಗುವನ್ನು ನಿರಂತರ ಆಮ್ಲಜನಕ ಬೆಂಬಲದೊಂದಿಗೆ ವೆಂಟಿಲೇಟರ್‌ನಲ್ಲಿ ಇಡಲಾಗಿತ್ತು. ಒಮ್ಮೆ ಹೃದಯ ಬಡಿತ ನಿಂತಾಗ ಸಿಪಿಆರ್ (CPR) ನೀಡಿ ಮತ್ತೆ ಚೇತರಿಸಲಾಯಿತು.

Sahyadri Narayana Hospital ಇದಲ್ಲದೆ, ಮಗುವಿನ ಹೃದಯದಲ್ಲಿ ರಂಧ್ರವಿತ್ತು. ಅದನ್ನು ಔಷಧಿಗಳ ಮೂಲಕವೇ ಸರಿಪಡಿಸಲಾಯಿತು. ರಕ್ತದ ಮಟ್ಟ ಕಡಿಮೆಯಾಗಿದ್ದರಿಂದ ರಕ್ತವನ್ನೂ ನೀಡಲಾಯಿತು. ಅತಿ ಕಡಿಮೆ ತೂಕದ ಮಗುವಾಗಿದ್ದರಿಂದ, ಕೆಲವೊಮ್ಮೆ ಮೆದುಳಿನ ಅಪಕ್ವತೆಯಿಂದ ಉಸಿರಾಟ ನಿಲ್ಲಿಸುವ ತೊಂದರೆಯೂ ಇತ್ತು.

“ನಮ್ಮ ನರ್ಸಿಂಗ್ ಸಿಬ್ಬಂದಿ ದಣಿವರಿಯದೆ ಕೆಲಸ ಮಾಡಿದರು. ತಮ್ಮ ಊಟ-ತಿಂಡಿಯನ್ನೂ ಲೆಕ್ಕಿಸದೆ ಮಗುವನ್ನು ನೋಡಿಕೊಂಡರು. ಮಗುವಿಗೆ ಮೊದಲು ಟ್ಯೂಬ್ ಮೂಲಕ ಆಹಾರ ನೀಡಿ, ನಂತರ ತಾಯಿಯಿಂದ ಹಾಲುಣಿಸಲು ತರಬೇತಿ ನೀಡಲಾಯಿತು. ಆ ಸಿಬ್ಬಂದಿಯ ಕಾಳಜಿಯಿಂದ, ಮಗುವು ಸ್ಥಿರವಾಗಿ, ಆಟವಾಡುತ್ತಾ, ಸುಮಾರು 1.8 ಕೆಜಿ ತೂಕದೊಂದಿಗೆ ಒಂದೂವರೆ ತಿಂಗಳ ನಂತರ ಆಸ್ಪತ್ರೆಯಿಂದ ಮನೆಗೆ ಮಗು ತೆರಳಿದೆ,” ಎಂದು ಡಾ. ಶಶಿಧರ್ ಸಂತೋಷ ಹಂಚಿಕೊಂಡರು.

ಇಂತಹ ಪ್ರಕರಣ ಅಪರೂಪ ಎಂದು ಹೇಳಿದ ಡಾ. ಭಟ್, ತಮ್ಮ ವೃತ್ತಿಯಲ್ಲಿ ಪ್ರೀ-ಎಕ್ಲಾಂಪ್ಸಿಯಾದಿಂದಾಗಿ ಗರ್ಭಿಣಿಯೊಬ್ಬರು ಸಂಪೂರ್ಣ ದೃಷ್ಟಿ ಕಳೆದುಕೊಂಡಿದ್ದನ್ನು ಕಂಡಿದ್ದು ಇದೇ ಮೊದಲು ಎಂದರು.

“ಇಂತಹ ಕಠಿಣ ಸಮಸ್ಯೆಗಳ ಬಗ್ಗೆ ನಾವು ಪುಸ್ತಕಗಳಲ್ಲಿ ಓದುತ್ತೇವೆ, ಆದರೆ ನಿಜವಾಗಿಯೂ ಹೀಗಾಗುವುದು ಬಹಳ ವಿರಳ. ಇದು ಕೈ ಮೀರಿ ಹೋಗುವ ಸನ್ನಿವೇಶವಾಗಿತ್ತು, ಅದನ್ನು ನಾವು ಗೆಲುವಾಗಿ ಪರಿವರ್ತಿಸಿದ್ದೇವೆ,” ಎಂದು ಅವರು ಹೇಳಿದರು.

ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಶ್ರೀ ವರ್ಗೀಸ್ ಪಿ. ಜಾನ್ ಅವರು ವೈದ್ಯರಾದ ಡಾ. ರಾಘವೇಂದ್ರ ಭಟ್, ಡಾ. ಶಶಿಧರ್ ಹೆಗ್ಡೆ, ಡಾ. ರೂಪಾ ಮತ್ತು ಅವರ ಇಡೀ ತಂಡವನ್ನು ಅಭಿನಂದಿಸಿದ್ದಾರೆ. ಸಹ್ಯಾದ್ರಿ ನಾರಾಯಣ ಆಸ್ಪತ್ರೆಯು ಸವಾಲಿನ ಗರ್ಭಾವಸ್ಥೆಗಳನ್ನು ನಿಭಾಯಿಸುವಲ್ಲಿ ಮುಂದಿದೆ ಮತ್ತು ಮಲೆನಾಡು ಹಾಗೂ ಮಧ್ಯ ಕರ್ನಾಟಕದ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡಲು ನಾವು ಬದ್ಧವಾಗಿದ್ದೇವೆ ಎಂದು ಪುನರುಚ್ಚರಿಸಿದರು.

ಪತ್ರಿಕಾಗೋಷ್ಟಿಯಲ್ಲಿ ಸಹ್ಯಾದ್ರಿ ನಾರಾಯಣ ಆಸ್ಪತ್ರೆಯ ಮಾರುಕಟ್ಟೆ ವಿಭಾಗದ ಮುಖ್ಯಸ್ಥ ಶ್ರೀ ಶೈಲೇಶ್‌ ಎಸ್‌ ಎನ್‌, ಹಾಗೂ ಇನ್ನಿತರರು ಇದ್ದರು.

Akashavani Bhadravati ಆಕಾಶವಾಣಿಯಲ್ಲಿ ಹೆಲ್ತ್ ಹಿಂಟ್ಸ್ ಮತ್ತು ಬದುಕು ಜಟಕಾಬಂಡಿ ವಿಶೇಷ ಕಾರ್ಯಕ್ರಮಗಳ ಪ್ರಸಾರ

0

Akashavani Bhadravati ಡಿ 15 ರಿಂದ ಆಕಾಶವಾಣಿ ಭದ್ರಾವತಿ ಕೇಂದ್ರದಿಂದ ಪ್ರತಿದಿನ ಬೆಳಿಗ್ಗೆ 6.45ಕ್ಕೆ ಶಿವಮೊಗ್ಗದ ಸರ್ಜಿ ಆಸ್ಪತ್ರೆಯ ಪ್ರಾಯೋಜಕತ್ವದಲ್ಲಿ ವಿವಿಧ ವಿಷಯ ತಜ್ಞರಿಂದ ಹಲವು ರೋಗಗಳಿಗೆ ಸಂಬಂಧಿಸಿದಂತೆ 5 ನಿಮಿಷದ ಮಾಹಿತಿ “ಹೆಲ್ತ್ ಹಿಂಟ್ಸ್” ಎಂಬ ವಿಶೇಷ ಸರಣಿ ಕಾರ್ಯಕ್ರಮ ಪ್ರಸಾರವಾಗಲಿದೆ.
Akashavani Bhadravati ಡಿ 16 ರಿಂದ ಪ್ರತೀ ಮಂಗಳವಾರ ಬೆಳಿಗ್ಗೆ 7.15ಕ್ಕೆ ಕಷ್ಟಕರ ಬದುಕಿನೊಂದಿಗೆ ಉನ್ನತ ಸ್ಥಾನಕ್ಕೇರಿದ ವಿವಿಧ ಸಾಧಕರನ್ನು ಪರಿಚಯಿಸುವ “ಬದುಕು ಜಟಕಾಬಂಡಿ” ಎಂಬ 15 ನಿಮಿಷದ ವಿಶೇಷ ಕಾರ್ಯಕ್ರಮ ಪ್ರಸಾರವಾಗಲಿದೆ ಎಂದು ಆಕಾಶವಾಣಿ ಕಾರ್ಯಕ್ರಮ ಮುಖ್ಯಸ್ಥ ಎಸ್.ಆರ್. ಭಟ್ ತಿಳಿಸಿದ್ದಾರೆ.

Sahyadri Narayana Multispeciality Hospital ವಿಐಎಸ್‌ಎಲ್‌ವತಿಯಿಂದ ಸಾಮಾಜಿಕ ಕಳಕಳಿಯ ಅಂಗವಾಗಿ ಉಚಿತ ವೈಧ್ಯಕೀಯ ಆರೋಗ್ಯ ಶಿಬಿರ

0

Sahyadri Narayana Multispeciality Hospital ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಾದ ಸಹ್ಯಾದ್ರಿ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ (ಶಿವಮೊಗ್ಗ), ಶಂಕರ ಕಣ್ಣಿನ ಆಸ್ಪತ್ರೆ (ಶಿವಮೊಗ್ಗ) ಮತ್ತು ವಿಐಎಸ್‌ಎಲ್ ಆಸ್ಪತ್ರೆಗಳ ಸಹಯೋಗದೊಂದಿಗೆ ಭದ್ರಾವತಿಯ ಸಿಂಗನಮನೆ ಗ್ರಾಮದಲ್ಲಿ ಸಮಗ್ರ ಉಚಿತ ವೈಧ್ಯಕೀಯ ಆರೋಗ್ಯ ತಪಾಸಣಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿತು.

ಹೃದಯಶಾಸ್ತ್ರ, ಮೂಳೆ ಚಿಕಿತ್ಸೆ, ಸಾಮಾನ್ಯ ತಪಾಸಣೆ, ನೇತ್ರವಿಜ್ಞಾನ, ದಂತವೈದ್ಯಶಾಸ್ತ್ರ ಮತ್ತು ಸ್ತ್ರೀ ರೋಗ ಶಾಸ್ತ್ರದಂತಹ ಕ್ಷೇತ್ರಗಳಲ್ಲಿ ಅನುಭವಿ ತಜ್ಞವೈದ್ಯರು ಭಾಗವಹಿಸುವ ಮೂಲಕ ಆರೋಗ್ಯ ಸಮಾಲೋಚನೆ ಮತ್ತು ರೋಗನಿರ್ಣಯ ಸೇವೆಗಳನ್ನು ನೀಡಲಾಯಿತು. ಈ ಉಪಕ್ರಮದ ಭಾಗವಾಗಿ ರಕ್ತದೊತ್ತಡ (ಬಿಪಿ), ರಕ್ತದಲ್ಲಿನ ಸಕ್ಕರೆ ಪರೀಕ್ಷೆ, ಕಣ್ಣಿನ ಪರೀಕ್ಷೆ, ದಂತ ತಪಾಸಣೆ, ಎಲೆಕ್ಟ್ರೋಕಾರ್ಡಿಯೋಗ್ರಾಮ್(ಇಸಿಜಿ), 2ಡಿ ಎಕೋಕಾರ್ಡಿಯೋಗ್ರಫಿ (2ಡಿ ಎಕೋ) ಮತ್ತು ಸ್ತ್ರೀ ಸಂಬಂಧಿತ ರೋಗಗಳ ತಪಾಸಣೆಗಳನ್ನು ಮಾಡಲಾಯಿತು.

ಶ್ರೀ ಬಿ. ವಿಶ್ವನಾಥ, ಮುಖ್ಯ ಮಹಾಪ್ರಬಂಧಕರು (ಮಾನವಸಂಪನ್ಮೂಲ), ವಿಐಎಸ್‌ಎಲ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಇವರೊಂದಿಗೆ ವಿಐಎಸ್‌ಎಲ್‌ನ ಅಧಿಕಾರಿಗಳಾದ ಡಾ. ಕೆ.ಎಸ್. ಸುಜೀತ್ ಕುಮಾರ್, ಡಾ. ಎಸ್.ಎನ್. ಸುರೇಶ್, ಶ್ರೀ ಎಮ್.ಎಲ್. ಯೋಗೀಶ್, ಸಿಂಗನಮನೆ ಗ್ರಾಮದಿಂದ ಶ್ರೀಮತಿ ಮಂಜುಳ ಅಧ್ಯಕ್ಷರು ಸಿಂಗನಮನೆ ಗ್ರಾಮಪಂಚಾಯ್ತಿ, ಶ್ರೀಮತಿ ಕವಿತ.ಕೆ.ಬಿ, ಸದಸ್ಯರು, ಸಿಂಗನಮನೆ ಗ್ರಾಮಪಂಚಾಯ್ತಿ, ಡಾ. ಪ್ರಭುದೇವ, ಸಿಂಗನಮನೆ ಪ್ರಾಥಮಿಕ ಆರೋಗ್ಯ ಕೇಂದ್ರ, ಸಹ್ಯಾದ್ರಿ ನಾರಾಯಣ ಆಸ್ಪತ್ರೆಯ ಡಾ. ಸುಪ್ರೀತ, ಡಾ. ಅನ್ಶು ಮತ್ತು ಶ್ರೀ ಗಣೇಶ್. ಶಂಕರ ಕಣ್ಣಿನ ಆಸ್ಪತ್ರೆಯ ಶ್ರೀ ಹರ್ಷ ಆರ್. ಗೌಡ ಮತ್ತು ತಂಡದವರು ಉಪಸ್ಥಿತರಿದ್ದರು. 216 ಗ್ರಾಮಸ್ಥರು ಈ ಶಿಬಿರದ ಸದುಪಯೋಗಪಡಿಸಿಕೊಂಡರು.

ವಿಐಎಸ್‌ಎಲ್‌ವತಿಯಿಂದ ಉಚಿತ ಔಷಧಿಗಳನ್ನು ವಿತರಿಸಲಾಯಿತು.

Sahyadri Narayana Multispeciality Hospital ಸೈಲ್-ವಿಐಎಸ್‌ಎಲ್ ನ ‘ಹಸಿರೆಡೆಗೆ-ನಮ್ಮ ನಡೆ’ ಉಪಕ್ರಮದಡಿಯಲ್ಲಿ ನುಗ್ಗೆ ಮತ್ತು ಪಪ್ಪಾಯಿಯ ಉತ್ತಮ ತಳಿಯ ಬೀಜಗಳನ್ನು ಗ್ರಾಮಸ್ಥರಿಗೆ ಉಚಿತವಾಗಿ ವಿತರಿಸಲಾಯಿತು.

ಪ.ಜಾ. ಪತ್ರಿಕೋದ್ಯಮ ವಿದ್ಯಾರ್ಥಿಗಳಿಂದ ಅಪ್ರೆಂಟಿಸ್‌ಶಿಪ್ ತರಬೇತಿಗೆ ಅರ್ಜಿ ಆಹ್ವಾನ

0

Information and Public Relations Department ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2025-26ನೇ ಸಾಲಿನ ಪರಿಶಿಷ್ಟ ಜಾತಿ ವಿಶೇಷ ಘಟಕ ಯೋಜನೆಯಡಿ ಜಿಲ್ಲಾ ಕಚೇರಿಯಲ್ಲಿ ಕ್ಷೇತ್ರ ಪ್ರಚಾರ ಕಾರ್ಯಕ್ರಮ ಹಾಗೂ ಮಾಧ್ಯಮ ಚಟುವಟಿಕೆಗಳ ನಿರ್ವಹಣೆ ಕುರಿತು ತರಬೇತಿ ಪಡೆಯಲಿಚ್ಚಿಸುವ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ತರಬೇತಿ ಪಡೆಯಲಿಚ್ಚಿಸುವ ಅಭ್ಯರ್ಥಿಯು ಪತ್ರಿಕೋದ್ಯಮ ಹಾಗೂ ಮಾಧ್ಯಮ ಕ್ಷೇತ್ರದ ವಿಷಯದಲ್ಲಿ ಪದವಿ/ಸ್ನಾತಕೋತ್ತರ ಪದವಿ ಪಡೆದವರಾಗಿರಬೇಕು. ಕನ್ನಡ, ಇಂಗ್ಲೀಷ್ ಭಾಷೆಯ ಓದು ಮತ್ತು ಬರಹ ಬಲ್ಲವರಾಗಿದ್ದು, ಕಂಪ್ಯೂಟರ್ ಜ್ಞಾನ ಹೊಂದಿದವರಾಗಿರಬೇಕು. ಜನವರಿ-2026 ರಿಂದ ಡಿಸೆಂಬರ್-2026ರವರೆಗಿನ 12 ತಿಂಗಳ ತರಬೇತಿ ಇದಾಗಿದ್ದು, ಪರಿಶಿಷ್ಟ ಜಾತಿಯ ಇಬ್ಬರು ಅಭ್ಯರ್ಥಿಗಳನ್ನು ಮೆರಿಟ್ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 15,000/-ರೂ.ಗಳ ಶಿಷ್ಯವೇತನ ನೀಡಲಾಗುವುದು.
Information and Public Relations Department ಅಭ್ಯರ್ಥಿಗಳು ಶಿವಮೊಗ್ಗ ಜಿಲ್ಲೆಯವರಾಗಿರಬೇಕು. ಶಿವಮೊಗ್ಗ ಜಿಲ್ಲೆಯ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ನೆರೆಯ ಜಿಲ್ಲೆಯ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದು. ಆದರೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯಿಂದ ಯಾವುದೇ ರೀತಿ ವಾಸ್ತವ್ಯ/ವಸತಿ ನೀಡಲು ಅವಕಾಶವಿರುವುದಿಲ್ಲ. ಈ ಹಿಂದೆ ಅರ್ಜಿ ಸಲ್ಲಿಸಿ, ಆಯ್ಕೆಯಾಗಿ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಅವಕಾಶವಿರುವುದಿಲ್ಲ.
ಅಸಕ್ತರು ತಮ್ಮ ಸ್ವವಿವರ ಹಾಗೂ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಯನ್ನು ದಿ:25/12/2025 ರೊಳಗಾಗಿ ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸರ್.ಎಂ.ವಿ.ರಸ್ತೆ, ಶಿವಮೊಗ್ಗ-577201 ವಿಳಾಸಕ್ಕೆ ಸಲ್ಲಿಸಬಹುದಾಗಿದೆ. ಮಾಹಿತಿಗಾಗಿ ಇಲಾಖೆಯ ಮಿಂಚೆAಚೆ: varthabhavansmg1@gmail.com ನ್ನು ಸಂಪರ್ಕಿಸಬಹುದಾಗಿದೆ.

ಡಿ. 11 ರಂದು ಶಿವಮೊಗ್ಗದ ವಿವಿಧೆಡೆ ವಿದ್ಯುತ್ ವ್ಯತ್ಯಯ

0

ಶಿವಮೊಗ್ಗ ನಗರ ಉಪವಿಭಾಗ-1ರ ವ್ಯಾಪ್ತಿಯಲ್ಲಿ 11 ಕೆವಿ ಮಾರ್ಗದಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿದ್ದು, ಡಿ. 11 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ಮೆಹಬೂಬ್ ನಗರ, ವಾದಿ ಎ ಹುದಾ, ಬೈಪಾಸ್ ರಸ್ತೆ, ನಿಸರ್ಗ ಬಡಾವಣೆ, ಊರುಗಡೂರು, ಸೂಳೆಬೈಲು, ಪುಟ್ಟಪ್ಪ ಕ್ಯಾಂಪ್, ಕ್ರಷರ್ ರಸ್ತೆ, ಮಳಲಿಕೊಪ್ಪ, ಇಂದಿರಾನಗರ, ಕಂಟ್ರಿಕ್ಲಬ್ ರಸ್ತೆ, ಎಂ.ಸಿ.ಲೇಔಟ್, ಎಕೆಎಸ್ ಲೇಔಟ್, ಪಟೇಲ್ ಕಾಂಪೌಂಡ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

District Chamber of Commerce and Industry ಡಿಸೆಂಬರ್ 15ಕ್ಕೆ ಆಳ್ವಾಸ್ ನುಡಿಸಿರಿ ಸಾಂಸ್ಕೃತಿಕ ವೈಭವ

0

District Chamber of Commerce and Industry ಆಳ್ವಾಸ್ ನುಡಿಸಿರಿ ಸಾಂಸ್ಕೃತಿಕ ವೈಭವ 2025ರ ಅದ್ಭುತ ಕಾರ್ಯಕ್ರಮದಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಹೇಳಿದರು.
ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿ, ಆಳ್ವಾಸ್ ನುಡಿಸಿರಿ ವಿರಾಸತ್ ಶಿವಮೊಗ್ಗ ಜಿಲ್ಲಾ ಘಟಕದಿಂದ ಆಯೋಜಿಸಿರುವ ಆಳ್ವಾಸ್ ನುಡಿಸಿರಿ ಸಾಂಸ್ಕೃತಿಕ ವೈಭವ 2025 ಕಾರ್ಯಕ್ರಮ ಯಶಸ್ವಿಗೊಳಿಸಲು ಎಲ್ಲರ ಸಹಕಾರ ಅಗತ್ಯ ಎಂದು ತಿಳಿಸಿದರು.
ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಮಾತನಾಡಿ, ಡಿಸೆಂಬರ್ 15ರಂದು ಸಂಜೆ 5.30ರಿಂದ ಅಲ್ಲಮ ಪ್ರಭು ಬಯಲು ಫ್ರೀಡಂ ಪಾರ್ಕ್ ನಲ್ಲಿ ಕಲೆ, ಸಂಗೀತ, ನೃತ್ಯ, ಯಕ್ಷಗಾನ ಸಂಸ್ಕೃತಿ ಅನಾವರಣಗೊಳಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 300 ವಿದ್ಯಾರ್ಥಿ ಕಲಾವಿದರಿಂದ 3 ಗಂಟೆ ಆಳ್ವಾಸ್ ಸಾಂಸ್ಕೃತಿಕ ವೈಭವ ನಡೆಯಲಿದೆ ಎಂದು ಹೇಳಿದರು.
District Chamber of Commerce and Industry ಪದವೀಧರ ಸಹಕಾರ ಸಂಘದ ಅಧ್ಯಕ್ಷ ಎಸ್.ಪಿ.ದಿನೇಶ್, ರಾಜ್ಯ ಸರ್ಕಾರಿ ನೌಕರ ಸಂಘದ ಜಿಲ್ಲಾಧ್ಯಕ್ಷ ಆರ್.ಮೋಹನ್ ಕುಮಾರ್, ಶ್ರೀ ಬಸವೇಶ್ವರ ಸ್ವಾಮಿ ಪಟ್ಟಣ ಪತ್ತಿನ ಸಹಕಾರ ಸಂಘ ಅಧ್ಯಕ್ಷ ಬಳ್ಳೆಕೆರೆ ಸಂತೋಷ್, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯ್ ಕುಮಾರ್, ಕಾರ್ಯದರ್ಶಿ ಎ.ಎಂ.ಸುರೇಶ್, ಸಹ ಕಾರ್ಯದರ್ಶಿ ಕೆ.ಎಸ್.ಸುಕುಮಾರ್, ಖಜಾಂಚಿ ಆರ್.ಮನೋಹರ್ ನಿರ್ದೇಶಕರಾದ ಡಾ. ಲಕ್ಷ್ಮೀದೇವಿ ಗೋಪಿನಾಥ್, ಬಿ.ಸುರೇಶ್ ಕುಮಾರ್, ಪ್ರದೀಪ್ ವಿ ಯೆಲಿ, ವಸಂತ್ ಹೋಬಳಿದಾರ್, ಗಣೇಶ್ ಎಂ ಅಂಗಡಿ, ಜಿ.ವಿ.ಕಿರಣ್ ಕುಮಾರ್, ರವಿಪ್ರಕಾಶ್ ಜೆನ್ನಿ, ಪಿ.ರುದ್ರೇಶ್, ಕೆ.ಬಿ.ಶಿವಕುಮಾರ್, ಕೆ.ಎನ್.ರಾಜಶೇಖರ್, ಸಿ.ಎ.ಶರತ್, ಎಸ್.ಎಸ್.ಉದಯ್ ಕುಮಾರ್, ವಿನೋದ್ ಕುಮಾರ್, ಎಸ್.ಪಿ.ಶಂಕರ್ ಹಾಗೂ ಮಾಜಿ ಅಧ್ಯಕ್ಷರಾದ ಎನ್.ಗೋಪಿನಾಥ್, ಅಶ್ವಥ್ ನಾರಾಯಣ್ ಶೆಟ್ಟಿ, ಜೆ.ಆರ್.ವಾಸುದೇವ್ ಹಾಗು ಸದಸ್ಯರಾದ ಮಧುಮಿತಾ ಇತರರು ಭಾಗವಹಿಸಿದ್ದರು.

ರಾಜಹಂಸ ಬಸ್‌ ಡಿಕ್ಕಿಯಾಗಿ ಯುವಕನ ಸಾವು

0

ಡೆವಿಲ್‌ ಸಿನಿಮಾದ ಸಂಭ್ರಮಾಚರಣೆ ಮುಗಿಸಿ ಮನೆಗೆ ಮರಳುತ್ತಿದ್ದಾಗ ರಾಜಹಂಸ ಬಸ್‌ ಡಿಕ್ಕಿಯಾಗಿ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ರಂಜದಕಟ್ಟೆ ಸಮೀಪದ ಶಿವರಾಜಪುರದಲ್ಲಿ
ಮೀನುಗುಂದ ಗ್ರಾಮದ ಪುನೀತ್‌ (26) ಎಂಬ ಯುವಕ ಅಫಘಾತದಲ್ಲಿ ಸಾವನ್ನಪ್ಪಿದ್ದಾರೆ.

ತೀರ್ಥಹಳ್ಳಿಯ ವಿನಾಯಕ ಚಿತ್ರಮಂದಿರದಲ್ಲಿ ಡೆವಿಲ್‌ ಸಿನಿಮಾದ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದ ಪುನೀತ್‌

ತಮ್ಮ ಬೈಕಿನಲ್ಲಿ ಮನೆಗೆ ಮರಳುತ್ತಿದ್ದ ವೇಳೆ
ರಾಜಹಂಸ ಬಸ್‌ ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಸಾವಿಗೀಡಾಗಿದ್ದಾರೆ.

ತೀರ್ಥಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ.

District Chamber of Commerce and Industry ಬ್ಯಾಂಕಿಂಗ್ ಕ್ಷೇತ್ರದ ಸುಧಾರಣೆಯಿಂದ ಆರ್ಥಿಕ ಅಭಿವೃದ್ಧಿಗೆ ಅನುಕೂಲ : ಬಿ.ಗೋಪಿನಾಥ್

0

District Chamber of Commerce and Industry ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸುಧಾರಣಾ ಕ್ರಮಗಳಿಂದ ಆರ್ಥಿಕವಾಗಿ ಅಭಿವೃದ್ಧಿಯಾಗಲು ಸಹಾಯಕವಾಗಿದೆ ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಹೇಳಿದರು.
ಶಿವಮೊಗ್ಗ ನಗರದ ಕಂಟ್ರಿ ಕ್ಲಬ್‌ನಲ್ಲಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ, ಶಿವಮೊಗ್ಗ-ಭದ್ರಾವತಿ ಕೈಗಾರಿಕಾ ಸಂಘ, ಇನ್‌ಸ್ಟಿಟ್ಯೂಟ್ ಆಫ್ ಇಂಡಿಯನ್ ಫೌಂಡ್ರಿಮೆನ್ ವತಿಯಿಂದ ಆಯೋಜಿಸಿದ್ದ ಬ್ಯಾಂಕಿಂಗ್ ಕ್ಷೇತ್ರದ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಆರ್ಥಿಕ ಸುಧಾರಣಾ ಯುಗದಲ್ಲಿ ಬ್ಯಾಂಕಿಂಗ್ ಕ್ಷೇತ್ರವು ಸಾಕಷ್ಟು ಬದಲಾವಣೆ ಕಂಡಿದೆ. ಸಾಂಪ್ರದಾಯಿಕ ಬ್ಯಾಂಕಿಂಗ್‌ನಿಂದ ಬದಲಾಗಿ ತಾಂತ್ರಿಕ ಮೇಲ್ದರ್ಜೆಗೆ ಪರಿವರ್ತನೆಯಾಗಿದೆ. ಇಂದು ಬ್ಯಾಂಕಿಂಗ್ ವಲಯದಲ್ಲಿ ಸಾಲ ಪಡೆಯಲು ಬ್ಯಾಂಕ್‌ಗೆ ಹೋಗುವ ಅವಶ್ಯಕತೆ ಇಲ್ಲ. ನಮ್ಮ ಬ್ಯಾಂಕ್ ನಮ್ಮ ಬ್ಯಾಂಕಿಂಗ್ ಕಾನ್ಸೆಪ್ಟ್ ಪ್ರಾರಂಭವಾಗಿ ಕುಳಿತಲ್ಲೇ ಸಾಲ ಪಡೆಯಬಹುದು. ಠೇವಣಿ ಇಡಬಹುದು, ಎಲ್ಲಾ ರೀತಿಯ ಬ್ಯಾಂಕಿಂಗ್ ವ್ಯವಹಾರಗಳನ್ನು ಮಾಡಬಹುದು ಎಂದು ತಿಳಿಸಿದರು.
ಡಿ.ಜಿ.ಬೆನಕಪ್ಪ ಮಾತನಾಡಿ, ಡಿಜಿಟಲ್ ಮೊಬೈಲ್ ಬ್ಯಾಂಕಿಂಗ್ ಕ್ರಾಂತಿಕಾರ ಬ್ಯಾಂಕಿಂಗ್ ಸುಧಾರಣೆಯಾಗಿದೆ. ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗುತ್ತಿದೆ ಎಂದು ತಿಳಿಸಿದರು. ಬ್ಯಾಂಕಿಂಗ್ ಉತ್ಪನ್ನಗಳು, ಜಾಗತಿಕ ಮಾರುಕಟ್ಟೆ, ಟ್ರೇಡ್ ಫೈನಾನ್ಸ್ ಪರಿಹಾರಗಳ ಬಗ್ಗೆ ಚರ್ಚಿಸಲಾಯಿತು.
District Chamber of Commerce and Industry ಕೋಟಕ್ ಮಹಿಂದ್ರಾ ಬ್ಯಾಂಕ್ ಶಿವಮೊಗ್ಗ ಕ್ಲಸ್ಟರ್ ಏರಿಯಾ ಮ್ಯಾನೇಜರ್, ಪೊರ್ಟ್ಪೋಲಿಯೋ ಮ್ಯಾನೇಜರ್ ಸಚಿನ್ ಕಾಮಟೆ, ಏರಿಯಾ ಮ್ಯಾನೇಜರ್ ಕಲ್ಲೋಲ್ ಮಂಜುಂದರ್, ಗಿರೀಶ್ ಹೆಗ್ಡೆ, ಏರಿಯಾ ಮ್ಯಾನೇಜರ್ ಮಂಜುನಾಥ ಗಡಿಯಾರ, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್, ಕಾರ್ಯದರ್ಶಿ ಎ.ಎಂ.ಸುರೇಶ್, ಖಜಾಂಚಿ ಆರ್.ಮನೋಹರ್ ಮತ್ತಿತರರು ಇದ್ದರು.

Padma Gandhi Film ನಿರ್ದೇಶಕ ಸುಚೇಂದ್ರ ಪ್ರಸಾದ್ ನಿರ್ದೇಶನದ “ಪದ್ಮಗಂಧಿ” ಚಿತ್ರ ಡಿ. 12 ರಂದು ಶಿವಮೊಗ್ಗದ ಭಾರತ್ ಸಿನಿಮಾದಲ್ಲಿ ಪ್ರದರ್ಶನ

0

Padma Gandhi Film ಹಿರಿಯ ನಟ ಸುಚೇಂದ್ರ ಪ್ರಸಾದ್ ಚಿತ್ರಕಥೆ-ಸಂಭಾಷಣೆ ಬರೆದು ನಿರ್ದೇಶನ ಮಾಡಿರುವ ಭಾರತೀಯ ಚಿತ್ರರಂಗದಲ್ಲಿ ಹೊಸ ದಾಖಲೆ ನಿರ್ಮಿಸಲು ಮುಂದಾಗಿರುವ ಪದ್ಮಗಂಧಿ ತೆರೆಗೆ ಸಿದ್ಧವಾಗಿದೆ.

ಕನ್ನಡ, ಸಂಸ್ಕೃತ ಮತ್ತು ಹಿಂದಿ ಭಾಷೆಯಲ್ಲಿ ನಿರ್ಮಾಣವಾಗಿರುವ ನಿರ್ಮಾಣವಾಗಿರುವ ಈ ಚಿತ್ರಕ್ಕೆ ನಿವೃತ ಪ್ರಾಧ್ಯಾಪಕಿ ಎಸ್‌. ಆರ್.ಲೀಲಾ ಚಿತ್ರದ ಕಥೆ ಬರೆದಿದ್ದು, ಚಿತ್ರ ನಿರ್ಮಾಣಕ್ಕೂ ಬಂಡವಾಳ ಹೂಡಿದ್ದಾರೆ.

ಕಳೆದ ತಿಂಗಳು ದುಬೈನಲ್ಲಿ ನಡೆದ ಇಂಡೋ ದುಬೈ ಇಂಟ‌ರ್ ನ್ಯಾಷನಲ್ ಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡ ಪದ್ಮಗಂಧಿ ಅತ್ಯುತ್ತಮ ಚಿತ್ರ ಪ್ರಶಸ್ತಿ ಪಡೆದುಕೊಂಡಿದೆ.

ನವೆಂಬರ್‌ನಲ್ಲಿ ನಡೆಯಲಿರುವ ಪನೋರಮ ಚಿತ್ರೋತ್ಸವಕ್ಕೂ ಪದ್ಮಗಂಧಿ ಆಯ್ಕೆಯಾಗಿದೆ. ಈ ಸಿನಿಮಾವು ಆದಿಯಿಂದ ಅಂತ್ಯದವರೆಗೂ ಪದ್ಮಗಂಧಿಯ ಪರಿಮಳ ಪಸರಿಸುತ್ತದೆ. ದೈವಿಕ ಗಂಧ ಮೆತ್ತಿಕೊಂಡಿರುವ ಕಮಲದ ಹೂವಿನ ಬಗ್ಗೆಯೇ ಕಥೆ ಇರುವುದು ವಿಶೇಷ, ಮಹಾಪದ್ಮ, ಗುರುಮಾತೆ ಪಾತ್ರದಲ್ಲಿ ಉಡುಪಿಯ ಪರಿಪೂರ್ಣ ಚಂದ್ರಶೇಖ‌ರ್ ಇವರೊಂದಿಗೆ ರಿಯಲ್‌ದಲ್ಲಿ ಹೆಸರು ಮಾಡಿರುವ ಡಾ. ಆ‌ರ್.ಗಣೇಶ್‌, ಡಾ.ಗೌರಿ ಸುಬ್ರಹ್ಮಣ್ಯ, ಡಾ.ಪ್ರೇಮಾ, ಡಾ.ಹೇಮಂತ್‌ಕುಮಾರ್, ಆಚಾರ್ಯ ಮೃತ್ಯುಂಜಯಶಾಸ್ತ್ರಿ, ಜಿ.ಎಲ್.ಭಟ್ ಮೃತ್ಯುಂಜಯ ಶಾಸ್ತ್ರಿ, ಪಂಡಿತಾ ಪ್ರಸನ್ನ ವೈದ್ಯ, ಡಾ.ದೀಪಕ್ ಪರಮಶಿವನ್, ಹೇಮಂತಕುಮಾರ. ಮುಂತಾದವರು ಚಿತ್ರದಲ್ಲಿ ನಟಿಸಿದ್ದಾರೆ.

ಡಾ.ದೀಪಕ್ ಪರಮಶಿವನ್ ಸಂಗೀತ, ಮನುಯಪ್ಪಾರ್-ನಾಗರಾಜ್ ಅದ್ವಾನಿ, ಗಿರಿಧರ್ ದಿವಾನ್ ಛಾಯಾಗ್ರಹಣ, ಎನ್.ನಾಗೇಶ್ ನಾರಾಯಣಪ್ಪ ಸಂಕಲನ ಈ ಚಿತ್ರಕ್ಕಿದೆ. ಭಾರತೀಯ ಪರಂಪರೆಯನ್ನು ಚಿತ್ರಿಸಿ ನೈಜವಾಗಿ ತೆರೆಗೆ ತರುವಲ್ಲಿ ನಟ ನಿರ್ದೇಶಕ ಸುಚೇಂದ್ರ ಪ್ರಸಾದ್ ತಮ್ಮೆಲ್ಲ ಜಾಣ್ಮೆಯನ್ನು ದಾರೆಯೆರದಿದ್ದಾರೆ.

ಪ್ರತಿಯೊಬ್ಬರೂ ನೋಡಲೇಬೇಕಾದ ಚಿತ್ರ ಇದಾಗಿದೆ.

Padma Gandhi Film ಪ್ರತಿಯೊಂದು ಹಂತದಲ್ಲಿ ಚಿತ್ರ ಕಥೆಗೆ ಪಾತ್ರದ ಮೂಲಕ ಜೀವಕಳೆ ತುಂಬಿದ ಪದ್ಮಗಂಧಿ ಎಲ್ಲರ ಮನಸ್ಸನ್ನು ಗೆಲ್ಲುವುದು ಸಂಶಯವೇ ಇಲ್ಲ.

ಪದ್ಮಗಂಧಿ ಇದೇ ತಿಂಗಳು 12 ನೆ ತಾರೀಖಿನಂದು ಶಿವಮೊಗ್ಗ ನಗರದ ಭರತ್ (ನೆಹರೂ ರಸ್ತೆಯಲ್ಲಿ ಇರುವ ಸಿಟಿ ಮಾಲ್) ಚಿತ್ರಮಂದಿರದಲ್ಲಿ ಬೆಳಿಗ್ಗೆ 11 ರಿಂದ 1 ಗಂಟೆಯವರೆಗೆ ಪ್ರದರ್ಶನವಿರುತ್ತದೆ.