Friday, February 27, 2026
Friday, February 27, 2026
Home Blog Page 1613

ಹುಬ್ಬಳ್ಳಿ ಗಲಭೆ ಪೋಲಿಸ್ ದಕ್ಷತೆ ಮೆಚ್ಚಿದ ಗೃಹ ಸಚಿವರು

0

ಹಳೇ ಹುಬ್ಬಳ್ಳಿಯಲ್ಲಿ ಗಲಭೆ ಹಾಗೂ ಈ ಹಿಂದೆ ಕೆಜೆ ಹಳ್ಳಿ,ಡಿಜೆ ಹಳ್ಳಿ ಗಲಭೆಗೂ ಸಾಮ್ಯತೆ ಇರುವುದು ಕಂಡುಬಂದಿದೆ. ಪೋಲಿಸರು ಸ್ವಲ್ಪ ವೀಕ್ ಆಗಿದ್ದರೆ, ಹುಬ್ಬಳ್ಳಿ ಹೊತ್ತಿ ಉರಿಯುತ್ತಿತ್ತು. ಈ ಕಾರಣ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ವಿಕಾಸ ಸೌಧದಲ್ಲಿ ಪೊಲೀಸರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಈ ಪ್ರಕರಣದಲ್ಲಿ ಸಾಕಷ್ಟು ವಿಚಾರಣೆ ಆಗಬೇಕು. ಇದರ ಹಿಂದೆ ಇರುವ ದೇಶದ್ರೋಹಿ ಸಂಘಟನೆಗಳು ಹೊರಬರಬೇಕು. ತಪ್ಪಿತಸ್ಥರು ಅಲ್ಲದೇ ಇರುವವರನ್ನ ಬಂಧನ ಮಾಡುವ ಅವಶ್ಯಕತೆ ಇಲ್ಲ. ನಮ್ಮ ಪೋಲೀಸರು ಸರಿ ದಾರಿಯಲ್ಲಿ ಹೋಗುತ್ತಿದ್ದಾರೆ. ಇದು ಕಾಂಗ್ರೆಸ್ ಸರ್ಕಾರ ಅಲ್ಲ. ಅವರನ್ನು ಹಿಡಿ,ಇವರನ್ನು ಬಿಡಿ ಎನ್ನುವುದಕ್ಕೆ ಎಂದು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಅಬ್ಬಯ್ಯನವ್ರ ವೋಟ್ ಬ್ಯಾಂಕ್ ರಾಜಕಾರಣಕ್ಕಿಂತ ರಾಜ್ಯದ ನೆಮ್ಮದಿ ಮುಖ್ಯ. ಇದು ಕಣ್ಣು ಒರೆಸುವ ತಂತ್ರ ಅಲ್ಲ. ನಮಗೆ ದೇಶದ ನೆಮ್ಮದಿ ಮೊದಲು, ದೇಶದ ಏಕತೆ ಮೊದಲು. ಯಾವ ಸಂಘಟನೆಯನ್ನ ರದ್ದು ಮಾಡಬೇಕು ಎನ್ನುವುದು ಕೇಂದ್ರ ಸರ್ಕಾರಕ್ಕೆ ಬಿಟ್ಟ ವಿಚಾರ. ಸಿದ್ದರಾಮಯ್ಯ ಸರ್ಕಾರದಲ್ಲಿ ಸಾಕಷ್ಟು ಜನರ ಕೇಸ್‌ಗಳನ್ನ ವಾಪಸ್ ತೆಗದುಕೊಂಡರು. ಅದರ ಪರಿಣಾಯವನ್ನು ನಾವು ಅನುಭವಿಸುತ್ತಿದ್ದೇವೆ. ಕೆಜಿ ಹಳ್ಳಿ ಡಿಜೆ ಹಳ್ಳಿಯಲ್ಲಿ ಎಷ್ಟು ಜನರನ್ನು ಅರೆಸ್ಟ್ ಮಾಡಿದ್ದೇವೆ. ಇದು ಕಾಂಗ್ರೆಸ್ ಸರ್ಕಾರ ಇದ್ದಿದ್ರೆ ಆಗ್ತಿತ್ತಾ ಎಂದು ಆರಗಜ್ಞಾನೇಂದ್ರ ಅವರು ಪ್ರಶ್ನಿಸಿದ್ದಾರೆ.

ಅವರನ್ನು ಹಿಡಿಯದೆ ಬಿಟ್ರೆ ಅದು ವೈಫಲ್ಯ. ನಾನೇ ಅದನ್ನು ಸಿಐಡಿಗೆ ಕೊಟ್ಟಿದ್ದು. ಎಲ್ಲಿದ್ದರೂ ಅರೆಸ್ಟ್ ಮಾದುತ್ತರೆ. ಅವರು ನಿನ್ನೆ ಕೋರ್ಟ್‌ಗೆ ಹೋಗಿದ್ದರು. ಬೇಲ್ ಸಿಕ್ಕಿಲ್ಲ ಎನ್ನುವ ಮಾಹಿತಿ ಇದೆ. ಅವರಿಗೊಂದು, ಇವರಿಗೊಂದು ಇಲ್ಲ. ನಮ್ಮ ಆಡಳಿತದಲ್ಲಿ ಕಾನೂನು ಎಲ್ಲರಿಗೂ ಒಂದೇ. ಎಲ್ಲರನ್ನು ಅರೆಸ್ಟ್ ಮಾಡುತ್ತೇವೆ. ಪಿಎಸ್‌ಐ ಪರೀಕ್ಷೆ ವಿಚಾರದಲ್ಲಿ ಬಹಳ ಬಿಗಿ ಕ್ರಮ ತೆಗದುಕೊಂಡಿದ್ದೇವೆ ಎಂದು ಸಮರ್ಥನೆ ನೀಡಿದ್ದಾರೆ.

ಸಣ್ಣ ದಾಖಲಾತಿ ಸಿಕ್ಕ ಎರಡು ಮೂರು ಗಂಟೆ ಒಳಗೆ ಸಿಎಂ ಅನುಮತಿ ಪಡೆದು ಸಿಐಡಿ ಟೀಮ್ ಮಾಡಿದ್ದೇವೆ. ಎಲ್ಲವನ್ನೂ ಬಗೆದು, ಬೇರು ಸಹಿತ ಕಿತ್ತು ಹೊರ ತರಬೇಕು ಎಂದು ಹೇಳಿದ್ದೇವೆ. ಸಿಐಡಿ ಟೀಮ್ ಅತ್ಯಂತ ಒಳ್ಳೆಯ ಟೀಮ್. ಪ್ರಮಾಣಿಕವಾಗಿ ತನಿಖೆಯಾಗುತ್ತದೆ. ಈಗಾಗಲೇ ತನಿಖೆಯಾಗುತ್ತಿದೆ. ತನಿಖೆ ನಂತರ ಪರೀಕ್ಷೆ ವಿಚಾರವಾಗಿ ತೀರ್ಮಾನ ಮಾಡುತ್ತೇವೆ ಎಂದು ಮಾಹಿತಿ ತಿಳಿಸಿದ್ದಾರೆ.

ಹೆಣ್ಣುಮಕ್ಕಳಿಗೆ ಶಿಕ್ಷಣ ಆಗ್ರಹಿಸಿ ಬ್ರಿಟನ್ ಭಾರತ ಜಂಟಿ ಹೇಳಿಕೆ

0

ಅಫ್ಘಾನಿಸ್ತಾನದಲ್ಲಿನ ಈಗಿನ ಪರಿಸ್ಥಿತಿ ಹಾಗೂ ಅಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ವಿಚಾರಕ್ಕೆ ಸಂಬಂಧಿಸಿದಂತೆ ಭಾರತ ಮತ್ತು ಬ್ರಿಟನ್ ತನ್ನ ಕಳವಳವನ್ನು ವ್ಯಕ್ತಪಡಿಸಿದೆ.

ಹೆಣ್ಣುಮಕ್ಕಳಿಗೆ ಶಿಕ್ಷಣಕ್ಕೆ ಅವಕಾಶ ನೀಡಬೇಕೆಂದು ಭಾರತದ ಪ್ರಧಾನಿ ನರೇಂದ್ರ ಮೋದಿ ಹಾಗೂ ಯುಕೆ ಪ್ರಧಾನಿ ಬೋರಿಸ್ ಜಾನ್ಸನ್ ಅವರು ಜಂಟಿಯಾಗಿ ಒತ್ತಾಯಿಸಿದ್ದಾರೆ.

ಈ ಕುರಿತು ವಿದೇಶಾಂಗ ಇಲಾಖೆ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದೆ.

ತಾಲಿಬಾನ್ ಸರ್ಕಾರ ಅಲ್ಲಿನ ಹೆಣ್ಣುಮಕ್ಕಳಿಗೆ ಮತ್ತು ಮಹಿಳೆಯರಿಗೆ ಶಿಕ್ಷಣ ಪಡೆಯಲು ಅವಕಾಶ ನೀಡಬೇಕು ಎಂದು ಒತ್ತಾಯಿಸಲಾಗಿದೆ. ಅಫ್ಘಾನಿಸ್ತಾನದ ಜನರಿಗೆ ವೈದ್ಯಕೀಯ ಮತ್ತು ಆಹಾರ ಧಾನ್ಯಗಳ ನೆರವು ನೀಡುವಲ್ಲಿ ಭಾರತ ವಹಿಸಿದ ಪಾತ್ರವನ್ನು ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಶ್ಲಾಘಿಸಿದ್ದಾರೆ.

ಇದರ ಜೊತೆಗೆ ಆಫ್ಘನ್ ಪ್ರದೇಶವನ್ನು ಭಯೋತ್ಪಾದಕ ಕೃತ್ಯಗಳಿಗೆ ಆಶ್ರಯತಾಣವಾಗಿ ಬಳಸಲು ಮತ್ತು ಉಗ್ರ ಕೃತ್ಯಗಳಿಗೆ ಹಣಕಾಸು ಒದಗಿಸಲು ಬಳಸದಂತೆ ಎರಡು ರಾಷ್ಟ್ರಗಳು ಒತ್ತಾಯಿಸಿವೆ ಎಂದು ಹೇಳಿಕೆಯಲ್ಲಿ ಸ್ಪಷ್ಟಪಡಿಸಲಾಗಿದೆ.

ಉಭಯ ರಾಷ್ಟ್ರಗಳು ಅಫ್ಘಾನಿಸ್ತಾನದ ಜನರಿಗೆ ತಕ್ಷಣದ ಮಾನವೀಯ ನೆರವು ನೀಡುವುದನ್ನು ಮುಂದುವರಿಸಲು ಒಪ್ಪಿಕೊಂಡಿದೆ. ಶಾಂತಿಯುತ, ಸುರಕ್ಷಿತ ಅಫ್ಘಾನಿಸ್ತಾನವನ್ನು ಬೆಂಬಲಿಸಲು ಮತ್ತು ಮುಕ್ತ ಹಾಗೂ ಸುರಕ್ಷಿತ ಇಂಡೋ ಪೆಸಿಫಿಕ್‌ಗೆ ತಮ್ಮ ಬದ್ಧತೆಯನ್ನು ಪ್ರದರ್ಶಿಸಿದರು.

ಭಾರತ,ಯುಕೆ ರಕ್ಷಣಾ ಮತ್ತು ಅಂತರಾಷ್ಟ್ರೀಯ ಭದ್ರತಾ ಪಾಲುದಾರಿಕೆ ಚೌಕಟ್ಟಿನ ಅಡಿಯಲ್ಲಿ ಬರುವ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸುವುದು, ಹಾಗೂ ವಿಶ್ವಾಸಾರ್ಹ ಪಾಲುದಾರರಾಗಿ ಸಹಕಾರವನ್ನು ತೀವ್ರಗೊಳಿಸುವುದು ಸೇರಿದಂತೆ ಮುಂದಿನ ದಿನಗಳಲ್ಲಿ ಹೆಚ್ಚಿನ ಸಹಕಾರ ನೀಡಲು ಉಭಯ ರಾಷ್ಟ್ರಗಳು ಒಪ್ಪಿಕೊಂಡಿವೆ.

ಬಾಗಲಕೋಟೆ ಭಾಗದ ನೀರಾವರಿ ಯೋಜನೆ ಶೀಘ್ರ ಪೂರ್ಣ- ಬೊಮ್ಮಾಯಿ

0

ರಾಜ್ಯ ವಿಧಾನಸಭೆ ಚುನಾವಣೆ ಒಂದು ವರ್ಷ ಬಾಕಿ ಇರುವಾಗಲೇ ರಾಜಕೀಯದವರು ಪೂರಕ ವಾತಾವರಣವನ್ನು ಸೃಷ್ಟಿಮಾಡುತ್ತಿದ್ದಾರೆ ಎನಿಸುತ್ತಿದೆ. ಅಮ್ ಆದ್ಮಿಯ ಮುಖಂಡ ಹಾಗೂ ದೆಹಲಿಯ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸಮಾವೇಶದಲ್ಲಿ ಮಾತನಾಡುತ್ತಾ, ತಮ್ಮ ರಾಜ್ಯದಲ್ಲಿ ಉಚಿತ ವಿದ್ಯುತ್ ಮತ್ತು ನೀರಿನ ಬಗ್ಗೆ ತಿಳಿಸಿದ್ದರು.

ಈಗ ನಮ್ಮ ರಾಜ್ಯದ ಮಾನ್ಯ ಮುಖ್ಯಮಂತ್ರಿ ಬಸವರಾಾಜ ಬೊಮ್ಮಾಯಿ ಅವರು ಎಸಿ ಎಸ್ಟಿ ಸಮುದಾಯಕ್ಕೆ ಉಚಿತ ವಿದ್ಯುತ್ ನೀಡುವ ಯೋಜನೆಯಿದೆ ಎಂದು ಮಾಹಿತಿ ತಿಳಿಸಿದ್ದಾರೆ.

ಬಾಗಲಕೋಟೆಯ ವಿವಿಧ ಅಭಿವೃದ್ದಿ ಕಾರ್ಯಕ್ರಮಗಳ ಶಂಕು ಸ್ಥಾಪನೆಗೆ ತೆರಳಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಮಹತ್ವದ ಯೋಜನೆಯ ಬಗ್ಗೆ ಮಾಹಿತಿ ತಿಳಿಸಿದ್ದಾರೆ.

ಎಸ್ ಸಿ ಎಸ್ಟಿ ಸಮುದಾಯಕ್ಕೆ ತಿಂಗಳಿಗೆ 75 ಯೂನಿಟ್‌ಗಳ ವಿದ್ಯುತ್ ಉಚಿತವಾಗಿ ನೀಡಲು ಯೋಜನೆ ರೂಪಿಸಲಾಗ್ತಿದೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.

ಈ ಭಾಗದ ರೈತರ ಬಹುದಿನದ ಬೇಡಿಕೆಯಾಗಿರುವ ಸಾಲಟ್ಟಿ ಶಿವಲಿಂಗೇಶ್ವರ ಹಾಗೂ ಮಂಟೂರ ಮಹಾಲಕ್ಷ್ಮೀ ನೀರಾವರಿ ಯೋಜನೆ ಶೀಘ್ರ ಪೂರ್ಣಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ಮುಧೋಳ ನಗರದ ಆರ್ ಎಂಜಿ ಕಾಲೇಜು ಆವರಣದಲ್ಲಿ ಶುಕ್ರವಾರ ನಡೆದ ವಿವಿಧ ಯೋಜನೆಗಳ ಶಿಲಾನ್ಯಾಸ ಹಾಗೂ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಅವರು, ಮುಧೋಳದ ಜನರ ನಾಡಿಮಿಡಿತ ಅರಿತಿರುವ ಸಚಿವ ಗೋವಿಂದ ಕಾರಜೋಳ ಅವರು ಈ ಭಾಗದ ಎಲ್ಲ ಬೇಕು ಬೇಡಿಕೆಗಳನ್ನು ಪೂರೈಸುವತ್ತ ಹೆಚ್ಚು ಗಮನ ಹರಿಸಿದ್ದಾರೆ.

ನೆಲ, ಜಲ, ಭಾಷೆ ಅಭಿವೃದ್ಧಿಗಾಗಿ ನಾವು ಯಾವುದೇ ರೀತಿಯ ರಾಜಕಾರಣಕ್ಕೆ ಮುಂದಾಗುವುದಿಲ್ಲ. ಸರ್ವಜನರ ಶ್ರೇಯೋಭಿವೃದ್ಧಿಗೆ ನಮ್ಮ ಸರ್ಕಾರ ನಿರಂತರವಾಗಿ ಶ್ರಮಿಸುತ್ತದೆ ಎಂದು ತಮ್ಮ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಮ್ಮ ಸರ್ಕಾರದ ಅವಧಿಯಲ್ಲಿ ಸ್ರ್ತೀಶಕ್ತಿ ಅಭಿವೃದ್ಧಿಗೆ ಆಯಂಕರ್ ಬ್ಯಾಂಕಿಂಗ್, ಹಾಲು ಉತ್ಪಾದಕರಿಗೆ ನಂದಿನಿ ಕ್ಷೀರ ಬ್ಯಾಂಕ್, ಸಂಧ್ಯಾ ಸುರಕ್ಷಾ ಹಾಗೂ ಅಂಗವಿಕಲರ ಮಾಸಾಶನ ಹೆಚ್ಚಳದಂತಹ ಅನೇಕ ರೀತಿ ಅಭಿವೃದ್ಧಿಯ ಕಾರ್ಯನಿರ್ವಹಿಸುತ್ತಿದ್ದೇವೆ. ಮುಂದಿನ ದಿನಗಳಲ್ಲಿ ರಾಜ್ಯದ ಪರಿಶಿಷ್ಟ ಜಾತಿ, ಪಂಗಡದವರಿಗಾಗಿ 75 ಯೂನಿಟ್ ವಿದ್ಯುತ್ ಉಚಿತ ವಿತರಿಸುವ ಯೋಜನೆ ಹಾಕಿಕೊಂಡಿದ್ದೇವೆ ಎಂದು ತಿಳಿಸಿದ್ದಾರೆ.

ಆರೋಗ್ಯ ಇಲಾಖೆಯಲ್ಲಿ ಹಾಜರಾತಿ ಆಧರಿಸಿದ ವೇತನ ವ್ಯವಸ್ಥೆ

0

ಆರೋಗ್ಯ ಇಲಾಖೆಯಲ್ಲಿ ಗುಣಾತ್ಮಕ ಬದಲಾವಣೆ ತರುವ ನಿಟ್ಟಿನಲ್ಲಿ ಎಲ್ಲ ಹಂತದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಬಯೋಮೆಟ್ರಿಕ್‌ ಹಾಜರಾತಿ ಆಧರಿಸಿ ವೇತನ ಪಾವತಿಸುವ ವ್ಯವಸ್ಥೆ ಕಡ್ಡಾಯಗೊಳಿಸಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಅವರು ಹೇಳಿದ್ದಾರೆ.

ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿಈ ಕುರಿತು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಆಸ್ಪತ್ರೆ, ಇಲಾಖೆ ಕಚೇರಿ ಮತ್ತು ಸಂಸ್ಥೆಗಳಲ್ಲಿ ವೈದ್ಯರು, ಅಧಿಕಾರಿಗಳು ಮತ್ತು ಸಿಬ್ಬಂದಿ ಕರ್ತವ್ಯದ ವೇಳೆಯಲ್ಲಿ ಹಾಜರಿಲ್ಲದಿರುವ ಬಗ್ಗೆ ಸಾರ್ವಜನಿಕರು ಹಾಗೂ ಚುನಾಯಿತ ಪ್ರತಿನಿಧಿಗಳಿಂದ ದೂರುಗಳು ಬಂದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ನಿಜವಾದ ಕಾರಣಗಳಿಲ್ಲದೆ ಕೆಲಸ ಕದಿಯುವುದನ್ನು ಸಹಿಸಲು ಆಗುವುದಿಲ್ಲ. ಅವರ ಕರ್ತವ್ಯಲೋಪದಿಂದ ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಆಗುತ್ತದೆ. ಹೀಗಾಗಿ ಕರ್ತವ್ಯದ ವೇಳೆಯಲ್ಲಿ ಹಾಜರಿಲ್ಲದ ಯಾರೇ ಆಗಲಿ ಅಂತಹವರ ವೇತನ ಕಡಿತಕ್ಕೆ ಸೂಚನೆ ನೀಡಲಾಗಿದೆ. ಇಲಾಖೆ ಅಡಿಯಲ್ಲಿ ಬರುವ ಎಲ್ಲ ಸಂಸ್ಥೆಗಳು ಮತ್ತು ಆಸ್ಪತ್ರೆಗಳಲ್ಲಿ ಪ್ರತಿಯೊಬ್ಬ ಅಧಿಕಾರಿ ಮತ್ತು ಸಿಬ್ಬಂದಿಗೂ ಅವರ ‘ಆಧಾರ್‌ ‘ ಆಧರಿತ ಬಯೋಮೆಟ್ರಿಕ್‌ ಹಾಜರಾತಿ (ಎಇಬಿಎಎಸ್‌) ಕಡ್ಡಾಯಗೊಳಿಸಲಾಗಿದೆ. ಅದನ್ನು ಆಧರಿಸಿಯೇ ಇನ್ನು ಮುಂದೆ ವೇತನ ನೀಡುವಂತೆ ಅಧಿಕೃತ ಆದೇಶ ಹೊರಡಿಸಲಾಗಿದೆ ಎಂದು ವಿವರಿಸಿದರು.

ಆರೋಗ್ಯ ಇಲಾಖೆಯ ಆಸ್ಪತ್ರೆ, ಸಂಸ್ಥೆ ಮತ್ತು ಕೇಂದ್ರಗಳ ಜವಾಬ್ದಾರಿ ನಿರ್ವಹಿಸುವ ಡಿಡಿಒ ( ಸ್ಯಾಲರಿ ಡ್ರಾಯಿಂಗ್‌ ಆಫೀಸರ್‌)ಗಳು ಪ್ರತೀ ತಿಂಗಳು ಎಇಬಿಎಎಸ್‌ ನಲ್ಲಿ ತಮ್ಮ ವ್ಯಾಪ್ತಿಯ ಎಲ್ಲ ಸಿಬ್ಬಂದಿಗಳ ಹಾಜರಾತಿ ಪರಿಶೀಲಿಸಿ ಅದರ ಅನುಸಾರವೇ ವೇತನ ಪಾವತಿಗೆ ವರದಿ ಸಿದ್ಧಪಡಿಸಿ ಸಂಬಂಧಿಸಿದ ಅಧಿಕಾರಿಗಳ ಮೂಲಕ ಆಯಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗೆ (ಡಿಎಚ್‌ಒ) ಸಲ್ಲಿಸಬೇಕು.

ಅವರು ಅದನ್ನು ಪರಿಶೀಲಿಸಿ ವೇತನ ಬಿಡುಗಡೆ ಮತ್ತು ಕಡಿತಕ್ಕೆ ಸೂಚನೆ ನೀಡಲಿದ್ದಾರೆ. ಡಿಎಚ್‌ಒ ಅವರು ಕೈಗೊಂಡ ಕ್ರಮಗಳನ್ನ ಮೇಲಿನ ಹಂತದ ಅಧಿಕಾರಿಗಳು ನಿಯಮಿತವಾಗಿ ಪರಿಶೀಲಿಸಲಿದ್ದಾರೆ ಎಂದು ಸ್ಪಷ್ಟಪಡಿಸಿದರು

ಯಾರೇ ಆಗಲಿ ಶೇ.80ರಷ್ಟು ಹಾಜರಾತಿಗಿಂತ ಕಡಿಮೆ ಇದ್ದಲ್ಲಿ ಅವರ ವೇತನ ತಡೆ ಹಿಡಿಯಲಾಗುತ್ತದೆ. ನಂತರ ಮಾರ್ಗಸೂಚಿ ಅನ್ವಯ ಮುಂದಿನ ಕ್ರಮ ವಹಿಸಲಾಗುವುದು. ಒಂದು ವೇಳೆ ಶೇ.80ರಷ್ಟು ಹಾಜರಾತಿ ಇದ್ದಲ್ಲಿ ವೇತನ ಬಿಡುಗಡೆ ಮಾಡಿ ಉಳಿದ ಶೇ.20 ಹಾಜರಾತಿ ದಾಖಲು ಮಾಡದಿರುವುದಕ್ಕೆ ಕಾರಣ ಕೇಳಿ ನೋಟಿಸ್‌ ಜಾರಿಗೊಳಿಸಲಾಗುತ್ತದೆ. ಸಿಬ್ಬಂದಿ ನೀಡುವ ಕಾರಣ ನಿಜವಾಗಿದ್ದಲ್ಲಿ ಪ್ರಕರಣ ಮುಕ್ತಾಯಗೊಳಿಸಲಾಗುವುದು ಒಂದು ವೇಳೆ ಸಬೂಬು ನೀಡಿದರೆ ಅಥವಾ ನೀಡಿರುವ ಮಾಹಿತಿ ಸುಳ್ಳು ಆಗಿದ್ದಲ್ಲಿ ಮುಂದಿನ ತಿಂಗಳ ವೇತನದಲ್ಲಿ ನಿರ್ದಿಷ್ಟಪಡಿಸಿರುವ ಮೊತ್ತವನ್ನುಕಡಿತಗೊಳಿಸಲಾಗುವುದು ಎಂದರು.

ಸರಿಯಾಗಿ ಉಸ್ತುವಾರಿ ಮಾಡದಿದ್ದಲ್ಲಿ ಡಿಎಚ್‌ಒಗಳ ವಿರುದ್ಧವೂ ಕ್ರಮ ಕೈಗೊಳ್ಳಲು ವರದಿ ನೀಡುವಂತೆ ಜಿಲ್ಲೆಗಳ ಉಸ್ತುವಾರಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಕೆಪಿಎಸ್ ಸಿ ಯ‌ 362 ಗೆಜೆಟೆಡ್ ಪ್ರೊಬೆಷನರ್ಸ್ ನೇಮಕಕ್ಕೆ ತಡೆಯಿಲ್ಲ

0

2011ನೇ ಸಾಲಿನಲ್ಲಿ ಕೆಎಎಸ್ ಅಧಿಕಾರಿಗಳ ನೇಮಕ ಪ್ರಕ್ರಿಯೆಯಲ್ಲಿ ಆಯ್ಕೆಯಾಗಿದ್ದ 362 ಅಭ್ಯರ್ಥಿಗಳನ್ನು ಸಕ್ರಮಗೊಳಿಸುವ ಸಂಬಂಧ ರೂಪಿಸಿರುವ ಕಾಯಿದೆಗೆ ತಡೆ ನೀಡಲು ಕರ್ನಾಟಕ ಆಡಳಿತ ನ್ಯಾಯಮಂಡಳಿ(ಕೆಎಟಿ) ನಿರಾಕರಿಸಿದೆ.

ಇದರಿಂದಾಗಿ ಆಯ್ಕೆಯಾದವರಿಗೆ ನೇಮಕ ಪತ್ರ ವಿತರಣೆಗೆ ಸರಕಾರಕ್ಕೆ ಹಸಿರು ನಿಶಾನೆ ದೊರೆತಿದೆ.
ಟಿ.ಶ್ರೀನಿವಾಸ ಮತ್ತಿತರರು ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ಕೆಎಟಿ ಸದಸ್ಯರಾದ ನಾರಾಯಣ ಮತ್ತು ಎನ್.ಶಿವಶೈಲಂ ಅವರಿದ್ದ ನ್ಯಾಯಪೀಠ ಈ ಆದೇಶ ಮಾಡಿದೆ.

ಕರ್ನಾಟಕ ನಾಗರಿಕ ಸೇವೆಗಳ (2011ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್‌ಗಳ ಆಯ್ಕೆ ಮತ್ತು ನೇಮಕಾ ಸಿಂಧುಗೊಳಿಸುವಿಕೆ) ಕಾಯಿದೆ-2022ರ ಸಾಂವಿಧಾನಿಕ ಮಾನ್ಯತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಹೈಕೋರ್ಟ್‌ನಲ್ಲಿ ವಜಾಗೊಂಡಿದೆ.

ಆ ಹಿನ್ನೆಲೆಯಲ್ಲಿ ಕಾಯಿದೆ ಜಾರಿಗೆ ತಡೆ ನೀಡಬೇಕೆಂಬ ಅರ್ಜಿದಾರರ ಮಧ್ಯಂತರ ಮನವಿಯನ್ನು ಕೆಎಟಿ ತಳ್ಳಿಹಾಕಿದೆ.

ಈ ಕಾಯಿದೆಯ ಅನುಸಾರ ಸರ್ಕಾರ 362 ಅಭ್ಯರ್ಥಿಗಳಿಗೆ ನೇಮಕ ಆದೇಶ ನೀಡಬಹುದು. ಆದರೆ, ಅದು ಕೆಎಟಿ ಕೈಗೊಳ್ಳುವ ಅಂತಿಮ ನಿರ್ಧಾರಕ್ಕೆ ಒಳಪಟ್ಟಿರಲಿದೆ ಎಂದು ಸ್ಪಷ್ಟಪಡಿಸಿದೆ.

ಅರ್ಜಿದಾರರು ನೀಡಿದ ಸಿಐಡಿ ವರದಿ ಆಧರಿಸಿ ಹೈಕೋರ್ಟ್ ನೇಮಕ ರದ್ದುಗೊಳಿಸಿತ್ತು. ಅದನ್ನು ಸುಪ್ರೀಂಕೋಟ್ ಕೂಡ ಎತ್ತಿಹಿಡಿದಿದೆ. ಆದರೂ ಸಹ ನ್ಯಾಯಾಲಯ ಆದೇಶವನ್ನು ಬದಿಗೊತ್ತಿ 362 ಅಭ್ಯರ್ಥಿಗಳ ಅಕ್ರಮ ನೇಮಕ ಸಕ್ರಮಗೊಳಿಸಲು ರೂಪಿಸಿರುವ ಕಾಯಿದೆ ಕಾನೂನು ಬಾಹಿರವಾದುದು. ಹಾಗಾಗಿ ರದ್ದುಗೊಳಿಸಬೇಕು ಎಂದು ಕೋರಿದ್ದಾರೆ.

ನೇಮಕ ಸಿಂಧುಗೊಳಿಸುವ ಸರಕಾರದ ಕ್ರಮ ಪ್ರಶ್ನಿಸಿ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯಲ್ಲೂ ಅರ್ಜಿ ಸಲ್ಲಿಸಲಾಗಿತ್ತು. ಕೆಎಟಿ ಯಾವುದೇ ಮಧ್ಯಂತರ ಆದೇಶ ನೀಡದ ಹಿನ್ನೆಲೆಯಲ್ಲಿ ಹೈಕೋರ್ಟ್ ಮೊರೆ ಹೋಗಿದ್ದರು.

ಈ ಮಧ್ಯೆ, ಕರ್ನಾಟಕ ಲೋಕಸೇವಾ ಆಯೋಗ 2011ನೇ ಸಾಲಿನಲ್ಲಿ ನಡೆಸಿದ್ದ 362 ಗೆಜೆಟೆಡ್ ಪ್ರೊಬೆಷನರಿಗೆ ಹುದ್ದೆಗಳ ಆಯ್ಕೆ ಸಿಂಧುಗೊಳಿಸುವ ಸಂಬಂಧ ರೂಪಿಸಿರುವ ಕಾಯ್ದೆ ಪ್ರಶ್ನಿಸಿ ಸಲ್ಲಿಸಿದ್ದ ಪಿಐಎಲ್ ಅನ್ನು ಹೈಕೋರ್ಟ್ ವಜಾಗೊಳಿಸಿದೆ.

ಬೆಂಗಳೂರಿನ ಸಾಮಾಜಿಕ ಕಾರ್ಯಕರ್ತ ಮೊಹಮ್ಮದ್ ಅರೀಫ್ ಜಮೀಲ್ ಸಲ್ಲಿಸಿದ್ದ ಪಿಐಎಲ್ ಸಿಜೆ ರಿತುರಾಜ್ ಅವಸ್ಥಿ ಮತ್ತು ನ್ಯಾ. ಎಸ್. ಆರ್. ಕೃಷ್ಣಕುಮಾರ್ ಅವರಿದ್ದ ವಿಭಾಗೀಯಪೀಠದ ಮುಂದೆ ಬಂದಿತು.

ನ್ಯಾಯಪೀಠ ವಾದ ಆಲಿಸಿದ ಬಳಿಕ ಕರ್ನಾಟಕ ಸಿವಿಲ್ ಸೇವೆಗಳ (2011ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಆಯ್ಕೆ ಮತ್ತು ನೇಮಕ ಸಿಂಧುಗೊಳಿಸುವಿಕೆ) ಕಾಯ್ದೆಯನ್ನು ರದ್ದುಪಡಿಸಲು ನಿರಾಕರಿಸಿತಲ್ಲದೆ, ಆ ಕುರಿತು ಅರ್ಜಿಯನ್ನು ವಜಾಗೊಳಿಸಿತು.
2011ನೇ ಸಾಲಿನ ನೇಮಕಾತಿಯನ್ನು ಹೈಕೋರ್ಟ್ ಈ ಹಿಂದೆ ರದ್ದುಪಡಿಸಿದ ಎಂಬ ಹಿನ್ನೆಲೆಯಲ್ಲಿ ಇಡೀ ಕಾಯ್ದೆಯನ್ನು ಅಸಂವಿಧಾನಿಕ ಎನ್ನಲಾಗದು.‌ ಕಾಯ್ದೆಯಲ್ಲಿ ಯಾವ ನಿಯಮಗಳು ಅಸಾಂವಿಧಾನಿಕ ಎಂಬುದನ್ನು ಅರ್ಜಿದಾರರು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡುವಲ್ಲಿ ವಿಫಲರಾಗಿದ್ದಾರೆ ಎಂದು ನ್ಯಾಯಪೀಠ ಹೇಳಿದೆ.

ಕೃಷಿ ಪಂಪ್ ಸೆಟ್ ಗೆ ವಿದ್ಯುತ್ ಸಂಪರ್ಕಕ್ಕೆ ಅರ್ಜಿ ಆಹ್ವಾನ

0

ಶಿವಮೊಗ್ಗ ತಾಲೂಕು ಗ್ರಾಮೀಣ ಉಪವಿಭಾಗ ಮೆಸ್ಕಾಂ ವ್ಯಾಪ್ತಿಗೆ ಒಳಪಡುವ ಅಬ್ಬಲಗೆರೆ, ಪಿಳ್ಳಂಗೆರೆ, ಹೊಳಲೂರು, ಗಾಜನೂರು ಮತ್ತು ಸಂತೇಕಡೂರು ಶಾಖಾ ವ್ಯಾಪ್ತಿಯ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರುವ ರೈತರು ಎಸ್.ಸಿ.ಪಿ.
ಹಾಗ ಟಿ.ಎಸ್.ಪಿ ಯೋಜನೆಯಡಿ ಕೃಷಿ ಪಂಪ್‍ಸೆಟ್‍ಗಳಿಗೆ ವಿದ್ಯುತ್ ಸೌಲಭ್ಯ ಪಡೆಯಲು ಆರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಮೆಸ್ಕಾ ಕಚೇರಿಯಿಂದ ನಿಗಧಿತ ನಮೂನೆಯನ್ನು ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ದಿ: 30/04/2022ರೊಳಗಾಗಿ ಸಲ್ಲಿಸುವಂತೆ ಗ್ರಾ.ಉ.ವಿ. ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪಾಲಾಕ್ಷಿ ಪಿ.ಹೆಚ್ ತಿಳಿಸಿರುತ್ತಾರೆ.

ಪಕ್ಷವನ್ನ ಸ್ವತಂತ್ರ ಗೆಲ್ಲಿಸಿಕೊಡಿ ಶಿವಮೊಗ್ಗ ಅಭಿವೃದ್ಧಿ ಮಾಡುವೆ

0

ರಾಜ್ಯದ ಜನರಿಗೆ ಕುಡಿಯುವ ನೀರು ಒದಗಿಸಲು ಹಾಗೂ ನೆನೆಗುದಿಗೆ ಬಿದ್ದಿರುವ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಆಗ್ರಹಿಸಿ ಜೆಡಿಎಸ್ ನಿಂದ ಹಮ್ಮಿಕೊಂಡಿದ್ದ ಜನತಾ ಜಲಧಾರೆ ರಥಯಾತ್ರೆಗೆ ಇಂದು ಚಾಲನೆ ಸಿಕ್ಕಿದೆ.

ಜನತ ಜಲಧಾರೆ ರಥಯಾತ್ರೆಗೆ ಚಾಲನೆ ನೀಡಿದ ಮಾಜಿ ಸಿಎಂ ಕುಮಾರಸ್ವಾಮಿಯವರು ಶಿವಮೊಗ್ಗದಿಂದ ಕೂಡಲಿಗೆ ತೆರಳಿದರು. ಅಲ್ಲಿ ರಥವನ್ನು ನಿಲ್ಲಿಸಿ ಬಹಿರಂಗ ಸಮಾವೇಶ ನಡೆಸಲಾಯಿತು.

ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಎಚ್. ಡಿ.
ಕುಮಾರಸ್ವಾಮಿಯವರು, ಕಳೆದ ಚುನಾವಣೆಯಲ್ಲಿ ಈ ನಾಡಿನ ಜನತೆಯ ವಿಶೇಷವಾಗಿ ರೈತರ ಆತ್ಮಹತ್ಯೆ ಪ್ರಕರಣಗಳ ಮುಖಾಂತರ ನಮ್ಮ ತಾಯಂದಿರು, ಸಹೋದರಿಯರು ವಿಧವೆಯರಾದದ್ದನ್ನು ನಾವು ನೋಡಿದ್ದೇವೆ. ಅದರ ಹಿನ್ನೆಲೆಯಲ್ಲಿ 18ರ ಚುನಾವಣೆಯಲ್ಲಿ ನಾನು ಈ ನಾಡಿನ ಜನತೆಗೆ ಒಂದು ಭರವಸೆ ನೀಡಿದ್ದೆ. ಅದರಂತೆ ನಾನು ರೈತರ ಸಾಲಮನ್ನಾ ಮಾಡುವ ಕೆಲಸ ಮಾಡಿದೆ. ನಾನು ಎರಡನೆಯ ಬಾರಿ ಮುಖ್ಯಮಂತ್ರಿಯಾಗಿ ಆಯ್ಕೆಯಾದ ನಂತರ ಕೇವಲ 14 ತಿಂಗಳಿನಲ್ಲಿ 25 ಸಾವಿರ ಕೋಟಿ ರೂಪಾಯಿಗಳ ರೈತರ ಸಾಲ ಮನ್ನಾ ಮಾಡುವಲ್ಲಿ ಯಶಸ್ವಿಯಾಗಿದ್ದೆನೆ ಎಂದರು.

ಶಿವಮೊಗ್ಗದಲ್ಲಿ ಆದಂತಹ ನೀರಾವರಿ ಕಾಮಗಾರಿಗಳನ್ನು ನಾನು ಮುಖ್ಯಮಂತ್ರಿಯಾಗಿದ್ದಾಗಲೇ ಎಲ್ಲಾ ನೀರಾವರಿ ಯೋಜನೆಗಳಿಗೆ ಹಣ ಬಿಡುಗಡೆ ಮಾಡಿಸಿದ್ದೆ. ಆದರೆ ಬೇರೆ ಬೇರೆ ಬ್ಯಾನರ್ ಗಳನ್ನು ಹಾಕಿಕೊಂಡು ಹೆಸರುಗಳಿಸಿದರು ಎಂದರು.

ನಮ್ಮ ಪಕ್ಷವನ್ನ ಸ್ವತಂತ್ರವಾಗಿ ಗೆಲ್ಲಿಸಿ ಕೊಟ್ಟರೆ ಶಾರದಾಪುರ ನಾಯ್ಕ್ ಅವರನ್ನು ಸಚಿವರನ್ನಾಗಿ ಮಾಡಿ, ಶಿವಮೊಗ್ಗದ ಅಭಿವೃದ್ಧಿಯನ್ನು ಮಾಡಿಸುವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಶ್ರೀಕಾಂತ್, ಮಾಜಿ ಗ್ರಾಮಾಂತರ ಶಾಸಕಿ ಶಾರದಾಪುರ್ಯಾ ನಾಯಕ್ ಮತ್ತು ಇನ್ನಿತರರು ಉಪಸ್ಥಿತರಿದ್ದರು.

ದೆಹಲಿಯಲ್ಲಿ ಮತ್ತೆ ಬಿಗಿಯಾದ ಕೋವಿಡ್ ನಿಬಂಧನೆಗಳು

0

ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ ದೆಹಲಿ ಸರ್ಕಾರ, ರಾಜಧಾನಿಯಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿದೆ. ಇದಲ್ಲದೆ, ಈ ನಿಯಮ ಉಲ್ಲಂಘಿಸಿದಲ್ಲಿ 500 ರೂಪಾಯಿ ದಂಡ ವಿಧಿಸಲಾಗುವುದು ಎಂದೂ ಎಚ್ಚರಿಕೆ ನೀಡಿದೆ.

ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ನೇತೃತ್ವದಲ್ಲಿ ನಡೆದ ದೆಹಲಿ ಪ್ರಾಕೃತಿಕ ವಿಕೋಪ ನಿರ್ವಹಣಾ ಪ್ರಾಧಿಕಾರದ ಸಭೆಯು ಮಾದರಿ ಪರೀಕ್ಷೆಗಳನ್ನು ಹೆಚ್ಚಿಸಬೇಕು. ಗುಂಪು ಸೇರದಂತೆ ಎಚ್ಚರಿಕೆ ವಹಿಸಬೇಕು ಎಂದು ತೀರ್ಮಾನಿಸಿತು.

ಪ್ರಕರಣಗಳು ಏರುಮುಖವಾಗಿದ್ದರೂ ಶಾಲೆಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ. ಪರಿಣಿತರ ಸಲಹೆ ಆಧರಿಸಿ ಕೋವಿಡ್ ನಿಯಮ ಉಲ್ಲಂಘಿಸುವವರಿಗೆ ಶಿಕ್ಷೆಯನ್ನು ನೀಡಲಾಗುವುದು ಎಂದು ಸರ್ಕಾರ ತಿಳಿಸಿದೆ.

ಶಾಲೆಗಳನ್ನು ಬಂದ್ ಮಾಡಿಸುವುದಿಲ್ಲ, ಆದರೆ ಪ್ರಕರಣ ಪತ್ತೆಯಾದರೆ ತಕ್ಷಣ ವರದಿ ಮಾಡಲು ಸೂಚಿಸಲಾಗಿದೆ. ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತದೆ ಎಂದು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯವರು ತಿಳಿಸಿದ್ದಾರೆ .

ಬೋರಿಸ್ ಜಾನ್ಸನ್ ಇಂದು ಪ್ರಧಾನಿ ಮೋದಿ ಭೇಟಿ

0

ಎರಡು ದಿನಗಳ ಭಾರತ ಪ್ರವಾಸದಲ್ಲಿರುವ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ.

ಇವರು ಬ್ರಿಟನ್ ಮತ್ತು ಭಾರತದ ವ್ಯೂಹಾತ್ಮಕ ರಕ್ಷಣೆ, ರಾಜತಾಂತ್ರಿಕ ಮತ್ತು ಆರ್ಥಿಕ ಸಹಭಾಗಿತ್ವದ ಬಗ್ಗೆ ಆಳವಾದ ಮಾತುಕತೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ಇಂಡೋ-ಪೆಸಿಫಿಕ್‌ನಲ್ಲಿ ಭದ್ರತಾ ಸಹಕಾರವನ್ನು ಹೆಚ್ಚಿಸುವುದು.
ಗುರುವಾರ ತಡರಾತ್ರಿ ದೆಹಲಿಗೆ ಆಗಮಿಸಿದ ಬೋರಿಸ್ ಜಾನ್ಸನ್, ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರನ್ನು ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು.

ಪ್ರಧಾನಿ ಬೋರಿಸ್ ಜಾನ್ಸನ್ ಅವರು ರಾಷ್ಟ್ರಪತಿ ಭವನದಲ್ಲಿ ಔಪಚಾರಿಕ ಸ್ವಾಗತ ಮತ್ತು ನಂತರ ರಾಜ್ ಘಾಟ್‌ನಲ್ಲಿರುವ ಮಹಾತ್ಮ ಗಾಂಧಿಯವರ ಸಮಾಧಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಈ ದಿನವನ್ನು ಪ್ರಾರಂಭಿಸಲಿದ್ದಾರೆ.

ಇನ್ನೂ, ಬೋರಿಸ್ ಜಾನ್ಸನ್ ವಿದೇಶಾಂಗ ವ್ಯವಹಾರಗಳ ಸಚಿವ (ಇಎಎಂ) ಎಸ್ ಜೈಶಂಕರ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಅದೇ ಮಧ್ಯಾಹ್ನ, ಹೈದರಾಬಾದ್ ಹೌಸ್‌ನಲ್ಲಿ ಮಧ್ಯಾಹ್ನ 1 ಗಂಟೆ ಸುಮಾರಿಗೆ ಉಭಯ ಪಕ್ಷಗಳು ಪತ್ರಿಕಾ ಹೇಳಿಕೆ ನೀಡಲಿದ್ದಾರೆ ಎಂದು ತಿಳಿದುಬಂದಿದೆ.

ಶ್ರೀಬಾಲರಾಜ್ ಶಿವಮೊಗ್ಗ ಡಿವೈಎಸ್ಪಿ ಆಗಿ ಅಧಿಕಾರ ಸ್ವೀಕಾರ

0

ಶಿವಮೊಗ್ಗ ಡಿವೈಎಸ್ ಪಿಯಾಗಿ ಬಾಲರಾಜ್ ಅವರು ಇಂದು ಅಧಿಕಾರ ಸ್ವೀಕರಿಸಿದರು. ಬೆಂಗಳೂರಿನ ಸಿಸಿಬಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬಾಲರಾಜ್ ಅವರನ್ನು ಶಿವಮೊಗ್ಗಕ್ಕೆ ವರ್ಗಾವಣೆ ಮಾಡಲಾಗಿದೆ.

ಈ ಹಿಂದೆ ಇವರು ತೀರ್ಥಹಳ್ಳಿಯಲ್ಲಿ ಇನ್ಸ್ ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸಿದ್ದರು.

ಇನ್ನು ಡಿವೈಎಸ್ಪಿ ಆಗಿದ್ದ ಪ್ರಶಾಂತ್ ಮುನ್ನೋಳಿ ಅವರನ್ನು ಚಿತ್ರದುರ್ಗಕ್ಕೆ ವರ್ಗಾವಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.