Sunday, May 17, 2026
Sunday, May 17, 2026
Home Blog Page 162

DC Shivamogga ಡಿಸೆಂಬರ್ 12 & 13, ಶಿವಮೊಗ್ಗದಲ್ಲಿ ಕಂದಾಯ ಇಲಾಖಾ ನೌಕರರಿಂದ ” ಕಂದಾಯೋತ್ಸವ”- ವಿ.ಅಭಿಷೇಕ್

0

DC Shivamogga ಒತ್ತಡದಲ್ಲಿ ಕಾರ್ಯನಿರ್ವಹಿಸುವ ಕಂದಾಯ ಇಲಾಖೆಯ ಅಧಿಕಾರಿ-ಸಿಬ್ಬಂಧಿಗಳು ತಮ್ಮ ದೈನಂದಿನ ಒತ್ತಡದಿಂದ ಹೊರಬಂದು ಕ್ರೀಡೆ, ಮನೋರಂಜನೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸುವುದರಿಂದ ಕಾರ್ಯಕ್ಷೇತ್ರದಲ್ಲಿ ಇನ್ನಷ್ಟು ಹೊಸತನದಿಂದ ಕಾರ್ಯನಿರ್ವಹಿಸಲು ಸಾಧ್ಯವಾಗಲಿದೆ.

ಈ ಕಾರಣದಿಂದಾಗಿ ಇದೇ ಮೊದಲ ಬಾರಿಗೆ ಶಿವಮೊಗ್ಗದಲ್ಲಿ ಡಿಸೆಂಬರ್‌12 ಮತ್ತು 13ರಂದು ಕಂದಾಯ ಇಲಾಖಾ ನೌಕರರು, ಅವರ ಕುಟುಂಬದ ಸದಸ್ಯರಿಗಾಗಿ ಕ್ರೀಡಾಕೂಟ, ಸಾಂಸ್ಕೃತಿಕ ಸ್ಪರ್ಧೆ ಹಾಗೂ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಅಭಿಷೇಕ್‌ವಿ. ಅವರು ಹೇಳಿದರು. ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಕಂದಾಯ ನೌಕರರ ಸಭೆಯ ಅ‍ಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಡಿಸೆಂಬರ್‌12ರಂದು ಪಿ.ಇ.ಎಸ್.‌ಇಂಜಿನಿಯರಿಂಗ್‌ಕಾಲೇಜಿನ ಅಬ್ದುಲ್‌ಕಲಾ ಕ್ರೀಡಾಂಗಣದಲ್ಲಿ ಕ್ರೀಡಾಕೂಟ ನಡೆಯಲಿದ್ದು, ಪುರುಷ ಮತ್ತು ಮಹಿಳೆಯರಿಗೆ ವೈಯಕ್ತಿಕ ಮತ್ತು ಗುಂಪು ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.

ಡಿಸೆಂಬರ್‌13ರಂದು ರಾಜ್ಯ ಸರ್ಕಾರಿ ನೌಕರರ ಸೇವಾ ವಿಕಾಸ ಕೇಂದ್ರದಲ್ಲಿ ಸಂಗೀತ ನೃತ್ಯ ಮುಂತಾದ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದವರು ವಿವರಿಸಿದರು. ಡಿ.12ರಂದು ಬೆಳಿಗ್ಗೆ 08ಗಂಟೆಗೆ ಪಿ.ಇ.ಎಸ್.‌ಇಂಜಿನಿಯರಿಂಗ್‌ಕಾಲೇಜಿನ ಅಬ್ದುಲ್‌ಕಲಾ ಕ್ರೀಡಾಂಗಣದಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ. ಅಪರ ಜಿಲ್ಲಾಧಿಕಾರಿ ಅಭಿಷೇಕ್‌ವಿ. ಅವರು ಕಾರ್ಯಕ್ರಮದ ಅ‍ಧ್ಯಕ್ಷತೆ ವಹಿಸುವರು.

ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಭೂಸ್ವಾಧೀನಾಧಿಕಾರಿ ಸಿದ್ದಲಿಂಗರೆಡ್ಡಿ, ಪ್ರೊಬೇಷನರ್‌ಅಧಿಕಾರಿ ನಾಗೇಂದ್ರಬಾಬು ಕುಮಾರ್‌ಅವರು ಉಪಸ್ಥಿತರಿರುವರು.

ಶಿವಮೊಗ್ಗ ಉಪವಿಭಾಗಾಧಿಕಾರಿ ಜಿ.ಹೆಚ್.ಸತ್ಯನಾರಾಯಣ, ಸಾಗರ ಉಪವಿಭಾಗಾಧಿಕಾರಿ ವೀರೇಶ ಕುಮಾರ್‌ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕುಗಳ ತಹಶೀಲ್ದಾರರು ಮುಖ್ಯ ಅತಿಥಿಗಳಾಗಿ ಆಗಮಿಸಲಿರುವರು. ಡಿ.13ರಂದು ಸಂಜೆ 6ಗಂಟೆಗೆ ನಗರದ ಬಸವನಗುಡಿಯಲ್ಲಿರುವ ಸರ್ಕಾರಿ ನೌಕರರ ಸೇವಾ ವಿಕಾಸ ಕೇಂದ್ರದಲ್ಲಿ ಕಂದಾಯೋತ್ಸವದ ಸಮಾರೋಪ ಹಾಗೂ ಬಹುಮಾನ ವಿತರಣಾ ಸಮಾರಂಭ ನಡೆಯಲಿದೆ.

DC Shivamogga ಈ ಕಾರ್ಯಕ್ರಮವನ್ನು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹನುಮಂತಪ್ಪ ಅವರು ಉದ್ಘಾಟಿಸುವರು. ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧ್ಯಕ್ಷತೆ ವಹಿಸುವರು.

MESCOM ಡಿಸೆಂಬರ್ 11 & 12 ಶಿವಮೊಗ್ಗ ನಗರಕ್ಕೆ ಕುಡಿಯುವ ನೀರಿಲ್ಲ, ಒಳ ಮಂಡಳಿ ಪ್ರಕಟಣೆ

0

MESCOM ಶಿವಮೊಗ್ಗ ನಗರದ ಮಂಡ್ಲಿ ಭಾಗದಲ್ಲಿ ಮೆಸ್ಕಾಂ ತುರ್ತು ನಿರ್ವಹಣಾ ಕಾಮಗಾರಿ ಇರುವುದರಿಂದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ಡಿ. 11 ರಂದು ವಿದ್ಯುತ್ ನಿಲುಗಡೆ ಮಾಡುವುದರಿಂದ ಡಿ.11 ಮತ್ತು 12 ರಂದು ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜು ವ್ಯತ್ಯಯವಾಗುತ್ತಿದ್ದು, ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಕನನೀಸ ಮತ್ತು ಒಳ ಮಂಡಳಿ ಸಹಾಯಕ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.

Department of School Education ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಶಿವಮೊಗ್ಗ ಜಿಲ್ಲೆಗೆ ಸಮಗ್ರ ಚಾಂಪಿಯನ್ ಪಟ್ಟ

0

Department of School Education ಬೆಂಗಳೂರಿನಲ್ಲಿ ಶಾಲಾ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ನಡೆದ ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಶಿವಮೊಗ್ಗ ಜಿಲ್ಲೆಯ 17 ವರ್ಷ ವಯೋಮಿತಿಯೊಳಗಿನ ಪ್ರೌಢಶಾಲಾ ಬಾಲಕ ಮತ್ತು ಬಾಲಕಿಯರು ಎರಡು ದಿನ ನಡೆದ ಕ್ರೀಡಾಕೂಟದಲ್ಲಿ ಭಾಗವಹಿಸಿ, ಅಥ್ಲೆಟಿಕ್ಸ್ ವಿಭಾಗದಲ್ಲಿ ಉತ್ತಮ ಆಟದ ಪ್ರದರ್ಶನ ನೀಡಿ, ಬಾಲಕ ಮತ್ತು ಬಾಲಕಿಯರು ಪ್ರಥಮ, ದ್ವಿತೀಯ ಸ್ಥಾನ ಪಡೆದು ಉತ್ತಮ ಸಾಧನೆಯೊಂದಿಗೆ, ಇದೇ ಮೊದಲ ಬಾರಿಗೆ ಶಿವಮೊಗ್ಗ ಜಿಲ್ಲೆಗೆ ಸಮಗ್ರ ಚಾಂಪಿಯನ್ ತಂದು ಕೊಟ್ಟು ಜಿಲ್ಲೆಗೆ ಮತ್ತು ಇಲಾಖೆಗೆ ಕೀರ್ತಿ ತಂದುಕೊಟ್ಟಿರುತ್ತಾರೆ.
ಬಾಲಕಿಯರ ವಿಭಾಗದಲ್ಲಿ: ಅಮೂಲ್ಯ ತ್ರಿಪಲ್ ಜಂಪ್ ಪ್ರಥಮ, ಸಿರಿ ಕೆ ಜಿ.ಹರ್ಡಲ್ಸ್ ನಲ್ಲಿ ದ್ವಿತೀಯ, ಲಾಂಗ್ ಜಂಪ್ ನಲ್ಲಿ ತೃತೀಯ, ಅಪೂರ್ವ 400 ಮೀಟರ್,ಹರ್ಡಲ್ಸ್ ನಲ್ಲಿ ಪ್ರಥಮ, ಪದ್ಮಾವತಿ ಜಾವಲಿನ್ ಮತ್ತು ಪೋಲೊ ವ್ಯಾಟ್ ನಲ್ಲಿ ಪ್ರಥಮ, ಅನ್ವಿತಾ ಎತ್ತರ ಜಿಗಿತದಲ್ಲಿ ತೃತೀಯ, ಇರಾನ್ ಶೇಕ್ 100ಮೀ, 200ಮೀ ಪ್ರಥಮ, ಲೇಖನ ಸಾಗರ್ 400 ಮೀ,ಹರ್ಡಲ್ಸ್ ದ್ವಿತೀಯ, ವೇದಾ ಹ್ಯಾಮರ್ ಪ್ರಥಮ, ಮಿತಾಲಿ ಎಸ್. ಗುಂಡು ಎಸೆದಲ್ಲಿ ದ್ವಿತೀಯ, 4×100 ರಿಲೇಯಲ್ಲಿ ಅಮೂಲ್ಯ, ಸಿರಿ, ಅಪೂರ್ವ, ಪದ್ಮಾವತಿ ಪ್ರಥಮ ಸ್ಥಾನ ಪಡೆದ ಪ್ರತಿಭಾನ್ವಿತರಾಗಿರುತ್ತಾರೆ.
ಬಾಲಕರ ವಿಭಾಗದಲ್ಲಿ : ಸಂಜಯ್ 100 ಪ್ರಥಮ, 200 ದ್ವಿತೀಯ, ಹರ್ಡಲ್ಸ್ ನಲ್ಲಿ ದ್ವಿತೀಯ ಸ್ಥಾನ, ಲೋಕೇಶ್ ಜಾದವ್ 100ಮೀ ದ್ವಿತೀಯ, ಮೊಹಮದ್ ಆಯಿಲ್ ಹರ್ಡಲ್ಸ್ ನಲ್ಲಿ ಪ್ರಥಮ ಸ್ಥಾನ, ಮಣಿಕಂಠಗೌಡ ಎತ್ತರ ಜಿಗಿತದಲ್ಲಿ ಪ್ರಥಮ, ತ್ರಿಬಲ್ ಜಂಪ್ ನಲ್ಲಿ ದ್ವಿತೀಯ, ಆರೂನ್ ಬಿ. ಎತ್ತರ ಜಿಗಿತದಲ್ಲಿ ದ್ವಿತೀಯ, ಸುಧನ್ವಾ ಹ್ಯಾಮರ್ ಪ್ರಥಮ,ಶರತ್ ಕೆ. ಜೆ. 400ಮೀ ಪ್ರಥಮ, ಸಾಗರ್ ಪೋ ಲೋ ವ್ಯಾಟ್ನಲ್ಲಿ ಪ್ರಥಮ ಸ್ಥಾನ ಪಡೆದು,4×100 ರಿಲೇಯಲ್ಲಿ ಬಾಲಕರು ತೃತೀಯ ಸ್ಥಾನ, ಶಿವಮೊಗ್ಗ ಜಿಲ್ಲೆಯ ಪ್ರತಿಭಾನ್ವಿತರು ರಾಷ್ಟ್ರ ಮಟ್ಟದಲ್ಲಿ ಆಡಲಿದ್ದಾರೆ.ಅಸಂಖ್ಯಾತ ಕ್ರೀಡಾಭಿಮಾನಿಗಳು ಪ್ರೋತ್ಸಾಹದಿಂದ ಹುರಿದುಂಬಿಸಿದರು.
Department of School Education ಉತ್ತರ ಪ್ರದೇಶ ಲಕ್ನೋದಲ್ಲಿ ನಡೆಯುವ 17 ವರ್ಷ ವಯೋಮಿತಿಯೊಳಗಿನ ಬಾಲಕರ ಮತ್ತು ಬಾಲಕಿಯರ ವಿಭಾಗದ ಅಥ್ಲೆಟಿಕ್ಸ್ ನಲ್ಲಿ ಶಿವಮೊಗ್ಗ ಜಿಲ್ಲೆಯಿಂದ 9 ಬಾಲಕಿಯರು,8 ಬಾಲಕರು, ಪ್ರತಿಭಾನ್ವಿತ ಕ್ರೀಡಾಪಟುಗಳು ರಾಷ್ಟ್ರಮಟ್ಟದಲ್ಲಿ ಭಾಗವಹಿಸುತ್ತಿರುವುದು ಹೆಮ್ಮೆಯ ವಿಚಾರ.12 ಬಂಗಾರದ ಪದಕ,8 ಬೆಳ್ಳಿ ಪದಕ, 4 ಕಂಚಿನ ಪದಕ, ಒಟ್ಟು 24ಪದಕಗಳನ್ನು ಪಡೆದು ಜಿಲ್ಲೆಗೆ ಸಮಗ್ರ ಪ್ರಶಸ್ತಿಯನ್ನು ತಂದು ಕೊಟ್ಟಿರುತ್ತಾರೆ.ಅಸಂಖ್ಯಾತ ಕ್ರೀಡಾಭಿಮಾನಿಗಳು ಪ್ರೋತ್ಸಾಹದಿಂದ ಹುರಿದುಂಬಿಸಿದರು. ಕ್ರೀಡಾಪಟುಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಿ ಕ್ರೀಡೆಗೆ ಮೆರಗು ತಂದಿದ್ದಾರೆ.
ಕ್ರೀಡಾ ಪ್ರತಿಭೆಗಳ ಸಾಧನೆಯನ್ನು ಮೆಚ್ಚಿ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಉಪ ನಿರ್ದೇಶಕರಾದ ಮಂಜುನಾಥ್ ಎಸ್.ಆರ್. ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿಗಳಾದ ಪ್ರಕಾಶ್ ಎಂ. ರಾಜ್ಯಮಟ್ಟದಿಂದ ರಾಷ್ಟ್ರ ಮಟ್ಟಕ್ಕೆ ಆಯ್ಕೆ ಆಗಿರುವ ಈ ಪ್ರತಿಭೆಗಳನ್ನು ಇಲಾಖೆ ಮತ್ತು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ವತಿಯಿಂದ ಸಿಹಿ ವಿತರಿಸಿ, ಆತ್ಮೀಯವಾಗಿ ಗೌರವಿಸಿ,ಪ್ರೋತ್ಸಾಹಿಸಲಾಯಿತು.
ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಂಜುನಾಥ ಎಸ್. ಆರ್. ಮಾತನಾಡುತ್ತಾ,ಆಟ ಅಂತ ಬಂದಾಗ ಸೋಲು ಗೆಲುವು ಸಹಜ.ಆದರೆ ಯಾವ ಪಂದ್ಯಾವಳಿಗಳು ಮಕ್ಕಳಲ್ಲಿ ಹೊಸ ಹುರುಪು,ಉತ್ಸಾಹಕ್ಕೆ ಮುನ್ನಡಿ ಬರೆಯುತ್ತವೆ.ಆ ನಿಟ್ಟಿನಲ್ಲಿ ಕ್ರೀಡೆಯು ದೈಹಿಕವಾಗಿ ಸದೃಢವಾಗಿಸುವುದರ ಜೊತೆಗೆ ಮಾನಸಿಕ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ. ಸತತ ಅಭ್ಯಾಸ, ಪರಿಶ್ರಮ,ನಿತ್ಯ ಸಾಧನೆ ಇರುವವರಿಗೆ ಮಾತ್ರ ಕ್ರೀಡೆ ಒಲಿಯುತ್ತದೆ ಎಂದರು. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಪ್ರೌಢಶಾಲಾ ಬಾಲಕ, ಬಾಲಕಿರ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ಮಾಡಿರುವ ತಾವುಗಳು, ರಾಷ್ಟ್ರ ಮಟ್ಟದಲ್ಲಿಯೂ ಉತ್ತಮ ಸಾಧನೆ ಮಾಡಿ ಎಂದು ಕ್ರೀಡಾ ಪಟುಗಳಿಗೆ ಶುಭ ಹಾರೈಸಿದರು.
ಈ ಸಂಧರ್ಭದಲ್ಲಿ ಯುವಜನ ಸೇವಾ ಕ್ರೀಡಾ ಇಲಾಖೆಯ ಅಥ್ಲೆಟಿಕ್ಸ್ ತರಬೇತುದಾರ ಬಾಳಪ್ಪ ಮಾನೆ, ಚಂದ್ರಕಾಂತ್,ವಿನಯ್ ಹೆಗಡೆ, ಆಂಜಿನಪ್ಪ,ರಾ. ಹ. ತಿಮ್ಮೇನಹಳ್ಳಿ, ಕಾಳನಾಯ್ಕ, ಮಹೇಶ್ ಉಲ್ಲತ್ತಿ, ಜೋಶಿ ಇನ್ನು ಮುಂತಾದವರು ಉಪಸ್ಥಿತರಿದ್ದರು.

Good Luck Care Center ದಾನದಿಂದ ತೃಪ್ತಿ ಸಿಗುತ್ತದೆ- ಹೇಮಾ ಬಿ.ಜಿ.ಗೋಣೂರು

0

ನಾವು ಮಾಡಿದ ಸೇವೆ ದಾನ ಧರ್ಮ ನಮಗೆ ಒಂದಲ್ಲ ಒಂದು ರೀತಿಯಿಂದ ನಮ್ಮ ಕುಟುಂಬವನ್ನು ಕಾಪಾಡುತ್ತದೆ ದಾನದಿಂದ ತೃಪ್ತಿ ಸಿಗುತ್ತದೆ ಎಂದು. ಸಾಗರದ ಹೇಮಾ ಬಿಜಿ ಗೋಣೂರು ಅಭಿಮತ ವ್ಯಕ್ತ ಪಡಿಸಿದರು. ಅವರು ಈ ದಿನ ನಗರದ ಗುಡ್ ಲಕ್ ಆರೈಕೆ ಕೇಂದ್ರ ಅನಾಥಾಶ್ರಮ ದಲ್ಲಿ ಆಶ್ರಮದ ಕಟ್ಟಡ ಕಾಮಗಾರಿಗೆ 1 ಲಕ್ಷ ರೂ ದೇಣಿಗೆ ನೀಡಿ ಮಾತನಾಡಿದರು ದಾನಿಗಳ ಕೈ ಯಾವತ್ತು ಸೋಲುವುದಿಲ್ಲ ನಾವು ಮಾಡಿದ ದಾನದಿಂದ ಅದರ ನಾಲ್ಕು ಪಟ್ಟು ಫಲ ನಮಗೆ ಲಭಿಸಿದೆ ಮನುಕುಲದ ಸೇವೆಗಳನ್ನು ಮಾಡುತ್ತಿರುವ ಸಂಸ್ಥೆಗಳಿಗೆ ಮಾತ್ರ ನಮ್ಮ ಕುಟುಂಬದವರು ದಾನವನ್ನು ಮಾಡುತ್ತಾ ಬಂದಿದ್ದೇವೆ ಈಗಾಗಲೇ ಅಂದರ ವಿಕಾಸ ಕೇಂದ್ರ ಹಾಗೂ ಉತ್ತರ ಕನ್ನಡ ಜಿಲ್ಲೆಯ ಅನಾಥಾಶ್ರಮಗಳಿಗೆ ಈಗ ಈ ಗುಡ್ ಲಕ್ ಆರೈಕೆ ಕೇಂದ್ರಕ್ಕೆ ದೇಣಿಗೆ ನೀಡಿದ್ದೇವೆ ಆರೈಕೆ ಕೇಂದ್ರದ ಚಟುವಟಿಕೆಗಳನ್ನ ಗಮನಿಸಿ ಅವರು ಮಾಡುತ್ತಿರುವ ಗುಡ್ ಲಕ್ ಆರೈಕೆ ಕೇಂದ್ರದ ನಿಸ್ವಾರ್ಥ ಮಾನವೀಯ ಸೇವೆಗಳು ಸಮಾಜಕ್ಕೆ ಮಾದರಿಯಾಗಿದೆ ಅನಾಥರ ಬುದ್ಧಿಮಾಂದ್ಯ ರ ಹಾಗೂ ಅಶಕ್ತರ ಆರೈಕೆ ಮಾಡುವ ಕೆಲಸ ಸಾಮಾನ್ಯ ವಾದುದಲ್ಲ. ನಾವು ವಿದೇಶದಲ್ಲಿ ವಾಸಿಸಿದರು. Good Luck Care Center ಸಹ ವರ್ಷಕ್ಕೆ ಒಂದು ಬಾರಿ ಬಂದಾಗ ಈ ರೀತಿಯ ಮಾನವೀಯ ಸೇವೆಗಳಿಗೆ ಕೈಜೋಡಿಸುತ್ತೇವೆ ಹಾಗೆ ಸರಿಯಾದ ಫಲಾನುಭವಿಗಳನ್ನು ಗುರುತಿಸಿ ನೀಡುವಂತಹ ದಾನ ಭಗವಂತನಿಗೆ ಸಲ್ಲುತ್ತದೆ ಎಂದು ನುಡಿದರು. ಗುಡ್ ಲಕ್ ಆರೈಕೆ ಕೇಂದ್ರದ ಅಧ್ಯಕ್ಷರಾದ ರವೀಂದ್ರನಾಥ್ ಐತಾಳ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ಈ ನಮ್ಮ ಆಶ್ರಮ ದಾನಿಗಳ ಸಹಾಯದಿಂದ ನಿರ್ಮಾಣವಾಗುವುದರ ಜೊತೆಗೆ ನಮ್ಮ ಸಂಸ್ಥೆಯ ಪದಾಧಿಕಾರಿಗಳು ಪ್ರಾಮಾಣಿಕವಾಗಿ ಕೈಜೋಡಿಸಿ ಸಂಸ್ಥೆ ವ್ಯವಸ್ಥಿತವಾಗಿ ನಡೆಯಲು ಸಹಕಾರ ನೀಡಿದ್ದಾರೆ. ಹಾಗೆ ಹಿರಿಯ ನಾಗರೀಕರ ಹಗಲು ಆರೈಕೆ ಕೇಂದ್ರ ಮತ್ತು. ಅನ್ನಪೂರ್ಣ ನಿತ್ಯ ಪ್ರಸಾದ ಯೋಜನೆಗೆ ರೋಟರಿ ,ಫ್ರೆಂಡ್ಸ್ ಸೆಂಟರ್, ಇನ್ನರ್ ವೀಲ್ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ನೆರವು ಮರೆಯಲು ಸಾಧ್ಯವಿಲ್ಲ ಮತ್ತು ಇಲ್ಲಿ ವಾಸಿಸುವ ನಿವಾಸಿಗಳಿಗೆ ವೈದ್ಯಕೀಯ ಚಿಕಿತ್ಸೆಯ ಅಗತ್ಯವಿರುವುದರಿಂದ ಉಚಿತ ಸೇವಾ ಮನೋಭಾವದ ಸ್ವಯಂಸೇವಕ ವೈದ್ಯರ ನೆರವು ಅಗತ್ಯವಿದೆ ಇದನ್ನು ಪರಿಹರಿಸುವ ಪ್ರಯತ್ನ ನಗರದ ಸೇವಾಸಕ್ತ ಸಂಸ್ಥೆಯು ನಡೆಸಿಕೊಡಬೇಕು ಹಾಗೆ ನಗರದಲ್ಲಿರುವ ದಾನಿಗಳು ನಮ್ಮ ಕೇಂದ್ರವನ್ನು ಸಮಯವಿದ್ದಾಗ ಭೇಟಿ ಮಾಡಿ ಪ್ರೋತ್ಸಾಹಿಸುವ ಕೆಲಸ ಮಾಡಬೇಕಾಗಿ ವಿನಂತಿಸಿಕೊಂಡರು. ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಹಿರೇಮಠ ಉಪಾಧ್ಯಕ್ಷರಾದ ಶಿವಪ್ಪಗೌಡ. ನಿರ್ದೇಶಕರಾದ ಜಿ. ವಿಜಯಕುಮಾರ್. ಅನುಪಮಾ ಹೆಗಡೆ. ಶ್ರೀನಿವಾಸ್. ಬಿಂದು ವಿಜಯ ಕುಮಾರ್. ಹಾಗೂ ಆಶ್ರಮವಾಸಿಗಳು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು

DC Shivamogga ಶಿವಮೊಗ್ಗ ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಕಂಡು ಬರುವ ಮಂಗನಕಾಯಿಲೆ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ನಿರ್ದೇಶನ- ಗುರುದತ್ತ ಹೆಗಡೆ

0

DC Shivamogga ತೀರ್ಥಹಳ್ಳಿ, ಹೊಸನಗರ, ಸಾಗರ ಮಲೆನಾಡು ತಾಲೂಕುಗಳು ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಪ್ರಸಕ್ತ ಬೇಸಿಗೆಯಲ್ಲಿ ಕಂಡುಬರುವ ಮಂಗನಕಾಯಿಲೆಯ ನಿಯಂತ್ರಣಕ್ಕೆ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್‌, ಆರೋಗ್ಯ ಇಲಾಖೆ ಹಾಗೂ ಇತರೆ ಇಲಾಖೆಗಳ ಸಮನ್ವಯದೊಂದಿಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಎಲ್ಲಾ ಪ್ರಾಥಮಿಕ ಕೇಂದ್ರಗಳ ವೈದ್ಯಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಹೇಳಿದರು.

ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ಆರೋಗ್ಯ ಇಲಾಖೆ ವತಿಯಿಂದ ಅನುಷ್ಟಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳ ಕುರಿತು ಏರ್ಪಡಿಸಲಾಗಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಮಂಗನ ಕಾಯಿಲೆ ಬಾದಿತ ಪ್ರದೇಶಗಳಲ್ಲಿ ಉಣುಗುಗಳ ನಿಯಂತ್ರಣ ಕುರಿತು ಸರ್ವೇಕ್ಷಣೆ, ಮಂಗಗಳ ಅಸಹಜ ಸಾವಿನ ಕುರಿತು ಸರ್ವೇಕ್ಷಣೆ ಹಾಗೂ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಜ್ವರ ಸಮೀಕ್ಷೆ ಮಾಡುವಂತೆ ಮತ್ತು ರಕ್ತದ ಮಾದರಿಯನ್ನು ಸಂಗ್ರಹಿಸಿ ವರದಿಯನ್ನಾಧರಿಸಿ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದವರು ನುಡಿದರು.

ಮಲೆನಾಡು ಭಾಗಗಳ ಅರಣ್ಯ ಪ್ರದೇಶಗಳಲ್ಲಿ ಸುತ್ತಾಡುವ ಸಾರ್ವಜನಿಕರು, ರೈತರು ಸುರಕ್ಷತಾ ಕ್ರಮವಾಗಿ ಆರೋಗ್ಯ ಇಲಾಖೆಯು ಉಚಿತವಾಗಿ ಒದಗಿಸುವ ಡೀಪಾ ತೈಲವನ್ನು ಲೇಪಿಸಿಕೊಳ್ಳುವಂತೆ ಸೂಚಿಸಿದ ಅವರು, ಜ್ವರ, ಶೀತ, ತಲೆನೋವು, ವಾಂತಿ, ಮೈಕೈ ನೋವು, ನವೆ ಮುಂತಾದ ಅಹಜವಾಗಿರುವ ಲಕ್ಷಣಗಳು ಕಂಡುಬಂದಲ್ಲಿ ಸಾರ್ವಜನಿಕರು ತಕ್ಷಣದಲ್ಲಿ ಸ್ಥಳೀಯ ವೈದ್ಯಾಧಿಕಾರಿಗಳನ್ನು ಸಂಪರ್ಕಿಸಿ ಸಕಾಲಿಕವಾಗಿ ಸೂಕ್ತ ಚಿಕಿತ್ಸೆಪಡೆದುಕೊಳ್ಳುವಂತೆ ಅವರು ಸೂಚಿಸಿದರು.

ಯಾವುದೇ ವ್ಯಕ್ತಿ ಸೋಂಕಿಗೆ ತುತ್ತಾಗಿರುವ ಲಕ್ಷಣಗಳು ಕಂಡುಬಂದಲ್ಲಿ ಅಂತಹ ವ್ಯಕ್ತಿಯ ರಕ್ತದ ಮಾದರಿಗಳನ್ನು ಸಂಗ್ರಹಿಸಿ, ದಿನದ 24ಗಂಟೆಯೊಳಗಾಗಿ ವರದಿ ಪಡೆದು, ಸೂಕ್ತ ಚಿಕಿತ್ಸೆ ನೀಡುವಂತೆ ಎಲ್ಲಾ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದ ಅವರು, ಸೋಂಕಿನ ನಿಯಂತ್ರಣದಲ್ಲಿ ಸ್ಥಳೀಯರ ಹಾಗೂ ಆಶಾ, ಅಂಗನವಾಡಿ ಕಾರ್ಯಕರ್ತೆಯರ ಸಹಕಾರ ಪಡೆದುಕೊಳ್ಳಬೇಕು ಎಂದ ಅವರು, ಡೀಪಾ ತೈಲವು ಮಂಗನ ಕಾಯಿಲೆ ಮಾತ್ರವಲ್ಲ ಮಲೇರಿಯಾ ಮತ್ತಿತರ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೂ ಸಹಕಾರಿಯಾಗಲಿದೆ ಎಂದರು.

ಮಂಗನ ಕಾಯಿಲೆಯ ನಿಯಂತ್ರಣ ಕ್ರಮದ ಭಾಗವಾಗಿ ಸ್ಥಳೀಯ ಜನರಲ್ಲಿ ಅರಿವು ಮೂಡಿಸಬೇಕು. ಅದಕ್ಕಾಗಿ ಗ್ರಾಮ ಪಂಚಾಯಿತಿ, ಆಶಾ, ಅಂಗನವಾಡಿ ಕಾರ್ಯಕರ್ತೆಯರ ಸಹಕಾರ ಪಡೆದುಕೊಳ್ಳಬೇಕು. ಎಲ್ಲಾ ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಮ್ಮ ವ್ಯಾಪ್ತಿಯೊಳಗಿನ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಮಕ್ಕಳಲ್ಲಿ ಅರಿವು ಮೂಡಿಸಬೇಕು. ಗ್ರಾಮೀಣ ಜನರೂ ಸಹ ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು. ಅಹಜವಾಗಿ ಮಂಗಗಳ ಸಾವು ಕಂಡುಬಂದಲ್ಲಿ ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಗೆ ಕೂಡಲೇ ಮಾಹಿತಿ ನೀಡಿ ಸಹಕರಿಸಿ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಎನ್.‌ಹೇಮಂತ್‌ ಅವರು ಹೇಳಿದ್ದಾರೆ. ಎಲ್ಲಾ ತಾಲೂಕುಗಳ ವೈದ್ಯಾಧಿಕಾರಿಗಳು ತಮ್ಮ ಕಾರ್ಯಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ತಾಲೂಕು ಮಟ್ಟದ ಅಧಿಕಾರಿಗಳ ಉಪಸ್ಥಿತಿಯಲ್ಲಿ ಸಭೆಗಳನ್ನು ಕರೆದು, ಅಗತ್ಯ ಕ್ರಮಗಳನ್ನು ನಿರ್ವಹಿಸಲು ಇಲಾಖೆಯ ಅಧೀನ ಅಧಿಕಾರಿ-ಸಿಬ್ಬಂಧಿಗಳಿಗೆ ಸೂಚನೆ ರವಾನಿಸಬೇಕು ಎಂದ ಅವರು, ಸಮಸ್ಯಾತ್ಮಕ ಪ್ರದೇಶಗಳನ್ನು ಗುರುತಿಸಿ, ವಿಶೇಷ ಗಮನಹರಿಸುವ ಮೂಲಕ ಆರೋಗ್ಯ ಇಲಾಖೆಯ ಸಿಬ್ಬಂಧಿಗಳು ಯಾವುದೇ ಸಾವು-ನೋವುಗಳು ಸಂಭವಿಸದಂತೆ ಕ್ರಮ ವಹಿಸಬೇಕು. ಕಾಯಿಲೆಯ ನಿಯಂತ್ರಣಕ್ಕೆ ಅಗತ್ಯವಿರುವ ಅನುದಾನವನ್ನು ಬಿಡುಗಡೆಗೊಳಿಸುವುದಾಗಿ ಸೂಚಿಸಿದರು.

ಜಿಲ್ಲೆಯಲ್ಲಿ ಬಾಣಂತಿ ಸಾವಿನ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಅದಕ್ಕೆ ಸೂಕ್ತ ಕಾರಣಗಳನ್ನು ಗುರುತಿಸಿ, ನಿಯಂತ್ರಣ ಕ್ರಮ ಅನುಸರಿಸಬೇಕಾದ ಅಗತ್ಯವಿದೆ. ಆದ್ದರಿಂದ ಜಿಲ್ಲೆಯಲ್ಲಿ ಕಳೆದ ಮೂರು ತಿಂಗಳಲ್ಲಿ ಮೃತರಾದ ಗರ್ಭಿಣಿ, ಬಾಣಂತಿ ಸಾವಿನ ಪ್ರಕರಣಗಳ ಕುರಿತು ತಜ್ಞ ವೈದ್ಯಾಧಿಕಾರಿಗಳ ತಂಡವನ್ನು ರಚಿಸಿ, ಪರಿಶೀಲನೆ ನಡೆಸಿ, ಮುಂದಿನ 15ದಿನಗಳೊಳಗಾಗಿ ವರದಿ ನೀಡುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು – ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಅವರು ತಿಳಿಸಿದ್ದಾರೆ. ಕಳೆದ ಜನವರಿ ಮಾಹೆಯಿಂದೀಚೆಗೆ ಜಿಲ್ಲೆಯಲ್ಲಿ 7380ರಕ್ತದ ಮಾದರಿಗಳನ್ನು ಪರೀಕ್ಷಿಸಿದ್ದು, 76ಪ್ರಕರಣಗಳನ್ನು ಗುರುತಿಸಿ, ಸಕಾಲಿಕವಾಗಿ ಚಿಕಿತ್ಸೆ ನೀಡಲಾಗಿದೆ. ಎರಡು ಜೀವಹಾನಿ ಪ್ರಕರಣಗಳು ದಾಖಲಾಗಿವೆ. ಅಸಹಜವಾಗಿ 185 ಮಂಗಗಳ ಸಾವನ್ನೂ ಗುರುತಿಸಿ, ಎಚ್ಚರಿಕೆ ಕ್ರಮ ವಹಿಸಲಾಗಿದೆ. ಅಲ್ಲದೆ ಸರ್ಕಾರದ ಮಾರ್ಗಸೂಚಿಯಂತೆ ಶಂಕಿತ ಪ್ರಕರಣಗಳು ಕಂಡುಬಂದಲ್ಲಿ ಜಿಲ್ಲಾ ಮೆಗ್ಗಾನ್‌ಬೋಧನಾ ಆಸ್ಪತ್ರೆ, ಸುಬ್ಬಯ್ಯ ಮೆಡಿಕಲ್‌ಕಾಲೇಜು ಮತ್ತು ಕೆ.ಎಂ.ಸಿ. ಮಣಿಪಾಲ್‌ನಲ್ಲಿ ಒಳರೋಗಿಯಾಗಿ ದಾಖಲಾದ ಪ್ರಕರಣಗಳಿಗೆ ಉಚಿತವಾಗಿ ಚಿಕಿತ್ಸೆಯನ್ನು ನೀಡಲು ವ್ಯವಸ್ಥೆ ಮಾಡಲಾಗಿದೆ ಎಂದವರು ತಿಳಿಸಿದರು.

ಜಿಲ್ಲಾಡಳಿತವು ಅರಣ್ಯ, ಆರೋಗ್ಯ, ಕಂದಾಯ, ಪಶುಸಂಗೋಪನೆ, ಪಂಚಾಯತ್‌ರಾಜ್‌ಇಲಾಖೆಗಳ ಸಹಯೋಗದೊಂದಿಗೆ ಎಲ್ಲಾ ರೀತಿಯ ಮುಂಜಾಗ್ರತಾ ನಿಯಂತ್ರಣ ಕ್ರಮ ವಹಿಸಲಾಗಿದೆ ಎಂದ ಅವರು ಮಂಗನಕಾಯಿಲೆಯನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದೆ. ಈ ನಿಯಂತ್ರಣ ಕಾರ್ಯದಲ್ಲಿ ನಿರ್ಲಕ್ಷ್ಯ ವಹಿಸುವ ವೈದ್ಯಾಧಿಕಾರಿಗಳ ವಿರುದ್ಧ ಕ್ರಮ ಅನಿವಾರ್ಯವಾಗಲಿದೆ ಎಂದವರು ತಿಳಿಸಿದರು.

DC Shivamogga ಇದೇ ಸಂದರ್ಭದಲ್ಲಿ ಪ್ರಸಕ್ತ ಸಾಲಿನ ಪಲ್ಸ್‌ಪೋಲಿಯೋ ಕಾರ್ಯಕ್ರಮದ ಮೊದಲ ಸುತ್ತಿನ ಲಸಿಕಾ ಆಂದೋಲನವು ಡಿಸೆಂಬರ್‌21ರ ಭಾನುವಾರದಂದು ಬೆಳಿಗ್ಗೆ 8 ರಿಂದ ಸಂಜೆ 5ಗಂಟೆಯವರೆಗೆ ಜಿಲ್ಲೆಯಾದ್ಯಂತ ನಡೆಯುತ್ತಿದ್ದು, ಕಾರ್ಯಕ್ರಮದ ಯಶಸ್ಸಿಗೆ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ ಎಂದರು.
ಜಿಲ್ಲೆಯಾದ್ಯಂತ 5ವರ್ಷದೊಳಗಿನ 1,23,338 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದ್ದು, 1016ಬೂತ್‌ಗಳನ್ನು ತೆರೆಯಲು ಸಿದ್ದತೆ ಮಾಡಿಕೊಳ್ಳಲಾಗಿದೆ.

1905ತಂಡಗಳನ್ನು ನೇಮಿಸಿದ್ದು, 193ಜನರನ್ನು ಉಸ್ತುವಾರಿಗಾಗಿ ನಿಯೋಜಿಸಲಾಗಿದೆ. ಈ ಮಹತ್ವದ ಕಾರ್ಯದಲ್ಲಿ ಭಾಗವಹಿಸುವ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ತರಬೇತಿ ನೀಡಲು ಸೂಚಿಸಲಾಗಿದೆ ಎಂದರು. ಈ ಲಸಿಕಾ ಆಂದೋಲನ ನಡೆಯಲಿರುವ ಅವಧಿಯಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು ತಮ್ಮ ಕಾರ್ಯಕ್ಷೇತ್ರದ ವ್ಯಾಪ್ತಿಯಲ್ಲಿನ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳ ಮಕ್ಕಳಿಗೆ ಲಸಿಕೆ ಹಾಕಲು ಮಾಹಿತಿ ನೀಡಿ, ಮಕ್ಕಳನ್ನು ಕರೆತಂದು ಲಸಿಕೆ ಹಾಕಿಸುವಲ್ಲಿ ಶ್ರಮಿಸುವಂತೆ ಸೂಚಿಸಿದ ಅವರು, ನಿಗಧಿಪಡಿಸಲಾಗಿರುವ ದಿನಕ್ಕೂ ಮುನ್ನವೇ ಜನರಲ್ಲಿ ಅರಿವು ಮೂಡಿಸುವಂತೆ ಸಲಹೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.‌ಹೇಮಂತ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಟರಾಜ್‌, ಡಾ|| ನಾಗರಾಜ್‌ನಾಯ್ಕ್‌, ಡಾ|| ಸಿದ್ಧನಗೌಡಪಾಟೀಲ್‌, ಡಾ|| ಮಲ್ಲಪ್ಪ, ಡಾ|| ಸ್ಮೃತಿ ಸಿ.ರಾಜ್‌, ಡಾ|| ಅನುಷಾ ಜಿ.ಕೆ., ಡಾ|| ಶಾಂತಕುಮಾರ್‌, ಡಾ|| ಪ್ರಶಾಂತ್‌, ಡಾ|| ನಾರಾಯಣ್‌ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕುಗಳ ವೈದ್ಯಾಧಿಕಾರಿಗಳು, ಆರೋಗ್ಯ ಇಲಾಖೆಯ ಅಧಿಕಾರಿ ಸಿಬ್ಬಂಧಿಗಳು ಉಪಸ್ಥಿತರಿದ್ದರು.

MESCOM ಶಿಕಾರಿಪುರ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

0

MESCOM ಶಿಕಾರಿಪುರ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ದಿನಾಂಕ 11.12.2025 ರಂದು ಬೆಳಿಗ್ಗೆ11.00 ರಿಂದ 01.00 ಗಂಟೆಯವರೆಗೆ ಜನಸಂಪರ್ಕ ಸಭೆ ನಡೆಯಲ್ಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದಾರೆ.

ಈ ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ತಿಳಿಸಿದೆ.

ಸಂಪರ್ಕಿಬಹುದಾದ ದೂರವಾಣಿಸಂಖ್ಯೆ;.9448289519

Shiralakoppa Municipality ಬೀದಿ ನಾಯಿಗಳ ಕಾಟ ನಿಯಂತ್ರಣಕ್ಕೆ ಶಿರಾಳಕೊಪ್ಪ ಪುರಸಭೆಯಿಂದ ಕ್ರಮ ಕೈಗೊಂಡ ಮಾಹಿತಿ

0

Shiralakoppa Municipality ಶಿರಾಳಕೊಪ್ಪ ಪುರಸಭೆ ವ್ಯಾಪ್ತಿಯಲ್ಲಿನ ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಕ್ರೀಡಾ ಸಂರ್ಕೀಣಗಳು, ಬಸ್ ನಿಲ್ದಾಣಗಳು, ರೈಲ್ವೆ ನಿಲ್ದಾಣಗಳ ಆವರಣದಲ್ಲಿ ಬೀದಿ ನಾಯಿಗಳು ವಾಸವಿದ್ದಲ್ಲಿ ಅದರ ಸಂಖ್ಯೆಯನ್ನು ಲೆಕ್ಕ ಮಾಡಿ ಲಿಖಿತವಾಗಿ ಶಿಕಾರಿಪುರ ಪುರಸಭೆಯ ಮುಖ್ಯಾಧಿಕಾರಿಗಳಿಗೆ ತಿಳಿಸುವುದು.

ಸಂಸ್ಥೆಯ ಆವರಣದಲ್ಲಿ ಬೀದಿನಾಯಿಗಳ ಉಪಟಳ ತಡೆಯಲು ಹಾಗೂ ಅವುಗಳ ಪ್ರವೇಶ ನಿಯಂತ್ರಿಸಲು ಕ್ರಮ ವಹಿಸುವುದು. ನಗರ ಸ್ಥಳೀಯ ಸಂಸ್ಥೆಯಿಂದ ಬೀದಿ ನಾಯಿಗಳನ್ನು ಸ್ಥಳಾಂತರಿಸಲು ಸಹಕರಿಸಲು ಹಾಗೂ ಅವುಗಳ ಪ್ರವೇಶ ನಿರ್ಭಂದಿಸುವುದನ್ನು ಮೇಲ್ವಿಚಾರಣೆ ಮಾಡಲು ಸಂಸ್ಥೆಯ ವತಿಯಿಂದ ಒಬ್ಬ ಜವಾಬ್ಧಾರಿಯುವ ನೌಕರರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡುವುದು. ಸಂಸ್ಥೆಯ ವ್ಯಾಪ್ತಿಯಲ್ಲಿ ಪುನಃ ನಾಯಿಗಳು ವಾಸ ಮಾಡಲು ಅವಕಾಶ ಕೊಟ್ಟಲ್ಲಿ ಸರ್ವೋಚ್ಛ ನ್ಯಾಯಾಲಯದ ನಿರ್ದೇಶನದಂತೆ ಅವನ್ನು ಸ್ಥಳಾಂತರಿಸುವ ವೆಚ್ಛವನ್ನು ಆ ಸಂಸ್ಥೆಯಿಂದಲೇ ವಸೂಲಿ ಮಾಡಲಾಗುವುದು.

ಸರ್ವೋಚ್ಛ ನ್ಯಾಯಾಲಯದ ಆದೇಶವನ್ನು ಉಲ್ಲಂಘನೆ ಮಾಡಿದ್ದಲ್ಲಿ ನ್ಯಾಯಾಲಯದ ಆದೇಶದಂತೆ ಅವರ ವಿರುದ್ಧ ಕಾನೂನು ಕ್ರಮ ವಹಿಸಲಾಗುವುದು ಎಂದು ಶಿರಾಳಕೊಪ್ಪ ಪುರಸಭೆಯ ಆಡಳಿತಾಧಿಕಾರಿಗಳು ಹಾಗೂ ಉಪವಿಭಾಗಾಧಿಕಾರಿಗಳು ತಿಳಿಸಿದ್ದಾರೆ.

Karnataka Maratha Communities Development Corporation ಹೊಲಿಗೆಯಂತ್ರ ವಿತರಣೆ : ಮರಾಠಾ ಅಭಿವೃದ್ದಿ ನಿಗಮದಿಂದ ಯೋಜನೆಯ ಪ್ರಕಟಣೆ

0

Karnataka Maratha Communities Development Corporation ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮವು 2025-26ನೇ ಸಾಲಿನ ಹೊಲಿಗೆ ಯಂತ್ರ ವಿತರಣಾ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದ್ದು, ಮರಾಠ ಪ್ರವರ್ಗ -3ಬಿ ಅಡಿಯಲ್ಲಿ 2ಎ ಯಿಂದ 2ಎಫ್ ವರೆಗೆ ಬರುವ ಸಮುದಾಯಕ್ಕೆ ಸೇರಿದ 18 ರಿಂದ 55 ವರ್ಷ ವಯೋಮಿತಿ ಹೊಂದಿದವರಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಡಿ 06 ರಿಂದ ಡಿ. 20 ರವರೆಗೆ ವಿಸ್ತರಿಸಲಾಗಿದೆ.

ಅರ್ಜಿದಾರರು ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ 3ಬಿಯಲ್ಲಿ ಪಡೆದಿರಬೇಕು . ಒಂದು ಕುಟುಂಬದಲ್ಲಿ ಒಬ್ಬ ಸದಸ್ಯರನ್ನು ಮಾತ್ರ ಈ ಸೌಲಭ್ಯಕ್ಕೆ ಪರಿಗಣಿಸಲಾಗುವುದು.

ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ರೂ. 98,000/- ಮತ್ತು ನಗರ ಪ್ರದೇಶದವರಿಗೆ ರೂ. 1.20 ಲಕ್ಷ ರೂ.ಗಳನ್ನು ಮೀರಬಾರುದು ಅಂಗವಿಕಲ ಮಹಿಳೆಯರಿಗೆ ಶೇ.5% ರಷ್ಟು, ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33% ಹಾಗೂ ತೃತೀಯ ಲಿಂಗಿಗಳಿಗೆ ಶೇ.1% ರಷ್ಟನ್ನು ಮೀಸಲಿರಿಸಿದೆ. ವಿಧವೆಯರಿಗೆ, ಪರಿತ್ಯಕ್ತ ಮಹಿಳೆಯರಿಗೆ, ಹೆಚ್.ಐ.ವಿ. ಪೀಡಿತರಿಗೆ 35 ವರ್ಷ ವಯೋಮಿತಿ ಮೀರಿರಬಾರದು. ಅವಿವಾಹಿತ ಮಹಿಳೆಯರಿಗೆ ಶೇ.2ರಷ್ಟನ್ನು ಮೀಸಲಿರಿಸಿದೆ.

ನಿರ್ದೇಶಕರ ಮಂಡಳಿಯ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯಬಯಸುವವರೂ ಸಹ ಆನ್‌ಲೈನ್‌ನಲ್ಲಿ ಪ್ರತ್ಯೇಕವಾಗಿ ಅರ್ಜಿಯನ್ನು ಸಲ್ಲಿಸುವುದು, ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸುವುದು.

ಆಸಕ್ತರು ಸೇವಾಸಿಂಧು ಪೋರ್ಟಲ್‌ನ ಗ್ರಾಮ ಒನ್/ ಬೆಂಗಳೂರು ಒನ್/ ಕರ್ನಾಟಕ ಒನ್ ನಾಗರೀಕ ಸೇವಾಕೇಂದ್ರಗಳಲ್ಲಿ ಡಿ.20 ರೊಳಗಾಗಿ ಅರ್ಜಿ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

Karnataka Maratha Communities Development Corporation ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ www.kmcdc.karnataka.gov.in ರಲ್ಲಿ ಹಾಗೂ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಮಾರಾಠ ಸಮುದಾಯ ಅಭಿವೃದ್ಧಿ ನಿಗಮ, ಭಾಗ್ಯನಿಲಯ, ಭಂಡಾರಿ ಗ್ಯಾಸ್ ಏಜೆನ್ಸಿ ಎದುರು, 1ನೇ ತಿರುವು, ಗಾಂಧಿನಗರ, ಶಿವಮೊಗ್ಗ, ದೂ.ಸಂ.: 08182-229634 ನ್ನು ಸಂಪರ್ಕಿಸುವುದು.

MESCOM ಡಿಸೆಂಬರ್ 11, ಶಿವಮೊಗ್ಗದ ಆರ್ ಎಂ ಎಲ್ ನಗರ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

0

MESCOM ಶಿವಮೊಗ್ಗ ಎಂ.ಆರ್.ಎಸ್. ವಿದ್ಯುತ್ ಸ್ವೀಕರಣಾ ಕೇಂದ್ರದ 110 ಕೆವಿ ಲೈನ್‌ನಲ್ಲಿ 3ನೇ ತ್ರೆöÊಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು, ಡಿ. 11 ರಂದು ಬೆಳಗ್ಗೆ 9.00 ರಿಂದ ಮಧ್ಯಾಹ್ನ 3.00ರವರೆಗೆ ನಗರ ಉಪವಿಭಾಗ 2 ರ ಘಟಕ 5 ವ್ಯಾಪ್ತಿಗೆ ಬರುವ ಆರ್.ಎಂ.ಎಲ್. ನಗರ 1ನೇ ಮತ್ತು 2ನೇ ಹಂತ, ಎಲ್.ಎಲ್.ಆರ್. ರಸ್ತೆ, ಜೆ.ಸಿ.ನಗರ, ಖಾಸಗಿ ಮತ್ತು ಸರ್ಕಾರಿ ಬಸ್ ನಿಲ್ದಾಣ, ಆನಂದ್‌ರಾವ್ ಬಡಾವಣೆ, ಮಂಜುನಾಥ ಬಡಾವಣೆ, ಟಿಪ್ಪುನಗರ, ಮಿಳಘಟ್ಟ, ಅಣ್ಣಾನಗರ ಸುತ್ತಮುತ್ತ, MESCOM ಗೋಪಿಶೆಟ್ಟಿಕೊಪ್ಪ, ಜಿ.ಎಸ್. ಕ್ಯಾಸ್ಟಿಂಗ್ ಫ್ಯಾಕ್ಟರಿ, ಸಿದ್ದೇಶ್ವರ ಸರ್ಕಲ್, ತುಂಗಾನಗರ ಆಸ್ಪತ್ರೆ, ವೈಷ್ಣವಿ ಲೇಔಟ್, ಭವಾನಿ ಲೇಔಟ್, ಗದ್ದೇಮನೆ ಲೇಔಟ್, ಚಾಲುಕ್ಯನಗರ, ಕೆಹೆಚ್‌ಬಿ ಕಾಲೋನಿ, ಮೇಲಿನ ತುಂಗಾನಗರ, ಸಲೀಮ್ ಫ್ಯಾಕ್ಟರಿ, ಹಳೇ ಗೋಪಿಶೆಟ್ಟಿಕೊಪ್ಪ, ಕಾಮತ್ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

ಡಿಸೆಂಬರ್ 12. ಶಿವಮೊಗ್ಗ ಬಿ.ಹೆಚ್.ರಸ್ತೆಯ ಸ.ಹಿ.ಪ್ರಾಥಮಿಕ ಶಾಲೆಯಲ್ಲಿ ವಿಶೇಷ ಚೇತನ ವಿದ್ಯಾರ್ಥಿಗಳಿಗೆ ಉಚಿತ ವೈದ್ಯಕೀಯ ತಪಾಸಣೆ

0

ಶಿವಮೊಗ್ಗ ಜಿಲ್ಲಾ ಸಮಗ್ರ ಶಿಕ್ಷಣ ಅಭಿಯಾನ ಯೋಜನೆಯಡಿ 2025-26ನೇ ಸಾಲಿನಲ್ಲಿ ಶಿವಮೊಗ್ಗ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಇವರ ಸಂಯುಕ್ತಾಶ್ರಯದಲ್ಲಿ ಡಿ. 12 ರಂದು ಬೆಳಗ್ಗೆ 9.30ನ ರಿಂದ ಬಿ.ಹೆಚ್.ರಸ್ತೆಯ ಸರ್ಕಾರಿ ಪ್ರಧಾನ ಹಿರಿಯ ಪ್ರಾಥಮಿಕ ಶಾಲೆ (ಕರ್ನಾಟಕ ಸಂಘದ ಪಕ್ಕ) ಆವರಣದಲ್ಲಿ 1-12ನೇ ತರಗತಿಯವರೆಗೆ ವಿದ್ಯಾಭ್ಯಾಸ ಮಾಡುತ್ತಿರುವ ಸರ್ಕಾರಿ/ ಅನುದಾನಿತ/ ಅನುದಾನ ರಹಿತ ಶಾಲೆಗಳ ವಿಶೇಷ ಚೇತನ ಮಕ್ಕಳಿಗೆ ಉಚಿತ ವೈದ್ಯಕೀಯ ತಪಾಸಣೆ ಶಿಬಿರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ವೈದ್ಯಕೀಯ ತಪಾಸಣೆ ಶಿಬಿರದಲ್ಲಿ ವೈದ್ಯರಿಂದ ಶಿಫಾರಸ್ಸಾದ ಮಕ್ಕಳಿಗೆ ಸಾಧನ-ಸಲಕರಣೆಗಳನ್ನು ನೀಡಲಾಗುತ್ತಿದ್ದು, ವಿಶೇಷ ಚೇತನ ಮಕ್ಕಳ ಈ ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಬಿ.ಇ.ಓ ರಮೇಶ್ ಹಾಗೂ ಸಮನ್ವಯಾಧಿಕಾರಿ ಶಿವಪ್ಪ ಸಂಗಣ್ಣನವರ್ ತಿಳಿಸಿದ್ದಾರೆ.