Thursday, February 26, 2026
Thursday, February 26, 2026
Home Blog Page 1621

ಇಬ್ರಾಹಿಂ ಗೆ ಜೆಡಿಎಸ್ ರಾಜ್ಯಾಧ್ಯಕ್ಷ‌ ಪಟ್ಟಎಚ್.ಡಿ.ಕೆ ಆನಂದಭಾಷ್ಪ

0

ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಇಂದು ಪಕ್ಷಕ್ಕೆ ಸೇರಿದಂತಹ ಮಾಜಿ ಸಚಿವ ಸಿಎಂ ಇಬ್ರಾಹಿಂ ಅವರಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದ ಅಧಿಕಾರವನ್ನು ಹೆಚ್ ಡಿ ಕುಮಾರಸ್ವಾಮಿ ಅವರು ಹಸ್ತಾಂತರಿಸಿದ್ದಾರೆ.

ಈ ಸಂದರ್ಭದಲ್ಲಿ ಕುಮಾರಸ್ವಾಮಿ ಮಾತನಾಡುತ್ತಾ ಕಣ್ಣೀರಿಟ್ಟ ಪ್ರಸಂಗ ಜರುಗಿತು.

ಇಂದು ನೂತನ ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಮಾಜಿ ಸಚಿವ ಸಿಎಂ ಇಬ್ರಾಹಿಂ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಅಧಿಕಾರ ಹಸ್ತಾಂತರಿಸಿ, ಕಣ್ಣೀರಿಡುತ್ತಲೇ ಮಾತನಾಡಿದಂತಹ ಹೆಚ್ ಕೆ ಕುಮಾರಸ್ವಾಮಿ ಅವರು, ನಾನಾಗಿಯೇ ಪಕ್ಷದಲ್ಲಿ ಏನನ್ನೂ ಕೇಳಿಲ್ಲ. ಪಕ್ಷ ಎಲ್ಲವನ್ನೂ ಕೊಟ್ಟಿದೆ. ನನ್ನನ್ನು ಗುರುತಿಸಿ ಈ ಮಟ್ಟಕ್ಕೆ ಬೆಳೆಸಿದೆ. ಎಲ್ಲಾ ಕಾರ್ಯಕ್ರಮಗಳಿಗೂ ಕುಮಾರಸ್ವಾಮಿ ಒಬ್ಬರೇ ಓಡಾಡಬೇಕಾದ ಪರಿಸ್ಥಿತಿ ಇದೆ ಎಂದು ಹೇಳಿದರು.

ಪಕ್ಷ ನಮ್ಮದು, ಅಧಿಕಾರ ನಮ್ಮದಲ್ಲ. ನಮ್ಮ ಪಕ್ಷದಲ್ಲೂ ಅಹಿಂದ ಇದೆ. ಅಗ್ಗದ ಪ್ರಚಾರಕ್ಕೆ ಬೇಗ ಬಲಿಯಾಗುತ್ತೇವೆ. ಅದೇ ನಮ್ಮ ಪಕ್ಷದ ದೌರ್ಬಲ್ಯವಾಗಿದೆ. ಅತ್ಯಂತ ಸಂತೋಷದಿಂದ ಅಧ್ಯಕ್ಷ ಸ್ಥಾನ ಬಿಟ್ಟುಕೊಟ್ಟಿದ್ದೇನೆ. ನಮ್ಮಲ್ಲಿ ಈಗ ಹೊಸ ಶಕೆ ಸೃಷ್ಟಿಯಾಗಿದೆ ಎಂದು ತಿಳಿಸಿದರು.

ಏಪ್ರಿಲ್ 18 ರಿಂದ 30 ರವರೆಗೆ ತಾಲ್ಲೂಕು ಮಟ್ಟದ ಆರೋಗ್ಯ ಮೇಳ

0

ಆರೋಗ್ಯ ಕಾರ್ಯಕ್ರಮಗಳು, ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಲ್ಲಿ ದೊರೆಯುವ ಸೇವೆಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು.ಮತ್ತು ಮಾಹಿತಿ ಹಾಗೂ ಶಿಕ್ಷಣ ನೀಡುವ ಉದ್ದೇಶದಿಂದ ಏ.18 ರಿಂದ 30 ರವರೆಗೆ ತಾಲ್ಲೂಕು ಮಟ್ಟದಲ್ಲಿ ಆಯೋಜಿಸಲಾಗಿರುವ ಒಂದು ದಿನದ ಬೃಹತ್ ಆರೋಗ್ಯ ಮೇಳವನ್ನು ಯಶಸ್ವಿಗೊಳಿಸಲು ಅಗತ್ಯವಾದ ಎಲ್ಲ ಪೂರ್ವ ತಯಾರಿ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿ.ಪಂ.ಸಿಇಓ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ತಾಲ್ಲೂಕು ಮಟ್ಟದಲ್ಲಿ ತಜ್ಞ ವೈದ್ಯರಿಂದ ಬೃಹತ್ ಆರೋಗ್ಯ ಮೇಳವನ್ನು ಯಶಸ್ವಿಯಾಗಿ ಅನುಷ್ಟಾನಗೊಳಿಸುವ ಸಂಬಂಧ ಜಿ.ಪಂ ಸಭಾಂಗಣದಲ್ಲಿ ವೈದ್ಯರು ಮತ್ತು ಇತರೆ ಅಧಿಕಾರಿಗಳಿಗೆ ಕರೆಯಲಾಗಿದ್ದ ಜಿಲ್ಲಾ ಮಟ್ಟದ ಯೋಜನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿವಮೊಗ್ಗ ಇವರ ವತಿಯಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷಿ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳು, ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ, ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಲ್ಲಿ ದೊರೆಯುವ ಇತರೆ ಸೇವೆಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ಬೃಹತ್ ಆರೋಗ್ಯ ಮೇಳವನ್ನು ಹಮ್ಮಿಕೊಳ್ಳಲಾಗಿದೆ.

ಶಿವಮೊಗ್ಗ ಜಿಲ್ಲಾ ಕೇಂದ್ರದಲ್ಲಿ ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸೂಪರ್ ಸ್ಪೆಷಾಲಿಟಿ ಕಟ್ಟಡದಲ್ಲಿ ಏ.18 ರ ಬೆಳಿಗ್ಗೆ 9 ರಿಂದ 04 ರವರೆಗೆ ಬೃಹತ್ ಆರೋಗ್ಯ ಮೇಳವನ್ನು ಆಯೋಜಿಸಲಾಗಿದೆ. ಮತ್ತು ಏ. 22 ರಂದು ಭದ್ರಾವತಿ, ಏ. 25 ರಂದು ಶಿಕಾರಿಪುರ, ಏ. 26 ರಂದು ತೀರ್ಥಹಳ್ಳಿ, ಏ. 27ರಂದು ಹೊಸನಗರ, ಏ. 28 ರಂದು ಹೊಸನಗರ ಹಾಗೂ ಏ.30 ರಂದು ಸಾಗರದಲ್ಲಿ ಬೃಹತ್ ಆರೋಗ್ಯ ಮೇಳ ನಡೆಸಬೇಕೆಂದು ನಿರ್ಧರಿಸಲಾಗಿದೆ. ಎಲ್ಲ ತಾಲ್ಲೂಕು ವೈದ್ಯಾಧಿಕಾರಿಗಳು, ಇತರೆ ವೈದ್ಯಾಧಿಕಾರಿಗಳು, ಆರೋಗ್ಯ ಕಾರ್ಯಕರ್ತರು, ಆರೋಗ್ಯದ ವಿವಿಧ ಯೋಜನೆಗಳ ಅಧಿಕಾರಿಗಳು, ಕಾರ್ಯಕ್ರಮಾಧಿಕಾರಿಗಳು ಹಾಗೂ ಸ್ಥಳೀಯ ಸಂಸ್ಥೆಗಳ ಸಹಯೋಗದೊಂದಿಗೆ ಮೇಳಕ್ಕೆ ಅಗತ್ಯವಾದ ಎಲ್ಲ ಸಿದ್ದತೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು.

ಆರೋಗ್ಯ ಮೇಳದ ಪ್ರವೇಶದಿಂದ ಹಿಡಿದು ನಿರ್ಗಮನದ ವರೆಗೆ ಸಕಲ ಸಿದ್ದತೆ ಉತ್ತಮವಾಗಿ ಆಗಬೇಕು. ತಪಾಸಣೆಗೆ ಬರುವವರಿಗೆ ಸೂಕ್ತ ಕುಡಿಯುವ ನೀರಿನ ವ್ಯವಸ್ಥೆ, ಕೂರಲು ಆಸನದ ವ್ಯವಸ್ಥೆ ಹಾಗೂ ಕೇಂದ್ರ ಮತ್ತು ರಾಜ್ಯ ಆರೋಗ್ಯ ಯೋಜನೆಗಳ ವಿವರ ಹಾಗೂ ಟೈಅಪ್ ಆಗಿರುವ ಆಸ್ಪತ್ರೆಗಳ ವಿವರವನ್ನು ಪ್ರದರ್ಶಿಸಬೇಕು. ಸಾರ್ವಜನಿಕರ ಮಾಹಿತಿಗಾಗಿ ಮೇಳದ ಕುರಿತಾದ ಮಾಹಿತಿ ಹಾಗೂ ವಿವಿಧ ಕೌಂಟರ್ ಗಳ ಬಗ್ಗೆ ಮಾಹಿತಿ ನೀಡುವ ಸೂಚನಾ ಫಲಕಗಳನ್ನು ಅಳವಡಿಸಬೇಕು. ಮತ್ತು ವಿವಿಧ ಆಸ್ಪತೆಗಳು, ಸ್ಥಳೀಯ ಸಂಸ್ಥೆಗಳು ಹಾಗೂ ರೆಡ್‍ಕ್ರಾಸ್, ರೋಟರಿಯಂತಹ ಸಂಸ್ಥೆಗಳ ಸ್ವಯಂ ಸೇವಕರ ಸಹಕಾರವನ್ನು ಸಹ ಪಡೆಯಬೇಕೆಂದು ಸೂಚಿಸಿದ್ದಾರೆ.

ಮೇಳದಲ್ಲಿ ಎಲ್ಲ ಅಧಿಕಾರಿ ಅಥವಾ ಸಿಬ್ಬಂದಿಗಳು ತಮಗೆ ನೀಡಲಾಗಿರುವ ಜವಾಬ್ದಾರಿಯನ್ನು ನಿರ್ವಹಿಸಬೇಕು. ತಪಾಸಣೆಗಾಗಿ ಬರುವವರನ್ನು ನೋಂದಣಿ ಮಾಡಿಸಿಕೊಂಡು, ಎಬಿಎಆರ್‍ಕೆ ಕಾರ್ಡ್ ಬಗ್ಗೆ ಮಾಹಿತಿ ನೀಡುವುದು, ತಪಾಸಣೆ ನಡೆಸುವುದು. ಲಭ್ಯವಿರುವ ಚಿಕಿತ್ಸೆ, ಆರೋಗ್ಯ ಸೇವೆಗಳ ಬಗ್ಗೆ ತಿಳಿಸುವುದು. ಆಪ್ತ ಸಮಾಲೋಚನೆ, ಪಥ್ಯ, ಸೇರಿದಂತೆ ಇತರೆ ಚಟುವಟಿಕೆಗಳನ್ನು ಕೈಗೊಂಡು ರೋಗಿಗಳಿಗೆ ನಿರಾಯಾಸವಾಗಿ ಉತ್ತಮ ಚಿಕಿತ್ಸೆ ಪಡೆಯಲು ಸಹಕರಿಸಬೇಕು. ಹಾಗೂ ಅವಶ್ಯಕವಾದ ಎಲ್ಲ ಔಷಧಿಗಳು, ಫಾರ್ಮಾಸಿಸ್ಟ್, ಪ್ರಯೋಗಶಾಲಾ ತಂತ್ರಜ್ಞರು ಲಭ್ಯವಿರಬೇಕು, ಎಬಿಎಆರ್‍ಕೆ ಇತರೆ ಆರೋಗ್ಯ ಸೇವೆ ಮಾಹಿತಿ ನೀಡಬೇಕು, ಎಬಿಎಆರ್‍ಕೆ ಕಾರ್ಡ್ ಇಲ್ಲದವರಿಗೆ ಕಾರ್ಡ್ ವಿತರಣೆ, ಅಸಾಂಕ್ರಾಮಿಕ ಮತ್ತು ಸಾಂಕ್ರಾಮಿಕ ರೋಗಗಳಿಗೆ ಉಚಿತ ಸಲಹೆ ಹಾಗೂ ಚಿಕಿತ್ಸಾ ಸೌಲಭ್ಯವನ್ನು ನೀಡಬೇಕು ಎಂದು ತಿಳಿಸಿದ್ದಾರೆ.

ವಿವಿಧ ಇಲಾಖೆಗಳು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ತಂಡ, ತಾಲ್ಲೂಕು ವೈದ್ಯಾಧಿಕಾರಿಗಳು, ಇತರೆ ವೈದ್ಯಾಧಿಕಾರಗಳು, ಸಮುದಾಯ ಆರೋಗ್ಯಾಧಿಕಾರಿಗಳು, ಫಾರ್ಮಾಸಿಸ್ಟ್, ಪ್ರಯೋಗಶಾಲಾ ತಂತ್ರಜ್ಞರು, ಆಯುಷ್ ಇಲಾಖೆಯ ಯೋಗ ಮಾರ್ಗದರ್ಶಕರು ಎಲ್ಲರೂ ತಮ್ಮ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಿ, ಸಾರ್ವಜನಿಕರು ತಮಗೆ ಅಗತ್ಯವಾದ ಆರೋಗ್ಯ ಸೇವೆ ಪಡೆಯಲು ಸಹಕರಿಸಬೇಕು ಎಂದು ಸೂಚನೆ ನೀಡಿದ್ದಾರೆ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ ಮಾತನಾಡಿ,ಮೇಳದಲ್ಲಿ ಎಲ್ಲಾ ಖಾಯಿಲೆಗಳಿಗೆ ಉಚಿತವಾಗಿ ವೈದ್ಯಕೀಯ ತಪಾಸಣೆ, ವೈದ್ಯರ ಸಲಹೆ ಮೇರೆಗೆ ಉಚಿತ ಔಷಧಿ ವಿತರಣೆ, ಅಗತ್ಯವಿರುವವರಿಗೆ ಪ್ರಯೋಗಶಾಲಾ ಪರೀಕ್ಷೆಗಳು, ಅಧಿಕ ರಕ್ತದೊತ್ತಡ, ಮಧುಮೇಹ, ಬಾಯಿ, ಸ್ತನ, ಗರ್ಭಕಂಠದ ಕ್ಯಾನ್ಸರ್‍ನ ಪೂರ್ವಭಾವಿ ತಪಾಸಣೆ, ಕ್ಷಯರೋಗ ಮತ್ತು ಇತರೆ ಸಾಂಕ್ರಾಮಿಕ ರೋಗಗಳಿಗೆ ಉಚಿತ ಸಲಹೆ ಮತ್ತು ಚಿಕಿತ್ಸೆ ನೀಡಲಾಗುವುದು. ಜೊತೆಗೆ ಸರ್ಕಾರದಿಂದ ಲಭ್ಯವಾಗುವ ಆರೋಗ್ಯ ಸೇವೆಗಳ ಮಾಹಿತಿ, ಎಬಿಎಆರ್‍ಕೆ ಕಾರ್ಡ್ ವಿತರಣೆ, ಡಿಜಿಟಲ್ ಐಡಿ ಸೃಷ್ಟಿಸಿಕೊಡಲಾಗುವುದು.
ಲಭ್ಯವಿರುವ ತಜ್ಞ ವೈದ್ಯರು ಮತ್ತು ಸೇವೆ: ವೈದ್ಯಕೀಯ ತಜ್ಞರು, ಶಸ್ತ್ರಚಿಕಿತ್ಸಾ ತಜ್ಞರು, ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರು, ಕೀಲು ಮೂಳೆ ತಜ್ಞರು, ಚರ್ಮ ಮತ್ತು ಲೈಂಗಿಕ ರೋಗ ತಜ್ಞರು, ಕಿವಿ, ಮೂಗು ಮತ್ತು ಗಂಟಲು ತಜ್ಞರು, ಕಣ್ಣಿನ ತಜ್ಞರು, ದಂತ ತಜ್ಞರು, ಮಾನಸಿಕ ರೋಗ ತಜ್ಞರು, ಆಯುರ್ವೇದ ತಜ್ಞರು, ಹೆಚ್‍ಐವಿ ಆಪ್ತಸಮಾಲೋಚನೆ ಮತ್ತು ಪರೀಕ್ಷೆ, ಹದಿಹರೆಯದವರಿಗೆ ಆಪ್ತ ಸಮಾಲೋಚನೆ, ಪೌಷ್ಟಿಕ ಆಹಾರ ತಯಾರಿ ಪ್ರಾತ್ಯಕ್ಷಿಕೆ, ಕೋವಿಡ್ ಲಸಿಕಾಕರಣ, ಕ್ಷಯರೋಗ, ಮಲೇರಿಯಾ, ಹಿಮೊಗ್ಲೋಬಿನ್ ಪರೀಕ್ಷೆ ಸೇರಿದಂತೆ ಉಚಿತ ಪ್ರಯೋಗಾಲಯ ಪರೀಕ್ಷೆಗಳಿರುತ್ತವೆ. ಸ್ಥಳದಲ್ಲೇ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಕಾರ್ಡ್ ಮಾಡಿಕೊಡಲಾಗುವುದು. ಆದ್ದರಿಂದ ಸಾರ್ವಜನಿಕರು ಕಡ್ಡಾಯವಾಗಿ ಆಧಾರ್ ಕಾರ್ಡ್ ತರಬೇಕು ಎಂದು ಹೇಳಿದ್ದಾರೆ.

ಈ ಸಂದರ್ಭದಲ್ಲಿ ಜಿ.ಪಂ ಉಪಕಾಯಧರ್ಶಿ ಜಯಲಕ್ಷ್ಮಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಓ.ಮಲ್ಲಪ್ಪ, ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆ ಡಿಎಸ್ ಡಾ.ಸಿದ್ದನಗೌಡ ಪಾಟಿಲ್, ಆರ್‍ಸಿಹೆಚ್‍ಓ ಡಾ.ನಾಗರಾಜ್‍ನಾಯ್ಕ್, ತಾಲ್ಲೂಕು ವೈದ್ಯಾಧಿಕಾರಿ.ಡಾ.ಚಂದ್ರಶೇಖರ್, ಎಲ್ಲಾ ಜಿಲ್ಲಾ ಕಾರ್ಯಕ್ರಮ ಅನುಷ್ಟಾನ ಅಧಿಕಾರಿಗಳು, ತಾಲ್ಲೂಕು ವೈದ್ಯಾಧಿಕಾರಿಗಳು, ಇತರೆ ವೈದ್ಯಾಧಿಕಾರಿಗಳು, ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಇತರೆ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರತೀ ತಿಂಗಳ 3 ನೇ ಶನಿವಾರ ಶಿವಮೊಗ್ಗ ಜಿಲ್ಲಾಧಿಕಾರಿಗಳ ನಡೆ ಹಳ್ಳಿಕಡೆ ಕಾರ್ಯಕ್ರಮ

0

ಸೊರಬ ತಾಲ್ಲೂಕಿನ ಚಂದ್ರಗುತ್ತಿ ಹೋಬಳಿಯ ಹರಿಶೀ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಲ್ಲೂರು ಗ್ರಾಮದಲ್ಲಿ ಕಂದಾಯ ಇಲಾಖೆಯ ಜನಸ್ಪಂದನ ಕಾರ್ಯಕ್ರಮ ಜರುಗಿತು.

ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ-ಕಂದಾಯ ಇಲಾಖೆ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಅವರು ಮಾತನಾಡಿ ಪ್ರತಿ ತಿಂಗಳು ಮೂರನೇ ಶನಿವಾರ ಜಿಲ್ಲಾಧಿಕಾರಿಗಳು ಕಂದಾಯ ಇಲಾಖೆ ಹಾಗೂ ಇತರೆ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳೊಡಗೂಡಿ ಗ್ರಾಮ ವಾಸ್ತವ್ಯ ಮಾಡುತ್ತಿದ್ದೇವೆ. ಸ್ಥಳೀಯ ಜನರ ಕುಂದು ಕೊರತೆಗಳನ್ನು ಆಲಿಸಿ ಸ್ಪಂದಿಸುತ್ತಿದ್ದು. ಇಂದು ಹರೀಶಿ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಹಮ್ಮಿಕೊಂಡಿದ್ದೇವೆ.

ಸಾಮಾನ್ಯವಾಗಿ ಬೆಳಿಗ್ಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲ ಕಡೆ ಹೋಗಿ ಸಂಜೆ ವೇಳೆಯಲ್ಲಿ ಗ್ರಾಮದ ರೈತರ ಜೊತೆ ಮಾತನಾಡುತ್ತಿದ್ದೆವು. ಆದರೆ ಈ ಬಾರಿ ಗ್ರಾಮಸ್ಥರ ಬೇಡಿಕೆಯಂತೆ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಗ್ರಾಮದಲ್ಲಿನ ಸಮಸ್ಯೆಗಳನ್ನು ಆಲಿಸಿ ನಂತರ ಸಮಸ್ಯೆಗಳ ಪರಿಹಾರದ ಬಗ್ಗೆ ಚರ್ಚಿಸುತ್ತೇವೆ. ಸರ್ವೆ ನಂಬರ್ 24 ರ ವಿಚಾರವನ್ನು ಕೂಡ ಪರಿಹರಿತ್ತೇವೆ.

ಜೊತೆಗೆ ಗ್ರಾಮದ ಕೆರೆ,ಅಂಗನವಾಡಿ, ಶಾಲೆ ಮತ್ತು ರಸ್ತೆಗಳ ಸಮಸ್ಯೆಗಳ ಬಗ್ಗೆ ಆಲಿಸಲಾಗಿದೆ. ಇದರೊಂದಿಗೆ ಪಕ್ಕದ ಗ್ರಾಮದ ಸಮಸ್ಯೆಯನ್ನು ಕೇಳಿ ಅಲ್ಲಿಗೆ ಭೇಟಿ ನೀಡುವುದಾಗಿ ಹೇಳಿದರು.

ಇದೇ ಸಂದರ್ಭದಲ್ಲಿ ಹಲವಾರು ಕ್ಷೇತ್ರದಲ್ಲಿ ಸಾಧನೆ ಮಾಡಿದ ಗ್ರಾಮದ ವ್ಯಕ್ತಿಗಳನ್ನು ಸನ್ಮಾನಿಸಲಾಯಿತು.

ಅಹವಾಲು ಸನ್ಮಾನ:
ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಜಿಲ್ಲಾಧಿಕಾಗಳು, ಲೈಸೆನ್ಸ್ ಇಲ್ಲದೇ ಕದ್ದುಮುಚ್ಚಿ ಚಿಕ್ಕಪುಟ್ಟ ಅಂಗಡಿಗಳಲ್ಲಿ ಮದ್ಯ ಮಾರಾಟ ಮಾಡುವವರ ವಿರುದ್ದ ಶೀಘ್ರ ಕ್ರಮ ಕೈಗೊಳ್ಳುವಂತೆ ಅಬಕಾರಿ ಅಧಿಕಾರಿಗೆ ಸೂಚನೆ ನೀಡಿದರು.

ಗ್ರಾಮಸ್ಥರು ಸೊರಬದಿಂದ ಬನವಾಸಿ ಮಧ್ಯ ಓಡಾಡಲು ಪ್ರತಿ ದಿನ ಬಸ್ಸಿನ ಸಮಸ್ಯೆ ಇದೆ. ಬನವಾಸಿ ಬಾರ್ಡರ್ ಈಡೂರು ಕೆಂಚಿಕೊಪ್ಪ ಮತ್ತು ಇತರೆ ಹಳ್ಳಿಗಳಿಗೆ ಓಡಾಡಲು ಬಸ್ಸು ವ್ಯವಸ್ಥೆ ಮಾಡಿಕೊಡುವಂತೆ ಹಾಗೂ ಸಂಪರ್ಕ ರಸ್ತೆ ಮತ್ತು ಊರ ಒಳಗೆ ರಸ್ತೆ ಕಾಮಗಾರಿ ಮಾಡಿಕೊಡುವಂತೆ ಮನವಿ ಸಲ್ಲಿಸಿದರು.

ಜಿಲ್ಲಾಧಿಕಾರಿಗಳು, ಮಹಾತ್ಮಾಗಾಂಧಿ ನರೇಗಾ ಯೋಜನೆಯಡಿ ರಸ್ತೆ ನಿರ್ಮಾಣ ಮಾಡಬಹುದು. ರಸ್ತೆ ಕುರಿತು ತಾಲ್ಲೂಕು ಕಾರ್ಯನಿರ್ವಹಕಾಧಿಕಾರಿ ಇವರು ಸ್ಥಳ ಪರಿಶೀಲನೆ ಮಾಡಿ ಕಾಮಗಾರಿಗೆ ಅವಕಾಶ ಮಾಡಿಕೊಡಬಹುದೆಂದು ತಿಳಿಸಿದರು.

ವಿದ್ಯುತ್ ಲೈನ್ ಬದಲಾವಣೆ ಮಾಡಿ ಕೊಡಬೇಕು ಮತ್ತು ಸಮರ್ಪಕ ವಿದ್ಯುತ್ ಪೂರೈಕೆ ಮಾಡಬೇಕೆಂದು ಗ್ರಾಮಸ್ಥರು ಮನವಿ ಮಾಡಿದರು.

ಅಂಗನವಾಡಿ ಅಭಿವೃದ್ದಿ ಮತ್ತು ಶಾಲಾಭಿವೃದ್ದಿ ಕುರಿತು ಚರ್ಚಿಸಿದ ವೇಳೆ ಗ್ರಾಮಸ್ಥರು ಶಾಲೆಗೆ ನಿವೇಶನ ಮಂಜೂರು ಮಾಡಬೇಕೆಂದು ಮನವಿ ಸಲ್ಲಿಸಿದರು.

ಸೊರಬ ಸಿವಿಲ್ ಕೋರ್ಟ್‍ನಲ್ಲಿ ಕುಟುಂಬ ವ್ಯಾಜ್ಯವೊಂದರ ತೀರ್ಪಿನನ್ವಯ ಪಾರ್ಟಿಷನ್ ಮಾಡುವ ಸಂಬಂಧ ಕೇಸ್ ನಂಬರ್ ತೆಗೆದುಕೊಳ್ಳಲಾಯಿತು. ಹಾಗೂ ದಾನಪತ್ರ ಮಾಡುವ ಕುರಿತು ಚರ್ಚೆ ವೇಳೆ, ದಾನಪತ್ರವನ್ನು ಮಾಡಲು ರಕ್ತ ಸಂಬಂಧ ಇರಬೇಕು. ಅನ್ಯವ್ಯಕ್ತಿಯಿಂದ ಭೂಮಿ ತೆಗೆದುಕೊಳ್ಳಲು ಕ್ರಯ ಪತ್ರ ಮಾಡಬಹುದು ಎಂದು ದಾನಪತ್ರದ ಕುರಿತು ಸ್ಥಳೀಯರಿಗೆ ಮಾಹಿತಿ ನೀಡಲಾಯಿತು.

ಹಳ್ಳ ಅಗಲೀಕರಣದ ಕುರಿತ ಮನವಿಗೆ, ಮಹಾತ್ಮಾಗಾಂಧಿ ನರೇಗಾ ಯೋಜನೆಯಡಿ ಸ್ಟೋನ್ ಪಿಚಿಂಗ್ ಕೆಲಸ ಮಾಡಬಹುದು ಎಂದರು. ಶಾಲೆಯಲ್ಲಿ ಶಿಕ್ಷಕರ ಕೊರತೆ ಬಗ್ಗೆ ಗ್ರಾಮಸ್ಥರು ಡಿಸಿ ರವರ ಗಮನ ಸೆಳೆದಾಗ, ಬಿಇಓ ರವರ ಜೊತೆ ಈ ಸಮಸ್ಯೆ ಕುರಿತು ಚರ್ಚಿಸಿ, ಅತಿಥಿ ಶಿಕ್ಷಕರು ಮತ್ತು ರೆಗ್ಯುಲರ್ ಶಿಕ್ಷಕರನ್ನು ನಿಯಮಾನುಸಾರ ನಿಯೋಜಿಸುವ ಕುರಿತು ಬಿಇಓ ರವರಿಗೆ ಸೂಚನೆ ನೀಡಿದರು.

ಸಂಧ್ಯಾ ಸುರಕ್ಷಾ ಸೌಲಭ್ಯವನ್ನು ನಾಡ ಕಚೇರಿಯಿಂದ ನೀಡಲು ವಿಳಂಬವಾಗುತ್ತಿರುವ ಕುರಿತು ಗಮನ ಸೆಳೆದಾಗ ಡಿಸಿ ಯವರು ಅತೀ ಜರೂರಾಗಿ ಸ್ಥಳೀಯರಿಗೆ ನೀಡುವಂತೆ ಸಂಬಂಧಿಸಿದ ಅಧಿಕಾರಿಗೆ ತಿಳಿಸಿದರು.

ಕೆಲ ಗ್ರಾಮಸ್ಥರು ಸೀಮೆಎಣ್ಣೆ ಬೇಕೆಂದು, ರೇಷನ್ ಜೊತೆ ಸೀಮೆಎಣ್ಣೆ ಸಹ ನೀಡಲು ಡೀಲರ್ಸ್‍ಗಳಿಗೆ ಸೂಚನೆ ನೀಡಬೇಕೆಂದು ಮನವಿ ಮಾಡಿದರು. ಡಿಸಿಯವರು ಪ್ರತಿಕ್ರಿಯಿಸಿ, ಸರ್ಕಾರಕ್ಕೆ ಸೀಮೆಎಣ್ಣೆ ಕುರಿತು ಪ್ರಸ್ತಾವನೆ ಸಲ್ಲಿಸಲಾಗಿದೆ, ಅನುಮೋದನೆ ಸಿಕ್ಕ ಕೂಡಲೇ ವಿತರಣೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಕಾಡು ಕಡಿತಲೆ, ಅಗ್ಗಳ, ಮನೆ ಬಳಕೆಗೆ ಕಟ್ಟಿಗೆ ಕಡಿತ ಕುರಿತು ಅರಣ್ಯ ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗಿನ ವಿವಾದ ಕುರಿತು ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗಿ, ಜಿಲ್ಲಾಧಿಕಾರಿಗಳು ಡಿಸಿಎಫ್‍ರವರು ಈ ಸಮಸ್ಯೆ ಕುರಿತು ತನಿಖೆ ನಡೆಸುವಂತೆ ಆದೇಶಿಸಿದರು.
ಸದ್ಯದ ರೂಟ್ ವ್ಯವಸ್ಥೆಯಿಂದ ಹಾಲು ಹಾಕುವ ರೈತರಿಗೆ ನಷ್ಟ ಆಗುತ್ತಿದ್ದು ಇದನ್ನು ಸರಿಪಡಿಸಬೇಕೆಂದು ಮನವಿ ಮಾಡಿದರು. ಜಿಲ್ಲಾಧಿಕಾರಿಗಳು, ಹೊಸ ರೂಟ್ ವ್ಯವಸ್ಥೆ ಮಾಡಿ ರೈತರಿಗೆ ಆಗುವ ನಷ್ಟವನ್ನು ಸರಿಪಡಿಸಬೇಕೆಂದು ಕೆಎಂಎಫ್ ಎಂ.ಡಿ ರವರಿಗೆ ಸೂಚನೆ ನೀಡಿದರು.
ಗ್ರಾಮಸ್ಥರು ಮುಜರಾಯಿಗೆ ಸೇರಿದ ಶಿವನ ದೇವಸ್ಥಾನದ ಜೀರ್ಣೋದ್ದಾರ ಮಾಡುವಂತೆ ಮನವಿ ಮಾಡಿದರು. ಕೆರೆ ಹೂಳು ತೆಗೆಯುವುದು, ಶಾಲೆ ಶೌಚಾಲಯ, ಕಟ್ಟಡಗಳ ದುರಸ್ತೆಗೆ ಮನವಿ ಮಾಡಿದರು.
ಹಾಗೂ 11ಇ ಸ್ಕೆಚ್ ಕುರಿತು ಜಿಲ್ಲಾಧಿಕಾರಿಗಳು ಮಾತನಾಡಿ, ತಂದೆ ಅಥವಾ ತಾಯಿ ಬದುಕಿದ್ದರೆ ಅವರ ಒಪ್ಪಿಗೆ ಇದ್ದರೆ ಖಾತೆ ಬದಲಾವಣೆ ಮಾಡಲು, ವಿಭಾಗ ಪತ್ರ ಮಾಡಸಲು 11ಇ ಸ್ಕೆಚ್‍ಗೆ ಅರ್ಜಿ ಸಲ್ಲಿಸಬಹುದೆಂದರು.
ಈ ವೇಳೆ ಅಪರ ಜಿಲ್ಲಾಧಿಕಾರಿ ನಾಗೇಂದ್ರ ಎಫ್ ಹೊನ್ನಳ್ಳಿ, ಗ್ರಾಮ ಪಂಚಾಯ್ತಿ ಅಧ್ಯಕ್ಷರು, ಜನಪ್ರತಿನಿಧಿಗಳು, ಅಧಿಕಾರಿಗಳು ಪಾಲ್ಗೊಂಡಿದ್ದರು.

ಸಿಹಿಮೊಗೆಯಲ್ಲಿ ಸಾಮೂಹಿಕ ವಿವಾಹಸಡಗರದ ಹಬ್ಬ

0

ಶಿವಮೊಗ್ಗ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಸಾಮೂಹಿಕ ವಿವಾಹ ಮಹೋತ್ಸವ ಸಡಗರ,ಹಬ್ಬದ ವಾತಾವರಣ ಮನೆ ಮಾಡಿತ್ತು. ಬೆಳಗಿನಜಾವದಿಂದ ಆರಂಭಗೊಂಡ ಈ ಸಡಗರ, ಸಂಭ್ರಮದ ನಡುವೆ ಶ್ರೀಕಾಲಬೈರವೇಶ್ವರ ಹಾಗೂ ಇತರ ಇತರ ದೇವರುಗಳಿಗೆ, ಶ್ರೀಬಾಲಗಂಗಾಧರನಾಥ ಮಹಾಸ್ವಾಮಿ ಅವರಿಗೆ ವಿಶೇಷ ಪೂಜೆ ನಡೆಯಿತು. ವಿಶೇಷವಾಗಿ ಶ್ರೀಕಾಲಬೈರವೇಶ್ವರ ದೇವಸ್ಥಾನದ ವಾರ್ಷಿಕೋತ್ಸವ ನಿಮಿತ್ತ 24ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಹಾಗೂ ಆದರ್ಶ ಹಿರಿಯ ದಂಪತಿಗಳಿಗೆ ಸನ್ಮಾನ ಸಮಾರಂಭ ಪೂಜ್ಯರ ಸಮ್ಮುಖದಲ್ಲಿ ನಡೆಯಿತು.

ವಿವಾಹವಾಗಿ 50 ವರ್ಷ ತುಂಬಿದ ಆದರ್ಶ ಹಿರಿಯ ದಂಪತಿಗಳನ್ನು ಸನ್ಮಾನಿಸಿ ಅವರ ಮೂಲಕ ನವ ಬದುಕಿಗೆ ಕಾಲಿಟ್ಟ ವಧು ವರರನ್ನು ಆಶೀರ್ವದಿಸುವ ಈ ಅಪರೂಪದ ಕಾರ್ಯಕ್ರಮದ ಸಾನಿಧ್ಯವನ್ನು ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧಿಪತಿ ಡಾ. ನಿರ್ಮಲಾನಂದ ಮಹಾಸ್ವಾಮೀಜಿ ಅವರು ವಹಿಸಿದ್ದರು.

ಮಹಾಸಂಸ್ಥಾನದ ಪ್ರಧಾನಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ ಅವರ ಉಪಸ್ಥಿತಿಯಲ್ಲಿ ನಡೆದ ಸಮಾರಂಭದಲ್ಲಿ ಆಕರ್ಷಣೆ ಎಂಬಂತೆ ನವ ಬದುಕಿಗೆ ಕಾಲಿಟ್ಟ ದಂಪತಿಗಳಿಗೆ ಹಾಗೂ ಹಿರಿಯ ದಂಪತಿಗಳ ಹಬ್ಬವೆಬ್ಬಂತಹ ವಾತಾವರಣ ನಿರ್ಮಾಣವಾಗಿತ್ತು.

ಈ ಕಾರ್ಯಕ್ರಮದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಮಾತನಾಡುತ್ತಾ, ನನ್ನ ರಾಜಕೀಯ ಜೀವನದಲ್ಲಿ ಇಂತಹ ಸುಮಧುರ ಹಾಗೂ ದೈವ ಪ್ರೇರಣೆಯ ಕ್ಷಣಗಳನ್ನು ಕಂಡದ್ದು ಅಪರೂಪ ಜೀವನದ ಅತ್ಯಂತ ಪವಿತ್ರ ಗಳಿಗೆ ಎಂದುಕೊಳ್ಳುತ್ತೇನೆ. ಶ್ರೀಗಳ ಆಶೀರ್ವಾದಗಳೊಂದಿಗೆ ಹೊಸ ಬದುಕಿಗೆ ಕಾಲಿಟ್ಟ ನವ ದಂಪತಿಗಳು ಎಚ್ಚರಿಕೆಯ ಹೆಜ್ಜೆ ಇಡುವ ಮೂಲಕ ಬೆರಳು ತೋರಿಸುವಂತಹ ಕಾರ್ಯಗಳನ್ನು ಕಾಣದಂತೆ ಮಾಡಿ ಪೂಜ್ಯರ ಸಮ್ಮುಖದಲ್ಲಿ ತಂದೆ ತಾಯಿಯರಿಗೆ ಸಮಾನರಾದ ಹಿರಿಯ ದಂಪತಿಗಳನ್ನು ಸತ್ಕರಿಸುವ ಕಾರ್ಯಸಿಕ್ಕದ್ದು ನನ್ನ ಪುಣ್ಯ ಎಂದು ಹೇಳಿದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ರಾಜ್ಯ ಒಕ್ಕಲಿಗರ ಸಂಘದ ಗೌರವಾಧ್ಯಕ್ಷ ಡಾ.ಅಂಜನಪ್ಪ ಅವರು ಮಾತನಾಡಿ, ಕಾಯಿಲೆ ಬಂದ ಮೇಲೆ ತಿದ್ದಿಕೊಳ್ಳುವ ಬದಲು ಕಾಯಿಲೆ ಬರದಂತೆ ನೋಡಿಕೊಳ್ಳುವುದು ಮುಖ್ಯ. ದುಶ್ಚಟಗಳಿಂದ ದೂರವಾಗಿ ಆರೋಗ್ಯ ಕಾಪಾಡಿಕೊಳ್ಳಿ ಎಂದರು.

ಮುಹೂರ್ತಗಳನ್ನು ಸರಿಯಾಗಿ ಬಳಸಿಕೊಳ್ಳಿ, ಅಂದರೆ ನಿತ್ಯ ತಟ್ಟೆ ತುಂಬಾ ತರಕಾರಿ ತಿನ್ನಿ ಎನ್ನುವ ಮೂಲಕ ಬಹುತೇಕ ನೂರಕ್ಕೆ ನೂರರಷ್ಟು ವೈದ್ಯರು ಯಾವುದೇ ಸಂದರ್ಭದಲ್ಲಿ ರೋಗಿಯ ಚಿಕಿತ್ಸೆಯಲ್ಲಿ ಲೋಪವೆಸಗುವುದಿಲ್ಲ. ಅನಗತ್ಯವಾಗಿ ಅವರನ್ನು ನಿಂದಿಸದಿರಿ ಎಂದ ಅವರು, ಧರ್ಮದ ಕಾರ್ಯಗಳಲ್ಲಿ ಈಗ ಜೊತೆಯಾಗಿ ಹೊಸತನ ಕಲಿತ್ತಿದ್ದೇನೆ. ಇನ್ನೂ ಮುಂದೆ ಚಿಕಿತ್ಸೆಗೆ ಬರುವವರನ್ನು ರೋಗಿ ಎನ್ನುವುದಿಲ್ಲ. ಮನುಷ್ಯ ಎಂದು ಗುರುತಿಸುತ್ತೇನೆ ಎಂದರು.
ಆದಿಚುಂಚನಗಿರಿ ಮಹಾಸಂಸ್ಥಾನದ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರು ಧರ್ಮದ ಕಾರ್ಯದಲ್ಲಿ ಒಂದುಗೂಡಿ ಕೆಲಸ ಮಾಡಿ, ಧರ್ಮಪತ್ನಿ ಹಾಗೂ ದಾಂಪತ್ಯ ಜೀವನ ಎಂದುಕೊಳ್ಳಿ. ನವದಂಪತಿಗಳು ಈ ಕೆಳಗಿನ ಅಂಶವನ್ನು ಗಮನದಲ್ಲಿಟ್ಟುಕೊಳ್ಳಿ. ಪತಿ ತನ್ನ ವೇತನವನ್ನು ಪತ್ನಿಗೆ ತಿಳಿಸಬೇಕು. ಹಣಕಾಸು ವ್ಯವಹಾರವು ಪರಸ್ಪರ ಇಬ್ಬರಿಗೂ ಗೊತ್ತಿರಬೇಕು. ನಿಜವಾದ ನಂಬಿಕೆ, ಪ್ರೀತಿ ವಿಶ್ವಾಸ ನಿಮ್ಮ ನಡುವೆ ಇರಲಿ ಹಿರಿಯ ದಂಪತಿಗಳಿಂದ ನಿಮಗೆ ಆಶೀರ್ವಾದ ಸಿಕ್ಕಿದೆ ಸುಖವಾಗಿ ಬಾಳಿ ಎಂದು ಶುಭ ಹರಿಸಿದರು.
ಮಠದ ಶ್ರೀಗಳಿಬ್ಬರು ನವ ವಧು,ವರರು ಮತ್ತು ಹಿರಿಯ ಆದರ್ಶ ದಂಪತಿಗಳೊಂದಿಗೆ ಪ್ರಸಾದ ಸ್ವೀಕರಿಸಿದ್ದು,ಅತ್ಯಂತ ಸಂತಸದ ವಿಷಯ.

ಮತ್ತೆ ಮಳೆ ಮುಂದುವರಿಕೆ ಸಂಭವ- ಹವಾಮಾನ ಮುನ್ಸೂಚನೆ

0

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಆರ್ಭಟ ಇನ್ನೂ ಮುಂದುವರೆದಿದೆ.

ಏಪ್ರಿಲ್ 18ರ ತನಕ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮದಿಂದ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಕೇರಳ, ತಮಿಳುನಾಡು ರಾಜ್ಯಗಳಲ್ಲಿಯೂ ಧಾರಾಕಾರ ಮಳೆ ಸುರಿಯುತ್ತಿದೆ.

ಏಪ್ರಿಲ್ 17, 18ರಂದು ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಕೋಲಾರ, ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ ಮತ್ತು ಬಳ್ಳಾರಿಯಲ್ಲಿ ಮಳೆ ಮುನ್ಸೂಚನೆ ನೀಡಲಾಗಿದೆ.

ಬೋರಿಸ್ ಜಾನ್ಸನ್ ಭಾರತಕ್ಕೆ ಭೇಟಿ ಮಹತ್ವದ ಮಾತುಕತೆ

0

ಇದೇ ಪ್ರಥಮ ಬಾರಿಗೆ ಬ್ರಿಟಿಷ್‌ ಪ್ರಧಾನಿ ಅವರು ಗುಜರಾತ್‌ಗೆ ಭೇಟಿ ನೀಡುತ್ತಿದ್ದಾರೆ. ಬೋರಿಸ್‌ ಜಾನ್ಸನ್‌ ಮುಂದಿನ ವಾರ ಎರಡು ದಿನಗಳ ಭಾರತ ಭೇಟಿಗೆ ಬರಲಿದ್ದಾರೆ. ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಸುದೀರ್ಘ ಮಾತುಕತೆ ನಡೆಸಲಿದ್ದಾರೆ ಎಂದು ಮಾಹಿತಿ ತಿಳಿದುಬಂದಿದೆ.

ಬೋರಿಸ್‌ ಅವರು ಪ್ರಧಾನಿಯಾದ ನಂತರ ಇದೇ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ. ಏಪ್ರಿಲ್‌ 21ರಂದು ಅವರ ಪ್ರಯಾಣ ಆರಂಭವಾಗಲಿದೆ. ಬ್ರಿಟನ್‌ ಮತ್ತು ಭಾರತದಲ್ಲಿನ ಪ್ರಮುಖ ವಲಯಗಳಲ್ಲಿನ ಹೂಡಿಕೆಗಳ ಕುರಿತು ಘೋಷಣೆಯಾಗಲಿವೆ ಎಂದು ಡೌನಿಂಗ್‌ ಸ್ಟ್ರೀಟ್‌ ಪ್ರಕಟಣೆಯಲ್ಲಿ ತಿಳಿಸಿದೆ.

ಏಪ್ರಿಲ್‌ 22ರಂದು ನವದೆಹಲಿಯಲ್ಲಿ ಬೋರಿಸ್‌ ಜಾನ್ಸನ್‌ ಮತ್ತು ನರೇಂದ್ರ ಮೋದಿ ಭೇಟಿ ನಡೆಯಲಿದೆ. ಅಲ್ಲಿ ಭಾರತ ಮತ್ತು ಬ್ರಿಟನ್‌ ನಡುವಿನ ರಕ್ಷಣಾ ಕಾರ್ಯತಂತ್ರ, ರಾಜತಾಂತ್ರಿಕತೆ ಮತ್ತು ಆರ್ಥಿಕತೆಯ ಪಾಲುದಾರಿಕೆ, ಮುಕ್ತ ವ್ಯಾಪಾರ ಒಪ್ಪಂದ ಸಂಬಂಧಿಸಿದಂತೆ ಮಾತುಕತೆ ನಡೆಸಲಿದ್ದಾರೆ.

ನನ್ನ ಭಾರತದ ಭೇಟಿಯ ವೇಳೆ ಉಭಯ ರಾಷ್ಟ್ರಗಳಿಗೆ ಮುಖ್ಯವಾಗಿರುವ ವಿಚಾರಗಳನ್ನು ಪ್ರಸ್ತಾಪಿಸಲಿದ್ದೇನೆ. ಉದ್ಯೋಗ ಸೃಷ್ಟಿಯಿಂದ ಹಿಡಿದು, ಆರ್ಥಿಕತೆ ವೃದ್ಧಿ, ಇಂಧನ ಹಾಗೂ ರಕ್ಷಣಾ ಕ್ಷೇತ್ರದ ವಿಷಯಗಳನ್ನು ಒಳಗೊಂಡಿರಲಿವೆ ಎಂದು ಬೋರಿಸ್‌ ಅವರು ತಿಳಿಸಿದ್ದಾರೆ.

ಅಹಮದಾಬಾದ್‌ನಲ್ಲಿ ಅವರು ಪ್ರಮುಖ ಉದ್ದಿಮೆಗಳಿಗೆ ಭೇಟಿ ನೀಡಲಿದ್ದಾರೆ. ಎರಡೂ ರಾಷ್ಟ್ರಗಳ ನಡುವಿನ ವಾಣಿಜ್ಯ, ವ್ಯಾಪಾರ ಹಾಗೂ ಜನರ ಸಂಪರ್ಕಗಳ ಬಗ್ಗೆ ಚರ್ಚಿಸಲಿದ್ದಾರೆ. ಬ್ರಿಟನ್‌ನಲ್ಲಿರುವ ಬ್ರಿಟಿಷ್‌,ಭಾರತೀಯರಲ್ಲಿ ಅರ್ಧದಷ್ಟು ಜನರ ಮೂಲ ಗುಜರಾತ್‌ ಆಗಿದೆ.

ಕೈಗಾರಿಕೆಗಳಲ್ಲಿ ಹೂಡಿಕೆ, ಉದ್ಯೋಗ ಸೃಷ್ಟಿ, ಉಭಯ ರಾಷ್ಟ್ರಗಳ ನಡುವೆ ವಿಜ್ಞಾನ, ಆರೋಗ್ಯ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ಹೊಸ ಸಹಯೋಗ ಸೇರಿದಂತೆ ಪ್ರಮುಖ ಘೋಷಣೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನಲ್ಲಿ ಪ್ರಕಟಿಸುವ ಸಾಧ್ಯತೆ ಇದೆ.

ಬ್ರಿಟನ್‌ ಮತ್ತು ಭಾರತದ ಸಮಗ್ರ ಕಾರ್ಯತಂತ್ರ ಪಾಲುದಾರಿಕೆಯ ಭಾಗವಾಗಿ ಬ್ರಿಟನ್‌ನಲ್ಲಿ 530 ಮಿಲಿಯನ್‌ ಪೌಂಡ್‌ಗಳಷ್ಟು ಹೂಡಿಕೆ ಮಾಡಲು ಎರಡೂ ರಾಷ್ಟ್ರಗಳ ಪ್ರಧಾನಿಗಳು ಕಳೆದ ವರ್ಷ ಸಮ್ಮತಿಸಿದ್ದರು. ಭಾರತೀಯ ಕಂಪನಿಗಳ ಹೂಡಿಕೆಯಿಂದಾಗಿ ಬ್ರಿಟನ್‌ನಲ್ಲಿ 95,000 ಉದ್ಯೋಗಗಳು ಸೃಷ್ಟಿಯಾಗಿರುವುದಾಗಿ ಅಂದಾಜಿಸಲಾಗಿದೆ.

ಕಾರ್ಯಕಾರಿಣಿ ಸಭೆಗೆ ತಂಪೆರೆದ ಮಳೆರಾಯ

0

ಶನಿವಾರ ವಿಜಯನಗರದಲ್ಲಿ ಸುರಿದ ಮಳೆಗೆ ಮತ್ತು ಗಾಳಿಗೆ ಬಿಜೆಪಿ ಸಭೆಯ ಪೆಂಡಾಲ್ ಗೆ ಸಾಕಷ್ಟು ಹಾನಿಯಾಗಿದೆ.

ಭಟ್ರಹಳ್ಳಿ ಆಂಜನೇಯ ದೇವಸ್ಥಾನದ ಬಳಿ ಬಿಜೆಪಿ ರಾಜ್ಯ ಕಾರ್ಯಕಾರಿಣಿಗೆ ಹಾಕಲಾಗಿದ್ದ ಸ್ವಾಗತ ಕಮಾನು, ಫ್ಲೆಕ್ಸ್‌ಗಳು ನೆಲಕ್ಕುರುಳಿ ಬಿದ್ದಿವೆ.

ಸಭಾ ಮಂಟಪದ ಮುಂಭಾಗ ಮಂಟಪದ ಮಾದರಿಯಲ್ಲಿ ಸ್ವಾಗತ ಕಮಾನು ನಿರ್ಮಿಸಲಾಗಿತ್ತು. ಬಾರಿಗಾಳಿ ಮಳೆಯಿಂದಾಗಿ ಅದು ಸಂಪೂರ್ಣ ನೆಲಕ್ಕುರುಳಿದೆ. ಕಲ್ಲಿನ ರಥದ ಪ್ರತಿಕೃತಿಯಷ್ಟೇ ಉಳಿದುಕೊಂಡಿದೆ.

ಇನ್ನು, ವರ್ತುಲ ರಸ್ತೆಯುದ್ದಕ್ಕೂ ಹಾಕಿದ್ದ ಸ್ವಾಗತ ಕಮಾನುಗಳು, ಫ್ಲೆಕ್ಸ್‌ಗಳು ಕೆಳಗೆ ಬಿದ್ದಿವೆ. ಬ್ಯಾನರ್‌ಗಳು ಹರಿದು ಹೋಗಿವೆ.

ಸ್ವಾಗತ ಕಮಾನುಗಳು ರಸ್ತೆಯ ಮಧ್ಯದಲ್ಲಿಯೇ ಬಿದ್ದದ್ದರಿಂದ ವಾಹನ ಸಂಚಾರಕ್ಕೆ ಕೊಂಚ ತೊಂದರೆ ಉಂಟಾಗಿತ್ತು. ನಂತರ ಕ್ರೇನ್‌ ಮೂಲಕ ಅದನ್ನು ತೆರವುಗೊಳಿಸಲಾಯಿತು.

ಜಿಲ್ಲೆಯ ಹರಪನಹಳ್ಳಿ, ಕೂಡ್ಲಿಗಿ, ಕೊಟ್ಟೂರು, ಹೂವಿನಹಡಗಲಿ, ಹಗರಿಬೊಮ್ಮನಹಳ್ಳಿಯಲ್ಲಿ ಮಳೆಯಾಗಿರುವುದು ವರದಿಯಾಗಿದೆ.

ಇಂದಿನ ಕಾರ್ಯಕ್ರಮಕ್ಕೆ ಮತ್ತೆ ಅವುಗಳನ್ನು ಫೀಕ್ಸ್ ಮಾಡಲಾಗುತ್ತದೆ.

ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ವಿಜಯನಗರದಲ್ಲಿ ಆರಂಭ

0

ವಿಜಯನಗರ ಹೂಸಪೇಟೆ ನಗರದ ಭಟ್ರಹಳ್ಳಿ ಆಂಜನೇಯ ದೇವಸ್ಥಾನದ ಸಮೀಪ ನಿರ್ಮಿಸಿರುವ ಭವ್ಯ ವೇದಿಕೆಯಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ, ಗೋ ಮಾತೆಗೆ ಪೂಜೆ ಸಲ್ಲಿಸುವ ಮೂಲಕ ಮತ್ತು ಬಿಜೆಪಿ ಬಾವುಟ ಹಾರಿಸುವುದರೊಂದಿಗೆ ಆರಂಭಗೊಂಡಿದೆ.

ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ನಳಿನ್ ಕುಮಾರ್ ಕಟೀಲ್ ಅವರು ಧ್ವಜಾರೋಹಣ ನಡೆಸಿದರು.ಇಂದು ಮತ್ತು ನಾಳೆ ಎರಡು ದಿನ ಬಿಜೆಪಿಯ ಕಾರ್ಯಕಾರಿಣಿ ಸಭೆ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಮಾನ್ಯಶ್ರೀ ಬಸವರಾಜ ಬೊಮ್ಮಾಯಿ ದೀಪ ಬೆಳಗಿಸುವ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶನಿವಾರ ಹಾಗೂ ಭಾನುವಾರ ಈ ಬಿಜೆಪಿ ಹೈವೋಲ್ಟೇಜ್‌ ಕಾರ್ಯಕಾರಣಿ ನಡೆಯುತ್ತದೆ.

ಹೊಸಪೇಟೆಯಲ್ಲಿ ಎರಡು ದಿನ ಮಹತ್ವದ ಬೈಠಕ್‌ ನಡೆಯಲಿದೆ. ಈ ಸಂದರ್ಭದಲ್ಲಿ ಚುನಾವಣೆ ಸಿದ್ಧತೆ, ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಯಲಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ನೇತೃತ್ವದಲ್ಲಿ ಸಭೆ ನಡೆಯಲಿದೆ. ಪಕ್ಷದ ಬಲವರ್ಧನೆ ಬಗ್ಗೆಯೂ ಸಮಾಲೋಚನೆ ನಡೆಯಲಿದೆ. ಸಚಿವ ಸಂಪುಟ ವಿಸ್ತರಣೆ ಬಗ್ಗೆಯೂ ನಡ್ಡಾ ನೇತೃತ್ವದಲ್ಲಿ ಚರ್ಚೆ ನಡೆಯಲಿದೆ.

ಕಾರ್ಯಕ್ರಮದ ವೇದಿಕೆ ಮೇಲೆ, ಮುಖ್ಯಮಂತ್ರಿ ಬೊಮ್ಮಾಯಿ, ಪಕ್ಷದ ಉಸ್ತುವಾರಿ ಅರುಣ್ ಸಿಂಗ್, ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್, ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಜಗದೀಶ ಶೆಟ್ಟರ್, ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್, ಮುಜರಾಯಿ ಸಚಿವೆ ಶಶಿಕಲಾ ಅಣ್ಣಾಸಾಹೇಬ್ ಜೊಲ್ಲೆ ಇನ್ನೂ ಹಲವು ಗಣ್ಯರು ಉಪಸ್ಥಿತರಿದ್ದರು.
ಕಾಂಗ್ರೆಸ್ ಓಲೈಕೆ ರಾಜಕಾರಣ, ಹಿಂದು ವಿರೋ ನಿಲುವನ್ನು ಬಿಂಬಿಸಿ ಮುನ್ನಲೆಗೆ ತರುವ ನಿಟ್ಟಿನಲ್ಲಿ ಕಾರ್ಯಾಕಾರಿಣಿ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ. ಸಭೆಯಲ್ಲಿ ಪ್ರಮುಖವಾಗಿ ಕಮಿಷನ್ ವಿಚಾರ, ಈಶ್ವರಪ್ಪ ರಾಜೀನಾಮೆ ಸಂಬಂಧ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆಯೂ ಇದೆ. 40 ಪರ್ಸೆಂಟ್ ಕಮೀಷನ್ ಆರೋಪಕ್ಕೆ ಈಶ್ವರಪ್ಪ ತುತ್ತಾಗಿರುವ ಬೆನ್ನಲ್ಲೇ 2023ರ ವಿಧಾನಸಭೆ ಚುನಾವಣೆಯಲ್ಲಿ ಸ್ಪಷ್ಟ ಜನಾದೇಶ ಪಡೆಯುವ ಹೆಗ್ಗುರಿಯೊಂದಿಗೆ ಬಿಜೆಪಿ ಕಾರ್ಯಕಾರಿಣಿ ಸಭೆ ನಿನ್ನೆಯಿಂದ ಆರಂಭಗೊಂಡಿದೆ. ನೂತನ ಜಿಲ್ಲೆಯಾದ ನಂತರ ಇದೇ ಮೊದಲ ಬಾರಿಗೆ ವಿಜಯನಗರದ ಹೊಸಪೇಟೆಯ ಆಂಜನೇಯ ಭಟ್ಟರಹಳ್ಳಿ ಸಮೀಪ ನಿನ್ನೆ ಬೆಳಿಗ್ಗೆ 10 ಗಂಟೆಗೆ ಸಭೆ ಆರಂಭವಾಯಿತು. ವೇದಿಕೆಯ ಹತ್ತಿರ ಕಾಂಗ್ರೇಸ್ ಪಕ್ಷದ ನಾಯಕರು ಈಶ್ವರಪ್ಪ ರವರನ್ನು ಬಂಧಿಸುವಂತೆ ಒಂದು ಗುಂಪು ಹೂರಾಟ ನಡೆಸಿದರು.

ಇಂದು ಸಮಾರೋಪ ಸಮಾರಂಭಕ್ಕೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಇರಲಿದೆ. ಸಭೆಯಲ್ಲಿ ಮುಖ್ಯವಾಗಿ ಪಕ್ಷ ಸಂಘಟನೆ ಮತ್ತು ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಬಗ್ಗೆ ಸುದೀರ್ಘವಾದ ಚರ್ಚೆ ನಡೆಯಲಿದೆ.

ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ರಾಜೀನಾಮೆ ನೀಡಿರುವ ಕೆ.ಎಸ್. ಈಶ್ವರಪ್ಪ ಬಿಜೆಪಿ ಕಾರ್ಯಕಾರಿಣಿ ಸಭೆಯಿಂದ ದೂರು ಉಳಿದಿದ್ದಾರೆ.

ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಕೆ.ಎಸ್. ಈಶ್ವರಪ್ಪ ರಾಜ್ಯ ಕಾರ್ಯಕಾರಿಣಿ ಸಭೆಗೆ ನಿನ್ನೆ ಸಭೆಗೆ ಗೈರಾಗಿದ್ದರು.
ಜೊತೆಗೆ ಸಾಕಷ್ಟು ಕುತೂಹಲ ಮೂಡಿಸಿರುವ ಸಂಪುಟ ಪುನಾರಚನೆ ಕಸರತ್ತು ಹಾಗೂ ನಿಗಮ ಮಂಡಳಿಗಳ ನೇಮಕ ಕುರಿತಂತೆಯೂ ಚರ್ಚೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಹೆಚ್ಚಿದೆ. ಈಶ್ವರಪ್ಪ ರಾಜೀನಾಮೆ ಸಂಬಂಧ ಏನೇನೆಲ್ಲ ನಡೆದಿದೆ ಎಂಬುದರ ಕುರಿತು ಸಂಪೂರ್ಣ ವರದಿಯನ್ನ ಜೆಪಿ ನಡ್ಡಾರವರಿಗೆ ನೀಡಲಿದ್ದಾರೆ. ಇದಾದ ಬಳಿಕ ಇದನ್ನ ಕಾಂಗ್ರೆಸ್‍ನಿಂದ ದೂರ ಮಾಡಲು ಯಾವ ರೀತಿ ತಂತ್ರಗಾರಿಕೆ ಮಾಡಬೇಕು ಎಂಬುದರ ಕುರಿತು ಕೋರ್ ಕಮಿಟಿ ಸದಸ್ಯರ ಸಮ್ಮುಖದಲ್ಲಿ ನಡ್ಡಾ ಮಾತುಕತೆ ನಡೆಸಲಿದ್ದಾರೆ.

ವರದಿ: ಮುರಳೀಧರ ನಾಡಿಗೇರ್

ಪೊಲೀಸ್ ಅಧಿಕಾರಿಯಾಗು | 5000 + ತೆರೆಯುವಿಕೆಗಳು

KSP Re1500+3550 ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ಮಾರ್ಚ್ 2022 ರ KSP ಅಧಿಕೃತ ಅಧಿಸೂಚನೆಯ ಮೂಲಕ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ರಾಜ್ಯ ಪೊಲೀಸ್ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದಂದು ಅಥವಾ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಶಿಕ್ಷಣ ಅರ್ಹತೆ: KSP ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ಮಂಡಳಿಯಿಂದ 12 ನೇ ಪೂರ್ಣಗೊಳಿಸಿರಬೇಕು.
ವಯಸ್ಸಿನ ಮಿತಿ: ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಯ ಅಧಿಸೂಚನೆ 2021 ರ ಅಭ್ಯರ್ಥಿಯ ವಯಸ್ಸು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 25 ವರ್ಷಗಳು.

ಬೇಸಿಗೆಯಲ್ಲಿ ಆಲಿಕಲ್ಲು ಸುರಿಸಿದ ಮಳೆರಾಯ

0

ಆಲಿಕಲ್ಲು ಮಳೆ.
ಏಪ್ರಿಲ್ ನಲ್ಲೇ ಗುಡುಗಿ ಮಿಂಚಿ ಕಾಲಿಟ್ಟ ಮಳೆರಾಯ.
ಒಂದೇಸಮನೆ ಆಲಿಕಲ್ಲು ಸುರಿಸಿ , ಒಂದಿಷ್ಷು ತಂಪನ್ನಂತೂ ಮಾಡಿ ಅತಿಥಿಯಂತೆ ಮುಖ ತೋರಿಸಿ ಹೋದ ವರುಣ.
ಗಾಳಿಯನ್ನೂ ತಂದ
ಏಕೆಂದರೆ ಇವತ್ತು ಹನುಮ ಜಯಂತಿ.
ವಾಯುಪುತ್ರ ಜೊತೆಗಿದ್ದ.