Thursday, February 26, 2026
Thursday, February 26, 2026
Home Blog Page 1624

ರಣಬೀರ್- ಅಲಿಯ ಭಟ್ ಶುಭ ವಿವಾಹ

0

ಬಾಲಿವುಡ್‌ನ ಕ್ಯೂಟ್ ಜೋಡಿ ಎಂದೇ ಹೆಸರಾಗಿರುವ ಆಲಿಯಾ ಭಟ್‌ ಮತ್ತು ರಣಬೀರ್ ಕಪೂರ್ ಅವರು ಗುರುವಾರ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ.

ನವ ದಂಪತಿಗೆ ಬಾಲಿವುಡ್‌ ನಟ -ನಟಿಯರು ಸೇರಿದಂತೆ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಶುಭ ಕೋರಿದ್ದಾರೆ.

ಇನ್‌ಸ್ಟಾಗ್ರಾಮ್‌ ಸ್ಟೋರೀಸ್‌ನಲ್ಲಿ ರಣಬೀರ್ ಮತ್ತು ಆಲಿಯಾ ಫೋಟೊ ಹಂಚಿಕೊಂಡಿರುವ ಪ್ರಿಯಾಂಕಾ, ನಿಮ್ಮಿಬ್ಬರಿಗೂ ಅಭಿನಂದನೆಗಳು… ಸದಾ ಪ್ರೀತಿ, ಸಂತೋಷ ನಿಮ್ಮದಾಗಲಿ ಎಂದು ಬರೆದುಕೊಂಡಿದ್ದಾರೆ.

ಆಲಿಯಾ ಭಟ್, ರಣಬೀರ್ ಕಪೂರ್ ಅವರಿಗೆ ‘ಜೀವಮಾನದ ಪ್ರೀತಿ ಮತ್ತು ಸಂತೋಷ’ ಎಂದು ಪ್ರಿಯಾಂಕಾ ಚೋಪ್ರಾ ಶುಭ ಹಾರೈಸಿದ್ದಾರೆ.

ಬಾಂದ್ರಾದಲ್ಲಿರುವ ರಣಬೀರ್‌ ಅವರ ‘ವಾಸ್ತು’ ನಿವಾಸದಲ್ಲಿ ಕುಟುಂಬದ ಸದಸ್ಯರು ಮತ್ತು ಆಪ್ತರ ಸಮ್ಮುಖದಲ್ಲಿ ಶಾಸ್ತ್ರೋಕ್ತವಾಗಿ ಮದುವೆ ಸಮಾರಂಭ ನೆರವೇರಿದೆ.

ಸಂಭ್ರಮದಲ್ಲಿ ಫೋಟೊಗಳನ್ನು ಆಲಿಯಾ ಮತ್ತು ರಣಬೀರ್‌ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದು, ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮದುವೆ ಸಮಾರಂಭದಲ್ಲಿ ಎರಡೂ ಕುಟುಂಬಗಳ ಆಪ್ತರು ಮತ್ತು ಸ್ನೇಹಿತರಷ್ಟೇ ಭಾಗವಹಿಸಿದ್ದರು.

ನೀತು ಕಪೂರ್, ಕರೀನಾ ಕಪೂರ್, ಮಹೇಶ್ ಭಟ್, ಸೋನಿ ರಜ್ದಾನ್, ಕರಿಷ್ಮಾ ಕಪೂರ್, ಕರಣ್ ಜೋಹರ್, ಅಯಾನ್ ಮುಖರ್ಜಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

2010ರಲ್ಲಿ ‘ಅಂಜಾನ ಅಂಜಾನಿ’ ಹಾಗೂ 2012 ರಲ್ಲಿ ‘ಬರ್ಫಿ’ ಸಿನಿಮಾದಲ್ಲಿ ರಣಬೀರ್‌ಗೆ ನಾಯಕಿಯಾಗಿ ಪ್ರಿಯಾಂಕಾ ನಟಿಸಿದ್ದರು.

ಅನರ್ಹರ ಬಳಿ ಬಿಪಿಎಲ್ ಕಾರ್ಡ್ ಇದ್ದರೆ ಕಠಿಣಕ್ರಮ -ಸಚಿವ ಗೋಪಾಲಯ್ಯ

0

ಬಿಪಿಎಲ್ ಕಾರ್ಡ್ ಅರ್ಹರಲ್ಲ ದವರು ಬಿಪಿಎಲ್ ಪಡಿತರ ಚೀಟಿಗಳನ್ನು ಪಡೆದುಕೊಂಡಿದ್ದರೆ ಅಂಥವರ ವಿರುದ್ದ ಸರಕಾರ ಕಠಿಣ ಕಾನೂನು‌ ಕ್ರಮ ಕೈಗೊಳ್ಳಲಿದೆ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಅವರು
ತಿಳಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಅರ್ಹ ಫಲಾನುಭವಿಗಳಿಗೆ ಮಾತ್ರ ಬಿಪಿಎಲ್ ಕಾರ್ಡ್ ನೀಡಲಾಗುತ್ತಿದೆ. ಇದನ್ನು ದುರುಪಯೋಗಪಡಿಸಿಕೊಂಡವರ ವಿರುದ್ಧ ಸೂಕ್ತ ಕ್ರಮ‌ ಜರುಗಿಸಲಾಗುವುದು ಎಂದರು.

ಬಡವರಿಗೋಸ್ಕರ ಇರುವ ಬಿಪಿಎಲ್ ಕಾರ್ಡ್ ದನ್ನು ಯಾರೂ ದುರ್ಬಳಕೆ ಮಾಡಿಕೊಳ್ಳಬಾರದು ಈಗಾಗಲೇ ಹಲವಾರು ಸರ್ಕಾರಿ ನೌಕರರು ಬಿಪಿಎಲ್ ಕಾರ್ಡ್ ಪಡೆದಿದ್ದು ಸರಿಯಾಗಿ ಪರಿಶೀಲಿಸಿದ ನಂತರ ಆ ಕಾರ್ಡ್ ಗಳನ್ನು ರದ್ದು ಪಡಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಈಗಾಗಲೇ 2.ಲಕ್ಷಕ್ಕೂ ಹೆಚ್ಚು ಬಿಪಿಎಲ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಗಳನ್ನು ಕೂಲಂಕುಷವಾಗಿ ಪರಿಶೀಲಿಸಿ ಅರ್ಹ ಫಲಾನುಭವಿಗಳಿಗೆ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ನೀಡಲಾಗುವುದು ಎಂದರು.

ಬಡವರಿಗೋಸ್ಕರ ಇರುವ ಯೋಜನೆಯನ್ನು ಇತರರು ಪಡೆಯಬಾರದು.
ಸ್ವಂತ ಮನೆ ಹೊಂದಿ 2-3 ಮಹಡಿಯ ಮನೆ ಕಟ್ಟಿಕೊಂಡುರುವವರ ಬಿಪಿಎಲ್ ಕಾರ್ಡ್ ರದ್ದಾಗಲಿದೆ. ಬಿಪಿಎಲ್ ಕಾರ್ಡ್ ಗಾಗಿ ಹೊಸ ಕಾನೂನು ಜಾರಿಗೊಳಿಸಲಾಗುತ್ತಿದ್ದು ಇದರ ದುರ್ಬಳಕೆ ತಡೆಯಲು ಈ ಯೋಜನೆ ಅನುಷ್ಠಾನ ಗೊಳಿಸಲಾಗುತ್ತಿದೆ ಕೇಂದ್ರ ಸರ್ಕಾರ ದೇಶದಲ್ಲಿ ಎಂಬತ್ತು ಕೋಟಿ ಜನರಿಗೆ ಬಿಪಿಎಲ್ ಕಾರ್ಡ್ ಮುಖಾಂತರ ಆಹಾರ ಒದಗಿಸುತ್ತಿದೆ ಎಂದರು.

ಕೇಂದ್ರ ಸರ್ಕಾರದ ಜತೆಗೆ ರಾಜ್ಯ ಸರ್ಕಾರವೂ ಸಹ ಕೈಜೋಡಿಸಿ ಅಂತ್ಯೋದಯ ಕಾರ್ಡ್ ಗೆ ತಲಾ ಹತ್ತು ಕೆಜಿ ಅಕ್ಕಿ ನೀಡಲಾಗುತ್ತಿದೆ ಎಂದು ತಿಳಿಸಿದರು.

ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಚಿವ ಪ್ರಹ್ಲಾದ ಜೋಶಿ ವಿವರಣೆ

0

ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಹತ್ವದ ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 5 ಸಚಿವ ಸ್ಥಾನ ಖಾಲಿ ಇದ್ದು, ಶೀಘ್ರವೇ ಸಚಿವ ಸಂಪುಟ ವಿಸ್ತರಣೆಯಾಗಲಿದೆ.
ಯಾರಿಗೆ ಸಚಿವ ಸ್ಥಾನ ನೀಡಬೇಕೆಂದು ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಹೈಕಮಾಂಡ್ ತೀರ್ಮಾನಿಸಲಿದೆ ಎಂದು ಮಾಹಿತಿ ನೀಡಿದ್ದಾರೆ.

ಪ್ರಸ್ತುತ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟದಲ್ಲಿ ನಾಲ್ಕು ಸ್ಥಾನ ಖಾಲಿ ಇದ್ದು, ಸಂತೋಷ್ ಆತ್ಮಹತ್ಯೆ ಕೇಸ್ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ಕೆ.ಎಸ್.ಈಶ್ವರಪ್ಪ ರಾಜೀನಾಮೆ ನೀಡಿದ್ದು, ಐದು ಸ್ಥಾನ ಖಾಲಿಯಾದಂತಾಗುತ್ತದೆ. ಇನ್ನು ಸಿಎಂ ಇನ್ನು ಒಬ್ಬರು ಅಥವಾ ಇಬ್ಬರು ಸಚಿವರಿಂದ ರಾಜೀನಾಮೆ ಪಡೆದು ಹೊಸದಾಗಿ 6-7 ಮಂದಿಗೆ ಸಚಿವ ಸ್ಥಾನ ನೀಡಲಿದ್ದಾರೆ ಎನ್ನಲಾಗುತ್ತಿದೆ.

ಇನ್ನು ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಸಿಎಂ ಬಸವರಾಜ ಬೊಮ್ಮಾಯಿ ಅತ್ಯಂತ ಸಮರ್ಥವಾಗಿ ನಿಭಾಯಿಸಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತು ಯಾವುದೇ ಚರ್ಚೆ ನಡೆದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಪರಿಶಿಷ್ಟ ವರ್ಗ/ ಜಾತಿಯ ಸ್ವಯಂ ಉದ್ಯೋಗಿ ಯುವಜನಕ್ಕೆ ಸಿಹಿಸುದ್ದಿ

0

ಸ್ವಯಂ ಉದ್ಯೋಗ ಕೈಗೊಳ್ಳುವ ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಟಿ) ಯುವ ಜನರಿಗೆ ಸರ್ಕಾರದಿಂದ ನೀಡುತ್ತಿದ್ದ ಸಹಾಯಧನದ ಮೊತ್ತವನ್ನು ₹ 50 ಸಾವಿರದಿಂದ ₹ 1ಲಕ್ಷಕ್ಕೆ ಹೆಚ್ಚಳ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ನಡೆದ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌. ಅಂಬೇಡ್ಕರ್‌ ಅವರ 131ನೇ ಜನ್ಮದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು,

ರಾಜಕೀಯ ಸ್ವಾರ್ಥ ಸಾಧನೆಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರನ್ನು ದುರ್ಬಳಕೆ ಮಾಡಿಕೊಳ್ಳುವುದು ಅಪರಾಧ. ಶೋಷಿತ ಸಮುದಾಯಗಳು ಮತ್ತು ಮಹಿಳೆಯರು ಸಾಮಾಜಿಕ ಹಾಗೂ ಆರ್ಥಿಕ ಶಕ್ತಿ ಪಡೆಯಬೇಕು ಎಂಬುದು ಅಂಬೇಡ್ಕರ್ ನಿಲುವಾಗಿತ್ತು. ಅದಕ್ಕೆ ಪೂರಕವಾಗಿ ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ.‌ ಸ್ತ್ರೀ ಶಕ್ತಿ ಸಂಘಗಳಿಗೆ ನೆರವು ನೀಡಲು ಆಯಂಕರ್ ಬ್ಯಾಂಕ್ ಸ್ಥಾಪಿಸಲಾಗುತ್ತಿದೆ. ಅಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮಹಿಳೆಯರಿಗೆ ಆದ್ಯತೆ ನೀಡಲಾಗುವುದು ಎಂದರು.

ಪ್ರತಿ ವರ್ಷ 10 ಸಾವಿರ ಯುವಜನರಿಗೆ ಸ್ವಯಂ ಉದ್ಯೋಗಕ್ಕೆ ನೆರವು ನೀಡಲಾಗುತ್ತಿದೆ. ಈ ಯೋಜನೆಯಡಿ ಯೋಜನೆಗೆ ಬ್ಯಾಂಕ್‌ಗಳ ಮೂಲಕ ಒದಗಿಸುತ್ತಿರುವ ಸಾಲದ ಮೊತ್ತವನ್ನೂ ಹೆಚ್ಚಳ ಮಾಡಲಾಗುವುದು.ಅಂಬೇಡ್ಕರ್ ಹೆಸರಿನಲ್ಲಿ 100 ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲಾಗುತ್ತಿದೆ ಎಂದು ಹೇಳಿದರು.

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಐವರಿಗೆ ಡಾ.ಬಿ.ಆರ್. ಅಂಬೇಡ್ಕರ್ ಪ್ರಶಸ್ತಿ ಪ್ರದಾನ ಮಾಡಲಾಯಿತು.

139 ಪೌರ ಕಾರ್ಮಿಕರನ್ನು ಗೌರವಿಸಲಾಯಿತು.

ಗುಜರಾತ್ ಜಯಂಟ್ಸ್ ಗೆ ಭರ್ಜರಿ ಜಯ

0

ಹಾರ್ದಿಕ ಅರ್ಧಶತಕ/ರಾಜಸ್ಥಾನ ವಿರುದ್ಧ ಗುಜರಾತ್ ಗೆ 37 ರನ್ ಜಯ
ನಾಯಕ ಹಾರ್ದಿಕ್ ಪಾಂಡ್ಯ (87) ಅವರ ಭರ್ಜರಿ ಅರ್ಧ ಶತಕ ಹಾಗೂ ಕೊನೆಯಲ್ಲಿ ದಯಾಳ್ (40ಕ್ಕೆ. 3) ಮತ್ತು ಲೂಕಿ ಫರ್ಗ್ಯುಸನ್ (32ಕ್ಕೆ 3) ಅವರು ಕರಾರುವಾಕ್ ದಾಳಿಯ ನೆರವಿನಿಂದ ಗುಜರಾತ್ ತಂಡ ಐಪಿಎಲ್ 15ನೇ ಆವೃತ್ತಿಯ 24ನೇ ಪಂದ್ಯದಲ್ಲಿ 32 ರನ್ ಗಳ ಅಂತರದಿಂದ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಸೋಲುಣಿಸಿತು.

ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಸೋತು ಬ್ಯಾಟಿಂಗ್ ಆಯ್ಕೆಮಾಡಿಕೊಂಡ ಗುಜರಾತ್ ತಂಡ ನಿಗದಿತ 20 ಓವರುಗಳಲ್ಲಿ 4 ವಿಕೆಟ್ ನಷ್ಟಕ್ಕೆ 192 ಬಾರಿಸಿತು.

ಇದಕ್ಕೆ ಪ್ರತ್ಯುತ್ತರವಾಗಿ ರಾಜಸ್ಥಾನ್ ರಾಯಲ್ಸ್ ತಂಡ ಆರಂಭಿಕ ಬ್ಯಾಟರ್ ಜೋಸ್ ಬಟ್ಲರ್ (54 ರನ್,24 ಎಸೆತ) ಅವರ ಭರ್ಜರಿ ಅರ್ಧಶತಕ ದ ಹೊರತಾಗಿಯೂ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 155 ರನ್ ಗಳಿಸಲಷ್ಟೇ ಶಕ್ತವಾಯಿತು.

ಸಂಜು ಸಮ್ಸನ್ ಪಡೆ ಎರಡನೇ ಸೋಲಿಗೆ ಗುರಿಯಾಯಿತು. ಯಶ್ ದಯಾಳ್ ಮತ್ತು ಲೂಕಿ ಫರ್ಗ್ಯೂಸನ್ ಟೈಟನ್ಸ್ ಪರ ನಿಖರ ಎಸೆತಗಳಿಂದ ರಾಜಸ್ಥಾನ್ ರಾಯಲ್ಸ್ ಬ್ಯಾಟ್ಸ್ಮನ್ ಗಳನ್ನು ಕಟ್ಟಿಹಾಕಿದರು.

ಇನ್ನಿಂಗ್ಸ್ ನ 18ನೇ ಓವರ್ ಎಸೆದ ಹಾರ್ದಿಕ್ ಪಾಂಡ್ಯ (ವೈಯಕ್ತಿಕ ಮೂರನೇ ಓವರ್) ಕಾರಣಾಂತರಗಳಿಂದ ಓವರ್ ಪೂರ್ಣಗೊಳಿಸಲಿಲ್ಲ.

ಆದ್ದರಿಂದ ವಿಜಯಶಂಕರ್ ಓವರ್ ನಲ್ಲಿ ಬಾಕಿ ಇದ್ದ ಮೂರು ಎಸೆತಗಳನ್ನು ಎಸೆದರು.

ಆಯ್ಕೆಮಾಡಿಕೊಂಡ ನಾಯಕ ಸಂಜು ಸ್ಯಾಮ್ಸನ್ ಅವರ ನಿಲುವನ್ನು ರಾಜಸ್ಥಾನ್ ರಾಯಲ್ಸ್ ಬೌಲರ್ ಗಳು ಆರಂಭದಲ್ಲೇನೊ ಸಮರ್ಥಿಸಿಕೊಂಡರು.

ಆದರೆ, ಆ ಬಳಿಕ ಎದುರಾಳಿ ಬ್ಯಾಟ್ಸ್ಮನ್ ಗಳಿಂದ ಚಚ್ಚಿಸಿಕೊಂಡರು. ಮ್ಯಾಥ್ಯೂ ವೇಡ್ (12) ಅವರನ್ನು ರನೌಟ್ ಮಾಡುವುದರ ಜೊತೆಗೆ ಗಿಲ್ (13) ಮತ್ತು ವಿಜಯಶಂಕರ್ (2) ವಿಕೆಟ್ ಕಬಳಿಸಿದ ಬೌಲರ್ ಗಳು ತಂಡಕ್ಕೆ ಆರಂಭಿಕ ಮೇಲುಗೈ ತಂದುಕೊಟ್ಟರು.

ಪಂಜಾಬ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ವಿರುದ್ಧ ಸಿಡಿಲಬ್ಬರದ ಅರ್ಧ ಶತಕ ಸಿಡಿಸಿ ಉತ್ತಮ ಫಾರ್ಮ್ ನಲ್ಲಿದ್ದ ಗಿಲ್ ಅವರು ರಿಯಾನ್ ಪರಾಗ್ ಹೆಣೆದ ಬಲೆಗೆ ಬಿದ್ದರು.

53 ರನ್ ಗಳಿಗೆ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ಗುಜರಾತ್ ಟೈಟನ್ಸ್ ಗೆ ನಾಯಕ ಹಾರ್ದಿಕ ಪಾಡ್ಯ ಮತ್ತು ಅಭಿನವ್ ಮನೋಹರ್ ಆಸರೆಯಾದರು.

ನಾಲ್ಕನೇ ವಿಕೆಟ್ ಗೆ ಜೊತೆಗೂಡಿದ ಈ ಜೋಡಿ ರಾಜಸ್ಥಾನ್ ರಾಯಲ್ಸ್ ಬೌಲರ್ ಗಳ ಮೈಚಳಿ ಬಿಡಿಸಿದರು ಕ್ರೀಡಾಂಗಣದ ಮೂಲೆ ಮೂಲೆಗೆ ಬೌಂಡರಿ, ಸಿಕ್ಸರ್ ಗಳ ಪ್ರದರ್ಶನ ಮಾಡಿದ ಹಾರ್ದಿಕ್ ಮತ್ತು ಮನೋಹರ್ ಜೋಡಿ ಅಭಿಮಾನಿಗಳಿಂದ ಹರ್ಷೋದ್ಗಾರ ಗಳಿಸಿತು.

ಏಪ್ರಿಲ್ 18 ರ ತನಕ ಶಿವಮೊಗ್ಗ ಜಿಲ್ಲೆಯಲ್ಲಿ ವರುಣನಾರ್ಭಟ

0

ಕರ್ನಾಟಕದ ಕರಾವಳಿ ಸೇರಿದಂತೆ ಕೆಲವು ಕಡೆ ಮುಂದಿನ 4 ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು, ಶಿವಮೊಗ್ಗ, ಮೈಸೂರು, ಚಿಕ್ಕಮಗಳೂರು, ಕೊಡಗು, ಕರಾವಳಿ ಜಿಲ್ಲೆಗಳಲ್ಲಿ ಗುರುವಾರ ಸಂಜೆಯೂ ಜೋರಾಗಿ ಮಳೆಯಾಗಿದೆ.

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಇಂದು ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ.

ಭಾರೀ ಮಳೆಯಿಂದ ತುಮಕೂರು, ಚಾಮರಾಜನಗರ, ಮಂಡ್ಯ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮರಗಳು, ವಿದ್ಯುತ್‌ ಕಂಬಗಳು ಧರೆಗುರುಳಿವೆ. ಬಿರುಗಾಳಿಗೆ ಹಲವೆಡೆ ಚಾವಣಿಗೆ ಅಳವಡಿಸಿದ್ದ ತಗಡಿನ ಶೀಟುಗಳು ಹಾರಿಹೋಗಿವೆ. ಸಿಡಿಲು ಬಡಿದು ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.

ತಮಿಳುನಾಡು ತೀರ ಪ್ರದೇಶದಲ್ಲಿ ಸೃಷ್ಟಿಯಾಗಿರುವ ಸೈಕ್ಲೋನ್‌ ಪ್ರಭಾವದಿಂದಾಗಿ ಕರ್ನಾಟಕದ ಕರಾವಳಿ ಹಾಗೂ ಕೇರಳದ ಇಡುಕ್ಕಿ ಜಿಲ್ಲೆಯಲ್ಲಿ ಇಂದು ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಕರ್ನಾಟಕದಲ್ಲಿ ಪೂರ್ವ ಮುಂಗಾರು ತುಸು ಚುರುಕುಗೊಂಡಿದ್ದು, ರಾಜ್ಯದ ಕರಾವಳಿ ಸೇರಿದಂತೆ ಕೆಲವು ಕಡೆ ಮುಂದಿನ 4 ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳ ಕೆಲವು ಕಡೆ ಏ.18ರವರೆಗೆ ಮಳೆಯಾಗುವ ಸಂಭವವಿದೆ. ಇದೇ ಅವಧಿಯಲ್ಲಿ ಉತ್ತರ ಒಳನಾಡಿನ ಬಾಗಲಕೋಟೆ, ಧಾರವಾಡ, ಹಾವೇರಿ ಜಿಲ್ಲೆಗಳ ಕೆಲವು ಕಡೆ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗ ಮತ್ತು ತುಮಕೂರಿನ ಕೆಲವು ಕಡೆ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದಿನಿಂದ ಎರಡು ದಿನಗಳು ಗುಡುಗು ಸಹಿತ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ತಮಿಳುನಾಡಿನಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ತುಮಕೂರು, ಮಂಡ್ಯ, ಮೈಸೂರು ಹಾಗೂ ದಕ್ಷಿಣ ಒಳನಾಡಿನಲ್ಲಿ ಇಂದು ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಸುಳ್ಯ, ಪುತ್ತೂರು, ಬಂಟ್ವಾಳ ಸೇರಿದಂತೆ ಮಂಗಳೂರು ನಗರದಲ್ಲೂ ಭಾರೀ ಮಳೆಯಾಗಿದೆ. ಭಾರೀ ಗಾಳಿ ಮಳೆಗೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ ವಿದ್ಯುತ್ ಕಂಬ ರಸ್ತೆಗೆ ಬಿದ್ದಿದೆ. ಬಂಗಾಳ ಕೊಲ್ಲಿಯಿಂದ ಈಶಾನ್ಯ ರಾಜ್ಯಗಳಿಗೆ ಕಡಿಮೆ ಉಷ್ಣವಲಯದ ಮಟ್ಟದಲ್ಲಿ ಬಲವಾದ ನೈಋತ್ಯ ಮಾರುತಗಳ ಪ್ರಭಾವದ ಹಿನ್ನೆಲೆಯಲ್ಲಿ ಮುಂದಿನ 4 ದಿನಗಳ ಕಾಲ ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್‌, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಗುಡುಗು ಮತ್ತು ಮಿಂಚು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.
ಭಾರತೀಯ ಹವಾಮಾನ ಇಲಾಖೆಯು ಅಸ್ಸಾಂ ಮತ್ತು ಮೇಘಾಲಯ ರಾಜ್ಯಗಳಿಗೆ ‘ಆರೆಂಜ್ ಅಲರ್ಟ್​’ ನೀಡಿದೆ.

ಏ. 16ರವರೆಗೆ ಅಸ್ಸಾಂ, ಮೇಘಾಲಯ, ಅರುಣಾಚಲ ಪ್ರದೇಶ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಭಾರೀ ಮಳೆಯಾಗಲಿದೆ. ದಕ್ಷಿಣ ತಮಿಳುನಾಡಿನಲ್ಲಿ ಚಂಡಮಾರುತದ ಚಲನೆ ಉಂಟಾಗಲಿದೆ. ಮುಂದಿನ 4 ದಿನಗಳಲ್ಲಿ ಕೇರಳ, ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು ಅಥವಾ ಮಿಂಚಿನ ಜೊತೆಗೆ ವ್ಯಾಪಕವಾದ ಮಳೆಯಾಗಲಿದೆ. ತಮಿಳುನಾಡು, ಪುದುಚೇರಿ, ಕಾರೈಕಲ್, ಆಂಧ್ರಪ್ರದೇಶದ ಕರಾವಳಿಯಲ್ಲೂ ಮಳೆಯಾಗಲಿದೆ.

ಇಂದು ತಮಿಳುನಾಡು, ಪುದುಚೇರಿ, ಕಾರೈಕಲ್ ಮತ್ತು ಕೇರಳದಲ್ಲಿ ವಿಪರೀತ ಮಳೆಯಾಗಲಿದೆ.
ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಸಿಕ್ಕಿಂ ಮತ್ತು ಕೇರಳದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

ಕಾಂಗ್ರೆಸ್ ನವರು ತನಿಖಾಧಿಕಾರಿ, ಜಡ್ಜ್ ಆಗುವ ಅಗತ್ಯವಿಲ್ಲ- ಸಿಎಂ

0

ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆಗೆ ಸಂಬಂಧಿಸಿದಂತೆ, ಸಚಿವ ಕೆ.ಎಸ್. ಈಶ್ವರಪ್ಪ ಅವರು ಸ್ವಯಂ ಪ್ರೇರಣೆಯಿಂದ ರಾಜೀನಾಮೆ ಕೊಡಲು‌ ನಿರ್ಧರಿಸಿದ್ದಾರೆಯೇ ಹೊರತು, ಯಾವುದೇ ಒತ್ತಡದಿಂದಲ್ಲ. ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಅಗತ್ಯವಿದ್ದರಷ್ಟೇ ಈಶ್ವರಪ್ಪ ಅವರನ್ನು ಬಂಧಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.

ಹುಬ್ಬಳ್ಳಿ ನಗರದ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಬೆಳಿಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಈಶ್ವರಪ್ಪ ಅವರೊಂದಿಗೆ ಮಾತನಾಡಿದ್ದೇನೆ. ತಾವು ನಿರಪರಾಧಿಯಾಗಿದ್ದು, ಆದಷ್ಟು ಬೇಗ ತನಿಖೆ ಮಾಡಿದರೆ ಆರೋಪದಿಂದ ಮುಕ್ತನಾಗುತ್ತೇನೆ ಎಂದಿದ್ದಾರೆ.
ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಿದಾಗ ಸತ್ಯಾಂಶ ಹೊರಬರಲಿದೆ ಎಂದರು.

ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿದ್ದ ಜಾರ್ಜ್ ವಿರುದ್ಧವೂ ಪೊಲೀಸ್ ಅಧಿಕಾರಿ ಆರೋಪ ಆತ್ಮಹತ್ಯೆ ಮಾಡಿಕೊಂಡಿದ್ದರು. ಆಗ ರಾಜ್ಯದ ಪೊಲೀಸರಾಗಲಿ ಅಥವಾ ಸಿಬಿಐನವರಾಗಲಿ ಜಾರ್ಜ್ ಅವರನ್ನು ಬಂಧಿಸಿರಲಿಲ್ಲ. ತನಿಖೆ ಆಧರಿಸಿ, ಈಶ್ವರಪ್ಪ ಅವರನ್ನು ಬಂಧಿಸಬೇಕೇ ಬೇಡವೇ ಎಂಬುದನ್ನು ಪೊಲೀಸರು ನಿರ್ಧರಿಸಲಿದ್ದಾರೆ. ಈ ವಿಷಯದಲ್ಲಿ ಕಾಂಗ್ರೆಸ್ ನವರು ತನಿಖಾಧಿಕಾರಿ ಆಥವಾ ಜಡ್ಜ್ ಆಗುವ ಅವಶ್ಯಕತೆ ಇಲ್ಲ. ತನಿಖೆಗೆ ಮುಕ್ತ ಅವಕಾಶ ನೀಡಬೇಕು ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿದ್ದ ಜಾರ್ಜ್ ವಿರುದ್ಧವೂ ಪೊಲೀಸ್ ಅಧಿಕಾರಿ ಆರೋಪ ಆತ್ಮಹತ್ಯೆ ಮಾಡಿಕೊಂಡಿದ್ದರು. ಆಗ ರಾಜ್ಯದ ಪೊಲೀಸರಾಗಲಿ ಅಥವಾ ಸಿಬಿಐನವರಾಗಲಿ ಜಾರ್ಜ್ ಅವರನ್ನು ಬಂಧಿಸಿರಲಿಲ್ಲ. ತನಿಖೆ ಆಧರಿಸಿ, ಈಶ್ವರಪ್ಪ ಅವರನ್ನು ಬಂಧಿಸಬೇಕೇ ಬೇಡವೇ ಎಂಬುದನ್ನು ಪೊಲೀಸರು ನಿರ್ಧರಿಸಲಿದ್ದಾರೆ.

ಈ ವಿಷಯದಲ್ಲಿ ಕಾಂಗ್ರೆಸ್ ನವರು ತನಿಖಾಧಿಕಾರಿ ಆಥವಾ ಜಡ್ಜ್ ಆಗುವ ಅವಶ್ಯಕತೆ ಇಲ್ಲ. ತನಿಖೆಗೆ ಮುಕ್ತ ಅವಕಾಶ ನೀಡಬೇಕು ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಶುಭ ಶುಕ್ರವಾರ ಕ್ರಿಸ್ತರ ಪುನರವತಾರದ ಮುಂಬೆಳಗು

0

ಏಪ್ರಿಲ್ 17ರ ಭಾನುವಾರ ಈಸ್ಟರ್ ಇದ್ದು, ಅದಕ್ಕೂ ಮುನ್ನ ಶುಕ್ರವಾರದಂದು ಗುಡ್ ಫ್ರೈಡೆ ಆಚರಿಸಲಾಗುತ್ತದೆ. ಗುಡ್ ಫ್ರೈಡೆಯಂದು ಏಸುಕ್ರಿಸ್ತರು ಶಿಲುಬೆಗೇರಿದ ದಿನ.

ತ್ಯಾಗ ಮತ್ತು ನೋವನ್ನು ಸಂಕೇತಿಸುವ ಇದು, ಕ್ರಿಶ್ಚಿಯನ್ನರಿಗೆ ಪವಿತ್ರ ದಿನವಾಗಿದೆ.

ಇಂದು (ಏ.15) ಶುಭ ಶುಕ್ರವಾರ (Good Friday). ಶುಭ ಶುಕ್ರವಾರವು ಕ್ರಿಶ್ಚಿಯನ್ನರಿಗೆ ವರ್ಷದ ಪವಿತ್ರ ಸಮಯಗಳಲ್ಲಿ ಒಂದು. ಈಸ್ಟರ್​ಗೂ ಮುನ್ನ ಗುಡ್ ಫ್ರೈಡೆಯನ್ನು ಆಚರಿಸಲಾಗುತ್ತದೆ. ಏಪ್ರಿಲ್ 17ರ ಭಾನುವಾರ ಈಸ್ಟರ್ ಇದ್ದು, ಅದಕ್ಕೂ ಮುನ್ನ ಶುಕ್ರವಾರದಂದು ಗುಡ್ ಫ್ರೈಡೆ ಆಚರಿಸಲಾಗುತ್ತದೆ. ಈಸ್ಟರ್​ನಂದು ಕ್ರಿಸ್ತನು ಮರುಜನ್ಮ ಪಡೆದ ದಿನ ಎನ್ನಲಾಗುತ್ತದೆ.

ಹಾಗಾಗಿ ಕ್ರಿಸ್ತ ಶಿಲುಬೆಗೇರಿದ ಗುಡ್ ಫ್ರೈಡೆಗೆ ಮಹತ್ವವಿದೆ.

ಗುಡ್ ಫ್ರೈ ಡೆ ಇತಿಹಾಸ ನೋಡುವುದಾದರೆ,

ಹೊಸ ಒಡಂಬಡಿಕೆಯ ಪ್ರಕಾರ, ರೋಮನ್ನರು ಯೇಸುವನ್ನು ಶಿಲುಬೆಗೇರಿಸಿದ ದಿನವನ್ನು ಗುಡ್ ಫ್ರೈಡೇ ಎನ್ನಲಾಗುತ್ತದೆ. ಯಹೂದಿ ಧಾರ್ಮಿಕ ಮುಖಂಡರು ದೇವರ ಮಗನೆಂದು ಹೇಳಿಕೊಳ್ಳುವುದಕ್ಕಾಗಿ ಯೇಸುವಿಗೆ ದೇವದೂಷಣೆಯನ್ನು ಮಾಡಿದರು. ಜೊತೆಗೆ ಅವರನ್ನು ರೋಮನ್ನರ ಬಳಿಗೆ ತಂದುಕರೆತಂದರು. ರೋಮನ್ ನಾಯಕನಾದ ಪೊಂಟಿಯಸ್ ಪಿಲಾತನು ಯೇಸುವನ್ನು ಶಿಲುಬೆಗೇರಿಸಲು ಶಿಕ್ಷೆ ವಿಧಿಸಿದನು. ಏಸುವಿಗೆ ಶಿಲುಬೆಗೇರಿಸಿ ಮರಣದಂಡನೆ ವಿಧಿಸಲಾಯಿತು. ಮುಳ್ಳಿನ ಕಿರೀಟವನ್ನು ಧರಿಸಿ ಬೆಟ್ಟದ ಮೇಲೆ ಶಿಲುಬೆಯನ್ನು ಸಾಗಿಸಲು ಬಲವಂತಪಡಿಸಲಾಯಿತು.

ಶಿಲುಬೆಗೇರಿಸುವಿಕೆಯು ಆ ಸಮಯದಲ್ಲಿ ಮರಣದಂಡನೆಯ ಅತ್ಯಂತ ಕ್ರೂರ ರೂಪವಾಗಿತ್ತು. ಸೈನಿಕರು ಯೇಸುವನ್ನು ಶಿಲುಬೆಗೆ ಹೊಡೆದ ನಂತರ ಸಾಯಲು ಬಿಟ್ಟರು.

ಏಸು ಮತ್ತು ಅವರ ಅನುಯಾಯಿಗಳು ಸಾಯುವ ಹಿಂದಿನ ರಾತ್ರಿ ಕೊನೆಯ ಭೋಜನಕ್ಕೆ ಹಾಜರಾಗಿದ್ದರು. ನಂತರ ಗೆತ್ಸೆಮನ್ ಗಾರ್ಡನ್‌ಗೆ ಪ್ರಯಾಣಿಸಿದರು. ಯೇಸುಕ್ರಿಸ್ತನ ಮರಣವು ನೋವಿನ ಅನುಭವವಾಗಿದ್ದರೂ ಕೂಡ ಕ್ರಿಶ್ಚಿಯನ್ನರು ಅದನ್ನು ಗೌರವಿಸುತ್ತಾರೆ.

ಇದಕ್ಕೆ ಕಾರಣ, ಅವರು ತಮ್ಮ ಪಾಪಗಳಿಗಾಗಿ ಸತ್ತು, ಅಂತಿಮ ತ್ಯಾಗವನ್ನು ಮಾಡಿದರು ಎಂದು ಅವರು ನಂಬುತ್ತಾರೆ.

ಅನೇಕ ಕ್ರೈಸ್ತರು ಶುಭ ಶುಕ್ರವಾರದಂದು ಚರ್ಚ್​ಗೆ ತೆರಳಿ ವಿಶೇಷ ಸೇವೆಗಳಲ್ಲಿ ಭಾಗವಹಿಸುತ್ತಾರೆ. ಮನೆಯಲ್ಲಿ ಬೈಬಲ್​ನ ಪದ್ಯಗಳನ್ನು ಓದಿ ಯೇಸುಕ್ರಿಸ್ತನ ತ್ಯಾಗವನ್ನು ಸ್ಮರಿಸುತ್ತಾರೆ. ಕ್ರಿಸ್ತನ ಕೊನೆಯ ಕ್ಷಣಗಳ ಸ್ಮರಣಾರ್ಥವಾಗಿ ಅನೇಕರು ಮೆರವಣಿಗೆಗಳಲ್ಲಿ ಅಥವಾ ಬಯಲು ನಾಟಕಗಳಲ್ಲಿ ಭಾಗವಹಿಸುತ್ತಾರೆ.

ನಿಷ್ಪಕ್ಷಪಾತವಾಗಿ ತನಿಖೆಯಾದರೆ ಇನ್ನೂ ಕೆಲವು ಸಚಿವರ ಬಣ್ಣ ಬಯಲಾಗುತ್ತೆ-ಖರ್ಗೆ

0

ಕಮಿಷನ್ ವಿಚಾರವಾಗಿ ಈಶ್ವರಪ್ಪ ರಾಜಿನಾಮೆ ಘೋಷಿಸಿದ್ದಾರೆ. ಇದೊಂದೇ ವಿಕೆಟ್ ಅಲ್ಲ, ನಿಷ್ಪಕ್ಷಪಾತವಾಗಿ ತನಿಖೆ ನಡೆಸಿದರೆ ಸರ್ಕಾರದ ಅರ್ಧ ಕ್ಯಾಬಿನೆಟ್ ಖಾಲಿಯಾಗುತ್ತದೆ ಎಂದು ವಿಧಾನಸೌಧದಲ್ಲಿ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಭ್ರಷ್ಟಾಚಾರ ಎನ್ನುವುದು ಪ್ರತಿ ಇಲಾಖೆಯಲ್ಲಿ ಇದೆ. ಇದನ್ನು ಬೇರು ಸಮೇತ ಕಿತ್ತೊಗೆಯಬೇಕಿದೆ ಎಂದರು.

ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ 2019- 20 ಹಾಗೂ 20-21 ನೇ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಯಲ್ಲಿ ಬೋರ್ ವೆಲ್ ಟೆಂಡರ್ ಪ್ರಕ್ರಿಯೆಯಲ್ಲಿ ಅವ್ಯವಹಾರ ವಿಚಾರ ತನಿಖೆಯಾಗುತ್ತಿದೆ. ಆದರೆ ಕೆಲಸ ಇನ್ನೂ ನಡೆಸಿಲ್ಲ ಸಮಾಜ ಕಲ್ಯಾಣ ಇಲಾಖೆಯ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿಗೆ ಕಿಕ್ ಬ್ಯಾಕ್ ಹೋಗಿದೆ ಎಂದು ಆರೋಪಿಸಿದರು.

ಸಮಾಜ ಕಲ್ಯಾಣ ಇಲಾಖೆ ಯಲ್ಲಿ 14,530 ಬೋರ್ ವೆಲ್ ಗೆ 431 ಕೋಟಿ ರೂಪಾಯಿ ಮೊತ್ತದ ಟೆಂಡರ್ ಕರೆಯಲಾಗಿತ್ತು. ಐಟಿ ರಿಟರ್ನ್ ಫೇಕ್ ಮಾಡಲಾಗಿದೆ ಎಂಬ ಆರೋಪ ಮಾಡಿದ್ದೆವು.‌

ಸದನದಲ್ಲಿ ಈ ವಿಚಾರ ಪ್ರಸ್ತಾಪ ಮಾಡಿದ್ದೆವು. ಇಲಾಖೆಯಿಂದ ತನಿಖೆಗೆ ನಿವೃತ್ತ ಇಂಜಿನಿಯರ್ ನೇತೃತ್ವದ ತನಿಖೆಗೆ ಸೂಚನೆ ನೀಡಲಾಗಿತ್ತು. ಅದರ ವರದಿ ಇಂದು ಬರಬೇಕಿತ್ತು. ಆದರೆ 15 ದಿನಗಳಲ್ಲಿ ತನಿಖೆ ಆಗಬೇಕು ಎಂದರೂ ಇನ್ನೂ ಬೋರ್ ವೆಲ್ ಕೆಲಸ ನಿಂತಿಲ್ಲ. ದೇವರಾಜ ಅರಸ್ ನಿಗಮದಲ್ಲಿ ಒಂದು ಬೋರ್ ವೆಲ್ ಗೆ 93 ಲಕ್ಷ ಬಿಲ್ ಮಾಡಲಾಗುತ್ತಿದೆ. ಆದರೆ ಅಂಬೇಡ್ಕರ್, ಆದಿ ಜಾಂಬವ ನಿಗಮದಲ್ಲಿ ಬೋರ್ ವೆಲ್ 1.83 ಲಕ್ಷ ಇದೆ. ಯಾವುದೇ ತನಿಖೆ ಆಗಬೇಕಾದರೆ ಮೊದಲು ಕೆಲಸ ನಿಲ್ಲಿಸಬೇಕು. ಲೋಪ ಆಗಿಲ್ಲ ಎಂದ ನಂತರ ಕೆಲಸ ಆರಂಭಿಸಬೇಕು. ಆದರೆ ಕೆಲಸ ಏಕೆ ನಿಲ್ಲಿಸಿಲ್ಲ? ಕೋಟಾ ಶ್ರೀನಿವಾಸ್ ಪೂಜಾರಿ ತನಿಖಾ ವರದಿ ಕೊಡಿ, ಲೋಪ ಕಂಡು ಬಂದರೆ ಬಿಲ್ ಕೊಡಲ್ಲ ಎಂದಿದ್ದಾರೆ. ಇದರ ಅರ್ಥ ಏನು?. ಹಾಗಾದರೆ ಗುತ್ತಿಗೆದಾರರು ಸುಮ್ಮನಿರುತ್ತಾರಾ? ನ್ಯಾಯಾಲಯಕ್ಕೆ ಹೋಗುತ್ತಾರೆ. ಇದರಲ್ಲಿ ಕಿಕ್ ಬ್ಯಾಕ್ ಹೋಗಿದೆ ಅದಕ್ಕೆ ಕೆಲಸ ನಿಂತಿಲ್ಲ ಎಂಬ ಅನುಮಾನ ಇದೆ ಎಂದರು.

ಇದು ತನಿಖೆಯಾದರೆ ಮಾಜಿ ಸಚಿವರ ಹಾಗೂ ಹಾಲಿ ಸಚಿವರ ವಿಕೆಟ್ ಬೀಳುತ್ತೆ ಎಂದರು.

ಬಾಬಾ ಸಾಹೇಬ್ ಅಂಬೇಡ್ಕರ್ ರವರಿಗೆ ಪುಷ್ಪ ನಮನ

0

ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿಯಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಪ್ರಧಾನಿ ನರೇಂದ್ರ ಮೋದಿಯವರು ದೆಹಲಿಯ ಸಂಸತ್ ಭವನದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.