Wednesday, February 25, 2026
Wednesday, February 25, 2026
Home Blog Page 1631

ಕೋವಿಡ್ ಇಲ್ಲ ಎಂದು ನಿರ್ಲಕ್ಷ್ಯ ಮಾಡಬೇಡಿ-ಪ್ರಧಾನಿ ಮೋದಿ

0

ಕೊರೊನಾ ವೈರಸ್ ಹೋಗಿಲ್ಲ. ಅದು ತನ್ನ ರೂಪ ಬದಲಾಯಿಸುತ್ತಾ ಮತ್ತೆ ಮರುಕಳಿಸುತ್ತಿದೆ. ಆದ್ದರಿಂದ, ಜನರು ಸಾಂಕ್ರಾಮಿಕ ರೋಗದ ವಿರುದ್ಧದ ತಮ್ಮ ಹೋರಾಟವನ್ನು ಕೈಬಿಡದೇ ಮುಂದುವರಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ಹೇಳಿದ್ದಾರೆ.

ಕೋವಿಡ್ ಎನ್ನುವ ಬಹುರೂಪಿ ಯಾವಾಗ ತನ್ನ ರೂಪ ಬದಲಿಸಿ, ಮತ್ತೆ ಮರುಕಳಿಸುವುದೋ ಎಂಬುದು ಯಾರಿಗೂ ತಿಳಿಯದು ಎಂದ ಮೋದಿ, ಸಾರ್ವಜನಿಕರ ಬೆಂಬಲದಿಂದಾಗಿ ಕೊರೋನಾ ಹರಡುವಿಕೆಯನ್ನು ನಿಯಂತ್ರಿಸಲು ಸುಮಾರು 185 ಕೋಟಿ ಡೋಸ್ ಲಸಿಕೆಗಳನ್ನು ನೀಡುವುದು ಸಾಧ್ಯವಾಯಿತು ಎಂದು ತಿಳಿಸಿದ್ದಾರೆ.

ಗುಜರಾತ್‌ನ ಜುನಾಗಢ್ ಜಿಲ್ಲೆಯ ವಂಥಲಿಯಲ್ಲಿ ಮಾ ಉಮಿಯಾ ಧಾಮ್‌ನ ಮಹಾಪಾಟೋತ್ಸವ ಕಾರ್ಯಕ್ರಮವನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ಉದ್ದೇಶಿಸಿ ಮಾತನಾಡಿದ ಮೋದಿ ಅವರು, ರಾಸಾಯನಿಕ ಗೊಬ್ಬರಗಳ ಹಾವಳಿಯಿಂದ ಭೂಮಿ ತಾಯಿಯನ್ನು ರಕ್ಷಿಸುವ ಉದ್ದೇಶದಿಂದ ನೈಸರ್ಗಿಕ ಕೃಷಿಯತ್ತ ಮುಖ ಮಾಡುವಂತೆ ಮಾ ಉಮಿಯಾ ಭಕ್ತರನ್ನು ಒತ್ತಾಯಿಸಿದರು.

ಭಾರತದ ಸ್ವಾತಂತ್ರ್ಯದ 75ನೇ ವರ್ಷವನ್ನು ಆಚರಿಸಲು ಆಯೋಜಿಸಲಾಗುತ್ತಿರುವ ಆಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ಪ್ರತಿಜಿಲ್ಲೆಯಲ್ಲಿ 75 ಅಮೃತ ಸರೋವರಗಳನ್ನು ರಚಿಸುವ ಪ್ರತಿಜ್ಞೆಯನ್ನು ಕೈಗೊಳ್ಳೋಣ. ಪ್ರತಿವರ್ಷ ಮಳೆಗಾಲದ ಮೊದಲು ಕೆರೆಗಳ ಹೂಳುಗಳನ್ನು ಎತ್ತಿ, ನೀರಿನ ನಾಲೆಗಳನ್ನು ಸ್ವಚ್ಛಗೊಳಿಸುವ ಮೂಲಕ ಜಲಸಂರಕ್ಷಣೆಯ ಕಾರ್ಯವನ್ನು ಕೈಗೊಳ್ಳಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ಮಾ ಉಮಿಯಾ ಅವರ ಭಕ್ತರು ಗ್ರಾಮೀಣ ಮಟ್ಟದಲ್ಲಿ ಅಪೌಷ್ಟಿಕ ಮಕ್ಕಳು ಮತ್ತು ರಕ್ತಹೀನತೆಯಿಂದ ಬಳಲುತ್ತಿರುವ ತಾಯಂದಿರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವ ಯೋಜನೆಗಳನ್ನು ಕೈಗೆತ್ತಿಗೊಳ್ಳಬೇಕು. ದೇವಸ್ಥಾನದ ನಿರ್ವಹಣೆ ಮಾಡುವ ಮಾ ಉಮಿಯಾ ಟ್ರಸ್ಟ್ ,ಗ್ರಾಮಮಟ್ಟದಲ್ಲಿ ಮಕ್ಕಳ ಆರೋಗ್ಯ ವೃದ್ಧಿಸುವ ಸ್ಪರ್ಧೆಗಳನ್ನು ಆಯೋಜಿಸಬೇಕು ಎಂದು ಹೇಳಿದ್ದಾರೆ.

ಭಾರತ- ಅಮೆರಿಕ ಮಹತ್ವದ ಮಾತುಕತೆ

0

ಮಾನ್ಯ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಜೊ ಬೈಡನ್‌ ಅವರು ಇಂದು ವರ್ಚುವಲ್‌ ಮಾದರಿಯಲ್ಲಿ ಪರಸ್ಪರ ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

ರಷ್ಯಾದಿಂದ ಕಚ್ಚಾ ತೈಲವನ್ನು ಕೊಂಡುಕೊಳ್ಳಲು ಮುಂದಾಗಿರುವ ಭಾರತದ ಮೇಲೆ ತೈಲವನ್ನು ಕೊಂಡು ಕೊಳ್ಳಬಾರದು ಎಂದು ಅಮೆರಿಕ, ಪಾಶ್ಚಾತ್ಯ ರಾಷ್ಟ್ರಗಳು ಒತ್ತಡ ಹೇರುತ್ತಿದೆ. ಈ ಹಿನ್ನೆಲೆಯಲ್ಲಿ ಉಭಯ ರಾಷ್ಟ್ರ ದ ನಾಯಕರ ಮಾತುಕತೆ ಅವಶ್ಯಕತೆ ಇದೆ.

ಈ ಭೇಟಿಯಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತ, ಅಮೆರಿಕ ನಡುವಿನ ರಾಜತಾಂತ್ರಿಕ ಸಂಬಂಧಗಳು, ವ್ಯಾಪಾರ- ವಹಿವಾಟಿನಲ್ಲಿ ಉಭಯ ದೇಶಗಳು ನೀಡುತ್ತಿರುವ ಪರಸ್ಪರ ಸಹಾಯ, ಇಂಡೋ,ಪೆಸಿಫಿಕ್‌ ಪ್ರಾಂತ್ಯದಲ್ಲಿನ ದೇಶಗಳ ಮತ್ತು ಜಾಗತಿಕ ಸಮಸ್ಯೆಗಳ ಬಗ್ಗೆ ಈ ವಿಷಯಗಳನ್ನು ಚರ್ಚಿಸುವ ಸಾಧ್ಯತೆಗಳಿವೆ.

ಇದರ ಜೊತೆಗೆ ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಇತ್ತೀಚೆಗೆ ಉಂಟಾಗಿರುವ ವಿದ್ಯಮಾನಗಳೂ ಉಭಯ ನಾಯಕರ ನಡುವೆ ಚರ್ಚೆ ಗೊಳಪಡಲಿವೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

ಮೇ 1 ರಿಂದ 18-45 ವರ್ಷ ವಯಸ್ಸಿನವರಿಗೆ ಲಸಿಕಾ ಅಭಿಯಾನ

0

ಭಾರತದಲ್ಲಿ ಮಹಾಮಾರಿ ಕೊರೋನಾ ಇನ್ನಷ್ಟು ಇಳಿಕೆ ಕಂಡಿದೆ. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಕೇವಲ 861 ಹೊಸ ಪ್ರಕರಣಗಳು ಪತ್ತೆಯಾಗಿದೆ. 6 ಮಂದಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದಾರೆ. ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್ ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ನಂತರ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,85,74,18,827 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

ಜನರ ಸುತ್ತ ಅಭಿವೃದ್ಧಿಯಾಗಬೇಕು-ಬಸವರಾಜ ಬೊಮ್ಮಾಯಿ

0

ಮಹಿಳಾ ಸ್ವಸಹಾಯ ಸಂಘಗಳಿಗೆ ಆರ್ಥಿಕ ನೆರವು ನೀಡಲು 500 ಕೋಟಿ ರೂ. ಒದಗಿಸುವ ವಿನೂತನ ಕಾರ್ಯಕ್ರಮದಿಂದ 3.9 ಲಕ್ಷ ಮಹಿಳೆಯರಿಗೆ ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ವಿಜಯನಗರ ಜಿಲ್ಲೆಯ ಹರಪನಹಳ್ಳಿಯಲ್ಲಿ ಆಯೋಜಿಸಿರುವ ಶ್ರೀ ಸೀತಾರಾಮ ಕಲ್ಯಾಣ ಮಹೋತ್ಸವ ಹಾಗೂ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮಹಿಳೆಯರು ಅಭಿವೃದ್ಧಿಯಲ್ಲಿ ಪಾಲುದಾರರಾಗಬೇಕು.
ಬಡತನದಲ್ಲಿರುವ ಮಹಿಳೆಯರ ಆದಾಯವನ್ನು ಹೆಚ್ಚಿಸುವ ಮೂಲಕ ರಾಜ್ಯದ ಆದಾಯವನ್ನು ಹೆಚ್ಚಿಸುವ ಉದ್ದೇಶದಿಂದ ಮಹಿಳೆಯಲ್ಲಿ ಆರ್ಥಿಕ ಶಕ್ತಿಯನ್ನು ತುಂಬುವ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಮಹಿಳಾ ಸ್ವಸಹಾಯ ಸಂಘಗಳಿಗೆ ಬ್ಯಾಂಕಿನಿಂದ ಸಾಲ ಸೌಲಭ್ಯ ಒದಗಿಸಲು ಸಾರ್ವಜನಿಕ ವಲಯದ ಆಂಕರ್ ಬ್ಯಾಂಕನ್ನು ಜೋಡಿಸಲಾಗುವುದು ಎಂದರು.

ರಾಜ್ಯ ಸರ್ಕಾರ ಗ್ರಾಮಪಂಚಾಯತಿಗಳಲ್ಲಿ ಗ್ರಾಮ ಒನ್ ಕೇಂದ್ರಗಳ ಮೂಲಕ ಜನರಿಗೆ ಅವಶ್ಯಕವಾಗಿರುವ ದಾಖಲೆಪತ್ರಗಳನ್ನು ಒದಗಿಸಲಾಗುತ್ತಿದೆ.

ಕಂದಾಯ ದಾಖಲೆಗಳನ್ನು ಸರ್ಕಾರವೇ ಜನರ ಮನೆಬಾಗಿಲಿಗೆ ತಲುಪಿಸುವ ಮೂಲಕ ಕಂದಾಯ ಕ್ರಾಂತಿ ಮಾಡಲಾಗಿದೆ. ಅಭಿವೃದ್ಧಿ ಸುತ್ತ ಜನರು ಸುತ್ತುವಂತಾಗಬಾರದು. ಜನರ ಸುತ್ತ ಅಭಿವೃದ್ಧಿಯಾಗಬೇಕು ಎಂದರು.

ಬಜೆಟ್ ನಲ್ಲಿ ಘೋಷಣೆಯಾಗಿರುವ ಎಲ್ಲ ಕಾರ್ಯಕ್ರಮಗಳಿಗೆ ಏಪ್ರಿಲ್ ತಿಂಗಳ ಅಂತ್ಯದೊಳಗೆ ಆದೇಶಗಳನ್ನು ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಎಲ್ಲ ಕಾರ್ಯಕ್ರಮಗಳು ಮುಂದಿನ ತಿಂಗಳಿನಿಂದ ಅನುಷ್ಠಾನಗೊಳಿಸಲಾಗುವುದು ಎಂದರು.

ಈ ಬಾರಿಯ ಆಯವ್ಯಯದಲ್ಲಿ ಎಸ್ ಸಿ ಎಸ್ ಪಿ-ಟಿಎಸ್ ಪಿ ಗಳಿಗೆ 28 ಸಾವಿರ ಕೋಟಿ ಮೀಸಲಿಡಲಾಗಿದೆ. ರಾಜ್ಯದಲ್ಲಿ 9 ಲಕ್ಷ ಮನೆಗಳುಬಡವರಿಗಾಗಿ ನಿರ್ಮಿಸಲಾಗುತ್ತಿದೆ. ಗ್ರಾಮಪಂಚಾಯತಿಗಳ ವ್ಯಾಪ್ತಿಯಲ್ಲಿ ಮನೆಗಳ ನಿರ್ಮಾಣಕ್ಕೆ ಅನುಮೋದನೆ ಶೀಘ್ರದಲ್ಲಿ ನೀಡಲಾಗುತ್ತದೆ.ರೈತರಿಗೆ ಡೀಸೆಲ್ ಸಹಾಯಧನ, ರೈತರ ಆರೋಗ್ಯ ರಕ್ಷಣೆ ಮಾಡುವ ಯಶಸ್ವಿನಿ ಯೋಜನೆ ಪ್ರಾರಂಭ 300 ಕೋಟಿ ವೆಚ್ಚ, 33 ಲಕ್ಷ ಜನ ರೈತರಿಗೆ ಶೂನ್ಯ ಬಡ್ಡಿಯಲ್ಲಿ ಸಾಲ ನೀಡಲು ಕ್ರಮ. ಬೆಳೆಗಳಿಗೆ ಹೆಚ್ಚಿನ ಬೆಲೆ ಸಿಗಲು ಸೆಕೆಂಡರಿ ಅಗ್ರಕಲ್ಚರ್ ನಿರ್ದೇಶನಾಲಯ ಮಾಡಿ ರೈತರ ಉತ್ಪನ್ನಗಳ ಮೌಲ್ಯವರ್ಧನೆ ಮಾಡಲು ಪ್ರತಿಯೊಂದು ಜಿಲ್ಲೆಯಲ್ಲಿ ಫುಡ್ ಪಾರ್ಕ್ ಮಾಡಲು ತೀರ್ಮಾನಿಸಲಾಗಿದೆ ಎಂದರು.

ಬೆಲೆಗಳು ಅತಿಹೆಚ್ಚು ಏರಿಕೆಯಾದದ್ದು ಕಾಂಗ್ರೆಸ್ ಅವಧಿಯಲ್ಲೇ- ಬೊಮ್ಮಾಯಿ

0

ಬೆಲೆ ಏರಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಗೆ ಪ್ರತಿಭಟನೆ ಮಾಡುವ ನೈತಿಕ ಹಕ್ಕಿಲ್ಲ. ದೇಶದಲ್ಲಿ ಅತಿಹೆಚ್ವು ಬೆಲೆ ಏರಿಕೆ ಮಾಡಿದ ಖ್ಯಾತಿ, ಕೀರ್ತಿ, ದಾಖಲೆ ಕಾಂಗ್ರೆಸ್ ನದ್ದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಿ.ಎಫ್. ಐ. ವಿದ್ಯಾರ್ಥಿಗಳ ಪ್ರತಿಭಟನೆ ಕುರಿತಂತೆ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ರಚಿಸಿರುವ ಸಮಿತಿ ಪರಾಮರ್ಶೆ ಮಾಡುತ್ತಿದ್ದು ವರದಿ ಬಂದ ಕೂಡಲೇ ತೀರ್ಮಾನ ಮಾಡಲಾಗುತ್ತದೆ ಎಂದು ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದ್ದಾರೆ

ಮುಸ್ಕಾನ್ ಅವರಿಗೆ ಅಲ್ ಖೈದಾ ಮುಖ್ಯಸ್ಥರು ನೀಡಿರುವ ಬೆಂಬಲಕ್ಕೆ ಸಂಬಂಧಿಸಿದಂತೆ ಅನಂತ ಕುಮಾರ್ ಹೆಗಡೆ ಅವರು ಪತ್ರ ಬರೆದಿದ್ದಾರೆ. ಈ ಬಗ್ಗೆ ತನಿಖೆಯಾಗಿದೆಯೇ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಏನಿದೆ ಎಂದು ಗೊತ್ತಿಲ್ಲ. ಅನಂತಕುಮಾರ್ ಹೆಗಡೆ ಅವರ ಬಳಿ ಚರ್ಚೆ ಮಾಡಿ ಅವರ ಬಳಿ ಇರುವ ಮಾಹಿತಿ ಬಗ್ಗೆ ತಿಳಿದುಕೊಳ್ಳಲಾಗುತ್ತದೆ. ಅದರ ಆಧಾರದ ಮೇಲೆ ಮುಂದಿನ ಕ್ರಮ ಜರುಗಿಸಲಾಗುತ್ತದೆ ಎಂದು ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಸುಮಲತಾ ಅಂಬರೀಶ್ ಅವರು ಬಿಜೆಪಿ ಸೇರುತ್ತಿದ್ದಾರೆಯೇ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಅವರ ಸಹೋದರಿಯ ಮಗಳ ಮದುವೆಗೆ ಆಹ್ವಾನಿಸಲು ಬಂದಿದ್ದರು. ಕೆಲವು ಅಭಿವೃದ್ಧಿ ಕೆಲಸಗಳ ಬಗ್ಗೆ ಚರ್ಚಿಸಲಾಯಿತು ಎಂದರು.

ಸಿನಿಮಾ ನಿರ್ಮಾತೃ ನಟ ರವಿಚಂದ್ರನ್ ಗೆ ಬೆಂಗಳೂರು ವಿವಿ ಡಾಕ್ಟರೇಟ್ ಪ್ರದಾನ

0

ಬೆಂಗಳೂರು ನಗರ ವಿವಿ ಘಟಿಕೋತ್ಸವದಲ್ಲಿ, ನಟ ಕ್ರೇಜಿಸ್ಟಾರ್ ವಿ.ರವಿಚಂದ್ರನ್ ಗೆ ಗೌರವ ಡಾಕ್ಟರೇಟ್ ಪದವಿಯನ್ನು ಪ್ರದಾನ ಮಾಡಲಾಯಿತು.

ಇಂದು ಬೆಂಗಳೂರಿನ ಸೆಂಟ್ರಲ್ ಕಾಲೇಜಿನ ಜ್ಞಾನಜ್ಯೋತಿ ಆಡಿಟೋರಿಯಂನಲ್ಲಿ ಬೆಂಗಳೂರು ನಗರ ವಿಶ್ವವಿದ್ಯಾಲಯದ ಘಟಿಕೋತ್ಸವ ಕಾರ್ಯಕ್ರಮ ನಡೆಸಲಾಯಿತು.

ಈ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು, ನಟ ವಿ.ರವಿಚಂದ್ರನ್ ಸೇರಿ ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು.

ಸಿನಿಮಾ ಸಾಧನೆಗಾಗಿ ನಟ ವಿ.ರವಿಚಂದ್ರನ್ ಅವರಿಗೆ ಗೌರವ ಡಾಕ್ಟರೆಟ್ ನೀಡಲಾಗಿದೆ. ಅವರು 85ಕ್ಕೂ ಹೆಚ್ಚು ಸಿನಿಮಾಗಳನ್ನು ನಿರ್ದೇಶಿಸಿ, ಸಂಭಾಷಣೆ, ಸಂಗೀತ, ನಟಿಸಿ, ನಿರ್ಮಾಪಕ, ಗೀತರಚನಾಕಾರರಾಗಿಯೂ ಕೊಡುಗೆ ನೀಡಿದ್ದಾರೆ.

ಜೋಗ ಜಲಪಾತದ ಬಳಿ ರೋಪ್ ವೇ ನಿರ್ಮಾಣ ಯೋಜನೆಗೆ ಅಸ್ತು

0

ರಾಜ್ಯ ಸರ್ಕಾರದಿಂದ ವಿಶ್ವವಿಖ್ಯಾತ ಜೋಗದ ಜಲಪಾತದ ಬಳಿಯಲ್ಲಿ ರೋಪ್ ವೇ ನಿರ್ಮಾಣಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿತ್ತು.

ಈ ಬಳಿಕ, ಇದೀಗ ಕೆಪಿಸಿಎಲ್ ನಿರ್ದೇಶಕರ ಮಂಡಳಿಯ ಸಭೆಯಲ್ಲಿಯೂ ಗ್ರೀನ್ ಸಿಗ್ನಲ್ ನೀಡಲಾಗಿದೆ ಎಂದು ತಿಳಿದುಬಂದಿದೆ.

ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಈ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಕರ್ನಾಟಕ ವಿದ್ಯುತ್ ನಿಗಮ ನಿರ್ದೇಶಕರ ಆಡಳಿತ ಮಂಡಳಿಯ ಸಭೆಯಲ್ಲಿ, ಈ ತೀರ್ಮಾನವನ್ನು ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಜಿಲ್ಲೆಗೊಂದು ಇಎಸ್ಐ ಆಸ್ಪತ್ರೆ ಸೌಲಭ್ಯ ಪ್ರಸ್ತಾವನೆ ಸಲ್ಲಿಕೆ- ಶಿವರಾಮ್ ಹೆಬ್ಬಾರ್

0

ರಾಜ್ಯದ ಕಾರ್ಮಿಕರಿಗೆ ಹೆಚ್ಚಿನ ಅನುಕೂಲ ಆಗುವಂತೆ ಕೇಂದ್ರದ ಸಹಕಾರ ಕೋರಿರುವ ಸಚಿವ ಶಿವರಾಂ ಹೆಬ್ಬಾರ್, ಇಎಸ್‌ಐ ಆಸ್ಪತ್ರೆಗಳಲ್ಲಿ ಅಸಂಘಟಿತ ಕಾರ್ಮಿಕರಿಗೂ ವೈದ್ಯಕೀಯ ಸೌಲಭ್ಯ, ಜಿಲ್ಲೆಗೊಂದು ಇಎಸ್‌ಐ ಆಸ್ಪತ್ರೆ ತೆರೆಯಲು ಅನುಮತಿ, ಕಾರ್ಮಿಕ ಕಲ್ಯಾಣ ಮಂಡಳಿಗೆ ಸೆಸ್‌ ರಿಯಾಯಿತಿ ಸೇರಿದಂತೆ ಹಲವು ಅಂಶಗಳ ಪ್ರಸ್ತಾವನೆಯನ್ನು ಕೇಂದ್ರಕ್ಕೆ ಸಲ್ಲಿಸಿದರು.

ಇದಕ್ಕೆ ಕೇಂದ್ರದ ಸಚಿವರುಗಳಿಂದ ಸಕಾರಾತ್ಮಕ ಸ್ಪಂದನೆ ಕೂಡ ಸಿಕ್ಕಿದೆ ಎಂದು ತಿಳಿದುಬಂದಿದೆ.

ಕೇಂದ್ರ ಕಾರ್ಮಿಕ ಸಚಿವ ಭೂಪೇಂದ್ರ ಸಿಂಗ್‌ ಯಾದವ್‌ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಸಂದರ್ಭ ರಾಜ್ಯ ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್, ಇಎಸ್‌ಐ ಆಸ್ಪತ್ರೆಗಳಲ್ಲಿ ಅಸಂಘಟಿತ ಕಾರ್ಮಿಕರಿಗೂ ವೈದ್ಯಕೀಯ ಸೌಲಭ್ಯ ದೊರಕುವಂತೆ ಕ್ರಮ ವಹಿಸಬೇಕು.

ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು ಸೆಸ್‌ ಸಂಗ್ರಹದ ಮೂಲಕ ಆರ್ಥಿಕ ಸಂಪನ್ಮೂಲ ಹೊಂದಿದ್ದು, ಈಗಾಗಲೇ ಇತರ ಮಂಡಳಿಗಳಾದ ಕಾಫಿ ಮಂಡಳಿ, ತಂಬಾಕು ಮಂಡಳಿಗೆ ನೀಡಿರುವಂತೆ ಕಾರ್ಮಿಕ ಕಲ್ಯಾಣ ಮಂಡಳಿಗೂ ಸೆಸ್‌ ಮೇಲಿನ ತೆರಿಗೆಯಿಂದ ರಿಯಾಯಿತಿ ನೀಡುವಂತೆ ಮನವಿ ಮಾಡಿದರು.

ಅಲ್ಲದೆ, ಐಎಸ್‌ಐ ಆಸ್ಪತ್ರೆಗಳಲ್ಲಿ “ಆಯುಷ್‌’ ವಿಭಾಗಗಳನ್ನು ತೆರೆಯಬೇಕು. ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ಒಂದರಂತೆ ಇಎಸ್‌ಐ ಆಸ್ಪತ್ರೆಗಳನ್ನು ತೆರೆಯುವಂತೆ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.

19 ಚಿಕಿತ್ಸಾಲಯಕ್ಕೆ ಅಸ್ತು
ರಾಜ್ಯ ಕಾರ್ಮಿಕ ಇಲಾಖೆಯು ರಾಜ್ಯದ ವಿವಿಧೆಡೆ 69 ಚಿಕಿತ್ಸಾಲಯಗಳನ್ನು ತೆರೆಯಲು ಅನುಮತಿ ಕೋರಲಾಗಿದ್ದು, ಈ ಸಂಬಂಧ ಕೇಂದ್ರವು ಇದೀಗ 19ಕ್ಕೆ ಅನುಮತಿ ನೀಡಿದ್ದು, ಇನ್ನುಳಿದ 50 ಚಿಕಿತ್ಸಾಲಯಗಳನ್ನು ತೆರೆಯಲು ಅನುಮತಿ ನೀಡುವಂತೆ ಮತ್ತು ಪ್ರತೀ ಜಿಲ್ಲೆಗೆ ಒಂದರಂತೆ ಇಎಸ್‌ಐ ಆಸ್ಪತ್ರೆಗಳನ್ನು ಆರಂಭಿಸಲು ಅನುಮೋದನೆ ನೀಡಬೇಕು ಎಂದು ಕೋರಿದರು.

ಜಿಲ್ಲೆಗಳಲ್ಲಿ ಇರುವ ಚಿಕಿತ್ಸಾಲಯಗಳನ್ನು “ಆರೋಗ್ಯ ಕಲ್ಯಾಣ ಕೇಂದ್ರ’ಗಳಾಗಿ ಪರಿವರ್ತಿಸಬೇಕು. ಈ ಕಲ್ಯಾಣ ಕೇಂದ್ರಗಳಲ್ಲಿ ಇಸಿಜಿ, ಮೈನರ್‌ ಒಟಿ, ಆಕ್ಸಿಜನ್‌ ಸೇವೆಗಳ ಜತೆಗೆ ಅಗತ್ಯ ವೈದ್ಯ ಸಿಬಂದಿ ಒದಗಿಸಬೇಕು ಎಂದರು.

ಗೆಲುವಿನ ನಗೆಬೀರಿದ ರಾಯಲ್ ಚಾಲೇಂಜರ್ಸ್

0

ನಿನ್ನೆ ಸಂಜೆ ನಡೆದ ಟಾಟಾ ಐಪಿಎಲ್ ಪಂದ್ಯಾವಳಿ ಯಲ್ಲಿ ರಾಯಲ್ ಚಾಲೇಂಜರ್ಸ್ ಬೆಂಗಳೂರು ತಂಡ ಮುಂಬೈ ಇಂಡಿಯನ್ಸ್ ತಂಡವನ್ನು 7 ವಿಕೆಟ್‌ಗಳಿಂದ ಸೋಲಿಸಿದೆ.

ರಾಯಲ್ ಚಾಲೇಂಜರ್ಸ್ ಬೆಂಗಳೂರು, 18.3 ಓವರ್‌ಗಳಲ್ಲಿ 152/3.

ಮುಂಬೈ ಇಂಡಿಯನ್ಸ್ ಐಪಿಎಲ್ 2022 ರ ಸತತ ನಾಲ್ಕನೇ ಸೋಲಿಗೆ ಕುಸಿದಿದೆ. ಮುಂಬೈನ ಎಂಸಿಎ ಕ್ರೀಡಾಂಗಣದಲ್ಲಿ ನಿನ್ನೆ ರಾತ್ರಿ 5 ಬಾರಿಯ ಚಾಂಪಿಯನ್‌ಗಳನ್ನು 7 ವಿಕೆಟ್‌ಗಳಿಂದ ಸೋಲಿಸಿದ ರಾಯಲ್ ಚಾಲೇಂಜರ್ಸ್ ಬೆಂಗಳೂರು ಅವರ ಸೋಲಿಲ್ಲದ ಸರಣಿಯನ್ನು ಮುಂದುವರೆಸಿದೆ.

ವಿಕೆಟ್‌ಕೀಪರ್-ಬ್ಯಾಟರ್ ಅನುಜ್ ರಾವತ್ ಅವರ 47 ಎಸೆತಗಳಲ್ಲಿ ಭವ್ಯವಾದ 66 ಬೌಲರ್‌ಗಳ ಅಮೋಘ ಪ್ರದರ್ಶನದೊಂದಿಗೆ ರಾಯಲ್ ಚಾಲೇಂಜರ್ಸ್ ಬೆಂಗಳೂರು ಋತುವಿನಲ್ಲಿ 3ನೇ ಗೆಲುವು ಸಾಧಿಸಿದೆ.

ಹರ್ಷಲ್ ಪಟೇಲ್, ವನಿಂದು ಹಸರಂಗ ಮತ್ತು ಆಕಾಶ್ ದೀಪ್ ಅವರು ಬ್ಯಾಟಿಂಗ್ ಮಾಡಲು ಕೇಳಿಕೊಂಡ ನಂತರ ಮುಂಬೈ 151/6 ಅನ್ನು ಮಾತ್ರ ನಿರ್ವಹಿಸಬಹುದೆಂದು ಖಚಿತಪಡಿಸಿಕೊಂಡರು. ರಾವತ್ ತಮ್ಮ ಚೊಚ್ಚಲ ಐಪಿಎಲ್ ಅರ್ಧಶತಕಕ್ಕೆ ವಿರಾಟ್ ಕೊಹ್ಲಿ 36 ಎಸೆತಗಳಲ್ಲಿ 48 ರನ್ ಗಳಿಸುವ ಮೂಲಕ ಉತ್ತಮ ಇನ್ನಿಂಗ್ಸ್ ಆಡಿದ್ದಾರೆ. ಅವರ ತಂಡಕ್ಕೆ 152 ರನ್‌ಗಳನ್ನು ಪಡೆಯಲು ಸಹಕಾರವಾಯಿತು.

ಕೇವಲ ಇಬ್ಬರು ವಿದೇಶಿ ಆಟಗಾರರನ್ನು ಆಡುವ ಮುಂಬೈ, ಒಂದು ಹಂತದಲ್ಲಿ ಸ್ಕೋರ್ 79/6 ನೊಂದಿಗೆ ಮತ್ತೊಂದು ಅಗ್ರ ಕ್ರಮಾಂಕದ ಕುಸಿತವನ್ನು ಎದುರಿಸಿತು.

ಸೂರ್ಯಕುಮಾರ್ ಯಾದವ್ ಅವರ ಅಜೇಯ 68 ಇನ್ನಿಂಗ್ಸ್ ಅನ್ನು ರಕ್ಷಿಸಿತು. 151/6 ಸ್ಕೋರ್ ಪಡೆಯುವಲ್ಲಿ ಯಶಸ್ವಿಯಾದರು

ಕರ್ನಾಟಕದಲ್ಲಿ ಎಂದಿಗೂ ಹಿಂದಿ ಹೇರಿಕೆ ಆಗುವುದಿಲ್ಲ- ಬೊಮ್ಮಾಯಿ

0

ಹಿಂದಿ ಭಾಷೆ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರತಿಕ್ರಿಯೆಯನ್ನು ನೀಡಿದ್ದಾರೆ.

ಮಾನ್ಯ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗುತ್ತಿದೆ. ಕರ್ನಾಟಕದಲ್ಲಿ ಎಂದಿಗೂ ಹಿಂದಿ ಹೇರಿಕೆ ಆಗುವುದಿಲ್ಲ ಎಂದು ಬಸವರಾಜ್ ಬೊಮ್ಮಾಯಿ ಅವರು ಹೇಳಿದ್ದಾರೆ.

ಬಸವಕಲ್ಯಾಣದಲ್ಲಿ,ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಮಿತ್ ಶಾ ಅವರು ಹಿಂದಿ ಹೇರುವಂತೆ, ಹಿಂದಿಯನ್ನು ಕಡ್ಡಾಯ ಮಾಡುವಂತೆ ಅಮಿತ್ ಶಾ ಅವರು ಎಲ್ಲೂ ಹೇಳಿಲ್ಲ. ಅವರ ಮಾತನ್ನು ಅನಗತ್ಯವಾಗಿ ಕೆಲವರು ತಪ್ಪಾಗಿ ಅರ್ಥೈಸಿ ಮುಂದಿಡುತ್ತಿದ್ದಾರೆ ಎಂದು ಬಸವರಾಜ್ ಬೊಮ್ಮಾಯಿ ಅವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.