Tuesday, February 24, 2026
Tuesday, February 24, 2026
Home Blog Page 1638

ದ್ವನಿವರ್ಧಕ ಬಳಕೆ ಬಗ್ಗೆ ಕೋರ್ಟ್ ಆದೇಶ ಪಾಲಿಸಲು ಪೋಲಿಸ್ ಸುತ್ತೋಲೆ

0

ಮಸೀದಿಗಳಲ್ಲಿ ಧ್ವನಿವರ್ಧಕ ಬಳಕೆ ನಿಷೇಧಿಸುವಂತೆ ಒತ್ತಾಯಗಳು ಹೆಚ್ಚುತ್ತಿರುವ ಬೆನ್ನಲ್ಲೇ ಈಗ ಪೊಲೀಸ್ ಅಧಿಕಾರಿಗಳಿಗೆ ಡಿಜಿ,ಐಜಿಪಿ ಪ್ರವೀಣ್ ಸೂದ್ ಸುತ್ತೋಲೆಯನ್ನು ಹೊರಡಿಸಿದ್ದಾರೆ.

ಧ್ವನಿವರ್ಧಕಗಳಿಗೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶ ಯಥಾವತ್ತಾಗಿ ಪಾಲಿಸಬೇಕು.

ಶಬ್ದ ಮಾಲಿನ್ಯ ಮಾಡುತ್ತಿದ್ದರೆ ಕೇಸ್ ಹಾಕಿ ಕಾನೂನು ಪ್ರಕಾರ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಧಾರ್ಮಿಕ ಕೇಂದ್ರಗಳು, ಪಬ್, ನೈಟ್ ಕ್ಲಬ್, ಇನ್ಸ್ಟಿ ಟ್ಯೂಟ್, ಕಾರ್ಯಕ್ರಮಗಳು ಸೇರಿದಂತೆ ಎಲ್ಲೆಡೆ ನಿಗಾವಹಿಸಿ. ನಿಯಂತ್ರಣ ಮಂಡಳಿ ಕಾಯ್ದೆ 2000 ಅಡಿ ಕಾನೂನು ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ.

ಶಾಂತಿ ಒಪ್ಪಂದದ ನಂತರವೇ ಪುಟಿನ್ ಝೆಲೆನ್ಸ್ಕಿ ಭೇಟಿ-ಪೆಸ್ಕೊವ್

0

ಶಾಂತಿ ಒಪ್ಪಂದದ ನಂತರವೇ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ನಡುವಿನ ಸಭೆ ಸಾಧ್ಯ ಎಂದು ಕ್ರೆಮ್ಲಿನ್ ವಕ್ತಾರ ಡಿಮಿಟ್ರಿ ಪೆಸ್ಕೋವ್ ಅವರು ತಿಳಿಸಿದ್ದಾರೆ.

ನಮಗೆ ಏನೂ ಬದಲಾಗಿಲ್ಲ. ಅಂತಹ ಸಾಧ್ಯತೆಯನ್ನು ನಾವು ತಿರಸ್ಕರಿಸುವುದಿಲ್ಲ. ಎರಡು ರಾಷ್ಟ್ರಗಳ ನಿಯೋಗಗಳಿಂದ ನಿರ್ದಿಷ್ಟ ದಾಖಲೆ ಒಪ್ಪಂದವನ್ನು ರಚಿಸುವುದು ಈಗಿರುವ ಅವಶ್ಯಕತೆ ಎಂದು ಡಿಮಿಟ್ರಿ ಪೆಸ್ಕೋವ್ ಅವರು ಹೇಳಿದ್ದಾರೆ.

ಭವಿಷ್ಯದಲ್ಲಿ ಮಾತುಕತೆಗಾಗಿ ಸಭೆ ನಡೆಸಲು ಉಭಯ ರಾಷ್ಟ್ರಗಳು ಕೆಲವು ನಿಯಮಗಳು ಮತ್ತು ಷರತ್ತುಗಳಿಗೆ ಬದ್ಧವಾಗಿರುವುದು ನಿರ್ಣಾಯಕ ಎಂದು ಅವರು ಇದೇ ವೇಳೆ ಒತ್ತಿ ಹೇಳಿದರು.

ಅಲ್ಲದೇ, ಪುಟಿನ್ ಅಂತಹ ಸಭೆ ಸಭೆಯನ್ನು ಎಂದಿಗೂ ತಳ್ಳಿಹಾಕಲಿಲ್ಲ ಎಂದರು.

ಉಕ್ರೇನ್ ವಿರುದ್ಧ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಯುದ್ಧ ಘೋಷಿಸಿ, ಸುಮಾರು ಒಂದು ತಿಂಗಳಿಗೂ ಹೆಚ್ಚಿನ ಕಾಲಾವಧಿಯಾಗಿದೆ.

ಉಕ್ರೇನ್ ದೇಶದ ಪ್ರಮುಖ ನಗರಗಳನ್ನು ವಶಪಡಿಸಿಕೊಳ್ಳಲಾಗಿದೆ. ಸಂಭವನೀಯ ಶಾಂತಿ ಒಪ್ಪಂದಕ್ಕಾಗಿ ಉಕ್ರೇನ್ ಮತ್ತು ರಷ್ಯಾ ನಡುವೆ ಮಾತುಕತೆ ನಡೆಯುತ್ತಲೇ ಇದೆ ಎಂದು ತಿಳಿದುಬಂದಿದೆ.

ದೇಶದಲ್ಲಿ ಹೈನುಗಾರರಿಗೆ 15 ಲಕ್ಷ ಕ್ರೆಡಿಟ್ ಕಾರ್ಡ್ ವಿತರಣೆ

0

ಈ ವರ್ಷದ ಮಾರ್ಚ್ 25 ರವರೆಗೆ ದೇಶದ ಹಾಲಿನ ಸಹಕಾರ ಸಂಘಗಳು ಮತ್ತು ಹಾಲು ಉತ್ಪಾದಕ ಕಂಪನಿಗಳಿಗೆ ಸಂಬಂಧಿಸಿದ ಅರ್ಹ ಹೈನುಗಾರರಿಗೆ ಸುಮಾರು 15 ಲಕ್ಷ ಕಿಸಾನ್ ಕ್ರೆಡಿಟ್ ಕಾರ್ಡ್‌ಗಳನ್ನು ಮಂಜೂರು ಮಾಡಲಾಗಿದೆ.

ಈ ಕಾರ್ಡ್‌ಗಳು 10,974 ಕೋಟಿ ರೂಪಾಯಿಗಳ ಸಾಲ ಸೌಲಭ್ಯಗಳನ್ನು ಹೊಂದಿವೆ.

ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವ ಪುರುಷೋತ್ತಮ್ ರೂಪಾಲಾ ಅವರು, ಈ ಕುರಿತು ಲೋಕಸಭೆಯಲ್ಲಿ ಲಿಖಿತ ಉತ್ತರ ನೀಡಿದ್ದಾರೆ.

ಹೈನುಗಾರರಿಗೆ ಕೆಸಿಸಿ ಒದಗಿಸಲು ಸರ್ಕಾರವು ವಿಶೇಷ ಅಭಿಯಾನವನ್ನು ಸಹ ಆಯೋಜಿಸಿದೆ ಎಂದು ಅವರು ತಿಳಿಸಿದ್ದಾರೆ.

2021 ರ ಫೆಬ್ರವರಿಯಲ್ಲಿ ಪ್ರತಿ ಕೆಜಿಗೆ 37.38 ರೂಪಾಯಿಗಳಿಂದ 2022 ರ ಫೆಬ್ರವರಿಯಲ್ಲಿ 39.93 ರೂಪಾಯಿಗಳಿಗೆ ರೈತರಿಗೆ ಹಾಲಿನ ಮೊತ್ತ ಪಾವತಿಸುವ ಸರಾಸರಿ ಹಾಲು ಸಂಗ್ರಹಣೆ ಬೆಲೆಯನ್ನು ಹೆಚ್ಚಿಸಲಾಗಿದೆ ಎಂದರು.

ಬೆಲೆಯೇರಿಕೆಯೆಂಬ ಬಾವುಟ ಏರುತ್ತಲೇ ಇದೆ ಈಗ ಹಾಲಿನ ಸರದಿ

0

ವಿದ್ಯುತ್ ದರ, ತೈಲ ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಮ್ಮೆ ಬೆಲೆ ಏರಿಕೆಯ ಬಿಸಿ ತಟ್ಟಲಿದೆ.

ಶೀಘ್ರವೇ ನಂದಿನಿ ಹಾಲಿನ ದರ ಏರಿಕೆಯಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ರಾಜ್ಯದಲ್ಲಿ ಸದ್ಯದಲ್ಲೇ ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ 5 ರೂ ಏರಿಕೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಹಾಲು ಒಕ್ಕೂಟಗಳು ಪ್ರಸ್ತಾವನೆ ಸಲ್ಲಿಸಿವೆ ಎನ್ನಲಾಗುತ್ತಿದೆ.

ಕರ್ನಾಟಕ ಹಾಲು ಮಹಾ ಮಂಡಳಿ ನಂದಿನಿ ಹಾಲಿನ ದರ ಹೆಚ್ಚಳ ಮಾಡುವ ಬಗ್ಗೆ ಸಿದ್ಧತೆ ನಡೆಸಿದ್ದು, ಏಪ್ರಿಲ್ 10 ರಂದು ಈ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಭೇಟಿಯಾಗಿ ಚರ್ಚೆ ನಡೆಸಲಿವೆ.

ಒಂದು ವೇಳೆ ರಾಜ್ಯ ಸರ್ಕಾರ ಕೆಎಂಎಫ್ ನಂದಿನ ಹಾಲಿನ ದರ ಏರಿಕೆ ಪ್ರಸ್ತಾವನೆಗೆ ಒಪ್ಪಿಗೆ ಸೂಚಿಸಿದರೆ, ಏಪ್ರಿಲ್ 10 ರ ನಂತರ ಹಾಲಿನ ದರ ಪರಿಷ್ಕರಣೆಯಾಗುವ ಸಾಧ್ಯತೆ ಇದೆ.

ಈಗಾಗಲೇ ಕೆಎಂಎಫ್ ಹಾಲಿನ ದರ ಏರಿಕೆಗೆ ಕೆಎಂಎಫ್ ಅಸ್ತು ಎಂದಿದೆ. ಈಗ ಹಾಲು ಒಕ್ಕೂಟಗಳಿಂದ ನಂದಿನ ಹಾಲಿನ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ವಿದ್ಯುತ್ ದರ ಏರಿಕೆಯಂತೆ ಹಾಲಿನ ದರ ಏರಿಕೆ ಮಾಡುವಂತೆ ಒತ್ತಾಯ ಮಾಡಲಾಗಿದೆ ಎಂದು ತಿಳಿದುಬಂದಿದೆ.

ರಾಜ್ಯದ ಹೆಮ್ಮೆಯ ಶಿಲ್ಪಿ ಅರುಣ್ ಬಗ್ಗೆ ಪ್ರಧಾನಿ ಮೆಚ್ಚುಗೆ

0

ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಪ್ರಧಾನಿ ನರೇಂದ್ರ ಮೋದಿಯನ್ನು ಮಂಗಳವಾರ ಭೇಟಿ ಮಾಡಿದರು.

ಕಲಾವಿದನ ಕುರಿತು ಮೆಚ್ಚುಗೆ ವ್ಯಕ್ತಪಡಿಸಿರುವ ಮೋದಿ ಈ ಕುರಿತು ಟ್ವೀಟ್ ಮಾಡಿದ್ದಾರೆ.

ಅರುಣ್ ಯೋಗಿರಾಜ್ ನವದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿ ಮಾಡಿದರು. ನೇತಾಜಿ ಸುಭಾಷ್ ಚಂದ್ರ ಬೋಸ್ ಪ್ರತಿಮೆಯನ್ನು ಕಾಣಿಕೆಯಾಗಿ ನೀಡಿದರು.

ಕೆಲವು ದಿನಗಳ ಹಿಂದೆ ಕೇದಾರನಾಥದಲ್ಲಿ ಪ್ರತಿಷ್ಠಾಪನೆಗೊಂಡಿರವ ಶಂಕರಾಚಾರ್ಯರ ಪ್ರತಿಮೆಯನ್ನು ಕೆತ್ತನೆ ಮಾಡಿರುವುದು ಇದೇ ಅರುಣ್ ಎನ್ನುವುದು ಗಮನಾರ್ಹ ವಿಚಾರ.

ಅಂತರಾಷ್ಟ್ರೀಯ ಮಟ್ಟದಲ್ಲಿ ಮೆಚ್ಚುಗೆಗೆ ಪಾತ್ರವಾಗಿರುವ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಅಲ್ಲದೆ, ಅರುಣ್ ಕೆತ್ತನೆ ಮಾಡಿರುವ ನೇತಾಜಿ ಪ್ರತಿಮೆ ಕಂಡು ತುಂಬಾ ಸಂತೋಷವಾಯಿತು ಎಂದು ಟ್ವೀಟ್ ಮಾಡಿದ್ದಾರೆ.
ಅರುಣ್ ಯೋಗಿರಾಜ್ ಮೋದಿ ಭೇಟಿ ಮಾಡಿ ಕೆಲಕಾಲ ಮಾತುಕತೆ ನಡೆಸಿದರು. 2 ಅಡಿ ಎತ್ತರದ ಸುಭಾಷ್ ಚಂದ್ರ ಬೋಸ್ ಕಲ್ಲಿನ ಪ್ರತಿಮೆಯನ್ನ ಉಡುಗೊರೆಯಾಗಿ ನೀಡಿದರು.

ಅರುಣ್ ಭೇಟಿ ಮಾಡಿದ ಫೋಟೋವನ್ನು ಮೋದಿ ಹಂಚಿಕೊಂಡಿದ್ದಾರೆ.
ಮೋದಿ ಭೇಟಿಗೆ ಅವಕಾಶ ಕಲ್ಪಿಸಿದ ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹಗೆ ಸಹ ಶಿಲ್ಪಿ ಅರುಣ್ ಯೋಗಿರಾಜ್ ಧನ್ಯವಾದ ಹೇಳಿದ್ದಾರೆ.

ಮೋದಿ ಭೇಟಿಗೆ ಮುನ್ನ ಅರುಣ್ ಜೊತೆ ತೆಗೆಸಿಕೊಂಡ ಫೋಟೋವನ್ನು ಪ್ರತಾಪ್ ಸಿಂಹ ಟ್ವೀಟ್ ಮಾಡಿದ್ದಾರೆ.

ಮೋದೀಜಿ ಅವರ ಅವಧಿಯಲ್ಲಿ ಇಂಚು ನೆಲವನ್ನೂ ಬಿಟ್ಟುಕೊಟ್ಟಿಲ್ಲ- ರಿಜಿಜು

0

ನರೇಂದ್ರ ಮೋದಿ ಅವರು ಪ್ರಧಾನಿಯಾದ ನಂತರ ದೇಶದ ಒಂದು ಇಂಚು ಭೂಮಿಯನ್ನೂ ಬಿಟ್ಟುಕೊಟ್ಟಿಲ್ಲ ಎಂದು ಕೇಂದ್ರ ಕಾನೂನು ಸಚಿವ ಕಿರಣ್‌ ರಿಜಿಜು ಲೋಕಸಭೆಯಲ್ಲಿ ತಿಳಿಸಿದರು.

ಚೀನಾ ಗಡಿಗೆ ಹೊಂದಿಕೊಂಡಿರುವ ಅರುಣಾಚಲಪ್ರದೇಶ ಶೇ 100ರಷ್ಟು ಸುರಕ್ಷಿತ ಹಾಗೂ ಭದ್ರವಾಗಿದೆ ಎಂದರು.

ಉಕ್ರೇನ್‌ ವಿದ್ಯಮಾನಗಳ ಕುರಿತು ಚರ್ಚೆ ನಡೆಯುತ್ತಿರುವ ವೇಳೆಯಲ್ಲಿ ಭಾರತದ ಪ್ರದೇಶವನ್ನು ಸ್ವಲ್ಪ-ಸ್ವಲ್ಪವಾಗಿ ಚೀನಾಕ್ಕೆ ಬಿಟ್ಟು ಕೊಡಲಾಗುತ್ತಿದೆ ಎಂದು ಬಿಎಸ್‌ಪಿ ಸಂಸದ ಶ್ಯಾಮಸಿಂಗ್ ಯಾದವ್‌ ಹೇಳಿದರು.

ಆಗ ಮಧ್ಯಪ್ರವೇಶಿಸಿದ ಸಚಿವ ರಿಜಿಜು, ಕೆಲ ಪ್ರದೇಶಗಳು ಈಗಲೂ ಚೀನಾ ಹಾಗೂ ಪಾಕಿಸ್ತಾನದ ವಶದಲ್ಲಿವೆ. ಈ ಪ್ರದೇಶಗಳು ಅತಿಕ್ರಮಣಗೊಳ್ಳಲು ಕಾರಣರಾದವರ ಹೆಸರುಗಳನ್ನು ಪ್ರಸ್ತಾಪಿಸುವುದಿಲ್ಲ. ಆದರೆ, ಮೋದಿ ಅವರು ಪ್ರಧಾನಿಯಾದ ನಂತರ ಒಂದು ಇಂಚೂ ಪ್ರದೇಶವನ್ನು ಸಹ ಬಿಟ್ಟುಕೊಟ್ಟಿಲ್ಲ ಎಂದು ತಿರುಗೇಟು ನೀಡಿದರು.

ತಾಲ್ಲೂಕಿಗೊಂದು ಜಗಜೀವನ್ ರಾಂ ಸ್ವಯಂ ಉದ್ಯೋಗ ಯೋಜನೆ-ಬೊಮ್ಮಾಯಿ

0

ರಾಜ್ಯ ಸರ್ಕಾರವು ಎಸ್ ಸಿ/ಎಸ್ ಟಿ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದೆ.

ಸ್ವಾವಲಂಬಿ ಜೀವನ ನಡೆಸಲು ಬಯಸುವ ಎಸ್ ಸಿ/ಎಸ್ ಟಿ ಸಮುದಾಯದ ಯುವ ಜನತೆಗೆ ಪ್ರತಿ ತಾಲ್ಲೂಕಿಗೊಂದು ಬಾಬು ಜಗಜೀವನ್ ರಾಂ ಸ್ವಯಂ ಉದ್ಯೋಗ ಯೋಜನೆ ಜಾರಿಗೆ ತರಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಹಸಿರು ಕ್ರಾಂತಿಯ ಹರಿಕಾರ, ಭಾರತದ ಮಾಜಿ ಉಪ ಪ್ರಧಾನಿ ಡಾ: ಬಾಬು ಜಗಜೀವನ್ ರಾಮ್ ರವರ 115ನೇ ಜನ್ಮದಿನಾಚರಣೆಯ ಹಾಗೂ ಡಾ: ಬಾಬು ಜಗಜೀವನ ರಾಂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಎಸ್ ಸಿ/ಎಸ್ ಟಿ ಸಮುದಾಯದ ಯುವ ಜನತೆಗೆ ನೆರವಾಗಲೆಂದು ಪ್ರತಿ ತಾಲೂಕಿಕೊಂದು ಬಾಬು ಜಗಜೀವನ್ ರಾಂ ಸ್ವಯಂ ಉದ್ಯೋಗ ಯೋಜನೆ ಪ್ರಾರಂಭಿಸಲು ನಿರ್ಧರಿಸಲಾಗಿದೆ. ತಿಂಗಳೊಳಗೆ ಈ ಯೋಜನೆ ಜಾರಿಗೆ ತರಲಾಗುವುದು ಎಂದು ಹೇಳಿದ್ದಾರೆ.

ಎಸ್ಸಿ ಎಸ್ಟಿ ಸಮುದಾಯದವರು ಮನೆ ನಿರ್ಮಾಣಕ್ಕಾಗಿ ನೀಡಲಾಗುತ್ತಿದ್ದ 1,75,000 ರೂ.ಗಳ ಸಹಾಯಧನವನ್ನು 2 ಲಕ್ಷ ರೂ.ಗಳಿಗೆ ಹೆಚ್ಚಿಸಲು ತೀರ್ಮಾನಿಸಲಾಗಿದೆ ಎಂದರು.

ಗ್ರಾಮೀಣ ಪ್ರದೇಶದಲ್ಲಿ ಕುಟಿರ ಯೋಜನೆಯಡಿ ಎಸ್ ಸಿ ಎಸ್ಟಿ ಸಮುದಾಯದವರಿಗೆ 75 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲು ತೀರ್ಮಾನಿಸಲಾಗಿದೆ. ಮುಂದಿನ ವಾರದೊಳಗಾಗಿ ಸರ್ಕಾರಿ ಆದೇಶವನ್ನು ಹೊರಡಿಸಲಾಗುವುದು ಎಂದು ತಿಳಿಸಿದರು.

ದಮನಿತರ ಧ್ವನಿ ಬಾಬು ಜಗಜೀವನ್ ರಾಂ

0

ಸಾಮಾಜಿಕ ಬದಲಾವಣೆಯ ಹರಿಕಾರ ಜಗಜೀವನರಾಮ್
ದೇಶಾದ್ಯಂತ “ಬಾಬುಜಿ” ಎಂದೇ ಕರೆಯಲ್ಪಡುವ ಜಗಜೀವನರಾಮ್ ರವರು ಧೀಮಂತ ರಾಷ್ಟ್ರೀಯ ನಾಯಕ, ಸ್ವಾತಂತ್ರ್ಯ ಮತ್ತು ಸಾಮಾಜಿಕ ನ್ಯಾಯ ಹೋರಾಟಗಾರ ಹಾಗೂ ಅತ್ಯುತ್ತ್ತಮ ಸಂಸದೀಯ ಪಟುವಾಗಿದ್ದರು.

ಬಾಬು ಜಗಜೀವನರಾಮ್ ಅವರು ಸ್ವಾತಂತ್ರ್ಯ ಹೋರಾಟಗಾರರಾಗಿ, ಸಂವಿಧಾನ ರಚನಾ ಸಭೆಯ ಸದಸ್ಯರಾಗಿ ಮತ್ತು ಮೊದಲ ಉಪ ಪ್ರಧಾನಿಯಾಗಿ ನಮ್ಮ ದೇಶಕ್ಕೆ ಮಹತ್ತರ ಕೊಡುಗೆ ನೀಡಿದ್ದಾರೆ. ಅಸ್ಪಶ್ಯತಾ ನಿವಾರಣೆಯ ಹೋರಾಟದ ಮಹಾನ್ ದಲಿತ ನಾಯಕ ಜಗಜೀವನರಾಮ್‍ರವರ 115ನೇ ಜಯಂತೋತ್ಸವವನ್ನು ಏಪ್ರಿಲ್ 5 ರಂದು ದೇಶದಾದ್ಯಂತ ಆಚರಿಸಲಾಗುತ್ತದೆ.

ಭಾರತದ ಸ್ವಾತಂತ್ರ್ಯ ಪೂರ್ವ ಮತ್ತು ಸ್ವಾತಂತ್ರ್ಯ ನಂತರದ ರಾಜಕಾರಣದಲ್ಲಿ ಬಾಬು ಜಗಜೀವನರಾಮ್ ಅವರ ಪಾತ್ರ ಪ್ರಮುಖವಾದದ್ದು. ಭಾರತದಲ್ಲಿ ದೀರ್ಘ ಕಾಲದಿಂದ ಬೆಳೆದುಕೊಂಡು ಬಂದಿದ್ದ ಮೇಲು-ಕೀಳು ತಾರತಮ್ಯ, ಜಾತಿ ಪದ್ಧತಿ, ಸ್ಪಶ್ಯ- ಅಸ್ಪಶ್ಯ ಎಂಬ ಮನೋಭಾವಗಳನ್ನು ತೊಡೆದು ಹಾಕಲು ಸಾಮಾಜಿಕ ನೆಲೆಗಟ್ಟಿನಲ್ಲಿ ಹೋರಾಡಿದವರು ಅನೇಕರು. ಆದರೆ ಅವರ ಏಳಿಗೆಗೆ ಹೆಚ್ಚಿನ ಚುರುಕು ನೀಡಿ ಒಂದು ಸ್ಪಷ್ಟ ರೂಪ ಕೊಟ್ಟ ಕೆಲವೇ ಕೆಲವು ನಾಯಕರಲ್ಲಿ ಬಾಬು ಜಗಜೀವನರಾಮ್ ಒಬ್ಬರು.

1908 ಏಪ್ರಿಲ್ 5 ರಂದು ಬಿಹಾರದ ‘ಆರಾ’ ಜಿಲ್ಲೆಯ ಚಾಂದ್ವಾ ಗ್ರಾಮದಲ್ಲಿ ಜನಿಸಿದ ಬಾಬು ಜಗಜೀವನರಾಮ್ ಅವರು ವಿದ್ಯಾರ್ಥಿಯಾಗಿದ್ದಾಗಲೇ ಸಾಕಷ್ಟು ನಿಂದನೆ, ಅಪಮಾನ ಹಾಗೂ ನೋವುಗಳನ್ನು ಅನುಭವಿಸಿದ್ದರು. ತಂದೆ ಶೋಭಿರಾಮ್ ಬ್ರಿಟಿಷರ ಭಾರತೀಯ ಸೈನ್ಯದಲ್ಲಿದ್ದು, ಹಲವು ಕಡೆ ಕೆಲಸ ಮಾಡಿ, ತಮ್ಮ ಹುದ್ದೆಗೆ ರಾಜಿನಾಮೆ ಕೊಟ್ಟು ಆರಾ ಪಟ್ಟಣದ ಸಮೀಪದ ಚಾಂದ್ವಾ ಗ್ರಾಮದಲ್ಲಿ ಭೂಮಿಯನ್ನು ಕೊಂಡು ಕೃಷಿಯನ್ನು ಆರಂಭಿಸಿದರು.

ಸಣ್ಣ ವಯಸ್ಸಿನಲ್ಲೇ ತಂದೆಯನ್ನು ಕಳೆದುಕೊಂಡ ಜಗಜೀವನ್ ರಾಮ್ ತಾಯಿ ವಾಸಂತಿ ದೇವಿಯವರ ಆರೈಕೆಯಲ್ಲಿ ಬೆಳೆದರು. ಬಾಲಕ ರಾಮ್ ಆರಾದಲ್ಲಿನ ಮಾಧ್ಯಮಿಕ ಶಾಲೆಯಲ್ಲಿದ್ದಾಗ ಅಲ್ಲಿ ಎರಡು ಪ್ರತ್ಯೇಕ ಕುಡಿಯುವ ನೀರಿನ ಮಡಕೆಗಳನ್ನು ಇಡಲಾಗಿತ್ತು. ಒಂದು ಮಡಕೆ ನೀರು ಹಿಂದು ಮಕ್ಕಳಿಗೆ, ಮತ್ತೊಂದು ಮುಸ್ಲಿಂ ಮಕ್ಕಳಿಗಾಗಿ. ರಾಮ್ ಹಿಂದು ಮಡಕೆಯ ನೀರನ್ನು ಕುಡಿದಾಗ, ಶಾಲಾ ಪ್ರಾಂಶುಪಾಲರವರೆಗೆ ದೂರು ಹೋಯಿತು. ಆಗ ಪ್ರಾಂಶುಪಾಲರು ಮೂರನೆಯ ಮಡಕೆಯನ್ನು ಇರಿಸಿ, ಅದು ಅಸ್ಪಶ್ಯ ಮಕ್ಕಳಿಗೆ ಎಂದು ಹೇಳಿದರು.

ಮೊದಲ ಬಾರಿಗೆ ಅಸ್ಪಶ್ಯತೆಯ ಅಪಮಾನ ರಾಮ್ ಅವರನ್ನು ಬಹುವಾಗಿ ಕಾಡಿತು. ಇದರಿಂದ ಸಿಟ್ಟಿಗೆದ್ದ ಬಾಲಕ ರಾಮ್ ಎರಡು ಬಾರಿ ಆ ಮಡಕೆಗಳನ್ನು ಒಡೆದುಹಾಕಿ ತಮ್ಮ ಕೋಪವನ್ನು ಪ್ರದರ್ಶಿಸಿದರು. ಪ್ರಾಂಶುಪಾಲರೇನೋ ಆ ಮೂರನೇ ಮಡಿಕೆ ತೆಗೆಸಿದರು. ಆದರೆ ಈ ಜಾತಿ ಪದ್ಧತಿಯ ಅಪಮಾನದ ಗಾಯ ಬಾಲಕ ರಾಮ್ ಅವರ ಎದೆಯೊಕ್ಕಿತು. ಮುಂದೆ ಜೀವನದ ಉದ್ದಕ್ಕೂ ರಾಮ್ ನಡೆಸಿದ ಎಲ್ಲ ಚಟುವಟಿಕೆಗಳ ಹಿಂದೆ ಈ ನೋವು ಉಳಿದುಕೊಂಡೇ ಇತ್ತು . ಇಂತಹ ಅಪಮಾನದಿಂದ ದಲಿತರನ್ನು ಪಾರು ಮಾಡುವ ಆಶಯವೇ ರಾಮ್ ಅವರ ಎಲ್ಲ ಚಟವಟಿಕೆಗಳ ಪ್ರಧಾನ ಅಂಶವಾಗಿ ಮಾರ್ಪಟ್ಟಿತ್ತು.

ಮುಂದೆ ದಲಿತ ನಾಯಕರಾಗಿ ರೂಪುಗೊಂಡ ಜಗಜೀವನ ರಾಮ್ ಅವರಿಗೆ ಬಿಹಾರ ಕಾರ್ಯಕ್ಷೇತ್ರವಾಯಿತು. ಗಾಂಧೀಜಿಯವರು ಆರಂಭಿಸಿದ್ದ ಅಸ್ಪಶ್ಯತೆಯ ವಿರುದ್ದದ ಹೋರಾಟದಲ್ಲಿ ರಾಮ್ ಪಾಲ್ಗೊಂಡರು. 1935ರಲ್ಲಿ ದಲಿತರ ಸಮಾನತೆಗಾಗಿ ಹೋರಾಡುವ ಉದ್ದೇಶದಿಂದ ಅಸ್ತಿತ್ವಕ್ಕೆ ಬಂದ “ಅಖಿಲ ಭಾರತ ದಮನಿತ ವರ್ಗಗಳ ಒಕ್ಕೂಟ”ವನ್ನು ಸ್ಥಾಪಿಸುವಲ್ಲಿ ಜಗಜೀವನ್‍ರಾಮ್ ಅವರು ನಿರ್ವಹಿಸಿದ ಪಾತ್ರ ಮಹತ್ವದಾಗಿತ್ತು.

ಬಾಬು ಜಗಜೀವನರಾಮ್ 1937 ರಲ್ಲಿ ಬಿಹಾರದ ವಿಧಾನ ಸಭೆಗೆ ಆಯ್ಕೆಯಾಗಿ, 1946ರಲ್ಲಿ ಜವಹರಲಾಲ್ ನೆಹರು ಅವರ ನೇತೃತ್ವದಲ್ಲಿ ಪ್ರಥಮ ಹಂಗಾಮಿ ಸರ್ಕಾರ ರಚನೆಯಾದಾಗ ಸಂಪುಟದ ಅತ್ಯಂತ ಕಿರಿಯ ಸಚಿವರಾಗಿ ಕಾರ್ಮಿಕ ಖಾತೆಯನ್ನು ನೀಡಲಾಗಿತ್ತು. ಮುಂದೆ ಬಾಬುಜೀ ಅವರು ತಮ್ಮ ರಾಜಕೀಯ ಪಯಣದಲ್ಲಿ ಹಿಂದುರುಗಿ ನೋಡಿದ್ದೇ ಇಲ್ಲ. ಹಲವಾರು ಖಾತೆಗಳ ಸಚಿವ ಸ್ಥಾನಗಳನ್ನು ನಿರ್ವಹಿಸಿದರು. ಈ ಖಾತೆಗಳನ್ನು ಸಮರ್ಥವಾಗಿ ನಿರ್ವಹಿಸಿ ಹೊಸ-ಹೊಸ ಕಾಯ್ದೆಗಳನ್ನು ಜಾರಿಗೆ ತಂದು ಕಾರ್ಮಿಕ ಖಾತೆಗಳ ಶಿಲ್ಪಿ ಎಂದು ಕರೆಯಲ್ಪಟ್ಟರು. ಭಾರತದಲ್ಲಿ ಪ್ರಪ್ರಥಮ ಬಾರಿಗೆ ತೋಟಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಾನೂನು ರಚಿಸಿದ್ದು ಬಾಬುಜೀ ಅವರ ಹೆಗ್ಗಳಿಕೆ.

1971 ರಲ್ಲಿ ಭಾರತ-ಪಾಕ್ ಮಧ್ಯೆ ಯುದ್ಧ ನಡೆದಾಗ (ಬಾಂಗ್ಲಾ ಪ್ರತ್ಯೇಕ ರಾಷ್ಟ್ರವಾಗಿ ಉದಯವಾದದ್ದು ಈ ಯುದ್ಧದ ಫಲಶೃತಿ) ಜಗಜೀವನ ರಾಮ್ ಕೇಂದ್ರ ಸಂಪುಟದಲ್ಲಿ ರಕ್ಷಣಾ ಸಚಿವರಾಗಿದ್ದರು. ರಾಮ್ ಅವರು ಕೃಷಿ ಸಚಿವರಾಗಿದ್ದಾಗ ಭಾರತೀಯ ಕೃಷಿ ಆಧುನೀಕರಣಗೊಂಡಿತು ಮತ್ತು ಭಾರತದಲ್ಲಿ ಹಸಿರು ಕ್ರಾಂತಿ ನಡೆಯಿತು. 1974ರಲ್ಲಿ ದೇಶ ಬರಗಾಲವನ್ನು ಎದುರಿಸಿದಾಗ ಆಹಾರದ ಬಿಕ್ಕಟ್ಟನ್ನು ನಿಭಾಯಿಸುವ ಹೊಣೆಯನ್ನು ಹೊತ್ತು, ಆಹಾರ ಖಾತೆಯನ್ನು ಹೆಚ್ಚುವರಿಯಾಗಿ ನಿರ್ವಹಿಸಿದರು.

1975ರಲ್ಲಿ ಅಂದಿನ ಪ್ರಧಾನಿಯಾಗಿದ್ದ ಇಂದಿರಾಗಾಂಧಿಯವರು ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದಾಗ ಅದನ್ನು ಜಗಜೀವನರಾಮ್ ಅವರು ಬೆಂಬಲಿಸಿದರು. 1977 ರಲ್ಲಿ ಕಾಂಗ್ರೆಸ್ ತೊರೆದು “ಕಾಂಗ್ರೆಸ್ ಫಾರ್ ಡೆಮಾಕ್ರಸಿ” ಎಂಬ ಹೊಸ ಪಕ್ಷವನ್ನು ಸ್ಥಾಪಿಸಿ, ಜನತಾ ಪಕ್ಷದ ಮೈತ್ರಿಯನ್ನು ಸೇರಿದರು. ನಂತರ ಅವರು ಭಾರತದ ಉಪಪ್ರಧಾನಿಯಾಗಿ ಸೇವೆ ಸಲ್ಲಿಸಿದರು (1977-79).

ಜಗಜೀವನ್‍ರಾಮ್ ಅವರು ‘ದೀರ್ಘಕಾಲ ಸೇವೆ ಸಲ್ಲಿಸಿದ ಕ್ಯಾಬಿನೆಟ್ ಮಂತ್ರಿ’ ಎಂಬ ದಾಖಲೆಯನ್ನು ಹೊಂದಿದ್ದಾರೆ. 1952ರಲ್ಲಿ ನಡೆದ ಮೊದಲ ಚುನಾವಣೆಯಿಂದ ಹಿಡಿದು 34 ವರ್ಷಗಳ ಕಾಲ ನಿರಂತರ ಸಂಸದರಾಗಿ ಸೇವೆ ಸಲ್ಲಿಸಿದರು. 1986ರಲ್ಲಿ ಅವರು ಮರಣ ಹೊಂದುವವರೆಗೂ ಸಂಸತ್ತಿನಲ್ಲಿ ಸದಸ್ಯರಾಗಿದ್ದರು.

ಬಾಬುಜೀ ಅವರು ಅಲಂಕರಿಸಿದ ಪ್ರಮುಖ ಸಚಿವಾಲಯಗಳೆಂದರೆ, ಕೇಂದ್ರ ಕಾರ್ಮಿಕ ಮಂತ್ರಿ(1946-52), ಕೇಂದ್ರ ಸಂಪರ್ಕ ಸಚಿವರು(1952-56), ಕೇಂದ್ರ ಸಾರಿಗೆ ಮತ್ತು ರೈಲ್ವೇ ಸಚಿವರು(1956-62), ಕೇಂದ್ರ ಸಾರಿಗೆ ಮತ್ತು ಸಂಪರ್ಕ ಸಚಿವರು(1962-63), ಕಾರ್ಮಿಕ, ಉದ್ಯೋಗ ಮತ್ತು ಪುನರ್ವಸತಿ ಕೇಂದ್ರ ಸಚಿವರು(1966-67), ಕೇಂದ್ರ ಆಹಾರ ಮತ್ತುಕೃಷಿ ಸಚಿವರು(1967-70), ಕೇಂದ್ರ ರಕ್ಷಣ ಸಚಿವರು (1970-74, 1977-79), ಕೇಂದ್ರ ಕೃಷಿ ಮತ್ತು ನೀರಾವರಿ ಸಚಿವರು (1974-77).

ದಲಿತ ಸಮುದಾಯ ಮತ್ತು ದೇಶದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ ಬಾಬುಜೀ ಅವರು 1986 ಜುಲೈ 6 ರಂದು ಕೊನೆಯುಸಿರೆಳೆದರು. ಅವರ ಸಮಾದಿ ಸ್ಥಳವನ್ನು “ತನ್ಮಯಿ” ಸ್ಮಾರಕವಾಗಿ ಪರಿವರ್ತಿಸಲಾಗಿದೆ. ಮತ್ತು ಬಾಬುಜೀ ಅವರ ಜನ್ಮ ದಿನವನ್ನು ಭಾರತದಲ್ಲಿ ತನ್ಮಯಿ ದಿನ (ಸಮಾನತೆ ದಿನ) ಎಂದು ಆಚರಿಸಲಾಗುತ್ತಿದೆ.

ದಲಿತರ ಕುರಿತು ತೀವ್ರ ಸಹಾನುಭೂತಿ ಹೊಂದಿದ್ದ ಬಾಬುಜಿ ತಮ್ಮ ಜ್ಞಾನ ಮತ್ತು ವ್ಯಾಪಕ ದೃಷ್ಟಿಕೋನದಿಂದ ದೇಶ ಸೇವೆ ಮಾಡಿದರು. ಸರ್ವ ಜನರ ಕಲ್ಯಾಣದ ಕನಸು ಕಂಡಿದ್ದರು.

ಲೇಖನ: ರಿಥೇಶ್ ನಾಯಕ್

ಮೇಲು ಕೀಳು ತಾರತಮ್ಯ ಹೋಗಲಾಡಿಸಲು ಬಾಬೂಜಿ ಶ್ರಮಪಟ್ಟಿದ್ದರು-ಈಶ್ವರಪ್ಪ

0

ಸಮಾಜದಲ್ಲಿರುವ ಮೇಲು-ಕೀಳೆಂಬ ತಾರತಮ್ಯವನ್ನು ಹೋಗಲಾಡಿಸಬೇಕೆಂದು ಡಾ.ಬಾಬು ಜಗಜೀವನ ರಾಮ್‍ರವರಂತಹ ಮಹಾನ್ ವ್ಯಕ್ತಿಗಳು ಕನಸು ಕಂಡಿದ್ದರು.

ಅಂತಹ ಕನಸನ್ನು ನನಸು ಮಾಡುವ ಪ್ರತಿಜ್ಞೆ ತೆಗೆದುಕೊಳ್ಳುವ ದಿನ ಇದು ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರಾದ ಕೆ.ಎಸ್.ಈಶ್ವರಪ್ಪ ನುಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, sಸಮಾಜ ಕಲ್ಯಾಣ ಇಲಾಖೆ, ಮಹಾನಗರಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಇಂದು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಏರ್ಪಡಸಲಾಗಿದ್ದ ಡಾ.ಬಾಬು ಜಗಜೀವನ ರಾಮ್‍ರವರ 115 ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ದೇಶಕ್ಕೆ ಸ್ವಾತಂತ್ರ್ಯ ಲಭಿಸಿ 75 ವರ್ಷ ಕಳೆದರೂ ಇಂದಿಗೂ ಸಮಾಜದಲ್ಲಿ ಮೇಲು ಕೀಳೆಂಬ ತಾರತಮ್ಯ ಇದೆ. ಯಾವ ಹಳ್ಳಿಗೆ ಹೋದರೂ ಮೇಲು, ಕೀಳು ವರ್ಗ ಎಂಬ ಪ್ರತ್ಯೇಕತೆಯನ್ನು ಕಾಣಬಹುದು. ಆದರೆ ಮೊದಲಿಗಿಂತ ಸಮಾಜದಲ್ಲಿ ಬಹಳಷ್ಟು ಸುಧಾರಣೆ ಆಗಿರುವುದು ನಿಜ. ಆದರೆ ಎಂದು ಸಮಾಜದಲ್ಲಿ ಸಂಪೂರ್ಣವಾಗಿ ಮೇಲು ಕೀಳೆಂಬ ತಾರತಮ್ಯ ಹೋಗುತ್ತದೆಯೋ ಅಂದು ನಿಜವಾದ ಸ್ವಾತಂತ್ರ್ಯ ಲಭಿಸಿದಂತೆ ಎಂದರು.

ಇಡೀ ದೇಶವನ್ನು ಸರಿಯಾದ ಧಿಕ್ಕಿನಲ್ಲಿ ನಡೆಸುವ ಪ್ರತಿಭೆಯನ್ನು ಹೊಂದಿದ್ದ ಡಾ.ಬಾಬು ಜಗಜೀವನರಾಮ್‍ರವರು ದೇಶದ ಪ್ರಧಾನಿ ಆಗಲಿಲ್ಲ ಎಂಬ ನೋವು ನನಗೆ ಕಾಡುತ್ತದೆ. ದೇಶದ ರೈತರು ಮತ್ತು ಇತರೆ ಹಿಂದುಳಿದ ವರ್ಗಗಳ ಹಸಿವಿನ ಬಗ್ಗೆ ಲೋಕಸಭೆಯಲ್ಲಿ ಅನೇಕ ಬಾರಿ ಧ್ವನಿ ಎತ್ತಿದ್ದರು ರಾಮ್‍ರವರು. ಹಿಂದೆ ದೇಶದಲ್ಲಿ ಭೂಮಿ, ನೀರು ಮತ್ತು ಜನಸಂಖ್ಯೆ ಸಂಪದ್ಭರಿತವಾಗಿದ್ದರೂ ಆಹಾರ ಧಾನ್ಯಗಳನ್ನು ವಿದೇಶದಿಂದ ರಫ್ತು ಮಾಡುತ್ತಿದ್ದ ಸಮಯದಲ್ಲಿ ನಾವೇ ಸ್ವಾವಲಂಬಿಗಳಾಗಬೇಕೆಂದು ಪಣ ತೊಟ್ಟು ಹಸಿರು ಕ್ರಾಂತಿಗೆ ನಾಂದಿ ಹಾಡಿದವರು ಅವರು.

ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್‍ರವರು ದಲಿತರು, ಹಿಂದುಳಿದವರನ್ನು ಶೈಕ್ಷಣಿಕವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ ಮೇಲೆ ತರುವ ಉದ್ದೇಶದಿಂದ ಕನಿಷ್ಟ 10 ವರ್ಷದವರೆಗೆ ಮೀಸಲಾತಿ ತಂದರು. ಈಗ ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಶೇ.0.5 ರಷ್ಟು ಈ ವರ್ಗದವರು ಮೇಲೆ ಬಂದಿಲ್ಲ. ಪ್ರತಿ ಇಲಾಖೆಯಲ್ಲಿ ಇವರಿಗೆ ಮೀಸಲಾತಿ ಇದೆ. ಅರ್ಹರಿಗೆ ಈ ಸೌಲಭ್ಯಗಳು ದೊರೆಯುತ್ತಿವೆಯೇ ಎಂಬ ಪ್ರಶ್ನೆ ಹಾಕಿಕೊಳ್ಳಬೇಕಿದೆ. ಸರ್ಕಾರ ಈ ವರ್ಗಗಳಿಗೆ ನೀಡುವ ಯಾವ ಸೌಲಭ್ಯಗಳು ಮತ್ತು ಮೀಸಲಾತಿ ದುರುಪಯೋಗವಾಗದಂತೆ ನೋಡಿಕೊಳ್ಳಬೇಕಿದೆ.

ದಲಿತರಿಗೆ ಶಿಕ್ಷಣ, ಉದ್ಯೋಗ ಸಿಗಬೇಕು. ಓದಿಸುವ ಹಂಬಲ ಪೋಷಕರಿಗೆ ಮತ್ತು ಓದುವ ಹಂಬಲ ಮಕ್ಕಳಲ್ಲಿ ಹೆಚ್ಚಾಗಬೇಕು. ಸರ್ಕಾರದ ಸವಲತ್ತುಗಳೊಂದಿಗೆ ಸಂಘಟನಾತ್ಮಕ ಹೋರಾಟದ ಅವಶ್ಯಕತೆಯೂ ಇದೆ. ಇಂದು ಯಾವ ಕಾರಣಕ್ಕೋ ಹೋರಾಟದ ಕಿಚ್ಚು ಕಡಿಮೆ ಆಗುತ್ತಿದೆ.

ಸ್ವಾತಂತ್ರ್ಯಾನಂತರ ಬ್ಯಾಕ್‍ಲಾಗ್ ಹುದ್ದೆಗಳು ಭರ್ತಿ ಆಗಿಲ್ಲ. ಕಾರಣ ಈ ವರ್ಗದಲ್ಲಿ ಶಿಕ್ಷಣದ ಕೊರತೆಯೂ ಒಂದು. ಅಟಲ್ ಬಿಹಾರಿ ವಾಜಪೇಯಿಯವರು ತಮ್ಮ ಅವಧಿಯಲ್ಲಿ ಎಲ್ಲ ಪಕ್ಷಗಳೊಡಗೂಡಿ ಬ್ಯಾಕ್‍ಲಾಗ್ ಹುದ್ದೆ ಭರ್ತಿಗೆ ಕ್ರಮ ಕೈಗೊಂಡಿದ್ದರು. ಈ ವರ್ಗದ ಜನ ಕೂಡ ತಮ್ಮ ಹಕ್ಕು ಮತ್ತು ಸವಲತ್ತುಗಳನ್ನು ಉಪಯೋಗಿಸಲು ಮುಂದೆ ಬರಬೇಕು.

ಸಮಾಜದಲ್ಲಿ ದಲಿತ, ಹಿಂದುಳಿದವರು ಜಾಗೃತಿ ಹೊಂದಬೇಕು. ಹೊಂದುತ್ತಿದ್ದಾರೆ. ಅದಕ್ಕೆ ಉತ್ತಮ ಉದಾಹರಣೆ ಪ್ರಧಾನಿ ನರೇಂದ್ರ ಮೋದಿಯವರ ಸಚಿವ ಸಂಪುಟ. ತಮ್ಮ ಸಂಪುಟದ 77 ಮಂತ್ರಿಗಳ ಪೈಕಿ 27 ಜನರು ಹಿಂದುಳಿದ ಮತ್ತು 20 ಜನ ದಲಿತರನ್ನು ಮಂತ್ರಿ ಮಾಡಿರುವುದು ಎಂದರು.

ಮೊದಲು ನಾನು ಬದಲಾಗಬೇಕು. ನನ್ನ ಕುಟುಂಬ ಉದ್ದಾರವಾಗಬೇಕು ಎಂದು ಎಲ್ಲರೂ ಮುಂದೆ ಬರಬೇಕು. ಹೀಗೆ ಸಮ ಸಮಾಜ ನಿರ್ಮಾಣವಾದಾಗ ಇಂತಹ ಮಹಾನ್ ವ್ಯಕ್ತಿಗಳ ಆತ್ಮಕ್ಕೆ ಶಾಂತಿ ಸಿಗುತ್ತದೆ. ಈ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸೋಣ, ಅಭಿವೃದ್ದಿ ಹೊಂದೋಣ ಎಂದರು.

ವಿಧಾನ ಪರಿಷತ್ ಶಾಸಕರಾದ ಡಿ.ಎಸ್.ಅರುಣ್ ಮಾತನಾಡಿ, ನಮ್ಮ ಅಕ್ಕಪಕ್ಕದ ರಾಷ್ಟ್ರಗಳು ದಿವಾಳಿಯಾಗುತ್ತಿರುವುದನ್ನು ನೋಡಿದರೆ ಅವುಗಳ ಬುನಾದಿ ಸರಿ ಇಲ್ಲ ಎಂದು ಮನವರಿಕೆ ಆಗುತ್ತದೆ. ಸುಮಾರು 53 ರಾಷ್ಟ್ರಗಳಿಂದ ಪಡೆಯಲಾದ ನಮ್ಮ ಸಂವಿಧಾನ ಅದ್ಭುತವಾಗಿದೆ. ನಾವು ಜೀವನ ಮಾಡುವ ಸ್ಥಿತಿಯನ್ನು ನಿರ್ಮಿಸಿಕೊಟ್ಟಿದೆ. ಬಾಬು ಜಗಜೀವನರಾಮ್‍ರವರು ಹಸಿರು ಕ್ರಾಂತಿ ಮತ್ತು ಕಾರ್ಮಿಕರ ಏಳ್ಗೆಗಾಗಿ ಹೋರಾಡಿದರು. ಹಲವಾರು ಜನಾಂಗಗಳಿಗೆ ಶಕ್ತಿ ತುಂಬಿದರು.

ಇತ್ತೀಚಿನ ವರ್ಷಗಳಲ್ಲಿ ಸರ್ಕಾರದ ಸೌಲಭ್ಯಗಳನ್ನು ನೇರವಾಗಿ ಫಲಾನುಭವಿಗಳಿಗೆ ತಲುಪಿಸಲಾಗುತ್ತಿದೆ. ಪಾರದರ್ಶಕತೆಯನ್ನು ಕಾಣುತ್ತಿದ್ದೇವೆ. ಇದು ಒಳ್ಳೆಯ ಬೆಳವಣಿಗೆ ಎಂದ ಅವರು ಸಮಾಜದಲ್ಲಿ ಇನ್ನೂ ಅನೇಕ ಸಮಸ್ಯೆಗಳು ಇವೆ. ಅವನ್ನು ಪರಿಹರಿಸುವ ಕೆಲಸ ಎಲ್ಲ ಸೇರಿ ಮಾಡಬೇಕೆಂದರು.

ಇತಿಹಾಸ ಪ್ರಾಧ್ಯಾಪಕರಾದ ಡಾ.ಕೆ.ಜಿ.ವೆಂಕಟೇಶ್ ವಿಶೇಷ ಉಪನ್ಯಾಸ ನೀಡಿ,ಡಾ.ಬಾಬು ಜಗಜೀವನರಾಮ್‍ರವರ ಜೀವನದ ಕುರಿತು ಮಾತನಾಡಿದರು.

ಕಾರ್ಯಕ್ರಮದಲ್ಲಿ ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಮಹಾನಗರಪಾಲಿಕೆ ಮೇಯರ್ ಸುನೀತಾ ಅಣ್ಣಪ್ಪ, ಸದಸ್ಯರಾದ ಸುರೇಖಾ ಮುರಳಿಧರ್, ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಬಿ.ಎಂ. ಲಕ್ಷ್ಮೀಪ್ರಸಾದ್, ಎಡಿಸಿ ಡಾ.ನಾಗೇಂದ್ರ ಎಫ್.ಹೊನ್ನಳ್ಳಿ. ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಮಲ್ಲಿಕಾರ್ಜುನ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಕೆ.ನಾಗರಾಜ್, ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಸಮಾಜದ ಮುಖಂಡರು ಹಾಜರಿದ್ದರು.

ದೇವರು ಕೊಟ್ಟ ವರ

0

ದೇವರು ಎಲ್ಲ ಕಡೆ ಇರುತ್ತಾನೆ. ಆತನ ದಯೆ ಒಂದಿದ್ದರೆ, ಎಂತಹದ್ದೇ ಪರಿಸ್ಥಿತಿ ಎದುರಾದರೂ ಏನೂ ಆಗುವುದಿಲ್ಲ ಎಂಬ ಮಾತನ್ನು ನಾವು ಹಿರಿಯರು ಹೇಳಿರುವುದನ್ನು ಕೇಳಿರುತ್ತೇವೆ. ದೇವರು ಒಂದಲ್ಲ ಒಂದು ರೂಪದಲ್ಲಿ ಬಂದು ಕಾಪಾಡುತ್ತಾನೆ ಎಂಬುದಕ್ಕೆ ಇದೊಂದು ಉತ್ತಮ ಉದಾಹರಣೆ ಇದೆ.

ರಾಜಸ್ಥಾನದ ಕರೌಲಿ ಯಲ್ಲಿ ನಡೆದ ಕೋಮುಗಲಭೆಯಲ್ಲಿ ಹಿಂಸಾಚಾರದ ತೀವ್ರ ಸ್ವರೂಪದಲ್ಲಿ ನಡೆದಿದೆ. ಈ ಸಂದರ್ಭದಲ್ಲಿ ಕೆಲ ಕಿಡಿಗೇಡಿಗಳು ಬೆಂಕಿ ಹಚ್ಚಿ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ಈ ವೇಳೆಯಲ್ಲಿ ಒಂದು ಪುಟ್ಟ ಬಾಲಕಿ ಬೆಂಕಿಯಲ್ಲಿ ಸಿಲುಕಿಕೊಂಡಿದ್ದಳು, ಈ ಸಂದರ್ಭದಲ್ಲಿ ಕಾನ್ಸ್ಟೇಬಲ್ ಒಬ್ಬರು ತಮ್ಮ ಪ್ರಾಣವನ್ನು ಲೆಕ್ಕಿಸದೆ ಆ ಪುಟ್ಟ ಬಾಲಕಿಯನ್ನು ರಕ್ಷಿಸಿದ್ದಾರೆ. ಪುಟ್ಟ ಬಾಲಕಿಯನ್ನು ಕಾನ್ಸ್ಟೇಬಲ್ ತಮ್ಮ ಕೈಯಲ್ಲಿ ರಕ್ಷಿಸಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಕಾನ್ಸ್ಟೇಬಲ್ ಅವರ ಹೆಸರು ನೀತ್ರೆಶ್ ಶರ್ಮಾ (31 ವರ್ಷ) ಪುಟ್ಟ ಬಾಲಕಿಯನ್ನು ಬೆಂಕಿಯಿಂದ ರಕ್ಷಿಸಿ ತಮ್ಮ ಶೌರ್ಯ ವನ್ನು ಪ್ರದರ್ಶಿಸಿದ್ದಾರೆ. ಇವರ ಈ ಸಾಧನೆಗೆ ರಾಜಸ್ಥಾನ ಪೊಲೀಸ್ ಇಲಾಖೆ ಹೆಡ್ ಪೊಲೀಸ್ ಕಾನ್ಸ್ಟೇಬಲ್ ಪದೋನ್ನತಿ ಹುದ್ದೆ ನೀಡಿ ಗೌರವಿಸಿದ್ದಾರೆ.