Sunday, August 9, 2026
Sunday, August 9, 2026
Home Blog Page 164

Priyank Kharge ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ಎದುರಿಸಲು ಮುಂಜಾಗ್ರತಾ ಕ್ರಮ- ಪ್ರಿಯಾಂಕ್ ಖರ್ಗೆ.

0

Priyank Kharge ರಾಜ್ಯದ ಗ್ರಾಮಾಂತರ ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ಎದುರಾಗಲಿರುವ ಕುಡಿಯುವ ನೀರಿನ ಅಭಾವವನ್ನು ಎದುರಿಸಲು ಮೊದಲ ಆದ್ಯತೆಯಾಗಿ ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆ ಮುಖಾಂತರ ಪಡೆಯಲಾಗುವುದಲ್ಲದೆ, ಅಗತ್ಯವಿರುವ ಸ್ಥಳದಲ್ಲಿ ಟ್ಯಾಂಕರ್ ಮೂಲಕ ನೀರನ್ನು ಸರಬರಾಜು ಮಾಡಲು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಲಾಗಿದೆ.

◆ ನೀರು ಬತ್ತಿ ಹೋಗಿರುವ ಕೊಳವೆ ಬಾವಿಗಳನ್ನು ಫ್ಲಶಿಂಗ್ ಮತ್ತು ಆಳಗೊಳಿಸಿ ನೀರಿನ ಮೂಲಗಳನ್ನು ಹೆಚ್ಚಿಸಬೇಕು.
◆ ಕೊಳವೆಬಾವಿಗಳನ್ನು ಕೊರೆಯುವುದು ಅತ್ಯಗತ್ಯವೆಂದು ಕಂಡು ಬಂದಲ್ಲಿ, ಸಂಬಂಧಪಟ್ಟ ಭೂವಿಜ್ಞಾನಿಗಳ ವರದಿಯನುಸಾರ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸಲು ಕಾಮಗಾರಿಗಳನ್ನು ಕೈಗೊಳ್ಳಬೇಕು.
◆ ಕುಡಿಯುವ ನೀರಿನ ಸಮಸ್ಯೆಯನ್ನು ದೈನಂದಿನ ಆಧಾರದ ಮೇಲೆ ಮೇಲ್ವಿಚಾರಣೆ ಮಾಡಲು ಕ್ರಮವಹಿಸಬೇಕು.
ಶುದ್ಧ ನೀರು ಸರಬರಾಜು ಮಾಡುವ ನಿಟ್ಟಿನಲ್ಲಿ ಗ್ರಾಮ ಪಂಚಾಯತಿ ಹಾಗೂ ಗ್ರಾಮ ಮಟ್ಟದಲ್ಲಿ ಪ್ರಾಥಮಿಕ ಹಂತವಾಗಿ ಎಲ್ಲಾ ಕುಡಿಯುವ ನೀರಿನ ಮೂಲಗಳ ಮಾದರಿಗಳನ್ನು, ಪ್ರತಿ ಗ್ರಾಮದಲ್ಲಿ ಕನಿಷ್ಠ 3 ನಳ ನೀರು ಸಂಪರ್ಕಗಳ ನೀರಿನ ಗುಣಮಟ್ಟದ ಪರೀಕ್ಷೆಗಳನ್ನು ಕೈಗೊಂಡು ಮಾಹಿತಿ ದಾಖಲಿಸಬೇಕು ಎಂದು ಸೂಚಿಸಲಾಗಿದೆ.
◆ ರಾಜ್ಯದಲ್ಲಿ ಈಗಾಗಲೆ 21 ಜಿಲ್ಲೆಗಳ 144 ತಾಲ್ಲೂಕುಗಳಲ್ಲಿನ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿರುತ್ತದೆ, ಇವುಗಳ ಪೈಕಿ 31 ಗ್ರಾಮಗಳಿಗೆ 96 ಟ್ಯಾಂಕರ್‌ಗಳ ಮುಖಾಂತರ ಹಾಗೂ 152 ಗ್ರಾಮಗಳಿಗೆ 154 ಖಾಸಗಿ ಕೊಳವೆ ಬಾವಿಗಳನ್ನು ಬಾಡಿಗೆ ಆಧಾರದ ಮೇಲೆ ಪಡೆದು ಕುಡಿಯುವ ನೀರನ್ನು ಒದಗಿಸಲು ಕ್ರಮವಹಿಸಲಾಗಿದೆ.

Priyank Kharge 2026ನೇ ಸಾಲಿನ ಬೇಸಿಗೆಯಲ್ಲಿ ರಾಜ್ಯದ ಎಲ್ಲಾ ಗ್ರಾಮೀಣ ಪ್ರದೇಶಗಳಿಗೆ ಕುಡಿಯುವ ನೀರಿಗೆ ತೊಂದರೆ ಉಂಟಾಗದಂತೆ ತುರ್ತು ಕಾಮಗಾರಿಗಳನ್ನು ಕೈಗೊಳ್ಳಲು ಅವಶ್ಯವಿರುವ ಮೊತ್ತವನ್ನು ಕೇಂದ್ರ ಹಾಗೂ ರಾಜ್ಯಗಳ ಬರ ಪರಿಹಾರ ನಿಧಿ ಹಾಗೂ ಇಲಾಖೆಯ ಟಾಸ್ಕ್‌ಫೋರ್ಸ್‌ ಅಡಿ ಸಂಯೋಜಿತಗೊಳಿಸಿ ಬಳಸಿಕೊಂಡು ಸಮರ್ಪಕವಾಗಿ ಕುಡಿಯುವ ನೀರನ್ನು ಒದಗಿಸಲು ಸೂಚಿಸಲಾಗಿದೆ.

Madhu Bangarappa ಬಡವರು & ಶ್ರಮಿಕರು ಹಸಿವಿನಿಂದ ಇರಬಾರದು ಎಂಬ ಉದಾತ್ತ ಉದ್ದೇಶದ ಹಿನ್ನೆಲೆಯಿಂದ ಇಂದಿರಾ ಕ್ಯಾಂಟೀನ್ ಚಾಲನೆ- ಮಧು ಬಂಗಾರಪ್ಪ.

0

Madhu Bangarappa ಬಡವರು ಮತ್ತು ಶ್ರಮಿಕ ವರ್ಗದವರು ಹಸಿವಿನಿಂದ ಇರಬಾರದು ಎಂಬ ಉದಾತ್ತ ಉದ್ದೇಶದಿಂದ ನಮ್ಮ ಸರ್ಕಾರ ಇಂದಿರಾ ಕ್ಯಾಂಟೀನ್ ಯೋಜನೆಗೆ ಮರುಜೀವ ನೀಡಿದೆ. ಈ ಮೂಲಕ ಹಸಿವು ಮುಕ್ತ ಕರ್ನಾಟಕ ನಿರ್ಮಾಣವೇ ನಮ್ಮ ಮುಖ್ಯ ಗುರಿ ಎಂದು ಶಾಲಾ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.
​ಅವರು ಭಾನುವಾರ ಆನವಟ್ಟಿಯಲ್ಲಿ ನೂತನವಾಗಿ ನಿರ್ಮಿಸಲಾದ ಇಂದಿರಾ ಕ್ಯಾಂಟೀನ್ ಅನ್ನು ಲೋಕಾರ್ಪಣೆಗೊಳಿಸಿ ಸಾರ್ವಜನಿಕರನ್ನುದ್ದೇಶಿಸಿ ಅವರು ಮಾತನಾಡಿದರು.
ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಪ್ರಮುಖವಾಗಿದ್ದ 20 ಅಂಶಗಳ ಕಾರ್ಯಕ್ರಮದ ಆಶಯದಂತೆ, ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ರೂ.5 ಮತ್ತು 10 ರೂ.ಗಳ ಅತ್ಯಲ್ಪ ದರದಲ್ಲಿ ಗುಣಮಟ್ಟದ ಆಹಾರ ನೀಡುವ ಮೂಲಕ ಜನಸಾಮಾನ್ಯರ ಪರವಾಗಿ ನಿಂತಿದೆ. ಇದರಿಂದ ಹಸಿದವರಿಗೆ ಮತ್ತು ಕೂಲಿ ಕಾರ್ಮಿಕರಿಗೆ ಆಹಾರ ಕೈಗೆಟುಕುವ ದರದಲ್ಲಿ ಮತ್ತು ಸಕಾಲದಲ್ಲಿ ಸಿಗುವುದರಿಂದ ಶ್ರಮಿಕ ವರ್ಗದವರಿಗೂ ಸಾಕಷ್ಟು ಅನುಕೂಲವಾಗಿದೆ ಎಂದರು.
​ ಜಿಲ್ಲೆಯಲ್ಲಿ ಈಗಾಗಲೇ 16 ಇಂದಿರಾ ಕ್ಯಾಂಟೀನ್‌ಗಳ ಗುರಿ ಹೊಂದಲಾಗಿದ್ದು, ಶನಿವಾರ ಹೊಳೆಹೊನ್ನೂರಿನಲ್ಲಿ ಇಂದಿರಾ ಕ್ಯಾಂಟೀನ್ ಗೆ ಚಾಲನೆ ನೀಡಿ ಇಂದು ಆನವಟ್ಟಿಯಲ್ಲಿ ಉದ್ಘಾಟಿಸಲಾಗಿದೆ. ಮತ್ತು ಶಿಕಾರಿಪುರದಲ್ಲಿ ಕಾರ್ಯಾರಂಭ ಮಾಡಲಿದೆ ಎಂದರು.
Madhu Bangarappa ಪಂಚ ಗ್ಯಾರಂಟಿಗಳ ಶಕ್ತಿ: ರಾಜ್ಯದ ಜನತೆಗೆ ಕೇವಲ ಅಕ್ಕಿ ಮಾತ್ರವಲ್ಲದೆ, ಗೃಹಲಕ್ಷ್ಮಿ ಯೋಜನೆಯಡಿ 2,000 ರೂ. ಗೌರವಧನ ಹಾಗೂ ಉಚಿತ ವಿದ್ಯುತ್ ನೀಡುವ ಮೂಲಕ ಆರ್ಥಿಕ ಸಬಲೀಕರಣಕ್ಕೆ ಒತ್ತು ನೀಡಲಾಗಿದೆ. ಇದು ಸರ್ಕಾರದ ಕೊಡುಗೆಯಲ್ಲ, ಜನರ ಹಕ್ಕು ಎಂದು ಸಚಿವರು ಪ್ರತಿಪಾದಿಸಿದರು.
ಪಂಪ್‌ಸೆಟ್ ಸಕ್ರಮ: ರೈತರ ಹಿತದೃಷ್ಟಿಯಿಂದ ಬಾಕಿ ಇರುವ ಬೋರ್‌ವೆಲ್ ಪಂಪ್‌ಸೆಟ್‌ಗಳ ಸಕ್ರಮ ಪ್ರಕ್ರಿಯೆಯನ್ನು ಶೀಘ್ರದಲ್ಲೇ ಪೂರ್ಣಗೊಳಿಸಲಾಗುವುದು ಎಂದು ಭರವಸೆ ನೀಡಿದರು.
ಸಚಿವರು ಸ್ವತಃ ಕ್ಯಾಂಟೀನ್ ಆಹಾರ ಸವಿಯುವ ಮೂಲಕ ಗುಣಮಟ್ಟವನ್ನು ಪರಿಶೀಲಿಸಿದರು.
​ಕಾರ್ಯಕ್ರಮದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಅಪಾರ ಸಂಖ್ಯೆಯ ಸಾರ್ವಜನಿಕರು ಉಪಸ್ಥಿತರಿದ್ದರು.

Shivanand Patil ಯಶವಂತಪುರದಲ್ಲಿ ಶೀಘ್ರವೇ ಟೆಕ್ಸ್ ಟೈಲ್ ಪಾರ್ಕ್ ಶಂಕುಸ್ಥಾಪನೆ- ಜವಳಿ ಸಚಿವ ಶಿವಾನಂದ ಪಾಟೀಲ್.

0

Shivanand Patil ಪಾರಂಪರಿಕ ಕಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ನಮ್ಮ ಉತ್ಪನ್ನಗಳಿಗೆ ನಮ್ಮಲ್ಲೇ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲು ಯಶವಂತಪುರದಲ್ಲಿರುವ ಇಲಾಖೆಯ ಒಂದೂವರೆ ಎಕರೆ ಪ್ರದೇಶದಲ್ಲಿ ಕಟ್ಟಡ ನಿರ್ಮಿಸಲಾಗುವುದು ಎಂದು ಜವಳಿ, ಕಬ್ಬು ಅಭಿವೃದ್ಧಿ,ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.

ರಾಜಾಜಿನಗರದ ಡಾ. ಬಿ.ಆರ್‌. ಅಂಬೇಡ್ಕರ್‌ ಸ್ಟೇಡಿಯಂನಲ್ಲಿ 14 ದಿನಗಳ ಭಾರತೀಯ ಕೈಮಗ್ಗ ಪರಂಪರೆ ಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಅವರು, ಸಿಎಂ ಜೊತೆ ಚರ್ಚಿಸಿ ಶೀಘ್ರದಲ್ಲಿ ಶಂಕುಸ್ಥಾಪನೆ ನೆರವೇರಿಸಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.

ಪಾರಂಪರಿಕ ಕಲೆ ನಶಿಸಿ ಹೋಗುತ್ತಿದೆ. ಈ ಕಲೆಯನ್ನು ಉಳಿಸಿ ಬೆಳೆಸಲು ಉತ್ಪನ್ನಗಳಿಗೆ ಸ್ಥಳೀಯ ಮಾರುಕಟ್ಟೆ ಕಲ್ಪಿಸಬೇಕಾಗಿದೆ. ಯಶವಂತಪುರದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಕಟ್ಟಡದಲ್ಲಿ ಕೈಮಗ್ಗ ಉತ್ಪನ್ನಗಳು, ಚನ್ನಪಟ್ಟಣದ ಗೊಂಬೆ, ಕುಂಬಾರಿಕೆ ಸೇರಿದಂತೆ ಎಲ್ಲ ರೀತಿಯ ಪಾರಂಪರಿಕ ಕಲೆಯ ಉತ್ಪನ್ನಗಳ ಮಾರಾಟಕ್ಕೆ ಅವಕಾಶ ಕಲ್ಪಿಸಲು ಯೋಜಿಸಲಾಗಿದೆ ಎಂದು ಹೇಳಿದರು.

ರಾಜ್ಯದ ಕೈಮಗ್ಗ ಉತ್ಪನ್ನಗಳು ಹೊರ ರಾಜ್ಯಗಳಲ್ಲಿ ಬೇರೆ ಬೇರೆ ಬ್ರಾಂಡ್‌ಗಳಲ್ಲಿ ಮಾರಾಟವಾಗುತ್ತಿವೆ. ನಮ್ಮದೇ ಉತ್ಪನ್ನಗಳು ಬೇರೆ ರಾಜ್ಯಗಳಿಂದ ಬೇರೆ ಬ್ರಾಂಡ್‌ಗಳ ರೂಪದಲ್ಲಿ ರಾಜ್ಯಕ್ಕೆ ಬರುತ್ತಿವೆ. ಸ್ಥಳೀಯವಾಗಿ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಿದರೆ ಈ ಸಮಸ್ಯೆಗೆ ಪರಿಹಾರ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೈಮಗ್ಗ ಕೇವಲ ಉತ್ಪಾದನಾ ಕ್ಷೇತ್ರವಷ್ಟೇ ಅಲ್ಲ, ಅದು ಭಾರತದ ಸಾಂಸ್ಕೃತಿಕ ಗುರುತು. ಕೈಗಾರಿಕೆ ಮತ್ತು ಪರಂಪರೆಯನ್ನು ಪ್ರತಿಬಿಂಬಿಸುವ ಜೀವಂತ ಸಂಪ್ರದಾಯ ಎಂದು ಸಚಿವರು ಬಣ್ಣಿಸಿದರು.

ನಮ್ಮ ನೇಕಾರರು ಪೀಳಿಗೆಯಿಂದ ಪೀಳಿಗೆಗೆ ತಂತ್ರಜ್ಞಾನ ಹಾಗೂ ವಿನ್ಯಾಸವನ್ನು ಸಂರಕ್ಷಣೆ ಮಾಡಿಕೊಂಡು ಬಂದಿದ್ದು, ಅದರ ಫಲವಾಗಿ ಭಾರತೀಯ ಕೈಮಗ್ಗ ಉತ್ಪನ್ನಗಳು ವಿಶ್ವದಾದ್ಯತ ಪ್ರಶಂಸೆಗೆ ಪಾತ್ರವಾಗಿವೆ ಎಂದರು.

Shivanand Patil ಕಾವೇರಿ ಹ್ಯಾಂಡ್‌ ಲೂಮ್‌ ಅಧ್ಯಕ್ಷ ಬಿ.ಜೆ. ಗಣೇಶ್‌ ಅವರು ಕೈಮಗ್ಗ ಉತ್ಪನ್ನಗಳು ಸೇರಿ ಸಾಂಪ್ರದಾಯಿಕ ಕಲೆಯ ಎಲ್ಲ ಉತ್ಪನ್ನಗಳು ಒಂದೇ ಸೂರಿನಡಿ ಸಿಗುವಂತೆ ಮಾರುಕಟ್ಟೆ ಕಲ್ಪಿಸಬೇಕು ಎಂದು ಸಚಿವ ಶಿವಾನಂದ ಪಾಟೀಲ ಅವರಿಗೆ ಮನವಿ ಮಾಡಿದರು.

ಜವಳಿ ಇಲಾಖೆ ಅಧಿಕಾರಿಗಳಾದ ಪ್ರಭಾ ಕರಣ್‌, ಪ್ರಕಾಶ್‌, ಯೋಗೇಶ್‌ ಉಪಸ್ಥಿತರಿದ್ದರು.

ಮೇಳದಲ್ಲಿ 80 ಮಳಿಗೆಗಳಿದ್ದು, ರಾಜ್ಯದ ಕೈಮಗ್ಗ ಉತ್ಪನ್ನಗಳೊಂದಿಗೆ ಕಾಶ್ಮೀರ, ಹರಿಯಾಣ, ರಾಜಸ್ಥಾನ ಹಾಗೂ ಇತರ ಹಲವು ರಾಜ್ಯಗಳ ಕೈಮಗ್ಗ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ವ್ಯವಸ್ಥೆ ಮಾಡಲಾಗಿದೆ.

• ಅಂತಿಮ ಹಂತದಲ್ಲಿ ಜವಳಿ ನೀತಿ
2026-30 ಅವಧಿಯ ನೂತನ ಜವಳಿ ನೀತಿ ಅಂತಿಮ ಹಂತಕ್ಕೆ ಬಂದಿದೆ. ಮೆಗಾ ಮತ್ತು ಮಿನಿ ಇಂಡಸ್ಟ್ರೀಸ್‌ಗಳನ್ನು ಒಂದೇ ಸೂರಿನ ಅಡಿಯಲ್ಲಿ ತರುವ ಪ್ರಯತ್ನ ನಡೆದಿದೆ ಎಂದು ಶಿವಾನಂದ ಪಾಟೀಲ ಹೇಳಿದರು.

ಕಲಬುರಗಿಯಲ್ಲಿ ನಿರ್ಮಾಣವಾಗುತ್ತಿರುವ ಪಿಎಂ ಮಿತ್ರ ನೂಲಿನಿಂದ ಬಟ್ಟೆ ಹಂತದವರೆಗೆ ಎಲ್ಲ ಚಟುವಟಿಕೆಗಳು ಪಾರ್ಕ್‌ನಲ್ಲಿ ಒಂದೇ ಸೂರಿನ ಅಡಿಯಲ್ಲಿ ಬರಲಿವೆ. ಈ ಯೋಜನೆ ಅನುಷ್ಠಾನವಾದರೆ ಕರ್ನಾಟಕದಲ್ಲಿ ಮೈಲಿಗಲ್ಲಾಗಲಿದೆ ಎಂದರು.

ಫೋಟೋ ಕ್ಯಾಪ್ಷನ್‌

  1. ಬೆಂಗಳೂರಿನಲ್ಲಿ ಆಯೋಜಿಸಿರುವ ಭಾರತೀಯ ಕೈಮಗ್ಗ ಪರಂಪರೆ ಪ್ರದರ್ಶನ ಉದ್ಘಾಟಿಸಿದ ಸಚಿವ ಶಿವಾನಂದ ಪಾಟೀಲ ಅವರು ಮಳಿಗೆಗಳಿಗೆ ಭೇಟಿ ನೀಡಿ ಕೈಮಗ್ಗ ಉತ್ಪನ್ನಗಳನ್ನು ವೀಕ್ಷಿಸಿದರು.
  2. ಕೈಮಗ್ಗದಲ್ಲಿ ವರನಟ ಡಾ. ರಾಜಕುಮಾರ್‌ ಮತ್ತು ಪುನೀತ್‌ ರಾಜಕುಮಾರ್‌ ಅವರ ಭಾವಚಿತ್ರ ನೇಯ್ದ ಬಟ್ಟೆಯನ್ನು ವೀಕ್ಷಿಸಿದ ಸಚಿವ ಶಿವಾನಂದ ಪಾಟೀಲ ಅವರು ನೇಕಾರರಿಂದ ಮಾಹಿತಿ ಪಡೆದರು.

Shimoga News ಮೈಕ್ರೋಪ್ಲಾಸ್ಟಿಕ್ ಇಂದು ನಮ್ಮ ರಕ್ತಪ್ರವಾಹವನ್ನ ತಲುಪಿ ಗಂಭೀರ ಆರೋಗ್ಯ ಸಮಸ್ಯೆ ತಂದೊಡ್ಡಿದೆ- ಉಮಾರೆಡ್ಡಿ

0

Shimoga News ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ನಮ್ಮ ಮುಂದೆ ಇರುವ ಗಂಭೀರ ಸಮಸ್ಯೆಯಾಗಿದೆ. ಜಾಗತಿಕವಾಗಿ, ಗೊಬ್ಬರವಾಗುವ ಪ್ಲಾಸ್ಟಿಕ್ ಬಳಕೆಯನ್ನು ಕಡ್ಡಾಯಗೊಳಿಸಲಾಗುತ್ತಿದೆ. ಇದನ್ನು ಪರಿಹರಿಸುವುದು ಒಂದು ಪ್ರಮುಖ ಮತ್ತು ತುರ್ತು ಸಮಸ್ಯೆಯಾಗಿದೆ ಎಂದು ಬೆಂಗಳೂರಿನ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ ಅಧ್ಯಕ್ಷೆ ಉಮಾ ರೆಡ್ಡಿ ತಿಳಿಸಿದರು.

ಶಿವಮೊಗ್ಗದ ಗಾಜನೂರಿನ ಸಮೀಪದಲ್ಲಿರುವ ಎಕೊವಿನ್ ನಿಯೋಧ್ಯಂ ನವೋದ್ಯಮದ ಮುಖ್ಯ ಪಾಲುದಾರರಾದ ಶ್ರೀಮತಿ ಸುನೀತ ಗಣೇಶ ಅಂಗಡಿಯವರ ಜೈವಿಕ ಪ್ಲಾಸ್ಟಿಕ್ ಉತ್ಪಾದನಾ ತಯಾರಿಕಾ ಘಟಕಕ್ಕೆ ಭೇಟಿ ನೀಡಿ, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ನಿರ್ದೇಶಕ ಗಣೇಶ ಅಂಗಡಿ ಇವರಿಂದ ಸನ್ಮಾನಿತರಾಗಿ ಮಾತನಾಡಿದ ಅವರು, ಇದು ಮೆಕ್ಕೆಜೋಳವನ್ನು ಬಳಸಿಕೊಂಡು ಜೈವಿಕ ವಿಘಟನೀಯ ಪ್ಲಾಸ್ಟಿಕ್ ಉತ್ಪಾದನಾ ಘಟಕವಾಗಿದೆ. ಇದು ಪ್ಲಾಸ್ಟಿಕ್‌ಗೆ ಬಾಳಿಕೆ ಬರುವ ಮತ್ತು ಆಹಾರ-ಸುರಕ್ಷಿತ ಪರ್ಯಾಯವನ್ನು ನೀಡುತ್ತದೆ. ನಮಗೆ ಪರ್ಯಾಯವಿಲ್ಲದಿದ್ದರೆ ಪ್ಲಾಸ್ಟಿಕ್ ಬಳಕೆಯನ್ನು ತಡೆಯಲು ಯಾವುದೇ ಮಾರ್ಗವಿಲ್ಲ. ದೊಡ್ಡ ಬ್ರ್ಯಾಂಡ್ ಗಳು ಸೆಣಬು ಮತ್ತು ಬಟ್ಟೆ ಚೀಲಗಳನ್ನು ಖರೀದಿಸಬಹುದಾದರೂ, ಭಾರತೀಯ ಮಾರುಕಟ್ಟೆಯ ಬಹುಭಾಗವನ್ನು ಒಳಗೊಂಡಿರುವ ಮಧ್ಯಮ ಮತ್ತು ಸಣ್ಣ ವ್ಯವಹಾರಗಳು ಪ್ಲಾಸ್ಟಿಕ್ ಚೀಲಗಳನ್ನು ಬಳಸುತ್ತಲೇ ಇವೆ ಎಂದರು.

ಪ್ಲಾಸ್ಟಿಕ್ ಮಾಲಿನ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳು ಜಲಚರಗಳು ಮತ್ತು ಪ್ರಾಣಿಗಳ ಮೇಲೆ ಪರಿಣಾಮ ಬೀರುವುದಕ್ಕೆ ಮಾತ್ರ ಸೀಮಿತವಾಗಿಲ್ಲ. ಇಂದು, ಮೈಕ್ರೋಪ್ಲಾಸ್ಟಿಕ್ ನಮ್ಮ ರಕ್ತಪ್ರವಾಹವನ್ನು ತಲುಪಿದೆ. ಬಾಟಲಿ ನೀರಿನಲ್ಲಿ ಮೈಕ್ರೋಪ್ಲಾಸ್ಟಿಕ್ ಗಳಿವೆ. ಇದನ್ನು ಪರಿಹರಿಸುವುದು ಒಂದು ಪ್ರಮುಖ ಮತ್ತು ತುರ್ತು ಸಮಸ್ಯೆಯಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸನ್ಮಾನಿತ ಎಫ್ ಕೆ ಸಿ ಸಿ ಐ ಉಪಾಧ್ಯಕ್ಷ ಸಾಯಿ ರಾಮ್ ಪ್ರಸಾದ್ ಮಾತನಾಡಿ, ಶಿವಮೊಗ್ಗದಲ್ಲಿ ಇಂತಹ ತಂತ್ರಜ್ಞಾನ ಮತ್ತು ನಾವೀನ್ಯತೆ ಸಂಬಂಧಿತ ನವೋದ್ಯಮಗಳು ನಾವೀನ್ಯತೆಗೆ ಉತ್ತೇಜನ ನೀಡಲು ಅನುದಾನಗಳು ಮತ್ತು ಪ್ರೋತ್ಸಾಹಕಗಳ ಅವಶ್ಯಕತೆಯಿದೆ ಎಂದರು.

Shimoga News ಸನ್ಮಾನಿತ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್ ಮಾತನಾಡಿ, ಮಹಿಳಾ ಕೈಗಾರಿಕೋದ್ಯಮಿಗಳೇ ನಿಮ್ಮ ಮೇಲೆ ನೀವು ನಂಬಿಕೆ ಇಡಬೇಕು. ನಿಮ್ಮ ಕನಸುಗಳನ್ನು ಸಾಧಿಸಿ ಮತ್ತು ನಿಮ್ಮ ದೃಢನಿಶ್ಚಯದಿಂದ ಸಾಧನೆ ಮಾಡಿರಿ. ಮಹಿಳೆಯ ದೃಢಸಂಕಲ್ಪವು ಯಾವುದೇ ಸವಾಲನ್ನು ಜಯಿಸಬಹುದು. ಸಬಲೀಕರಣಗೊಂಡ ಮಹಿಳೆಯರು ಮಹಿಳೆಯರನ್ನು ಸಬಲೀಕರಣಗೊಳಿಸುತ್ತಾರೆ ಎಂದು ತಿಳಿಸಿದರು.

ಸಂಸ್ಥೆಯ ಪಾಲುದಾರರಾದ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ನಿರ್ದೇಶಕ ಗಣೇಶ ಅಂಗಡಿ ಮಾತನಾಡಿ, ಪ್ಲಾಸ್ಟಿಕ್ ಮುಕ್ತಗೊಳಿಸುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿ, ಶಿವಮೊಗ್ಗ ಜಿಲ್ಲೆಯನ್ನು ಪ್ಲಾಸ್ಟಿಕ್ ಮುಕ್ತಗೊಳಿಸುವ ದೃಷ್ಟಿಕೋನದತ್ತ ಶ್ರಮಿಸುವುದನ್ನು ಮುಂದುವರಿಸುತ್ತೇನೆ ಎಂದು ತಿಳಿಸಿದರು.

ಇದೆ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಕಾರ್ಯದರ್ಶಿ ಎ.ಎಂ.ಸುರೇಶ್, ಖಜಾಂಚಿ ಆರ್.ಮನೋಹರ್ ರವರನ್ನು ಸನ್ಮಾನಿಸಲಾಯಿತು.

ಕೋಟ್:

ನಾವು ಪ್ಲಾಸ್ಟಿಕ್ ಬ್ಯಾಗ್ ಗಳನ್ನು ಕಡಿಮೆ ಮಾಡಿ ಬಯೋ ರಿಫಾರ್ಮ್ ಬ್ಯಾಗ್ ಬಳಸಿ ಪರಿಸರ ಮಾಲಿನ್ಯ ಕಡಿಮೆ ಮಾಡಬೇಕಿದೆ.

  • ಬಿ.ಗೋಪಿನಾಥ್, ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ

Madhu Bangarappa ಗೋಪಾಲಗೌಡರ ಜಯಂತಿಯಂದು ಬಂಗಾರಪ್ಪ ರಸ್ತೆ ನಾಮಕರಣ: ಹಿರಿಯರ ಆಶೀರ್ವಾದವಾಗಿದೆ- ಮಧುಬಂಗಾರಪ್ಪ.

0

Madhu Bangarappa ಬಡವರಿಗೆ ಸೂರು ಒದಗಿಸುವ ಆಶ್ರಯ, ಆರಾಧನಾ, ಅಕ್ಷಯ, ರೈತರ ಪಂಪ್‌ಸೆಟ್‌ಗೆ ಉಚಿತ ವಿದ್ಯುತ್ ಹೀಗೆ ಬಡವರ ಏಳ್ಗೆಗಾಗಿ ಹಲವಾರು ಯೋಜನೆಗಳನ್ನು ನೀಡಿದ ಮಾಜಿ ಮುಖ್ಯಮಂತ್ರಿಗಳಾದ ಬಂಗಾರಪ್ಪನವರ ಹೆಸರನ್ನು ಗೋಪಾಲಗೌಡ ಬಡಾವಣೆಯ ರಸ್ತೆಗೆ ನಾಮಕರಣ ಮಾಡುವ ಕಾರ್ಯಕ್ರಮ ಉದ್ಘಾಟನೆ ಮಾಡುತ್ತಿರುವುದು ಹೆಮ್ಮೆಯ ವಿಷಯ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು ಬಂಗಾರಪ್ಪ ತಿಳಿಸಿದರು.
ಗೋಪಾಲಗೌಡ ಬಡಾವಣೆಯಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಮಹಾನಗರಪಾಲಿಕೆ ವ್ಯಾಪ್ತಿಯ ಆಲ್ಕೊಳ ವೃತ್ತದಿಂದ ಡಿ.ವಿ.ಜಿ. ವೃತ್ತದವರೆಗೆ 100ಅಡಿ ದ್ವಿಪಥ ರಸ್ತೆಗೆ ಮಾಜಿ ಮುಖ್ಯಮಂತ್ರಿ ಶ್ರೀ ಎಸ್.ಬಂಗಾರಪ್ಪ ರಸ್ತೆ ಎಂದು ನಾಮ ಫಲಕ ಉದ್ಘಾಟನೆ ಮತ್ತು ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿAದ 290 ಮನೆಗಳಿಗೆ ಹಕ್ಕುಪತ್ರಗಳ ವಿತರಣೆ ಹಾಗೂ ಆಶ್ರಯ ಯೋಜನೆ ಅಡಿಯಲ್ಲಿ ಆಯ್ಕೆಯಾಗಿರುವ ಫಲಾನುಭವಿಗಳಿಗೆ ಮನೆಗಳ ಕೀ ಹಸ್ತಾಂತರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಾಜಿ ಮುಖ್ಯಮಂತ್ರಿಗಳಾದ ಬಂಗಾರಪ್ಪನವರ ಯೋಜನೆಗಳು, ಕಾರ್ಯಕ್ರಮಗಳು ಸದಾ ಹಸಿರಾಗಿವೆ. ಹಕ್ಕುಪತ್ರಗಳನ್ನು ವಿತರಣೆ ಮಾಡುವುದರಲ್ಲಿ ಕೂಡ ಅವರ ಚಿಂತನೆ ಇದೆ. ಗೋಪಾಲಗೌಡರ ಜಯಂತಿಯAದು ಬಂಗಾರಪ್ಪ ರಸ್ತೆ ನಾಮಕರಣವಾಗುತ್ತಿರುವುದು ಹಿರಿಯ ಚೇತನಗಳ ಆಶೀರ್ವಾದವಾಗಿದೆ ಹಾಗೂ ಉಸ್ತುವಾರಿ ಸಚಿವನಾಗಿ ಈ ಕಾರ್ಯಕ್ರಮ ಉದ್ಘಾಟಿಸುತ್ತಿರುವುದಕ್ಕೆ ನನಗೆ ಹೆಮ್ಮೆ ಮತ್ತು ನನ್ನ ಪುಣ್ಯ ಎಂದ ಅವರು ಬಂಗಾರಪ್ಪನವರ ತತ್ವ, ಸಿದ್ದಾಂತಗಳನ್ನು ಅನುಸರಿಸಿಕೊಂಡು ಹೋಗುತ್ತಿದ್ದೇನೆ ಎಂದರು.
ಆಶ್ರಯ, ಆರಾಧನಾ, ಗ್ರಾಮೀಣ ಕೃಪಾಂಕ ಯೋಜನೆಗಳು ರೈತರ 20 ಹೆಚ್‌ಪಿ ಪಂಪ್ ಸೆಟ್ ಗೆ ಉಚಿತ ವಿದ್ಯುತ್ ನೀಡಿ ರೈತರ ನೆರವಿಗೆ ಬಂದಿರುವುದನ್ನು ನಾವು ಸದಾ ಸ್ಮರಿಸಬೇಕು. ಈ ಯೋಜನೆಗಳಿಂದ ರೈತರು ಆರ್ಥಿಕವಾಗಿ ಸುಧಾರಣೆಯಾಗುತ್ತಿರುವುದನ್ನು ನೋಡಿ ಸಂತೋಷವಾಗುತ್ತದೆ.
ಮಾನವೀಯತೆ ಸೇರಿದಂತೆ ಜೀವನಕ್ಕೆ ಅಗತ್ಯವಾದ ಎಲ್ಲವನ್ನು ನೀಡುವ ಶಿಕ್ಷಣ ಬಹಳ ಮುಖ್ಯವೆಂದು ಹೇಳುತ್ತಿದ್ದ ಬಂಗಾರಪ್ಪನವರು ಅಂದು ಒಂದು ಅದ್ಭುತ ಕಾರ್ಯಕ್ರಮ ತಂದರು. 90 ರ ದಶಕದಲ್ಲಿ ಬಡ ವರ್ಗಕ್ಕೆ ಶಿಕ್ಷಣ ಬಹಳ ಕಷ್ಟವಾಗಿತ್ತು. ಅಂತಹ ಸಂದರ್ಭದಲ್ಲಿ ಶಾಲೆಗೆ ಬರುವ ಮಕ್ಕಳಿಗೆ ಪ್ರತಿ ದಿನ ರೂ. 1 ನ್ನು ಅವರ ತಾಯಿಯ ಕೈಯಲ್ಲಿ ನೀಡುವ ಯೋಜನೆ ಜಾರಿಗೆ ತಂದು, ಬಡವರ ಮಕ್ಕಳು ಶಾಲೆಗೆ ಬರುವಂತೆ ಮಾಡಿದರು ಎಂದ ಅವರು ಲೋಹಿಯಾ, ಗೋಪಾಲಗೌಡರು, ಕಾಗೋಡು ತಿಮ್ಮಪ್ಪ, ಬಂಗಾರಪ್ಪ ಇವರನ್ನೆಲ್ಲ ನಾವು ಸ್ಮರಿಸಲೇಬೇಕು. ಇವರ ಚಿಂತನೆಗಳು, ಅವರು ಮಾಡಿದ ಕೆಲಸಗಳು ಜೀವಂತವಾಗಿವೆ.
1000 ಕೆಪಿಎಸ್ ಶಾಲೆ : ಎಲ್ ಕೆಜಿಯಿಂದ 12 ನೇ ತರಗತಿವರೆಗೆವರೆಗೆ ಉಚಿತವಾಗಿ ಒಂದೇ ಸೂರಿನಡಿ ಶಿಕ್ಷಣ ಮತ್ತು ಉಚಿತ ಸಾರಿಗೆ ವ್ಯವಸ್ಥೆ, ಕಂಪ್ಯೂಟರ್, ಕೌಶಲ್ಯಾಭಿವೃದ್ದಿ, ಕಲೆ ಇತರೆ ಪೂರಕ ಶಿಕ್ಷಣವನ್ನು ನೀಡುವ 1000 ಕೆಪಿಎಸ್ ಶಾಲೆಗಳಿಗೆ ಗುದ್ದಲಿಪೂಜೆಯನ್ನು ಏಪ್ರಿಲ್ ಅಂತ್ಯದಲ್ಲಿ ಮಾನ್ಯ ಮುಖ್ಯಮಂತ್ರಿಯವರು ಶಿವಮೊಗ್ಗದಲ್ಲಿಯೇ ನೆರವೇರಿಸುವರು ಎಂದ ಅವರು ಜಿಲ್ಲಾ ಆಸ್ಪತ್ರೆ, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ಗಳನ್ನು ತರುವ ಹಾಗೂ ಉಳಿದವರಿಗೆ ಹಕ್ಕುಪತ್ರಗಳನ್ನು ನೀಡಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
Madhu Bangarappa ಶಾಸಕರಾದ ಎಸ್.ಎನ್. ಚನ್ನಬಸಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಗೋಪಾಲಗೌಡ ಬಡಾವಣೆಯ ರಸ್ತೆಗೆ ಬಂಗಾರಪ್ಪನವರ ಹೆಸರನ್ನು ನಾಮಕರಣ ಮಾಡಿರುವುದು ಸಂತಸದ ವಿಷಯ. ಅಂದುಕೊAಡAತೆ ಕಾರ್ಯ ನಿರ್ವಹಣೆ ಮಾಡಿತ್ತಿದ್ದ ಧೀಮಂತ ವ್ಯಕ್ತಿ ಅವರು. ಎಂದಿಗೂ ಜಾತಿಗೆ ಅವರು ಅಂಟಿಕೊAಡಿರಲಿಲ್ಲ. ರಾಜ್ಯದ ಕಟ್ಟಕಡೆಯ ವ್ಯಕ್ತಿಯ ಬಗ್ಗೆ ಸದಾ ಚಿಂತಿಸುತ್ತಿದ್ದ ಅವರು ಅಕ್ಷಯ, ಆರಾಧನಾ, ಆಶ್ರಯದಂತಹ ಉತ್ತಮ ಯೋಜನೆಗಳನ್ನು ನೀಡಿದ ಶ್ರೇಷ್ಟ ನಾಯಕ. ಬಂಗಾರಪ್ಪನವರು ಬಡವರಿಗೆ ಸೂರು ಒದಗಿಸಲು ತಂದ ಆಶ್ರಯ ಯೋಜನೆಯಡಿ ಬಡವರಿಗೆ ಹಕ್ಕುಪತ್ರಗಳನ್ನು ನೀಡಲಾಗುತ್ತಿದೆ. ಇನ್ನೂ ಹಲವರಿಗೆ ನೀಡಬೇಕಿದೆ.
ಕೆರೆ ಕಟ್ಟೆಗಳ ಜಾಗವನ್ನು ರಕ್ಷಿಸುವ ಅಗತ್ಯವಿದೆ. ದೊಡ್ಡ ದೊಡ್ಡ ಕಟ್ಟಡಗಳು ಕೆರೆಗಳ ಜಾಗದಲ್ಲಿ ನಿರ್ಮಾಣವಾಗಿದ್ದು ಇದಕ್ಕೆ ಪರಿಹಾರ ಹುಡುಕಬೇಕಿದೆ ಎಂದ ಅವರು ಬಡವರ ಪರವಾಗಿ ನಾವೆಲ್ಲಾ ಒಟ್ಟಾಗಿ ಹೋಗೋಣ ಎಂದರು.
ವಿಧಾನ ಪರಿಷತ್ ಶಾಸಕರಾದ ಬಲ್ಕೀಶ್ ಬಾನು ಮಾತನಾಡಿ, ಹಕ್ಕುಪತ್ರ ಇಲ್ಲದೆ ಭಯದಲ್ಲಿ ಜೀವನ ನಡೆಸುತ್ತಿದ್ದ ಜನರಿಗೆ ಹಕ್ಕುಪತ್ರ ನೀಡುವ ಮೂಲಕ ಧೈರ್ಯ ತುಂಬಲಾಗುತ್ತಿದೆ. ಜಿಲ್ಲೆಯ ಅಭಿವೃದ್ಧಿಗೆ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಶ್ರಮಿಸುತ್ತಿದ್ದಾರೆ ಎಂದರು.
ಕರ್ನಾಟಕ ರಾಜ್ಯ ಎಸಿ/ಎಸ್‌ಟಿ ಅಲೆಮಾರಿಗಳ ಅಭಿವೃದ್ದಿ ನಿಗಮದ ಅಧ್ಯಕ್ಷೆ ಪಲ್ಲವಿ ಜಿ ಮಾತನಾಡಿ, ರೂ.100 ಕೋಟಿ ಅನುದಾನವನ್ನು ಅಲೆಮಾರಿಗಳ ಅಭಿವೃದ್ದಿಗೆ ಮೀಸಲಿಡಲಾಗಿದೆ. ಅಲೆಮಾರಿಗಳ ಮಕ್ಕಳಿಗೆ ನಾಲ್ಕು ಶಾಲೆಗಳನ್ನು ನಿರ್ಮಿಸಲು ಅವಕಾಶ ನೀಡಲಾಗಿದ್ದು, ಅದರಲ್ಲಿ ಒಂದು ಶಾಲೆಯನ್ನು ಜಿಲ್ಲೆಗೆ ತರಲು ಸಚಿವರು ಸಹಕರಿಸಬೇಕು ಎಂದು ಮನವಿ ಮಾಡಿದರು.
ಕರ್ನಾಟಕ ರಾಜ್ಯ ಜವಳಿ ಮೂಲ ಸೌಲಭ್ಯ(ವಿದ್ಯುತ್ ಮಗ್ಗಗಳ) ನಿಗಮದ ಅಧ್ಯಕ್ಷರಾದ ಚೇತನ್ ಕೆ ಮಾತನಾಡಿ, ಬಡವರಿಗೆ ಸೂರು ಒದಗಿಸಲು ಆಶ್ರಯ ಯೋಜನೆ ಜಾರಿಗೆ ತಂದ ಧೀಮಂತ ನಾಯಕರಾದ ಬಂಗಾರಪ್ಪನವರ ಹೆಸರನ್ನು ಅವರ ಗುರುಗಳಾದ ಸಮಾಜವಾದಿ ಹೋರಾಟಗಾರರಾದ ಗೋಪಾಲಗೌಡರ ಬಡಾವನೆಯಲ್ಲಿ ನಾಮಕರಣವಾಗುತ್ತಿರುವುದು ಅತ್ಯಂತ ಸಂತಸದ ವಿಚಾರವಾಗಿದೆ ಎಂದರು.
ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಸಿ.ಎಸ್.ಚಂದ್ರಭೂಪಾಲ, ಡಾ.ಜಿ.ಡಿ.ನಾರಾಯಣಪ್ಪ ಮಾತನಾಡಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿAದ 290 ಮನೆಗಳಿಗೆ ಹಕ್ಕುಪತ್ರಗಳ ವಿತರಣೆ ಹಾಗೂ ಆಶ್ರಯ ಯೋಜನೆ ಅಡಿಯಲ್ಲಿ ಆಯ್ಕೆಯಾಗಿರುವ ಫಲಾನುಭವಿಗಳಿಗೆ ಮನೆಗಳ ಕೀ ಹಸ್ತಾಂತರ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಬಿ.ನಿಖಿಲ್, ಪಾಲಿಕೆ ಆಯುಕ್ತ ಮಾಯಣ್ಣಗೌಡ, ಇತರೆ ಮುಖಂಡರು ಪಾಲ್ಗೊಂಡಿದ್ದರು.

Madhu Bangarappa ಡಾ.ಅಂಬೇಡ್ಕರ್ ವಿದ್ಯಾರ್ಥಿ ನಿಲಯವು ಸಾವಿರಾರು ಬಾಲಕಿಯರ ಶಿಕ್ಷಣಕ್ಕೆ ಭದ್ರ ಆಸರೆ- ಮಧು ಬಂಗಾರಪ್ಪ

0

Madhu Bangarappa ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಲೋಕೋಪಯೋಗಿ ಇಲಾಖೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಶಿವಮೊಗ್ಗ ನಗರದ “ಬೊಮ್ಮನಕಟ್ಟೆ ಹಾಗೂ ಊರುಗಡೂರು” ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾದ “ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ” ಕಟ್ಟಡವನ್ನು ಸನ್ಮಾನ್ಯ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಶ್ರೀ ಎಸ್.ಮಧು ಬಂಗಾರಪ್ಪ ಅವರು ಉದ್ಘಾಟಿಸಿ, ಮಾತನಾಡಿದರು.

ಶಿಕ್ಷಣವು ಕೇವಲ ಅಕ್ಷರ ಜ್ಞಾನವಲ್ಲ, ಅದು ಬದುಕಿನ ದಾರಿ. ನಮ್ಮ ಗ್ರಾಮೀಣ ಭಾಗದ ಪ್ರತಿಭಾವಂತ ಹೆಣ್ಣುಮಕ್ಕಳು ಮೆಟ್ರಿಕ್ ನಂತರ ಉನ್ನತ ಶಿಕ್ಷಣಕ್ಕಾಗಿ ನಗರ ಪ್ರದೇಶಗಳಿಗೆ ಬಂದಾಗ, ಅವರಿಗೆ ಎದುರಾಗುವ ಮೊದಲ ಸವಾಲೇ ಸುರಕ್ಷಿತ ವಸತಿ. ಆ ಕೊರತೆಯನ್ನು ನೀಗಿಸಲು ಡಾ. ಬಿ.ಆರ್. ಅಂಬೇಡ್ಕರ್ ಅವರ ಹೆಸರಿನಲ್ಲಿ ಇಂದು ಉದ್ಘಾಟನೆಗೊಂಡಿರುವ ಈ ವಿದ್ಯಾರ್ಥಿ ನಿಲಯವು ಕೇವಲ ಒಂದು ಕಟ್ಟಡವಾಗಿರದೇ ಇದು ಸಾವಿರಾರು ಬಾಲಕಿಯರ ಶೈಕ್ಷಣಿಕ ಕನಸುಗಳಿಗೆ ಭದ್ರವಾದ ಆಸರೆ ಕಲ್ಪಿಸಲಿದೆ. ಈ ಸುಸಜ್ಜಿತ ಮತ್ತು ಸುರಕ್ಷಿತವಾದ ಈ ಪರಿಸರದಲ್ಲಿ ನಮ್ಮ ವಿದ್ಯಾರ್ಥಿನಿಯರು ಯಾವುದೇ ಆತಂಕವಿಲ್ಲದೆ ವಿದ್ಯಾಭ್ಯಾಸ ಮಾಡಿ, ನಾಡಿನ ಹೆಮ್ಮೆಯ ಪ್ರಜೆಗಳಾಗಿ ಹೊರಹೊಮ್ಮಲಿ ಎನ್ನುವುದೇ ನನ್ನ ಆಶಯವಾಗಿದೆ ಎಂದು ತಿಳಿಸಿದರು.

Madhu Bangarappa ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯರಾದ ಶ್ರೀಮತಿ ಬಲ್ಕೀಶ್‌ ಬಾನು, ನಿಗಮದ ಅಧ್ಯಕ್ಷರಾದ ಶ್ರೀ ಚೇತನ್ ಗೌಡ, ಶ್ರೀಮತಿ ಜಿ.ಪಲ್ಲವಿ, ಜಿಲ್ಲಾಧಿಕಾರಿಗಳಾದ ಶ್ರೀ ಪ್ರಭುಲಿಂಗ ಕವಳಿಕಟ್ಟಿ, ಜಿ.ಪಂ ಸಿಇಓ ಶ್ರೀ ಹೇಮಂತ್ ಸೇರಿದಂತೆ ಇತರೆ ಗಣ್ಯರು ಹಾಜರಿದ್ದರು.

Madhu Bangarappa ನೈತಿಕ ವಿಜ್ಞಾನ ಬೋಧನೆ ಪ್ರಸ್ತುತ ವರ್ಷದಲ್ಲೇ ಮರುಜಾರಿ: ಪಠ್ಯದಲ್ಲಿರಂಗಶಿಕ್ಷಣ ಅಳವಡಿಸಲು ಚಿಂತನೆ.- ಮಧು ಬಂಗಾರಪ್ಪ.

0

Madhu Bangarappa ರಾಜ್ಯದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಕ್ಕಳ ಮಾನಸಿಕ ವಿಕಸನಕ್ಕಾಗಿ ರಂಗಶಿಕ್ಷಣವನ್ನು ಅಳವಡಿಸುವ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಇದರೊಂದಿಗೆ ದಶಕಗಳಿಂದ ಸ್ಥಗಿತಗೊಂಡಿದ್ದ ನೈತಿಕ ವಿಜ್ಞಾನ ವಿಷಯವನ್ನು ಈ ವರ್ಷದಿಂದಲೇ ಮರುಜಾರಿಗೊಳಿಸಲಾಗುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದರು.
ಶಿವಮೊಗ್ಗದ ರಂಗಾಯಣದ ಆವರಣದಲ್ಲಿ ನೂತನವಾಗಿ ನಿರ್ಮಿಸಲಾದ ಪಿ. ಲಂಕೇಶ್ ಬಯಲು ರಂಗಮಂದಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಳೆದ 25-30 ವರ್ಷಗಳಿಂದ ಶಾಲಾ ಪಠ್ಯದಲ್ಲಿ ಇಲ್ಲದ ‘ನೈತಿಕ ವಿಜ್ಞಾನ’ ವಿಷಯವನ್ನು 1 ರಿಂದ 10 ನೇ ತರಗತಿಯವರೆಗೆ ಈ ವರ್ಷದಿಂದಲೇ ಪರಿಚಯಿಸಲಾಗುತ್ತಿದೆ. ಮಕ್ಕಳಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸುವುದು ಇದರ ಮೂಲ ಉದ್ದೇಶವಾಗಿದೆ ಎಂದರು.
ಸಾಂಸ್ಕೃತಿಕ ಕೆಪಿಎಸ್ ಶಾಲೆಗಳು: ಮೈಸೂರಿನಲ್ಲಿ ಕಲೆ ಮತ್ತು ಸಂಸ್ಕೃತಿಗೆ ವಿಶೇಷ ಒತ್ತು ನೀಡುವ ನಿಟ್ಟಿನಲ್ಲಿ ಪ್ರತ್ಯೇಕ ‘ಕಲೆ ಕರ್ನಾಟಕ ಪಬ್ಲಿಕ್ ಶಾಲೆ’ (KPS) ಆರಂಭಿಸಲು ಯೋಜನೆ ರೂಪಿಸಲಾಗಿದೆ. ಇಲ್ಲಿನ ಹಾಸ್ಟೆಲ್ ವ್ಯವಸ್ಥೆಯಡಿ ಪ್ರತಿಭಾವಂತ ಮಕ್ಕಳಿಗೆ ರಂಗಭೂಮಿ, ಸಂಗೀತ ಮತ್ತು ಜಾನಪದ ಕಲೆಗಳ ತರಬೇತಿ ನೀಡಲಾಗುವುದು ಎಂದರು.
ಶಿಕ್ಷಕರ ನೇಮಕಾತಿ: ಇಲಾಖೆಯಲ್ಲಿನ ಶಿಕ್ಷಕರ ಕೊರತೆ ನೀಗಿಸಲು ಈಗಾಗಲೇ 15,000 ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ರಂಗ ಶಿಕ್ಷಕರನ್ನು ಅತಿಥಿ ಶಿಕ್ಷಕರ ಮಾದರಿಯಲ್ಲಿ ನೇಮಿಸಿಕೊಳ್ಳುವ ಬಗ್ಗೆಯೂ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು.
ಇಂದಿನ ರೀಲ್ಸ್ ಮತ್ತು ಸಾಮಾಜಿಕ ಜಾಲತಾಣಗಳ ಹಾವಳಿಯಿಂದ ಮಕ್ಕಳು ದಾರಿ ತಪ್ಪದಂತೆ ತಡೆಯಲು ಸಾಂಸ್ಕೃತಿಕ ಚಟುವಟಿಕೆಗಳು ಸಹಕಾರಿಯಾಗಿದ್ದು ರಂಗ ಶಿಕ್ಷಣಕ್ಕೆ ಉತ್ತೇಜಿಸಿ ಅನುಷ್ಟಾನ ಮಾಡಬೇಕಾಗಿದೆ ಎಂದರು.
ಕುವೆಂಪು ಅವರ ಆಶಯದಂತೆ ಮಕ್ಕಳನ್ನು ‘ವಿಶ್ವಮಾನವ’ರನ್ನಾಗಿ ರೂಪಿಸಲು ಕಲೆ ಮತ್ತು ಸಾಹಿತ್ಯ ಪೂರಕವಾಗಿವೆ, ಈ ನಿಟ್ಟಿನಲ್ಲಿ ಶಾಲಾ ಹಂತದಿಂದಲೇ ಕಲೆ ಮತ್ತು ಸಂಸ್ಕೃತಿ, ರಂಗಾಸಕ್ತಿ ಮೂಡಿಸಲು ಶಿಕ್ಷಣ ಇಲಾಖೆ ಪರಿಣಾಮಕಾರಿಯಾಗಿ ಕ್ರಮ ವಹಿಸಲಿದೆ. ಶಾಲೆಗಳಲ್ಲಿ ಸಂಗೀತ, ಚಿತ್ರಕಲಾ ವಿಶೇಷ ಶಿಕ್ಷಕರ ನೇಮಕಾತಿಗೆ ಅವಕಾಶ ಇದೆ. ಆದರೂ ಸಹ ಮಕ್ಕಳಲ್ಲಿ ರಂಗಾಸಕ್ತಿ ಮೂಡಿಸಲು ತರಬೇತಿಗೆ ರಂಗಾಯಣದ ಸೇವೆ ಪಡೆಯಲಾಗುತ್ತದೆ ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರಾದ ಡಾ.ಮಂಜುನಾಥ್ ಸ್ವಾಮಿ ಬಿ.ಎಸ್ ಮಾತನಾಡಿ
Madhu Bangarappa ಯಾವುದೇ ನಾಡಿನ ನಿಜವಾದ ಶ್ರೀಮಂತಿಕೆ ಅಲ್ಲಿನ ಪ್ರಕೃತಿ ಮತ್ತು ಸಂಸ್ಕೃತಿಯಲ್ಲಿ ಅಡಗಿರುತ್ತದೆ. ಇಂತಹ ಸಂಸ್ಕೃತಿಯನ್ನು ಪೋಷಿಸಿ ಬೆಳೆಸುವಲ್ಲಿ ಶಿವಮೊಗ್ಗ ರಂಗಾಯಣದ ಕೊಡುಗೆ ಅಪಾರವಾಗಿದ್ದು, ನೂತನ ಪಿ.ಲಂಕೇಶ್ ಅವರ ಹೆಸರಿನ ಬಯಲು ರಂಗಮಂದಿರದಲ್ಲಿ ಇರುವ ಸೌಲಭ್ಯಗಳು ರಂಗಚಟುವಟಿಕೆಗಳಿಗೆ ಮತ್ತಷ್ಟು ಶಕ್ತಿ ತುಂಬಲಿವೆ.
ರಂಗಭೂಮಿಯು ಕೇವಲ ಮನರಂಜನೆಯಲ್ಲ, ಅದು ಸಮಾಜದಲ್ಲಿ ಭಾವೈಕ್ಯತೆಯನ್ನು ಮೂಡಿಸುವ ಪ್ರಬಲ ಮಾಧ್ಯಮವಾಗಿದೆ. ವಿಶೇಷವಾಗಿ ಯುವ ಪೀಳಿಗೆಗೆ ರಂಗಭೂಮಿಯ ಅರಿವು ಮೂಡಿಸುವುದು ಇಂದಿನ ತುರ್ತು ಅಗತ್ಯವಾಗಿದೆ.
ಇಂದಿನ ಡಿಜಿಟಲ್ ಯುಗದಲ್ಲಿ ಮಕ್ಕಳು ಮೊಬೈಲ್ ಮತ್ತು ರೀಲ್ಸ್‌ಗಳ ಕಡೆಗೆ ಹೆಚ್ಚು ಆಕರ್ಷಿತರಾಗುತ್ತಿದ್ದಾರೆ. ಈ ಸಂದರ್ಭದಲ್ಲಿ ಶಾಲೆಗಳಲ್ಲಿ ನಾಟಕ ಪ್ರದರ್ಶನಗಳ ಮೂಲಕ ಅವರಲ್ಲಿ ಸಾಂಸ್ಕೃತಿಕ ಪ್ರಜ್ಞೆ ಮೂಡಿಸಬೇಕು. ಕಲಾವಿದರ ಶ್ರಮ ಮತ್ತು ಕಲೆಗೆ ಗೌರವ ನೀಡುವ ವಾತಾವರಣ ನಿರ್ಮಾಣವಾಗಬೇಕು ಎಂದರು.
ರಾಜ್ಯದ ಆರು ರಂಗಾಯಣಗಳಲ್ಲಿ ಶಿವಮೊಗ್ಗ ರಂಗಾಯಣವು ತನ್ನದೇ ಆದ ವಿಶಿಷ್ಟ ಛಾಪು ಮೂಡಿಸಿದೆ. ಮೈಸೂರು ರಂಗಾಯಣದ ಮಾದರಿಯಲ್ಲಿಯೇ ಶಿವಮೊಗ್ಗ ರಂಗಾಯಣವು ಜನರಿಗೆ ನಾಟಕಗಳನ್ನು ತಲುಪಿಸುವಲ್ಲಿ ಯಶಸ್ವಿಯಾಗುತ್ತಿದೆ.
ಸರ್ಕಾರವು ಸೌಲಭ್ಯಗಳನ್ನು ನೀಡಬಹುದು, ಆದರೆ ರಂಗಾಯಣದ ಯಶಸ್ಸು ಅಲ್ಲಿನ ಜನಪ್ರತಿನಿಧಿಗಳು, ಆಡಳಿತ ಮಂಡಳಿ ಮತ್ತು ಸಾರ್ವಜನಿಕರ ಸಕ್ರಿಯ ಸಹಭಾಗಿತ್ವದ ಮೇಲೆ ಅವಲಂಬಿತವಾಗಿದೆ. ಎಲ್ಲರೂ ಕೈಜೋಡಿಸಿದಾಗ ಮಾತ್ರ ಸಾಂಸ್ಕೃತಿಕ ಕೇಂದ್ರಗಳು ಜೀವಂತವಾಗಿರಲು ಸಾಧ್ಯ ಎಂದರು.
ಶಾಸಕರಾದ ಆರಗ ಜ್ಞಾನೇಂದ್ರ ಮಾತನಾಡಿದರು. ಕಾರ್ಯಕ್ರಮದಲ್ಲಿ ನಾಟಕ ಅಕಾಡೆಮಿ ಅಧ್ಯಕ್ಷರಾದ ನಾಗರಾಜಮೂರ್ತಿ, ರಂಗಾಯಣ ಮಾಜಿ ನಿರ್ದೇಶಕರಾದ ಸಂದೇಶ್ ಜವಳಿ, ಎಂ.ಗಣೇಶ್, ಇಕ್ಬಾಲ್ ಅಹ್ಮದ್,
ಮಲ್ಲಿಕಾರ್ಜುನ ಕಡಕೋಳ, ಚಂದ್ರೇಗೌಡರು, ಕಾಂತೇಶ್ ಕದರಮಂಡಲಗಿ,
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ್, ರಂಗಾಯಣದ ಆಡಳಿತಾಧಿಕಾರಿ ಡಾ.ಶೈಲಜಾ, ರಂಗ ಸಮಾಜದ ಸದಸ್ಯರು ಹಾಜರಿದ್ದರು.

Information and Public Relations Department ಶಿವಮೊಗ್ಗ ಜಿಲ್ಲಾ ಪ್ರಭಾರ ಹಿರಿಯ ಸಹಾಯಕ ನಿರ್ದೇಶಕರಾಗಿ ಬಿ.ಧನಂಜಯ ಅಧಿಕಾರ ಸ್ವೀಕಾರ

0

Information and Public Relations Department ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರ ಹುದ್ದೆಯ ಪ್ರಭಾರವನ್ನು ಧನಂಜಯ.ಬಿ ಇವರು ಶುಕ್ರವಾರ ವಹಿಸಿಕೊಂಡಿರುವರು.

ಇವರಿಗೆ ಸಂಬಂಧಿಸಿದ ಸರ್ಕಾರಿ, ಅರೆ ಸರ್ಕಾರಿ ಹಾಗೂ ಇವರಿಗೆ ಸಂಬಂಧಿಸಿದ ಪತ್ರ ವ್ಯವಹಾರವನ್ನು ಇವರ ಹೆಸರು ಮತ್ತು ಹುದ್ದೆಯ ಹೆಸರಿನಲ್ಲಿ ಕಳುಹಿಸಲು ತಿಳಿಸಲಾಗಿದೆ.


DC Shivamogga ಮಕ್ಕಳ ಬಗ್ಗೆ ಬಹಳ ಸೂಕ್ಷ್ಮವಾಗಿ ನಡೆದುಕೊಳ್ಳಿ. ಮಕ್ಕಳು ಅಪರಾಧಗಳಿಗೆ ಒಳಗಾಗದಂತೆ ಕಾರ್ಯ ನಿರ್ವಹಿಸಿ:ಪ್ರಭುಲಿಂಗ ಕವಳಿಕಟ್ಟಿ

0

DC Shivamogga ಮಕ್ಕಳಲ್ಲಿ ಬಾಲ್ಯವಿವಾಹ, ಲೈಂಗಿಕ ದೌರ್ಜನ್ಯದ ಕುರಿತು ಪರಿಣಾಮಕಾರಿಯಾಗಿ ಅರಿವು ಮೂಡಿಸುವ ಜೊತೆಗೆ ಮೂಲಭೂತ ಸೌಕರ್ಯಗಳು ಮತ್ತು ಶಿಕ್ಷಣ ನೀಡುವುದು ನಮ್ಮೆಲ್ಲರ ಕರ್ತವ್ಯ ಎಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿಯವರು ಅಧಿಕಾರಿಗಳಿಗೆ ತಿಳಿಸಿದರು.
ಶಿವಮೊಗ್ಗ ಜಿಲ್ಲಾಡಳಿತ, ಜಿ.ಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ತಾಲ್ಲೂಕು ಆಡಳಿತ ಮತ್ತು ತಾಲ್ಲೂಕು ಪಂಚಾಯತ್, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಜಿ.ಪಂ. ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಮಿಷನ್ ಸುರಕ್ಷಾ ಅಭಿಯಾನದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಮಕ್ಕಳಿಗಾಗಿ ಹಾಗೂ ಸಮಾಜಕ್ಕಾಗಿ ಮಾಡುತ್ತಿರುವ ಸೇವೆ ಎಂದು ತಿಳಿದು ನಿಯಮಿತವಾಗಿ ಈ ಕಾರ್ಯ ನಿರ್ವಹಣೆಯಲ್ಲಿ ತೊಡಗಬೇಕೆಂದರು.
ಮಕ್ಕಳ ಜೀವನ ಅತ್ಯಮೂಲ್ಯವಾಗಿದ್ದು ಅವರನ್ನು ನಾವು ಬಾಲ್ಯ ವಿವಾಹ, ಲೈಂಗಿಕ ದೌರ್ಜನ್ಯ ಇತರೆ ಅಪರಾಧಗಳಿಂದ ರಕ್ಷಣೆ ಮಾಡಿ, ಕಡ್ಡಾಯವಾಗಿ ಶಾಲೆಗೆ ದಾಖಲಾಗುವಂತೆ ಮಾಡಬೇಕು. ಪೋಕ್ಸೊ ಪ್ರಕರಣ ಆಗದಂತೆ, ಮಾದಕ ವಸ್ತುಗಳಿಂದ ಮಕ್ಕಳನ್ನು ದೂರವಿರುವಂತೆ ಪರಿಣಾಮಕಾರಿಯಾಗಿ ಅರಿವು ಮೂಡಿಸಬೇಕು. ಮಗುವಿನ ಬೆಳವಣಿಗೆ ಹಾಗೂ ಶೈಕ್ಷಣಿಕ ಅವಕಾಶಗಳನ್ನು ಅರಿತು ಅಧಿಕಾರಿಗಳು ಸಂವೇದನಾಶೀಲತೆಯಿಂದ ನಡೆದುಕೊಳ್ಳಬೇಕು. ಈ ನಿಟ್ಟಿನಲ್ಲಿ ಪ್ರತಿ ತಾಲ್ಲೂಕಿನಲ್ಲಿ ಅತ್ಯಂತ ಪರಿಣಾಮಕಾರಿಯಾಗಿ ಮಿಷನ್ ಸುರಕ್ಷಾ ಪರಿಶೀಲನಾ ಸಭೆಗಳನ್ನು ನಡೆಸಲಾಗುತ್ತಿದೆ.
ಸಂಕಷ್ಟಕ್ಕೀಡಾದ, ಮಾನಸಿಕವಾಗಿ ನೊಂದ ಮಕ್ಕಳಿಗೆ ಸಾಂತ್ವನ ಮತ್ತು ನೆರವು ನೀಡುವ ‘ಟೆಲಿ ಮನಸ್’ ಸಹಾಯವಾಣಿ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕು. ಮಕ್ಕಳಿಗೆ ನಿಯಮಗಳನ್ನು ಪಾಲಿಸುವುದನ್ನು ಕಲಿಸಬೇಕು. ಈ ಎಲ್ಲ ಸಮಗ್ರ ವಿಷಯಗಳನ್ನು ಮಕ್ಕಳಲ್ಲಿ ಮತ್ತು ಪೋಷಕರಲ್ಲಿ ಮನದಟ್ಟು ಮಾಡುವ ಉದ್ದೇಶದಿಂದ ಪ್ರತಿ ತಾಲ್ಲೂಕು ಪರಿಶೀಲನೆ ಮಾಡಲಾಗುತ್ತಿದೆ. ಅಧಿಕಾರಿಗಳು ಈ ವಿಷಯಗಳ ಗಂಭೀರತೆ ಅರ್ಥ ಮಾಡಿಕೊಂಡು, ಯಾವುದೇ ಲೋಪವಾಗದಂತೆ ಕಾರ್ಯವೆಸಗಬೇಕು ಎಂದರು.
ಜಿಲ್ಲೆಯಲ್ಲಿ 907 ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ. ಈ ಮಕ್ಕಳನ್ನು ಮತ್ತೆ ಶಾಲೆಗೆ ದಾಖಲಿಸುವ ಕೆಲಸ ಅತ್ಯಂತ ಪರಿಣಾಮಕಾರಿಯಾಗಿ ಮಾಡಬೇಕು. ಮೇ ತಿಂಗಳಿಂದಲೇ ಶಾಲಾ ಮುಖ್ಯೋಪಾಧ್ಯಾಯರು ದುರ್ಬಲ ಮಕ್ಕಳನ್ನು ಗುರುತಿಸಿ ಪಟ್ಟಿ ಮಾಡಿ, ಮಕ್ಕಳ ಕಲ್ಯಾಣ ಸಮಿತಿ ಮುಂದೆ ತರಬೇಕು. ಆಪ್ತಸಮಾಲೋಚನೆಗೆ ಒಳಪಡಿಸುವುದು ಸೇರಿದಂತೆ ಶಾಲೆಗೆ ದಾಖಲಿಸಲು ಅಗತ್ಯವಾದ ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚನೆ ನೀಡಿದರು.
ಜಿ.ಪಂ ಸಿಇಓ ಹೇಮಂತ್ ಎನ್ ಮಾತನಾಡಿ, ಖಾಸಗಿ ಶಾಲೆಯವರು ಎಸ್‌ಎಸ್‌ಎಲ್‌ಸಿ ಯಲ್ಲಿ ತಮ್ಮ ಶಾಲೆಗೆ ಉತ್ತಮ ಫಲಿತಾಂಶ ಬರಬೇಕೆಂಬ ಉದ್ದೇಶದಿಂದ 9 ನೇ ತರಗತಿಗೆ ವಿದ್ಯಾರ್ಥಿಗಳಿಗೆ ಟಿಸಿ ಕೊಟ್ಟು ಶಾಲೆಯಿಂದ ಹೊರಗೆ ಕಳುಹಿಸಬಾರದು. ಶಿಕ್ಷಣದ ಗುರಿ, ಪಾಠದೊಂದಿಗೆ, ಆಟ ಮತ್ತು ಊಟವೂ ಆಗಿರಬೇಕು.
ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ಕರೆ ತರಲೇಬೇಕು. ಶಿಕ್ಷಣ ಸಚಿವರೂ ಕೂಡ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗಂಭೀರವಾಗಿ ಪರಿಗಣಿಸಿದ್ದಾರೆ ಎಂದರು.
DC Shivamogga ಶಿವಮೊಗ್ಗ ತಾಲ್ಲೂಕಿನಲ್ಲಿ ಆಧಾರ್ ಇಲ್ಲದ 11000 ಮಕ್ಕಳಿದ್ದಾರೆ. ಅಪಾರ್ ಐಡಿ ಇಲ್ಲದ 13213 ಮಕ್ಕಳಿದ್ದಾರೆ. ಆಧಾರ್ ಮತ್ತು ಅಪಾರ್ ಐಡಿ ಸೃಜಿಸಲು ಜನನ ಪ್ರಮಾಣ ಪತ್ರ ಮಾಡಿಸಿಕೊಡಬೇಕು. ಆದ್ದರಿಂದ ಈ ದಾಖಲೆಗಳನ್ನು ಮಾಡಿಸಲು ಎಲ್ಲ ಶಾಲೆಗಳಲ್ಲಿ ಮೇ, ಜೂನ್ ಮಾಹೆಯಲ್ಲಿ ಮಕ್ಕಳ ಜಾತಿ ಪ್ರಮಾಣ ಪತ್ರ ಮಾಡಿಸಲು ಕ್ರಮ ವಹಿಸಬೇಕು.
ಮುಖ್ಯೋಪಾಧ್ಯಾಯರು ಮಕ್ಕಳ ಜನನ ಪ್ರಮಾಣ ಪಡೆಯಲು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಅರ್ಜಿಗಳನ್ನು ಸಿದ್ದಪಡಿಸಿ ಕಳುಹಿಸಬೇಕು. ನಂತರ ಆಧಾರ್ , ಅಪಾರ್ ಗೆ ಕ್ರಮ ವಹಿಸಬೇಕು ಎಂದರು.
ಶಾಲೆಗಳಲ್ಲಿ ರಿಪೇರಿ ಮತ್ತು ಉಪಯೋಗಕ್ಕೆ ಬಾರದ ಶೌಚಾಲಯಗಳ ಪಟ್ಟಿ ಮಾಡಬೇಕು. ಶಿವಮೊಗ್ಗ ತಾಲ್ಲೂಕಿನಲ್ಲಿ ಶೌಚಾಲಯ ಇಲ್ಲದ 172 ಶಾಲಾ ಮಕ್ಕಳ ಮನೆಗಳಿದ್ದು ಪಾಲಿಕೆ ಮತ್ತು ಸ್ಥಳೀಯ ಸಂಸ್ಥೆ ವತಿಯಿಂದ ಶೌಚಾಲಯ ಕಟ್ಟಿಸಲು ಕ್ರಮ ವಹಿಸಬೇಕೆಂದು ಸೂಚಿಸಿದರು.
ಮಕ್ಕಳಲ್ಲಿ ಎಲ್ಲ ರೀತಿಯಿಂದ ಅರಿವು ಮೂಡಿಸುವ ಕಾವಲು ಸಮಿತಿ ಸಭೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಪಿಡಿಓ ಗಳು ಶೌಚಾಲಯ ಇಲ್ಲದ ಮನೆಗಳನ್ನು ಗುರುತಿಸಿ, ಸ್ವಯಂ ಅರ್ಜಿ ಹಾಕಿ ಪಂಚತಂತ್ರ ಯೋಜನೆಯಡಿ ಶೌಚಾಲಯ ಕಟ್ಟಿಸಿಕೊಡಲು ಕ್ರಮ ವಹಿಸಬೇಕು.
ವಿದ್ಯಾರ್ಥಿ ವೇತನ ಪಡೆಯಲು ಬಾಕಿ ಇರುವ ಮಕ್ಕಳಿಗೆ ಸಂಬಂಧಿಸಿದಂತೆ ಎಲ್ಲ ಶಾಲೆಗಳ ಪ್ರಾಂಶುಪಾಲರು ಅರ್ಜಿ ಸಲ್ಲಿಸಲು ಅವಕಾಶ ಇದೆ. ಅಭಿಯಾನದ ಮಾದರಿಯಲ್ಲಿ ಜಾತಿ ಪ್ರಮಾಣ ಪತ್ರ ಮಾಡಿಸಲು ಕ್ರಮ ವಹಿಸಿ ಎಲ್ಲ ಮಕ್ಕಳು ವಿದ್ಯಾರ್ಥಿವೇತನ ಇತರೆ ಸೌಲಭ್ಯ ಪಡೆಯಲು ಸಾಧ್ಯವಾಗುವಂತೆ ಮಾಡಬೇಕು. ಪ್ರಗತಿ ಮತ್ತು ಅಂತರ ಇಲಾಖೆ ಸಮನ್ವಯಕ್ಕಾಗಿ ಪ್ರತಿ ತಿಂಗಳ ಮೊದಲ ಮಂಗಳ ವಾರ ಕಾವಲು ಸಮಿತಿ ಸಭೆ ನಡೆಸಿ ಕ್ರಮ ವಹಿಸಬೇಕು.
ಮಕ್ಕಳ ಸಾಕ್ಷರತಾ ಕ್ಲಬ್ ಚಟುವಟಿಕೆಗಳು ತುಂಬಾ ಮುಖ್ಯವಾಗಿದ್ದು, ಪೋಷಕರ-ಶಿಕ್ಷಕರ ಸಭೆ ನಡೆಸಿ, ಮಕ್ಕಳ ನಡವಳಿಕೆ ಸಮಸ್ಯೆಗಳನ್ನು ಗುರುತಿಸಿ ಸರಿಪಡಿಸಬೇಕು. ಬಾಲ್ಯ ವಿವಾಹ, ಪೋಕ್ಸೊ ಅಪರಾಧದ ಬಗ್ಗೆ, ಬಹು ಮುಖ್ಯವಾಗಿ ಮಕ್ಕಳ ಮೇಲಿನ ದೌರ್ಜನ್ಯ ಎಂದರೇನು ಎಂಬುದನ್ನು ಸಮರ್ಪಕವಾಗಿ ಮತ್ತು ನಿರಂತರವಾಗಿ ಮಕ್ಕಳಿಗೆ ತಿಳಿಸಬೇಕು. ಚಿತ್ರಕಲೆ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಾಡಿಸಬೇಕು
ಶಿವಮೊಗ್ಗ ತಾಲ್ಲೂಕಿನಲ್ಲಿ 29 ಬಾಲ್ಯ ವಿವಾಹ ಪ್ರಕರಣಗಳಿದ್ದು, 15 ವಿವಾಹ ನಡೆದಿದ್ದು, 14 ವಿವಾಹ ತಡೆಯಲಾಗಿದೆ. 09 ಮಕ್ಕಳು ಶಾಲೆಗೆ ಹೋಗುತ್ತಿದ್ದಾರೆ. ಇನ್ನುಳಿದ 20 ಮಕ್ಕಳನ್ನು ಶಾಲೆಗೆ ಕರೆತರಲೇಬೇಕು. ಹಾಗೆ ಕ್ರಮ ವಹಿಸಬೇಕು. ಮುಖ್ಯ ಶಿಕ್ಷಕರು ಹಾಗೂ ಪಿಡಿಓ ಮನೆಯಲ್ಲಿರುವ ಮಕ್ಕಳನ್ನು ಶಾಲೆಗೆ ಸೇರಿಸಬೇಕು.
ತಾಲ್ಲೂಕಿನಲ್ಲಿ 85 ಲೈಂಗಿಕ ದೌರ್ಜನ್ಯ (ಪೋಕ್ಸೊ) ಪ್ರಕರಣ ದಾಖಲಾಗಿದ್ದು ಮಕ್ಕಳ ಮೇಲಿನ ಅಪರಾಧ ತಡೆಯಲು ಕಾವಲು ಸಮಿತಿ ಸಭೆಗಳಲ್ಲಿ, ಮಕ್ಕಳ ಗ್ರಾಮ ಸಭೆಗಳಲ್ಲಿ ಪರಿಣಾಮಕಾರಿಯಾಗಿ ಮಕ್ಕಳಲ್ಲಿ ಅರಿವು ಮೂಡಿಸಬೇಕು ಎಂದರು.
ಜಿಲ್ಲಾಧಿಕಾರಿಗಳು, ಮಕ್ಕಳ ಜೀವನ ಹಾಳಾಗ್ತಾ ಇದೆ. ನಾವು ಕೇವಲ ಅಂಕಿ ಸಂಖ್ಯೆಗಳಲ್ಲಿ ಈ ಪ್ರಕರಣಗಳನ್ನು ನೋಡದೆ, ಮಾನವೀಯತೆಯಿಂದ ಕೆಲಸ ಮಾಡಬೇಕು ಎಂದರು.
ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿರುವ 11 ಮಕ್ಕಳ ಪೈಕಿ 6 ಮಕ್ಕಳನ್ನು ಎನ್ ಆರ್ ಸಿ ಗೆ ದಾಖಲಿಸಲಾಗಿದೆ. 3 ಮಕ್ಕಳು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಲ್ಲ ತೀವ್ರ ಅಪೌಷ್ಟಿಕತೆಯ ಮಕ್ಕಳ ಮನೆಯನ್ನು ವೈದ್ಯರು ಪ್ರತಿ ತಿಂಗಳು ಕಡ್ಡಾಯವಾಗಿ ಭೇಟಿ ಮಾಡಿ ಪರಿಶೀಲಿಸಬೇಕು ಎಂದು ಸೂಚಿಸಿದರು. ವಿಕಲಚೇತನ ಮಕ್ಕಳಿಗೆ ಅಗತ್ಯವಾದ ನೆರವನ್ನು ನೀಡಬೇಕು ಎಂದರು.
ಕಾರ್ಯಕ್ರಮದಲ್ಲಿ ‘ಪಬ್ಲಿಕ್ ಐ ವಾಟ್ಸಾಪ್ ಗ್ರೂಪ್’ ಟೆಲಿ ಮನಸ್ ಸಹಾಯವಾಣಿ 14416 ರ ಕುರಿತಾದ ಕರಪತ್ರಗಳನ್ನು ಬಿಡುಗಡೆಗೊಳಿಸಿ ಮಾಹಿತಿ ನೀಡಿದರು.
ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ತಾಜುದ್ದೀನ್ ಖಾನ್ ಮಕ್ಕಳ ಬಗೆಗಿನ ಅಪರಾಧಗಳ ಕುರಿತು ಮಾತನಾಡಿದರು. ಕಾರ್ಯಕ್ರಮದಲ್ಲಿ ಪಾಲಿಕೆ ಆಯುಕ್ತರಾದ ಕೆ ಮಾಯಣ್ಣ ಗೌಡ, ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

ಹತ್ತು ತಿಂಗಳ ತೋಟಗಾರಿಕಾ ತರಬೇತಿಗೆ ಆಸಕ್ತ ರೈತರ ಮಕ್ಕಳಿಂದ ಅರ್ಜಿ ಆಹ್ವಾನ

0

2026-27ನೇ ಸಾಲಿಗೆ ತೋಟಗಾರಿಕೆ ಇಲಾಖೆ ಅಧೀನದ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ರೈತರ ಮಕ್ಕಳಿಗೆ 10 ತಿಂಗಳ ತರಬೇತಿ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು ಶಿವಮೊಗ್ಗ ಜಿಲ್ಲೆಯ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಹೊಸೂರು ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ 02/05/2026 ರಿಂದ 28/02/2027 ರವರೆಗೆ ತರಬೇತಿಯನ್ನು ನೀಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 13 ರವರೆಗೆ ಅರ್ಜಿಗಳನ್ನು ತೋಟಗಾರಿಕೆ ಇಲಾಖೆಯ ವೆಬ್‌ಸೈಟ್https://horticulturedir.karnataka.gov.in ನಿಂದ ಡೌನ್‌ಲೋಡ್ ಮಾಡಿಕೊಳ್ಳುಬಹುದು ಅಥವಾ ಜಿಲ್ಲೆಯ ತೋಟಗಾರಿಕೆ ಹಿರಿಯ ಸಹಾಯ ನಿರ್ದೇಶಕರು(ರಾಜ್ಯವಲಯ) ಇವರ ಕಚೇರಿಯಿಂದ ಅಥವಾ ಆಯಾ ತಾಲ್ಲೂಕಿನಲ್ಲಿರುವ ತೋಟಗಾರಿಕೆ ಇಲಾಖೆಯ ಕಚೇರಿಯಿಂದ ಪಡೆದುಕೊಂಡು ಅರ್ಜಿ ಸಲ್ಲಿಸಬಹುದಾಗಿದೆ. ಭರ್ತಿಮಾಡಿದ ಅರ್ಜಿಯನ್ನು ಸಲ್ಲಿಸಲು ಏಪ್ರಿಲ್ 15 ಕೊನೆಯ ದಿನವಾಗಿರುತ್ತದೆ. ಅಭ್ಯರ್ಥಿಯು ಎಸ್.ಎಸ್.ಎಲ್.ಸಿಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ಅಭ್ಯರ್ಥಿಯ ತಂದೆ/ತಾಯಿ/ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿರಬೇಕು. ಸ್ವಂತ ಸಾಗುವಳಿ ಮಾಡುತ್ತಿರಬೇಕು. ಈ ಬಗ್ಗೆ ಪಹಣಿ ನೀಡುವುದು ಕಡ್ಡಾಯವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ:08182-222794/ 9686950460 ನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.