ಸಮಕಾಲೀನ ತಲ್ಲಣ ಮತ್ತು ಸಂಕಷ್ಟಗಳು ಮಾಧ್ಯಮಗಳಲ್ಲಿ ವರದಿಯಾಗುತ್ತಿಲ್ಲ-ಸಾಯಿನಾಥ್
ಭಾರತೀಯ ಪತ್ರಿಕೋದ್ಯಮ ಇಂದು ಸಂಕಷ್ಟದಲ್ಲಿದೆ. ಪತ್ರಿಕಾ ಸ್ವಾತಂತ್ರ‍್ಯ ಸಂಕಷ್ಟದಲ್ಲಿದೆ. ಪತ್ರಕರ್ತರ ಮೇಲೆ ವಿವಿಧ ಕ್ಷುಲ್ಲಕ ಕಾರಣಗಳಿಗೆ ಮೊಕದ್ದಮೆಗಳನ್ನು ದಾಖಲು ಮಾಡಲಾಗುತ್ತಿದೆ. ಅಲ್ಲದೆ ನೋಟೀಸ್ ನೀಡದೆ ಬಂಧಿಸಲಾಗುತ್ತಿದೆ ಹಾಗೂ ಬೆದರಿಸಲಾಗುತ್ತಿದೆ ಎಂದು ರೇಮನ್ ಮಾಗ್ಸಸೆ ಪ್ರಶಸ್ತಿ ವಿಜೇತ ಅಭಿವೃದ್ಧಿ ಪತ್ರಕರ್ತ ಪಿ. ಸಾಯಿನಾಥ್ ಆತಂಕ ವ್ಯಕ್ತಪಡಸಿದರು.
ಕುವೆಂಪು ವಿಶ್ವವಿದ್ಯಾಲಯದ ಸ್ನಾತಕೋತ್ತರ ಇಂಗ್ಲಿಷ್ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ವತಿಯಿಂದ ಏರ್ಪಡಿಸಿದ್ದ ಡಾ. ಶಾಂತಿನಾಥ ದೇಸಾಯಿ ದತ್ತಿನಿಧಿ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು, 200 ವರ್ಷಗಳ ಭಾರತೀಯ ಪತ್ರಿಕೋದ್ಯಮದ ಪ್ರಸಕ್ತ ಸ್ಥಿತಿಗತಿಯ ಬಗ್ಗೆ ಉಪನ್ಯಾಸ ನೀಡಿದರು.
ಭಾರತದಲ್ಲಿ ಮಾಧ್ಯಮಗಳನ್ನು ನಿಯಂತ್ರಿಸಲು 52 ಕಾಯ್ದೆಗಳು ಈಗಾಗಲೇ ಅಸ್ತಿತ್ವದಲ್ಲಿತ್ತು. ಇತ್ತೀಚೆಗೆ ಸಾಂಕ್ರಾಮಿಕ ರೋಗಗಳ ತಡೆ ಕಾಯಿದೆ ಮತ್ತು ವಿಪತ್ತು ನಿರ್ವಹಣೆ ಕುರಿತ ಕಾಯಿದೆಗಳನ್ನು ಪತ್ರಕರ್ತರ ಮೇಲೆ ದಾಖಲಿಸಿದೆ.
ಪ್ರಸ್ತುತ ಅವುಗಳ ಸಂಖ್ಯೆ 62ರಷ್ಟಿದೆ. ಕೋವಿಡ್ ಕಾಲದಲ್ಲಿ ಉತ್ತರಪ್ರದೇಶದ ಗಂಗಾ ನದಿಯಲ್ಲಿ ಹೆಣಗಳು ತೇಲಿದ ವರದಿ ನೀಡಿದ ಮಾಧ್ಯಮಗಳಿಗೆ ಒಕ್ಕೂಟ ಮತ್ತು ರಾಜ್ಯ ಸರ್ಕಾರಗಳು ಜಾಹೀರಾತು ನೀಡುವುದನ್ನು ನಿಲ್ಲಿಸಿದವು. ಆ ಮೂಲಕ ಅವುಗಳಿಗೆ ಮೂಗುದಾರ ಹಾಕಲಾಯಿತು.
ಕೋವಿಡ್‌ನ ಮೊದಲ 12 ತಿಂಗಳುಗಳಲ್ಲಿ ಭಾರತದ ಜಿ.ಡಿ.ಪಿ. ಶೇ. 7ರಷ್ಟು ಇಳಿಕೆಯಾಗಿದೆ ಎಂದು ಸರ್ಕಾರ ಹೇಳಿತು. ಆದರೆ ಇದೇ ಸಮಯದಲ್ಲಿ ಭಾರತೀಯ ಬಿಲಿಯನೇರ್‌ಗಳ ಸಂಪತ್ತಿನಲ್ಲಿ ಶೇ. 22ರಷ್ಟು ಏರಿಕೆಯಾಯಿತು.
ಇವುಗಳ ತುಲನಾತ್ಮಕ ವರದಿಗಳು, ವಿಶ್ಲೇಷಣಗಳನ್ನು ಮುಖ್ಯವಾಹಿನಿ ಮಾಧ್ಯಮ ನೀಡುವುದೇ ಇಲ್ಲ ಎಂದು ಟೀಕಿಸಿದರು.
ಜಾಗತಿಕ ಪತ್ರಿಕಾ ಸ್ವಾತಂತ್ರ‍್ಯ ಸೂಚಿಯಲ್ಲಿ ಒಟ್ಟು 188 ದೇಶಗಳಲ್ಲಿ ಭಾರತ 142ನೇ ಸ್ಥಾನದಲ್ಲಿದೆ. ಅಭಿವ್ಯಕ್ತಿ ಸ್ವಾತಂತ್ರ‍್ಯ ಅಪಾಯದಲ್ಲಿದೆ. ಮಾನವ ಅಭಿವೃದ್ಧಿ ಸೂಚ್ಯಂಕ ಸೂಚಿಯಲ್ಲಿ 132 ಸೇರಿದಂತೆ ವಿವಿಧ ಮಾನದಂಡಗಳಲ್ಲಿ ಕಳಪೆ ಪ್ರದರ್ಶನ ನೀಡುತ್ತಿದೆ. ಆದರೆ ಬಿಲಿಯನೇರ್‌ಗಳ ಒಟ್ಟು ಸಂಖ್ಯೆಯಲ್ಲಿ ವಿಶ್ವದಲ್ಲಿಯೇ 3ನೇ ಸ್ಥಾನದಲ್ಲಿದೆ.
ಸಮಕಾಲೀನ ಕಾಲಘಟ್ಟದ ತಲ್ಲಣಗಳು ಮತ್ತು ಸಂಕಷ್ಟಗಳ ಪ್ರಕ್ರಿಯೆಗಳ ವರದಿಗಾರಿಕೆಯೇ ನಿಜವಾದ ಪತ್ರಿಕೋದ್ಯಮ. ಬೃಹತ್ ಪ್ರಮಾಣದಲ್ಲಿರುವ ಬೆಳೆದಿರುವ ಇಂದಿನ ಮಾಧ್ಯಮ ಆ ಕಾರ್ಯನಿರ್ವಹಿಸುತ್ತಿಲ್ಲ ಎಂದು ವಿಶಾದಿಸಿದರು.
ಈ ಸಂದರ್ಭದಲ್ಲಿ ವಿವಿಯ ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ, ಕುಲಸಚಿವೆ ಅನುರಾಧ ಜಿ., ಪರೀಕ್ಷಾಂಗ ಕುಲಸಚಿವ ಡಾ. ನವೀನ್ ಕುಮಾರ್, ಇಂಗ್ಲೀಷ್ ವಿಭಾಗದ ಪ್ರಾಧ್ಯಾಪಕ ಡಾ. ನಾಗ್ಯಾನಾಯ್ಕ್ ಮಾತನಾಡಿದರು.
ಭಾರತದ ಸ್ವಾತಂತ್ರ ಸಂಗ್ರಾಮದಲ್ಲಿ ಹೋರಾಡಿದ ಮಹಾತ್ಮ ಗಾಂಧಿ, ಅಂಬೇಡ್ಕರ್, ಭಗತ್ ಸಿಂಗ್, ಬಾಲ ಗಂಗಾಧರ್ ತಿಲಕ್ ಸೇರಿದಂತೆ ಅನೇಕರು ಮಹಾನ್ ಪತ್ರಕರ್ತರಾಗಿದ್ದರು.
ಪ್ರತಿದಿನವೂ ಸ್ವಾತಂತ್ರ ಹೋರಾಟ, ರಾಜಕೀಯ, ಸಾಮಾಜಿಕ ಸುಧಾರಣೆಗಳ ಕುರಿತು ಯತೇಚ್ಛವಾದ ಬರಹಗಳನ್ನು ಪ್ರಕಟಿಸುತ್ತಿದ್ದರು. ಅಂದು ಮಾಧ್ಯಮ ಬಹಳ ಸಣ್ಣ ಪ್ರಮಾಣದಲ್ಲಿತ್ತು ಆದರೆ ಅದು ಅಶಿಕ್ಷಿತರನ್ನೂ ಸೇರಿ ಎಲ್ಲರನ್ನು ತಲುಪುವ ಮೂಲಕ ಹೋರಾಟ, ಸುಧಾರಣೆಗಳಲ್ಲಿ ಭಾಗವಹಿಸಲು ಪ್ರೇರೇಪಿಸುತ್ತಿತ್ತು.
ಆದರೆ ಇಂದು ಬೃಹತ್ ಅಗಿ ಬೆಳೆದಿರುವ ಮಾಧ್ಯಮ ತುಂಬಾ ಸಣ್ಣ ಪ್ರಮಾಣದಲ್ಲಿ ಸಮಾಜ ಸುಧಾರಣೆ ತರಲು ಆಗದೇ ಒದ್ದಾಡುತ್ತಿದೆ. ಸರ್ಕಾರಗಳ ತುತ್ತೂರಿಯಾಗಿದೆ. ಮಾಧ್ಯಮಗಳ ಕಾರ್ಪೋರೇಟ್ ಒಡೆತನ ಮತ್ತು ಸಂಪಾದಕ ಸ್ಥಾನಗಳಲ್ಲಿ ಕೇವಲ ಉನ್ನತ ಜಾತಿಯ ಜನರ ಏಕಸ್ವಾಮ್ಯತೆಯಿಂದಾಗಿ ಸಮಾಜದ ಜ್ವಲಂತ ಸಮಸ್ಯೆಗಳು ವರದಿಯಾಗುವುದಿಲ್ಲ. ಕೇವಲ ಶ್ರೀಮಂತರ, ಉಳ್ಳವರ ಸಂಬಂಧಿ ವಿಷಯಗಳು, ಅವರ ಅಗತ್ಯಗಳನ್ನು ಪೂರೈಸುವ ವರದಿಗಳನ್ನು ನೀಡುತ್ತಿರುವ ಮಾಧ್ಯಮಗಳು ಮ್ಯಾಕ್‌ಡೊನಾಲ್ಡೈಸೇಶನ್ ಪ್ರಕ್ರಿಯೆಗೆ ಒಳಗಾಗಿವೆ ಎಂದು ಸಾಯಿನಾಥ್ ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಜಿ. ಎನ್. ಮೋಹನ್, ವಿಭಾಗದ ಡಾ. ರೇಚಲ್ ಬಾರಿ, ಡಾ. ರಾಮ್ ಪ್ರಸಾದ್, ಡಾ. ಪೂರ್ಣಾನಂದ, ಡಾ. ವೀಣಾ ಸೇರಿದಂತೆ ವಿವಿಧ ವಿಭಾಗಗಳ ಅಧ್ಯಾಪಕರು, ಸಂಶೋಧನಾರ್ಥಿಗಳು, ವಿದ್ಯಾರ್ಥಿಗಳು ಹಾಜರಿದ್ದರು.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Latest News on WhatsApp

Why Keelambi Media Lab Pvt Ltd ?
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
KLIVE at Google News App
KLIVE Android App on Google Play Store

Download the most loved Klive App for your Android phone or tablet.
ಬಿಸಿಯೂಟ ಯೋಜನೆಗೆ ಸಿದ್ಧಗಂಗಾಶ್ರೀಯವರ ಹೆಸರಿಡಲು ಚಿಂತನೆ- ಬೊಮ್ಮಾಯಿ
ರಾಜ್ಯ ಸರ್ಕಾರ ಶಾಲಾ ಮಕ್ಕಳಿಗೆ ವಿತರಿಸುವ ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ನಡೆದಾಡುವ ದೇವರೆಂದೇ ಹೆಸರು ಪಡೆದ ತ್ರಿವಿಧ ದಾಸೋಹಿ ತುಮಕೂರಿನ ಸಿದ್ದಗಂಗಾ ಮಠದ ಡಾ ಶಿವಕುಮಾರ ಸ್ವಾಮೀಜಿಗಳ ಹೆಸರು ಇಡಲು ಸರ್ಕಾರ ನಿರ್ಧರಿಸಿದೆ.
ತುಮಕೂರಿನಲ್ಲಿಂದು ಡಾ ಶಿವಕುಮಾರ ಸ್ವಾಮೀಜಿಗಳ 115ನೇ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಘೋಷಣೆ ಮಾಡಿದ್ದಾರೆ.
ಶಿವಕುಮಾರ ಸ್ವಾಮೀಜಿಗಳು ಕಷ್ಟದಲ್ಲಿರುವವರಿಗೆ ಬದುಕು ಕಟ್ಟಿಕೊಡುತ್ತಿದ್ದರು. ಲಕ್ಷಾಂತರ ಮಕ್ಕಳಿಗೆ ತ್ರಿವಿಧ ದಾಸೋಹಗಳಲ್ಲಿ ಒಂದಾಗಿರುವ ಅನ್ನ ದಾಸೋಹವನ್ನು ಕೂಡ ಮಾಡಿದವರು. ಮಧ್ಯಾಹ್ಯದ ಬಿಸಿ ಊಟದ ಯೋಜನೆಗೆ ಶಿವಕುಮಾರ ಸ್ವಾಮೀಜಿ ಹೆಸರು ಇಡಲು ಸರ್ಕಾರ ಮುಂದಾಗಿದೆ. ಈ ಬಗ್ಗೆ ಈಗಾಗಲೇ ನಿರ್ಧಾರ ಕೈಗೊಳ್ಳಲಾಗಿದೆ. ಈ ಬಗ್ಗೆ ಆದೇಶ ಹೊರಡಿಸುತ್ತೇನೆ ಎಂದು ತಿಳಿಸಿದ್ದಾರೆ.
ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ನಡೆದಾಡಿದ ನೆಲದಲ್ಲಿ ಸ್ಪೂರ್ತಿ, ಹೆಮ್ಮೆ ಇದೆ. ಸುಮಾರು 88 ವರ್ಷ ಈ ಮಠದ ಸೇವೆ ಮಾಡಿದ್ದಾರೆ. ಇದು ದಾಖಲೆ. ಇಡಿ ದೇಶದಲ್ಲೇ ಈ ಕೆಲಸ ಯಾರು ಮಾಡಿಲ್ಲ. ಆ ದಾಖಲೆ ನಮ್ಮ ಶಿವಕುಮಾರ ಸ್ವಾಮಿಗಳು ಮಾಡಿದ್ದಾರೆ.
ಶ್ರೀಗಳು ಹಚ್ಚಿದ ಒಲೆಯ ಕಿಚ್ಚು ಆರಿಲ್ಲ. ಇದರಿಂದ ಸಾವಿರಾರು ಬಡ ಮಕ್ಕಳ ಹಸಿವಿನ ಕಿಚ್ಚು ತಣ್ಣ ಗಾಗಿದೆ. ಅವರು ನಮ್ಮ ನಡುವೆ ಜೀವಂತ ಆಗಿದ್ದಾರೆ. ಅವರು ದೈಹಿಕವಾಗಿ ಇಲ್ಲದೆ ಇದ್ದರೂ ಅವರ ನಡೆ ಗೌರವ ನಮ್ಮ ಜೊತೆ ಸದಾ ಇರುತ್ತದೆ. ಇಂದು ಅವರ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಯಾಗಿ ಅಲ್ಲ, ಭಕ್ತನಾಗಿ ಭಾಗಿಯಾಗುತ್ತಿರುವುದು ನನ್ನ ಪಾಲಿನ ಪುಣ್ಯ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
ಬದುಕನ್ನು ಕಟ್ಟಿಕೊಟ್ಟ ಪರಮಪೂಜ್ಯರು ಅವರು. ಎಲ್ಲಾ ಸಮುದಾಯದ ಮಕ್ಕಳನ್ನು ನೋಡಿಕೊಳ್ಳುತ್ತಿದ್ದಾರೆ. ಅದು ಸಾಮಾನ್ಯ ಮಾತಲ್ಲ. ಅದು ದೈವ ಶಕ್ತಿ. ಸ್ವಾಮೀಜಿಯವರು ಯಾವುದೇ ಜಾತಿ ಭೇದ ಮಾಡಿಲ್ಲ. ಸರ್ವೋದಯ ಅಂತ್ಯೋದಯ ಆಗಬೇಕು ಎಂದು ಮಾನ್ಯ ಮುಖ್ಯಮಂತ್ರಿಗಳು ತಮ್ಮ ಅಭಿಪ್ರಾಯ ವನ್ನು ತಿಳಿಸಿದ್ದಾರೆ.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Latest News on WhatsApp

Why Keelambi Media Lab Pvt Ltd ?
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
KLIVE at Google News App
KLIVE Android App on Google Play Store

Download the most loved Klive App for your Android phone or tablet.
ಕೋವಿಡ್ ಪ್ರಭಾವ ಇಳಿಕೆಯಾದಂತೆ ವಿಮಾನ ಸಂಚಾರ ಚೇತರಿಕೆ
ಭಾರತದಲ್ಲಿ ಅಂತರಾಷ್ಟ್ರೀಯ ವಿಮಾನಗಳ ಸಂಚಾರ ಪುನಃ ಆರಂಭಗೊಂಡ ನಂತರ ನಿಧಾನವಾಗಿ ವಿಮಾನ ಹಾರಾಟ ಹೆಚ್ಚುತ್ತಿದೆ. ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಯೂ ವಿಮಾನಗಳ ಸಂಚಾರ ಹೆಚ್ಚುತ್ತಿದೆ.
ಸಂಚಾರ ನಿರ್ಬಂಧ ತೆರವುಗೊಳಿಸಿದಾಗ ಮೊದಲು ಪ್ರತಿದಿನ 10 ವಿಮಾನಗಳ ಸಂಚಾರ ಆಗುತ್ತಿತ್ತು. ಆದರೆ ಈ ಸಂಖ್ಯೆ ಇದೀಗ ಪ್ರತಿದಿನ 25 ವಿಮಾನಗಳಿಗೆ ಏರಿಕೆಯಾಗಿದೆ. ವಿಮಾನ ನಿಲ್ದಾಣವು ಕೊರೋನಾಗಿಂತ ಮೊದಲಿನ 90 ಪ್ರತಿಶತಕ್ಕೂ ಹೆಚ್ಚು ವಿಮಾನ ಹಾರಾಟ ಮಾರ್ಗಗಳನ್ನು ಪುನಃ ಆರಂಭಿಸಲಾಗಿದೆ ಎಂದು ವಿಮಾನ ನಿಲ್ದಾಣದ ನಿರ್ವಾಹಕರಾದ ಬೆಂಗಳೂರು ಇಂಟರ್ನ್ಯಾಷನಲ್ ಏರ್‌ಪೋರ್ಟ್ ಲಿಮಿಟೆಡ್ ನಿನ್ನೆ ತಿಳಿಸಿದೆ.
ಅಂತರರಾಷ್ಟ್ರೀಯ ಕಾರ್ಯಾಚರಣೆಗಳಲ್ಲಿ ಕ್ರಮೇಣ ಹೆಚ್ಚಳದೊಂದಿಗೆ, ಬೇಡಿಕೆಯನ್ನು ಪೂರೈಸಲು ಮಾರ್ಗಗಳ ಪುನರಾರಂಭ ಮತ್ತು ಹೆಚ್ಚುವರಿ ವಿಮಾನಗಳ ಮೂಲಕ ಬೆಂಗಳೂರು ವಿಮಾನ ನಿಲ್ದಾಣದ ಮಾರ್ಗ ಜಾಲವು ಮತ್ತಷ್ಟು ವೃದ್ಧಿಯಾಗುವ ನಿರೀಕ್ಷೆಯಿದೆ ಎಂದು ಬಿಐಎಎಲ್ ಹೇಳಿದೆ.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Latest News on WhatsApp

Why Keelambi Media Lab Pvt Ltd ?
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
KLIVE at Google News App
KLIVE Android App on Google Play Store

Download the most loved Klive App for your Android phone or tablet.
ಪ್ರಧಾನಿ ಮೋದೀಜಿಗೆ ಇಮೈಲ್ ಮೂಲಕ ಕೊಲೆ ಬೆದರಿಕೆ
ಪ್ರಧಾನಿ ನರೇಂದ್ರ ಮೋದಿ ಅವರ ಹತ್ಯೆಗೆ ಸಂಚು ರೂಪಿಸಿರುವುದು ಬಯಲಾಗಿದೆ.
ಇಮೇಲ್‌ನ ತನಿಖೆಯನ್ನು ಎನ್‌ಐಎಗೆ ನೀಡಲಾಗಿದೆ ಎಂದು ತಿಳಿದುಬಂದಿದೆ.
ಗುಪ್ತಚರ ಮೂಲಗಳನ್ನು ಉಲ್ಲೇಖಿಸಿ ಪ್ರಧಾನಿ ಮೋದಿಗೆ ಕೊಲೆ ಬೆದರಿಕೆ ಹಾಕಿರುವ ವಿಚಿತ್ರ ಪ್ರಕರಣ ಬೆಳಕಿಗೆ ಬಂದಿದೆ.
ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ)ಗೆ ಬೆದರಿಕೆ ಇ-ಮೇಲ್‌ಗಳು ಬಂದಿವೆ ಎನ್ನಲಾಗುತ್ತಿದೆ.
ಈ ಷಡ್ಯಂತ್ರವನ್ನು ಬಯಲಿಗೆಳೆಯಬಾರದು ಎಂದು ಆತ್ಮಹತ್ಯೆಗೆ ಸಿದ್ಧರಾಗಿದ್ದಾರೆ ಎಂದು ಇ-ಮೇಲರ್ ತಿಳಿಸಿದ್ದಾರೆ.
ಪ್ರಧಾನಿ ಮೋದಿಯನ್ನು ಕೊಲ್ಲಲು ಸಿದ್ಧರಾಗಿದ್ದಾರೆ. ಒಟ್ಟು 20 ಕೆ.ಜಿ ಆರ್.ಡಿ.ಎಕ್ಸ್ ಹಾಗೂ 20 ಸ್ಲೀಪರ್ ಸೆಲ್‌ಗಳನ್ನು ಹೊಂದಿದ್ದಾರೆ ಎಂದು ತಿಳಿದುಬಂದಿದೆ.
ಮೇಲ್ ಪ್ರಕಾರ ದಾಳಿಯ ಯೋಜನೆ ಸಿದ್ಧಪಡಿಸಲಾಗಿದೆ. ಮೇಲ್ ಬರೆದಿರುವ ವ್ಯಕ್ತಿಗೆ ಹಲವು ಭಯೋತ್ಪಾದಕರೊಂದಿಗೆ ಸಂಪರ್ಕವಿದೆ ಎಂದು ಮೇಲ್ ನಲ್ಲಿ ಹೇಳಲಾಗಿದೆ. ರಾಷ್ಟ್ರೀಯ ತನಿಖಾ ಸಂಸ್ಥೆಯು ಗುಪ್ತಚರ ಮತ್ತು ಭದ್ರತಾ ಏಜೆನ್ಸಿಗಳಿಗೂ ಬೆದರಿಕೆ ಇ-ಮೇಲ್‌ಗಳನ್ನು ಕಳುಹಿಸಿದೆ. ಮೇಲ್ ಬಂದಿರುವ ಮೇಲ್ ಐಡಿ ತನಿಖೆ ನಡೆಯುತ್ತಿದೆ. ರಾಷ್ಟ್ರೀಯ ತನಿಖಾ ಸಂಸ್ಥೆಯ ಮುಂಬೈ ಶಾಖೆಗೆ ಇಮೇಲ್ ಬಂದಿದೆ.
ಪ್ರಧಾನಿ ಮೋದಿಯವರ ಹತ್ಯೆಗೆ ಸಂಚು ರೂಪಿಸಿರುವುದು ಬಹಿರಂಗವಾದ ನಂತರ ಭದ್ರತಾ ಪಡೆಗಳು ಎಚ್ಚೆತ್ತುಕೊಂಡಿದ್ದು, ಇಮೇಲ್ ಕಳುಹಿಸಿದವರನ್ನು ಪತ್ತೆ ಮಾಡಲಾಗುತ್ತಿದೆ.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Latest News on WhatsApp

Why Keelambi Media Lab Pvt Ltd ?
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
KLIVE at Google News App
KLIVE Android App on Google Play Store

Download the most loved Klive App for your Android phone or tablet.
ಆಫ್ ಸ್ಪಾ ಕಾಯಿದೆಯನ್ನ ಸಂಪೂರ್ಣ ಹಿಂಪಡೆಯುವುದಿಲ್ಲ
ಈಶಾನ್ಯ ಭಾರತದ ಅಸ್ಸಾಂ, ಮಣಿಪುರ ಮತ್ತು ನಾಗಾಲ್ಯಾಂಡ್ ರಾಜ್ಯಗಳಲ್ಲಿ ಸಶಸ್ತ್ರ ಪಡೆಗಳ ವಿಶೇಷಾಧಿಕಾರ ಕಾಯ್ದೆಯ (ಆಫ್‌ಸ್ಪಾ) ಅಡಿ, ‘ಪ್ರಕ್ಷುಬ್ಧ’ ಎಂದು ಗುರುತಿಸಲಾಗಿರುವ ಹಲವು ಪ್ರದೇಶಗಳಲ್ಲಿ, ಏಪ್ರಿಲ್ 1ರಿಂದ ಅನ್ವಯವಾಗುವಂತೆ ಈ ಕಾಯ್ದೆಯನ್ನು ಹಿಂಪಡೆಯಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಘೋಷಿಸಿದ್ದಾರೆ.
ಆದರೆ ಈ ಮೂರೂ ರಾಜ್ಯಗಳಿಂದ ಆಫ್‌ಸ್ಪಾವನ್ನು ಸಂಪೂರ್ಣವಾಗಿ ಹಿಂಪಡೆಯುವುದಿಲ್ಲ ಎಂದು ಗೃಹ ಸಚಿವಾಲಯವು
ಹೇಳಿದೆ.
ಆಯ್ದ ಕೆಲವೇ ಪ್ರದೇಶಗಳನ್ನು ಆಫ್‌ಸ್ಪಾದಿಂದ ಮುಕ್ತವಾಗಿಸುವ ಕೇಂದ್ರ ಸರ್ಕಾರದ ಈ ನಿರ್ಧಾರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮೂರೂ ರಾಜ್ಯಗಳ ಮುಖ್ಯಮಂತ್ರಿಗಳು ಈ ನಿರ್ಧಾರವನ್ನು ಸ್ವಾಗತಿಸಿದ್ದಾರೆ.
ಆದರೆ, ಈ ಘೋಷಣೆಯಿಂದ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಈ ರಾಜ್ಯಗಳ ಮಾನವ ಹಕ್ಕುಗಳ ಹೋರಾಟಗಾರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈಗ ಇಡೀ ನಾಗಾಲ್ಯಾಂಡ್‌ನಲ್ಲಿ ಆಫ್‌ಸ್ಪಾ ಜಾರಿಯಲ್ಲಿದೆ. ಶುಕ್ರವಾರದಿಂದ ರಾಜ್ಯದ ಏಳು ಜಿಲ್ಲೆಗಳ, 15 ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿರುವ ಪ್ರದೇಶಗಳನ್ನು ಈ ಕಾಯ್ದೆಯಿಂದ ಹೊರಗಿಡಲಾಗುತ್ತದೆ.
ಅಸ್ಸಾಂನ 23 ಜಿಲ್ಲೆಗಳನ್ನು ಸಂಪೂರ್ಣವಾಗಿ ಆಫ್‌ಸ್ಪಾದಿಂದ ಹೊರಗೆ ಇಡಲಾಗುತ್ತದೆ. ಒಂದು ಜಿಲ್ಲೆಯನ್ನು ಭಾಗಶಃ, ಆಫ್‌ಸ್ಪಾದಿಂದ ಹೊರಗೆ ಇಡಲಾಗಿದೆ. ಮಣಿಪುರದ ಇಂಫಾಲ ಹೊರತುಪಡಿಸಿ ರಾಜ್ಯದ ಎಲ್ಲಾ ಪ್ರದೇಶಗಳೂ ಆಫ್‌ಸ್ಪಾ ಅಡಿಯಲ್ಲಿ ಇದ್ದವು. ಶುಕ್ರವಾರದಿಂದ ರಾಜ್ಯದ ಆರು ಜಿಲ್ಲೆಗಳ 15 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಬರುವ ಪ್ರದೇಶಗಳನ್ನು ಆಫ್‌ಸ್ಪಾದಿಂದ ಹೊರಗೆ ಇಡಲಾಗುತ್ತದೆ.
ಈಶಾನ್ಯದ ರಾಜ್ಯಗಳಲ್ಲಿ ಆಂತರಿಕ ಗಲಭೆ ಮತ್ತು ಒಳನುಸುಳುವಿಕೆಯನ್ನು ತಡೆಗಟ್ಟಲು 1958ರಲ್ಲಿ ಸೇನೆಗೆ ವಿಶೇಷಾಧಿಕಾರ ನೀಡಲಾಗಿತ್ತು.
ಈ ಕಾಯ್ದೆ ಅಡಿ ಕಾರ್ಯನಿರ್ವಹಿಸುವ ಸಿಬ್ಬಂದಿಯು, ನಾಗರಿಕರನ್ನು ಪ್ರಶ್ನಿಸುವ, ವಿಚಾರಣೆಗೆ ಒಳಪಡಿಸುವ ಮತ್ತು ಅನುಮಾನ ಬಂದಲ್ಲಿ ಗುಂಡಿಟ್ಟು ಕೊಲ್ಲುವ ಅಧಿಕಾರ ಹೊಂದಿರುತ್ತಾರೆ. ಈ ಕಾಯ್ದೆಯಡಿ ನಡೆಸುವ ಯಾವ ಕೃತ್ಯವೂ ವಿಚಾರಣೆಗೆ ಒಳಪಡುವುದಿಲ್ಲ.
2021ರ ಡಿಸೆಂಬರ್‌ನಲ್ಲಿ ನಾಗಾಲ್ಯಾಂಡ್‌ನಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ಸೇನೆಯ ತಂಡವು, ನಾಗರಿಕರ ಮೇಲೆ ಗುಂಡಿನ ದಾಳಿ ನಡೆಸಿತ್ತು. ಆ ದಾಳಿಯಲ್ಲಿ ಮತ್ತು ನಂತರದ ಘರ್ಷಣೆಯಲ್ಲಿ ಸೇನೆಯ ಗುಂಡಿಗೆ 14 ನಾಗರಿಕರು ಬಲಿಯಾಗಿದ್ದರು. ಆ ಬಳಿಕ ಆಫ್‌ಸ್ಪಾವನ್ನು ಹಿಂಪಡೆಯಬೇಕು ಎಂಬ ಕೂಗು ಬಲವಾಗಿ ಕೇಳಿಬಂದಿತ್ತು.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Latest News on WhatsApp

Why Keelambi Media Lab Pvt Ltd ?
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
KLIVE at Google News App
KLIVE Android App on Google Play Store

Download the most loved Klive App for your Android phone or tablet.
ಇನ್ನೆರಡು ವರ್ಷಗಳಲ್ಲಿ ಎಲೆಕ್ಟ್ರಿಕ್ ಕಾರುಗಳು ಬರಲಿವೆ- ನಿತಿನ್ ಗಡ್ಕರಿ
ಸದ್ಯದಲ್ಲೇ ಎಲೆಕ್ಟ್ರಿಕ್ ಕಾರುಗಳನ್ನು ಕೊಂಡುಕೊಳ್ಳಲು ಪ್ಲಾನ್ ಮಾಡಿರುವವರಿಗೆ ಸಮಾಧಾನಕರ ಸುದ್ದಿ ಇದೆ.
ಇನ್ನೆರಡು ವರ್ಷಗಳಲ್ಲಿ ಎಲೆಕ್ಟ್ರಿಕ್ ಕಾರುಗಳು ಕೂಡ ಅಗ್ಗವಾಗಲಿವೆಯಂತೆ. ದೇಶದ ಎಲ್ಲಾ ಎಲೆಕ್ಟ್ರಿಕ್ ವಾಹನಗಳ ಬೆಲೆಗಳು ಪೆಟ್ರೋಲ್ ವಾಹನಗಳ ಬೆಲೆಗೆ ಸಮನಾಗಿರುತ್ತವೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಲೋಕಸಭೆಯಲ್ಲಿ ಅವರು ಮಾತನಾಡುತ್ತಿದರು.
ಸಂಸತ್ತಿನ ಆವರಣದಲ್ಲಿ ಚಾರ್ಜಿಂಗ್ ಸ್ಟೇಷನ್ ಸ್ಥಾಪಿಸಿದ ನಂತರ ಸಂಸದರು ಕೂಡ ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸಬಹುದು ಎಂದು ಗಡ್ಕರಿ ಹೇಳಿದರು.
ಮುಂದಿನ ಎರಡು ವರ್ಷಗಳಲ್ಲಿ ದೇಶ ಬದಲಾಗಲಿದೆ. ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳು, ಎಲೆಕ್ಟ್ರಿಕ್ ತ್ರಿಚಕ್ರ ವಾಹನಗಳು ಮತ್ತು ಎಲೆಕ್ಟ್ರಿಕ್ ನಾಲ್ಕು ಚಕ್ರಗಳ ಬೆಲೆಯು ಪೆಟ್ರೋಲ್ ವಾಹನಗಳ ಬೆಲೆಗೆ ಸಮನಾಗಿರುತ್ತದೆ. ಈ ಬಗ್ಗೆ ಎಲ್ಲಾ ಗೌರವಾನ್ವಿತ ಸದಸ್ಯರಿಗೆ ಭರವಸೆ ನೀಡುತ್ತೇನೆ ಎಂದು ಗಡ್ಕರಿ ಪ್ರಶ್ನೋತ್ತರ ಅವಧಿಯಲ್ಲಿ ಹೇಳಿದರು.
ಆಮದು ಬದಲಿ, ಪರಿಣಾಮಕಾರಿ ವೆಚ್ಚ, ಮಾಲಿನ್ಯ ಮುಕ್ತ ಮತ್ತು ಸ್ವದೇಶಿ ಉತ್ಪಾದನೆಯೇ ಕೇಂದ್ರ ಸರ್ಕಾರದ ಪ್ರಮುಖ ಆದ್ಯತೆ ಅಂತಾ ಅವರು ಸ್ಪಷ್ಟಪಡಿಸಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳದಿಂದಾಗಿ ಸಾಕಷ್ಟು ಸಮಸ್ಯೆಯಾಗುತ್ತಿದೆ.
ಹಾಗಾಗಿ ಗ್ರೀನ್ ಹೈಡ್ರೋಜನ್, ವಿದ್ಯುತ್, ಎಥೆನಾಲ್, ಮೆಥನಾಲ್, ಜೈವಿಕ-ಡೀಸೆಲ್, ಜೈವಿಕ-ಎಲ್‌ಎನ್ಜಿ ಯನ್ನು ಪರ್ಯಾಯ ಇಂಧನವಾಗಿ ಬಳಸಿಕೊಳ್ಳಲು ಸರ್ಕಾರ ಸಾಕಷ್ಟು ಪ್ರಯತ್ನ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಸಂಸತ್ತಿನ ಪಾರ್ಕಿಂಗ್ ಲಾಟ್ ನಲ್ಲಿ ಚಾರ್ಜಿಂಗ್ ಸ್ಟೇಶನ್ ಸ್ಥಾಪಿಸಲು ಅವಕಾಶ ಮಾಡಿಕೊಡಿ ಎಂದು ಗಡ್ಕರಿ, ಸ್ಪೀಕರ್ ಗೆ ಮನವಿ ಕೂಡ ಮಾಡಿದ್ದಾರೆ.
ಎಲ್ಲಾ ಸರ್ಕಾರಿ ಕಚೇರಿಗಳಲ್ಲೂ ಈ ರೀತಿ ಚಾರ್ಜಿಂಗ್ ಸ್ಟೇಶನ್ ಸ್ಥಾಪಿಸುವ ಉದ್ದೇಶವಿದೆ ಎಂದರು.
ಸೋಲಾರ್ ಹಾಗೂ ವಿಂಡ್ ಪವರ್ ಬಳಸಿಕೊಳ್ಳುವ ನಿಟ್ಟಿನಲ್ಲಿ ಪ್ರತಿ 40 ಕಿಮೀಗೆ ರಸ್ತೆ ಬದಿಯ ಸೌಕರ್ಯವನ್ನು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಭಿವೃದ್ಧಿಪಡಿಸುತ್ತಿದೆ.ಇದೆ.
ಇಲ್ಲಿ ಚಾರ್ಜಿಂಗ್ ಸ್ಟೇಶನ್ ಗಳನ್ನು ಸ್ಥಾಪಿಸಲಾಗುತ್ತಿದೆ. ಈಗಾಗಲೇ 39 ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಇನ್ನೂ 103 ಕೇಂದ್ರಗಳನ್ನು ಅಭಿವೃದ್ಧಿಪಡಿಸಲು ಯೋಜನೆ ಸಿದ್ಧವಾಗಿದೆ ಎಂದು ಗಡ್ಕರಿ ಮಾಹಿತಿ ನೀಡಿದ್ದಾರೆ.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Latest News on WhatsApp

Why Keelambi Media Lab Pvt Ltd ?
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
KLIVE at Google News App
KLIVE Android App on Google Play Store

Download the most loved Klive App for your Android phone or tablet.
ಹಲಾಲ್ ವಿಚಾರವಾಗಿ ಕೂತು ಚರ್ಚಿಸಿ ಸಮಸ್ಯೆ ಬಗೆಹರಿಸಬೇಕು-ಬೊಮ್ಮಾಯಿ
ರಾಜ್ಯದಲ್ಲಿ ಹಲಾಲ್ ಮಾಂಸ ನಿಷೇಧ ಅಭಿಯಾನ ಶುರುವಾಗಿದ್ದು, ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹಲವಾರು ವಿಷಯಗಳು ಚರ್ಚೆಗೆ ಬಂದಿದ್ದಾವೆ.
ಸಮವಸ್ತ್ರ, ಸಮಸ್ಯೆ ಇತ್ಯರ್ಥ ಆಗಿದೆ. ಬೇರೆ ಬೇರೆ ವಿಷಯಗಳ ಬಗ್ಗೆ ಸಂಬಂಧ ಪಟ್ಟವರಿಗೆ ಕೇಳಲಾಗುವುದು. ರಾಜ್ಯದಲ್ಲಿ ತಮ್ಮ ತಮ್ಮ ನಂಬಿಕೆಗಳ ಅಧಾರದ ಮೇಲೆ ಬದುಕು ನಡೆಸುತ್ತಿದ್ದೇವೆ. ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಸಹಕಾರ ನೀಡಬೇಕು ಎಂದರು.
ಹಲಾಲ್ ವಿಚಾರದಲ್ಲಿ ಜನರು ಶಾಂತಿ ಕಾಪಾಡಬೇಕು. ಕರ್ನಾಟಕ ಶಾಂತಿಗೆ, ಪ್ರಗತಿಗೆ ಹೆಸರಾಗಿದೆ. ಇದಕ್ಕೆ ತೊಂದರೆಯಾಗದಂತ ಎಲ್ಲರೂ ಸಂಯಮದಿಂದ ವರ್ತಿಸಬೇಕು. ಕೂತು ಚರ್ಚೆ ಮಾಡಿ ಸಮಸ್ಯೆ ಬಗೆಹರಿಸಬೇಕು ಎಂದು ಹೇಳಿದ್ದಾರೆ.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Latest News on WhatsApp

Why Keelambi Media Lab Pvt Ltd ?
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
KLIVE at Google News App
KLIVE Android App on Google Play Store

Download the most loved Klive App for your Android phone or tablet.
ರಷ್ಯಾದಿಂದ ತೈಲ ಆಮದಿನ ಬಗ್ಗೆ ಭಾರತ ಇನ್ನೂ ನಿರ್ಧರಿಸಿಲ್ಲ
ಉಕ್ರೇನ್ ಮೇಲೆ ದಾಳಿ ಮಾಡುವ ಮೂಲಕ ಜಾಗತಿಕ ಸಮುದಾಯದ ಕೆಂಗಣ್ಣಿಗೆ ಗುರಿಯಾಗಿರುವ ರಷ್ಯಾ, ನಿರ್ಬಂಧದ ಭೀತಿಯ ಹೊರತಾಗಿಯೂ ಭಾರತಕ್ಕೆ ರಿಯಾಯಿತಿ ದರದಲ್ಲಿ ತೈಲ ರಫ್ತು ಮಾಡುವುದಾಗಿ ಪ್ರಸ್ತಾವನೆ ಮುಂದಿಟ್ಟಿದೆ.
ಉಕ್ರೇನ್ ವಿರುದ್ಧದ ಯುದ್ಧದಿಂದಾಗಿ ರಷ್ಯಾ ಆರ್ಥಿಕ ಮುಗ್ಗಟ್ಟಿಗೆ ಸಿಲುಕುವ ಅಪಾಯದ ಕುರಿತು ಆರ್ಥಿಕ ತಜ್ಞರು ಎಚ್ಚರಿಕೆ ನೀಡಿರುವ ಹೊತ್ತಿನಲ್ಲೇ ರಷ್ಯಾ ಇದೀಗ ಭಾರತ ಸೇರಿದಂತೆ ತನ್ನ ಮಿತ್ರರಾಷ್ಟ್ರಗಳಿಗೆ ರಿಯಾಯಿತಿ ದರದಲ್ಲಿ ತೈಲ ಮತ್ತು ಇತರ ಸರಕುಗಳನ್ನು ನೀಡುವ ಪ್ರಸ್ತಾವನೆ ಮುಂದಿಟ್ಟಿದೆ. ಫೆಬ್ರವರಿಯಲ್ಲಿ ವ್ಲಾಡಿಮಿರ್ ಪುಟಿನ್ ಉಕ್ರೇನ್ ಮೇಲೆ ಆಕ್ರಮಣ ನಡೆಸಲು ತನ್ನ ದೇಶದ ಸೇನೆಗೆ ಆದೇಶ ನೀಡಿದ ಬೆನ್ನಲ್ಲೇ ಇದೀಗ ಇತರೆ ದೇಶಗಳಿಗೆ ಅಗ್ಗದ ಬೆಲೆಯಲ್ಲಿ ರಷ್ಯಾ ತೈಲ ಪೂರೈಕೆ ಮಾಡುತ್ತಿದೆ. ಈ ರಿಯಾಯಿತಿಯಲ್ಲಿ ಕಚ್ಚಾ ತೈಲ ನೀಡುವ ರಷ್ಯಾದ ಪ್ರಸ್ತಾಪವನ್ನು ಭಾರತ ಕೂಡ ಸ್ವೀಕರಿಸಬಹುದು ಎಂದು ಹೇಳಿದೆ.
ಉಕ್ರೇನ್ ಆಕ್ರಮಣದ ನಂತರ ಹೆಚ್ಚುತ್ತಿರುವ ಅಂತಾರಾಷ್ಟ್ರೀಯ ಒತ್ತಡವು ರಷ್ಯಾ ತನ್ನ ತೈಲ ದರ ಇಳಿಕೆ ಅಥವಾ ರಿಯಾಯಿತಿ ದರದಲ್ಲಿ ಸರಕುಗಳನ್ನು ಪೂರೈಕೆ ಮಾಡಲು ಒತ್ತಾಯಿಸಿದೆ. ಉಕ್ರೇನ್ ಯುದ್ಧಕ್ಕೂ ಮೊದಲು ಪ್ರತೀ ಬ್ಯಾರೆಲ್ ತೈಲಕ್ಕೆ 35 ಡಾಲರ್ ಗಳಷ್ಟಿತ್ತು. ಯುದ್ಧದ ಬಳಿಕ ಈ ಬೆಲೆಯಲ್ಲಿ ಪ್ರತೀ ಬ್ಯಾರೆಲ್ ತೈಲದ ಮೇಲೆ 10ಡಾಲರ್ ದರ ಏರಿಕೆ ಕಂಡಿತ್ತು. ಆದಾಗ್ಯೂ ರಷ್ಯಾ ದೇಶ ಈ ಹಿಂದಿನ ದರ ಅಂದರೆ ಯುದ್ಧಕ್ಕೂ ಮುಂದಿದ್ದ 35ಡಾಲರ್ ಗೆ ತೈಲ ನೀಡುವ ಪ್ರಸ್ತಾವನೆ ನೀಡಿದೆ.
ಭಾರತವು ಈ ವರ್ಷಕ್ಕೆ ಒಪ್ಪಂದ ಮಾಡಿಕೊಂಡಿರುವ 15 ಮಿಲಿಯನ್ ಬ್ಯಾರೆಲ್‌ಗಳನ್ನು ತೆಗೆದುಕೊಳ್ಳಬೇಕೆಂದು ರಷ್ಯಾ ಬಯಸಿದೆ.ಈ ಸಂಬಂಧ ಸರ್ಕಾರದ ಮಟ್ಟದಲ್ಲಿ ಮಾತುಕತೆಗಳು ನಡೆಯುತ್ತಿವೆ. ಏಷ್ಯಾದ ನಂ. 2 ತೈಲ ಆಮದುದಾರ ರಾಷ್ಟ್ರ ಭಾರತ ಅಂತಾರಾಷ್ಟ್ರೀಯ ಒತ್ತಡ ಮತ್ತು ನಿರ್ಬಂಧಗಳನ್ನು ಧಿಕ್ಕರಿಸಿ ರಷ್ಯಾದ ಕಚ್ಚಾ ತೈಲ ಆಮದು ಪ್ರಮಾಣವನ್ನು ದ್ವಿಗುಣಗೊಳಿಸುತ್ತಿರುವ ಬೆರಳೆಣಿಕೆಯ ರಾಷ್ಟ್ರಗಳಲ್ಲಿ ಒಂದಾಗಿದೆ. ರಷ್ಯಾದ ಸಂದೇಶ ಕಳುಹಿಸುವ ವ್ಯವಸ್ಥೆ ಎಸ್ ಪಿ ಎಸ್ ಅನ್ನು ಬಳಸಿಕೊಂಡು ರಷ್ಯಾವು ರೂಪಾಯಿ-ರೂಬಲ್-ಡಿನೋಮಿನೇಟೆಡ್ ಪಾವತಿಗಳ ಅವಕಾಶ ನೀಡಿದೆ.ಇದು ಭಾರತಕ್ಕೆ ವ್ಯಾಪಾರವನ್ನು ಹೆಚ್ಚು ಆಕರ್ಷಕವಾಗಿ ಮಾಡಬಹುದು ಎಂದು ರಷ್ಯಾ ಅಧಿಕಾರಿಗಳು ಹೇಳಿದ್ದಾರೆ. ಈ ಪ್ರಸ್ತಾವನನೆ ಸಂಬಂಧ ಭಾರತ ಯಾವುದೇ ಅಂತಿಮ ನಿರ್ಧಾರವನ್ನು ತೆಗೆದುಕೊಂಡಿಲ್ಲ ಮತ್ತು ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಗುರುವಾರ ಎರಡು ದಿನಗಳ ಭೇಟಿಗಾಗಿ ಭಾರತಕ್ಕೆ ಆಗಮಿಸಿದಾಗ ಈ ವಿಷಯವನ್ನು ಚರ್ಚಿಸಲಾಗುತ್ತದೆ ಎಂದು ಹೇಳಲಾಗಿದೆ.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Latest News on WhatsApp

Why Keelambi Media Lab Pvt Ltd ?
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
KLIVE at Google News App
KLIVE Android App on Google Play Store

Download the most loved Klive App for your Android phone or tablet.
ಮಾಸ್ಕ್ ಧಾರಣೆ ನಿರ್ಬಂಧ ಆದೇಶ ಹಿಂಪಡೆದಿಲ್ಲ-ಅಜಯ್ ಭಲ್ಲಾ
ಏಪ್ರಿಲ್ ಒಂದು, ಹೊಸ ಆರ್ಥಿಕ ವರ್ಷ, ಹಲವು ಬದಲಾವಣೆಗಳು ಜಾರಿಗೆ ಬರಲಿದೆ. ಜನಸಾಮಾನ್ಯರ ಜೇಬು ಖಾಲಿಯಾಗುವ ಹೊಸ ರೂಲ್ಸುಗಳು, ಹುಚ್ಚು ಕುದುರೆಯಂತೆ ಓಡುತ್ತಿರುವ ತೈಲಬೆಲೆಗಳಿಂದಾಗಿ ಹಲವು ವಸ್ತುಗಳ ಬೆಲೆ ಗಗನಕ್ಕೇರುತ್ತಿವೆ.
ಏಪ್ರಿಲ್ ನಾಲ್ಕರಂದು ಹೊಟೇಲ್ ಮಾಲೀಕರ ಸಂಘ ಸಭೆ ಸೇರಲಿದ್ದು, ತಿಂಡಿ, ಊಟಗಳ ಬೆಲೆಯೂ ಜಾಸ್ತಿಯಾಗುವುದೂ ನಿಶ್ಚಿತ ಎನ್ನಲಾಗುತ್ತಿದೆ.
ಮುಂಬರುವ ಆಗಸ್ಟ್ ತಿಂಗಳಲ್ಲಿ ಕೊರೊನಾ ನಾಲ್ಕನೇ ಅಲೆ ಎದುರಾಗಬಹುದು ಎಂದು ರಾಜ್ಯ ಆರೋಗ್ಯ ಸಚಿವ ಡಾ.ಸುಧಾಕರ್ ಹೇಳಿದ್ದರು.
ಏಪ್ರಿಲ್ 02ರಿಂದ ಮಹಾರಾಷ್ಟ್ರದಲ್ಲಿ ಮಾಸ್ಕ್ ನಿರ್ಬಂಧ ತೆರವು
ಇದರ ಮಧ್ಯೆಯೇ ಕೇಂದ್ರ ಆರೋಗ್ಯ ಇಲಾಖೆ ಕೋವಿಡ್ ಮಾರ್ಗಸೂಚಿಯಲ್ಲಿ ಹಲವು ಬದಲಾವಣೆಯನ್ನು ತಂದಿದೆ. ಇದು ಏಪ್ರಿಲ್ ಒಂದರಿಂದ ದೇಶಾದ್ಯಂತ ಜಾರಿಯಾಗಲಿದೆ. ಇದಕ್ಕೂ ಹೆಚ್ಚಿನದನ್ನು ಆಯಾಯ ರಾಜ್ಯ ಸರಕಾರ ಬೇಕಿದ್ದರೆ ಮಾಡಬಹುದು ಎನ್ನುವ ಫ್ರೀಹ್ಯಾಂಡ್ ಅನ್ನು ನೀಡಿದೆ.
ಕಳೆದ 24ತಿಂಗಳಿನಿಂದ ದೇಶದ ನಾಗರೀಕರ ಮುಖದಲ್ಲಿ ರಾರಾಜಿಸುತ್ತಿದ್ದ ಮಾಸ್ಕ್ ನಿಧಾನವಾಗಿ ಮೂಲೆಗುಂಪು ಆಗುತ್ತಿದೆ. ಮಾಸ್ಕ್ ಧರಿಸಬೇಕು ಎನ್ನುವ ಸರಕಾರದ ಆದೇಶವಿದ್ದರೂ, ಮಾರ್ಷಲ್ ಗಳ ದಂಡದ ಭಯದಿಂದಾಗಿ, ಎಲ್ಲೋ ಕಾಟಾಚಾರಕ್ಕೆ ಎನ್ನುವಂತೆ ಮುಖದ ಯಾವುದೋ ಒಂದು ಭಾಗದಲ್ಲಿ ಮಾಸ್ಕ್ ಅನ್ನು ಧರಿಸಿಕೊಳ್ಳುತ್ತಿದ್ದಾರೆ.
ಎರಡು ವರ್ಷದ ಹಿಂದೆ ಯಾರೂ ಊಹಿಸದ ಮಾಸ್ಕ್ ಎನ್ನುವ ಉಸಿರುಗಟ್ಟಿಸುವ ವಸ್ತುವೊಂದು ಜನರನ್ನು ಆವರಿಸಿಕೊಂಡಿತ್ತು. ಕಳೆದ ಕೆಲವು ತಿಂಗಳಿನಿಂದ ಮಾಸ್ಕ್ ಧರಿಸಲೇಬೆಕು ಎನ್ನುವ ನಿಯಮವಿದ್ದರೂ, ಜನರು ಹೆಚ್ಚಿಗೆ ತಲೆಕೆಡಿಸಿಕೊಳ್ಳಲು ಹೋಗುತ್ತಿರಲಿಲ್ಲ.
ಈಗ, ಏಪ್ರಿಲ್ 1, 2022ರಿಂದ ಅನ್ವಯವಾಗುವಂತೆ ಹೊಸ ಮಾರ್ಗಸೂಚಿಯನ್ನು ಕೇಂದ್ರ ಸರಕಾರ ಜಾರಿಗೆ ತಂದಿದೆ.
ಮಹಾರಾಷ್ಟ್ರದಲ್ಲಿ ಮುಂದಿನ ಆದೇಶದವರೆಗೆ ಮಾಸ್ಕ್ ಕಡ್ಡಾಯವಲ್ಲ
ಮಹಾರಾಷ್ಟ್ರದಲ್ಲಿ ಇನ್ನು ಮುಂದಿನ ಆದೇಶದವರೆಗೆ ಮಾಸ್ಕ್ ಧರಿಸುವುದು ಕಡ್ಡಾಯವಲ್ಲ ಎಂದು ಅಲ್ಲಿನ ಸರಕಾರ ಆದೇಶ ಹೊರಡಿಸಿದೆ.
ದೆಹಲಿಯಲ್ಲಿ ಮಾಸ್ಕ್ ಧರಿಸದಿದ್ದರೆ ದಂಡ ವಿಧಿಸುವುದಿಲ್ಲ ಎಂದು ಅಲ್ಲಿನ ಸರಕಾರಾ ಹೇಳಿದೆ. ಆದರೆ, ಇದು ದೇಶದ ಇತರ ಭಾಗಗಳಿಗೆ ಅನ್ವಯವಾಗುವುದಿಲ್ಲ. ಯಾಕೆಂದರೆ, ಮಾಸ್ಕ್ ಧರಿಸುವ ವಿಚಾರದಲ್ಲಿ ಹಿಂದಿನ ನಿಯಮಗಳನ್ನೇ ಪಾಲಿಸಬೇಕೆಂದು ಕೇಂದ್ರದ ಸುತ್ತೋಲೆಯಲ್ಲಿದೆ.
ಆದಾಗ್ಯೂ, ಆಯಾಯ ರಾಜ್ಯಗಳು ಈ ವಿಚಾರದಲ್ಲಿ ನಿರ್ಧಾರವನ್ನು ತೆಗೆದುಕೊಳ್ಳಬಹುದು ಎಂದು ಆರೋಗ್ಯ ಇಲಾಖೆ ಹೇಳಿದೆ.
ಕೇಂದ್ರದ ಸುತ್ತೋಲೆಯ ಸಾರಾಂಶ ಮುಂದಿನ ಸ್ಲೈಡಿನಲ್ಲಿ..
ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಹೊರಡಿಸಿರುವ ಆದೇಶ
ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಅವರು ಮುಖ್ಯ ಕಾರ್ಯದರ್ಶಿಗಳಿಗೆ ದಿನಾಂಕ 22.03.2022ರಂದು ಹೊರಡಿಸಿದ ಆದೇಶದ ಪ್ರಕಾರ, ಕೋವಿಡ್ ಪ್ರಕರಣಗಳು ಕಮ್ಮಿಯಾಗುತ್ತಿರುವುದರಿಂದ ಮತ್ತು ಹೆಚ್ಚಿನ ಪ್ರಮಾಣದಲ್ಲಿ ಜನರು ಲಸಿಕೆಯನ್ನು ತೆಗೆದುಕೊಂಡಿರುವುದರಿಂದ, ಫೆಬ್ರವರಿ 25, 2022ರಂದು ಹೊರಡಿಸಲಾಗಿದ್ದ ಸುತ್ತೋಲೆಯ ನಿರ್ಬಂಧವನ್ನು ಹಿಂದಕ್ಕೆ ಪಡೆಯಲಾಗಿದೆ ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ. ಆದರೂ, ಆರೋಗ್ಯ ಇಲಾಖೆ ಮತ್ತು ಸಾರ್ವಜನಿಕರು ಜಾಗರೂಕತೆಯಿಂದ ಇರಬೇಕೆಂದು ಸರ್ಕ್ಯೂಲರ್ ನಲ್ಲಿ ಹೇಳಲಾಗಿದೆ.
ವಿಪತ್ತು ನಿರ್ವಹಣಾ ಕಾಯಿದೆ 2005ಮದುವೆಗೆ, ತಿಥಿಗೆ, ಸ್ಮಶಾನಕ್ಕೆ ಹೋಗಲು ಇದ್ದ ಎಲ್ಲಾ ನಿರ್ಬಂಧಗಳನ್ನು ಹಿಂದಕ್ಕೆ ಪಡೆಯಲಾಗಿದೆ. ಆದರೆ, ಮಾಸ್ಕ್ ಧರಿಸುವುದನ್ನು ಸುತ್ತೋಲೆಯ ಪ್ರಕಾರ ಹಿಂದಕ್ಕೆ ಪಡೆಯಲಿಲ್ಲ. ಕೋವಿಡ್ ಪ್ರಕರಣಗಳು ಹೆಚ್ಚಿದ್ದ ಪ್ರದೇಶಗಳಲ್ಲಿ ಕಂಟೇನ್ಮೆಂಟ್ ಝೋನ್ ಎಂದು ನಿರ್ಬಂಧಿಸುವುದು, ಮಾಸ್ಕ್ ಧರಿಸುವುದು, ಸ್ಯಾನಿಟೈಶರ್ ಬಳಸುವುದನ್ನು ಮುಂದುವರಿಸಲಾಗಿದೆ. ವಿಪತ್ತು ನಿರ್ವಹಣಾ ಕಾಯಿದೆ 2005ರ ಪ್ರಕಾರ, ಆಯಾಯ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳು ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳ ಬಹುದು ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ.