Tuesday, February 24, 2026
Tuesday, February 24, 2026
Home Blog Page 1646

ಭಾರತವು ರಷ್ಯಾದೊಂದಿಗೆ ಈಗ ಯಾವುದೇ ಒಪ್ಪಂದ ಮಾಡುವುದು ಬೇಡ-ಅಮೆರಿಕ

0

ಉಕ್ರೇನ್ ಮೇಲೆ ಯುದ್ಧ ಸಾರಿದ ಕಾರಣಕ್ಕೆ ಹಲವು ದೇಶಗಳಿಂದ ನಿರ್ಬಂಧಕ್ಕೆ ಒಳಗಾಗಿರುವ ರಷ್ಯಾದ ಜತೆ ಭಾರತದ ಯಾವುದೇ ಒಪ್ಪಂದ ಮಾಡಿಕೊಳ್ಳಬಾರದು ಎಂದು ಭಾರತಕ್ಕೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಆಡಳಿತ ಸೂಚ್ಯವಾಗಿ ಎಚ್ಚರಿಕೆ ನೀಡಿದೆ.

ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಗಿನಾ ರೈಮೊಂಡೊ ಅವರು, ರಷ್ಯಾದಿಂದ ರಿಯಾಯಿತಿ ದರದಲ್ಲಿ ಕಚ್ಚಾತೈಲ ಖರೀದಿಸುವ ಹಾಗೂ ರಷ್ಯಾದ ಮೇಲಿನ ನಿರ್ಬಂಧವನ್ನು ತಪ್ಪಿಸಿಕೊಳ್ಳಲು ಪರ್ಯಾಯ ವ್ಯವಸ್ಥೆಗೆ ಮುಂದಾಗಿರುವ ಭಾರತದ ಕ್ರಮವು ತೀವ್ರ ಬೇಸರ ತರಿಸಿದೆ ಎಂದು ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ ಅಮೆರಿಕದ ಹಿರಿಯ ಅಧಿಕಾರಿಯೊಬ್ಬರು, ‘ಭಾರತದ ಗಡಿ ನಿಯಂತ್ರಣ ರೇಖೆಯನ್ನು ಚೀನಾ ಮತ್ತೆ ಉಲ್ಲಂಘಿಸಿದರೆ, ರಷ್ಯಾ ತನ್ನ ನೆರವಿಗೆ ಬರುತ್ತದೆ ಎಂಬುದನ್ನು ಪ್ರಧಾನಿ ನರೇಂದ್ರ ಮೋದಿ ಅವರು ನಿರೀಕ್ಷಿಸಬಾರದು. ಅಲ್ಲದೆ ರಷ್ಯಾದ ಮೇಲೆ ಅಮೆರಿಕ ಹೇರಿದ ನಿರ್ಬಂಧಗಳನ್ನು ಉಲ್ಲಂಘಿಸುವ ಯಾವುದೇ ದೇಶಗಳು ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ’ ಎಂದು ಭಾರತಕ್ಕೆ ಪರೋಕ್ಷ ಎಚ್ಚರಿಕೆ ನೀಡಿದರು.

ರಷ್ಯಾದ ವಿದೇಶಾಂಗ ಸಚಿವ ಸರ್ಗೆ ಲ್ಯಾವ್ರೊವ್ ಅವರು ಶುಕ್ರವಾರ ಭಾರತದ ಪ್ರವಾಸ ಕೈಗೊಳ್ಳಲಿದ್ದಾರೆ. ಈ ವೇಳೆ ಭಾರತ ಮತ್ತು ರಷ್ಯಾ ಮಧ್ಯೆ ರಿಯಾಯಿತಿ ದರದಲ್ಲಿ ಕಚ್ಚಾತೈಲ ಖರೀದಿ ಸೇರಿದಂತೆ ಇನ್ನಿತರ ಒಪ್ಪಂದಗಳು ನಡೆಯಲಿವೆ ಎಂಬ ವರದಿಗಳ ಬೆನ್ನಲ್ಲೇ ಭಾರತದ ಮೇಲೆ ಅಮೆರಿಕದ ಒತ್ತಡ ಹೆಚ್ಚಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ತಮ್ಮ ಪದಚ್ಯುತಿಗೆ ಅಮೆರಿಕ & ಭಾರತ ಪ್ರಯತ್ನ- ಇಮ್ರಾನ್ ಆರೋಪ

0

ತಮ್ಮನ್ನು ಅಧಿಕಾರದಿಂದ ಕೆಳಗಿಳಿಸಲು ಅಮೆರಿಕ ಪಿತೂರಿ ನಡೆಸಿದೆ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್‌ ಖಾನ್‌ ಆರೋಪಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಅಮೆರಿಕ, ಇಮ್ರಾನ್‌ ಖಾನ್‌ ಮಾಡಿರುವ ಆರೋಪದಲ್ಲಿ ಸತ್ಯಾಂಶಗಳಿಲ್ಲ ಎಂದು ತಿಳಿಸಿದೆ.

‘ಪಾಕಿಸ್ತಾನದಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ನಾವು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಪಾಕಿಸ್ತಾನದ ಸಾಂವಿಧಾನಿಕ ಪ್ರಕ್ರಿಯೆಯನ್ನು ನಾವು ಗೌರವಿಸುತ್ತೇವೆ.

ಇಮ್ರಾನ್‌ ಖಾನ್‌ರ ಆರೋಪಗಳಲ್ಲಿ ಯಾವುದೇ ಸತ್ಯವಿಲ್ಲ ಎಂದು ಅಮೆರಿಕದ ಸರ್ಕಾರದ ವಕ್ತಾರರು ಪ್ರತಿಕ್ರಿಯಿಸಿದ್ದಾರೆ.
ರಾಷ್ಟ್ರವನ್ನುದ್ದೇಶಿಸಿ ಮಾತನಾಡಿರುವ ಇಮ್ರಾನ್‌ ಖಾನ್‌, ತಮ್ಮನ್ನು ಅಧಿಕಾರದಿಂದ ಕೆಳಗಿಳಿಸಲು ‘ವಿದೇಶಿ ಪಿತೂರಿ’ ನಡೆದಿದೆ ಎಂದು ಹೇಳಿದ್ದಾರೆ.

ಪಾಕಿಸ್ತಾನದ ವಿದೇಶಾಂಗ ಇಲಾಖೆಗೆ ಅಮೆರಿಕದಿಂದ ಬೆದರಿಕೆ ಪತ್ರವೊಂದು ಬಂದಿದೆ. ಅದರಲ್ಲಿ ಇಮ್ರಾನ್‌ ಖಾನ್‌ರನ್ನು ಅಧಿಕಾರದಿಂದ ಕೆಳಗಿಳಿಸಬೇಕು. ಇಲ್ಲದಿದ್ದರೆ ದೇಶವು ಪರಿಣಾಮಗಳನ್ನು ಅನುಭವಿಸಬೇಕಾಗುತ್ತದೆ. ಅವಿಶ್ವಾಸ ನಿರ್ಣಯ ಅಂಗೀಕಾರವಾದರೆ, ಪಾಕಿಸ್ತಾನವನ್ನು ಕ್ಷಮಿಸಲಾಗುವುದು ಎಂದು ಪತ್ರದಲ್ಲಿದೆ ಎಂಬುದಾಗಿ ಇಮ್ರಾನ್‌ ತಿಳಿಸಿದ್ದಾರೆ.

ನಾನು ಈ ಬೆದರಿಕೆ ಪತ್ರದ ವಿರುದ್ಧ ಮಾತನಾಡುತ್ತಿದ್ದೇನೆಯೇ ಹೊರತು ಅಮೆರಿಕ ಸರ್ಕಾರದ ವಿರುದ್ಧ ಅಲ್ಲ. ಈ ಬೆದರಿಕೆಯು ನನ್ನ ಹಾಗೂ ದೇಶದ ವಿರುದ್ಧವಾಗಿದೆ ಎಂದು ಇಮ್ರಾನ್‌ ಹೇಳಿದ್ದಾರೆ.

ಇದೇ ವೇಳೆ, ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್‌ ಷರೀಫ್‌ ಅವರು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ನೇಪಾಳದಲ್ಲಿ ಗುಟ್ಟಾಗಿ ಭೇಟಿಯಾಗುತ್ತಿದ್ದರು ಎಂಬ ಗಂಭೀರ ಆರೋಪವನ್ನೂ ಇಮ್ರಾನ್‌ ಖಾನ್‌ ಮಾಡಿದ್ದಾರೆ.

ಒಟ್ಟು 342 ಸದಸ್ಯ ಬಲದ ಪಾಕಿಸ್ತಾನದ ಸಂಸತ್ತಿನಲ್ಲಿ ಇಮ್ರಾನ್ ಖಾನ್ ಅವರು ವಿಶ್ವಾಸ ಮತ ಗೆಲ್ಲಲು 172 ಸದಸ್ಯರ ಬೆಂಬಲ ಬೇಕಿದೆ. ಆದರೆ ತಮಗೆ 175 ಸಂಸದರ ಬೆಂಬಲವಿದೆ ಎಂದು ಹೇಳುತ್ತಿರುವ ಪ್ರತಿಪಕ್ಷವು, ತಕ್ಷಣವೇ ಇಮ್ರಾನ್ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸುತ್ತಿದೆ ಎಂದು ತಿಳಿದುಬಂದಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಅವಿವಾಹಿತ ಮಗಳು ಮದುವೆ ಖರ್ಚನ್ನು ಪೋಷಕರಿಂದ ಪಡೆಯಬಹುದು

0

ಅವಿವಾಹಿತ ಮಗಳು ತನ್ನ ಮದುವೆ ವೆಚ್ಚ ಪಡೆದುಕೊಳ್ಳಬಹುದು ಎಂದು ಛತ್ತೀಸ್ ಗಡ ಹೈಕೋರ್ಟ್ ಹೇಳಿದೆ.

ಹಿಂದೂ ದತ್ತು ಸ್ವೀಕಾರ ಮತ್ತು ಜೀವನಾಂಶ ಕಾಯ್ದೆ ಪ್ರಕಾರ ಅವಿವಾಹಿತ ಮಗಳು ತನ್ನ ಪೋಷಕರಿಂದ ಮದುವೆ ಖರ್ಚು ಪಡೆಯಲು ಅವಕಾಶವಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಛತ್ತೀಸ್ ಗಡದ ದುರ್ಗ ಜಿಲ್ಲೆಯ 35 ವರ್ಷದ ರಾಜೇಶ್ವರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಭಿಪಾಸ್ ಪುರ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ನಡೆದಿದೆ. ನ್ಯಾಯಮೂರ್ತಿಗಳಾದ ಗೌತಮ್ ಭದೂರಿ ಹಾಗೂ ಸಂಜಯ್ ಎಸ್. ಅಗರವಾಲ್ ಅವರ ಪೀಠದಲ್ಲಿ ವಿಚಾರಣೆ ನಡೆದಿದ್ದು, 1956 ರ ಹಿಂದೂ ದತ್ತು ಸ್ವೀಕಾರ ಮತ್ತು ಜೀವನಾಂಶ ಕಾಯ್ದೆ ಅನ್ವಯ ಪೋಷಕರಿಂದ ವಿವಾವದ ಖರ್ಚು ಪಡೆದುಕೊಳ್ಳಲು ಅವಕಾಶವಿದೆ ಎಂಬ ವಕೀಲರ ವಾದವನ್ನು ಹೈಕೋರ್ಟ್ ಒಪ್ಪಿದೆ.

2017 ರ ಏಪ್ರಿಲ್ 22ರಂದು ದುರ್ಗ ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶರು ನೀಡಿದ್ದ ಆದೇಶವನ್ನು ಹೈಕೋರ್ಟ್ ತಳ್ಳಿಹಾಕಿದೆ.
ಭಿಲಾಯ್ ಉಕ್ಕು ಘಟಕದ ಉದ್ಯೋಗಿಯಾಗಿರುವ ಭಾನುರಾಮ್ ಅವರ ಪುತ್ರಿ ರಾಜೇಶ್ವರಿ ತನಗೆ ಮದುವೆ ಖರ್ಚು ನೀಡಬೇಕೆಂದು ಕೋರಿ 2016ರಲ್ಲಿ ಕೌಟುಂಬಿಕ ನ್ಯಾಯಾಲಯದ ಮೊರೆ ಹೋಗಿದ್ದರು. ತನ್ನ ತಂದೆ ನಿವೃತ್ತಿಯಾಗುವ ವೇಳೆಗೆ 75 ಲಕ್ಷ ರೂಪಾಯಿ ಪಡೆಯಲಿದ್ದು, ಇದರಲ್ಲಿ ನನ್ನ ಮದುವೆಗೆ 25 ಲಕ್ಷ ರೂಪಾಯಿ ನೀಡಬೇಕೆಂದು ರಾಜೇಶ್ವರಿ ಉಲ್ಲೇಖಿಸಿದ್ದು, ಆಕೆಯ ಅರ್ಜಿಯನ್ನು ಕೌಟುಂಬಿಕ ನ್ಯಾಯಾಲಯ ತಿರಸ್ಕರಿಸಿತ್ತು.

ಇದರ ವಿರುದ್ಧ ರಾಜೇಶ್ವರಿ ಅವರು ಹೈಕೋರ್ಟ್ ಮೊರೆ ಹೋಗಿದ್ದು, ಹೈಕೋರ್ಟ್ ರಾಜೇಶ್ವರಿ ವಾದವನ್ನು ಎತ್ತಿ ಹಿಡಿದಿದ್ದು, ಮದುವೆಯಾಗದ ಮಗಳು ತನ್ನ ಪೋಷಕರಿಂದ ಮದುವೆ ವೆಚ್ಚವನ್ನು ಪಡೆಯಲು ಅರ್ಹಳು ಎಂದು ಹೇಳಿದೆ.

ಭಾರತೀಯ ಸಮಾಜದಲ್ಲಿ, ಸಾಮಾನ್ಯವಾಗಿ ಮದುವೆಯ ಪೂರ್ವ ಮತ್ತು ಮದುವೆಯ ಸಮಯದಲ್ಲಿ ವೆಚ್ಚಗಳನ್ನು ಮಾಡಬೇಕಾಗುತ್ತದೆ ಎಂದು ಹೈಕೋರ್ಟ್ ಹೇಳಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ರಷ್ಯಾದಿಂದ ಭಾರತಕ್ಕೆ ತೈಲ ಆಮದು ಪ್ರಕ್ರಿಯೆ ಗೌರವಿಸುತ್ತೇವೆ- ಟ್ರುಸ್

0

ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸಬೇಕೆ ಅಥವಾ ಬೇಡವೇ ಎಂಬುದನ್ನು ಭಾರತಕ್ಕೆ ಹೇಳುವುದಿಲ್ಲ ಎಂದು ಬ್ರಿಟನ್‌ ವಿದೇಶಾಂಗ ಕಾರ್ಯದರ್ಶಿ ಎಲಿಜಬೆತ್ ಟ್ರುಸ್ ಹೇಳಿದ್ದಾರೆ.

ಟ್ರುಸ್‌ ಅವರು ಭಾರತದ ವಿದೇಶಾಂಗ ಸಚಿವ ಎಸ್.
ಜೈಶಂಕರ್ ಅವರೊಂದಿಗೆ ನವದೆಹಲಿಯಲ್ಲಿ ಮಾತುಕತೆ ನಡೆಸಿದರು. ಬಳಿಕ ಮಾತನಾಡಿರುವ ಅವರು, ‘ತಾವು ಎದುರಿಸುತ್ತಿರುವ ಸಮಸ್ಯೆಗಳಿಗೆ ಅನುಗುಣವಾಗಿ ಬೇರೆ ದೇಶಗಳು ಕೈಗೊಳ್ಳುವ ನಿರ್ಧಾರಗಳನ್ನು ಗೌರವಿಸುವುದು ತುಂಬಾ ಮುಖ್ಯವೆಂದು ಭಾವಿಸುತ್ತೇನೆ. ಭಾರತ ಸಾರ್ವಭೌಮ ರಾಷ್ಟ್ರ. ಭಾರತ ಏನು ಮಾಡಬೇಕು ಎಂಬುದನ್ನು ನಾವು ಹೇಳಲಾಗದು ಎಂದಿದ್ದಾರೆ.

ಉಕ್ರೇನ್‌ ಮೇಲಿನ ರಷ್ಯಾ ಆಕ್ರಮಣದ ಕುರಿತು ಮಾತನಾಡಿರುವ ಟ್ರುಸ್‌, ಉಕ್ರೇನ್‌ನಿಂದ ಕ್ರಿಮಿಯಾವನ್ನು ರಷ್ಯಾ 2014ರಲ್ಲಿ ಸ್ವಾದೀನಪಡಿಸಿಕೊಂಡಿತು.

ಅದಾದ ನಂತರವೂ, ರಷ್ಯಾದಿಂದ ಇಂಧನ ಆಮದು ಮೇಲಿನ ಅವಲಂಬನೆ ಕಡಿಮೆ ಮಾಡಿಕೊಳ್ಳಲು ಯುರೋಪ್ ಸಾಕಷ್ಟು ಪ್ರಯತ್ನ ಮಾಡಿಲ್ಲ. ಅದರ ಫಲಿತಾಂಶವನ್ನು ನಾವೀಗ ನೋಡುತ್ತಿದ್ದೇವೆ ಎಂದು ಒತ್ತಿ ಹೇಳಿದ್ದಾರೆ.

ಉಕ್ರೇನ್ ಮೇಲಿನ ಆಕ್ರಮಣದ ಹಿನ್ನೆಲೆಯಲ್ಲಿ ಪಾಶ್ಚಿಮಾತ್ಯ ದೇಶಗಳು ತೈಲ ಆಮದಿನ ಮೇಲೆ ನಿರ್ಬಂಧ ಹೇರಿದ್ದರಿಂದ ರಷ್ಯಾವು ಭಾರತಕ್ಕೆ ಅಧಿಕ ರಿಯಾಯಿತಿ ದರದಲ್ಲಿ ಕಚ್ಚಾ ತೈಲ ನೀಡುವ ಆಫರ್ ನೀಡಿತ್ತು.

ಹಾಗಾಗಿ, ಫೆಬ್ರುವರಿ 24ರಂದು ಉಕ್ರೇನ್ ಮೇಲೆ ಆಕ್ರಮಣ ಆರಂಭವಾದ ಬಳಿಕ ಭಾರತವು ರಷ್ಯಾದಿಂದ 13 ಮಿಲಿಯನ್ ಬ್ಯಾರಲ್ ಕಚ್ಚಾತೈಲವನ್ನು ಆಮದು ಮಾಡಿಕೊಂಡಿದೆ. ಕಳೆದ ವರ್ಷಪೂರ್ತಿ ಭಾರತವು 16 ಮಿಲಿಯನ್ ಬ್ಯಾರಲ್ ಕಚ್ಚಾತೈಲವನ್ನು ಆಮದು ಮಾಡಿಕೊಂಡಿತ್ತು.

ರಷ್ಯಾದಿಂದ ತೈಲ ಖರೀದಿಸುವ ಭಾರತದ ನಿರ್ಧಾರವನ್ನು ಅಮೆರಿಕ ಸೇರಿದಂತೆ ಹಲವು ಪಾಶ್ಚಾತ್ಯ ರಾಷ್ಟ್ರಗಳು ಟೀಕಿಸಿದ್ದವು. ಈ ಕುರಿತು ಪ್ರತಿಕ್ರಿಯಿಸಿರುವ ಭಾರತದ ವಿದೇಶಾಂಗ ಸಚಿವ ಜೈಶಂಕರ್‌, ‘ದೇಶಗಳು ಮಾರುಕಟ್ಟೆಗೆ ತೆರೆದುಕೊಳ್ಳುವುದು ಸ್ವಾಭಾವಿಕ ಪ್ರಕ್ರಿಯೆ. ತನ್ನ ಜನರಿಗೆ ಯಾವುದು ಉತ್ತಮ ಎನಿಸುತ್ತದೋ ಅಂತಹ ವ್ಯವಹಾರಗಳನ್ನು ಹುಡುಕುವುದು ಸಹಜ’ ಎಂದಿದ್ದಾರೆ.

ಮುಂದುವರಿದು, ರಷ್ಯಾದಿಂದ ಇಂಧನ ಆಮದು ಮಾಡಿಕೊಳ್ಳುವ ದೊಡ್ಡ ಖರೀದಿದಾರರು ಯಾರು ಎಂಬುದನ್ನು ಎರಡು ಅಥವಾ ಮೂರು ತಿಂಗಳ ನಂತರ ನೋಡಬೇಕು. ಆ ಪಟ್ಟಿಯು ಈ ಹಿಂದೆ (ಉಕ್ರೇನ್‌-ರಷ್ಯಾ ಸಮರಕ್ಕೂ ಮುನ್ನ) ಇದ್ದದ್ದಕ್ಕಿಂತ ಭಿನ್ನವಾಗಿರುವುದಿಲ್ಲ ಎಂದು ಹೇಳಿದ್ದಾರೆ.

ಆ ಮೂಲಕ, ಉಕ್ರೇನ್‌-ರಷ್ಯಾ ಸಮರ ಅಂತ್ಯದ ಬಳಿಕ ಯುರೋಪಿನ ದೇಶಗಳು ರಷ್ಯಾದಿಂದ ತೈಲ ಖರೀದಿಸುವುದನ್ನು ಮುಂದುವರಿಸಲಿವೆ ಎಂಬುದನ್ನು ಉಲ್ಲೇಖಿಸಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಭಾರತಕ್ಕೆ ಇಂಧನ & ರಕ್ಷಣಾ ಸರಬರಾಜಿಗೆ ಅಮೆರಿಕ ಸಿದ್ಧವಿದೆ- ದಲೀಪ್ ಸಿಂಗ್

0

ರಷ್ಯಾದಿಂದ ಭಾರತವು ಇಂಧನ ಆಮದು ಮಾಡಿಕೊಳ್ಳುವುದಕ್ಕೆ ಯಾವುದೇ ಅಡಚಣೆ ಮಾಡುವುದಿಲ್ಲ ಎಂದು ಅಮೆರಿಕ ಹೇಳಿದೆ.

ಆದರೆ, ಖರೀದಿಯ ವೇಗವರ್ಧನೆಯನ್ನು ನೋಡಲು ಬಯಸುವುದಿಲ್ಲ ಎಂದು ದೆಹಲಿಗೆ ಆಗಮಿಸಿರುವ ಅಮೆರಿಕದ ಅಧಿಕಾರಿ ತಿಳಿಸಿದ್ದಾರೆ.
ಉಕ್ರೇನ್ ಮೇಲಿನ ಆಕ್ರಮಣದ ಹಿನ್ನೆಲೆಯಲ್ಲಿ ಪಾಶ್ಚಿಮಾತ್ಯ ದೇಶಗಳು ತೈಲ ಆಮದಿನ ಮೇಲೆ ನಿರ್ಬಂಧ ಹೇರಿದ್ದರಿಂದ ರಷ್ಯಾವು ಭಾರತಕ್ಕೆ ಅಧಿಕ ರಿಯಾಯಿತಿ ದರದಲ್ಲಿ ಕಚ್ಚಾ ತೈಲ ನೀಡುವ ಆಫರ್ ನೀಡಿತ್ತು.

ಹಾಗಾಗಿ, ಫೆಬ್ರುವರಿ 24ರಂದು ಉಕ್ರೇನ್ ಮೇಲೆ ಆಕ್ರಮಣ ಆರಂಭವಾದ ಬಳಿಕ ಭಾರತವು ರಷ್ಯಾದಿಂದ 13 ಮಿಲಿಯನ್ ಬ್ಯಾರಲ್ ಕಚ್ಚಾತೈಲವನ್ನು ಆಮದು ಮಾಡಿಕೊಂಡಿದೆ.
ಕಳೆದ ವರ್ಷಪೂರ್ತಿ ಭಾರತವು 16 ಮಿಲಿಯನ್ ಬ್ಯಾರಲ್ ಕಚ್ಚಾತೈಲವನ್ನು ಆಮದು ಮಾಡಿಕೊಂಡಿತ್ತು.

‘ಅಮೆರಿಕವು ಸ್ನೇಹ ಹೊಂದಿರುವ ದೇಶಗಳಿಗೆ ಕೆಂಪು ಗೆರೆಗಳನ್ನು ಹಾಕುವುದಿಲ್ಲ ಎಂದು ಅಂತರರಾಷ್ಟ್ರೀಯ ಆರ್ಥಿಕತೆಗೆ ಸಂಬಂಧಿಸಿದ ಅಮೆರಿಕದ ಉಪ ರಾಷ್ಟ್ರೀಯ ಭದ್ರತಾ ಸಲಹೆಗಾರ ದಲೀಪ್ ಸಿಂಗ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಆದರೂ, ಯುರೋಪ್ ಮತ್ತು ಏಷ್ಯಾದಲ್ಲಿ ನಮ್ಮ ಪಾಲುದಾರ ದೇಶಗಳು ಅವಿಶ್ವಾಸಾರ್ಹ ಇಂಧನ ಪೂರೈಕೆದಾರರ ಮೇಲೆ ಅವಲಂಬನೆಯನ್ನು ಕಡಿತಗೊಳಿಸುವಂತೆ ಒತ್ತಾಯಿಸಲಾಗಿದೆ ಎಂದು ಅವರು ಹೇಳಿದರು.

ಎರಡು ದಿನಗಳ ಪ್ರವಾಸಕ್ಕಾಗಿ ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಅವರು ಭಾರತಕ್ಕೆ ಆಗಮಿಸುವುದಕ್ಕೂ ಮುನ್ನ ಸಿಂಗ್ ಈ ಹೇಳಿಕೆ ನೀಡಿದ್ದಾರೆ.

ರಷ್ಯಾ ದೀರ್ಘಕಾಲದಿಂದ ಭಾರತದ ರಕ್ಷಣಾ ಸಾಧನಗಳ ಅತಿದೊಡ್ಡ ಪೂರೈಕೆದಾರ ರಾಷ್ಟ್ರವಾಗಿದೆ. ಭಾರತವು ಚೀನಾದಿಂದ ಗಡಿಯಲ್ಲಿ ಪ್ರಕ್ಷುಬ್ದತೆ ಎದುರಿಸುತ್ತಿರುವುದರಿಂದ ರಷ್ಯಾದ ಸರಬರಾಜು ಭಾರತಕ್ಕೆ ಅತ್ಯಗತ್ಯ ಎಂದು ರಕ್ಷಣಾ ವಿಶ್ಲೇಷಕರು ಹೇಳುತ್ತಾರೆ.

ಭಾರತಕ್ಕೆ ಇಂಧನ ಮತ್ತು ರಕ್ಷಣಾ ಸರಬರಾಜುಗಳನ್ನು ಮಾಡುವ ಮೂಲಕ ನೆರವು ನೀಡಲು ಅಮೆರಿಕ ಸಿದ್ಧವಿದೆ ಎಂದು ಸಿಂಗ್ ಹೇಳಿದರು.

‘ರಷ್ಯಾದಿಂದ ಭಾರತದ ಆಮದುಗಳ ತ್ವರಿತ ವೇಗವರ್ಧನೆಯನ್ನು ನೋಡಲು ಇಚ್ಛಿಸುವುದಿಲ್ಲ. ಏಕೆಂದರೆ ಆ ಆಮದು ಅಂತರರಾಷ್ಟ್ರೀಯ ನಿಷೇಧಕ್ಕೆ ಒಳಪಟ್ಟಿರುವ ದೇಶಕ್ಕೆ ಸಂಬಂಧಿಸಿದೆ ಎಂದು ಅವರು ಹೇಳಿದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಇಂದು ತುಮಕೂರಿಗೆ ಗೃಹಸಚಿವ ಅಮಿತ್ ಶಾ

0

ಕೇಂದ್ರ ಸಚಿವ ಅಮಿತ್ ಶಾ ತಡರಾತ್ರಿ ಬೆಂಗಳೂರಿಗೆ ಆಗಮಿಸಿದ್ದು, ಮೈಸೂರು ಪೇಟ ತೊಡಿಸಿ ಸಿಎಂ ಬಸವರಾಜ ಬೊಮ್ಮಯಿ ಸ್ವಾಗತ ಕೋರಿದ್ದಾರೆ.

ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸಚಿವ ಅರಗ ಜ್ಞಾನೇಂದ್ರ, ಗೋಪಾಲಯ್ಯ, ಆನಂದ್ ಸಿಂಗ್, ಶಾಸಕ ರವಿಸುಬ್ರಮಣ್ಯ ಈ ವೇಳೆ ಉಪಸ್ಥಿತರಿದ್ದರು.

ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಲಿರುವ ಅಮಿತ್ ಶಾ, ಏಪ್ರಿಲ್ 1ರಂದು ಹೆಚ್​​ಎಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ತುಮಕೂರಿಗೆ ತೆರಳಲಿದ್ದಾರೆ.

ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ, ಶ್ರೀ ಶಿವಕುಮಾರ ಸ್ವಾಮೀಜಿಗಳ 115 ನೇ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಸುಮಾರು ನಾಲ್ಕು ಗಂಟೆಗಳ ಕಾಲ ಸಿದ್ದಗಂಗಾ ಮಠದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ವಾಣಿಜ್ಯ ಬಳಕೆ ಸಿಲಿಂಡರ್ ದರ ₹ 250 ಏರಿಕೆ

0

19 ಕೆ.ಜಿ ತೂಕದ ವಾಣಿಜ್ಯ ಬಳಕೆಯ ಅಡುಗೆ ಅನಿಲ ದರದಲ್ಲಿ ರೂ.250 ಏರಿಕೆ ಮಾಡಲಾಗಿದೆ. ಪರಿಷ್ಕೃತ ದರ ಶುಕ್ರವಾರದಿಂದಲೇ ಜಾರಿಗೆ ಬರಲಿದೆ.

ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಯಾವುದೇ ರೀತಿಯ ಏರಿಕೆ ಕಂಡು ಬಂದಿಲ್ಲ.

ಆದರೆ, ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ಏರಿಕೆಯಾಗಿರುವ ಕಾರಣ ಇದೀಗ ಗ್ರಾಹಕರು 250 ಹೆಚ್ಚುವರಿ ಸೇರಿದಂತೆ 2,253 ರೂ. ಪಾವತಿ ಮಾಡಬೇಕಾಗಿದೆ.

ಕಳೆದ ಮಾರ್ಚ್ ತಿಂಗಳಲ್ಲಿ ದೆಹಲಿಯಲ್ಲಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರ 105 ರೂಪಾಯಿ ಹೆಚ್ಚಳ ಮಾಡಲಾಗಿತ್ತು. ಇದರ ಬೆನ್ನಲ್ಲೇ ಇದೀಗ ಮತ್ತೊಮ್ಮೆ ಏರಿಕೆಯಾಗಿದೆ.

ಅಂತರರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಗಣನೀಯವಾದ ಹೆಚ್ಚಳ ಕಂಡು ಬರುತ್ತಿರುವ ಕಾರಣ ಅನಿಲ ಬೆಲೆ ಏರಿಕೆಯಾಗಿದೆ. ಮುಂಬರುವ ದಿನಗಳಲ್ಲಿ ಅಡುಗೆ ಅನಿಲ ದರದಲ್ಲಿ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ.

ಈ ನಡುವೆ ಪೆಟ್ರೋಲ್ ಮತ್ತು ಡೀಸಲ್ ದರ ಕೂಡ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 107.30 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.27 ರೂಪಾಯಿ ದಾಖಲಾಗಿದೆ.

ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 115.42 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 101.58 ರೂಪಾಯಿ, ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್ಗೆ 113.27 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 100.16 ರೂಪಾಯಿ ನಿಗದಿಯಾಗಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ವಿದೇಶಿ ನೇರ ಬಂಡವಾಳ ಹೂಡಿಕೆ ಆಕರ್ಷಿಸುವಲ್ಲಿ ರಾಜ್ಯ ಮುಂಚೂಣಿಯಲ್ಲಿದೆ

0

ರಾಜ್ಯದಲ್ಲಿ ಲಿಥಿಯಂ-ಐಯಾನ್ ಸೆಲ್ ಉತ್ಪಾದನೆಗಾಗಿ ₹6,000 ಸಾವಿರ ಕೋಟಿ ಬಂಡವಾಳ ಹೂಡಿಕೆ ಮಾಡಲು ‌ಎಕ್ಸೈಡ್ ಇಂಡಸ್ಟ್ರೀಸ್ ಮುಂದೆ ಬಂದಿದೆ.

ಈ ವಿಚಾರವಾಗಿ ಬೆಂಗಳೂರಿನ ಕರ್ನಾಟಕ ಉದ್ಯೋಗ ಮಿತ್ರ ಕಚೇರಿಯಲ್ಲಿ ಎಕ್ಸೈಡ್ ಇಂಡಸ್ಟ್ರೀಸ್ ವ್ಯವಸ್ಥಾಪಕ ನಿದೇರ್ಶಕ ಮತ್ತು ಸಿಇಒ ಸುಬೀರ್ ಚಕ್ರವರ್ತಿ ಅವರು, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಡಾ.ಮುರುಗೇಶ್ ಆರ್ ನಿರಾಣಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಎಕ್ಸೈಡ್ ಇಂಡಸ್ಟ್ರೀಸ್ ಬಂಡವಾಳ ಹೂಡಿಕೆ ಮಾಡುತ್ತಿರುವ ಪರಿಣಾಮ ರಾಜ್ಯದಲ್ಲಿ ಒಟ್ಟು 1200 -1400 ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ನಿರೀಕ್ಷೆಯಿದೆ. ಇದು ಸುಧಾರಿತ ಕೋಶ ರಸಾಯನಶಾಸ್ತ್ರ ತಂತ್ರಜ್ಞಾನಕ್ಕಾಗಿ ಭಾರತದ ಅತಿದೊಡ್ಡ ಗಿಗಾ ಕಾರ್ಖಾನೆಗಳಲ್ಲಿ ಒಂದಾಗಿದೆ ಎಂದು ಸುಬೀರ್ ಚಕ್ರವರ್ತಿ ಹೇಳಿದರು.

ಎಕ್ಸೈಡ್ ಇಂಡಸ್ಟ್ರೀಸ್ ಬೆಂಗಳೂರಿನ ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ಹರಳೂರು ಕೈಗಾರಿಕಾ ಪ್ರದೇಶದಲ್ಲಿ 80 ಎಕರೆ ಭೂಮಿಯನ್ನು ಕೋರಿದೆ.ಈ ಕಂಪನಿಗೆ ಎಲ್ಲಾ ರೀತಿಯ ಸರಕಾರ ಸಹಕಾರ ನೀಡುವುದಾಗಿ ಹೇಳಿದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಡಾ.ನಿರಾಣಿ ಅವರು ಈ‌ ಯೋಜನೆಯು ಶೀಘ್ರ ಕಾರ್ಯಗತಗೊಳ್ಳಲಿ ಎಂದು ಹಾರೈಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರವು ಹೂಡಿಕೆಗಳನ್ನು ಆಕರ್ಷಿಸುವಲ್ಲಿ ಸಕ್ರಿಯವಾಗಿದ್ದು, ಕರ್ನಾಟಕದಲ್ಲಿ ಇರುವಂತಹ ಹೂಡಿಕೆದಾರ ಸ್ನೇಹಿ ವಾತಾವರಣ ದೇಶದ ಯಾವುದೇ ರಾಜ್ಯದಲ್ಲೂ ಇಲ್ಲ ಎಂದು ಮನವರಿಕೆ ಮಾಡಿಕೊಟ್ಟರು.

ಕಳೆದ ಮೂರು ತ್ರೈಮಾಸಿಕಗಳಲ್ಲಿ ವಿದೇಶಿ ನೇರ ಹೂಡಿಕೆ (ಎಫ್‌ಡಿಐ )ಆಕರ್ಷಿಸುವಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ ಎಂದು ಸಚಿವರು ಸುಬೀರ್ ಚಕ್ರವರ್ತಿ ಅವರಿಗೆ ತಿಳಿಸಿದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಮೇಕೆದಾಟು ಯೋಜನೆಗೆ ಅನುಮತಿ ಕೊಡಬೇಡಿ- ಸ್ಟಾಲಿನ್

0

ಮೇಕೆದಾಟು ಯೋಜನೆಗೆ ಅನುಮತಿ ನೀಡಬಾರದು ಎಂದು ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಪ್ರಧಾನಿ ನರೇಂದ್ರ ಮೋದಿಗೆ ಮನವಿ ಮಾಡಿದ್ದಾರೆ.

ನಿನ್ನೆ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದ ಎಂ.ಕೆ. ಸ್ಟಾಲಿನ್ ಅವರು, ಮೇಕೆದಾಟು ಯೋಜನೆಯಿಂದ ತಮಿಳುನಾಡು ರೈತರಿಗೆ ಸಮಸ್ಯೆಯಾಗಲಿದೆ.

ಇದು 2018ರ ಸುಪ್ರೀಂಕೋರ್ಟ್ ತೀರ್ಪಿನ ಉಲ್ಲಂಘನೆಯೂ ಆಗಲಿದೆ ಎಂದು ಹೇಳಿದ್ದಾರೆ.

ಕರ್ನಾಟಕದ ಮೇಕೆದಾಟು ಯೋಜನೆಗೆ ಅನುಮೋದನೆ ನೀಡಬಾರದು. ಮೇಕೆದಾಟು ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಕರ್ನಾಟಕದ ಯಾವುದೇ ಯೋಜನೆಗಳಿಗೆ ಅನುಮೋದನೆ ನೀಡದಂತೆ ಕೇಂದ್ರ ಜಲಶಕ್ತಿ ಇಲಾಖೆಗೆ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಕೊರೋನ ಜಾಗೃತಿ ಬಗ್ಗೆ WHO ನಿಂದ ಐದು ಪ್ರಮುಖ ಅಂಶಗಳ ಪ್ರಸ್ತಾವನೆ

0

ಪ್ರಪಂಚದಾದ್ಯಂತದ ಅನೇಕ ದೇಶಗಳಲ್ಲಿ ಕೊರೊನಾ ವೈರಸ್‌ನ ಹೊಸ ರೂಪಾಂತರಿ ವೇಗವಾಗಿ ಹರಡ್ತಾ ಇದೆ. ಇನ್ನು ಕೆಲವು ದೇಶಗಳಲ್ಲಿ ಸೋಂಕು ಗಣನೀಯ ಪ್ರಮಾಣದಲ್ಲಿ ಇಳಿಕೆ ಕಂಡಿದೆ. ಈ ಮಧ್ಯೆ ವಿಶ್ವ ಆರೋಗ್ಯ ಸಂಸ್ಥೆ ಜನರಿಗೆ ಎಚ್ಚರಿಕೆಯ ಸಂದೇಶ ರವಾನಿಸಿದೆ.

ವೇಗವಾಗಿ ಹರಡುವ ರೂಪಾಂತರಿ ವೈರಸ್‌ ಗಳು ಬಂದಾಗ ಜನರು ಹೆಚ್ಚು ಜಾಗರೂಕರಾಗಿರಬೇಕು ಎಂದು ಹೇಳಿದೆ.

ಡಬ್ಲ್ಯೂ ಎಚ್ ಓ ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಅವರು ಕೊರೋನಾ ತೀವ್ರತೆ ಕಾಲಾನಂತರದಲ್ಲಿ ಕಡಿಮೆಯಾಗುತ್ತದೆ ಎಂದಿದ್ದಾರೆ. ಆದರೆ ಈ ವರ್ಷ ಸಾಂಕ್ರಾಮಿಕ ರೋಗವು ಹೇಗೆಲ್ಲಾ ಬೆಳವಣಿಗೆಯಾಗಬಹುದು ಎಂಬುದಕ್ಕೆ ಮೂರು ಸಂಭಾವ್ಯ ಮಾರ್ಗಗಳನ್ನು ಮುಂದಿಟ್ಟಿದ್ದಾರೆ.

ರೋಗನಿರೋಧಕ ಶಕ್ತಿ ಕಡಿಮೆಯಾಗುವುದರಿಂದ ಕೊರೋನಾ ಪ್ರಕರಣಗಳಲ್ಲಿ ದಿಢೀರ್‌ ಹೆಚ್ಚಳವಾಗಬಹುದು. ಸಾವಿನ ಸಂಖ್ಯೆಯೂ ಹೆಚ್ಚಾಗುವ ಸಾಧ್ಯತೆ ಇದೆ. ಹಾಗಾಗಿ ದುರ್ಬಲ ವರ್ಗದವರಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಬೇಕು ಅನ್ನೋದು ಅವರ ಅಭಿಪ್ರಾಯ.

ಅತಿ ಕಡಿಮೆ ಸಮಯದಲ್ಲಿ ಕೊರೋನಾ ಸೋಂಕು ತೀವ್ರ ಸ್ವರೂಪ ಪಡೆಯುವ ಆತಂಕವೂ ಇದೆ. ಹೆಚ್ಚು ಮಾರಣಾಂತಿಕ ಮತ್ತು ವೇಗವಾಗಿ ಹರಡುವ ಕೊರೋನಾ ರೂಪಾಂತರಿಯು ಕೆಲವೊಮ್ಮೆ ಕಾಣಿಸಿಕೊಳ್ಳುತ್ತದೆ. ಬಹುತೇಕ ಎಲ್ಲರೂ ವ್ಯಾಕ್ಸಿನ್‌ ಪಡೆದಿದ್ದರೂ ಕಾಲಕ್ರಮೇಣ ಅದರ ಪ್ರಭಾವ ಕಡಿಮೆಯಾಗುತ್ತದೆ. ರೋಗ ನಿರೋಧಕ ಶಕ್ತಿಯೂ ಕುಗ್ಗುತ್ತದೆ. ಆದ್ದರಿಂದ ನಿರ್ಲಕ್ಷ ಬೇಡ ಅಂತಾ ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥರು ಕಿವಿಮಾತು ಹೇಳಿದ್ದಾರೆ.

ಕೊರೋನಾವನ್ನು ಸಂಪೂರ್ಣ ತೊಡೆದು ಹಾಕುವುದು. ಹೇಗೆ ಎಂಬ ಪ್ರಶ್ನೆಗೂ ಅವರು ಉತ್ತರಿಸುವ ಪ್ರಯತ್ನ ಮಾಡಿದ್ದಾರೆ. ಇದಕ್ಕಾಗಿ ಪ್ರಪಂಚದಾದ್ಯಂತದ ಎಲ್ಲಾ ದೇಶಗಳು 5 ಪ್ರಮುಖ ಅಂಶಗಳ ಮೇಲೆ ಕೇಂದ್ರೀಕರಿಸಬೇಕಾಗಿದೆ ಅಂತಾ ಹೇಳಿದ್ದಾರೆ.

ಕಣ್ಗಾವಲು, ಪ್ರಯೋಗಾಲಯಗಳು ಮತ್ತು ಸಾರ್ವಜನಿಕ ಆರೋಗ್ಯ ವ್ಯವಸ್ಥೆ

ವ್ಯಾಕ್ಸಿನೇಷನ್, ಸಾರ್ವಜನಿಕ ಆರೋಗ್ಯ ಮತ್ತು ಸಾಮಾಜಿಕ ಕ್ರಮಗಳು

ಕೊರೋನಾಕ್ಕಾಗಿ ವೈದ್ಯಕೀಯ ಆರೈಕೆ ಮತ್ತು ಸೂಕ್ತವಾದ ಆರೋಗ್ಯ ವ್ಯವಸ್ಥೆ

ಸಂಶೋಧನೆ ಮತ್ತು ಅಭಿವೃದ್ಧಿಗೆ ಒತ್ತು ನೀಡುವುದು, ಅದಕ್ಕೆ ಬೇಕಾದ ಸಾಧನಗಳ ಪೂರೈಕೆ

ದೀರ್ಘಾವಧಿಯ ಉಸಿರಾಟದ ಕಾಯಿಲೆಯ ನಿರ್ವಹಣೆಗೆ ತುರ್ತು ಕ್ರಮ

ಓಮಿಕ್ರಾನ್ ಮತ್ತು ಡೆಲ್ಟಾದ ಮರುಸಂಯೋಜಕ ವೈರಸ್ ಡೆಲ್ಟಾಕ್ರಾನ್ ವೇಗವಾಗಿ ಹರಡುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ಇದರ ಹೊರತಾಗಿ, ಓಮಿಕ್ರಾನ್‌ನ ಸಬ್‌ವೇರಿಯಂಟ್ BA.2 ಪ್ರಕರಣಗಳಲ್ಲಿ ಭಾರೀ ಹೆಚ್ಚಳವಾಗುವ ಸಾಧ್ಯತೆಯೂ ಇದೆ. ಹಾಗಾಗಿ ಕೊರೊನಾ ಸೋಂಕು ಹೆಚ್ಚಾಗುವ ಸಂಭವವೂ ಇದೆ.