Monday, February 23, 2026
Monday, February 23, 2026
Home Blog Page 1650

ಏಪ್ರಿಲ್ 1 ರಿಂದ 12-14 ವರ್ಷ ವಯಸ್ಸಿನ ಮಕ್ಕಳಿಗೆ ಶಾಲೆಯಲ್ಲೇ ಲಸಿಕೆ

0

ಏಪ್ರಿಲ್ 1 ರಿಂದ ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ ರಾಜ್ಯದ 12 ರಿಂದ 14 ವರ್ಷದ ಮಕ್ಕಳಿಗೆ ಶಾಲೆಗಳಲ್ಲಿಯೇ ಕೊರೊನಾ ಲಸಿಕೆ ಕೋರ್ಬಿವ್ಯಾಕ್ಸ್ ನೀಡಲು ಆರೋಗ್ಯ ಇಲಾಖೆ ಮುಂದಾಗಿದೆ.

12 ರಿಂದ 14 ವರ್ಷದ ಮಕ್ಕಳಿಗೆ ಮಾರ್ಚ್ 16 ರಿಂದ ಕೊರೊನಾ ಲಸಿಕೆ ಅಭಿಯಾನ ಆರಂಭವಾಗಿದ್ದು, ಸದ್ಯ ಆರೋಗ್ಯ ಕೇಂದ್ರಗಳಲ್ಲಿ ಮಾತ್ರ ಲಸಿಕೆ ನೀಡಲಾಗುತ್ತಿದೆ.

ರಾಜ್ಯದಲ್ಲಿ 12 ರಿಂದ 14 ವರ್ಷ ವಯಸ್ಸಿನ 20.5 ಲಕ್ಷ ಮಕ್ಕಳಿದ್ದಾರೆ. ಅದರಲ್ಲಿ ಈವರೆಗೆ 5.3 ಲಕ್ಷ ಮಕ್ಕಳಿಗೆ ಲಸಿಕೆ ನೀಡಲಾಗಿದೆ.

ಉಳಿದ ಮಕ್ಕಳಿಗೆ ಲಸಿಕೆ ನೀಡಲು ಲಸಿಕಾ ಅಭಿಯಾನ ಹಮ್ಮಿಕೊಳ್ಳಲು ಕೇಂದ್ರ ಆರೋಗ್ಯ ಇಲಾಖೆ ನಿರ್ಧಾರ ಕೈಗೊಂಡಿದೆ.

2010 ರ ಮಾರ್ಚ್ 28 ಅಥವಾ ಅದಕ್ಕೂ ಮುನ್ನ ಜನಿಸಿರುವ 12 ರಿಂದ 14 ವರ್ಷದ ಮಕ್ಕಳು ಕೋರ್ಬಿವ್ಯಾಕ್ಸ್ ಲಸಿಕೆಗೆ ಅರ್ಹರಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಅಸ್ಪೃಶ್ಯತೆ ಆಚರಣೆ ತಪ್ಪಿಸಲು ವಿನಯ ಸಾಮರಸ್ಯ ಯೋಜನೆ

0

ರಾಜ್ಯದಲ್ಲಿ ಅಸ್ಪೃಶ್ಯತೆಯನ್ನು ನಿರ್ಮೂಲನೆ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರವು ವಿನಯ ಸಾಮರಸ್ಯ ಎಂಬ ವಿನೂತನ ಯೋಜನೆ ಜಾರಿಗೆ ಮುಂದಾಗಿದೆ.

ಈ ಕುರಿತು ಸದನದಲ್ಲಿ ಮಾಹಿತಿ ನೀಡಿರುವ ಕೋಟಾ ಶ್ರೀನಿವಾಸ ಪೂಜಾರಿ, ಕೊಪ್ಪಳ ಜಿಲ್ಲೆಯ ಮಿಯಾಪುರ ಗ್ರಾಮದಲ್ಲಿ ಎರಡು ವರ್ಷದ ವಿನಯ್ ಆಕಸ್ಮಿಕವಾಗಿ ದೇವಾಲಯ ಪ್ರವೇಶಿಸಿದ್ದಕ್ಕೆ ಗ್ರಾಮಸ್ಥರು ಮಗುವಿಗೆ ಪೋಷಕರಿಗೆ ದಂಡ ವಿಧಿಸಿದ್ದಾರೆ.ಅಸ್ಪೃಶ್ಯತೆ ನಿವಾರಣೆಗೆ ಹಲವು ಕ್ರಮ ಕೈಗೊಂಡರೂ ಅಸ್ಪೃಶ್ಯತೆ ಇನ್ನೂ ತಾಂಡವಾಡುತ್ತಿದೆ ಎಂದರು.

ಅಸ್ಪೃಶ್ಯತೆಯನ್ನು ಹೋಗಲಾಡಿಸಿ ಸಾಮರಸ್ಯ ಕಾಪಾಡಲು ವಿನಯ ಸಾಮರಸ್ಯ ಎಂಬ ಯೋಜನೆಯನ್ನು ಪ್ರಾರಂಭಿಸಲಾಗುವುದು.

ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಜೊತೆಗೆ ಚರ್ಚಿಸಲಾಗುವುದು. ರಾಜ್ಯದಲ್ಲಿನ 6020 ಗ್ರಾಮ ಪಂಚಾಯಿತಿಗಳಲ್ಲೂ ಅಸ್ಪೃಶ್ಯತೆ ವಿರುದ್ಧ ಸಾಮಾಜಿಕ ಸಾಮರಸ್ಯ ಕಾಪಾಡಲು ಸದಸ್ಯರಲ್ಲಿ ಜಾಗೃತಿ ಮೂಡಿಸಲಾಗುವುದು ಎಂದು ತಿಳಿಸಿದ್ದಾರೆ.

ರಷ್ಯಾ ಸೇನೆ ವಾಪಸ್ ವಿಶ್ವಾಸಾರ್ಹ ಸುದ್ದಿಯಲ್ಲ-ಬೈಡನ್

0

ಬರೋಬ್ಬರಿ 34 ದಿನಗಳ ನಂತರ ಉಕ್ರೇನ್​​​​ ಮತ್ತು ರಷ್ಯಾ ನಡುವೆ ಶಾಂತಿ ಮಾತುಕತೆ ಫಲ ಕೊಡುತ್ತಿದೆ.
ಮೊದಲ ಹಂತದಲ್ಲಿ ಕಿವ್​ ಮತ್ತು ಚೆರ್ನಿವ್​​ ನಿಂದ ರಷ್ಯಾ ಸೇನೆ ಹಿಂತಿರುಗಲಿದೆ.

ಸದ್ಯದಲ್ಲೇ ರಷ್ಯಾ ಅಧ್ಯಕ್ಷ ವ್ಲಾಡಿಮಿರ್​​ ಪುಟಿನ್​​ ಮತ್ತು ಉಕ್ರೇನ್​ ಅಧ್ಯಕ್ಷ ಝೆಲೆನ್​ಸ್ಕಿ ಮುಖಾಮುಖಿಯಾಗುವ ಸಾಧ್ಯತೆ ಇದೆ. ಆದರೆ ಸೇನೆ ವಾಪಸ್​ ಬಗ್ಗೆ ಪುಟಿನ್​ ಆಡುತ್ತಿರುವ ಮಾತುಗಳನ್ನು ನಂಬಲಾಗದು ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್​​​ ಕಿಡಿಕಾರಿದ್ದಾರೆ.

ರಾಹುಲ್ ಗಾಂಧಿ ಸಿದ್ಧಗಂಗಾ ಮಠಕ್ಕೆ ಭೇಟಿ

0

ಸಿದ್ಧಗಂಗಾ ಮಠಕ್ಕೆ ಮಾರ್ಚ್ 31ರಂದು ಕಾಂಗ್ರೆಸ್ ಮುಖಂಡರ ರಾಹುಲ್ ಗಾಂಧಿ ಭೇಟಿ ನೀಡಲಿದ್ದಾರೆ.

ಸ್ವಾಗತಕ್ಕೆ ಜಿಲ್ಲೆಯ ಕಾಂಗ್ರೆಸ್ ನಾಯಕರು ಸಜ್ಜಾಗಿದ್ದಾರೆ.

ಸಿದ್ಧಗಂಗಾ ಮಠದ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಜಯಂತಿ ಕಾರ್ಯಕ್ರಮ ಏ.
1ರಂದು ನಡೆಯಲಿದ್ದು, ಅದಕ್ಕೂ ಮೊದಲೇ ಮಾರ್ಚ್ 31ರಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮಠಕ್ಕೆ ಭೇಟಿ ನೀಡಲಿದ್ದಾರೆ.

ಮಠದಲ್ಲಿ ಸ್ವಾಮೀಜಿ ಆಶೀರ್ವಾದ ಪಡೆಯುವುದನ್ನು ಹೊರತುಪಡಿಸಿದರೆ ಬೇರೆ ಯಾವುದೇ ಸಭೆ, ಸಮಾರಂಭ ಇರುವುದಿಲ್ಲ. ಕಾರ್ಯಕರ್ತರ ಸಭೆಯೂ ಇರುವುದಿಲ್ಲ. ಮಠದ ಭೇಟಿ ನಂತರ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ ಎಂದು ಶಾಸಕ ಡಾ.ಜಿ.ಪರಮೇಶ್ವರ ತಿಳಿಸಿದ್ದಾರೆ.

ಬೆಂಗಳೂರಿನಿಂದ ರಸ್ತೆ ಮೂಲಕ ಮಠಕ್ಕೆ ಬರಲಿದ್ದಾರೆ. ಅಲ್ಲಲ್ಲಿ ಕಾರ್ಯಕರ್ತರು ಸ್ವಾಗತಿಸಲಿದ್ದಾರೆ. ಕಾಂಗ್ರೆಸ್ ಜಿಲ್ಲಾ ಘಟಕದ ವತಿಯಿಂದ ಸ್ವಾಗತಿಸಿ, ಮಠಕ್ಕೆ ಕರೆದುಕೊಂಡು ಹೋಗಲಾಗುತ್ತದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಹಿಂದೆ ಸ್ವಾಮೀಜಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈಗ ರಾಹುಲ್ ಗಾಂಧಿ ಬರುತ್ತಿದ್ದಾರೆ. ಸ್ವಾಮೀಜಿ ಮೇಲಿನ ಗೌರವದಿಂದ ಆಗಮಿಸುತ್ತಿದ್ದಾರೆ. ಇದರಲ್ಲಿ ಯಾವುದೇ ರಾಜಕೀಯ ಉದ್ದೇಶಗಳಿಲ್ಲ. ಭೇಟಿಗೆ ಯಾವುದೇ ಅಪಾರ್ಥ ಕಲ್ಪಿಸುವ ಅಗತ್ಯವಿಲ್ಲ. ಮಠದ ಭಕ್ತರಾಗಿ ಬರುತ್ತಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದರು.

ಅಮೃತ ಮಹೋತ್ಸವ ನಿಮಿತ್ತ ವಿಶೇಷ ಕಾರ್ಯಕ್ರಮ ಮೋದೀಜಿ ಸಂಸದರಿಗೆ ಸೂಚನೆ

0

ಸ್ವಾತಂತ್ರ್ಯದ 75ನೇ ವರ್ಷದ ಸ್ಮರಣಾರ್ಥ ಅಮೃತ ಮಹೋತ್ಸವ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಆಯಾ ಸಂಸದೀಯ ಕ್ಷೇತ್ರಗಳಲ್ಲಿ 75 ಕೊಳಗಳನ್ನು ನಿರ್ಮಿಸುವಂತೆ ಎಲ್ಲ ಪಕ್ಷದ ಸಂಸದರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸೂಚಿಸಿದ್ದಾರೆ.

ಇಂದು ನವದೆಹಲಿಯ ಅಂಬೇಡ್ಕರ್ ಅಂತರಾಷ್ಟ್ರೀಯ ಕೇಂದ್ರದಲ್ಲಿ ಬಿಜೆಪಿ ಸಂಸದೀಯ ಪಕ್ಷದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪಕ್ಷದ ಸಂಸ್ಥಾಪನಾ ದಿನವಾದ ಏಪ್ರಿಲ್ 6 ರಿಂದ ಏಪ್ರಿಲ್ 14 ರವರೆಗೆ ಅಂಬೇಡ್ಕರ್ ಜಯಂತಿ ಹೀಗೆ ಎಲ್ಲಾ ಜಯಂತಿಗಳನ್ನು ಆಚರಿಸುವಂತೆ ಮಾನ್ಯ ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದ್ದಾರೆ.

ಬಡವರ ಕಲ್ಯಾಣಕ್ಕಾಗಿ ಸರ್ಕಾರದ ಕೆಲಸ
ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನು ಯೋಜನೆಯ ಅವಧಿಯನ್ನು 6 ತಿಂಗಳವರೆಗೆ ವಿಸ್ತರಿಸಿರುವ ಕುರಿತು ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಸರ್ಕಾರವು ತಳಮಟ್ಟದ ಬಡವರ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತಿದೆ. ಅದರ ಮಾಹಿತಿ ಎಲ್ಲರಿಗೂ ತಲುಪಬೇಕು. ಇನ್ನು ಸರ್ಕಾರ, ಎಲ್ಲಾ ಮಾಜಿ ಪ್ರಧಾನಿಗಳ ಕೊಡುಗೆಯನ್ನ ಬಿಜೆಪಿ ಗೌರವಿಸುತ್ತದೆ. ಆದ್ದರಿಂದ ಸರ್ಕಾರವು ಎಲ್ಲಾ ಮಾಜಿ ಪ್ರಧಾನಿಗಳ ಕೊಡುಗೆಗಾಗಿ ಮ್ಯೂಸಿಯಂ ಸಹ ನಿರ್ಮಿಸಲಾಗುತ್ತಿದೆ ಎಂದರು.

ಪ್ರಧಾನಿ ಮೋದಿ ಅವರಿಗೆ ಸಂಸದರಿಂದ ಕೃತಜ್ಞತೆ
ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯ ಅವಧಿಯನ್ನು 6 ತಿಂಗಳು ವಿಸ್ತರಿಸುವ ನಿರ್ಧಾರಕ್ಕೆ ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ಎಲ್ಲಾ ಸಂಸದರು ಪ್ರಧಾನಿ ಮೋದಿಯವರಿಗೆ ಧನ್ಯವಾದ ಅರ್ಪಿಸಿದರು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಹೇಳಿದ್ದಾರೆ.

ಏಪ್ರಿಲ್ 6 ರಿಂದ 14 ರವರೆಗೆ ಈ ಕಾರ್ಯಕ್ರಮ
ಪ್ರಧಾನಿ ಮೋದಿ ಅವರ ಭಾಷಣವನ್ನ ವಿವರಿಸಿದ ಮೇಘವಾಲ್, ಪಕ್ಷದ ಸಂಸ್ಥಾಪನಾ ದಿನವಾದ ಅಂಬೇಡ್ಕರ್ ಜಯಂತಿಯ ಏಪ್ರಿಲ್ 6 ರಿಂದ ಏಪ್ರಿಲ್ 14 ರವರೆಗೆ ಸಾಮಾಜಿಕ ನ್ಯಾಯಕ್ಕೆ ಸಂಬಂಧಿಸಿದ ವಿವಿಧ ಕಾರ್ಯಕ್ರಮಗಳನ್ನ ಆಯೋಜಿಸುವಂತೆ ಪ್ರಧಾನಿ ಮತ್ತು ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಇಬ್ಬರೂ ಸಂಸದರಿಗೆ ಸೂಚನೆ ನೀಡಿದ್ದಾರೆ.

ಏಪ್ರಿಲ್ 6 ರಂದು ಬಿಜೆಪಿ ಸಂಸ್ಥಾಪನಾ ದಿನ, ಏಪ್ರಿಲ್ 11 ರಂದು ಜ್ಯೋತಿಬಾ ಫುಲೆ ಅವರ ಜನ್ಮದಿನ ಮತ್ತು ಏಪ್ರಿಲ್ 14 ರಂದು ಅಂಬೇಡ್ಕರ್ ಜಯಂತಿ.

ಇದೇ ಸಂದರ್ಭದಲ್ಲಿ ರಾಮನವಮಿ ಮತ್ತು ಹೊಸ ವರ್ಷವೂ ಇದೆ. ಈ ಸಂದರ್ಭದಲ್ಲಿ ಎಲ್ಲ ಸಂಸದರು ಸಾಮಾಜಿಕ ನ್ಯಾಯದ ಕುರಿತು ವಿವಿಧ ಹಂತಗಳಲ್ಲಿ ಸಭೆ ನಡೆಸಿ, ಸರ್ಕಾರದ ಕೆಲಸ, ಸಾಧನೆಗಳನ್ನ ಸಾಮಾನ್ಯ ಜನರ ಬಳಿಗೆ ಕೊಂಡೊಯ್ಯಲು ಹಾಗೂ ತಮ್ಮ ತಮ್ಮ ಕ್ಷೇತ್ರಗಳಲ್ಲಿ ಪತ್ರಿಕಾಗೋಷ್ಠಿ ನಡೆಸುವಂತೆ ತಿಳಿಸಲಾಗಿದೆ.

ಅಸಮರ್ಪಕ ಮೌಲ್ಯಮಾಪನ ದೋಷ ಸರಿಪಡಿಸಲು ಯತ್ನ- ಸಚಿವ ನಾಗೇಶ್

0

ಪಿಯುಸಿ ದ್ವಿತೀಯ ವರ್ಷದ ಉತ್ತರ ಪತ್ರಿಕೆಗಳ ಅಸಮರ್ಪಕ ಮೌಲ್ಯಮಾಪನದಿಂದ ಕಳೆದ 3 ವರ್ಷಗಳಲ್ಲಿ 2,777 ವಿದ್ಯಾರ್ಥಿಗಳಿಗೆ ತೊಂದರೆ ಆಗಿದೆ. ಮೌಲ್ಯಮಾಪನ ದೋಷಗಳನ್ನು ಸರಿಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ತಿಳಿಸಿದ್ದಾರೆ.

ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಎನ್‌. ರವಿಕುಮಾರ್‌ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅಸಮರ್ಪಕ ಮೌಲ್ಯಮಾಪನದಿಂದ ವಿದ್ಯಾರ್ಥಿಗಳಿಗೆ ತೊಂದರೆ ಆಗಿದ್ದು ನಿಜ. ಇಲಾಖೆ ದಂಡ ವಸೂಲಿ ಮಾಡಿಲ್ಲ.ಇದು ಯಾಕೆ ಎಂಬುದು ಗೊತ್ತಿಲ್ಲ. ಈಗಿನದ್ದು ಪೈಪೋಟಿಯ ಕಾಲ.

ಪಾಯಿಂಟ್‌ಗಳಲ್ಲಿ ಅಂಕಗಳನ್ನು ಅಳೆಯಲಾಗುತ್ತದೆ. ಹೀಗಿರುವಾಗ 6ಕ್ಕಿಂತ ಕಡಿಮೆ ಅಥವಾ 6ಕ್ಕಿಂತ ಹೆಚ್ಚು ಅಂಕಗಳ ವ್ಯತ್ಯಾಸದ ಬಗ್ಗೆಯೂ ಪರಿಶೀಲಿಸಬೇಕಾಗಿದೆ ಎಂದರು.

2019-20ನೇ ಸಾಲಿನಲ್ಲಿ ಪಿಯುಸಿ ಪರೀಕ್ಷೆಯ ಉತ್ತರಪತ್ರಿಕೆಗಳ ಅಸಮರ್ಪಕ ಮೌಲ್ಯಮಾಪನ ಮಾಡಿದ ನಾಲ್ವರು ಮೌಲ್ಯಮಾಪಕರಿಂದ ಕೇವಲ 400 ರು.ದಂಡ ವಸೂಲಿ ಮಾಡಲಾಗಿದೆ. 2020-21ನೇ ಸಾಲಿನಲ್ಲಿ ಕೋವಿಡ್‌-19 ಕಾರಣಕ್ಕೆ ವಾರ್ಷಿಕ ಪರೀಕ್ಷೆ ನಡೆದಿಲ್ಲ.

ಆದರೆ, ಸರ್ಕಾರಿ ಆದೇಶದ ಅನ್ವಯ ಫಲಿತಾಂಶ ಒಪ್ಪದಿರುವ ಅಭ್ಯರ್ಥಿಗಳಿಗೆ ಮಾತ್ರ ಪರೀಕ್ಷೆ ನಡೆಸಲಾಗಿದೆ. ಈ ಸಾಲಿನಲ್ಲಿಯೂ ಅಸಮರ್ಪಕ ಮೌಲ್ಯಮಾಪನ ಮಾಡಿದ ಮೌಲ್ಯಮಾಪಕರಿಂದ ಯಾವುದೇ ದಂಡ ವಸೂಲಿ ಮಾಡಿಲ್ಲ ಎಂದು ವಿವರಿಸಿದ್ದಾರೆ.

ಕಳೆದ ಮೂರು ವರ್ಷಗಳಲ್ಲಿ ಪಿಯುಸಿ ಪರೀಕ್ಷೆಯ ಅಸಮರ್ಪಕ ಮೌಲ್ಯಮಾಪನದಿಂದ ಒಟ್ಟು 2,777 ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ಈ ವಿದ್ಯಾರ್ಥಿಗಳಿಗೆ ಉತ್ತರ ಪತ್ರಿಕೆಗಳ ಸ್ಕ್ಯಾನ್‌ ಮಾಡಿರುವ ಪ್ರತಿ ನೀಡಿ ಮರು ಎಣಿಕೆ ಮತ್ತು ಮರುಮೌಲ್ಯಮಾಪನದ ಮೂಲಕ ಶೇ 6 ಅಥವಾ 6ಕ್ಕಿಂತ ಹೆಚ್ಚು ಅಂಕಗಳು ವ್ಯತ್ಯಾಸವಾಗಿದ್ದರೆ ಪಾವತಿಸಿದ ಹಣವನ್ನು ವಾಪಸ್‌ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಅಸಮರ್ಪಕ ಮೌಲ್ಯಮಾಪನ ನಡೆಸುವವರ ವಿರುದ್ಧ ಯಾವ ರೀತಿ ಕ್ರಮಕೈಗೊಳ್ಳಬೇಕು ಎನ್ನುವ ಬಗ್ಗೆ ಪರಿಷತ್‌ ಸದಸ್ಯರ ಜತೆ ಚರ್ಚಿಸಲಾಗುವುದು. 2019ರಲ್ಲಿ 1008 ವಿದ್ಯಾರ್ಥಿಗಳ ಉತ್ತರಪತ್ರಿಕೆಗಳಲ್ಲಿ ಶೇ6ಕ್ಕಿಂತ ಹೆಚ್ಚು ಅಂಕಗಳು ವ್ಯತ್ಯಾಸವಾಗಿವೆ’ ಎಂದು ತಿಳಿಸಿದ್ದಾರೆ.

ಶರಾವತಿ ಸಂತ್ರಸ್ತರಿಗೆ ಭೂಮಿ ಮಂಜೂರಾತಿ ನೀಡಲು ಮನವಿ

0

ಮಲೆನಾಡು ರೈತ ಹೋರಾಟ ಸಮಿತಿ ಶಿವಮೊಗ್ಗ ಜಿಲ್ಲೆ ವತಿಯಿಂದ ಸೊರಬ ತಾಲ್ಲೂಕು ಕಛೇರಿ ತಹಶೀಲ್ದಾರ್ ಅವರಿಗೆ ಶರಾವತಿ ಮುಳುಗಡೆ ಸಂತ್ರಸ್ತರಿಗೆ ಭೂಮಿ ಮಂಜೂರಾತಿ ಮಾಡಲು ಮನವಿ ಪತ್ರ ಸಲ್ಲಿಸಲಾಯಿತು.

ಶರಾವತಿ ವಿದ್ಯುತ್ ಯೋಜನೆಗೆ ಭೂಮಿ ಬಿಟ್ಟುಕೊಟ್ಟು 60 ವರ್ಷಗಳು ಕಳೆದಿವೆ. ಸೊರಬ ತಾಲೂಕಿನ ಕಾನಳ್ಳಿ ಹೊಳೆಕೊಪ್ಪ ಮೈಸಾವಿ ಗ್ರಾಮಗಳಲ್ಲಿ ಸುಮಾರು 100ಕ್ಕೂ ಹೆಚ್ಚು ಕುಟುಂಬಗಳು ಶರಾವತಿ ಮುಳುಗಡೆ ಸಂತ್ರಸ್ತ ಕುಟುಂಬಗಳಿವೆ.
2021 ಮಾರ್ಚ್ ನಲ್ಲಿ ರಾಜ್ಯ ಹೈಕೋರ್ಟ್ ರಾಜ್ಯ ಸರ್ಕಾರ 9600 ಎಕರೆ ಅರಣ್ಯ ಭೂಮಿಯನ್ನು ಅರಣ್ಯ ಇಲಾಖೆಯಿಂದ ಕಂದಾಯ ಇಲಾಖೆಗೆ ಕೇಂದ್ರ ಸರ್ಕಾರದ ಅನುಮತಿ ಪಡೆಯದೆ ವರ್ಗಾಯಿಸುವುದನ್ನು ವಚ ಮಾಡಿರುವುದಾಗಿ ತೀರ್ಪು ನೀಡಿದೆ. ರಾಜ್ಯ ಸರ್ಕಾರ ಒಂದು ವರ್ಷ ಸಮಯವಾದರು ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿಲ್ಲ. ಎನ್ನುವ ವಿಚಾರವನ್ನು ಮನವಿ ಪತ್ರದಲ್ಲಿ ತಿಳಿಸಲಾಗಿದೆ.
ಹದಿನೈದು ದಿನಗಳ ಒಳಗೆ ಮಲೆನಾಡು ರೈತ ಹೋರಾಟ ಸಮಿತಿಯ ಕೆಲವು ಬೇಡಿಕೆಗಳನ್ನು ಈಡೇರಿಸದಿದ್ದರೆ ಶಿಕಾರಿಪುರದಲ್ಲಿ ಸಂಸತ್ ಸದಸ್ಯರ ಮನೆಯೆದುರು ಶಿವಮೊಗ್ಗದಲ್ಲಿ ಉಸ್ತುವಾರಿ ಸಚಿವರ ಕಚೇರಿ ಎದುರು ಮುಖ್ಯಮಂತ್ರಿ ಬೊಮ್ಮಾಯಿ ಅವರ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಇದರೊಂದಿಗೆ ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ, ಅರಣ್ಯ ಭೂಮಿ ಸಾಗುವಳಿ ಕುರಿತ ಹೋಗಿದ್ದ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಲಾಯಿತು.
ಮಲೆನಾಡು ರೈತ ಹೋರಾಟ ಸಮಿತಿ ಸಾಗರದ ಸಂಚಾಲಕರಾದ ತೀ.ನಾ. ಶ್ರೀನಿವಾಸನವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಜನಸಂಖ್ಯೆಯ ಆಧಾರದ ಮೇಲೆ ರಾಜ್ಯಗಳಲ್ಲಿ ಅಲ್ಪಸಂಖ್ಯಾತರ ನಿರ್ಣಯ

0

ಹಿಂದೂಗಳಿಗೆ ಅವರ ಜನಸಂಖ್ಯೆಯ ಆಧಾರದ ಮೇಲೆ ರಾಜ್ಯಗಳು ಅಲ್ಪಸಂಖ್ಯಾತ ಸಮುದಾಯದ ಸ್ಥಾನಮಾನವನ್ನು ನೀಡಬಹುದು ಎಂದು ಕೇಂದ್ರ ಸರ್ಕಾರ ಸ್ಪಷ್ಟವಾಗಿ ಹೇಳಿದೆ.

ಅಲ್ಪಸಂಖ್ಯಾತರನ್ನು ಜನಸಂಖ್ಯೆ, ಧಾರ್ಮಿಕ ಮತ್ತು ಭಾಷಿಕ ಆಧಾರದ ಮೇಲೆ ಗುರುತಿಸಿ ಅವರಿಗೆ ಸಂಬಂಧಿಸಿದಂತೆ ಮಾರ್ಗಸೂಚಿಗಳನ್ನು ನಿಗದಿಪಡಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿಗೆ ಅಫಿಡವಿಟ್ ಸಲ್ಲಿಸುವ ಮೂಲಕ ಕೇಂದ್ರವು ಈ ವಿಷಯ ತಿಳಿಸಿದೆ.

ಈ ಪ್ರಕರಣದ ವಿಚಾರಣೆ ಈಗ ಮೇ 10 ರಂದು ನಡೆಯಲಿದೆ.

ಅಲ್ಪಸಂಖ್ಯಾತರ ರಾಷ್ಟ್ರೀಯ ಆಯೋಗ ಕಾಯ್ದೆ 1992ರ ಅಡಿಯಲ್ಲಿ ಅಲ್ಪಸಂಖ್ಯಾತರಿಗೆ ಅಧಿಸೂಚನೆ ನೀಡುವ ಕೇಂದ್ರ ಸರ್ಕಾರದ ಅಧಿಕಾರದ ವಿರುದ್ಧದ ಮನವಿಗೆ ಸ್ಪಷ್ಟ ಉತ್ತರ ನೀಡಲು ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರಕ್ಕೆ ಹೆಚ್ಚಿನ ಸಮಯವನ್ನು ನೀಡಿದೆ. ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ನ್ಯಾಯಾಲಯದಿಂದ ಸಮಯ ಕೋರಿದಾಗ, ಕೇಂದ್ರ ಸರ್ಕಾರ ಸಲ್ಲಿಸಿದ ಅಫಿಡವಿಟ್ ಅನ್ನು ಇನ್ನೂ ಓದಿಲ್ಲ ಎಂದು ಹೇಳಿದ್ದಾರೆ.

ಅಫಿಡವಿಟ್ ಓದಿ ವಾದ ಮಂಡಿಸಲು ನ್ಯಾಯಾಲಯ ಸ್ವಲ್ಪ ಕಾಲಾವಕಾಶ ನೀಡಬೇಕು ಎಂದರು.

ಅತ್ಯಂತ ದೊಡ್ಡ ಹೆದ್ದಾರಿ ಸಂಪರ್ಕಹೊಂದಿರುವ ದೇಶಗಳಲ್ಲಿ ಭಾರತಕ್ಕೆ ದ್ವಿತೀಯ ಸ್ಥಾನ

0

ಭಾರತ ಈಗ, ಅತಿ ದೊಡ್ಡ ಹೆದ್ದಾರಿ ಸಂಪರ್ಕ ಹೊಂದಿರುವ ವಿಶ್ವದ 2ನೇ ರಾಷ್ಟ್ರವಾಗಿ ಭಾರತ ಉದಯಿಸಿರುವುದಾಗಿ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹೇಳಿದೆ.

ಈ ಕುರಿತಂತೆ ಟ್ವೀಟ್‌ ಮಾಡಿರುವ ಸಂಸ್ಥೆ, ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ 64 ಲಕ್ಷ ಕಿ.ಮೀ.
ವ್ಯಾಪ್ತಿಯ ಹೆದ್ದಾರಿಯನ್ನು ನಿರ್ಮಿಸಲಾಗಿದೆ ಎಂದು ತಿಳಿಸಿದೆ.

ಇದೇ ಸಂದರ್ಭದಲ್ಲಿ ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಟ್ವೀಟ್‌ ಮಾಡಿದ್ದಾರೆ. ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ, ನವೀಕರಣ ಮತ್ತು ನೂತನ ಹೆದ್ದಾರಿಗಳ ನಿರ್ಮಾಣದ ಪ್ರಮಾಣ ಮೂರು ಪಟ್ಟು ಹೆಚ್ಚಾಗಿದೆ.ಈ ಮೂಲಕ ಕೇಂದ್ರ ಸರ್ಕಾರ ಹೊಸ ದಾಖಲೆಯನ್ನು ನಿರ್ಮಿಸಿದೆ ಎಂದು ಹೇಳಿದ್ದಾರೆ.

ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯಿಂದ ಮನವಿ ಪತ್ರ ಅರ್ಪಣೆ

0

ಶಿವಮೊಗ್ಗ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ವತಿಯಿಂದ ಕೇಂದ್ರ ಕಾರ್ಮಿಕ ಸಂಘಟನೆಗಳಿಗೆ ಭಾರತ ಉಳಿಸಿ ಜನತೆಯಿಂದ ರಕ್ಷಿಸಿ ಕಾರ್ಯಕ್ರಮದಡಿಯಲ್ಲಿ ಸಂವಿಧಾನದ ಪ್ರಜಾಪ್ರಭುತ್ವೀಯ ಮೌಲ್ಯಗಳ ಉಳಿವಿಗಾಗಿ, ಜನತೆಯ ಹಕ್ಕುಗಳ ಸಂರಕ್ಷಣೆಗಾಗಿ, ರೈತ ವಿರೋಧಿ, ಕಾರ್ಮಿಕ ವಿರೋಧಿ ಕಾನೂನುಗಳ ರದ್ದತಿಗಾಗಿ. ಬೆಲೆ ಏರಿಕೆ ನಿಯಂತ್ರಣಕ್ಕಾಗಿ ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆಗಾಗಿ ಹಮ್ಮಿಕೊಂಡ ಎರಡು ದಿನಗಳ ಅಖಿಲಭಾರತ ಸಾರ್ವತ್ರಿಕ ಮುಷ್ಕರ ವನ್ನು ನಡೆಸಿ ಮಾನ್ಯ ಪ್ರಧಾನ ಮಂತ್ರಿಗಳು ಭಾರತ ಸರ್ಕಾರ, ಪಾರ್ಲಿಮೆಂಟ್ ಭವನ ನವದೆಹಲಿಗೆ ಮನವಿ ಪತ್ರವನ್ನು ಸಲ್ಲಿಸಿದ್ದಾರೆ.

ಈ ಕೆಳಕಂಡ ಅಂಶಗಳನ್ನು ಮನವಿ ಪತ್ರ ಒಳಗೊಂಡಿತ್ತು. ಕೊರೋನ ಸಾಂಕ್ರಮಿಕ ರೋಗದ ಮೊದಲೆರಡು ಅಲೆಗಳ ಸಂದರ್ಭದಲ್ಲಿ ಸರ್ಕಾರಗಳು ವಿಧಿಸಿದ ಲಾಕ್ಡೌನ್ ನಿಂದ ದುಡಿವ ಜನರ ಬದುಕನ್ನ ಸಂಕಷ್ಟಕ್ಕೆ ಸಿಲುಕಿಸಿದ್ದವು. ಎರಡು ಅಲೆಗಳ ಸಂದರ್ಭದಲ್ಲಿ ಕೇಂದ್ರ ರಾಜ್ಯ ಸರ್ಕಾರಗಳು ನೀಡಿದ ಪರಿಹಾರ ಪ್ಯಾಕೇಜ್ಗಳು ಬಡಜನರ ಬದುಕಿಗೆ ಆಸರೆಯಾಗಲಿಲ್ಲ. ಬದಲಾಗಿ ಕಾರ್ಪೊರೇಟ್ ಬಂಡವಾಳಗಾರರ, ಶ್ರೀಮಂತರ ಜೋಬು ತುಂಬಿಸಿದವು.

ಕೇಂದ್ರದ ಸರ್ಕಾರ ನವ ಉದಾರೀಕರಣ ನೀತಿಗಳನ್ನು ಆಕ್ರಮಣಕಾರಿಯಾಗಿ ಜಾರಿ ಮಾಡುತ್ತಿದೆ. ಮತ್ತಿತರ ಕ್ಷೇತ್ರಗಳಿಗೆ ನಿರಂತರ ಬಜೆಟ್ ನಲ್ಲಿ ಹಣಕಾಸಿನ ಮಾಡಲಾಗುತ್ತಿದೆ. ಇದರಿಂದ ನಿರುದ್ಯೋಗ, ಬಡತನ, ಹಸಿವಿನ ಪ್ರಮಾಣ ನಿರಂತರವಾಗಿ ಹೆಚ್ಚಾಗುತ್ತಿದೆ. ಕೇಂದ್ರ ಸರ್ಕಾರದ ಜನ ವಿರೋಧಿ ತೆರಿಗೆ ನೀತಿ, ದಿನಬಳಕೆಯ ಸರಕು ಮತ್ತು ಸೇವೆಗಳ ಮೇಲಿನ ಭಾರಿ ಪ್ರಮಾಣದ ಪರೋಕ್ಷ ಜಿಎಸ್ಟಿ ಯಂತಹ ಕ್ರಮಗಳಿಂದಾಗಿ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಅಗತ್ಯ ವಸ್ತುಗಳ ಬೆಲೆಗಳು ನಿರಂತರವಾಗಿ ಹೆಚ್ಚಾಗುತ್ತಲೇ ಇದೆ. ಇವು ಮತ್ತು ಕೊರೋಣ ಸಂಕಷ್ಟಗಳು ದೇಶದಲ್ಲಿ ಅರ್ಧದಷ್ಟು ಜನರನ್ನು ಬಡತನ, ಹಸಿವಿಗೆ ತಳ್ಳಲ್ಪಟ್ಟಿದ್ದು ಮಾತ್ರವಲ್ಲ, ಭಾರತವನ್ನು ಜಾಗತಿಕ ಹಸಿವು ಸೂಚ್ಯಂಕ ದಲ್ಲಿ 101 ಸ್ಥಾನಕ್ಕೆ ಇಳಿಸಿದೆ. ಇನ್ನು ಮುಂತಾದ ಅಂಶಗಳನ್ನು ಮನವಿಪತ್ರ ಒಳಗೊಂಡಿತ್ತು. ಜೊತೆಗೆ ಅನೇಕ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರದಲ್ಲಿ ಸೂಚಿಸಲಾಗಿದೆ.

ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಹಾಗೂ ಪ್ರಧಾನ ಕಾರ್ಯದರ್ಶಿ ಸಿಐಟಿಯು ಶಿವಮೊಗ್ಗ ಜಿಲ್ಲಾ ಸಮಿತಿ ಸಂಚಾಲಕರಾದ ಎಂ. ನಾರಾಯಣ, ಜಿಲ್ಲಾ ಎ. ಐಟಿ. ಯುಸಿ ಶಿವಮೊಗ್ಗ ಅಧ್ಯಕ್ಷರಾದ ಕಾ.ಡಿ.ಸಿ.ಮಾಯಣ್ಣ, ವಿಮಾ ನೌಕರರ ಸಂಘ ಶಿವಮೊಗ್ಗ ಅಧ್ಯಕ್ಷರಾದ ಕಾ. ಜನಾರ್ಧನ್ ನಾಯಕ್ ಇನ್ನು ಮುಂತಾದವರು ಹೆಸರುಗಳನ್ನು ಈ ಪತ್ರ ಒಳಗೊಂಡಿದೆ.