Monday, February 23, 2026
Monday, February 23, 2026
Home Blog Page 1656

ಉದ್ಯೋಗ ವಾರ್ತೆ

0

ಕರ್ನಾಟಕ ಲೋಕಸೇವಾ ಆಯೋಗವು ಕರ್ನಾಟಕ ನಾಗರೀಕ ಸೇವಾ (ನೇರ ನೇಮಕಾತಿ) ನಿಯಮಗಳನ್ವಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಗ್ರೂಪ್ ಬಿ ವೃಂದದ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯಲ್ಲಿ ನಗರ ಯೋಜಕರು 23 ಹುದ್ದೆಗಳು, ಭಾಷಾಂತರ ನಿರ್ದೇಶನಾಲಯದಲ್ಲಿನ ಭಾಷಾಂತರಕಾರರ 8 ಹುದ್ದೆ, ಮುದ್ರಣ, ಲೇಖನ ಸಾಮಗ್ರಿ ಮತ್ತು ಪ್ರಕಟಣೆಗಳ ಇಲಾಖೆಯಲ್ಲಿ ಸಹಾಯಕ ನಿರ್ದೇಶಕರ 2 ಹುದ್ದೆ ಸೇರಿದಂತೆ 33 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಮಾರ್ಚ್ 29 ರಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಏಪ್ರಿಲ್ 28 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಏಪ್ರಿಲ್ 29 ಶುಲ್ಕ ಪಾವತಿಗೆ ಕೊನೆಯ ದಿನವಾಗಿದೆ. ಹೆಚ್ಚಿನ ವಿವರಗಳಿಗಾಗಿ ಆಯೋಗದ ವೆಬ್ ಸೈಟ್ http://kpsc.kar.nic.in ಗಮನಿಸಬಹುದಾಗಿದೆ

ಪಶ್ವಿಮ ಬಂಗಾಳ ಬೀರ್ಭೂಮ್ ಜಿಲ್ಲೆಯಲ್ಲಿ ಸಜೀವ ದಹನ ಪ್ರಕರಣ

0

ಪಶ್ಚಿಮ ಬಂಗಾಳದಲ್ಲಿ ಎಲ್ಲರ ಕರುಳು ಕಿವುಚುವ ದಾರುಣ ಘಟನೆ ಇತ್ತೀಚೆಗೆ ಅಲ್ಲಿನ ಬೀರ್ ಭೂಮ್ ಜಿಲ್ಲೆಯ ರಾಮ್ ಪುರಹತ್ ನಲ್ಲಿ ನಡೆದಿದೆ.
ಟಿಎಂಸಿ ನಾಯಕನ ಕೊಲೆಯ ಹಿನ್ನೆಲೆಯಲ್ಲಿ ಈ ಹಿಂಸಾಚಾರ ನಡೆದಿದೆ
ಎನ್ನಲಾಗಿದೆ.
ಟಿಎಂಸಿ ಕಾರ್ಯಕರ್ತರು ರೊಚ್ಚಿಗೆದ್ದು ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ.ಎಂಟು ಜನರ ಸಜೀವ ದಹನವಾಗಿದೆ.
ಸುಟ್ಟ ಕರಕಲು ದೇಹಗಳನ್ನ ಒಟ್ಟು ಮಾಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಆಗಿವೆ.
ಈಗ ಹನ್ನೊಂದು ಆರೋಪಿಗಳನ್ನ ಈ ಸಂಬಂಧ ಅರೆಸ್ಟ್ ಮಾಡಲಾಗಿದೆ.
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಈ ಘಟನೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಸಂತ್ರಸ್ತರಿಗೆ ಸಾಂತ್ವನ ಹೇಳಿದ್ದಾರೆ.
ಕೊಲ್ಕೊತಾ ನ್ಯಾಯಾಲಯ ಈ ಬಗ್ಗೆ ಸ್ವಯಂಪ್ರೇರಿತ ಸುಮೊಟೊ ವಿಚಾರಣೆ ಕೈಗೊಂಡಿದೆ.
ಪ್ರಧಾನಿ ಮೋದಿಯವರು
ಸದರಿ ಪ್ರಕರಣ ವಿಚಾರಣೆಗೆ ಎಲ್ಲ ಸಹಕಾರ ನೀಡುವುದಾಗಿಯೂ
ಭರವಸೆ ನೀಡಿದ್ದಾರೆ.
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮೃತರ ಕುಟುಂಬಗಳಿಗೆ ₹ 5 ಲಕ್ಷ ನೆರವು ಘೋಷಣೆ ಮಾಡಿದ್ದಾರೆ.

ಬೆಂಗಳೂರು ವಿಮಾನ ನಿಲ್ದಾಣಕ್ಕೆಶೀಘ್ರ ಮೆಮು ರೈಲು ಸಂಪರ್ಕ

0

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಚಾರ ನಡೆಸುವ ಪ್ರಯಾಣಿಕರು ಶೀಘ್ರವೇ ಮೆಮು ರೈಲುಗಳ ಮೂಲಕ ಪ್ರಯಾಣಿಸಬಹುದಾಗಿದೆ. ವಿಮಾನ ನಿಲ್ದಾಣದ ಸಮೀಪ ಈಗಾಲೇ ರೈಲ್ವೆ ಹಾಲ್ಟ್ ಸ್ಟೇಷನ್‌ ಆರಂಭಗೊಂಡಿದೆ.

ದಕ್ಷಿಣ ರೈಲ್ವೆ ವಲಯದ ರೈಲ್ವೆ ಸುರಕ್ಷತಾ ಆಯುಕ್ತರಾದ ಅಭಿ ಕುಮಾರ್ ರೈ ಯಲಹಂಕ-ದೇವನಹಳ್ಳಿ- ಚಿಕ್ಕಬಳ್ಳಾಪುರ 45 ಕಿ. ಮೀ. ವಿದ್ಯುದೀಕರಣಗೊಂಡ ಮಾರ್ಗವನ್ನು ಪರಿಶೀಲನೆ ನಡೆಸಿದರು.

ರೈಲ್ವೆ ಸುರಕ್ಷತಾ ಆಯುಕ್ತರು ವೇಗ ಪರೀಕ್ಷೆ ಮೂಲಕ ಹಳಿಯ ತಪಾಸಣೆ ನಡೆಸಿದ್ದಾರೆ. ಗಂಟೆಗೆ 100 ಕಿ. ಮೀ. ವೇಗದಲ್ಲಿ ಪರಿಶೀಲನೆ ಪೂರ್ಣಗೊಂಡಿದೆ ಎಂದು ನೈಋತ್ಯ ರೈಲ್ವೆ ಹೇಳಿದೆ.

ಶೀಘ್ರವೇ ಈ ಮಾರ್ಗದಲ್ಲಿ ಮೆಮು ರೈಲುಗಳ ಸಂಚಾರಕ್ಕೆ ಅನುಮತಿ ಸಿಗಲಿದೆ.
ಯಲಹಂಕ-ದೇವನಹಳ್ಳಿ-ಚಿಕ್ಕಬಳ್ಳಾಪುರ ಮಾರ್ಗದ ವಿದ್ಯುದೀಕರಣದಿಂದಾಗಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರಯಾಣಿಕರಿಗೆ ಅನುಕೂಲವಾಗಲಿದೆ.

ಈ ಮಾರ್ಗದಲ್ಲಿ ಮೆಮು ರೈಲು ಸಂಚಾರ ನಡೆಸಲು ಅವಕಾಶ ನೀಡಲಾಗುತ್ತದೆ.

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಉಸ್ತುವಾರಿ ನೋಡಿಕೊಳ್ಳುವ ಬಿಐಎಲ್ ವಿಮಾನ ನಿಲ್ದಾಣ ಸಮೀಪವೇ ರೈಲ್ವೆ ಹಾಲ್ಟ್ ಸ್ಟೇಷನ್ ನಿರ್ಮಾಣ ಮಾಡಿದೆ. ಬೆಂಗಳೂರು ನಗರದಿಂದ ಹಾಲ್ಟ್‌ ಸ್ಟೇಷನ್‌ಗೆ ರೈಲು ಸಂಚಾರ ಆರಂಭಿಸಲಾಗಿತ್ತು. ಆದರೆ ಪ್ರಯಾಣಿಕರ ನೀರಸ ಪ್ರತಿಕ್ರಿಯೆ ಕಾರಣ ರೈಲು ಸಂಚಾರ ರದ್ದುಗೊಳಿಸಲಾಗಿದೆ. ಈಗ ಇದೇ ಮಾರ್ಗದಲ್ಲಿ ಮೆಮು ರೈಲು ಸಂಚಾರ ಆರಂಭಿಸುವ ಕುರಿತು ಚರ್ಚೆಗಳು ಆರಂಭವಾಗಿದೆ.

2021ರ ಜನವರಿ 4ರಂದು ನೈಋತ್ಯ ರೈಲ್ವೆ ಬೆಂಗಳೂರು ನಗರಿಂದ ಏರ್‌ಪೋರ್ಟ್ ರೈಲ್ವೆ ಹಾಲ್ಟ್ ಸ್ಟೇಷನ್‌ಗೆ ರೈಲು ಸಂಚಾರ ಆರಂಭಿತ್ತು. ಪ್ರತಿದಿನ ನಗರದಿಂದ 10 ರೈಲುಗಳು ಈ ನಿಲ್ದಾಣಕ್ಕೆ ಸಂಚಾರ ನಡೆಸುತ್ತಿದ್ದವು. ನಗರರಿಂದ ವಿಮಾನ ನಿಲ್ದಾಣಕ್ಕೆ 10 ರಿಂದ 15 ರೂ. ನಲ್ಲಿ ಸಂಚಾರ ನಡೆಸಬಹುದಾಗಿತ್ತು. ಅಲ್ಲಿಂದ ವಿಮಾನ ನಿಲ್ದಾಣಕ್ಕೆ ಸಂಚಾರ ನಡೆಸಲು ಶೆಟರ್ ಬಸ್‌ಗಳ ವ್ಯವಸ್ಥೆ ಮಾಡಲಾಗಿತ್ತು. ಆದರೆ ಜನರಿಂದ ಸೂಕ್ತ ಪ್ರತಿಕ್ರಿಯೆ ಸಿಕ್ಕಿರಲಿಲ್ಲ.

ರೈಲ್ವೆ ಹಾಲ್ಟ್ ಸ್ಟೇಷನ್‌ ಅನ್ನು ಸುಮಾರು 3 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಿತ್ತು. ರೈಲು ಸಂಪರ್ಕ ಆರಂಭವಾದಾಗ ಅಂದಿನ ರೈಲ್ವೆ ಸಚಿವರು ಟ್ವೀಟ್ ಮಾಡಿ ಬೆಂಗಳೂರು ನಗರದ ಸಾರಿಗೆ ವ್ಯವಸ್ಥೆಯಲ್ಲಿ ಇದು ಮಹತ್ವದ ಮೈಲುಗಲ್ಲು ಎಂದು ಹೇಳಿದ್ದರು. ವಿಮಾನ ನಿಲ್ದಾಣದಲ್ಲಿ ಕಾರ್ಯ ನಿರ್ವಹಿಸುವ ಸುಮಾರು 28,000 ಉದ್ಯೋಗಿಗಳಿಗೆ ಇದು ಸಹಾಯಕವಾಗಲಿದೆ ಎಂದು ಹೇಳಿತ್ತು. ಈ ರೈಲು ನಿಲ್ದಾಣದಿಂದ ವಿಮಾನ ನಿಲ್ದಾಣಕ್ಕೆ ಬಸ್ ಸೌಲಭ್ಯವನ್ನು ಸಹ ಕಲ್ಪಿಸಲಾಗಿತ್ತು. ಆದರೆ ಅಪಾರ ನಿರೀಕ್ಷೆಯೊಂದಿಗೆ ಆರಂಭಿಸಿದ್ದ ವಿಮಾನ ನಿಲ್ದಾಣದ ರೈಲು ಸೇವೆಗೆ ನೀರಸ ಪ್ರತಿಕ್ರಿಯೆ ಸಿಕ್ಕಿತು. ಕೋವಿಡ್ ಲಾಕ್‌ಡೌನ್ ಘೋಷಣೆಯಾಗುತ್ತಲೇ ರೈಲು ಸೇವೆ ಸಹ ಸ್ಥಗಿತಗೊಳಿಸಲಾಯಿತು.

ಹರ್ಷ ಕೊಲೆ ಪ್ರಕರಣ ಎನ್ಐಎ ಯಿಂದ ತನಿಖೆ

0

ಈಗಾಗಲೇ ದೇಶದ ಗಮನ ಸೆಳೆದಿರುವ ಶಿವಮೊಗ್ಗದ ಭಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದಲ್ಲಿ
ಆರೋಪಿಗಳನ್ನ ಬಂಧಿಸಲಾಗಿದೆ.
ಪ್ರಸ್ತುತ ಈ ತನಿಖೆ ಪ್ರಕ್ರಿಯೆಯನ್ನ ಇನ್ನುಮುಂದೆ ರಾಷ್ಟ್ರೀಯ ತನಿಖಾ ಸಂಸ್ಥೆಗೆ ವಹಿಸಲಾಗಿದೆ.
ಎನ್ ಐ ಎ ಈಗ ದೆಹಲಿ ನ್ಯಾಯಾಲಯದಲ್ಲಿ ದೂರು ಸಲ್ಲಿಸಿದೆ.
ಎಫ್ ಐ ಆರ್ ದಾಖಲಿಸಿ ತನಿಖೆ ಆರಂಭಿಸಿದೆ.
ಎನ್ಐಎ ಅಧಿಕಾರಿಗಳು ಆರೋಪಿಗಳನ್ನ ತನ್ನ ವಶಕ್ಕೆ ಪಡೆದು ಮುಂದುವರೆಯಲಿದೆ
ಎಂದು ವರದಿಯಾಗಿದೆ.

ಹಿಜಾಬ್ ಪ್ರಕರಣ ತುರ್ತು ವಿಚಾರಣೆಗೆ ಸುಪ್ರೀಂ ನಕಾರ

0

ತರಗತಿಗಳಲ್ಲಿ ಹಿಜಾಬ್ ನಿಷೇಧ ಪ್ರಕರಣಕ್ಕೆ ಸಂಬಂಧಿಸಂತೆ ಸುಪ್ರೀಂಕೋರ್ಟ್ 2ನೇ ಬಾರಿಯೂ ತುರ್ತು ವಿಚಾರಣೆ ನಡೆಸುವುದಿಲ್ಲ ಎಂದು ಹೇಳಿದೆ.

ಕಲಾಪ ಆರಂಭಗೊಳ್ಳುತ್ತಿದ್ದಂತೆ ವಿದ್ಯಾರ್ಥಿನಿ ಆಯಿಷಾ ಪರ ವಕೀಲ ದೇವದತ್ ಕಾಮತ್ ತುರ್ತು ಅರ್ಜಿ ವಿಚಾರಣೆ ನಡಸಬೇಕು ಎಂದು ಮುಖ್ಯ ನ್ಯಾಯಾಧೀಶ ರಮಣ ಪೀಠದಲ್ಲಿ ಮನವಿ ಮಾಡಿದರು.

ಇದೇ 28 ರಿಂದ ಪರೀಕ್ಷೆ ಆರಂಭವಾಗಲಿದೆ. ಶಾಲೆಯಲ್ಲಿ ಪ್ರವೇಶಕ್ಕೆ ನಿರ್ಬಂಧ ವಿಧಿಸಿದರೆ 1 ವರ್ಷ ಹಾಳಾಗುತ್ತದೆ. ಹಾಗಾಗಿ ಶೀಘ್ರ ವಿಚಾರಣೆ ನಡೆಸಬೇಕು ಎಂದು ಅವರು ವಾದಿಸಿದರು.

ಇದಕ್ಕೆ ಅಸಮಧಾನಗೊಂಡ ಸಿಜೆಐ, ಪ್ರಕರಣಕ್ಕೂ ಪರೀಕ್ಷೆಗೂ ಯಾವುದೇ ಸಂಬಂಧವಿಲ್ಲ. ಸಮಸ್ಯೆಯನ್ನು ಸೂಕ್ಷ್ಮಗೊಳಿಸಬೇಡಿ ಎಂದು ಹೇಳಿ ಮನವಿಯನ್ನು ತಿರಸ್ಕರಿಸಿ ಮತ್ತೊಂದು ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡರು ಎಂದು ತಿಳಿದುಬಂದಿದೆ.

ಈ ಹಿಂದೆಯೇ ತುರ್ತು ವಿಚಾರಣೆ ಕೈಗೊಳ್ಳುವಂತೆಯೂ ಮನವಿ ಮಾಡಿದಾಗ ಹೋಳಿ ಹಬ್ಬದ ರಜೆಯ ಬಳಿಕ ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಹೇಳಿತ್ತು.

ಶಾಲೆಯಲ್ಲಿ ವಿದ್ಯಾರ್ಥಿಗಳು ಸಮವಸ್ತ್ರ ಪಾಲಿಸಬೇಕೆಂಬ ಕರ್ನಾಟಕ ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿತ್ತು. ಅಷ್ಟೇ ಅಲ್ಲದೇ ಹಿಜಾಬ್ ಮುಸ್ಲಿಂ ಧರ್ಮದ ಕಡ್ಡಾಯ ಆಚರಣೆ ಭಾಗವಲ್ಲ ಎಂದು ಮಹತ್ವದ ತೀರ್ಪು ನೀಡಿತ್ತು. ಈ ತೀರ್ಪನ್ನು ಪ್ರಶ್ನಿಸಿ ಹಲವು ಅರ್ಜಿಗಳು ಸುಪ್ರೀಂ ಕೋರ್ಟ್‍ನಲ್ಲಿ ಸಲ್ಲಿಕೆಯಾಗಿದೆ.

ಸಮರಕ್ಕೆ ಸಮ್ಮತಿಸದ ಭದ್ರತಾ ಮಂಡಳಿ ಸಭೆ ಭಾರತ ತಟಸ್ಥ ನೀತಿ

0

ಉಕ್ರೇನ್ ಮೇಲೆ ರಷ್ಯಾ ಯುದ್ಧ ಸಾರಿ ಒಂದು ತಿಂಗಳಾಗುತ್ತಿದೆ. ದಿನದಿಂದ ದಿನಕ್ಕೆ ಯುದ್ಧದ ತೀವ್ರತೆ ಹೆಚ್ಚಾಗುತ್ತಿದೆ. ಲಕ್ಷಾಂತರ ಮಂದಿ ಉಕ್ರೇನಿಯನ್ನರು ನೀರು, ಆಶ್ರಯ ,ಆಹಾರವಿಲ್ಲದೆ ಬಿಕ್ಕಟ್ಟು ಎದುರಿಸುತ್ತಿದ್ದಾರೆ.

ತಮ್ಮವರನ್ನು ಕಳೆದುಕೊಂಡು ಬೀದಿಗೆ ಬಂದಿದ್ದಾರೆ. ದಶಕದ ಸಂಕಷ್ಟ ಉಕ್ರೇನ್ ಈಗ ಎದುರಿಸುತ್ತಿದೆ.
ಇಂದು ಉಕ್ರೇನ್ ಗೆ ಜಗತ್ತಿನ ರಾಷ್ಟ್ರಗಳ ಮಾನವೀಯ ಅಗತ್ಯಗಳು ಕಂಡುಬಂದಿದೆ.

ಈ ಸಂದರ್ಭದಲ್ಲಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸಭೆಯಲ್ಲಿ ರಷ್ಯಾ ವಿರುದ್ಧ ಬಹುತೇಕ ರಾಷ್ಟ್ರಗಳು ನಿರ್ಣಯ ಹೊರಡಿಸಿವೆ.

ಉಕ್ರೇನ್ ವಿರುದ್ಧ ತಾನು ಸಾರಿದ್ದ ಯುದ್ಧವನ್ನು ಸಮರ್ಥಿಸಿಕೊಳ್ಳಲು ರಷ್ಯಾಕ್ಕೆ ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ 15 ಸದಸ್ಯ ರಾಷ್ಟ್ರಗಳ ಪೈಕಿ 9 ಮತಗಳು ಬೇಕಾಗಿತ್ತು. ಇತರ ನಾಲ್ಕು ಖಾಯಂ ಸದಸ್ಯರಾದ ಯುಎಸ್, ಬ್ರಿಟನ್, ಫ್ರಾನ್ಸ್ ಮತ್ತು ಚೀನಾದಿಂದ ಯಾವುದೇ ವೀಟೋ ಇಲ್ಲ.
ಆದರೆ ರಷ್ಯಾಕ್ಕೆ ಬೆಂಬಲ ಸಿಕ್ಕಿದ್ದು ಚೀನಾದಿಂದ ಮಾತ್ರ. 13 ಇತರ ಖಾಯಂ ಸದಸ್ಯ ರಾಷ್ಟ್ರಗಳು ಮತದಿಂದ ದೂರವುಳಿದವು. ಅಂದರೆ ಉಕ್ರೇನ್ ವಿರುದ್ಧ ಸಾರಿದ ಯುದ್ಧದಲ್ಲಿ ರಷ್ಯಾಕ್ಕೆ ಬೇರೆ ರಾಷ್ಟ್ರಗಳಿಂದ ಬೆಂಬಲ ಸಂಪೂರ್ಣವಾಗಿ ಸಿಕ್ಕಿಲ್ಲ ಎನ್ನಲಾಗಿದೆ.

ಉಕ್ರೇನ್ ಮತ್ತು 24 ದೇಶಗಳು ರಚಿಸಿದ ಮತ್ತು ಸುಮಾರು 100 ರಾಷ್ಟ್ರಗಳ ಸಹ ಪ್ರಾಯೋಜಕತ್ವದ ನಿರ್ಣಯವನ್ನು ಜನರಲ್ ಅಸೆಂಬ್ಲಿ ಪರಿಗಣಿಸಲು ಪ್ರಾರಂಭಿಸಿದ ಅದೇ ದಿನ ರಷ್ಯಾಕ್ಕೆ ಸೋಲುಂಟಾಗಿದೆ. ಇದು ಬೆಳೆಯುತ್ತಿರುವ ಮಾನವೀಯ ತುರ್ತುಸ್ಥಿತಿಗೆ ರಷ್ಯಾದ ಆಕ್ರಮಣಶೀಲತೆ ಕಾರಣವಾಗಿದೆ ಎಂದು ಸ್ಪಷ್ಟವಾಗಿ ತಿಳಿಯುತ್ತದೆ.

ಆರ್ಥಿಕ ಬಿಕ್ಕಟ್ಟಿನಲ್ಲಿ ಶ್ರೀಲಂಕಾ ಆಹಾರ ವಸ್ತುಗಳಿಗೆ ಜನರ ಪರದಾಟ

0

1948ರ ಆರ್ಥಿಕ ಬಿಕ್ಕಟ್ಟಿನ ಬಳಿಕ ಇದೇ ಮೊದಲ ಬಾರಿಗೆ ಶ್ರೀಲಂಕಾ ಅತೀ ದೊಡ್ಡ ಸಂಕಷ್ಟಕ್ಕೆ ಸಿಲುಕಿದೆ. ಆಹಾರ ವಸ್ತುಗಳ ಕೊರತೆ, ನಿರುದ್ಯೋಗ, ಇಂಧನ ಅಭಾವ, ವಿದೇಶಿ ಕರೆನ್ಸಿಯ ಕೊರತೆಯಿಂದ ಇಡೀ ದೇಶವೇ ದಿವಾಳಿಯಂಚಿಗೆ ತಲುಪಿದೆ.

ಮೂರು ಹೊತ್ತಿನ ಊಟಕ್ಕೂ ಗತಿಯಿಲ್ಲದೇ ಜನ ವಲಸೆ ಹೋಗುವ ಸ್ಥಿತಿ ಬಂದಿದೆ.

ದೇಶದ ಆರ್ಥಿಕತೆ ಪತನಗೊಳ್ಳಲು ವಿದೇಶಿ ಕರೆನ್ಸಿಯ ಕೊರತೆಯೇ ಪ್ರಮುಖ ಕಾರಣ. ಶ್ರೀಲಂಕಾವು ಆಮದಿನ ಮೇಲೆಯೇ ಅವಲಂಬಿಸಿದೆ. ಅದು ಪೆಟ್ರೋಲಿಯಂ, ಆಹಾರ ವಸ್ತು, ಪೇಪರ್‌, ಸಕ್ಕರೆ, ಕಾಳುಗಳು, ಔಷಧ, ಸಾರಿಗೆ ಸಲಕರಣೆ ಮತ್ತಿತರ ಅಗತ್ಯ ವಸ್ತುಗಳನ್ನು ಬೇರೆ ದೇಶಗಳಿಂದ ಆಮದು ಮಾಡಿಕೊಳ್ಳುತ್ತದೆ. ವಿದೇಶಿ ಕರೆನ್ಸಿಯ ಕೊರತೆ ಎಂದರೆ ಈ ಅಗತ್ಯ ವಸ್ತುಗಳನ್ನು ಖರೀದಿಸಲು ಹಣದ ಕೊರತೆ ಎದುರಾಗಿದೆ ಎನ್ನಲಾಗಿದೆ.

ಶ್ರೀಲಂಕಾದ ಜಿಡಿಪಿಯ ಶೇ.10ರಷ್ಟು ಬರುವುದೇ ಪ್ರವಾಸೋದ್ಯಮದಿಂದ. 2019ರ ಕೊಲೊಂಬೋ ಸರಣಿ ಬಾಂಬ್‌ ಸ್ಫೋಟದ ಬಳಿಕ ಇಲ್ಲಿ ಪ್ರವಾಸೋದ್ಯಮ ಕುಸಿಯತೊಡಗಿತು. ಕೊರೊನಾ ಹಾಗೂ ಲಾಕ್‌ಡೌನ್‌ ಈ ಸಂಕಷ್ಟವನ್ನು ಮತ್ತಷ್ಟು ಹೆಚ್ಚಿಸಿತು ಎಂದು ತಿಳಿದುಬಂದಿದೆ.

2018ರಲ್ಲಿ ಶ್ರೀಲಂಕಾದಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆಯು 1.6 ಶತಕೋಟಿ ಡಾಲರ್‌ ಇತ್ತು. 2019ರಲ್ಲಿ ಇದು 793 ದಶಲಕ್ಷ ಡಾಲರ್‌ಗೆ, 2020ರಲ್ಲಿ 548 ದಶಲಕ್ಷ ಡಾಲರ್‌ಗೆ ಇಳಿಕೆಯಾಯಿತು. ಎಫ್ ಡಿಐ ಇಳಿಕೆಯ ಬೆನ್ನಲ್ಲೇ, ಮೀಸಲು ನಿಧಿಯಲ್ಲಿದ್ದ ವಿದೇಶಿ ಕರೆನ್ಸಿಯೂ ಇಳಿಮುಖವಾಯಿತು. ಇನ್ನೊಂದೆಡೆ ಅಂತಾರಾಷ್ಟ್ರೀಯ ಹಣಕಾಸು ನಿಧಿಯಿಂದ ಸಾಲ ಪಡೆಯಲೂ ಶ್ರೀಲಂಕಾ ನಿರಾಕರಿಸಿದ್ದು, ಅದರ ಆರ್ಥಿಕ ಪತನಕ್ಕೆ ಕಾರಣವಾಗಿದೆ.

ಕೃಷಿಯನ್ನು ಶೇ.100ರಷ್ಟು ಸಾವಯವವಾಗಿಸಬೇಕು ಎಂಬ ಉದ್ದೇಶವೂ ಶ್ರೀಲಂಕಾದ ಮೇಲೆ ಪ್ರತಿಕೂಲ ಪರಿಣಾಮ ಬೀರಿತು. ದೇಶಾದ್ಯಂತ ರಾಸಾಯನಿಕ ಗೊಬ್ಬರಗಳಿಗೆ ಸರಕಾರ ನಿಷೇಧ ಹೇರಿದ ಕಾರಣ, ಕೃಷಿ ಉತ್ಪನ್ನಗಳ ಉತ್ಪಾದನೆ ಗಣನೀಯವಾಗಿ ಕುಗ್ಗಿತು. ಇದರ ಜತೆಗೆ “ಆಹಾರ ಮಾಫಿಯಾ’ವು ಅತ್ಯಗತ್ಯ ವಸ್ತುಗಳನ್ನು ಕಳ್ಳದಾಸ್ತಾನು ಮಾಡಿದ ಕಾರಣ ಆಹಾರ ವಸ್ತುಗಳ ಬೆಲೆ‌ ಗಗನಕ್ಕೇರಿದೆ ಎಂದು ತಿಳಿದುಬಂದಿದೆ.

ಕಾಶ್ಮೀರ್ ಫೈಲ್ಸ್ ಟ್ವಿಟರ್ ಸಂದೇಶ ವಿವಾದಕ್ಕೆ ಸಿಲುಕಿದ ಐಎಎಸ್ ಅಧಿಕಾರಿ

0

ವಿವೇಕ್ ಅಗ್ನಿಹೋತ್ರಿ ನಿರ್ದೇಶನದಲ್ಲಿ ತಯಾರಾದ ಬಾಲಿವುಡ್ ನ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಇದೀಗ 200 ಕೋಟಿ ದಾಟಿದೆ ಎಂದು ಅಂದಾಜಿಸಲಾಗಿದೆ.

ಮೂವತ್ತು ಕೋಟಿ ಅಂದಾಜು ಬಜೆಟ್ ನಲ್ಲಿ ನಿರ್ಮಾಣವಾದ ಈ ಸಿನಿಮಾ ನಿರ್ಮಾಪಕರಿಗೆ ಭಾರೀ ಲಾಭ ತಂದುಕೊಟ್ಟಿದೆ. ಹೀಗಾಗಿ ಸಿನಿಮಾದ ಲಾಭಾಂಶದ ಮೇಲೆ ಎಲ್ಲರ ಕಣ್ಣು ಬಿದ್ದಂತಾಗಿದೆ.

ದಿ ಕಾಶ್ಮೀರ್ ಫೈಲ್ಸ್ ಸಿನಿಮಾ 200 ಕೋಟಿ ಕ್ಲಬ್ ಗೆ ಸೇರುತ್ತಿದ್ದಂತೆಯೇ ಮಧ್ಯಪ್ರದೇಶದ ಐಎಎಸ್ ಅಧಿಕಾರಿ ನಿಯಾಜಾ ಖಾನ್ ತಮ್ಮ ಟ್ವಿಟರ್ ಖಾತೆಯ ಮೂಲಕ ನಿರ್ದೇಶಕ ವಿವೇಕ್ ಅಗ್ನಿಹೋತ್ರಿಗೆ ಪ್ರಶ್ನೆಯೊಂದನ್ನು ಕೇಳಿದ್ದಾರೆ. ಈಗ ಆ ಪ್ರಶ್ನೆ ವೈರಲ್ ಆಗಿದೆ ಮತ್ತು ಅಧಿಕಾರಿಗೆ ಅಲ್ಲಿನ ಸರಕಾರ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದೆ ಎನ್ನಲಾಗುತ್ತಿದೆ.

ಮತ್ತೆ ಮಳೆ ಹುಯ್ಯಲಿದೆ- ಹವಾಮಾನ ಮುನ್ಸೂಚನೆ

0

ಮುಂದಿನ ನಾಲ್ಕು ದಿನ ರಾಜ್ಯದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ.
ಮಹಾರಾಷ್ಟ್ರದ ಮಧ್ಯ ಕರಾವಳಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆ ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

24 ರಿಂದ 28 ರವರೆಗೆ ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದೆ.

ಈ ಭಾಗದಲ್ಲಿ 24, 25 ರಂದು ಗುಡುಗು ಸಿಡಿಲಿನ ಎಚ್ಚರಿಕೆ ನೀಡಲಾಗಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂ.ನಗರ, ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಹಾಸನ, ಕೊಡಗು, ಮೈಸೂರು, ತುಮಕೂರು ಜಿಲ್ಲೆಯಲ್ಲಿ 24 ರಿಂದ 26 ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

ಮೀಸಲಾತಿ ಪ್ರಕಟಿಸಿದ ನಂತರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ-ಸಿಎಂ

0

ಹಿಂದುಳಿದ ವರ್ಗಗಳ ಮೀಸಲಾತಿ ಕಲ್ಪಿಸಿ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಬೇಕು ಎಂದು ಒಮ್ಮತದ ತೀರ್ಮಾನವಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ವಿಧಾನಸೌಧದಲ್ಲಿ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹಿಂದುಳಿದ ವರ್ಗದವರಿಗೆ ಮೀಸಲಾತಿ ಕಲ್ಪಿಸುವ ಸಂಬಂಧ ನಡೆದ ಸಭೆಯ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಎಲ್ಲಾ ಆಯಾಮಗಳಲ್ಲಿ ವಿಚಾರ ಮಾಡಿ ಹಿಂದುಳಿದ ವರ್ಗಗಳಿಗೆ ರಾಜಕೀಯವಾಗಿ ಹಿಂದುಳಿದಿರುವುದನ್ನು ಗುರುತಿಸಬೇಕು. ಅದಕ್ಕಾಗಿ ಸಮಿತಿ ರಚಿಸಬೇಕು. ಒಟ್ಟಾರೆ ಮೀಸಲಾತಿ ಶೇ 50% ನ್ನು ಮೀರಬಾರದು ಎನ್ನುವ ಸರ್ವೋಚ್ಚ ನ್ಯಾಯಾಲಯದ ಷರತ್ತುಗಳನ್ವಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದರು.

ಈ ತಿಂಗಳ ಅಂತ್ಯದೊಳಗೆ ಮುಂದಿನ ಸಭೆ ನಿಗದಿಪಡಿಸಲಾಗುವುದು. ಆ ಸಭೆಯಲ್ಲಿ ವಿರೋಧ ಪಕ್ಷದ ನಾಯಕರ ಹಾಜರಾತಿಯಲ್ಲಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.

ಇತ್ತೀಚಿನ ಸರ್ವೋಚ್ಚ ನ್ಯಾಯಾಲಯದ ಆದೇಶಕ್ಕೆ ಅನುಗುಣವಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹಿಂದುಳಿದ ವರ್ಗದವರಿಗೆ ಮೀಸಲಾತಿ ಕಲ್ಪಿಸಲು ಯಾವ ಕ್ರಮಗಳನ್ನು ಕೈಗೊಳ್ಳಬೇಕು. ಯಾವ ರೀತಿ ಚುನಾವಣೆ ನಡೆಯಬೇಕು ಎಂಬ ವಿಚಾರದಲ್ಲಿ ಸುದೀರ್ಘ ಚರ್ಚೆಯಾಗಿದೆ. ಅಡ್ವೊಕೇಟ್ ಜನರಲ್ ಅವರು ಕಾನೂನಿನ ವಸ್ತುಸ್ಥಿತಿಯ ವಿವರಗಳನ್ನು ತಿಳಿಸಿದ್ದಾರೆ ಎಂದರು.

ಈ ಕುರಿತು ಆಯೋಗ ರಚಿಸಿ ವರದಿ ಪಡೆದು ಚುನಾವಣೆಗೆ ಹೋಗಬೇಕೆ ಅಥವಾ ಸರ್ವೋಚ್ಚ ನ್ಯಾಯಾಲಯದಲ್ಲಿ ಪುನರ್ ಪರಿಶೀಲನಾ ಅರ್ಜಿ ಹಾಕಬೇಕೆ ಎನ್ನುವ ಆಯ್ಕೆ ನಮ್ಮ ಮುಂದಿದೆ. ಹಿಂದುಳಿದ ವರ್ಗದವರಿಗೆ ಮೀಸಲಾತಿ ನೀಡದೆ ಚುನಾವಣೆಗೆ ಹೋಗಲು ಸಾಧ್ಯವಿಲ್ಲ ಎಂದರು.