Monday, February 23, 2026
Monday, February 23, 2026
Home Blog Page 1657

ಹಿಜಾಬ್ ಧರಿಸಿ ಬಂದರೆ ಪರೀಕ್ಷಗೆ ಪ್ರವೇಶವಿಲ್ಲ – ನಾಗೇಶ್

0

ರಾಜ್ಯದಲ್ಲಿ ಸೋಮವಾರದಿಂದ ಎಸ್‌ಎಸ್‌ಎಲ್‌ಸಿ ಪರೀಕ್ಸೆ ಆರಂಭವಾಗಲಿದೆ. ಇದಕ್ಕೆ ಎಲ್ಲಾ ಸಿದ್ಧತೆ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ತಿಳಿಸಿದ್ದಾರೆ.

ಹಿಜಾಬ್‌ ವಿವಾದ ಕುರಿತಂತೆ ಕೂಡ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಹಿಜಾಬ್‌ ಧರಿಸಿ ಬಂದರೆ ಪರೀಕ್ಷೆ ಬರೆಯಲು ಅವಕಾಶ ಇಲ್ಲ. ಇದನ್ನು ವಿದ್ಯಾರ್ಥಿಯನಿಯರು ಗಮನದಲ್ಲಿ ಇರಿಸಿಕೊಳ್ಳಬೇಕು ಎಂದು ಸಚಿವ ಬಿ.ಸಿ ನಾಗೇಶ್‌ ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ಈ ಬಾರಿ 8,73,846 ಎಸ್‌ಎಸ್‌ಎಲ್‌ಸಿ ಪರೀಕ್ಸೆ ಎದುರಿಸಲಿದ್ದಾರೆ.

ಧೋನಿ ಪ್ರೀತಿಯ ಸರ್ ಜಡೇಜಾಗೆ ಐಪಿಎಲ್ ಸಿಎಸ್ಕೆ ತಂಡದ ನಾಯಕತ್ವ

0

ಚೆನ್ನೈ ಸೂಪರ್ ಕಿಂಗ್ಸ್ ನಾಯಕತ್ವಕ್ಕೆ ಮಹೇಂದ್ರ ಸಿಂಗ್ ಧೋನಿ ರಾಜೀನಾಮೆ ನೀಡಿದ್ದಾರೆ. ಅವರ ಬದಲಿಗೆ ಈಗ ರವೀಂದ್ರ ಜಡೇಜಾ ಸಿಎಸ್​ಕೆ ತಂಡದ ನಾಯಕತ್ವ ವಹಿಸಿಕೊಂಡಿದ್ದಾರೆ.

ಇನ್ನೇರಡು ದಿನಗಳಲ್ಲಿ ಐಪಿಎಲ್ (IPL 2022) 15ನೇ ಆವೃತ್ತಿ ಆರಂಭವಾಗಲಿದೆ.
ಮೊದಲ ಪಂದ್ಯದಲ್ಲಿ ಚೆನ್ನೈ ಹಾಗೂ ಕೋಲ್ಕತ್ತಾ ಸೆಣೆಸಲಿವೆ. ಈ ವಿಚಾರವನ್ನು ಸ್ವತಃ ಸಿಎಸ್​ಕೆ ಆಡಳಿತ ಮಂಡಳಿ ತನ್ನ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಹೇಳಿಕೊಂಡಿದೆ.

2012 ರಿಂದ ಚೆನ್ನೈ ಸೂಪರ್ ಕಿಂಗ್ಸ್‌ನ ಅವಿಭಾಜ್ಯ ಅಂಗವಾಗಿರುವ ಜಡೇಜಾ, ಸಿಎಸ್‌ಕೆಯನ್ನು ಮುನ್ನಡೆಸುವ ಮೂರನೇ ಆಟಗಾರನಾಗಲಿದ್ದಾರೆ. ಧೋನಿ ಈ ಆವೃತ್ತಿಯಲ್ಲಿ ಮತ್ತು ನಂತರ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಪ್ರತಿನಿಧಿಸುವುದನ್ನು ಮುಂದುವರಿಸುತ್ತಾರೆ ಎಂದು ಸಿಎಸ್‌ಕೆ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಎಂಎಸ್ ಧೋನಿ ಈ ಸೀಸನ್​ನಲ್ಲಿ ಆಡಿದ ನಂತರ ಮುಂದಿನ ಸೀಸನ್​ನಲ್ಲಿ ನಾಯಕತ್ವ ತೊರೆಯುತ್ತಾರೆ ಎಂಬ ಮಾತು ಕೇಳಿಬಂದಿತ್ತು. ಆದರೆ ಧೋನಿ ಸಿಎಸ್‌ಕೆ ನಾಯಕತ್ವಕ್ಕೆ ಇದ್ದಕ್ಕಿದ್ದಂತೆ ರಾಜೀನಾಮೆ ನೀಡಿದ್ದಾರೆ. ಧೋನಿ ಚೆನ್ನೈ ತಂಡದ ನಾಯಕತ್ವವನ್ನು ರವೀಂದ್ರ ಜಡೇಜಾಗೆ ಹಸ್ತಾಂತರಿಸಿದ್ದು, ನಾಯಕ ಸ್ಥಾನದಿಂದ ಕೆಳಗಿಳಿಯುವ ಧೋನಿ ನಿರ್ಧಾರದಿಂದ ಸಿಎಸ್‌ಕೆ ಅಭಿಮಾನಿಗಳಿಗೆ ಶಾಕ್ ಆಗಿದೆ.

ಧೋನಿ ಐಪಿಎಲ್‌ನಲ್ಲಿ ಯಶಸ್ವಿ ನಾಯಕರಾಗಿದ್ದು, ಅವರ ನಾಯಕತ್ವದಲ್ಲಿ ಸಿಎಸ್​ಕೆ ತಂಡ ಇದುವರೆಗೆ ನಾಲ್ಕು ಬಾರಿ ಪ್ರಶಸ್ತಿ ಗೆದ್ದಿದೆ.

ಮಹೇಂದ್ರ ಸಿಂಗ್ ಧೋನಿ ಕಳೆದ 12 ಸೀಸನ್‌ಗಳಲ್ಲಿ ಚೆನ್ನೈ ತಂಡದ ನಾಯಕರಾಗಿದ್ದರು. 2008 ರಲ್ಲಿ ಲೀಗ್ ಪ್ರಾರಂಭವಾದಾಗಿನಿಂದ ಅವರು ಚೆನ್ನೈ ಸೂಪರ್ ಕಿಂಗ್ಸ್‌ ನಾಯಕತ್ವದ ಜವಬ್ದಾರಿ ಹೊತ್ತಿದ್ದರು.

ಮ್ಯಾಚ್​ ಫಿಕ್ಸಿಂಗ್ ಆರೋಪದಡಿ 2016 ಮತ್ತು 2017ರಲ್ಲಿ ಸಿಎಸ್​ಕೆ ತಂಡ ಲೀಗ್‌ನಲ್ಲಿ ಭಾಗವಹಿಸಿರಲಿಲ್ಲ. ಈ ಎರಡು ಆವೃತ್ತಿಗಳನ್ನು ಹೊರತುಪಡಿಸಿ ಚೆನ್ನೈ ಈ ಲೀಗ್‌ನ ಅತ್ಯಂತ ಯಶಸ್ವಿ ತಂಡ ಎಂದು ಹೆಸರುವಾಸಿಯಾಗಲು ಧೋನಿ ಪ್ರಮುಖ ಪಾತ್ರವಹಿಸಿದ್ದಾರೆ.

ಜಿಲ್ಲೆಯಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ಸುಗಮ ನಿರ್ವಹಣೆಗೆ ಸಿದ್ಧತೆ

0

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯನ್ನು ಮಾರ್ಚ್ 28ರಿಂದ ಏಪ್ರಿಲ್ 11ರವೆರೆಗೆ ರಾಜ್ಯದಾದ್ಯಂತ ನಡೆಸಲು ಉದ್ದೇಶಿಸಿದೆ.

ಜಿಲ್ಲೆಯಲ್ಲಿಯೂ ಯಾವುದೇ ರೀತಿಯ ಅವ್ಯವಹಾರ ನಡೆಯದಂತೆ ಪರೀಕ್ಷೆಗಳು ಸುಗಮವಾಗಿ ನಡೆಯಲು ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದರು.

ಅವರು ಇಂದು ಜಿಲ್ಲಾಡಳಿತ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಎಸ್.ಎಸ್.ಎಲ್.ಸಿ. ಮುಖ್ಯ ಪರೀಕ್ಷೆ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಎಲ್ಲಾ ತಾಲೂಕುಗಳ ಒಟ್ಟು 94ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಗಳು ಸುಗಮವಾಗಿ ನಡೆಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

ಈ ಪರೀಕ್ಷೆಗೆ ಜಿಲ್ಲೆಯ 94 ಪರೀಕ್ಷಾ ಕೇಂದ್ರಗಳಲ್ಲಿ 90ಕೇಂದ್ರಗಳು ರೆಗ್ಯುಲರ್ ವಿದ್ಯಾರ್ಥಿಗಳಿಗಾಗಿ ಹಾಗೂ 04ಕೇಂದ್ರಗಳು ಖಾಸಗಿ ಪರೀಕ್ಷಾ ಕೇಂದ್ರಗಳಾಗಿರಲಿವೆ . ಈ ಪರೀಕ್ಷಾ ಕೇಂದ್ರಗಳಿಗೆ ಸಕಾಲದಲ್ಲಿ ಪ್ರಶ್ನೆಪತ್ರಿಕೆಗಳನ್ನು ಸಕಾಲದಲ್ಲಿ ತಲುಪಿಸಿ, ಉಸ್ತುವಾರಿ ನೋಡಿಕೊಳ್ಳಲು, ಪರೀಕ್ಷೆಗಳು ಸುಗಮವಾಗಿ ನಡೆಯಲು 35 ಜನ ಮಾರ್ಗಾಧಿಕಾರಿಗಳು, 94ಜನ ಸ್ಥಾನಿಕ ಜಾಗೃತದಳದ ಅಧಿಕಾರಿಗಳು ಹಾಗೂ 94ಜನ ಮೊಬೈಲ್ ಸ್ವಾಧೀನಾಧಿಕಾರಿಗಳನ್ನು ನೇಮಿಸಲಾಗಿದೆ ಎಂದರು.

ಅಲ್ಲದೆ ಪೊಲೀಸ್ ಸಹಕಾರವನ್ನು ನೀಡುವಂತೆ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಕೋರಲಾಗಿದೆ. ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಸಾಮಾಜಿಕ ಅಂತರ, ಮಾಸ್ಕ್, ಸ್ಯಾನಿಟೈಜರ್, ಥರ್ಮಲ್ ಸ್ಕ್ಯಾನ್ ಮಾಡುವಂತೆ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂಧಿಗಳನ್ನು ನೇಮಕ ಮಾಡುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಸೋಂಕಿನ ಸಂಶಯಾಸ್ಪದ ಅಭ್ಯರ್ಥಿಗಳಿದ್ದಲ್ಲಿ ಅಂತಹವರಿಗಾಗಿ ಪ್ರತ್ಯೇಕವಾಗಿ ಪರೀಕ್ಷೆಗಳನ್ನು ನಡೆಸುವಂತೆ ಸೂಚಿಸಲಾಗಿದೆ. ಪರೀಕ್ಷೆ ನಡೆಯುವ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200ಮೀಟರ್ ಪ್ರದೇಶದ ವ್ಯಾಪ್ತಿಯಲ್ಲಿ ಸಾರ್ವಜನಿಕರು ಸಂಚರಿಸುವುದು, ಗುಂಪುಗೂಡುವುದನ್ನು ನಿರ್ಬಂಧಿಸಿ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ.

ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಗೆ ನಿಯೋಜಿತರಾದ ಅಧಿಕಾರಿ, ಸಿಬ್ಬಂಧಿಗಳನ್ನು ಹೊರತುಪಡಿಸಿ ಇತರೆ ವ್ಯಕ್ತಿಗಳು ಕೇಂದ್ರ ಪ್ರವೇಶಿಸುವುದನ್ನು ನಿರ್ಬಂಧಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಅವ್ಯವಹಾರ ನಡೆಯದಂತೆ ಮುಂಜಾಗ್ರತಾ ಕ್ರಮವಹಿಸಲು ಸೂಚಿಸಲಾಗಿದೆ. ಪರೀಕ್ಷೆ ನಡೆಯುವ ದಿನದಂದು ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ ಟೈಪಿಂಗ್, ಝೆರಾಕ್ಸ್ ಹಾಗೂ ಫ್ಯಾಕ್ಸ್ ಅಂಗಡಿಗಳು ತೆರೆಯದಂತೆ ಸೂಚಿಸಲಾಗಿದೆ ಎಂದರು.

ಪರೀಕ್ಷಾ ಕಾರ್ಯಕ್ಕೆ ನಿಯೋಜಿತರಾದ ಅಧಿಕಾರಿ ಮತ್ತು ಸಿಬ್ಬಂಧಿಗಳು ಸದಾ ಜಾಗೃತವಾಗಿದ್ದು, ತಮ್ಮ ಜವಾಬ್ದಾರಿಯರಿತು ಕಾರ್ಯನಿರ್ವಹಿಸುವಂತೆ ಸೂಚಿಸಿದ ಅವರು, ಪರೀಕ್ಷಾ ಕೇಂದ್ರದೊಳಗೆ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಎಲ್ಲಾ ಮೂಲಭೂತ ಅಗತ್ಯಗಳನ್ನು ಒದಗಿಸುವಂತೆ ಸೂಚಿಸಿದರು.

ಪರೀಕ್ಷಾರ್ಥಿಗಳು ಹಾಗೂ ನಿಯೋಜಿತ ಅಧಿಕಾರಿ-ಸಿಬ್ಬಂಧಿಗಳೂ ಸಹ ಪರೀಕ್ಷಾ ಕೇಂದ್ರಕ್ಕೆ ಮೊಬೈಲ್, ಪುಸ್ತಕ, ಬ್ಯಾಗ್, ಪರ್ಸ್, ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು, ಸ್ಮಾರ್ಟವಾಚ್‍ಗಳನ್ನು ತರುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ ಎಂ.ಎಲ್.ವೈಶಾಲಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎನ್.ಎಂ.ರಮೇಶ್, ಖಜಾನಾಧಿಕಾರಿ ಶ್ರೀಮತಿ ಹೆಚ್.ಎಸ್.ಸಾವಿತ್ರಿ, ಆರ್.ಸಿ.ಹೆಚ್. ಡಾ. ನಾಗರಾಜ್‍ನಾಯ್ಕ್, ಶಿಕ್ಷಣಾಧಿಕಾರಿ ಶಂಕರಪ್ಪ ಸೇರಿದಂತೆ ನಿಯೋಜಿತ ಅಧಿಕಾರಿ – ಸಿಬ್ಬಂಧಿಗಳು ಉಪಸ್ಥಿತರಿದ್ದರು.

ಮದುವೆ ಅಂದರೆ ಪತ್ನಿಯ ಮೇಲೆ ಲೈಂಗಿಕ ಹಕ್ಕು ಸಿಕ್ಕಿದೆ ಎನ್ನುವಂತಿಲ್ಲ-ಹೈಕೋರ್ಟ್

0

ಮದುವೆ ಅಂದರೆ ಪತ್ನಿಯ ಮೇಲೆ ಲೈಂಗಿಕ ಹಕ್ಕು ಸಿಕ್ಕಿದೆ
ಎನ್ನುವಂತಿಲ್ಲ ಎಂಬ ಹಿನ್ನೆಲೆಯಲ್ಲಿ ರಾಜ್ಯ ಹೈಕೋರ್ಟ್ ಸೂಕ್ಷ್ಮವಾದ ವಿಚಾರಗಳ ಬಗ್ಗೆ ತನ್ನ ಚಿಂತನೆಗಳನ್ನ ನೀಡಿದೆ.

ವಿವಾಹವೆನ್ನುವುದು ಗಂಡನಿಗೆ ಹೆಂಡತಿಯ ಮೇಲೆ ಬಲವಂತ ಅತ್ಯಾಚಾರಮಾಡಲು
ಪರವಾನಗಿ ಅಲ್ಲ ಎಂದು ಮಹತ್ವದ ಆದೇಶ ಹೊರಡಿಸಿದೆ.

ಲೈಂಗಿಕ ಹಿಂಸೆಯನ್ನ ಅನುಭವಿಸಿದ
ಪತ್ನಿಯೇ ಪತಿಯ ವಿರುದ್ಧ ಅತ್ಯಾಚಾರದ ಕೇಸು ದಾಖಲಿಸಿದ್ದರು.
ಈ ಬಗ್ಗೆ ಪತಿಯ ಪರ ವಕೀಲರು ಆರೋಪಿ ಪತಿಯಾದ ಕಾರಣ ವಿನಾಯಿತಿ ನೀಡಬೇಕೆಂದು ವಾದ ಸಲ್ಲಿಸಿದ್ದರು.
ಏಕ ಸದಸ್ಯ ಪೀಠ ಎಲ್ಲವನ್ನೂ ಆಲಿಸಿ ಕೊನೆಗೆ ತನ್ನ ತೀರ್ಪು ನೀಡಿದೆ.
ಸಂವಿಧಾನದ ಅಡಿಯಲ್ಲಿ ಮಾನವ ಜೀವಿಗಳೆಲ್ಲ ಸಮಾನರೆ.ಪುರುಷರಾಗಲೀ,ಮಹಿಳೆಯಾಗಲೀ ಅಥವಾ ಇನ್ಯಾರೇ ಆಗಿದ್ದರೂ ಸಂವಿಧಾನದ14 ನೇ ವಿಧಿಯ ಪ್ರಕಾರ ಸಮಾನತೆ ಸಮಾನತೆಯೇ ಇದರಲ್ಲಿ ಯಾವುದೇ ರಾಜಿ ಇಲ್ಲ ಎಂದು ನ್ಯಾಯಪೀಠ ಹೇಳಿದೆ.

ಡಾ.ಪುನೀತ್ ಅಭಿನಯದ ಜೇಮ್ಸ್ಸಿನಿಮಾ ಎತ್ತಂಗಡಿ ಪ್ರಯತ್ನವಿಲ್ಲ- ಬೊಮ್ಮಾಯಿ

0

ಈಗಾಗಲೇ ಪ್ರದರ್ಸದಿತವಾಗುತ್ತಿರುವ ಡಾ.ಪುನೀತ್ ರಾಜ್ ಕುಮಾರ್ ಅಭಿನಯದ ಜೇಮ್ಸ್
ಚಿತ್ರವನ್ನ ಅನಾವಶ್ಯಕವಾಗಿ ಥಿಯೇಟರ್ ಗಳಿಂದ ತೆಗೆಯುವಂತಿಲ್ಲ ಎಂದು ಮುಖ್ಯಮಂತ್ರಿ
ಬಸವರಾಜ ಬೊಮ್ಮಾಯಿ ಕಟುವಾಗಿ ಎಚ್ಚರಿಸಿದ್ದಾರೆ.
ಮಾಧ್ಯಮಗಳಲ್ಲಿ ಈ ಬಗ್ಗೆ ಊಹಾಪೋಹ ವರದಿಗಳು ಬರುತ್ತಿವೆ.
ಈ ವಿಚಾರವಾಗಿ ಶಿವರಾಜ್ ಕುಮಾರ್ ಮತ್ತು ರಾಜ್ಯ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರ ಜೊತೆ ಮಾತಾಡಿದ್ದೇನೆ.ಏನೇ ಸಮಸ್ಯೆ ಇದ್ದರೂನ ಗಮನಕ್ಕೆ ತನ್ನಿ ಸರಿಪಡಿಸುವೆ ಎಂದು ಹೇಳಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
ಬಹಳ ಜೆಪಿ ಶಾಸಕರಿಂದಲೇ ಎತ್ತಂಗಡಿ ಪ್ರಯತ್ನವಾಗುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ.ಈ ಹಿನ್ನೆಲೆಯಲ್ಲಿ ಅದೆಲ್ಲಾ ಸುಳ್ಳು. ಕಾಂಗ್ರೆಸ್ ಪಕ್ಷ ಈಗಾಗಲೇ ಇದನ್ನ ಪ್ರಸ್ತಾಪಿಸಿ ಮಾತಾಡುತ್ತಿದೆ. ಸಿನಿಮಾ ವಿಷಯದಲ್ಲೂ ರಾಜಕೀಯ ಮಾಡುತ್ತಿದ್ದಾರೆ.ಎಷ್ಟು ಕೀಳುಮಟ್ಟಕ್ಕೆ ಹೋಗ್ತಿದೆ ನೋಡಿ.ಬೇರೆ ಏನೂ ವಿಷಯವಿಲ್ಲವಲ್ಲ ಎಂದು ಕಾಂಗ್ರೆಸ್ ವಿರುದ್ಧ ಹರಿಹಾಯ್ದರು

ಶಾಲೆಗಳಲ್ಲಿ ಮಧ್ಯಾಹ್ನನದ ಬಿಸಿಯೂಟ ಪುನರಾರಂಭಿಸಿ

0

ಲೋಕಸಭೆಯಲ್ಲಿ ಸೋನಿಯಾ ಗಾಂಧಿ ಅವರು ಸರ್ಕಾರವು ಕೊರೋನ ಕಾರಣ ತಡೆದಿದ್ದ ಶಾಲೆಗಳಲ್ಲಿನ ಮಧ್ಯಾಹ್ನದ ಬಿಸಿಯೂಟ ವ್ಯವಸ್ಥೆ
ಪುನರಾರಂಭಿಸಲು ಮನವಿ ಮಾಡಿದ್ದಾರೆ.

ಮೂರು ವರ್ಷದೊಳಗಿನ ಮಕ್ಕಳು, ಗರ್ಭಿಣಿಯರು ಮತ್ತು ಎದೆಹಾಲುಣಿಸುವ ತಾಯಂದಿರಿಗೆ ಬಿಸಿಯೂಟ ಲಭ್ಯವಾಗುವಂತೆ ಸರ್ಕಾರ ಮಾಡಬೇಕೆಂದು ಅವರು ಕೋರಿದ್ದಾರೆ.
ಮಕ್ಕಳೇ ದೇಶದ ಭವಿಷ್ಯ ಅವರಿಗೆ ಪುಷ್ಠಿಕರ ಆಹಾರ ನೀಡುವುದೂ ಅವಶ್ಯ ಎಂಬ ಹಿನ್ನೆಲೆಯಲ್ಲಿ
ಮಾತನಾಡಿದ ಅವರು
ಪ್ರಸ್ತುತ ಬಿಸಿಯೂಟ ನಿಲ್ಲಿಸಬಾರದು ಮತ್ತೆ ಬೇಗ ಮುಂದುವರೆಯಲಿ ಎಂಬ ಸೋನಿಯಾ ಅವರ ಕಾಳಜಿ ಸಾಮಾಜಿಕವಾಗಿ ಗಮನ ಸೆಳೆದಿದೆ ಎನ್ನಬಹುದು.

ಕೀವ್ ನ ಪ್ರತೀ ಸಣ್ಣಭಾಗವನ್ನೂ ರಕ್ಷಿಸುತ್ತೇವೆ- ಮೇಯರ್ ವಿಟಾಲಿ

0

ರಷ್ಯಾದ ಮುಂದೆ ಮಂಡಿಯೂರುವುದಕ್ಕಿಂತ ಸಾಯುವುದೇ ಲೇಸು ಎಂದು ಕೀವ್ ಮೇಯರ್ ಹೇಳಿದ್ದಾರೆ.

ಕೀವ್ ನಗರದ ಸುತ್ತಮುತ್ತಲಿನ ಹಲವಾರು ಪ್ರದೇಶಗಳಲ್ಲಿ ಸುತ್ತುವರಿದಿದ್ದ ರಷ್ಯಾದ ಸೈನ್ಯವನ್ನು ಹಿಮ್ಮೆಟ್ಟಿಸಿರುವುದಾಗಿ ಕೀವ್ ನಗರದ ಮೇಯರ್ ತಿಳಿಸಿದ್ದಾರೆ.

ಉಕ್ರೇನ್ ರಾಜಧಾನಿಯನ್ನ ರಷ್ಯಾಗೆ ಒಪ್ಪಿಸಲ್ಲ. ಬದಲಾಗಿ ಇಲ್ಲಿನ ಪ್ರತಿ ಕಟ್ಟಡವನ್ನು ರಕ್ಷಣೆ ಮಾಡುವುದಾಗಿ ಮೇಯರ್ ವಿಟಾಲಿ ಕ್ಲಿಟ್ಸ್ಚ್ ಕೊ ಪ್ರತಿಜ್ಞೆ ಮಾಡಿದರು. ಕೀವ್ ನಗರದ ಉತ್ತರ ಮತ್ತು ಪೂರ್ವ ಹೊರವಲಯದಲ್ಲಿ ರಷ್ಯಾ ಯುದ್ಧಕ್ಕಿಳಿದಿತ್ತು. ಇದೀಗ ಕೀವ್ ನಮ್ಮ ತೆಕ್ಕೆಯಲ್ಲಿ ಸುರಕ್ಷಿತವಾಗಿದೆ. ಈಗಾಗಲೇ ಸಣ್ಣ ನಗರಗಳಾದ ಮಕರಿವ್ ಮತ್ತು ಇರ್ಪಿನ್ ಉಕ್ರೇನ್ ಸೇನೆಯಿಂದ ರಕ್ಷಿಸಲ್ಪಟ್ಟಿದೆ ಎಂದಿದ್ದಾರೆ.

ಕಳೆದ ಫೆಬ್ರವರಿ 28 ರಂದು ರಷ್ಯಾ ಸೇನಾ ಪಡೆ ಕೀವ್ ಹೊರ ವಲಯಗಳವರೆಗೆ ನುಗ್ಗಿ ಬಂದಿತ್ತು. ಅದ್ರೆ ತಿಂಗಳು ಕಳೆದ್ರೂ ರಷ್ಯಾ ಕೀವ್ ನಗರವನ್ನ ವಶಕ್ಕೆ ಪಡೆಯಲು ವಿಫಲವಾಗಿದ್ದು, ಉಕ್ರೇನ್ ಪಡೆ ಹೊಡೆದೋಡಿಸಿದೆ. ರಾಜಧಾನಿ ಕೀವ್ ಉಕ್ರೇನ್ ಹೃದಯದಂತಿದ್ದು, ಇದನ್ನ ತನ್ನ ತೆಕ್ಕೆಗೆ ಪಡೆಯಲು ರಷ್ಯಾ ಹವಣಿಸುತ್ತಿದೆ. ಆದರೆ ಈ ಯತ್ನದಲ್ಲಿ ವಿಫಲವಾಗಿದ್ದು, ಕೀವ್ ನಗರದ ಪ್ರತಿ ಕಟ್ಟಡ, ಪ್ರತಿ ರಸ್ತೆ , ಪ್ರತಿ ಸಣ್ಣ ಭಾಗವನ್ನೂ ನಾವು ಉಳಿಸಿಕೊಳ್ಳಲು ಹೋರಾಡುವುದಾಗಿ ಕೀವ್ ಮೇಯರ್ ವಿಟಾಲಿ ಕ್ಲಿಟ್ಸ್ಚ್ ಕೊ ಹೇಳಿದ್ದಾರೆ.

ಮುಗಿಯದ ಯುದ್ಧ ಮಾನವೀಯ ದೃಷ್ಟಿ ಕೊರತೆಯ ಪುಟಿನ್

0

ಯೂಕ್ರೇನ್ ಮೇಲೆ ರಷ್ಯಾ ಫೆ.24ರಂದು ದಾಳಿ ಆರಂಭಿಸಿದ್ದು, ಒಂದು ತಿಂಗಳು ಪೂರ್ಣವಾಗಿದೆ. ಮೂರನೇ ವಿಶ್ವ ಸಮರದ ಆತಂಕ ಸೃಷ್ಟಿಸಿರುವ ಈ ಯುದ್ಧ ಇನ್ನೂ ಮುಂದುವರಿದಿದೆ. ಯೂಕ್ರೇನ್ ಸಮರಾಂಗಣವಾಗಿದ್ದು, ಸಾಕಷ್ಟು ನಾಶನಷ್ಟಗಳನ್ನು ಅನುಭವಿಸಿದೆ.

ಆದರೆ ಅದರ ನಿಖರ ಚಿತ್ರಣ ಇನ್ನೂ ಜಗತ್ತಿಗೆ ಲಭ್ಯವಾಗಿಲ್ಲ ಎಂಬುದು ವಾಸ್ತವ.

ಎರಡನೇ ವಿಶ್ವ ಯುದ್ಧದ ನಂತರದಲ್ಲಿ ಯುರೋಪ್ ಖಂಡದಲ್ಲಿ ನಡೆಯುತ್ತಿರುವ ಅತಿದೊಡ್ಡ ಕದನ ಇದಾಗಿದ್ದು, ತಿಂಗಳು ಕಳೆದರೂ ತೀವ್ರತೆ ಹೆಚ್ಚುತ್ತಿದೆ. ಇದು ಜಗತ್ತಿನ ಕಳವಳವನ್ನು ಹೆಚ್ಚು ಮಾಡಿದೆ. ಉಭಯ ರಾಷ್ಟ್ರಗಳ ನಡುವಿನ ಶಾಂತಿಮಾತುಕತೆ ನಾಲ್ಕಾರು ಸುತ್ತುಗಳನ್ನು ಕಂಡಿದೆಯಾದರೂ ಫಲ ಕಂಡಿಲ್ಲ.

ಯುದ್ಧ ನಿರತ ರಷ್ಯಾ ಮೇಲೆ ಅಮೆರಿಕ ಮತ್ತು ನ್ಯಾಟೋ ಮಿತ್ರ ರಾಷ್ಟ್ರಗಳು ವಿವಿಧ ನಿರ್ಬಂಧಗಳನ್ನು ಹೇರಿವೆ.

ಆ ಮೂಲಕ ಯುದ್ಧ ತೀವ್ರತೆ ಕಡಿಮೆ ಮಾಡುವ ಪ್ರಯತ್ನ ನಡೆಸಿವೆ. ಆದರೆ, ಇದಾವುದೂ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುತಿನ್ ಅವರ ನಿಲುವನ್ನು ಬದಲಾಯಿಸುವಲ್ಲಿ ಸಫಲವಾಗಿಲ್ಲ. ಯೂಕ್ರೇನ್​ಗೆ ಅಮೆರಿಕ ಮತ್ತು ನ್ಯಾಟೋ ಮಿತ್ರರಾಷ್ಟ್ರಗಳು ಸೇನಾ ಮತ್ತು ಇತರೆ ನೆರವುಗಳನ್ನು ಪೂರೈಸುತ್ತಿದ್ದು, ರಷ್ಯಾಕ್ಕೆ ತಡೆಯೊಡ್ಡುವುದಕ್ಕೆ ಬೇರೆ ಬೇರೆ ರೀತಿಯಲ್ಲಿ ಪ್ರಯತ್ನ ನಡೆಸಿವೆ ಎಂದು ತಿಳಿದುಬಂದಿದೆ.

ರಷ್ಯಾ-ಯೂಕ್ರೇನ್ ನಾಗರಿಕರು ಈ ಯುದ್ಧದ ಕಾರಣ ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ರಷ್ಯಾ ಮೇಲೆ ಉಕ್ರೇನ್ ದಾಳಿ ನಡೆಸಿದ ವರದಿ ಬಂದಿಲ್ಲ. ಆದರೂ, ತೃತೀಯ ರಾಷ್ಟ್ರಗಳು ವಿಧಿಸಿರುವ ನಿರ್ಬಂಧದ ಕಾರಣ ರಷ್ಯಾ ಜನರ ಬದುಕು ತಲ್ಲಣಗೊಂಡಿದೆ. ಉಕ್ರೇನ್ ನಲ್ಲಿ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇದೇ ಭೀತಿಯಿಂದ 35 ಲಕ್ಷಕ್ಕೂ ಹೆಚ್ಚು ಜನ ನೆರೆ ರಾಷ್ಟ್ರಗಳಲ್ಲಿ ಆಶ್ರಯ ಪಡೆದುಕೊಂಡಿದ್ದಾರೆ.

ಅಮೆರಿಕ ಮತ್ತು ನ್ಯಾಟೋ ರಾಷ್ಟ್ರಗಳ ಹಿತಕ್ಕೆ ಪೂರಕವಾಗಿ ನಡೆಯುತ್ತಿರುವ ಯೂಕ್ರೇನ್​ನ ರಾಜಧಾನಿ ಕಿಯೆವ್ ವಶಪಡಿಸಿಕೊಂಡು ಸರ್ಕಾರ ಪತನಗೊಳಿಸುವ ರಷ್ಯಾ ಸರ್ಕಾರದ ಪ್ರಯತ್ನಕ್ಕೆ ಇನ್ನೂ ನಿರೀಕ್ಷಿತ ಫಲ ಸಿಕ್ಕಿಲ್ಲ. ರಷ್ಯಾ ಪರ ಸರ್ಕಾರವನ್ನು ಅಲ್ಲಿ ಸ್ಥಾಪಿಸಿ, ನ್ಯಾಟೋ ರಾಷ್ಟ್ರಗಳು ತನ್ನ ರಾಷ್ಟ್ರದ ಸುತ್ತ ಇರುವುದನ್ನು ತಪ್ಪಿಸಲು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುತಿನ್ ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ.

ಕಾಶ್ಮೀರ ಬಗ್ಗೆ ಚೀನಾ ಟೀಕೆ ಭಾರತ ದಿಟ್ಟ ಉತ್ತರ

0

ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶಕ್ಕೆ ಸಂಬಂಧಿಸಿದ ವಿಷಯಗಳು ಸಂಪೂರ್ಣವಾಗಿ ಭಾರತದ ಆಂತರಿಕ ವ್ಯವಹಾರಗಳಾಗಿವೆ.

ಚೀನಾ ಸೇರಿದಂತೆ ಇತರ ದೇಶಗಳು ಈ ಬಗ್ಗೆ ಪ್ರತಿಕ್ರಿಯೆ ನೀಡಲು ಯಾವುದೇ ಹಕ್ಕು ಹೊಂದಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ.

ಜಮ್ಮು ಕಾಶ್ಮೀರ ಕುರಿತು ಚೀನಾದ ವಿದೇಶಾಂಗ ಸಚಿವ ವಾಂಗ್ ಯೀ ಅವರ ಟೀಕೆಗಳನ್ನು ಭಾರತ ಬುಧವಾರ ತಿರಸ್ಕರಿಸಿದೆ.

ಇತರ ದೇಶಗಳಿಗೆ ತನ್ನ ಆಂತರಿಕ ವಿಷಯಗಳ ಬಗ್ಗೆ ಪ್ರತಿಕ್ರಿಯಿಸಲು ಯಾವುದೇ ಸ್ಥಾನ, ಅವಕಾಶ ಇಲ್ಲ ಎಂದು ಒತ್ತಿ ಹೇಳಿದೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯ ತನ್ನ ಹೇಳಿಕೆಯಲ್ಲಿ, ಇಸ್ಲಾಮಾ ಬಾದ್‌ನಲ್ಲಿ ನಡೆದ ಒಐಸಿ ಸಭೆಯ ಉಧ್ಘಾಟನಾ ಸಮಾರಂಭದಲ್ಲಿ ಚೀನಾದ ವಿದೇಶಾಂಗ ಸಚಿವ ವಾಂಗ್ ಯೀ ಅವರಿಗೆ ಜಮ್ಮು ಕಾಶ್ಮೀರದ ಬಗ್ಗೆ ಮಾತನಾಡಲು ನಾವು ಅವಕಾಶ ಕೊಟ್ಟಿಲ್ಲ ಎಂದು ಹೇಳಿದೆ.

ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶಕ್ಕೆ ಸಂಬಂಧಿಸಿದ ವಿಷಯಗಳು ಸಂಪೂರ್ಣವಾಗಿ ಭಾರತದ ಆಂತರಿಕ ವ್ಯವಹಾರಗಳಾಗಿವೆ. ಚೀನಾ ಸೇರಿದಂತೆ ಇತರ ದೇಶಗಳು ಈ ಬಗ್ಗೆ ಪ್ರತಿಕ್ರಿಯೆ ನೀಡಲು ಹಾಗೂ ಮಾತನಾಡುವ ಹಕ್ಕು ಹೊಂದಿಲ್ಲ ಎಂದು ಭಾರತ ಸ್ಪಷ್ಟ ಮಾತುಗಳಲ್ಲಿ ಹೇಳಿದೆ.
ಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರ ವಿಚಾರವನ್ನು ಪ್ರಸ್ತಾಪಿಸಿ, ಭದ್ರತಾ ಮಂಡಳಿಯ ನಿರ್ಣಯಗಳು ಮತ್ತು ದ್ವಿಪಕ್ಷೀಯ ಒಪ್ಪಂದಗಳಿಗೆ ಅನುಗುಣವಾಗಿ ಕಾಶ್ಮೀರ ವಿವಾದ ಸರಿಯಾಗಿ ಮತ್ತು ಶಾಂತಿಯುತವಾಗಿ ಪರಿಹರಿಸಿಕೊಳ್ಳುತ್ತದೆ ಎಂದು ಚೀನಾ ನಂಬುತ್ತದೆ ಎಂದು ವಾಂಗ್ ಯೀ ಹೇಳಿದ್ದರು.

ಈ ಹಿನ್ನೆಲೆಯಲ್ಲಿ ಭಾರತ ಸ್ಪಷ್ಟನೆ ನೀಡಿದ್ದು, ಆಂತರಿಕ ವಿಚಾರದಲ್ಲಿ ಯಾರೂ ಕೂಡಾ ಮಾತನಾಡಬಾರದು ಎಂದು ತಕ್ಕ ಪ್ರತ್ಯುತ್ತರ ನೀಡಿದೆ.

ವಿದ್ಯಾರ್ಥಿಗಳಿಗೆ ಪಾಠ ಹೇಳಿದ ರೋಬೋ ಬೆಂಗಳೂರಲ್ಲಿ ಪ್ರಾತ್ಯಕ್ಷಿಕೆ

0

ಪಾಠ- ಪ್ರವಚನಗಳಲ್ಲಿ ಬೋಧಕರಿಗೂ ವಿದ್ಯಾರ್ಥಿಗಳಿಗೂ ಸಹಕರಿಸಿ, ಕಲಿಕೆಯನ್ನು ಸುಲಭವಾಗಿಸುವಂತಹ `ಈಗಲ್’ ರೋಬೋ ಪರೀಕ್ಷಾರ್ಥ ಪ್ರಾತ್ಯಕ್ಷಿಕೆಯು ಬುಧವಾರದಂದು ಮಲ್ಲೇಶ್ವರಂ 13ನೇ ಅಡ್ಡರಸ್ತೆಯಲ್ಲಿರುವ ಬಾಲಕಿಯರ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು.

ಕ್ಷೇತ್ರದ ಶಾಸಕರೂ ಆಗಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಿತು.

ಶಾಲೆಯ ಬೋಧಕರು ಮತ್ತು ವಿದ್ಯಾರ್ಥಿನಿಯರು ಇದರಲ್ಲಿ ಪಾಲ್ಗೊಂಡು, ರೋಬೋದ ಕಾರ್ಯಕ್ಷಮತೆಗೆ ಸಾಕ್ಷಿಯಾದರು. ಈ ಸಂದರ್ಭದಲ್ಲಿ ಅವರು ರೋಬೊಗೆ ಹಲವು ಪ್ರಶ್ನೆಗಳನ್ನು ಕೇಳಿದರು. ಹಾಗೆಯೇ, ಅದು ನೀಡಿದ ಉತ್ತರ ಮತ್ತು ನೆರವನ್ನು ಕಂಡು ಬೆರಗಾದರು.

ನಂತರ ಮಾತನಾಡಿದ ಅಶ್ವತ್ಥನಾರಾಯಣ ಅವರು, ಇದು ಪ್ರಾಯೋಗಿಕ ಕಾರ್ಯಕ್ರಮವಾಗಿದ್ದು, ರೋಬೋದ ಕಾರ್ಯ ಸಾಮರ್ಥ್ಯವನ್ನು ವೀಕ್ಷಿಸಲಾಗಿದೆ. ಸರಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಜಾಗತಿಕ ಗುಣಮಟ್ಟದ ಬೋಧನೆಯ ಸಲುವಾಗಿ, ಇಂತಹ ರೋಬೋ ಗಳು ಇದ್ದರೆ ಒಳ್ಳೆಯದು ಎಂದು ಅಭಿಪ್ರಾಯಪಟ್ಟರು.

ರೋಬೊ‌ ಶಿಕ್ಷಕರಿಗೆ ಪರ್ಯಾಯ ಅಲ್ಲ. ಆದರೆ ಶಿಕ್ಷಕರಿಗೆ ಬೋಧನೆಯಲ್ಲಿ ಸಹಕರಿಸುವ ಕೆಲಸ ಮಾಡಲಿದೆ. ಇದರಿಂದ ವಿದ್ಯಾರ್ಥಿಗಳ ಕಲಿಕೆಯ ಮಟ್ಟ ಕೂಡ ಹೆಚ್ಚಾಗಲಿದೆ ಎಂದು ಹೇಳಿದರು.

21ನೇ ಶತಮಾನವು ತಂತ್ರಜ್ಞಾನದ ಯುಗವಾಗಿದ್ದು, ಬೋಧನೆಯಲ್ಲಿ ಇದರ ಅಳವಡಿಕೆ ಅಗತ್ಯವಾಗಿದೆ. ಇದರಿಂದಾಗಿ, ಸರಕಾರಿ ಶಾಲಾಕಾಲೇಜುಗಳು ಕೂಡ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಕಡಿಮೆಯಿಲ್ಲದಂತೆ ವಿದ್ಯಾರ್ಥಿಗಳನ್ನು ಆಕರ್ಷಿಸಬಹುದು. ಇದರಿಂದ ಬಡ ಕುಟುಂಬಗಳ ಮಕ್ಕಳಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.

ಮುಂದಿನ ದಿನಗಳಲ್ಲಿ `ಈಗಲ್’ ರೋಬೋವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ತೋರಿಸಲಾಗುವುದು. ನಂತರ ಅವರಿಂದಲೇ ಈ ಯೋಜನೆಗೆ ಚಾಲನೆ‌ ಕೊಡಿಸುವ ಉದ್ದೇಶ ಇದೆ ಎಂದರು.

ಮಲ್ಲೇಶ್ವರ ಕ್ಷೇತ್ರದ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಇದನ್ನು ಜಾರಿ ಮಾಡುವ ಉದ್ದೇಶ ಇದೆ ಎಂದು ಅವರು ವಿವರಿಸಿದರು.

ಇಂಡಸ್ ಟ್ರಸ್ಟ್ ನ ಸ್ಥಾಪಕ ಸಿಇಒ ಹಾಗೂ ವ್ಯವಸ್ಥಾಪಕ ನಿರ್ದೇಶಕ ಲೆ.ಜನರಲ್ ಅರ್ಜುನ್ ರಾಯ್ ಈ ಸಂದರ್ಭದಲ್ಲಿ ಇದ್ದರು.