ಕೇಂದ್ರ, ರಾಜ್ಯ ಸರ್ಕಾರಿ ನೌಕರರು ವಜಾಗೊಂಡಿದ್ದಲ್ಲಿ, ಕಡ್ಡಾಯ ನಿವೃತ್ತಿಯ ಶಿಕ್ಷೆಗೆ ಒಳಗಾಗಿದ್ದಲ್ಲಿ, ಅಂತವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡದಂತೆ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಲಾಗಿದೆ.
ಕೇಂದ್ರ, ರಾಜ್ಯ ಸರ್ಕಾರ, ಸಹಕಾರ ಸಂಘ ಅಥವಾ ಸಂಸ್ಥೆಯ ಸೇವೆಯಿಂದ ಕಡ್ಡಾಯ ನಿವೃತ್ತಿ ಹಾಗೂ ವಜಾಗೊಂಡಿರುವ ವ್ಯಕ್ತಿಯನ್ನು ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಸದಸ್ಯರಾಗಲು ಅನರ್ಹರನ್ನಾಗಿ ಮಾಡುವುದು ಸೇರಿದಂತೆ ವಿವಿಧ ಅಂಶಗಳನ್ನು ಒಳಗೊಂಡ ಕರ್ನಾಟಕ ಗ್ರಾಮ ಸ್ವರಾಜ್ ಹಾಗೂ ಪಂಚಾಯತ್ ರಾಜ್ ವಿಧೇಯಕವನ್ನು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ವಿಧಾನಸಭೆಯಲ್ಲಿ ಮಂಡಿಸಿದ್ದಾರೆ.
ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣಾ ಕ್ಷೇತ್ರಕ್ಕೆ ಜನಸಂಖ್ಯೆ ಮಿತಿ ನಿಗದಿ ಮಾಡುವ, ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಸದಸ್ಯರಾಗಲು ಅರ್ಹತೆಗಳನ್ನು ಬಿಗಿಗೊಳಿಸುವ ಮಹತ್ವದ ತಿದ್ದುಪಡೆ ಕಾಯ್ದೆ ಇದಾಗಿದೆ. ತಿದ್ದುಪಡಿ ಪ್ರಕಾರ, ಕೇಂದ್ರ ಅಥವಾ ರಾಜ್ಯ ಸರ್ಕಾರದ ಸೇವೆಯಿಂದ ಕಡ್ಡಾಯ ನಿವೃತ್ತಿ ಅಥವಾ ವಜಾಗೊಂಡಿರುವ ವ್ಯಕ್ತಿ, ಸಹಕಾರ ಸಂಘ-ಸಂಸ್ಥೆಯ ಸೇವೆಯಿಂದ ಅಥವಾ ಅಧ್ಯಕ್ಷ-ಸದಸ್ಯ ಸ್ಥಾನದಿಂದ ತೆಗೆದುಹಾಕಲಾಗಿರುವ ವ್ಯಕ್ತಿಯು ಮೂರು ಹಂತದ ಪಂಚಾಯಿತಿ ವ್ಯವಸ್ಥೆಯ ಸದಸ್ಯರಾಗಲು ಅನರ್ಹರು ಎಂದು ಸ್ಪಷ್ಟಪಡಿಸಲಾಗಿದೆ.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
KLIVE at Google News App
KLIVE Android App on Google Play Store
Download the most loved Klive App for your Android phone or tablet.
ಶಿವಮೊಗ್ಗದ ಕೋಟೆ ಶ್ರೀ ಮಾರಿಕಾಂಬ ದೇವಿ ಜಾತ್ರೆಗೆ ವಿದ್ಯುಕ್ತ ಚಾಲನೆ ದೊರಕಿದೆ. ಮುಂಜಾನೆಯಿಂದ ಗಾಂಧಿ ಬಜಾರ್‌ನಲ್ಲಿ ಮಾರಿಕಾಂಬ ದೇವಿಗೆ ಪೂಜೆ ಸಲ್ಲಿಸುವ ಮೂಲಕ ಜಾತ್ರೆ ಆರಂಭವಾಗಿದೆ.
ಗಾಂಧಿ ಬಜಾರ್‌ನಲ್ಲಿ ತಾಯಿಯ ತವರು ಮನೆ ಎಂಬ ನಂಬಿಕೆ ಇದೆ.ಈ ಹಿನ್ನೆಲೆಯಲ್ಲಿ ಗಾಂಧಿ ಬಜಾರ್‌ನಲ್ಲಿ ಮಂಟಪ ನಿರ್ಮಿಸಿ ಮಾರಿಕಾಂಬಾ ದೇವಿಯನ್ನು ಪ್ರತಿಷ್ಠಾಪಿಸಲಾಗಿದೆ. ಪ್ರಥಮ ಪೂಜೆಗೂ ಮುನ್ನ ಪರದೆ ಸರಿಸಲಾಯಿತು. ಈ ಸಂದರ್ಭ ಭಕ್ತರು ಘೋಷಣೆಗಳು ಮೊಳಗಿದವು.
ನಗರದ ಬಿ.ಬಿ ರಸ್ತೆಯ ಬ್ರಾಹ್ಮಣ ಸಮಾಜದ ನಾಡಿಗರ ಕುಟುಂಬವರು ಕೋಟೆ ಮಾರಿಕಾಂಬಾ ದೇವಿಗೆ ಪ್ರಥಮ ಪೂಜೆ ಸಲ್ಲಿಸಿದ್ದಾರೆ. ಮಂಗಳಾರತಿ ಬೆಳಗುತ್ತಿರುವುದನ್ನು ಕಂಡು ಭಕ್ತರು ಪುನೀತರಾದರು. ನಂತರ ದೇವಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ.
ಮಾರಿಕಾಂಬಾ ದೇವಿಯ ತವರು ಗಾಂಧಿ ಬಜಾರ್‌ನಲ್ಲಿ ದರ್ಶನ ಪಡೆಯಲು ಭಕ್ತಸಾಗರ ಹರಿದು ಬಂದಿದೆ. ಮಂಗಳವಾರ ಬೆಳಗಿನ ಜಾವದಿಂದಲೇ ಸರತಿಯಲ್ಲಿ ನಿಂತಿರುವ ಜನರು, ದೇವಿಯ ದರ್ಶನ ಪಡೆಯುತ್ತಿದ್ದಾರೆ. ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಕೋಟೆ ಶ್ರೀ ಮಾರಕಾಂಬೆ ಜಾತ್ರೆ ಅಂಗವಾಗಿ ಶಿವಮೊಗ್ಗ ನಗರದ ವಿವಿದೆಡೆ ವಾಹನಗಳಿಗೆ ಬದಲಿ ಮಾರ್ಗ ಸೂಚಿಸಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ. ಮಾರ್ಚ್ 22ರಿಂದ ಮಾರ್ಚ್ 26ರವರೆಗೆ ಜಾತ್ರೆ ನಡೆಯಲಿದೆ.
ಶಿವಮೊಗ್ಗ ನಗರದ ಗಾಂಧಿಬಜಾರ್ ಮತ್ತು ಮಾರಿಕಾಂಬಾ ದೇವಸ್ಥಾನದ ಸುತ್ತಮುತ್ತಲಿನ ಹಾಗೂ ಎಸ್.ಪಿ.ಎಂ. ರಸ್ತೆಯಲ್ಲಿ ಸುಗಮ ಸಂಚಾರದ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ ಮಾರ್ಗಗಳನ್ನು ಬದಲಾವಣೆ ಮಾಡಲಾಗಿದೆ.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
KLIVE at Google News App
KLIVE Android App on Google Play Store
Download the most loved Klive App for your Android phone or tablet.
ಭಾರತೀಯ ಹವಾಮಾನ ಇಲಾಖೆ ಅಸಾನಿ ಚಂಡಮಾರುತದ ಹಿನ್ನೆಲೆಯಲ್ಲಿ ಗುರುವಾರದವರೆಗೆ ಕರ್ನಾಟಕದಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ.
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಬಂಗಾಳಕೊಲ್ಲಿ ಮತ್ತು ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದೆ.ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಸೋಮವಾರದಿಂದ ಗುರುವಾರದವರೆಗೆ ಮಳೆ ಸುರಿಯಲಿದೆ. ಗುರುವಾರ ಮತ್ತು ಶುಕ್ರವಾರ ಉತ್ತರ ಜಿಲ್ಲೆಗಳಾದ ಗದಗ, ಹಾವೇರಿ, ಧಾರವಾಡ, ಬೆಳಗಾವಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆಯಿದ್ದರೆ, ಬೆಂಗಳೂರಿನಲ್ಲಿಯೂ ತುಂತುರು ಮಳೆಯಾಗುವ ನಿರೀಕ್ಷೆಯಿದೆ.
ಬೆಂಗಳೂರು ಮತ್ತು ಮೈಸೂರಿನ ಬಹುತೇಕ ಭಾಗಗಳಲ್ಲಿ ಭಾನುವಾರ ಧಾರಾಕಾರ ಮಳೆಯಾಗಿದೆ.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
KLIVE at Google News App
KLIVE Android App on Google Play Store
Download the most loved Klive App for your Android phone or tablet.
ವಿಶ್ವ ಜಲ ದಿನದ ಸಂದರ್ಭದಲ್ಲಿ ಪ್ರತಿ ಹನಿ ನೀರನ್ನು ಉಳಿಸುವ ಪ್ರತಿಜ್ಞೆ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ, ಜಲ ಸಂರಕ್ಷಣೆಗಾಗಿ ಸರ್ಕಾರ ವಿವಿಧ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಹೇಳಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಮೋದಿ ಅವರು ವಿಶ್ವ ಜಲ ದಿನದಂದು ಪ್ರತಿ ಹನಿ ನೀರನ್ನು ಉಳಿಸುವ ನಮ್ಮ ಪ್ರತಿಜ್ಞೆಯನ್ನು ಪುನರುಚ್ಚರಿಸೋಣ.
ನಮ್ಮ ರಾಷ್ಟ್ರದ ಜಲ ಸಂರಕ್ಷಣೆ ಮತ್ತು ನಮ್ಮ ನಾಗರಿಕರಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವ ಸಲುವಾಗಿ ಜಲ ಜೀವನ್ ಮಿಷನ್ ನಂತಹ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಮೋದಿಜಿ ಅವರು ಹೇಳಿದ್ದಾರೆ.
ಕಳೆದ ಕೆಲವು ವರ್ಷಗಳಿಂದ ರಾಷ್ಟ್ರದ ಎಲ್ಲಾ ಭಾಗಗಳಲ್ಲಿ ವಿನೂತನ ಪ್ರಯತ್ನಗಳು ನಡೆಯುವುದರೊಂದಿಗೆ ನೀರಿನ ಸಂರಕ್ಷಣೆ ಒಂದು ಸಾಮೂಹಿಕ ಆಂದೋಲನವಾಗಿ ಮಾರ್ಪಟ್ಟಿರುವುದು ಸಂತೋಷಕರವಾಗಿದೆ ಎಂದು ಹೇಳಿದ ಅವರು, ನೀರು ಉಳಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿರುವ ಎಲ್ಲ ವ್ಯಕ್ತಿಗಳು ಮತ್ತು ಸಂಸ್ಥೆಗಳನ್ನು ಶ್ಲಾಘಿಸಿದ್ದಾರೆ.
ಒಗ್ಗೂಡಿ ಮತ್ತಷ್ಟು ಜಲ ಸಂರಕ್ಷಣೆ ಮತ್ತು ಸುಸ್ಥಿರ ಗ್ರಹಕ್ಕೆ ಕೊಡುಗೆ ನೀಡೋಣ ಎಂದು ಮನವಿ ಮಾಡಿರುವ ಮೋದಿ, ಉಳಿಸಿದ ಪ್ರತಿ ಹನಿ ನಮ್ಮ ಜನರಿಗೆ ಸಹಾಯ ಮಾಡುತ್ತದೆ ಮತ್ತು ನಮ್ಮ ಪ್ರಗತಿಯನ್ನು ಹೆಚ್ಚಿಸುತ್ತದೆ ಎಂದಿದ್ದಾರೆ.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
KLIVE at Google News App
KLIVE Android App on Google Play Store
Download the most loved Klive App for your Android phone or tablet.
ದೇಶದಲ್ಲೇ ಮೊದಲ ಬಾರಿಗೆ ಸರ್ಕಾರದಿಂದ ಕ್ರಾಂತಿಕಾರಿ ನಿರ್ಧಾರ ಕೈಗೊಳ್ಳಲಾಗಿದೆ. ಯುದ್ಧಪೀಡಿತ ಉಕ್ರೇನ್ ನಿಂದ ವಾಪಸಾದ ವೈದ್ಯ ವಿದ್ಯಾರ್ಥಿಗಳಿಗೆ ರಾಜ್ಯದಲ್ಲಿ ಉಚಿತ ಶಿಕ್ಷಣ ನೀಡಲಾಗುವುದು ಎಂದು ತಿಳಿದುಬಂದಿದೆ.
ರಾಜ್ಯದ 60 ವೈದ್ಯಕೀಯ ಕಾಲೇಜುಗಳಲ್ಲಿ 700 ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗುವುದು. ಶಿಕ್ಷಣದ ವಿಧಾನ, ಅಧಿಕೃತ ಮಾನ್ಯತೆ ನಿರ್ಧಾರಕ್ಕೆ ಉನ್ನತ ಸಮಿತಿ ರಚಿಸಲಾಗುತ್ತದೆ.
ರಷ್ಯಾ -ಉಕ್ರೇನ್ ಯುದ್ಧದಿಂದ ಶೈಕ್ಷಣಿಕ ಭವಿಷ್ಯ ಅತಂತ್ರವಾಗಿರುವ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ.
ಸದ್ಯಕ್ಕೆ ವಿದ್ಯಾರ್ಥಿಗಳನ್ನು ಅಧಿಕೃತವಾಗಿ ನೋಂದಣಿ ಮಾಡಿಕೊಳ್ಳುವುದಿಲ್ಲ ಶುಲ್ಕ ವಿಧಿಸದೆ ಉಚಿತವಾಗಿ ವೈದ್ಯಕೀಯ ಕಲಿಕೆ ನೀಡಲಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
KLIVE at Google News App
KLIVE Android App on Google Play Store
Download the most loved Klive App for your Android phone or tablet.
ಯುದ್ಧಗೊನೆಗಾಣಿಸಲು ರಷ್ಯಾ ಮತ್ತು ಉಕ್ರೇನ್ ನಡುವೆ ಸೋಮವಾರ ನಡೆದ 5ನೇ ಸುತ್ತಿನ ನಿರ್ಣಾಯಕ ಶಾಂತಿಮಾತುಕತೆಯೂ ಫಲಿಸಿಲ್ಲ. ಹೀಗಾಗಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ, ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ನೇರವಾಗಿ ಭೇಟಿಯಾಗದ ಹೊರತು ತನ್ನ ದೇಶದಲ್ಲಿ ಯುದ್ಧವನ್ನು ಕೊನೆಗಾಣಿಸಲು ಈ ರೀತಿಯ ಮಾತುಕತೆಗಳಿಂದ ಸಾಧ್ಯವಿಲ್ಲ ಎಂದಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.
ನಾವು ರಷ್ಯಾ ಅಧ್ಯಕ್ಷರೊಂದಿಗೆ ಸಭೆ ನಡೆಸುವವರೆಗೆ, ಯುದ್ಧವನ್ನು ನಿಲ್ಲಿಸಲು ಸಾಧ್ಯವಿಲ್ಲ. ಅವರು ಏನು ಮಾಡುತ್ತಿದ್ದಾರೆ ಮತ್ತು ರಾಜಿ ಮಾಡಿಕೊಳ್ಳಲು ನಾವು ಒಪ್ಪಲಿಲ್ಲವಾದರೆ ಅವರು ಮುಂದೆ ಯಾವ ಹಾದಿ ಹಿಡಿಯುತ್ತಾರೆ ಎಂಬುದನ್ನು ಅರ್ಥಮಾಡಿಕೊಳ್ಳಲು ನಿಜವಾಗಿಯೂ ಸಾಧ್ಯವಿಲ್ಲ ಎಂಬುದನ್ನು ನಾನು ನಂಬುತ್ತೇನೆ ಎಂದು ಇಂಟರ್‌ಫ್ಯಾಕ್ಸ್ ಉಕ್ರೇನ್ ಉಲ್ಲೇಖಿಸಿರುವ ಸಂದರ್ಶನದಲ್ಲಿ ಝೆಲೆನ್‌ಸ್ಕಿ ಹೇಳಿದ್ದಾರೆ ಎನ್ನಲಾಗಿದೆ.
ಯುರೋಪಿಯನ್ ಪಬ್ಲಿಕ್ ಟೆಲಿವಿಷನ್ ನೆಟ್‌ವರ್ಕ್‌ಗಳಲ್ಲಿ ಸಂದರ್ಶನ ನೀಡಿದ ಝೆಲೆನ್‌ಸ್ಕಿ, ಉಕ್ರೇನ್‌ನಲ್ಲಿ ರಷ್ಯಾದ ಆಕ್ರಮಿತ ಪ್ರದೇಶಗಳಲ್ಲಿ ಏನು ಮಾಡಬೇಕೆಂದು ಇಂತಹ ಸಭೆಯಲ್ಲಿ ನಿರ್ಧರಿಸಲು ಸಾಧ್ಯವಿಲ್ಲ ಎಂದಿದ್ದಾರೆ.
ರಷ್ಯಾ ಆಕ್ರಮಿತ ಪ್ರದೇಶಗಳ ಸಮಸ್ಯೆಯನ್ನು ಪ್ರಸ್ತಾಪಿಸಲು ನಾನು ವ್ಲಾಡಿಮಿರ್ ಪುಟಿನ್ ಅವರೊಂದಿಗಿನ ಸಭೆಗೆ ಸಿದ್ಧನಿದ್ದೇನೆ. . ಆದರೆ, ಅವರಿಲ್ಲದ ಇಂತಹ ಸಭೆಯಲ್ಲಿ ಪರಿಹಾರ ಲಭ್ಯವಾಗುವುದಿಲ್ಲ ಎಂಬುದು ನನಗೆ ಖಾತರಿಯಾಗಿದೆ ಎಂದು ತಿಳಿಸಿದ್ದಾರೆ.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
KLIVE at Google News App
KLIVE Android App on Google Play Store
Download the most loved Klive App for your Android phone or tablet.
ಡಿಜಿಟಲ್ ಆರ್ಥಿಕತೆಯ ಸುಸ್ಥಿರತೆಗೆ ಸುರಕ್ಷತೆ, ಭದ್ರತೆ ಮತ್ತು ವಿಶ್ವಸಾರ್ಹತೆಗಳು ಆಧಾರಸ್ತಂಭಗಳಾಗಿದ್ದು, ನಾವೀನ್ಯತೆ ಕೂಡ ವ್ಯಾಪಕ ಪ್ರಮಾಣದಲ್ಲಿ ನಡೆಯಬೇಕಾಗಿದೆ. ಸೈಬರ್ ವಂಚನೆಯ ಪ್ರಕರಣಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಸರಕಾರವು ಶೀಘ್ರದಲ್ಲೇ ಸೈಬರ್ ಭದ್ರತಾ ನೀತಿ’ಯನ್ನು ಜಾರಿಗೆ ತರಲಿದೆ ಎಂದು ಐಟಿ, ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ತಿಳಿಸಿದ್ದಾರೆ.
ಅಸೋಚಂ ಸಂಘಟನೆಯು ವರ್ಚುಯಲ್ ರೂಪದಲ್ಲಿ ಏರ್ಪಡಿಸಿರುವ ಎರಡು ದಿನಗಳ ತನ್ನ 12ನೇ ಜಾಗತಿಕ ಸಮಾವೇಶದಲ್ಲಿ ಅವರು ಮಾತನಾಡಿದರು.
ಉದ್ದೇಶಿತ ಸೈಬರ್ ಭದ್ರತಾ ನೀತಿಯು ಎಲ್ಲ ಆಯಾಮಗಳನ್ನೂ ಪರಿಗಣನೆಗೆ ತೆಗೆದುಕೊಂಡಿದೆ. ಈ ನೀತಿಯು ಜಾರಿಗೆ ಬಂದರೆ ಸರಕಾರದ ಮಾಹಿತಿ ತಂತ್ರಜ್ಞಾನ ಆಧಾರಿತ ಸಂಪನ್ಮೂಲಗಳಾದ ರಾಜ್ಯ ದತ್ತಾಂಶ ಕೇಂದ್ರ, ವೈಡ್ ಏರಿಯಾ ನೆಟ್ವರ್ಕ್ ಮತ್ತು ಇ-ಆಡಳಿತ ಸೌಲಭ್ಯಗಳು ಸುರಕ್ಷಿತವಾಗಿರಲಿವೆ ಎಂದು ಅವರು ಹೇಳಿದರು.
ಭಾರತೀಯ ರಿಸರ್ವ್ ಬ್ಯಾಂಕಿನ ಇತ್ತೀಚಿನ ವರದಿಯಂತೆ 2021-22ರಲ್ಲಿ ದೇಶದ ವಾಣಿಜ್ಯ ಬ್ಯಾಂಕುಗಳಲ್ಲಿ 1.38 ಟ್ರಿಲಿಯನ್ ರೂಪಾಯಿಗಳಷ್ಟು ಅಗಾಧ ಮೊತ್ತವು ಸೈಬರ್ ವಂಚನೆಗೆ ಒಳಗಾಗಿದೆ ಎಂದು ತಿಳಿಸಿದೆ.ಅದರಲ್ಲೂ ಖಾಸಗಿ ಬ್ಯಾಂಕುಗಳಲ್ಲಿ ಕಾರ್ಡುಗಳು ಮತ್ತು ಇಂಟರ್ನೆಟ್ ಬ್ಯಾಂಕಿಂಗ್ ವಂಚನೆಗಳು ಅಗಾಧವಾಗಿ ನಡೆಯುತ್ತಿವೆ. ಇವುಗಳನ್ನು ನಿಗ್ರಹಿಸಬೇಕಾದ್ದು ಈಗಿನ ಜರೂರಾಗಿದೆ ಎಂದು ಅವರು ವಿವರಿಸಿದರು.
ಭಾರತೀಯ ಡೇಟಾ ಸುರಕ್ಷತೆ ಮಂಡಲಿಯ ಪ್ರಕಾರ, ಸೈಬರ್ ಭದ್ರತಾ ಉದ್ಯಮವು ಸದ್ಯಕ್ಕೆ 80 ಶತಕೋಟಿ ಡಾಲರ್ ಮೌಲ್ಯವನ್ನು ಹೊಂದಿದ್ದು, ಮುಂದಿನ ಮೂರು ವರ್ಷಗಳಲ್ಲಿ ಇದು 190 ಶತಕೋಟಿ ಡಾಲರ್ ಗಾತ್ರಕ್ಕೆ ಬೆಳೆಯಲಿದೆ. ಇಂತಹ ಉದ್ಯಮವನ್ನು ಸುರಕ್ಷತೆಯೊಂದಿಗೆ ಬೆಳೆಸುವುದು ಸರಕಾರದ ಕರ್ತವ್ಯವಾಗಿದೆ ಎಂದರು.
ಇಂಟರ್ನೆಟ್ ಬಳಕೆದಾರರ ಸಂಖ್ಯೆಯು ಕಳೆದ ಐದು ವರ್ಷಗಳಲ್ಲಿ ಮೂರು ಪಟ್ಟು ಹೆಚ್ಚಳಗೊಂಡಿದ್ದು, ಡಿಜಿಟಲ್ ವಹಿವಾಟಿನ ಪ್ರಮಾಣವು ಕಳೆದ ಆರು ವರ್ಷಗಳಲ್ಲಿ 8 ಪಟ್ಟು ಹೆಚ್ಚಿದೆ. ಇದರ ಜತೆಗೆ ಬ್ರಾಡ್-ಬ್ಯಾಂಡ್ ಅಂತರ್ಜಾಲ ಬಳಕೆದಾರರ ಸಂಖ್ಯೆಯು 2016ರಿಂದ 2021ರ ನಡುವೆ ಶೇ.79ಕ್ಕಿಂತ ಹೆಚ್ಚು ಏರಿಕೆ ದಾಖಲಿಸಿದೆ. ಒಟ್ಟಿನಲ್ಲಿ ಸಾರ್ವಜನಿಕರು ವಂಚನೆಯ ಉದ್ದೇಶದ ಮೊಬೈಲ್ ಕರೆಗಳು, ಸಂದೇಶಗಳು, ಅಪರಿಚಿತ ಲಿಂಕ್ ಗಳು, ಅನಧಿಕೃತ ಕ್ಯೂಆರ್ ಕೋಡ್ ಇತ್ಯಾದಿಗಳ ಬಗ್ಗೆ ಎಚ್ಚರದಿಂದ ಇರಬೇಕು ಎಂದು ಅಶ್ವತ್ಥನಾರಾಯಣ ಅವರು ತಿಳಿಸಿದರು.
ಕೇಂದ್ರ ಸರಕಾರವು ಕೈಗೆತ್ತಿಕೊಂಡಿರುವ `ಡಿಜಿಟಲ್ ಇಂಡಿಯಾ’ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವುದು ಸರಕಾರದ ಆದ್ಯತೆಯಾಗಿದೆ. ಇದಕ್ಕಾಗಿ ಬಳಕೆದಾರರನ್ನು ಡಿಜಿಟಲ್ ತಂತ್ರಜ್ಞಾನದ ಬಗ್ಗೆ ಶಿಕ್ಷಿತರನ್ನಾಗಿ ಮಾಡುವುದು ಮತ್ತು ಸರಕಾರ ಹಾಗೂ ಖಾಸಗಿ ವಲಯಗಳೆರಡರಲ್ಲೂ ತಾಂತ್ರಿಕ ಪರಿಣತಿಯನ್ನು ಬೆಳೆಸುವ ಎರಡು ಆಯಾಮಗಳ ಉಪಕ್ರಮಗಳನ್ನು ರೂಪಿಸಲಾಗಿದೆ ಎಂದು ಸಚಿವರು ವಿವರಿಸಿದರು. ಅಸೋಚಮ್ ಪದಾಧಿಕಾರಿಗಳಾದ ಶೋಭಿತ್ ಅಗರವಾಲ್, ಬಸುದೇವ್ ಮುಖರ್ಜಿ, ಐಸಿಎಐ ಮುಖ್ಯಸ್ಥ ಡಾ.ಅಶೋಕ್ ಹಾಲ್ದಿಯಾ, ಸೆಬಿಯ ಮುಖ್ಯ ವಿಚಕ್ಷಣಾಧಿಕಾರಿ ಆರತಿ ಶ್ರೀವಾಸ್ತವ ಮತ್ತಿತರರು ಈ ವರ್ಚುಯಲ್ ಸಮಾವೇಶದಲ್ಲಿ ಉಪಸ್ಥಿತರಿದ್ದರು.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
KLIVE at Google News App
KLIVE Android App on Google Play Store
Download the most loved Klive App for your Android phone or tablet.
ಉಕ್ರೇನ್‌ನಲ್ಲಿ ರಷ್ಯಾದ ಯುದ್ಧವನ್ನು ಬೆಂಬಲಿಸಲು ಚೀನಾ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ಕಳುಹಿಸುವುದಿಲ್ಲ. ಬೀಜಿಂಗ್ ಬಿಕ್ಕಟ್ಟನ್ನು ಶಮನಗೊಳಿಸಲು ಎಲ್ಲಾ ಪ್ರಯತ್ನವನ್ನು ಮಾಡುತ್ತದೆ ಎಂದು ಯುನೈಟೆಡ್ ಸ್ಟೇಟ್ಸ್‌ಗೆ ಚೀನಾದ ರಾಯಭಾರಿ ತಿಳಿಸಿದ್ದಾರೆ.
ಮಾಸ್ಕೋಗೆ ಬೀಜಿಂಗ್ ಬೆಂಬಲವನ್ನು ನೀಡಿದರೆ ಅಪಾಯ ಉಂಟಾಗುತ್ತವೆ ಎಂದು ಯುಎಸ್ ಅಧ್ಯಕ್ಷ ಜೋ ಬೈಡನ್ ಶುಕ್ರವಾರದಂದು ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಎಚ್ಚರಿಕೆ ನೀಡಿದ ನಂತರ ಕ್ವಿನ್ ಗ್ಯಾಂಗ್ ಅವರಿಂದ ಈ ರೀತಿ ಪ್ರತಿಕ್ರಿಯೆ ಬಂದಿದೆ.ರಷ್ಯಾದ ಮೇಲೆ ಹಲವಾರು ದೇಶಗಳು ಆರ್ಥಿಕ ನಿರ್ಬಂಧ ಹೇರಿರುವ ಹಿನ್ನೆಲೆಯಲ್ಲಿ ಚೀನಾದಿಂದ ಆರ್ಥಿಕ ನೆರವು ಸಿಗಲಿದೆ ಜೊತೆಗೆ ಶಸ್ತ್ರಾಸ್ತ್ರಗಳನ್ನು ರವಾನೆ ಮಾಡುವ ಮೂಲಕ ಮಿಲಿಟರಿ ನೆರವು ಒದಗಿಸಲಾಗುತ್ತದೆ ಎಂಬ ಸುದ್ದಿ ಹಬ್ಬಿತ್ತು. ಈ ಬಗ್ಗೆ ತಕ್ಷಣವೇ ಪ್ರತಿಕ್ರಿಯಿಸಿದ ಯುಎಸ್ ರಾಜತಾಂತ್ರಿಕರು, ವಿಷಯವನ್ನು ಅಧ್ಯಕ್ಶ ಜೋ ಬೈಡನ್ ತನಕ ಮುಟ್ಟಿಸಿದ್ದರು.
ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅವರೊಟ್ಟಿಗೆ ದೂರವಾಣಿ ಸಂಭಾಷಣೆ ನಡೆಸಿದ ಅಧ್ಯಕ್ಷ ಜೋ ಬೈಡನ್, ಮಿಲಿಟರಿ ನೆರವು ಅಥವಾ ಆರ್ಥಿಕ ಸಹಾಯ ನೀಡಿದರೆ ಕಠಿಣ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಚೀನಾಕ್ಕೆ ಅಮೆರಿಕ ಎಚ್ಚರಿಕೆ ನೀಡಿದೆ ಎಂದು ರಾಯಭಾರಿ ಲಿಂಡಾ ಥಾಮಸ್ ಗ್ರೀನ್ ಫೀಲ್ಡ್ ಅವರು ಹೇಳಿದರು.
ಇನ್ನು ಪೋಲೆಂಡ್ ಭೇಟಿಯ ಸಂದರ್ಭದಲ್ಲಿ ಉಕ್ರೇನ್‌ನಲ್ಲಿ ಸೈನಿಕರ ನಿಯೋಜನೆ ಕುರಿತು ಯುಎಸ್ ಅಧ್ಯಕ್ಷರಿಂದ ಚರ್ಚೆ ಸಾಧ್ಯತೆ ಎಂದು ತಿಳಿದು ಬಂದಿದೆ. ಜೊತೆಗೆ ರಷ್ಯಾದ ಮೇಲಿನ ನಿರ್ಬಂಧಗಳನ್ನು ತೆಗೆದು ಹಾಕುವ ಪ್ರಶ್ನೆಯೇ ಇಲ್ಲ ಎಂದು ಶ್ವೇತಭವನ ಸೋಮವಾರ ಹೇಳಿದೆ ಎಂದು ನೆಕ್ಸ್ಟಾ ವರದಿ ಮಾಡಿದೆ. ಜೊತೆಗೆ ಮುಂದಿನ ವಾರ ರಷ್ಯಾ ವಿರುದ್ಧ ಹೊಸ ನಿರ್ಬಂಧಗಳು ಹೇರಲಿದ್ದೇವೆ ಎಂದು ಉಕ್ರೇನ್‌ನ ವಿದೇಶಾಂಗ ಸಚಿವರು ತಿಳಿಸಿದ್ದಾರೆ.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
KLIVE at Google News App
KLIVE Android App on Google Play Store
Download the most loved Klive App for your Android phone or tablet.
ಮನುಷ್ಯ ಜೀವನವೇ ವಿಚಿತ್ರ. ಜೀವನದಲ್ಲಿ ಯಾರು ಯಾವಾಗ ಯಾವ ಸಮಯದಲ್ಲಿ ಇಷ್ಟ ಆಗ್ತಾರೆ ಅಂತ ಹೇಳೋಕೆ ಆಗಲ್ಲ. ಅದರಲ್ಲೂ ಈ ಪ್ರೀತಿ ಅಥವಾ ಸ್ನೇಹದ ವಿಷಯಕ್ಕೆ ಬಂದ್ರೆ ಅದು ಹೇಗೆ ಶುರುವಾಯ್ತು ಅಂತ ಹೇಳೋದೇ ಕಷ್ಟ. ಆದರೆ ಒಪ್ಪಿಕೊಂಡ ಸ್ನೇಹವಿರಲಿ ಪ್ರೀತಿಯಿರಲಿ ಅದನ್ನ ಕೊನೆವರೆಗೂ ಉಳಿಸಿಕೊಳ್ಳೋದು ಒಂದು ದೂಡ್ಡ ಸವಾಲೇ ಸರಿ.
ಒಂದು ಚೂರು ಹೆಚ್ಚು ಕಮ್ಮಿ ಆದ್ರೂ ಅದ್ಭುತವಾಗಿರುವ ಒಂದು ಸಂಬಂಧನೇ ಮುರಿದು ಬೀಳುವ ಸಾಧ್ಯತೆಗಳಿರುತ್ತೆ. ಹಾಗಾಗಿ ಸಂಬಂಧಗಳಲ್ಲಿ ಅತ್ಯಂತ ಜಾಗರೂಕತೆಯಿಂದ ಇರಬೇಕು.
ಯಾವುದೇ ಸಂಬಂಧವಿರಲಿ ಅಥವಾ ಸ್ನೇಹವಿರಲಿ ಅದರಲ್ಲಿ ನಾವು ಒಪ್ಪಿಕೊಳ್ಳಬೇಕಾದಂತ ಅಂಶಗಳಿವೆ.
ಅದನ್ನ ಅರ್ಥ ಮಾಡಿಕೊಂಡು ಮುಂದುವರೆದರೆ ಯಾವುದೇ ಸಂಬಂಧ ಅಥವಾ ಸ್ನೇಹದಲ್ಲಿ ವಿಶ್ವಾಸದಿಂದ ಇರಬಹುದಾಗಿದೆ. ಕುಟುಂಬದವರನ್ನ ಹೊರತುಪಡಿಸಿ ಸ್ನೇಹಿತರಿಗೆ ತುಂಬಾ ಹತ್ತಿರದವರಾಗಿರುತ್ತೇವೆ. ಮನುಷ್ಯ ಜೀವನದಲ್ಲಿ ಅಪ್ಪ,ಅಮ್ಮ ಅಣ್ಣ ತಂಗಿ ಮತ್ತು ತಮ್ಮ ಸಂಬಂಧಿಕರ ಸಂಬಂಧ ಹುಟ್ಟಿದಾಗಿನಿಂದಲೇ ಜೊತೆಗೂಡಿ ಬರುತ್ತದೆ. ಆದರೆ ಜೀವನದ ಬಹುಮುಖ್ಯ ಸಂಬಂಧವಾದ ಸ್ನೇಹವು ನಮ್ಮ ಆಯ್ಕೆಗೆ ಸೀಮಿತ. ಒಳ್ಳೆಯ, ಕೆಟ್ಟ ಸ್ನೇಹಿತರ ಸಂಗ ನಮ್ಮ ಜೀವನದ ಮೇಲೆ ಪರಿಣಾಮ ಬೀರುತ್ತೆ.
ಒಳ್ಳೆಯ ಸ್ನೇಹ ಪ್ರೀತಿಯನ್ನು ಬಯಸದವರು ಬಹುಶಃ ಈ ಜಗತ್ತಿನಲ್ಲಿಯೇ ಯಾರೂ ಇಲ್ಲ. ಹಾಗಾಗಿ ಸ್ನೇಹಕ್ಕೆ ಸಂಬಂಧಪಟ್ಟ ಹಲವಾರು ವಿಷಯಗಳನ್ನ ಮನಸ್ಸಿನಲ್ಲಿಯೇ ಇಟ್ಟುಕೊಳ್ಳುವುದು ಉತ್ತಮ.
ಪರಿಪೂರ್ಣ ಸ್ನೇಹ ಎಂದಿಗೂ ಅಸ್ತಿತ್ವದಲ್ಲಿಲ್ಲ. ಒಬ್ಬ ಮನುಷ್ಯ ಪರಿಪೂರ್ಣ ಎಂದು ಎಂದಿಗೂ ಹೇಳಲು ಸಾಧ್ಯವಿಲ್ಲ. ಸ್ನೇಹದಲ್ಲಿ, ಸ್ನೇಹಿತರ ಮೇಲೆ ಹೆಚ್ಚಿನ ನಿರೀಕ್ಷೆಗಳನ್ನು ಇಟ್ಟುಕೊಳ್ಳುವುದು ನಮ್ಮ ಸ್ನೇಹಕ್ಕೇ ಕುತ್ತಾಗಬಹುದು. ಹಾಗಾಗಿ ನಿಮ್ಮ ಸ್ನೇಹಿತರನ್ನು ಅವರು ಇರುವ ರೀತಿಯಲ್ಲಿಯೇ ಅವರನ್ನು ಸ್ವೀಕರಿಸುವುದು ಉತ್ತಮ.
ನಿಮ್ಮ ಸ್ನೇಹಿತರ ನ್ಯೂನತೆಗಳು ಮತ್ತು ಅಪೂರ್ಣತೆಗಳನ್ನು ಎತ್ತಿ ತೋರಿಸುವುದರ ಬದಲು ಅವರು ಒಬ್ಬ ಉತ್ತಮ ವ್ಯಕ್ತಿಯಾಗಲು ನೀವು ಅವರಿಗೆ ಸಹಾಯ ಮಾಡಬಹುದು.
ನಮಗೆ ನಮ್ಮ ಕುಟುಂಬದವರನ್ನ ಹೊರತುಪಡಿಸಿ ಸ್ನೇಹಿತರಿಗೆ ತುಂಬಾ ಹತ್ತಿರದವರಾಗಿರುತ್ತೇವೆ. ಕುಟುಂಬದವರ ಹತ್ತಿರ ಹೇಳಿಕೊಳ್ಳಲಾಗದ ಅದೆಷ್ಟೋ ವಿಷಯಗಳನ್ನ ನಾವು ಸ್ನೇಹಿತರ ಹತ್ತಿರ ಹೇಳಿಕೊಳ್ಳುತ್ತೇವೆ.
ಯಾರನ್ನಾದರೂ ಅತಿಯಾಗಿ ಹಚ್ಚಿಕೊಂಡಾಗ ಕೆಲವೊಮ್ಮೆ ನೋವುಂಟಾಗುವುದು ಸಹಜ. ಪ್ರತಿಯೊಬ್ಬರಿಗೂ ಅವರದೇ ಆದ ಸ್ವಾತಂತ್ರ್ಯ, ಸ್ಪೇಸ್ ಕೊಡಬೇಕಾಗುತ್ತದೆ. ನಿಮ್ಮ ಪ್ರೀತಿ ಪಾತ್ರರು, ಸ್ನೇಹಿತರು ಅಥವಾ ಸಂಗಾತಿ ನಿಮ್ಮನ್ನು ಬಿಟ್ಟು ಬೇರೆ ಸ್ನೇಹಿತರನ್ನೂ ಹೊಂದಿರಬಹುದು. ಅವರು ಆ ಸ್ನೇಹಿತರೊಂದಿಗೆ ಹೊರಗಡೆ ಹೋಗಬಹುದು, ಅವರೊಂದಿಗೆ ಮಾತಿಗೆ ನಿಲ್ಲಬಹುದು. ಆದರೆ ನೀವು ಇದನ್ನು ಸಹಿಸದೇ ಇದ್ದರೆ ಅಥವಾ ನಿಮ್ಮನ್ನು ಹೊರತಾಗಿಯೂ ಅವರಿಗೆ ಬೇರೊಬ್ಬರ ಸ್ನೇಹವಿದೆ ಎಂಬ ಸತ್ಯವನ್ನು ಅರಿತುಕೊಳ್ಳದಿದ್ದರೆ ಸಮಸ್ಯೆಯಾಗುವುದು ಖಂಡಿತ. ಈ ಬಗ್ಗೆ ಅಸೂಯೆ ಪಟ್ಟುಕೊಳ್ಳದೇ, ಅಥವಾ ಸ್ನೇಹಿತೆ/ಸ್ನೇಹಿತ ಬಿಟ್ಟು ಹೋಗಬಹುದು ಎಂಬ ಅಸುರಕ್ಷಿತ ಭಾವನೆಯನ್ನು ಬೆಳೆಸಿಕೊಳ್ಳದೆ ಸಂಗತಿಯನ್ನು ಹಾಗೆಯೇ ಒಪ್ಪಿಕೊಂಡರೆ ಅವರ ವೈಯಕ್ತಿಕ ಜೀವನವನ್ನು ಗೌರವಿಸುವುದು ಸೂಕ್ತ.
ಸ್ನೇಹದಲ್ಲಿ ಜಗಳಗಳು, ಮುನಿಸು ಉಂಟಾದಾಗಲೇ ಸ್ನೇಹ ಸಂಬಂಧಗಳು ಗಟ್ಟಿಗೊಳ್ಳುತ್ತವೆ. ಹಾಗಂತ ಅದು ಅತಿರೇಕಕ್ಕೆ ಹೋಗುವುದೂ ಸರಿಯಲ್ಲ.
ಸಾಕಷ್ಟು ಸಲ ಪರಸ್ಪರ ಒಬ್ಬರನ್ನೊಬ್ಬರು ಒಪ್ಪದಿರಬಹುದು. ಇದರಿಂದ ನಿಮಗೆ ನಿಮ್ಮ ಸ್ನೇಹಿತರ ಮೇಲೆ ಕಿರಿಕಿರಿ ಉಂಟಾಗಬಹುದು ಆದರೆ ಯಾವುದೇ ಮನುಷ್ಯನು ಪರಿಪೂರ್ಣನಲ್ಲ ಎಂಬುದನ್ನು ಮೊದಲು ನೀವು ಅರ್ಥಮಾಡಿಕೊಳ್ಳಬೇಕು.
ನಿಮ್ಮ ಸ್ನೇಹಿತರನ್ನು ಬದಲಾಯಿಸಲು ಪ್ರಯತ್ನಿಸುವ ಬದಲು, ಜೀವನದ ಬಗ್ಗೆ ಹೊಸ ಮತ್ತು ಉತ್ತಮ ದೃಷ್ಟಿಕೋನವನ್ನು ಬೆಳೆಸಲು ನೀವು ಅವರಿಗೆ ಸಹಾಯ ಮಾಡಬಹುದು. ನಿಮ್ಮ ಸ್ನೇಹದಲ್ಲಿ ಅತೀ ಮುಖ್ಯವಾದುದು ನೀವು ಪರಸ್ಪರ ಒಪ್ಪಿಕೊಂಡು ಮುಂದುವರೆಯುವುದು.
ಪ್ರತಿಯೊಬ್ಬರೂ ಶಾಶ್ವತವಾಗಿ ಉಳಿಯುವುದಿಲ್ಲ ಇದನ್ನು ನಾವು ಮೊದಲು ಅರಿತುಕೊಳ್ಳಬೇಕು. ನಿಮ್ಮ ಜೀವನದಲ್ಲಿ ನೀವು ಅನೇಕ ಜನರನ್ನು ಭೇಟಿ ಮಾಡುತ್ತೀರಿ, ಅವರೊಂದಿಗೆ ಸ್ನೇಹ ಬೆಳೆಸಿಕೊಳ್ಳುತ್ತೀರಿ. ಆದರೆ ಅವರು ಎಂದೆಂದಿಗೂ ನಿಮ್ಮ ಜೊತೆಯಲ್ಲಿಯೇ ಇರಬೇಕೆಂದೇನೂ ಇಲ್ಲ. ಕೆಲವೊಮ್ಮೆ ವಿಷಯಗಳು ಅನಿರೀಕ್ಷಿತ ರೀತಿಯಲ್ಲಿ ನಿಮ್ಮ ಕೈತಪ್ಪಿ ಹೋಗಬಹುದು ಅಥವಾ ನಿಮ್ಮ ಸ್ನೇಹಿತರೊಂದಿಗೆ ಇನ್ನು ಮುಂದೆ ಸಂಪರ್ಕ ಇಟ್ಟುಕೊಳ್ಳದಂತ ಸ್ಥಿತಿ ನಿರ್ಮಾಣವಾಗಬಹುದು. ಅದಕ್ಕೆಲ್ಲಾ ಮೊದಲೇ ತಯಾರಿರಬೇಕು. ಜೀವನದಲ್ಲಿ ಯಾವುದೂ ಶಾಶ್ವತವಲ್ಲ. ಇಂದು ನಗು, ನಾಳೆ ದುಃಖ. ಎರಡನ್ನೂ ನಿಭಾಯಿಸುವ ಸಾಮರ್ಥ್ಯ ನಮ್ಮಲ್ಲಿದ್ದರೆ, ಬದುಕು ಉಲ್ಲಾಸಮಯ.
ನಿಮಗೆ ಒಬ್ಬರು ಅಥವಾ ಇಬ್ಬರು ಸ್ನೇಹಿತರು ಇದ್ದರೂ ಸಾಕು, ನಿಮ್ಮ ಜೀವನ ಸಂತೋಷದಿಂದ ಕೂಡಿರಬಹುದು! ಹೊಂದಾಣಿಕೆಯಾಗದ ಮತ್ತು ನಕಲಿ ಸ್ನೇಹಿತರ ಒಂದು ಸೈನ್ಯವನ್ನೇ ಹೊಂದಿರುವುದಕ್ಕಿಂತ ಬೆರಳೆಣಿಕೆಯಷ್ಟು ವಿಶ್ವಾಸಾರ್ಹ ಸ್ನೇಹಿತರನ್ನು ಉಳಿಸಿಕೊಳ್ಳುವುದು ಉತ್ತಮ.
ಕೆಲವು ಸ್ನೇಹಿತರು ತಮ್ಮ ಕೆಟ್ಟ ಸ್ವಭಾವದೊಂದಿಗೆ ನಿಮ್ಮಲ್ಲಿರುವ ಸಕಾರಾತ್ಮಕ ಭಾವನೆಯನ್ನು ಹಾಳುಮಾಡಬಹುದು. ಇಂತಹ ಸಂದರ್ಭದಲ್ಲಿ, ನಿಮ್ಮ ಸಂತೋಷದ ಬಗ್ಗೆ ಕಾಳಜಿ ವಹಿಸುವುದು ಮತ್ತು ನಿಮ್ಮ ಸಮಯ ಮತ್ತು ಭಾವನೆಗಳನ್ನು ಅರ್ಥಪೂರ್ಣ ಸಂಬಂಧದಲ್ಲಿ ಕಳೆಯುವುದು ಒಳ್ಳೆಯದು.
ಎಲ್ಲರೊಂದಿಗಿನ ಬಂಧಗಳು ಒಂದೇ ರೀತಿ ಇರುವುದಿಲ್ಲ ನಿಮ್ಮ ಜೀವನದುದ್ದಕ್ಕೂ ನೀವು ನಿಮ್ಮ ಪ್ರತಿಯೊಬ್ಬ ಸ್ನೇಹಿತರೊಂದಿಗೆ ಒಂದೇ ರೀತಿಯ ಸಂಬಂಧವನ್ನು ಉಳಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ನೀವು ಬೆಳೆದು ಪ್ರಬುದ್ಧರಾದಂತೆ, ಅಗತ್ಯವಿಲ್ಲದ ಗಾಸಿಪ್ ಮಾತುಗಳನ್ನಾಡುವ ಸ್ನೇಹಿತರಿಗಿಂತ ಕೆಲವು ಅರ್ಥಪೂರ್ಣ ಜನರನ್ನು ನೀವು ಹುಡುಕಬಹುದು. ಅಥವಾ ನಿಮ್ಮ ಬಾಲ್ಯದಲ್ಲಿ ಅಥವಾ ನಿಮ್ಮ ಕಾಲೇಜು ದಿನಗಳಲ್ಲಿ ನಡೆದ ಸಂಗತಿಗಳ ಬಗ್ಗೆ ಮಾತನಾಡಲು ನಿಮಗೆ ಇಷ್ಟವಿಲ್ಲದಿರಬಹುದು. ದಿನಕಳೆದಂತೆ ನಿಮ್ಮ ಆಯ್ಕೆಗಳು ಭಿನ್ನವಾಗಿ, ನೀವು ಒಮ್ಮೆ ಹೊಂದಿದ್ದಂತಹ ನಿಕಟತೆಯನ್ನು ಮತ್ತೆ ಹೊಂದಲು ಸಾಧ್ಯವಾಗದೇ ಹೋಗಬಹುದು.
ಜೀವನವು ಸಾಕಷ್ಟು ಅನಿರೀಕ್ಷತೆಯನ್ನು ಒಳಗೊಂಡಿರುತ್ತದೆ. ನಿಮ್ಮ ಜೀವನದಲ್ಲಿ ಪಡೆಯಬೇಕೆಂದುಕೊಂಡಿರುವ ಜನರು ನಿಮ್ಮೊಂದಿಗೆ ಇರಲು ಖಂಡಿತವಾಗಿಯೂ ಒಂದಿಲ್ಲೊಂದು ಮಾರ್ಗ ದೊರೆತೇ ದೊರೆಯುತ್ತದೆ ಎಂಬುದನ್ನು ಸ್ಪಷ್ಟವಾಗಿ ಅರ್ಥಮಾಡಿಕೊಳ್ಳಿ.
ಪರಿಪೂರ್ಣ ಸ್ನೇಹವನ್ನು ಹೊಂದುವ ಕಲ್ಪನೆಯೊಂದಿಗೆ ನೀವು ಕಳೆದುಹೋಗಬೇಡಿ. ಇಲ್ಲದ ಸ್ನೇಹದ ಹುಡುಕಾಟದಲ್ಲಿ ಕಳೆದ ವರ್ಷಗಳನ್ನು ಎಣಿಸಬೇಡಿ, ಬದಲಿಗೆ ಉತ್ತಮ ಸ್ನೇಹವನ್ನು ನಿಮ್ಮದಾಗಿಸಿಕೊಳ್ಳಿ.
ನೀವು ಶಾಶ್ವತವಾಗಿ ನೆನಪಿನಲ್ಲಿಟ್ಟುಕೊಳ್ಳುವಂತ ಸಿಹಿ ನೆನಪುಗಳು ಖಂಡಿತವಾಗಿಯೂ ನಿಮ್ಮದಾಗಲಿವೆ.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
KLIVE at Google News App
KLIVE Android App on Google Play Store
Download the most loved Klive App for your Android phone or tablet.
ಯುದ್ಧ ಬಾಧಿತ ಉಕ್ರೇನ್ ನಲ್ಲಿನ ಜೀವ ಹಾನಿಗೆ ರಷ್ಯಾ ಹೊಣೆ ಹೊರಬೇಕಾದ ಅಗತ್ಯವಿದೆ ಎಂದು ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಸೋಮವಾರ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ವರ್ಚುಯಲ್ ಶೃಂಗಸಭೆಯಲ್ಲಿ ಮಾತನಾಡಿದ ಮಾರಿಸನ್, ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಇಂತಹ ಭಯಾನಕ ಘಟನೆಗಳು ಎಂದಿಗೂ ಸಂಭವಿಸುವುದಿಲ್ಲ ಎಂದು ಖಚಿತಪಡಿಸಿಕೊಳ್ಳಬೇಕು ಎಂದರು.
ಕ್ವಾಡ್ ಗುಂಪಿನ ನಾಯಕರ ಇತ್ತೀಚಿನ ಸಭೆಯನ್ನು ಉಲ್ಲೇಖಿಸಿದ ಅಸ್ಟ್ರೇಲಿಯಾ ಪ್ರಧಾನಿ, ಇಂಡೋ-ಪೆಸಿಫಿಕ್‌ಗಾಗಿ ಯುರೋಪಿನಲ್ಲಿನ ಬೆಳವಣಿಗೆಗಳು ಮತ್ತು ಪರಿಣಾಮಗಳನ್ನು ಚರ್ಚಿಸಲು ಇದು ಅವಕಾಶವನ್ನು ಒದಗಿಸಿದೆ ಎಂದು ಹೇಳಿದರು.
ಯುರೋಪಿನಲ್ಲಿನ ಆತಂಕಕಾರಿ ಮತ್ತು ಭಯಾನಕ ಪರಿಸ್ಥಿತಿಯನ್ನು ಉಲ್ಲೇಖಿಸಿದ ಮಾರಿಸನ್, ಇದು ನಮ್ಮ ಪ್ರದೇಶದಲ್ಲಿ ನಡೆಯಬಾರದು. ರಷ್ಯಾದಲ್ಲಿನ ಜೀವ ಹಾನಿಗೆ ರಷ್ಯಾವನ್ನು ಹೊಣೆಗಾರನ್ನಾಗಿ ಮಾಡಬೇಕು. ಸಮಾನ ಮನಸ್ಕ ಉದಾರವಾದಿ ಪ್ರಜಾಪ್ರಭುತ್ವಗಳ ನಡುವಿನ ಸಹಕಾರವು ಸಮೃದ್ಧ ಇಂಡೋ-ಪೆಸಿಫಿಕ್ ಮುಕ್ತತೆಗೆ ಪ್ರಮುಖವಾಗಿದೆ ಎಂದು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮಾತನಾಡಿ, ಉಭಯ ದೇಶಗಳ ಆರ್ಥಿಕ ಪುನಶ್ಚೇತನ ಮತ್ತು ಆರ್ಥಿಕ ಭದ್ರತೆಗೆ ಸಮಗ್ರ ಆರ್ಥಿಕ ಸಹಕಾರ ಒಪ್ಪಂದ ತೀರ್ಮಾನ ಪ್ರಮುಖವಾಗಿದೆ. ಕ್ವಾಡ್ ನಲ್ಲಿ ಉತ್ತಮ ಸಹಕಾರವನ್ನು ನಾವು ಹೊಂದಿದ್ದೇವೆ. ನಮ್ಮ ಈ ಸಹಯೋಗವು ಉಚಿತ, ಮುಕ್ತ ಮತ್ತು ಅಂತರ್ಗತ ಇಂಡೋ-ಪೆಸಿಫಿಕ್‌ಗೆ ನಮ್ಮ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ. ಕ್ವಾಡ್‌ನ ಯಶಸ್ಸು ಪ್ರಾದೇಶಿಕ ಮತ್ತು ಜಾಗತಿಕ ಸ್ಥಿರತೆಗೆ ನಿರ್ಣಾಯಕವಾಗಿದೆ ಎಂದು ಅವರು ಹೇಳಿದ್ದಾರೆ.
ವ್ಯಾಪಾರ ಮತ್ತು ಹೂಡಿಕೆ, ರಕ್ಷಣೆ ಮತ್ತು ಭದ್ರತೆ, ಶಿಕ್ಷಣ, ಅನ್ವೇಷಣೆ ಮತ್ತು ವಿಜ್ಞಾನ, ತಂತ್ರಜ್ಞಾನದಲ್ಲಿನ ಉಭಯ ದೇಶಗಳ ನಡುವಣ ಆಪ್ತ ಸಹಕಾರವಿದ್ದು, ಕಳೆದ ಕೆಲವು ವರ್ಷಗಳಲ್ಲಿ ಸಂಬಂಧಗಳು ಗಮನಾರ್ಹ ಪ್ರಗತಿಯನ್ನು ಕಂಡಿವೆ. ನೀರು ನಿರ್ವಹಣೆ, ನವಿಕರಿಸಬಲ್ಲ ಇಂಧನ, ಕೋವಿಡ್-19 ಸಂಶೋಧನೆ ಮತ್ತಿತರ ಕ್ಷೇತ್ರಗಳಲ್ಲಿ ಉಭಯ ದೇಶಗಳ ಸಹಯೋಗ ಗಮನಾರ್ಹ ರೀತಿಯಲ್ಲಿ ಪ್ರಗತಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.