Sunday, February 22, 2026
Sunday, February 22, 2026
Home Blog Page 1663

ಶಿರಸಿ ಜಾತ್ರೆಯಲ್ಲಿ ಮಳೆರಾಯನ ಅವಾಂತರ

0

ರಾಜ್ಯದ ಕೆಲ ಜಿಲ್ಲೆಗಳಲ್ಲಿ ಶುಕ್ರವಾರ ಅಕಾಲಿಕ ಮಳೆ ಸುರಿದಿದೆ. ದಿಢೀರ್ ಸುರಿದ ಮಳೆಯಿಂದ ಉತ್ತರ ಕನ್ನಡ ಜಿಲ್ಲೆ ಮಾರಿಕಾಂಬಾ ದೇವಿ ಜಾತ್ರೆ ಅಸ್ತವ್ಯಸ್ತವಾಗಿದೆ.

ಭಾರಿ ಮಳೆ, ಗಾಳಿಗೆ ದೇವಿಯ ಗದ್ದುಗೆ ಚಪ್ಪರದ ಮಹಾದ್ವಾರ ವಾಲಿದ್ದು, ಭಕ್ತರಲ್ಲಿ ಆತಂಕ ಮೂಡಿಸಿದೆ.

ಜಾತ್ರೆ ಅಂಗವಾಗಿ ಹಾಕಿದ್ದ ಬಹುತೇಕ ಅಂಗಡಿಮುಂಗಟ್ಟುಗಳ ಛಾವಣಿ ಹಾರಿ ಹೋದವು.
ಅಮ್ಯೂಸ್​ವೆುಂಟ್ ಪಾರ್ಕ್​ನಲ್ಲಿನ ಜೈಂಟ್ ವ್ಹೀಲ್​ನ ಐದಾರು ತೊಟ್ಟಿಲುಗಳು ಕಳಚಿ ಬಿದ್ದವು. ಪಟ್ಟಣದಲ್ಲಿ ವಿದ್ಯುತ್ ಸಂಪೂರ್ಣ ಸ್ಥಗಿತಗೊಂಡಿತ್ತು
ಎಲ್ಲ ಅಂಗಡಿಗಳು ಬಂದ್ ಆಗಿವೆ.

ಅಕಾಲಿಕವಾಗಿ ಸುರಿದ ಮಳೆಯಿಂದ ವಿವಿಧೆಡೆಯಿಂದ ಜಾತ್ರೆಗೆ ಆಗಮಿಸಿದ್ದ ಭಕ್ತರು ಸಂಕಷ್ಟಕ್ಕೀಡಾದರು.

ಜಿಲ್ಲೆಯ
ಸಿದ್ದಾಪುರ, ಮುಂಡಗೋಡ, ಯಲ್ಲಾಪುರ, ಜೊಯಿಡಾ ತಾಲೂಕುಗಳಲ್ಲಿಯೂ ಭರ್ಜರಿ ಮಳೆ ಸುರಿದಿದೆ. ಹಾವೇರಿ ಜಿಲ್ಲೆಯ ಅಕ್ಕಿ ಆಲೂರು, ಗದಗ ಜಿಲ್ಲೆಯ ಶಿಗ್ಲಿ ಗ್ರಾಮದಲ್ಲಿ ಮಧ್ಯಾಹ್ನ ಜೋರಾಗಿ ಮಳೆ ಸುರಿಯಿತು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಶಿಕ್ಷಕರ ಸಮಯ ಮತ್ತು ಓಡಾಟ ತಪ್ಪಿಸಲು ಶಿಕ್ಷಕ ಮಿತ್ರ ಆ್ಯಪ್ ನೆರವು

0

ರಾಜ್ಯ ಸರ್ಕಾರವು ಶಿಕ್ಷಕರಿಗೆ ಸಿಹಿಸುದ್ದಿಯೊಂದನ್ನು ನೀಡಿದೆ.

ವರ್ಗಾವಣೆ ಸೇರಿದಂತೆ ಶಿಕ್ಷಕರು ತಮ್ಮ ದಾಖಲೆಗಳನ್ನು ಆನ್ ಲೈನ್ ನಲ್ಲಿ ನಿರ್ವಹಿಸಲು ಸಹಾಯ ಮಾಡಲು ರಾಜ್ಯ ಸರ್ಕಾರವು ಕರ್ನಾಟಕ ಶಿಕ್ಷಕ ಮಿತ್ರ ಆ್ಯಪ್ ಬಿಡುಗಡೆ ಮಾಡಿದೆ.

ಕರ್ನಾಟಕ ಶಿಕ್ಷಣ ಇಲಾಖೆಯು ಶಿಕ್ಷಕ ಮಿತ್ರ ಎಂಬ ಮೊಬೈಲ್ ಅಪ್ಲಿಕೇಷನ್ ಸಿದ್ದಪಡಿಸಲಾಗಿದೆ.

ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ಅರ್ಜಿಗಳು, ಶಿಕ್ಷಕರು ತಮ್ಮ ಕೆಲಸಗಳಿಗಾಗಿ ಶಾಲೆ ರಜೆ ಹಾಕಿ ಇಲಾಖೆಯ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ಈ ಅಪ್ಲಿಕೇಷನ್ ಸಿದ್ದಪಡಿಸಲಾಗಿದೆ.

ಇನ್ನು ಶಿಕ್ಷಕರು ಈ ಅಪ್ಲಿಕೇಷನ್ ಮೂಲಕ ರಜಾ ಅರ್ಜಿ, ನಿಯಮ 32 ಮತ್ತು ನಿಯಮ 68 ರ ಅಡಿಯಲ್ಲಿ ಶುಲ್ಕ ಭತ್ಯೆ ಮಂಜೂರಾತಿ, ದೈಹಿಕ ಅಂಗವಿಕಲ ಭತ್ಯೆಯ ಮಂಜೂರಾತಿ, ಮುಂಗಡಗಳನ್ನು ಪಡೆಯಲು ಅನುಮತಿ, ಭಾಗಶಃ ಹಿಂತೆಗೆದುಕೊಳ್ಳುವಿಕೆ ಅಥವಾ ಸಾಮಾನ್ಯ ಭವಿಷ್ಯ ನಿಧಿಯ ಅಂತಿಮ ಇತ್ಯರ್ಥ, ನಿಯಮ 247A/248/252B/224A ಅಡಿಯಲ್ಲಿ ಪಿಂಚಣಿ ಪ್ರಯೋಜನಗಳಿಗಾಗಿ ಉದ್ಯೋಗಿ ಅರ್ಹತಾ ಸೇವೆ, ಮನೆ ನಿರ್ಮಿಸಲು ಅಥವಾ ನಿವೇಶನ/ಮನೆ/ವಾಹನ ಅಥವಾ ಇತರೆ ಯಾವುದೇ ಚರ ಅಥವಾ ಸ್ಥಿರ ಆಸ್ತಿಗಳನ್ನು ಖರೀದಿಸಲು ಅನುಮತಿ ಮತ್ತು ಉದ್ಯೋಗಿ ಸಂಖ್ಯೆ – ಪಾಸ್‌ಪೋರ್ಟ್ ಮಾಡ್ಯೂಲ್‌ಗೆ ಅರ್ಜಿ ಸಲ್ಲಿಸಲು ಆಕ್ಷೇಪಣೆ ಪ್ರಮಾಣಪತ್ರ ಸೇರಿದಂತೆ ಹಲವು ಸೇವೆಗಳು ಶಿಕ್ಷಕ ಮಿತ್ರ ಆ್ಯಪ್ ನಲ್ಲಿ ಲಭ್ಯವಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಹೊಸ ಆಲೋಚನೆ ಹೊಸ ಕಾರ್ಯತಂತ್ರ ಇಂದಿನ ಅಗತ್ಯ-ಡಾ.ಕೊಟ್ರೇಶ್ವರ್

0

ಕೋವಿಡ್-19 ನಂತರದ ಕಾಲಘಟ್ಟದಲ್ಲಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಹಾಗೂ ಕಾರ್ಪೊರೆಟ್ ಸಂಸ್ಥೆಗಳು ಮತ್ತೆ ಯಶಸ್ಸಿನ ಹಳಿಗೆ ಮರಳಬೇಕಾದರೆ, ಹೊಸ ಆಲೋಚನೆಗಳನ್ನು, ಹೊಸ ಕಾರ್ಯತಂತ್ರಗಳನ್ನು ಅಳವಡಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ. ಇಲ್ಲವಾದರೆ ಗ್ರಾಹಕರನ್ನು ಸೆಳೆಯುವಲ್ಲಿ ಮತ್ತು ಹಿಡಿದಿಟ್ಟುಕೊಳ್ಳುವಲ್ಲಿ ವಿಫಲವಾಗುವ ಆತಂಕವಿದೆ ಎಂದು ಭಾರತೀಯ ಸಮಾಜ ವಿಜ್ಞಾನಗಳ ಸಂಶೋಧನಾ ಮಂಡಳಿ (ICSSR) ಯ ಹಿರಿಯ ಸಂಶೋಧನಾ ತಜ್ಞ ಡಾ. ಜಿ. ಕೊಟ್ರೇಶ್ವರ್ ಅಭಿಪ್ರಾಯಪಟ್ಟರು.

ಕುವೆಂಪು ವಿಶ್ವವಿದ್ಯಾಲಯದ ವಾಣಿಜ್ಯ ಶಾಸ್ತ್ರ ವಿಭಾಗ ಉದ್ಯಮ ಕ್ಷೇತ್ರದ ಹೊಸ ಪ್ರವೃತ್ತಿಗಳು ಕುರಿತು ಶನಿವಾರ ಬಸವ ಭವನದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಪ್ರಸ್ತುತ ವಿವಿಧ ನೈಸರ್ಗಿಕ ಮತ್ತು ಮಾನವ ನಿರ್ಮಿತ ಕಾರಣಗಳಿಂದ ಸೃಷ್ಟಿಯಾಗಿರುವ ಕ್ಲಿಷ್ಠಕರ ವಾತಾವರಣದಲ್ಲಿ ಉದ್ಯಮ ಸಂಸ್ಥೆಗಳು ಉಳಿಯುವುದೇ ಕಷ್ಟಕರವಾಗಿದೆ. ಇದು ಒಂದೆಡೆ ಸವಾಲೆನಿಸಿದರೆ ಮತ್ತೊಂದು ರೀತಿಯಲ್ಲಿ ಅವಕಾಶಗಳ ಹೊಸ ಬಾಗಿಲು ತೆರೆದಿದೆ. ಈ-ಕಾಮರ್ಸ್, ಆನ್‍ಲೈನ್ ವಹಿವಾಟು, ಸ್ಟಾರ್ಟ್ ಅಪ್ ಆಧಾರಿತ ನವೋದ್ಯಮಗಳು ಅತ್ಯಂತ ಕ್ಷಿಪ್ರಗತಿಯಲ್ಲಿ ಬೆಳೆಯುತ್ತಿರುವುದೇ ನಮ್ಮ ಕಣ್ಣ ಮುಂದಿರುವ ಜೀವಂತ ನಿದರ್ಶನಗಳು.

ಇಂತಹ ಸವಾಲಿನ ಔದ್ಯೋಗಿಕ ಮಾರುಕಟ್ಟೆಗೆ ವೃತ್ತಿಪರರನ್ನು ಸೃಷ್ಟಿಸುತ್ತಿರುವ ವಿಶ್ವವಿದ್ಯಾಲಯಗಳು ಮತ್ತು ಶೈಕ್ಷಣ ಕ ಸಂಸ್ಥೆಗಳು ಬದಲಾದ ಸನ್ನಿವೇಶಗಳಿಗೆ ತಕ್ಕ ಹಾಗೆ ಪಠ್ಯಕ್ರಮ, ಪ್ರಾಯೋಗಿಕ ಚಟುವಟಿಕೆಗಳು ಮತ್ತು ಉದ್ಯಮ ಸಂಸ್ಥೆಗಳ ಜೊತೆ ವಿನಿಮಯಗಳಂತಹ ಕಾರ್ಯಕ್ರಮಗಳ ಮೂಲಕ ವಿದ್ಯಾರ್ಥಿಗಳನ್ನು ಅಣ ಗೊಳಿಸುವತ್ತ ಗಮನಹರಿಸಬೇಕಿದೆ ಎಂದು ಸಲಹೆ ನೀಡಿದರು.

ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ಮಾತನಾಡಿ, ಭಾರತದ ಆರ್ಥಿಕತೆಯಲ್ಲಿ ಒಂದು ವೈರುಧ್ಯಮಯವಾದ ವಾತಾವರಣವಿದೆ. ಒಂದೆಡೆ ಜಗತ್ತಿನ ಅತ್ಯಂತ ಶ್ರೀಮಂತರಿದ್ದರೆ, ಇನ್ನೊಂದೆಡೆ ಒಂದು ಹೊತ್ತಿನ ಊಟಕ್ಕೂ ಕಷ್ಟಪಡುತ್ತಿರುವ ಬಡವರಿದ್ದಾರೆ. ಬಡವ ಶ್ರೀಮಂತರ ನಡುವಿನ ಅಂತರವನ್ನು ಕಡಿಮೆ ಮಾಡುವತ್ತ ಉದ್ಯಮ ಸಂಸ್ಥೆಗಳು ಕಾರ್ಯೋನ್ಮುಖವಾಗಬೇಕಿದೆ. ಕೈಗಾರಿಕೆಗಳು ಮತ್ತು ಕಾರ್ಪೊರೆಟ್ ಸಂಸ್ಥೆಗಳಿಗೆ ಶಾಂತಿಯುತ ವಾತಾವರಣ ಅತ್ಯಂತ ಮುಖ್ಯ. ಯುದ್ಧ, ಅಸ್ಥಿರತೆ, ಸಂಘರ್ಷಗಳು ಉದ್ಯಮ ಕ್ಷೇತ್ರಕ್ಕೆ ಬಲವಾದ ಪೆಟ್ಟು ನೀಡುತ್ತದೆ. ಹೀಗಾಗಿ ರಾಜಕೀಯ ಸ್ಥಿರತೆ ಮತ್ತು ದೃಢ ಸರ್ಕಾರ ಉದ್ಯಮ ಕ್ಷೇತ್ರಕ್ಕೆ ಅತ್ಯವಶ್ಯಕ ಎಂದರು.

ವಾಣಿಜ್ಯ ಶಾಸ್ತ್ರ ನಿಕಾಯದ ಡೀನ್ ಮತ್ತು ವಿಭಾಗದ ಮುಖ್ಯಸ್ಥ ಪ್ರೊ. ಎಸ್. ವೆಂಕಟೇಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರೊ. ಹಿರೇಮಣಿ ನಾಯಕ್, ಪ್ರೊ. ಎ. ಇಳಂಗೋವನ್, ಡಾ. ಕೆ. ಆರ್. ಮಂಜುನಾಥ್, ಡಾ. ಬಿನೋಯ್, ವಿವಿಧ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳ ಪ್ರತಿನಿಧಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಸ್ತ್ರೀಶಕ್ತಿ ಸ್ವಸಹಾಯ ಸಂಘಗಳಿಗೆ ₹ 10 ಲಕ್ಷದ ವರೆಗೆ ಸಾಲ ಸೌಲಭ್ಯ

0

ರಾಜ್ಯ ಸರ್ಕಾರವು ಮಹಿಳೆಯರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಕೌಶಲ್ಯ ವೃದ್ಧಿ ಹಾಗೂ ಉದ್ಯಮಶೀಲತೆಯ ಗುಣಮಟ್ಟ ಹೆಚ್ಚಿಸುವ ಗುರಿಯೊಂದಿಗೆ ಕಾಯಕ ಯೋಜನೆ ಅರಂಭಿಸಿದೆ.

ರಾಜ್ಯ ಸರ್ಕಾರವು ಸ್ವಸಹಾಯ ಸಂಘಗಳು ಹಾಗೂ ಸ್ತ್ರಿಶಕ್ತಿ ಮಹಿಳಾ ಸಂಘಗಳಿಗೆ ಕಾಯಕ ಯೋಜನೆ ಜಾರಿಗೆ ತಂದಿದ್ದು, ಈ ಯೋಜನೆಯಡಿ ಸ್ವಸಹಾಯ ಸಂಘಗಳು 10 ಲಕ್ಷ ರೂ.ವರೆಗೆ ಸಾಲ ಪಡೆಯಬಹುದು.

ಯೋಜನೆಯು ಸ್ವ ಸಹಾಯ ಗುಂಪುಗಳ ದೀರ್ಘಾವಧಿಯ ಬೇಡಿಕೆಗೆ ಅನುಗುಣವಾಗಿ ಅವರ ಚಟುವಟಿಕೆಗಳನ್ನು ಹೆಚ್ಚಿಸಲು ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡಲಾಗುತ್ತದೆ. 10 ಲಕ್ಷ ರೂ.ವರೆಗೆ ವಾರ್ಷಿಕ ಶೇ. 4 ರ ಬಡ್ಡಿದರದಲ್ಲಿ ಸಾಲ ನೀಡಲಾಗುವುದು ಎಂದು ತಿಳಿದುಬಂದಿದೆ.

ಕಾಯಕ ಯೋಜನೆಯಡಿ ರಾಜ್ಯ ಸರ್ಕಾರವು ಮಹಿಳಾ ಸಂಘಗಳು ಸಿದ್ದಪಡಿಸಿದ ಉತ್ಪನ್ನಗಳನ್ನು ಖರೀದಿಸಲು ಯೋಜಿಸಿದೆ.

ಈ ಉದ್ದೇಶಕ್ಕಾಗಿ ಕಾಯಕ ಯೋಜನೆಯಡಿ ವಿವಿಧ ಉತ್ಪನ್ನಗಳನ್ನು ತಯಾರಿಸಿ ಮಾರಾಟ ಮಾಡಲು ಮಹಿಳಾ ಸಂಘಗಳಿಗೆ ತರಬೇತಿ ನೀಡಲಿದೆ.

ಕಾಯಕ ಯೋಜನೆಗೆ ಅರ್ಹತೆಗಳು ಹೀಗಿವೆ.

ಕರ್ನಾಟಕ ರಾಜ್ಯ ಗಡಿಯೊಳಗೆ ನೆಲೆಸಿರುವ ಮತ್ತು ಕಾರ್ಯನಿರ್ವಹಿಸುತ್ತಿರುವ ಸ್ವಸಹಾಯ ಗುಂಪುಗಳು ಮಾತ್ರ ಈ ಸಾಲ ಸೌಲಭ್ಯಕ್ಕೆ ಅರ್ಹರಾಗಿದ್ದಾರೆ.

ಸ್ವಸಹಾಯ ಬ್ಯಾಂಕುಗಳಲ್ಲಿ ಸಾಲ ಸ್ವೀಕರಿಸಿದರೆ ಮಾತ್ರ ಬಡ್ಡಿರಹಿತವಾಗಿರುತ್ತದೆ.

ಸಹಕಾರಿ ಬ್ಯಾಂಕುಗಳ ಮೂಲಕ ಸ್ವಸಹಾಯ ಗುಂಪುಗಳಿಗೆ ಹಣ ನೀಡಲಾಗುತ್ತದೆ.
ರಾಜ್ಯ ಸರ್ಕಾರ 3,000 ಸ್ವಸಹಾಯ ಸಂಘಗಳಿಗೆ ಸಾಲ ನೀಡಲಿದೆ ಎಂದು ತಿಳಿದು ಬಂದಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಎಲ್ಲಾ ಮುಸ್ಲಿಂ ವಿದ್ಯಾರ್ಥಿನಿಯರು ಶಾಲೆಗೆ ಬನ್ನಿ- ಶೋಭಾ ಕರಂದ್ಲಾಜೆ

0

ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಮುಳುಗಿಸಲು ಬೇರೆ ಯಾರ ಅಗತ್ಯವೂ ಇಲ್ಲ. ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರೇ ಪಕ್ಷವನ್ನು ಉಸಿರುಗಟ್ಟಿಸಿ ಮುಗಿಸಲಿದ್ದಾರೆಂದು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಶುಕ್ರವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೋಟ್ ಬ್ಯಾಂಕ್ ರಾಜಕಾರಣದಿಂದ ಹಲವು ರಾಜ್ಯಗಳಲ್ಲಿ ಕಾಂಗ್ರೆಸ್ ಮುಳುಗುತ್ತಿದೆ. ಇಷ್ಟಾದರೂ ಪಕ್ಷದ ನಾಯಕರು ಆತ್ಮಾವಲೋಕನ ಮಾಡಿಕೊಳ್ಳಲು ಮುಂದಾಗಿಲ್ಲ ಎಂದು ಶೋಭಾ ಕರಂದ್ಲಾಜೆ ಅವರು ಹೇಳಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಮುಳುಗಿಸಲು ಬೇರೆ ಯಾರ ಅಗತ್ಯವೂ ಇಲ್ಲ. ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರೇ ಪಕ್ಷವನ್ನು ಉಸಿರುಗಟ್ಟಿಸಿ ಮುಗಿಸಲಿದ್ದಾರೆ. ಸಿದ್ದರಾಮಯ್ಯ ಸ್ವತಃ ವಕೀಲರು, ಅವರೇ ಹೈಕೋರ್ಟ್ ತೀರ್ಪನ್ನು ವಿರೋಧಿಸುತ್ತಾರೆ ಎಂದರೆ ಅವರ ಓಟ್ ಬ್ಯಾಂಕ್ ಮಾನಸಿಕ ಸ್ಥಿತಿ ಕುರಿತು ಜನರಿಗೆ ಅರ್ಥವಾಗುತ್ತದೆ. ಕಾಂಗ್ರೆಸ್ ಇಂತಹ ರಾಜಕೀಯ ಮಾಡಿ ದೇಶವನ್ನು ಅಧೋಗತಿಗೆ ತಂದಿದೆ. ರಾಜ್ಯದಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ.ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಎಲ್ಲಿದೆಯೆಂದು ಟಾರ್ಚ್ ಹಾಕಿ ಹುಡುಕುವ ಪರಿಸ್ಥಿತಿ ಇದೆ ಎಂದು ಶೋಭಾ ಕರಂದ್ಲಾಜೆ ಅವರು ಟೀಕಿಸಿದ್ದಾರೆ.

ದೇಶದ ಸಂವಿಧಾನ ಹಾಗೂ ನೆಲದ ಕಾನೂನುಗಳನ್ನು ಪ್ರತಿಯೊಬ್ಬರೂ ಗೌರವಿಸಬೇಕು. ಆದರೆ, ಕೆಲವರು ಕಾನೂನುಗಳಿಂತ ಮೇಲು ಎಂಬ ದುರಂಕಾರ ತೋರುತ್ತಿದ್ದು, ಅವರಿಗೆ ಕಾನೂನಿನಡಿ ಶಿಕ್ಷೆಯಾಗಬೇಕು, ಎಲ್ಲಾ ಮುಸ್ಲಿಂ ವಿದ್ಯಾರ್ಥಿನಿಯರು ಶಾಲೆ ದಯವಿಟ್ಟು ಶಾಲೆಗೆ ಬನ್ನಿ. ಅಲ್ಲಿನ ಪ್ರಾಂಶುಪಾಲರು ಶಿಕ್ಷಕರು ನಿಮ್ಮ ರಕ್ಷಣೆ ಮಾಡುತ್ತಾರೆ. ಯಾರು ಕೂಡ ಆತಂಕಪಡುವ ಅಗತ್ಯವಿಲ್ಲ. ಪರೀಕ್ಷೆ ಬರೆಯಿರಿ. ಚೆನ್ನಾಗಿ ಓದಿ ಉದ್ಯೋಗ ಪಡೆಯಿರಿ. ಹಿಂದೂ ಮಾತ್ರವಲ್ಲ ಮುಸ್ಲಿಂ ಹೆಣ್ಣುಮಕ್ಕಳು ಕೂಡ ಸ್ವಂತ ಕಾಲ ಮೇಲೆ ನಿಲ್ಲಬೇಕು.

ಕೈಗೆ ದುಡ್ಡು ಬಂದರೆ ಆಗ ಮಹಿಳೆಯರಿಗೆ ಧ್ವನಿ ಬರುತ್ತದೆ. ಎಲ್ಲಾ ಧರ್ಮದವರಿಗೂ ಇದು ಅನ್ವಯವಾಗುತ್ತದೆ. ನಿಮ್ಮ ಜೀವನದಲ್ಲಿ ಕಷ್ಟ ಬಂದಾಗ ಯಾವುದೇ ಸಂಘಟನೆಗಳು ಬರುವುದಿಲ್ಲ. ಈಗ ಯಾರದೋ ಪಿತೂರಿಗೆ ಬಲಿಯಾಗಬೇಕಿ ಎಂದು ಶೋಭಾ ಕರಂದ್ಲಾಜೆ ಅವರು ಮನವಿ ಮಾಡಿಕೊಂಡಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಬೆಲೆ ಏರಿಕೆಯಿಂದ ಬಡ ಹಾಗು ಮಧ್ಯಮ ವರ್ಗದ ಜನ ತತ್ತರಿಸಿದ್ದಾರೆ-ರಾಹುಲ್

0

ಹಣದುಬ್ಬರ ಮತ್ತಷ್ಟು ಏರಿಕೆಯಾಗಲಿದೆ ಎಂದು ಎಚ್ಚರಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ದೇಶದ ಜನರನ್ನು ರಕ್ಷಿಸಲು ಕೇಂದ್ರ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಶನಿವಾರ ಒತ್ತಾಯಿಸಿದ್ದಾರೆ.

ಹಣದುಬ್ಬರ ಭಾರತೀಯರ ಮೇಲಿನ ತೆರಿಗೆ ಎಂದು ಪ್ರತಿಪಾದಿಸಿರುವ ರಾಹುಲ್ ಗಾಂಧಿ, ರಷ್ಯಾ-ಉಕ್ರೇನ್ ಯುದ್ಧ ಪ್ರಾರಂಭವಾಗುವ ಮೊದಲೇ ದಾಖಲೆ ಪ್ರಮಾಣದ ಬೆಲೆ ಏರಿಕೆಯಿಂದ ಬಡ ಹಾಗೂ ಮಧ್ಯಮ ವರ್ಗದವರು ತತ್ತರಿಸಿದ್ದಾರೆ ಎಂದು ತಿಳಿಸಿದ್ದಾರೆ.

ಹಣದುಬ್ಬರವು ಮತ್ತಷ್ಟು ಏರಿಕೆಯಾಗಲಿದೆ. ಕಚ್ಚಾ ತೈಲ ಬೆಲೆ ಪ್ರತಿ ಬ್ಯಾರೆಲ್‌ಗೆ 100 ಅಮೆರಿಕನ್ ಡಾಲರ್, ಆಹಾರ ಬೆಲೆ ಶೇ. 22ರಷ್ಟು ಏರಿಕೆಯಾಗುವ ಸಾಧ್ಯತೆಯಿದೆ.

ಕೋವಿಡ್ ನಿಂದ ಜಾಗತಿಕ ಪೂರೈಕೆ ಸರಪಳಿಯಲ್ಲಿ ವ್ಯತ್ಯಾಸವಾಗಿದೆ.

ಹಾಗಾಗಿ ಕೇಂದ್ರ ಸರ್ಕಾರವು ಈಗಲೇ ಕಾರ್ಯಪ್ರವೃತರಾಗಿ ಜನರನ್ನು ರಕ್ಷಿಸಬೇಕಿದೆ ಎಂದು ಟ್ವೀಟ್ ಮಾಡಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಉಕ್ರೇನ್ ರಂಗಮಂದಿರದ ಮೇಲೆ ರಷ್ಯ ದಾಳಿ

0

ರಷ್ಯಾ ಮತ್ತು ಉಕ್ರೇನ್​ ಮಧ್ಯೆ ನಡೆಯುತ್ತಿರುವ ಯುದ್ಧ ತಣ್ಣಗಾಗುವ ಲಕ್ಷಣಗಳು ಕಾಣುತ್ತಿಲ್ಲ. ರಷ್ಯಾ ಉಕ್ರೇನ್ ವಿರುದ್ಧ ದಾಳಿ ನಡೆಸುತ್ತಿದ್ದಂತೆ ಸೈನಿಕರ ದೊಡ್ಡ ರ‍್ಯಾಲಿಯಲ್ಲಿ ಪುಟಿನ್ ಕಾಣಿಸಿಕೊಂಡಿದ್ದಾರೆ ಎಂದು ಪತ್ರಿಕೆಗಳು ವರದಿ ಮಾಡಿವೆ.

ಉಕ್ರೇನ್‌ನಿಂದ ವಶಪಡಿಸಿಕೊಂಡ ಕ್ರಿಮಿಯಾವನ್ನು ರಷ್ಯಾ ಸ್ವಾಧೀನಪಡಿಸಿಕೊಂಡ ಎಂಟನೇ ವಾರ್ಷಿಕೋತ್ಸವದ ನಿಮಿತ್ತ ಶುಕ್ರವಾರ ಇಲ್ಲಿನ ಸ್ಟೇಡಿಯಂನಲ್ಲಿ ಬೃಹತ್ ಧ್ವಜ ರ‍್ಯಾಲಿ ನಡೆಯಿತು.

ರ‍್ಯಾಲಿಯಲ್ಲಿ ಭಾಗಿಯಾದ ವ್ಲಾಡಿಮಿರ್ ಪುಟಿನ್ ಉಕ್ರೇನ್‌ನಲ್ಲಿ ಹೋರಾಡುತ್ತಿರುವ ತನ್ನ ಸೈನಿಕರ ಬಗ್ಗೆ ಹೊಗಳಿಕೆಯ ಮಾತನಾಡಿದರು.

ಉಕ್ರೇನ್‌ನೊಂದಿಗೆ ರಾಜತಾಂತ್ರಿಕ ಮಾತುಕತೆಗಳಲ್ಲಿ ರಷ್ಯಾ ನಿಯೋಗದ ನಾಯಕ, ತಮ್ಮ ಭಿನ್ನಾಭಿಪ್ರಾಯಗಳನ್ನು ಕಡಿಮೆಗೊಳಿಸಿವೆ ಎಂದು ಹೇಳಿದರು.

ಆದರೆ, ಉಭಯ ದೇಶಗಳ ಜೊತೆ ನಡೆದ ಮಾತುಕತೆ ಬಗ್ಗೆ ಉಕ್ರೇನ್​ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ರಷ್ಯಾದ ಪಡೆಗಳು ರಾಜಧಾನಿ ಕೀವ್ ಸೇರಿದಂತೆ ಉಕ್ರೇನಿಯನ್ ನಗರಗಳ ಮೇಲೆ ಮಾರಣಾಂತಿಕ ಗುಂಡಿನ ಮಳೆಯನ್ನು ಮುಂದುವರೆಸಿದೆ. ಪೋಲಿಷ್ ಗಡಿಗೆ ಸಮೀಪವಿರುವ ಎಲ್ವಿವ್ ಹೊರವಲಯದ ವಿಮಾನ ದುರಸ್ತಿ ಸ್ಥಾಪನೆ ಕೇಂದ್ರವನ್ನು ರಷ್ಯಾ ಉಡಾಯಿಸಿದೆ.

ಯುದ್ಧ ಪ್ರಾರಂಭವಾದಾಗಿನಿಂದ ನಮ್ಮ ಸೈನಿಕರು ಹೆಗಲಿಗೆ ಹೆಗಲುಕೊಟ್ಟು, ಒಬ್ಬರಿಗೊಬ್ಬರು ಪರಸ್ಪರ ಸಹಾಯ ಮಾಡುತ್ತಾರೆ. ಹಾಗೂ ಬೆಂಬಲಿಸುತ್ತಿದ್ದಾರೆ. ನಾವು ದೀರ್ಘಕಾಲದಿಂದ ಈ ರೀತಿಯ ಒಗ್ಗಟ್ಟನ್ನು ಹೊಂದಿರಲ್ಲಿಲ್ಲ.
ಈಗ ಎಲ್ಲವೂ ಸರಿಯಾಗಿದೆ ಎಂದು ಪುಟಿನ್ ತಿಳಿಸಿದರು.

ಎಂಟನೇ ವಾರ್ಷಿಕೋತ್ಸವದ ನಿಮಿತ್ತ ನಡೆದ ರ‍್ಯಾಲಿಯು ದೇಶಭಕ್ತಿ ರೂಪಿಸುವ ಪ್ರದರ್ಶನವಾಗಿದೆ ಎಂದು ಆರೋಪಿಸಿ ಕೆಲ ಪತ್ರಿಕೆಗಳು ರಷ್ಯಾ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿವೆ.

ರಷ್ಯಾದೊಳಗೆ ಯುದ್ಧ ವಿರೋಧಿ ಪ್ರತಿಭಟನೆಗಳ ಸ್ಫೋಟದ ನಡುವೆ ಈ ರ‍್ಯಾಲಿ ಭಾರಿ ಮಹತ್ವ ಪಡೆದುಕೊಂಡಿದೆ ಎಂದು ತಿಳಿದುಬಂದಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಸರ್ಕಾರಿ ಬಸ್ ಉಚಿತ ಸೇವೆ

0

2021-22ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಕೆಎಸ್‌ಆರ್‌ಟಿಸಿ ಅವಕಾಶ ಮಾಡಿಕೊಟ್ಟಿದೆ.

ಹೌದು..ಇದೇ ಮಾರ್ಚ್​ 28ರಿಂದ ಏಪ್ರಿಲ್​ 11ರವರೆಗೆ ನಡೆಯಲಿವೆ.

ಈ ಹಿನ್ನೆಲೆಯಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಉಚಿತ ಪ್ರಯಾಣಕ್ಕೆ ಕೆಎಸ್‌ಆರ್‌ಟಿಸಿ ಅವಕಾಶ ನೀಡಿದೆ.

ಮಹತ್ವದ ನಿರ್ಧಾರಕ್ಕೆ ಮುಂದಾದ ಶಿಕ್ಷಣ ಇಲಾಖೆ , ಎಸ್ಎಸ್ಎಲ್ ಸಿ , ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ.

ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸುವುದು ಕಡ್ಡಾಯವಾಗಿದೆ. ಪರೀಕ್ಷಾ ಕೇಂದ್ರದವರೆಗೆ ನಿಗಮದ ಬಸ್​ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗುತ್ತದೆ ಎಂದು ಕೆಎಸ್‌ಆರ್‌ಟಿಸಿ ಆಧಿಕಾರಿಗಳು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.

ಪರೀಕ್ಷಾ ಕೇಂದ್ರಗಳಿಗೆ ಹೋಗುವಾಗ ಹಾಗೂ ಹಿಂತಿರುಗುವಾಗ ಕಡ್ಡಾಯವಾಗಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ. ಹೊರವಲಯ ಸಾಮಾನ್ಯ ಹಾಗೂ ವೇಗದೂತ ಬಸ್​ಗಳಲ್ಲು ಉಚಿತವಾಗಿ ಪ್ರಯಾಣಿಸಬಹುದು.

ಪರೀಕ್ಷಾ ಕೇಂದ್ರದ ಬಳಿ ಬಸ್ ಹತ್ತಲು ಹಾಗೂ ಇಳಿಯಲು ಕೂಡ ಅವಕಾಶ ಮಾಡಲಾಗುತ್ತದೆ. ಈಗಾಗಲೇ ಎಲ್ಲಾ ನಿಯಮಗಳನ್ನು ಪಾಲಿಸುವಂತೆ ಬಸ್ ಚಾಲಕ ನಿರ್ವಾಹಕರುಗಳಿಗೆ ಸೂಚಿಸಲಾಗಿದೆ. ಇನ್ನೂ ಪರೀಕ್ಷಾ ಕೇಂದ್ರದ ಬಳಿಯೇ ನಿಲುಗಡೆಗೆ ಸೂಚಿಸಲಾಗಿದೆ ಎಂದು ಕೆಸ್​ಆರ್​ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಹೊಸ ಪ್ರತಿಭೆಗಳಿಗೆ ಉತ್ತೇಜನ ಪುನೀತ್ ಕನಸಾಗಿತ್ತು-ಅಶ್ವಿನಿ ಪುನೀತ್

0

ಪುನೀತ್ ರಾಜ್ ಕುಮಾರ್ ಅಗಲಿಕೆಯ ನೋವಿನಿಂದ ಇನ್ನೂ ಆಚೆ ಬಾರದ ಪುನೀತ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಇಂದು ಬಿಡುಗಡೆ ಆಗಿರುವ ಜೇಮ್ಸ್ ಸಿನಿಮಾವನ್ನು ನೋಡಲಾರೆ ಎಂದಿದ್ದಾರೆ. ಮಾತನಾಡಿರುವ ಅವರು, “ನನ್ನ ಮತ್ತು ಪುನೀತ್ ಅವರ ಬದುಕಿನ ಜರ್ನಿ 21 ವರ್ಷಗಳದ್ದು.

ಸಡನ್ನಾಗಿ ಅವರು ಹೀಗೆ ಬಿಟ್ಟು ಹೋಗುತ್ತಾರೆ ಎಂದು ಭಾವಿಸಿರಲಿಲ್ಲ. ಅವರ ಅಗಲಿಕೆಯ ನೋವನ್ನು ಇಂದಿಗೂ ಅರಗಿಸಿಕೊಳ್ಳಲು ಆಗುತ್ತಿಲ್ಲ. ನಾನೂ ಆ ನೋವಿನಿಂದ ಇನ್ನೂ ಆಚೆ ಬಂದಿಲ್ಲ.

ಆದ್ದರಿಂದ, ತೆರೆಯ ಮೇಲೆ ಅವರನ್ನು ನಾನು ನೋಡಲಾರೆ ಎಂದು ತಮ್ಮ ನೋವಿನ ಮಾತುಗಳನ್ನು ಹಂಚಿಕೊಂಡಿದ್ದಾರೆ. ಹೊಸ ಹೊಸ ಕಲಾವಿದರಿಗೆ, ನಿರ್ದೇಶಕರಿಗೆ, ತಾಂತ್ರಿಕ ವರ್ಗಕ್ಕೆ ಸೂಕ್ತ ವೇದಿಕೆ ಕಲ್ಪಿಸಬೇಕು ಎನ್ನುವುದು ಪುನೀತ್ ಅವರ ಆಸೆಯಾಗಿತ್ತು.

ಹಾಗಾಗಿಯೇ ನಾವು ಪಿ.ಆರ್.ಕೆ ಪ್ರೊಡಕ್ಷನ್ ಶುರು ಮಾಡಿದ್ದೆವು. ಅವರ ಕನಸನ್ನು ಮುಂದುವರೆಸಿಕೊಂಡು ಹೋಗಬೇಕು. ಅಂದುಕೊಂಡಂತೆ ಹೊಸ ಹೊಸ ಪ್ರತಿಭೆಗಳಿಗೆ ಪಿ.ಆರ್.ಕೆ ಪ್ರೊಡಕ್ಷನ್ ಅವಕಾಶ ನೀಡಲಿದೆ ಎಂದು ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ಹೇಳಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ನವೀನ್ ಮೃತದೇಹ ರಾಜ್ಯಕ್ಕೆ ಬರಲಿದೆ -ಸಿಎಂ

0

ರಷ್ಯಾ ದಾಳಿಯಿಂದ ಉಕ್ರೇನ್‌ಲ್ಲಿ ಮೃತಪಟ್ಟ ರಾಣಿಬೆನ್ನೂರು ತಾಲೂಕಿನ ವೈದ್ಯಕೀಯ ವಿದ್ಯಾರ್ಥಿ ನವೀನ್ ಶೇಕರಪ್ಪ ಮೃತದೇಹ ಸೋಮವಾರ(ಮಾ.21) ಭಾರತಕ್ಕೆ ಆಗಮಿಸಲಿದೆ.

ಮುಂಜಾನೆ 3 ಗಂಟೆಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪಾರ್ಥೀವ ಶರೀರ ಆಗಮಿಸಲಿದೆ.
ಈ ಕುರಿತ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ. ಯುದ್ಹಧ ಕಾರಣ ಹಲವು ಅಡೆ ತಡೆ ಎದುರಾಗಿತ್ತು. ಆದರೆ ಪಾರ್ಥೀವ ಶರೀರವನ್ನು ಭಾರತಕ್ಕೆ ತರಲಾಗುತ್ತಿದೆ ಎಂದು ಬೊಮ್ಮಾಯಿ ಹೇಳಿದ್ದಾರೆ.

ಮಾರ್ಚ್ 1 ರಂದು ಉಕ್ರೇನ್‌ನ ಖಾರ್ಕೀವ್‌ನಲ್ಲಿ ರಷ್ಯಾ ನಡೆಸಿದ ದಾಳಿಯಲ್ಲಿ ನವೀನ್ ಶೇಕರಪ್ಪ ಮೃತಪಟ್ಟಿದ್ದರು.

ಯುದ್ಧದಿಂದಾಗಿ ಮೃತದೇಹ ತರಲು ಸಾಧ್ಯವಾಗಿರಿಲ್ಲ. ಈ ನಿಟ್ಟಿನಲ್ಲಿ ಭಾರತ ಸರ್ಕಾರ ಸತತ ಪರಿಶ್ರಮಪಟ್ಟಿತ್ತು. ದುರ್ಘಟನೆ ನಡೆದ ಖಾರ್ಕೀವ್‌ನಲ್ಲಿ ಈಗಿನ ಪರಿಸ್ಥಿತಿಯ ಕಾರಣ ಅಲ್ಲಿಗೆ ಯಾವುದೇ ವಿಮಾನಗಳು ತೆರಳುತ್ತಿಲ್ಲ.

ಜೊತೆಗೆ ಸಮೀಪದಲ್ಲೂ ಎಲ್ಲೂ ಏರ್‌ಸ್ಟ್ರಿಪ್‌ ಕೂಡಾ ಇಲ್ಲ. ಹೀಗಾಗಿ ನವೀನ್‌ ಮೃತದೇಹವನ್ನು ಭಾರತಕ್ಕೆ ತರುವಲ್ಲಿ ವಿಳಂಬವಾಗಿತ್ತು.
ಭಾರತದ ಸತತ ಪ್ರಯತ್ನದಿಂದ ಇದೀಗ ನವೀನ್ ಮೃತದೇಹ ಭಾರತಕ್ಕೆ ಆಗಮಿಸುತ್ತಿದೆ.

ನವೀನ್ ಮೃತದೇಹ ಭಾರತಕ್ಕೆ ತರಲು ಸೂಚಿಸಿದ್ದ ಮೋದಿ
ಉಕ್ರೇನ್ ಪರಿಸ್ಥಿತಿ ಹಾಗೂ ಭಾರತೀಯ ರಕ್ಷಣೆ ಕುರಿತು ನಡೆಸಿದ ಸಂಪುಟ ಸಭೆಯಲ್ಲಿ ನವೀನ್‌ ಶೇಖರಪ್ಪ ಅವರ ಮೃತದೇಹವನ್ನು ಭಾರತಕ್ಕೆ ತರಿಸಲು ಅಗತ್ಯವಿರುವ ಎಲ್ಲ ಪ್ರಯತ್ನಗಳನ್ನೂ ನಡೆಸುವಂತೆ ಪ್ರಧಾನಿ ನರೇಂದ್ರ ಮೋದಿ ಸೂಚನೆ ನೀಡಿದ್ದರು.