ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರನ್ನು 2022 ರಲ್ಲಿ ನೊಬೆಲ್ ಶಾಂತಿ ಪ್ರಶಸ್ತಿಗೆ ನಾಮ ನಿರ್ದೇಶನ ಮಾಡಲಾಗಿದೆ.
ಹಾಲಿ ಮತ್ತು ಮಾಜಿ ಯುರೋಪಿಯನ್ ರಾಜಕಾರಣಿಗಳು ನಾರ್ವೇಜಿಯನ್ ನೊಬೆಲ್ ಸಮಿತಿಯು ಶಿಫಾರಸ್ಸು ಮಾಡಿದೆ. ನಾಮನಿರ್ದೇಶನ ಪ್ರಕ್ರಿಯೆಯನ್ನು ಮಾರ್ಚ್ 31ರವರೆಗೆ ವಿಸ್ತರಿಸಿದೆ.
ಅಧ್ಯಕ್ಷ ಝೆಲೆನ್ಸ್ಕಿ ಮತ್ತು ಉಕ್ರೇನ್ ಜನರಿಗೆ ನೊಬೆಲ್ ಶಾಂತಿ ಪ್ರಶಸ್ತಿ ನಾಮನಿರ್ದೇಶನವನ್ನು ಅನುಮತಿಸಲು ಮಾರ್ಚ್ 31, 2022 ರವರೆಗೆ ನೊಬೆಲ್ ಶಾಂತಿ ಪ್ರಶಸ್ತಿಗಾಗಿ ನಾಮನಿರ್ದೇಶನ ಪ್ರಕ್ರಿಯೆಯನ್ನು ವಿಸ್ತರಿಸಲಾಗುವುದು ಎಂದು ಸಮಿತಿ ತಿಳಿಸಿದೆ.
ನೊಬೆಲ್ ಶಾಂತಿ ಪ್ರಶಸ್ತಿಗಾಗಿ 2022ರ ನಾಮನಿರ್ದೇಶನ ವಿಧಾನವನ್ನು ಪುನಃ ತೆರೆಯಲು ಮತ್ತು ಮರುಪರಿಶೀಲಿಸಲು ರಾಜಕಾರಣಿಗಳು ಸಮಿತಿಗೆ ಕರೆ ನೀಡಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಅಕ್ಟೋಬರ್ 3-10 ರವರೆಗೆ ಈ ವರ್ಷದ ನೊಬೆಲ್ ಪ್ರಶಸ್ತಿ ಘೋಷಣೆಯಾಗಲಿದೆ. 2022ರ ನೊಬೆಲ್ ಶಾಂತಿ ಪ್ರಶಸ್ತಿಗಾಗಿ 251 ವ್ಯಕ್ತಿಗಳು ಮತ್ತು 92 ಸಂಸ್ಥೆಗಳು ಅರ್ಜಿ ಸಲ್ಲಿಸಿವೆ.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
KLIVE at Google News App
KLIVE Android App on Google Play Store
Download the most loved Klive App for your Android phone or tablet.
ಇಂದಿನ ಜೀವನದಲ್ಲಿ ಮನುಷ್ಯನಿಗೆ ಗಾಳಿ ನೀರು ಆಹಾರದೊಂದಿಗೆ ಔಷಧಗಳು ಕೂಡ ಬಹುಮುಖ್ಯವಾಗಿ ಬೇಕಾಗಿದೆ. ಬದಲಾಗುತ್ತಿರುವ ಜೀವನಶೈಲಿ, ಆಹಾರ ಪದ್ಧತಿ, ವಾಯುಮಾಲಿನ್ಯದಿಂದಾಗಿ ಆರೋಗ್ಯವೂ ಹದಗೆಡುತ್ತಿದೆ.
ಮನುಷ್ಯ ಬದುಕುಳಿಯಲು ಹರಸಾಹಸ ಪಡುವಂತಾಗಿದೆ. ಆಹಾರದೊಂದಿಗೆ ಔಷಧಗಳು ಅತ್ಯಗತ್ಯವಾಗಿದೆ. ಆರೋಗ್ಯ ಸ್ಥಿತಿ ಸುಧಾರಿಸಲು, ಆರೋಗ್ಯದಿಂದ ಇರಲು, ಅನಾರೋಗ್ಯಕ್ಕೆ ಒಳಗಾಗದಂತೆ ದೇಶವನ್ನು ರಕ್ಷಿಸಲು ಔಷಧಗಳು ಬಹುಮುಖ್ಯ ಪಾತ್ರವನ್ನು ವಹಿಸುತ್ತವೆ. ಯಾವುದೇ ವ್ಯಕ್ತಿಗೆ ಅನಾರೋಗ್ಯ ಉಂಟಾದಾಗ ವೈದ್ಯರಿಗಿಂತಲೂ ಮೊದಲು ಆಯ್ಕೆ ಮಾಡುವುದು ಮಾತ್ರೆ ಅಥವಾ ಔಷಧಗಳನ್ನ.
ಕೊರೊನಾ ಸಾಂಕ್ರಮಿಕ ರೋಗದಿಂದಾಗಿ ಜನರಿಗೆ ಆರೋಗ್ಯದ ಬಗ್ಗೆ ಕಾಳಜಿ ಹೆಚ್ಚಾಗಿದೆ. ಶ್ರೀಮಂತರೋ ಏನಾದರೂ ದೊಡ್ಡ ಕಾಯಿಲೆಗಳು ಎದುರಾದಾಗ ಪ್ರತಿಷ್ಠಿತ ಹಾಸ್ಪಿಟಲ್ ಗಳಿಗೆ ಹೋಗಿ ಚಿಕಿತ್ಸೆ ಪಡೆಯುತ್ತಾರೆ. ಆದರೆ ಬಡ ಜನರು ಅನಾರೋಗ್ಯ ಉಂಟಾದಾಗ ಅಥವಾ ಯಾವುದೋ ದೊಡ್ಡ ಕಾಯಿಲೆ ಬಂದಾಗ ಔಷಧಗಳನ್ನೂ ಖರೀದಿಸಲು ಹಾಗೂ ವೈದ್ಯರ ಬಳಿ ಹೋಗಲು ಹಣವಿಲ್ಲದೆ ಜೀವನ ಕಳೆದುಕೊಳ್ಳುತ್ತಾರೆ. ಬಡಜನರಿಗೂ ಬದುಕುವ ಹಕ್ಕಿದೆ. ಹಾಗಾಗಿ, ಪ್ರಧಾನಮಂತ್ರಿ ಭಾರತೀಯ ಜನೌಷಧಿ ಪರಿಯೋಜನಾ ವಿಶೇಷ ಕೇಂದ್ರಗಳ ಮೂಲಕ ಜನಸಾಮಾನ್ಯರಿಗೆ ಕೈಗೆಟುಕುವ ಬೆಲೆಯಲ್ಲಿ ಜೆನೆರಿಕ್ ಔಷಧಿಗಳನ್ನು ಒದಗಿಸುತ್ತಿದೆ. ಈ ಜನೌಷದ ಕೇಂದ್ರಗಳ ಬಗ್ಗೆ ಬಹಳಷ್ಟು ಜನರಿಗೆ ತಿಳಿದಿಲ್ಲ.
ಜನೌಷಧ ವಿಶೇಷ ಕೇಂದ್ರಗಳನ್ನು ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಪರಿಯೋಜನಾ ಕೇಂದ್ರ ಎಂದು ಕರೆಯಲಾಗುತ್ತದೆ.
ದುಬಾರಿ ಬ್ರಾಂಡ್ ಔಷಧಗಳಂತೆಯೇ ಗುಣಮಟ್ಟದ ಔಷಧಗಳನ್ನು ಕೈಗೆಟಕುವ ಬೆಲೆಯಲ್ಲಿ ತಲುಪಿಸಲು ಇದನ್ನು ಸ್ಥಾಪಿಸಲಾಗಿದೆ. ಇದನ್ನು ಯುಪಿಎ ಸರ್ಕಾರವು 2008 ರಲ್ಲಿ ಪ್ರಾರಂಭಿಸಿತು.
2015 ರಲ್ಲಿ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಪರಿಯೋಜನಾ (ಪಿಎಂಬಿಜೆಪಿ) ಎಂದು ನವೀಕರಿಸಲಾಯಿತು. ಈ ಹಿಂದೆ, ದೇಶದ ವಿವಿಧ ಭಾಗಗಳಲ್ಲಿ ಔಟ್‌ಲೆಟ್‌ಗಳಿಗೆ ಪ್ರತ್ಯೇಕವಾಗಿ ಜನೌಷಧಿ ಮೆಡಿಕಲ್ ಸ್ಟೋರ್ ಎಂದು ಹೆಸರಿಸಲಾಗಿತ್ತು.
ಈ ಜನೌಷಧ ಕೇಂದ್ರ ಗಳಲ್ಲಿ ಜನಸಾಮಾನ್ಯರಿಗೆ ಅಗತ್ಯವಾಗಿ ಬೇಕಾಗಿರುವ ಮಾತ್ರೆಗಳು, ಔಷಧಗಳು, ಸ್ಯಾನಿಟರಿ ಪ್ಯಾಡ್ ಗಳು ಮತ್ತು ವೈದ್ಯಕೀಯ ಸಾಮಾಗ್ರಿಗಳು ರಿಯಾಯಿತಿ ದರದಲ್ಲಿ ಲಭ್ಯವಿವೆ.
ಕೈಗೆಟುಕುವ ಬೆಲೆಯಲ್ಲಿ ಲಭ್ಯವಿರುವ ಗುಣಮಟ್ಟದ ಮತ್ತು ಜೆನೆರಿಕ್ ಔಷಧಿಗಳು ಇಲ್ಲಿ ಸಿಗುತ್ತವೆ.
ಇದು ಬ್ರಾಂಡೆಡ್ ಔಷಧಿಗಳಿಗೆ ಸಮಾನವಾದ ಔಷಧಿಗಳ ಪೂರೈಕೆಯನ್ನು ಹೋಲುತ್ತದೆ.
ಪಿಎಂಬಿಜೆಪಿ ಅಡಿಯಲ್ಲಿ, ಆರೋಗ್ಯ ರಕ್ಷಣೆಗಾಗಿ ಬರುವ ಹಣದ ಹೊರಗಿನ ವೆಚ್ಚಗಳನ್ನು ಕಡಿಮೆ ಮಾಡಲು ಈ ಕೇಂದ್ರವನ್ನು ದೇಶಾದ್ಯಂತ ತೆರೆಯಲಾಗಿದೆ.
ಫಾರ್ಮಾಸ್ಯುಟಿಕಲ್ಸ್ ಇಲಾಖೆಯ ಅಡಿಯಲ್ಲಿ ಭಾರತದ ಫಾರ್ಮಾ ಪಿಎಸ್ಯುಗಳ ಬ್ಯೂರೋವು ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಕೇಂದ್ರಗಳು ಮೂಲಕ ಮಾರಾಟ ಮಾಡಬೇಕಾದ ಔಷಧಿಗಳನ್ನು ಸಂಯೋಜಿಸುವುದು, ಸಂಗ್ರಹಿಸುವುದು, ಸರಬರಾಜು ಮಾಡುವುದು ಮತ್ತು ಮಾರಾಟ ಮಾಡುವುದನ್ನು ಒಳಗೊಂಡಿದೆ.
ಬ್ರಾಂಡೆಡ್ ಔಷಧಿಗಳ ಮಾರುಕಟ್ಟೆ ಬೆಲೆಗೆ ಹೋಲಿಸಿದರೆ ವಾಸ್ತವಿಕ ಬೆಲೆಯ ಸುಮಾರು 50-90 ಪ್ರತಿಶತದಷ್ಟು ಕಡಿತವಿದೆ. ಈ ಯೋಜನೆಯಡಿಯಲ್ಲಿ ಸಂಗ್ರಹಿಸಲಾದ ಔಷಧಗಳನ್ನು ಗುಣಮಟ್ಟದ ಭರವಸೆಗಾಗಿ ರಾಷ್ಟ್ರೀಯ ಮಾನ್ಯತಾ ಮಂಡಳಿಯ ಪ್ರಯೋಗಾಲಯಗಳು (ಎನ್‌ಎಬಿಎಲ್) ವಿಶ್ವ ಆರೋಗ್ಯ ಸಂಸ್ಥೆಯ ಉತ್ತಮ ಉತ್ಪಾದನಾ ಅಭ್ಯಾಸಗಳಿಗೆ ಅನುಸಾರವಾಗಿ ಪರೀಕ್ಷಿಸಲಾಗುತ್ತದೆ.
ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರವು 2.5 ಲಕ್ಷದವರೆಗೆ ಮೊತ್ತವನ್ನು ನೀಡುತ್ತದೆ. ಇದನ್ನು ವೈದ್ಯರು, ಔಷಧಿಕಾರರು, ಉದ್ಯಮಿಗಳು, ಸ್ವ-ಸಹಾಯ ಗುಂಪುಗಳು, ದತ್ತಿ ಸಂಘಗಳು ಯಾವುದೇ ಅನುಕೂಲಕರ ಸ್ಥಳದಲ್ಲಿ ಮಾಡಬಹುದು.
ರೈಲ್ವೆ ಸಚಿವಾಲಯ ಕೂಡ ರೈಲ್ವೆ ನಿಲ್ದಾಣಗಳು ಮತ್ತು ಇತರ ರೈಲ್ವೆ ಸಂಸ್ಥೆಗಳಲ್ಲಿ ಜನೌಷದಿ ಕೇಂದ್ರಗಳನ್ನು ತೆರೆಯಲು ಅನುಮೋದನೆ ನೀಡಿದೆ. ಈ ವಿಧಾನವು ಗ್ರಾಹಕರಿಗೆ ಅಗತ್ಯ ಔಷಧಿಗಳ ಲಭ್ಯತೆ ಮತ್ತು ಕೈಗೆಟುಕುವ ಸಾಮರ್ಥ್ಯವನ್ನು ಹೆಚ್ಚಿಸಲು ರೈಲ್ವೆ ನಿಲ್ದಾಣಗಳಲ್ಲಿ ಗುಣಮಟ್ಟದ ಔಷಧಿಗಳು ದೊರೆಯಲು ಸಾಧ್ಯವಾಗುತ್ತದೆ.
ಜನೌಷಧಿ ಸುಗಮ್ ಅಪ್ಲಿಕೇಶನ್ ಕೂಡ ಲಭ್ಯವಿದೆ. ಗ್ರಾಹಕರ ಸುತ್ತಲಿನ ಪ್ರದೇಶಗಳಲ್ಲಿ ಜನೌಷಧಿ ಕೇಂದ್ರಗಳನ್ನು ಪತ್ತೆಹಚ್ಚಲು ಅಪ್ಲಿಕೇಶನ್ ಅನ್ನು ಪ್ರಾರಂಭಿಸಲಾಗಿದೆ.
ತಂತ್ರಜ್ಞಾನದ ಮೂಲಕ ಕೈಗೆಟುಕುವ ಆರೋಗ್ಯ ಯೋಜನೆಗಳನ್ನು ಉತ್ತೇಜಿಸಲು ಇದು ಸಹಾಯ ಮಾಡುತ್ತದೆ. ಈ ಔಷಧಿಗಳು ಕಡಿಮೆ ವೆಚ್ಚದಲ್ಲಿರುತ್ತವೆ. ಸಮಾಜದ ಎಲ್ಲಾ ವರ್ಗಗಳಿಗೆ ಕೈಗೆಟಕು ಬೆಲೆಯನ್ನು ಔಷಧಿಗಳನ್ನು ಇಲ್ಲಿ ಖರೀದಿಸಬಹುದು.
ಜನೌಷಧ ಕೇಂದ್ರ ದಲ್ಲಿ ದೊರೆಯುವ ಔಷಧಗಳ ಪರಿಣಾಮಕಾರಿಯೇ ? ಎಂಬ ಪ್ರಶ್ನೆ ಜನಸಾಮಾನ್ಯರನ್ನು ಕಾಡುತ್ತದೆ. ಇಲ್ಲಿ ಗಮನಿಸಬೇಕಾದ ಮುಖ್ಯ ಅಂಶವೆಂದರೆ ಈಗಾಗಲೇ ಮಾರುಕಟ್ಟೆಯಲ್ಲಿ ಬ್ರಾಂಡ್ ಹಕ್ಕನ್ನು ಹೊಂದಿರುವ ಯಾವುದೇ ಔಷಧವನ್ನು ಇಲ್ಲಿ ಮಾರಾಟವಾಗುವುದಿಲ್ಲ.
ಸದ್ಯ ವಿದ್ಯಮಾನದಲ್ಲಿ ಯಾವುದೇ ಕಂಪನಿಗಳು ತಯಾರಿಸುವ ಔಷಧಕ್ಕೆ ಇಂತಿಷ್ಟು ವರ್ಷಗಳ ಪೇಟೆಂಟ್ ಹೊಂದಿರುತ್ತವೆ. ಔಷಧಗಳನ್ನು ಬೇರೆ ಯಾರೂ ತಯಾರಿಸುವುದಿಲ್ಲ ಎಂಬ ಕಾನೂನು ಇರುತ್ತದೆ.
ಆದರೆ, ಅಂತಹ ಪೇಟೆಂಟನ್ನು ಕಳೆದುಕೊಂಡ ಔಷಧಗಳನ್ನು ಯಾರೇ ಆದರೂ ತಯಾರಿಸಬಹುದು. ಅಂತಹ ಔಷಧಗಳು ಜನೌಷದ ಕೇಂದ್ರಗಳಲ್ಲಿ ಮಾರಾಟವಾಗುತ್ತವೆ.
ಹಾಗಾಗಿ ಜನೌಷಧ ಕೇಂದ್ರಗಳಲ್ಲಿ ಸಿಗುವ ಔಷಧಿಗಳು ಕೇಂದ್ರೀಯ ಔಷಧ ನಿಯಂತ್ರಣ ಮಂಡಳಿಯಿಂದ ಮನ್ನಣೆ ಪಡೆದಿವೆ.
ಇಲ್ಲಿ ಸಿಗುವ ಮಾತ್ರೆ ಗಳಾಗಲಿ, ಔಷಧಿ ಗಳಾಗಲಿ ಕಡಿಮೆ ಬೆಲೆಯದ್ದಾದರೂ ಗುಣಮಟ್ಟದಲ್ಲಿ ಯಾವುದೇ ಬದಲಾವಣೆಯನ್ನು ಹೊಂದಿಲ್ಲ ಎಂಬುದನ್ನು ಜನಸಾಮಾನ್ಯರು ತಿಳಿದುಕೊಳ್ಳಬೇಕಾಗಿದೆ.
ಕೆಲವು ಖಾಸಗಿ ವ್ಯಕ್ತಿಗಳು ಜನೌಷಧ ಕೇಂದ್ರದ ಜನಪ್ರಿಯತೆಯಲ್ಲಿ ಕಡಿಮೆ ಗುಣಮಟ್ಟದ ಔಷಧಗಳನ್ನು ಕೌಟರನಲ್ಲಿರಿಸಿ ಮಾರಾಟ ಮಾಡಲು ಹವಣಿಸುತ್ತಿವೆ. ಈ ಆರೋಪ ಈಗೀಗ ಸಾರ್ವಜನಿಕರಿಂದ ಕೇಳಿ ಬರುತ್ತಿದೆ. ಈ ಬಗ್ಗೆ ಸರ್ಕಾರ ಸೂಕ್ತ ಜಾಗೃತಿವಹಿಸಬೇಕಿದೆ.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
KLIVE at Google News App
KLIVE Android App on Google Play Store
Download the most loved Klive App for your Android phone or tablet.
ಸರ್ಕಾರ ಜಾರಿಗೆ ತಂದಿರುವ ನೂತನ ಶಿಕ್ಷಣ ನೀತಿಯು ವಿದ್ಯಾರ್ಥಿ ಕೇಂದ್ರಿತವಾಗಿದ್ದು, ಹೊಸ ಅವಕಾಶಗಳ ಬಾಗಿಲು ತೆರೆಯಲಿದೆ. ಪದವಿ ಹಂತದಲ್ಲಿಯೇ ಅಂತರ್‍ಶಿಸ್ತೀಯ ಅಧ್ಯಯನ ಕೈಗೊಳ್ಳಲು ನೆರವಾಗುವುದರ ಜೊತೆಗೆ ಉದ್ಯೋಗ ಕೇಂದ್ರಿತ ಕೌಶಲ್ಯಗಳನ್ನು ಕಲಿಯಲು ವಿದ್ಯಾರ್ಥಿಗಳಿಗೆ ಅನುವು ಮಾಡಿಕೊಡಲಿದೆ. ಇದರಿಂದಾಗಿ ಭವಿಷ್ಯದಲ್ಲಿ ಉದ್ಯೋಗಾವಕಾಶಗಳು ಹೆಚ್ಚಳವಾಗಲಿದೆ ಎಂದು ತುಮಕೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ವೈ. ಎಸ್. ಸಿದ್ದೇಗೌಡ ಅಭಿಪ್ರಾಯಪಟ್ಟರು.
ಕುವೆಂಪು ವಿಶ್ವವಿದ್ಯಾಲಯದ ಸಮಾಜ ಕಾರ್ಯ ವಿಭಾಗವು ಗುರುವಾರ ಬಸವ ಭವನದಲ್ಲಿ, ನೂತನ ಶಿಕ್ಷಣ ನೀತಿ ಮತ್ತು ಸಮಾಜಕಾರ್ಯ ಕುರಿತು ಆಯೋಜಿಸಿದ್ದ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನೂತನ ಶಿಕ್ಷಣ ನೀತಿಯ ಅನುಷ್ಠಾನದ ಆರಂಭಿಕ ಹಂತದಲ್ಲಿರುವುದರಿಂದ ಸಾಂಪ್ರದಾಯಿಕವಾಗಿ ಬೋಧಿಸಲಾಗುತ್ತಿದ್ದ ಪಠ್ಯಕ್ರಮವನ್ನು ಹೊಸ ಮಾದರಿಗೆ ಅಳವಡಿಸಬೇಕಾದ ಅನಿವಾರ್ಯತೆ ಇದೆ. ಇದೇ ಕಾರಣದಿಂದ ಸರ್ಕಾರ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಿಗೆ ನೆರವಾಗುವ ಉದ್ದೇಶದಿಂದ ಮಾದರಿ ಪಠ್ಯಕ್ರಮ ರಚನೆಗೆ ಸಮಿತಿಗಳನ್ನು ರಚಿಸಿತ್ತು.
ಸಮಾಜ ವಿಜ್ಞಾನಗಳ ಪಠ್ಯಕ್ರಮ ರಚನಾ ಸಮಿತಿಯ ಅಧ್ಯಕ್ಷರಾಗಿ ಸರ್ಕಾರ ತಮ್ಮನ್ನು ನೇಮಿಸಿದಾಗ, ವಿಶ್ವವಿದ್ಯಾಲಯಗಳ ಅಧ್ಯಯನ ಮಂಡಳಿಗಳಿಗೆ ನೆರವು ಒದಗಿಸುವ ಉದ್ದೇಶದಿಂದ ಮಾದರಿ ಪಠ್ಯಕ್ರಮವನ್ನು ರಚಿಸಿ ಕಳುಹಿಸಿಕೊಡಲಾಯಿತು.
ಆದರೆ ನೂತನ ಶಿಕ್ಷಣ ನೀತಿಯ ಪ್ರಕಾರ ಆಯಾ ವಿಶ್ವವಿದ್ಯಾಲಯಗಳು ಈ ಮಾದರಿ ಸಂರಚನೆ ಮತ್ತು ವಿಷಯಗಳ ಶೀರ್ಷಿಕೆಗಳನ್ನು ಉಳಿಸಿಕೊಂಡು ಪಠ್ಯಕ್ರಮದಲ್ಲಿ ಬದಲಾವಣೆ ಮಾಡಿಕೊಳ್ಳಲು ಅವಕಾಶವಿದೆ ಎಂದರು.
ಬೆಂಗಳೂರು ನಗರ ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವ ಪ್ರೊ. ಬಿ. ರಮೇಶ್ ಮಾತನಾಡಿ, ನೂತನ ಶಿಕ್ಷಣ ನೀತಿ ಇತರ ಎಲ್ಲ ವಿಷಯಗಳಂತೆ ಸಮಾಜ ಕಾರ್ಯ ವಿಷಯಕ್ಕೂ ಹೊಸ ಸಾಧ್ಯತೆಗಳನ್ನು ಸೃಷ್ಟಿಸಿದೆ. ಸಮಾಜದ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಿ ಕಾರ್ಯನಿರ್ವಹಿಸುವ ಕ್ರಿಯಾತ್ಮಕ ಕಾರ್ಯದಲ್ಲಿ ಸಮಾಜ ಕಾರ್ಯ ಪದವೀಧರರು ವೃತ್ತಿಪರ ಸೇವೆ ಒದಗಿಸುತ್ತಾ ಬಂದಿದ್ದಾರೆ.
ಹೊಸದಾಗಿ ಅಳವಡಿಸಿಕೊಂಡಿರುವ ಅಂತರ್‍ಶಿಸ್ತೀಯ ಅಧ್ಯಯನವು ಸಮಾಜ ಕಾರ್ಯ ಪದವೀಧರರ ಲೋಕದೃಷ್ಟಿಯನ್ನು ಇನ್ನಷ್ಟು ವಿಸ್ತರಿಸಲಿದೆ ಎಂದರು.
ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ಮಾತನಾಡಿ, ಸಮಾಜದ ಎಲ್ಲ ರಂಗಗಳಲ್ಲಿ ಮೌಲ್ಯಗಳ ಅಧಃಪತನವಾಗುತ್ತಿರುವ ಪ್ರಸ್ತುತ ಸಂದರ್ಭದಲ್ಲಿ ಹೊಸ ಶಿಕ್ಷಣ ನೀತಿಯ ಸಾಧ್ಯತೆಗಳನ್ನು ಅಳವಡಿಸಿಕೊಂಡು ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಹೀಗೆ ಎಲ್ಲ ವರ್ಗಗಳನ್ನು ಮೇಲೆತ್ತುವ ಜವಾಬ್ದಾರಿಯನ್ನು ಸಮಾಜ ಕಾರ್ಯದ ವೃತ್ತಿಪರರು ನಿರ್ವಹಿಸಬೇಕಿದೆ. ಸರ್ಕಾರ ಮತ್ತು ಸರ್ಕಾರೇತರ ಸಂಸ್ಥೆಗಳ ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ತಳಹಂತದಲ್ಲಿ ಕಾರ್ಯನಿರ್ವಹಿಸುವ ಸಾಮಾಜಿಕ ಕಾರ್ಯಕರ್ತರು ರಾಷ್ಟ್ರದ ಅಭಿವೃದ್ಧಿಗೆ ಇಂಬುಕೊಡುವ ತೆರೆಮರೆಯ ನಾಯಕರು ಎಂದು ಶ್ಲಾಘಿಸಿದರು.
ಸಮಾಜಕಾರ್ಯ ವಿಭಾಗದ ಅಧ್ಯಕ್ಷ ಪ್ರೊ. ಎ. ರಾಮೇಗೌಡ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರೊ. ಸಂಗೀತಾ ಮಾನೆ, ಪ್ರೊ. ಪರಶುರಾಮ ಕೆ. ಜಿ., ಪ್ರೊ. ಲೋಕೇಶ ವಿಚಾರ ಮಂಡಿಸಿದರು. ಪ್ರೊ. ಗುರುಲಿಂಗಯ್ಯ, ಪ್ರೊ. ಈ. ಚಂದ್ರಶೇಖರ್, ಡಾ. ಸಂಧ್ಯಾ ಕಾವೇರಿ, ಪ್ರೊ. ಅಂಜನಪ್ಪ, ಡಾ. ದಿಲೀಪ್ ಕುಮಾರ್, ಡಾ. ಸರವಣ, ಡಾ. ರವಿಶಂಕರ್, ಡಾ. ಮಹೇಶ್, ಶ್ರೀಧರ್, ಸುನಿತಾ, ನೇತ್ರಾವತಿ, ವಿವಿಧ ವಿಶ್ವವಿದ್ಯಾಲಯಗಳ ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
KLIVE at Google News App
KLIVE Android App on Google Play Store
Download the most loved Klive App for your Android phone or tablet.
ಹುಕ್ಕಾ ಬಾರ್ ಮತ್ತು ಕ್ಯಾಸಿನೋಗಳ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ. ಅವುಗಳ ಕಾರ್ಯನಿರ್ವಹಣೆಗೆ ಅವಕಾಶ ನೀಡುವುದಿಲ್ಲ. ಅವುಗಳ ಮೇಲೆ ವಿಶೇಷ ನಿಗಾ ಇಡಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಿಳಿಸಿದ್ದಾರೆ.
ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಪಿ.ಆರ್.ರಮೇಶ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಹುಕ್ಕಾಬಾರ್ ಗಳನ್ನು ನಡೆಸಲು ಪೋಲೀಸ್ ಇಲಾಖೆ ವತಿಯಿಂದ ಲೈಸನ್ಸ್ ನೀಡಲಾಗುವುದಿಲ್ಲ. ಆದರೆ ಅವು ಬಿಬಿಎಂಪಿ ಯಿಂದ ಟ್ರೇಡ್ ಲೈಸನ್ಸ್ ಪಡೆದಿರುತ್ತವೆ. ಅಲ್ಲದೇ, ಈ ಬಾರ್ ಗಳನ್ನು ನಡೆಸುವವರು ಕೋರ್ಟ್ ನಿಂದ ಕೆಲವು ಆದೇಶ ಗಳನ್ನು ತಂದಿದ್ದಾರೆ.ಹುಕ್ಕಾಬಾರ್ ಗಳನ್ನು ಸ್ಮೋಕಿಂಗ್ ಜೋನ್ ಎಂದು ಪರಿಗಣಿಸಿ ನ್ಯಾಯಾಲಯ ಆದೇಶ ನೀಡಿದೆ. ಪದೇಪದೇ ಪೋಲೀಸರು ಈ ಸ್ಥಳಗಳಿಗೆ ತೆರಳಿ ತನಿಖೆ ನೆಪದಲ್ಲಿ ತೊಂದರೆ ಕೊಡಬಾರದೆಂದೂ ನ್ಯಾಯಾಲಯವು ಸೂಚಿಸಿದೆ. ಹಾಗಾಗಿ ಇವುಗಳ ಮೇಲೆ ಕ್ರಮ ತೆಗೆದುಕೊಳ್ಳಲಾಗುತ್ತಿಲ್ಲ, ಅದಾಗ್ಯೂ ಸಿಸಿಬಿಯಿಂದ ಕೆಲವು ಹುಕ್ಕಾಬಾರ್ ಗಳ ಮೇಲೆ ದಾಳಿ ನಡೆಸಿ ಅಲ್ಲಿ ಬಳಸುವ ಕೆಲವು ವಸ್ತುಗಳನ್ನು ವಶ ಪಡಿಸಿಕೊಳ್ಳಲಾಗಿದೆ. ಅವುಗಳಲ್ಲಿ ಇರುವ ಕಂಟೆಂಟ್ ಗಳನ್ನು ಪರಿಶೀಲಿಸಲಾಗ್ತಿದೆ.
ಒಂದು ವೇಳೆ ಶಾಲಾ ಮಕ್ಕಳ ಮೇಲೆ ಪರಿಣಾಮ ಬೀರುವ ಅಂಶಗಳು ಇದ್ದರೆ ಖಂಡಿತಾ ಇವುಗಳ ಮೇಲೆ ಮುಂದಿನ ದಿನಗಳಲ್ಲಿ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುವ ಭರವಸೆ ನೀಡಿದ್ದಾರೆ. ಸದ್ಯ ಬೆಂಗಳೂರಿನಲ್ಲಿ 68 ಹುಕ್ಕಾ ಬಾರ್ ಮತ್ತು 49 ರಿಕ್ರಿಯೇಷನಲ್ ಕ್ಲಬ್ ಮಾತ್ರ ನಡೆಯುತ್ತಿವೆ. ಆದರೆ ಹುಕ್ಕಾ ಬಾರ್‌ಗಳನ್ನು ನಿಯಂತ್ರಿಸುವ ವಿಚಾರ ಪೊಲೀಸ್ ವ್ಯಾಪ್ತಿಗೆ ಬರುವುದಿಲ್ಲ.
ಸದಸ್ಯ ಸಲೀಂ ಆಹಮದ್ ಮಾತನಾಡಿ, ಹುಕ್ಕಾ ಪಾರ್ಲರ್‌ಗಳಲ್ಲಿ ಗಾಂಜಾ ಮತ್ತಿತರ ಮಾದಕ ದ್ರವ್ಯಗಳ ಸೇವನೆ ನಡೆಯುತ್ತಿದೆ ಎಂಬ ಮಾಹಿತಿ ಇದೆ. ಆ ರೀತಿ ಇದ್ದರೆ ಕಠಿಣ ಕ್ರಮ ಜರುಗಿಸಬೇಕಾಗುತ್ತೆ ಎಂದು ಒತ್ತಾಯಿಸಿದರು. ಆದಕ್ಕೆ ಪ್ರತಿಕ್ರಿಯಿಸಿದ ಸಚಿವ ಆರಗ ಜ್ಞಾನೇಂದ್ರ, ಹಾಲಿ ಹುಕ್ಕಾ ಪಾರ್ಲರ್‌ಗಳಿಗೆ ನೋ ಸ್ಮೋಕಿಂಗ್ ಝೋನ್‌ಗಳೆಂದು ಪರಿಗಣಿಸಿ ಪಾಲಿಕೆ ಅನುಮತಿ ನೀಡಿದೆ. ಆದರೂ ಬೇರೆ ಮಾದಕ ಪದಾರ್ಥಗಳನ್ನು ಸೇರಿಸುತ್ತಿರುವ ಬಗ್ಗೆ ಮಾಹಿತಿ ಇದೆ. ಆ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಎಫ್‌ಎಸ್‌ಎಲ್ ವರದಿ ನಂತರ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ ಎಂದು ಆರಗ ಜ್ಞಾನೇಂದ್ರ ಅವರು ಹೇಳಿದ್ದಾರೆ.
ರಿಕ್ರಿಯೇಷನಲ್ ಕ್ಲಬ್‌ಗಳು ಬೆಟ್ಟಿಂಗ್ ಚಟುವಟಿಕೆಗಳ ಕೇಂದ್ರವಾಗುತ್ತಿರುವ ಬಗ್ಗೆ ರಮೇಶ್ ಮಾಹಿತಿ ನೀಡಿದ್ದಾರೆ. ಉಪ್ಪಾರಪೇಟೆಯ ಕ್ಲಬ್ ಒಂದರಿಂದ ಪ್ರತಿದಿನ 5 ಲಕ್ಷ ರೂ.ಗಳನ್ನು ಕಿಟ್ಟಿಯಾಗಿ ಸಂಗ್ರಹಿಸಲಾಗುತ್ತಿದೆ, ಅಂದರೆ ಅಲ್ಲಿ ನಡೆಯುವ ಬೆಟ್ಟಿಂಗ್ ಪ್ರಮಾಣವನ್ನು ಊಹಿಸಿ. ರಿಕ್ರಿಯೇಶನಲ್ ಕ್ಲಬ್‌ಗಳು ಬೆಟ್ಟಿಂಗ್ ದಂಧೆಯಾಗಿ ಮಾರ್ಪಟ್ಟಿದ್ದು, ಇದರಿಂದ ಅನೇಕ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ ಎಂದು ಆರಗ ಜ್ಞಾನೇಂದ್ರ ಅವರು ತಿಳಿಸಿದ್ದಾರೆ.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
KLIVE at Google News App
KLIVE Android App on Google Play Store
Download the most loved Klive App for your Android phone or tablet.
ಮನುಷ್ಯನ ಜೀವನಕ್ಕೆ ನಿದ್ರೆ ಎಷ್ಟು ಮುಖ್ಯ ಎಂಬುದನ್ನು ತಿಳಿಸಿಕೊಡುವ ಉದ್ದೇಶದಿಂದ ಪ್ರತಿ ವರ್ಷ ವಿಶ್ವ ನಿದ್ರಾ ದಿನ ಆಚರಣೆ ಮಾಡಲಾಗುತ್ತದೆ. ಈ ವರ್ಷ ಅದನ್ನು ಮಾರ್ಚ್ 18ರಂದು ವಿಶ್ವದಾದ್ಯಂತ ಆಚರಣೆ ಮಾಡಲಾಗುತ್ತಿದೆ.
ಒಬ್ಬ ಆರೋಗ್ಯವಂತ ವ್ಯಕ್ತಿಗೆ ದಿನಕ್ಕೆ 7-8ಗಂಟೆಗಳ ನಿದ್ದೆಯ ಅಗತ್ಯವಿದೆ. ಅದಕ್ಕಿಂತ ಹೆಚ್ಚಾದರೂ, ಕಡಿಮೆಯಾದರೂ ಸಮಸ್ಯೆ ಉಂಟಾಗುತ್ತದೆ.
ದೈಹಿಕ, ಮಾನಸಿಕ ಸೇರಿದಂತೆ ನಾನಾ ಆರೋಗ್ಯ ಸಮಸ್ಯೆಗಳು ಕಾಡತೊಡಗುತ್ತವೆ. ಅದಕ್ಕಾಗಿಯೇ ಈ ನಿದ್ದೆಯ ಪ್ರಾಮುಖ್ಯತೆಯನ್ನು ಜನರಿಗೆ ಅರಿವು ಮಾಡಿ ಕೊಡಲು ಈ ದಿನವನ್ನು ಜಾಗೃತ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ.
ವಿಶ್ವ ನಿದ್ರಾ ದಿನ 2022 ರ ಥೀಮ್ ಗುಣಮಟ್ಟದ ನಿದ್ರೆ, ಸೌಂಡ್ ಮೈಂಡ್, ಹ್ಯಾಪಿ ವರ್ಲ್ಡ್ ಆಗಿದೆ. ಈ ಥೀಮ್ ನಿದ್ರೆಯ ಪ್ರಾಮುಖ್ಯತೆಯನ್ನು ಒತ್ತಿಹೇಳುತ್ತದೆ. ಜನರು ಕನಿಷ್ಠ 7-8 ಗಂಟೆಗಳ ನಿದ್ದೆಯನ್ನು ಹೊಂದಿರುವುದು ಮುಖ್ಯ, ಇದರಿಂದ ಅವರ ದೇಹವು ಚೇತರಿಸಿಕೊಳ್ಳುತ್ತದೆ. ಬಿಡುವಿಲ್ಲದ ದಿನದ ಒತ್ತಡದಿಂದ ಮನಸ್ಸು ಸಡಿಲಗೊಳ್ಳುತ್ತದೆ.
ಉತ್ತಮ ರಾತ್ರಿಯ ನಿದ್ರೆಯು ದೇಹವು ಹೃದಯರಕ್ತನಾಳದ ಕಾಯಿಲೆಗಳು ಮತ್ತು ಸ್ಥೂಲಕಾಯತೆಯಿಂದ ದೂರವಿಡಲು ಸಹಾಯ ಮಾಡುತ್ತದೆ. ಇದು ನಮ್ಮ ಮೆದುಳು ಹೆಚ್ಚು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಸಹಾಯ ಮಾಡುತ್ತದೆ.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
KLIVE at Google News App
KLIVE Android App on Google Play Store
Download the most loved Klive App for your Android phone or tablet.
ರಾಜ್ಯ ಕಾಂಗ್ರೆಸ್‌ನಲ್ಲಿ ಯಾವುದೇ ಒಳ ಜಗಳವಿಲ್ಲ. ಎಲ್ಲರೂ ಒಗ್ಗಟ್ಟಾಗಿದ್ದಾರೆ. ಪಕ್ಷ ಸರಿಯಾದ ರೀತಿಯಲ್ಲಿ ಕೆಲಸ ಮಾಡುತ್ತಿರುವುದರಿಂದ ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತದೆ ಎಂದು ರಾಜ್ಯಸಭೆಯಲ್ಲಿನ ವಿಪಕ್ಷ ನಾಯಕ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ತಿಳಿಸಿದ್ದಾರೆ.
ನವದೆಹಲಿಯಿಂದ ವಿಮಾನದ ಮೂಲಕ ಸಂಜೆ ನಗರಕ್ಕೆ ಆಗಮಿಸಿದ ವೇಳೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಗೆ ಒಳಜಗಳ ಕಾರಣ. ಅಲ್ಲದೇ ಈ ಹಿಂದೆ ನಮಗೆ ಅಧಿಕಾರ ಸಿಕ್ಕ ರಾಜ್ಯದಲ್ಲಿ ಸರ್ಕಾರ ಅಸ್ಥಿರ ಮಾಡಿದ ಬಿಜೆಪಿಯವರು ಪ್ರಜಾಪ್ರಭುತ್ವ ಕೊಲೆ ಮಾಡಿದ್ದಾರೆ. ಯಾವ ಪ್ರಧಾನಿಯೂ ತಿಂಗಳುಗಟ್ಟಲೆ ಚುನಾವಣಾ ಪ್ರಚಾರ ಮಾಡುವುದಿಲ್ಲ. ಆದರೆ ಮೋದಿ ತಿಂಗಳುಗಟ್ಟಲೆ ಚುನಾವಣಾ ಪ್ರಚಾರ ಮಾಡ್ತಿದ್ದಾರೆ. ಅಧಿಕಾರ ದುರುಪಯೋಗ ಮಾಡುತ್ತಾ ಹೋದ್ರೆ ಪ್ರಜಾಪ್ರಭುತ್ವ ಉಳಿಯಲ್ಲ. ಧರ್ಮ, ಹಣ, ವ್ಯಕ್ತಿ ಪೂಜೆ ಮಾಡುವವರಿಂದ ನಿಷ್ಪಕ್ಷಪಾತ ಚುನಾವಣೆ ನೋಡಲು ಸಾಧ್ಯವಿಲ್ಲ. ಸಂವಿಧಾನ ಉಳಿಸಲು ಜನರು ಜಾಗೃತರಾಗಬೇಕಿದೆ ಎಂದರು.
ದಿ ಕಾಶ್ಮೀರಿ ಫೈಲ್ಸ್ ಚಿತ್ರ ಚೆನ್ನಾಗಿದ್ದರೆ ಜನ ನೋಡ್ತಾರೆ. ಆದರೆ ಪ್ರಧಾನಿ ಪ್ರಮೋಟ್ ಮಾಡೋದನ್ನು ನೋಡಿದರೆ ಇದರ ಮರ್ಮ ಗೊತ್ತಾಗುತ್ತದೆ. ಬಿಜೆಪಿಗೆ ಅನುಕೂಲವಾಗುವ ರೀತಿಯಲ್ಲಿ ಚಿತ್ರ ತೆಗೆದಿದ್ದಾರೆ. ಜನ ತಾವಾಗಿಯೇ ನೋಡಿದ್ರೆ ಯಾರದ್ದೂ ಅಭ್ಯಂತರವಿಲ್ಲ. ಬಿಜೆಪಿಯವರು ತಮ್ಮ ಪಕ್ಷದ ಮೀಟಿಂಗ್‌ನಲ್ಲಿ ಪ್ರಮೋಟ್ ಮಾಡ್ತಿದ್ದಾರೆ. ಪ್ರಮುಖವಾಗಿ ದೇಶದಲ್ಲಿ ಬೆಂಕಿ ಹಚ್ಚುವುದು, ದೇಶ ವಿಭಜನೆ ಮಾಡೋ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ದೇಶಕ್ಕಾಗಿ ಬಲಿದಾನ ಮಾಡಿದವರ ಚಿತ್ರ ತೆಗೆದು ತೋರಿಸಲಿ. ಆದರೆ ಬಿಜೆಪಿಯವರು ದೇಶದ ಸ್ವಾತಂತ್ರ್ಯಕ್ಕೆ ಯಾರೂ ಬಲಿದಾನ ಮಾಡಿಲ್ಲ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟವರಿಗೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ. ಕಾಶ್ಮೀರಿ ಪಂಡಿತರಿಗೆ ಅನ್ಯಾಯವಾದ್ರೆ ಅವರಿಗೆ ನ್ಯಾಯ ಒದಗಿಸಿ. ಇದೀಗ ಮಕ್ಕಳಲ್ಲಿ ವಿಷ ಬೀಜ ಬಿತ್ತುವ ಕೆಲಸವನ್ನು ಬಿಜೆಪಿಯವರು ಮಾಡುತ್ತಿದ್ದಾರೆ. ಚುನಾವಣೆವರೆಗೆ ಮತ್ತೆ ಈ ರೀತಿಯ ಚಿತ್ರಗಳು ಬರುತ್ತವೆ. ಮೋದಿ ತಮಗೆ ಚಿತ್ರ ತೋರಿಸಿಲ್ಲ. ತಮಗೆ ನೋಡು ಅಂತಲೂ ಹೇಳಿಲ್ಲ ಎಂದರು.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
KLIVE at Google News App
KLIVE Android App on Google Play Store
Download the most loved Klive App for your Android phone or tablet.
ಬೆಂಗಳೂರಿನಲ್ಲಿ 4 ದಿನಗಳಿಂದ ಭಾರೀ ಕುಸಿತ ಕಂಡಿದ್ದ ಚಿನ್ನದ ಬೆಲೆ ಇಂದು ಮತ್ತೆ ಏರಿಕೆಯಾಗಿದೆ.
ಚಿನ್ನದ ಮಾರುಕಟ್ಟೆ ಕೊಂಚ ಏರಿಕೆ ಕಂಡಿದೆ. ಇಂದಿನ ದರ 10 ಗ್ರಾಂ ಚಿನ್ನಕ್ಕೆ 160 ರೂ. ಏರಿಕೆಯಾಗಿದೆ. ಭಾರತದಲ್ಲಿ ಬೆಳ್ಳಿಯ ಬೆಲೆ ಕೂಡ ಹೆಚ್ಚಾಗಿದೆ. ಇಂದಿನ ಬೆಳ್ಳಿ ದರ 1,100 ರೂ. ಏರಿಕೆ ಕಂಡಿದೆ. ನೀವೇನಾದರೂ ಬಂಗಾರ ಖರೀದಿಸುವವರಾದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.
ಭಾರತದ ಅನೇಕ ನಗರಗಳಲ್ಲಿ 4 ದಿನಗಳಿಂದ ಚಿನ್ನದ ಬೆಲೆ ಕುಸಿತವಾಗಿತ್ತು. ಆದರೆ, ಇಂದು ಬಂಗಾರದ ದರ ಏರಿಕೆ ಕಂಡಿದೆ. ನಿನ್ನೆ ಭಾರತದಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 47,300 ರೂ. ಇದ್ದದ್ದು ಇಂದು 47,450 ರೂ.ಗೆ ಏರಿಕೆ ಕಂಡಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 51,600 ರೂ. ಇದ್ದದ್ದು 51,760 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ನಿರ್ಣಾಯಕವಾಗುತ್ತದೆ.
ಗುಡ್ ರಿಟರ್ನ್ಸ್ ಮಾಹಿತಿ ಪ್ರಕಾರ ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈನಲ್ಲಿ 48.140 ರೂ. ಮುಂಬೈಯಲ್ಲಿ 47,450 ರೂ, ದೆಹಲಿಯಲ್ಲಿ47,450 ರೂ, ಕೊಲ್ಕತ್ತಾದಲ್ಲಿ 47,450 ರೂ, ಬೆಂಗಳೂರುನಲ್ಲಿ 47,450 ರೂ, ಹೈದರಾಬಾದ್ 47,450 ರೂ, ಕೇರಳ 47,450 ರೂ, ಪುಣೆ- 47,480 ರೂ, ಮಂಗಳೂರು- 47,450 ರೂ, ಮೈಸೂರು- 47,450 ರೂ. ಇದೆ.
ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ ಚೆನ್ನೈ- 52,510 ರೂ, ಮುಂಬೈ- 51,760 ರೂ, ದೆಹಲಿ- 51,760 ರೂ, ಕೊಲ್ಕತ್ತಾ- 51,760 ರೂ, ಬೆಂಗಳೂರು- 51,760 ರೂ, ಹೈದರಾಬಾದ್- 51,760 ರೂ, ಕೇರಳ- 51,760 ರೂ, ಪುಣೆ- 51,790 ರೂ, ಮಂಗಳೂರು- 51,760 ರೂ, ಮೈಸೂರು- 51,760 ರೂ. ಇದೆ.
ಚಿನ್ನದ ಉತ್ಪಾದನೆಯಲ್ಲಿ ಪ್ರಮುಖ ರಾಷ್ಟ್ರವಾಗಿರುವ ರಷ್ಯಾ ಮೇಲಿನ ನಿರ್ಬಂಧಗಳಿಂದಾಗಿ ಆಮದು ಕಡಿಮೆಯಾಗುವ ಭೀತಿಯೂ ಚಿನ್ನದ ಬೆಲೆಯ ಹೆಚ್ಚಳಕ್ಕೆ ಕಾರಣವಾಗಿದೆ. ಭಾರತದಲ್ಲಿ ಚಿನ್ನದ ಬೆಲೆ ಹೆಚ್ಚಳಕ್ಕೆ ರಷ್ಯಾ- ಉಕ್ರೇನ್ ಯುದ್ಧ ಕೂಡ ಕಾರಣ ಎನ್ನಲಾಗಿದೆ. ಚಿನ್ನದ ಬೆಲೆ ಏರಿಕೆಯಾಗುತ್ತಿದ್ದರೆ ಬೆಳ್ಳಿ ಬೆಲೆ ಇಳಿಮುಖವಾಗಿದೆ.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
KLIVE at Google News App
KLIVE Android App on Google Play Store
Download the most loved Klive App for your Android phone or tablet.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮಾರ್ಚ್ 21 ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯಾದ್ಯಂತ ಮಳೆಯಾಗುವ ಸಾಧ್ಯತೆ ಇದೆ.
ಇಂದು ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಮಾರ್ಚ್ 19 ರಂದು ಚಿತ್ರದುರ್ಗ, ಶಿವಮೊಗ್ಗ, ತುಮಕೂರು ಮತ್ತು ದಾವಣಗೆರೆ ಜಿಲ್ಲೆಗಳನ್ನು ಹೊರತುಪಡಿಸಿ ಎಲ್ಲಾ ಜಿಲ್ಲೆಗಳ ಕೆಲವು ಕಡೆ ಮಳೆಯಾಗುವ ಸಾಧ್ಯತೆ ಇದೆ.
ಮಾರ್ಚ್ 20-21 ರ ನಡುವೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಮೈಸೂರು, ಕೊಡಗು, ಮಂಡ್ಯ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಪ್ಪಳ, ರಾಯಚೂಊರು, ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
KLIVE at Google News App
KLIVE Android App on Google Play Store
Download the most loved Klive App for your Android phone or tablet.
ಈ ವರ್ಷದ ಮೊದಲ ಚಂಡಮಾರುತ ಅಸಾನಿ ಇದೇ ಮಾರ್ಚ್ 21 ರಂದು ಮಧ್ಯ ಬಂಗಾಳ ಕೊಲ್ಲಿಯಲ್ಲಿ ಅಪ್ಪಳಿಸುವ ಸಾಧ್ಯತೆ ಇದೆ. ಇದು ಭಾರತದ ಕರಾವಳಿಯನ್ನು ದಾಟುವ ಸಾಧ್ಯತೆಯಿಲ್ಲ. ಆದರೆ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಭಾರೀ ಮಳೆ ಮತ್ತು ಬಲವಾದ ಗಾಳಿಯನ್ನು ನಿರೀಕ್ಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ತಿಳಿಸಿದೆ.
ಸಮಭಾಜಕ ರೇಖೆಯ ಹಿಂದೂ ಮಹಾಸಾಗರ ಮತ್ತು ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಮಂಗಳವಾರ ಸಂಜೆ ಕಡಿಮೆ ಒತ್ತಡದ ಪ್ರದೇಶ ರಚನೆಯಾಗಿದೆ.ಇದು ಬುಧವಾರ ಮಧ್ಯ ದಕ್ಷಿಣ ಬಂಗಾಳ ಕೊಲ್ಲಿಯಲ್ಲಿತ್ತು.
ಕಡಿಮೆ ಒತ್ತಡದ ಪ್ರದೇಶವು ಮಾರ್ಚ್ 19 ರ ಸುಮಾರಿಗೆ ಆಗ್ನೇಯ ಬಂಗಾಳ ಕೊಲ್ಲಿ ಮತ್ತು ಅಂಡಮಾನ್ ಸಮುದ್ರದ ಮೇಲೆ ಚಲಿಸುವ ಮತ್ತು ಉತ್ತಮವಾದ ಕಡಿಮೆ ಒತ್ತಡದ ಪ್ರದೇಶವಾಗಿ ಮಾರ್ಪಡುವ ಸಾಧ್ಯತೆಯಿದೆ. ನಂತರ, ಇದು ಅಂಡಮಾನ್ ಮತ್ತು ಆಚೆಗೆ ಉತ್ತರ-ವಾಯುವ್ಯ-ಪಶ್ಚಿಮವಾಗಿ ಚಲಿಸುವ ಸಾಧ್ಯತೆಯಿದೆ. ನಿಕೋಬಾರ್ ದ್ವೀಪಗಳು ಮತ್ತು ಮಾರ್ಚ್ 20 ರ ಬೆಳಗಿನ ವೇಳೆಗೆ ಖಿನ್ನತೆಯ ತೀವ್ರತೆ ಮತ್ತು ಮಾರ್ಚ್ 21 ರಂದು ಅಸಾನಿ ಚಂಡಮಾರುತವು ತೀವ್ರಗೊಳ್ಳುತ್ತದೆ ಎಂದು ಐಎಂಡಿ ತಿಳಿಸಿದೆ.
ಇದು ಭಾರತದ ಕರಾವಳಿಯ ಮೇಲೆ ಪರಿಣಾಮ ಬೀರುವಂತೆ ಕಾಣುತ್ತಿಲ್ಲ. ನಮ್ಮ ಮಾದರಿಗಳು ಅಸಾನಿ ಬಾಂಗ್ಲಾದೇಶ ಅಥವಾ ಪಕ್ಕದ ಉತ್ತರ ಮ್ಯಾನ್ಮಾರ್ ಕರಾವಳಿಯನ್ನು ದಾಟಬಹುದು ಎಂದು ಸೂಚಿಸುತ್ತದೆ. ಚಂಡಮಾರುತದ ರಚನೆ ಮತ್ತು ತೀವ್ರತೆಗೆ ಎಲ್ಲಾ ಪರಿಸ್ಥಿತಿಗಳು ಅನುಕೂಲಕರವಾಗಿವೆ ಎಂದು ಐಎಂಡಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮಾರ್ಚ್ 19 ರಂದು, ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇದರಿಂದ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಕೆಲವು ಸ್ಥಳಗಳಲ್ಲಿ ಅತಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.
ಮಾರ್ಚ್ 18 ರವರೆಗೆ ಬಂಗಾಳ ಕೊಲ್ಲಿ ಮತ್ತು ಸಮಭಾಜಕ ಹಿಂದೂ ಮಹಾಸಾಗರದ ಮೇಲೆ 40-50 ಕಿ.ಮೀ. ಗೆ 60 ಕಿ.ಮೀ. ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ. ಮಾರ್ಚ್ 21 ರ ವೇಳೆಗೆ ಗಾಳಿಯ ವೇಗ ಕ್ರಮೇಣ ಹೆಚ್ಚಾಗುವ ನಿರೀಕ್ಷೆಯಿದೆ. 70-80ಕಿ. ಮೀ.ಗೆ ತಲುಪುವ ಗಾಳಿಯ ವೇಗವು 90 ಕ್ಕೆ ತಲುಪುತ್ತದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ಬಂಗಾಳ ಕೊಲ್ಲಿಯಲ್ಲಿ ಗಂಟೆಗೆ ಕಿಮೀ. ಮಾರ್ಚ್ 23 ರಂದು ಬಂಗಾಳ ಕೊಲ್ಲಿ ಮತ್ತು ಬಾಂಗ್ಲಾದೇಶ ಮತ್ತು ಮ್ಯಾನ್ಮಾರ್ ಕರಾವಳಿಯಲ್ಲಿ 70-80 ಕಿಮೀ ವೇಗದಲ್ಲಿ ಗಂಟೆಗೆ 90 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.
ಮುನ್ಸೂಚನೆಯು ಕಾರ್ಯರೂಪಕ್ಕೆ ಬಂದರೆ, ಮಾರ್ಚ್‌ನಲ್ಲಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಿಗೆ ಅಪ್ಪಳಿಸುವ ಮೊದಲ ಉಷ್ಣವಲಯದ ಚಂಡಮಾರುತವಾಗಲಿದೆ. ಕನಿಷ್ಠ 132 ವರ್ಷಗಳಲ್ಲಿ ಮಾರ್ಚ್‌ನಲ್ಲಿ ಒಂದೇ ಒಂದು ಉಷ್ಣವಲಯದ ಚಂಡಮಾರುತವು ಈ ಪ್ರದೇಶವನ್ನು ಅಪ್ಪಳಿಸಿಲ್ಲ ಎಂದು ಯುಕೆ ಯೂನಿವರ್ಸಿಟಿ ಆಫ್ ರೀಡಿಂಗ್‌ನ ಹವಾಮಾನಶಾಸ್ತ್ರಜ್ಞ ಅಕ್ಷಯ್ ಡಿಯೋರಸ್ ಟ್ವೀಟ್ ಮಾಡಿದ್ದಾರೆ.
ಬಿಸಿಗಾಳಿಯು ದೇಶದ ಕೆಲವು ಭಾಗಗಳ ಮೇಲೂ ಪರಿಣಾಮ ಬೀರುತ್ತಿದೆ. ಗುಜರಾತ್, ರಾಜಸ್ಥಾನ, ಮಧ್ಯಪ್ರದೇಶ, ವಿದರ್ಭ ಮತ್ತು ತೆಲಂಗಾಣದ ಕೆಲವು ಭಾಗಗಳಲ್ಲಿ ಮಂಗಳವಾರ 39-41 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ.
ಆಕಾಶವೂ ಸ್ಪಷ್ಟವಾಗಿದೆ. ಆದ್ದರಿಂದ, ಹೆಚ್ಚು ಸೌರ ವಿಕಿರಣ ಮತ್ತು ತಾಪಮಾನ ಏರಿಕೆಯಾಗಿದೆ. ಪಶ್ಚಿಮ ಕರಾವಳಿಯಲ್ಲಿ, ಅತಿ ಹೆಚ್ಚು ತಾಪಮಾನಕ್ಕೆ ಕಾರಣ ವಿಭಿನ್ನವಾಗಿದೆ. ಇದು ಮುಖ್ಯವಾಗಿ ಮುಂಬೈ ಮತ್ತು ಕೊಂಕಣದಲ್ಲಿ ಸಮುದ್ರದ ಗಾಳಿಯನ್ನು ದುರ್ಬಲಗೊಳಿಸಿದ ಪೂರ್ವ ಮಾರುತಗಳಿಂದಾಗಿ ಶುಷ್ಕ , ಪಶ್ಚಿಮ ಕರಾವಳಿಯಲ್ಲಿ ಬೆಚ್ಚಗಿನ ಪೂರ್ವಭಾವಿಗಳು ಬೀಸುತ್ತಿವೆ ಎಂದು ಮಾಜಿ IMD ವಿಜ್ಞಾನಿ ಡಿಎಸ್ ಪೈ ಹೇಳಿದರು.
ಮುಂದಿನ ಎರಡ್ಮೂರು ದಿನಗಳಲ್ಲಿ ವಾಯುವ್ಯ ಭಾರತದಲ್ಲಿ ಗರಿಷ್ಠ ತಾಪಮಾನದಲ್ಲಿ ಯಾವುದೇ ಮಹತ್ವದ ಬದಲಾವಣೆಯನ್ನು ನಿರೀಕ್ಷಿಸಲಾಗುವುದಿಲ್ಲ. ಮಾರ್ಚ್ 19 ಮತ್ತು 20 ರಂದು ಪಾಶ್ಚಿಮಾತ್ಯ ಅಡಚಣೆಯಿಂದಾಗಿ ಸ್ವಲ್ಪ ಪರಿಹಾರ ಸಿಗಬಹುದು.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
KLIVE at Google News App
KLIVE Android App on Google Play Store
Download the most loved Klive App for your Android phone or tablet.
ರಾಜ್ಯದ ನಿವೃತ್ತ ಸರ್ಕಾರಿ ನೌಕರರಿಗೆ ಸಿಎಂ ಬಸವರಾಜ ಬೊಮ್ಮಾಯಿ ಸಿಹಿಸುದ್ದಿ ನೀಡಿದ್ದಾರೆ. ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ಜ್ಯೋತಿ ಸಂಜೀವಿನಿ ಯೋಜನೆಯನ್ನು ನಿವೃತ್ತ ನೌಕರರಿಗೂ ವಿಸ್ತರಿಸುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಿಎಂ ಬೊಮ್ಮಾಯಿ, ಜ್ಯೋತಿ ಸಂಜೀವಿನಿ ಯೋಜನೆಯಡಿ ಸದ್ಯ ಏಳು ಗಂಭೀರ ಹಾಗೂ ಹೃದ್ರೋಗ, ನರರೋಗ, ಕ್ಯಾನ್ಸರ್ ಮೂತ್ರಪಿಂಡ ರೋಗ, ಸುಟ್ಟಗಾಯ, ಅಪಘಾತ, ನವಜಾತ ಶಿಶು ಮತ್ತು ಚಿಕ್ಕಮಕ್ಕಳ ಕಾಯಿಲೆಗಳಿಗೆ ಸಂಬಂಧಿಸಿದಂತೆ ವಿವಿಧ ಶಸ್ತ್ರ ಚಿಕಿತ್ಸೆಗಳನ್ನು ನಗದು ರಹಿತವಾಗಿ ಒದಗಿಸಲಾಗುತ್ತಿದೆ.
ಪ್ರಸ್ತುತ ಈ ಯೋಜನೆಯನ್ನು ನಿವೃತ್ತ ನೌಕರರಿಗೂ ವಿಸ್ತರಿಸುವ ಬಗ್ಗೆ ಪರಿಶೀಲಿಸಲಾಗುವುದು ಎಂದು ತಿಳಿಸಿದ್ದಾರೆ.