Saturday, February 21, 2026
Saturday, February 21, 2026
Home Blog Page 1671

ನವಿಲ ನೋವಿಗೆ ಮಿಡಿದ ಮನುಜರು

0

ಕಾಲಿಗೆ ಗಾಯವಾಗಿ, ನಿತ್ರಾಣ ಗೊಂಡಿದ್ದ ನವೀಲೊಂದನ್ನು ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಸ್ಥಳೀಯರೂ ಪ್ರಥಮ ಚಿಕಿತ್ಸೆ ಕೊಟ್ಟು ರಕ್ಷಣೆ ಮಾಡಿದ್ದಾರೆ.
ಶಿವಮೊಗ್ಗದ ಮಲವಗೊಪ್ಪ ದ ಕಾಂತರಾಜು ಎಂಬುವವರ ತೋಟದ ಬಳಿ ನಿತ್ರಾಣ ಸ್ಥಿತಿಯಲ್ಲಿದ್ದ ನವಿಲು ಪತ್ತೆಯಾಗಿದೆ. ಸ್ಥಳೀಯರು ನೀಡಿದ ಮಾಹಿತಿ ಆಧಾರದ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ, ನವಿಲಿಗೆ ಚಿಕಿತ್ಸೆ ನೀಡಿದ್ದಾರೆ. ಅದರ ಕಾಲಿಗೆ ಗಾಯವಾಗಿದ್ದರಿಂದ ನಿತ್ರಾಣಗೊಂಡಿತ್ತು ಎಂದು ತಿಳಿದುಬಂದಿದೆ.
ಮಲವಗೊಪ್ಪ ಸಮೀಪ ಮೇಯಲು ಬಂದಾಗ ಕಾಲಿಗೆ ಗಾಯವಾಗಿರುವ ಸಾಧ್ಯತೆಯಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಅರಣ್ಯ ಇಲಾಖೆ ಸಿಬ್ಬಂದಿ ನವಿಲನ್ನು ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮ ಕ್ಕೆ ರವಾನಿಸಲಾಗಿದೆ ಎಂದು ತಿಳಿಸಿದರು.
ಉಂಬಳೇಬೈಲು ಆರ್.ಎಫ್.ಒ. ಮಂಜುನಾಥ್, ಸೋಗಾನೆ ನವೀನ್ ಹೂಗಾರ, ಅಬ್ದುಲ್ ಕರೀಂ, ಮತ್ತು ಫಾರೆಸ್ಟ್ ಗಾರ್ಡ್ ಗಳಾದ ರಾಜಶೇಖರ್, ಕೀಜರ್ ಅಲಿ , ಕೃಷ್ಣಮೂರ್ತಿ ಮತ್ತು ಸುದರ್ಶನ್ ಅವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು ಎಂದು ತಿಳಿದುಬಂದಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ವೈದ್ಯಕೀಯ ಶಿಕ್ಷಣ ಶುಲ್ಕ ಕಡಿಮೆ ಬಗ್ಗೆ ಚಿಂತನೆ-ಡಾ.ಸುಧಾಕರ್

0

ಪೌರ ಕಾರ್ಮಿಕರನ್ನು ಖಾಯಂ ಗೊಳಿಸುವ ಬಗ್ಗೆ ಎಲ್ಲ ಇಲಾಖೆಗಳಿಂದ ಮಾಹಿತಿ ಪಡೆದು ಆರ್ಥಿಕ ಹೊರೆಯ ಬಗ್ಗೆ ಪರಿಶೀಲನೆ ನಡೆಸಿ ಅವರನ್ನು ಖಾಯಂ ಮಾಡುವ ಬಗ್ಗೆ ಸೂಕ್ತ ನಿರ್ಧಾರ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನಸಭೆಗೆ ತಿಳಿಸಿದ್ದಾರೆ.

ಶೂನ್ಯವೇಳೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಶಾಸಕ ಪಿ.ರಾಜೀವ್ ಮಾಡಿದ ಪ್ರಸ್ತಾಪಕ್ಕೆ ಉತ್ತರಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು, ಪೌರಕಾರ್ಮಿಕರನ್ನು ಗುತ್ತಿಗೆದಾರರು ನೇಮಕ ಮಾಡಿಕೊಂಡಿದೆ. ಅವರಿಗೆ ಸರಿಯಾಗಿ ವೇತನ ನೀಡುತ್ತಿರಲಿಲ್ಲ. ಈಗ ಪೌರಕಾರ್ಮಿಕರ ಖಾತೆಗಳಿಗೆ ವೇತನ ಜಮೆಯಾಗುತ್ತಿದೆ.

ಪೌರಕಾರ್ಮಿಕರ ಆರೋಗ್ಯಕ್ಕಾಗಿ ಪ್ರತಿ ತಿಂಗಳು 2 ಸಾವಿರ ರೂ. ಒದಗಿಸಲು ಬಜೆಟ್‍ನಲ್ಲಿ ಘೋಷಿಸಲಾಗಿದೆ. ವೈದ್ಯಕೀಯ ಸೌಲಭ್ಯ ಒದಗಿಸುವುದು ಸೇರಿದಂತೆ ಅವರಿಗೆ ಅಗತ್ಯ ಅನುಕೂಲಗಳನ್ನು ಮಾಡಿಕೊಡುವ ಕಡೆ ಸರ್ಕಾರ ಗಮನಹರಿಸಿದೆ ಎಂದು ಹೇಳಿದ್ದಾರೆ.

ಕಾರ್ಮಿಕರ ಸ್ಥಿತಿ ಗೊತ್ತಿದೆ. ಸ್ವಚ್ಚತೆ ಮಾಡುವಾಗ ಪ್ರಾಣ ಕಳೆದುಕೊಂಡ ಘಟನೆಗಳು ನಡೆದಿವೆ. ಮತ್ತೆ ಮರುಕಳಿಸಿವೆ. ಎಲ್ಲ ಇಲಾಖೆಗಳಿಂದ ಮಾಹಿತಿ ಪಡೆದು ಖಾಯಂ ಮಾಡುವ ನಿರ್ಧಾರ ಮಾಡಲಾಗುವುದು ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಇದಕ್ಕೂ ಮುಂಚೆ ವಿಷಯ ಪ್ರಸ್ತಾಪಿಸಿದ ಸಿದ್ದರಾಮಯ್ಯ ಸೇವೆ ಖಾಯಂ ಮಾಡುವುದು ಸೇರಿದಂತೆ 27 ವಿವಿಧ ಬೇಡಿಕೆಗಳನ್ನು ಇಟ್ಟುಕೊಂಡು ಪೌರಕಾರ್ಮಿಕರು ಪ್ರತಿಭಟನೆ ನಡೆಸಿದ್ದಾರೆ. ಸ್ಥಳೀಯ ಸಂಸ್ಥೆಗಳಲ್ಲಿ, ನಗರಗಳಲ್ಲಿ ಸ್ವಚ್ಚಗೊಳಿಸುವ ಕೆಲಸ ಮಾಡುತ್ತಿದ್ದಾರೆ.

ಅವರ ಸಮಸ್ಯೆಗಳ ಬಗ್ಗೆ ಗಮನಹರಿಸಬೇಕು. ಮೃತಪಟ್ಟವರಿಗೆ 10 ಲಕ್ಷ ಪರಿಹಾರ ಕೊಡುತ್ತಿಲ್ಲ. ನಮ್ಮ ಅವಧಿಯಲ್ಲಿ 7,700ರಿಂದ 17 ಸಾವಿರಕ್ಕೆ ವೇತನ ಹೆಚ್ಚಿಸಲಾಗಿತ್ತು. 18 ಸಾವಿರ ಪೌರಕಾರ್ಮಿಕರನ್ನು ಖಾಯಂ ಮಾಡಿ ಅವರ ಅನೇಕ ಸಮಸ್ಯೆಗಳನ್ನು ಬಗೆಹರಿಸಬೇಕೆಂದು ಒತ್ತಾಯಿಸಿದರು.

ಶಾಸಕ ಪಿ.ರಾಜೀವ್ ಮಾತನಾಡಿ, ಪೌರಕಾರ್ಮಿಕರಿಗೆ 2 ಸಾವಿರ ರೂ. ಸಾಲುವುದಿಲ್ಲ. ನಗರ, ಪಟ್ಟಣದ ಸ್ವಚ್ಚತೆಗೆ ಪೌರಕಾರ್ಮಿಕರ ಸೇವೆ ಮುಖ್ಯ. ಪ್ರಧಾನಿಯವರು ಪೌರಕಾರ್ಮಿಕರ ಪಾದ ತೊಳೆದು ಸನ್ಮಾನಿಸಿದರು. ಅವರ ಜೀವಿತಾವ 45ರಿಂದ 50 ವರ್ಷ ಮಾತ್ರವಿದೆ. ನಗರಾಭಿವೃದ್ಧಿ, ಪೌರಾಡಳಿತ ಮತ್ತು ಗ್ರಾಮೀಣಾಭಿವೃದ್ದಿ ಇಲಾಖೆ ವ್ಯಾಪ್ತಿಗೆ ಬರುತ್ತಾರೆ. ಶೇ.1ರಷ್ಟು ಸಂಗ್ರಹಿಸಲಾಗುವ ಸೆಸ್‍ನ್ನು ಪೌರಕಾರ್ಮಿಕರ ವೇತನ ಕಲ್ಯಾಣಕ್ಕೆ ಮೀಸಲಿಟ್ಟರೆ 35ರಿಂದ 45 ಸಾವಿರ ರೂ. ವೇತನ ಕೊಡಬಹುದು ಎಂಬ ಸಲಹೆ ಮಾಡಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಕೋವಿಡ್ ತೆಕ್ಕೆಗೆ ಮತ್ತೆ ಚೀನಾ ಹಾಗೂ ಕೊರಿಯ

0

ಡ್ರ್ಯಾಗನ್​ ರಾಷ್ಟ್ರದಲ್ಲಿ ಕೊರೋನಾ ಸೋಂಕು ಹೆಚ್ಚಳವಾಗುತ್ತಿದೆ. ಗಲ್ಲಿ,ಗಲ್ಲಿಗಳಲ್ಲೂ ಒಮಿಕ್ರಾನ್​​​​ ಹೊಸತಳಿ ಆರ್ಭಟ ಶುರು ಮಾಡಿದೆ. ಸೋಂಕು ನಿಯಂತ್ರಣಕ್ಕೆ ಹೇರಲಾಗಿರುವ ಲಾಕ್​​ ಡೌನ್ ರೂಲ್ಸ್​ಗಳಿಂದ ಜನರು ಹೈರಾಣಾಗಿದ್ದಾರೆ.

ಮತ್ತೆ ಮರಣ ಕೇಕೆಗೆ ಕೊರೋನಾ ಸಜ್ಜಾಗಿದೆ. ಚೀನಾ ಆಯ್ತು ಈಗ ಕೊರಿಯಾದಲ್ಲೂ ರಣಕೇಕೆ ಶುರುವಾಗಿದೆ.
ಚೀನಾದ ಗಲ್ಲಿ-ಗಲ್ಲಿಗಳಲ್ಲೂ ರೂಪಾಂತರ ಓಮಿಕ್ರಾನ್ ಪತ್ತೆಯಾಗುತ್ತಿದೆ.ಪ್ರತಿದಿನ 3,000ಕ್ಕೂ ಅಧಿಕ ಕೇಸ್​ ಪತ್ತೆಯಿಂದ ಚೀನಾ ಲಾಕ್​​​ ಮಾಡಲಾಗಿದೆ. 1,000ಕ್ಕೂ ಅಧಿಕ ಸೋಂಕಿತರಲ್ಲಿ ರೋಗ ಲಕ್ಷಣಗಳೇ ಕಂಡು ಬಂದಿಲ್ಲ. ಬೂಸ್ಟರ್​​​ ಡೋಸ್ ಪಡೆದವರನ್ನೂ ಕೊರೋನಾ ಸೋಂಕು ಬೆಂಡ್ ಮಾಡುತ್ತಿದೆ. 2 ವರ್ಷಗಳಲ್ಲೇ ಅತಿಹೆಚ್ಚು ಕೇಸ್ ಪತ್ತೆಯಾದ ಹಿನ್ನೆಲೆ ಚೀನಾಗೆ ಆತಂಕ ಆರಂಭವಾಗಿದೆ.

ಈಶಾನ್ಯ ಭಾಗದ ಜೆಲಿನ್ ಪ್ರಾಂತ್ಯದಲ್ಲಿ ಕೊರೋನಾ ಸ್ಫೋಟ ಗೊಂಡಿದೆ. ಸೋಂಕಿತರ ಪೈಕಿ ಕೇವಲ 200 ಮಂದಿ ಮಾತ್ರ ವಿದೇಶಿಗರಿದ್ದಾರೆ. ಚೀನಾ ಈಗಾಗಲೇ ಚಾಂಗ್ ಚುವಾನ್ ನಗರ ಲಾಕ್​ ಮಾಡಿದೆ. ವಿಯೆಟ್ನಾಂ, ಕೊರಿಯಾದಲ್ಲೂ ಮತ್ತೆ ಓಮಿಕ್ರಾನ್ ಸ್ಫೋಟಗೊಂಡಿದೆ. ಒಂದೇ ದಿನ ದಕ್ಷಿಣ ಕೊರಿಯಾದಲ್ಲಿ 3.83 ಲಕ್ಷ ಕೇಸ್​ ಪತ್ತೆಯಾಗಿದೆ. ವಿಯೆಟ್ನಾಂ 2.65 ಲಕ್ಷ ಕೇಸ್ ಪತ್ತೆಯಿಂದ ಆತಂಕ ಹೆಚ್ಚಳವಾಗಿದೆ. ಚೀನಾ, ಕೊರಿಯಾ, ವಿಯೆಟ್ನಾಂ ಪರಿಸ್ಥಿತಿ ಮೇಲೆ ವಿಶ್ವಸಂಸ್ಥೆ ಕಣ್ಣಿಟ್ಟಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ವಿಧಾನ ಸಭಾ ಚುನಾವಣೆ ಇನ್ನೂ ಸ್ಪರ್ಧಾಕ್ಷೇತ್ರ ನಿರ್ಧರಿಸಿಲ್ಲ

0

ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ನನ್ನ ಸ್ಪರ್ಧೆ ಇರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಹೇಳಿದರು.

ಬೆಂಗಳೂರಿನ ಹೊರವಲಯದಲ್ಲಿ ನಡೆದ ಖಾಸಗಿ ಸಮಾರಂಭದಲ್ಲಿ
ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.

ಈಗಾಗಲೇ ನನಗೆ ನಾಲ್ಕೈದು ಕ್ಷೇತ್ರಗಳಿಂದ ವಿಧಾನ ಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸುವಂತೆ ಆಹ್ವಾನ ಬಂದಿದೆ. ಈ ಬಗ್ಗೆ ಇನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಅಂದಿನ ರಾಜಕೀಯ ಪರಿಸ್ಥಿತಿ ನೋಡಿಕೊಂಡು ತೀರ್ಮಾನ ಕೈಗೊಳ್ಳುತ್ತೇನೆಯೇ ಹೊರತು, ಮೈಸೂರು ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಅವಧಿಗೆ ಮುನ್ನ ವಿಧಾನ ಸಭಾ ಚುನಾವಣೆ ಬರುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಿಳಿಸಿದರು.
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ‌್ಯದರ್ಶಿ ಸಿ.ಟಿ. ರವಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಅವಧಿಗೆ ಮುನ್ನ ಚುನಾವಣೆ ನಡೆಯುವ ಸಾಧ್ಯತೆಗಳಿಲ್ಲ ಎಂದರು.

2023ರ ಏಪ್ರಿಲ್‌ನಲ್ಲಿ ಚುನಾವಣೆ ನಡೆಯುತ್ತದೆ. ಅವಧಿ ಮುನ್ನ ಚುನಾವಣೆ ಕೇವಲ ಊಹಾಪೋಹ ಎಂದು ಹೇಳಿದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ತಾತ್ಕಾಲಿಕವಾಗಿ ಉಕ್ರೇನ್ ನ ಭಾರತ ರಾಯಭಾರಿ ಕಚೇರಿ ಪೊಲೆಂಡ್ ಗೆ ಸ್ಥಳಾಂತರ

0

ಉಕ್ರೇನ್ನ ಭೀಕರ ಯುದ್ಧದ ಪರಿಸ್ಥಿತಿಯಲ್ಲಿ ಭಾರತ ತನ್ನ ರಾಯಭಾರ ಕಚೇರಿಯನ್ನು ಪೋಲೆಂಡ್ಗೆ ತಾತ್ಕಾಲಿಕವಾಗಿ ಸ್ಥಳಾಂತರಿಸಲು ನಿರ್ಧರಿಸಿದೆ ಎನ್ನಲಾಗಿದೆ.

ಉಕ್ರೇನ್ ರಾಜಧಾನಿ ಕೀವ್ ಹಾಗೂ ಇತರ ಹಲವಾರು ಪ್ರಮುಖ ನಗರಗಳ ಮೇಲೆ ರಷ್ಯಾ ಭೀಕರವಾಗಿ ದಾಳಿ ನಡೆಸುತ್ತಿದೆ. ಅಲ್ಲಿನ ಭದ್ರತಾ ಪರಿಸ್ಥಿತಿ ಹದಗೆಡುತ್ತಿರುವ ಹಿನ್ನೆಲೆಯಲ್ಲಿ ಭಾರತ ತನ್ನ ರಾಯಭಾರ ಕಚೇರಿಯನ್ನು ಪೋಲೆಂಡ್ಗೆ ತಾತ್ಕಾಲಿಕವಾಗಿ ಸ್ಥಳಾಂತರಿಸಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ಯುದ್ಧದ ಹಿನ್ನೆಲೆಯಲ್ಲಿ ಉಕ್ರೇನ್ ಭದ್ರತೆ ಕ್ಷೀಣಿಸುತ್ತಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಉಕ್ರೇನ್ನಲ್ಲಿರುವ ರಾಯಭಾರ ಕಚೇರಿಯನ್ನು ತಾತ್ಕಾಲಿಕವಾಗಿ ಪೋಲೆಂಡ್ಗೆ ಸ್ಥಳಾಂತರಿಸಲಾಗುವುದು.

ಉಕ್ರೇನ್ ಪರಿಸ್ಥಿತಿ ಸಮತೋಲನಕ್ಕೆ ಬಂದಂತೆ ಮುಂದಿನ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು ಎಂದು ಭಾರತದ ವಿದೇಶಾಂಗ ಸಚಿವಾಲಯ ತಿಳಿಸಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಶೀಘ್ರದಲ್ಲೇ ಸಾರಿಗೆ ನೌಕರರ ವೇತನ ಪರಿಷ್ಕರಣೆ- ಸಚಿವ ಶ್ರೀರಾಮುಲು

0

ರಾಜ್ಯದ ಸಾರಿಗೆ ಸಿಬ್ಬಂದಿಗಳಿಗೆ ಸಚಿವ ಬಿ.ಶ್ರೀರಾಮುಲು ಭರ್ಜರಿ ಸಿಹಿಸುದ್ದಿ ನೀಡಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಜೊತೆಗ ಚರ್ಚೆ ನಡೆಸಿ ವಾರದೊಳಗೆ ಸಾರಿಗೆ ಸಿಬ್ಬಂದಿಗಳ ವೇತನ ಪರಿಷ್ಕರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಸಂಕಷ್ಟದ ಸಮಯದಲ್ಲಿ ಸಾರಿಗೆ ಸಂಸ್ಥೆಯ ಚಾಲಕರು ಮತ್ತು ನಿರ್ವಾಹಕರು ಅರ್ಧ ಸಂಬಳದಲ್ಲಿ ಕರ್ತವ್ಯ ನಿರ್ವಹಿಸಿದ್ದು, ಅವರ ಹೃದಯ ವೈಶಾಲ್ಯತೆಗೆ ಸಾಕ್ಷಿಯಾಗಿದೆ. ವಾರದೊಳಗೆ ಸಿಎಂ ಬೊಮ್ಮಾಯಿ ಜೊತೆಗೆ ಚರ್ಚಿಸಿ ಸಿಬ್ಬಂದಿಗಳ ವೇತನ ಪರಿಷ್ಕರಣೆಗೆ ಪ್ರಯತ್ನಿಸಲಾಗುವುದು ಎಂದು ತಿಳಿಸಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಅತ್ತ ಯುದ್ಧ ನಿಲ್ಲಿಸದ ರಷ್ಯ ಇತ್ತ ಚೀನಾ ಅಮೇರಿಕ ಮಾತುಕತೆ

0

ಉಕ್ರೇನ್, ರಷ್ಯಾ ನಡುವೆ ಇಂದು ಮತ್ತೊಂದು ಶಾಂತಿ ಸಭೆ ನಡೆಯಲಿದೆ. ಇಂದು ಸ್ಥಳೀಯ ಕಾಲಮಾನ 10.30ಕ್ಕೆ ನಡೆಯುವ ಸಭೆ ಆರಂಭಗೊಂಡಿದೆ. ವರ್ಚುವಲ್ ಮೂಲಕ ನಾಯಕರು ಮಾತುಕತೆ ನಡೆಸುತ್ತಿದ್ದಾರೆ.

ಉಕ್ರೇನ್ ನೆಲದ ಮೇಲೆ ರಷ್ಯಾ ಕ್ಷಿಪಣಿ ದಾಳಿ ನಡೆಸುತ್ತಿದೆ. ಉಕ್ರೇನ್ ವಾಯುಪ್ರದೇಶದಲ್ಲಿ ರಷ್ಯಾಗೆ ನಿರ್ಬಂಧ ಹೇರದಿದ್ದರೆ, ಮುಂದೊಂದು ದಿನ ನ್ಯಾಟೋ ನೆಲೆಗಳ ಮೇಲೂ ದಾಳಿ ಆಗುತ್ತೆ ಎಂದು ನ್ಯಾಟೋಗೆ ಉಕ್ರೇನ್ ಅಧ್ಯಕ್ಷ ಝೆಲೆನ್‌ಸ್ಕಿಯಿಂದ ಎಚ್ಚರಿಕೆ ನೀಡಲಾಗಿದೆ.

ನ್ಯಾಟೋ ನೆಲದ ಮೇಲೂ ಕ್ಷಿಪಣಿ ದಾಳಿ ನಡೆಯುವ ಎಚ್ಚರಿಕೆ ನೀಡಲಾಗಿದ್ದು, ಇದಕ್ಕೇನು ಹೆಚ್ಚು ಸಮಯ ಕೂಡ ಬೇಕಾಗಿಲ್ಲ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಹೇಳಿಕೆ ನೀಡಿದ್ದಾರೆ.

ಉಕ್ರೇನ್ ಮೇಲೆ ರಷ್ಯಾ ಯುದ್ಧ ಮುಂದುವರಿಸಿದ ಹಿನ್ನೆಲೆ, ಇಂದು ಅಮೆರಿಕ-ಚೀನಾ ಉನ್ನತ ಮಟ್ಟದ ಸಭೆ ನಡೆಸಲಿದೆ. ಯುದ್ಧದ ವಿಚಾರವಾಗಿ ರಷ್ಯಾ ನಡೆಸುತ್ತಿರುವ ಪ್ರಚಾರ, ವಿವಿಧ ದೇಶಗಳು ವಿಧಿಸಿರುವ ಬ್ಯಾನ್ ಬಗ್ಗೆಯೂ ಚರ್ಚೆ ನಡೆಯಲಿದ್ದು, ರೋಮ್‌ನಲ್ಲಿ ಅಮೆರಿಕ, ಚೀನಾ ಪ್ರತಿನಿಧಿಗಳ ಸಭೆ ನಡೆಯಲಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಉಕ್ರೇನ್ ಸಮರ ರಷ್ಯ ಮತ್ತು ಚೀನಾಕ್ಕೆ ಅಮೆರಿಕ ಎಚ್ಚರಿಕೆ

0

ಉಕ್ರೇನ್‌ ಮೇಲಿನ ದಾಳಿ ಹಿನ್ನೆಲೆಯಲ್ಲಿ ರಷ್ಯಾ ಮೇಲೆ ಕುದಿಯುತ್ತಿರುವ ಬುಗಿಲೆದ್ದಿರುವ ಅಮೆರಿಕ ನೇರಾನೇರ 3ನೇ ವಿಶ್ವ ಯುದ್ಧದ ಎಚ್ಚರಿಕೆ ನೀಡಿದೆ. ನ್ಯಾಟೋ ಸದಸ್ಯ ದೇಶಗಳ ಮೇಲೆ ದಾಳಿಯೇನಾದರೂ ಆದರೆ ಸುಮ್ಮನಿರುವುದಿಲ್ಲ.

ಆ ದೇಶಗಳ ಪ್ರತಿ ಇಂಚು ಭೂಮಿಯನ್ನೂ ರಕ್ಷಿಸಿಕೊಳ್ಳುತ್ತೇವೆ. ಅದು ಮೂರನೇ ಮಹಾಯುದ್ಧಕ್ಕೆ ಕಾರಣವಾದರೂ ತೊಂದರೆ ಇಲ್ಲ ಎಂದು ಅಮೆರಿಕದ ಅಧ್ಯಕ್ಷ ಜೋ ಬೈಡೆನ್‌ ಅವರು ಹೇಳಿದ್ದಾರೆ.

ಇದೇ ಸಂದರ್ಭ, ಉಕ್ರೇನ್‌ ಬೇಡಿಕೆಯಂತೆ ಆ ದೇಶವನ್ನು ನೋ ಫ್ಲೈ ಜೋನ್ ಎಂದು ಘೋಷಿಸಲಾಗದು. ಹಾಗೆ ಮಾಡಿದರೆ ರಷ್ಯಾ ಜೊತೆ ಗುಂಡಿನ ಕಾಳಗಕ್ಕೆ ಇಳಿಯಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

ರಷ್ಯಾ ದಾಳಿ ಹಿನ್ನೆಲೆಯಲ್ಲಿ ಸ್ವೀಡನ್‌ ಹಾಗೂ ಫಿನ್‌ಲೆಂಡ್‌ಗಳು ನ್ಯಾಟೋ ಸೇರಲು ಇಚ್ಛೆ ವ್ಯಕ್ತಪಡಿಸಿವೆ ಹಾಗೂ ಅದಕ್ಕೆ ರಷ್ಯಾ ವಿರೋಧ ವ್ಯಕ್ತಪಡಿಸುತ್ತಿದೆ ಎಂಬ ವರದಿಗಳ ಬೆನ್ನಲ್ಲೇ ಅಮೆರಿಕದ ಈ ಎಚ್ಚರಿಕೆ ಹೊರಬಿದ್ದಿದೆ. ಬಾಲ್ಟಿಕ್‌ ದೇಶಗಳು ಹಾಗೂ ರೊಮೇನಿಯಾ ಗಡಿಗೆ 12 ಸಾವಿರ ಯೋಧರನ್ನು ರವಾನೆ ಮಾಡಿದ ಬೆನ್ನಲ್ಲೇ ಅಮೆರಿಕ ಈ ಮಾತು ಆಡುತ್ತಿರುವುದರಿಂದ ರಷ್ಯಾ ಜತೆ ನೇರ ಸಂಘರ್ಷಕ್ಕೆ ಇಳಿಯಲು ಹಿಂಜರಿಯುವುದಿಲ್ಲ ಎಂಬ ಸಂದೇಶವನ್ನು ರವಾನಿಸುತ್ತಿದೆಯೇ ಎಂಬ ಪ್ರಶ್ನೆ ಮೂಡಿದೆ.

ಫಿಲಡೆಲ್ಫಿಯಾದಲ್ಲಿ ಡೆಮೊಕ್ರೆಟಿಕ್‌ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಬೈಡೆನ್‌, ಪೂರ್ವ ಯುರೋಪ್‌ನ ನ್ಯಾಟೋ ದೇಶಗಳಲ್ಲಿ ಅಮೆರಿಕ ಪಡೆಗಳ ಉಪಸ್ಥಿತಿಯನ್ನು ಬಲಗೊಳಿಸಲಾಗುವುದು. ಉಕ್ರೇನ್‌ಗೂ ಸೇನಾ ನೆರವು ತ್ವರಿತಗೊಳಿಸಲಾಗುತ್ತದೆ. ಆದರೆ ಉಕ್ರೇನ್‌ ಅಧ್ಯಕ್ಷರು ಹಾಗೂ ಅಮೆರಿಕದ ಕೆಲ ಸಂಸದರ ಬೇಡಿಕೆಯಂತೆ ನೇರವಾಗಿ ಮಧ್ಯಪ್ರವೇಶಿಸಲು ಆಗುವುದಿಲ್ಲ ಎಂದು ತಿಳಿಸಿದ್ದಾರೆ.

ಚೀನಾಕ್ಕೂ ಎಚ್ಚರಿಕೆ ನೀಡಿದೆ. ಈ ನಡುವೆ, ಜಾಗತಿಕ ಸಮುದಾಯ ರಷ್ಯಾದ ಮೇಲೆ ಹೇರಿರುವ ನಿರ್ಬಂಧಗಳ ಪರಿಣಾಮದಿಂದ ರಷ್ಯಾವನ್ನು ಪಾರು ಮಾಡಲು ಚೀನಾ ಮುಂದಾದಲ್ಲಿ ಅದು ಕೂಡಾ ತಕ್ಕ ಪರಿಣಾಮ ಎದುರಿಸಬೇಕಾಗಿ ಬರುತ್ತದೆ ಎಂದು ಅಮೆರಿಕ ಎಚ್ಚರಿಕೆ ನೀಡಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ನವೀನ್ ಮೃತದೇಹ ತರಲು ಎಲ್ಲಾ ಪ್ರಯತ್ನ ಮಾಡಿ – ಪ್ರಧಾನಿ ಮೋದಿ

0

ಭದ್ರತಾ ಕುರಿತ ಸಂಪುಟ ಸಮಿತಿಯ ಸಭೆಯಲ್ಲಿ, ಯುದ್ಧಪೀಡಿತ ಉಕ್ರೇನ್ʼನ ಖಾರ್ಕಿವ್ʼನಲ್ಲಿ ಶೆಲ್ ದಾಳಿಯಿಂದ ಮೃತಪಟ್ಟ ಎಂಬಿಬಿಎಸ್ ವಿದ್ಯಾರ್ಥಿ ನವೀನ್ ಶೇಖರಪ್ಪನ್ ಅವ್ರ ಪಾರ್ಥಿವ ಶರೀರವನ್ನ ಮರಳಿ ತರಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನ ಮಾಡಬೇಕೆಂದು ಪ್ರಧಾನಿ ಮೋದಿ ನಿರ್ದೇಶನ ನೀಡಿದರು.

ಅಂದ ಹಾಗೆ, ಮೃತ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ಹಾವೇರಿ ಜಿಲ್ಲೆಯ ನಿವಾಸಿಯಾಗಿದ್ದು, ಕಳೆದ ವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನವೀನ್ ಗ್ಯಾನ ಗೌಡರ್ ಕುಟುಂಬಕ್ಕೆ ₹25 ಲಕ್ಷ ದ ಚೆಕ್ ಹಸ್ತಾಂತರಿಸಿದ್ದರು.

ಖಾರ್ಕಿವ್ ರಾಷ್ಟ್ರೀಯ ವೈದ್ಯಕೀಯ ವಿಶ್ವವಿದ್ಯಾಲಯದ ವಿದ್ಯಾರ್ಥಿಯಾದ ನವೀನ್ ಉಕ್ರೇನ್ʼನ ಖಾರ್ಕಿವ್ʼನಲ್ಲಿ ಆಹಾರ ಖರೀದಿಸಲು ಸರದಿಯಲ್ಲಿ ನಿಂತಿದ್ದಾಗ ರಷ್ಯಾದ ಶೆಲ್ ದಾಳಿಗೆ ಸಿಲುಕಿ ಮೃತಪಟ್ಟಿರುವುದನ್ನು ಇಲ್ಲಿ ಸ್ಮರಿಸಬಹುದು .

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಇಂಡೋನೇಷಿಯ ಸಾಗರದೊಳಗೆ ಭೂಕಂಪನ

0

ಇಂದು ಬೆಳಗ್ಗೆ ಪಶ್ಚಿಮ ಇಂಡೋನೇಷ್ಯಾದಲ್ಲಿ ಪ್ರಬಲ ಮತ್ತು ಸಮುದ್ರದೊಳಗೆ ಭೂಕಂಪ ಸಂಭವಿಸಿದೆ. ಯಾವುದೇ ಗಂಭೀರ ಹಾನಿ ಬಗ್ಗೆ ವರದಿಯಾಗಿಲ್ಲ. ಜಕಾರ್ತ ಸರ್ಕಾರ ಸುನಾಮಿಯ ಅಪಾಯವಿಲ್ಲ ಎಂದು ಸ್ಪಷ್ಟಪಡಿಸಿದೆ.

ರಿಕ್ಟರ್​ ಮಾಪಕದಲ್ಲಿ ಭೂಕಂಪನ ತೀವ್ರತೆ 6.6 ದಾಖಲಾಗಿದೆ. ಪಶ್ಚಿಮ ಸುಮಾತ್ರಾ ಪ್ರಾಂತ್ಯದ ಪರಿಯಾಮನ್‌ನ ಪಶ್ಚಿಮದ 169 ಕಿಲೋಮೀಟರ್‌ ದೂರದಲ್ಲಿ ಮತ್ತು 16 ಕಿಲೋಮೀಟರ್ ಆಳದಲ್ಲಿ ಈ ಭೂಕಂಪನ ಕೇಂದ್ರ ಬಿಂದು ಇತ್ತು ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ ತಿಳಿಸಿದೆ.

ಪ್ರಾಂತ್ಯದ ಹಲವು ಭಾಗಗಳಲ್ಲಿ ಭೂಕಂಪನದ ಅನುಭವವಾಗಿದೆ. ಆದರೆ, ಸುನಾಮಿಯ ಅಪಾಯವಿಲ್ಲ ಎಂದು ಇಂಡೋನೇಷ್ಯಾದ ಹವಾಮಾನ ಮತ್ತು ಭೂ ಭೌತಶಾಸ್ತ್ರ ಸಂಸ್ಥೆ ಹೇಳಿದೆ. ಇಂಡೋನೇಷ್ಯಾ 271 ಮಿಲಿಯನ್ ಜನಸಂಖ್ಯೆಯ ವಿಶಾಲವಾದ ದ್ವೀಪ ಸಮೂಹವಾಗಿದೆ. ಆದ್ದರಿಂದ ಭೂಕಂಪಗಳು ಮತ್ತು ಜ್ವಾಲಾಮುಖಿ ಸ್ಫೋಟಗಳಿಂದ ಈ ಸ್ಥಳ ಪ್ರಭಾವಿತವಾಗಿರುತ್ತದೆ.

ಕಳೆದ ತಿಂಗಳು ಪಶ್ಚಿಮ ಸುಮಾತ್ರಾ ಪ್ರಾಂತ್ಯದಲ್ಲಿ 6.2 ತೀವ್ರತೆಯ ಭೂಕಂಪ ಸಂಭವಿಸಿದೆ. ಕನಿಷ್ಠ 16 ಜನರು ಸಾವನ್ನಪ್ಪಿದ್ದರು. 400 ಕ್ಕೂ ಅಧಿಕ ಜನ ಗಾಯಗೊಂಡಿದ್ದರು. ಮಲೇಷ್ಯಾ ಮತ್ತು ಸಿಂಗಾಪುರದವರೆಗೆ ಸಂಭವಿಸಿದ ಕಂಪನದಿಂದ ಸಾವಿರಾರು ಮನೆಗಳು ಮತ್ತು ಇತರ ಕಟ್ಟಡಗಳು ಹಾನಿಗೊಳಗಾಗಿದ್ದವು.