Saturday, February 21, 2026
Saturday, February 21, 2026
Home Blog Page 1675

ನಾವು ಯಾವುದೇ ರಾಸಾಯನಿಕ ಅಸ್ತ್ರಗಳ ತಯಾರಿಕೆ ಮಾಡಿಲ್ಲ- ಝಲೆನ್ಸ್ಕಿ

0

ಉಕ್ರೇನಿಯನ್ ಪ್ರಯೋಗಾಲಯಗಳಲ್ಲಿ ಜೈವಿಕ ಶಸ್ತ್ರಾಸ್ತ್ರಗಳನ್ನು ತಯಾರಿಸಲಾಗಿದೆ ಎಂಬ ರಷ್ಯಾದ ಆರೋಪಗಳಿಗೆ ಪ್ರತಿಕ್ರಿಯಿಸಿದ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ತಮ್ಮ ದೇಶದಲ್ಲಿ ‘ಯಾವುದೇ ರಾಸಾಯನಿಕ ಅಥವಾ ಯಾವುದೇ ಸಾಮೂಹಿಕ ವಿನಾಶಕಾರಿ ಶಸ್ತ್ರಾಸ್ತ್ರಗಳನ್ನು ಅಭಿವೃದ್ಧಿಪಡಿಸಲಾಗಿಲ್ಲ’ ಎಂದು ಹೇಳಿದ್ದಾರೆ.

ಶುಕ್ರವಾರ ಬೆಳಿಗ್ಗೆ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ ಅವರ ಇತ್ತೀಚಿನ ವೀಡಿಯೊ ಸಂದೇಶದಲ್ಲಿ, ಝೆಲೆನ್ಸ್ಕಿ ಹೀಗೆ ಹೇಳಿದರು: ‘ನಾನು ಉಕ್ರೇನ್ ರಾಷ್ಟ್ರದ ಅಧ್ಯಕ್ಷ. ಮತ್ತು ಇಬ್ಬರು ಮಕ್ಕಳ ತಂದೆ. ಮತ್ತು ನನ್ನ ಭೂಮಿಯಲ್ಲಿ ಯಾವುದೇ ರಾಸಾಯನಿಕ ಅಥವಾ ಸಾಮೂಹಿಕ ವಿನಾಶದ ಯಾವುದೇ ಇತರ ಶಸ್ತ್ರಾಸ್ತ್ರಗಳನ್ನು ಅಭಿವೃದ್ಧಿಪಡಿಸಲಾಗಿಲ್ಲ.ಇಡೀ ಜಗತ್ತಿಗೆ ಅದು ತಿಳಿದಿದೆ. ಅದು ನಿಮಗೆ ತಿಳಿದಿದೆ. ಮತ್ತು ರಷ್ಯಾ ನಮ್ಮ ವಿರುದ್ಧ ಏನಾದರೂ ಮಾಡಿದರೆ, ಅದು ಅತ್ಯಂತ ತೀವ್ರವಾದ ನಿರ್ಬಂಧಗಳ ಪ್ರತಿಕ್ರಿಯೆಯನ್ನು ಪಡೆಯುತ್ತದೆ.’ ಎಂದು ಹೇಳಿದ್ದಾರೆ.

ಯುಎಸ್ ಡಿಪಾರ್ಟ್‌ಮೆಂಟ್ ಆಫ್ ಡಿಫೆನ್ಸ್‌ನಿಂದ ಧನಸಹಾಯದೊಂದಿಗೆ ಉಕ್ರೇನಿಯನ್ ಪ್ರಯೋಗಾಲಯಗಳಲ್ಲಿ ಜೈವಿಕ ಶಸ್ತ್ರಾಸ್ತ್ರಗಳ ಘಟಕಗಳನ್ನು ತಯಾರಿಸಲಾಗಿದೆ ಎಂದು ‘ಇತ್ತೀಚೆಗೆ ಪತ್ತೆಯಾದ ದಾಖಲೆಗಳು’ ತೋರಿಸಿವೆ ಎಂದು ರಷ್ಯಾದ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ಅಧ್ಯಕ್ಷರು, ‘ಇದು ನನಗೆ ನಿಜವಾಗಿಯೂ ಚಿಂತೆ ಮಾಡುತ್ತದೆ, ಏಕೆಂದರೆ ನಮಗೆ ಪದೇ ಪದೇ ಮನವರಿಕೆಯಾಗಿದೆ: ನೀವು ರಷ್ಯಾದ ಯೋಜನೆಗಳನ್ನು ತಿಳಿದುಕೊಳ್ಳಲು ಬಯಸುತ್ತೀರಿ.ರಾಸಾಯನಿಕ ದಾಳಿಯನ್ನು ಸಿದ್ಧಪಡಿಸುವ ಈ ಆರೋಪಗಳು ಯಾವುವು? ನೀವು ಉಕ್ರೇನ್‌ನ ‘ಡಿ-ಕೆಮಿಕಲೈಸೇಶನ್’ ಮಾಡಲು ನಿರ್ಧರಿಸಿದ್ದೀರಾ? ಅಮೋನಿಯಾವನ್ನು ಬಳಸುತ್ತೀರಾ? ರಂಜಕವನ್ನು ಬಳಸಿದ್ದೀರಾ? ನೀವು ನಮಗಾಗಿ ಇನ್ನೇನು ಸಿದ್ಧಪಡಿಸಿದ್ದೀರಿ?’ 16 ದಿನಗಳಿಂದ ಉಕ್ರೇನ್ ವಿರುದ್ಧ ತನ್ನ ಯುದ್ಧವನ್ನು ಮುಂದುವರೆಸಿರುವ ರಷ್ಯಾವನ್ನು ಅವರು ಪ್ರಶ್ನಿಸಿದ್ದಾರೆ.
ತನ್ನ ಇತ್ತೀಚಿನ ಆರೋಪದಲ್ಲಿ, ರಷ್ಯಾದ ರಕ್ಷಣಾ ಸಚಿವಾಲಯವು ಗುರುವಾರ ಉಕ್ರೇನ್‌ಗೆ ಜೈವಿಕ ಶಸ್ತ್ರಾಸ್ತ್ರಗಳನ್ನು ಅಭಿವೃದ್ಧಿಪಡಿಸಲು ಮತ್ತು ರಷ್ಯಾದ ಮೂಲಕ ವಲಸೆ ಬರುವ ವೈರಸ್-ವಾಹಕ ಪಕ್ಷಿಗಳನ್ನು ಬಳಸಲು ಸಹಾಯ ಮಾಡುತ್ತಿದೆ ಎಂದು ಹೇಳಿಕೊಂಡಿದೆ ಎಂದು ಬಿಬಿಸಿ ವರದಿ ಮಾಡಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಸುರಕ್ಷಿತ ಪಾಕ್ ವಿದ್ಯಾರ್ಥಿನಿಯಿಂದಪ್ರಧಾನಿಗೆ ಕೃತಜ್ಞತೆ ಅರ್ಪಣೆ

0

ಯುದ್ಧ ಪೀಡಿತ ಉಕ್ರೇನ್‌ನಿಂದ ಭಾರತೀಯ ಪ್ರಜೆಗಳನ್ನು ಆಪರೇಷನ್‌ ಗಂಗಾ ಕಾರ್ಯಾಚರಣೆಯ ಮೂಲಕ ಭಾರತ ಸರ್ಕಾರ ರಕ್ಷಣೆ ಮಾಡುತ್ತಿದೆ.

ಮಾನವೀಯತೆ ಮೆರೆದ ಭಾರತ ಸರ್ಕಾರ ತನ್ನ ದೇಶದ ವಿದ್ಯಾರ್ಥಿಗಳ ಜೊತೆ ಬಾಂಗ್ಲಾದ 13, ಪಾಕಿಸ್ತಾನ ಹಾಗೂ ನೇಪಾಳದ ತಲಾ ಒಬ್ಬ ವಿದ್ಯಾರ್ಥಿಯನ್ನು ರಕ್ಷಣೆ ಮಾಡಿದೆ.

ಆದರೆ ಇತರ ದೇಶಗಳು ಭಾರತದಂತೆ ತನ್ನ ಪ್ರಜೆಗಳ ರಕ್ಷಣೆಗೆ ಮುಂದಾಗಿಲ್ಲ. ಈ ಹಿನ್ನೆಲೆಯಲ್ಲಿ ನೇಪಾಳ ತನ್ನ ವಿದ್ಯಾರ್ಥಿಗಳನ್ನು ರಕ್ಷಿಸುವಂತೆ ಭಾರತ ಸರ್ಕಾರಕ್ಕೆ ಮನವಿ ಮಾಡಿತ್ತು.

ಹೀಗೆ ಭಾರತದ ಅಧಿಕಾರಿಗಳಿಂದ ರಕ್ಷಿಸಲ್ಪಟ್ಟ ಪಾಕಿಸ್ತಾನ ವಿದ್ಯಾರ್ಥಿ ಪ್ರಧಾನಿ ಮೋದಿ ಹಾಗೂ ಭಾರತೀಯ ರಾಯಭಾರ ಕಚೇರಿ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ್ದಾಳೆ.
ಯುದ್ಧಪೀಡಿತ ಉಕ್ರೇನ್‌ನಿಂದ ಸ್ಥಳಾಂತರಿಸಲು ಸಹಾಯ ಮಾಡಿದ್ದಕ್ಕಾಗಿ ಪ್ರಧಾನಿ ಮೋದಿ ಮತ್ತು ಭಾರತೀಯ ಅಧಿಕಾರಿಗಳಿಗೆ ಪಾಕಿಸ್ತಾನಿ ಪ್ರಜೆ ಅಸ್ಮಾ ಶಫೀಕ್ ಧನ್ಯವಾದ ಸಲ್ಲಿಸಿದ್ದಾಳೆ.

ಸುದ್ದಿ ಸಂಸ್ಥೆ ANI ಪಾಕಿಸ್ತಾನಿ ಪ್ರಜೆ ಅಸ್ಮಾ ಶಫೀಕ್ ಅವರ ವೀಡಿಯೊವನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದು, ವೀಡಿಯೊದಲ್ಲಿ, ಅಸ್ಮಾ, ‘ಹಲೋ, ನನ್ನ ಹೆಸರು ಅಸ್ಮಾ ಶಫೀಕ್ ಮತ್ತು ನಾನು ಪಾಕಿಸ್ತಾನದಿಂದ ಬಂದಿದ್ದೇನೆ.
ಯುದ್ಧಪೀಡಿತ ಉಕ್ರೇನ್‌ನಲ್ಲಿ ಬಹಳ ಕಷ್ಟದ ಪರಿಸ್ಥಿತಿಯಲ್ಲಿ ಸಿಲುಕಿದ್ದ ನಮಗೆ ಅಲ್ಲಿ ಎಲ್ಲಾ ರೀತಿಯಲ್ಲಿ ಬೆಂಬಲ ನೀಡಿದ್ದಕ್ಕಾಗಿ ಕೈವ್‌ನ ಭಾರತೀಯ ರಾಯಭಾರ ಕಚೇರಿಗೆ ನಾನು ತುಂಬಾ ಕೃತಜ್ಞಳಾಗಿದ್ದೇನೆ ಮತ್ತು ಭಾರತದ ಪ್ರಧಾನ ಮಂತ್ರಿಯವರಿಗೆ ನಾನು ಧನ್ಯವಾದ ಅರ್ಪಿಸುತ್ತೇನೆ. ನಮ್ಮನ್ನು ಬೆಂಬಲಿಸಿದ್ದಕ್ಕಾಗಿ ತುಂಬಾ ಧನ್ಯವಾದಗಳು.

ಭಾರತೀಯ ರಾಯಭಾರ ಕಚೇರಿಯಿಂದಾಗಿ ನಾವು ಸುರಕ್ಷಿತವಾಗಿ ಮನೆಗೆ ಹೋಗುತ್ತೇವೆ ಎಂದು ನಾನು ಭಾವಿಸುತ್ತೇನೆ ಎಂದು ಆಕೆ ಹೇಳಿದ್ದಾಳೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಅಮೆರಿಕದಿಂದ ಉಕ್ರೇನಿಗೆ 13.6 ಬಿಲಿಯನ್ ಡಾಲರ್ ನೆರವು

0

ರಷ್ಯಾ ಯುದ್ಧ ಸಾರಿದಾಗ ಉಕ್ರೇನ್‌ನ ನೆರವಿಗೆ ಬರಲಿಲ್ಲ ಎಂಬ ಟೀಕೆ ಎದುರಿಸುತ್ತಿರುವ ಜಗತ್ತಿನ ದೊಡ್ಡಣ್ಣ ಅಮೆರಿಕ ಇದೀಗ ಉಕ್ರೇನ್‌ಗೆ ಬರೋಬ್ಬರಿ 1 ಲಕ್ಷ ಕೋಟಿ ರು. (13.6 ಬಿಲಿಯನ್‌ ಡಾಲರ್‌) ನೆರವು ಘೋಷಿಸಿದೆ ಎಂದು ತಿಳಿದುಬಂದಿದೆ.

ಉಕ್ರೇನ್‌ನಲ್ಲಿ ನಿರಾಶ್ರಿತರಾಗಿರುವ 20 ಲಕ್ಷಕ್ಕೂ ಅಧಿಕ ಜನರಿಗೆ ಆಶ್ರಯ ನೀಡಲು ಮುಂದೆ ಬರುವ ಪೂರ್ವ ಯುರೋಪಿಯನ್‌ ರಾಷ್ಟ್ರಗಳಿಗೆ ಸುಮಾರು 50 ಸಾವಿರ ಕೋಟಿ ರೂ. ನೆರವು ಲಭಿಸಲಿದೆ ಎನ್ನಲಾಗಿದೆ. ಇನ್ನುಳಿದ ಹಣ ಉಕ್ರೇನ್‌ನ ಮರುನಿರ್ಮಾಣಕ್ಕೆ ಬಳಕೆಯಾಗಲಿದೆ ಎಂದು ಶ್ವೇತಭವನದ ಮೂಲಗಳು ಹೇಳಿವೆ.

ಉಕ್ರೇನ್ ಮತ್ತು ಅದರ ಯುರೋಪಿಯನ್ ಸ್ನೇಹಿತ ರಾಷ್ಟ್ರಗಳಿಗೆ ಈ ಹಣ ಲಭಿಸಲಿದೆ ಎಂದು ತಿಳಿದುಬಂದಿದೆ.

ಉಕ್ರೇನ್‌ಗೆ ಅಮೆರಿಕದಿಂದ 10 ಬಿಲಿಯನ್‌ ಡಾಲರ್‌ ಮಾನವೀಯ ನೆರವು ನೀಡಲು ಅನುಮತಿ ನೀಡಬೇಕೆಂದು ಅಧ್ಯಕ್ಷ ಜೋ ಬೈಡನ್‌ ಕಳೆದ ವಾರ
ಅಮೆರಿಕದ ಸಂಸತ್ತನ್ನು ಕೋರಿದ್ದರು.

ಆ ಕೋರಿಕೆಯನ್ನು ಮೀರಿ ಅಮೆರಿಕದ ರಿಪಬ್ಲಿಕನ್‌ ಮತ್ತು ಡೆಮಾಕ್ರೆಟಿಕ್‌ ಪಕ್ಷಗಳ ಸಂಸದರು ಒಮ್ಮತದಿಂದ 13.6 ಬಿಲಿಯನ್‌ ಡಾಲರ್‌ ನೆರವು ನೀಡಲು ಬುಧವಾರ ಒಪ್ಪಿಗೆ ನೀಡಿದ್ದಾರೆ.

ಇದೇ ವೇಳೆ, ಕೊರೋನಾ ವಿರುದ್ಧ ಹೋರಾಡಲು ಇಡೀ ವರ್ಷ 115 ಲಕ್ಷ ಕೋಟಿ ರೂ. ಖರ್ಚು ಮಾಡುವುದಕ್ಕೂ ಸಂಸದರು ಅಮೆರಿಕದ ಸರ್ಕಾರಕ್ಕೆ ಒಪ್ಪಿಗೆ ನೀಡಿದ್ದಾರೆ ಎನ್ನಲಾಗಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ತ್ರಿಪುರಾದಲ್ಲಿ ಶೇ.33 ರಷ್ಟು ಮಹಿಳೆಯರಿಗಾಗಿ ಉದ್ಯೋಗಗಳಲ್ಲಿ ಮೀಸಲು-ಅಮಿತ್ ಶಾ

0

ತ್ರಿಪುರಾದಲ್ಲಿ ಮಹಿಳೆಯರಿಗಾಗಿ ಶೇ.33% ಸರ್ಕಾರಿ ಉದ್ಯೋಗಗಳು, 200 ಕೋಟಿ ವೆಚ್ಚದಲ್ಲಿ ವಿಶ್ವವಿದ್ಯಾಲಯವನ್ನು ನಿರ್ಮಿಸುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭರವಸೆ ನೀಡಿದ್ದಾರೆ.

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಅವರು ತ್ರಿಪುರಾದಲ್ಲಿ ಶೇ.33ರಷ್ಟು ಸರ್ಕಾರಿ ಉದ್ಯೋಗಗಳನ್ನು ಮಹಿಳೆಯರಿಗೆ ಮೀಸಲಿಡಲಾಗುತ್ತದೆ ಎಂದು ಅಮಿತ್ ಶಾ ಅವರು ಘೋಷಿಸಿದ್ದಾರೆ.

ಈಶಾನ್ಯ ರಾಜ್ಯದಲ್ಲಿ ಬಿಜೆಪಿ-ಐಪಿಎಫ್‍ಟಿ ಸರ್ಕಾರದ ನಾಲ್ಕನೇ ವಾರ್ಷಿಕೋತ್ಸವದ ಅಂಗವಾಗಿ ಅಗರ್ತಲಾದಲ್ಲಿ ನಡೆದ ಜಾಥಾವನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಪ್ಲಬ್ ದೇಬ್ ಅವರ ಆಡಳಿತವು ರಾಜಕೀಯ ಹಿಂಸಾಚಾರಕ್ಕೆ ಪೂರ್ಣ ವಿರಾಮ ಹಾಕಿದೆ. ನಾವು 200 ಕೋಟಿ ರೂಪಾಯಿ ವೆಚ್ಚದಲ್ಲಿ ರಾಷ್ಟ್ರೀಯ ವಿಧಿ ವಿಜ್ಞಾನ ವಿಶ್ವವಿದ್ಯಾಲಯವನ್ನು ಸ್ಥಾಪಿಸುತ್ತೇವೆ. ರಾಜ್ಯದ ಯುವಜನರಿಗಾಗಿ ಕೇವಲ 4 ವರ್ಷಗಳಲ್ಲಿ ಪ್ರತಿ ವ್ಯಕ್ತಿಯ ಆದಾಯವು 13% ರಿಂದ 1.30 ಲಕ್ಷಕ್ಕೆ ಏರಿದೆ ಎಂದು ಅಮಿತ್ ಶಾ ಅವರು ವಿವರಿಸಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ನಾವು ಈ ಸೋಲಿನಿಂದ ಕಲಿಯುತ್ತೇವೆ- ರಾಹುಲ್ ಗಾಂಧಿ

0

ಜನರ ತೀರ್ಪನ್ನು ನಾವು ನಮ್ರತೆಯಿಂದ ಸ್ವೀಕರಿಸುತ್ತೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಿಳಿಸಿದ್ದಾರೆ. ಪಂಚರಾಜ್ಯದಲ್ಲಿ ಕೈ ಪಕ್ಷಕ್ಕೆ ಭಾರೀ ಮುಖಭಂಗವಾಗಿದೆ. ಕಾಂಗ್ರೆಸ್ ಕಾರ್ಯಕರ್ತರು ಮತ್ತು ನಾಯಕರು ಚುನಾವಣೆ ಫಲಿತಾಂಶದಿಂದ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ

ಈ ಕುರಿತು ರಾಹುಲ್ ಗಾಂಧಿ ಟ್ವಿಟ್ಟರ್ ನಲ್ಲಿ, ಜನರ ತೀರ್ಪನ್ನು ನಾವು ನಮ್ರತೆಯಿಂದ ಸ್ವೀಕರಿಸುತ್ತಿದ್ದೇನೆ.

ಜನ ಮತ್ತು ದೇಶವನ್ನು ಗೆದ್ದವರಿಗೆ ಶುಭಾಶಯಗಳು ಎಂದು ಹಾರೈಸಿದ್ದಾರೆ.ನಮ್ಮ ಪಕ್ಷಕ್ಕಾಗಿ ದುಡಿದ ಎಲ್ಲ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಸ್ವಯಂಸೇವಕರಿಗೆ ಅವರ ಶ್ರಮ ಮತ್ತು ಸಮರ್ಪಣೆಗಾಗಿ ನನ್ನ ಕೃತಜ್ಞತೆಗಳು. ನಾವು ಈ ಸೋಲಿನಿಂದ ಕಲಿಯುತ್ತೇವೆ. ನಾವು ಭಾರತದ ಜನರ ಹಿತಾಸಕ್ತಿಗಳಿಗಾಗಿ ಕೆಲಸ ಮಾಡುತ್ತಲೇ ಇರುತ್ತೇವೆ ಎಂದು ಬರೆದು ಟ್ವೀಟ್ ಮಾಡಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಮೋದೀಜಿ ಅವರಿಂದ ಕಾರ್ಯಕರ್ತರು & ಮತದಾರರಿಗೆ ಧನ್ಯತೆ ಅರ್ಪಣೆ

0

ಬಿಜೆಪಿಯು ಬಡವರ ಪರ ಮತ್ತು ಸಕ್ರಿಯ ಆಡಳಿತಕ್ಕೆ ಜನರ ಬೆಂಬಲ ಎಂಬುದನ್ನು ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಸಾಬೀತುಪಡಿಸಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ವರ್ಣಿಸಿದ್ದಾರೆ.

ದೆಹಲಿಯ ಬಿಜೆಪಿ ಹೆಡ್‌ ಕ್ವಾಟ್ರಸ್‌ನಲ್ಲಿ ಮಾತನಾಡಿದ ಅವರು, ಮಾ.10ರಿಂದ ಹೋಳಿ ಆರಂಭವಾಗಲಿದೆ ಎಂದು ನಾವು ಮೊದಲೇ ಹೇಳಿದ್ದೆವು.

ಇದು ನಮ್ಮ ಎನ್‌ಡಿಎ ಕಾರ್ಯಕರ್ತರ ವಿಜಯ. ಈ ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗವಹಿಸಿದ್ದಕ್ಕಾಗಿ, ಬಿಜೆಪಿಗೆ ವಿಜಯವನ್ನು ಖಚಿತಪಡಿಸಿದ್ದಕ್ಕಾಗಿ ನಾನು ಎಲ್ಲಾ ಮತದಾರರಿಗೆ ಧನ್ಯವಾದ ಅರ್ಪಿಸುತ್ತೇನೆ.

ಇದೇ ಮೊದಲ ಬಾರಿಗೆ ಎರಡನೇ ಅವಧಿಗೆ ಸಿಎಂ ಆಗಿ ಯೋಗಿ ಆದಿತ್ಯನಾಥ್‌ ಅವರು ಆಯ್ಕೆಯಾಗಿದ್ದಾರೆ ಎಂದು ಅಭಿನಂದನೆ ಸಲ್ಲಿಸುತ್ತೇನೆ. ಈ ಚುನಾವಣೆಗಳಲ್ಲಿ ಮಹಿಳೆಯರು ನಿರ್ಣಾಯಕ ಪಾತ್ರ ವಹಿಸಿದ್ದಾರೆ. ಅವರು ನಮಗೆ ಆಶೀರ್ವಾದ ಮಾಡಿದ್ದಾರೆ. ಮಹಿಳಾ ಮತದಾರರು ಪ್ರಾಬಲ್ಯ ಹೊಂದಿರುವ ಕ್ಷೇತ್ರಗಳಲ್ಲಿ ನಾವು ಅದ್ಭುತವಾಗಿ ಗೆದ್ದಿದ್ದೇವೆ. ಈ ವಿಜಯದಲ್ಲಿ ನಮ್ಮ ನಾರಿ ಶಕ್ತಿ ನಮ್ಮ ಪಾಲುದಾರರಾಗಿದ್ದಾರೆ ಎಂದು ಮಾನ್ಯ ಪ್ರಧಾನಿ ನರೇಂದ್ರ ಮೋದಿ ಅವರು ಸ್ಮರಿಸಿಕೊಂಡಿದ್ದಾರೆ.

ಗೋವಾದಲ್ಲಿ ಎಲ್ಲಾ ಎಕ್ಸಿಟ್‌ ಪೋಲ್‌ಗಳು ತಪ್ಪು ಎಂಬುದು ಸಾಬೀತಾಗಿದೆ. ಉತ್ತರಾಖಂಡದಲ್ಲಿ ಬಿಜೆಪಿ ಹೊಸ ಇತಿಹಾಸ ಬರೆದಿದೆ. ರಾಜ್ಯದಲ್ಲಿ ಮೊದಲ ಬಾರಿಗೆ ಪಕ್ಷವೊಂದು ಸತತ ಎರಡನೇ ಅವಧಿಗೆ ಅಧಿಕಾರಕ್ಕೆ ಬಂದಿದೆ ಎಂದು ಐದು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಕ್ರಿಯಿಸಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ವಿವರವಿಲ್ಲದೇ ವರದಿ ನೀಡಿದ ವೈದ್ಯರ ಕ್ರಮಕ್ಕೆ ಹೈಕೋರ್ಟ್ ಆಕ್ಷೇಪ

0

ಲೈಂಗಿಕ ದೌರ್ಜನ್ಯದ ಬಗ್ಗೆ ಯಾವುದೇ ವರದಿ ನೀಡದೆ ಲೈಂಗಿಕ ದೌರ್ಜನ್ಯ ಪ್ರಮಾಣ ಪತ್ರ ನೀಡಿದ ಸರ್ಕಾರಿ ವೈದ್ಯರ ಕ್ರಮಕ್ಕೆ ಹೈಕೋರ್ಟ್ ಕಿಡಿಕಾರಿದೆ.

ಲೈಂಗಿಕ ದೌರ್ಜನ್ಯ ಪ್ರಮಾಣಪತ್ರದ ಅರ್ಥವೇನು ಎಂದು ನ್ಯಾಯಾಲಯದ ಪ್ರಶ್ನೆಗೆ ವೈದ್ಯರು ಉತ್ತರಿಸಲಿಲ್ಲ.
ಫೊರೆನ್ಸಿಕ್ ವರದಿ ಬಾಕಿ ಇರುವ ಕಾರಣ ವರದಿ ನೀಡಿಲ್ಲ ಎಂದು ಹೇಳಿದ್ದಾರೆ ಎಂದು ತಿಳಿದುಬಂದಿದೆ.

ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ 16 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಪ್ರಕರಣ ಇದಾಗಿದೆ. ಆರೋಪಿ ವಿರುದ್ಧ ಮಕ್ಕಳ ಲೈಂಗಿಕ ಅಪರಾಧಗಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಆರೋಪಿಯು ಜಾಮೀನು ಕೋರಿ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯ ವಿಚಾರಣೆ ನಡೆಸಿದ ಪೀಠವು ವೈದ್ಯರ ಕ್ರಮದ ವಿರುದ್ಧ ಕಿಡಿಕಾರಿದೆ.

ವೈದ್ಯರು ವರದಿ ನೀಡದ ಕಾರಣ ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸುವ ಉದ್ದೇಶವೇ ವಿಫಲವಾಗಿದೆ ಎಂದು ನ್ಯಾಯಾಮೂರ್ತಿ ಹೇಳಿದ್ದಾರೆ. ಯಾವುದೇ ವರದಿ ನೀಡದೆ ಅದು ಹೇಗೆ ಲೈಂಗಿಕ ದೌರ್ಜನ್ಯದ ಪ್ರಮಾಣ ಪತ್ರ ಕೊಡಲಾಗಿದೆ ಎಂದು ನ್ಯಾಯಮೂರ್ತಿಗಳ ಪೀಠ ಪ್ರಶ್ನಿಸಿದೆ.

ಲೈಂಗಿಕ ದೌರ್ಜನ್ಯ ಪ್ರಮಾಣ ಪತ್ರ ನೀಡಿದ ವೈದ್ಯರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಹೈಕೋರ್ಟ್ ಸೂಚಿಸಿದೆ ಎಂದು ತಿಳಿದುಬಂದಿದೆ.

ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಅಪ್ರಾಪ್ತರನ್ನು ತಮ್ಮ ಅಭಿಪ್ರಾಯಕ್ಕಾಗಿ ಹಾಜರುಪಡಿಸಿದಾಗ ಅವರ ಕರ್ತವ್ಯ ಮತ್ತು ಜವಾಬ್ದಾರಿಗಳ ಬಗ್ಗೆ ಸುತ್ತೋಲೆ ಹೊರಡಿಸಲು ಮತ್ತು ವೈದ್ಯಕೀಯ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ನ್ಯಾಯಾಲಯವು ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಆದೇಶಿಸಿದೆ.

ಸಿಆರ್‌ಪಿಸಿಯ ಸೆಕ್ಷನ್ 164ರ ಅಡಿಯಲ್ಲಿ ಮ್ಯಾಜಿಸ್ಟ್ರೇಟ್ ಮುಂದೆ ಸಂತ್ರಸ್ತೆ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ನ್ಯಾಯಾಲಯವು ಆರೋಪಿಯ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ ಎಂದು ತಿಳಿದುಬಂದಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಸದ್ಯದಲ್ಲೇ ಅತಿಥಿ ಶಿಕ್ಷಕರ ನೇಮಕಾತಿ

0

ರಾಜ್ಯದಲ್ಲಿ ಶಿಕ್ಷಕರ ಕೊರತೆಯನ್ನು ನೀಗಿಸಲು 15,000 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ ಎಂದು ಪ್ರಾಥಮಿ ಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು ತಿಳಿಸಿದ್ದಾರೆ.

ಈ ಸಂಬಂಧ ವಿಧಾನಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಶಿಕ್ಷಕರ ಕೊರತೆ ಇರುವುದು ನಿಜ.

ಸದ್ಯಕ್ಕೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಮೇ ತಿಂಗಳಿನಲ್ಲಿ ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಯಲಿದೆ. ಆ ನಂತರ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಬಿ.ಸಿ. ನಾಗೇಶ್ ಅವರು ತಿಳಿಸಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ರಾಜ್ಯದ ವಿವಿಗಳಲ್ಲಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಅಧಿಸೂಚನೆ

0

ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 1242 ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭವಾಗಿರುವ ಬೆನ್ನಲ್ಲೇ ವಿವಿಧ ವಿಶ್ವವಿದ್ಯಾನಿಲಯಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಉನ್ನತ ಶಿಕ್ಷಣ ಇಲಾಖೆ ಅನುಮತಿ ನೀಡಿದೆ.

ರಾಜ್ಯದ 23 ವಿಶ್ವವಿದ್ಯಾನಿಲಯಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಭರ್ತಿ ಮಾಡುವಂತೆ ಉನ್ನತ ಶಿಕ್ಷಣ ಇಲಾಖೆ ಎಲ್ಲಾ ವಿಶ್ವವಿದ್ಯಾನಿಲಯಗಳಿಗೆ ಪತ್ರ ಬರೆದಿದೆ.

ಅಕ್ಕಮಹಾದೇವಿ, ಮೈಸೂರು, ಕರ್ನಾಟಕ, ಕುವೆಂಪು, ಗುಲ್ಬರ್ಗ, ಜಾನಪದ, ಮಂಗಳೂರು, ತುಮಕೂರು, ಬೆಂಗಳೂರು, ಕನ್ನಡ, ವಿಶ್ವೇಶ್ವರಯ್ಯ, ದಾವಣಗೆರೆ, ವಿಜಯನಗರ, ರಾಣಿಚೆನ್ನಮ್ಮ, ಸಂಸ್ಕೃತ, ಗಂಗೂಬಾಯಿ ಹಾನಗಲ್, ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ ಹಾಗೂ ಮುಕ್ತ ವಿಶ್ವವಿದ್ಯಾನಿಲಯಗಳ ಕುಲಸಚಿವರಿಗೆ ಪತ್ರ ಬರೆದು ನೇಮಕಾತಿ ಪ್ರಕ್ರಿಯೆ ಆರಂಭಿಸುವಂತೆ ನಿರ್ದೇಶನ ನೀಡಲಾಗಿದೆ.

ಮಂಡ್ಯ, ಏಕೀಕೃತ ವಿವಿ, ಮಹಾರಾಣಿ ಕ್ಲಸ್ಟರ್, ರಾಯಚೂರು, ನೃಪತುಂಗ, ವಿಶ್ವವಿದ್ಯಾನಿಲಯಗಳ ಕುಲಪತಿಗಳಿಗೆ ಉನ್ನತ ಶಿಕ್ಷಣ ಇಲಾಖೆಯಿಂದ ಪತ್ರ ಬರೆಯಲಾಗಿದೆ.

2023ರ ಜುಲೈ 1ರಿಂದ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಪಿಎಚ್‍ಡಿ ಪದವಿಯನ್ನು ಯುಜಿಸಿ ಕಡ್ಡಾಯಗೊಳಿಸಿದೆ. 2021ರ ಯುಜಿಸಿ ಅಧಿಸೂಚನೆಯಂತೆ ವಿಶ್ವವಿದ್ಯಾನಿಲಯಗಳ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ನೇರ ನೇಮಕಾತಿಗೆ ಅನುಮತಿ ನೀಡಲಾಗಿದೆ.

ಪದವಿ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಮಾರ್ಚ್ 12ರಿಂದ 16ರವರೆಗೆ ಲಿಖಿತ ಪರೀಕ್ಷೆ ನಡೆಯಲಿದೆ. ಪರೀಕ್ಷೆಯಲ್ಲಿ ಗಳಿಸಿದ ಗರಿಷ್ಠ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಪದವಿ ಕಾಲೇಜಿನ ನಂತರ ವಿಶ್ವವಿದ್ಯಾನಿಲಯಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಮುಂದಾಗಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಜನಸ್ನೇಹಿ ಸಂಚಾರ ವ್ಯವಸ್ಥೆ ತರಲು ಚಿಂತನೆ- ಜ್ಞಾನೇಂದ್ರ

0

ಕಾನೂನು ಸುವ್ಯವಸ್ಥೆ ವಿಭಾಗದಲ್ಲಿ ಕೆಲಸ ಮಾಡುವ ಪೊಲೀಸರು ಬಾಡಿ ಕ್ಯಾಮೆರಾ ಧರಿಸುವುದು ಕಡ್ಡಾಯ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಿಳಿಸಿದ್ದಾರೆ.

ಈ ಸಂಬಂಧ ವಿಧಾನಸಭೆಯಲ್ಲಿ ಮಾತನಾಡಿದ ಅವರು, ಸಂಚಾರಿ ಪೊಲೀಸರು ಬಾಡಿ ಕ್ಯಾಮರ ಅಳವಡಿಸಿಕೊಳ್ಳುವುದನ್ನು ಕಡ್ಡಾಯಗೊಳಿಸಿದಂತೆ ಕಾನೂನು ಸುವ್ಯವಸ್ಥೆ ವಿಭಾಗದ ಪೊಲೀಸರು ಬಾಡಿ ಕ್ಯಾಮರ ಅಳವಡಿಕೊಳ್ಳ ಬೇಕಿದೆ. ಯಾರಾದರೂ ಬಾಡಿ ಕ್ಯಾಮರ ಅಳವಡಿಸಿಕೊಂಡಿಲ್ಲ ಎಂದು ಮಾಹಿತಿ ಬಂದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆರಗ ಜ್ಞಾನೇಂದ್ರ ಅವರು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ವಾಹನಗಳ ಸಂಖ್ಯೆ ಹೆಚ್ಚಾಗಿದೆ. ಆದ್ದರಿಂದ, ಟ್ರಾಫಿಕ್ ಪೋಲಿಸರ ಜವಾಬ್ದಾರಿಯೂ ಹೆಚ್ಚಾಗಿದೆ. ವ್ಯವಸ್ಥೆಯನ್ನು ಸುಧಾರಿಸುತ್ತಿದ್ದೇವೆ. ಆಕ್ಷೇಪಕ್ಕೆ ಗುರಿಯಾಗಿದ್ದ ಟೋಯಿಂಗ್ ನ್ನು ಸದ್ಯಕ್ಕೆ ನಿಲ್ಲಿಸಿದ್ದೇವೆ. ಮುಂದೆ ಅದನ್ನು ಬದಲಾವಣೆ ಮಾಡಲು ಹಿರಿಯ ಅಧಿಕಾರಿಗಳು ಚರ್ಚೆ ನಡೆಸುತ್ತಿದ್ದಾರೆ.

ಮುಖ್ಯಮಂತ್ರಿ ಅವರ ಜೊತೆ ಚರ್ಚೆ ಮಾಡಿ ಅತ್ಯಾಧುನಿಕ ಜನ ಸ್ನೇಹಿ ಟ್ರಾಫಿಕ್ ವ್ಯವಸ್ಥೆ ತರಲು ಚಿಂತನೆ ನಡೆದಿದೆ. ಇನ್ನು ಮುಂದೆ ರಸ್ತೆಯಲ್ಲಿ ಅಡ್ಡ ಹಾಕಿ ನಿಲ್ಲಿಸಿ ತಪಾಸಣೆ ಮಾಡುವುದು, ಕಿರುಕುಳ ನೀಡುವುದು ತಪ್ಪಲಿದೆ ಎಂದು ಆರಗ ಜ್ಞಾನೇಂದ್ರ ಅವರು ಹೇಳಿದ್ದಾರೆ.