Friday, February 20, 2026
Friday, February 20, 2026
Home Blog Page 1683

ಮೃತ ನವೀನ್ ಮನೆಗೆ ಬೊಮ್ಮಾಯಿ ಭೇಟಿ ಪರಿಹಾರ ಚೆಕ್ ವಿತರಣೆ

0

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ರಾಣಿಬೆನ್ನೂರು ತಾಲ್ಲೂಕಿನ ಚಳಗೇರಿಗೆ ಭೇಟಿ ನೀಡಿ ಇತ್ತೀಚಿಗೆ ಉಕ್ರೇನ್ ನಲ್ಲಿ ಮೃತಪಟ್ಟ ವೈದ್ಯಕೀಯ ವಿದ್ಯಾರ್ಥಿ ನವೀನ ಗ್ಯಾನಗೌಡರ್ ಅವರ ಪಾಲಕರಿಗೆ ಸಾಂತ್ವನ ತಿಳಿಸಿದರು. ಮುಖ್ಯಮಂತ್ರಿಗಳೊಂದಿಗೆ ಕೃಷಿ ಸಚಿವರಾದ ಸನ್ಮಾನ್ಯ ಶ್ರೀ. ಬಿ.ಸಿ. ಪಾಟೀಲ್ ಅವರು ಸಹ ಇದ್ದರು.
ಮೃತ ನವೀನ್ ಕುಟುಂಬದವರಿಗೆ ಸಾಂತ್ವನ ನೀಡಿದರು.

ಈ ಸಂದರ್ಭದಲ್ಲಿ ಸರಕಾರದ ವತಿಯಿಂದ 25 ಲಕ್ಷ ರೂ. ಗಳ ಪರಿಹಾರದ ಚೆಕ್ ನ್ನು ಕುಟುಂಬದ ಸದಸ್ಯರಿಗೆ ಹಸ್ತಾಂತರಿಸಲಾಯಿತು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಭಾರತೀಯ ವಿದ್ಯಾರ್ಥಿಗಳ ಸ್ಥಳಾಂತರಕ್ಕೆ ರಷ್ಯಾ ಸಿದ್ಧ

0

ಉಕ್ರೇನ್ ನಲ್ಲಿ ನಡೆಯುತ್ತಿರುವ ಸಂಘರ್ಷದ ನಡುವೆಯೇ ಭಾರತೀಯ ವಿದ್ಯಾರ್ಥಿಗಳು ಸೇರಿದಂತೆ ಇತರೆ ವಿದೇಶಿ ಪ್ರಜೆಗಳನ್ನು ಸ್ಥಳಾಂತರಿಸಲು ನಾವು ಸಿದ್ಧರಿದ್ದೇವೆ ಎಂದು ರಷ್ಯಾ ವಿಶ್ವಸಂಸ್ಥೆಯ ಭದ್ರತಾ ಮಂಡಳಿಗೆ ತಿಳಿಸಿದೆ.

ಪೂರ್ವ ಉಕ್ರೇನ್ ಖಾರ್ಕೀವ್ ಹಾಗೂ ಸುಮಿ ನಗರಗಳಿಗೆ ತೆರಳಲು ರಷ್ಯಾದ ಬಸ್ ಗಳು ಕ್ರಾಸಿಂಗ್ ಪಾಯಿಂಟ್ ಗಳಲ್ಲಿ ಸಿದ್ದವಾಗಿವೆ ಎಂದು ರಾಷ್ಯಾ ವಿಶ್ವಸಂಸ್ಥೆಗೆ ಮಾಹಿತಿ ನೀಡಿದೆ.

ತುರ್ತು ಸಭೆಯಲ್ಲಿ ವಿಶ್ವಸಂಸ್ಥೆಯ ರಷ್ಯಾದ ಖಾಯಂ ಪ್ರತಿನಿಧಿ ವಾಸಿಲಿ ನೆಬೆಂಜೆಲಾ ಉಕ್ರೇನ್ ನಲ್ಲಿ ಸಿಲುಕಿರುವ ವಿದೇಶಗಳ ಸ್ಥಳಾಂತರಕ್ಕೆ ರಷ್ಯಾದ ಮಿಲಿಟರಿ ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ತಿಳಿಸಿದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಮೃತ ನವೀನ್ ಪೋಷಕರಿಗೆ ತರಳಬಾಳುಶ್ರೀ ಸಾಂತ್ವನ

0

ಉಕ್ರೇನ್ ಹಾಗೂ ರಷ್ಯಾ ನಡುವಿನ ಸಂಘರ್ಷದಲ್ಲಿ ಬಲಿಯಾದ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ನವೀನ್ ಗ್ಯಾನಗೌಡ್ರ ನಿವಾಸಕ್ಕೆ ಪರಮಪೂಜನೀಯ ಶ್ರೀ ತರಳಬಾಳು ಜಗದ್ಗುರುಗಳವರು ಡಾ॥ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರು ದಯಮಾಡಿಸಿ ನವೀನ್ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿದರು.

ನವೀನ್ ತಂದೆ ಶೇಖರಪ್ಪ ಗ್ಯಾನಗೌಡ್ರ, ತಾಯಿ ವಿಜಯಮ್ಮ ನವೀನ್ ಸಹೋದರನಾದ ಹರ್ಷ ಮತ್ತು ಕುಟುಂಬದವರಿಗೆ ಸಾಂತ್ವನ ಮತ್ತು ಧೈರ್ಯ ತುಂಬಿದರು.

ಉಕ್ರೇನ್ ದೇಶದ ಕಾರ್ಕಿವ್‍ನಲ್ಲಿ ನಾಲ್ಕನೇ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದ ನವೀನ್ ಗ್ಯಾನಗೌಡ್ರು ದಿನಸಿ ಅಗತ್ಯ ವಸ್ತುಗಳನ್ನು ತರಲು ಹೊರಗೆ ಹೋಗಿದ್ದ ಸಂಧರ್ಭದಲ್ಲಿ ತರಕಾರಿಗಾಗಿ ಲೈನಿನಲ್ಲಿ ನಿಂತಿದ್ದ ವೇಳೆ ಉಕ್ರೇನ್-ರಷ್ಯಾ ಸೈನಿಕರ ನಡುವೆ ಗುಂಡಿನ ಚಕಮಕಿ ನಡೆದು ರಷ್ಯಾದ ಶೆಲ್ ದಾಳಿಗೆ ಬಲಿಯಾದ ಹಾವೇರಿ ಜಿಲ್ಲೆಯ ರಾಣೆಬೇನ್ನೂರು ತಾಲೂಕಿನ ಚಳಗೇರಿ ಗ್ರಾಮದ ಮಠದ ಶಿಷ್ಯರ ಕಿರಿಯ ಪುತ್ರ ಮಾರ್ಚ್ 1 ರಂದು ಮೃತಪಟ್ಟಿರುವುದು ದೇಶವಾಸಿಗಳ ನೋವಿಗೆ ಕಾರಣವಾಗಿದೆ.

ನವೀನ್ ಮೃತಪಟ್ಟ ಸುದ್ದಿ ತಿಳಿಯುತ್ತಿದ್ದಂತೆ ಪೋಷಕರಿಗೆ ಪರಮಪೂಜನೀಯ ಶ್ರೀ ತರಳಬಾಳು ಜಗದ್ಗುರು ಡಾ॥ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರು ನಿರಂತರವಾಗಿ ದೂರವಾಣಿ ಮೂಲಕ ಸಂಪರ್ಕದಲ್ಲಿದ್ದು ಸಾಂತ್ವನ ಮತ್ತು ಧೈರ್ಯವನ್ನು ತುಂಬುತ್ತಿದ್ದರು.

ಮೃತ ನವೀನ್ ದೇಹವನ್ನು ಮನೆಗೆ ತರುವ ನಿಟ್ಟಿನಲ್ಲಿ ಪೂಜ್ಯ ಶ್ರೀಜಗದ್ಗುರುಗಳವರ ಪ್ರಧಾನಿ ಕಚೇರಿ, ವಿದೇಶಾಂಗ ಇಲಾಖೆಯ ಅಧಿಕಾರಿಗಳು , ಮುಖ್ಯ ಮಂತ್ರಿಗಳ ಬಳಿ ಚರ್ಚಿಸಿರುವುದಲ್ಲದೆ, ಪೂಜ್ಯರ ಸಂಪರ್ಕದಲ್ಲಿರುವ ವಿವಿಧ ದೇಶಗಳ ರಾಯಭಾರಿಗಳ ಮುಖಾಂತರವು ಕಳೆದ ಮೂರ್ನಾಲ್ಕು ದಿನಗಳಿಂದ ತಡರಾತ್ರಿಯವರೆಗೂ ತೀವ್ರ ಪ್ರಯತ್ನಿಸುತ್ತಿದ್ದಾರೆ.

ಮೃತ ನವೀನ್ ಅಂತಿಮ ದರ್ಶನ ಪಡೆಯಲು ತವಕಿಸುತ್ತಿರುವ ಹೆತ್ತವರ ಒಡಲು ಅವನ ಸಧ್ಯದ ಸ್ಥಿತಿಯ ಫೋಟೋವನ್ನು ತರಿಸಿಕೊಡುವಂತೆ ಶ್ರೀಜಗದ್ಗುರುಗಳವರಲ್ಲಿ ಪ್ರಾರ್ಥಿಸಿದ್ದರು. ಪೂಜ್ಯರು ತಮ್ಮ ಸಂಪರ್ಕದ ಅಲ್ಲಿನ ವಿದ್ಯಾರ್ಥಿಗಳ ಮೂಲಕ ನವೀನ್ ಪೋಟೋ ತರಿಸಲು ಪ್ರಯತ್ನಿಸಿದರೂ ವಿಭಿನ್ನ ಪ್ರಾಂತ್ಯಗಳಲ್ಲಿರುವ ಆ ವಿದ್ಯಾರ್ಥಿಗಳು ನೆಲೆಸಿರುವುದಿರಿಂದ ತೀವ್ರ ಪ್ರತಿಕೂಲ ಪರಿಸ್ಥಿತಿಯ ಅನಾನುಕೂಲತೆಯ ಪರಿಣಾಮ ಕಾರ್ಯಸಾಧ್ಯವಾಗದೇ ಇರುವ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಹಾಜರಿದ್ದ ಹಿರೇಕೆರೂರಿನ ಮಾಜಿ ಶಾಸಕರಾದ ಯು.ಬಿ.ಬಣಕಾರ್ ಸೇರಿದಂತೆ ಅನೇಕ ಮುಖಂಡರು ತೀವ್ರ ಸಂತಾಪ ವ್ಯಕ್ತಪಡಿಸಿದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ರೈತರಿಗೆ ಪಹಣಿ ಜೊತೆ ಜಮೀನಿನ ಸ್ಕೆಚ್ ಲಭ್ಯ

0

ಕಂದಾಯ ಮತ್ತು ಭೂಮಾಪನ ಇಲಾಖೆಯಿಂದ ಹೊಸ ಯೋಜನೆ ರೂಪಿಸಲಾಗಿದೆ. ಇನ್ನು ಮುಂದೆ ಪಹಣಿ ಪತ್ರದಲ್ಲಿ ನಕ್ಷೆಯನ್ನು ಕೂಡ ನೀಡಲಾಗುತ್ತದೆ. ಪ್ರಾಯೋಗಿಕವಾಗಿ ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ.

ನಂತರ ರಾಜ್ಯಾದ್ಯಂತ ವಿಸ್ತರಿಸಲಾಗುತ್ತದೆ ಎಂದು ತಿಳಿದುಬಂದಿದೆ.
ಜಮೀನಿನ ನಕ್ಷೆ ಯನ್ನು ನೋಡಲು ರೈತರು ಭೂದಾಖಲೆಗಳ ಇಲಾಖೆಗೆ ಅಲೆದಾಡ ಬೇಕಿಲ್ಲ.
ಪಹಣಿಯಲ್ಲಿಯೇ ಜಮೀನಿನ ನಕ್ಷೆ, ವಿವರಗಳನ್ನು ಒಳಗೊಂಡಂತೆ ಹೊಸ ಪಹಣಿ ನೀಡಲಾಗುತ್ತದೆ ಎಂದು ತಿಳಿದುಬಂದಿದೆ.

ಹೊಸ ಪಹಣಿಯಲ್ಲಿಯೂ ಹಳೆ ಪಹಣಿಯಲ್ಲಿ ಇರುವಂತೆಯೇ ಎಲ್ಲ ವಿವರಗಳು ಇರುತ್ತವೆ. ಎಡಗಡೆ ಡಿಜಿಟಲ್ ಸ್ಕೆಚ್ ಇರಲಿದೆ. ವಿಸ್ತೀರ್ಣ, ಜಮೀನು ಎಲ್ಲಿದೆ?, ಒತ್ತುವರಿ ಮಾಹಿತಿ, ಕ್ಯೂಆರ್ ಕೋಡ್, ಬಾರ್ಕೋಡ್ ಮೊದಲಾದವುಗಳನ್ನು ಒಳಗೊಂಡಂತೆ ಹೊಸ ಪಹಣಿ ರೈತರ ಕೈಸೇರಲಿದೆ.

ಪಹಣಿಯಲ್ಲಿ ಪ್ರಸ್ತುತ ಜಮೀನಿನ ರೆಕಾರ್ಡ್ ಆಫ್ ರೈಟ್ಸ್, ಗೇಣಿ ಮತ್ತು ಪಹಣಿ ಪತ್ರಿಕೆ ಫಾರಂ ನಂಬರ್ 16 ರಲ್ಲಿ ಜಮೀನಿನ ವಿಸ್ತೀರ್ಣ, ಕಂದಾಯ, ಸ್ವಾಧೀನದಾರನ ಹೆಸರು, ತಂದೆಯ ಹೆಸರು ಮತ್ತು ವಿಳಾಸ, ಸ್ವಾಧೀನತೆಯ ರೀತಿ, ಇತರೆ ಹಕ್ಕುಗಳು, ಮಣ್ಣಿನ ನಮೂನೆ, ನೀರಾವರಿ ಮೂಲ ಸೇರಿದಂತೆ ಜಮೀನಿಗೆ ಸಂಬಂಧಿಸಿದ ಮಾಹಿತಿ ಇರುತ್ತದೆ. ಈಗ ಪಹಣಿ ಪತ್ರದಲ್ಲಿ ನಕ್ಷೆಯನ್ನು ಕೂಡ ನಮೂದಿಸಲಾಗುವುದು.ಇದರಿಂದ ವಂಚನೆಗೆ ಕಡಿವಾಣ ಹಾಕಬಹುದಾಗಿದೆ. ರೈತರಿಗೆ ಮತ್ತಷ್ಟು ಅನುಕೂಲವಾಗಲಿದೆ ಎಂದು ಹೇಳಲಾಗಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

7 ನೇ ವೇತನ ಆಯೋಗ ರಚನೆ ಸಿಎಂ ಭರವಸೆ- ಷಡಕ್ಷರಿ

0

ರಾಜ್ಯ ಸರ್ಕಾರಿ ನೌಕರರಿಗೆ ವೇತನ ಭತ್ಯೆ ಹೆಚ್ಚಳಕ್ಕೆ ಸಂಬಂಧಿಸಿದಂತೆ 7ನೇ ವೇತನ ಆಯೋಗ ರಚನೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು ತಿಳಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಶನಿವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಗಿದೆ.

ಬಜೆಟ್ ನಲ್ಲಿ 7 ನೇ ವೇತನ ಆಯೋಗ ರಚಿಸುವ ಕುರಿತು ಘೋಷಣೆ ಮಾಡದ ಬಗ್ಗೆ ಸರ್ಕಾರಿ ನೌಕರರಿಂದ ಅಸಮಾಧಾನ ವ್ಯಕ್ತವಾಗಿದ್ದ ಹಿನ್ನೆಲೆಯಲ್ಲಿ ನೌಕರರ ಸಂಘದಿಂದ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಗಿತ್ತು.
ಸಿಎಂ ಬಸವರಾಜ ಬೊಮ್ಮಾಯಿ ಅವರು, ಬಜೆಟ್ ನಂತರವೂ ವೇತನ ಆಯೋಗ ರಚನೆಗೆ ಅವಕಾಶವಿದ್ದು, ನೌಕರರಿಗೆ ಆತಂಕಬೇಡ. 7ನೇ ವೇತನ ಆಯೋಗ ರಚನೆ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ ಎನ್ನಲಾಗಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ನಾಲ್ವರಿಗೆ ಗುಂಡಿಕ್ಕಿ ತಾನೂ ಆತ್ಮಹತ್ಯೆ ಮಾಡಿಕೊಂಡ ಯೋಧ

0

ಅಮೃತಸರದಲ್ಲಿ ಇಂದು ಹತಾಶೆಗೊಂಡ ಯೋಧನೊಬ್ಬ ಗುಂಡು ಹಾರಿಸಿ, ಆತನೂ ಸೇರಿದಂತೆ 5 ಮಂದಿ ಬಿಎಸ್‍ಎಫ್ ಯೋಧರು ಮೃತಪಟ್ಟಿರುವ ಘಟನೆ ಅಮೃತಸರದ ಖಾಸಾ ಗ್ರಾಮದ ನೆಲೆಯಲ್ಲಿ ನಡೆದಿದೆ.

ಅಮೃತಸರದ ಖಾಸಾ ಗ್ರಾಮದ ಬಿಎಸ್‍ಎಫ್ ನೆಲೆಯಲ್ಲಿ ಇಂದು ಬೆಳಗ್ಗೆ ಗುಂಡಿನ ಶಬ್ದ ಕೇಳಿಬಂದಿದೆ. ಈ ಘಟನೆಯಲ್ಲಿ ಐದು ಮಂದಿ ಮೃತಪಟ್ಟಿದ್ದಾರೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಕರ್ತವ್ಯ ನಿರ್ವಹಣೆಯ ಗಂಟೆಗಳ ಬಗ್ಗೆ ಅಸಮಾಧಾನ ಹೊಂದಿದ್ದ ಸಟ್ಟೆಪ್ಪ.ಎಸ್.ಕೆ ಎಂಬುವರು ಬಂದೂಕನ್ನು ವಾಪಸ್ ಇಡುವ ವೇಳೆ ಏಕಾಏಕಿ ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿದ್ದಾರೆ. ನಂತರ ತಮ್ಮಷ್ಟಕ್ಕೆ ತಾವೇ ಶೂಟ್ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯಲ್ಲಿ ಆತನೂ ಸೇರಿದಂತೆ 5 ಮಂದಿ ಮೃತಪಟ್ಟಿದ್ದಾರೆ. ಮೃತಪಟ್ಟ ಎಲ್ಲರ ಪಾರ್ಥೀವ ಶರೀರಗಳನ್ನು ಗುರುನಾನಕ್ ದೇವ್ ಆಸ್ಪತ್ರೆಗೆ ಸಾಗಿಸಲಾಗಿದೆ. ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರ ಪರಿಸ್ಥಿತಿ ಚಿಂತಾಜನಕವಾಗಿದೆ. ಘಟನೆಯ ಬಗ್ಗೆ ಕೋರ್ಟ್ ಮಾರ್ಷಲ್‍ಗೆ ವಹಿಸಲಾಗಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಬಿ.ಎಸ್. ವೈ ಗೆ ಶಿವಪ್ಪ ನಾಯಕ ಮತ್ತು ಗುರು ಬಸವಶ್ರೀ ಪ್ರಶಸ್ತಿಯ ಗರಿ

0

ಶಿವಮೊಗ್ಗದ ಬೆಕ್ಕಿನ ಕಲ್ಮಠದಲ್ಲಿ ಇಂದು, ಜಗದ್ಗುರು ಶ್ರೀ ಗುರುಬಸವ ಮಹಾಸ್ವಾಮಿಗಳವರ 110ನೇ ಪುಣ್ಯ ಸ್ಮರಣೋತ್ಸವವನ್ನು ನಡೆಸಲಾಯಿತು.

ಈ ಸಂಧರ್ಭದಲ್ಲಿ ಪೂಜ್ಯ ಶ್ರೀ ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳು ಹಾಗೂ ಪೂಜ್ಯ ಶ್ರೀ ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರಿಂದ ನಿಕಟಪೂರ್ವ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಿ. ಎಸ್. ಯಡಿಯೂರಪ್ಪ ಅವರಿಗೆ ಆಶೀರ್ವಾದ ಪೂರ್ವಕವಾಗಿ ಗುರು ಬಸವಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.

ಅಖಿಲ ಭಾರತ ವೀರಶೈವ ಮಹಾಸಭಾದ ವತಿಯಿಂದ ನಿಕಟಪೂರ್ವ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ .ಸಿ.ಎಸ್. ಯಡಿಯೂರಪ್ಪನವರಿಗೆ ಕೆಳದಿ ಶಿವಪ್ಪನಾಯಕ ಪ್ರಶಸ್ತಿಯನ್ನು ಸಹ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಹಿರಿಯ ಸಾಹಿತಿ ಗೊ.ರು. ಚೆನ್ನಬಸಪ್ಪ, ಸಚಿವ ಶ್ರೀ ಕೆ.ಎಸ್. ಈಶ್ವರಪ್ಪ, ವೀರಶೈವ ಮಹಾಸಭಾ ಅಧ್ಯಕ್ಷ ಶ್ರೀ ಶಾಮನೂರು ಶಿವಶಂಕರಪ್ಪ, ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರು ಶ್ರೀ ಪರಮಶಿವಯ್ಯ, ಸಂಸದ ಶ್ರೀ ಬಿ.ವೈ. ರಾಘವೇಂದ್ರ, ಶಾಸಕರಾದ ಶ್ರೀ ಆಯನೂರು ಮಂಜುನಾಥ, ಶ್ರೀ ರುದ್ರೇಗೌಡ, ಶ್ರೀ ಅರುಣ್, ಶ್ರೀಮತಿ ಭಾರತಿ ಶೆಟ್ಟಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ತವರು ಉಕ್ರೇನಿನ ಬಗ್ಗೆ ಆತಂಕದಲ್ಲಿ ಕಾಶ್ಮೀರದಲ್ಲಿನ ಮಗಳು

0

ಉಕ್ರೇನ್ ಮೇಲೆ ರಷ್ಯಾ ಆಕ್ರಮಣ ಮುಂದುವರೆಸಿರುವ ಸಮಯದಲ್ಲಿ, ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ತ್ರಾಲ್ ಗ್ರಾಮದಲ್ಲಿ ಕುಟುಂಬವೊಂದು ಯುದ್ಧ ನಿಲ್ಲಲಿ ಎಂದು ಪ್ರಾರ್ಥನೆ ನಡೆಸುತ್ತಿದೆ.

ಉಕ್ರೇನ್‌ನಲ್ಲಿ ಜನಿಸಿದ ಒಲೆಸಿಯಾ ಮಜೂರ್ ಯುದ್ಧದ ನಡುವೆ ಸಿಲುಕಿರುವ ತನ್ನ ಪೋಷಕರು ಮತ್ತು ಅಜ್ಜಿಗಾಗಿ ಹಗಲು ರಾತ್ರಿ ಪ್ರಾರ್ಥಿಸುತ್ತಿದ್ದಾರೆ.

ಒಲೆಸಿಯಾ ಕಾಶ್ಮೀರಿ ಉದ್ಯಮಿ ಬಿಲಾಲ್ ಅಹ್ಮದ್ ಅವರನ್ನು ಎಂಟು ವರ್ಷಗಳ ಹಿಂದೆ ಮದುವೆಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಕಳೆದ ಹಲವು ವರ್ಷಗಳಿಂದ ಕಾಶ್ಮೀರದಲ್ಲಿ ನೆಮ್ಮದಿಯಿಂದ ಜೀವನ ನಡೆಸುತ್ತಿದ್ದಾರೆ.

ಕಳೆದ 10 ದಿನಗಳಿಂದ ಆಕೆಗೆ ಸಂಕಷ್ಟ ಎದುರಾಗಿದೆ. ಉಕ್ರೇನ್‌ನಲ್ಲಿ ಸಿಲುಕಿರುವ ತನ್ನ ಪೋಷಕರು ಮತ್ತು ಅಜ್ಜಿಯ ಬಗ್ಗೆ ಚಿಂತಿತಳಾಗಿದ್ದಾಳೆ. ಅಷ್ಟೇ ಅಲ್ಲ ಪ್ರಧಾನಿ ಮೋದಿಯವರಿಗೆ ಹಿಂಸಾಚಾರವನ್ನು ಕೊನೆಗೊಳಿಸುವಂತೆ ರಷ್ಯಾವನ್ನು ತಾಕೀತು ಮಾಡುವಂತೆ ಮನವಿ ಮಾಡಿದ್ದಾಳೆ.

ರಷ್ಯಾದ ಬಗ್ಗೆ ನನಗೆ ಕೋಪವಿದೆ. ನನ್ನ ಪೋಷಕರು ಮತ್ತು ಅಜ್ಜಿಯ ಬಗ್ಗೆ ತುಂಬಾ ಚಿಂತಿತಳಾಗಿದ್ದೇನೆ. ಅವರೆಲ್ಲರೂ ಮನೆಯಲ್ಲಿ ಸಿಲುಕಿಕೊಂಡಿದ್ದು, ತುಂಬಾ ವಯಸ್ಸಾದ ಕಾರಣ ಆ ಸ್ಥಳದಿಂದ ಹೋಗುವುದು ತುಂಬಾ ಕಷ್ಟ. ಯುದ್ಧವು ತೀವ್ರಗೊಂಡರೆ, ಅವರು ಏನು ಮಾಡುತ್ತಾರೆಂದು ನನಗೆ ತಿಳಿದಿಲ್ಲ ಎಂದು ಒಲೆಸಿಯಾ ಮಜೂರ್ ಹೇಳಿದ್ದಾರೆ.

ಭಾರತವು ಉಕ್ರೇನ್‌ಗೆ ಬೆಂಬಲ ನೀಡಲಿ ಮತ್ತು ತನ್ನ ತಾಯ್ನಾಡಿನಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ಕೊನೆಗೊಳಿಸುವಂತೆ ರಷ್ಯಾಕ್ಕೆ ತಿಳಿಸುವಂತೆ ಒಲೆಸಿಯಾ ಮೋದಿಯವರಿಗೆ ಮನವಿ ಮಾಡಿದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಮಾಧ್ಯಮಗಳ ಮೇಲೂ ಕಣ್ಣು ಕೆಂಪು ಮಾಡಿದ ರಷ್ಯ

0

ಉಕ್ರೇನ್ ಮೇಲೆ ಸಂಪೂರ್ಣವಾಗಿ ನಿಯಂತ್ರಣ ಸಾಧಿಸುವತ್ತ ಸಾಗುತ್ತಿರುವ ರಷ್ಯಾ ಈಗ ಹಲವು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳ ನಿಯಂತ್ರಣ ಸಾಧಿಸಲು ಮುಂದಾಗಿದೆ.

ಜಾಗತಿಕ ಮಟ್ಟದ ಹಲವು ಮಾಧ್ಯಮಗಳ ಮೇಲೂ ರಷ್ಯಾ ಕಣ್ಣಿಟ್ಟಿದೆ. ಬ್ರಿಟನ್ ನ ಬಿಬಿಸಿ, ಅಮೆರಿಕ ಸರಕಾರ ಹಣ ಹೂಡಿಕೆ ಮಾಡಿರುವ ವಾಯ್ಸ್ ಆಫ್ ಅಮೆರಿಕ, ರೇಡಿಯೋ ಫ್ರೀ ಯುರೋಪ್, ರೇಡಿಯೋ ಲಿಬರ್ಟಿ, ಜರ್ಮನ್ ಬ್ರಾಂಡ್ ಕಾಸ್ಟರ್ ಡಾಯ್ಚ್ ವಿಲ್ಲೆ ಹಾಗೂ ಲ್ಯಾಟ್ವಿಯ ಮೂಲದ ಮೆಡುಜಾ ಮಾಧ್ಯಮಗಳನ್ನು ನಿಷೇಧಿಸಿದೆ.

ಉಕ್ರೇನ್ ಮೇಲೆ ರಷ್ಯಾ ಮಾಡಿರುವ ದಾಳಿ ಕುರಿತು ನಕಲಿ ಸುದ್ದಿ ಹರಡಿದ ಆರೋಪದಲ್ಲಿ ಫೇಸ್ಬುಕ್ ಹಾಗೂ ಟ್ವಿಟರ್ ಅನ್ನು ಬ್ಲಾಕ್ ಮಾಡಿದೆ. ಅಲ್ಲದೆ, ಮುಂದಿನ ದಿನಗಳಲ್ಲಿ ನಕಲಿ ಸುದ್ದಿ ಹರಡುವ ಮಾಧ್ಯಮಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಕಾನೂನು ಸಹ ಜಾರಿಗೊಳಿಸಿದೆ.

ನಕಲಿ ಸುದ್ದಿ ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ವಿದೇಶಿ ಮಾಧ್ಯಮಗಳನ್ನು ನಿಷೇಧಿಸಿದೆ. ಅಲ್ಲದೆ, ಮುಂದಿನ ದಿನಗಳಲ್ಲಿ ನಕಲಿ ಸುದ್ದಿ ಹರಡಿದರೆ ಹದಿನೈದು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ಕಾನೂನು ಸಹ ಜಾರಿಗೊಳಿಸಿದೆ ಎಂದು ತಿಳಿದುಬಂದಿದೆ.

ರಷ್ಯಾ ನಿಷೇಧಿಸಿರುವ ವಿಷಯಗಳು ಜಾಲತಾಣಗಳಲ್ಲಿ ಪೋಸ್ಟ್ ಮಾಡಲಾಗಿದ್ದು, ಇವುಗಳನ್ನು ಡಿಲೀಟ್ ಮಾಡುವಲ್ಲಿ ವಿಫಲವಾದ ಕಾರಣ ಫೇಸ್ಬುಕ್ ಹಾಗೂ ಟ್ವಿಟರ್ರ್ ಮೇಲೆ ನಿಷೇಧ ಹೇರಲಾಗಿದೆ ಎಂದು ರಷ್ಯಾ ತಿಳಿಸಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಗೆಲುವಿನ ಹೊಸ್ತಿಲಲ್ಲಿ ಕರ್ನಾಟಕ

0

ಬೌಲರ್ ಗಳ ಕರಾರುವಾಕ್ ದಾಳಿಯ ನೆರವಿನಿಂದ ಮಿಂಚಿದ ಕರ್ನಾಟಕ ತಂಡ ಪುದುಚೇರಿ ವಿರುದ್ಧದ ರಣಜಿ ಟ್ರೋಫಿ ಎಲೈಟ್ ಸಿ ಗುಂಪಿನ ತನ್ನ ಕೊನೆ ಪಂದ್ಯದಲ್ಲಿ ಗೆಲುವಿನ ಹೊಸ್ತಿಲು ತಲುಪಿದೆ.

ಪಂದ್ಯದ ಮೂರನೇ ದಿನವಾದ ಶನಿವಾರ ಮೊದಲ ಇನ್ನಿಂಗ್ಸ್ ಮುಂದುವರೆಸಿದ ಪುದುಚೆರಿ ತಂಡ 241 ರನ್ ಗಳಿಗೆ ಆಲೌಟ್ ಆಯಿತು.
ದಿನದಾಟದ ಮುಕ್ತಾಯದ ವೇಳೆಗೆ ಎರಡನೇ ಇನ್ನಿಂಗ್ಸ್ ನಲ್ಲಿ 62 ರನ್ ಗಳಿಗೆ ನಾಲ್ಕು ವಿಕೆಟ್ ಕಳೆದುಕೊಂಡಿತು.

ಕರ್ನಾಟಕ ತಂಡ ಸದ್ಯ ಇನಿಂಗ್ಸ್ ಹಾಗೂ 150 ರನ್ ಗಳ ಮುನ್ನುಡೆ ಹೊಂದಿದ್ದು, ಗೆಲುವಿಗೆ ಎದುರಾಳಿ ತಂಡದ 6 ವಿಕೆಟ್ ಗಳನ್ನು ಉಳಿಸಬೇಕಾಗಿದೆ.

ಚೆನ್ನೈನ ಶಿವಸುಬ್ರಮಣಿಯ ನಾಡಾರ್ ಕಾಲೇಜ್ ಆಫ್ ಇಂಜಿನಿಯರಿಂಗ್ ಗ್ರೌಂಡ್ ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಶುಕ್ರವಾರ 52 ರನ್ ಗಳಿಗೆ 2 ವಿಕೆಟ್ ಕಳೆದುಕೊಂಡು ಬ್ಯಾಟಿಂಗ್ ಕಾಯ್ದುಕೊಂಡಿದ್ದ ಪುದುಚೇರಿ ತಂಡಕ್ಕೆ ಮೂರನೇ ದಿನ ಕರ್ನಾಟಕದ ಬೌಲರ್ ಗಳಾದ ವಿದ್ಯಾಧರ ಪಾಟೀಲ್ (41ಕ್ಕೆ2), ಕೆ. ಗೌತಮ್ (86ಕ್ಕೆ 5), ಹಾಗೂ ಪ್ರಸಿದ್ಧ ಕೃಷ್ಣ (42ಕ್ಕೆ 2) ನಿರಂತರವಾಗಿ ಕಾಡಿದರು.

ಫಾಲೋ ಆಲ್ ಹೇರಿದ ಕರ್ನಾಟಕ ತಂಡ ದಿನದಾಟದ ಅಂತ್ಯಕ್ಕೆ ಎದುರಾಳಿ ತಂಡದ 4 ವಿಕೆಟ್ ಉರುಳಿಸಿ ಗೆಲುವಿನ ವಿಶ್ವಾಸ ಮೂಡಿಸಿತು. ಎರಡನೇ ಇನಿಂಗ್ಸ್ ನಲ್ಲೂ ಪ್ರಸಿದ್ಧ ಕೃಷ್ಣ 31 ರನ್ ಗಳಿಗೆ 2 ವಿಕೆಟ್ ತಮ್ಮದಾಗಿಸಿಕೊಂಡರು.