ಬಾಗಲಕೋಟೆಯಲ್ಲಿ ರಾಜ್ಯ ಯುವ ವಿಜ್ಞಾನಿಗಳ ಸಮಾವೇಶFebruary 27, 2022ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಮೂಡಿಸಲು ಕರ್ನಾಟಕ ರಾಜ್ಯ ವಿಜ್ಞಾನ ಪರೀಷತ್ ನಿಂದ ಫೆ.27,28ರಂದು ರಾಜ್ಯ ಮಟ್ಟದ ಯುವ ವಿಜ್ಞಾನಿಗಳ ಸಮಾವೇಶ ಆಯೋಜಿಸಲಾಗಿದೆ ಎಂದು ಪರಿಷತ್ ಉಪಾಧ್ಯಕ್ಷ ಎಚ್.ಜಿ.ಹುದ್ದಾರ ಅವರು ತಿಳಿಸಿದರು. ಬಾಗಲಕೋಟೆ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಂಬಿಎ ಕಾಲೇಜಿನಲ್ಲಿ ಆಯೋಜಿಸಲಾಗಿರುವ ಸಮ್ಮೇಳನದಲ್ಲಿ ಪ್ರತಿ ಜಿಲ್ಲೆಯಿಂದ ಆಯ್ಕೆಯಾದ ಇಬ್ಬರು ಯುವ ವಿಜ್ಞಾನಿಗಳು ಸೇರಿದಂತೆ 70 ವಿದ್ಯಾರ್ಥಿಗಳು, ಮಾರ್ಗದರ್ಶಿ ಶಿಕ್ಷಕರು ಭಾಗವಹಿಸಲಿದ್ದಾರೆ ಎಂದರು. ವಿಜ್ಞಾನ ಆಸಕ್ತರು ಸೇರಿದಂತೆ 200 ಜನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮೊದಲ ಬಾರಿಗೆ ಬಾಗಲಕೋಟೆಯಲ್ಲಿ ಸಮ್ಮೇಳನ … Continue reading
ಗೆಲುವಿನತ್ತ ಕರ್ನಾಟಕ ರಣಜಿ ತಂಡFebruary 27, 2022ದ್ವಿತೀಯ ಇನ್ನಿಂಗ್ಸ್ ನಲ್ಲೂ ಬ್ಯಾಟಿಂಗ್ ವೈಭವ ಮುಂದುವರಿಸಿದ ಕರ್ನಾಟಕಕ್ಕೆ ಬೌಲಿಂಗ್ ನಲ್ಲಿ ಲೆಗ್ ಸ್ಪಿನ್ನರ್ ಶ್ರೇಯಸ್ ಗೋಪಾಲ್ ಭರವಸೆ ತುಂಬಿದರು.ಇದರ ಪರಿಣಾಮ ರಣಜಿ ಕ್ರಿಕೆಟ್ ಟೂರ್ನಿಯ ಎಲೈಟ್ ಸಿ ಗುಂಪಿನ ಪಂದ್ಯದಲ್ಲಿ ತಂಡ ಗೆಲುವಿನತ್ತ ಹೆಜ್ಜೆ ಹಾಕಿತು. ಚೆನ್ನೈನ ಐಐಟಿ ಕೆಮ್ ಪ್ಲಾಸ್ಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಜಮ್ಮು ಮತ್ತು ಕಾಶ್ಮೀರ ತಂಡದ ಗೆಲುವಿಗೆ ಕರ್ನಾಟಕ 508 ರನ್ ಗಳ ಗುರಿ ನೀಡಿತು. ಮೂರನೇ ದಿನದಾಟದ ಮುಕ್ತಾಯಕ್ಕೆ ಜಮ್ಮು ಮತ್ತು ಕಾಶ್ಮೀರ ನಾಲ್ಕು ವಿಕೆಟ್ ಕಳೆದುಕೊಂಡು 189 … Continue reading
ಭಾರತ-ಶ್ರೀಲಂಕಾ ಕ್ರಿಕೆಟ್ ಟಿ -20 ಸರಣಿ ಭಾರತ ಕೈವಶFebruary 27, 2022ಶ್ರೇಯಸ್ ಅಯ್ಯರ್ ಅವರ ಅಮೋಘ ಅರ್ಧಶತಕ ಮತ್ತು ಆಲ್-ರೌಂಡರ್ ರವೀಂದ್ರ ಜಡೇಜಾ ಅವರ ಸಿಡಿಲಬ್ಬರದ ಬ್ಯಾಟಿಂಗ್ ಬಲದಿಂದ ಮಿಂಚಿದ ಭಾರತ ತಂಡ ಪ್ರವಾಸಿ ಶ್ರೀಲಂಕಾ ವಿರುದ್ಧದ ಟಿ-20 ಸರಣಿಯ ಎರಡನೇ ಪಂದ್ಯದಲ್ಲಿ 7 ವಿಕೆಟ್ ಗಳ ಭರ್ಜರಿ ಗೆಲುವು ಪಡೆದುಕೊಂಡಿದೆ. ಈ ಮೂಲಕ ಮೂರು ಪಂದ್ಯಗಳ ಸರಣಿಯನ್ನು ಒಂದು ಪಂದ್ಯ ಬಾಕಿ ಇರುವಂತೆ ವಶಪಡಿಸಿಕೊಂಡಿತು. ಟೀಮ್ ಇಂಡಿಯಾ ಪಾಲಿಗೆ ಇದು ಸತತ 11ನೇ ಟಿ-20 ಗೆಲುವಾಗಿದೆ. ಧರ್ಮಶಾಲಾ ಸ್ಟೇಡಿಯಂನಲ್ಲಿ ನಿನ್ನೆ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ … Continue reading
ಪ.ಜಾತಿ/ಪ.ವರ್ಗಗಳಿಗೆ ಮೀಸಲಾಗಿಟ್ಟ ಹಣ ಪುನಃ ಸರ್ಕಾರದ ಪಾಲಾಗುತ್ತಿದೆFebruary 27, 2022ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಅನುಸೂಚಿತ ಜಾತಿ ಮತ್ತು ಬುಡಕಟ್ಟುಗಳ ಅನುದಾನ ಹಂಚಿಕೆ ಕಾಯ್ದೆಯಲ್ಲಿನ 7 ಡಿ ಸೆಕ್ಷನ್ ಅನ್ನೋದು ಪಡಿಸಲಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಅವರು ತಿಳಿಸಿದ್ದಾರೆ. ಈ ತಿದ್ದುಪಡಿಯಿಂದ ಪರಿಶಿಷ್ಟ ಜಾತಿ, ಪಂಗಡದ ಜನರ ಅಭಿವೃದ್ಧಿಗೆ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ. ಬೆಂಗಳೂರಿನ ಲಿಡ್ಕರ್ ಭವನದಲ್ಲಿ ದಲಿತ ಸಂಘರ್ಷ ಸಮಿತಿ ಸಂಘಟನೆಗಳ ಒಕ್ಕೂಟ ಆಯೋಜಿಸಿದ್ದ ಎಸ್ ಸಿ ಪಿ, ಟಿ ಎಸ್ ಪಿ ಕಾಯ್ದೆ ಅಡಿ ಮೀಸಲಿಟ್ಟ ಹಣ ಹಲವು ಇಲಾಖೆಗಳಲ್ಲಿ ಖರ್ಚಾಗುವುದಿಲ್ಲ. ಈ … Continue reading
ಮೇಕೆದಾಟಿನತ್ತ ಕಾಂಗ್ರೆಸ್ ಜನತೆಯತ್ತ ಬಿಜೆಪಿFebruary 27, 2022ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ 2.0 ಅನ್ನು ಭಾನುವಾರದಿಂದ ಆರಂಭಿಸಲಿದೆ. ಇದೇ ವೇಳೆ ಕಾಂಗ್ರೆಸ್ ಜನವಿರೋಧಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಆಡಳಿತಾರೂಢ ಬಿಜೆಪಿ ಭಾನುವಾರ ಬೆಂಗಳೂರು ಹೊರತುಪಡಿಸಿ ರಾಜ್ಯಾದ್ಯಂತ ರಸ್ತೆಗಿಳಿದು ಹೋರಾಟಕ್ಕೆ ಸಜ್ಜಾಗಿದೆ. ಇದರೊಂದಿಗೆ ಎರಡು ಪ್ರಧಾನ ಪಕ್ಷಗಳು ಪರಸ್ಪರ ಕದನಕ್ಕೆ ಇಳಿದಂತಾಗಿದೆ. ಮೇಕೆದಾಟು ಪಾದಯಾತ್ರೆಯ ಮೊದಲ ಹಂತ ಸುಗಮ ದಿಂದ ರಾಮನಗರದ ವರೆಗೆ ನಾಲ್ಕು ದಿನ ನಡೆದಿದೆ. ಬಳಿಕ ಕೋರ್ಟ್ ಸೂಚನೆ ಮೇರೆಗೆ ನಿಲ್ಲಿಸಲಾಗಿತ್ತು. ಬೆಂಗಳೂರು ನಗರಕ್ಕೆ ನೀರು ಒದಗಿಸಬಹುದಾದ ಮೇಕೆದಾಟು … Continue reading
ದೇಶಬಿಟ್ಟು ಹೋಗಿಲ್ಲ- ಝೆಲೆನ್ಸ್ಕಿFebruary 27, 2022ರಷ್ಯಾ ಸೇನಾ ಪಡೆಗಳ ಘೋರ ದಾಳಿಯ ನಡುವೆಯೂ ಕದನ ಭೂಮಿಯಲ್ಲಿ ಎದೆಸೆಟೆಸಿ ನಿಂತಿರುವ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೊಲೆನ್ ಸ್ಕಿ , ನಾನು ತಾಯ್ನಾಡಿನಲ್ಲಿ ಇದ್ದೇನೆ. ಇಲ್ಲಿಂದ ಪಲಾಯನ ಮಾಡುವುದು ನನಗೆ ಇಷ್ಟವಿಲ್ಲ. ಯಾರು ನೀಡುವ ರಕ್ಷಣೆ ಅಗತ್ಯ ಬೇಕಿಲ್ಲ. ನನಗೆ ಸದ್ಯ ಬೇಕಿರುವುದು ಮದ್ದುಗುಂಡುಗಳ ನೆರವು ಎಂದು ಹೇಳಿದ್ದಾರೆ. ರಾಜಧಾನಿ ಕೀವ್ ನಗರದಲ್ಲಿ ಇರುವ ಝೆಲೆನ್ ಸ್ಕಿ ಅವರಿಗೆ ಆಪತ್ತು ಎದುರಾಗಿದೆ. ಹೆಚ್ಚು ಕಾಲ ಅಲ್ಲಿರುವುದು ಕ್ಷೇಮವಲ್ಲ. ಸುರಕ್ಷಿತ ನೆಲೆಗೆ ಬಂದು ಬಿಡಿ. ನಾವು ನೆರವು … Continue reading
ರೇಷ್ಮೆ ತಯಾರಿಕೆಯಲ್ಲಿ ಭಾರತವು ಚೀನಾವನ್ನು ಹಿಂದಿಕ್ಕಲಿದೆFebruary 27, 2022ದೇಶದಲ್ಲಿ ರೇಷ್ಮೆಇಂಡಸ್ಟ್ರಿಯು ವರ್ಷಕ್ಕೆ ಒಂದು ಲಕ್ಷ ಕೋಟಿ ವ್ಯವಹರಿಸುತ್ತಾ ಪ್ರಮುಖ ಉದ್ಯಮಗಳಲ್ಲಿ ಒಂದಾಗಿ ಹೊರಹೊಮ್ಮಿರುವುದು ಸಂತಸದ ಸಂಗತಿ ಎಂದು ಬೆಂಗಳೂರು ಕೇಂದ್ರ ರೇಷ್ಮೆ ತಾಂತ್ರಿಕ ಸಂಶೋಧನಾ ಸಂಸ್ಥೆ ನಿರ್ದೇಶಕ ಡಾ. ಸುಭಾಷ ವಿ. ನಾಯಿಕ ಅವರು ತಿಳಿಸಿದ್ದಾರೆ. ವಿಶ್ವದ 20 ದೇಶಗಳಲ್ಲಿ ಚೀನಾ ಮೊದಲ ಸ್ಥಾನ ಹಾಗೂ ಭಾರತವು ಎರಡನೇ ಸ್ಥಾನ ಪಡೆದಿದೆ. ಇತ್ತೀಚಿಗೆ ಚೀನಾ ರೇಷ್ಮೆ ತಯಾರಿಕೆಯಲ್ಲಿ ಹಿಂದಿದೆ. ಭಾರತವು ಮುನ್ನುಗ್ಗಿ ಮೊದಲ ಸ್ಥಾನ ಪಡೆಯುವ ಸನಿಹದಲ್ಲಿದೆ. ದೇಶವು 35 ಸಾವಿರ ಮೆಟ್ರಿಕ್ ಟನ್ ರೇಷ್ಮೆ … Continue reading
ರಾಜ್ಯ ರಾಜಕಾರಣದ ಧ್ರುವ ತಾರೆ ಬಿ.ಎಸ್ ಯಡಿಯೂರಪ್ಪFebruary 27, 2022ಬಿ.ಎಸ್. ಯಡಿಯೂರಪ್ಪನವರ ಪೂರ್ಣ ಹೆಸರು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ.ಇವರು ಫೆ. 27, 1943ರಂದು ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಬೂಕನಕೆರೆಯಲ್ಲಿ ಜನಿಸಿದರು. ತುಮಕೂರು ಜಿಲ್ಲೆಯ ಯಡಿಯೂರು ಊರಿನಲ್ಲಿರುವ ಸಿದ್ಧಲಿಂಗೇಶ್ವರ ದೇವರ ಹೆಸರನ್ನು ಇವರಿಗೆ ನಾಮಕರಣ ಮಾಡಲಾಗಿದೆ. ಇವರ ತಂದೆ ಸಿದ್ದಲಿಂಗಪ್ಪ ಮತ್ತು ತಾಯಿ ಪುಟ್ಟತಾಯಮ್ಮ. ಯಡಿಯೂರಪ್ಪನವರಿಗೆ ನಾಲ್ಕು ವರ್ಷವಿರುವಾಗಲೇ ತಾಯಿ ವಿಧಿವಶರಾದರು. ಮಂಡ್ಯದ ಪಿಇಎಸ್ ಕಾಲೇಜಿನಲ್ಲಿ ಪದವಿಪೂರ್ವ ಶಿಕ್ಷಣವನ್ನು ಪೂರೈಸಿದ್ದಾರೆ. 1965ರಲ್ಲಿ ಸಮಾಜ ಕಲ್ಯಾಣ ಇಲಾಖೆಯಲ್ಲಿ ಪ್ರಥಮ ದರ್ಜೆಯ ಗುಮಾಸ್ತರಾಗಿ ವೃತ್ತಿಜೀವನ ಆರಂಭಿಸಿದರು. ನಂತರ ಕೆಲಸಕ್ಕೆ ರಾಜೀನಾಮೆ … Continue reading
ಸಹಾಯಕ ಪ್ರಾಧ್ಯಾಪಕರ ಹುದ್ದೆ ಪರೀಕ್ಷಾ ಅಭ್ಯರ್ಥಿಗಳಿಗೆ ವಸ್ತ್ರ ಸಂಹಿತೆFebruary 27, 2022ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಅಗತ್ಯವಿರುವ 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಅರ್ಜಿ ಹಾಕಿರುವ ಅಭ್ಯರ್ಥಿಗಳು, ಮಾರ್ಚ್ ಮಧ್ಯಭಾಗದಲ್ಲಿ ನಡೆಯಲಿರುವ ಸ್ಪರ್ಧಾತ್ಮಕ ಪರೀಕ್ಷೆಗೆ ಅಗತ್ಯವಿರುವ ಪ್ರವೇಶ ಪತ್ರವನ್ನು ಫೆ.28ರಿಂದ http://kea.kar.nic.in ಜಾಲತಾಣದಲ್ಲಿ ಡೌನ್-ಲೋಡ್ ಮಾಡಿಕೊಳ್ಳಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ರಮ್ಯಾ ತಿಳಿಸಿದ್ದಾರೆ. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ವಸ್ತ್ರಸಂಹಿತೆಯನ್ನೂ ನಿಗದಿಪಡಿಸಲಾಗಿದೆ. ನಿಷೇಧಿತ ವಸ್ತುಗಳ ಪಟ್ಟಿಯನ್ನೂ ತಿಳಿಸಲಾಗಿದೆ. ಈ ಪರೀಕ್ಷೆಯು ಮಾರ್ಚ್ 12ರಿಂದ 16ರವರೆಗೆ ನಡೆಯಲಿದೆ. ಈ ಬಗ್ಗೆ ಶನಿವಾರ ಪತ್ರಿಕಾ ಪ್ರಕಟಣೆ ನೀಡಿರುವ … Continue reading
ವಿವಿಧ ತಾಣಗಳಿಂದ ಭಾರತೀಯರ ಏರ್ ಲಿಫ್ಟ್February 27, 2022ಯುದ್ಧಪೀಡಿತ ಉಕ್ರೇನ್ ನಲ್ಲಿ ಸಿಲುಕಿರುವ ಭಾರತೀಯರ ಸ್ಥಳಾಂತರ ಕಾರ್ಯಾಚರಣೆಯ ಭಾಗವಾಗಿ 219 ವಿದ್ಯಾರ್ಥಿಗಳು ಶನಿವಾರ ಸಂಜೆ ಮುಂಬೈ ತಲುಪಿದ್ದಾರೆ. ರೊಮೇನಿಯಾ ಮೂಲಕ ಇವರನ್ನು ಏರ್ ಇಂಡಿಯಾ ವಿಮಾನದ ಮೂಲಕ ಏರ್ ಲಿಫ್ಟ್ ಮಾಡಲಾಯಿತು ಎಂದು ತಿಳಿದುಬಂದಿದೆ. ಸಂಜೆ 7.30ರ ವೇಳೆಗೆ ವಿಮಾನ ಮುಂಬೈ ತಲುಪಿದೆ. ದಿಲ್ಲಿಯಿಂದ ರೊಮೇನಿಯಾಗೆ ತೆರಳಬೇಕಿದ್ದ ಮತ್ತೊಂದು ವಿಮಾನಕ್ಕೆ ಅನುಮತಿ ಸಿಕ್ಕಿಲ್ಲವೆಂದು ತಿಳಿದುಬಂದಿದೆ. ಶನಿವಾರ ಉಕ್ರೇನ್ ನಿಂದ ಜಹೋನಿ ಕ್ರಾಸಿಂಗ್ ಪಾಯಿಂಟ್ ಮೂಲಕ ಭಾರತೀಯ ವಿದ್ಯಾರ್ಥಿಗಳ ಮೊದಲ ಬ್ಯಾಚ್ ಹಂಗೇರಿ ಯನ್ನು ಪ್ರವೇಶಿಸಿದೆ. ವಿಮಾನದ … Continue reading
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
KLIVE at Google News App
KLIVE Android App on Google Play Store
Download the most loved Klive App for your Android phone or tablet.
ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಮೂಡಿಸಲು ಕರ್ನಾಟಕ ರಾಜ್ಯ ವಿಜ್ಞಾನ ಪರೀಷತ್ ನಿಂದ ಫೆ.27,28ರಂದು ರಾಜ್ಯ ಮಟ್ಟದ ಯುವ ವಿಜ್ಞಾನಿಗಳ ಸಮಾವೇಶ ಆಯೋಜಿಸಲಾಗಿದೆ ಎಂದು ಪರಿಷತ್ ಉಪಾಧ್ಯಕ್ಷ ಎಚ್.ಜಿ.ಹುದ್ದಾರ ಅವರು ತಿಳಿಸಿದರು.
ಬಾಗಲಕೋಟೆ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಂಬಿಎ ಕಾಲೇಜಿನಲ್ಲಿ ಆಯೋಜಿಸಲಾಗಿರುವ ಸಮ್ಮೇಳನದಲ್ಲಿ ಪ್ರತಿ ಜಿಲ್ಲೆಯಿಂದ ಆಯ್ಕೆಯಾದ ಇಬ್ಬರು ಯುವ ವಿಜ್ಞಾನಿಗಳು ಸೇರಿದಂತೆ 70 ವಿದ್ಯಾರ್ಥಿಗಳು, ಮಾರ್ಗದರ್ಶಿ ಶಿಕ್ಷಕರು ಭಾಗವಹಿಸಲಿದ್ದಾರೆ ಎಂದರು.
ವಿಜ್ಞಾನ ಆಸಕ್ತರು ಸೇರಿದಂತೆ 200 ಜನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮೊದಲ ಬಾರಿಗೆ ಬಾಗಲಕೋಟೆಯಲ್ಲಿ ಸಮ್ಮೇಳನ ಆಯೋಜಿಸಲಾಗಿದೆ.ಫೆ.28 ರಂದು ಇಸ್ರೋ ನಿವೃತ್ತ ವಿಜ್ಞಾನಿ ಎಸ್. ಹಿರಿಯಣ್ಣ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.
ರಾಜ್ಯ ಮಟ್ಟದಲ್ಲಿ ಯುವ ವಿಜ್ಞಾನಿಗಳಾಗಿ ಆಯ್ಕೆಯಾಗುವ ನಾಲ್ಕು ವಿದ್ಯಾರ್ಥಿಗಳಿಗೆ ತಲಾ 10 ಸಾವಿರ ರೂ. ಬಹುಮಾನ, ಪ್ರಶಸ್ತಿ ಪತ್ರ ವಿತರಿಸಲಾಗುತ್ತದೆ. ಬಾಹ್ಯಾಕಾಶ ವೀಕ್ಷಣೆ, ವಸ್ತು ಪ್ರದರ್ಶನ ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು. ಫೆ.27ರಂದು ಬೆಳಗ್ಗೆ 10ಕ್ಕೆ ಶಾಸಕ ವೀರಣ್ಣ ಚರಂತಿಮಠ ಸಮಾವೇಶ ಉದ್ಘಾಟಿಸಲಿದ್ದು, 28ರಂದು ಪ್ರಶಸ್ತಿ ವಿತರಿಸಲಿದ್ದಾರೆ ಎಂದರು.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
KLIVE at Google News App
KLIVE Android App on Google Play Store
Download the most loved Klive App for your Android phone or tablet.
ದ್ವಿತೀಯ ಇನ್ನಿಂಗ್ಸ್ ನಲ್ಲೂ ಬ್ಯಾಟಿಂಗ್ ವೈಭವ ಮುಂದುವರಿಸಿದ ಕರ್ನಾಟಕಕ್ಕೆ ಬೌಲಿಂಗ್ ನಲ್ಲಿ ಲೆಗ್ ಸ್ಪಿನ್ನರ್ ಶ್ರೇಯಸ್ ಗೋಪಾಲ್ ಭರವಸೆ ತುಂಬಿದರು. ಇದರ ಪರಿಣಾಮ ರಣಜಿ ಕ್ರಿಕೆಟ್ ಟೂರ್ನಿಯ ಎಲೈಟ್ ಸಿ ಗುಂಪಿನ ಪಂದ್ಯದಲ್ಲಿ ತಂಡ ಗೆಲುವಿನತ್ತ ಹೆಜ್ಜೆ ಹಾಕಿತು.
ಚೆನ್ನೈನ ಐಐಟಿ ಕೆಮ್ ಪ್ಲಾಸ್ಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಜಮ್ಮು ಮತ್ತು ಕಾಶ್ಮೀರ ತಂಡದ ಗೆಲುವಿಗೆ ಕರ್ನಾಟಕ 508 ರನ್ ಗಳ ಗುರಿ ನೀಡಿತು. ಮೂರನೇ ದಿನದಾಟದ ಮುಕ್ತಾಯಕ್ಕೆ ಜಮ್ಮು ಮತ್ತು ಕಾಶ್ಮೀರ ನಾಲ್ಕು ವಿಕೆಟ್ ಕಳೆದುಕೊಂಡು 189 ರನ್ ಗಳಿಸಿತು. ಗೆಲುವಿಗೆ ಇನ್ನೂ 319 ರನ್ ಗಳಿಸಬೇಕಾಗಿದೆ.
ಮೊದಲ ಇನ್ನಿಂಗ್ಸ್ ನಲ್ಲಿ 302 ರನ್ ಗಳಿಸಿರುವ ಕರ್ನಾಟಕ ಎರಡನೇ ದಿನವಾದ ಶುಕ್ರವಾರ ಜಮ್ಮು ಮತ್ತು ಕಾಶ್ಮೀರವನ್ನು ಮೊದಲ ಇನ್ನಿಂಗ್ಸ್ ನಲ್ಲಿ 93 ರನ್ ಗಳಿಗೆ ಆಲೌಟ್ ಮಾಡಿ ಭಾರೀ ಮುನ್ನಡೆ ಸಾಧಿಸಿತ್ತು. ದಿನದಾಟದ ಅಂತ್ಯಕ್ಕೆ ಎರಡು ವಿಕೆಟ್ ಕಳೆದುಕೊಂಡು 128 ರನ್ ಕಲೆಹಾಕಿತು.
ಶನಿವಾರ ಕರ್ನಾಟಕದ ಒಂದು ವಿಕೆಟ್ ಉರುಳಿಸಲಷ್ಟೇ ಜಮ್ಮು ಮತ್ತು ಕಾಶ್ಮೀರ ತಂಡಕ್ಕೆ ಸಾಧ್ಯವಾಯಿತು. ಶುಕ್ರವಾರ ಕ್ರಿಸ್ ನಲ್ಲಿದ್ದ ಕರುಣ್ ನಾಯರ್ ಮತ್ತು ಕೆ.ವಿ. ಸಿದ್ಧಾರ್ಥ್ ಅವರು ಅಮೋಘ ಆಟವಾಡಿ ತಂಡದ ಮುನ್ನಡೆಯನ್ನು ಹೆಚ್ಚಿಸಿದರು.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
KLIVE at Google News App
KLIVE Android App on Google Play Store
Download the most loved Klive App for your Android phone or tablet.
ಶ್ರೇಯಸ್ ಅಯ್ಯರ್ ಅವರ ಅಮೋಘ ಅರ್ಧಶತಕ ಮತ್ತು ಆಲ್-ರೌಂಡರ್ ರವೀಂದ್ರ ಜಡೇಜಾ ಅವರ ಸಿಡಿಲಬ್ಬರದ ಬ್ಯಾಟಿಂಗ್ ಬಲದಿಂದ ಮಿಂಚಿದ ಭಾರತ ತಂಡ ಪ್ರವಾಸಿ ಶ್ರೀಲಂಕಾ ವಿರುದ್ಧದ ಟಿ-20 ಸರಣಿಯ ಎರಡನೇ ಪಂದ್ಯದಲ್ಲಿ 7 ವಿಕೆಟ್ ಗಳ ಭರ್ಜರಿ ಗೆಲುವು ಪಡೆದುಕೊಂಡಿದೆ. ಈ ಮೂಲಕ ಮೂರು ಪಂದ್ಯಗಳ ಸರಣಿಯನ್ನು ಒಂದು ಪಂದ್ಯ ಬಾಕಿ ಇರುವಂತೆ ವಶಪಡಿಸಿಕೊಂಡಿತು. ಟೀಮ್ ಇಂಡಿಯಾ ಪಾಲಿಗೆ ಇದು ಸತತ 11ನೇ ಟಿ-20 ಗೆಲುವಾಗಿದೆ.
ಧರ್ಮಶಾಲಾ ಸ್ಟೇಡಿಯಂನಲ್ಲಿ ನಿನ್ನೆ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು. ಮೊದಲು ಬ್ಯಾಟ್ ಮಾಡಿದ ಲಂಕ ಬಳಗ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 183 ರನ್ ಗಳಿಸಿತು. ಗುರಿಯನ್ನು ಬೆನ್ನಟ್ಟಿದ ಭಾರತ ಇನ್ನು 17 ಎಸೆತಗಳು ಬಾಕಿ ಇರುವಂತೆಯೇ 3 ವಿಕೆಟ್ ನಷ್ಟಕ್ಕೆ 186 ರನ್ ಗಳಿಸಿ ಗೆಲುವು ಸಾಧಿಸಿತು.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
KLIVE at Google News App
KLIVE Android App on Google Play Store
Download the most loved Klive App for your Android phone or tablet.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಅನುಸೂಚಿತ ಜಾತಿ ಮತ್ತು ಬುಡಕಟ್ಟುಗಳ ಅನುದಾನ ಹಂಚಿಕೆ ಕಾಯ್ದೆಯಲ್ಲಿನ 7 ಡಿ ಸೆಕ್ಷನ್ ಅನ್ನೋದು ಪಡಿಸಲಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಅವರು ತಿಳಿಸಿದ್ದಾರೆ. ಈ ತಿದ್ದುಪಡಿಯಿಂದ ಪರಿಶಿಷ್ಟ ಜಾತಿ, ಪಂಗಡದ ಜನರ ಅಭಿವೃದ್ಧಿಗೆ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.
ಬೆಂಗಳೂರಿನ ಲಿಡ್ಕರ್ ಭವನದಲ್ಲಿ ದಲಿತ ಸಂಘರ್ಷ ಸಮಿತಿ ಸಂಘಟನೆಗಳ ಒಕ್ಕೂಟ ಆಯೋಜಿಸಿದ್ದ ಎಸ್ ಸಿ ಪಿ, ಟಿ ಎಸ್ ಪಿ ಕಾಯ್ದೆ ಅಡಿ ಮೀಸಲಿಟ್ಟ ಹಣ ಹಲವು ಇಲಾಖೆಗಳಲ್ಲಿ ಖರ್ಚಾಗುವುದಿಲ್ಲ. ಈ ರೀತಿ ಖರ್ಚಾಗದ ಹಣವನ್ನು ಕಾಯ್ದೆಯ ಸೆಕ್ಷನ್ 7ಡಿ ಅಡಿಯಲ್ಲಿ ಸರ್ಕಾರಕ್ಕೆ ವಾಪಸ್ ಪಡೆಯಲು ಅವಕಾಶವಿದೆ. ಇದರಿಂದಾಗಿ ಪ.ಜಾತಿ, ಪಂಗಡದ ಜನರಿಗೆ ಮೀಸಲಿಟ್ಟ ಹಣ ಪುನಃ ಸರ್ಕಾರದ ಪಾಲಾಗುತ್ತಿದೆ ಎಂದರು.
ನಾನು ಮುಖ್ಯಮಂತ್ರಿಯಾಗಿದ್ದಾಗ ಮಂಡನೆ ಮಾಡಿದ ಬಜೆಟ್ ಗಾತ್ರ 2.02 ಲಕ್ಷ ಕೋಟಿ ರೂಪಾಯಿಗಳಷ್ಟು ಇತ್ತು. ಆಗ ಎಸ್ ಸಿಪಿ- ಟಿಎಸ್ ಪಿ ಯೋಜನೆ ಗೆ ಸುಮಾರು 29 ಸಾವಿರ ಕೋಟಿ ರೂಪಾಯಿ ಮೀಸಲಿಟ್ಟಿದೆ.
ಈಗಿನ ಸರ್ಕಾರ 26 ಸಾವಿರ ಕೋಟಿ ರೂಪಾಯಿ ಮಾತ್ರ ನೀಡಿದೆ ಎಂದರು. ಈ ಸಂದರ್ಭದಲ್ಲಿ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್, ಅರ್ಥಶಾಸ್ತ್ರಜ್ಞ ಪ್ರೊ. ಟಿ. ಆ. ಚಂದ್ರಶೇಖರ್ ಇನ್ನು ಮುಂತಾದವರು ಉಪಸ್ಥಿತರಿದ್ದರು.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
KLIVE at Google News App
KLIVE Android App on Google Play Store
Download the most loved Klive App for your Android phone or tablet.
ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ 2.0 ಅನ್ನು ಭಾನುವಾರದಿಂದ ಆರಂಭಿಸಲಿದೆ. ಇದೇ ವೇಳೆ ಕಾಂಗ್ರೆಸ್ ಜನವಿರೋಧಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಆಡಳಿತಾರೂಢ ಬಿಜೆಪಿ ಭಾನುವಾರ ಬೆಂಗಳೂರು ಹೊರತುಪಡಿಸಿ ರಾಜ್ಯಾದ್ಯಂತ ರಸ್ತೆಗಿಳಿದು ಹೋರಾಟಕ್ಕೆ ಸಜ್ಜಾಗಿದೆ. ಇದರೊಂದಿಗೆ ಎರಡು ಪ್ರಧಾನ ಪಕ್ಷಗಳು ಪರಸ್ಪರ ಕದನಕ್ಕೆ ಇಳಿದಂತಾಗಿದೆ.
ಮೇಕೆದಾಟು ಪಾದಯಾತ್ರೆಯ ಮೊದಲ ಹಂತ ಸುಗಮ ದಿಂದ ರಾಮನಗರದ ವರೆಗೆ ನಾಲ್ಕು ದಿನ ನಡೆದಿದೆ. ಬಳಿಕ ಕೋರ್ಟ್ ಸೂಚನೆ ಮೇರೆಗೆ ನಿಲ್ಲಿಸಲಾಗಿತ್ತು. ಬೆಂಗಳೂರು ನಗರಕ್ಕೆ ನೀರು ಒದಗಿಸಬಹುದಾದ ಮೇಕೆದಾಟು ಯೋಜನೆ ಜಾರಿಗೆ ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರ್ಕಾರಗಳು ವಿಳಂಬ ಮಾಡುತ್ತಿವೆ ಎನ್ನುವುದು ಕಾಂಗ್ರೆಸ್ ನ ಪ್ರಮುಖ ಆರೋಪವಾಗಿದೆ.
ಭಾನುವಾರದಂದು ರಾಮನಗರದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರಿಂದ ಉದ್ಘಾಟನೆ ಗೊಳ್ಳುವ ಪಾದಯಾತ್ರೆಯಲ್ಲಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಎಲ್ಲ ಪ್ರಮುಖ ಕಾಂಗ್ರೆಸ್ ನಾಯಕರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
ಮಾರ್ಚ್ ಮೂರರಂದು ಪಾದಯಾತ್ರೆ ಸಮಾರೋಪಗೊಳ್ಳಲಿದೆ ಎನ್ನಲಾಗಿದೆ.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
KLIVE at Google News App
KLIVE Android App on Google Play Store
Download the most loved Klive App for your Android phone or tablet.
ರಷ್ಯಾ ಸೇನಾ ಪಡೆಗಳ ಘೋರ ದಾಳಿಯ ನಡುವೆಯೂ ಕದನ ಭೂಮಿಯಲ್ಲಿ ಎದೆಸೆಟೆಸಿ ನಿಂತಿರುವ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೊಲೆನ್ ಸ್ಕಿ , ನಾನು ತಾಯ್ನಾಡಿನಲ್ಲಿ ಇದ್ದೇನೆ. ಇಲ್ಲಿಂದ ಪಲಾಯನ ಮಾಡುವುದು ನನಗೆ ಇಷ್ಟವಿಲ್ಲ. ಯಾರು ನೀಡುವ ರಕ್ಷಣೆ ಅಗತ್ಯ ಬೇಕಿಲ್ಲ. ನನಗೆ ಸದ್ಯ ಬೇಕಿರುವುದು ಮದ್ದುಗುಂಡುಗಳ ನೆರವು ಎಂದು ಹೇಳಿದ್ದಾರೆ.
ರಾಜಧಾನಿ ಕೀವ್ ನಗರದಲ್ಲಿ ಇರುವ ಝೆಲೆನ್ ಸ್ಕಿ ಅವರಿಗೆ ಆಪತ್ತು ಎದುರಾಗಿದೆ. ಹೆಚ್ಚು ಕಾಲ ಅಲ್ಲಿರುವುದು ಕ್ಷೇಮವಲ್ಲ. ಸುರಕ್ಷಿತ ನೆಲೆಗೆ ಬಂದು ಬಿಡಿ. ನಾವು ನೆರವು ನೀಡುತ್ತೇವೆ ಎಂದು ಅಮೆರಿಕಾ ನೆರವಿನ ಹಸ್ತ ಚಾಚಿತ್ತು. ಆದರೆ ಇದನ್ನು ದಿಟ್ಟತನದಿಂದಲೇ ತಿರಸ್ಕರಿಸಿರುವ ಝೆಲೆನ್ ಸ್ಕಿ, ನನಗೆ ಈಗ ಬೇಕಿರುವುದು ಪಲಾಯನದ ನೆರವಲ್ಲ. ಬದಲಿಗೆ ಶತ್ರುಗಳನ್ನು ಎದುರಿಸಲು ಮದ್ದುಗುಂಡು ಎಂದಿದ್ದಾರೆ. ಮಾಧ್ಯಮಗಳು ಝೆಲೆನ್ ಸ್ಕಿ ದೇಶ ಬಿಟ್ಟು ಹೋಗಿದ್ದಾರೆ ಎಂದು ವರದಿ ಮಾಡಿದ್ದವು. ಸುಳ್ಳು ಸುದ್ದಿ ನಂಬಬೇಡಿ. ನಾನು ನಿಮ್ಮೊಂದಿಗೆ ಇದ್ದೇನೆ. ಎಂದು ಧೈರ್ಯ ಹೇಳಿದರು ನಗರದಲ್ಲಿ ತಾವಿರುವ ತಾಣದ ಸೆಲ್ಫಿ ಹಾಕಿದ್ದಾರೆ. ದಶ ದಿಕ್ಕುಗಳಿಂದಲೂ ಮುತ್ತಿಗೆ ಹಾಕಿರುವ ರಷ್ಯಾ ಸೇನಾಪಡೆಗಳು ಶನಿವಾರ ಬೆಳಿಗ್ಗೆ ಉಕ್ರೇನ್ ರಾಜಧಾನಿ ಕೀವ್ ಸನಿಹಕ್ಕೆ ಬಂದಿವೆ. ಹೀಗಾಗಿ ಬೀದಿಗಿಳಿಯದಂತೆ ನಾಗರಿಕರಿಗೆ ಉಕ್ರೇನ್ ಸರ್ಕಾರ ಮನವಿ ಕೆಚ್ಚೆದೆಯಿಂದ ಎದುರಾಳಿಗಳನ್ನು ಹಿಮ್ಮೆಟ್ಟಿಸಲು ಸೆಣಸಾಡುತ್ತಿದೆ.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
KLIVE at Google News App
KLIVE Android App on Google Play Store
Download the most loved Klive App for your Android phone or tablet.
ದೇಶದಲ್ಲಿ ರೇಷ್ಮೆಇಂಡಸ್ಟ್ರಿಯು ವರ್ಷಕ್ಕೆ ಒಂದು ಲಕ್ಷ ಕೋಟಿ ವ್ಯವಹರಿಸುತ್ತಾ ಪ್ರಮುಖ ಉದ್ಯಮಗಳಲ್ಲಿ ಒಂದಾಗಿ ಹೊರಹೊಮ್ಮಿರುವುದು ಸಂತಸದ ಸಂಗತಿ ಎಂದು ಬೆಂಗಳೂರು ಕೇಂದ್ರ ರೇಷ್ಮೆ ತಾಂತ್ರಿಕ ಸಂಶೋಧನಾ ಸಂಸ್ಥೆ ನಿರ್ದೇಶಕ ಡಾ. ಸುಭಾಷ ವಿ. ನಾಯಿಕ ಅವರು ತಿಳಿಸಿದ್ದಾರೆ.
ವಿಶ್ವದ 20 ದೇಶಗಳಲ್ಲಿ ಚೀನಾ ಮೊದಲ ಸ್ಥಾನ ಹಾಗೂ ಭಾರತವು ಎರಡನೇ ಸ್ಥಾನ ಪಡೆದಿದೆ. ಇತ್ತೀಚಿಗೆ ಚೀನಾ ರೇಷ್ಮೆ ತಯಾರಿಕೆಯಲ್ಲಿ ಹಿಂದಿದೆ. ಭಾರತವು ಮುನ್ನುಗ್ಗಿ ಮೊದಲ ಸ್ಥಾನ ಪಡೆಯುವ ಸನಿಹದಲ್ಲಿದೆ. ದೇಶವು 35 ಸಾವಿರ ಮೆಟ್ರಿಕ್ ಟನ್ ರೇಷ್ಮೆ ಉತ್ಪಾದನೆ ಮಾಡುತ್ತಿದೆ. ಸಿಲ್ಕ್ ಸಮಗ್ರ 2 ಯೋಜನೆಗೆ ಯೋಜನೆ ಜಾರಿಯಾದಲ್ಲಿ ರೇಷ್ಮೆ ಕೈಮಗ್ಗ ನೇಕಾರರಿಗೆ ಹೆಚ್ಚು ಅನುಕೂಲ ದೊರೆಯಲಿದೆ. ಇದರಲ್ಲಿ ಮೊಳಕಾಲ್ಮುರು ಕೈಮಗ್ಗ ರೇಷ್ಮೆಸೀರೆ ನೇಕಾರರಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಹೇಳಿದರು.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
KLIVE at Google News App
KLIVE Android App on Google Play Store
Download the most loved Klive App for your Android phone or tablet.
ಬಿ.ಎಸ್. ಯಡಿಯೂರಪ್ಪನವರ ಪೂರ್ಣ ಹೆಸರು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ. ಇವರು ಫೆ. 27, 1943ರಂದು ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಬೂಕನಕೆರೆಯಲ್ಲಿ ಜನಿಸಿದರು. ತುಮಕೂರು ಜಿಲ್ಲೆಯ ಯಡಿಯೂರು ಊರಿನಲ್ಲಿರುವ ಸಿದ್ಧಲಿಂಗೇಶ್ವರ ದೇವರ ಹೆಸರನ್ನು ಇವರಿಗೆ ನಾಮಕರಣ ಮಾಡಲಾಗಿದೆ. ಇವರ ತಂದೆ ಸಿದ್ದಲಿಂಗಪ್ಪ ಮತ್ತು ತಾಯಿ ಪುಟ್ಟತಾಯಮ್ಮ. ಯಡಿಯೂರಪ್ಪನವರಿಗೆ ನಾಲ್ಕು ವರ್ಷವಿರುವಾಗಲೇ ತಾಯಿ ವಿಧಿವಶರಾದರು. ಮಂಡ್ಯದ ಪಿಇಎಸ್ ಕಾಲೇಜಿನಲ್ಲಿ ಪದವಿಪೂರ್ವ ಶಿಕ್ಷಣವನ್ನು ಪೂರೈಸಿದ್ದಾರೆ.
1965ರಲ್ಲಿ ಸಮಾಜ ಕಲ್ಯಾಣ ಇಲಾಖೆಯಲ್ಲಿ ಪ್ರಥಮ ದರ್ಜೆಯ ಗುಮಾಸ್ತರಾಗಿ ವೃತ್ತಿಜೀವನ ಆರಂಭಿಸಿದರು. ನಂತರ ಕೆಲಸಕ್ಕೆ ರಾಜೀನಾಮೆ ನೀಡಿ ಶಿಕಾರಿಪುರಕ್ಕೆ ತೆರಳಿ, ವೀರಭದ್ರ ಶಾಸ್ತ್ರಿಯವರ ಶಂಕರ ಅಕ್ಕಿ ಗಿರಣಿಯಲ್ಲಿ ಗುಮಾಸ್ತರಾಗಿ ಸೇರಿದರು.
1967ರಲ್ಲಿ ಮೈತ್ರಾದೇವಿಯವರನ್ನು ವಿವಾಹವಾದರು. ನಂತರ ಶಿವಮೊಗ್ಗದಲ್ಲಿ ಹಾರ್ಡ್‍ವೇರ್ ಮಳಿಗೆಯನ್ನು ತೆರೆದರು. ವಿಜಯೇಂದ್ರ, ರಾಘವೇಂದ್ರ, ಅರುಣಾದೇವಿ, ಪದ್ಮಾವತಿ, ಉಮಾದೇವಿಯವರು ಯಡಿಯೂರಪ್ಪನವರ ಮಕ್ಕಳು. 2004ರಲ್ಲಿ ಪತ್ನಿ ಮೈತ್ರಾದೇವಿಯವರು ಮರಣ ಹೊಂದಿದರು.
ಎಸ್.ಯಡಿಯೂರಪ್ಪನವರು ಕಾಲೇಜು ದಿನಗಳಲ್ಲೇ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸದಸ್ಯರಾಗಿದ್ದರು. 1970ರಲ್ಲಿ ಆರ್ರ್ ಎಸ್‍ಎಸ್‍ನ ಶಿಕಾರಿಪುರ ಘಟಕದ ಕಾರ್ಯ ನಿರ್ವಾಹಕರಾಗಿ ನೇಮಕಗೊಳ್ಳುವ ಮೂಲಕ ಸಾರ್ವಜನಿಕ ಜೀವನ ಪ್ರವೇಶಿಸಿದರು. ಜನಸಂಘದ ಶಿಕಾರಿಪುರ ತಾಲೂಕು ಅಧ್ಯಕರಾಗಿಯೂ ನೇಮಕಗೊಂಡರು. ನಂತರ 1972ರಲ್ಲಿ ಶಿಕಾರಿಪುರ ನಗರ ಪಾಲಿಕೆಗೆ ಚುನಾಯಿತರಾದರು. ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಬಂಧಿತರಾದ ಯಡಿಯೂರಪ್ಪನವರು ಬಳ್ಳಾರಿ ಮತ್ತು ಶಿವಮೊಗ್ಗ ಜೈಲಿನಲ್ಲಿದ್ದರು. 1985ರಲ್ಲಿ ಬಿಜೆಪಿಯ ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷರಾಗಿ ನೇಮಕಗೊಂಡರು. 1988ರಲ್ಲಿ ಕರ್ನಾಟಕದ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡರು. 1983ರಲ್ಲಿ ಶಿಕಾರಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ವಿಧಾನಸಭೆ ಪ್ರವೇಶಿಸಿದರು. ನಂತರ ಒಟ್ಟು ಆರು ಬಾರಿ ಶಿಕಾರಿಪುರ ಕ್ಷೇತ್ರದ ಶಾಸಕರಾದರು. ಏಳು, ಎಂಟು, ಒಂಬತ್ತು, ಒಂಬತ್ತು, ಹತ್ತು, ಹನ್ನೆರಡು ಮತ್ತು ಹದಿಮೂರನೇ ವಿಧಾನಸಭೆಯ ಸದಸ್ಯರಾದರು.
1994ರ ವಿಧಾನಸಭೆ ಚುನಾವಣೆ ನಂತರ ವಿಧಾನಸಭೆಯ ಪ್ರತಿಪಕ್ಷ ನಾಯಕರಾದರು. 1999ರ ವಿಧಾನಸಭೆ ಚುನಾವಣೆಯಲ್ಲಿ ಸೋಲನ್ನನುಭವಿಸಿದ ಇವರು ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದರು.
2004ರ ಚುನಾವಣೆಯಲ್ಲಿ ಪುನಃ ವಿಧಾನಸಭೆಗೆ ಆಯ್ಕೆಯಾಗಿ ಪ್ರತಿಪಕ್ಷ ನಾಯಕರಾದರು.
2008ರ ವಿಧಾನಸಭಾ ಚುನಾವಣೆಯಲ್ಲಿ ಯಡಿಯೂರಪ್ಪನವರು ಶಿಕಾರಿಪುರ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದರು. ಕಾಂಗ್ರೆಸ್ ಮತ್ತು ಜೆಡಿಎಸ್ ಬೆಂಬಲದೊಂದಿಗೆ ಸಮಾಜವಾದಿ ಪಕ್ಷದಿಂದ ಸ್ಪರ್ಧಿಸಿದ್ದ ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರನ್ನು ಆಗ ಯಡಿಯೂರಪ್ಪನವರು 45,000ಕ್ಕೂ ಹೆಚ್ಚು ಮತಗಳ ಅಂತರದಿಂದ ಸೋಲಿಸಿದ್ದರು. ಆಗ ರಾಜ್ಯದಲ್ಲಿ ಬಿಜೆಪಿಗೆ ಬಹುಮತ ದೊರೆತು, ದಕ್ಷಿಣ ಭಾರತದ ಮೊಟ್ಟ ಮೊದಲ ಬಿಜೆಪಿ ಸರಕಾರ ಕರ್ನಾಟಕದಲ್ಲಿ ರಚನೆಗೊಂಡಿತು. ಮೇ 30, 2008ರಂದು ಮುಖ್ಯಮಂತ್ರಿಯಾಗಿ ಯಡಿಯೂರಪ್ಪನವರು ಎರಡನೇ ಬಾರಿ ಅಧಿಕಾರ ಸ್ವೀಕರಿಸಿದರು.
ಜುಲೈ 31, 2011ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪನವರು ರಾಜೀನಾಮೆ ನೀಡಿದರು. ನಂತರ ನವೆಂಬರ್ 30, 2011ರಂದು ಶಾಸಕ ಸ್ಥಾನ ಮತ್ತು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೂ ಯಡಿಯೂರಪ್ಪ ರಾಜೀನಾಮೆ ನೀಡಿದರು. 2011ರ ಏಪ್ರಿಲ್‍ನಲ್ಲಿ ಕರ್ನಾಟಕ ಜನತಾ ಪಕ್ಷ ಎಂಬ ನೂತನ ಪಕ್ಷವನ್ನು ನೋಂದಾಯಿಸಿದರು. 2012ರಲ್ಲಿ ಕರ್ನಾಟಕ ಜನತಾ ಪಕ್ಷಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು. 2013ರ ಮೇನಲ್ಲಿ ಕರ್ನಾಟಕ ಜನತಾ ಪಕ್ಷದಿಂದ ಶಿಕಾರಿಪುರ ಕ್ಷೇತ್ರದಲ್ಲಿ ಸ್ಪರ್ಧಿಸಿ ವಿಧಾನಸಭೆಗೆ ಆಯ್ಕೆಯಾದರು.
ನವೆಂಬರ್ 2013ರಲ್ಲಿ ಯಾವುದೇ ಷರತ್ತಿಲ್ಲದೇ ಬಿಜೆಪಿಗೆ ಹಿಂದಿರುಗುವುದಾಗಿ ಯಡಿಯೂರಪ್ಪ ಘೋಷಿಸಿದರು. ಜನವರಿ 2, 2014ರಂದು ಬಿಜೆಪಿಯಲ್ಲಿ ಕೆಜೆಪಿಯನ್ನು ವಿಲೀನಗೊಳಿಸಿದರು. ನಂತರ 2014ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ 3,63,305 ಅಂತರದಿಂದ ಜಯಗಳಿಸಿದರು.
ಯಡಿಯೂರಪ್ಪನವರು ನವೆಂಬರ್ 12,2007 ರಂದು, ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ರಾಜ್ಯಪಾಲ ರಾಮೇಶ್ವರ ಠಾಕೂರ್ ಅವರ ಸಮ್ಮುಖದಲ್ಲಿ ಅಧಿಕಾರ ಸ್ವೀಕರಿಸಿದರು. ಈ ಮೂಲಕ ದಕ್ಷಿಣ ಭಾರತ ರಾಜ್ಯಗಳಲ್ಲಿ, ಬಿಜೆಪಿ ಪಕ್ಷದ ಮೊದಲ ಮುಖ್ಯಮಂತ್ರಿಯೆನಿಸಿದರು.
ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರಕಾರದಲ್ಲಿ ಯಡಿಯೂರಪ್ಪನವರು ಉಪ ಮುಖ್ಯಮಂತ್ರಿಯಾದರು. ಮೊದಲ 20 ತಿಂಗಳು ಕುಮಾರಸ್ವಾಮಿಯವರು ಮುಖ್ಯಮಂತ್ರಿ ಮತ್ತು ನಂತರದ 20 ತಿಂಗಳು ಯಡಿಯೂರಪ್ಪನವರು ಮುಖ್ಯಮಂತ್ರಿ ಎಂದು ಸರಕಾರ ರಚನೆ ಸಂದರ್ಭದಲ್ಲಿ ಉಭಯ ಪಕ್ಷಗಳ ನಡುವೆ ಒಪ್ಪಂದವಾಗಿತ್ತು. ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗ ಉಪಮುಖ್ಯಮಂತ್ರಿ ಯಡಿಯೂರಪ್ಪನವರು ಹಣಕಾಸು ಖಾತೆಗೂ ಸಚಿವರಾಗಿದ್ದರು.
ನ. 12, 2007ರಂದು ಮುಖ್ಯಮಂತ್ರಿಯಾಗಿ ಯಡಿಯೂರಪ್ಪನವರು ಪ್ರಮಾಣವಚನ ಸ್ವೀಕರಿಸಿದರು. ಆದರೆ ಸಚಿವರಿಗೆ ಖಾತೆ ಹಂಚಿಕೆ ವೇಳೆ ಭಿನ್ನಮತ ಉಲ್ಬಣಗೊಂಡಿತು. ಬಿಜೆಪಿ ಮತ್ತು ಜೆಡಿಎಸ್ ನಡುವಿನ ಸಮ್ಮಿಶ್ರ ಸರಕಾರ ಅಂತ್ಯಗೊಂಡು, ಯಡಿಯೂರಪ್ಪನವರು ನವೆಂಬರ್ 19, 2007ರಂದು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದರು.
ಹೆಣ್ಣುಮಕ್ಕಳಿಗೆ ಲಕ್ಷ್ಮಿ ಭಾಗ್ಯ ಯೋಜನೆ, ಶಾಲಾ ವಿದ್ಯಾರ್ಥಿಗಳಿಗೆ ಶಾಲೆಗೆ ತೆರಳಲು ಸೈಕಲ್, ರೈತರ ಬಜೆಟ್, ಹೀಗೆ ಹತ್ತು ಹಲವು ಯೋಜನೆಗಳನ್ನು ಯಡಿಯೂರಪ್ಪನವರು ಜಾರಿಗೆ ತಂದರು. ಬಿ.ಎಸ್ .ಯಡಿಯೂರಪ್ಪ ಅವರದ್ದು ಎಲ್ಲರನ್ನೂ ಒಳಗೊಂಡ ಪ್ರೇರಣಾರ್ಥಕ ಬದುಕು. ಇವರು ನೂರ್ಕಾಲ ಬಾಳಲಿ, ಜನರ ಬದುಕಿಗೆ ಸ್ಪೂರ್ತಿಯಾಗಲಿ ಎಂದು ಕೆ ಲೈವ್ ಮಾಧ್ಯಮ ಹಾರೈಸುತ್ತದೆ.