Thursday, February 19, 2026
Thursday, February 19, 2026
Home Blog Page 1696

ಸಹಾಯಕ ಪ್ರಾಧ್ಯಾಪಕರ ಹುದ್ದೆ ಪರೀಕ್ಷಾ ಅಭ್ಯರ್ಥಿಗಳಿಗೆ ವಸ್ತ್ರ ಸಂಹಿತೆ

0

ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಅಗತ್ಯವಿರುವ 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಅರ್ಜಿ ಹಾಕಿರುವ ಅಭ್ಯರ್ಥಿಗಳು, ಮಾರ್ಚ್ ಮಧ್ಯಭಾಗದಲ್ಲಿ ನಡೆಯಲಿರುವ ಸ್ಪರ್ಧಾತ್ಮಕ ಪರೀಕ್ಷೆಗೆ ಅಗತ್ಯವಿರುವ ಪ್ರವೇಶ ಪತ್ರವನ್ನು ಫೆ.28ರಿಂದ http://kea.kar.nic.in ಜಾಲತಾಣದಲ್ಲಿ ಡೌನ್-ಲೋಡ್ ಮಾಡಿಕೊಳ್ಳಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ರಮ್ಯಾ ತಿಳಿಸಿದ್ದಾರೆ.

ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ವಸ್ತ್ರಸಂಹಿತೆಯನ್ನೂ ನಿಗದಿಪಡಿಸಲಾಗಿದೆ. ನಿಷೇಧಿತ ವಸ್ತುಗಳ ಪಟ್ಟಿಯನ್ನೂ ತಿಳಿಸಲಾಗಿದೆ. ಈ ಪರೀಕ್ಷೆಯು ಮಾರ್ಚ್ 12ರಿಂದ 16ರವರೆಗೆ ನಡೆಯಲಿದೆ.

ಈ ಬಗ್ಗೆ ಶನಿವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಇತ್ತೀಚಿನ 2 ಭಾವಚಿತ್ರ, ಪ್ರವೇಶಪತ್ರ, ಗುರುತಿನ ಚೀಟಿಗಳನ್ನು ಕಡ್ಡಾಯವಾಗಿ ತರಬೇಕು ಎಂದಿದ್ದಾರೆ.
ಆದರೆ, ಪರೀಕ್ಷಾ ಕೊಠಡಿಗೆ ಅಭ್ಯರ್ಥಿಗಳು ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳು (ಮೊಬೈಲ್, ಪೆನ್ ಡ್ರೈವ್, ಇಯರ್ ಫೋನ್, ಮೈಕ್ರೋಫೋನ್, ಬ್ಲೂಟೂತ್, ಕೈ ಗಡಿಯಾರ), ಆಹಾರ ಪದಾರ್ಥಗಳು, ಸ್ಟೇಷನರಿ ವಸ್ತುಗಳು (ಪೆನ್ಸಿಲ್, ಕಾಗದ, ಎರೇಸರ್, ಇಂಚುಪಟ್ಟಿ, ಜಾಮಿಟ್ರಿ ಪೆಟ್ಟಿಗೆ, ಕ್ಯಾಲ್ಕುಲೇಟರ್, ಲಾಗ್ ಟೇಬಲ್) ಮತ್ತು ವೈಯಕ್ತಿಕ ವಸ್ತುಗಳನ್ನು (ವ್ಯಾಲೆಟ್, ಅಲಂಕಾರಿಕ ಕನ್ನಡಕ, ಬೆಲ್ಟ್, ಟೋಪಿ, ಕ್ಯಾಮರಾ, ಆಭರಣಗಳು) ತರುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಪರೀಕ್ಷೆ ಬರೆಯಲಿರುವ ಪುರುಷ ಅಭ್ಯರ್ಥಿಗಳಿಗೆ ಕೋವಿಡ್ ಮಾರ್ಗದರ್ಶಿ ಸೂತ್ರಗಳ ಹಿನ್ನೆಲೆಯಲ್ಲಿ ಅರೆಪಾರದರ್ಶಕ ಸರ್ಜಿಕಲ್ ಮಾಸ್ಕ್ (ಎನ್-95 ಮತ್ತು ಇತರ ಬಗೆಯ ಮಾಸ್ಕ್ ನಿಷಿದ್ಧ) ಅರೆದೋಳಿನ ಅಂಗಿ ಮತ್ತು ಸಾದಾ ಪ್ಯಾಂಟ್ ಹಾಗೂ ಚಪ್ಪಲಿಗಳನ್ನು ಕಡ್ಡಾಯಗೊಳಿಸಲಾಗಿದೆ.

ಹಾಗೆಯೇ, ಮಹಿಳಾ ಅಭ್ಯರ್ಥಿಗಳಿಗೆ ಸರ್ಜಿಕಲ್ ಮಾಸ್ಕ್, ಅರೆದೋಳಿನ ಉಡುಪುಗಳನ್ನು ಸೂಚಿಸಲಾಗಿದೆ.
ಪುರುಷರಾಗಲಿ, ಮಹಿಳೆಯರಾಗಲಿ ತುಂಬುದೋಳಿನ ಉಡುಪು, ಶೂ, ಆಭರಣ (ಪದಕ, ಮೂಗುಬೊಟ್ಟು, ಕಿವಿಯೋಲೆ, ನೆಕ್ಲೇಸ್, ಬ್ರೇಸ್ಲೆಟ್) ಮತ್ತು ಆಲಂಕಾರಿಕ ಉಡುಪುಗಳನ್ನು ಧರಿಸಿಕೊಂಡು ಬರುವುದನ್ನು ನಿಷೇಧಿಸಲಾಗಿದೆ.
ಅಭ್ಯರ್ಥಿಗಳಿಗೆ ಯಾವುದೇ ಬ್ರ್ಯಾಂಡ್ ನ ಹೆಸರಿಲ್ಲದ ಸಾದಾ ಬಾಟಲಿಯಲ್ಲಿ ಕುಡಿಯುವ ನೀರನ್ನು ಪರೀಕ್ಷಾ ಕೊಠಡಿಗೆ ತೆಗೆದುಕೊಂಡು ಬರಲು ಅವಕಾಶ ಕೊಡಲಾಗಿದೆ ಎಂದು ಪ್ರಾಧಿಕಾರವು ಮಾಹಿತಿ ನೀಡಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ವಿವಿಧ ತಾಣಗಳಿಂದ ಭಾರತೀಯರ ಏರ್ ಲಿಫ್ಟ್

0

ಯುದ್ಧಪೀಡಿತ ಉಕ್ರೇನ್ ನಲ್ಲಿ ಸಿಲುಕಿರುವ ಭಾರತೀಯರ ಸ್ಥಳಾಂತರ ಕಾರ್ಯಾಚರಣೆಯ ಭಾಗವಾಗಿ 219 ವಿದ್ಯಾರ್ಥಿಗಳು ಶನಿವಾರ ಸಂಜೆ ಮುಂಬೈ ತಲುಪಿದ್ದಾರೆ.

ರೊಮೇನಿಯಾ ಮೂಲಕ ಇವರನ್ನು ಏರ್ ಇಂಡಿಯಾ ವಿಮಾನದ ಮೂಲಕ ಏರ್ ಲಿಫ್ಟ್ ಮಾಡಲಾಯಿತು ಎಂದು ತಿಳಿದುಬಂದಿದೆ.

ಸಂಜೆ 7.30ರ ವೇಳೆಗೆ ವಿಮಾನ ಮುಂಬೈ ತಲುಪಿದೆ. ದಿಲ್ಲಿಯಿಂದ ರೊಮೇನಿಯಾಗೆ ತೆರಳಬೇಕಿದ್ದ ಮತ್ತೊಂದು ವಿಮಾನಕ್ಕೆ ಅನುಮತಿ ಸಿಕ್ಕಿಲ್ಲವೆಂದು ತಿಳಿದುಬಂದಿದೆ.

ಶನಿವಾರ ಉಕ್ರೇನ್ ನಿಂದ ಜಹೋನಿ ಕ್ರಾಸಿಂಗ್ ಪಾಯಿಂಟ್ ಮೂಲಕ ಭಾರತೀಯ ವಿದ್ಯಾರ್ಥಿಗಳ ಮೊದಲ ಬ್ಯಾಚ್ ಹಂಗೇರಿ ಯನ್ನು ಪ್ರವೇಶಿಸಿದೆ. ವಿಮಾನದ ಮೂಲಕ ಭಾರತಕ್ಕೆ ಮರಳಲು ವಿದ್ಯಾರ್ಥಿಗಳನ್ನು ಬುಡಾಪೆಸ್ಟ್ ಗೆ ಕರೆದೊಯ್ಯಲಾಗುತ್ತಿದೆ ಎಂದು ಹಂಗೇರಿಯಲ್ಲಿ ಇರುವ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಉಕ್ರೇನ್ ಸಮರ ವಿಶ್ವಸಂಸ್ಥೆಯಲ್ಲಿ ತಟಸ್ಥ ನಿಲುವು ತಾಳಿದ ಭಾರತ

0

ಉಕ್ರೇನ್ ಮೇಲೆ ಆಕ್ರಮಣ ಮಾಡಿದ ರಷ್ಯಾದ ಕ್ರಮವನ್ನು ಖಂಡಿಸಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಮಂಡಿಸಲಾದ ನಿರ್ಣಯಕ್ಕೆ ಮತ ಚಲಾಯಿಸದೇ ಅಂತರ ಕಾಯ್ದುಕೊಳ್ಳುವ ಮೂಲಕ ಭಾರತ ತಟಸ್ಥ ಧೋರಣೆ ತಾಳಿದೆ.

ಭಾರತ ಮಾತ್ರವಲ್ಲದೆ ಉಕ್ರೇನ್ ಮೇಲೆ ಆಕ್ರಮಣ ಮಾಡಿದಾಗಿನಿಂದಲೂ ರಷ್ಯಾ ಪರವೇ ಮಾತನಾಡುತ್ತಿದ್ದ ಚೀನಾ ಸಹ ಮತದಾನದಿಂದ ದೂರ ಉಳಿದಿದೆ. ರಷ್ಯಾ ಆಕ್ರಮಣವನ್ನು ಖಂಡಿಸಿ 15 ಸದಸ್ಯ ರಾಷ್ಟ್ರಗಳುಳ್ಳ ವಿಶ್ವಸಂಸ್ಥೆ ಭದ್ರತಾ ಮಂಡಳಿ ಸಭೆಯಲ್ಲಿ ಅಮೇರಿಕಾ ಹಾಗೂ ಅಲ್ಬೇನಿಯಾ ನಿರ್ಣಯ ಮಂಡಿಸಿದವು. ನಿರ್ಣಯವನ್ನು ಮತಕ್ಕೆ ಹಾಕಿದಾಗ ಭಾರತ, ಯುಎಇ ಮತ್ತು ಚೀನಾ ಮತದಾನದಿಂದ ದೂರ ಉಳಿದವು.

ಭದ್ರತಾ ಮಂಡಳಿ ಸಭೆಯಲ್ಲಿ ಭಾರತದ ಮತ ಕುರಿತು ವಿವರಣೆ ನೀಡಿದ ವಿಶ್ವಸಂಸ್ಥೆಯಲ್ಲಿ ಭಾರತದ ಖಾಯಂ ಪ್ರತಿನಿಧಿ ಟಿ.ಎಸ್. ತಿರುಮೂರ್ತಿ, ಮತದಾನದಿಂದ ದೂರ ಉಳಿಯುವ ಮೂಲಕ ಬಿಕ್ಕಟ್ಟು ಶಮನಕ್ಕೆ ಪ್ರಯತ್ನಿಸುವ ಹಾಗೂ ಎರಡು ದೇಶಗಳ ಜೊತೆ ಮಾತುಕತೆ ನಡೆಸುವ ಮುಕ್ತವಾಗಿಸಿಕೊಂಡಿದ್ದೇವೆ ಎಂದು ದೇಶದ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ದೇಶ ರಕ್ಷಣೆಗೆ ಗನ್ ಹಿಡಿದ ಉಕ್ರೇನ್ ಸಂಸದೆ ಕಿರಾ ರುಡಿಕ್

0

ರಾಷ್ಟ್ರದ ಸೈನಿಕರನ್ನು ಹಿಮ್ಮೆಟ್ಟಿಸಲು ಉಕ್ರೇನ್ ನಲ್ಲಿ ಸೈನಿಕರು ಮಾತ್ರವಲ್ಲದೆ ನಾಗರಿಕರು ಸಹ ಹೋರಾಟಕ್ಕಿಳಿದಿರುವ ಬೆನ್ನಲ್ಲೇ ಸಂಸದೆ ಕಿರಾ ರುಡಿಕ್ ಅವರು ಸಹ ಕಲಾಶ್ನಿಕೋವ್ ಗನ್ ಹಿಡಿದು ನಿಂತಿದ್ದಾರೆ. ಈ ಕುರಿತ ಫೋಟೋ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಗನ್ ಹಿಡಿದು ನಿಂತಿರುವ ಫೋಟೋ ಟ್ವೀಟ್ ಮಾಡಿರುವ ಕಿರಾ , ನಾನು ಕಲಾಶ್ನಿಕೋವ್ ಗನ್ ಬಳಸುವುದು ಹೇಗೆ ಎಂಬುದನ್ನು ಇತ್ತೀಚಿಗಷ್ಟೇ ಕಲಿತೆ. ನಾವು ನಮ್ಮ ನೆಲದ ಹೆಣ್ಣು ಮಕ್ಕಳು ಸೇರಿ ಎಲ್ಲರನ್ನು ರಕ್ಷಿಸಲು ಬದ್ಧರಾಗಿದ್ದೇವೆ. ನಾನು ನನ್ನ ಕುಟುಂಬವನ್ನು ರಕ್ಷಿಸುವ ಜೊತೆಗೆ ಎಲ್ಲರ ರಕ್ಷಣೆಗಾಗಿ ಪ್ರತಿರೋಧ ಪಡೆಯಲು ರಚಿಸುತ್ತಿದ್ದೇನೆ. ಮುಂದಿನ ದಿನಗಳಲ್ಲಿ ರಷ್ಯಾ ಸೇನೆಯನ್ನು ಸಂಪೂರ್ಣವಾಗಿ ಹಿಮ್ಮೆಟ್ಟಿಸುವುದು ನಮ್ಮ ಗುರಿಯಾಗಿದೆ ಎಂದು ಹೇಳಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಭಾರತೀಯರನ್ನ ಕರೆ ತರುವಲ್ಲಿ ವಿದೇಶಾಂಗ ಇಲಾಖೆ ಅಹೋರಾತ್ರಿ ಶ್ರಮ

0

ರಷ್ಯಾ ದಾಳಿಯಿಂದ ತತ್ತರಿಸಿದ ಉಕ್ರೇನ್ ನಲ್ಲಿ ಸಿಲುಕಿರುವ ಭಾರತೀಯರನ್ನು ಸುರಕ್ಷಿತವಾಗಿ ಕರೆ ತರುವ ಕಾರ್ಯಾಚರಣೆ ಬಿರುಸುಗೊಂಡಿದೆ. 219 ಭಾರತೀಯರನ್ನು ಹೊತ್ತ ಏರ್ ಇಂಡಿಯಾ ವಿಮಾನ ಶನಿವಾರ ರೊಮೇನಿಯಾ ರಾಜಧಾನಿ ಬುಕಾರೆಸ್ಟ್ ನಿಂದ ಹೊರಟಿದ್ದು ರಾತ್ರಿ ವೇಳೆಗೆ ಮುಂಬಯಿ ತಲುಪಿದೆ. ಕೇಂದ್ರ ಸಚಿವ ಪಿಯೂಶ್ ಗೋಯಲ್ ಖುದ್ದು ವಿಮಾನ ನಿಲ್ದಾಣದಲ್ಲಿ ಹಾಜರಿದ್ದು ವಿದ್ಯಾರ್ಥಿಗಳನ್ನು ಬರಮಾಡಿಕೊಂಡರು.

ಏರ್ ಇಂಡಿಯಾದ ಎರಡನೇ ವಿಮಾನ ಬೆಳಿಗ್ಗೆ 11.40ಕ್ಕೆ ಹೊಸ ದಿಲ್ಲಿಯಿಂದ ಹೊರಟಿದ್ದು, ಸಂಜೆ 6.30ಕ್ಕೆ ಬುಕಾರೆಸ್ಟ್ ತಲುಪಿದೆ.
ಉಕ್ರೇನ್ ನಲ್ಲಿರುವ ಕೆಲವು ಭಾರತೀಯರು ಕಾಲ್ನಡಿಗೆಯಲ್ಲಿಯೇ ರೊಮೇನಿಯಾ ಗಡಿ ತಲುಪುತ್ತಿದೆ. ಅಲ್ಲಿಂದ ಮುಂದೆ ಬುಕಾರೆಸ್ಟ್ ಗೆ ಬಸ್ ನಲ್ಲಿ ಕರೆದೊಯ್ಯಲಾಗುತ್ತಿದೆ ಎಂದು ವಿದೇಶಾಂಗ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಉಕ್ರೇನ್ ನ ಕದನ ಭೂಮಿಯಿಂದ ಭಾರತೀಯರನ್ನು ಪಾರು ಮಾಡುವ ಕಾರ್ಯಾಚರಣೆ ಬಿರುಸಿನಿಂದ ನಡೆದಿದೆ. ಅದಕ್ಕಾಗಿ ನಮ್ಮ ತಂಡಗಳು ಅಹೋರಾತ್ರಿ ಶ್ರಮಿಸುತ್ತಿವೆ. ಖುದ್ದು ನಾನೇ ಅದರ ನಿರ್ವಹಿಸಿದ್ದೇನೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈ ಶಂಕರ್ ಅವರು ತಿಳಿಸಿದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಇಳಿಕೆ

0

ಕರ್ನಾಟಕದಲ್ಲಿ ಕೊರೋನಾ ಸೋಂಕಿನ ಸಂಖ್ಯೆ ದಿನದಿಂದ ದಿನಕ್ಕೆ ಕಡಿಮೆ ಆಗುತ್ತಿದೆ. ನಿನ್ನೆ 61,040 ಜನರಿಗೆ ಕೊರೋನಾ ಪರೀಕ್ಷೆ ನಡೆಸಲಾಗಿದೆ. 514 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. 19 ಜನರು ಮೃತಪಟ್ಟಿದ್ದಾರೆ. 6,940 ಸಕ್ರಿಯ ಪ್ರಕರಣಗಳಿವೆ.

ರಾಜ್ಯದಲ್ಲಿ ಸೋಂಕಿನ ಪ್ರಮಾಣ ಶೇ. 3.69 ರಷ್ಟಿದೆ. ಇದುವರೆಗೆ 39.40 ಲಕ್ಷ ಜನರು ಸೋಂಕಿಗೆ ಒಳಗಾಗಿದೆ. ಫೆ.26 ರಂದು 1,073ಜನರು ಮೃತರಾಗಿದ್ದಾರೆ.

ಫೆ.26 ರಂದು 1,073 ಜನರು ಗುಣಮುಖರಾಗಿದ್ದಾರೆ. ಗುಣಮುಖರಾದವರ ಸಂಖ್ಯೆ 38,93 ಲಕ್ಷಕ್ಕೆ ಏರಿಕೆಯಾಗಿದೆ. ಬಾಗಲಕೋಟೆ, ಗದಗ, ಮಂಡ್ಯ, ಹಾವೇರಿ, ರಾಯಚೂರು, ರಾಮನಗರ ಮತ್ತು ಹಾವೇರಿ, ಯಾದಗಿರಿಯಲ್ಲಿ ಯಾವುದೇ ಸೋಂಕಿತ ಪ್ರಕರಣಗಳು ವರದಿಯಾಗಿಲ್ಲ. 15 ಜಿಲ್ಲೆಗಳಲ್ಲಿ ಸೋಂಕಿನ ಸಂಖ್ಯೆ ಒಂದಂಕಿ ಯಲ್ಲಿದ್ದರೆ, ಏಳು ಜಿಲ್ಲೆಗಳಲ್ಲಿ ಸೋಂಪು ಎರಡಂಕಿ ಯಲ್ಲಿದೆ. ಬೆಂಗಳೂರಿನಲ್ಲಿ 345 ಜನರು ಸೋಂಕಿಗೆ ಒಳಗಾಗಿದ್ದಾರೆ. ಇದೇ ಸಂದರ್ಭದಲ್ಲಿ ಬೆಂಗಳೂರು ನಗರದಲ್ಲಿ 13 ಜನರು ಸೋಂಕಿನಿಂದ ಮೃತರಾಗಿದ್ದಾರೆ. ಬಳ್ಳಾರಿಯಲ್ಲಿ ನಾಲ್ಕು ಮತ್ತು ಧಾರವಾಡ ಮತ್ತು ಉಡುಪಿಯಲ್ಲಿ ತಲಾ ಒಂದು ಸೋಂಕಿತರು ಮೃತಪಟ್ಟಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಸಂಘಟನೆಗಳೊಂದಿಗೆ ಸಿಎಂ ಬಜೆಟ್ ಪೂರ್ವಭಾವಿ ಸಭೆ

0

ಮುಂದಿನ 2022-23 ನೇ ಸಾಲಿನ ಬಜೆಟ್ ಮಂಡನೆಗೆ ದಿನಗಣನೆ ಆರಂಭವಾಗಿದೆ. ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಶನಿವಾರ ವಾಣಿಜ್ಯ-ಕೈಗಾರಿಕಾ, ಸಾರಿಗೆ ಸಂಸ್ಥೆಗಳ ಪದಾಧಿಕಾರಿಗಳೊಂದಿಗೆ ಬಜೆಟ್ ಪೂರ್ವಭಾವಿ ಸಭೆ ನಡೆಸಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘ-ಸಂಸ್ಥೆಗಳೊಂದಿಗೆ ನಡೆಸಿದ ಸಭೆಯಲ್ಲಿ ಸಚಿವ ಸಿ.ಸಿ. ಪಾಟೀಲ್, ಮುಖ್ಯ ಕಾರ್ಯದರ್ಶಿ ಪಿ. ರವಿ ಕುಮಾರ್, ವಾಣಿಜ್ಯ ತೆರಿಗೆಗಳ ಇಲಾಖೆ ಆಯುಕ್ತರಾದ ಸಿ. ಶಿಖಾ ಅವರು ಪಾಲ್ಗೊಂಡಿದ್ದರು.

ಎಫ್ ಕೆಸಿಸಿಐ ಅಧ್ಯಕ್ಷ ಐ.ಎಸ್. ಪ್ರಸಾದ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಇತರರು ಪಾಲ್ಗೊಂಡಿದ್ದರು ಜೈ ರಾಜ್ ಇತರರು ಪಾಲ್ಗೊಂಡಿದ್ದರು.

ಸಭೆ ನಂತರ ಪ್ರತಿಕ್ರಿಯಿಸಿದ ಜೈರಾಜ್ ಅವರು ಚಿತ್ರನಗರಿ ನಿರ್ಮಾಣಕ್ಕೆ ಸ್ಥಳ ಗುರುತಿಸುವಂತೆ ಮುಖ್ಯಮಂತ್ರಿ ಬಳಿ ಮನವಿ ಮಾಡಲಾಗಿದೆ. ಹೆಸರುಗಟ್ಟ ಇಲ್ಲವೇ ಮೈಸೂರಿನಲ್ಲಿ ಚಿತ್ರನಗರಿ ಸ್ಥಾಪನೆ ಪ್ರಸ್ತಾಪಿವಿದೆ. ಯಾವ ಸ್ಥಳ ಸೂಕ್ತ ಎಂಬ ಬಗ್ಗೆ ಸರ್ಕಾರವೇ ನಿರ್ಧರಿಸಬೇಕು. ಸರ್ಕಾರದ ತೀರ್ಮಾನಕ್ಕೆ ಚಿತ್ರರಂಗ ಬದ್ಧವಾಗಿರಲಿದೆ ಎಂದು ಹೇಳಿದರು.

ರಾಜ್ಯ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಚಂದ್ರಶೇಖರ್ ಹೆಬ್ಬಾರ್ ಅವರು ಮಾತನಾಡಿ, ಕೋವಿಡ್ ಹಾವಳಿಯಿಂದ ಹೋಟೆಲ್ ಉದ್ಯಮದ ಮೇಲೆ ಗಂಭೀರ ಪರಿಣಾಮ ಬೀರಿದೆ. ಇದರಿಂದ ಸಾಕಷ್ಟು ನಷ್ಟವಾಗಿದೆ. ಈ ನಡುವೆ ಆಸ್ತಿತೆರಿಗೆ ಹೆಚ್ಚಳವಾಗಿದೆ. ಅದನ್ನು ಇಳಿಕೆ ಮಾಡಬೇಕು ಮತ್ತು ತೆರಿಗೆ ವಿನಾಯ್ತಿ ನೀಡುವಂತೆ ಮನವಿ ಮಾಡಲಾಗಿದೆ. ಈ ಬಗ್ಗೆ ಪರಿಶೀಲಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ ಎಂದು ಹೇಳಿದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಐಪಿಎಲ್2022 ಕ್ರಿಕೆಟ್ ಪಂದ್ಯ ಪಟ್ಟಿ ಪ್ರಕಟ

0

ಐಪಿಎಲ್ ಆಡಳಿತ ಮಂಡಳಿ ಶುಕ್ರವಾರ 2022ನೆ ಸಾಲಿನ ಟೂರ್ನಿಯ ಮಾದರಿಯನ್ನು ಬಿಡುಗಡೆ ಮಾಡಿದೆ.
ಅದರನ್ವಯ, ಸ್ಪರ್ಧೆಯಲ್ಲಿರುವ 10 ತಂಡಗಳನ್ನು ತಲಾ ಒಂದರಂತೆ ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಆದರೆ, ಆರಂಭಿಕ ಹಂತದಲ್ಲಿ ತಂಡಗಳು ಆಡುವ ಪಂದ್ಯಗಳ ಸಂಖ್ಯೆಯಲ್ಲಿ ವ್ಯತ್ಯಾಸವಾಗಿಲ್ಲ. ಕಳೆದ ಆವೃತ್ತಿಯಲ್ಲಿ ಈ ಬಾರಿಯೂ ಪ್ರತಿ ತಂಡ 14 ಪಂದ್ಯಗಳನ್ನಷ್ಟೇ ಆಡಬೇಕಿದೆ ಎಂದು ತಿಳಿದುಬಂದಿದೆ.

ಐಪಿಎಲ್ ಕಳೆದ ಕೆಲವು ವರ್ಷಗಳಿಂದ ಎಂಟು ತಂಡಗಳ ಸ್ಪರ್ಧೆಯಾಗಿತ್ತು. ರೌಂಡ್ ರಾಬಿನ್ ಲೀಗ್ ಹಂತದಲ್ಲಿ ಪ್ರತಿ ತಂಡ ಉಳಿದ 7 ತಂಡಗಳನ್ನು 2 ಬಾರಿ ಮುಖಮುಖಿ ಆಗುತ್ತಿತ್ತು.
ಪ್ರತಿ ತಂಡ ಲೀಗ್ ಹಂತದಲ್ಲಿ 14 ಪಂದ್ಯಗಳನ್ನು ಆಡಬೇಕಿತ್ತು.

ಈಗಿನ ಮಾದರಿ ಐಪಿಎಲ್ ಗೆ ಹೊಸದೇನಲ್ಲ.
10 ತಂಡಗಳನ್ನು ಈ ಕೆಳಗಿನಂತೆ ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ.
ಎ ಗುಂಪಿನಲ್ಲಿ ಮುಂಬೈ ಇಂಡಿಯನ್ಸ್, ಕೊಲ್ಕತ್ತಾ ನೈಟ್ ರೈಡರ್ಸ್ , ರಾಜಸ್ಥಾನ್ ರಾಯಲ್ಸ್, ಡೆಲ್ಲಿ ಕ್ಯಾಪಿಟಲ್ಸ್, ಮತ್ತು ಲಕ್ನೋ ಸೂಪರ್ ಜಯಂಟ್ಸ್ ತಂಡಗಳು ಇವೆ.

ಬಿ ಗುಂಪಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್, ಸನ್ ರೈಸರ್ಸ್ ಹೈದರಾಬಾದ್, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಪಂಜಾಬ್ ಕಿಂಗ್ಸ್, ಮತ್ತು ಗುಜರಾತ್ ಟೈಟನ್ಸ್ ತಂಡಗಳನ್ನು ಒಳಗೊಂಡಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಪ್ರೊ ಕಬಡ್ಡಿ ಲೀಗ್ ಪ್ರಶಸ್ತಿ ಬಾಚಿದ ದಬಾಂಗ್

0

ಪ್ರೊ ಕಬಡ್ಡಿ ಲೀಗ್ ಎಂಟನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಪಾಟ್ನಾ ಪೈರೇಟ್ಸ್ ವಿರುದ್ಧ ದಬಾಂಗ್ ದಿಲ್ಲಿ ತಂಡವು ರೋಚಕ ಗೆಲುವು ಸಾಧಿಸಿದೆ.

ಇದೇ ಮೊದಲ ಬಾರಿಗೆ ಚಾಂಪಿಯನ್ ಆಗಿ ದಬಾಂಗ್ ಡೆಲ್ಲಿ ತಂಡ ಹೊರಹೊಮ್ಮಿದೆ. ಈ ಪಂದ್ಯದೊಂದಿಗೆ ಲೀಗ್ ಇತಿಹಾಸದಲ್ಲೇ ಮೊದಲ ಬಾರಿಗೆ ಸುಮಾರು ಮೂರು ತಿಂಗಳಿಗೂ ಹೆಚ್ಚುಕಾಲ ಒಂದೇ ಅಂಗಣದಲ್ಲಿ ನಡೆದ ಪ್ರೊ ಕಬಡ್ಡಿ ಉತ್ಸವಕ್ಕೆ ಸಂಭ್ರಮದ ತೆರೆ ಬಿದ್ದಿದೆ.

ವೈಟ್ ಫೀಲ್ಡ್ ನ ಶೆರಟಾನ್ ಗ್ರಾಂಡ್ ಹೋಟೆಲ್ ಸಭಾಂಗಣದಲ್ಲಿ ನಡೆದ ಪಂದ್ಯದಲ್ಲಿ ದಿಲ್ಲಿ ಆಟಗಾರರು 37 36 ಅಂಕಗಳ ಅಂತರದಿಂದ ಮೂರು ಬಾರಿ ಚಾಂಪಿಯನ್ ಪಾಟ್ನಾ ಪೈರೇಟ್ಸ್ ತಂಡದ ಸವಾಲು ಮೆಟ್ಟಿನಿಂತು ಟ್ರೋಫಿಯನ್ನು ತಮ್ಮದಾಗಿಸಿಕೊಂಡರು. ಲೀಗ್ ಆರಂಭದಿಂದ ಕೊನೆಯವರೆಗೂ ಪ್ರಶಸ್ತಿ ಫೇವರೆಟ್ ತಂಡವಾಗಿ ಗುರುತಿಸಿಕೊಂಡಿದ್ದ ಕನ್ನಡಿಗ ಪ್ರಶಾಂತ್ ನೇತೃತ್ವದ ಪಾಟ್ನಾ ಪೈರೇಟ್ಸ್ ಅಂತಿಮ ಹಂತದ ಒತ್ತಡ ನಿರ್ವಹಿಸುವಲ್ಲಿ ಎಡವಿದ ಕಾರಣ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.

ಪಂದ್ಯದ ಆರಂಭದಿಂದಲೂ ಎರಡು ತಂಡಗಳು ಜಿದ್ದಾಜಿದ್ದಿನ ಹೋರಾಟ ನಡೆಸಿದವು. ಆದರೆ ಹತ್ತು ನಿಮಿಷದಲ್ಲಿ ತಮ್ಮ ತಂಡವನ್ನು ಆಲೌಟ್ ಮಾಡಿದ ಪೈರೇಟ್ಸ್ ತಂಡ 12-8ರ ಮುನ್ನಡೆ ಕಾಯ್ದುಕೊಂಡಿತ್ತು.

ಸಚಿನ್ ಮತ್ತು ಕುಮಾರ್ ಅವರ ಚುರುಕಿನ ಆಟದ ಸಹಾಯದಿಂದ ಮೊದಲಾದ ವಿರಾಮದವರೆಗೂ ಪಾಟ್ನಾ ತಂಡ ತನ್ನ ಪ್ರಾಬಲ್ಯ ವಿಸ್ತರಿಸಿ ಅಂತಿಮವಾಗಿ 17-15ರ ಮೇಲುಗೈ ಸಾಧಿಸಿತು.

ಪಂದ್ಯದ ದ್ವಿತೀಯಾರ್ಧ ಆರಂಭದಲ್ಲಿ ಪಾಟ್ನಾ 24 -23ರ ಅಂತರ ಕಾಯ್ದುಕೊಂಡಿತ್ತು. ಆದರೆ ಮೂವತ್ತನೇ ನಿಮಿಷದಲ್ಲಿ ಆಲ್-ರೌಂಡರ್ ವಿಜಯ್ ಸೂಪರ್ ಹಿಟ್ ಮೂಲಕ 3 ಅಂಕ ಗಳಿಸಿ ತಂಡದ ಹಿನ್ನಡೆಯನ್ನು 23-24ಕ್ಕೆ ತಗ್ಗಿಸಿದರು. ಬಳಿಕ ರೀಡರ್ ನವೀನ್ 1ಅಂಕ ತಂದು 24-24 ರ ಸಮಬಲದ ಹೋರಾಟಕ್ಕೆ ಸಾಕ್ಷಿಯಾಯಿತು.

ಪಂದ್ಯದ ಮುಕ್ತಾಯಕ್ಕೆ 5 ನಿಮಿಷಗಳಿರುವಾಗ ಪಾಟ್ನಾ ಪೈರೇಟ್ಸ್ ತಂಡವನ್ನು ಅಂಗಣ ಖಾಲಿ ಮಾಡಿಸಿದ ದಿಲ್ಲಿ 30-28ರ ಮೇಲುಗೈ ಸಾಧಿಸಿ ಕೊನೆಯವರೆಗೂ ಪ್ರಭುತ್ವ ಸಾಧಿಸಿ ಗೆಲುವನ್ನು ತನ್ನದಾಗಿಸಿಕೊಂಡಿತು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ರಣಜಿ ಕ್ರಿಕೆಟ್ ಪ್ರಸಿದ್ಧ ಕೃಷ್ಣ ಕೈಚಳಕ ಜಮ್ಮು& ಕಾಶ್ಮೀರ ತಂಡ ತತ್ತರ

0

ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಚೆಂಪ್ಲೆಸ್ಟ್ ಗ್ರೌಂಡ್ ನಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಎಲೈಟ್ ಸಿ ಗುಂಪಿನ ಹಣಾಹಣಿಯ ಮೊದಲ ಇನ್ನಿಂಗ್ಸ್ ನಲ್ಲಿ ಕರ್ನಾಟಕ ತಂಡ 209 ರನ್ ಗಳ ಭಾರಿ ಮುನ್ನಡೆಗಳಿಸಿದೆ.

ಎರಡನೇ ದಿನದಾಟದಂದು 8 ವಿಕೆಟ್ ಗೆ 268 ರನ್ ಗಳಿಂದ ಮೊದಲ ಇನ್ನಿಂಗ್ಸ್ ಮುಂದುವರೆಸಿದ ಕರ್ನಾಟಕ 103.1 ಓವರ್ಗಳಲ್ಲಿ 302 ರನ್ ಗಳಿಗೆ ಆಲೌಟ್ ಆಯಿತು.

ನಂತರ ತನ್ನ ಸರದಿ ಆರಂಭಿಸಿದ ಜಮ್ಮು-ಕಾಶ್ಮೀರ ತಂಡ ಟೀಮ್ ಇಂಡಿಯಾ ಆಟಗಾರ ಪ್ರಸಿದ್ಧ ಕೃಷ್ಣ ಅವರ ಕರಾರುವಾಕ್ ದಾಳಿಗೆ ತತ್ತರಿಸಿತು.

ಕಮ್ರಾನ್ ಇಕ್ಬಾಲ್ (35) ಮತ್ತು ಜತಿನ್ ವಾದ್ವಾನ್ (25) ಹೊರತುಪಡಿಸಿದರೆ ಉಳಿದ ಆಟಗಾರರು ಕರ್ನಾಟಕದ ಬೌಲರ್ಗಳನ್ನು ಎದುರಿಸುವ ಧೈರ್ಯ ಮಾಡಲಿಲ್ಲ.
ಜಮ್ಮು ಮತ್ತು ಕಾಶ್ಮೀರ ತಂಡವು ಕೇವಲ 93 ರನ್ ಗಳಿಸಿ ಭರ್ರನೆ ಇನ್ನಿಂಗ್ಸ್ ಗೆ ಅಂತ್ಯ ಹಾಡಿತು.

ನಂತರ 209 ರನ್ ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಮನೀಶ್ ಪಾಂಡೆ ಬಳಗ ದಿನದಾಟ ಮುಕ್ತಾಯಕಗೊಳ್ಳುವಾಗ 42 ಓವರ್ಗಳಲ್ಲಿ 2 ವಿಕೆಟ್ ಗೆ 128 ರನ್ ಕಲೆಹಾಕಿ ಮುನ್ನಡೆಯನ್ನು 332 ರನ್ ಗಳಿಗೆ ವಿಸ್ತರಿಸಿಕೊಂಡಿತು.

ಇನ್ನಿಂಗ್ಸ್ ಮಾಹಿತಿ

ಕರ್ನಾಟಕ ಮೊದಲ ಇನಿಂಗ್ಸ್ನಲ್ಲಿ 302 ರನ್ ಗಳಿಸಿತು. ಕರುಣ್ ನಾಯರ್ 175, ಆರ್.ಸಮರ್ಥ್ 45, ರೋಹಿತ್ ಮೊರೆ 23, ಪರ್ವೇಜ್ ರಸೂಲ್ 60ರನ್ ಗಳಿಸಿ 4 ವಿಕೆಟ್ ಪಡೆದರು. ಜಮ್ಮು ಮತ್ತು ಕಾಶ್ಮೀರ ಮೊದಲ ಇನಿಂಗ್ಸ್ನಲ್ಲಿ 29.5 ಓವರ್ ಗಳಲ್ಲಿ 93 ರನ್ ಗಳಿಸಿತು. ಪ್ರಸಾದ್ ಕೃಷ್ಣ 35 ರನ್ 6, ವಿದ್ಯಾಧರ್ ಪಾಟೀಲ್ 10 ಕ್ಕೆ 2 ವಿಕೆಟ್ ಪಡೆದರು. ಕರ್ನಾಟಕ ಎರಡನೇ ಇನ್ನಿಂಗ್ಸ್ ನಲ್ಲಿ 2 ಕ್ಕೆ 128 ರನ್ ಗಳಿಸಿತು. ಆರ್.ಸಮರ್ಥ್ 62, ಪಡಿಕ್ಕಲ್ 49 ಅಬಿದ್ ಮುಸ್ತಾಕ್ 24ಕ್ಕೆ 2 ಗಳಿಸಿದರು.