ಮಾಹಿತಿ ತಂತ್ರಜ್ಞಾನ ವಲಯದ ಕಂಪನಿಗಳು ದಾಖಲೆಯ ಸಂಖ್ಯೆಯಲ್ಲಿ ಹೊಸಬರನ್ನು ನೇಮಿಸಿಕೊಳ್ಳುತ್ತಿವೆ. ಡಿಜಿಟಲೀಕರಣ ಹೆಚ್ಚುತ್ತಿರುವ ಉದ್ಯೋಗಿಗಳ ವಲಸಿಗರ ಪರಿಣಾಮ ಹೊಸಬರಿಗೆ ಹೇರಳ ಉದ್ಯೋಗ ಸೃಷ್ಟಿಯಾಗುತ್ತಿದೆ. ವಿಶೇಷ ಕೌಶಲ್ಯ ಇರುವವರೆಗೆ ಉತ್ತಮ ವೇತನ ಸಿಗುತ್ತಿದೆ. ಸರಾಸರಿ ವೇತನದಲ್ಲಿ ಹೆಚ್ಚಳ ವಾಗಿದೆ.
ಟಿಸಿಎಸ್, ಇನ್ಫೋಸಿಸ್, ವಿಪ್ರೋ, ಕಾಗ್ನಿಜೆಂಟ್, ಟೆಕ್ ಮಹಿಂದ್ರಾ,ಅಕ್ಷೆಂಜರ್ 2021-2 2ರಲ್ಲಿ ಈಗಾಗಲೇ 2.3 ಲಕ್ಷ ನೇಮಕಾತಿ ಮುಂದುವರೆಯಲಿದೆ ಎಂದು ಉದ್ಯಮ ವಲಯದಲ್ಲಿ ನಿರೀಕ್ಷಿಸಲಾಗಿದೆ. ಸಂಶೋಧನಾ ಸಂಸ್ಥೆ ಅನ್ ಅರ್ಥ್ ಇನ್ ಸೈಂಟ್ ಪ್ರಕಾರ 2021-22ರ ಅಂತ್ಯಕ್ಕೆ ಹೊಸಬರ ನೇಮಕದ ಸಂಖ್ಯೆ 3 ಲಕ್ಷಕ್ಕೆ ಏರಿಕೆಯಾಗುವ ಸಾಧ್ಯತೆ ಇದೆ.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
KLIVE at Google News App
KLIVE Android App on Google Play Store
Download the most loved Klive App for your Android phone or tablet.
ಕೊರೋನಾ ವಿರುದ್ಧ ಮಕ್ಕಳು ಮತ್ತು ಹದಿಹರೆಯದವರಿಗಾಗಿ ಅಭಿವೃದ್ಧಿಪಡಿಸಿರುವ ಕೋರ್ಬೇವ್ಯಾಕ್ಸ್ ಲಸಿಕೆಯನ್ನು ತುರ್ತು ಸಂದರ್ಭದಲ್ಲಿ ಬಳಸುವ ಭಾರತೀಯ ಔಷಧ ಮಹಾನಿಯಂತ್ರಕರ ಕಚೇರಿ ಅನುಮತಿ ನೀಡಿದೆ. ಇದು ಹೈದ್ರಾಬಾದ್ ಮೂಲದ ಬಯಲಾಜಿಕಲ್ ಇ ಕಂಪನಿ ಸಿದ್ಧಪಡಿಸಿರುವ ಲಸಿಕೆ ಆಗಿದೆ.
ದೇಶದಲ್ಲಿ 12ರಿಂದ 18 ವಯಸ್ಸಿನವರೆಗೆ ತುರ್ತು ಸಂದರ್ಭದಲ್ಲಿ ಈ ಲಸಿಕೆ ನೀಡಲು ಡಿಸಿಜಿಐ ಅನುಮತಿ ನೀಡಿದೆ. ಮಕ್ಕಳಿಗೆ ಸಂಬಂಧಿಸಿದಂತೆ ದೇಶದಲ್ಲಿ ಡಿಸಿಜಿಐ ಅನುಮೋದಿಸಿರುವ ಎರಡನೇ ಲಸಿಕೆ ಇದಾಗಿದೆ. ಇದಕ್ಕೂ ಮುಂಚೆ ಭಾರತ್ ಬಯೋಟೆಕ್ ನ ಕೋವ್ಯಾಕ್ಸಿನ್ ಲಸಿಕೆಯ ಬಳಕೆಗೆ ಒಪ್ಪಿಗೆ ದೊರೆತಿತ್ತು.
ಎರಡು ಮತ್ತು ಮೂರನೆಯ ಕ್ಲಿನಿಕಲ್ ಪ್ರಯೋಗಗಳ ಮಧ್ಯಂತರ ಫಲಿತಾಂಶಗಳ ಆಧಾರದಲ್ಲಿ ಈ ಲಸಿಕೆಯನ್ನು ಬಳಸಲು ಒಪ್ಪಿಗೆ ದೊರೆತಿದೆ ಎಂದು ಬಯಲಾಜಿಕಲ್ ಇ ಕಂಪನಿಯ ಪ್ರಕಟಣೆಯಲ್ಲಿ ತಿಳಿಸಿದೆ. ಕೊರೊನಾ ವಿರುದ್ಧ ಭಾರತ ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ಆರ್ ಬಿಡಿ ಪ್ರೋಟೀನ್ ಘಟಕದ ಮೊದಲ ಲಸಿಕೆ ಇದಾಗಿದೆ.
ಇದು ಭುಜಕ್ಕೆ ನೀಡುವ ಎರಡು ಡೋಸ್ ಲಸಿಕೆ ಯಾಗಿದೆ. ಒಮ್ಮೆ ಲಸಿಕೆ ಪಡೆದ 28 ದಿನಗಳ ಅಂತರದಲ್ಲಿ ಮತ್ತೊಂದು ಲಸಿಕೆ ಪಡೆಯಬೇಕು. ಇದನ್ನು 2 ರಿಂದ 8 ಡಿಗ್ರಿ ಸೆಲ್ಸಿಯಸ್ ತಾಪಮಾನದಲ್ಲಿ ಸಂಗ್ರಹಿಸಬೇಕು ಎಂದು ಕಂಪನಿ ತಿಳಿಸಿದೆ.
ಕಳೆದ ವರ್ಷದ ಸೆಪ್ಟೆಂಬರ್ ತಿಂಗಳಿನಲ್ಲಿ 5 ರಿಂದ 18 ವರ್ಷದೊಳಗಿನ ಮಕ್ಕಳು ಹಾಗೂ ಹದಿಹರೆಯದವರ ಮೇಲೆ ಎರಡು ಮತ್ತು ಮೂರನೆಯ ಹಂತದ ಪ್ರಯೋಗ ನಡೆಸುವುದಕ್ಕೆ ಬಯಲಾಜಿಕಲ್ ಇ ಕಂಪನಿಗೆ ಡಿಸಿಜಿಐ ಅನುಮತಿ ನೀಡಿತ್ತು.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
KLIVE at Google News App
KLIVE Android App on Google Play Store
Download the most loved Klive App for your Android phone or tablet.
ಬಿಹಾರದ ಮಾಜಿ ಮುಖ್ಯಮಂತ್ರಿ ಹಾಗೂ ಆರ್ ಜೆ ಡಿ ವರಿಷ್ಠ ನಾಯಕ ಲಾಲೂ ಪ್ರಸಾದ್ ಯಾದವ್ ಅವರಿಗೆ ಬಹುಕೋಟಿ ಮೇವು ಹಗರಣದ ಐದನೇ ಪ್ರಕರಣದಲ್ಲಿ ಸಿಬಿಐ ವಿಶೇಷ ನ್ಯಾಯಾಲಯವು ಐದು ವರ್ಷ ಜೈಲು ಶಿಕ್ಷೆ ಹಾಗೂ 60 ಲಕ್ಷ ರೂಪಾಯಿ ದಂಡ ವಿಧಿಸಿ ಆದೇಶ ಹೊರಡಿಸಿದೆ.
ಲಾಲು ಪ್ರಸಾದ್ ಯಾದವ್ ಅವರು ಮೇವು ಹಗರಣದ ಕೊನೆಯ ಪ್ರಕರಣದಲ್ಲಿಯೂ ಕೂಡ ತಪ್ಪಿತಸ್ಥ ಎಂದು ನ್ಯಾಯಾಲಯವು ಘೋಷಿಸಿದೆ.
ಸಿಬಿಐ ವಿಶೇಷ ನ್ಯಾಯಾಲಯವು ಸೋಮವಾರ ಲಾಲು ಪ್ರಸಾದ್ ಯಾದವ್ ಅವರಿಗೆ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿತು. ಈ ಪ್ರಕರಣದಲ್ಲಿ ಅಪರಾಧಿ ಎಂದು ಘೋಷಿಸಿದ ದಿನವೇ ಲಾಲು ಅವರನ್ನು ಬಂಧಿಸಿ ಬಿಸ್ರಾ ಮುಂಡಾ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿದೆ.
ದೊರಾಂಡಾ ಖಜಾನೆಯಿಂದ 139.35 ಕೋಟಿ ರೂ.ಗಳನ್ನು ಅಕ್ರಮವಾಗಿ ಡ್ರಾ ಮಾಡಿಕೊಂಡ ಪ್ರಕರಣ ಇದಾಗಿದೆ. ಲಾಲು ಸೇರಿದಂತೆ ಒಟ್ಟು ಆರು ಜನರಿಗೆ ಐದು ವರ್ಷ, 32 ಜನರಿಗೆ ನಾಲ್ಕು ವರ್ಷ, ಅವರಿಗೆ ಮೂರು ವರ್ಷ ಜೈಲು ಶಿಕ್ಷೆಯಿಂದ ಸಿಬಿಐ ವಿಶೇಷ ನ್ಯಾಯಾಲಯ ವಿಧಿಸಿದೆ. ಅಪರಾಧಿಗಳಿಗೆ ಒಂದು ಲಕ್ಷದಿಂದ ಎರಡು ಕೋಟಿ ರೂ. ಗಳವರೆಗೆ ದಂಡ ವಿಧಿಸಲಾಗಿದೆ.
ಈ ಹಗರಣದ ಇತರ ನಾಲ್ಕು ಪ್ರಕರಣಗಳಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಒಟ್ಟು 14 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಲಾಲು ಅವರು 2017ರ ಡಿಸೆಂಬರ್ ನಿಂದ 36 ತಿಂಗಳ ಜೈಲು ಶಿಕ್ಷೆ ಪೂರೈಸಿದ್ದಾರೆ.
ಕಳೆದ ವರ್ಷದ ಜನವರಿಯಲ್ಲಿ ಅನಾರೋಗ್ಯದ ಕಾರಣ ಲಾಲು ಪ್ರಸಾದ್ ಯಾದವ್ ಅವರನ್ನು ರಾಂಚಿಯ ರಾಜೇಂದ್ರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ದಾಖಲಿಸಲಾಗಿದೆ. ಲಾಲು ಅವರು ಮೂತ್ರಪಿಂಡ ವೈಫಲ್ಯ ಸೇರಿದಂತೆ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದಾರೆ.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
KLIVE at Google News App
KLIVE Android App on Google Play Store
Download the most loved Klive App for your Android phone or tablet.
ಬ್ಯಾಡಿಗಿ ಕೃಷಿ ಉತ್ಪನ್ನ ಮಾರುಕಟ್ಟೆಗೆ 2.19 ಲಕ್ಷ ಮೆಣಸಿನಕಾಯಿ ಚೀಲಗಳು ಬಂದಿದ್ದು, ಬ್ಯಾಡಗಿ ಮೆಣಸಿನಕಾಯಿ ದರ ಸ್ಥಿರವಾಗಿದೆ.
ಕಳೆದೆರಡು ತಿಂಗಳಿನಿಂದ ಪ್ರತಿವಾರ 2ಲಕ್ಷಕ್ಕೂ ಅಧಿಕ ಮೆಣಸಿನಕಾಯಿ ಚೀಲಗಳು ಮಾರುಕಟ್ಟೆಗೆ ಬರುತ್ತಿದ್ದರು ಸಹ ಒಂದು ವಾರವೂ ಮೆಣಸಿನಕಾಯಿ ದರ ಕಡಿಮೆಯಾಗದೇ ಇರುವುದು ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
KLIVE at Google News App
KLIVE Android App on Google Play Store
Download the most loved Klive App for your Android phone or tablet.
ಕೆಲದಿನಗಳಿಂದ ಈಚೆಗೆ ರಾಜ್ಯದಲ್ಲಿ ಹಿಜಾಬ್ ವಿವಾದ ಭುಗಿಲೆದ್ದಿದೆ. ಹಿಜಾಬ್ ಹಾಗೂ ಕೇಸರಿ ಶಾಲು ವಿವಾದದಿಂದಾಗಿ ಶಾಲಾ ಕಾಲೇಜು ವಿದ್ಯಾರ್ಥಿಗಳು ತರಗತಿಗಳಿಂದ ಭಹಿಷ್ಕರಿಸುವುದನ್ನು ನಾವು ನೋಡಿದ್ದೇವೆ. ಈ ಕುರಿತಂತೆ ಎಲ್ಲ ಮಾಧ್ಯಮಗಳು ವಿಸ್ತೃತವಾಗಿ ಇದುವರೆಗೆ ವರದಿಯನ್ನು ಪ್ರಕಟಿಸಿವೆ.
ಹಲವು ವಿದ್ಯಾರ್ಥಿನಿಯರು ಪರೀಕ್ಷೆಗಳನ್ನು ಲೆಕ್ಕಿಸದೆ, ಹಿಜಾಬ್ ಧರಿಸಿ ಬರೆಯಲು ಅವಕಾಶ ಕಲ್ಪಿಸಿ ಎಂದು ಮನವಿಯನ್ನು ಕೂಡ ಸಂಬಂಧಪಟ್ಟ ಅಧಿಕಾರಿಗಳ ಮಾಡಿದ್ದರು.
ಅಲ್ಲದೇ ಹಿಜಾಬ್ ವಿಚಾರ ಹೈಕೋರ್ಟ್ ಮೆಟ್ಟಿಲೇರಿದೆ. ಇಂದು ಅದರ ವಿಚಾರಣೆಯು ನಡೆಯಲಿದೆ. ಹಿಜಾಬ್ ಕುರಿತಂತೆ ಈಗ ಹಿಜಾಬ್ ಧಾರಣೆಯು ಅಗತ್ಯ ಧಾರ್ಮಿಕ ಆಚರಣೆ ಎಂಬುದನ್ನು ಸಾಬೀತುಪಡಿಸಲು ಅರ್ಜಿದಾರರು ಯಾವುದೇ ದಾಖಲೆಗಳನ್ನು ನ್ಯಾಯಾಲಯದ ಮುಂದೆ ಇಟ್ಟಿಲ್ಲ ಎಂದು ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ಅವರು ವಾದಿಸಿದರು.
ರಾಜ್ಯ ಸರ್ಕಾರವು ಸೋಮವಾರ ಕರ್ನಾಟಕ ಹೈಕೋರ್ಟ್ ಗೆ ಇದೊಂದು ಧಾರ್ಮಿಕ ಆಚರಣೆ ಎಂದು ಸಾಧಿಸುವುದರ ಮೂಲಕ ಇವರು ಎಲ್ಲಾ ಮುಸ್ಲಿಂ ಮಹಿಳೆಯರನ್ನೂ ಒಂದು ನಿರ್ದಿಷ್ಟ ವಸ್ತ್ರ ಸಂಹಿತೆಗೆ ಸೀಮಿತಗೊಳಿಸುವ ದೃಷ್ಟಿ ಹೊಂದಿದ್ದಾರೆ ಎಂದು ತಿಳಿಸಿದೆ.
ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ಅವರು ” ಎಲ್ಲರಿಗೂ ಹಿಜಾಬ್ ಧರಿಸುವುದು ಕಡ್ಡಾಯ ಎಂಬುದನ್ನ ಅರ್ಜಿದಾರರು ಮಾಡಬೇಕು ಕಡ್ಡಾಯಕ್ಕೆ ಆಧಾರಗಳಿಲ್ಲ. ಅರ್ಜಿದಾರರು ಒಂದೇ ಒಂದು ದಾಖಲೆಯನ್ನು ನೀಡಿಲ್ಲ. ಅವರು ಶೂನ್ಯ ಸಾಕ್ಷ ನೀಡಿ ಹಿಜಾಬ್ ಪರ ಆದೇಶ ಕೇಳುತ್ತಿದ್ದಾರೆ” ಎಂದು ತಮ್ಮ ವಾದವನ್ನು ಮಂಡಿಸಿದ್ದಾರೆ.
ಹಿಜಾಬ್ ಧರಿಸಿ ಕಾಲೇಜಿಗೆ ತೆರಳುವುದನ್ನು ನಿರ್ಬಂಧಿಸಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶದ ಹಿನ್ನೆಲೆಯಲ್ಲಿ ತಮ್ಮನ ಕಾಲೇಜಿಗೆ ಪ್ರವೇಶಿಸಲು ಬಿಡುತ್ತಿಲ್ಲ ಎಂದು ಆಕ್ಷೇಪಿಸಿ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿರುವ ಮನವಿಗಳ ವಿಚಾರಣೆಯನ್ನು ಸಿಜೆ ರಿತುರಾಜ್, ನ್ಯಾಯಮೂರ್ತಿಗಳಾದ ಕೃಷ್ಣ ಎಸ್.ದೀಕ್ಷಿತ್ ನ್ಯಾಯಮೂರ್ತಿ ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್ ಅವರಿಂದ ಪೂರ್ಣಪೀಠ ಗಂಟೆಗಳ ಕಾಲ ವಾದವಿವಾದ ಆಲಿಸಿದೆ. ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರು ಸ್ವಾತಂತ್ರದ ಬಗ್ಗೆ ಸಂವಿಧಾನ ರಚನಾ ಸಭೆಯಲ್ಲಿ ಚರ್ಚೆಯಾಗಿತ್ತು.ಡಾ.ಬಿ.ಆರ್. ಅಂಬೇಡ್ಕರ್ ಸಂವಿಧಾನದಲ್ಲಿ ಸೇರಿಸಲು ಸಲಹೆ ನೀಡಿದ್ದರು ಕೆಲವರಿಗೆ ದೇವರಲ್ಲಿ ನಂಬಿಕೆ ಇಲ್ಲದಿರಬಹುದು. ಕೂದಲಿಗೆ ಚಾರ್ವಾಕರು. ಆದರೆ ಅವರಿಗೆ ಸಂವಿಧಾನದಲ್ಲಿ ಆತ್ಮಸಾಕ್ಷಿಯ ಸ್ವಾತಂತ್ರ್ಯದಡಿ ರಕ್ಷಣೆ ನೀಡಿದೆಯಲ್ಲವೇ? ಎಂದು ಪ್ರಶ್ನಿಸಿದ್ದಾರೆ.
ನ್ಯಾಯಮೂರ್ತಿ ಜೆ.ಎಂ.ಖಾಜಿ ಅವರು ಆಚರಣೆಯನ್ನು ಆತ್ಮಸಾಕ್ಷಿಯ ಸ್ವಾತಂತ್ರ್ಯ ದಂತೆ ಪರಿಗಣಿಸಬಹುದೇ? ಎಂದಿದ್ದಾರೆ.
ನ್ಯಾ.ಕೃಷ್ಣ ದೀಕ್ಷಿತ್ ಧರ್ಮವನ್ನು ಶಿಕ್ಷಣದಿಂದ ಹೊರಗಿಡಬೇಕೆಂದು ಸುಪ್ರೀಂಕೋರ್ಟ್ 2017ರ ತೀರ್ಪಿನಲ್ಲಿ ಹೇಳಿದೆ. ಅಮೆರಿಕನ್ ಸಂವಿಧಾನದಂತಲ್ಲ . ಸರ್ವಧರ್ಮ ಸಮಭಾವ ತತ್ವವನ್ನು ಆಧರಿಸಿದೆ ನಮ್ಮ ಸಂವಿಧಾನ ಕಾರ್ಲ್ ಮಾರ್ಕ್ಸ್ ನ ಧರ್ಮ ಅಫೀಮು ಎಂಬ ಅಭಿಪ್ರಾಯ ಅನುಸರಿಸಿಲ್ಲ ಅಲ್ಲವೇ? ಎಂದು ವಿವಾದ ಆಲಿಸುವ ವೇಳೆ ಕೇಳಿದ್ದಾರೆ.
ವಾದವಿವಾದವನ್ನು ಆಲಿಸಿದ ಪೂರ್ಣಪೀಠವು ವಿಚಾರಣೆಯನ್ನು ಮಂಗಳವಾರ ಮಧ್ಯಾಹ್ನ 2.30 ಕ್ಕೆ ಮುಂದೂಡಿದೆ.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
KLIVE at Google News App
KLIVE Android App on Google Play Store
Download the most loved Klive App for your Android phone or tablet.
ಆಡಳಿತದಲ್ಲಿನ ಸುಧಾರಣಾ ತಂತ್ರಜ್ಞಾನವು ಶಿಕ್ಷಣದ ಮೇಲೆ ಮಾರಕ ಪರಿಣಾಮ ಬೀರುತ್ತಿವೆ ಎಂದು ಸಾಹಿತಿ ಪ್ರೊ. ಬರಗೂರು ರಾಮಚಂದ್ರಪ್ಪನವರು ಕಳವಳ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಸರ್ವ ಸದಸ್ಯರ ಮಹಾಸಭೆ ಹಾಗೂ ನಿಕಟಪೂರ್ವ ಪದಾಧಿಕಾರಿಗಳ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ 44,615 ಸರ್ಕಾರಿ ಪ್ರಾರ್ಥಮಿಕ ಶಾಲೆ, 5,240 ಸರ್ಕಾರಿ ಪ್ರೌಢಶಾಲೆ ಮತ್ತು 1529 ಸರಕಾರಿ ಪದವಿ ಪೂರ್ವ ಕಾಲೇಜುಗಳಿವೆ. ಮೂಲಸೌಕರ್ಯ ಕಲ್ಪಿಸಲು ತಂತ್ರಜ್ಞಾನ ಬಳಕೆಯಾಗಬೇಕು. ಆದರೆ ತಂತ್ರಜ್ಞಾನಕ್ಕೆ ಎಷ್ಟು ಪ್ರಾಮುಖ್ಯ ಕೊಡಬೇಕು ಅಷ್ಟೇ ಕೊಡಬೇಕು. ಡಿಜಿಟಲ್ ಶಿಕ್ಷಣವೇ ಪ್ರಧಾನವಾದರೆ ಉದ್ಯಮಗಳಿಗೆ ಲಾಭವಾಗುತ್ತದೆ ಎಂದರು.
ಇಂದು ಅಧ್ಯಾಪಕರು ಹೆಚ್ಚಾಗಿದ್ದು, ಮೇಷ್ಟ್ರು ಗಳ ಸಂಖ್ಯೆ ಕಡಿಮೆಯಾಗುತ್ತದೆ. ಅಧ್ಯಾಪಕರು ಎಂಬುದು ಅಧಿಕಾರದ ಹುದ್ದೆಯಾದರೆ. ಮೇಷ್ಟ್ರು ಎಂಬುದು ಗೌರವದ ಹುದ್ದೆಯಾಗಿದೆ. ಶಿಕ್ಷಣ ಕ್ಷೇತ್ರದಲ್ಲಿ ಮೇಷ್ಟ್ರುಗಳ ಜವಾಬ್ದಾರಿ ಹೆಚ್ಚು.
ಜಾತಿ, ಧರ್ಮ, ಮತಗಳನ್ನು ಮೀರಿ ಮಾನವೀಯ ಮೌಲ್ಯ ದಲ್ಲಿ ಕೆಲಸ ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಅ. ದೇವೇಗೌಡ, ಸಂಘದ ಅಧ್ಯಕ್ಷ ಎಚ್.ಕೆ. ಮಂಜುನಾಥ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
KLIVE at Google News App
KLIVE Android App on Google Play Store
Download the most loved Klive App for your Android phone or tablet.
ರಾಜ್ಯದ ಉನ್ನತ ಶಿಕ್ಷಣ ಇಲಾಖೆ, ಕುವೆಂಪು ವಿಶ್ವವಿದ್ಯಾಲಯ ಮತ್ತು ಅಮೆರಿಕದ ಅಥೆನ್ಸ್ ವಿಶ್ವವಿದ್ಯಾಲಯಗಳು ಶೈಕ್ಷಣಿಕ ಸಂಶೋಧನಾ ಕಾರ್ಯಕ್ರಮದ ಒಪ್ಪಂದವೊಂದಕ್ಕೆ ಸಹಿ ಹಾಕಲಿವೆ. ಫೆಬ್ರುವರಿ 22ರಂದು 8 ಗಂಟೆಗೆ ಆನ್ ಲೈನ್ ನಲ್ಲಿ ನಡೆಯುವ ಸಭೆಯಲ್ಲಿ ಮೂರು ಸಂಸ್ಥೆಗಳ ಗಣ್ಯರು, ತಜ್ಞರು ಭಾಗವಹಿಸಿ ಶೈಕ್ಷಣಿಕ ಮತ್ತು ಸಂಶೋಧನಾ ಚಟುವಟಿಕೆಗಳಿಗೆ ಪರಸ್ಪರ ಸಹಕಾರ ನೀಡುವ ಒಪ್ಪಂದ ಜಾರಿ ಗೊಳಿಸಲಿದ್ದಾರೆ.
ಈ ಒಪ್ಪಂದದಡಿ ಅಲಬಾಮದ ಅಥೆನ್ಸ್ ವಿವಿ ಮತ್ತು ಕುವೆಂಪು ವಿವಿ ಗಳ ನಡುವೆ ಶೈಕ್ಷಣಿಕ ಮತ್ತು ಸಂಶೋಧನಾ ಚಟುವಟಿಕೆಗಳನ್ನು ಕೈಗೊಳ್ಳಲು ಬೋಧಕರು ಮತ್ತು ವಿದ್ಯಾರ್ಥಿಗಳ ವಿನಿಮಯ, ಉಭಯ ಸಂಸ್ಥೆಗಳಿಂದ ವಿಶೇಷ ವಿಷಯಗಳ ಮೇಲೆ ಪದವಿಗಳ ಆರಂಭ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ತಿಳಿದುಬಂದಿದೆ.
ಸಭೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್. ಅಶ್ವತ್ ನಾರಾಯಣ್, ಉನ್ನತ ಶಿಕ್ಷಣ ಮಂಡಳಿ ಉಪಾಧ್ಯಕ್ಷ ಪ್ರೋ.ಬಿ. ತಿಮ್ಮೇಗೌಡ, ಕಾರ್ಯ ನಿರ್ವಾಹಕ ನಿರ್ದೇಶಕ ಗೋಪಾಲಕೃಷ್ಣ ಜೋಷಿ, ಉನ್ನತ ಶಿಕ್ಷಣ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಿ. ಕುಮಾರ್ ನಾಯ್ಕ್, ಕುವೆಂಪು ವಿವಿ ಕುಲಪತಿ ಪ್ರೊ.ಬಿ.ಪಿ. ವೀರಭದ್ರಪ್ಪ, ಕುಲಸಚಿವ ಜಿ. ಅನುರಾಧ, ಪರೀಕ್ಷಾಂಗ ಕುಲಸಚಿವ ಪ್ರೊ.ಸಿ.ಎಂ. ತ್ಯಾಗರಾಜ್, ಅಥೆನ್ಸ್ ವಿವಿ ಅಧ್ಯಕ್ಷ ಡಾ. ಫಿಲಿಪ್ ವೇ, ಉಪಾಧ್ಯಕ್ಷ ಡಾ. ಕ್ಯಾಥರೀನ್ ವೆಲ್ ಬರ್ಗ್, ಹಾಗೂ ಇನ್ನಿತರರು ಭಾಗವಹಿಸಲಿದ್ದಾರೆ.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
KLIVE at Google News App
KLIVE Android App on Google Play Store
Download the most loved Klive App for your Android phone or tablet.
ಹಿಜಾಬ್ ಧರಿಸಿಕೊಂಡೇ ತರಗತಿಗೆ ಹೋಗುತ್ತೇವೆ. ನಿರಾಕರಿಸಿದರೆ ಮನೆಗೆ ತೆರಳುತ್ತೇವೆ ಎಂದು ರಾಯಚೂರಿನ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿಯರು ಶಾಲಾ ಕೊಠಡಿ ಪ್ರವೇಶಿಸಿ ಎಸ್ ಎಸ್ ಎಲ್ ಸಿ ಪೂರ್ವಭಾವಿ ಪರೀಕ್ಷೆ ಬರೆದರು.
ಕಳೆದೊಂದು ವಾರದಿಂದ ಶಾಲೆಯ ಮುಖ್ಯಸ್ಥರು, ಕೋರ್ಟ್ ಮಧ್ಯಂತರ ಆದೇಶದ ಪ್ರಕಾರ ಹಿಜಾಬ್ ಧರಿಸಿಕೊಂಡು ಶಾಲಾ ಕೊಠಡಿ ಪ್ರವೇಶಿಸುವಂತಿಲ್ಲವೆಂದು ಹೇಳುತ್ತಾ ಬಂದಿದ್ದರು. ಹಿಜಬ್ ಧರಿಸಲು ಅವಕಾಶ ಕೊಡದಿದ್ದರೆ ಮನೆಗೆ ಹೋಗುತ್ತೇವೆ ಎಂದು ಹೇಳಿ ಹೋಗಿದ್ದ ವಿದ್ಯಾರ್ಥಿನಿಯರು ಶಾಲೆಯತ್ತ ಮುಖ ಮಾಡಿರಲಿಲ್ಲ. ಆದರೆ ಪರೀಕ್ಷೆ ಇದ್ದ ಕಾರಣ ಸೋಮವಾರ ಬಂದರು.
ನಾವು ಹೇಳಿದರೂ ಕೇಳಿದ ವಿದ್ಯಾರ್ಥಿನಿಯರು ಹಿಜಾಬ್ ತೆಗೆದಿರಿಸಿದೆ ಪರೀಕ್ಷಾ ಕೊಠಡಿಗೆ ತೆರಳಿ ಪರೀಕ್ಷೆ ಬರೆದಿದ್ದಾರೆ. ಈ ವಿಷಯದಲ್ಲಿ ಅಸಹಾಯಕನಾಗಿದ್ದೇವೆ ನಿಂದು ಪ್ರಭಾರಿ ಉಪ ಪ್ರಾಚಾರ್ಯ ಲಿಂಗಪ್ಪ ಪೂಜಾರಿ ಅವರು ತಿಳಿಸಿದ್ದಾರೆ.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
KLIVE at Google News App
KLIVE Android App on Google Play Store
Download the most loved Klive App for your Android phone or tablet.
ಉತ್ತರಪ್ರದೇಶದಲ್ಲಿ ಬಿಜೆಪಿಯು ಸ್ಪಷ್ಟ ಬಹುಮತದೊಂದಿಗೆ ಮತ್ತೊಂದು ಅವಧಿಗೆ ಸರ್ಕಾರ ರಚಿಸಲಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
ಮಾಧ್ಯಮ ಸಂಸ್ಥೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು , ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಉತ್ತಮ ಆಡಳಿತಕ್ಕೆ ಹಿಂದೆಂದಿಗಿಂತಲೂ ಹೆಚ್ಚಿನ ಜನ ಬೆಂಬಲ ವ್ಯಕ್ತವಾಗಿದೆ. ಹೀಗಾಗಿ ಈ ಸಲವೂ 300ಕ್ಕೂ ಹೆಚ್ಚು ಸ್ಥಾನ ಗಳಿಸಿ ಅಧಿಕಾರ ಉಳಿಸಿಕೊಳ್ಳುವ ವಿಶ್ವಾಸವಿದೆ. ಅಭಿವೃದ್ಧಿ ಮತ್ತು ಆಡಳಿತದಲ್ಲಿ ಸುಧಾರಣೆ, ಕಾನೂನು ಮತ್ತು ಸುವ್ಯವಸ್ಥೆ, ಬಡವರ ಏಳಿಗೆಗೆ ರೂಪಿಸಿದ ಕಾರ್ಯಕ್ರಮಗಳು, ಈ 4 ಸಂಗತಿಗಳಿಗಾಗಿ ಜನ ಬಿಜೆಪಿಯನ್ನು ಬೆಂಬಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಇತಿಹಾಸ ಗೊತ್ತಿಲ್ಲ. ಹೀಗಾಗಿ ಅವರು ಸಂಸತ್ತಿನಲ್ಲಿ ದೇಶದ ಕುರಿತು ಯಾವುದೇ ಹೇಳಿಕೆ ನೀಡಬಾರದು ಎಂದು ಅಮಿತ್ ಶಾ ಅವರು ಹೇಳಿದರು.
ಫೆಬ್ರವರಿ 3ರಂದು ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ರಾಹುಲ್ ಗಾಂಧಿ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಅಮಿತ್ ಶಾ ಅವರು 1962ರಲ್ಲಿ ಏನಾಯಿತು ಮತ್ತು ಅದಕ್ಕೆ ಯಾರು ಕಾರಣರು ಎಂಬುದು ಗೊತ್ತೇ ಇಲ್ಲ . ಚೀನಾ ಒಡ್ಡುತ್ತಿರುವ ಪ್ರತಿ ಬಾರಿಯೂ ನರೇಂದ್ರ ಮೋದಿ ಸರ್ಕಾರ ದಿಟ್ಟ ಪ್ರತ್ಯುತ್ತರ ನೀಡುತ್ತಿದೆ ಎಂದು ಹೇಳಿದರು.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
KLIVE at Google News App
KLIVE Android App on Google Play Store
Download the most loved Klive App for your Android phone or tablet.
ರಾಷ್ಟ್ರ ಧ್ವಜದ ಬಗ್ಗೆ ಹೇಳಿಕೆ ನೀಡಿರುವ ಸಚಿವ ಕೆ.ಎಸ್. ಈಶ್ವರಪ್ಪ ಅವರನ್ನು ಸಚಿವ ಸಂಪುಟ ವಜಾಗೊಳಿಸಿ, ಅವರ ವಿರುದ್ಧ ರಾಷ್ಟ್ರದ್ರೋಹದ ಪ್ರಕರಣ ದಾಖಲಿಸ ಬೇಕೆಂದು ಆಗ್ರಹಿಸಿ ಭದ್ರಾವತಿ ನಗರದ ಬ್ಲಾಕ್ ಮತ್ತು ಗ್ರಾಮಾಂತರ ಕಾಂಗ್ರೆಸ್ ಕಾರ್ಯಕರ್ತರು ತಾಲೂಕು ಕಛೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ಸಂವಿಧಾನದ ಆಶಯಗಳಿಗೆ ಧಕ್ಕೆ ಆಗುವ ವಿಚಾರ ಮತ್ತು ರಾಷ್ಟ್ರ ಲಾಂಛನ ಕ್ಕೆ ಅಪಮಾನ ಎಂದಿಗೂ ಸಹಿಸಲಾಗದು. ಇಂತಹ ಕೀಳುಮಟ್ಟದ ದೇಶದ್ರೋಹದ ಮಾತುಗಳನ್ನಾಡಿದ ಸಚಿವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಬಿಜೆಪಿ ಸರ್ಕಾರವು ಕಾಂಗ್ರೆಸ್ ಹೋರಾಟ ಹತ್ತಿಕ್ಕುವ ಪ್ರಯತ್ನ ಮಾಡುತ್ತಿರುವುದು ಖಂಡನೀಯ ಎಂದರು.
ಈ ಸಂದರ್ಭದಲ್ಲಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಟಿ. ಚಂದ್ರೇಗೌಡ, ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷ ಅಮೀರ್ ಖಾನ್ , ಓಬಿಸಿ ಅಧ್ಯಕ್ಷ ಗಂಗಾಧರ್, ಇವಾಗ್ ಘಟಕದ ಅಧ್ಯಕ್ಷ ನಿಯಾಜ್ ಅಲ್ತಾಫ್, ನಗರಸಭೆ ಉಪಾಧ್ಯಕ್ಷ ಚೆನ್ನಪ್ಪ, ಹಾಗೂ ಇನ್ನಿತರರು ಉಪಸ್ಥಿತರಿದ್ದರು.