ಕಾಂಗ್ರೆಸ್ ಹೈಕಮಾಂಡ್ ಫೆಬ್ರವರಿ 25ರಂದು ರಾಜ್ಯದ ಪ್ರಮುಖ ನಾಯಕರ ಮಹತ್ವದ ಸಭೆಯನ್ನು ಸಜ್ಜುಗೊಳಿಸಿದೆ. ಮತ್ತು ಎಲ್ಲರಲ್ಲೂ ಕುತೂಹಲವನ್ನು ಮೂಡಿಸಿದೆ. ರಾಜ್ಯದಲ್ಲಿನ ಇತ್ತೀಚಿನ ವಿದ್ಯಮಾನಗಳು, ಮುಂದಿನ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ಪಕ್ಷ ಬಲವರ್ಧನೆಗೆ ಕಾರ್ಯತಂತ್ರ ರೂಪಿಸುವ ಸಲುವಾಗಿ ರಾಹುಲ್ ಗಾಂಧಿ ಅವರು ಈ ಸಭೆಯನ್ನು ಕರೆದಿದ್ದಾರೆ. ಇದರಲ್ಲಿ ಪಕ್ಷದಲ್ಲಿ ಒಗ್ಗಟ್ಟು ಮೂಡಿಸುವ ಸಮರಕ್ಕೆ ಸಿದ್ಧಗೊಳಿಸುವ ಅಜೆಂಡಾವೂ ಇದೆ ಎಂದು ಹೇಳಲಾಗಿದೆ. ಈ ಸಭೆಯಲ್ಲಿ ರಾಜ್ಯದ ಆಯ್ದ 15 ನಾಯಕರು ಪಾಲ್ಗೊಳ್ಳಲಿದ್ದಾರೆ.
ರಾಜ್ಯದಲ್ಲಿ 2013 ರಿಂದ 2018ರ ವರೆಗೆ ಸ್ವಂತ ಬಲದ ಸರ್ಕಾರ ಮತ್ತು ಜೆಡಿಎಸ್ ನೊಂದಿಗೆ 14 ತಿಂಗಳ ಮೈತ್ರಿ ಸರ್ಕಾರದಲ್ಲಿ ಆಡಳಿತ ನಡೆಸಿದ ಕಾಂಗ್ರೆಸ್ ನಂತರ ಪ್ರತಿಪಕ್ಷ ಸ್ಥಾನದಲ್ಲಿದೆ. ಮುಂದಿನ ಬಾರಿ ಅಧಿಕಾರದ ಚುಕ್ಕಾಣಿ ಹಿಡಿಯಲು ರಾಜ್ಯ ಸರ್ಕಾರ ವಿರುದ್ಧ ನಿರಂತರವಾಗಿ ಹೋರಾಟ ನಡೆಸಿ ಜನರ ವಿಶ್ವಾಸ ಗಳಿಸುವ ಪ್ರಯತ್ನದಲ್ಲಿದೆ. ಈ ಸಮಯದಲ್ಲಿಯೇ ವರಿಷ್ಠರು ಸಭೆ ಕರೆಯುವುದರಿಂದ ರಾಜ್ಯ ಕಾಂಗ್ರೆಸ್ ನ ಮುಂದಿನ ನಡೆ, ಪ್ರಯೋಗಿಸ ಲಿರುವ ತಂತ್ರಗಳಿಗೆ ಇನ್ನಷ್ಟು ಸ್ಪಷ್ಟತೆ ಸಿಗುವ ನಿರೀಕ್ಷೆ ಇದೆ.
ಎಲ್ಲ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಹೈಕಮಾಂಡ್ ಪ್ರಧಾನ ತಂತ್ರ ಎನ್ನಲಾಗಿದೆ. ಆದ್ದರಿಂದಲೇ ದೆಹಲಿ ಬುಲಾವ್ ನೀಡಲಾಗಿದೆ. 2018ರ ಚುನಾವಣೆಗೆ ಮುನ್ನವೇ ಇಂತಹದ್ದೇ ಸಭೆ ನಡೆದಿತ್ತು.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
KLIVE at Google News App
KLIVE Android App on Google Play Store
Download the most loved Klive App for your Android phone or tablet.
ಪಂದ್ಯದ ಕೊನೇ ಕ್ಷಣದಲ್ಲಿ ಚೇತೋಹಾರಿ ಪ್ರದರ್ಶನ ನೀಡಿದ ಬೆಂಗಾಲ್ ವಾರಿಯರ್ಸ್ ತಂಡ ಪ್ರೊ ಕಬಡ್ಡಿ ಲೀಗ್ ನ ಪುಣೇರಿ ಪಲ್ಟನ್ ವಿರುದ್ಧ 43-36 ಅಂಕಗಳಿಂದ ಜಯ ಸಾಧಿಸಿತು. ಇದರಿಂದಾಗಿ ಪ್ಲೇಆಫ್ ಸ್ಥಾನ ಕ್ಕಾಗಿ ಕಾತರಿಸುತ್ತಿರುವ ಪುಣೀರಿ ತಂಡಕ್ಕೆ ಹಿನ್ನಡೆಯಾಯಿತು.
ಬೆಂಗಳೂರಿನ ಶೆರಾಟಾನ್ ಗ್ರಾಂಡ್ ಹೋಟೆಲ್ ಸಭಾಂಗಣದಲ್ಲಿ ನಡೆದ ಪಂದ್ಯದ ಆರಂಭದಲ್ಲಿ ಉತ್ತಮ ಪ್ರದರ್ಶನ ನೀಡಿದ ಪುಣೀರಿ ಬಳಗ ಮೊದಲಾರ್ಧ ದ ಅಂತ್ಯಕ್ಕೆ 20-10ಅಂಕಗಳ ಮುನ್ನಡೆ ಪಡೆದು ಗೆಲುವಿನ ವಿಶ್ವಾಸ ಮೂಡಿಸಿಕೊಂಡಿತ್ತು. ಆದರೆ, ದ್ವಿತೀಯಾರ್ಧ ದಲ್ಲಿ ಪುಟಿದೆದ್ದ ಬೆಂಗಾಲ್ ತಂಡ 33 ಅಂಕಗಳನ್ನು ಗಳಿಸಿತು. ಈ ವೇಳೆ ಪುಣೀರಿ ಬಳಗ 16 ಅಂಕಗಳನ್ನು ಮಾತ್ರ ಗಳಿಸಲು ಶಕ್ತಗೊಂಡು ಸೋಲಿಗೆ ಶರಣಾಗಬೇಕಾಯಿತು. 21 ಪಂದ್ಯಗಳಿಗೆ ಒಟ್ಟಾರೆ 61 ಅಂಕಗಳನ್ನು ಪಡೆ ದಿರುವ ಪುಣೆ ತಂಡ ನಡೆಯಲಿರುವ ಲೀಗ್ ಹಂತದ ತನ್ನ ಕೊನೇ ಪಂದ್ಯದಲ್ಲಿ ಗೆಲುವು ಸಾಧಿಸಿದರೆ ಮಾತ್ರ ಪ್ಲೇಆಫ್ ಆಸೆ ಜೀವಂತವಾಗಿರಿಸಿಕೊಳ್ಳಬಹುದು.
ಮೋಹಿತ್ ಗೋಯೆಟ್ ಮತ್ತು ಅಸ್ಲಾಂ ಇನಾಮದಾರ್ ಅವರ ಆಕ್ರಮಣಕಾರಿ ರೇಡಿಂಗ್ ನಿಂದಾಗಿ ಪುಣೇರಿ ತಂಡ ಆರಂಭದಲ್ಲಿ ಬೆಂಗಾಲ್ ರೇಡರ್ ಮಣಿಂದರ್ ಸಿಂಗ್ ಸತತವಾಗಿ ಅಂಕಗಳನ್ನು ಸಂಪಾದಿಸಿದ್ದಾರೆ. ಜೊತೆಗೆ ಟ್ಯಾ ಕಲ್ ನಲ್ಲಿಯೂ ಸಾಧಿಸಿ ಕೊಂಡಿತು. ಆದಾಗ್ಯೂ ಪಂದ್ಯ ಮುಕ್ತಾಯಕ್ಕೆ 10 ನಿಮಿಷ ಬಾಕಿ ಇರುವ ತನಕ ಪುಣೆ 27-24ರ ಮುನ್ನಡೆ ಪಡೆದಿತ್ತು. ಆದರೆ 5 ನಿಮಿಷ ಬಾಕಿ ಇರುವ ವೇಳೆ ಆಲ್ ಔಟ್ ಆಗುವ ಮೂಲಕ ಸೋಲಿನ ಹಾದಿ ಕಂಡಿತು.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
KLIVE at Google News App
KLIVE Android App on Google Play Store
Download the most loved Klive App for your Android phone or tablet.
ಜಿಲ್ಲೆಯಲ್ಲಿ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಪ್ರಯೋಜನ ಪಡೆಯುತ್ತಿರುವ ರೈತರ ಸಂಖ್ಯೆ ಕಡಿಮೆಯಿದ್ದು, ಎಲ್ಲಾ ರೈತರು ಇದರ ಪ್ರಯೋಜನ ಪಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಕೆಲಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣ ಗೌಡ ಅವರು ತಿಳಿಸಿದರು.
ಅವರು ಶನಿವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು.
ಜಿಲ್ಲೆಯಲ್ಲಿ ಸಹಕಾರ ಬ್ಯಾಂಕ್‍ನಲ್ಲಿ 96ಸಾವಿರಕ್ಕೂ ಅಧಿಕ ರೈತರು ಖಾತೆಯನ್ನು ಹೊಂದಿದ್ದರೂ, ಫಸಲ್ ಬಿಮಾ ಯೋಜನೆಯಡಿ ನೋಂದಾಯಿಸಿರುವ ರೈತರ ಸಂಖ್ಯೆ ಕೇವಲ 19ಸಾವಿರ ಮಾತ್ರ. ಬೆಳೆ ಹಾನಿ ಸಂಭವಿಸಿದ ಸಂದರ್ಭದಲ್ಲಿ ವಿಮಾ ಹಣವನ್ನು ನೀಡುವ ಈ ಮಹತ್ವದ ಯೋಜನೆ ಬಗ್ಗೆ ರೈತರಿಗೆ ಮಾಹಿತಿಯನ್ನು ಒದಗಿಸಿ, ಯೋಜನೆಯ ಲಾಭವನ್ನು ಹೆಚ್ಚಿನ ರೈತರು ಪಡೆಯುವಂತೆ ಮನವೊಲಿಸಬೇಕು ಎಂದು ಸಚಿವರು ತಿಳಿಸಿದರು.
ರೈತರಿಗೆ ನೀಡಲಾಗುತ್ತಿರುವ ಬೆಂಬಲ ಬೆಲೆಯ ಸಂಪೂರ್ಣ ಲಾಭ ರೈತರಿಗೆ ದೊರೆಯುವಂತೆ ನೋಡಿಕೊಳ್ಳಬೇಕು. ಮಧ್ಯವರ್ತಿ ವ್ಯಾಪಾರಿಗಳಿಗೆ ಇದರ ಪ್ರಯೋಜನ ಪಡೆದುಕೊಳ್ಳದಂತೆ ಎಚ್ಚರಿಕೆ ವಹಿಸಬೇಕು. ರೈತರು ಭತ್ತವನ್ನು ಪಕ್ಕದ ಜಿಲ್ಲೆಯ ಅಕ್ಕಿ ಗಿರಣಿಗಳಿಗೆ ಸಾಗಾಣಿಕೆ ಮಾಡಿದ್ದಲ್ಲಿ, ಅದಕ್ಕೆ ತಗಲುವ ವೆಚ್ಚವನ್ನು ಸರ್ಕಾರದಿಂದ ಭರಿಸಲಾಗುತ್ತಿದ್ದು, ನೇರವಾಗಿ ರೈತರ ಖಾತೆಗೆ ಹಣ ಜಮಾ ಆಗುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.
ಕಳೆದ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿ ಸಂಭವಿಸಿರುವ ಪ್ರಕರಣಗಳಲ್ಲಿ ಹೆಚ್ಚಿನ ಪರಿಹಾರವನ್ನು ಒದಗಿಸುವ ನಿಟ್ಟಿನಲ್ಲಿ ತಾಲೂಕುವಾರು ಬೆಳೆ ಹಾನಿ ವಿವರಗಳನ್ನು ಸಲ್ಲಿಸುವಂತೆ ಸಚಿವರು ಸೂಚಿಸಿದರು.
ಜಲಜೀವನ ಮಿಷನ್: ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ಮಾತನಾಡಿ, ಜಲಜೀವನ ಮಿಷನ್ ಯೋಜನೆ ಅನುಷ್ಟಾನದಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿ 14ನೇ ಸ್ಥಾನದಲ್ಲಿದೆ. ಗ್ರಾಮೀಣ ಭಾಗದಲ್ಲಿ ಪ್ರತಿ ಮನೆ ಮನೆಗೆ ಶುದ್ಧ ಕುಡಿಯುವ ನೀರು ಒದಗಿಸುವ ಈ ಯೋಜನೆಯನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸಬೇಕು. ಕಾಮಗಾರಿಯಲ್ಲಿ ಕಳಪೆ ಗುಣಮಟ್ಟದ ಕುರಿತು ದೂರು ಬಂದರೆ ಸಂಬಂಧಪಟ್ಟ ಅಧಿಕಾರಿಗಳನ್ನೇ ನೇರ ಹೊಣೆ ಮಾಡಲಾಗುವುದು. ಅಂತಹ ಪ್ರಕರಣಗಳಲ್ಲಿ ಸಂಬಂಧಪಟ್ಟ ಗುತ್ತಿಗೆದಾರರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಅವರು ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಒಟ್ಟು 3ಲಕ್ಷ ಮನೆಗಳಿಗೆ ಯೋಜನೆಯಡಿ ನಲ್ಲಿ ನೀರು ಸಂಪರ್ಕ ಕಲ್ಪಿಸುವ ಗುರಿಯನ್ನು ಹೊಂದಲಾಗಿದೆ. ಪ್ರಥಮ ಹಂತದಲ್ಲಿ 86,898 ಮನೆಗಳಿಗೆ ನೀರು ಸಂಪರ್ಕ ಕಲ್ಪಿಸಲಾಗುತ್ತಿದ್ದು, ಇದುವರೆಗೆ 75ಸಾವಿರ ಸಂಪರ್ಕಗಳನ್ನು ಪೂರ್ಣಗೊಳಿಸಿ ನೀರು ಪೂರೈಕೆ ಮಾಡಲಾಗುತ್ತಿದೆ. ಇನ್ನುಳಿದ ಕಾಮಗಾರಿಗಳನ್ನು ಮಾರ್ಚ್ ಅಂತ್ಯದ ಒಳಗಾಗಿ ಪೂರ್ಣಗೊಳಿಸುವಂತೆ ಸಚಿವರು ತಿಳಿಸಿದರು.
ಶಾಸಕರಾದ ಕುಮಾರ ಬಂಗಾರಪ್ಪ, ಅಶೋಕ ನಾಯ್ಕ್, ಆಯನೂರು ಮಂಜುನಾಥ, ಪಿ.ರುದ್ರೇಗೌಡ, ಬೋಜೇಗೌಡ, ಡಿ.ಎಸ್.ಅರುಣ್, ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
KLIVE at Google News App
KLIVE Android App on Google Play Store
Download the most loved Klive App for your Android phone or tablet.
ಶಿವಮೊಗ್ಗದ ಪ್ರೆಸ್ ಟ್ರಸ್ಟ್ ಸಿಬ್ಬಂದಿ ಆದರ್ಶ್ (30) ಅವರು ತಡ ರಾತ್ರಿ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಆದರ್ಶ್ ಅವರು ಅಕಾಲಿಕ ನಿಧನಕ್ಕೆ ಶಿವಮೊಗ್ಗ ಪ್ರೆಸ್ ಟ್ರಸ್ಟ್ ನಲ್ಲಿ ಸಂತಾಪ ಸೂಚಿಸಲಾಯಿತು. ಈ ವೇಳೆ ಪತ್ರಕರ್ತರೊಂದಿಗೆ ಆದರ್ಶ್ ಅವರ ಒಡನಾಟವನ್ನು ಪತ್ರಕರ್ತರು ನೆನಪಿಸಿಕೊಳ್ಳುತ್ತಾ, ಆದರ್ಶ್ ಅವರ ಅಕಾಲಿಕ ಅಗಲಿಕೆ ಪತ್ರಕರ್ತರಲ್ಲಿ ಆಘಾತ ಉಂಟು ಮಾಡಿದೆ.
ಆದರ್ಶ್ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ಅವರ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಕೆ-ಲೈವ್ ಮೀಡಿಯಾ ತಂಡವು ಪ್ರಾರ್ಥಿಸುತ್ತದೆ.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
KLIVE at Google News App
KLIVE Android App on Google Play Store
Download the most loved Klive App for your Android phone or tablet.
ಯುವಜನತೆಯೇ ನಮ್ಮ ದೇಶದ ಶಕ್ತಿ ಮತ್ತು ಭವಿಷ್ಯ. ಯುವಜನತೆ ಮನಸ್ಸು ಮಾಡಿದರೆ ದೇಶದ ಭವಿಷ್ಯವನ್ನೇ ಬದಲಾಯಿಸಬಹುದು ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ನಾರಾಯಣ ಗೌಡ ಹೇಳಿದರು.
ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಷ್ಟ್ರೀಯ ಸೇವಾ ಯೋಜನೆ ಕುವೆಂಪು ವಿವಿ ಹಾಗೂ ಇನ್ನೋವೇಟಿವ್ ಯೂತ್ ಕ್ಲಬ್ ಶಿವಮೊಗ್ಗ ಇವರ ಸಹಯೋಗದಲ್ಲಿ ಇಂದು ನಗರದ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ನೆರೆಹೊರೆ ಯುವ ಸಂಸತ್ತು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಯುವಜನತೆ ಆತ್ಮಪೂರ್ವಕವಾಗಿ ಶಕ್ತಿಯನ್ನು ಒಗ್ಗೂಡಿಸಿದಲ್ಲಿ ಉತ್ತಮ ಅಭಿವೃದ್ದಿ ಸಾಧ್ಯವಾಗುತ್ತದೆ. ತಮ್ಮ ಕುಟುಂಬದಿಂದ ಆರಂಭವಾಗಿ ಅಕ್ಕಪಕ್ಕ, ತಮ್ಮ ಗ್ರಾಮ, ತಾಲ್ಲೂಕು, ಜಿಲ್ಲೆ ಹೀಗೆ ದೇಶಾದ್ಯಂತ ತಮ್ಮ ಶಕ್ತಿಯನ್ನು ವಿಸ್ತರಿಸಬೇಕು. ಹೇಗೆ ತಾವು ಇಂಜಿನಿಯರ್, ಡಾಕ್ಟರ್ ಇತರೆ ಆಗಬೇಕೆಂದುಕೊಂಡು ಸಾಧನೆ ಮಾಡುತ್ತೀರೋ ಹಾಗೇಯೇ ದೇಶೋದ್ದಾರದ ಸಾಧನೆ ಮಾಡಬೇಕು.
ನಮ್ಮ ದೇಶದ ಪ್ರಧಾನಿ ನರೇಂದ್ರ ಮೋದಿಯವರು ಯುವಜನತೆ ಬಗ್ಗೆ ಉನ್ನತವಾದ ಕನಸು ಕಂಡಿದ್ದಾರೆ. ಅವರ ಈ ಕನಸು ಮತ್ತು ವಿಶ್ವಾಸಕ್ಕೆ ನೀವು ಶಕ್ತಿ ತುಂಬಿ ಸಾಕಾರಗೊಳಿಸಬೇಕು. ಮನೆಯಲ್ಲಿ ಯಾರಾದರೂ ಕುಡಿತ ಇನ್ನಿತರೆ ದುಶ್ಚಟಗಳನ್ನು ಹೊಂದಿದ್ದರೆ ಅವರ ಮನವೊಲಿಸಿ ಬಿಡಿಸುವ, ತಮ್ಮ ಸುತ್ತಮುತ್ತ ಸ್ವಚ್ಚತೆ ಕಾಪಾಡುವ ಕೆಲಸ ಮಾಡಬೇಕು. ಹೆಣ್ಣುಮಕ್ಕಳಿಗೆ ಮನವೊಲಿಸುವ ಶಕ್ತಿ ಹೆಚ್ಚಿದ್ದು ಈ ನಿಟ್ಟಿನಲ್ಲಿ ಒಳ್ಳೆಯ ಬೆಳವಣಿಗೆಗೆ ಕಾರಣರಾಗಬೇಕು ಎಂದ ಅವರು ಯುವಜನತೆ ತಮ್ಮ ಶ್ರಮದಿಂದ ರಾಜ್ಯವನ್ನು ಒಂದನೇ ಸ್ಥಾನಕ್ಕೆ ತರಬೇಕೆಂದರು.
ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ.ಎಸ್.ಈಶ್ವರಪ್ಪ ಮಾತನಾಡಿ, ಈ ದೇಶದ ಮೂಲ ಶಕ್ತಿ ನಮ್ಮ ಯುವಜನತೆಯಾಗಿದ್ದು, ದೇಶವನ್ನು ಬದಲಾಯಿಸುವ ಶಕ್ತಿ ಅವರಿಗಿದೆ. ಅದಕ್ಕಾಗಿಯೇ ನಮ್ಮ ದೇಶದ ಪ್ರಧಾನಿ ನರೇಂದ್ರ ಮೋದಿಯವರು ಇಂದು ಏಕಕಾಲದಲ್ಲಿ ರಾಷ್ಟ್ರಾದ್ಯಂತ ನೆರೆಹೊರೆ ಯುವ ಸಂಸತ್ ಕಾರ್ಯಕ್ರಮ ಆಯೋಜಿಸಿ ಉತ್ತಮ ದೇಶ ಕಟ್ಟಲು ಯುವಜನತೆಗೆ ಕರೆ ಕೊಟ್ಟಿದ್ದಾರೆ. ಹಾಗೂ ವಿಶ್ವದಲ್ಲಿ ಇಂದು ಭಾರತ ತಲೆ ಎತ್ತಿ ನಿಲ್ಲುವಂತೆ ಮಾಡಿದ್ದಾರೆ ಎಂದರು.
ನಮ್ಮಲ್ಲಿ ಜಾತಿ ಬೇಧವಿರಬಾರದು. ನಾವೆಲ್ಲ ಒಂದೇ. ಎಲ್ಲರ ಹೃದಯದಲ್ಲಿ ಭಾರತಾಂಬೆ ನೆಲೆಸಿದ್ದಾಳೆ. ದೇಶದ ಒಳಗೆ, ಹೊರಗೆ ಇಂದು ಉಗ್ರಗಾಮಿಗಳು ಕೋಮು ಭಾವನೆ ಬಿತ್ತುತ್ತಿದ್ದು ಇದಕ್ಕೆ ಯುವಜನರಾದ ನೀವು ತಕ್ಕ ಉತ್ತರ ನೀಡಬೇಕು ಹಾಗೂ ಪೋಷಕರು, ಅಧ್ಯಾಪಕರ ಆಸೆಯಂತೆ ಒಳ್ಳೆಯ ವಿದ್ಯಾವಂತರಾಗಿ, ರಾಷ್ಟ್ರಭಕ್ತಿ ಬೆಳೆಸಿಕೊಂಡು ದೇಶಕ್ಕೆ ಉತ್ತಮ ಆಸ್ತಿಯಾಗಬೇಕೆಂದು ಆಶಿಸಿದರು.
ನೆಹರು ಯುವ ಸಂಘಟನೆಯ ರಾಜ್ಯ ನಿರ್ದೇಶಕ ನಟರಾಜ್ ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರಧಾನಮಂತ್ರಿಯವರ ಸೂಚನೆಯಂತೆ ಇಂದು ದೇಶದ 748 ಜಿಲ್ಲೆಗಳಲ್ಲಿ ಏಕಕಾಲದಲ್ಲಿ ನೆರೆಹೊರೆ ಯುವ ಸಂಸತ್ತು ಕಾರ್ಯಕ್ರಮ ಆಯೋಜಿಸಿದ್ದು, ಯುವಜನತೆ ಮೂಲಕ ಎಲ್ಲೆಡೆ ಸ್ವಚ್ಚತೆ, ಆರೋಗ್ಯ, ಕ್ರೀಡೆ, ಸಂಸ್ಕೃತಿ ಇತ್ಯಾದಿ ಬಗ್ಗೆ ತಿಳುವಳಿಕೆ ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ಪ್ರಸ್ತುತ ರಾಜ್ಯದಲ್ಲಿ 5 ಲಕ್ಷ ಎನ್‍ಎಸ್‍ಎಸ್ ಸ್ವಯಂ ಸೇವಕರಿದ್ದು ನಮ್ಮ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು ಈ ಸಂಖ್ಯೆಯನ್ನು 10 ಲಕ್ಷಕ್ಕೆ ಏರಿಸುವ ಗುರಿ ಹೊಂದಿದ್ದಾರೆ. ಮಹಿಳಾ ಸಬಲೀಕರಣಕ್ಕಾಗಿ ಸುಮಾರು 3 ಲಕ್ಷ ಮಹಿಳೆಯರಿಗೆ ಓಬವ್ವ ಸ್ವಂರಕ್ಷಣಾ ತರಬೇತಿ ನೀಡಲಾಗುತ್ತಿದೆ. ಅವಕಾಶವಂಚಿತ ಯುವಜನತೆಗೆ ಪೈಲಟ್ ತರಬೇತಿ ನೀಡುವ ಯೋಜನೆಯನ್ನು ಸಹ ಸಚಿವರು ಹಾಕಿಕೊಂಡಿದ್ದಾರೆ ಎಂದರು.
ಜೆಪಿಎನ್ ಕಾಲೇಜಿನ ಇತಿಹಾಸ ಉಪನ್ಯಾಸಕ ಡಾ.ದಿಲೀಪ್ ಕುಮಾರ್ ಪಾಂಡೆ ಉಪನ್ಯಾಸ ನೀಡಿ, ನಮ್ಮೆಲ್ಲರ ನಿಜವಾದ ಐಕಾನ್ ಸ್ವಾಮಿ ವಿವೇಕಾನಂದ, ಶಿವಾಜಿ ಮತ್ತು ಇತರೆ ಸಾಧು ಸಂತರು. ಯುವಜನತೆ ಸ್ವಾಮಿ ವಿವೇಕಾನಂದರ ಜೀವನದ ತತ್ವಾದರ್ಶಗಳನ್ನು ಅರಿತು ಅಳವಡಿಸಿಕೊಂಡಲ್ಲಿ ಬದುಕು ಬದಲಾಗುವುದರಲ್ಲಿ ಅನುಮಾನವೇ ಇಲ್ಲ. ಸ್ವಾಮಿ ವಿವೇಕಾನಂದರು ಅಲ್ಪಾಯು ಆದರೂ ಅವರು ನಮಗೆ ನೀಡಿರುವ ಸಂದೇಶಗಳು ಬೆಲೆ ಕಟ್ಟಲಾರದಂತಹವು.
ಮಾನವನ ಇತಿಹಾಸ ಆರಂಭದಿಂದ ಜಗತ್ತಿನಲ್ಲಿ ಕೋಟ್ಯಾಂತರ ಭಾಷಣಗಳಾಗಿವೆ. ಅದರಲ್ಲಿ 7 ಭಾಷಣಗಳನ್ನು ಮನುಕುಲ ಪರಿವರ್ತಿಸುವ ಭಾಷಣಗಳೆಂದು ಗಿನ್ನೆಸ್ ದಾಖಲೆಯಲ್ಲಿ ಸೇರಿಸಲಾಗಿದೆ. ಅದರಲ್ಲಿ ನಮ್ಮ ದೇಶದ ಬುದ್ದ ಮತ್ತು ಸ್ವಾಮಿ ವಿವೇಕಾನಂದರ ಭಾಷಣ ಸೇರಿವೆ. ನಮ್ಮ ರಾಷ್ಟ್ರವನ್ನು ಪಾಶ್ಚಾತ್ಯರು ಭಿಕ್ಷುಕರ, ಮೌಢ್ಯರ, ಅಂಗವಿಕಲರ ರಾಷ್ಟ್ರ ಎಂದು ಬಿಂಬಿಸಿತ್ತು. ಆದರೆ ನಮ್ಮದು 5 ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಅತ್ಯಂತ ಪ್ರಾಚೀನವಾದ ದೇಶ. ಜಗತ್ತಿನಲ್ಲೇ ವಿಶ್ವವಿದ್ಯಾಲಯದ ಪರಿಕಲ್ಪನೆ ನೀಡಿದ ಮೊದಲ ದೇಶ. ಇಂತಹ ಸುಸಂಸ್ಕೃತ, ಸಂಪತ್ಭರಿತ ರಾಷ್ಟ್ರದ ಪರಿಚಯವನ್ನು ಜಗತ್ತಿಗೆ ಮಾಡಿಸಿದ್ದು ಸ್ವಾಮಿ ವಿವೇಕಾನಂದನಂತಹವರು.
ದೇಶ/ಸಮಾಜವನ್ನು ಬದಲಾವಣೆ ಮಾಡುವ ಶಕ್ತಿ ಯುವಜನತೆಗೆ ಇದೆ. ಶಕ್ತಿಯೇ ಜೀವನ, ದೌರ್ಬಲ್ಯವೇ ಮರಣ ಎಂದಿದ್ದಾರೆ ಅವರು. ಶಿಕ್ಷಣಕ್ಕೆ ಅದ್ಭುತ ಶಕ್ತಿ ಇದೆ. ಇದು ಉತ್ತಮ ನಡತೆ ನೀಡಿ, ಮನಸ್ಸಿನ ಶಕ್ತಿ ದ್ವಿಗುಣಗೊಳಿಸುತ್ತದೆ ಹಾಗೂ ಸ್ವಂತ ಕಾಲಿನ ಮೇಲೆ ನೀಲ್ಲುವಂತೆ ಮಾಡುತ್ತದೆ ಎಂದಿದ್ದರು. ಜಗತ್ತಿನ ಎಲ್ಲ ಶಕ್ತಿ ನಿನ್ನಲ್ಲಿದೆ. ಅದನ್ನು ನೀರು ಹೊರತೆಗೆದು ನಿನ್ನ ಗುರಿ ಮುಟ್ಟಬೇಕು. ಜಗದ ಸೇವೆ ಮೂಲಕ ಆತ್ಮದ ಕಲ್ಯಾಣ ಸಾಧ್ಯವೆಂದ ಅವರು ಆಧ್ಯಾತ್ಮ ಮತ್ತು ವಿಜ್ಞಾನ ಒಂದೇ ನಾಣ್ಯದ ಎರಡು ಮುಖ ಎಂದಿದ್ದರು. ಈ ನಿಟ್ಟಿನಲ್ಲಿ ಯುವಜನತೆ ಸಾಗಬೇಕೆಂದರು.
ಇದೇ ಸಂದರ್ಭದಲ್ಲಿ ಪ್ರೊ. ವಿಲಿಯಂ ಡಿಸೋಜಾ ಉಪನ್ಯಾಸ ನೀಡಿದರು. ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥಸ್ವಾಮಿ, ಜಿಲ್ಲಾ ಯುವ ಅಧಿಕಾರಿ ಉಲ್ಲಾಸ್ ಕೆ.ಟಿ.ಕೆ, ಕುವೆಂಪು ವಿವಿ ಎನ್‍ಎಸ್‍ಎಸ್ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ.ನಾಗರಾಜ್ ಪರಿಸರ, ವಿದ್ಯಾರ್ಥಿಗಳು, ಇನ್ನಿತರರು ಹಾಜರಿದ್ದರು.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
KLIVE at Google News App
KLIVE Android App on Google Play Store
Download the most loved Klive App for your Android phone or tablet.
ಕನ್ನಡ ಮತ್ತು ಸಂಸ್ಕಂತಿ ಇಲಾಖೆ ವತಿಯಿಂದ ಇಂದು ನಗರದ ಕುವೆಂಪು ರಂಗಮಂದಿರದಲ್ಲಿ ಶಿವಾಜಿ ಮಹಾರಾಜರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ.ಎಸ್.ಈಶ್ವರಪ್ಪ, ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಜಿಲ್ಲಾ ಉಸುವಾರಿ ಸಚಿವರಾದ ಕೆ.ಸಿ ನಾರಯಣಗೌಡ, ಸಂಸದರಾದ ಬಿ.ವೈ.ರಾಘವೇಂದ್ರ ಅವರು ದೀಪ ಬೆಳಗಿಸುವ ಮೂಲಕ ಶಿವಾಜಿಯವರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
ಇದೇ ಸಂದರ್ಭದಲ್ಲಿ ಶಿವಾಜಿ ಮಹಾರಾಜರ ಕ್ಯಾಲೆಂಡರನ್ನು ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಸಮಾಜದ ಮುಖಂಡರಾದ ದಿನೇಶ್ ಚೌವ್ಹಾಣ್, ಡಿ.ಜೆ.ತಾನಾಜಿ ಬೋಸ್ಲೆ, ಚಂದ್ರರಾವ್ ಗಾರ್ಗೆ, ಪಾಲಿಕೆ ಮೇಯರ್ ಸುನಿತಾ ಅಣ್ಣಪ್ಪ, ಜಿಲ್ಲಾಧಿಕಾರಿ ಡಾ.ಸೆಲ್ವಮಣಿ.ಆರ್, ಕನ್ನಡ ಮತ್ತು ಸಂಸ್ಕಂತಿ ಇಲಾಖೆಯ ಸಹಾಯಕ ನಿರ್ದೇಶಕ ಎಚ್.ಉಮೇಶ್ ಮತ್ತಿತರರು ಭಾಗಿಯಾಗಿದ್ದರು.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
KLIVE at Google News App
KLIVE Android App on Google Play Store
Download the most loved Klive App for your Android phone or tablet.
ಜಿಲ್ಲಾ ಮಟ್ಟದ ಯುವ ವಿಜ್ಞಾನಿ ಸ್ಪರ್ಧೆಯಲ್ಲಿ ಲಿಖಿತ ಪರೀಕ್ಷೆ, ವಿಜ್ಞಾನದ ಮಾದರಿ ಹಾಗೂ ವಿವಿಧ ಸ್ಪರ್ಧೆಗಳಲ್ಲಿ ಉತ್ತಮ ಸಾಧನೆ ತೋರಿರುವ ಶಿವಮೊಗ್ಗ ಜಿಲ್ಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದಿಂದ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಜಿಲ್ಲಾ ಸಮಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಸಭಾಂಗಣದಲ್ಲಿ ಆಯೋಜಿಸಿದ್ದ ಸ್ಪರ್ಧೆಯಲ್ಲಿ ವಿವಿಧ ಶಾಲೆಯ ವಿದ್ಯಾರ್ಥಿಗಳು ವಿಜೇತರಾಗಿದ್ದಾರೆ.
ಜ್ಞಾನದೀಪ ಪ್ರೌಢಶಾಲೆಯ ಆರೊನ್, ಸರ್ವೋದಯ ಪ್ರೌಢಶಾಲೆಯ ಯುವ ವಿಜ್ಞಾನಿ ಪವಿತ್ರ ಜಿಲ್ಲಾ ಮಟ್ಟದಿಂದ ರಾಜ್ಯಮಟ್ಟದಿಂದ ಆಯ್ಕೆಯಾಗಿದ್ದಾರೆ. ಪ್ರಥಮ ಬಹುಮಾನ 5 ಸಾವಿರ ರೂ., ಪ್ರಮಾಣ ಪತ್ರ, ಪಾರಿತೋಷಕ ಹಾಗೂ ದ್ವಿತೀಯ ಬಹುಮಾನ 3 ಸಾವಿರ ರೂ., ಪ್ರಮಾಣ ಪತ್ರ, ಪಾರಿತೋಷಕ ವಿತರಿಸಲಾಯಿತು.
ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಚಾರ್ಯ ಬಿ.ಆರ್.ಬಸವರಾಜಪ್ಪ ಮಾತನಾಡಿ, ವಿದ್ಯಾರ್ಥಿಗಳು ಪರಿಸರದಲ್ಲಿ ಸಿಗುವ ವಸ್ತುಗಳನ್ನು ಬಳಸಿ ಹೊಸ ಹೊಸ ಸಂಶೋಧನೆಗಳನ್ನು ಮಾಡಬೇಕು. ಸಮಾಜಕ್ಕೆ ಉಪಯುಕ್ತವಾದ ಮಾದರಿಗಳನ್ನು ರೂಪಿಸಿ ಹೊಸ ಆವಿಷ್ಕಾರಗಳನ್ನು ಮಾಡಬೇಕು. ಇದಕ್ಕೆ ಪೋಷಕರು ಹಾಗೂ ಶಿಕ್ಷಕರು ಸಹಕರಿಸಬೇಕು ಎಂದು ಹೇಳಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಡಾ. ಪರಿಸರ ನಾಗರಾಜ್ ಮಾತನಾಡಿ, ವಿಜ್ಞಾನ ಎಲ್ಲರಿಗೂ ಅವಶ್ಯಕ. ವಿಜ್ಞಾನದಲ್ಲಿ ಆಸಕ್ತಿ ಹೆಚ್ಚಿಸುವಂತೆ ಸಲಹೆ ಮಾರ್ಗದರ್ಶನ ನೀಡಬೇಕು. ಜಿಲ್ಲಾ ಮಟ್ಟದಿಂದ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಗಳಿಗೆ ಶುಭಾಶಯ. ರಾಜ್ಯಮಟ್ಟದಲ್ಲಿಯು ವಿಜೇತರಾಗಲಿ ಎಂದು ಆಶಿಸಿದರು.
ವೇದಿಕೆಯಲ್ಲಿ ಡಾ. ಎಚ್.ಬಿ.ಸುರೇಶ್, ಜಗದೀಶ್, ಫ್ರಾನ್ಸೀಸ್ ಬೆಂಜಮ್, ಗಾಯತ್ರಿ ಪಟೇಲ್, ಡಾ. ರಶ್ಮಿ, ಲೋಕೇಶ್ವರಪ್ಪ, ಜಿ.ವಿಜಯ್‌ಕುಮಾರ್, ಶಂಕರ್‌ಗೌಡ, ವೀಣಾ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಸದಸ್ಯರು ಹಾಜರಿದ್ದರು.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
KLIVE at Google News App
KLIVE Android App on Google Play Store
Download the most loved Klive App for your Android phone or tablet.
ಮಳೆ-ಬೆಳೆ ಸಂಪಾಯಿತಲೇ ಪರಾಕ್. ಇದು ವಿಜಯನಗರದ ಹೂವಿನಹಡಗಲಿ ಎಂಬ ತಾಲೂಕಿನ ಐತಿಹಾಸಿಕ ಪ್ರಸಿದ್ಧ ಧಾರ್ಮಿಕ ಸುಕ್ಷೇತ್ರ ಮೈಲಾರದಲ್ಲಿ ಮೊಳಗಿದ ಮೈಲಾರ ಲಿಂಗೇಶ್ವರ ಸ್ವಾಮಿ ಕಾರಣಿಕ ನುಡಿ.
ಮೈಲಾರದ ಡೆಂಕನ ಮರಡಿಯಲ್ಲಿ ನಿನ್ನೆ ಸಂಜೆ ಅಪಾರ ಭಕ್ತರು ಜಯಘೋಷ, ಹರ್ಷೋದ್ಗಾರದ ನಡುವೆ ಪ್ರಸ್ತುತ ಸಾಲಿನ ಕಾರಣಿಕ ನುಡಿ ಮೊಳಗಿತು.
ಸುಕ್ಷೇತ್ರದ ಧರ್ಮಕರ್ತ ವೆಂಕಪ್ಪಯ್ಯ ಒಡೆಯರ್ ಅವರಿಂದ ಬಂಡಾರದ ಆಶೀರ್ವಾದ ಪಡೆದು ಸುಕ್ಷೇತ್ರ ಪರಂಪರೆಯ ಸಂಕೇತವಾಗಿರುವ ಬಿಲ್ಲು ಏರಿದ ಗೊರವಯ್ಯ ರಾಮಣ್ಣ ಅವರು, ಸದ್ದಲೇ ಎಂದು ಕೂಗುತ್ತಿದ್ದಂತೆ ಡೆಂಕನ ಮರಡಿಯಲ್ಲಿ ಸೇರಿದ್ದ ಭಕ್ತ ಪರಿಷೆ, ಜೀವಸಂಕುಲ ಕ್ಷಣಕಾಲ ಸ್ತಬ್ಧವಾಯಿತು. ಆಗ ಗೊರವಯ್ಯ ಮೇಲಿನಂತೆ ಕಾರಣಿಕ ನುಡಿದು ಪಶ್ಚಿಮ ದಿಕ್ಕಿಗೆ ಹಿಮ್ಮುಖವಾಗಿ ಜಿಗಿದರು. ಅಲ್ಲಿ ನೆರೆದಿದ್ದ ಗೊರವ ಸಮೂಹ ಅವರನ್ನು ಕಂಬಳಿಯಲ್ಲಿ ಹಿಡಿದರು.
ಪ್ರಸ್ತುತ ವರ್ಷದ ಕಾರಣಿಕ ನುಡಿ ಶುಭಸೂಚಕ. ಈ ವರ್ಷ ಮಳೆ ,ಬೆಳೆ ಸಮೃದ್ಧವಾಗಿ ರೈತರು ಬದುಕು ಹಸನಾಗಲಿದೆ. ಕೃಷಿ, ರಾಜಕೀಯ, ವಾಣಿಜ್ಯ ಸೇರಿದಂತೆ ಎಲ್ಲಾ ಕ್ಷೇತ್ರಕ್ಕೂ ಒಳಿತಾಗುವ ಸೂಚನೆ ಕಾಣಿಸುತ್ತಿದೆ ಎಂದು ಭವಿಷ್ಯವಾಣಿಯನ್ನು ವಿಶ್ಲೇಷಿಸಲಾಗಿದೆ.
ನಿನ್ನೆ ಮುಂಜಾನೆಯಿಂದ ನಿರ್ಬಂಧ ತೆರವುಗೊಳಿಸಿದ್ದರಿಂದ ಲಕ್ಷಾಂತರ ಭಕ್ತರು ಸುಕ್ಷೇತ್ರಕ್ಕೆ ಆಗಮಿಸಿದ್ದರು. ಡೆಂಕನ ಮರಡಿ ತುಂಬಾ ಜನಸಾಗರ ಸೇರಿದ್ದರಿಂದ ಈ ಹಿಂದಿನ ಸಂಭ್ರಮ ಮರಳಿತ್ತು.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
KLIVE at Google News App
KLIVE Android App on Google Play Store
Download the most loved Klive App for your Android phone or tablet.
ಪಾಕಿಸ್ತಾನದ ಐಎಸ್ಐ ಪೋಷಿತ ಲಷ್ಕರೆ ತಯ್ಬಾ ಉಗ್ರ ಸಂಘಟನೆಯ ಬೆಂಬಲಿಗರಿಗೆ ರಾಷ್ಟ್ರೀಯ ತನಿಖಾ ದಳದ ಗೌಪ್ಯ ಮಾಹಿತಿಗಳನ್ನು ಸೋರಿಕೆ ಮಾಡಿದ ಆರೋಪದ ಮೇರೆಗೆ ಮಾಜಿ ಐಪಿಎಸ್ ಅಧಿಕಾರಿ ಅರವಿಂದ್ ದಿಗ್ವಿಜಯ್ ನೇಗಿ ಅವರನ್ನು ಬಂಧಿಸಲಾಗಿದೆ.
ಎನ್ಐಎ ಅಧಿಕಾರಿಗಳಿಂದ ಬಂಧನಕ್ಕೆ ಒಳಗಾಗಿರುವ ಹಿಮಾಚಲ ಪ್ರದೇಶ ಕೇಡರ್ ನ ಮಾಜಿ ಎನ್ಐಎ ವರಿಷ್ಠಾಧಿಕಾರಿ ಅವರು ಶಿಮ್ಲಾದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂದರ್ಭದಲ್ಲಿ ಪಾಕಿಸ್ತಾನದ ಏಜೆಂಟರ ನೊಂದಿಗೆ ಸಂಪರ್ಕಕ್ಕೆ ಬಂದಿದ್ದರು. ಲಷ್ಕರ್ ಸಂಘಟನೆ ಗಾಗಿ ಗೌಪ್ಯವಾಗಿ ಕಾರ್ಯನಿರ್ವಹಿಸುತ್ತಿದ್ದ ಮಧ್ಯವರ್ತಿ ಒಬ್ಬನಿಗೆ ಅವರು ಎನ್ಐಎ ಕಛೇರಿಯಲ್ಲಿನ ಮಹತ್ವದ ದಾಖಲೆಗಳನ್ನು ಆ ವೇಳೆ ನೀಡಿರುವುದಾಗಿ ತಿಳಿದುಬಂದಿದೆ. ಮಾನವ ಹಕ್ಕುಗಳ ಹೋರಾಟಗಾರ ಎನ್ನಲಾದ ಖುರ್ರಮ್ ಪರ್ವೇಜ್ ನನ್ನು ಎನ್ ಐ ಎ ಇತ್ತೀಚೆಗೆ ವಿಚಾರಣೆಗೆ ಒಳಪಡಿಸಿತ್ತು. ಲಷ್ಕರ್ ಉಗ್ರ ಜಾಲ ವಿಸ್ತರಣೆ ಕುರಿತು ತೀವ್ರ ವಿಚಾರಣೆಗೆ ಒಳಪಡಿಸಿದ ಸಂದರ್ಭದಲ್ಲಿ ಪರ್ವೇಜ್ ನೇಗಿ ಕುರಿತು ಮಾಹಿತಿ ನೀಡಿದ್ದಾನೆ ಎಂದು ಮೂಲಗಳು ತಿಳಿಸಿವೆ.
ನವೆಂಬರ್ 22 ರಂದು ನೇಗಿ ಅವರು ಕಾರ್ಯನಿರ್ವಹಿಸಿದ ಹಿಮಾಚಲಪ್ರದೇಶದ ಕಿನ್ನೋರ್ ನಲ್ಲಿರುವ ಎನ್ಐಎ ಕಚೇರಿ, ಸೋನಾವರ್ ಮತ್ತು ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ನ ಅಮೀರ ಕದಲ್ ಪರ್ವೇಜ್ ಅವರ ನಿವಾಸದ ಮೇಲೆ ಎನ್ ಐಎ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿ ಶೋಧ ಕಾರ್ಯ ಕೈಗೊಂಡಿದ್ದಾರೆ.
ಲ್ಯಾಪ್ ಟಾಪ್, ಸ್ಮಾರ್ಟ್ಫೋನ್ ಸೇರಿದಂತೆ ಹಲವು ಎಲೆಕ್ಟ್ರಾನಿಕ್ ಸಾಧನಗಳನ್ನು ವಶಕ್ಕೆ ಪಡೆದು ತೀವ್ರ ಪರಿಶೀಲನೆಗೆ ಒಳಪಡಿಸಲಾಗಿದೆ.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
KLIVE at Google News App
KLIVE Android App on Google Play Store
Download the most loved Klive App for your Android phone or tablet.
ಜನವರಿ ಮೂರರಂದು ದೇಶದಿಂದ ಆರಂಭಿಸಲಾದ 15ರಿಂದ 18 ವರ್ಷದ ಮಕ್ಕಳಿಗೆ ಕೊರೋನಾ ನಿರೋಧಕ ಲಸಿಕೆ ನೀಡುವ ಅಭಿಯಾನದಡಿಯಲ್ಲಿ ಶುಕ್ರವಾರದವರೆಗೆ ಎರಡು ಕೋಟಿ ಮಕ್ಕಳಿಗೆ ಲಸಿಕೆ ನೀಡಲಾಗಿದೆ. ಇದೊಂದು ಮಹತ್ತರ ಸಾಧನೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ತಮ್ಮ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ.
ಲಸಿಕೆ ಪಡೆದವರ ಪೈಕಿ ಶೇ. 70 ರಷ್ಟು ಮಕ್ಕಳು ಮೊದಲ ಡೋಸ್ ಪೂರ್ಣಗೊಳಿಸಿದ್ದಾರೆ. ದೇಶದಲ್ಲಿ 15ರಿಂದ 18 ವರ್ಷದೊಳಗೆ ಸುಮಾರು 7.5 ಕೋಟಿ ಮಕ್ಕಳಿದ್ದಾರೆ ಎಂದು ಭಾರತೀಯ ನೋಂದಣಾಧಿಕಾರಿಗಳ ದಾಖಲೆಗಳಿಂದ ತಿಳಿದುಬಂದಿದೆ. ಉಚಿತ ಕೊರೋನಾ ಲಸಿಕಾ ಅಭಿಯಾನದ ಅಡಿಯಲ್ಲಿ ದೇಶಾದ್ಯಂತ ಇರುವವರೆಗೂ 121 ಕೋಟಿಗೂ ಹೆಚ್ಚು ಡೋಸ್ ಗಳನ್ನು ಜನರಿಗೆ ನೀಡಲಾಗಿದೆ.