Tuesday, February 17, 2026
Tuesday, February 17, 2026
Home Blog Page 1726

ಪ್ರಥಮ ಪಿಯು ಪರೀಕ್ಷೆ ಮಂಗಳೂರು ಜಿಲ್ಲೆಯಲ್ಲಿ ಮಾದರಿ ವ್ಯವಸ್ಥೆ

0

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಪಿಯುಸಿ ಪರೀಕ್ಷೆಯ ವೇಳಾಪಟ್ಟಿಯ ಸಮಯ ಬದಲಾಯಿಸಲಾಗಿದೆ. ಮಧ್ಯಾಹ್ನದ ನಂತರ ನಡೆಯಬೇಕಿದ್ದ ಪರೀಕ್ಷೆಗಳನ್ನು ಬೆಳಿಗ್ಗೆ ನಡೆಸಲು ನಿರ್ಧರಿಸಲಾಗಿದೆ. ಇದೇ, ಮಾದರಿಯನ್ನು ರಾಜ್ಯಮಟ್ಟದಲ್ಲೂ ಸಹ ಅಳವಡಿಸಲು ಸಿದ್ಧತೆಗಳು ನಡೆಯುತ್ತಿವೆ.

ಮಂಗಳೂರು ಜಿಲ್ಲೆಯ ಪದವಿಪೂರ್ವ ಶಿಕ್ಷಣ ಇಲಾಖೆಯು ಪ್ರಥಮ ಪಿಯುಸಿ ಪರೀಕ್ಷೆಯಲ್ಲಿ ಬದಲಾವಣೆ ತಂದಿದೆ. ಪರೀಕ್ಷಾ ವೇಳಾಪಟ್ಟಿ, ಪ್ರಶ್ನೆಪತ್ರಿಕೆ ಸಿದ್ಧತೆ ಸೇರಿದಂತೆ ಪ್ರತಿಯೊಂದು ವಿಚಾರವನ್ನು ಜಿಲ್ಲಾಮಟ್ಟದಲ್ಲಿಯೇ ನಿರ್ಧರಿಸುವ ಸ್ವಾತಂತ್ರ್ಯವನ್ನು ಜಿಲ್ಲಾಮಟ್ಟದ ಉಪನಿರ್ದೇಶಕರಿಗೆ ನೀಡಲಾಗಿತ್ತು. ಆದರೆ ಪ್ರಥಮ ಪಿಯುಸಿ ಪರೀಕ್ಷೆಯನ್ನು ಇಲಾಖೆಯು ಮೊದಲ ಬಾರಿಗೆ ಮಧ್ಯಾಹ್ನದ ನಂತರ ನಡೆಸಲು ಸೂಚಿಸಿತ್ತು.

ಇದಕ್ಕೆ, ದ.ಕ ಪ್ರಿನ್ಸಿಪಾಲರ ಅಸೋಸಿಯೇಷನ್ ಸೇರಿದಂತೆ ವಿದ್ಯಾರ್ಥಿಗಳ ಹೆತ್ತವರು ಈ ಪರೀಕ್ಷೆಯನ್ನು ಆಗ್ರಹಿಸಿದ್ದಾರೆ. ಎಸೆಸೆಲ್ಸಿ ಪರೀಕ್ಷೆಯ ವಿರಾಮದ ಸಮಯದಲ್ಲಿ ಪ್ರಥಮ ಪಿಯು ಪರೀಕ್ಷೆ ಮಾಡುವಂತೆ ಇಲಾಖೆಗೆ ಮನವಿ ಮಾಡಿದ್ದರು. ಪ್ರಸ್ತುತ ಸಂದರ್ಭದಲ್ಲಿ ಇಲಾಖೆ ನಿರ್ದೇಶಕರು ಕೂಡ ಪರೀಕ್ಷೆ ಬೆಳಗಿನ ವೇಳೆಯಲ್ಲೇ ನಡೆಸಲು ಗ್ರೀನ್ ಸಿಗ್ನಲ್ ನೀಡಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ವಿದೇಶದಿಂದ ಆಗಮಿಸುವವರಿಗೆ ಕೋವಿಡ್ ಮಾರ್ಗಸೂಚಿ

0

ಭಾರತದಲ್ಲಿ ಕೊರೋನಾ ರೂಪಾಂತರಿ ಯಿಂದ ಉಂಟಾಗಿದ್ದ ಮೂರನೇ ಅಲೆಯ ಪರಿಣಾಮ ತಗ್ಗಿದ ಕಾರಣ ಕೇಂದ್ರ ಸರ್ಕಾರವು ಅಂತರಾಷ್ಟ್ರೀಯ ಪ್ರಯಾಣಿಕರ ಮಾರ್ಗಸೂಚಿಗಳನ್ನು ಪರಿಷ್ಕರಿಸಿದೆ. ವಿದೇಶದಿಂದ ಆಗಮಿಸುವವರಿಗೆ ಕ್ವಾರಂಟೈನ್ ಇಲ್ಲ ಎಂದು ತಿಳಿಸಿದೆ.

ವಿದೇಶದಿಂದ ಆಗಮಿಸುವವರು ಏಳು ದಿನ ಕಡ್ಡಾಯವಾಗಿ ಕ್ವಾರಂಟೈನ್ ಆಗುವಂತಿಲ್ಲ. ಆದರೆ, ಭಾರತಕ್ಕೆ ಬಂದ 14 ದಿನಗಳವರೆಗೆ ಆರೋಗ್ಯದ ಮೇಲೆ ಸ್ವಯಂ ನಿಗಾ ಇಡಬೇಕು ಮತ್ತು ಆಗಮಿಸಿದ ಎಂಟನೇ ದಿನ ಆರ್ ಟಿಪಿಸಿಆರ್ ತಪಾಸಣೆ ಮಾಡಿಸಿಕೊಂಡು ಏರ್ ಸುವಿಧಾ ಪೋರ್ಟಲ್ ನಲ್ಲಿ ತಪಾಸಣೆ ವರದಿಯ ಫಲಿತಾಂಶ ಅಪ್ಲೋಡ್ ಮಾಡಬೇಕು ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಂಡಾವೀಯ ಅವರು ಸೂಚಿಸಿದ್ದಾರೆ.

ವಿಮಾನ ನಿಲ್ದಾಣಕ್ಕೆ ಆಗಮಿಸುವವರ ತಪಾಸಣೆ ವೇಳೆ ಪ್ರಯಾಣಿಕರಲ್ಲಿ ಕೊರೋನಾ ಸೋಂಕಿನ ಲಕ್ಷಣಗಳು ಕಂಡು ಬಂದರೆ ಕೂಡಲೇ ಅವರು ಐಸೋಲೆಟ್ ಆಗುವ ಜೊತೆಗೆ ವೈದ್ಯಕೀಯ ಚಿಕಿತ್ಸೆ ಪಡೆಯಬೇಕು. ಜೊತೆಗೆ, ಪ್ರಯಾಣಕ್ಕೂ ಮೊದಲಿನ 72 ಗಂಟೆಯೊಳಗೆ ಮಾಡಿಸಿದ ಕೊರೋನಾ ತಪಾಸಣೆ ವರದಿ ಮತ್ತು ಸಂಪೂರ್ಣ ಲಸಿಕೆ ಪಡೆದ ಕುರಿತು ದಾಖಲೆ ಸಲ್ಲಿಸಬೇಕು ಎಂದು ನೂತನ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಅಮೆರಿಕ, ನ್ಯೂಜಿಲ್ಯಾಂಡ್, ಬ್ರಿಟನ್, ಆಸ್ಟ್ರೇಲಿಯಾ, ಸೌದಿ ಅರೇಬಿಯಾ, ಇಸ್ರೇಲ್, ಬಾಂಗ್ಲಾದೇಶ, ನೇಪಾಳ ಸೇರಿ ಸುಮಾರು 82 ದೇಶಗಳಿಂದ ಬರುವವರಿಗೆ ಕ್ವಾರಂಟೈನ್ ನಿರ್ಬಂಧದಿಂದ ಮುಕ್ತಗೊಳಿಸಲಾಗಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಶಾಲೆ ಬಿಟ್ಟಿರುವ ಮಕ್ಕಳನ್ನ ಪತ್ತೆ ಮಾಡಿ ಶಾಲೆಗೆ ಸೇರಿಸಬೇಕು

0

ಕೋವಿಡ್ ಹಿನ್ನೆಲೆಯಲ್ಲಿ ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಗುರುತಿಸಿ ಮತ್ತೆ ಶಾಲೆಗೆ ಸೇರಿಸುವ ಪ್ರಕ್ರಿಯೆಯಲ್ಲಿ ಎಲ್ಲಾ ಇಲಾಖೆಗಳು ಕೈ ಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಹೇಳಿದರು.

ಜಿಲ್ಲಾಧಿಕಾರಿ ನೂತನ ಸಭಾಂಗಣದಲ್ಲಿ ಮಕ್ಕಳ ಹಕ್ಕುಗಳ ಕುರಿತಾದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಕೋವಿಡ್ ಬಳಿಕ ಮಕ್ಕಳು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರಿಗೆ ಸರಿಯಾಗಿ ಮಾರ್ಗದರ್ಶನ ಮಾಡುವ ಕಾರ್ಯವನ್ನು ಮಾಡಬೇಕಿದೆ. ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಇರುವ ಕಾನೂನುಗಳ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು. ಮಕ್ಕಳ ದತ್ತು ಸ್ವೀಕಾರ ಪ್ರಕ್ರಿಯೆಯಂತಹ ಕಾಯ್ದೆಗಳ ಬಗ್ಗೆ ಸರಿಯಾಗಿ ಅರಿವು ಇಲ್ಲದೆ, ಹಲವಾರು ಮಂದಿ ಸಮಸ್ಯೆಗೆ ತುತ್ತಾಗುತ್ತಾರೆ ಎಂದರು.

ಮಕ್ಕಳ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ. ಇದು ಯಾವುದೇ ಇಲಾಖೆಗೆ ಸೀಮಿತವಲ್ಲ. ಮಕ್ಕಳ ಹಕ್ಕುಗಳ ರಕ್ಷಣೆಗೆ ಪ್ರತಿಯೊಬ್ಬರೂ ಸ್ಪಂದಿಸಬೇಕು. ಮಕ್ಕಳ ಹಕ್ಕುಗಳ ಬಗ್ಗೆ ಪ್ರತಿ ಶಾಲೆಗಳಲ್ಲಿ ಅರಿವು ಮೂಡಿಸುವ ಕಾರ್ಯ ಆಗಬೇಕಿದೆ. ಪ್ರತಿ ಗ್ರಾಮ ಪಂಚಾಯತ್‌ಗಳಲ್ಲಿ ಮಕ್ಕಳ ಗ್ರಾಮಸಭೆಗಳನ್ನು ನಡೆಸಲು ಈಗಾಗಲೇ ಸೂಚಿಸಲಾಗಿದ್ದು, ಈ ಗ್ರಾಮ ಸಭೆಗಳಲ್ಲಿ ಗ್ರಾಮದ ಮಕ್ಕಳ ಸಮಸ್ಯೆಗಳ ಬಗ್ಗೆ, ಅವರ ಅಗತ್ಯಗಳನ್ನು ಪೂರೈಸುವ ಬಗ್ಗೆ ಚರ್ಚೆ ನಡೆದು ಅನುಷ್ಠಾನಗೊಳಿಸುವ ಕಾರ್ಯ ಆಗಬೇಕಿದೆ ಎಂದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸರಸ್ವತಿ ಅವರು ಮಾತನಾಡಿ, ಮಕ್ಕಳ ಹಕ್ಕುಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಉದ್ದೇಶದಿಂದ ಎಲ್ಲಾ ಶಾಲೆಗಳಲ್ಲಿ ಕಾನೂನು ಅರಿವು ಕ್ಲಬ್ ರೂಪಿಸಲಾಗುತ್ತಿದೆ. ಈ ಮೂಲಕ ವಾರದಲ್ಲಿ ಒಂದು ದಿನ ಮಕ್ಕಳ ಹಕ್ಕುಗಳ ಕುರಿತಾದ ಕಾನೂನುಗಳ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಲಾಗುವುದು. ಮೊದಲ ಹಂತದಲ್ಲಿ ಶಿಕ್ಷಕರಿಗೆ ಮೂಲಭೂತ ಕಾನೂನುಗಳ ಬಗ್ಗೆ ಅರಿವು ಮೂಡಿಸಲಾಗುತ್ತಿದೆ ಎಂದರು.

ಜಿಲ್ಲಾಡಳಿತ ಹಾಗೂ ಡಾನ್‌ಬಾಸ್ಕೋ ಬಾಲಕಾರ್ಮಿಕರ ಮಿಷನ್ ಸಂಸ್ಥೆ ಜಂಟಿಯಾಗಿ ಕಾರ್ಯಾಗಾರವನ್ನು ಆಯೋಜಿಸಿತ್ತು. ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ರೇಖಾ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ, ಡಿವೈಎಸ್‌ಪಿ ಸಂತೋಷ್, ಡಿಡಿಪಿಯು ನಾಗರಾಜ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೆಶಕ ಜಿ.ಜಿ.ಸುರೇಶ್, ಜಂಟಿ ನಿರ್ದೇಶಕ ಅಶೋಕ್ ರೇವಣ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಕಸಾಪ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ

0

ಕನ್ನಡ ಸಾಹಿತ್ಯ ಪರಿಷತ್ 2021-22ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳನ್ನು ಕೋವಿಡ್-19ರ ಮಾರ್ಗಸೂಚಿಯಂತೆ ಅನಿರ್ಧಿಷ್ಟ ಕಾಲಾವಧಿವರೆಗೂ ಮುಂದೂಡಲಾಗಿದ್ದು, ಪ್ರಸ್ತುತ ಸಾಲಿನ ಸಾಹಿತ್ಯ ಪರೀಕ್ಷೆಗಳನ್ನು 2022ನೇ ಫೆಬ್ರವರಿ 18,19 ಮತ್ತು 20 ರಂದು ರಾಜ್ಯದ 19 ಕೇಂದ್ರಗಳಲ್ಲಿ ನಡೆಸಲು ತೀರ್ಮಾನಿಸಿದೆ.

ಈಗಾಗಲೇ ಸಂಬಂಧಪಟ್ಟ ವಿದ್ಯಾರ್ಥಿಗಳಿಗೆ ಬದಲಾದ ಪರೀಕ್ಷಾ ವೇಳಾಪಟ್ಟಿಯನ್ನು ಅಂಚೆ ಮೂಲಕ ಕಳುಹಿಸಲಾಗಿದೆ. ದಿನಾಂಕ: 10/02/2022ರ ನಂತರವೂ ವೇಳಾಪಟ್ಟಿ ತಲುಪದಿರುವ ಬಗ್ಗೆ ವಿದ್ಯಾರ್ಥಿಗಳು ಗೌರವ ಕಾರ್ಯದರ್ಶಿಗಳು, ಕನ್ನಡ ಸಾಹಿತ್ಯ ಪರಿಷತ್, ಚಾಮರಾಜಪೇಟೆ, ಬೆಂಗಳೂರು – 18, ಇವರನ್ನು ಸಂಪರ್ಕಿಸುವಂತೆ ಪರಿಷತ್ ಗೌರವ ಕಾರ್ಯದರ್ಶಿ ನೇ.ಭ. ರಾಮಲಿಂಗಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 080-26623584/26612991 ಹಾಗೂ ವೆಬ್‍ಸೈಟ್ www.kasapa.in ನ್ನು ಸಂಪರ್ಕಿಸುವುದು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಸಾರಿಗೆ ಬಸ್ ಪ್ರಯಾಣದರ ಏರಿಕೆಸದ್ಯಕ್ಕಿಲ್ಲ- ಶ್ರೀರಾಮುಲು

0

ಸಾರಿಗೆ ಸಚಿವ ಬಿ ಶ್ರೀರಾಮುಲು ಅವರು ರಾಜ್ಯ ಸಾರಿಗೆ ಸಂಸ್ಥೆಗಳ ಬಸ್ ಪ್ರಮಾಣದ ಹೆಚ್ಚಳ ಮಾಡುವ ಉದ್ದೇಶ ಸರಕಾರಕ್ಕಿಲ್ಲ ಎಂದು ತಿಳಿಸಿದ್ದಾರೆ. ಕೋವಿಡ್ ಮತ್ತು ಆರ್ಥಿಕ ಹಿಂಜರಿತದಿಂದಾಗಿ ಬಸ್ ಪ್ರಮಾಣ ದರ ಏರಿಕೆ ಮಾಡುವ ಚಿಂತನೆ ನಡೆದಿದ್ದು ಆದರೆ ಈಗಾಗಲೇ ವೋಲ್ವೋ ಬಸ್ ಪ್ರಮಾಣ ದರವನ್ನು ಇಳಿಕೆ ಮಾಡಲಾಗಿದೆ ಎಂದು ಸಚಿವ ಶ್ರೀರಾಮುಲು ಅವರು ತಿಳಿಸಿದ್ದಾರೆ.

ಸಾರಿಗೆ ಸಂಸ್ಥೆಗಳ ಮುಷ್ಕರದಲ್ಲಿ ಭಾಗಿಯಾಗಿದ್ದ ನೌಕರರನ್ನು ವಜಾ ಮಾಡಲಾಗಿತ್ತು. ಅವರಲ್ಲಿ 100 ನೌಕರರನ್ನು ಮರು ನೇಮಕ ಮಾಡಲಾಗಿದೆ. ಈ ತಿಂಗಳೊಳಗೆ 700 ನೌಕರರ ಮರು ನೇಮಕಾತಿ ಆಗಲಿದೆ ಎಂದು ಶ್ರೀರಾಮುಲು ಅವರು ತಿಳಿಸಿದರು.

ಮುಷ್ಕರದಲ್ಲಿ 1,610 ನೌಕರರು ಭಾಗವಹಿಸಿದ್ದರು. ಮರುನೇಮಕಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲದಿದ್ದರೂ ನೌಕರರ ಕುಟುಂಬಗಳ ಸಂಕಷ್ಟ ನೋಡಿ ಈ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಸಚಿವ ಶ್ರೀರಾಮುಲು ಹೇಳಿದರು.

ಇದೇ ವೇಳೆ ಮುಂದಿನ ದಿನಗಳಲ್ಲಿ ನೌಕರರು ಮುಷ್ಕರ, ಪ್ರತಿಭಟನೆಯಲ್ಲಿ ಭಾಗವಹಿಸಿದರೆ ಶಾಶ್ವತವಾಗಿ ನೌಕರಿ ಕಳೆದು ಕೊಳ್ಳಬೇಕಾಗುತ್ತದೆ ಎಂದು ಸಚಿವ ಶ್ರೀರಾಮುಲು ಅವರು ಎಚ್ಚರಿಕೆ ನೀಡಿದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಗಂಗಾ ಕಲ್ಯಾಣ ಯೋಜನೆಯಡಿ ಅರ್ಹರು ಅರ್ಜಿ ಸಲ್ಲಿಸಲು ಆಹ್ವಾನ

0

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮವು 2021-22ನೇ ಸಾಲಿಗೆ ಪ್ರವರ್ಗ-1 ರಲ್ಲಿ ಬರುವ ಬೆಸ್ತ, ಅಂಬಿಗ/ಅಂಬಿ, ಗಂಗಾಮತ, ಕಬ್ಬಲಿಗ, ಕೋಲಿ, ಮೊಗವೀರ ಮತ್ತು ಇದರ ಉಪಜಾತಿಗಳಿಗೆ ಒಳಪಡುವ ಅರ್ಹ ಫಲಾಪೇಕ್ಷಿಗಳಿಂದ ಗಂಗಾಕಲ್ಯಾಣ ಯೋಜನೆಯಡಿ ಅರ್ಜಿಗಳನ್ನು ಆಹ್ವಾನಿಸಿದೆ.

ಕನಿಷ್ಠ 2 ಎಕರೆ ಹಾಗೂ ಗರಿಷ್ಠ 5 ಎಕರೆ ಜಮೀನು ಹೊಂದಿದ್ದು, ಯಾವುದೇ ಮೂಲದಿಂದ ನೀರಾವರಿ ಸೌಲಭ್ಯ ಹೊಂದಿಲ್ಲದೆ ಇರುವ ಸಣ್ಣ ಹಾಗೂ ಅತಿ ಸಣ್ಣ ರೈತರಾಗಿದ್ದು, ಕುಟುಂಬದ ವಾರ್ಷಿಕ ವರಮಾನವು ಗ್ರಾಮೀಣ ಪ್ರದೇಶದವರಿಗೆ ರೂ. 98,000/- ಮಿತಿಯೊಳಗಿರಬೇಕು.
ಆಸಕ್ತರು ನಿಗಧಿತ ನಮೂನೆ ಅರ್ಜಿಯನ್ನು ನಿಗಮದ ಕಚೇರಿಯಿಂದ ಅಥವಾ ಆಯಾ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಅಥವಾ ನಿಗಮದ ವೆಬ್‍ಸೈಟ್ www.ambigaradevelopment.karnataka.gov.in ರಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿ: 10/03/2022 ರೊಳಗಾಗಿ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‍ಸೈಟ್ ಅಥವಾ ದೂ.ಸಂ.: 08182-229634 ನ್ನು ಸಂಪರ್ಕಿಸುವುದು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಲಖಿಂಪುರ ಖೇರಿ ಪ್ರಕರಣ ಆರೋಪಿ ಆಶಿಶ್ ಮಿಶ್ರಾಗೆ ಜಾಮೀನು

0

ಉತ್ತರಪ್ರದೇಶದ ಲಖೀಂಪುರ ಖೇರಿಯಲ್ಲಿ ಕಳೆದ ವರ್ಷ ನಡೆದ ಹಿಂಸಾಚಾರ ಪ್ರಕರಣದ ಮುಖ್ಯ ಆರೋಪಿ, ಕೇಂದ್ರ ಗೃಹ ಖಾತೆ ಸಹಾಯಕ ಸಚಿವ ಅಜಯ್ ಮಿಶ್ರಾ ತೇನಿ ಪುತ್ರ ಆಶಿಶ್ ಮಿಶ್ರಾ ಅವರಿಗೆ ಅಲಹಾಬಾದ್ ಹೈಕೋರ್ಟ್ ನ ಲಖನೌ ಪೀಠವು ಜಾಮೀನು ಮಂಜೂರು ಮಾಡಿದೆ.

ನನ್ನ ಕಕ್ಷಿದಾರ ಅಜಯ್ ಮಿಶ್ರಾ ವಿರುದ್ಧ, ಸರಿಯಾದ ಸಾಕ್ಷಾಧಾರ ಇಲ್ಲದ ಕಾರಣ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ, ಎಂದು ಮಿಶ್ರಾ ಪರ ವಕೀಲ ಅವದೇಶ್ ಸಿಂಗ್ ಅವರು ತಿಳಿಸಿದ್ದಾರೆ.

ಅಕ್ಟೋಬರ್ 3ರಂದು ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆ ರದ್ದುಗೊಳಿಸುವಂತೆ ಒತ್ತಾಯಿಸಿ, ರೈತರು ಲಖೀಂಪುರ ಖೇರಿ ಬಳಿ ಪ್ರತಿಭಟನೆ ಮಾಡುತ್ತಿದ್ದ ವೇಳೆ ಆಶಿಶ್ ಮಿಶ್ರಾ ಚಲಾಯಿಸುತ್ತಿದ್ದ ಕಾರು ಹರಿದು ನಾಲ್ಕು ರೈತರು ಮೃತಪಟ್ಟಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ 9 ರಂದು ಮಿಶ್ರಾ ಅವರನ್ನು ಬಂಧಿಸಲಾಗಿತ್ತು. ಇದಾದ ನಂತರ ಹಲವು ಬಾರಿ ಮಿಶ್ರಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರೂ ನಿರಾಕರಿಸಲಾಗಿತ್ತು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ರಾಜ್ಯದಲ್ಲಿ ಕೋವಿಡ್ ಸೋಂಕು ಕೊಂಚ ಇಳಿಕೆ

0

ಕರ್ನಾಟಕದಲ್ಲಿ ಕೊರೋನಾ ಸೋಂಕಿತರು, ಮೃತರ ಸಂಖ್ಯೆ ಸ್ವಲ್ಪ ಪ್ರಮಾಣದಲ್ಲಿ ಇಳಿಮುಖವಾಗಿದೆ. ನಿನ್ನೆ ಸೋಂಕಿಗೆ 39 ಜನರು ಬಲಿಯಾಗಿದ್ದಾರೆ. 5,019 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 52,013ಕ್ಕೆ ಇಳಿಮುಖವಾಗಿದೆ.

ರಾಜ್ಯದಲ್ಲಿ ಸೋಂಕಿನ ಪ್ರಮಾಣ ಶೇ.4.25 ರಷ್ಟಿದೆ. ಸಾವಿನ ಪ್ರಮಾಣ ಶೇ. 0.77 ರಷ್ಟಿದೆ. ಇಲ್ಲಿಯವರೆಗೂ 39.17 ಲಕ್ಷ ಜನರು ಸೋಂಕಿಗೆ ಒಳಗಾಗಿದ್ದಾರೆ. 39,534 ಜನರು ಮೃತಪಟ್ಟಿದ್ದಾರೆ. ಜನವರಿ 10ರಂದು 13,923 ಜನರು ಗುಣಮುಖರಾಗಿದ್ದಾರೆ. ಒಟ್ಟು ಗುಣಮುಖರಾದವರ ಸಂಖ್ಯೆ 38.25 ಲಕ್ಷಕ್ಕೆ ಏರಿಕೆಯಾಗಿದೆ. ನಿನ್ನೆ 1.17 ಲಕ್ಷ ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಇದರಲ್ಲಿ 29,626 ರಾಪಿಡ್ ಆಂಟಿಜನ್ ಮತ್ತು 88,330 ಆರ್ಟಿ ಪಿಸಿಆರ್ ಪರೀಕ್ಷೆ ನಡೆಸಲಾಗಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ದೇಶದ ಪ್ರಮುಖ ನಗರಗಳಿಗೆ ವಿಮಾನ ಸಂಪರ್ಕ ಕಲ್ಪಿಸಲು ಸಂಸದರ ಮನವಿ

0

ನಾಗರಿಕ, ವಾಣಿಜ್ಯ, ಕೈಗಾರಿಕೆ ಮತ್ತು ಪ್ರವಾಸೋದ್ಯಮ ಅಭಿವೃದ್ಧಿ ಸಲುವಾಗಿ ದೇಶದ 11 ಪ್ರಮುಖ ನಗರಗಳಿಗೆ ಶಿವಮೊಗ್ಗದಿಂದ ವಿಮಾನಯಾನ ಸೌಲಭ್ಯ ಕಲ್ಪಿಸಲು ಟೆಂಡರ್ ಕರೆಯುವಂತೆ ಸಂಸದ ಬಿ.ವೈ. ರಾಘವೇಂದ್ರ ಅವರು ಮನವಿ ಮಾಡಿಕೊಂಡಿದ್ದಾರೆ.

ಬಿ.ವೈ. ರಾಘವೇಂದ್ರ ಅವರು, ದೆಹಲಿಯಲ್ಲಿ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.ಬೆಂಗಳೂರು ಅಂತರಾಷ್ಟ್ರೀಯ ವಿಮಾ ನಿಲ್ದಾಣದ ನಂತರ ರಾಜ್ಯದ ಎರಡನೇ ಅತಿ ಉದ್ದದ ರನ್ ವೇ ಹೊಂದಿರುವ ಶಿವಮೊಗ್ಗ ವಿಮಾನ ನಿಲ್ದಾಣವು ಸದ್ಯದಲ್ಲೇ ಲೋಕಾರ್ಪಣೆಗೊಳ್ಳಲಿದೆ. ಆದ್ದರಿಂದ ಆದಷ್ಟು ಬೇಗ ಮಲ್ಟಿ ಡಿಸಿಪ್ಲಿನರಿ ಟೀಮ್ ಕಳುಹಿಸಿಕೊಡಬೇಕು.ಎಲೆಕ್ಟ್ರಾನಿಕ್ ಎಕ್ವಿಪ್ ಮೆಂಟ್ ಫೈಂಡಿಂಗ್ ಮತ್ತು ಉಡಾನ್ ಯೋಜನೆಗೆ ಶಿವಮೊಗ್ಗ ನಿಲ್ದಾಣವನ್ನು ಸೇರಿಸಬೇಕು ಎಂದು ಬಿ ವೈ ರಾಘವೇಂದ್ರ ಅವರು ಸಿಂಧಿಯಾ ‌ ಅವರಲ್ಲಿ ಕೋರಿದ್ದಾರೆ.

ಶಿವಮೊಗ್ಗ ಜಿಲ್ಲೆಯ ನಾಗರೀಕರಿಗೆ ಅನುಕೂಲವಾಗುವುದರ ಜೊತೆಗೆ ವ್ಯಾಪಾರ, ಕೈಗಾರಿಕೆ ಮತ್ತು ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕವಾಗಲಿದೆ. ಮುಂಬೈ-ಶಿವಮೊಗ್ಗ-ಮುಂಬೈ, ಮುಂಬೈ-ಶಿವಮೊಗ್ಗ-ಮಂಗಳೂರು, ಮುಂಬೈ-ಶಿವಮೊಗ್ಗ-ಚೆನ್ನೈ, ಮುಂಬೈ-ಶಿವಮೊಗ್ಗ-ತಿರುಪತಿ, ಶಿವಮೊಗ್ಗ-ಗುಲ್ಬರ್ಗ-ಹೈದರಾಬಾದ್, ಶಿವಮೊಗ್ಗ-ಗುಲ್ಬರ್ಗ-ದೆಹಲಿ, ಬೆಂಗಳೂರು-ಶಿವಮೊಗ್ಗ-ಬೆಳಗಾಂ, ಬೆಂಗಳೂರು-ಶಿವಮೊಗ್ಗ-ದೆಹಲಿ, ಕೊಚ್ಚಿನ್-ಶಿವಮೊಗ್ಗ-ದೆಹಲಿ, ಬೆಂಗಳೂರು-ಶಿವಮೊಗ್ಗ-ಗೋವಾ ಮತ್ತು ಹೈದರಾಬಾದ್-ಶಿವಮೊಗ್ಗ-ಕೊಚ್ಚಿನ್ ಮಾರ್ಗಗಳಿಗೆ ಟೆಂಡರ್ ಕರೆಯುವಂತೆ ಮನವಿ ಮಾಡಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಭಾರತದ ಕಬಡ್ಡಿ ತಂಡಕ್ಕೆ ಆನವಟ್ಟಿರಾಜೇಶ್ ಪ್ರಸಾದ್ ಆಯ್ಕೆ

0

ಅಂತರರಾಷ್ಟ್ರೀಯ ಕಬಡ್ಡಿ ಸ್ಪರ್ಧೆಗೆ ಭಾರತ ತಂಡದ ಆಟಗಾರನಾಗಿ ಆಯ್ಕೆ ಆಗಿರುವ ಆನವಟ್ಟಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಬಿ.ರಾಜೇಶ್ ಪ್ರಸಾದ್‍ನನ್ನು ಇತ್ತೀಚೆಗೆ ಕಾಲೇಜಿನ ವತಿಯಿಂದ ಸನ್ಮಾನಿಸಲಾಯಿತು.

ಇದೇ ಫೆಬ್ರುವರಿ 11 ಮತ್ತು12 ರಂದು ನೇಪಾಳದ ಫೋಕಾರ್‍ನಲ್ಲಿ ನಡೆಯುವ ಅಂತರರಾಷ್ಟ್ರೀಯ ಕಬಡ್ಡಿ ಸ್ಪರ್ಧೆಯಲ್ಲಿ ಭಾಗವಹಿಸುವ ವಿದ್ಯಾರ್ಥಿ ರಾಜೇಶ್ ಪ್ರಸಾದ್‍ಗೆ ಕಾಲೇಜಿನ ವಿದ್ಯಾರ್ಥಿಗಳು, ಪ್ರಾಚಾರ್ಯರು, ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗದವರಿಂದ ಸಂಗ್ರಹಿಸಿದ 13,500 ರೂ. ಗಳನ್ನು ಪ್ರಾಚಾರ್ಯರಾದ ಶ್ರೀ ಜಗದೀಶ ಟಿ ಅವರು ರಾಜೇಶ್ ಪ್ರಸಾದ್‍ಗೆ ಹಸ್ತಾಂತರಿಸಿದರು. ಅಂತರರಾಷ್ಟ್ರೀಯ ಕಬಡ್ಡಿ ಸ್ಪರ್ಧೆಯಲ್ಲಿ ರಾಜೇಶ್ ಪ್ರಸಾದ್ ವಿಜಯಶಾಲಿಯಾಗಿ ಬರಲಿ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡುವ ವಿದ್ಯಾರ್ಥಿಗಳಿಗೆ ರಾಜೇಶ್ ಪ್ರಸಾದ್ ಸ್ಪೂರ್ತಿಯಾಗಲಿ ಎಂದು ಸ.ಪ.ಪೂ.ಕಾಲೇಜಿನ ಎಲ್ಲ ಉಪನ್ಯಾಸಕರ ಪರವಾಗಿ ಶುಭ ಹಾರೈಸಿದರು.