Monday, February 16, 2026
Monday, February 16, 2026
Home Blog Page 1738

ಶಂಕಿತ ಕುರ್ದೀಶ್ ನೆಲೆಗಳ ಮೇಲೆ ಧಾಳಿ

0

ಇರಾಕ್ ಮತ್ತು ಸಿರಿಯಾದಲ್ಲಿನ ಶಂಕಿತ ಕುರ್ದಿಶ್ ಭಯೋತ್ಪಾದಕರ ನೆಲೆಗಳನ್ನು ಟರ್ಕಿಯ ಯುದ್ಧವಿಮಾನಗಳು ನಿನ್ನೆ ಬೆಳಗ್ಗೆ ಹೊಡೆದುರುಳಿಸಿರುವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಯೋತ್ಪಾದಕರ ಬೆದರಿಕೆಗಳಿಂದ ಟರ್ಕಿಯ ಗಡಿಯನ್ನು ರಕ್ಷಿಸುವ ಪ್ರಯತ್ನದ ಭಾಗವಾಗಿ ಈ ದಾಳಿ ನಡೆದಿದೆ. ಉತ್ತರ ಇರಾಕ್ ನ ಸಿಂಜಾರ್ ಪರ್ವತ ಮತ್ತು ಉತ್ತರ ಸಿರಿಯಾದ ಡೆರಿಕ್ ಮತ್ತು ಕರಾಕಾಕ್ ಪ್ರದೇಶಗಳನ್ನು ಗುರಿಯಾಗಿಸಿ ದಾಳಿ ನಡೆಸಲಾಗಿದೆ ಎಂದು ಟರ್ಕಿಯ ರಕ್ಷಣಾ ಸಚಿವಾಲಯದ ಹೇಳಿಕೆಯೊಂದು ತಿಳಿಸಿದೆ. ಉತ್ತರ ಇರಾಕ್ ನಲ್ಲಿನ ಕುರ್ದಿಸ್ತಾನ್ ಕಾರ್ಯಕರ್ತರು ಮತ್ತು ಸಿರಿಯಾದಲ್ಲಿನ ಪೀಪಲ್ಸ್ ಪ್ರೊಟೆಕ್ಷನ್ ಯೂನಿಟ್ ಅಥವಾ ವೈಪಿಜಿ ಭಯೋತ್ಪಾದಕ ಸಂಘಟನೆಯನ್ನು ದಾಳಿಯು ಗುರಿಯಾಗಿಸಿಕೊಂಡಿತ್ತು.

ಭಯೋತ್ಪಾದಕರಿಂದ ಗುಹೆಗಳು, ಸುರಂಗಗಳು, ಯುದ್ದ ಸಾಮಗ್ರಿ ಸಂಗ್ರಹಾಗಾರಗಳು, ನೆಲೆಗಳು ಮತ್ತು ತರಬೇತಿ ಶಿಬಿರಗಳನ್ನು ಗುರಿಯಾಗಿಸಿ ದಾಳಿ ನಡೆಸಲಾಯಿತು ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.

ಬಜೆಟ್ ಬಡವರು ಮಧ್ಯಮ ವರ್ಗ ಮತ್ತು ಯುವಸ್ನೇಹಿ-,ಪ್ರಧಾನಿ

0

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಮುಂಗಡ ಪತ್ರವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಬಡವರ, ಮಧ್ಯಮವರ್ಗದವರ ಮತ್ತು ಯುವಕರ ಸ್ನೇಹಿ ಬಜೆಟ್ ಆಗಿದೆ ಎಂದು ವರ್ಣಿಸಿದ್ದಾರೆ.

ಬಿಜೆಪಿ ಆಯೋಜಿಸಿದ ಆತ್ಮ ನಿರ್ಭರ ಅರ್ಥವ್ಯವಸ್ಥೆ ಕುರಿತ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು. ಬಡವರು ಮತ್ತು ಮಧ್ಯಮ ವರ್ಗದವರನ್ನು ಗಮನದಲ್ಲಿಟ್ಟುಕೊಂಡು ಬಜೆಟ್ ಮಂಡಿಸಲಾಗಿದೆ. ಬಡವರಿಗೆ ಮನೆ, ನಲ್ಲಿ ನೀರು, ಶೌಚಾಲಯ, ಅಡುಗೆ ಅನಿಲದ ಜೊತೆಗೆ ಆಧುನಿಕ ಜಗತ್ತಿನ ಅವಶ್ಯಕತೆಯಾದ ಅಂತರ್ಜಾಲ ಸೌಲಭ್ಯ ನೀಡುವ ದಿಸೆಯಲ್ಲಿ ಬಜೆಟ್ ನೆರವಾಗಲಿದೆ ಎಂದು ಹೇಳಿದ್ದಾರೆ.

ಕೊರೋನಾ ಬಿಕ್ಕಟ್ಟಿನ ನಂತರದಲ್ಲಿ ಭಾರತವನ್ನು ಜಗತ್ತು ನೋಡುವ ದೃಷ್ಟಿಯ ಬದಲಾಗಿದೆ. ಭಾರತವು ಜಗತ್ತಿನಲ್ಲಿಯೇ ಶ್ರೇಷ್ಠ ರಾಷ್ಟ್ರವಾಗುವುದು ವಿಶ್ವದಾದ್ಯಂತ ಜನರು ಎದುರು ನೋಡುತ್ತಿದ್ದಾರೆ. ಆದ್ದರಿಂದಲೇ ಮುಂಗಡಪತ್ರದಲ್ಲಿ ಯುವಕರಿಗೆ ಉದ್ಯೋಗ ನೀಡುವುದು. ಮಧ್ಯಮವರ್ಗದವರಿಗೆ ತೆರಿಗೆ ಹೊರೆ ತಗ್ಗಿಸುವುದು. ರೈತರ ಆದಾಯ ದ್ವಿಗುಣ ಗೊಳಿಸಲು ಆದ್ಯತೆ ನೀಡಲಾಗಿದೆ. ಜೊತೆಗೆ ಎಲ್ಲ ಕ್ಷೇತ್ರಗಳ ಅಭಿವೃದ್ಧಿಗೆ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದ್ದಾರೆ.

ಆತ್ಮ ನಿರ್ಭರ ಭಾರತ ಕಲ್ಪನೆಯಲ್ಲಿ ಯೇ ಭಾರತ ಆಧುನಿಕ ಜಗತ್ತಿಗೆ ತೆರೆದುಕೊಳ್ಳಬೇಕಿದೆ. ಇದಕ್ಕಾಗಿಯೇ ಗ್ರಾಮಗಳಿಗೂ ಫೈಬರ್ ಮೂಲಕ 5ಜಿ ತಂತ್ರಜ್ಞಾನ ಸಂಪರ್ಕಕಲ್ಪಿಸಲು ಯೋಜನೆ ರೂಪಿಸಲಾಗುತ್ತಿದೆ. ಕ್ರೀಡೆಗೆ ಹೆಚ್ಚಿನ ಹಣ ಮೀಸಲಿರಿಸಲಾಗಿದೆ. ಗಂಗಾ ನದಿ ತೀರದಲ್ಲಿ 2500 ಕಿ.ಮೀ. ಉದ್ದದ ನೈಸರ್ಗಿಕ ಕೃಷಿ ಕಾರಿಡಾರ್ ನಿರ್ಮಿಸಲು ಮುಂದಾಗಿದ್ದೇವೆ. ನವೋದ್ಯಮಗಳ ಸೃಷ್ಟಿಯಿಂದ ಯುವಕರಿಗೆ ಉದ್ಯೋಗ ಸಿಗುವ ಜೊತೆಗೆ ಅವರು ಉದ್ಯಮದ ಪಾಲುದಾರರಾಗಲು ನೆರವಾಗಲಿದೆ. ರೈತರನ್ನು ಬಜೆಟ್ ನ ಪ್ರಮುಖ ಭಾಗಿದಾರರನ್ನಾಗಿಸಿದೆ. ಪ್ರಸ್ತುತ ಸಾಲಿನಲ್ಲಿ ಭತ್ತ ಬೆಳೆಯುವ ರೈತರಿಗೆ 1.5 ಲಕ್ಷ ಕೋಟಿ ರೂಪಾಯಿಗಳಿಗಿಂತ ಹೆಚ್ಚಿನ ಕನಿಷ್ಠ ಬೆಂಬಲ ಬೆಲೆ ಸಿಗಲಿದೆ ಎಂದು ವಿವರಿಸಿದ್ದಾರೆ.

ಶಿವಮೊಗ್ಗದಲ್ಲಿ ನೀರಿನ ಕಂದಾಯ ಅವೈಜ್ಞಾನಿಕ ಏರಿಕೆ – ಗೋಪಿನಾಥ್

0

ನಗರ ನೀರು ಸರಬರಾಜು ಮಂಡಳಿ 2021-22ನೇ ಸಾಲಿನ ನೀರಿನ ಕಂದಾಯವನ್ನು ಅವೈಜ್ಞಾನಿಕವಾಗಿ ಏರಿಕೆ ಮಾಡಿದ್ದನ್ನು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್‌. ಗೋಪಿನಾಥ್ ಅವರು ವಿರೋಧಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಪ್ರದೇಶವಾರು ಕೆಲವು ವಾರ್ಡ್ ಗಳಿಗೆ 4ರಿಂದ 8 ಸಾವಿರದವರೆಗೆ ಕಂದಾಯ ದರ ಏರಿಸಲಾಗಿದೆ.
ಸಾರ್ವಜನಿಕರಿಗೆ ಅವಶ್ಯಕವಾಗಿ ಬೇಕಾಗಿರುವ ನೀರಿನ ಮೇಲೆ ಈ ರೀತಿ ಕಂದಾಯವನ್ನು ಹೆಚ್ಚಿಸಿರುವುದು ಜನಸಾಮಾನ್ಯರ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ತಿಳಿಸಿದರು.

ಕೊರೊನಾದಿಂದ ಜನ ಸಂಕಷ್ಟದಲ್ಲಿದ್ದಾರೆ. ಪರಿಸ್ಥಿತಿ ಹೀಗಿರುವಾಗ, ಕಂದಾಯ ಏರಿಕೆ ಮಾಡಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಹೀಗಾಗಿ ನೀರಿನ ಕಂದಾಯವನ್ನು ಇಳಿಸಿ ಗ್ರಾಹಕರ ಮೇಲೆ ಹಾಕುವ ಭಾರವನ್ನು ಕಡಿಮೆ ಮಾಡಬೇಕು. ತಪ್ಪಿದರೆ ಸಾರ್ವಜನಿಕವಾಗಿ ಪ್ರತಿರೋಧಕ್ಕೆ ಗುರಿಯಾಗುವ ಸಾಧ್ಯತೆಯಿದೆ.
ಶಿವಮೊಗ್ಗ ನಗರದ ಪ್ರತಿ ವಾರ್ಡಿನ ಕ್ಷೇಮಾಭಿವೃದ್ಧಿ ಸಂಘಗಳ ಪದಾಧಿಕಾರಿಗಳ ಸಭೆ ಕರೆದು ದರ ಪರಿಷ್ಕರಣೆ ಮಾಡುವುದು ಸೂಕ್ತ ಎಂದರು

ಜಲಧಾರೆ ಯೋಜನೆ : ಕರ್ನಾಟಕ ಪ್ರಥಮ ಸ್ಥಾನ – ಸಚಿವ ಈಶ್ವರಪ್ಪ

0

ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ರಾಜ್ಯದಲ್ಲಿ 600ಕ್ಕೂ ಹೆಚ್ಚು ಕಲ್ಯಾಣಿಗಳನ್ನು ಪುನರುಜ್ಜೀವನಗೊಳಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪನವರು ತಿಳಿಸಿದ್ದಾರೆ.
ಶಿವಮೊಗ್ಗ ತಾಲೂಕು ಹೊಳಲೂರು ಅಂಬೇಡ್ಕರ್ ಭವನದಲ್ಲಿ ಉದ್ಯೋಗ ಖಾತ್ರಿ ಯೋಜನೆ ನೌಕರರ ಕ್ಷೇಮಾಭಿವೃದ್ಧಿ ಸಂಘ ಆಯೋಜಿಸಿದ್ದ ನರೇಗಾ ದಿನಾಚರಣೆಯಲ್ಲಿ ಅವರು ಮಾತನಾಡಿದರು.

ನರೇಗಾ ಯೋಜನೆ ಕೇವಲ ಕೂಲಿಗಾಗಿ ಕೆಲಸ ಮಾಡುವಂತದ್ದಲ್ಲ. ಗ್ರಾಮೀಣ ಪ್ರದೇಶದಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಸೃಜಿಸುವುದರೊಂದಿಗೆ ವೈಯಕ್ತಿಕ ಸೌಲಭ್ಯಗಳನ್ನು ಸಹ ಪಡೆಯುವ ಸದಾವಕಾಶವನ್ನು ಒದಗಿಸಿದೆ. ಯೋಜನೆಯಡಿ ರಾಜ್ಯದಲ್ಲಿ ಗ್ರಾಮಗಳನ್ನು ವ್ಯವಸ್ಥಿತವಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಸಣ್ಣ ರೈತರು ತಮ್ಮ ಕೃಷಿ ಚಟುವಟಿಕೆ ಸಾಮರ್ಥ್ಯವನ್ನು ವೃದ್ಧಿಸಿ ಅಧಿಕ ಆದಾಯ ಗಳಿಸಲು ಸಹ ಸಹಕಾರಿಯಾಗಿದೆ ಎಂದರು.
ಕಳೆದ ಎರಡು ವರ್ಷಗಳಲ್ಲಿ ಪ್ರತಿಗ್ರಾಮದಲ್ಲಿ ಕನಿಷ್ಠ ಒಂದು ಕೆರೆ ಅಥವಾ ಕಟ್ಟೆಯ ಅಭಿವೃದ್ಧಿ ಯೋಜನೆ ಕೈಗೊಳ್ಳಲಾಗಿದೆ.
ಇದರಿಂದಾಗಿ ಜಲಧಾರೆ ಯೋಜನೆಯಡಿ ನಮ್ಮ ರಾಜ್ಯ ದೇಶಕ್ಕೆ ಪ್ರಥಮ ಸ್ಥಾನ ಪಡೆಯಲು ಸಾಧ್ಯವಾಗಿದೆ ಎಂದು ತಿಳಿಸಿದರು.

ಅಕ್ರಮ ಸಂಗ್ರಹಿಸಿದ್ದ ಪಡಿತರ ಅಕ್ಕಿ ಪೋಲಿಸರಿಂದ ಪತ್ತೆ

0

ಶಿವಮೊಗ್ಗ ತಾಲೂಕಿನ ತರಗನಹಳ್ಳಿಯ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಲಾಗಿದ್ದ 1.88 ಲಕ್ಷ ರೂ. ಮೌಲ್ಯದ 82 ಕ್ವಿಂಟಾಲ್ ಪಡಿತರ ಅಕ್ಕಿಯನ್ನು ಹೊಳೆಹೊನ್ನೂರು ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಮಲ್ಲಿಕಮ್ಮ ಎಂಬುವವರ ಮನೆಯಲ್ಲಿ ಜಾವಳಿಯ ಮೋಹನ್ ಎಂಬಾತ ಬೇರೆ ಕಡೆಯಿಂದ ತಂದು ಸಂಗ್ರಹಿಸಿದ್ದ ಎಂದು ಆಪಾದಿಸಲಾಗಿದೆ.
ಖಚಿತ ಮಾಹಿತಿ ಮೇರೆಗೆ ಹೊಳೆಹೊನ್ನೂರು ಠಾಣೆ ಇನ್ಸ್ ಪೆಕ್ಟರ್ ಮತ್ತು ಸಿಬ್ಬಂದಿ ಸ್ಥಳಕ್ಕೆ ತೆರಳಿ ನೋಡಿದಾಗ ಬಿಳಿ ಪ್ಲಾಸ್ಟಿಕ್ ಚೀಲಗಳಲ್ಲಿ ಅಕ್ಕಿಯನ್ನು ಸಂಗ್ರಹಿಸಿರುವುದು ಪತ್ತೆಯಾಗಿದೆ.
ತಲಾ 40 ಕೆ.ಜಿ.ಯ 205 ಚೀಲಗಳನ್ನು ವಶಪಡಿಸಿಕೊಂಡು ಆರೋಪಿ ಮೋಹನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಜಿಗಿದ ರೇಷ್ಮೆಗೂಡಿನ ದರ: ಕೃಷಿಕರಿಗೆ ವರ

0

ರೇಷ್ಮೆಗೂಡಿಗೆ ಚಿನ್ನದ ಮೌಲ್ಯ ಬಂದಿದೆ. ರೇಷ್ಮೆ ಮಾರುಕಟ್ಟೆಗಳಲ್ಲಿ ರೇಷ್ಮೆಗೂಡಿಗೆ ಹೆಚ್ಚಿನ ದರ ಸಿಗದಂತೆ ನಿಯಂತ್ರಿಸುತ್ತಿದ್ದ ದಲ್ಲಾಳಿಗಳಿಗೆ ಕಡಿವಾಣ ಹಾಕಲಾಗಿದೆ. ಮಾರುಕಟ್ಟೆಗಳಲ್ಲಿ ಸಿಸಿಟಿವಿ ಅಳವಡಿಕೆ ಮಾಡಿ ರೇಷ್ಮೆ ಬೆಳೆಗಾರರಿಗೆ ಆಗುತ್ತಿದ್ದ ಕಿರುಕುಳವನ್ನು ತಪ್ಪಿಸಲಾಗಿದೆ. ರೇಷ್ಮೆ ಗೂಡು ಕದಿಯುತ್ತಿದ್ದವರ ವಿರುದ್ಧ ಎಫ್ಐಆರ್ ದಾಖಲಿಸಿ ಕಠಿಣ ಕ್ರಮ, ಇ-ಪೇಮೆಂಟ್ ವ್ಯವಸ್ಥೆ ಜಾರಿ ಸೇರಿದಂತೆ ರೇಷ್ಮೆ ಸಚಿವ ಡಾ. ನಾರಾಯಣಗೌಡ ಅವರು ತೆಗೆದುಕೊಂಡ ಹಲವು ಕ್ರಮಗಳ ಪರಿಣಾಮವಾಗಿ ರೇಷ್ಮೆಗೂಡಿಗೆ ಉತ್ತಮ ಬೆಲೆ ಲಭ್ಯವಾಗಿದೆ ಎಂದು ತಿಳಿದುಬಂದಿದೆ.

ಇತ್ತೀಚೆನ ದಿನಗಳಲ್ಲಿ ರೇಷ್ಮೆ ಗೂಡು ಗರಿಷ್ಠ ಪ್ರಮಾಣದಲ್ಲಿ ಮಾರಾಟವಾಗುತ್ತಿದೆ. ಅದರಲ್ಲೂ ಕೇಂದ್ರ ಸರ್ಕಾರವು ಆಮದು ಗೂಡಿಗೆ ತೆರಿಗೆ ಹೆಚ್ಚಿಸಿದ ಬಳಿಕ ದೇಶಿಯ ಗೂಡಿಗೆ ಎಲ್ಲೆಡೆ ಬೇಡಿಕೆ ಸೃಷ್ಟಿಯಾಗಿದೆ. ರಾಮನಗರವು ಏಷ್ಯಾದಲ್ಲಿಯೇ ಅತಿ ಹೆಚ್ಚು ರೇಷ್ಮೆ ಹುಳು ವಹಿವಾಟು ನಡೆಯುವ ಸ್ಥಳ ಎಂಬ ಹೆಗ್ಗಳಿಕೆಯನ್ನು ಪಡೆದುಕೊಂಡಿದೆ.

ರಾಮನಗರ ರೇಷ್ಮೆ ಮಾರುಕಟ್ಟೆಯಲ್ಲಿ ರೇಷ್ಮೆಗೂಡು ದರವು ನಾಲ್ಕು ಅಂಕಿ ದಾಟಿದೆ. ಕೆ.ಜಿ. ರೇಷ್ಮೆ ಗೂಡಿಗೆ 1,043 ರೂಪಾಯಿಗೆ ಮಾರಾಟವಾಗಿ ದಾಖಲೆ ನಿರ್ಮಿಸಿದೆ

ಜಮ್ಮು ಮತ್ತು ಕಾಶ್ಮೀರ: 370 ನೇ ವಿಧಿ ರದ್ದಾದ ನಂತರ 439 ಉಗ್ರರ ಹತ್ಯೆಯಾಗಿದೆ

0

ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ 370ನೇ ವಿಧಿ ಯನ್ನು 2019ರ ಆಗಸ್ಟ್ 5ರಂದು ಕೇಂದ್ರ ಸರ್ಕಾರವು ರದ್ದು ಪಡಿಸಿದ ನಂತರ ಕಣಿವೆಯಲ್ಲಿ ಉಗ್ರ ನಿಗ್ರಹ ಕಾರ್ಯಾಚರಣೆ ಅಡಿಯಲ್ಲಿ ಒಟ್ಟಾರೆ ನಾನು 439 ಉಗ್ರರನನ್ನು ಹತ್ಯೆಗಯ್ಯಲಾಗಿದೆ.

ಈ ಕಾರ್ಯಾಚರಣೆಗಳಲ್ಲಿ ಒಟ್ಟು 109 ಭದ್ರತಾಸಿಬ್ಬಂದಿ ಹುತಾತ್ಮರಾಗಿದ್ದಾರೆ ಎಂದು ಗೃಹ ಖಾತೆ ಸಹಾಯಕ ಸಚಿವ ನಿತ್ಯಾನಂದ ರಾಯ್ ಅವರು ರಾಜ್ಯಸಭೆಗೆ ಲಿಖಿತ ಉತ್ತರ ನೀಡಿ ತಿಳಿಸಿದ್ದಾರೆ. ಕಾರ್ಯಾಚರಣೆಗಳ ಸಂದರ್ಭದಲ್ಲಿ ಮೃತಪಟ್ಟಿರುವ ಜೊತೆಗೆ 5.3 ಕೋಟಿ ರೂಪಾಯಿ ಮೌಲ್ಯದ ಖಾಸಗಿ ಆಸ್ತಿಪಾಸ್ತಿಗೆ ಹಾನಿ ಉಂಟಾಗಿದೆ. ಆದರೆ ಸಾರ್ವಜನಿಕ ಆಸ್ತಿಗಳಿಗೆ ಯಾವುದೇ ಹಾನಿ ಉಂಟಾಗಿಲ್ಲ ಎಂದು ಅವರು ಮಾಹಿತಿ ತಿಳಿಸಿದ್ದಾರೆ.

ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್ ಗಳಲ್ಲಿ ಗುಣಮಟ್ಟದ ಆಹಾರ ನೀಡಬೇಕು

0

ಗಂಗಾ ಕಲ್ಯಾಣ ಯೋಜನೆ ವಿಳಂಬ ತಪ್ಪಿಸಲು ಇನ್ನು ಮುಂದೆ ಫಲಾನುಭವಿಗಳ ಖಾತೆಗೆ ಹಣ ಜಮೆ ಮಾಡಲೇ ಶೀಘ್ರದಲ್ಲಿ ಯೋಜನೆ ರೂಪಿಸಲಾಗುತ್ತಿದೆ ಎಂದು ಸಮಾಜಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಹೇಳಿದ್ದಾರೆ.

ಹಾಸನದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಂಗಾ ಕಲ್ಯಾಣ ಯೋಜನೆ ಕಾಮಗಾರಿ ಗುತ್ತಿಗೆ ಪಡೆದವರ, ವಿರುದ್ಧ ಗುತ್ತಿಗೆ ಸಿಗದ ಗುತ್ತಿಗೆದಾರರು ಕೋರ್ಟ್ ಗೆ ಹೋಗಿ ತಡೆಯಾಜ್ಞೆ ತರುವುದು, ಇತ್ಯಾದಿ ತೊಡಕುಗಳಿಂದ ವಿಳಂಬವಾಗುತ್ತಿತ್ತು. ಅದನ್ನು ತಪ್ಪಿಸಲು ಗುತ್ತಿಗೆ ಬದಲು ಫಲಾನುಭವಿಗೆ ಹಣ ಒದಗಿಸುತ್ತದೆ ಎಂದು ಸಮಾಜಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ತಿಳಿಸಿದ್ದಾರೆ.

ಮೆಟ್ರಿಕ್ ಪೂರ್ವಕ್ಕಿಂತ ಮೆಟ್ರಿಕ್-ನಂತರದ ಹಾಸ್ಟೆಲ್ ಸಮಸ್ಯೆ ಹೆಚ್ಚಾಗಿದೆ. ಆದ್ದರಿಂದ, ಹಾಸನ ಪ್ರದೇಶದಲ್ಲಿ ಬಾಡಿಗೆ ಕಟ್ಟಡವನ್ನು ವ್ಯವಸ್ಥೆ ಕಲ್ಪಿಸಲು ವಿಶೇಷ ಅನುದಾನ ಕೊಡಲಾಗುವುದು ದಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಹಾಸ್ಟೆಲ್ ವ್ಯವಸ್ಥೆಯನ್ನು ತುರ್ತಾಗಿ ಮಾಡಲಾಗುತ್ತಿದೆ. ಹಾಸನ ಕ್ಷೇತ್ರದಲ್ಲೂ ಆರು ಹಾಸ್ಟೆಲ್ ಅನುಮತಿ ನೀಡಲಾಗಿದೆ ಎಂದು ಸಚಿವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದ್ದಾರೆ.

ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್ಗಳಲ್ಲಿ ಗುಣಮಟ್ಟದ ಆಹಾರ ನೀಡಬೇಕು ಎಂಬ ಕಾರಣದಿಂದ ಪಾರದರ್ಶಕ ಟೆಂಡರ್ ಗೆ ಅವಕಾಶ ಕಲ್ಪಿಸಿದೆ. ಅಕ್ರಮ ನಡೆದಿದ್ದೇ ಆದಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗುತ್ತದೆ ಎಂದು ‌ಎಚ್ಚರಿಕೆ ನೀಡಿದ್ದಾರೆ.

ರಾಜ್ಯದಲ್ಲಿ ಭಿಕ್ಷುಕರಿಗೆ ನೆಲೆ ಒದಗಿಸಲು 18 ಕೇಂದ್ರಗಳನ್ನು ತೆರೆಯಲಾಗಿದೆ. ಬಿಕ್ಷುಕ ರಹಿತ ನಗರ ಮಾಡಬೇಕು ಎಂಬ ದೃಷ್ಟಿಯಿಂದ ಪ್ರಯತ್ನ ನಡೆಯುತ್ತಿದೆ. ಅಲೆಮಾರಿಗಳಿಗೆ ಸೂರು ಒದಗಿಸಲು 250 ಕೋಟಿ ರೂಪಾಯಿ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಹಾಸನದ ಸಮಾಜ ಕಲ್ಯಾಣ ಇಲಾಖೆಯಲ್ಲಿ ಹಿಂದೆ ನಡೆದಿದೆ ಎನ್ನಲಾದ ಅಕ್ರಮದ ಬಗ್ಗೆ ಜಿಲ್ಲಾಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರವನ್ನೂ ನೀಡಿದ್ದಾರೆ.

ನದಿಗಳ ಜೋಡಣೆ: ರಾಜ್ಯಗಳಲ್ಲಿ ಒಮ್ಮತ ಇದ್ದರಷ್ಟೇ ಜಾರಿಗೆ

0

ಕೇಂದ್ರ ಸರ್ಕಾರ ಬಜೆಟ್ ನಲ್ಲಿ ಪ್ರಸ್ತಾಪಿಸಿರುವ ನದಿಗಳ ಜೋಡಣೆ ವಿಚಾರದಿಂದ ಕರ್ನಾಟಕಕ್ಕೆ ಹೆಚ್ಚಿನ ಪ್ರಯೋಜನವಿಲ್ಲ ಎಂಬ ಮಾತು ವ್ಯಾಪಕವಾಗಿ ಕೇಳಲಾರಂಭಿಸಿದೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಕೇಂದ್ರ ಬಜೆಟ್ ನಲ್ಲಿ ಗೋದಾವರಿ-ಕೃಷ್ಣ -ಪೆನ್ನಾರ್ ಹಾಗೂ ಕಾವೇರಿ ನದಿ ಜೋಡಣೆ ಯೋಜನೆ ಘೋಷಿಸಿದ್ದಾರೆ. ಈ ಯೋಜನೆ ಕಾರ್ಯರೂಪಕ್ಕೆ ಬಂದರೆ ಅತಿಹೆಚ್ಚಿನ ಪ್ರಯೋಜನವಾಗುವುದು ತಮಿಳುನಾಡಿಗೆ ಎಂದು ಎಂಬ ಮಾತು ಕೇಳಿಬರುತ್ತಿದೆ. ಜೊತೆಗೆ ಆಂಧ್ರಪ್ರದೇಶ ತೆಲಂಗಾಣಗಳು ಸ್ವಲ್ಪ ಪ್ರಯೋಜನ ಪಡೆಯಬಹುದು. ಸರಿ ರಾಜ್ಯಕ್ಕೆ ಯಾವುದೇ ರೀತಿಯ ಪ್ರಯೋಜನವಾಗದು ಎಂಬುದು ನೀರಾವರಿ ತಜ್ಞರ ಅಭಿಪ್ರಾಯವಾಗಿದೆ.
ಗೋದಾವರಿ ನದಿ ನೀರನ್ನು ಮೀರಜ್ -ಸಾಂಗ್ಲಿ ಮಾರ್ಗವಾಗಿ ಧಾರವಾಡಕ್ಕೆ ತಂದರಷ್ಟೇ ರಾಜ್ಯಕ್ಕೆ ಸ್ವಲ್ಪ ಅನುಕೂಲವಾಗಬಹುದು. ಆದರೆ ಇದಕ್ಕೆ ನೆರೆಯ ಮಹಾರಾಷ್ಟ್ರ ಒಪ್ಪುವುದೇ ಎಂಬ ಪ್ರಶ್ನೆ ಮೂಡುತ್ತದೆ. ಏಕೆಂದರೆ ಯೋಚನೆ ಕಾರ್ಯಗತವಾಗ ಬೇಕಾದರೆ ರಾಜ್ಯ ಸರ್ಕಾರಗಳ ಅನುಮತಿ ಅಗತ್ಯ. ಇಲ್ಲದಿದ್ದರೆ ಅಂತಾ ರಾಜ್ಯ ಜಲ ವಿವಾದ ಸೃಷ್ಟಿಯಾಗುವ ಸಾಧ್ಯತೆಗಳಿದ್ದು, ಪ್ರಕರಣಗಳು ನ್ಯಾಯಾಲಯದ ಮುಂದೆ ಹೋಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.
ಕೇಂದ್ರ ಸರ್ಕಾರ ಬಜೆಟ್ ನಲ್ಲಿ ಘೋಷಿಸಿರುವ ನದಿಗಳ ಜೋಡಣೆಯ ವಿಚಾರದಿಂದ ಕರ್ನಾಟಕಕ್ಕೆ ಹೆಚ್ಚಿನ ಪ್ರಯೋಜನವಿಲ್ಲ. ನೀರಿನ ಲಭ್ಯತೆ ಆಧರಿಸಿ ಡಿಪಿಆರ್ ಬಗ್ಗೆ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿಯವರು ಹೇಳಿರುವುದು ಸೂಕ್ತವಾಗಿದೆ ಎಂದು ನೀರಾವರಿ ತಜ್ಞ ಪ್ರೊ. ನರಸಿಂಹಪ್ಪ ಅವರು ತಿಳಿಸಿದ್ದಾರೆ.


ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಕೇಂದ್ರ ಬಜೆಟ್ ನಲ್ಲಿ ಗೋದಾವರಿ-ಕೃಷ್ಣ -ಪೆನ್ನಾರ್ ಹಾಗೂ ಕಾವೇರಿ ನದಿ ಜೋಡಣೆ ಯೋಜನೆ ಘೋಷಿಸಿದ್ದಾರೆ. ಈ ಯೋಜನೆ ಕಾರ್ಯರೂಪಕ್ಕೆ ಬಂದರೆ ಅತಿಹೆಚ್ಚಿನ ಪ್ರಯೋಜನವಾಗುವುದು ತಮಿಳುನಾಡಿಗೆ ಎಂದು ಎಂಬ ಮಾತು ಕೇಳಿಬರುತ್ತಿದೆ. ಜೊತೆಗೆ ಆಂಧ್ರಪ್ರದೇಶ ತೆಲಂಗಾಣಗಳು ಸ್ವಲ್ಪ ಪ್ರಯೋಜನ ಪಡೆಯಬಹುದು. ಸರಿ ರಾಜ್ಯಕ್ಕೆ ಯಾವುದೇ ರೀತಿಯ ಪ್ರಯೋಜನವಾಗದು ಎಂಬುದು ನೀರಾವರಿ ತಜ್ಞರ ಅಭಿಪ್ರಾಯವಾಗಿದೆ.
ಗೋದಾವರಿ ನದಿ ನೀರನ್ನು ಮೀರಜ್ -ಸಾಂಗ್ಲಿ ಮಾರ್ಗವಾಗಿ ಧಾರವಾಡಕ್ಕೆ ತಂದರಷ್ಟೇ ರಾಜ್ಯಕ್ಕೆ ಸ್ವಲ್ಪ ಅನುಕೂಲವಾಗಬಹುದು. ಆದರೆ ಇದಕ್ಕೆ ನೆರೆಯ ಮಹಾರಾಷ್ಟ್ರ ಒಪ್ಪುವುದೇ ಎಂಬ ಪ್ರಶ್ನೆ ಮೂಡುತ್ತದೆ. ಏಕೆಂದರೆ ಯೋಚನೆ ಕಾರ್ಯಗತವಾಗ ಬೇಕಾದರೆ ರಾಜ್ಯ ಸರ್ಕಾರಗಳ ಅನುಮತಿ ಅಗತ್ಯ. ಇಲ್ಲದಿದ್ದರೆ ಅಂತಾ ರಾಜ್ಯ ಜಲ ವಿವಾದ ಸೃಷ್ಟಿಯಾಗುವ ಸಾಧ್ಯತೆಗಳಿದ್ದು, ಪ್ರಕರಣಗಳು ನ್ಯಾಯಾಲಯದ ಮುಂದೆ ಹೋಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.
ಕೇಂದ್ರ ಸರ್ಕಾರ ಬಜೆಟ್ ನಲ್ಲಿ ಘೋಷಿಸಿರುವ ನದಿಗಳ ಜೋಡಣೆಯ ವಿಚಾರದಿಂದ ಕರ್ನಾಟಕಕ್ಕೆ ಹೆಚ್ಚಿನ ಪ್ರಯೋಜನವಿಲ್ಲ. ನೀರಿನ ಲಭ್ಯತೆ ಆಧರಿಸಿ ಡಿಪಿಆರ್ ಬಗ್ಗೆ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿಯವರು ಹೇಳಿರುವುದು ಸೂಕ್ತವಾಗಿದೆ ಎಂದು ನೀರಾವರಿ ತಜ್ಞ ಪ್ರೊ. ನರಸಿಂಹಪ್ಪ ಅವರು ತಿಳಿಸಿದ್ದಾರೆ.

ಸಚಿವ ಸಂಪುಟ ಪುನಾರಚನೆ ಸುಳಿವು:ಆಕಾಂಕ್ಷಿಗಳ ದಿಲ್ಲಿಯಾತ್ರೆ

0

ಫೆಬ್ರವರಿ 7ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಿಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಸಚಿವ ಸ್ಥಾನದ ಆಕಾಂಕ್ಷಿ ಗಳಲ್ಲಿ ಮತ್ತಷ್ಟು ನಿರೀಕ್ಷೆ ಮನೆಮಾಡಿದೆ.

ಫೆಬ್ರವರಿ 7ರಂದು ಮುಖ್ಯಮಂತ್ರಿಯವರು ದಿಲ್ಲಿಗೆ ತೆರಳುವುದಾಗಿ ತಿಳಿಸಿದ್ದಾರೆ. ರಾಜ್ಯದ ಸಂಸದರೊಂದಿಗೆ ಮತ್ತು ಅಂತಾರಾಜ್ಯ ಜಲವಿವಾದ ಕುರಿತು ಕಾನೂನು ತಜ್ಞರೊಂದಿಗೆ ಸಭೆ ನಡೆಸುವುದು ಈ ಭೇಟಿಯ ಉದ್ದೇಶವೆಂದು ಸಿಎಂ ಹೇಳಿದ್ದಾರೆ.

ಸಿಎಂ ದೆಹಲಿ ಪ್ರವಾಸ ಕೈಗೊಂಡ ಹಿನ್ನೆಲೆ ಈಗಾಗಲೇ ಸಂಪುಟಕ್ಕೆ ಮೇಜರ್ ಸರ್ಜರಿ ಕೈಗೊಳ್ಳಲಾಗುತ್ತದೆ ಎಂಬ ಚರ್ಚೆಗಳು ಬಹುದಿನದಿಂದ ನಡೆಯುತ್ತಿದೆ. ಸಂಪುಟ ಪುನರ್ ರಚನೆಗೆ ಹೈಕಮಾಂಡ್ ಸಿದ್ದ ವಿದೆಯೋ ಇಲ್ಲವೋ ಎಂಬುದು ಖಾತರಿಯಿಲ್ಲ. ಸಂಪುಟ ವಿಸ್ತರಣೆಗೆ ಸೀಮಿತವಾದರೆ ಕಾಲಿಇರುವ ನಾಲ್ಕು ಸ್ಥಾನ ಭರ್ತೀಯಾಗಲಿದೆ. ಆದರೆ ಈ ಬಗ್ಗೆ ಇನ್ನೂ ಮುಖ್ಯಮಂತ್ರಿ ಬೊಮ್ಮಾಯಿಯವರು ಸ್ಪಷ್ಟನೆ ನೀಡಿಲ್ಲ.

ಮಂತ್ರಿ ಸ್ಥಾನದ ಆಕಾಂಕ್ಷಿಗಳಲ್ಲಿ ಹಲವರು ದಿಲ್ಲಿಗೆ ದೌಡಾಯಿಸುವ ಲೆಕ್ಕಾಚಾರದಲ್ಲಿದ್ದಾರೆ. ಶಾಸಕ ಎಂ ಪಿ ರೇಣುಕಾಚಾರ್ಯ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಭೇಟಿಗೆ ಈಗಾಗಲೇ ಸಮಯ ಕೇಳಿದ್ದಾರೆ. ಬಸವನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಇನ್ನೂ ಕೆಲವರು ದಿಲ್ಲಿಗೆ ತೆರಳಲು ಮುಂದಾಗಿದ್ದಾರೆ. ಸಂಪುಟದ ಸದಸ್ಯರು ಕೂಡ ತಮ್ಮ ಸ್ಥಾನ ಉಳಿಸಿಕೊಳ್ಳಲು ಇದೇ ದಾರಿ ತುಳಿಯುವ ಸಾಧ್ಯತೆಯಿದೆ.