Dr. B.R. Ambedkar ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್, ಗಾಂಧಿ, ಬುದ್ದ, ಬಸವ ವಿಚಾರಧಾರೆಗಳನ್ನು ಜನಮಾನಸದಲ್ಲಿ ಜಾಗೃತಗೊಳಿಸಲು ನಾಡಿನ ಹೆಸರಾಂತ ಹಾಗೂ ಪರಿಣಿತಿ ಹೊಂದಿದ ಪರಿಶಿಷ್ಟ ಜಾತಿಯ ಕಲಾವಿದರನ್ನೊಳಗೊಂಡ ಕಲಾತಂಡದಿAದ ‘ಭೀಮ ಗಾಯನ’ ಕಾರ್ಯಕ್ರಮವನ್ನು ಮಾ.06 ರ ಬೆಳಿಗ್ಗೆ 10 ಗಂಟೆಗೆ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಲಾಗಿದೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ವಿವಿಧ ಇಲಾಖೆ, ಸಂಘ ಸಂಸ್ಥೆಗಳು, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ನಡೆಯಲಿದ್ದು ಅಮ್ಮ ವಸುಂಧರೆ ಕಲಾತಂಡದವರು ‘ಭೀಮ ಗಾಯನ’ ಕಾರ್ಯಕ್ರಮವನ್ನು ನಡೆಸಿಕೊಡುವರು.
Dr. B.R. Ambedkar ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಶಿವಮೊಗ್ಗ ನಗರ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅಧ್ಯಕ್ಷತೆ ವಹಿಸುವರು. ಸಂಸದರು, ವಿಧಾನ ಸಭಾ ಮತ್ತು ವಿಧಾನ ಪರಿಷತ್ ಶಾಸಕರು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಿಗಳ ಅಧ್ಯಕ್ಷರು, ಜನಪ್ರತಿನಿಧಿಗಳು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ, ಜಿ.ಪಂ ಸಿಇಓ ಹೇಮಂತ್ ಎನ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಖಿಲ್ ಬಿ, ಇತರೆ ಅಧಿಕಾರಿಗಳು ಪಾಲ್ಗೊಳ್ಳುವರು. ಗಾಯನ ಕಾರ್ಯಕ್ರಮಕ್ಕೆ ಪ್ರವೇಶ ಉಚಿತವಾಗಿದ್ದು ವಿವಿಧ ಸಂಘಟನೆಗಳು, ವಿದ್ಯಾರ್ಥಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿಯವರು ಕೋರಿದ್ದಾರೆ.
Dr. B.R. Ambedkar ಮಾ.06 ರಂದು ಬೆಳಿಗ್ಗೆ 10 ಗಂಟೆಗೆ ಅಂಬೇಡ್ಕರ್ ಭವನದಲ್ಲಿ ‘ಭೀಮ ಗಾಯನ’
ಫ್ರೆಂಡ್ಸ್ ಸೆಂಟರ್‌ನಿಂದ ಹೋಳಿ ಆಚರಣೆ
ಫ್ರೆಂಡ್ಸ್ ಸೆಂಟರ್ ವತಿಯಿಂದ ಹೋಳಿ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಯಿತು. ನೂರಾರು ಜನರು ಪಾಲ್ಗೊಂಡು ಸಂಭ್ರಮ ಆಚರಿಸಿದರು.
ಫ್ರೆಂಡ್ಸ್ ಸೆಂಟರ್ ಅಧ್ಯಕ್ಷ ಬಿ.ಧನರಾಜ್ ಮಾತನಾಡಿ, ಪ್ರೀತಿ, ಸ್ನೇಹ ಹಂಚುತ್ತ ಹೋಳಿ ಹಬ್ಬದ ಆಚರಣೆ ನಡೆಸುತ್ತಿದ್ದು, ಹೋಳಿ ಹಬ್ಬವು ಕೆಟ್ಟದ್ದನ್ನು ದಹಿಸಿ ಒಳ್ಳೆಯದನ್ನು ಅಳವಡಿಸಿಕೊಳ್ಳುವ ಒಂದು ಆಚರಣೆಯಾಗಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಮಾಜಿ ಅಧ್ಯಕ್ಷ ಜಿ.ವಿಜಯಕುಮಾರ್, ಬಣ್ಣಗಳ ಹಬ್ಬ ಹೋಳಿ ಹಬ್ಬ ಎಲ್ಲಾ ಜೀವನದಲ್ಲಿ ಸುಖ, ಶಾಂತಿ, ನೆಮ್ಮದಿ, ಸಮೃದ್ಧಿ ತರಲಿ ಎಂದು ಹಾರೈಸಿದರು.
ಮಾಜಿ ಅಧ್ಯಕ್ಷ ಎಸ್.ದತ್ತಾತ್ರೇಯ ಮಾತನಾಡಿ, ಹಬ್ಬಗಳು ನಮ್ಮ ಸಂಸ್ಕೃತಿಯ ಪ್ರತೀಕ. ಇವುಗಳ ಆಚರಣೆಯಿಂದ ನಮ್ಮ ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ಸಹಕಾರಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ನೇತ್ರ ಭಂಡಾರದ ಅಧ್ಯಕ್ಷ ವಿ.ನಾಗರಾಜ್, ಮಾಜಿ ಅಧ್ಯಕ್ಷರಾದ ಬಿಂದು ವಿಜಯಕುಮಾರ್, ವೀರಣ್ಣ, ಮಲ್ಲಿಕಾರ್ಜುನ್ ಕಾನೂರ್, ಆರ್.ಮನೋಹರ, ಉಮೇಶ್ ಹಿರೇಮಠ, ರಂಜನಿ ದತ್ತಾತ್ರಿ, ಲತಾ ಶಂಕರ್ ಹಾಗೂ ಮಹಿಳಾ ವಿಭಾಗದ ಇನ್ನಿತರ ಸದಸ್ಯರುಗಳು ಹಾಜರಿದ್ದರು.
Chamber of Commerce Shivamogga ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ವಾಣಿಜ್ಯೋದ್ಯಮಿ ಪ್ರಶಸ್ತಿ ಪ್ರದಾನ
Chamber of Commerce Shivamogga ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಸಂಸ್ಥಾಪಕರ ದಿನಾಚರಣೆ 2025ರ ಪ್ರಯುಕ್ತ ವಾಣಿಜ್ಯ ಉದ್ಯಮಿಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಐವತ್ತು ವರ್ಷದಿಂದ ಕರಕುಶಲ ಮತ್ತು ಗುಡಿ ಕೈಗಾರಿಕೆ ಉತ್ಪನ್ನಗಳಿಗೆ ರಾಜ್ಯಾದ್ಯಂತ ಹೆಸರುವಾಸಿಯಾದ ನ್ಯೂ ಕಿಶನ್ ಹ್ಯಾಂಡಿಕ್ರಾಫ್ಟ್. ಮಾಲೀಕ ಬಿ.ಆರ್.ಸಂತೋಷ್, ಐದು ದಶಕಗಳಿಗಿಂತ ಹೆಚ್ಚು ಕಾಲ ದಿನಸಿ ಉತ್ಪನ್ನಗಳ ಮಾರಾಟಕ್ಕೆ ಹೆಸರುವಾಸಿಯಾದ ಪಾಲುದಾರಿಕೆ ಸಂಸ್ಥೆ ರವಿ ಟ್ರೇಡರ್ಸ್ ಪಾಲುದಾರರಾದ ಉಮೇಶ್, ಪ್ರಕಾಶ್, ರವಿ ಹಾಗೂ 35 ವರ್ಷಗಳಿಗಿಂತ ಮೇಲ್ಪಟ್ಟು ಔಷಧೋದ್ಯಮದಲ್ಲಿ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವ ಅಶೋಕ್ ಫಾರ್ಮಾ ಮಾಲೀಕ ಮಧುಕರ್ ಶೆಟ್ಟಿ ಹಾಗೂ 35 ವರ್ಷಗಳಿಂದ ಮೇಲ್ಪಟ್ಟು ಲೆಕ್ಕಪರಿಶೋಧನಾ ವೃತ್ತಿಯಲ್ಲಿ ತೊಡಗಿಸಿಕೊಂಡಿರುವ ತೆರಿಗೆ ಸಲಹೆಗಾರ ಯು.ಮಧುಸೂದನ್ ಐತಾಳ್ ಅವರಿಗೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪ್ರತಿಷ್ಠಿತ ವಾಣಿಜ್ಯೋದ್ಯಮ ಪ್ರಶಸ್ತಿ ಹಾಗೂ ವಿಶೇಷ ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಲಾಯಿತು.
Chamber of Commerce Shivamogga ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ. ಸಂಸ್ಥಾಪಕರ ದಿನಾಚರಣೆ 2025ರ ಪ್ರಯುಕ್ತ ವಾಣಿಜ್ಯ ಉದ್ಯಮಿಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಪ್ರತಿಷ್ಠಿತ ಪ್ರಶಸ್ತಿಯನ್ನು ಕರ್ನಾಟಕ ರಾಜ್ಯ ಎಫ್ ಕೆ ಸಿ ಸಿ ಐ ರಾಜ್ಯ ಅಧ್ಯಕ್ಷೆ ಉಮಾರೆಡ್ಡಿ ಅವರು ಪ್ರದಾನ ಮಾಡಿದರು. ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್, ಉಪಾಧ್ಯಕ್ಷ ಜಿ.ವಿಜಯಕುಮಾರ್, ಕಾರ್ಯದರ್ಶಿ ಎ.ಎಂ.ಸುರೇಶ್, ಖಜಾಂಚಿ ಆರ್.ಮನೋಹರ್, ಸಹ ಕಾರ್ಯದರ್ಶಿ ಕೆ.ಎಸ್.ಸುಕುಮಾರ್ ಹಾಗೂ ಸಂಸ್ಥೆ ಮಾಜಿ ಅಧ್ಯಕ್ಷರು, ನಿರ್ದೇಶಕರು, ಸದಸ್ಯರು ಉಪಸ್ಥಿತರಿದ್ದರು.
Public Library Department 2022ನೇ ಸಾಲಿನ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಪಟ್ಟಿ ಪ್ರಕಟ – ಆಕ್ಷೇಪಣೆ ಸಲ್ಲಿಸಲು ಅವಕಾಶ
2022ನೇ ವರ್ಷದಲ್ಲಿ ಪ್ರಥಮ ಮುದ್ರಣಗೊಂಡು ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಯಾದ ಪುಸ್ತಕಗಳ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಪಟ್ಟಿಯನ್ನು ರಾಜ್ಯದ ಎಲ್ಲಾ ಜಿಲ್ಲಾ/ನಗರ ಕೇಂದ್ರ ಗ್ರಂಥಾಲಯಗಳ ಕಚೇರಿಗಳಲ್ಲಿ ಹಾಗೂ ಇಲಾಖೆಯ ಅಧಿಕೃತ ವೆಬ್‍ಸೈಟ್ www.dpl.karnataka.gov.in ನಲ್ಲಿ 2026 ನೇ ಮಾರ್ಚ್ 02 ರಂದು ಪ್ರಕಟಿಸಲಾಗಿದೆ.
ಆಕ್ಷೇಪಣೆ ಸಲ್ಲಿಸಲು ಅವಕಾಶ :
Public Library Department ಆಯ್ಕೆಯಾದ ಪುಸ್ತಕಗಳ ಪಟ್ಟಿಯಲ್ಲಿರುವ ಲೇಖಕರು, ಲೇಖಕ – ಪ್ರಕಾಶಕರು, ಪ್ರಕಾಶಕರು ಮತ್ತು ಪುಸ್ತಕ ಮಾರಾಟಗಾರರು ತಮ್ಮ ಪುಸ್ತಕಗಳಿಗೆ ಸಂಬಂಧಿಸಿದ ಪುಸ್ತಕದ ಶೀರ್ಷಿಕೆ, ಲೇಖಕರ / ಪ್ರಕಾಶಕರ ಹೆಸರು, ಮುಖ ಬೆಲೆ (ನಿಗದಿತ ಬೆಲೆಯಲ್ಲಿ ವ್ಯತ್ಯಾಸವಿದ್ದಲ್ಲಿ), ಪುಸ್ತಕದ ಅಳತೆ ಮತ್ತು ಪುಟಗಳ ಸಂಖ್ಯೆ ಅಥವಾ ಇತರ ಯಾವುದೇ ತಾಂತ್ರಿಕ ವ್ಯತ್ಯಾಸಗಳಿದ್ದಲ್ಲಿ ತಮ್ಮ ಆಕ್ಷೇಪಣೆ ಅಥವಾ ತಿದ್ದುಪಡಿಗಳನ್ನು ಅಧಿಕೃತ ಮಾಹಿತಿ / ದಾಖಲೆಗಳೊಂದಿಗೆ 2026 ನೇ ಮಾರ್ಚ್ 16ರ ಸಂಜೆ 5.30ರ ಒಳಗಾಗಿ ಆಯುಕ್ತರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 4ನೇ ಮಹಡಿ, ಡಾ. ಅಂಬೇಡ್ಕರ್ ವೀದಿ, ಬೆಂಗಳೂರು – 560001 ಇಲ್ಲಿಗೆ ಲಿಖಿತವಾಗಿ ಆಕ್ಷೇಪಣೆಗಳನ್ನು ಸಲ್ಲಿಸಬಹುದು.
ನಿಗದಿತ ಅವಧಿಯ ನಂತರ ಬರುವ ಮನವಿಗಳನ್ನು ಪರಿಗಣಿಸಲಾಗುವುದಿಲ್ಲ ಮತ್ತು ಏಕಪಕ್ಷೀಯವಾಗಿ ನಿರ್ಣಯವನ್ನು ಕೈಗೊಳ್ಳಲಾಗುವುದು ಎಂದು ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಆಯುಕ್ತರಾದ ಬಸವರಾಜೇಂದ್ರ ಹೆಚ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Ayushman Bharat ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ‘Whistle Blower Policy’ ಜಾರಿ – ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ
Ayushman Bharat ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ ಮುಖ್ಯ ಮಂತ್ರಿಗಳ ಆರೋಗ್ಯ ಕರ್ನಾಟಕ (AB-PM-JAY-CMs-ArK) ಯೋಜನೆಯಡಿ ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಗಳು ಅಥವಾ ಯೋಜನೆಯ ಅನುಷ್ಠಾನದಲ್ಲಿ ಭಾಗಿಯಾಗುವ ಯಾವುದೇ ಪಾಲುದಾರರ ವಿರುದ್ಧ ಭ್ರಷ್ಟಾಚಾರ, ವೈದ್ಯಕೀಯ ಮತ್ತು ವೈದ್ಯಕೀಯೇತರ ವಂಚನೆ ಅಥವಾ ಉದ್ದೇಶಪೂರ್ವಕವಾಗಿ ಅಥವಾ ವಿವೇಚನಾಯುತವಾಗಿ ಅಧಿಕಾರ ದುರುವಯೋಗದಂತಹ ಯಾವುದೇ ಆರೋಪಗಳು ಕಂಡುಬಂದಲ್ಲಿ ಆರೋಪಿತರ ವಿರುದ್ಧ ದೂರು/ಮಾಹಿತಿ ನೀಡುವ ಯಾವುದೇ ವ್ಯಕ್ತಿಯ ಗುರುತನ್ನು ಗೌಪ್ಯವಾಗಿಟ್ಟು ಇಂತಹ ಪ್ರಕರಣಗಳ ಮಾಹಿತಿ ಪಡೆದು ವಿಚಾರಣೆ ನಡೆಸಲು Whistle Blower Policy ಯನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನಲ್ಲಿ ಸರ್ಕಾರದ ಆದೇಶದ ಅನ್ವಯ ಅನುಷ್ಠಾನಗೊಳಿಸಲಾಗಿರುತ್ತದೆ.
ಅದರಂತೆ,AB-PM-JAY-CMs-ArK ಅನುಷ್ಠಾನದಲ್ಲಿ ಭಾಗಿಯಾಗಿರುವ ಯಾವುದೇ ಪಾಲುದಾರರ ವಿರುದ್ಧ ಕೇಳಿಬರುವ ಅಂತಹ ಆರೋಪದ ಮೇಲೆ ದೂರುಗಳನ್ನು ಸ್ವೀಕರಿಸಲು, ವಿಚಾರಿಸಲು, ಅಂತಹ ದೂರು ನೀಡುವ ವ್ಯಕ್ತಿಯ ಗೌಪ್ಯತೆಯನ್ನು ಕಾಪಾಡಲು ಹಾಗೂ ಅದಕ್ಕೆ ಪ್ರಾಸಂಗಿಕವಾದ ವಿಷಯಗಳ ಬಹಿರಂಗಪಡಿಸುವಿಕೆಯ ವಿರುದ್ಧ ಸಾಕಷ್ಟು ಸುರಕ್ಷತೆಗಳನ್ನು ಒದಗಿಸುವುದು Whistle Blower Policy ಯ ಉದ್ದೇಶವಾಗಿರುತ್ತದೆ.
ಗುರುತರ ಆರೋಪಗಳ ಬಹಿರಂಗ ಪಡಿಸುವಿಕೆಯನ್ನು ಸುರಕ್ಷಿತವಾಗಿ ಸ್ವೀಕರಿಸುವ ಮತ್ತು ಅದರ ಬಗ್ಗೆ, ವಿವರವಾದ ತನಿಖೆ ನಡೆಸಿ ಪ್ರಾಥಮಿಕ ವರದಿಯನ್ನು Whistle Blower Committee ಗೆ ಸಲ್ಲಿಸುವ ನಾಮನಿರ್ದೇಶಿತ/ನೇಮಕಾತಿಗೊಂಡ ಒಬ್ಬ ಅಧಿಕಾರಿಯನ್ನು Whistle Blower Officer ಎಂದು ಕರೆಯಲಾವುದು. ಅದರಂತೆ ಮುಖ್ಯ ಜಾಗೃತಾಧಿಕಾರಿಗಳು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಇವರು Whistle Blower Officer ಆಗಿರುತ್ತಾರೆ.
Whistle Blower Committee ಯು Whistle Blower Officer ಸಲ್ಲಿಸಿದ ತನಿಖಾ ವರದಿಯ ಕುರಿತು ಮತ್ತಷ್ಟು ಚರ್ಚಿಸಿ ಪರಿಶೀಲಿಸುತ್ತದೆ. ಈ ಸಮಿತಿಯು ಸಕ್ಷಮ ಪ್ರಾಧಿಕಾರದ ನಿರ್ದಿಷ್ಟ ಅನುಮೋದನೆಯ ಮೇರೆಗೆ ಅಗತ್ಯವಿರುವ ಯಾವುದೇ ಇತರ ಅಧಿಕಾರಿಯ ಸಹಾಯವನ್ನು ಪಡೆದು ಕ್ರಮವಹಿಸುತ್ತದೆ.
ಯಾವುದೇ ಮಾಹಿತಿ ಇದ್ದಲ್ಲಿ Whistle Blower ಅಧಿಕಾರಿಗೆ ಮಾಹಿತಿ ಸಲ್ಲಿಸಬಹುದು. ಮಾಹಿತಿ ಸಲ್ಲಿಸಿದವರ ವಿವರವನ್ನು ಗೌಪ್ಯವಾಗಿಡಲಾಗುವುದು. ದೂರು ಸಲ್ಲಿಸಲು ವಾಟ್ಸಪ್ ನಲ್ಲಿ ವಿವರವಾದ ಮಾಹಿತಿ ನೀಡಲು ದೂರವಾಣಿ ಸಂಖ್ಯೆ: 9480819724 ಗೆ ಸಂಪರ್ಕಿಸಬಹುದು. ಆಸ್ಪತ್ರೆಗಳು, ಫಲಾನುಭವಿಗಳು, ಸಿಬ್ಬಂದಿಗಳು, ಸಾರ್ವಜನಿಕರು ಈ ಸೌಲಭ್ಯವನ್ನು ಬಳಸಿಕೊಳ್ಳಬಹುದು.
Ayushman Bharat ಹೆಚ್ಚಿನ ಮಾಹಿತಿಗಾಗಿ ಮುಖ್ಯ ಜಾಗೃತಾಧಿಕಾರಿಗಳು, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್, “ಆರೋಗ್ಯ ಸೌಧ”, 7ನೇ ಮಹಡಿ, 1ನೇ ಕ್ರಾಸ್, ಮಾಗಡಿ ರಸ್ತೆ, ಬೆಂಗಳೂರು-560 023 ಅಥವಾ ದೂರವಾಣಿ ಸಂಖ್ಯೆ 9480819724 ಅಥವಾ ಉಚಿತ ಸಹಾಯವಾಣಿ ಸಂಖ್ಯೆ: 18004258330 ಹಾಗೂ ಇಮೇಲ್ ವಿಳಾಸ: cvosast@gmail.com ಗೆ ಸಂಪರ್ಕಿಸಬಹುದು ಎಂದು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ತಿಳಿಸಿದೆ.
Department of Tourism ಪ್ರವಾಸೋದ್ಯಮ ಇಲಾಖೆಯಿಂದ ಮೊಬೈಲ್ ಕ್ಯಾಂಟೀನ್ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ
Department of Tourism ಪ್ರವಾಸೋದ್ಯಮ ಇಲಾಖೆಯಿಂದ ಮೊಬೈಲ್ ಕ್ಯಾಂಟೀನ್ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನಯ ವತಿಯಿಂದ 2025-26ನೇ ಸಾಲಿನಲ್ಲಿ ರಾಜ್ಯದ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಅನುಕೂಲಕ್ಕಾಗಿ ಹಾಗೂ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸುವ ಉದ್ದೇಶದಿಂದ ಮೊಬೈಲ್ ಕ್ಯಾಂಟೀನ್ ಯೋಜನೆಯನ್ನು ಜಾರಿಗೆ ತರಲಾಗಿದ್ದು, ಈ ಯೋಜನೆಯಡಿ ಶಿವಮೊಗ್ಗ ಜಿಲ್ಲೆಯ ನಿವಾಸಿಗಳಾಗಿರುವ ಪರಿಶಿಷ್ಟ ಜಾತಿಗೆ ಸೇರಿದ 06 ಅಭ್ಯರ್ಥಿಗಳು ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 04 ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟೀನ್ ವಾಹನ ಖರೀದಿಸಲು ಸಹಾಯಧನ ನೀಡುವ ಉದ್ದೇಶದಿಂದ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು 20 ರಿಂದ 55 ವರ್ಷದೊಳಗಿನವರಾಗಿದ್ದು, 10ನೇ ತರಗತಿ ಉತ್ತೀರ್ಣ ಪ್ರಮಾಣ ಪತ್ರ, ಆಧಾರ್ ಪ್ರತಿ, ಲಘು ವಾಹನ ಚಾಲನಾ ಪರವಾನಗಿ, ಚಾಲ್ತಿಯಲ್ಲಿರುವ ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ವಾಸಸ್ಥಳ ದೃಢೀಕರಣ ಪತ್ರ, ಬ್ಯಾಂಕ್‌ನಿAದ ಸಾಲ ಪಡೆಯಲು ಅರ್ಹತೆ ಹೊಂದಿರುವ ಬಗ್ಗೆ ಮಂಜೂರಾತಿ/ದೃಢೀಕರಣ ಪತ್ರ ಹಾಗೂ ಇಲಾಖೆಯಿಂದ ನೀಡಲಾಗುವ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ಕಡ್ಡಾಯವಾಗಿ ಪಡೆಯುವುದಾಗಿ ಪ್ರಮಾಣ ಪತ್ರ, ಯಾವುದೇ ಸರ್ಕಾರಿ ಇಲಾಖೆ ಅಥವಾ ನಿಗಮ/ಮಂಡಳಿಗಳಲ್ಲಿ ಖಾಯಂ ನೌಕರಿಯಾಗಿಲ್ಲವೆಂಬ ಸ್ವಯಂ ಘೋಷಣೆಯನ್ನು ಸಲ್ಲಿಸಬೇಕು ಮತ್ತು ಅರ್ಜಿಯೊಂದಿಗೆ ಸಲ್ಲಿಸುವ ಎಲ್ಲಾ ದಾಖಲಾತಿಗಳನ್ನು ಸ್ವಯಂ ದೃಢೀಕರಿಸಿ ಸಲ್ಲಿಸಬೇಕು.
Department of Tourism ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಪ್ರವಾಸೋದ್ಯಮ ಇಲಾಖೆ, ‘ಎ’ ಬ್ಲಾಕ್, 3ನೇ ತಿರುವು ಗೋಪಾಲಗೌಡ ಬಡಾವಣೆ, ಶಿವಮೊಗ್ಗ ಈ ಕಛೇರಿಯಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಪೂರಕ ದಾಖಲೆಗಳೊಂದಿಗೆ ಮಾ.13 ರೊಳಗಾಗಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪ್ರವಾಸೋದ್ಯಮ ಸಮಿತಿ ಅಧ್ಯಕ್ಷರೂ ಆದ ಪ್ರಭುಲಿಂಗ ಕವಳಿಕಟ್ಟಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-251444 ನ್ನು ಸಂಪರ್ಕಿಸುವುದು.
ಇಲಾಖಾ ಅಧಿಕಾರಿಗಳ ನಡುವೆ ಸಮನ್ವಯತೆ ಸಾಧಿಸಲು ಕ್ರೀಡೆಗಳು ಸಹಕಾರಿ : ಎನ್.ಹೇಮಂತ್
ವಿವಿಧ ಇಲಾಖಾ ಅಧಿಕಾರಿ-ಸಿಬ್ಬಂಧಿಗಳ ನಡುವೆ ಸೌಹಾರ್ಧಯುತವಾಗಿ ಮತ್ತು ಸ್ನೇಹಪೂರ್ವಕವಾಗಿ ಕ್ರಿಕೇಟ್‌ಪಂದ್ಯಾವಳಿಯನ್ನು ಆಯೋಜಿಸುತ್ತಿರುವುದು ಇಲಾಖೆ-ಇಲಾಖೆಗಳ ಮತ್ತು ಅಧಿಕಾರಿಗಳ ನಡುವೆ ಸ್ನೇಹ ಸಂಬಂಧಗಳು ಏರ್ಪಟ್ಟು ತಮ್ಮ ಕಾರ್ಯಕ್ಷೇತ್ರದಲ್ಲಿ ಸಾರ್ವಜನಿಕರಿಗೆ ಉತ್ತಮ ಸೇವೆಯನ್ನು ಒದಗಿಸುವಲ್ಲಿ ಪರೋಕ್ಷವಾಗಿ ಸಹಕಾರಿಯಾಗಲಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಹೇಮಂತ್‌ಅವರು ಹೇಳಿದರು.
ಅವರು ಇಂದು ರಾಜ್ಯ ಸರ್ಕಾರಿ ನೌಕರರ ಸಂಘದ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಮಾರ್ಚ್07 ಮತ್ತು 08ರಂದು ಇಲಾಖೆಗಳ ನಡುವೆ ನಡೆಯಲಿರುವ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಟೆನ್ನಿಸ್‌ಬಾಲ್‌ಕ್ರಿಕೇಟ್‌ಪಂದ್ಯಾವಳಿಯ ಟ್ರೋಫಿ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.
ನಡೆಸಲಾಗುವ ಕ್ರೀಡೆ ಸ್ಪರ್ಧಾತ್ಮಕವಾಗಿರುವಂತೆ ಸಂತೋಷದಾಯಕವೂ ಆಗಿರಲಿ. ಆಸಕ್ತ ಎಲ್ಲಾ ನೌಕರರು ಸಕ್ರಿಯವಾಗಿ ಆಟದಲ್ಲಿ ಪಾಲ್ಗೊಂಡು ಸಂಭ್ರಮಿಸುವಂತೆ ಮನವಿ ಮಾಡಿದ ಅವರು, ಮುಂದಿನ ದಿನಗಳಲ್ಲಿ ಮಹಿಳಾ ನೌಕರರಿಗೂ ಆಟೋಟಗಳನ್ನು ಆಯೋಜಿಸುವಂತೆ ಅವರು ಆಯೋಜಕರಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಜಿಲ್ಲಾ ಪೊಲೀಸ್‌ವರಿಷ್ಟಾಧಿಕಾರಿ ಬಿ.ನಿಖಿಲ್‌ಅವರು ಮಾತನಾಡಿ, ನೌಕರರಲ್ಲಿ ಪರಸ್ಪರರಲ್ಲಿ ಸಮನ್ವಯತೆ ಸಾಧಿಸುವಲ್ಲಿ ಕ್ರೀಡೆಗಳು ಸಹಕಾರಿಯಾಗಿವೆ ಎಂದ ಅವರು, ಉತ್ತಮ ಬಾಂಧವ್ಯಕ್ಕೆ ಮುನ್ನುಡಿಯಾಗಿದೆ. ಇದರಿಂದಾಗಿ ನೌಕರರಲ್ಲಿ ಉತ್ತಮ ವಾತಾವರಣ ನಿರ್ಮಾಣಗೊಂಡು ತಮ್ಮ ಕಾರ್ಯಕ್ಷೇತ್ರದಲ್ಲಿ ಉತ್ತಮವಾಗಿ ಸೇವೆ ಸಲ್ಲಿಸಲು ಸಹಕಾರಿಯಾಗಲಿದೆ ಎಂದರು.
ರಾಜ್ಯದಲ್ಲಿಯೇ ಮಾದರಿ ಎನಿಸಬಹುದಾದ ರಾಜ್ಯ ಸರ್ಕಾರಿ ನೌಕರರ ಘಟಕವು ಶಿವಮೊಗ್ಗದಲ್ಲಿ ಸದಾ ಕ್ರಿಯಾಶೀಲವಾಗಿರುವುದು ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಸಕಾಲಿಕ ಚಿಂತನೆ, ಕಾರ್ಯಕ್ರಮಗಳ ಆಯೋಜನೆ ಉತ್ಕೃಷ್ಟವಾದುದಾಗಿದೆ. ಸಂಘದ ಪದಾಧಿಕಾರಿಗಳೊಂದಿಗೆ ಎಲ್ಲಾ ಇಲಾಖಾ ನೌಕರರು, ಅವರ ಕುಟುಂಬಗಳ ಅವಲಂಬಿತರು ಪಾಲ್ಗೊಳ್ಳುತ್ತಿರುವುದು ಸಂತಸವನ್ನು ಇಮ್ಮಡಿಗೊಳಿಸಿದೆ ಎಂದರು.
ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವ ಪ್ರತಿ ನೌಕರರು ತಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸುವಂತೆ ಸೂಚಿಸಿದ ಅವರು ಕಡುಬೇಸಿಗೆಯಲ್ಲಿ ತಾಪಮಾನ ಹೆಚ್ಚಳದಿಂದಾಗಿ ದೇಹದಲ್ಲಿ ನಿರ್ಜಲೀಕರಣಗೊಂಡು ಆರೋಗ್ಯದ ಏರುಪೇರುಗಳಾಗಬಹುದು. ಆದ್ದರಿಂದ ದೈಹಿಕವಾಗಿ ಆರೋಗ್ಯದ ಕಡೆ ಗಮನಹರಿಸುವಂತೆ ಅವರು ಸೂಚಿಸಿದರು.
ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಆರ್.ಮೋಹನ್‌ಕುಮಾರ್‌ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಸಂಘವು ಸರ್ಕಾರದೊಂದಿಗೆ ಸಂಘರ್ಷಕ್ಕೆ ಇಳಿಯದೇ ನೌಕರರ ಸೇವಾ ಸೌಲಭ್ಯವನ್ನು ದೊರಕಿಸಿಕೊಡುವಲ್ಲಿ ಸದಾ ಕಾರ್ಯಪ್ರವೃತ್ತವಾಗಿರುವಂತೆ ನೌಕರರ ಮತ್ತು ಅವರ ಕುಟುಂಬದ ಅವಲಂಬಿತರ ಆರೋಗ್ಯದ ಕುರಿತು ಆರೋಗ್ಯ ತಪಾಸಣಾ ಕಾರ್ಯಕ್ರಮಗಳನ್ನು ಆಯೋಜಿಸಿದೆ. ಕಾಲಕಾಲಕ್ಕೆ ಮನೋರಂಜನೆಗಾಗಿ ವಿವಿಧ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು, ಔತಣಕೂಟಗಳನ್ನು ಆಯೋಜಿಸುತ್ತಿದೆ. ಇದರಿಂದಾಗಿ ನೌಕರರಲ್ಲಿ ಉಲ್ಲಾಸದ ಭಾವ ಕಾಣಬಹುದಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಈಗಾಗಲೇ ಟೆನ್ನಿಸ್‌ಬಾಲ್‌ಕ್ರಿಕೇಟ್‌ಪಂದ್ಯಾವಳಿಗೆ ನೋಂದಾಯಿಸಿಕೊಂಡ 28ತಂಡಗಳಿಗೆ 28 ರೀತಿಯ ಕ್ಯಾಪ್‌ಗಳನ್ನು ಗಣ್ಯರು ವಿತರಿಸಿದರು. ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಅಭಿಷೇಕ್‌ವಿ., ಉಪವಿಭಾಗಾಧಿಕಾರಿ ಸತ್ಯನಾರಾಯಣ್, ಆರ್.ಪಾಪಣ್ಣ, ಕೊಟ್ರೇಶ್, ರಂಗನಾಥ್, ರವಿ, ಸುಮತಿ, ದಿನೇಶ್‌ಸೇರಿದಂತೆ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
S. N. Channabasappa ಮನುಕುಲದ ಉದ್ದಾರವೇ ಶ್ರೇಷ್ಟವೆಂದು ಕೈವಾರ ತಾತಯ್ಯ ನಂಬಿದ್ದರು : ಎಸ್ ಎನ್ ಚನ್ನಬಸಪ್ಪ
S. N. Channabasappa ಮಾನವರೆಲ್ಲರೂ ಒಂದೇ. ಮನುಕುಲದ ಉದ್ದಾರವೇ ಶ್ರೇಷ್ಟ ಎಂದು ಕೈವಾರ ತಾತಯ್ಯನವರು ನಂಬಿದ್ದು, ಮನುಕುಲದ ಉದ್ದಾರದ ಕುರಿತು ಸಾಕಷ್ಟು ಕೀರ್ತನೆಗಳನ್ನು ರಚಿಸಿ ನಮ್ಮೆಲ್ಲರಿಗೂ ಮಾರ್ಗದರ್ಶಕರಾಗಿದ್ದಾರೆ ಎಂದು ಶಾಸಕರಾದ ಎಸ್ ಎನ್ ಚನ್ನಬಸಪ್ಪ ಸ್ಮರಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಬಲಿಜ ಸೇವಾ ಸಂಘ ಶಿವಮೊಗ್ಗ ಇವರುಗಳ ಸಂಯುಕ್ತಾಶ್ರಯದಲ್ಲಿ ಇಂದು ನಗರದ ಕುವೆಂಪು ರಂಗ ಮಂದಿರದಲ್ಲಿ ಏರ್ಪಡಿಸಲಾಗಿದ್ದ ಶ್ರೀ ಯೋಗಿನಾರೇಯಣ ಯತೀಂದ್ರ (ಕೈವಾರ ತಾತಯ್ಯ) ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ತಾತಯ್ಯನವರು ದೇವರ ವಿಶೇಷ ಸೃಷ್ಟಿ. ಅವರು ಭಗವಂತನ ಸ್ವರೂಪ. ಪ್ರತಿಯೊಬ್ಬ ಮನುಷ್ಯ ಸಂಸ್ಕೃತಿಯನ್ನು ಅರಿತಿರಬೇಕು. ಗ್ರಾಮದ ಲೆಕ್ಕಿಗ ಭ್ರಷ್ಟನಾಗಿರಬಾರದು ಎಂದು ಅಂದೇ ಹೇಳಿದ್ದರು. ಬದುಕು ಹೇಗಿರಬೇಕು ಎಂದು ತಿಳಿಸಿಕೊಟ್ಟ ಸಾಂಸ್ಕೃ್ಕತಿಕ ಹರಿಕಾರರಾದ ಇವರು ಜಾತಿ ವ್ಯವಸ್ಥೆಯನ್ನು ತೀವ್ರವಾಗಿ ವಿರೋಧಿಸುತ್ತಿದ್ದರು. ಮನುಕುಲದ ಉದ್ದಾರವೇ ಶ್ರೇಷ್ಟವೆಂದು ನಂಬಿದ್ದರು. ಸರಳ ಕನ್ನಡದಲ್ಲಿ ತತ್ವಪದಗಳು ಮತ್ತು ಕಾಲಜ್ಞಾನ ವನ್ನು ರಚಿಸಿ, ಭವಿಷ್ಯದ ಘಟನೆಗಳನ್ನು ಮುನ್ನರಿತಿದ್ದರು. ಇವರ ಕೀರ್ತನೆಗಳು ಭಕ್ತಿ, ಯೋಗ ಮತ್ತು ವೇದಾಂತದ ಸಾರವನ್ನು ಒಳಗೊಂಡಿವೆ ಎಂದರು.
ಮನುಕುಲದ ಏಳಿಗೆಗೋಸ್ಕರ ಚಿಂತಿಸಿದ ಇಂತಹ ಮಹಾನ್ ದಾರ್ಶನಿಕರನ್ನು ಯಾವುದೇ ಒಂದು ಜಾತಿಗೆ ಸೀಮಿತಗೊಳಿಸುವ ಕೆಲಸ ಆಗಬಾರದು. ಇಡೀ ಸಮಾಜಕ್ಕೆ ಇವರು ಸೇರಿದವರು. ಇವರು ಹಾಕಿಕೊಟ್ಟ ದಾರಿಯಲ್ಲಿ ನಾವು ಸಾಗಬೇಕು. ಬಲಿಜ ಸಮಾಜ ಸ್ವಾವಲಂಬಿ ಸಮಾಜವಾಗಿದ್ದು, ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದೆ ಎಂದು ತಿಳಿಸಿದರು.
S. N. Channabasappa ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾದ ಸಿ ಎಸ್ ಚಂದ್ರಭೂಪಾಲ ಮಾತನಾಡಿ, ಇಡೀ ಸಮಾಜಕ್ಕೆ ಹಾಗೂ ಮುಂದಿನ ಪೀಳಿಗೆಗೆ ಇಂತಹ ಮಹಾನ್ ಸಾಧಕರ ಸಂದೇಶಗಳು, ತತ್ವ, ಆದರ್ಶಗಳನ್ನು ತಲುಪಿಸಬೇಕೆಂಬ ಉದ್ದೇಶದಿಂದ ಸರ್ಕಾರವು ಜಯಂತಿಗಳನ್ನು ಆಚರಿಸುತ್ತಿದೆ. ಕೈವಾರ ತಾತಯ್ಯನವರು ಎಲ್ಲ ಹೆಣ್ಣುಮಕ್ಕಳನ್ನು ತಾಯಿ ಸಮಾನ ಕಾಣುತ್ತಿದ್ದು, ಬಳೆ ವ್ಯಾಪಾರ ಮಾಡಿ ಜೀವನ ಸಾಗಿಸುತ್ತಾ, ಸಮಾಜದಲ್ಲಿ ಸಾಮರಸ್ಯ ಮತ್ತು ಸಮಾನತೆ ಸಾರುವ ಕೆಲಸ ಮಾಡುತ್ತಾರೆ. ಕೀರ್ತನೆಗಳ ಮೂಲಕ ಸಮಾಜದ ಅಂಕು ಡೊಂಕುಗಳನ್ನು ತಿದ್ದುವ ಪ್ರಯತ್ನ ಮಾಡುತ್ತಾರೆ. ತಾತಯ್ಯನಂತಹ ಮಹಾನ್ ವ್ಯಕ್ತಿಗಳನ್ನು ನಾವು ಸದಾ ಅನುಸರಿಸಬೇಕು ಎಂದ ಅವರು ಬಲಿಜ ಸಮಾಜವು ಆರ್ಥಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ಬೆಳೆಯಬೇಕು ಎಂದರು.
ಸಹ್ಯಾದ್ರಿ ವಿಜ್ಞಾನ ಕಾಲೇಜು ಪ್ರಾಧ್ಯಾಪಕರಾದ ಡಾ. ಛಾಯಾಕುಮಾರಿ ವಿಶೇಷ ಉಪನ್ಯಾಸ ನೀಡಿ ಮಾತನಾಡಿ, ಸಮಾಜ ಸುಧಾರಕರಾದ ತಾತಯ್ಯನವರು ದೈವೀ ಪವಾಡದಿಂದ ಮುದ್ದಮ್ಮ ಮತ್ತು ಕೊಂಡಪ್ಪ ದಂಪತಿಗೆ ಜನಿಸುತ್ತಾರೆ. ಇವರನ್ನು ಪದಗಳಲ್ಲಿ ವರ್ಣಿಸಲು ಸಾಧ್ಯವಿಲ್ಲ. ಅವರೊಂದು ಅಗಾಧವಾದ ಸಮುದ್ರ.
ಪ್ರೌಢ ವಯಸ್ಕರಾದಾಗ ಸೋದರತ್ತೆಯ ಮಗಳು ಮುನಿಯಮ್ಮ (ಲಕ್ಷ್ಮಮ್ಮ) ಳೊಂದಿಗೆ ವಿವಾಹವಾಗಿ ಮೂವರು ಮಕ್ಕಳ ತಂದೆಯಾದರು. ಜೀವನ ನಿರ್ವಹಣೆಗಾಗಿ ಬಳೆ ಮಾರುವ ವೃತ್ತಿ ಕೈಗೊಂಡರು. ಹಣದ ಬೆನ್ನತ್ತದೆ, ಶುದ್ಧ ಭಾವದಿಂದ ಬಳೆ ಮಾರುತ್ತಿದ್ದ ಇವರಿಗೂ ಪತ್ನಿಗೂ ವಿರಸ ಉಂಟಾಗುತ್ತದೆ.
ಒಮ್ಮೆ ಬಳೆ ಮಾರಲು ಹೋದಾಗ ಎದುರಾದ ಪರದೇಶಿ ಸ್ವಾಮಿಗಳಿಂದ ಓಂ ನಮೋ ನಾರಾಯಣಾಯ ಎಂಬ ಮಂತ್ರೋಪದೇಶ ಪಡೆಯುತ್ತಾರೆ. ನಂತರ ಬೆಣಚುಕಲ್ಲೊಂದನ್ನು ಬಾಯಲ್ಲಿಟ್ಟುಕೊಂಡು ಕೈವಾರದ ನರಸಿಂಹ ಗುಹೆಯಲ್ಲಿ ಮೂರು ವರ್ಷ ಕಠಿಣ ತಪಸ್ಸು ಮಾಡಿ ದೈವ ಸಾಕ್ಷಾತ್ಕಾರ ಪಡೆಯುತ್ತಾರೆ. ಆಗ ಬಾಯಲ್ಲಿದ್ದ ಕಲ್ಲು ಸಕ್ಕರೆಯಾಗಿ ಬದಲಾಗುತ್ತದೆ. ನಂತರ ಯೋಗಿ ನಾರೇಯಣ ಎಂದು ಪ್ರಸಿದ್ದರಾದ ಅವರು ಮುಂದೆ ಪವಾಡ ಪುರುಷರಾಗುತ್ತಾರೆ. ಮನುಷ್ಯನ ಅಹಂ ಎಂಬ ಅಂಧಕಾರ ಸಕ್ಕರೆಯಂತೆ ಕರಗಬೇಕು. ಜ್ಞಾನ ಜ್ಯೋತಿ ಬೆಳಗಬೇಕು ಎಂದು ಪ್ರತಿಪಾದಿಸಿದ ಅವರು ಜ್ಞಾನ, ದಯೆ, ಸಹಬಾಳ್ವೆ, ಸಂಸ್ಕಾರ ಕೊಡುವಂತಹದ್ದೇ ನಿಜವಾದ ಶಿಕ್ಷಣ ಎಂದು ಹೇಳಿದ್ದರು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ವಿಶೇಷ ಸಾಧನೆ ಮಾಡಿದ ಸಮಾಜದ ವಿದ್ಯಾರ್ಥಿಗಳನ್ನು ಇದೇ ವೇಳೆ ಸನ್ಮಾನಿಸಿ ಅಭಿನಂದಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಬಲಿಜ ಸಂಘದ ಅಧ್ಯಕ್ಷರಾದ ಎಸ್.ಎನ್.ವೆಂಕಟೇಶ್, ಕಾರ್ಯದರ್ಶಿಗಳಾದ ಡಾ.ಬಿ.ಆರ್.ಶಿವಕುಮಾರ್ ,ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ್ ಹೆಚ್ ಸಮಾಜದ ಮುಖಂಡರು ಹಾಜರಿದ್ದರು.
JCI Institute ವ್ಯಕ್ತಿತ್ವ ವಿಕಸನದ ಜತೆ ನಾಯಕತ್ವ ಗುಣ ವೃದ್ಧಿ : ಮಧುಸೂದನ್ ನಾವಡ
JCI Institute ಜೆಸಿಐ ಸಂಸ್ಥೆಯಲ್ಲಿ ಭಾಗಿಯಾಗುವುದರಿಂದ ವ್ಯಕ್ತಿತ್ವ ವಿಕಸನದ ಜತೆಯಲ್ಲಿ ನಾಯಕತ್ವ ಗುಣ ಬೆಳೆಯುತ್ತದೆ ಎಂದು ಜೆಸಿಐ ವಲಯ 24ರ ವಲಯ ಅಧ್ಯಕ್ಷ ಮಧುಸೂದನ್ ನಾವಡ ಹೇಳಿದರು.
ಶಂಕರಘಟ್ಟದ ಶ್ರೀಗಂಧ ನೇಚರ್ ರೆಸಾರ್ಟ್ ನಲ್ಲಿ ಜೆಸಿಐ ಸಂಸ್ಥೆ ವತಿಯಿಂದ ಆಯೋಜಿಸಿದ್ದ ವಲಯ ಮತ್ತು ರಾಷ್ಟ್ರೀಯ ತರಬೇತುದಾರರಿಗೆ ತರಬೇತಿ ನೀಡುವ ವಿಶೇಷ ಕಾರ್ಯಗಾರದಲ್ಲಿ ಮಾತನಾಡಿ, ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ಜೆಸಿಐ ಸಂಸ್ಥೆಗೆ ಸೇರಬೇಕು. ಭವಿಷ್ಯದಲ್ಲಿ ಹೆಚ್ಚಿನ ಅನುಕೂಲವಾಗುತ್ತದೆ ಎಂದು ತಿಳಿಸಿದರು.
ವಲಯ ತರಬೇತಿ ನಿರ್ದೇಶಕ ಜಿ ಗಣೇಶ ಮಾತನಾಡಿ, ಜೆಸಿಐ ಸಂಸ್ಥೆ ಜೀವನ ಕೌಶಲ್ಯಗಳ ಜೊತೆಗೆ ಮನೋವಿಕಾಸ ಹಾಗೂ ಆತ್ಮವಿಶ್ವಾಸ ವೃದ್ಧಿಸುತ್ತದೆ. ಶಿಸ್ತುಬದ್ಧ ಜೀವನದ ಬಗ್ಗೆ ಹಾಗೂ ಸಂಸ್ಥೆಯನ್ನು ಹೇಗೆ ಮುನ್ನಡೆಸಿಕೊಂಡು ಹೋಗಬೇಕು. ನಮ್ಮ ಜವಾಬ್ದಾರಿ ಕರ್ತವ್ಯಗಳು ಏನು ಎಂಬುದರ ಬಗ್ಗೆ ಮಾಹಿತಿ ದೊರೆಯುತ್ತದೆ ಎಂದರು.
ಕೃತಕ ಬುದ್ಧಿಮತ್ತೆಯನ್ನು ಬಳಸಿ ತರಬೇತಿಯನ್ನು ನೀಡುವುದರ ಬಗ್ಗೆ ಮಾಹಿತಿಯನ್ನು ಬೆಂಗಳೂರಿನ ಸಂದೇಶ ಅವರು ನೀಡಿದರು. ಬೆಂಗಳೂರಿನ ಮನಶಾಸ್ತ್ರಜ್ಞ, ತರಬೇತುದಾರ ಕುಮಾರಸ್ವಾಮಿ ಅವರು ಮಕ್ಕಳಿಗೆ ಯಾವ ರೀತಿ ತರಬೇತಿ ನೀಡಬೇಕು ಎನ್ನುವುದರ ಬಗ್ಗೆ ಮಾಹಿತಿ ನೀಡಿದರು.
JCI Institute ಅಂತರಾಷ್ಟ್ರೀಯ ತರಬೇತುದಾರರು ಹಾಗೂ ಕಾರ್ಪೊರೇಟ್ ಟ್ರೈನರ್ ವಿಶ್ವನಾಥ ಅವರು ವಿವಿಧ ರೀತಿಯ ತರಬೇತಿ ಮತ್ತು ತರಬೇತಿಯಲ್ಲಿ ಹೊಸ ಹೊಸ ವಿಧಾನಗಳ ಅಳವಡಿಕೆ ಬಗ್ಗೆ ಅತ್ಯಂತ ಪರಿಣಾಮಕಾರಿಯಾಗಿ ತರಬೇತಿ ನಡೆಸಿದರು.
ರಾಷ್ಟ್ರೀಯ ತರಬೇತುದಾರ ಚಂದ್ರಶೇಖರ್ ಎಸ್. ಮಾತನಾಡಿ, ಜೆಸಿಐ ಸಂಸ್ಥೆ ನೂರಾರು ದೇಶಗಳಲ್ಲಿ ವ್ಯಕ್ತಿತ್ವ ವಿಕಸನ ಹಾಗೂ ಮಾನವೀಯ ಮೌಲ್ಯಗಳನ್ನು ಬಿಂಬಿಸುವ ಹಾಗೂ ನಮ್ಮಲ್ಲಿರುವ ಪ್ರತಿಭೆಗಳನ್ನು ಅನಾವರಣ ಮಾಡುವ ಅತ್ಯುತ್ತಮ ಸೃಜನಶೀಲ ಸಂಸ್ಥೆಯಾಗಿದೆ. ಇಂತಹ ಸಂಸ್ಥೆಯಲ್ಲಿ ತರಬೇತಿ ಪಡೆದವರು ಜೀವನದಲ್ಲಿ ಯಶಸ್ವಿಯಾಗಿ ಗುರಿ ಮುಟ್ಟುತ್ತಾರೆ ಎಂದು ತಿಳಿಸಿದರು.
25 ತರಬೇತುದಾರರು ಕಾರ್ಯಕ್ರಮದಲ್ಲಿ ಪ್ರಯೋಜನ ಪಡೆದುಕೊಂಡರು. ಕಾರ್ಯಕ್ರಮದಲ್ಲಿ ಉದಯ್ ಕದಂಬ, ಜೆಸಿಐ ಪ್ರಮುಖರು ಉಪಸ್ಥಿತರಿದ್ದರು.
DVS College of Arts, Science and Commerce ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಜಗತ್ತಿಗೆ ತಕ್ಕಂತೆ ಸಿದ್ಧಪಡಿಸಿ: ಡಾ. ಎಂ.ವೆಂಕಟೇಶ್
DVS College of Arts, Science and Commerce ಆಧುನಿಕ ಜಗತ್ತಿನ ಸಾಮಾಜಿಕ ಜಾಲತಾಣಗಳ ಕ್ರಾಂತಿಕಾರಕ ಬದಲಾವಣೆಗಳನ್ನು ವಿದ್ಯಾರ್ಥಿಗಳು ಕಾಲಕಾಲಕ್ಕೆ ಅರಿತುಕೊಳ್ಳಬೇಕು ಎಂದು ಶಿವಮೊಗ್ಗದ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಂಶುಪಾಲ ಡಾ. ಎಂ.ವೆಂಕಟೇಶ್ ಹೇಳಿದರು.
ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನ ಮತ್ತು ಡಾ. ಜಿ.ಎ.ನಾರಿಬೋಲಿ ಶಿಕ್ಷಣ ಮಹಾವಿದ್ಯಾಲಯದ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಎಂಬುದು ಎಲ್ಲಾ ಕಡೆ ಆವರಿಸಿಕೊಂಡು ಜೀವ ಜಗತ್ತಿಗೆ ಅತಿ ವೇಗವನ್ನು ನೀಡುತ್ತಿದೆ ಎಂದು ತಿಳಿಸಿದರು.
ಕಾಲದ ವೇಗಕ್ಕೆ ತಕ್ಕಂತೆ ಬಿಎಡ್ ವಿದ್ಯಾರ್ಥಿಗಳು ಸಾಗಬೇಕಾದ ಅನಿವಾರ್ಯತೆ ಇದೆ. ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಜಗತ್ತಿಗೆ ಸಿಕ್ಕಂತೆ ಸಿದ್ಧಪಡಿಸಬೇಕು. ಯಾವುದೇ ಭೇದವಿಲ್ಲದೆ ಜ್ಞಾನದ ದಾಸೋಹವನ್ನು ನಮ್ಮ ಶಿಕ್ಷಕ ಸಮುದಾಯ ಎಲ್ಲರಿಗೂ ನೀಡಬೇಕು ಎಂದು ಹೇಳಿದರು.
ವಿದ್ಯಾರ್ಥಿಗಳು ಭವಿಷ್ಯದ ದೃಷ್ಟಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಗತ್ಯ ಸಿದ್ಧತೆ ನಡೆಸಬೇಕು. ಪದವಿ ಶಿಕ್ಷಣದ ಜತೆಯಲ್ಲಿ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು. ಶಿಕ್ಷಕರು ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷ ಬಿ.ಆರ್.ಜಯಂತ್ ಮಾತನಾಡಿ, ಪ್ರಶಿಕ್ಷಣಾರ್ಥಿಗಳು ಹೆಚ್ಚಿನ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು. ಮುಂದಿನ ಜನಾಂಗವನ್ನು ಮೌಲ್ಯಯುತವಾಗಿ ಸಿದ್ಧಗೊಳಿಸಬೇಕು ಎಂದು ತಿಳಿಸಿದರು.
DVS College of Arts, Science and Commerce ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಡಾ. ಎಚ್ ಎಂ ಶಿವಕುಮಾರ್ ಮಾತನಾಡಿ, ಅವರು ಇಂದು ಜಗತ್ತಿನಲ್ಲಿ ಬದಲಾವಣೆಗಳ ಗಾಳಿ ಬೀಸುತ್ತಿತ್ತು ಅದಕ್ಕೆ ತಕ್ಕ ಹಾಗೆ ನಮ್ಮ ಶಿಕ್ಷಕರಿಂದ ಮತ್ತು ವಿದ್ಯಾರ್ಥಿಗಳು ತಯಾರಾಗಬೇಕು ಎಂದು ಅಭಿಪ್ರಾಯಪಟ್ಟರು.
ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಉಪಾಧ್ಯಕ್ಷ ಕೆ.ಎಂ.ಸೂರ್ಯನಾರಾಯಣ, ಎಚ್.ಎಂ.ರವಿಕುಮಾರ್, ಕೋಶಾಧ್ಯಕ್ಷ ಕೆ.ವೆಂಕಟೇಶ್, ಸಹ ಕಾರ್ಯದರ್ಶಿ ಎಂ.ಆರ್.ಸತ್ಯನಾರಾಯಣ, ಜಿ.ಎಸ್.ಪ್ರಕಾಶ್, ಡಾ. ಜಿ.ಎ.ನಾರಿಬೋಲಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲೆ ಡಾ. ಶಿಲ್ಪಾ ವಿ.ಎನ್. ಇತರರಿದ್ದರು.
