Saturday, February 14, 2026
Saturday, February 14, 2026
Home Blog Page 1762

ಡಿಜಿಟಲ್ ಕ್ಷೇತ್ರದಲ್ಲಿನ ಉದ್ಯೋಗಾವಕಾಶಗಳು-ಕಾರ್ಯಕ್ರಮಕ್ಕೆ ಚಾಲನೆ

0

ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಮತ್ತು ಪಾಲಿಟೆಕ್ನಿಕ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸೂಕ್ತ ಉದ್ಯೋಗಾವಕಾಶ ಕಲ್ಪಿಸುವ ‘ ಫ್ಯೂಚರ್ ಡಿಜಿಟಲ್ ಜಾಬ್ಸ್’ ಕಾರ್ಯಕ್ರಮಕ್ಕೆ ಉನ್ನತ ಶಿಕ್ಷಣ ಸಚಿವ ಡಾ. ಸಿ. ಎನ್. ಅಶ್ವತ್ಥನಾರಾಯಣ ಅವರು ಚಾಲನೆ ನೀಡಿದ್ದಾರೆ.

ಈ ಸಂಬಂಧ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ಡಿಜಿಟಲ್ ಎಕನಾಮಿಕ್ ಸಂಸ್ಥೆಗಳು ಒಡಂಬಡಿಕೆ ಮಾಡಿಕೊಂಡಿವೆ. ವಿಧಾನಸೌಧದಲ್ಲಿ, ಹಮ್ಮಿಕೊಂಡಿದ್ದ ಸರಳ ಸಮಾರಂಭದಲ್ಲಿ ಕೆಡಿಇಎಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂಜೀವ್ ಗುಪ್ತ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ. ಪ್ರದೀಪ್ ಅವರು ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.

ಇದೇ ಸಂದರ್ಭದಲ್ಲಿ ಸಚಿವ ಡಾ. ಸಿ. ಎನ್.ಅಶ್ವತ್ಥನಾರಾಯಣ ಅವರು ಮಾತನಾಡುತ್ತಿದ್ದರು.
” ಫ್ಯೂಚರ್ ಡಿಜಿಟಲ್ ಜಾಬ್ಸ್ ಕಾರ್ಯಕ್ರಮದಿಂದಾಗಿ ರಾಜ್ಯದ 92 ಸರ್ಕಾರಿ ಪಾಲಿಟೆಕ್ನಿಕ್ ಮತ್ತು 14 ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳಿಗೆ ಅವರ ಕನಸಿನ ಉದ್ಯೋಗ ದೊರೆಯಲಿದೆ. ಮತ್ತೊಂದೆಡೆ ಉದ್ಯಮ ರಂಗಕ್ಕೆ ಬೇಕಾದ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಲಾಗುವುದು. ಇದು ನೂತನ ರಾಷ್ಟ್ರೀಯ ಶಿಕ್ಷಣ ನೀತಿಗೆ ಪೂರಕವಾಗಿದೆ ಎಂದು ತಿಳಿಸಿದ್ದಾರೆ.

” ನೂತನ ಕಾರ್ಯಕ್ರಮದನ್ವಯ ಸರ್ಕಾರಿ ಇಂಜಿನಿಯರಿಂಗ್ ಮತ್ತು ಪಾಲಿಟೆಕ್ನಿಕ್ ಸಂಸ್ಥೆಗಳಲ್ಲಿ ಫ್ಯೂಚರ್ ಡಿಜಿಟಲ್ ಜಾಬ್ಸ್ ಯೋಜನೆಯನ್ನು ಆಂದೋಲನ ಮಾದರಿಯಲ್ಲಿ ಹಮ್ಮಿಕೊಳ್ಳಲಾಗುವುದು. ಜೊತೆಗೆ ಅರ್ಥಪೂರ್ಣ ಇಂಟರ್ನ್ ಶಿಪ್, ಪ್ರಾಜೆಕ್ಟ್ ಗಳು, ಉದ್ಯೋಗ ನೇಮಕಾತಿ ಕನಸು ನನಸಾಗುವಂತೆ ವೃತ್ತಿ ಸಮಾಲೋಚನೆ ಹಾಗೂ ಮಾರ್ಗದರ್ಶನ ನೀಡಲಾಗುವುದು ಎಂದು ಅಶ್ವತ್ಥನಾರಾಯಣ ಅವರು ತಿಳಿಸಿದ್ದಾರೆ.

ಸರ್ಕಾರಿ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ ಪರಿ ಪೋಷಣೆ ಹಾಗೂ ಉತ್ಕೃಷ್ಟತಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಉದ್ಯಮಗಳೊಂದಿಗೆ ಸೇರಿಕೊಂಡು ತಾಂತ್ರಿಕ ಶಿಕ್ಷಣದ ಪಠ್ಯ ಕ್ರಮವನ್ನು ಸಮಕಾಲೀನ ಅಗತ್ಯಗಳಿಗೆ ತಕ್ಕಂತೆ ಅಭಿವೃದ್ಧಿಪಡಿಸಿ ಬೋಧನೆ ಮೂಲಸೌಕರ್ಯಗಳನ್ನು ಹೆಚ್ಚಿಸಲಾಗುವುದು. ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಹಾಗೂ ಕೆಡಿಇಎಂ ನಡುವಿನ ಒಡಂಬಡಿಕೆ ಯಿಂದಾಗಿ ಬೆಂಗಳೂರಿನಿಂದ ಹೊರಗಿರುವ ಕೈಗಾರಿಕೋದ್ಯಮ ಗಳಲ್ಲಿ ವಿದ್ಯಾರ್ಥಿಗಳು ಉದ್ಯೋಗ ಕುರಿತು ಸಂಶೋಧನೆ ನಡೆಸಲು ಅನುವು ಮಾಡಿಕೊಡಲಿದೆ. ಜೊತೆಗೆ ಉದ್ಯಮಗಳ ಬಗ್ಗೆ ಮಾಹಿತಿ, ಮಾರ್ಗದರ್ಶನ ಒದಗಿಸಲಿದೆ. ನಿಮಿತವಾಗಿ ವಿಚಾರಸಂಕಿರಣಗಳನ್ನು ಕೂಡ ಆಯೋಜಿಸಲಾಗುತ್ತದೆ. ಇದರಿಂದ ಮುಖ್ಯವಾಗಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಲಾಭವಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.

ಈ ಕಾರ್ಯಕ್ರಮದಲ್ಲಿ ಕೆಡಿಇಎಂ ಅಧ್ಯಕ್ಷ ಬಿ. ವಿ. ನಾಯ್ಡು, ತಾಂತ್ರಿಕ ಶಿಕ್ಷಣ ಇಲಾಖೆ ನಿರ್ದೇಶಕ ಮಂಜುನಾಥ್, ಉದ್ದಿಮೆ ವಾದಿರಾಜ್ ಇನ್ನು ಮುಂತಾದ ಗಣ್ಯರು ಉಪಸ್ಥಿತರಿದ್ದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಅತಿಥಿ ಉಪನ್ಯಾಸಕರಿಗೆ ಸಂಕ್ರಾಂತಿ ಸಿಹಿ

0

ಅತಿಥಿ ಉಪನ್ಯಾಸಕರಿಗೆ ಉತ್ತರಾಯಣ ಪುಣ್ಯಕಾಲ

ವೇತನ ದುಪ್ಪಟ್ಟಿಗಿಂತಲೂ ಹೆಚ್ಚು, ಇಡೀ ಶೈಕ್ಷಣಿಕ ವರ್ಷಕ್ಕೆ ನೇಮಕಾತಿ

ಮಾಸಿಕ 13 ಸಾವಿರ ರೂ. ಪಡೆಯುತ್ತಿದ್ದವರಿಗೆ 32 ಸಾವಿರ ರೂ.ಗೆ ಏರಿಕೆ

ತಿಂಗಳಿಗೆ 11 ಸಾವಿರ ರೂ. ಪಡೆಯುತ್ತಿದ್ದವರಿಗೆ 28 ಸಾವಿರ ರೂ.ಗೆ ಏರಿಕೆ

ಪ್ರತಿ ತಿಂಗಳ 10ನೇ ತಾರೀಖಿನೊಳಗೆ ವೇತನ ಪಾವತಿ ವ್ಯವಸ್ಥೆ

ಬೆಂಗಳೂರು: ನಾನಾ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಹೋರಾಟಕ್ಕಿಳಿದಿದ್ದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಸರಕಾರ ಸಂಕ್ರಾಂತಿಗೆ ಸಿಹಿಸುದ್ದಿ ಕೊಟ್ಟಿದ್ದು, ವೇತನವನ್ನು ದುಪ್ಪಟ್ಟಿಗಿಂತಲೂ ಹೆಚ್ಚು ಏರಿಸಿದೆ. ಜೊತೆಗೆ, ಸೆಮಿಸ್ಟರ್-ವಾರು ನೇಮಕಾತಿಯನ್ನು ನಿಲ್ಲಿಸಿ, ಇನ್ನು ಮುಂದೆ ಇಡೀ ಶೈಕ್ಷಣಿಕ ವರ್ಷಕ್ಕೆ ನೇಮಿಸಿ ಕೊಳ್ಳುವುದಾಗಿ ಘೋಷಿಸಿದೆ.

ಸರಕಾರದ ಪರವಾಗಿ ವಿಧಾನಸೌಧದಲ್ಲಿ ಶುಕ್ರವಾರ ಈ ಮಹತ್ವದ ನಿರ್ಧಾರಗಳನ್ನು ಪ್ರಕಟಿಸಿದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು, ಯುಜಿಸಿ ನಿಗದಿತ ಶೈಕ್ಷಣಿಕ ಅರ್ಹತೆ ಇದ್ದು 5 ವರ್ಷ ಮತ್ತು ಅದಕ್ಕಿಂತ ಹೆಚ್ಚು ಕಾಲ ಸೇವೆ ಸಲ್ಲಿಸಿರುವ ಅತಿಥಿ ಉಪನ್ಯಾಸಕರು ಇನ್ನು ಮುಂದೆ ಮಾಸಿಕ 32 ಸಾವಿರ ರೂ, ಇದಕ್ಕಿಂತ ಕಡಿಮೆ ಸೇವೆ ಸಲ್ಲಿಸಿರುವವರು ಮಾಸಿಕ 30 ಸಾವಿರ ರೂ ಗೌರವಧನ ಪಡೆಯಲಿದ್ದಾರೆ ಎಂದು ಪ್ರಕಟಿಸಿದರು.

ಹಾಗೆಯೇ, ಯುಜಿಸಿ ಬಯಸುವ ಶೈಕ್ಷಣಿಕ ಅರ್ಹತೆ ಹೊಂದದೆ 5 ವರ್ಷಕ್ಕಿಂತ ಹೆಚ್ಚು ಕಾಲ ಸೇವೆ ಸಲ್ಲಿಸಿರುವವರಿಗೆ ಮಾಸಿಕ 28 ಸಾವಿರ ರೂ. ಮತ್ತು ಇದಕ್ಕಿಂತ ಕಡಿಮೆ ಕಾಲ ಸೇವೆ ಸಲ್ಲಿಸಿರುವವರಿಗೆ ಮಾಸಿಕ 26 ಸಾವಿರ ರೂ. ಗೌರವಧನ ನಿಗದಿಪಡಿಸಲಾಗಿದೆ. ಜತೆಗೆ, ಇವರು ನಿಗದಿತ ಶೈಕ್ಷಣಿಕ ಅರ್ಹತೆ ಗಳಿಸಿಕೊಳ್ಳಲು 3 ವರ್ಷಗಳ ಕಾಲಾವಕಾಶ ನೀಡಲಾಗಿದೆ. ಅತಿಥಿ ಉಪನ್ಯಾಸಕರಿಗೆಲ್ಲ ಇನ್ನು ಮುಂದೆ ಪ್ರತೀ ತಿಂಗಳು 10ರೊಳಗೆ ವೇತನ ಪಾವತಿಸಲಾಗುವುದು ಎಂದು ಅವರು ವಿವರಿಸಿದರು.

ಇದುವರೆಗೆ, ಯುಜಿಸಿ ನಿಗದಿತ ಅರ್ಹತೆ ಹೊಂದಿರುವ ಅತಿಥಿ ಉಪನ್ಯಾಸಕರು ತಿಂಗಳಿಗೆ 13 ಸಾವಿರ ರೂ. ಮತ್ತು ಮಿಕ್ಕವರು 11 ಸಾವಿರ ರೂ. ಗೌರವಧನ ಪಡೆಯುತ್ತಿದ್ದರು.

ಇದಲ್ಲದೆ, ಅತಿಥಿ ಉಪನ್ಯಾಸಕರ ಸುಗಮ ನೇಮಕಾತಿಗೆ ಆನ್-ಲೈನ್ ಪೋರ್ಟಲ್ಲನ್ನು ಸಹ ಅಭಿವೃದ್ಧಿ ಪಡಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಇದರಲ್ಲಿ ಜ.17ರಿಂದ ಅರ್ಜಿ ಹಾಕಿಕೊಳ್ಳಬಹುದು. ಇದಕ್ಕೆ ಒಂದು ವಾರ ಕಾಲಾವಕಾಶವಿದ್ದು, ಅಭ್ಯರ್ಥಿಗಳು ತಮ್ಮ ಇಷ್ಟದ 5 ಸರಕಾರಿ ಕಾಲೇಜುಗಳನ್ನು ಸೂಚಿಸಲು ಅವಕಾಶ ಮಾಡಿಕೊಡಲಾಗಿದೆ. ಇದರೊಂದಿಗೆ ಅತಿಥಿ ಉಪನ್ಯಾಸಕರಿಗೆ ಸೂಕ್ತ ಕಾರ್ಯಭಾರ ಇರುವಂತೆ ವ್ಯವಸ್ಥೆ ಮಾಡಲಾಗುವುದು  ಎಂದು ಅವರು ತಿಳಿಸಿದರು.

ಅತಿಥಿ ಉಪನ್ಯಾಸಕರ ಸಮಸ್ಯೆ/ಬೇಡಿಕೆಗಳ ಪರಿಹಾರಕ್ಕಾಗಿ ಸರ್ಕಾರವು ತಿಂಗಳ ಹಿಂದೆ ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ತ್ರಿಸದಸ್ಯ ಸಮಿತಿಯನ್ನು ರಚಿಸಿ, ವರದಿ ನೀಡಲು ಒಂದು ತಿನಡೆದುಕೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು.

`ಅತಿಥಿ ಉಪನ್ಯಾಸಕರ ಸಮಸ್ಯೆ 2002ರಿಂದಲೂ ಇತ್ತು. ಆದರೆ ಹಿಂದಿನ ಸರಕಾರಗಳು ಇದನ್ನು ಸರಿಯಾಗಿ ನಿಭಾಯಿಸದೆ ಇದ್ದುದರಿಂದ ಇದೊಂದು ಕಗ್ಗಂಟಾಗಿತ್ತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಸಹಾನುಭೂತಿ ಮತ್ತು ಮಾನವೀಯ ನೆಲೆಯಲ್ಲಿ ಪರಿಗಣಿಸಿ, ಕ್ಷಿಪ್ರ ಗತಿಯಲ್ಲಿ ಸ್ಪಂದಿಸಿದರು. ಇದರಿಂದಾಗಿ ಕೇವಲ ಒಂದು ತಿಂಗಳಲ್ಲಿ ಪರಿಹಾರ ರೂಪಿಸುವುದು ಸಾಧ್ಯವಾಯಿತು’ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್ ಉಪಸ್ಥಿತರಿದ್ದರು.

ಕೋಟ್

ಇದೊಂದು ಐತಿಹಾಸಿಕ ತೀರ್ಮಾನ. ಇದಕ್ಕೆ ಮಿಂಚಿನ ವೇಗದಲ್ಲಿ ಪರಿಹರ ಕೊಟ್ಟ ಮುಖ್ಯಮಂತ್ರಿ ಬಸವರಾಜ‌ ಬೊಮ್ಮಾಯಿ ಅವರನ್ನು ಅಭಿನಂದಿಸುತ್ತೇನೆ. ಬೋಧಕರು ಈ ಸಮಾಜದ ಸಂಪತ್ತು. ಅವರ ನೆಮ್ಮದಿಯೇ ಸಮಾಜದ ನೆಮ್ಮದಿ.

-ಡಾ.ಸಿ.ಎನ್. ಅಶ್ವತ್ಥನಾರಾಯಣ, ಉನ್ನತ ಶಿಕ್ಷಣ ಸಚಿವ

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ವೈದ್ಯರಿಗೆ ಗ್ರಾಮೀಣ ಸೇವೆ ಕಡ್ಡಾಯ: ಕೋರ್ಟ್ ವಿಚಾರಣೆ ಆರಂಭ

0

ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಪೂರ್ಣಗೊಳಿಸಿದ ಎಲ್ಲ ವಿದ್ಯಾರ್ಥಿಗಳು ಒಂದು ವರ್ಷ ಗ್ರಾಮೀಣ ಪ್ರದೇಶದಲ್ಲಿ ಸೇವೆ ಸಲ್ಲಿಸಬೇಕೆಂಬ ಕಾನೂನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್, ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.

ಡಾ. ಕೀರ್ತಿ ಕರ್ನೂಲ್ ಹಾಗೂ ಇತರ 169 ಮಂದಿ ಸಲ್ಲಿಸಿದ್ದ ಅರ್ಜಿ ಸಿಜೆ ರಿತುರಾಜ್ ಅವಸ್ಥಿ ಅವರಿದ್ದ ವಿಭಾಗೀಯ ಪೀಠದ ಮುಂದೆ ಬಂದಿತ್ತು.

ವಿಚಾರಣೆಯನ್ನು ಆಡಿಸಿದ ನ್ಯಾಯಪೀಠ, ಪ್ರತಿವಾದಿಗಳಿಗೆ ನೋಟಿಸ್ ನೀಡಿ ವಿಚಾರಣೆಯನ್ನು ಫೆಬ್ರವರಿ 22ಕ್ಕೆ ಮುಂದೂಡಿತ್ತು.

ಅರ್ಜಿದಾರರ ಪರ ವಾದ ಮಂಡಿಸಿದ ವಕೀಲೆ ಅಕ್ಕಮಹಾದೇವಿ ಹಿರೇಮಠ, ” ಅರ್ಜಿದಾರರು ಕಡ್ಡಾಯ ಗ್ರಾಮೀಣ ಸೇವೆಗೆ ಅವಕಾಶ ಮಾಡಿಕೊಡುವ ವೈದ್ಯಕೀಯ ಕೋರ್ಸ್ ಪೂರ್ಣಗೊಳಿಸಿದವರಿಗೆ ಕರ್ನಾಟಕ ಕಡ್ಡಾಯ ಸೇವಾ ತರಬೇತಿ ಕಾಯ್ದೆ 2012ರ ಸೆಕ್ಷನ್ 4ರ ಸಿಂಧುತ್ವ ಪ್ರಶ್ನಿಸಿದ್ದಾರೆ. ಏಕಸದಸ್ಯಪೀಠದ ಮುಂದಿದ್ದ ಅರ್ಜಿಗಳು ಇದೇ ನ್ಯಾಯಪೀಠದ ಮುಂದೆ ಬರಲಿದೆ ಎಂದರು.

ಅರ್ಜಿದಾರರು 2018-19 ನೇ ಶೈಕ್ಷಣಿಕ ವರ್ಷದಲ್ಲಿ ಸ್ನಾತಕೋತ್ತರ ಕೋರ್ಸ್ ಗಳಿಗೆ ಸೇರಿದ್ದಾರೆ. ಆಗ ನೀಡಲಾದ ಮಾಹಿತಿ ಕೈಪಿಡಿಯಲ್ಲಿ ಕಡ್ಡಾಯ ಗ್ರಾಮೀಣ ಸೇವೆಯ ಪ್ರಸ್ತಾಪವೇ ಇರಲಿಲ್ಲ. ಆದರೂ, ಅವರಿಂದ ಬಾಂಡ್ ಗಳನ್ನು ಬರೆಸಿಕೊಳ್ಳಲಾಗಿದೆ.

ಇದೀಗ ಅವರಿಗೆ ಗ್ರಾಮೀಣ ಸೇವೆಗೆ ಒತ್ತಡ ಹೇರಲಾಗುತ್ತಿದೆ. ಇದು ಕಾನೂನುಬಾಹಿರ ಕ್ರಮ. ಆದರಿಂದ, ಆ ಅಂಶಗಳು ವಿದ್ಯಾರ್ಥಿಗಳಿಗೆ ಅನುಭವಿಸಬಾರದು ಎಂದು ಅವರು ಕೋರಿದ್ದಾರೆ.

ಹೈಕೋರ್ಟ್ 2021ರ ಮಾರ್ಚ್ 30ರಂದು ಡಾ. ಸಾಧ್ವಿನಿ ಮತ್ತಿತರರ ಪ್ರಕರಣದಲ್ಲಿ 2016-17 ನೇ ಸಾಲಿನ ವಿದ್ಯಾರ್ಥಿಗಳಿಗೆ ಗ್ರಾಮೀಣ ಕಡ್ಡಾಯ ಸೇವೆ ಒತ್ತಡ ಹೇರುವಂತಿಲ್ಲ. ಆ ಕುರಿತ ನಿಯಮಗಳನ್ನು ಜಾರಿಗೊಳಿಸುವಂತೆ ಇಲ್ಲ ಎಂದು ಆದೇಶಿಸಿದೆ. ಅದೇ ಆದೇಶವನ್ನು ಈ ಪ್ರಕರಣದಲ್ಲಿ ನೀಡಬೇಕು ಎಂದು ಕೋರಲಾಗಿದೆ. ಇಷ್ಟಲ್ಲದೆ, ಎಲ್ಲರೂ ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಖಾಸಗಿ, ಎನ್ಆರ್ ಐ, ಮ್ಯಾನೇಜ್ಮೆಂಟ್ ಕೋಟಾದಡಿ ಸೀಟು ಗಳನ್ನು ಪಡೆದುಕೊಂಡು ಕೋರ್ಸ್ ಪೂರ್ಣಗೊಳಿಸಿದ್ದಾರೆ. ಅವರಿಗೆ ಸರ್ಕಾರದ ನಿಯಮ ಅನ್ವಯಿಸಬಾರದು ಎಂದು ಅರ್ಜಿದಾರರು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ರೈಲು ಹಳಿತಪ್ಪಿ ಭೀಕರ ಅಪಘಾತ

0

ಗುವಾಹಟಿ- ಬಿಕಾನೇರ್ ಎಕ್ಸ್ ಪ್ರೆಸ್ ರೈಲಿನ 12 ಭೋಗಿಗಳು ಪಶ್ಚಿಮ ಬಂಗಾಳದ ಜಲಪೈಗುರಿ ಜಿಲ್ಲೆಯಲ್ಲಿ ಗುರುವಾರ ಸಂಜೆ ವೇಳೆಯಲ್ಲಿ ಹಳಿ ತಪ್ಪಿ ರೈಲು ಉರುಳಿಬಿದ್ದಿದೆ.

ಈ ಅಪಘಾತದಲ್ಲಿ ಐದು ಮಂದಿ ಮೃತಪಟ್ಟಿದ್ದಾರೆ. 60ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಇವರಲ್ಲಿ 15 ಜನರ ಸ್ಥಿತಿ ಗಂಭೀರವಾಗಿದೆ.

ದಾಮೋಹನಿ ಮತ್ತು ನ್ಯೂ ಮೇನ್ ಗೋರಿ ಬಳಿ ನಿಲ್ದಾಣಗಳ ನಡುವೆ ಸಂಜೆ ಸುಮಾರು 4.53ಕ್ಕೆ ಈ ಅವಘಡ ಸಂಭವಿಸಿದೆ. ಹಳಿಗಳಲ್ಲಿದ್ದ ಬಿರುಕುಗಳು ಅನಾಹುತಕ್ಕೆ ಕಾರಣವಾಗಿರಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉನ್ನತ ತನಿಖೆಗೆ ರೈಲ್ವೇ ಇಲಾಖೆ ಆದೇಶಿಸಿದೆ. ಮಾನ್ಯ ಪ್ರಧಾನಿ ನರೇಂದ್ರ ಮೋದಿ ಅವರು ರೈಲ್ವೆ ಸಚಿವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದಾರೆ. ರಕ್ಷಣಾ ಕಾರ್ಯದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಲಾಕ್ ಡೌನ್: ಜನಜೀವನ ಪರಿಸ್ಥಿತಿ ಅವಲಂಬಿಸಿದೆ

0

ಬೆಂಗಳೂರು, ಕೊರೋನಾ ಮೂರನೇ ಅಲೆಯ ಹಾಟ್ ಸ್ಪಾಟ್ ಆಗಿದೆ. ರಾಜ್ಯದಲ್ಲಿ ಶೇ. 75ರಷ್ಟು ಪ್ರಕರಣಗಳು ಬೆಂಗಳೂರಿನಲ್ಲಿಯೇ ದಾಖಲಾಗಿದೆ. ಏಕೆಂದರೆ, ಬೆಂಗಳೂರಿನಲ್ಲಿ ಲಾಕ್ಡೌನ್ ಮಾಡಿದರೆ, ಇಲ್ಲಿಂದ ಮಹಾ ವಲಸೆ ಆರಂಭವಾಗುತ್ತದೆ. ಈ ಕಾರಣದಿಂದ ಬೆಂಗಳೂರಿನಲ್ಲಿ ಲಾಕ್ಡೌನ್ ಮಾಡಿದರೆ ಇಡೀ ರಾಜ್ಯಕ್ಕೆ ಅಪಾಯ ಎದುರಾಗುತ್ತದೆ.

” ನಮ್ಮ ಸರ್ಕಾರ ಲಾಕ್ಡೌನ್ ವಿರುದ್ಧವಾಗಿದೆ. ಲಾಕ್ಡೌನ್ ಮಾಡುವುದು, ಬಿಡುವುದು ಜನರ ಹೊಣೆಗಾರಿಕೆಯನ್ನು ಆಧರಿಸಿದೆ” ಎಂದು ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಈ ಹಿಂದೆ ಮೊದಲ ಹಾಗೂ ಎರಡನೇ ಅಲೆ ಸಂದರ್ಭದಲ್ಲಿ ಮೊದಲು ಬೆಂಗಳೂರಿನಲ್ಲಿ ಮಾತ್ರ ಸೋಂಕು ಪ್ರಕರಣಗಳು ಹೆಚ್ಚು ಕಂಡುಬರುತ್ತಿತ್ತು. ಇತರೆ ಜಿಲ್ಲೆಗಳಲ್ಲಿ ಕೊರೋನಾ ಸಂಖ್ಯೆ ಎರಡಂಕಿಗಿಂತ ಕಡಿಮೆ ಇತ್ತು.

ಆದರೆ, ಬೆಂಗಳೂರಿನಲ್ಲಿ ಲಾಕ್ ಡೌನ್ ಘೋಷಣೆ ಆದ ತಕ್ಷಣ, ಇಲ್ಲಿಯ ಲಕ್ಷಾಂತರ ಜನ ಕುಟುಂಬ ಸಮೇತ ತಮ್ಮ ಸ್ವಂತ ಊರಿಗೆ ದೌಡಾಯಿಸಿದರು. ಅವರಿಂದಾಗಿಯೇ ರಾಜ್ಯದ ಮೂಲೆ ಮೂಲೆಗಳಲ್ಲಿ ಕೋರೋನಾ ಎಲ್ಲೆಡೆ ವ್ಯಾಪಿಸಿತು. ರಾಜ್ಯದಲ್ಲಿ ಅಪಾರ ಸಾವು ಕಾಣಬೇಕಾಯಿತು.

ಆದ್ದರಿಂದ ಮೊದಲ ಹಾಗೂ ಎರಡನೇ ಅಲೆಗಳ ಲಾಕ್ಡೌನ್ ದುಷ್ಪರಿಣಾಮದ ಪಾಠ ಕಲಿತು ರಾಜ್ಯ ಸರ್ಕಾರ ಈ ಬಾರಿ ರಾಜ್ಯದಲ್ಲಿ ಲಾಕ್ಡೌನ್ ಮಾಡಬಾರದು ಎಂಬ ಸಲಹೆ ಕೇಳಿ ಬರುತ್ತಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಮನುಷ್ಯಪರ ನಿಲುವುಗಳನ್ನು ವಿವೇಕಾನಂದರು ಪ್ರತಿಪಾದಿಸಿದ್ದರು

0

ಹಿಂದೂ ಧರ್ಮದ ಸಹಿಷ್ಣುತೆಯ ಗುಣ, ಮನುಷ್ಯ ಪರ ನಿಲುವುಗಳನ್ನು ಜಗತ್ತಿಗೆ ತಿಳಿಸಿ ಕೊಡುವುದರ ಜೊತೆಗೆ ಹಿಂದೂ ಧರ್ಮ ಹೇಗೆ ಸರ್ವಧರ್ಮಗಳ ತಳಹದಿ ಯಾಗಬಲ್ಲರು ಎಂದು ಚಿಕಾಗೋ ಸರ್ವಧರ್ಮ ಸಮ್ಮೇಳನದಲ್ಲಿ ವಿವೇಕಾನಂದರು ಪ್ರತಿಪಾದಿಸಿದ್ದರು ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಪಿ. ವೀರಭದ್ರಪ್ಪನವರು ತಿಳಿಸಿದರು.
ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ಸ್ವಾಮಿ ವಿವೇಕಾನಂದರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಭಾರತೀಯ ಸಂಸ್ಕೃತಿಯನ್ನು ಹತ್ತು ಹಲವು ಹುಳುಕುಗಳಿದ್ದರೂ ಭಾರತೀಯ ಪರಂಪರೆಯ ಅತ್ಯುತ್ತಮ ಅಂಶಗಳನ್ನು ಜಗತ್ತಿಗೆ ಪರಿಚಯಿಸಿದ ಕೀರ್ತಿ ಸ್ವಾಮಿ ವಿವೇಕಾನಂದರಿಗೆ ಸಲ್ಲುತ್ತದೆ ಎಂದರು.
ಕುಲಸಚಿವರಾದ ಜಿ. ಅನುರಾಧ ಅವರು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಯುವಜನತೆ ದುಶ್ಚಟಗಳಿಗೆ ಬಲಿಯಾಗುತ್ತಿರುವುದು ವಿಷಾದನೀಯ. ಯುವಜನತೆ ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ರೂಡಿಸಿಕೊಂಡು ದೇಶದ ಅಭಿವೃದ್ಧಿಯಲ್ಲಿ ಕೈಜೋಡಿಸಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ವಿವಿಯ ಹಣಕಾಸು ಅಧಿಕಾರಿ ಎಸ್. ರಾಮಕೃಷ್ಣ, ಉಪ ಕುಲಸಚಿವ ಡಾ.ಶ್ರೀಶೈಲ ಮತ್ತು ಇನ್ನಿತರರು ಉಪಸ್ಥಿತರಿದ್ದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ವಿಜ್ಞಾನಿ ಎಸ್. ಸೋಮನಾಥ್ ಇಸ್ರೋ ನೂತನ ಮುಖ್ಯಸ್ಥ

0

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಗೆ ಹೊಸ ಮುಖ್ಯಸ್ಥರನ್ನು ನೇಮಿಸಿ ಕೇಂದ್ರ ಸರ್ಕಾರವು ಆದೇಶ ಹೊರಡಿಸಿದೆ.
ಕೇರಳ ಮೂಲದ ಖ್ಯಾತ ರಾಕೆಟ್ ವಿಜ್ಞಾನಿ ಎಸ್. ಸೋಮನಾಥ್ ಅವರು ಇಸ್ರೋದ ಸಾರಥ್ಯ ವಹಿಸಲಿದ್ದಾರೆ.
ಸೋಮನಾಥ್ ಅವರು ಕೊಲ್ಲಂ ಟಿಕೆಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಪದವಿ ಪಡೆದ ಬಳಿಕ ಬೆಂಗಳೂರಿನ ಐಐಎಸ್ಸಿ ಯಲ್ಲಿ ಏರೋಸ್ಪೇಸ್ ಇಂಜಿನಿಯರಿಂಗ್ ನಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಅವರು ಚಿನ್ನದ ಪದಕ ವಿಜೇತರು ಎನ್ನುವುದು ಗಮನಾರ್ಹ. 1985ರಲ್ಲಿ ವಿಕ್ರಂ ಸಾರಾಭಾಯಿ ಸ್ಪೇಸ್ ಸೆಂಟರ್ ಗೆ ಆಯ್ಕೆಯಾದರು.ಪಿಎಸ್ಎಲ್ ವಿ ನಿರ್ಮಾಣದಲ್ಲಿ ಆಸಕ್ತಿ ವಹಿಸಿ, ಅಪಾರ ಕೊಡುಗೆ ನೀಡಿದ್ದಾರೆ.
ಚಂದ್ರಯಾನ-2 ಯೋಜನೆಯಲ್ಲಿ ಜಿಎಸ್ಎಲ್ ವಿ ಎಂಕೆ-3 ಲಾಂಚರ್ ನಿರ್ಮಾಣದಲ್ಲಿ ಮಹತ್ವದ ಕೊಡುಗೆಯನ್ನು ಸೋಮನಾಥ ಅವರು ನೀಡಿದ್ದಾರೆ. ಇಸ್ರೋ ಸಾರಥ್ಯದ ಜೊತೆಗೆ ಇಲಾಖೆ ಬಾಹ್ಯಾಕಾಶ ಇಲಾಖೆ ಕಾರ್ಯದರ್ಶಿ ಮತ್ತು ಬಾಹ್ಯಾಕಾಶ ಆಯೋಗದ ಮುಖ್ಯಸ್ಥರ ಹುದ್ದೆಯನ್ನು ಕೂಡ ಸೋಮನಾಥ್ ಮುಂದಿನ ಮೂರು ವರ್ಷಗಳವರೆಗೆ ನಿಭಾಯಿಸಲಿದ್ದಾರೆ. ಈ ಮಹತ್ವದ ಹುದ್ದೆಗಳ ಅಲಂಕರಿಸಿದ 10ನೇ ವಿಜ್ಞಾನಿ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ. ಸದ್ಯ ಇಸ್ರೋ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿರುವ ಕೆ.ಶಿವನ್ ಅವರು ಶುಕ್ರವಾರಕ್ಕೆ ತಮ್ಮ ಕಾರ್ಯಾವಧಿ ಪೂರ್ಣಗೊಳಿಸಲಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಕೋವಿಡ್ ನಿಗ್ರಹ: ಯುವಜನರ ನಡೆ ಬಗ್ಗೆ ಪ್ರಧಾನಿ ಮೆಚ್ಚುಗೆ

0

ಲಸಿಕೆ ಅಭಿಯಾನದ ಅಡಿಯಲ್ಲಿ 2 ಕೋಟಿಗೂ ಅಧಿಕ ಮಕ್ಕಳಿಗೆ ಲಸಿಕೆ ನೀಡಲಾಗಿರುವುದು ಹಾಗೂ ಈ ನಿಟ್ಟಿನಲ್ಲಿ ದೇಶದ ಯುವ ಸಮುದಾಯದ ತೋರಿಸುತ್ತಿರುವ ಜವಾಬ್ದಾರಿಯುತ ವರ್ತನೆಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ರಾಷ್ಟ್ರೀಯ ಯುವ ಉತ್ಸವದ 25ನೇ ಆವೃತ್ತಿಯನ್ನು ವರ್ಚುವಲ್ ಆಗಿ ಉದ್ಘಾಟಿಸಿ ಮಾತನಾಡಿದ ಅವರು,15-18 ವರ್ಷದ ಮಕ್ಕಳು ಲಸಿಕೆ ಪಡೆಯಲು ತೋರಿಸುತ್ತಿರುವ ಉತ್ಸಾಹದಿಂದ ಸಂತೋಷವಾಗಿದೆ. ಯುವ ಸಮುದಾಯವು ಕೊರೊನಾ ನಿಗ್ರಹಕ್ಕಾಗಿ ಲಸಿಕೆ ಪಡೆಯಲು ತೋರುತ್ತಿರುವ ಜವಾಬ್ದಾರಿಯುತ ನಡೆ ಮೆಚ್ಚುವಂತದ್ದು ಎಂದರು.
ಸ್ವಾಮಿ ವಿವೇಕಾನಂದರಂತೆ ಭಗತ್ ಸಿಂಗ್, ಚಂದ್ರಶೇಖರ್ ಆಜಾದ್, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು ಈ ದೇಶದ ಯುವಕರ ಆದರ್ಶ ವ್ಯಕ್ತಿಗಳು. ಭವಿಷ್ಯದ ಬಗ್ಗೆ ದೇಶದ ಯುವಕರಿಗೆ ಸ್ಪಷ್ಟತೆಯಿದೆ. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಮೈಗೂಡಿಸಿಕೊಂಡಿದ್ದಾರೆ ಎಂದು ಮೋದಿ ಮೆಚ್ಚುಗೆ ಸೂಚಿಸಿದ್ದಾರೆ.
ಕೇಂದ್ರವು ಹೆಣ್ಣು ಮಕ್ಕಳ ವಿವಾಹದ ಕನಿಷ್ಠ ವಯಸ್ಸನ್ನು 21 ವರ್ಷಕ್ಕೆ ಹೆಚ್ಚಿಸಲು ಮುಂದಾಗಿರುವುದು ಅವರ ವೃತ್ತಿಜೀವನ ಪ್ರೋತ್ಸಾಹಕ್ಕೆ ಪೂರಕವಾಗಿದೆ. ನಮ್ಮ ಪಾಲಿಗೆ ಗಂಡುಮಕ್ಕಳು ಮತ್ತು ಹೆಣ್ಣುಮಕ್ಕಳು ಸಮಾನರು. ತಮ್ಮ ಜೀವನ ಗುರಿ ಸಾಧಿಸಲು ಹೆಣ್ಣು ಮಕ್ಕಳಿಗೂ ಸಾಕಷ್ಟು ಕಾಲಾವಕಾಶ ಸಿಗಬೇಕು. ವಿವಾಹದ ಜವಾಬ್ದಾರಿಯಲ್ಲಿ ಸಿಗಬಾರದು ಎಂಬ ಕಾಳಜಿಯನ್ನು ಸರ್ಕಾರ ಹೊಂದಿದೆ ಎಂದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಒಂದು ಕೋವಿಡ್ ಸೋಂಕಿದ್ದರೂ ಇಡೀ ಶಾಲೆಯ ಮಕ್ಕಳ ತಪಾಸಣೆ

0

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ರಾಜ್ಯದ ಯಾವುದೇ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಒಂದೇ ಒಂದು ಕೋವಿಡ್ ಸೋಂಕು ಪತ್ತೆಯಾದರೇ, ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳನ್ನು ಪರೀಕ್ಷೆಗೆ ಒಳಪಡಿಸಬೇಕು ಎಂದು ಆದೇಶಿಸಿದ್ದಾರೆ.

ಬೆಂಗಳೂರಿನ ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳ ಜೊತೆ ಸಚಿವರು ಸಭೆ ನಡೆಸಿದರು.

“ಕೋವಿಡ್ ಸೋಂಕು ಕಂಡು ಬಂದ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಸೂಕ್ತ ಚಿಕಿತ್ಸೆ ಲಭ್ಯವಾಗುವಂತೆ ನೋಡಿಕೊಳ್ಳಬೇಕು. ಭೌತಿಕ ತರಗತಿಗಳನ್ನು ಸ್ಥಗಿತಗೊಳಿಸಿ, ಶಾಲೆಯನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಬೇಕು. ಕೋವಿಡ್ ಸುರಕ್ಷಿತ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು” ಎಂದು ಸಭೆಯಲ್ಲಿ ಸಚಿವರು ಸೂಚಿಸಿದರು.

ಬೆಂಗಳೂರು ನಗರ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಜನವರಿ 31ರವರೆಗೆ 1 ರಿಂದ 9ನೇ ತರಗತಿಗಳ ಭೌತಿಕ ತರಗತಿಗಳನ್ನು ಬೆಂಗಳೂರು ನಗರ ಜಿಲ್ಲೆಯಲ್ಲಿ ಮಾತ್ರ ಸ್ಥಗಿತಗೊಳಿಸಲಾಗಿದೆ ಉಳಿದಂತೆ ವಿದ್ಯಾರ್ಥಿಗಳಿಗೆ ಆನ್ಲೈನ್ ಹಾಗೂ ಪರ್ಯಾಯ ಬೋಧನೆ ಮುಂದುವರಿಯಲಿದೆ ಎಂದು ಸಚಿವರು ತಿಳಿಸಿದ್ದಾರೆ.

“ಶಾಲೆಗಳಲ್ಲಿ ಭೌತಿಕ ತರಗತಿಗಳು ನಡೆಯದೇ ಈಗಾಗಲೇ ಮಕ್ಕಳು ಶೈಕ್ಷಣಿಕವಾಗಿ ಸಾಕಷ್ಟು ಹಿನ್ನಡೆ ಅನುಭವಿಸಿದ್ದಾರೆ. ಆನ್ಲೈನ್ ತರಗತಿಗಳು ಬೌತಿಕ ತರಗತಿ ಗಳಷ್ಟು ಪರಿಣಾಮಕಾರಿಯಲ್ಲ ಎಂಬುದು ಸಾಬೀತಾಗಿದೆ. ಗ್ರಾಮಾಂತರ ಪ್ರದೇಶಗಳ ಮಕ್ಕಳು ಹೆಚ್ಚಿನ ಪ್ರಮಾಣದಲ್ಲಿ ಓದು ಬರಹದಲ್ಲಿ ಹಿಂದುಳಿದಿದ್ದಾರೆ. ಆದ್ದರಿಂದ ಬೌದ್ಧಿಕ ತರಗತಿಗಳನ್ನು ನಿಲ್ಲಿಸುವ ಆತುರದ ನಿರ್ಧಾರ ತೆಗೆದುಕೊಳ್ಳುವುದು ಬೇಡ” ಎಂದು ಅಧಿಕಾರಿಗಳಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಹೇಳಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಎಲ್ಲಾ ಬಿಕ್ಕಟ್ಟುಗಳಿಂದ ಪಾಕಿಸ್ತಾನ್ ಉಳಿಸಿರುವೆ- ಇಮ್ರಾನ್ ಖಾನ್

0

ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರು 1 ಶತಕೋಟಿ ಮೊತ್ತದ ಬೇಲ್‌ಔಟ್ ಪ್ಯಾಕೇಜ್‌ಗೆ ಅಂತರರಾಷ್ಟ್ರೀಯ ಹಣಕಾಸು ನಿಧಿಯ ಅಗತ್ಯತೆಗಳನ್ನು ಪೂರೈಸಲು ವಿವಾದಾತ್ಮಕ ಕಾನೂನನ್ನು ಅಂಗೀಕರಿಸುವ ಸವಾಲನ್ನು ಎದುರಿಸುತ್ತಿದ್ದಾರೆ. ತಮ್ಮ ಸರ್ಕಾರದ ಅಡಿಯಲ್ಲಿ ದೇಶದ ಆರ್ಥಿಕ ಸ್ಥಿತಿ ಬೇರೆ ದೇಶಗಳಿಗೆ ಹೋಲಿಸಿದರೆ ಉತ್ತಮವಾಗಿದೆ ಎಂದು ಹೇಳಿದ್ದಾರೆ.
ಪ್ರಪಂಚಕ್ಕೆ ಹೋಲಿಸಿದರೆ ಪಾಕಿಸ್ತಾನ ಇನ್ನೂ ಅಗ್ಗದ ದೇಶಗಳಲ್ಲಿ ಒಂದಾಗಿದೆ. ಅವರು ನಮ್ಮನ್ನು ಅಸಮರ್ಥರು ಎಂದು ಕರೆಯುತ್ತಾರೆ, ಆದರೆ ನಮ್ಮ ಸರ್ಕಾರವು ಎಲ್ಲಾ ಬಿಕ್ಕಟ್ಟುಗಳಿಂದ ರಾಷ್ಟ್ರವನ್ನು ಉಳಿಸಿದೆ ಎಂಬುದು ಸತ್ಯ ಎಂದಿದ್ದಾರೆ. ಇಸ್ಲಾಮಾಬಾದ್‌ನಲ್ಲಿ ರಾವಲ್ಪಿಂಡಿ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರಿ ಆಯೋಜಿಸಿದ್ದ ಲಿವಿಂಗ್ ಇಂಟರ್‌ನ್ಯಾಶನಲ್ ಚೇಂಬರ್ ಶೃಂಗಸಭೆ 2022 ರ ಉದ್ಘಾಟನಾ ಸಮಾರಂಭವನ್ನು ಉದ್ದೇಶಿಸಿ ಅವರು ಮಾತನಾಡಿದರು.
ಬೇರೆ ದೇಶಗಳಿಗೆ ಹೋಲಿಸಿದರೆ ನಮ್ಮ ದೇಶದಲ್ಲಿ ತೈಲ ಬೆಲೆಗಳು ಇತರ ದೇಶಗಳಿಗಿಂತ ಕಡಿಮೆಯಾಗಿದೆ ಎಂದು ಹೇಳಿದರು. ವಿವಾದಾತ್ಮಕ ಹಣಕಾಸು ಮಸೂದೆಯು ಸ್ಟೇಟ್ ಬ್ಯಾಂಕ್ ಆಫ್ ಪಾಕಿಸ್ತಾನದ ಸ್ವಾಯತ್ತತೆಯನ್ನು ಒಳಗೊಂಡಿತ್ತು. ಈ ವಿಷಯವನ್ನು ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಚರ್ಚೆಗೆ ತೆಗೆದುಕೊಳ್ಳುತ್ತಿದ್ದಂತೆ, ವಿರೋಧ ಪಕ್ಷದ ನಾಯಕ ಮತ್ತು ಪಿಎಂಎಲ್-ಎನ್ ಅಧ್ಯಕ್ಷ ಶೆಹಬಾಜ್ ಷರೀಫ್ ಅವರು, ದೇಶವು ಒಂದು ಕಡೆ ಅಣುಶಕ್ತಿಯಾಗಲು ಮತ್ತು ಇನ್ನೊಂದು ಕಡೆ ಭಿಕ್ಷಾಟನೆಯ ಬಟ್ಟಲು ಹಿಡಿಯಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು. ಆಡಳಿತಾರೂಢ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ ದೇಶದ ಆರ್ಥಿಕತೆಯನ್ನು ಮುಳುಗಿಸಿದೆ ಎಂದು ಷರೀಫ್ ಹೇಳಿದರು. ವಿವಾದಾತ್ಮಕ ಹಣಕಾಸು ಮಸೂದೆಯನ್ನು ಹಿಂಪಡೆಯುವಂತೆ ಅವರು ಸರ್ಕಾರಕ್ಕೆ ಕರೆ ನೀಡಿದರು.