Saturday, February 14, 2026
Saturday, February 14, 2026
Home Blog Page 1764

ನೂತನ ಶಿಕ್ಷಣ ನೀತಿ: ವಿವಿಗಳ ಸ್ವಾಯತ್ತತೆ ಬಗ್ಗೆ ಸಚಿವರ ಚರ್ಚೆ

0

ನೂತನ ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಗುಣವಾಗಿ ವಿಶ್ವವಿದ್ಯಾಲಯಗಳು ಸಾಧಿಸಬೇಕಾದ ಮತ್ತಷ್ಟು ಸ್ವಾಯತ್ತತೆ, ಗಳಿಸಿಕೊಳ್ಳಬೇಕಾದ ಆರ್ಥಿಕ ಸ್ವಾವಲಂಬನೆ ಮತ್ತು ನೇಮಕಾತಿಯಲ್ಲಿ ಕಾಯ್ದುಕೊಳ್ಳಬೇಕಾದ ಪಾರದರ್ಶಕತೆ ಕುರಿತು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಮಂಗಳವಾರ ಇಲ್ಲಿ ಹಲವು ವಿ.ವಿ.ಗಳ ಕುಲಪತಿಗಳು ಮತ್ತು ತಜ್ಞರೊಂದಿಗೆ ವಿಚಾರ ವಿನಿಮಯ ನಡೆಸಿದರು.

ಎನ್ಇಪಿ ಮಾನದಂಡಗಳಿಗೆ ಅನುಸಾರವಾಗಿ ವಿ.ವಿ.ಗಳಲ್ಲಿ ಆಗಬೇಕಾದ ಸುಧಾರಣೆ ಮತ್ತು ನೇಮಕಾತಿ ವಿಧಿವಿಧಾನ ಕುರಿತು ಸರಕಾರ ರಚಿಸಿರುವ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಪಾಶ್ಚಾತ್ಯ ದೇಶಗಳ ವಿ.ವಿ,ಗಳಲ್ಲಿರುವ ಬೋಧನಾ ವ್ಯವಸ್ಥೆ, ಸಿಬ್ಬಂದಿ ಬಲ, ಕೋರ್ಸುಗಳ ಸ್ವರೂಪ, ಸರಕಾರ ಕೊಡಬೇಕಾದ ಅನುದಾನದ ಪ್ರಮಾಣ ಎಷ್ಟಿರಬೇಕು ಎನ್ನುವಂತಹ ಮಹತ್ತ್ವದ ವಿಚಾರಗಳನ್ನು ಕುರಿತು ಚರ್ಚಿಸಿದರು.

ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷರು ಮತ್ತು ಹಲವು ಕುಲಪತಿಗಳೊಂದಿಗೆ ಸಂವಾದ ನಡೆಸಿದ ಸಚಿವರು, ವಿಶ್ವವಿದ್ಯಾಲಯಗಳು ಸ್ವಾವಲಂಬಿ ಸಂಸ್ಥೆಗಳಾಗಿ ಬೆಳೆಯಬೇಕಾದ್ದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಸಮಿತಿಯು ನೀಡಿರುವ ಕೆಲವು ಸಲಹೆ ಮತ್ತು ಶಿಫಾರಸುಗಳು ಅರ್ಥಪೂರ್ಣವಾಗಿವೆ. ಈ ನಿಟ್ಟಿನಲ್ಲಿ ಇನ್ನಷ್ಟು ಸ್ಪಷ್ಟತೆ ಬೇಕಾಗಿದ್ದು, ಮುಂದಿನ ಸಭೆಯೊಳಗೆ ಇದಕ್ಕೆ ಅಂತಿಮ ರೂಪುರೇಷೆ ನೀಡಬೇಕು’ ಎಂದು ಸೂಚಿಸಿದರು.

ವಿ.ವಿ.ಗಳಲ್ಲಿ ಸ್ವಾಯತ್ತತೆ ಮತ್ತು ಸ್ವಾವಲಂಬನೆ ಎರಡೂ ಬರಬೇಕು. ಆದ್ದರಿಂದ ಕನಿಷ್ಠ ಮೂರನೇ ಒಂದು ಭಾಗದಷ್ಟು ಆರ್ಥಿಕ ಖರ್ಚುವೆಚ್ಚಗಳನ್ನಾದರೂ ಈ ಸಂಸ್ಥೆಗಳು ಉದ್ದಿಮೆಗಳೊಂದಿಗೆ ಸಹಭಾಗಿತ್ವ ಹೊಂದುವ ಮೂಲಕ ತಾವೇ ಭರಿಸುವಂತಾಗಬೇಕು ಎನ್ನುವ ಸಲಹೆಯನ್ನು ಅವರು ನೀಡಿದರು.

ಪಾಶ್ಚಾತ್ಯ ವಿ.ವಿ.ಗಳಲ್ಲಿ ನಮ್ಮಲ್ಲಿರುವಷ್ಟು ಬೋಧನಾ ಸಿಬ್ಬಂದಿಯೇ ಇಲ್ಲ. ನಮ್ಮಲ್ಲಿರುವ ಬೋಧನಾ ಕ್ರಮಕ್ಕೆ ಈಗಿರುವ ಬೋಧಕ ವರ್ಗದಲ್ಲಿ ಮೂರನೇ ಎರಡರಷ್ಟು ಮಂದಿಯೇ ಸಾಕು. ಉಳಿದ ಇನ್ನೊಂದು ಭಾಗದ ಕಾರ್ಯಭಾರವನ್ನು ಸಂಶೋಧನಾ ವಿದ್ಯಾರ್ಥಿಗಳ ನೆರವಿನಿಂದ ಪೂರೈಸಬಹುದು. ಇದರ ಜೊತೆಗೆ ವಾಣಿಜ್ಯ ಮತ್ತು ಕೈಗಾರಿಕಾ ವಲಯದ ವಿಷಯತಜ್ಞರನ್ನು ಸಂದರ್ಶಕ ಮತ್ತು ಗೌರವ ಬೋಧಕರನ್ನಾಗಿ ಪರಿಗಣಿಸಿ, ಅವರ ಸೇವೆಯನ್ನು ಪಡೆಯುವ ವ್ಯವಸ್ಥೆಯನ್ನು ತರುವ ಸಾಧ್ಯತೆಗಳ ಬಗ್ಗೆ ಯೋಚಿಸಬಹುದು ಎಂದು ಅವರು ಹೇಳಿದರು.

ಎನ್ಇಪಿ ಪ್ರಕಾರ ವಿಶ್ವವಿದ್ಯಾಲಯಗಳು ಬೋಧನಾ ಸಿಬ್ಬಂದಿಯ ನೇಮಕಾತಿ ವಿಧಾನವನ್ನು ಆಮೂಲಾಗ್ರವಾಗಿ ಬದಲಿಸಿಕೊಳ್ಳಬೇಕಿದೆ; ಇದರ ಜತೆಯಲ್ಲೇ ಪದವಿ ಮತ್ತು ಸ್ನಾತಕೋತ್ತರ ಹಂತದಲ್ಲಿ ಹಾಗೂ ಸಂಶೋಧನೆಯಲ್ಲಿ ಅತ್ಯುನ್ನತ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕಾಗಿದೆ ಎಂದು ಸಚಿವರು ಗಮನ ಸೆಳೆದರು.

ಈಗಿರುವ ವಿ.ವಿ.ಗಳಲ್ಲಿ ಸರಕಾರದ ಅನುದಾನವು ಪೋಲಾಗುತ್ತಿದೆ. ವಿ.ವಿ.ಗಳನ್ನು ಸಾರ್ವಜನಿಕ ಮತ್ತು ಖಾಸಗಿ ವಲಯಗಳ ಪಾಲುದಾರಿಕೆ ಮಾದರಿಯಲ್ಲಿ (ಪಿಪಿಪಿ) ನಿರ್ವಹಣೆ ಮಾಡುವ ಬಗ್ಗೆ ಗಂಭೀರವಾಗಿ ಆಲೋಚಿಸಬೇಕು. ಉದ್ದಿಮೆಗಳ ಸಿಎಸ್ಆರ್ ನಿಧಿ ಮತ್ತು ಹಿರಿಯ ವಿದ್ಯಾರ್ಥಿ ಸಂಘಗಳ ಮೂಲಕ ವಿ.ವಿ.ಗಳನ್ನು ಅಭಿವೃದ್ಧಿ ಪಡಿಸಬೇಕು. ಸಹಾಯಕರ ಪ್ರಾಧ್ಯಾಪಕರ ನೇಮಕಾತಿಗೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಸಾಮಾನ್ಯ ಅರ್ಹತಾ ಪರೀಕ್ಷೆ ನಡೆಸಿ, ಮೆರಿಟ್ ಆಧಾರದ ಮೇಲೆ ನೇಮಕ ಪ್ರಕ್ರಿಯೆ ನಡೆಸಲಾಗುವುದು ಎಂದು ಅವರು ನುಡಿದರು.

ಸಭೆಯಲ್ಲಿ ಉನ್ನತ ಶಿಕ್ಷಣ ಪರಿಷತ್ತಿನ ಅಧ್ಯಕ್ಷ ಪ್ರೊ. ಬಿ.ತಿಮ್ಮೇಗೌಡ, ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತ ಪಿ.ಪ್ರದೀಪ್, ಮೈಸೂರು ವಿವಿ ಕುಲಪತಿ ಪ್ರೊ.ಹೇಮಂತಕುಮಾರ್, ಶ್ರೀ ಕೃಷ್ಣದೇವರಾಯ ವಿವಿ ಕುಲಪತಿ ಪ್ರೊ.ಸಿದ್ದು ಆಲೂರು, ರಾಣಿ ಚೆನ್ನಮ್ಮ ವಿವಿ ಕುಲಪತಿ ಪ್ರೊ.ರಾಮಚಂದ್ರಗೌಡ, ವಿಟಿಯು ಕುಲಪತಿ ಪ್ರೊ.ಕರಿಸಿದ್ದಪ್ಪ ಅವರಿದ್ದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ವಿಶ್ವಕ್ಕೇ ಭಾರತೀಯ ಸಂಸ್ಕೃತಿ ಹಿರಿಮೆ ಸಾರಿದ ವಿವೇಕಾನಂದರು

0

ಜಾತಿ, ಧರ್ಮಗಳ ಬೇಧ-ಭಾವವಿಲ್ಲದೆ ಸರ್ವರನ್ನು ಅಪ್ಪಿಕೊಂಡು ವಿಶ್ವವನ್ನು ಆಯಸ್ಕಾಂತದಂತೆ ತನ್ನತ್ತ ಸೆಳೆದು ಇಡೀ ವಿಶ್ವಕ್ಕೆ ಸಹೋದರತೆಯ ಸಂದೇಶ ಸಾರಿದ, ಭಾರತದ ಶ್ರೀಮಂತ ಸಂಸ್ಕೃತಿಯನ್ನು ಜಗತ್ತಿಗೆ ಪರಿಚಯಿಸಿ, ದೇಶದ ಗೌರವ ಹೆಚ್ಚಿಸಿದ ಮಹನೀಯ ಸ್ವಾಮಿ ವಿವೇಕಾನಂದರು ಎಂದು ರಾಜ್ಯ ಗ್ರಾಮೀಣಾಭಿವೃದ್ಧಿ, ಪಂಚಾಯತ್‌ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೇಳಿದರು.
ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಷ್ಟ್ರೀಯ ಸೇವಾ ಯೋಜನೆ ಹಾಗೂ ನೆಹರೂ ಯುವ ಕೇಂದ್ರ ಇವರುಗಳ ಸಂಯುಕ್ತಾಶ್ರಯದಲ್ಲಿ ನಗರದ ಕುವೆಂಪು ರಂಗಮಂದಿರದಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಅಂಗವಾಗಿ ಏರ್ಪಡಿಸಲಾಗಿದ್ದ ರಾಷ್ಟ್ರೀಯ ಯುವದಿನ ಹಾಗೂ ಯುವ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಅಂದಿನ ನರೇಂದ್ರ ಮತ್ತು ಇಂದಿನ ನರೇಂದ್ರರು ತಮ್ಮ ಮಾತು ಮತ್ತು ಕೃತಿಗಳಿಂದಾಗಿ ವಿಶ್ವವನ್ನು ಭಾರತದತ್ತ ನೋಡುವಂತೆ ಮಾಡಿ, ವಿಶ್ವವೇ ಭಾರತದತ್ತ ಬೆರಗುಗಣ್ಣಿನಿಂದ ನೋಡುವಂತೆ ಮಾಡಿರುವುದು ಈ ದೇಶದ ಹೆಮ್ಮೆಯ ಸಂಗತಿ ಎಂದವರು ನುಡಿದರು.

ವಿಶ್ವದ ಅನೇಕ ರಾಷ್ಟ್ರಗಳಲ್ಲಿ ಅಲ್ಲಿನ ಜನತೆ ನೆಮ್ಮದಿಯ ಬದುಕಿಗಾಗಿ ಪರಿತಪಿಸುತ್ತಿದ್ದಾರೆ. ಆದರೆ, ಭಾರತದ ಬಗ್ಗೆ ವಿಶ್ವದೆಲ್ಲೆಡೆ ಗೌರವ ಹೆಚ್ಚಿದೆ. ಇಂದಿನ ಪ್ರಧಾನಿಯವರು ಕೋವಿಡ್‌ನಂತಹ ಸಾಂಕ್ರಾಮಿಕ ಸೋಂಕಿನ ಸಂದರ್ಭದಲ್ಲಿ ಅನೇಕ ರಾಷ್ಟ್ರಗಳಿಗೆ ಉಚಿತವಾಗಿ ಲಸಿಕೆಯನ್ನು ನೀಡಿದ್ದಲ್ಲದೇ ಆರ್ಥಿಕವಾಗಿ ಹಿಂದುಳಿದ ಹಾಗೂ ಸಂಕಷ್ಟದಲ್ಲಿದ್ದ ಅನೇಕ ರಾಷ್ಟ್ರಗಳಿಗೆ ಆರ್ಥಿಕ ನೆರವನ್ನು ನೀಡಿ ಮಾನವೀಯತೆ ಮೆರೆದಿದ್ದಾರೆ. ಮಾತ್ರವಲ್ಲ ಅವರು ವಿಶ್ವದ ಜನರ ಕುರಿತು ಆರೋಗ್ಯದ ಕಾಳಜಿಯಿಂದಾಗಿ ಭಾರತೀಯ ಯೋಗವನ್ನು ಜಗತ್ತಿನ ಜನ ಅನುಸರಿಸುವಂತೆ ಮಾಡಿ ಮಾದರಿಯಾಗಿ ಉಳಿದಿದ್ದಾರೆ. ಪ್ರಪಂಚದಲ್ಲಿ ಶಾಂತಿ ನೆಲೆಸಲು ಶಾಂತಿಧೂತರಂತೆ ಹಗಲಿರುಳು ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು.
ವಿಶ್ವದ ಅನ್ಯ ರಾಷ್ಟ್ರಗಳಲ್ಲಿ ಶ್ರೀಮಂತಿಕೆ ಇರಬಹುದು. ಆದರೆ, ಬೇರೆ ಯಾವುದೇ ರಾಷ್ಟ್ರಗಳಲ್ಲಿರದ ಶ್ರೇಷ್ಟ ಜ್ಞಾನಿಗಳನ್ನು ಹೊಂದಿರುವ ಭಾರತದ ಪ್ರತಿನಿಧಿಗಳನ್ನು ಎಲ್ಲಾ ರಾಷ್ಟ್ರಗಳು ಗೌರವಾದರಗಳಿಂದ ಆಹ್ವಾನಿಸಲಾಗುತ್ತಿದೆ. ಇದಕ್ಕೆ ಪ್ರಮುಖ ಕಾರಣವೆಂದರೆ ಇಲ್ಲಿನ ಶಾಂತಿ, ನೆಮ್ಮದಿ ಮತ್ತು ಸಂತೃಪ್ತ ಜೀವನ ವಿಧಾನ ಎಂದರು.
ಭಾರತೀಯ ಸಂಸ್ಕೃತಿ ಮತ್ತು ಇಲ್ಲಿನ ಭವ್ಯ ಪರಂಪರೆಗೆ ಸರಿಸಮಾನವಾದ ದೇಶ ಮತ್ತೊಂದಿಲ್ಲ. ಸೂರ್ಯ-ಚಂದ್ರರಿರುವವರೆಗೆ ಜಗತ್ತಿನ ಜನ ನರೇಂದ್ರರ ಹೆಸರು ಮರೆಯುವುದು ಸಾಧ್ಯವಿಲ್ಲ. ಅದಕ್ಕಾಗಿ ದೇಶದಲ್ಲಿನ ನಾವೇ ಭಾಗ್ಯವಂತರು ಎಂದರು. ಇಲ್ಲಿ ರಾಷ್ಟ್ರದ್ರೋಹಿಗಳಿಗೆ ಸ್ಥಾನ ನೀಡಲಾಗುವುದಿಲ್ಲ ಎಂದರು.
ಕಾರ್ಯಕ್ರಮದಲ್ಲಿ ಚಿಕ್ಕಮಗಳೂರಿನ ಐ.ಡಿ.ಎಸ್.ಜಿ.ಕಾಲೇಜಿನ ಸಹಾಯಕ ಪ್ರಾಧ್ಯಾಪಕ ವಿನೋದಪ್ರಕಾಶ್ ಅವರು ಸ್ವಾಮಿ ವಿವೇಕಾನಂದರ ಜೀವನಾದರ್ಶಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು. ವೇದಿಕೆಯಲ್ಲಿ ವಿಧಾನ ಪರಿಷತ್ ಸದಸ್ಯ ರುದ್ರೇಗೌಡರು, ಮಹಾನಗರಪಾಲಿಕೆ ಮೇಯರ್ ಶ್ರೀಮತಿ ಸುನಿತಾ ಅಣ್ಣಪ್ಪ, ಸೂಡಾ ಅಧ್ಯಕ್ಷ ಜ್ಯೋತಿಪ್ರಕಾಶ್, ಎಸ್.ದತ್ತಾತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಿಪ್ರಸಾದ್, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ನಾಗರಾಜ್‌ಕಾಗಲ್ಕರ್, ನೆಹರೂ ಯುವ ಕೇಂದ್ರದ ಸಮನ್ವಯಾಧಿಕಾರಿ ಕೆ.ಟಿ.ಕೆ.ಉಲ್ಲಾಸ್, ಡಾ.ಪರಿಸರ ನಾಗರಾಜ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಎಂ.ಟಿ.ಮಂಜುನಾಥಸ್ವಾಮಿ ಮುಂತಾದವರು ಉಪಸ್ಥಿತರಿದ್ದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಪರಿಸ್ಥಿತಿ ಮೀರಿದಾಗ ಲಾಕ್ ಡೌನ್- ಆರಗ ಜ್ಞಾನೇಂದ್ರ

0

ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ವಿಕೋಪಕ್ಕೆ ಹೋದರೆ ಕೆಲವು ಕಠಿಣ ನಿರ್ಬಂಧ ಕ್ರಮಗಳನ್ನು ಜಾರಿಗೊಳಿಸಲು ಚಿಂತನೆ ನಡೆಸಬೇಕಾಗುತ್ತದೆ. ಆದರೆ ಲಾಕ್ ಡೌನ್ ಒಂದೇ ಪರಿಹಾರವಲ್ಲ ಎಂದು ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಸೋಂಕು ಹೆಚ್ಚಾದ ಕೂಡಲೇ ಲಾಕ್ ಡೌನ್ ಮಾಡುವ ಚಿಂತನೆ ಇಲ್ಲ ಈ ಬಗ್ಗೆ ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದ್ದಾರೆ ಹಾಗೂ ಕೋವಿಡ್ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸಲಾಗುವುದು ಎಂದು ಹೇಳಿದ್ದಾರೆ.

“ವಾರಂತ್ಯ ಕರ್ಫ್ಯೂ ನಲ್ಲಿ ಬೀದಿ ವ್ಯಾಪಾರಿಗಳು, ಹೋಟೆಲ್ ಉದ್ಯಮಿಗಳು ಸಂಕಷ್ಟ ಅನುಭವಿಸುತ್ತಿದ್ದಾರೆ. ಲಾಕ್ ಡೌನ್ ನಿಂದಾಗಿ ಬಡವರಿಗೆ, ಬೀದಿ ವ್ಯಾಪಾರಿಗಳಿಗೆ ಸಮಸ್ಯೆಯಾಗುತ್ತಿದೆ. ಸರ್ಕಾರಕ್ಕೆ ಲಾಕ್ ಡೌನ್ ಮಾಡುವ ಇಚ್ಛೆಯಿಲ್ಲ. ಪರಿಸ್ಥಿತಿ ಕೈ ಮೀರುವ ಸ್ಥಿತಿ ಬಂದಾಗ ಲಾಕ್ಡೌನ್ ಜಾರಿಗೊಳಿಸುವುದು ಒಂದು ವಿಧಾನವಷ್ಟೇ. ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು” ಎಂದು ಸಚಿವ ಆರಗ ಜ್ಞಾನೇಂದ್ರ ಅವರು ಮಾಧ್ಯಮ ಮಿತ್ರರಿಗೆ ಹೇಳಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಉತ್ತರ ಪ್ರದೇಶ: ಪಕ್ಷಾಂತರ ಪರ್ವ ಆರಂಭ

0

ಉತ್ತರ ಪ್ರದೇಶ ಬಿಜೆಪಿ ಸರ್ಕಾರದಲ್ಲಿ ಬಿರುಗಾಳಿ ಎದ್ದಿದ್ದು, ಚುನಾವಣೆಗೆ ದಿನಗಣನೆ ಆರಂಭವಾಗಿರುವ ನಡುವೆಯೇ ಬಿಜೆಪಿಯ ಪ್ರಭಾವಿ ಸಚಿವರೊಬ್ಬರು ತಮ್ಮ ಬೆಂಬಲಿಗ ಶಾಸಕರೊಂದಿಗೆ ಸಮಾಜವಾದಿ ಪಕ್ಷವನ್ನು ಸೇರಿದ್ದು ಸಂಚಲನ ಮೂಡಿಸಿದೆ.

ಹಿಂದುಳಿದ ವರ್ಗಗಳ ನಾಯಕರಾಗಿರುವ ಉತ್ತರ ಪ್ರದೇಶ ರಾಜ್ಯ ಕಾರ್ಮಿಕ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಅವರು ಇದ್ದಕ್ಕಿದ್ದಂತೆ ಬಿಜೆಪಿ ತೊರೆದು ಸಮಾಜವಾದಿ ಪಕ್ಷವನ್ನು ಸೇರಿದ್ದಾರೆ. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಸ್ವಾಮಿ ಪ್ರಸಾದ್ ಮೌರ್ಯ ಅವರು ಎಸ್ ಪಿ ಪಕ್ಷದ ಅಧ್ಯಕ್ಷ ಅಖಿಲ್ ಯಾದವ್ ಅವರನ್ನು ಭೇಟಿ ಮಾಡಿ ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಸ್ವಾಮಿ ಪ್ರಸಾದ್ ಮೌರ್ಯ ಅವರು “ಭಿನ್ನ ಸಿದ್ಧಾಂತದ ಹೊರತಾಗಿಯೂ ಯೋಗಿ ಆದಿತ್ಯನಾಥ್ ಸಂಪುಟದಲ್ಲಿ ನಾನು ಸಮರ್ಪಣಾ ಭಾವದಿಂದ ಕೆಲಸ ಮಾಡಿದ್ದೇನೆ. ಆದರೆ ದಲಿತರು, ಓಬಿಸಿಗಳು, ರೈತರು, ನಿರುದ್ಯೋಗಿಗಳು ಮತ್ತು ಸಣ್ಣ ಉದ್ಯಮಿಗಳು ಯೋಗಿ ಆಡಳಿತದಲ್ಲಿ ತೀವ್ರ ದಬ್ಬಾಳಿಕೆಗೆ ಒಳಗಾದರು. ಇದರಿಂದ ಬೇಸತ್ತು ರಾಜೀನಾಮೆ ನೀಡಿದ್ದೇನೆ” ಎಂದು ‌ ತಿಳಿಸಿದ್ದಾರೆ.

ಉತ್ತರಪ್ರದೇಶದಲ್ಲಿ ಅಧಿಕಾರದಲ್ಲಿ ಇರುವಂತಹ ಬಿಜೆಪಿ ಸರ್ಕಾರಕ್ಕೆ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ಪಕ್ಷದ ಸಚಿವರು ಪಕ್ಷವನ್ನು ತೊರೆದು ಬೇರೆ ಪಕ್ಷ ಸೇರುತ್ತಿರುವುದು ಮುಂಬರುವ ಚುನಾವಣೆಯ ಪಲಿತಾಂಶದ ಮೇಲೆ ಯಾವ ರೀತಿಯ ಪ್ರಭಾವ ಬೀರಲಿದೆ ಎಂದು ಕಾದುನೋಡಬೇಕಾಗಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಬ್ರಹ್ಮೋಸ್ ಕ್ಷಿಪಣಿ ಉನ್ನತೀಕರಣ ಪರೀಕ್ಷೆ ಯಶಸ್ವಿ

0

ಭಾರತೀಯ ನೌಕಾಪಡೆಯ ಹೊಸ ಯುದ್ಧನೌಕೆ ಬ್ರಹ್ಮೋಸ್ ಉನ್ನತೀಕರಿಸಿದ ಆವೃತ್ತಿಯ ಪರೀಕ್ಷೆ ಯಶಸ್ವಿಯಾಗಿದೆ.

ವಿಶಾಖಪಟ್ಟಣದ ಐಎನ್ಎಸ್ ಕ್ಷಿಪಣಿಯು ಪರೀಕ್ಷಾರ್ಥವಾಗಿ ನಿಲ್ಲಿಸಿದ್ದ ಹಡಗಿನ ಮೇಲೆ ಅಪ್ಪಳಿಸಿದೆ. ಈ ಕ್ಷಿಪಣಿಯನ್ನು ಉನ್ನತೀಕರಿಸಿದ ಹಿರಿಮೆ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಗೆ ಸಲ್ಲುತ್ತದೆ.

ಕಳೆದ ವರ್ಷ ಅಕ್ಟೋಬರ್ ಮತ್ತು ಡಿಸೆಂಬರ್ ನಲ್ಲಿ ಎರಡು ಬಾರಿ ಬ್ರಹ್ಮೋಸ್ ಕ್ಷಿಪಣಿಯು ನೌಕಾಪಡೆ ಬಳಕೆಯ ಆವೃತ್ತಿಯ ಯಶಸ್ವಿ ಪರೀಕ್ಷೆ ನಡೆಸಲಾಗಿತು.

ಭಾರತದ ಬ್ರಹ್ಮಪುತ್ರ ನದಿ ಮತ್ತು ರಷ್ಯಾದ ಮೊಸ್ಕ್ವಾ ನದಿಯ ಹೆಸರುಗಳನ್ನು ಜೋಡಿಸಿ ಬ್ರಹ್ಮೋಸ್ ಎಂಬ ಹೆಸರನ್ನು ಡಿ ಆರ್ ಡಿಒ ಮತ್ತು ರಷ್ಯಾದ ರಕ್ಷಣಾ ಸಂಶೋಧನಾ ಸಂಸ್ಥೆ ಮಶಿನೊಸ್ಟ್ರೊಯೆನಿಯಾ ಕ್ಷಿಪಣಿಗೆ ಇರಿಸಲಾಗಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಭಾರತಕ್ಕೆ ಮತ್ತೆರಡು ರಫೇಲ್ ಯುದ್ಧ ವಿಮಾನ

0

ಭಾರತ ದೇಶವು ಫ್ರಾನ್ಸ್ ಜೊತೆ ಮಾಡಿಕೊಂಡಿರುವಂತಹ ರಫೇಲ್ ಯುದ್ಧ ವಿಮಾನ ಖರೀದಿಗೆ ಸಂಬಂಧಿಸಿದಂತೆ ಒಪ್ಪಂದದ ಪ್ರಕಾರ ಫೆಬ್ರವರಿ 1 ಅಥವಾ 2 ರಂದು ಮೂರು ಯುದ್ಧವಿಮಾನಗಳು ಭಾರತಕ್ಕೆ ಬರಲಿವೆ.

ಭಾರತವು ಒಟ್ಟು 36 ಯುದ್ಧವಿಮಾನಗಳ ಖರೀದಿಗೆ ಒಪ್ಪಂದ ಮಾಡಿಕೊಂಡಿದ್ದು, ಈವರೆಗೆ 32 ಯುದ್ಧ ವಿಮಾನಗಳನ್ನು ಫ್ರಾನ್ಸ್ ಹಸ್ತಾಂತರಿಸಿದೆ.

ಹವಾಮಾನ ಪರಿಸ್ಥಿತಿ ನೋಡಿಕೊಂಡು ಫೆಬ್ರವರಿ 1 ಅಥವಾ 2 ರಂದು ಮೂರು ಯುದ್ಧ ವಿಮಾನಗಳು ಫ್ರಾನ್ಸ್ ನ ಇಸ್ಟ್ರೆಸ್ಲೆ ಟ್ಯೂಬ್ ವಾಹಿನಿಯಿಂದ ಹೊರಡಲಿವೆ.

36ನೇ ಯುದ್ಧವಿಮಾನವನ್ನು ಈ ವರ್ಷದ ಎಪ್ರಿಲ್ ನಲ್ಲಿ ಬರಲಿದೆ ಎಂದು ತಿಳಿದುಬಂದಿದೆ.

ಭಾರತದ ರಕ್ಷಣಾ ಸಚಿವಾಲಯವು ರಕ್ಷಣಾ ಆಮದನ್ನು ಗಣನೀಯವಾಗಿ ತಗ್ಗಿಸುವ ತೀರ್ಮಾನ ಕೈಗೊಂಡಿದೆ. ಈ ನಿಟ್ಟಿನಲ್ಲಿ ಈಗಾಗಲೇ ಮಾಡಿಕೊಂಡಿರುವಂತಹ ರಕ್ಷಣಾ ಒಪ್ಪಂದಗಳ ಪರಿಶೀಲನೆಯಲ್ಲಿ ಸಚಿವಾಲಯ ತೊಡಗಿದೆ ಎಂದು ಮೂಲಗಳು ತಿಳಿಸಿವೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಗ್ಯಾಸ್ ಸಿಲಿಂಡರ್ ಅನಧಿಕೃತ ಸರಬರಾಜು:ಕ್ರಮಕ್ಕೆ ಕೋರ್ಟ್ ಸೂಚನೆ

0

ಶಿವಮೊಗ್ಗ ಜಿಲ್ಲೆ ಶಿರಾಳಕೊಪ್ಪದ ಆದಿತ್ಯ ಗ್ಯಾಸ್ ಏಜೆನ್ಸಿ ಮತ್ತು ಶಿಕಾರಿಪುರದ ಶರಾವತಿ ಗ್ಯಾಸ್ ಸರ್ವಿಸ್ ಕಂಪನಿಯು ಗುಡ್ಡಗಾಡು ವಾಸಿಗಳಿಗೆ ಸಬ್ಸಿಡಿಯಲ್ಲಿ ವಿತರಿಸಬೇಕಾದ ಗೃಹಬಳಕೆ ಅನಿಲದ ಸಿಲಿಂಡರ್ ಗಳನ್ನು ಅನಧಿಕೃತವಾಗಿ ಹಾವೇರಿ ಜಿಲ್ಲೆಯ ಕಿರಿಕಿರಿ ತಾಲೂಕಿನಲ್ಲಿ ಸರಬರಾಜು ಮಾಡುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಎರಡು ತಿಂಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳಿ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಹಾವೇರಿ ಜಿಲ್ಲಾ ಉಪನಿರ್ದೇಶಕರಿಗೆ ಹೈಕೋರ್ಟ್ ಆದೇಶಿಸಿದೆ.
ಈ ಕುರಿತು ಹಿರೇಕೆರೂರು ಪಟ್ಟಣ ಪಂಚಾಯಿತಿ ಅಧ್ಯಕ್ಷ ಗುರುಶಾಂತ ಎತ್ತಿನಹಳ್ಳಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಜಗದೀಶ್ ಸಿದ್ರಾಮಪ್ಪ ಹಾಲಶೆಟ್ಟಿ , ಶಿರಾಳಕೊಪ್ಪದ ಆದಿತ್ಯ ಗ್ಯಾಸ್ ಏಜೆನ್ಸಿ ಹಾಗೂ ಶಿಕಾರಿಪುರದ ಶರಾವತಿ ಗ್ಯಾಸ್ ಸರ್ವಿಸ್ ಕಂಪನಿಗಳು ತಮ್ಮ ಕೇಂದ್ರದ 15 ಕಿ.ಮೀ. ವ್ಯಾಪ್ತಿಯಲ್ಲಿ ಸಿಲಿಂಡರ್ ಗಳನ್ನು ಸರಬರಾಜು ಮಾಡಬೇಕು. ಆದರೆ, 22 ಕಿ.ಮೀ. ದೂರದ ನೆರೆಯ ಜಿಲ್ಲೆಯ ಹಿರೆಕೆರೂರು ತಾಲೂಕಿಗೆ ಅನಧಿಕೃತವಾಗಿ ಸರಬರಾಜು ಮಾಡುತ್ತಿವೆ. ಇದು ದೊಡ್ಡ ಪ್ರಮಾಣದ ಅವ್ಯವಹಾರ ಎಂದು ನ್ಯಾಯಪೀಠಕ್ಕೆ ವಿವರಿಸಿದರು.
ವಾದ ಆಲಿಸಿದ ನ್ಯಾಯಪೀಠ, ಈ ಸಂಬಂಧ ಹಿರೇಕೆರೂರು ತಹಶೀಲ್ದಾರ್ ಸಲ್ಲಿಸಿರುವ ವರದಿ ಆಧರಿಸಿ ತಪ್ಪಿತಸ್ಥರ ವಿರುದ್ಧ ಎರಡು ತಿಂಗಳಲ್ಲಿ ಕ್ರಮ ಜರುಗಿಸುವಂತೆ ಆಹಾರ ಇಲಾಖೆಯ ಹಾವೇರಿ ಜಿಲ್ಲಾ ಉಪನಿರ್ದೇಶಕರಿಗೆ ನಿರ್ದೇಶನ ನೀಡಿ ಅರ್ಜಿ ವಿಲೇವಾರಿ ಮಾಡಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಯುವಜನ ವಿವೇಕಾನಂದರ ಹೆಜ್ಜೆಗುರುತನ್ನ ಅನುಸರಿಸಬೇಕು- ಬೊಮ್ಮಾಯಿ

0

ಸ್ವಾಮಿ ವಿವೇಕಾನಂದರ 159ನೇ ಜನ್ಮದಿನದ ಅಂಗವಾಗಿ ಬೆಂಗಳೂರಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆಯನ್ನು ಆಚರಿಸಲಾಯಿತು.
ಅನಿವಾರ್ಯಕಾರಣಗಳಿಂದ ಆಗಮಿಸಲಾಗದೇ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಅಂತರ್ಜಾಲದ ಮೂಲಕ ವರ್ಚುವಲ್ ಆಗಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಸ್ವಾಮಿ ವಿವೇಕಾನಂದರ 159ನೇ ಜನ್ಮದಿನಾಚರಣೆಯನ್ನು ರಾಷ್ಟ್ರೀಯ ಯುವಜನ ಸಪ್ತಾಹ ದಿನಾಚರಣೆಯನ್ನಾಗಿ ಆಚರಿಸುತ್ತಿರುವ ಯುವಜನ ಸಬಲೀಕರಣ ಇಲಾಖೆಗೆ ನನ್ನ ಅನಂತ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಪ್ರತಿಯೊಬ್ಬ ಮನುಷ್ಯ ತಮ್ಮ ಸೃಷ್ಟಿಯ ಮೂಲವನ್ನು ಅರಿಯುವಂತೆ ವಿವೇಕಾನಂದರು ಮಾಡಿದ್ದಾರೆ. ಅವರು ಯುವಶಕ್ತಿಯಲ್ಲಿ ಅಪಾರ ನಂಬಿಕೆಯನ್ನು ಇರಿಸಿದ್ದರು. ಸಮಾಜದಲ್ಲಿ ಏನಾದರೂ ಬದಲಾವಣೆ ತರಬೇಕೆಂದರೆ ಯೌವನದಲ್ಲಿ ಮಾತ್ರ ಸಾಧ್ಯವೆಂದು ಅವರು ಬಲವಾಗಿ ನಂಬಿದ್ದರು. ಅದರಂತೆ ಬದುಕಿ ಎಲ್ಲರಿಗೂ ಆದರ್ಶರಾಗಿದ್ದಾರೆ. ಸಾವಿನ ನಂತರವೂ ಬದುಕಬಹುದು ಎನ್ನುವುದನ್ನು ಅವರು ತೋರಿಸಿಕೊಟ್ಟಿದ್ದಾರೆ. ಇಂದಿನ ಯುವ ಸಮುದಾಯ ಅವರ ಹೆಜ್ಜೆಗುರುತುಗಳನ್ನು ಅನುಸರಿಸಬೇಕು ಎಂದರು.
ಯುವ ಸಬಲೀಕರಣ ಇಲಾಖೆ ಸಚಿವ ನಾರಾಯಣಗೌಡ ಅವರು ಮಾತನಾಡಿ, ವಿವೇಕಾನಂದ ಎಂದಾಕ್ಷಣ ಮೈಮನಸ್ಸು ರೋಮಾಂಚನಗೊಳ್ಳುತ್ತದೆ. ಇವತ್ತು ಸರ್ಕಾರ ಯುವ ಸಮುದಾಯವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ 540 ಹೊಸ ಯೋಜನೆಗಳನ್ನು ಜಾರಿಗೊಳಿಸಿದೆ. ಈ ಯೋಜನೆಗಳ ಮೂಲಕ ಯುವ ಸಮುದಾಯದಲ್ಲಿ ಬದಲಾವಣೆಯನ್ನು ತರುವ ಪ್ರಯತ್ನವನ್ನು ನಾವೆಲ್ಲರೂ ಮಾಡಬೇಕು ಎಂದರು.

ಉನ್ನತ ಶಿಕ್ಷಣ ಸಚಿವರಾದ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಮಾತನಾಡಿ,
ಇವತ್ತು ಶಿಕ್ಷಣ ಎನ್ನುವುದು ಕೇವಲ ಶೈಕ್ಷಣಿಕವಾಗಿ ಉಳಿದಿದೆ. ಶಿಕ್ಷಣವನ್ನು ಶ್ರೀಮಂತಗೊಳಿಸಲು ಸಾಮಾಜಿಕ,ಆಧ್ಯಾತ್ಮಿಕ ಜ್ಞಾನ ಅತ್ಯಗತ್ಯ. ಆಧ್ಯಾತ್ಮಿಕವಾಗಿ ಜ್ಞಾನವಿಲ್ಲದ ವ್ಯಕ್ತಿಯಿಂದ ಸಮಾಜಕ್ಕೆ ಏನೂ ಕೊಡುಗೆ ನೀಡಲು ಸಾಧ್ಯವಿಲ್ಲ. ಜವಾಬ್ದಾರಿಯಿಲ್ಲದ ವಿದ್ಯಾವಂತರು ಸಮಾಜದ ಆಸ್ತಿ ಆಗಲು ಸಾಧ್ಯವಿಲ್ಲ. ಸಮಾಜದಲ್ಲಿ ಕ್ರಾಂತಿಕಾರಿ ಬದಲಾವಣೆಯನ್ನು ಶಿಕ್ಷಣದಲ್ಲಿ ತರುವ ಸಲುವಾಗಿ ಹೊಸ ಹೊಸ ನೀತಿಯನ್ನು ಜಾರಿಗೊಳಿಸಿದ್ದೇವೆ. ಅದರಲ್ಲೂ ಪ್ರಮುಖವಾಗಿ ಕರ್ನಾಟಕದಲ್ಲಿ ಅನುಷ್ಠಾನಗೊಳಿಸುತ್ತಿದೆ ಎಂದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಕೋವಿಡ್ ನಿರ್ವಹಣೆಯಲ್ಲಿ ದೋಷವಿದ್ದರೆ ಸಾಕ್ಷ್ಯಸಹಿತ ದೂರು ನೀಡಿ- ಡಾ.ಸುಧಾಕರ್

0

ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಅವರು ಕೋವಿಡ್ ಸೋಂಕು ನಿಯಂತ್ರಣ ಮತ್ತು ಪರೀಕ್ಷೆ ಮೊದಲಾದ ವ್ಯವಸ್ಥೆಯಲ್ಲಿ ತಪ್ಪು ಕಂಡು ಬಂದರೆ ಸಾಕ್ಷಿ ಸಹಿತ ಸರ್ಕಾರಕ್ಕೆ ದೂರು ನೀಡಬೇಕಿತ್ತು. ಆದರೆ ಅದರ ಬದಲು ರಾಜಕೀಯ ಲಾಭಕ್ಕಾಗಿ ಬೇಜವಾಬ್ದಾರಿಯಿಂದ ತಪ್ಪು ಸಂದೇಶ/ ವದಂತಿ ಹರಡಿದವರ ವಿರುದ್ಧ ಕಾನೂನಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

“ಜವಾಬ್ದಾರಿಯುತ ಸ್ಥಾನದಲ್ಲಿರುವ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಅವರು ಗೃಹ ಸಚಿವರು ಹಾಗೂ ನನ್ನನ್ನು ವೈಯಕ್ತಿಕವಾಗಿ ನಿಂದಿಸಿರುವುದನ್ನು ನಾವು ರಾಜಕೀಯವಾಗಿಯೇ ಎದುರಿಸುತ್ತೇವೆ. ಆದರೆ ಆರೋಗ್ಯ ತುರ್ತುಪರಿಸ್ಥಿತಿ ಇರುವ ಸಂದರ್ಭದಲ್ಲಿ ವೈದ್ಯಕೀಯ ವಿಚಾರದಲ್ಲಿ ಆಧಾರರಹಿತ ಆರೋಪ ಮಾಡುವುದು ಸರಿಯಲ್ಲ. ಶಿವಕುಮಾರ್ ಅವರು ತಪ್ಪು ಮಾಹಿತಿ ವದಂತಿ ಹರಡಿಸಿರುವುದು ಹಾಗೂ ದೇಶದ ಗೌರವಕ್ಕೆ ಧಕ್ಕೆ ತರುವಂತೆ ನೀಡಿದ ಹೇಳಿಕೆಗಳಿಗೆ ಸಾಕ್ಷಿ ಒದಗಿಸಬೇಕು. ಇಲ್ಲದಿದ್ದಲ್ಲಿ ಬಹಿರಂಗವಾಗಿ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ತಪ್ಪು ಸಂದೇಶ ಹರಡಿಸಿರುವುದರ ವಿರುದ್ಧ ಕ್ರಮ ಜರುಗಿಸಲಾಗುವುದು” ಎಂದು ಸುಧಾಕರ್ ಅವರು ತಿಳಿಸಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಅಭಿವೃದ್ಧಿಯಲ್ಲಿ ಸರ್ಕಾರಿ ನೌಕರರ ಪಾತ್ರ ಮಹತ್ವದ್ದು- ಬಿವೈಆರ್

0

ಶಿಕಾರಿಪುರ ತಾಲೂಕಿನ ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ಸರ್ಕಾರಿ ನೌಕರರ ಪಾತ್ರ ಮಹತ್ವದ್ದು.ಕೋವಿಡ್ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ನೌಕರರ ಕೋಟ್ಯಂತರ ರೂಪಾಯಿಯನ್ನು ಕೋವಿಡ್ ಪರಿಹಾರ ನಿಧಿ ನೀಡಿರುವುದು ಶ್ಲಾಘನೀಯ ಎಂದು ಬಿ‌.ವೈ. ರಾಘವೇಂದ್ರ ಅವರು ತಿಳಿಸಿದರು.
ಶಿಕಾರಿಪುರ ತಾಲೂಕು ಪಂಚಾಯಿತಿ ಮುಂಭಾಗ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಪದಾಧಿಕಾರಿಗಳು ನೀಡಿದ ಮನವಿ ಸ್ವೀಕರಿಸಿ ಅವರು ಮಾತನಾಡಿದರು.
ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳನ್ನು ಪ್ರಾಮಾಣಿಕವಾಗಿ ಈಡೇರಿಸುವ ನಿಟ್ಟಿನಲ್ಲಿ ಸರ್ಕಾರದ ಗಮನ ಸೆಳೆಯಲು ಪ್ರಾಮಾಣಿಕ ಪ್ರಯತ್ನ ನಡೆಸುತ್ತೇನೆ. ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್‌. ಷಡಕ್ಷರಿ ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಜೊತೆ ಚರ್ಚಿಸಿ ನಿಮ್ಮ ಬೇಡಿಕೆ ಈಡೇರಿಸಲು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಗಮನ ಸೆಳೆಯುತ್ತೇನೆ ಎಂದು ಭರವಸೆ ನೀಡಿದರು.
ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಕೆ.ಎಸ್. ಗುರುಮೂರ್ತಿಯವರು, ಶಾಸಕಾಂಗ ಹಾಗೂ ಕಾರ್ಯಾಲಯದ ಜೊತೆಯಲ್ಲಿ ಕೆಲಸ ನಿರ್ವಹಿಸಿದಾಗ ಅಭಿವೃದ್ಧಿ ಕಾರ್ಯ ನಡೆಸಲು ಸಾಧ್ಯ. ನೌಕರರ ಸಮಸ್ಯೆ ಹಾಗೂ ಬೇಡಿಕೆ ಈಡೇರಿಸುವಂತೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಸರ್ಕಾರದ ಗಮನ ಸೆಳೆಯುತ್ತೇನೆ ಎಂದರು.
ಈ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಡಿ. ಮಧುಕೇಶ್ವರ, ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ವಿಶ್ವನಾಥ್, ತಾಲೂಕು ಘಟಕದ ಗೌರವಾಧ್ಯಕ್ಷ ರೇಣುಕಪ್ಪ, ಉಪಾಧ್ಯಕ್ಷ ಡಿ.ಆರ್. ಪುರುಷೋತ್ತಮ್, ಪ್ರಧಾನ ಕಾರ್ಯದರ್ಶಿ ಬಸವನಗೌಡ ಕೋಣ್ತಿ, ಖಜಾಂಚಿ ಕೇಶವ ಮತ್ತು ಇನ್ನಿತರರು ಉಪಸ್ಥಿತರಿದ್ದರು.