Saturday, February 14, 2026
Saturday, February 14, 2026
Home Blog Page 1767

ಚೀನಿ ಮೂಲದ ಟೆಲಿಕಂಪನಿಗಳ ತನಿಖೆ ಚುರುಕು

0

ಭಾರತದಲ್ಲಿ ವಹಿವಾಟು ನಡೆಸುತ್ತಿರುವ ಚೀನಿ ಮೂಲದ ಪ್ರಮುಖ ಟೆಲಿಕಾಂ ಕಂಪನಿಗಳ ಆದಾಯ ವಿವರ ಸಲ್ಲಿಕೆಗಳಲ್ಲಿ ಲೋಪ ದೋಷಗಳು ಕಂಡು ಬಂದಿರುವ ಆರೋಪಗಳ ಹಿನ್ನೆಲೆಯಲ್ಲಿ ಸರ್ಕಾರ ಹಲವು ತನಿಖಾ ಸಂಸ್ಥೆಗಳ ಮೂಲಕ ತನಿಕೆಯನ್ನು ಆರಂಭಿಸಿದೆ.
ಆದಾಯ ತೆರಿಗೆ ಇಲಾಖೆ, ಕಂದಾಯ ವಿಚಕ್ಷಣ ದಳದ ಮೂಲಕ ಇತ್ತೀಚಿಗೆ ಚೀನಿ ಮೂಲದ ಟೆಲಿಕಾಂ ಕಂಪನಿಗಳ ವಹಿವಾಟುಗಳನ್ನು ಶೋಧಿಸಲಾಗಿತ್ತು. ಆರಂಭಿಕ ಪರಿಶೀಲನೆಯ ಸಂದರ್ಭ, ಕಳೆದ ಕೆಲವು ವರ್ಷಗಳಿಂದೀಚೆಗೆ ಈ ಟೆಲಿಕಾಂ ಕಂಪನಿಗಳ ಆದಾಯ ಗಳಿಕೆ ವಿವರಗಳಲ್ಲಿ ನ್ಯೂನ್ಯತೆಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ಕೆಲವು ವರ್ಷಗಳಿಂದಲೂ ಚೀನಿ ಮೂಲದ ಟೆಲಿಕಾಂ ಕಂಪನಿಗಳು ಮಾರುಕಟ್ಟೆಯಲ್ಲಿದ್ದರೂ, ಸಾವಿರಾರು ಕೋಟಿ ರೂ. ಆದಾಯ ಗಳಿಸುತ್ತಿದ್ದರೂ ನಷ್ಟವನ್ನು ತೋರಿಸುತ್ತಿವೆ. ಇದು ಅನುಮಾನಗಳಿಗೆ ಕಾರಣವಾಗಿದೆ. ಆತ್ಮೀಯ ತೆರಿಗೆಯಿಂದ ನುಣುಚಿಕೊಳ್ಳುವ ಪ್ರಯತ್ನದ ಭಾಗವಾಗಿ ನಷ್ಟವನ್ನೇ ತೋರಿಸಲಾಗುತ್ತಿದೆಯೇ ಎಂಬ ಶಂಕೆ ಉಂಟಾಗಿದ್ದು, ಸರಕಾರ ತನಿಖೆ ನಡೆಸುತ್ತಿದೆ ಎಂದು ವರದಿಯಾಗಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಸ್ಮಾರ್ಟ್ ಸಿಟಿ ಕಾಮಗಾರಿ: ಕಾಲಮಿತಿ ಮೀರಿದರೆ ಕಪ್ಪು ಪಟ್ಟಿ

0

ನಿಗದಿಪಡಿಸಿದ ಕಾಲಮಿತಿಯೊಳಗೆ ಸ್ಮಾರ್ಟ್ ಸಿಟಿ ಕಾಮಗಾರಿ ಪೂರ್ಣಗೊಳಿಸದ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಶಿಫಾರಸು ಮಾಡಬೇಕು ಎಂದು ಸಚಿವ ಕೆ.ಎಸ್. ಈಶ್ವರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶಿವಮೊಗ್ಗ ನಗರದ ಸ್ಮಾರ್ಟ್ ಸಿಟಿ ಆಡಳಿತ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಿದ ಗುತ್ತಿಗೆದಾರರಿಗೆ ಸೂಕ್ತ ಎಚ್ಚರಿಕೆಯೊಂದಿಗೆ ಕೆಲಸ ಮುಗಿಸಲು ಸೂಚನೆ ತಪ್ಪಿದಲ್ಲಿ ಅಂತಹ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಶಿಫಾರಸು ಮಾಡಬೇಕು. ಅಲ್ಲದೇ ಅವರಿಗೆ ಬಾಕಿ ಹಣ ಪಾವತಿಸುವಂತೆ ಕ್ರಮವಹಿಸಬೇಕು ಎಂದು ತಾಕೀತು ಮಾಡಿದರು.
ದಿನದ 24 ಗಂಟೆ ಮನೆಗಳಿಗೆ ಕುಡಿಯುವ ನೀರು ಪೂರೈಸುವ ಯೋಜನೆ ಎರಡು ಕೆಲವೆಡೆ ಪ್ರಾಯೋಗಿಕವಾಗಿ ರಸೀದಿ ನೀಡಲಾಗಿದೆ. ಅದರಲ್ಲಿ ಭಾರಿ ಪ್ರಮಾಣದ ದರ ನಿಗದಿಯಾಗಿರುವ ಬಗ್ಗೆ ವಿರೋಧ ವ್ಯಕ್ತವಾಗುತ್ತಿದೆ. ಹೀಗಾಗಿ ಪಾಲಿಕೆ ಸಿಬ್ಬಂದಿ ಮನೆಗಳಿಗೆ ಭೇಟಿ ನೀಡಿ ಈ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು.
ಕುಡಿಯುವ ನೀರಿನ ಪೈಪ್ ಲೈನ್ ಒಡೆದು ಕಲುಷಿತ ನೀರು ಸೇರುವ ಆತಂಕದ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದಿವೆ. ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಕೆಲಸ ನಡೆಯುವ ಸ್ಥಳಗಳಲ್ಲಿ ಇದ್ದು, ಕಾಮಗಾರಿಗಳು ನಿಯಮಾನುಸಾರ ನಡೆಯುವಲ್ಲಿ ಕ್ರಮ ಕೈಗೊಳ್ಳಬೇಕು. ನಿಯೋಜಿತ ಕಾರ್ಯದಲ್ಲಿ ನಿರ್ಲಕ್ಷ್ಯ ವಹಿಸದಂತೆ ಅಧಿಕಾರಿಗಳಿಗೆ ಸೂಚಿಸಿದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಕೋರ್ಟ್ ಕಲಾಪ ಪ್ರಸಾರ ಪ್ರಸ್ತಾವನೆ:ರಾಜ್ಯ ಆದ್ಯತೆ ಮೇರೆ ಪರಿಗಣಿಸಬೇಕು

0

ರಾಜ್ಯದ ಅಧೀನ ನ್ಯಾಯಾಲಯ ಕಲಾಪಗಳನ್ನು ನೇರ ಪ್ರಸಾರ ಮಾಡಲು ಶೀಘ್ರವೇ ತಾಂತ್ರಿಕ ನೆರವು ಸೇರಿದಂತೆ ಅಗತ್ಯ ಮೂಲಸೌಕರ್ಯ ಒದಗಿಸಬೇಕು ಎಂದು ಹೈಕೋರ್ಟ್ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಸುಪ್ರೀಂಕೋರ್ಟ್ ನ ನಿರ್ದೇಶನದಂತೆ ನ್ಯಾಯಾಲಯಗಳಲ್ಲಿ ಇ-ಫೈಲಿಂಗ್ ಕಡ್ಡಾಯ ಜಾರಿ ಮತ್ತು ಕಲಾಪದ ಲೈವ್ ಸ್ಟ್ರೀಮಿಂಗ್ ಗೆ ಅಗತ್ಯ ನಿಯಮ ರೂಪಿಸಬೇಕೆಂದು ಕೋರಿ ವಕೀಲ ದಿಲ್ರಾಜ್ ರೋಹಿತ್ ಸಿಕ್ವೇರಾ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಮತ್ತು ಲೀಗಲ್ ಟ್ರಾನ್ಸ್ ಕ್ರಿಪ್ಷನ್ ಒದಗಿಸಲು ಕೋರಿ ಸಲ್ಲಿಸಿದ್ದ ಮಧ್ಯಂತರ ಅರ್ಜಿ ಗಳ ಕುರಿತು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಕೆಲಕಾಲ ವಾದ-ಪ್ರತಿವಾದ ನಂತರ ಅರ್ಜಿಗಳನ್ನು ವಿಲೇವಾರಿ ಮಾಡಿದ ನ್ಯಾಯಪೀಠ ಹೈಕೋರ್ಟ್ ನೀರು ಪ್ರಸಾರಕ್ಕೆ ಸಂಬಂಧಿಸಿದ ಅರ್ಜಿದಾರರ ಮನವಿ ಈಗಾಗಲೇ ಜಾರಿಗೆ ಬಂದಿದೆ. ಹಾಗೆಯೇ ಅಧೀನ ಕೋರ್ಟ್ ಗಳ ಕಲಾಪದ ನೇರಪ್ರಸಾರವನ್ನು ಹಂತಹಂತವಾಗಿ ನೇರ ಪ್ರಸಾರ ಮಾಡಲಾಗುವುದು. ಅದಕ್ಕಾಗಿ ರಾಜ್ಯ ಸರ್ಕಾರವು ಅದಕ್ಕೆ ಮೂಲ ಸೌಕರ್ಯ ಕಲ್ಪಿಸಬೇಕು ಎಂದು ಹೇಳಿತು.
ಹೈಕೋರ್ಟ್ ಕಲಾಪ ನೇರಪ್ರಸಾರಕ್ಕೆ ಸಂಬಂಧಿಸಿದ ಕರ್ನಾಟಕ ರೂಲ್ಸ್ ಆನ್ ಲೈವ್ ಸ್ಟ್ರೀಮಿಂಗ್ ಆಂಡ್ ರೆಕಾರ್ಡಿಂಗ್ ಆಫ್ ಕೋರ್ಟ್ ಪ್ರೋಸಿಡಿಂಗ್ಸ್ ನಿಯಮಗಳನ್ನು ಈಗಾಗಲೇ ಅನುಷ್ಠಾನಗೊಳಿಸಲಾಗಿದೆ.
2021ರ ಸೆ.17ರಂದು ನಿಯಮಗಳ ಅಧಿಸೂಚನೆ ಹೊರಡಿಸಲಾಗಿದ್ದು, 2021ರ ಡಿ.30ರಂದು ರಾಜ್ಯ ಪತ್ರದಲ್ಲಿ ಪ್ರಕಟಿಸಲಾಗಿದೆ.
ಇ-ಫೈಲಿಂಗ್ ಗೆ ಸಂಬಂಧ ಕರ್ನಾಟಕ ಎಲೆಕ್ಟ್ರಾನಿಕ್ ಫೈಲಿಂಗ್ ಅಧಿನಿಯಮಗಳನ್ನು ಸಹ 2021ರ ಮೇ 1ರಂದು ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿದೆ. ಅದೇ ರೀತಿ ಲೀಗಲ್ ಟ್ರಾನ್ಸ್ ಕ್ರಿಪ್ಷನ್ ಲೈವ್ ಸ್ಟ್ರೀಮಿಂಗ್ ವ್ಯವಸ್ಥೆ ಒದಗಿಸಲಾಗಿದೆ ಎಂದು ಆದೇಶಿಸಿತು.
ರಾಜ್ಯದ ಅಧೀನ ನ್ಯಾಯಾಲಯಗಳ ಕಲಾಪ ಲೈವ್ ಸ್ಟ್ರೀಮಿಂಗ್ ಸಂಬಂಧ ಅಗತ್ಯ ಮೂಲ ಸೌಕರ್ಯ ಕಲ್ಪಿಸುವ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ಆದ್ಯತೆ ಮೇಲೆ ಪರಿಗಣಿಸಬೇಕು ಎಂದು ನ್ಯಾಯಪೀಠ ನಿರ್ದೇಶನ ನೀಡಿತು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಮೇಕೆದಾಟು ಯೋಜನೆ: ಸುಪ್ರೀಂ ವಿಚಾರಣೆ

0

ಸುಪ್ರೀಂಕೋರ್ಟ್ ಇಂದು ಮೇಕೆದಾಟು ಯೋಜನೆ ಸಂಬಂಧ ತಮಿಳುನಾಡು ಸರ್ಕಾರ ಸಲ್ಲಿಸಿರುವ ಆಕ್ಷೇಪಣೆ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಳ್ಳಲಿದೆ.

ಮೇಕೆದಾಟು ಪ್ರದೇಶದಲ್ಲಿ ಜಲಾಶಯ ನಿರ್ಮಿಸುವ ಕರ್ನಾಟಕದ ಪ್ರಸ್ತಾವಕ್ಕೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ ಚೆನ್ನೈ ಪೀಠ ಈ ಹಿಂದೆ ತಡೆಯಾಜ್ಞೆ ನೀಡಿತ್ತು. ಅದಾದ ಬಳಿಕ ಚೆನ್ನೈ ಪೀಠ ನೀಡಿದ್ದ ತಡೆಯಾಜ್ಞೆಯನ್ನು ದೆಹಲಿಯಲ್ಲಿರುವ ಹಸಿರು ನ್ಯಾಯ ಮಂಡಳಿಯ ಪ್ರಧಾನ ಪೀಠ ತೆರವುಗೊಳಿಸಿತ್ತು.

ಪ್ರಧಾನ ಪೀಠದ ಕ್ರಮ ಪ್ರಶ್ನಿಸಿದ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ಈ ಬಗ್ಗೆ ಸುಪ್ರೀಂಕೋರ್ಟ್ ನಲ್ಲಿ ಇಂದು ವಿಚಾರಣೆ ನಡೆಯಲಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ನಂದಿತಾ ಪ್ರಕರಣ ಸಿಬಿಐ ಗೆ ನೀಡಿ- ಕಿಮ್ಮನೆ ರತ್ನಾಕರ್

0

ನಂದಿತಾ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ಆಗ್ರಹಿಸಿ ಜ.30ರಂದು ಉಪವಾಸ ಸತ್ಯಾಗ್ರಹ ಮಾಡುವುದಾಗಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ತಿಳಿಸಿದ್ದಾರೆ.
ಶಿವಮೊಗ್ಗ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾವು ಸಚಿವರಾಗಿದ್ದಾಗ ಅರಗ ಜ್ಞಾನೆಂದ್ರ ಸೇರಿದಂತೆ ಬಿಜೆಪಿಯ ಮುಖಂಡರು ನಂದಿತ ಅಸಹಜ ಸಾವಿನ ಪ್ರಕರಣವನ್ನು ಸಿಬಿಐ ತನಿಖೆ ನಡೆಸುವಂತೆ ಆಗ್ರಹಿಸಿದ್ದರು. ಇದಕ್ಕೆ ಸಾಕಷ್ಟು ರಾಜಕೀಯ ಬಣ್ಣ ಬಳೆದು ಆತ್ಮಹತ್ಯೆ ಪ್ರಕರಣವನ್ನು ಕೊಲೆ ಅತ್ಯಾಚಾರವೆಂದು ಬಿಂಬಿಸಿದ್ದರು ಎಂದು ಆರೋಪಿಸಿದರು.
ಈಗ ಆರೋಗ್ಯ ಜ್ಞಾನೇಂದ್ರ ಅವರು ಗೃಹ ಸಚಿವರಾಗಿದ್ದಾರೆ. ಅವರು ನಿರ್ಭೀತಿಯಿಂದ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸ ಬಹುದು. 2018ರ ಚುನಾವಣೆ ಸಂದರ್ಭ ನಂದಿತಾ ಮನೆಗೆ ಭೇಟಿ ನೀಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಸಿಬಿಐ ತನಿಖೆಗೆ ಒಳಪಡಿಸಲಾಗುವುದು ಎಂದಿದ್ದರು.ಈಗ ಏಕೆ ಭರವಸೆಗಳನ್ನು ಮರೆತಿದ್ದಾರೆ ಎಂದು ಪ್ರಶ್ನಿಸಿದರು.
ಸಿಬಿಐ ತನಿಖೆಯಲ್ಲಿ ತಾನು ತಪ್ಪಿತಸ್ಥ ಎಂದು ಕಂಡುಬಂದರೆ ಸಾಕ್ಷಿ ಸಮೇತ ಸಾಬೀತಾದರೆ ರಾಜಕೀಯ ನಿವೃತ್ತಿ ಘೋಷಿಸುತ್ತೇನೆ ಎಂದು ಕಿಮ್ಮನೆ ಅವರು ತಿಳಿಸಿದರು.
ಪ್ರಮುಖರಾದ ಆರ್. ಪ್ರಸನ್ನಕುಮಾರ್, ಕೆ.ಬಿ. ಪ್ರಸನ್ನಕುಮಾರ್, ಯಮುನಾ ರಂಗೇಗೌಡ, ರಾಘವೇಂದ್ರ, ಎನ್. ರಮೇಶ್, ದೇವಿ ಕುಮಾರ್, ಗಾಜನೂರು ಗಣೇಶ ಮತ್ತು ಇನ್ನಿತರರು ಉಪಸ್ಥಿತರಿದ್ದರು.
ಸಮಸ್ಯೆಗಳನ್ನ ಪರಿಹರಿಸದೇ ಮರೆತರೆ ಮತ್ತೆಮತ್ತೆ ರಾಜಕೀಯದಲ್ಲಿ ಅದು ಉರುಳಾಟ ನಡೆಸುತ್ತಿರುತ್ತದೆ. ಆಗ
ತನಿಖೆಗೆ ಒತ್ತಾಯಿಸಿದವರೇ
ಈಗ ಅಧಿಕಾರ ಸ್ಥಾನದಲ್ಲಿದ್ದಾರೆ. ಮೃತಳ ಆತ್ಮಕ್ಕೆ ಶಾಂತಿ ದೊರಕಿಸಲಿ ಎಂಬ ಮಾತೀಗ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಮೊಲ್ನುಪಿರಾವಿರ್ ಮಾಂತ್ರಿಕ ಮಾತ್ರೆಯೆ?

0

ಈ ಓಮಿಕ್ರಾನ್ ಚಾಲಿತ ಸೋಂಕಿನ ಉಲ್ಬಣದ ಸಮಯದಲ್ಲಿ ಹೆಚ್ಚಿನ ಕೋವಿಡ್ ರೋಗಿಗಳು ಇದುವರೆಗೆ ಸೌಮ್ಯವಾದ ರೋಗಲಕ್ಷಣಗಳನ್ನು ಹೊಂದಿದ್ದಾರೆ. ಆಂಟಿವೈರಲ್ ಮಾತ್ರೆ ಮೊಲ್ನುಪಿರಾವಿರ್ ರೋಗಕ್ಕೆ ಯಾವುದೇ ಮಾಂತ್ರಿಕ ಔಷಧವಲ್ಲ ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ.
ಸದ್ಯಕ್ಕೆ ಕೋವಿಡ್ ವಿರುದ್ಧ ಯಾವುದೇ ನಿರ್ದಿಷ್ಟ ಔಷಧವಿಲ್ಲ. ಚಿಕಿತ್ಸೆಯು ಇನ್ನೂ ರೋಗಲಕ್ಷಣವಾಗಿಯೇ ಉಳಿದಿದೆ ಎಂದು AIIMS ನಲ್ಲಿನ ವೈದ್ಯಕೀಯ ವಿಭಾಗದ ಪ್ರಾಧ್ಯಾಪಕ ಡಾ. ನೀರಜ್ ನಿಶ್ಚಲ್ ಹೇಳಿದ್ದಾರೆ. ಈಗ ರೋಗಿಗಳ ಮೇಲೆ ನಿಕಟ ನಿಗಾ, ವಹಿಸಬೇಕು. ಅಪಾಯದಲ್ಲಿರುವ ವೃದ್ಧರು ಮತ್ತು ಇನ್ನೂ ಲಸಿಕೆ ಹಾಕಿಸಿಕೊಳ್ಳದವರ ಮೇಲೆ ನಿಗಾ ಇರಿಸಬೇಕು ಎಂದರು.

ಕೋವಿಡ್‌ನ ಮೂರನೇ ಅಲೆಯ ಹಿನ್ನೆಲೆಯಲ್ಲಿ ಇದುವರೆಗೆ 10 ಸೋಂಕಿತ ರೋಗಿಗಳು ಸೌಮ್ಯ ರೋಗಲಕ್ಷಣಗಳನ್ನು ಹೊಂದಿದ್ದಾರೆ. ಇದನ್ನು ರೋಗಲಕ್ಷಣದ ಚಿಕಿತ್ಸೆಯೊಂದಿಗೆ ಮನೆಯಲ್ಲಿಯೇ ಸುಲಭವಾಗಿ ನಿರ್ವಹಿಸಬಹುದು ಎಂದು ಅವರು ಹೇಳಿದರು. ಈ ಬಾರಿ ಇಲ್ಲಿಯವರೆಗೆ ಶೇ.10% ಕೋವಿಡ್ ಪ್ರಕರಣಗಳಿಗೆ ಆಸ್ಪತ್ರೆಗೆ ದಾಖಲು ಅಗತ್ಯವಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಆದರೆ ಪರಿಸ್ಥಿತಿ ಕ್ರಿಯಾತ್ಮಕವಾಗಿದೆ ಮತ್ತು ವೇಗವಾಗಿ ಬದಲಾಗುತ್ತಿದೆ. ಇತ್ತೀಚೆಗೆ ಅನುಮೋದಿಸಲಾದ ಮೊಲ್ನುಪಿರವಿರ್ ಔಷಧದ ಬಗ್ಗೆ ಡಾ. ನಿಶ್ಚಲ್ ಇದನ್ನು ಮ್ಯಾಜಿಕ್ ಮಾತ್ರೆ ಎಂದು ಹೇಳಲಾಗುತ್ತಿದೆ, ಅದು ನಿಜವಲ್ಲ . ಈ ನಿರ್ದಿಷ್ಟ ಅಣುವಿನ ದತ್ತಾಂಶವು ಹೇಳಿಕೊಳ್ಳುತ್ತಿರುವಂತೆ ದೃಢವಾಗಿಲ್ಲ. ಬಹು ಮುಖ್ಯವಾಗಿ, ಪ್ರಯೋಗವನ್ನು ನಡೆಸಿದ ಜನಸಂಖ್ಯೆ ಮತ್ತು ಆ ಸಮಯದಲ್ಲಿ ಪ್ರಚಲಿತದಲ್ಲಿರುವ ವೈರಸ್ ರೂಪಾಂತರದ ಪ್ರಕಾರವು ಇಂದಿನ ಸೆನಾರಿಯೊಗಳಿಗಿಂತ ಸಂಪೂರ್ಣವಾಗಿ ಭಿನ್ನವಾಗಿದೆ. ಜನಸಂಖ್ಯೆಯ ಬಹುಪಾಲು ಭಾಗವು ಈಗ ಲಸಿಕೆಯನ್ನು ಪಡೆದಿದೆ.ಆದರೂ ಕೊರೊನಾ ರೋಗಿಗಳು ಕಡಿಮೆಯಾಗಿಲ್ಲ ಎಂದು ತಿಳಿಸಿದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಶರಾವತಿ ಹಿನ್ನೀರು ಬಳಕೆ:ಮಣ್ಣಿನ ಕಾನೂನು ಪಾಲಿಸಿ-ಹರತಾಳು ಹಾಲಪ್ಪ

0

ಸಾಗರ ತಾಲೂಕಿನ ಕಾರ್ಗಲ್ ಸುತ್ತಮುತ್ತಲ ಶರಾವತಿ ಹಿನ್ನೀರು
ಅಲ್ಲಿನ ಜನಮಾನಸದ ಜೀವಜಲ. ಕುಡಿಯುವುದಕ್ಕೆಂದು ಗ್ರಾಮೀಣರು ಪಂಪ್ ಸೆಟ್ ಅಳವಡಿಸಿದ್ದಾರೆ.
ಕೆಪಿಸಿ ವ್ಯಾಪ್ತಿಯ ನೀರಿನಲ್ಲಿ ಪಂಪ್ ಸೆಟ್ ಅಳವಡಿಸಬಾರದೆಂದು ಜನಕ್ಕೆ ನಿಗಮದಿಂದ ವರಾತ ಶುರುವಾಗಿತ್ತು.ಅಷ್ಟಕ್ಕೇ ಸುಮ್ಮನಾಗದ ನಿಗಮದವರು ಕೆಪಿಸಿ ಆಸ್ಪತ್ರೆಗೆ ಕೆಪಿಸಿ ಸಿಬ್ಬಂದಿ ಹೊರತಾಗಿ ಚಿಕಿತ್ಸೆಗೂ ಬರಬಾರದೆಂದು ತಾಕಿತು ಮಾಡಿರುವುದು ಶಾಸಕರ ಕಿವಿಗೆ ಬಿದ್ದಿದೆ.ಕೂಡಲೇ ಶಾಸಕ ಶ್ರೀಹರತಾಳು ಹಾಲಪ್ಪನವರು ಈ ಜ್ವಲಂತ ಸಮಸ್ಯೆಗೆ ಸ್ಪಂದಿಸಿದ್ದಾರೆ.
ಇಂಜಿನಿಯರಿಂಗ್ ಮುಖ್ಯಸ್ಥರ ಕಚೇರಿ ಮುಂದೆ ಧರಣಿ ಕೂರಲು ಸಜ್ಜಾಗಿ ಹೊರಟರು. ಅದಕ್ಕೆ ಮುನ್ನ ಇಂಜಿನಿಯರ್ ಸಂಗಡ ಚರ್ಚಿಸಿದರು.
ಮಣ್ಣಿನ ಕಾನೂನು ಅನ್ವಯ ಕೆಲಸ‌ ಮಾಡಬೇಕು.ಇಲ್ಲಿನ ಜನ ಮನೆಮಾರು ತ್ಯಾಗಮಾಡಿ ವಿದ್ಯುತ್ ಉತ್ಪಾದನೆಗೆ ಅನುವು ಮಾಡಿದ್ದಾರೆ. ಅವರಿಗೆ ಈ ರೀತಿಯ ಪರಕೀಯರಂತೆ ವರ್ತಿಸಬೇಡಿ. ಅವರಿಂದಲೇ ನಿಗಮದವರಿಗೆ ಅನ್ನ ಸಿಗುತ್ತಿದೆ. ಹೊಂದಿಕೊಂಡು ಹೋಗಬೇಕು ಎಂದು
ಕಿವಿಮಾತು ಹೇಳಿದರು.

ಶಾಸಕರಾದ ಹಾಲಪ್ಪನವರು ಅಧಿಕಾರಿಗಳು ತಮ್ಮ ಸಲಹೆಗೆ ಒಪ್ಪಿದ್ದಾರೆ.ಧರಣಿಯನ್ನ ಹಿಂಪಡೆಯಲಾಗಿದೆ
ಎಂದರು.
ಇದಕ್ಕೂ ಮುನ್ನ ಸದರಿ ವಿಷಯಗಳ ಬಗ್ಗೆ ಇಂಧನ ಸಚಿವರಾದ ಸುನಿಲ್ ಕುಮಾರ್ ಅವರೊಂದಿಗೆ ಫೋನ್ ಕರೆ ಮೂಲಕ ಮಾತನಾಡಿದರು. ಅಧಿಕಾರಿಗಳು ಸಾರ್ವಜನಿಕರಿಗೆ ನೀಡಿರುವ ಕಿರುಕುಳದ ಬಗ್ಗೆ ಮನವರಿಕೆ ಮಾಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಟಿ.ಡಿ. ಮೇಘರಾಜ್, ಪ.ಪಂ. ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು,ಪಕ್ಷದ ಮುಖಂಡರು, ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಕೋವಿಡ್ ಸ್ಥಿತಿಗತಿ ಪ್ರಧಾನಿ ಮಹತ್ವದ ಸಭೆ

0

ಕೊರೋನಾ ಸೋಂಕು ಗಣನೀಯವಾಗಿ ಹೆಚ್ಚಳವಾಗಿದೆ ದೇಶದಾದ್ಯಂತ ಮೂರನೇ ಅಲೆಯ ಆತಂಕ ಮೂಡಿಸಿರುವ ನಡುವೆಯೇ ಮಾನ್ಯ ಪ್ರಧಾನಿ ನರೇಂದ್ರ ಮೋದಿ ಅವರು ಕೋವಿಡ್-19 ಸ್ಥಿತಿಗತಿ ಕುರಿತು ಮಹತ್ವದ ಸಭೆ ನಡೆಸಿದ್ದಾರೆ.

ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದಾರೆ.” ಮಾಸ್ಕ್ ಧರಿಸುವುದನ್ನು ದೇಶದಾದ್ಯಂತ ಕಡ್ಡಾಯಗೊಳಿಸಬೇಕು. ಸಾಮಾಜಿಕ ಅಂತರ ಪಾಲನೆ ಮತ್ತು ಜಿಲ್ಲಾ ಮಟ್ಟದಲ್ಲಿ ಆರೋಗ್ಯ ಸೇವೆಯ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಕಡೆಗೆ ಹೆಚ್ಚು ಗಮನ ಹರಿಸಬೇಕು. ಸೌಮ್ಯ ರೋಗಲಕ್ಷಣಗಳೇ ಹೆಚ್ಚಿರುವ ಕಾರಣ ಹೋಂ ಐಸೋಲೇಶನ್ ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳ ಪ್ರಸರಣಕ್ಕೆ ಕಡಿವಾಣ ಹಾಕಬೇಕು ಎಂದು ಮೋದೀಜಿ ಅವರು ತಿಳಿಸಿದ್ದಾರೆ.

ಬಹಳ ಮುಖ್ಯವಾಗಿ ಮಕ್ಕಳಿಗೆ ಕೋರೋನಾ ಲಸಿಕೆ ನೀಡಲಾಗುತ್ತಿರುವ, ಅಭಿಯಾನದ ವೇಗ ಹೆಚ್ಚಿಸಬೇಕು. ಶೀಘ್ರ ವೇ ದೇಶದಲ್ಲಿ, ಎಲ್ಲಾ ಮಕ್ಕಳಿಗೂ ಒಂದು ಲಸಿಕೆ ಡೋಸ್ ಆದರೂ ಪೂರ್ಣಗೊಳಿಸುವಂತೆ ಆರೋಗ್ಯ ಸಚಿವಾಲಯಕ್ಕೆ ಸೂಚನೆ ನೀಡಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ವೈದ್ಯಕೀಯ ಕೋರ್ಸ್ ಕೌನ್ಸಿಲಿಂಗ್ ಆರಂಭ- ಡಾ.ಮಾಂಡವೀಯ

0

ಕೇಂದ್ರ ಆರೋಗ್ಯ ಸಚಿವ ಮನ್ ಸುಖ್ ಮಾಂಡವೀಯ ಅವರು ವೈದ್ಯಕೀಯ ಕೋರ್ಸ್ ಪ್ರವೇಶಕ್ಕಾಗಿ ನೀಟ್ ಪಿಜಿ ಕೌನ್ಸಿಲಿಂಗ್ ಪ್ರಕ್ರಿಯೆ ಜನವರಿ 12ರಂದು ಆರಂಭವಾಗಲಿದೆ ಎಂದು ತಿಳಿಸಿದ್ದಾರೆ.

ಜನವರಿ ಏಳರಂದು ಈ ಕುರಿತಂತೆ ಮಧ್ಯಂತರ ಆದೇಶ ನೀಡಿದ ಸುಪ್ರೀಂಕೋರ್ಟ್ 2021-22ನೇ ಶೈಕ್ಷಣಿಕ ಸಾಲಿಗೆ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ನೀಟ್-ಪಿಜಿ ಕೌನ್ಸೆಲಿಂಗ್ ಆರಂಭಿಸಲು ಅನುಮೋದನೆ ನೀಡಿತು.

ನೀಟ್-ಪಿಜಿ ಪ್ರವೇಶಾತಿಗೆ ಇತರೇ ಹಿಂದುಳಿದ ವರ್ಗಗಳಿಗೆ ಶೇಕಡ 27ರಷ್ಟು ಮತ್ತು ಇಡಬ್ಲ್ಯುಎಸ್ ವರ್ಗಗಳಿಗೆ ಶೇಕಡ 10ರಷ್ಟು ಮೀಸಲಾತಿ ಕಲ್ಪಿಸುವ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿತ್ತು.

“ಸ್ಥಾನಿಕ ವೈದ್ಯರಿಗೆ ಭರವಸೆ ನೀಡಿದ್ದಂತೆ, ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ವೈದ್ಯಕೀಯ ಕೌನ್ಸೆಲಿಂಗ್ ಜನವರಿ 12ರಿಂದ ಕೌನ್ಸೆಲಿಂಗ್ ಪ್ರಕ್ರಿಯೆ ಆರಂಭಿಸಲಿದೆ” ಎಂದು ಸಚಿವ ಮಾಂಡವೀಯ ಅವರು ಟ್ವೀಟ್ ಮಾಡಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಪೊಟಾಷ್ ರಸಗೊಬ್ಬರ ದರ ಕೊಂಚ ಏರಿಕೆ-ಕೃಷಿ ಇಲಾಖೆ

0

ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾವಸ್ತುಗಳ‌‌ ಬೆಲೆ ಏರಿಕೆಯಿಂದಾಗಿ ಬಂದರಿನಲ್ಲಿ ರಸಗೊಬ್ಬರ ನಿರ್ವಹಣಾ ವೆಚ್ಚ ಹೆಚ್ಚಾದ ಕಾರಣ ಪೋಟ್ಯಾಷ್ ರಸಗೊಬ್ಬರಗಳ ಬೆಲೆ ಕೊಂಚ ಏರಿಕೆಯಾಗಿದೆ ಎಂದು ಕೃಷಿ ಇಲಾಖೆ ಸ್ಪಷ್ಟಪಡಿಸಿದೆ.
ಎಮ್.ಒ.ಪಿ ರಸಗೊಬ್ಬರದ ಪರಿಷ್ಕೃತ ಗರಿಷ್ಕೃ ಮಾರಾಟ ಬೆಲೆ ಪ್ರತಿ ಚೀಲಕ್ಕೆ ರೂ . 1700. ದೇಶದಲ್ಲಿ ಶೇಕಡ 100 ರಷ್ಟು ಎಮ್.ಒ.ಪಿ ರಸಗೊಬ್ಬರವನ್ನು ಆಮದು ಮಾಡಿಕೊಳ್ಳುತ್ತಿದ್ದು, ರಸಗೊಬ್ಬರದ ಗರಿಷ್ಠ ಮಾರಾಟ ದರವನ್ನು ಸರಬರಾಜು ಸಂಸ್ಥೆಗಳಿಂದಲೇ ನಿಗಧಿ ಪಡಿಸಲಾಗುತ್ತದೆ . ಕಳೆದ ನಾಲ್ಕು ತಿಂಗಳುಗಳಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ರಸಗೊಬ್ಬರ ಮಾರುಕಟ್ಟೆಯಲ್ಲಿ ಕಚ್ಚಾವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದಂತೆ ಎಮ್.ಒ.ಪಿ ರಸಗೊಬ್ಬರದ ಬೆಲೆಯು ಸಹ ಏರಿಕೆಯಾಗಿರುತ್ತದೆ.ಇದರಿಂದ ಎಮ್.ಒ.ಪಿ ರಸಗೊಬ್ಬರದ ಸರಬರಾಜಿನಲ್ಲಿ ವ್ಯತ್ಯಯವಾಗಿರುತ್ತದೆ . ಆದಾಗ್ಯೂ ಇಂಡಿಯನ್ ಪೊಟ್ಯಾಷ್ ಲಿಮಿಟೆಡ್ ಸಂಸ್ಥೆಯು ಅಂತಾರಾಷ್ಟ್ರೀಯ ಸರಬರಾಜುದಾರರೊಂದಿಗೆ ಎಮ್.ಒ.ಪಿ ರಸಗೊಬ್ಬರ ಆಮದು ಮಾಡಿಕೊಳ್ಳಲು ಒಪ್ಪಂದ ಮಾಡಿಕೊಂಡಿರುತ್ತದೆ . ಪ್ರಸ್ತುತವಿರುವ ರಸಗೊಬ್ಬರದ ವಿನಿಮಯ ದರ, ಹೊಸ ಆಮದು ಬೆಲೆ,ಕಸ್ಟಮ್ಸ್ ಸುಂಕ ಹಾಗೂ ಜಿ.ಎಸ್.ಟಿ , ಬಂದರಿನಲ್ಲಿ ರಸಗೊಬ್ಬರದ ನಿರ್ವಹಣೆಯ ಇತರ ವೆಚ್ಚಗಳು ಸೇರಿ ಒಟ್ಟು ದರವು ಪ್ರತಿ ಟನ್ ಗೆ ರೂ . 40,147 ಎಂದು ನಿಗಧಿಪಡಿಸಲಾಗಿದೆ . ಇದರಲ್ಲಿ ಕೇಂದ್ರ ಸರ್ಕಾರವು ಪ್ರತಿ ಟನ್ ಎಂ.ಒ.ಪಿ ಗೆ ನೀಡುವ ರಿಯಾಯಿತಿ ದರ ರೂ . 6,070 ಹೊರತು ಪಡಿಸಿದಲ್ಲಿ ಪ್ರತಿ ಟನ್ನಿನ ಮಾರಾಟ ದರವು ರೂ . 34,000 ಆಗುತ್ತದೆ . ಹಾಗಾಗಿ ಪ್ರತಿ ಚೀಲದ ದರವು ರೂ . 1700 ಆಗಿರುತ್ತದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಇಲಾಖೆ ತಿಳಿಸಿದೆ.