Saturday, February 14, 2026
Saturday, February 14, 2026
Home Blog Page 1769

ಶಿವಮೊಗ್ಗದಲ್ಲಿ ಬೂಸ್ಟರ್ ಡೋಸ್ ಲಸಿಕೆ ಅಭಿಯಾನ

0

ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಸಿಮ್ಸ್) ನಲ್ಲಿ ಇಂದು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಸ್.ಈಶ್ವರಪ್ಪ ಇವರು ಕೋವಿಡ್-19 ಮುನ್ನೆಚ್ಚರಿಕೆ(ಬೂಸ್ಟರ್)ಡೋಸ್ ಲಸಿಕಾಕರಣಕ್ಕೆ ಚಾಲನೆ ನೀಡಿದರು. ಈ ವೇಳೆ ಅವರು ಮಾತನಾಡಿ, ಭಾರತ ಸರ್ಕಾರದ ನಿರ್ದೇಶನದಂತೆ ಜಿಲ್ಲೆಯಾದ್ಯಂತ ಜ.10 ರಿಂದ ಮೊದಲನೇ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಮತ್ತು 60 ವರ್ಷ ಮೇಲ್ಪಟ್ಟ ಸಹ ಅಸ್ವಸ್ಥತೆ(ಕೋಮಾರ್ಬಿಡಿಟಿ) ಹೊಂದಿರುವ ಫಲಾನುಭವಿಗಳಿಗೆ ಕೋವಿಡ್ 19 ಬೂಸ್ಟರ್ ಡೋಸ್ ಲಸಿಕೆ ನೀಡಲಾಗುತ್ತಿದ್ದು ಎಲ್ಲ ಅರ್ಹರು ಈ ಬೂಸ್ಟರ್ ಡೋಸ್ ಪಡೆಯಬೇಕೆಂದು ಕರೆ ನೀಡಿದರು.

ಆರ್‍ಸಿಹೆಚ್‍ಓ ಡಾ.ನಾಗರಾಜನಾಯ್ಕ ಕಾರ್ಯಕ್ರಮದ ನಂತರ ಮಾತನಾಡಿ, ಈಗಾಗಲೇ ಲಸಿಕೆ ಪಡೆದಿರುವ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷ ಮೇಲ್ಪಟ್ಟ ಸಹ ಅಸ್ವಸ್ಥತೆ ಹೊಂದಿರುವ ಫಲಾನುಭವಿಗಳು ಕೋವಿಡ್ ಪೋರ್ಟಲ್‍ನಲ್ಲಿ ನೊಂದಾಯಿಸಿದಂತೆ 2 ನೇ ಡೋಸ್ ಪಡೆದ 09 ತಿಂಗಳ(39 ವಾರಗಳು) ನಂತರ ಬೂಸ್ಟರ್ ಡೋಸ್ ಪಡೆಯಲು ಅರ್ಹರಿರುತ್ತಾರೆ.

ಈ ಫಲಾನುಭವಿಗಳು ಈ ಮುಂಚೆ ಮೊದಲ ಹಾಗೂ ಎರಡನೇ ಡೋಸ್ ಕೋವಿಶೀಲ್ಡ್ ಪಡೆದಿದ್ದಲ್ಲಿ ಈಗ ಬೂಸ್ಟರ್ ಡೋಸ್ ಕೂಡ ಕಡ್ಡಾಯವಾಗಿ ಕೋವಿಶೀಲ್ಡನ್ನೇ ಪಡೆಯತಕ್ಕದ್ದು. ಮುಂಚೆ ಕೋವ್ಯಾಕ್ಸಿನ್ ಪಡೆದಿದ್ದಲ್ಲಿ ಬೂಸ್ಟರ್ ಡೋಸ್ ಕೂಡ ಕಡ್ಡಾಯವಾಗಿ ಕೋವ್ಯಾಕ್ಸಿನ್ ತೆಗೆದುಕೊಳ್ಳಬೇಕು.

ಬೂಸ್ಟರ್ ಡೋಸ್‍ಗಾಗಿ ಯಾವುದೇ ಹೊಸ ಫಲಾನುಭವಿಗಳನ್ನು ಕೋವಿನ್ ಪೋರ್ಟಲ್‍ನಲ್ಲಿ ನೋಂದಾಯಿಸುವಂತಿಲ್ಲ. ಜಿಲ್ಲೆಯ ಎಲ್ಲ ಸರ್ಕಾರಿ ಲಸಿಕಾ ಕೇಂದ್ರಗಳಲ್ಲಿ ಉಚಿತವಾಗಿ ಲಸಿಕಾಕರಣ ನಡೆಸಲಾಗುತ್ತದೆ.

ಗುರಿ ಮತ್ತು ಫಲಾನುಭವಿಗಳ ವಿವರ : ಆರೋಗ್ಯ ಕಾರ್ಯಕರ್ತರಿಗೆ 23124 ಮತ್ತು ಮುಂಚೂಣಿ ಕಾರ್ಯಕರ್ತರಿಗೆ 18154 ಲಸಿಕೆ ನೀಡುವ ಗುರಿ ಹೊಂದಲಾಗಿದೆ.
ಆರೋಗ್ಯ ಕಾರ್ಯಕರ್ತೆಯರಿಗೆ 1ನೇ ಡೋಸ್ 23124, 2ನೇ ಡೋಸ್ 22573 ಲಸಿಕೆ ನೀಡಲಾಗಿದೆ. ಮುಂಚೂಣಿ ಕಾರ್ಯಕರ್ತೆಯರಿಗೆ 1ನೇ ಡೋಸ್ 18152, 2ನೇ ಡೋಸ್ 17822 ಲಸಿಕೆ ನೀಡಲಾಗಿದೆ. 18 ರಿಂದ 44 ವರ್ಷ ವಯಸ್ಸಿನ ನಾಗರೀಕರಿಗೆ 1ನೇ ಡೋಸ್ 690891, 2ನೇ ಡೋಸ್ 516566 ಲಸಿಕೆ ನೀಡಲಾಗಿದೆ. 45 ರಿಂದ 59 ವರ್ಷ ವಯಸ್ಸಿನ ನಾಗರಿಕರಿಗೆ 1ನೇ ಡೋಸ್ 310132, 2ನೇ ಡೋಸ್ 297041 ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರೀಕರಿಗೆ 1ನೇ ಡೋಸ್ 204831, 2ನೇ ಡೋಸ್ 179185 ಲಸಿಕೆ ನೀಡಲಾಗಿದೆ. ಮತ್ತು 15 ರಿಂದ 17 ವರ್ಷ ವಯಸ್ಸಿನ ಮಕ್ಕಳಿಗೆ 1ನೇ ಡೋಸ್ 44482 ಲಸಿಕೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕರಾದ ಆಯನೂರು ಮಂಜುನಾಥ್, ಡಿ.ಎಸ್.ಅರುಣ್, ಮಹಾನಗರಪಾಲಿಕೆ ಮಹೌಪೌರರಾದ ಸುನೀತಾ ಅಣ್ಣಪ್ಪ, ಉಸ್ತುವಾರಿ ಸಚಿವರ ಧರ್ಮಪತ್ನಿ ಜಯಲಕ್ಷ್ಮಿ,, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ದಿ ನಿಗಮದ ಉಪಾಧ್ಯಕ್ಷ ಎಸ್.ದತ್ತಾತ್ರಿ, ಪಾಲಿಕೆ ಆಡಳಿತ ಪಕ್ಷದ ನಾಯಕ ಎಸ್.ಎನ್.ಚನ್ನಬಸಪ್ಪ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಸಿಮ್ಸ್ ನಿರ್ದೇಶಕ ಡಾ.ಸಿದ್ದಪ್ಪ, ಮೆಗ್ಗಾನ್ ಬೋಧನಾ ಜಿಲ್ಲಾಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಶ್ರೀಧರ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಸಿದ್ದನಗೌಡ, ಇತರರು ಉಪಸ್ಥಿತರಿದ್ದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಅಭಿವೃದ್ಧಿ ಅಗತ್ಯವಿದೆ:ಪರಿಸರ ರಕ್ಷಣೆಗೋಸ್ಕರ ವಿನಾಯಿತಿ ಇಲ್ಲ

0

ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯು ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯಕ್ಕೆ ಪಶ್ಚಿಮ ಘಟ್ಟದಲ್ಲಿರುವ ಪರಿಸರ ಸೂಕ್ಷ್ಮ ಪ್ರದೇಶಗಳಿಗೆ ಅನ್ವಯಿಸಿ ಅಧಿಸೂಚನೆಯನ್ನು ಅಂತಿಮಗೊಳಿಸಲು ಇನ್ನೂ ಆರು ತಿಂಗಳು ಕಾಲಾವಕಾಶ ನೀಡಿದೆ.

ಪರಿಸರ ಸ್ನೇಹಿ ವಲಯಗಳಿಗೆ ಸಂಬಂಧಿಸಿದಂತೆ ಪ್ರಸ್ತುತ ಇರುವ ಅಧಿಸೂಚನೆ ಕುರಿತಂತೆ ದುಸ್ಥಿತಿ ವರದಿ ಸದ್ಯ ಲಭ್ಯವಿಲ್ಲ ಎಂದು ಎನ್ ಜಿ ಟಿ ಪ್ರಧಾನ ಪೀಠದ ನ್ಯಾಯಮೂರ್ತಿ ಆದರ್ಶ ಕುಮಾರ್ ಗೊಯಲ್ ಅವರು ತಿಳಿಸಿದ್ದಾರೆ.

ಆದಷ್ಟು ಶೀಘ್ರ ಅಂದರೆ ಆರು ತಿಂಗಳೊಳಗೆ ಅಧಿಸೂಚನೆಯನ್ನು ಪೂರ್ಣಗೊಳಿಸಬೇಕು ಎಂದು ಸೂಚಿಸಿದ್ದಾರೆ. ಅಧಿಸೂಚನೆಯನ್ನು ಅಂತಿಮಗೊಳಿಸುವ ಅನಗತ್ಯ ವಿಳಂಬ ವಾಗುತ್ತಿದೆ ಎಂದು ಗೋವಾ ಫೌಂಡೇಷನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಪೀಠ ಈ ಗಡುವು ನಿಗದಿಪಡಿಸಿದೆ.

ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯು ಅಭಿವೃದ್ಧಿ ಅಗತ್ಯವಿದೆ ಎಂದು ವಾದಿಸುವವರಿದ್ದಾರೆ ವಿನಾಯಿತಿ ಕೋರಿ ಹೆಚ್ಚು ಬೇಡಿಕೆ ಬರುತ್ತಿದೆ ಆದರೆ ಪರಿಸರ ರಕ್ಷಣೆಯ ಅಗತ್ಯ ಪ್ರತಿಪಾದಿಸುವವರು ಇಂಥ ಬೇಡಿಕೆಗಳಿಗೆ ಅವಕಾಶ ನೀಡುತ್ತಿಲ್ಲ. ಕಳೆದ ಎಂಟು ವರ್ಷದಿಂದಲೂ ಇಂತಹ ಬೇಡಿಕೆ ಕುರಿತು ಮನವಿಗಳ ಬಾಕಿ ಉಳಿದಿತ್ತು ಇತ್ಯರ್ಥಗೊಳಿಸಬೇಕಾಗಿದೆ ಎಂದು ತಿಳಿಸಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ರಾಜ್ಯದಲ್ಲಿ ಕೋವಿಡ್ ಮರಣ ಪ್ರಮಾಣ ದರ‌ ಶೇ0.03

0

ರಾಜ್ಯದಲ್ಲಿ ಕೋವಿಡ್ ಪ್ರಕರಣ ಹೆಚ್ಚಾಗಿದ್ದು, ಭಾನುವಾರ ರಾಜ್ಯದಲ್ಲಿ ಬರೋಬ್ಬರಿ 12 ಸಾವಿರ ಮಂದಿಯಲ್ಲಿ ಸೋಂಕು ಪತ್ತೆಯಾಗಿವೆ.

ಒಂದು ದಿನದ ಅವಧಿಯಲ್ಲಿ 1.89 ಲಕ್ಷ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ. ಅದರಲ್ಲಿ ಶೇ.6.33ರಷ್ಟು ಸೋಂಕಿತರ ಪ್ರಮಾಣದಲ್ಲಿ ಏರಿಕೆಯಾಗಿದೆ. ಈ ತಿಂಗಳ 9 ದಿನಗಳಲ್ಲಿ 44,621 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಈವರೆಗೆ ವರದಿಯಾದಾಗ ಒಟ್ಟು ಪ್ರಕರಣಗಳ ಸಂಖ್ಯೆ 30.51 ಲಕ್ಷ ದಾಟಿದೆ.

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಹೊಸದಾಗಿ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಬೆಂಗಳೂರಿನಲ್ಲಿ 9,020 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಮೈಸೂರಿನಲ್ಲಿ 398, ಉಡುಪಿಯಲ್ಲಿ 340, ದಕ್ಷಿಣ ಕನ್ನಡದಲ್ಲಿ 298, ಮಂಡ್ಯದಲ್ಲಿ 261, ಶಿವಮೊಗ್ಗದಲ್ಲಿ 198, ತುಮಕೂರಿನಲ್ಲಿ 190, ಹಾಸನದಲ್ಲಿ 182, ಧಾರವಾಡದಲ್ಲಿ 147, ಬಳ್ಳಾರಿಯಲ್ಲಿ 107 ಹಾಗೂ ಬೆಳಗಾವಿಯಲ್ಲಿ 105 ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಗಳಲ್ಲಿ ನೂರಕ್ಕಿಂತ ಕಡಿಮೆ ಸಂಖ್ಯೆಯಲ್ಲಿ ಹೊಸ ಪ್ರಕರಣಗಳು ಪತ್ತೆಯಾಗಿವೆ.

ರಾಜ್ಯದಲ್ಲಿ 901 ಮಂದಿ ಕೋವಿಡ್ ನಿಂದ ಚೇತರಿಸಿಕೊಂಡಿದ್ದು, ಗುಣಮುಖರಾದವರ ಒಟ್ಟು ಸಂಖ್ಯೆ 29.63 ಲಕ್ಷ ದಾಟಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ ಮತ್ತಷ್ಟು ಹೆಚ್ಚಳವಾಗಿದ್ದು, 49,602ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ 40,570 ಸಕ್ರಿಯ ಪ್ರಕರಣಗಳಿವೆ. ರಾಜ್ಯದಲ್ಲಿ ಕೋವಿಡ್ ನಿಂದಾಗಿ ಮರಣ ಪ್ರಮಾಣ ದರವು ಶೇ.0.03 ರಷ್ಟು ವರದಿಯಾಗಿದೆ. ಈವರೆಗೆ ಕೋವಿಡ್ ಗೆ ಸಾವಿಗೀಡಾದವರ ಒಟ್ಟು ಸಂಖ್ಯೆ 38,370ಕ್ಕೆ ಏರಿಕೆಯಾಗಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ದೇಶಾದ್ಯಂತ 1.59 ಲಕ್ಷ ಕೋವಿಡ್ ಪ್ರಕರಣ ಪತ್ತೆ

0

24 ಗಂಟೆಯಲ್ಲಿ ದೇಶಾದ್ಯಂತ 1.59 ಲಕ್ಷ ಕೋವಿಡ್ ಪ್ರಕರಣ ದೃಢಪಟ್ಟಿದೆ. ಇದು 224 ದಿನಗಳಲ್ಲೇ ದಿನವೊಂದರ ಗರಿಷ್ಠ ಪ್ರಮಾಣವಾಗಿದೆ. ಈ ಪೈಕಿ 552 ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ 3,623ಕ್ಕೆ ಹೆಚ್ಚಾಗಿದೆ.

ಮಹಾರಾಷ್ಟ್ರದಲ್ಲಿ ಓಮಿಕ್ರಾನ್ ಗರಿಷ್ಠ ಪ್ರಮಾಣ 1,009 ಪತ್ತೆಯಾಗಿವೆ. ಉಳಿದಂತೆ ದೆಹಲಿಯಲ್ಲಿ 513, ಕರ್ನಾಟಕ 441, ಕೇರಳ 33 ಮತ್ತು ಗುಜರಾತ್ ನಲ್ಲಿ 204 ಪ್ರಕರಣಗಳು ಪತ್ತೆಯಾಗಿವೆ.

ದೇಶದಲ್ಲಿ ಒಟ್ಟು ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 5,90,611ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಮತ್ತೆ 327 ಮಂದಿ ಕೋವಿಡ್ ನಿಂದಾಗಿ ಮೃತಪಟ್ಟಿದ್ದು, ಈವರೆಗೆ ಮೃತ ಪಟ್ಟವರ ಸಂಖ್ಯೆ 4,83,790ಕ್ಕೆ ಏರಿಕೆಯಾಗಿದೆ.

ಈವರೆಗೆ ಮಹಾರಾಷ್ಟ್ರದಲ್ಲಿ ಗರಿಷ್ಠ 1,41,627 , ಕೇರಳ 49,547 ಹಾಗೂ ಕರ್ನಾಟಕದಲ್ಲಿ 36,843 ಮಂದಿ ಕೋವಿಡ್ ನಿಂದಾಗಿ ಮೃತಪಟ್ಟಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಸಾಗರ ತಾಲೂಕಿನಲ್ಲಿ ನಿರೀಕ್ಷೆಗೂ ಮೀರಿದ ಯೋಜನೆಗಳು

0

ಕಚ್ಚಿಗೆಬೈಲು-ವಿಜಾಪುರ ಮಾರ್ಗದಲ್ಲಿ ನೆಲಗಳಲೆವರೆಗೆ 1.5 ಕಿ.ಮೀ. ರಸ್ತೆ ಅಭಿವೃದ್ಧಿಯಾಗಲಿದೆ. 50 ರೂ.ಲಕ್ಷ ವೆಚ್ಚದ ಸೊಪ್ಪಿನಮಲ್ಲೆ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಹೆಸರಿಗಷ್ಟೇ ರಸ್ತೆ ಅಭಿವೃದ್ಧಿ ಮಾತ್ರವಲ್ಲ. 6 ವರ್ಷದವರೆಗೆ ಸಣ್ಣ ಗುಂಡಿ ಬಿದ್ದರೂ ನಿರ್ವಹಣೆ ಮಾಡಬೇಕು ಎಂದು ಶಾಸಕರಾದ ಎಚ್.ಹಾಲಪ್ಪ ಹರತಾಳು ಅವರು ತಿಳಿಸಿದ್ದಾರೆ.
ಹೊಸನಗರ ತಾಲೂಕಿನ ವಿಜಾಪುರದಲ್ಲಿ 1.25 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು.
ನನ್ನ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿದ ಯೋಜನೆ ತರಲಾಗಿದೆ. ಪಡಗುಪ್ಪ ಸೇತುವೆ, ಹಸಿರುಮಕ್ಕಿ ಸೇತುವೆ ಸೇರಿ ಬೃಹತ್ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಮುಂದಿನ ದಿನಗಳಲ್ಲೂ ಹೆಚ್ಚಿನ ಕಾಮಗಾರಿಗಳು ಅನುಷ್ಠಾನಗೊಳ್ಳಲಿದೆ ಎಂದರು.
ವಾರಂತ್ಯ ಕರ್ಫ್ಯೂ ಬಗ್ಗೆ ಜನರಲ್ಲಿ ಸಹಜವಾಗಿ ವಿರೋಧವಿದೆ. ಜನ ಹೇಳುತ್ತಾರೆ ಎಂದಮಾತ್ರಕ್ಕೆ ಸುಮ್ಮನಿರಲಾಗುವುದಿಲ್ಲ. ತಜ್ಞರ ಸಮಿತಿ ವರದಿಯನ್ನು ಪಾಲಿಸಬೇಕು. ಜನರ ಮೇಲೆ ಸರ್ಕಾರದ ಜವಾಬ್ದಾರಿ ಇದ್ದು, ತಜ್ಞರೊಂದಿಗೆ ಸಮಾಲೋಚಿಸಿ ಸೂಕ್ತ ಕ್ರಮ ಕೈಗೊಂಡಿದೆ. ಗ್ರಾಮೀಣ ಪ್ರದೇಶದಲ್ಲಿ ಅಗತ್ಯವಿಲ್ಲ. ಆದರೆ ನಗರ ಪ್ರದೇಶದಲ್ಲಿ ಗಮನಹರಿಸುವುದು ಸೂಕ್ತ ಎಂದರು.
ಮಾರುತಿಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಚಿದಂಬರ, ಸದಸ್ಯರಾದ ಗಣೇಶ್, ಸುಮಾ ಸುರೇಶ್, ಶಂಕರ ಶೆಟ್ಟಿ , ತಾಲೂಕು ಬಿಜೆಪಿ ಅಧ್ಯಕ್ಷ ಗಣಪತಿ ಬೆಳಗೋಡು ಮತ್ತು ಇನ್ನಿತರರು ಉಪಸ್ಥಿತರಿದ್ದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಸರ್ಕಾರಿ ಶಾಲೆ ಸಮಾಜದ ಆಸ್ತಿ

0

ಹುಟ್ಟಿದ ಊರಿನ ಋಣವನ್ನು ತೀರಿಸುವ ಉದ್ದೇಶದಿಂದ ಕುಗ್ರಾಮದಿಂದ ಬರುವ ಶಾಲಾ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗುವಂತೆ ಬ್ಯಾಗ್, ಪುಸ್ತಕ, ಇನ್ನಿತರ ಶೈಕ್ಷಣಿಕ ಸಾಮಗ್ರಿಗಳನ್ನು ಸಾಗರ ಎಜುಕೇಶನ್ ಟ್ರಸ್ಟ್ ವತಿಯಿಂದ ನೀಡಲಾಗುತ್ತಿದೆ ಎಂದು ಟ್ರಸ್ಟ್ ಅಧ್ಯಕ್ಷ ಸಂತೋಷ್ ಫ್ರಾನ್ಸಿಸ್ ತಿಳಿಸಿದ್ದಾರೆ.
ಲಿಂಗನಮಕ್ಕಿ ಸರ್ಕಾರಿ ಶಾಲೆ ಒಂದು ಕಾಲದಲ್ಲಿ ಮೆರೆದಿದ್ದ ಶಾಲೆ. ಖಾಸಗಿ ಶಾಲೆಗಳ ಸವಾಲಿನ ನಡುವೆ ದಾಖಲಾತಿ ಕೊರತೆ, ಮೂಲಸೌಕರ್ಯಗಳ ಸಮಸ್ಯೆಗಳನ್ನು ಎದುರಿಸುತ್ತಿದೆ. ಇದನ್ನು ನಾಗರಿಕ ಸಮಾಜ ನಮ್ಮ ಆಸ್ತಿ ಎಂದು ಭಾವಿಸಿ ಮುನ್ನಡೆಸಬೇಕಾದ ಅಗತ್ಯವಿದೆ. ಈ ನಿಟ್ಟಿನಲ್ಲಿ ಸರ್ಕಾರಿ ಶಾಲೆಯನ್ನು ಉಳಿಸಿ ಬೆಳೆಸುವ ಕೆಲಸವನ್ನು ಮಾಡಲಿದೆ ಎಂದು ಅವರು ತಿಳಿಸಿದರು.
25 ವರ್ಷಗಳಿಂದ ಶಿಕ್ಷಕರಾಗಿದ್ದ ವರ್ಗಾವಣೆಯಾದ ಮುಖ್ಯಶಿಕ್ಷಕ ಹಿರಣ್ಣಯ್ಯ ಅವರನ್ನು ಬೀಳ್ಕೊಡಲಾಯಿತು.
ಎಸ್ ಡಿಎಂಸಿ ಅಧ್ಯಕ್ಷ ಮೆಸ್ತಾ , ಪಂಚಾಯಿತಿ ಸದಸ್ಯ ನಾಗರಾಜ್ ವಾಟೇಮಕ್ಕಿ, ಗ್ರಾಮ ಪಂಚಾಯಿತಿ ಸದಸ್ಯ ರಾಮಸ್ವಾಮಿ ಕರಮನೆ, ಟ್ರಸ್ಟ್ ಮುಖ್ಯಸ್ಥರಾದ ಜಾನ್ ಲಿಂಗನಮಕ್ಕಿ,ಎಚ್.ಎಸ್.ಸಾದಿಖ್,ಕೆಪಿಸಿ ಕಾರ್ಮಿಕ ಸಂಘಟನೆ ಉಪಾಧ್ಯಕ್ಷ ಮೊಹಮ್ಮದ್ ಸದ್ದೂರ್ ಮತ್ತು ಇತರರು ಉಪಸ್ಥಿತರಿದ್ದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ವಸತಿ ರಹಿತ ಪೌರಕಾರ್ಮಿಕರ ಅಳಲು

0

ಸೊರಬ ನಗರದ ಸ್ವಚ್ಛತೆಯಲ್ಲಿ ತೊಡಗಿರುವ ಪೌರಕಾರ್ಮಿಕರಿಗೆ ವಸತಿ ಭಾಗ್ಯ ಇಲ್ಲ. ಆಶ್ರಯಕ್ಕೆ ಮನೆಗಳು ಇಲ್ಲದೆ ಕನಿಷ್ಠ ಬದುಕು ನಡೆಸುತ್ತಿದ್ದಾರೆ.
ಪುರಸಭೆ ವ್ಯಾಪ್ತಿಯ ಅಂಬೇಡ್ಕರ್ ಬಡಾವಣೆಯಲ್ಲಿ 70 ವರ್ಷಗಳ ಹಿಂದೆ ಪೌರಕಾರ್ಮಿಕ ರಿಗಾಗಿ ನಿರ್ಮಿಸಿರುವ ವಸತಿಗೃಹಗಳು ಮಳೆ ಗಾಳಿಗೆ ಬೀಳುವ ಹಂತದಲ್ಲಿದೆ. ಒಡೆದು ಹೋಗಿರುವ ಹೆಂಚು,ಗೆದ್ದಲು ಹಿಡಿದ ಪಕಾಸೆ, ಬಿರುಕು ಗೊಂಡಿರುವ ಗೋಡೆಗಳು,ಶಿಥಿಲಗೊಂಡ ಕಟ್ಟಡಗಳಲ್ಲಿ ಜೀವನ ಸಾಗಿಸುವಂತಾಗಿದೆ.
ಸುಸಜ್ಜಿತ ಶೌಚಾಲಯ ಹಾಗೂ ಸ್ನಾನಗೃಹಗಳಿಲ್ಲ. ಬಾಡಿಗೆ ಮನೆ ಮಾಡಿ ವಾಸ ಮಾಡುವಷ್ಟು ವೇತನವಿಲ್ಲ. ಒಂದು ರೀತಿಯಲ್ಲಿ ಅಲೆಮಾರಿಗಳ ಸ್ಥಿತಿ ಅವರದ್ದಾಗಿದೆ‌.
ಸರ್ಕಾರ ನೀಡುತ್ತಿರುವ ಅಲ್ಪ ವೇತನದಲ್ಲಿ ಸ್ವಂತ ಮನೆ ನಿರ್ಮಿಸಿಕೊಳ್ಳುವಷ್ಟು ಶಕ್ತಿ ನಮಗಿಲ್ಲ.ಶಿಥಿಲಗೊಂಡ ಮನೆಗಳನ್ನು ತೆರವುಗೊಳಿಸಿ ಹೊಸ ಕಟ್ಟಡಗಳನ್ನು ನಿರ್ಮಿಸಿ ಕೊಡಿ ಎಂದು ಪೌರಕಾರ್ಮಿಕ ಮಹಿಳೆ ಚೆಲುವಮ್ಮ ನವರು ಮನವಿ ಮಾಡಿದ್ದಾರೆ.
ಪೌರಕಾರ್ಮಿಕರು ವಾಸವಿರುವ ವಸತಿಗೃಹಗಳು ಶಿಥಿಲಗೊಂಡಿರುವುದು ಗಮನಕ್ಕೆ ಬಂದಿದೆ. ತೆರವು ಗೊಳಿಸಿ ಹೊಸ ಕಟ್ಟಡ ನಿರ್ಮಿಸುವ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು ಎಂದು ಪುರಸಭೆ ಮುಖ್ಯಾಧಿಕಾರಿಗಳಾದ ಮಹೇಂದ್ರ ಬಿ ಅವರು ತಿಳಿಸಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಶಿ‌ವಮೊಗ್ಗ : ಗಾಂಜಾ ಮಾರಾಟ- ಆರೋಪಿಗಳ ದಸ್ತಗಿರಿ

0

ಶಿವಮೊಗ್ಗ ನಗರದಲ್ಲಿ ಮಾದಕ ವಸ್ತು ಗಾಂಜಾ ಮಾರಾಟ ಹಾಗೂ ಸೇವನೆ ಮಾಡುವವರ ವಿರುದ್ಧ ಕಾನೂನು ರಿತ್ಯಾ ಕ್ರಮ ಕೈಗೊಳ್ಳಲು ಪಿಎಸ್ಐ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ಮತ್ತು ಸಿಬ್ಬಂದಿಗಳನ್ನೊಳಗೊಂಡ ವಿಶೇಷ ತಂಡವನ್ನು ರಚಿಸಲಾಗಿದೆ. ಸದರಿ ತಂಡವು ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕಡೇಕಲ್ ಗ್ರಾಮದಲ್ಲಿ ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿ ಆರೋಪಿತರಾದ 1)ದಾದಾಫೀರ್ ಬಚ್ಚಾ, 24 ವರ್ಷ, ಸೂಳೇಬೈಲು, ಶಿವಮೊಗ್ಗ 2)ಮೊಹಮ್ಮದ್ ಹುಸ್ಮಾನ್ ರೊಡ್ಡ, 24 ವರ್ಷ, ಸೂಳೇಬೈಲು, ಶಿವಮೊಗ್ಗ 3)ಸಲೀಂ, 25 ವರ್ಷ, ಸೂಳೇಬೈಲು, ಶಿವಮೊಗ್ಗ 4)ಸಮೀರ್ ಎ, 22 ವರ್ಷ, ಸೂಳೇಬೈಲು, ಶಿವಮೊಗ್ಗ 5)ಮೆಹಬೂಬ್ ಪಾಷಾ, 25 ವರ್ಷ, ಸೂಳೇಬೈಲು, ಶಿವಮೊಗ್ಗ* ರವರನ್ನು ದಸ್ತಗಿರಿ ಮಾಡಿ, ಆರೋಪಿತರ ವಶದಿಂದ ಅಂದಾಜು ಮೌಲ್ಯ 45,000/- ರೂಗಳ *ಒಟ್ಟು 1 ಕೆಜಿ 120 ಗ್ರಾಂ ತೂಕದ ಮಾದಕ ವಸ್ತು ಗಾಂಜಾ ಹಾಗೂ 04 ಮಚ್ಚುಗಳನ್ನು ವಶಪಡಿಸಿಕೊಂಡು ಆರೋಪಿತರ ವಿರುದ್ಧ NDPS ಕಾಯ್ದೆಯಡಿ ಪ್ರಕರಣವನ್ನು ದಾಖಲಿಸಿ ತನಿಖೆ ಕೈಗೊಂಡಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಪಂಜಾಬ್ ಸಿಎಂ : ಪ್ರಿಯಾಂಕಾ ವಾದ್ರಾಗೆ ಮಾಹಿತಿ

0

ರಾಷ್ಟ್ರದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಪಂಜಾಬ್ ರಾಜ್ಯದ ಪ್ರವಾಸದ ವೇಳೆ ಆದಂತಹ ಭದ್ರತಾ ಲೋಪ ಕುರಿತಂತೆ ಪಂಜಾಬ್ ಮುಖ್ಯಮಂತ್ರಿ ಚರಣ್ ಜಿತ್ ಸಿಂಗ್ ಚೆನ್ನಿ ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಅವರಿಗೆ ಮಾಹಿತಿಯನ್ನು ನೀಡಿದ್ದಾರೆ.

ಕಳೆದವಾರ ರಸ್ತೆ ಮಾರ್ಗವಾಗಿ ಹುಸೇನಿವಾಲಾ ಮೂಲಕ ಪಂಜಾಬ್ ನ ಫಿರೋಜ್ ಪುರಕ್ಕೆ ಹೊರಟಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನ ರೈತ ಪ್ರತಿಭಟನಾಕಾರರು ತಡೆದಿದ್ದರು. ಈ ಕುರಿತು ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಮಾತಿನ ಸಮರ ಮುಂದುವರೆದಿದೆ.

ಪಂಜಾಬ್ ಮುಖ್ಯಮಂತ್ರಿ ಪ್ರಿಯಾಂಕಾ ವಾದ್ರಾ ಅವರಿಗೆ ಪ್ರಧಾನಮಂತ್ರಿ ಅವರಿಗೆ ನೀಡಿದ ಭದ್ರತೆ ಕುರಿತಂತೆ ಮಾಹಿತಿ ನೀಡಿರುವ ಬಗ್ಗೆ ಬಿಜೆಪಿ ಟೀಕಿಸಿದೆ.

ಪ್ರಿಯಾಂಕಾ ವಾದ್ರಾ ಅವರು ಯಾವ ಸಾಂವಿಧಾನಿಕ ಹುದ್ದೆ ಹೊಂದಿದ್ದಾರೆ? ಅವರಿಗೆ ಪ್ರಧಾನಿ ಭದ್ರತಾ ವ್ಯವಸ್ಥೆ ಕುರಿತು ಉಪಮುಖ್ಯಮಂತ್ರಿ ಮಾಹಿತಿ ನೀಡುವ ಅಗತ್ಯವೇನಿದೆ ಎಂದು ಬಿಜೆಪಿಯ ವಕ್ತಾರ ಸಂಬಿತ್ ಪಾತ್ರಾ ಪ್ರಶ್ನಿಸಿದ್ದಾರೆ.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ” ಪಂಜಾಬ್ ನ ಮುಖ್ಯಮಂತ್ರಿ ಚನ್ನಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ಪಂದಿಸಿಲ್ಲ, ಆದರೆ ಪ್ರಿಯಾಂಕಾ ವಾದ್ರ ಅವರಿಗೆ ಮಾಹಿತಿ ನೀಡಿದ್ದಾರೆ. ಪ್ರಿಯಾಂಕಾ ವಾದ್ರ ಯಾರು ಎಂಬುದನ್ನು ತಿಳಿಯುವ ಕುತೂಹಲ ಉಂಟಾಗಿದೆ” ಎಂದು ಟ್ವಿಟರ್ನಲ್ಲಿ ಕಟುವಾಗಿ ಟೀಕಿಸಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಮೇಕೆದಾಟು ಪಾದಯಾತ್ರೆ ಎಂದಿನಂತೆ ಆರಂಭ

0

ಹಲವು ಅಡ್ಡಿ-ಆತಂಕಗಳನ್ನು ಮೀರಿ, ಮೇಕೆದಾಟು ಪಾದಯಾತ್ರೆಗೆ ಮೊದಲ ದಿನ ಭರ್ಜರಿಯಾಗಿ ಚಾಲನೆ ಸಿಕ್ಕಿದೆ. ‘ಮೇಕೆದಾಟು ಯೋಜನೆ ಜಾರಿಯಾಗುವ ವರೆಗೆ ಹೋರಾಟ ಮುಂದುವರೆಯಲಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ವೈಫಲ್ಯವನ್ನು ಜನರಿಗೆ ತಿಳಿಸಲಾಗುವುದು ಎಂದು ಕಾಂಗ್ರೆಸ್ ನಾಯಕರು ಬಿಜೆಪಿಗೆ ಎಚ್ಚರಿಕೆ ಸಂದೇಶವನ್ನು ನೀಡಿದ್ದಾರೆ.

ಜೊತೆಗೆ, ಬಲವಂತದ ಕ್ರಮ ಕೈಗೊಂಡರೆ ಕಾಂಗ್ರೆಸ್ ಗೆ ಅದರ ಲಾಭ ಹೆಚ್ಚು ಎಂದು ಲೆಕ್ಕ ಹಾಕಿರುವ ಬಿಜೆಪಿ ಸರ್ಕಾರ ತಟಸ್ಥ ನಿಲುವು ತಳೆದ ಕಾರಣ ಪಾದಯಾತ್ರೆ ಮೊದಲ ದಿನ ಶಾಂತವಾಗಿ ನಡೆಯಿತು.

“ತಾಕತ್ತಿದ್ದರೆ ನಮ್ಮನ್ನು ತಡೆಯಿರಿ” ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರು ಪದೇ ಪದೇ ಪಂಥಾಹ್ವಾನ ನೀಡಿದರಾದರೂ , ಸರ್ಕಾರ ಇದಕ್ಕೆ ಯಾವುದೇ ಪ್ರತಿಕ್ರಿಯೆ ತೋರದೆ ಜಾಣ ನಡೆ ಪ್ರದರ್ಶಿಸಿತು.

ರಾಜ್ಯ ಸರ್ಕಾರದ ಕಠಿಣ ಕೋವಿಡ್ ನಿಯಮಾವಳಿಯ ನಿರ್ಬಂಧದ ನಡುವೆಯೂ ಹತ್ತಾರು ಹಿರಿಯ ಮುಖಂಡರು ಸೇರಿದಂತೆ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಮೇಕೆದಾಟು ಪಾದಯಾತ್ರೆಯಲ್ಲಿ ಭಾಗಿಯಾಗಿದ್ದರು.

ಸಂಗಮದ ವೇದಿಕೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ರಾಜ್ಯಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮುಂಚೂಣಿಯಲ್ಲಿದ್ದರು.

ಈ ಮೂಲಕ ಕಾಂಗ್ರೆಸ್ ನಾಯಕರು ರಣಕಹಳೆ ಮೊಳಗಿಸಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆಗೆ ಇದು ಮುನ್ನುಡಿ ಎಂಬ ಸಂದೇಶ ರವಾನಿಸಿದರು.

ಹಿಂದೂ, ಕ್ರೈಸ್ತ ಸೇರಿದಂತೆ ನಾನಾ ಧರ್ಮಗಳ ಗುರುಗಳ ಸಮ್ಮುಖದಲ್ಲಿ ಶಾಸ್ತ್ರೋಕ್ತ ಪೂಜೆ ನಡೆಸಲಾಯಿತು. ಧಾರ್ಮಿಕ -ಸಂಸ್ಕೃತಿ ಯ ಪ್ರತಿರೂಪದ ಆಚರಣೆ, ಸಾಂಸ್ಕೃತಿಕ ಕಲಾತಂಡಗಳ ಹಿಮ್ಮೇಳದೊಂದಿಗೆ ಪಾದಯಾತ್ರೆಗೆ ವಿಧ್ಯುಕ್ತ ಚಾಲನೆ ದೊರೆಯಿತು.

ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಅವರು ಪಾದಯಾತ್ರೆಯಲ್ಲಿ ಭಾಗಿಯಾಗಿ ಸುಮಾರು ನಾಲ್ಕು ಕಿ.ಮೀ. ಕ್ರಮಿಸಿದ್ದಾರೆ. ಅವರು ಜ್ವರದ ಕಾರಣ ಪಾದಯಾತ್ರೆ ಅರ್ಧದಲ್ಲಿ ನಿಲ್ಲಿಸಿ ಬೆಂಗಳೂರಿಗೆ ಹಿಂದಿರುಗಿದರು. ಎಐಸಿಸಿ ಪ್ರತಿನಿಧಿಯಾಗಿ ದೆಹಲಿಯಿಂದ ಬಂದಿದ್ದ ಮಲ್ಲಿಕಾರ್ಜುನ ಖರ್ಗೆ ಕೂಡ ಸಿದ್ದರಾಮಯ್ಯನವರೊಂದಿಗೆ ಬೆಂಗಳೂರಿಗೆ ಹಿಂದಿರುಗಿದರು. ಪಾದಯಾತ್ರೆ ವೇಳೆ ದಣಿದ ಕೆಲ ಶಾಸಕರು ಅಲ್ಲಲೇ ವಿಶ್ರಾಂತಿ ಯನ್ನ ಪಡೆದುಕೊಂಡರು.