Friday, February 13, 2026
Friday, February 13, 2026
Home Blog Page 1773

ಜೋಗ ಅಭಿವೃದ್ಧಿಗೆ ₹116 ಕೋಟಿ ಬಿಡುಗಡೆ-ಹರತಾಳು ಹಾಲಪ್ಪ

0

ಪರಿಸರ ಸಂರಕ್ಷಣೆ ಜೊತೆಗೆ ಪ್ರವಾಸೋದ್ಯಮಕ್ಕೆ ಪೂರಕವಾಗಿ ಜೋಗ ಅಭಿವೃದ್ಧಿಗೆ ಹೆಚ್ಚುವರಿಯಾಗಿ ರಾಜ್ಯ ಸರ್ಕಾರ 116 ಕೋಟಿ ರೂ.ಮಂಜೂರು ಮಾಡಿದೆ ಎಂದು ಎಂಎಸ್ಐಎಲ್ ಅಧ್ಯಕ್ಷ ಹಾಗೂ ಶಾಸಕ ಎಚ್.ಹಾಲಪ್ಪ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಥಮ ಹಂತದಲ್ಲಿ 185 ಕೋಟಿ ರೂ.ಬಿಡುಗಡೆಯಾಗಿ, 155 ಕೋಟಿ ರೂ.ವೆಚ್ಚದಲ್ಲಿ ಜೋಗ ವ್ಯಾಪ್ತಿ ವಿವಿಧ ಕಾಮಗಾರಿಗಳು ನಡೆಯುತ್ತಿವೆ. ಜೋಗ ಸಮಗ್ರ ಅಭಿವೃದ್ಧಿಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳು ಹೆಚ್ಚುವರಿಯಾಗಿ 116 ಕೋಟಿ ರೂ. ಬಿಡುಗಡೆ ಮಾಡಿದ್ದು , ಒಟ್ಟು 301 ಕೋಟಿ ರೂಪಾಯಿ ಅನುದಾನ ಸರ್ಕಾರದಿಂದ ದೊರಕಿದೆ ಎಂದರು.
ಅನುದಾನ ಬಿಡುಗಡೆಗೆ ಕಾಳಜಿ ತೋರಿಸಿದ ಬಿ.ಎಸ್ ಯಡಿಯೂರಪ್ಪ ಜಿಲ್ಲಾ ಉಸ್ತುವಾರಿ ಸಚಿವ ಕೆ. ಎಸ್. ಈಶ್ವರಪ್ಪ ಸಂಸದ ಬಿ.ವೈ ರಾಘವೇಂದ್ರ ಅವರಿಗೆ ಕ್ಷೇತ್ರದ ಜನರು ಪರವಾಗಿ ಕೃತಜ್ಞತೆ ಸಲ್ಲಿಸಲಾಗುವುದು ಎಂದರು.
ಪರಿಶೀಲನಾ ಸಮಿತಿ ಮತ್ತು ಉಪ ವಿಭಾಗ ಆಸ್ಪತ್ರೆ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರನ್ನು ಸರ್ಕಾರ ನಾಮನಿರ್ದೇಶನ ಮಾಡಿದೆ ಎಂದು ಮಾಹಿತಿ ನೀಡಿದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಮೇಕೆದಾಟು ಪಾದಯಾತ್ರೆ: ಚಿತ್ರರಂಗದ ಬೆಂಬಲ

0

ಮೇಕೆದಾಟು ನಮ್ಮ ಹಕ್ಕು. ಈ ಹಕ್ಕು ಉಳಿಸಿಕೊಳ್ಳಲು ಪಕ್ಷತೀತವಾಗಿ ನಡೆಯುತ್ತಿರುವ ಪಾದಯಾತ್ರೆಗೆ ಚಿತ್ರೋದ್ಯಮದ ಸಂಪೂರ್ಣ ಬೆಂಬಲವಿದೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಡಿ. ಆರ್. ಜೈರಾಜ್ ಅವರು ತಿಳಿಸಿದ್ದಾರೆ.

ಬೆಂಗಳೂರಿನ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾ ಡುತ್ತಿದ್ದರು. ‘ಇದೊಂದು ಪಕ್ಷಾತೀತವಾಗಿ ಕಾರ್ಯಕ್ರಮ. ಇದಕ್ಕೆ ಬೆಂಬಲ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರು ವಾಣಿಜ್ಯ ಮಂಡಳಿಗೆ ಬಂದು ನಮ್ಮನ್ನು ಆಹ್ವಾನಿಸಿದ್ದರು. ಪಕ್ಷ ತೀತವಾದ ಹೋರಾಟ ಇದಾಗಿರುವುದರಿಂದ ನಾವು ಇದರಲ್ಲಿ ಭಾಗವಹಿಸಬೇಕು ಎನ್ನುವ ನಿರ್ಧಾರ ಮಾಡಿದ್ದೇವೆ. ಕಲಾವಿದರನ್ನು ಭೇಟಿಯಾಗಿ ಇದರಲ್ಲಿ ಭಾಗವಹಿಸಬೇಕು ಎಂದು ವೈಯಕ್ತಿಕವಾಗಿ ಮತ್ತು ಪತ್ರ ಮುಖೇನ ಕೇಳಿದ್ದೇವೆ.

ಪ್ರಸ್ತುತ ಕೋವಿಡ್ ತೀವ್ರಗತಿ ಯಲ್ಲಿ ಹರಡುತ್ತಿದೆ. ಈ ಸಂದರ್ಭದಲ್ಲಿ ಭಾಗವಹಿಸುವುದು ಕಷ್ಟ. ಆದರೆ ನೈತಿಕ ಬೆಂಬಲ ಇದ್ದೇ ಇರುತ್ತದೆ ಎಂದು ಹಲವರು ತಿಳಿಸಿದ್ದಾರೆ. ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿರುವುದರಿಂದ ಭಾನುವಾರ ಪಾದಯಾತ್ರೆಯಲ್ಲಿ ಭಾಗವಹಿಸುವುದು ಕಷ್ಟ. ಅವಕಾಶ ,ಅನುಕೂಲ ಸಿಕ್ಕಿದ ಸಂದರ್ಭದಲ್ಲಿ ಪಾದಯಾತ್ರೆಯಲ್ಲಿ ಭಾಗವಹಿಸಬಹುದು ಎಂದು ಸದಸ್ಯರಿಗೆ ತಿಳಿಸಿದ್ದೇವೆ ಎಂದು ತಿಳಿಸಿದ್ದಾರೆ.

ಪಾದಯಾತ್ರೆಯ ಸಾಂಸ್ಕೃತಿಕ ಸಮಿತಿ ಅಧ್ಯಕ್ಷ, ನಟ ಮುಖ್ಯಮಂತ್ರಿ ಚಂದ್ರು ಅವರು ಮಾತನಾಡಿ, ನಾಡು-ನುಡಿ, ಮತ್ತು ಜಲದ ವಿಚಾರ ಪಕ್ಷಾತೀತ. ಸಿನಿಮಾ ಕ್ಷೇತ್ರದ ಎಲ್ಲಾ ಅಂಗಸಂಸ್ಥೆಗಳು ಇದಕ್ಕೆ ಬೆಂಬಲ ನೀಡಿವೆ. ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು, ಪರಿಸ್ಥಿತಿಯನ್ನು ನೋಡಿಕೊಂಡು ಕಲಾವಿದರು ಭಾಗವಹಿಸಬಹುದು. ಅಥವಾ ನೈತಿಕ ಬೆಂಬಲ ನೀಡಿ, ಸಾಮಾಜಿಕ ಜಾಲತಾಣ ಬಳಸಿಕೊಂಡು ಈ ಕುರಿತು ಹೇಳಿಕೆಗಳನ್ನು ನೀಡಬಹುದು. ರಾಜ್ಯ, ಕೇಂದ್ರ ಸರ್ಕಾರದ ಜೊತೆ ಘರ್ಷಣೆ ಇದಲ್ಲ. ನಿಧಾನಗತಿಯಲ್ಲಿ ಯೋಜನೆ ಸಾಗುತ್ತಿರುವುದರಿಂದ ಶೀಘ್ರದಲ್ಲೇ ಅನುಮೋದನೆಗೆ ಒತ್ತಡ ಹೇರಲು ಈ ಕಾರ್ಯಕ್ರಮವಷ್ಟೇ. ಕಾನೂನಿನ ಚೌಕಟ್ಟಿನಲ್ಲಿ ಎಲ್ಲ ಮಾರ್ಗಸೂಚಿಗಳನ್ನು ನಾವು ಪಾಲಿಸುತ್ತೇವೆ. ರಾಜ್ಯ ಸರ್ಕಾರ ಇದನ್ನು ಜಿದ್ದಾಗಿ ತೆಗೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಚಂದ್ರು ಅವರು ತಿಳಿಸಿದ್ದಾರೆ.

“ಕಲಾವಿದರು ಇಂಥ ಸಂದರ್ಭದಲ್ಲೇ ಋಣಸಂದಾಯ ಮಾಡಬೇಕಾಗುತ್ತದೆ. ಜನರ ಬೆಂಬಲ ಇಲ್ಲದೇ ಇದ್ದರೆ ಕಲಾವಿದರು ಬದುಕಲು ಸಾಧ್ಯವಿಲ್ಲ. ಇದೀಗ ಜನರಿಗೋಸ್ಕರ ವೇ ಹೋರಾಟಕ್ಕಿಳಿಯುವ ಸಂದರ್ಭ ಬಂದಿದೆ. ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಹೇಳಿಕೆಗಳನ್ನು ನೀಡಿದರೆ ಈ ಹೋರಾಟಕ್ಕೆ ಮತ್ತಷ್ಟು ಬರಲಿದೆ ಎಂದು ನಟಿ ಉಮಾಶ್ರೀ ಅವರು ಹೇಳಿದ್ದಾರೆ.

ನೆಲ, ಜಲ, ಭಾಷೆ ಹೋರಾಟದಲ್ಲಿ ಮುಂಚೂಣಿಯಲ್ಲಿ ನಿಂತು ಕೊಂಡು ಇಡೀ ಚಿತ್ರರಂಗ ಸಹಕಾರ ಕೊಟ್ಟಿರುವುದನ್ನು ಕಂಡಿದ್ದೇವೆ. ಈ ಹೋರಾಟಕ್ಕೆ ಎಲ್ಲರೂ ಬೆಂಬಲ ನೀಡಬೇಕು ಎಂದು ನಟಿ ಜಯಮಾಲಾ ಅವರು ಹೇಳಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಜನತಾ ಜಲಧಾರೆ ಬೆಂಬಲಿಸಿ-ಕುಮಾರಸ್ವಾಮಿ

0

ಜೆಡಿಎಸ್ ಗೆ ಪೂರ್ಣ ಬಹುಮತದೊಂದಿಗೆ ಐದುವರ್ಷದ ಪೂರ್ಣಾವಧಿ ಅಧಿಕಾರ ನೀಡಿದರೆ ರಾಜ್ಯದ ಎಲ್ಲಾ ನದಿಗಳ ನೀರಿನ ಸಮರ್ಪಕ ಬಳಕೆಗೆ ಯೋಜನೆ ರೂಪಿಸಿ, ಅನುಷ್ಠಾನಕ್ಕೆ ತರುವ ಭರವಸೆಯೊಂದಿಗೆ ಜನವರಿ 26ರಂದು ಜನತಾ ಜಲಧಾರೆ ಅಭಿಯಾನ ಆರಂಭಿಸಲಾಗುವುದು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಎಚ್. ಡಿ. ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

ಪಾದಯಾತ್ರೆಯಿಂದ ನೀರು ಸಿಗುತ್ತದೆ ಎಂದು ಸಾಬೀತುಪಡಿಸುವ ಸಾಕ್ಷ್ಯವನ್ನು ಕಾಂಗ್ರೆಸ್ ನೀಡಿದರೆ, ನಾನೇ ಖುದ್ದಾಗಿ ಯಾತ್ರೆ ಬೆಂಬಲಿಸುವೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಎಚ್. ಡಿ. ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಈ ಅಭಿಯಾನ 2023ರ ಚುನಾವಣೆ ವರೆಗೂ ಮುಂದುವರೆಯಲಿದೆ. ನದಿಮೂಲ ಗಳಿರುವ 51 ಸ್ಥಳಗಳಿಗೆ ಯಾತ್ರೆಯ ಮೂಲಕ ಭೇಟಿ ನೀಡುವುದು ಎಂದು ಹೇಳಿದರು.

ರಾಜ್ಯದ ಎಲ್ಲಾ ನದಿಗಳಲ್ಲಿ ಲಭ್ಯವಿರುವ ನೀರಿನ ಬಳಕೆಗೆ ಸಮಗ್ರ ಯೋಜನೆ ರೂಪಿಸಲಾಗಿದೆ. ಪ್ರತಿ ಮನೆಗೂ ಶುದ್ಧ ಕುಡಿಯುವ ನೀರು ಪೂರೈಕೆ ಹಾಗೂ ರಾಜ್ಯದ ಉದ್ದಗಲಕ್ಕೆ ಕೃಷಿ ಚಟುವಟಿಕೆಗೆ ನೀರಾವರಿ ಕಲ್ಪಿಸುವ ಯೋಜನೆಗಳನ್ನು ಜೆಡಿಎಸ್ ಸಿದ್ಧಪಡಿಸಿದೆ. ಅವುಗಳೊಂದಿಗೆ ಜನರ ಎದುರು ಹೋಗಿ ಬೆಂಬಲ ಕೋರಲಾಗುವುದು ಎಂದು ತಿಳಿಸಿದ್ದಾರೆ.

ಪಕ್ಷದ ಶಾಸಕರು, ಮಾಜಿ ಸಚಿವರು ಹಾಗೂ ಹಿರಿಯ ಮುಖಂಡರ ನೇತೃತ್ವದಲ್ಲಿ 15 ತಂಡಗಳನ್ನು ರಚಿಸಲಾಗುತ್ತದೆ. ಈ ತಂಡಗಳು ನದಿ ಮೂಲಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿ, ಜಲ ಸಂಗ್ರಹಿಸಲಿವೆ. ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಜನವರಿ 26ಕ್ಕೆ ಆಂದೋಲನ ಆರಂಭಿಸುವುದು ಖಚಿತ. ಕೋವಿಡ್ ಹೆಚ್ಚಾದರೆ ಕೆಲವು ದಿನಗಳ ಕಾಲ ಮುಂದೂಡಲಾಗಿದೆ ಎಂದು ಕುಮಾರಸ್ವಾಮಿ ಅವರು ವಿವರಿಸಿದ್ದಾರೆ.

ಜೆಡಿಎಸ್ ಸೋಲು-ಗೆಲುವು ಹೊಸದೇನಲ್ಲ. ಅನೇಕ ಚುನಾವಣೆಗಳಲ್ಲಿ ಸೋಲು-ಗೆಲುವು ನೋಡಿದ್ದೇವೆ. ಈಗ ಸಂಪೂರ್ಣ ಬಹುಮತದೊಂದಿಗೆ ಅಧಿಕಾರ ನೀಡಿದರೆ ಜನರ ಕೆಲಸ ಮಾಡುತ್ತೇವೆ ಎಂಬ ಭರವಸೆಯೊಂದಿಗೆ ಹೋರಾಟ ಮಾಡುತ್ತೇವೆ. ಯಾವ ರೀತಿಯಲ್ಲೂ ಮುಚ್ಚುಮರೆ ಮಾಡುವುದಿಲ್ಲ. ಚುನಾವಣೆಯಲ್ಲಿ ಬೆಂಬಲ ನೀಡುವಂತೆ ಜನರಲ್ಲಿ ಕೇಳುವುದಾಗಿ ಯಾತ್ರೆ ಮಾಡುತ್ತಿದ್ದೇವೆ ಎಂದರು.

ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ಪಾದಯಾತ್ರೆಗೆ ವಿರುದ್ಧವಾಗಿ ಕಾರ್ಯಕ್ರಮ ರೂಪಿಸಿಲ್ಲ. ಮೇಕೆದಾಟು ಜೊತೆಯಲ್ಲಿ ಮಹದಾಯಿ, ಕೃಷ್ಣ ಮೇಲ್ದಂಡೆ, ಭದ್ರಮೇಲ್ದಂಡೆ ಎಲ್ಲ ಯೋಜನೆಗಳು ಆಗಬೇಕು. ಅದಕ್ಕೆ ಪೂರಕವಾಗಿ ನಮ್ಮ ಹೋರಾಟ ಎಂದು ಎಚ್. ಡಿ. ಕುಮಾರಸ್ವಾಮಿ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಕರ್ಫ್ಯೂ ಚಾಲ್ತಿ ಅವಧಿಯಲ್ಲಿ‌ ಕೈಗಾರಿಕೆಗಳಿಗೆ ಅನುಮತಿ-ಎನ್ ಗೋಪಿನಾಥ್

0

ಕರ್ಫ್ಯೂ ಸಂದರ್ಭದಲ್ಲಿ ಎಲ್ಲಾ ಕೈಗಾರಿಕೆ ನಡೆಸಲು ಅನುಮತಿ ನೀಡಲಾಗಿದೆ. ಆದರೆ, ನೌಕರರು ಕೆಲಸಕ್ಕೆ ಹೋಗಿ ಬರುವಾಗ ಪೊಲೀಸರಿಂದ ಅಡೆತಡೆ ಆಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಜಿಲ್ಲಾಡಳಿತಕ್ಕೆ ಮನವಿ ಮಾಡಿದೆ.
ಅಗತ್ಯ ವಸ್ತುಗಳ ಸರಬರಾಜು ವಾಹನಗಳ ಸಂಚಾರಕ್ಕೆ ಅನುಮತಿ ಇದ್ದು, ಈ ಸಮಯದಲ್ಲಿ ಈ ವಾಹನಗಳಿಗೆ ಯಾವುದೇ ತಾಂತ್ರಿಕ ತೊಂದರೆಗಳ ಆದರೆ ರಿಪೇರಿ ಗ್ಯಾರೇಜ್, ಬಿಡಿಭಾಗಗಳ ಅಂಗಡಿ ತೆರೆದಿರಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್. ಗೋಪಿನಾಥ್, ಉಪಾಧ್ಯಕ್ಷ ಬಿ. ಗೋಪಿನಾಥ್, ಪ್ರಮುಖರಾದ ವಸಂತ್ ಹೋಬಳಿದಾರ್, ಮಧುಸೂದನ್ ಐತಾಳ್,ಜಿ. ವಿಜಯ್ ಕುಮಾರ್, ಜಗದೀಶ್ ಮಾತನವರ್, ಎಸ್. ಎಸ್. ಉದಯ್ ಕುಮಾರ್, ಪ್ರದೀಪ್ ವಿ.ಯಲಿ,ಇ.ಎಂ. ಪರಮೇಶ್ವರ್,ರಾಜು,ಬಿ.ಆರ್. ಸಂತೋಷ್, ಕೆ. ಎಸ್. ಸುಕುಮಾರ್, ಗಣೇಶ್ ಎಂ.ಅಂಗಡಿ,ಬಿ. ಮಂಚೇಗೌಡ, ಮರಿಸ್ವಾಮಿ ಇತರರಿದ್ದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಕಚ್ಚಿಗೆಬೈಲು ರಸ್ತೆ ಅಭಿವೃದ್ಧಿ ಭೂಮಿಪೂಜೆ

0

ಶಾಸಕರಾದ ಹೆಚ್.ಹಾಲಪ್ಪ ನವರು ಮಾರುತಿಪುರ ಗ್ರಾ.ಪಂ ಕಚ್ಚಿಗೆಬೈಲು ಇಂದ ಬಿಜಾಪುರ ರಸ್ತೆ ಅಭಿವೃದ್ಧಿ ಹಾಗೂ ಡಾಂಬರೀಕರಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.
ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು, ಪಕ್ಷದ ಮುಖಂಡರು ಉಪಸ್ಥಿತರಿದ್ದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಶಿವಮೊಗ್ಗ 59 ಕೋವಿಡ್ ಧೃಡ ಪ್ರಕರಣಗಳು.

0

ಕೇವಲ ಮೂರೇ ದಿನದಲ್ಲಿ ಶಿವಮೊಗ್ಗದಲ್ಲಿ ಕೊರೊನಾ ಉಲ್ಬಣಿಸಿದ್ದು ಶುಕ್ರವಾರ 59 ಪ್ರಕರಣಗಳು ಧೃಡಪಟ್ಟಿವೆ. ಇದರೊಂದಿಗೆ ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಶತಕ ದಾಟಿ 117 ಕ್ಕೆ ಏರಿಕೆಯಾಗಿದೆ.
ಶುಕ್ರವಾರದ 59 ಪ್ರಕರಣಗಳಲ್ಲಿ ಶಿವಮೊಗ್ಗ 41, ಭದ್ರಾವತಿ 7, ಸಾಗರ 6, ಹೊಸನಗರ 4, ಶಿಕಾರಿಪುರದ ಒಂದು ಪ್ರಕರಣವಿದೆ. ಪಾಸಿಟಿವ್ ಬಂದವರಲ್ಲಿ ಶಾಲೆ-ಕಾಲೇಜುಗಳ 11 ವಿದ್ಯಾರ್ಥಿಗಳೂ ಇದ್ದಾರೆ. ಕೊರೊನಾ ದೃಢಪಟ್ಟವರಲ್ಲಿ 19 ಮಂದಿ ಕೋವಿಡ್ ಆಸ್ಪತ್ರೆ, 13 ಮಂದಿ ಖಾಸಗಿ ಆಸ್ಪತ್ರೆ, ನಾಲ್ವರು ಟ್ರಿಯಾಜ್ ಸೆಂಟರ್ ಗಳಲ್ಲಿದ್ದರೆ ಉಳಿದ 81 ಮಂದಿ ಮನೆಗಳಲ್ಲಿ ಕ್ವಾರೆಂಟೈನ್ ಆಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದರಲ್ಲಿ ತಮಿಳುನಾಡಿನ ಮೇಲ್ಮರುವತೂರ್ ಓಂ ಶಕ್ತಿ ದೇವಸ್ಥಾನದ ದರ್ಶನ ಮಾಡಿ ಬಂದ 18 ಭಕ್ತರೂ ಇದ್ದಾರೆ. ಶಿವಮೊಗ್ಗ ನಗರದಿಂದ ಅಲ್ಲದೆ ಜಿಲ್ಲೆಯ ಇತರ ತಾಲೂಕಿನವರೂ ಶಿವಮೊಗ್ಗದಿಂದ ಓಂ ಶಕ್ತಿ ದೇವಸ್ಥಾನಕ್ಕೆ ಹೋಗಿ ಬಂದದ್ದು, ಅವರಲ್ಲೂ ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿರುವುದು ಆತಂಕಕ್ಕೀಡು ಮಾಡಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಉದ್ದೇಶಿತ ರೈಲ್ವೇಮಾರ್ಗ ಬದಲಿಸಲು ಮನವಿ

0

ಶಿವಮೊಗ್ಗ -ಶಿಕಾರಿಪುರ- ಮಾಸೂರು- ರಾಣೆಬೆನ್ನೂರು ರೈಲು ಮಾರ್ಗವು ಅವಾಸ್ತವಿಕ ಮತ್ತು ಅವೈಜ್ಞಾನಿಕವಾಗಿದ್ದು, ಈ
ಮಾರ್ಗವನ್ನು ಬದಲಾಯಿಸಬೇಕೆಂದು ಜೆಡಿಎಸ್ ಮುಖಂಡ ಶಿಕಾರಿಪುರದ ಎಚ್.ಟಿ. ಬಳಿಗಾರ್ ಹೇಳಿದರು.
ಶಿವಮೊಗ್ಗ- ಶಿಕಾರಿಪುರ- ಮಾಸೂರು -ರಾಣೆಬೆನ್ನೂರು ವರೆಗಿನ ಹೊಸ ರೈಲು ಮಾರ್ಗಕ್ಕಾಗಿ ಅಗತ್ಯವಿರುವ ಭೂಸ್ವಾಧೀನ ಕಾರ್ಯ ಎರಡನೇ ಹಂತದಲ್ಲಿ ಆರಂಭವಾಗಿದೆ. ಇದನ್ನು ಕೂಡಲೇ ಕೈ ಬಿಡಬೇಕೆಂದು ಮನವಿ ಮಾಡಿದ್ದಾರೆ.
ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನಮಂತ್ರಿ, ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಅವರು ಪ್ರಸ್ತುತ ನಿಯೋಜಿತ ರೈಲ್ವೆ ಮಾರ್ಗದ ಪ್ರದೇಶದಲ್ಲಿ ಯಾವುದೇ ಬೃಹತ್ ಕೈಗಾರಿಕೆ ಅಥವಾ ಉದ್ಯಮಗಳಿಲ್ಲ. ಉದ್ಯೋಗಕ್ಕೆ ಹೋಗಿ ಬರುವ ಮತ್ತು ಹೊಸದಾಗಿ ಉದ್ಯೋಗ ಸೃಷ್ಟಿಸುವ ಪಟ್ಟಣಗಳೂ ಇಲ್ಲ. ಜನಸಂಚಾರವೂ ಇಲ್ಲ. ಆದ್ದರಿಂದ ಮಾರ್ಗವನ್ನು ಬದಲಾಯಿಸಬೇಕೆಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ. ಶಿಕಾರಿಪುರದಿಂದ ರಾಣೆಬೆನ್ನೂರು ಮಾರ್ಗ ಮಧ್ಯದ ಗ್ರಾಮಗಳಲ್ಲಿ ಫಲವತ್ತಾದ ಕೃಷಿ ಭೂಮಿ, ಅಡಿಕೆ ತೋಟಗಳಿವೆ. ಇದನ್ನು ಭೂಸ್ವಾಧೀನ ಪಡಿಸಿಕೊಳ್ಳಲು ಮುಂದಾಗಿರುವುದರಿಂದ ತಲೆತಲಾಂತರದಿಂದ ಕೃಷಿ ಅವಲಂಬಿತ ಕುಟುಂಬಗಳು ಬೀದಿಪಾಲಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಉದ್ದೇಶಿತ ರೈಲ್ವೆ ಯೋಜನೆಗೆ ಶಿಕಾರಿಪುರ,ಉಡುಗಣಿ, ಶಿರಾಳಕೊಪ್ಪ, ಬೆಳಗಾವಿ, ತಾಳಗುಂದ, ತೊಗರ್ಸಿ, ಆನವಟ್ಟಿ,ಕೋಟಿಪುರ, ಹಾನಗಲ್ಲ, ಬಂಕಾಪುರ, ಸವಣೂರು ಮಾರ್ಗ ಸೂಕ್ತವಾಗಿದ್ದು, ಈ ಮಾರ್ಗದಿಂದ ಹುಬ್ಬಳ್ಳಿ, ಕಾರವಾರ, ಗೋವಾ, ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಿಗೆ ಸಂಪರ್ಕ ಸೇತುವೆಯಾಗಲಿದೆ ಎಂದು ತಿಳಿಸಿದ್ದಾರೆ.
ಆ ಭಾಗದ ರೈತರಾದ ಡಿ.ಎಲ್. ನಾಗರಾಜ್, ಸಿದ್ದಪ್ಪ , ಪಾಂಡುರಂಗ, ಮೊಹಮ್ಮದ್ ರಸೂಲ್ ಮೌನೇಶ್ ಶಿವಮೂರ್ತಿಪ್ಪ ಮತ್ತು ಇತರರಿದ್ದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ವಿದ್ಯಾಗಮ ಯೋಜನೆ ಪುನರಾರಂಭ

0

ರಾಜ್ಯದ ಸರ್ಕಾರಿ ಅನುದಾನ ಹಾಗೂ ಅನುದಾನರಹಿತ ಶಾಲೆಗಳ 1ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗಾಗಿ ವಿದ್ಯಾಗಮ ಕಾರ್ಯಕ್ರಮವನ್ನು ಮತ್ತೆ ಆರಂಭಿಸುವಂತೆ ಶಿಕ್ಷಣ ಇಲಾಖೆ ಸುತ್ತೋಲೆಯನ್ನು ಹೊರಡಿಸಿದೆ.

ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಕಾರಣದಿಂದ 1ರಿಂದ 9ನೇ ತರಗತಿಯವರಿಗೆ ಭೌತಿಕ ತರಗತಿಗಳನ್ನು ಜನವರಿ 6 ರಿಂದ 19ರವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ವಿದ್ಯಾರ್ಥಿಗಳನ್ನು ಕಲಿಕೆಯಲ್ಲಿ ನಿರಂತರವಾಗಿ ತೊಡಗಿಸಿಕೊಳ್ಳುವ ಉದ್ದೇಶದಿಂದ ಕಾರ್ಯಕ್ರಮ ಆರಂಭಿಸುವಂತೆ ಸೂಚಿಸಲಾಗಿದೆ. ಇದಕ್ಕಾಗಿ ಪೂರ್ವ ತಯಾರಿಗಳನ್ನು ಕೂಡ ಕೈಗೊಳ್ಳಬೇಕು. ಮತ್ತು ಎಲ್ಲಾ ಜಿಲ್ಲೆಗಳಲ್ಲಿ ಅನುಷ್ಠಾನ ಅಧಿಕಾರಿಗಳು ಆಯಾ ಶಾಲಾ ಮುಖ್ಯಶಿಕ್ಷಕರಿಗೆ ಅಧಿಸೂಚನೆಗಳನ್ನು ನೀಡಬೇಕು ಎಂದು ತಿಳಿಸಲಾಗಿದೆ.

ಪ್ರತಿ ಶಾಲೆಯ 20ರಿಂದ 25 ವಿದ್ಯಾರ್ಥಿಗಳಿಗೆ ಮಾರ್ಗದರ್ಶಿ ಶಿಕ್ಷಕರನ್ನು ನೇಮಿಸಬೇಕು. ಈ ಶಿಕ್ಷಕರು ವಾರದ ವೇಳಾಪಟ್ಟಿಯನ್ನು ನೀಡಿ ಮಕ್ಕಳ ಸ್ವಯಂ ಕಲಿಕೆಗೆ ಪೂರಕವಾಗಿ ಮಾರ್ಗದರ್ಶನ ನೀಡಬೇಕು ಎಂದು ಸೂಚಿಸಲಾಗಿದೆ.

ವಿದ್ಯಾಗಮ ಕಾರ್ಯಕ್ರಮದ ಅಡಿಯಲ್ಲಿ ವಿದ್ಯಾರ್ಥಿಗಳಿಗೆ (ಭೌತಿಕವಾಗಿ ಆಫ್ಲೈನ್) ತರಗತಿಗಳು ಬೋಧನೆ ಮಾಡಬಹುದು. ಭೌತಿಕವಾಗಿ ಹಾಜರಾಗಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಆನ್ಲೈನ್ ಮುಖಾಂತರ ಬೋಧನೆ ಮಾಡಬಹುದಾಗಿದೆ.

ಬಹುತೇಕ ಮೊಬೈಲ್ ದೂರವಾಣಿಗಳನ್ನ ಪೋಷಕರೇ ಹೊಂದಿರುತ್ತಾರೆ. ಆದ್ದರಿಂದ, ಪೋಷಕರು ಮನೆಯಲ್ಲಿ ಲಭ್ಯವಾಗುವ ಸಮಯದಲ್ಲಿ ಸಂಪರ್ಕಿಸಲು ಪ್ರಯತ್ನಿಸಬೇಕು ಎಂದು ಸಲಹೆ ನೀಡಲಾಗಿದೆ.

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿರುವ ಈ ಕಾರ್ಯಕ್ರಮದಿಂದ ಬಾಲ್ಯ ವಿವಾಹ, ಬಾಲಕಾರ್ಮಿಕ ಪದ್ಧತಿ ಹೀಗೆ ಮುಂತಾದ ಸಾಮಾಜಿಕ ಪಿಡುಗುಗಳನ್ನು ತಡೆಯುವುದಕ್ಕೆ ಸಹಕಾರಿಯಾಗುತ್ತದೆ ಎಂದು ಸೂಚಿಸಲಾಗಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಶಿವಮೊಗ್ಗ ಮನಪಾ ದಿಂದ ಕೋವಿಡ್ ನಿಬಂಧನೆಗಳು

0

ಕೊರೊನಾ ಸೋಂಕು ನಿಯಂತ್ರಣ ಉದ್ದೇಶದಿಂದ ಸರ್ಕಾರ ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಿದೆ. ಈ ಅವಧಿಯಲ್ಲಿ ಹೆಚ್ಚು ಜನ ಸೇರುವ ಜಾತ್ರೆ, ಸಂತೆಗೆ ಅವಕಾಶವಿಲ್ಲ. ಹಾಗೂ ಸಿಂಹ ಧಾಮಕ್ಕೂ ಅವಕಾಶವಿಲ್ಲ. ಗ್ರಂಥಾಲಯವು ಬಾಗಿಲು ತೆಗೆಯುವುದಿಲ್ಲ.

ಕೊರೋನಾ ರೂಪಾಂತರಿ ವೈರಸ್ ಓಮಿಕ್ರಾನ್ ಮೂರನೇ ಅಲೆ ನಿಯಂತ್ರಿಸಲು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ನಡೆಯುವ ಎಲ್ಲಾ ಜಾತ್ರೆ ಹಾಗೂ ಮುಂದಿನ ಆದೇಶದವರೆಗೆ ನಿಷೇಧಿಸಲಾಗಿದೆ.

ಈ ಸಂಬಂಧ ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಶಿವಮೊಗ್ಗ ಮಹಾನಗರಪಾಲಿಕೆ ಆಯುಕ್ತರಾದ ಚಿದಾನಂದ ವಠಾರೆ ಅವರು ತಿಳಿಸಿದ್ದಾರೆ.

ಕೊರೊನಾ ಸೋಂಕು ಉದ್ದೇಶದಿಂದ ವಾರಾಂತ್ಯದಲ್ಲಿ ಜಾರಿಗೊಳಿಸಿದೆ. ಇದರ ಹಿನ್ನೆಲೆಯಲ್ಲಿ ಹುಲಿ-ಸಿಂಹಧಾಮ ವೀಕ್ಷಣೆಗೆ ಅವಕಾಶವನ್ನು ಕೂಡ ಕೊಟ್ಟಿಲ್ಲ. ಜನವರಿ 8 ಹಾಗೂ 9, ಜನವರಿ 15 ಮತ್ತು 16 ರಂದು ತಾವರೆಕೊಪ್ಪ ಹುಲಿ-ಸಿಂಹಧಾಮ ಪ್ರವಾಸಿಗರ ವೀಕ್ಷಣೆಗೆ ಲಭ್ಯವಿರುವುದಿಲ್ಲ. ಪ್ರತಿಯಾಗಿ ಜನವರಿ 11 ಮತ್ತು 18ರ ಮಂಗಳವಾರ ಪ್ರವಾಸಿಗರ ವೀಕ್ಷಣೆಗೆ ಲಭ್ಯವಿರುತ್ತದೆ. ಪ್ರವಾಸಿಗರು ಕೊರೋನಾ ನಿಯಮಾವಳಿಗಳನ್ನು ಅನುಸರಿಸಬೇಕೆಂದು ಹುಲಿ-ಸಿಂಹಧಾಮ ದ ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.

ಇದೇ ರೀತಿ ಗ್ರಂಥಾಲಯಗಳಲ್ಲೂ ಕೂಡ ಸೇವೆಯನ್ನ ಗೊಳಿಸಿದೆ. ಮುಂದಿನ ಆದೇಶದವರೆಗೆ ಸೋಮವಾರದಿಂದ ಶುಕ್ರವಾರದವರೆಗೆ ಮಾತ್ರ ಸಾರ್ವಜನಿಕರಿಗೆ ಗ್ರಂಥಾಲಯ ಸೇವೆಯನ್ನು ಒದಗಿಸಲಾಗುವುದು ಎಂದು ನಗರ ಕೇಂದ್ರ ಗ್ರಂಥಾಲಯ ಮುಖ್ಯ ಗ್ರಂಥಾಲಯ ಅಧಿಕಾರಿಗಳು ತಿಳಿಸಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಬುಕಿಂಗ್ ಮಾಡಿದ ಪ್ರವಾಸಿಗರಿಗೆ ಮಾತ್ರ ಶರತ್ತಿನ ಅನುಮತಿ

0

ಕೋವಿಡ್ ಹಿನ್ನೆಲೆಯಲ್ಲಿ ಕರ್ಫ್ಯೂ ಜಾರಿ ಮಾಡಿದ ರಾಜ್ಯ ಸರ್ಕಾರದ ನಿರ್ಧಾರದಿಂದ ಪ್ರವಾಸಿಗರಲ್ಲಿದ್ದ ಗೊಂದಲವನ್ನು ಸರ್ಕಾರ ದೂರ ಮಾಡಿದೆ.
ವಾರಂತ್ಯದಲ್ಲಿ ಮನೋರಂಜನೆಗಾಗಿ ಹೋಟೆಲ್, ರೆಸಾರ್ಟ್ ಮತ್ತು ಅರಣ್ಯ ಪ್ರದೇಶದ ಸಫಾರಿಗೆ ನೋಂದಣಿ ಮಾಡಿಸಿರುವ ಪ್ರವಾಸಿಗರಿಗೆ ಕೋವಿಡ್ ನಿಯಮ ಪಾಲನೆಯೊಂದಿಗೆ ಅನುಮತಿ ನೀಡಿ ಆದೇಶ ಜಾರಿ ಮಾಡಿದೆ.
ಕೋವಿಡ್ ಮಾರ್ಗಸೂಚಿ ಜಾರಿ ಹಿನ್ನೆಲೆ ರಾಜ್ಯದ ಪ್ರವಾಸೋದ್ಯಮದ ಮೇಲೆ ಬೀರುವ ಋಣಾತ್ಮಕ ಪರಿಣಾಮವನ್ನು ತಗ್ಗಿಸಲು, ಕಳೆದೆರಡು ಕೋವಿಡ್ ಅಲೆಯಿಂದಾಗಿ ಉಂಟಾಗಿರುವ ನಷ್ಟವನ್ನು ಸರಿದೂಗಿಸಲು ಮತ್ತು ಈಗಾಗಲೇ ಸಫಾರಿ, ರೆಸಾರ್ಟ್ ಗಳಿಗೆ ತೆರಳಲು ಹೋಟೆಲ್ ಬುಕ್ ಮಾಡಿದ್ದ ಪ್ರವಾಸಿಗರಿಗೆ ಅನುಕೂಲವಾಗಲು ರಾಜ್ಯ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ ಎನ್ನಲಾಗಿದೆ. ಪ್ರವಾಸಿಗರು ಸರಕಾರದ ಆದೇಶವನ್ನು ಸ್ವಾಗತಿಸಿದ್ದಾರೆ.
ಹೋಟೆಲ್ ರೆಸಾರ್ಟ್ ಮತ್ತು ಸಫಾರಿಗೆ ವಾರಾಂತ್ಯದಲ್ಲಿ ನೊಂದಣಿ ಮಾಡಿಸಿರುವ ಸೂಕ್ತ ದಾಖಲೆಗಳೊಂದಿಗೆ ಕಾರು, ಟ್ಯಾಕ್ಸಿ ಮತ್ತು ಇತರೆ ಸಾರಿಗೆ ಮೂಲಗಳನ್ನು ಬಳಸಿಕೊಳ್ಳಬಹುದು.
ಅತಿಥಿ ನಿವಾಸ, ಹೋಟೆಲ್ ಗಳಲ್ಲಿ ಪ್ರವಾಸಿಗರು ತಂಗಲು ಯಾವುದೇ ನಿರ್ಬಂಧವಿಲ್ಲ.
ಹೋಟೆಲ್, ರೆಸಾರ್ಟ್ ಗಳು ನೀಡುವ ಸೌಲಭ್ಯವನ್ನು ಅತಿಥಿಗಳಿಗೆ ಮಾತ್ರ ನೀಡತಕ್ಕದ್ದು.
ಬುಕಿಂಗ್ ದಾಖಲೆಯೊಂದಿಗೆ ಹೋಟೆಲ್ ಪ್ರವೇಶಿಸಬಹುದು ಅಥವಾ ನಿರ್ಮಿಸಬಹುದು ಎಂಬ ಸರ್ಕಾರ ಆದೇಶಗಳನ್ನು ನೀಡಿದೆ.