Friday, February 13, 2026
Friday, February 13, 2026
Home Blog Page 1774

ಎರಡು ಡೋಸ್ ಲಸಿಕೆ: ಒಮಿಕ್ರಾನ್ ತೀವ್ರತೆ ಕಡಿಮೆ- ಡಾ.ಸುಧಾಕರ್

0

ಕೊರೊನಾ ಸಾಂಕ್ರಾಮಿಕ ರೋಗದ ಮೂರನೇ ಅಲೆಯನ್ನು ಯಶಸ್ವಿಯಾಗಿ ಮತ್ತು ಪರಿಣಾಮಕಾರಿಯಾಗಿ ಎದುರಿಸಲು ಸರ್ಕಾರ ಎಲ್ಲಾ ತಯಾರಿ ಮಾಡಿಕೊಂಡಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.
ಮುಂದಿನ ಏಳು ದಿನ ಯಾವ ರೀತಿ ಕ್ರಮ ತೆಗೆದುಕೊಳ್ಳಬೇಕು ಎಂದು ಟೆಲಿ ಕೌನ್ಸಿಲಿಂಗ್ ಮೂಲಕ ಕ್ರಮ ಕೈಗೊಳ್ಳಲಾಗುವುದು. ಇದಕ್ಕಾಗಿ 10 ಸಾವಿರ ಗೃಹ ವೈದ್ಯರ ನಿಯೋಜನೆ ಮಾಡಲಾಗಿದೆ. ಪಾಸಿಟಿವ್ ಬಂದಾಗ, ಅನಗತ್ಯವಾಗಿ ಆತಂಕದಿಂದ ಆಸ್ಪತ್ರೆಗೆ ದಾಖಲಾಗುವುದು ಬೇಡ. ಯಾರು ಆಸ್ಪತ್ರೆಗೆ ಸೇರಬೇಕು ಎಂಬ ಬಗ್ಗೆ ಡಾ.ರವಿ ಅವರ ತಜ್ಞರ ಸಮಿತಿ ತಿಳಿಸಲಿದೆ. ಮಾರ್ಗಸೂಚಿ, ದಾಖಲು ನೀತಿ ಪ್ರಕಾರ ಆಸ್ಪತ್ರೆಗೆ ದಾಖಲು ಮಾಡಿಕೊಳ್ಳಲಾಗುವುದು ಎಂದರು.
ವಿಧಾನಸೌಧದಲ್ಲಿ ಕೋವಿಡ್ ನಿಯಂತ್ರಣ ಸಂಬಂಧ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಬಳಿಕ ಸುದ್ದಿಗೋಷ್ಠಿ ನಡೆಸಿದರು.
ವಿಶ್ವ ಆರೋಗ್ಯ ಸಂಸ್ಥೆ, ಓಮಿಕ್ರಾನ್ ವಿಶ್ವದಲ್ಲಿ ಅತಿ ವೇಗವಾಗಿ ಹೊರಡುವ ಪ್ರಭೇದ ಎಂದು ತಿಳಿಸಿದೆ. ಡೆಲ್ಟಾ ಪ್ರಭೇದದ ರೋಗ ತೀವ್ರತೆ ಹೆಚ್ಚು, ಓಮಿಕ್ರಾನ್ ತೀವ್ರತೆ ಕಡಿಮೆ. ಎರಡು ಡೋಸ್ ಲಸಿಕೆ ಪಡೆದರೆ ಓಮಿಕ್ರಾನ್ ನಿಂದ ತೀವ್ರ ತರಹ ವ್ಯಾಧಿ ಉಲ್ಪಣವಾಗುವುದಿಲ್ಲ. ಹೀಗಾಗಿ ಎಲ್ಲರೂ ಕಡ್ಡಾಯವಾಗಿ ಎರಡೂ ಡೋಸ್ ಲಸಿಕೆ ಪಡೆದಿರಬೇಕು ಎಂದು ಹೇಳಿದರು.
ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ ರೋಗಲಕ್ಷಣ ಇರುವವರನ್ನು ಮಾತ್ರ ಪರೀಕ್ಷೆ ಮಾಡಿದರೆ ಸಾಕು. ಆದರೆ ಕರ್ನಾಟಕ ಸರ್ಕಾರ ಕೊರೊನಾ ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿರುವವರ ಪರೀಕ್ಷೆ ಕೂಡ ನಡೆಸಲಿದೆ. 2 ಡೋಸ್ ಲಸಿಕೆ ತೆಗೆದುಕೊಂಡವರಿಗೆ ಗ್ರೀನ್ ಪಾಸ್ ಅಥವಾ ಯುನಿವರ್ಸಲ್ ಪಾಸ್ ಕೊಡುವ ಬಗ್ಗೆ ಚಿಂತನೆ ನಡೆಯುತ್ತಿದೆ. ಪ್ರತಿದಿನ ಸಂಜೆ 5 ಗಂಟೆಗೆ ಆರೋಗ್ಯ ಇಲಾಖೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆಯಾಗಲಿದೆ . ಮನೆಯಲ್ಲಿ ಮೂರು ಪ್ರಕರಣ ಕಂಡುಬಂದರೆ ಮೈಕ್ರೋ ಕಂಟೈನ್ ಮೆಂಟ್ ವಲಯ ಎಂದು ಘೋಷಣೆ ಮಾಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಖಾಯಂ ಗೊಳಿಸಲು ಜಿಲ್ಲಾಧಿಕಾರಿಗಳಿಗೆ ಅಂ.ಕಾರ್ಯಕರ್ತೆಯರ ಮನವಿ

0

ತಮ್ಮ ಸೇವೆ ಕಾಯಂಗೊಳಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತಯರು ಶಿವಮೊಗ್ಗದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.

ಅಂಗನವಾಡಿ ನೌಕರರನ್ನು ಕಾಯಂಗೊಳಿಸಬೇಕು. ಯಾವುದೇ ಕಾರಣಕ್ಕೂ ಅಂಗನವಾಡಿ ಮುಚ್ಚ ಬಾರದು. ಮಿನಿ ಅಂಗನವಾಡಿ ಕೇಂದ್ರಗಳಿಗೆ ಸಹಾಯಕಿಯರನ್ನು ನೀಡಬೇಕು. ಪೌಷ್ಟಿಕ ಆಹಾರವನ್ನು ಸರಿಯಾದ ಸಮಯಕ್ಕೆ ಒದಗಿಸಬೇಕು. ಈ ವಿಚಾರದಲ್ಲಿ ರಾಜಕೀಯ ಮಧ್ಯಪ್ರವೇಶ ತಡೆಯಬೇಕು. ಬಿಎಲ್ಒ ಕೆಲಸದಿಂದ ಅಂಗನವಾಡಿ ಕಾರ್ಯಕರ್ತರನ್ನು ಬಿಡುಗಡೆಗೊಳಿಸಬೇಕು ಎಂದು ಅಂಗನವಾಡಿ ಕಾರ್ಯಕರ್ತಯರು ಆಗ್ರಹಿಸಿದ್ದಾರೆ.

2021ರ ಬಜೆಟ್ನಲ್ಲಿ ಅಂಗನವಾಡಿಗಳಿಗೆ ಅನುದಾನ ನೀಡಿಲ್ಲ. ಈ ವರ್ಷ ಅನುದಾನ ಹೆಚ್ಚಿಸಬೇಕು. ಅಂಗನವಾಡಿ ಕೇಂದ್ರಗಳಲ್ಲಿ ಎಲ್. ಕೆ. ಜಿ, ಯುಕೆಜಿ ಶಿಕ್ಷಣ ನೀಡಬೇಕು ಎಂಬುದು ಸೇರಿದಂತೆ ತಮ್ಮ ಹಲವು ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲದಿದ್ದರೆ ಜನವರಿ 10ರಿಂದ ಅಂಗನವಾಡಿ ನೌಕರರು ಅನಿರ್ಧಿಷ್ಟ ಅವಧಿಗೆ ಹೋರಾಟವನ್ನು ಆರಂಭಿಸುವುವರು ಎಂದು ಎಚ್ಚರಿಕೆ ನೀಡಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ವಿದ್ಯುತ್ ಮಾರ್ಗ ಬದಲಿಸಿದ ಕಾರ್ಯ ಜೀವವುಳಿಸಿದ ಪುಣ್ಯ ಭಲೇ ಸುನೀಲ್ ಜಿ

0

ರಾಜ್ಯದ ಶಾಲಾ ಕಾಲೇಜುಗಳ ಆವರಣದಲ್ಲಿ ಹಾದು ಹೋಗಿರುವ ವಿದ್ಯುತ್ ಮಾರ್ಗಗಳ ಸ್ಥಳಾಂತರಕ್ಕೆ ಇಂಧನ ಇಲಾಖೆ ಕಾರ್ಯಾಚರಣೆ ನಡೆಸಿದ್ದು, 1783 ಮಾರ್ಗಗಳನ್ನು ಬದಲಿಸಿದೆ.
ಕಳೆದ ಆಗಸ್ಟ್ 15ರಂದು ತುಮಕೂರಿನಲ್ಲಿ ಸ್ವಾತಂತ್ರ್ಯ ದಿನಾಚರಣೆಯಂದು ಧ್ವಜಾರೋಹಣ ನಡೆಸುವಾಗ ಶಾಲಾ ಅಂಗಳದಲ್ಲಿ ಹಾದುಹೋಗಿದ್ದ ಅಪಾಯಕಾರಿ ವಿದ್ಯುತ್ ಮಾರ್ಗಕ್ಕೆ ಧ್ವಜ ತಗುಲಿ ವಿದ್ಯಾರ್ಥಿಯೊಬ್ಬರು ಮೃತಪಟ್ಟಿದ್ದರು. ಹಾಸನದಲ್ಲೂ ಇದೇ ಬಗೆಯ ಘಟನೆ ನಡೆದಿತ್ತು. ಈ ಬಗ್ಗೆ ರಾಜ್ಯಾದ್ಯಂತ ಕಳವಳ ವ್ಯಕ್ತವಾಗಿತ್ತು.
ಈ ಸಂಬಂಧ ಪ್ರಕಟಣೆ ನೀಡಿರುವ ಇಂಧನ ಹಾಗೂ ಕನ್ನಡ ಸಂಸ್ಕೃತಿ ಸಚಿವ ವಿ.ಸುನೀಲ್ ಕುಮಾರ್, ಬಾಕಿ ಉಳಿದಿರುವ ಅಪಾಯಕಾರಿ ಮಾರ್ಗಗಳನ್ನು ಶೀಘ್ರವೇ ಬದಲಿಸಲು ಸೂಚಿಸಲಾಗಿದೆ ಎಂದರು.
ಶಾಲಾ ಕಾಲೇಜು ಆವರಣದಲ್ಲಿ ಹಾದುಹೋಗಿರುವ ಅಪಾಯಕಾರಿ ವಿದ್ಯುತ್ ಮಾರ್ಗ ಗುರುತಿಸಿ ಬದಲಿಸಲು ಇಂಧನ ಮತ್ತು ಶಿಕ್ಷಣ ಇಲಾಖೆ ಸಭೆ ನಡೆಸಿ ಆಗಸ್ಟ್ 19ರಂದು ಎಲ್ಲಾ ಕಂಪನಿಗಳ ವ್ಯವಸ್ಥಾಪಕ ನಿರ್ದೇಶಕರುಗಳಿಗೆ ಪತ್ರ ಬರೆದು ಸೂಚನೆ ನೀಡಲಾಗಿತ್ತು.
6886 ಅಪಾಯಕಾರಿ ಮಾರ್ಗ ಗುರುತಿಸಲಾಗಿದೆ. ಆದೇಶ ನೀಡಿದ ಮೂರೇ ತಿಂಗಳಲ್ಲಿ 1783 ಕಡೆ ವಿದ್ಯುತ್ ಮಾರ್ಗಗಳನ್ನು ಬದಲಿಸಲಾಗಿದೆ. ಇನ್ನುಳಿದ 4997 ಮಾರ್ಗಗಳ ಬದಲಾವಣೆ ಕಾರ್ಯ ಪ್ರಗತಿಯಲ್ಲಿದ್ದು, ಇದಕ್ಕಾಗಿ 114.50 ಕೋಟಿ ರೂಪಾಯಿಯನ್ನು ಇಂದಿನ ಇಲಾಖೆ ವೆಚ್ಚ ಮಾಡುತ್ತಿದೆ ಎಂದು ತಿಳಿದುಬಂದಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಇದು ಕೋವಿಡ್ ಕರ್ಫ್ಯೂ ಅಲ್ಲ,ಬಿಜೆಪಿ ಕರ್ಫ್ಯೂ- ಡಿಕೆಶಿ

0

ರಾಜ್ಯದಲ್ಲಿ ಶೇ.2ರಷ್ಟೂ ಸೋಂಕು ಇಲ್ಲ. ಕರ್ಫ್ಯೂ ಲಾಕ್ ಡೌನ್ ಜಾರಿಗೆ ಸರ್ಕಾರಕ್ಕೆ ತನ್ನದೇ ಆದ ಮಾನದಂಡವಿದೆ. ಸೋಂಕಿತರು ಆಸ್ಪತ್ರೆಗೆ ದಾಖಲಾಗುವರು,ಐಸಿಯು ಈ ದಾಖಲಾತಿಯ ಮಾನದಂಡ ಇರಬೇಕು. ಆದರೆ ಬಿಜೆಪಿ ಸರ್ಕಾರ ವಿಜ್ಞಾನ, ತಾಂತ್ರಿಕತೆ ಬಗ್ಗೆ ಬದಲಿಗೆ ಕೇವಲ ರಾಜಕೀಯದ ಬಗ್ಗೆ ಮಾತನಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಿಡಿಕಾರಿದ್ದಾರೆ.
ಆರೋಗ್ಯ ಇಲಾಖೆ ಕಾರ್ಯದರ್ಶಿಗಳು ಆಯೋಗಕ್ಕೆ ಸಲ್ಲಿಸಿದ ಪ್ರಮಾಣಪತ್ರದಲ್ಲಿ ಆರೋಗ್ಯ ಸಮಸ್ಯೆ ಇಲ್ಲ. ಚುನಾವಣೆ ಮಾಡಬಹುದು ಎಂದಿದ್ದಾರೆ. ನಿರ್ಬಂಧ ಹಿಂಪಡೆಯುವಂತೆ ಸಿಎಂಗೆ ಪತ್ರ ಬರೆದು ಒತ್ತಾಯಿಸಿದ್ದೇನೆ. ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರು 18 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ನೀಡಲು ಆಂದೋಲನ ಮಾಡುವ ಚಿಂತನೆಯಲ್ಲಿದ್ದಾರೆ ಎಂದರು.
ಯಾವುದೇ ಜಿಲ್ಲೆಯಲ್ಲಿ ಪ್ರವಾಸಿತಾಣಗಳ ಬಂದ್ ಇಲ್ಲ. ಕೇವಲ ರಾಮನಗರದಲ್ಲಿ ಮಾತ್ರ ಬಂದ್ ಮಾಡಿದ್ದಾರೆ. ಸರ್ಕಾರ ಜಿಲ್ಲಾಧಿಕಾರಿಗಳ ಮೂಲಕ ಪತ್ರ ಕಳುಹಿಸಿದ್ದು, ಅದರಲ್ಲಿ ಪಾದಯಾತ್ರೆಗೆ ಅವಕಾಶವಿಲ್ಲ ಎಂದಿದ್ದಾರೆ. ನಾವು ಇಬ್ಬರಾದರೂ ನಡೆಯುತ್ತೇವೆ. ಜನ ಏನು ಮಾಡುತ್ತಾರೆ ನೋಡೋಣ ಎಂದು ತಿಳಿಸಿದರು.
ಕೆಪಿಸಿಸಿ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಿರ್ಬಂಧ ವಿರೋಧಿಸಿ ಸಾವಿರಾರು ಜನರು ಪ್ರತಿಪಕ್ಷವಾಗಿ ಏನು ಮಾಡುತ್ತಿದ್ದೀರಿ ಎಂದು ಕರೆ ಮಾಡಿ ಪ್ರಶ್ನಿಸುತ್ತಿದ್ದಾರೆ. ಮಾಹಿತಿ ಕಲೆಹಾಕಿದಾಗ ಶೇ.2ರಷ್ಟು ಸೋಂಕು ಇಲ್ಲದಿರುವುದು ಕಂಡುಬಂದಿದೆ. ಇದು ಕೋವಿಡ್ ಕರ್ಫ್ಯೂ ಅಲ್ಲ.ಬಿಜೆಪಿ ಕರ್ಫ್ಯೂ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯದ ಇತಿಹಾಸದಲ್ಲಿ ಇಂತಹ ದ್ವೇಷದ ರಾಜಕಾರಣ ಕಂಡಿಲ್ಲ. ರಾಜಕಾರಣ ಮಾಡುತ್ತಿರುವುದು ಸರ್ಕಾರಕ್ಕೆ ಶೋಭೆ ತರುವುದಿಲ್ಲ.ಸಿಎಂಗೆ ಭಗವಂತ ಬುದ್ಧಿ ನೀಡಲಿ ಎಂದು ಹೇಳಿದರು.
ಸೋಂಕು ಹೆಚ್ಚಳದ ಬೋಗಸ್ ಅಂಕಿ ಸಂಖ್ಯೆ ಬಗ್ಗೆ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆ ಮಾಡಿಸಬೇಕು. ಎಮ್ಮೆಲ್ಸಿಗಳ ಪ್ರಮಾಣ ವಚನ ವೇಳೆ ಕಾನೂನು ಉಲ್ಲಂಘಿಸಿದವರ ವಿರುದ್ಧ ಪ್ರಕರಣ ದಾಖಲಿಸುವಂತೆ ಮುಖ್ಯ ಕಾರ್ಯದರ್ಶಿಗಳನ್ನು ಒತ್ತಾಯಿಸುತ್ತೇನೆ ಎಂದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ರಾಜ್ಯದಲ್ಲಿ 107 ಒಮಿಕ್ರಾನ್ ಸೋಂಕಿತರು

0

ಕರ್ನಾಟಕದಲ್ಲಿ 8,449 ಜನರಿಗೆ ಕೊರೊನಾ ಸೋಂಕು ದೃಡಪಟ್ಟಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ ಮೂವತ್ತು ಸಾವಿರ ದಾಟಿದೆ.

ಕೊರೋನಾ ಪರೀಕ್ಷೆಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ. ದಿನವೊಂದಕ್ಕೆ 2.03 ಲಕ್ಷ ಮಾದರಿಗಳನ್ನು ಪರೀಕ್ಷಿಸಲಾಗಿದೆ. ಸೋಂಕು ದೃಡ ಪ್ರಮಾಣವು ಶೇ.4.15ಕ್ಕೆ ಹೆಚ್ಚಾಗಿದೆ. ರಾಜ್ಯದಲ್ಲಿ ವಾರದಿಂದ ಪ್ರಕರಣಗಳ ಸಂಖ್ಯೆ ಏರುಗತಿ ಪಡೆದುಕೊಂಡಿದೆ. ಈ ತಿಂಗಳ ಏಳು ದಿನಗಳಲ್ಲಿ 23,715 ಜನರಿಗೆ ಕೊರೊನಾ ಸೋಂಕು ದೃಡಪಟ್ಟಿದೆ.

ಕೊರೋನಾ ರೂಪಾಂತರಿ ತಳಿ ಓಮಿಕ್ರಾನ್ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಪತ್ತೆಯಾಗುತ್ತಿವೆ. ಹೊಸ ತಳಿಯ ಸೋಂಕು 107 ಮಂದಿಯಲ್ಲಿ ಹೊಸದಾಗಿ ದೃಡಪಟ್ಟಿದೆ.

ಈ ಮಾದರಿಯ ಪ್ರಕರಣಗಳ ಒಟ್ಟು ಸಂಖ್ಯೆ 333ಕ್ಕೆ ಹೆಚ್ಚಾಗಿದೆ. ರಾಜ್ಯದಲ್ಲಿ ಇದುವರೆಗೆ 2,937 ಡೆಲ್ಟಾ ಪ್ರಕರಣಗಳು ಮತ್ತು ಡೆಲ್ಟಾ ಉಪತಳಿಯ 1,350 ಪ್ರಕರಣಗಳು ವರದಿಯಾಗಿವೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಉತ್ತರ ಪ್ರದೇಶ:ಕೃಷಿ ಪಂಪ್ ಸೆಟ್ ಕರೆಂಟ್ ಬಿಲ್ ಶೇ ಐವತ್ತು ಕಡಿತ

0

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರೈತರಿಗೆ ಸಿಹಿ ಸುದ್ದಿ ನೀಡಿದ್ದಾರೆ.
ಕೃಷಿ ವಿದ್ಯುತ್ ಬಿಲ್ ಗೆ ಶೇ.50ರಷ್ಟು ರಿಯಾಯಿತಿ ಘೋಷಿಸಿದ್ದಾರೆ.
ಚುನಾವಣೆ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳು ಸೇರಿ ರೈತರಿಗೆ ಸಾಲು ಸಾಲು ಭರವಸೆ ನೀಡುತ್ತಿರುವಾಗಲೇ ಯೋಗಿ ಅವರು ರೈತರ ಮೇಲಿನ ಹೊರೆ ಇಳಿಸಿದ್ದಾರೆ.
ಆ ಮೂಲಕ ಚುನಾವಣೆಯಲ್ಲಿ ರೈತರು ಮತಗಳನ್ನು ಸೆಳೆಯಲು ಯತ್ನಿಸುತ್ತಿದ್ದಾರೆ. ರಾಜ್ಯಾದ್ಯಂತ ಜಮೀನಿನಲ್ಲಿ ಮೀಟರ್ ಅಳವಡಿಸಿಕೊಂಡ ರೈತರು ಯೂನಿಟ್ ಗೆ ಎರಡು ರೂಪಾಯಿ ಪಾವತಿಸಬೇಕು. ಅದಕ್ಕೆ ಈಗ ಶೇ.50ರಷ್ಟು ವಿನಂತಿ ನೀಡಿರುವುದರಿಂದ ಪಾವತಿ ಮೊತ್ತ ಯೂನಿಟ್ ಗೆ ಒಂದು ರೂ.ಗೆ ಇಳಿದಿದೆ. ಅಲ್ಲದೆ, ಒಂದು ಅಶ್ವಶಕ್ತಿ ಮೋಟರ್ ಇದ್ದರೆ, ಮಾಸಿಕ ಪಾವತಿಸಬೇಕಿದ್ದ 70 ರೂ.ಅನ್ನು 35 ರೂ.ಗೆ ಇಳಿಸಲಾಗಿದೆ ಎಂದು ತಿಳಿದುಬಂದಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಪ್ರೊ ಕಬಡ್ಡಿ ಲೀಗ್ ಸ್ಟೀಲರ್ಸ್ ಜಯ ಪ್ಯಾಂಥರ್ಸ್ ವಿಜಯ

0

ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿರುವ ಶೆರಟಾನ್ ಗ್ರ್ಯಾಂಡ್ ಹೋಟೆಲ್ ಮೈದಾನದಲ್ಲಿ ನಡೆಯುತ್ತಿರುವ ಪ್ರೊ ಕಬಡ್ಡಿ ಲೀಗ್ ಪಂದ್ಯಾವಳಿಯು ಶುಕ್ರವಾರ 4 ತಂಡಗಳ ನಡುವೆ ಪಂದ್ಯ ನಡೆಯಿತು.

ವಾರಿಯರ್ಸ್ ವಿರುದ್ಧ ಸ್ಟೀಲರ್ಸ್ ಗೆ ಭರ್ಜರಿ ಜಯ
ಮೊದಲನೇ ಪಂದ್ಯವು:
ಬೆಂಗಾಲ್ ವಾರಿಯರ್ಸ್(37) ಮತ್ತು ಹರಿಯಾಣ ಸ್ಟೀಲರ್ಸ್(41) ತಂಡಗಳ ನಡುವೆ ಪಂದ್ಯ ನಡೆಯಿತು. ಬೆಂಗಾಲ್ ವಾರಿಯರ್ಸ್ ತಂಡವು ಹರಿಯಾಣ ಸ್ತೀಲರ್ಸ್ ತಂಡದ ವಿರುದ್ಧ 4 ಅಂಕಗಳ ಅಂತರದಿಂದ ಸೋಲನ್ನು ಅನುಭವಿಸಿತು.

ಪ್ಯಾಂಥರ್ಸ್ ಗೆ ಮಣಿದ ಪಲ್ಟನ್
ಎರಡನೇ ಪಂದ್ಯವು:
ಜೈಪುರ್ ಪಿಂಕ್ ಪ್ಯಾಂಥರ್ಸ್(31) ಮತ್ತು ಪುಣೇರಿ ಪಲ್ಟನ್(26) ತಂಡಗಳ ನಡುವೆ ಪಂದ್ಯ ನಡೆಯಿತು.ಪುಣೇರಿ ಪಲ್ಟನ್ ವಿರುದ್ಧ ಜೈಪುರ್ ಪಿಂಕ್ ಪ್ಯಾಂಥರ್ಸ್ 5 ಅಂಕಗಳ ಅಂತರದಿಂದ ರೋಚಕ ಜಯ ಸಾಧಿಸಿತು.
ಇಂದು ನಡೆಯಲಿರುವ ಪಂದ್ಯಗಳು.
೧. ಯು.ಪಿ ಯೋಧಾ ಮತ್ತು ದಬಾಂಗ್ ಡೆಲ್ಲಿ
ಸಮಯ:7.30
೨. ಯು.ಮುಂಬಾ ಮತ್ತು ತೆಲುಗು ಟೈಟನ್ಸ್
ಸಮಯ:8.30
೩. ಗುಜರಾತ್ ಜಯಂಟ್ಸ್ ಮತ್ತು ಪಟ್ನಾ ಪೈರೇಟ್ಸ್
ಸಮಯ:9.30

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಪಂಜಾಬ್ ಪ್ರಧಾನಿ ಭೇಟಿ: ಸ್ವತಂತ್ರ ತನಿಖೆ ಅಗತ್ಯ:ತುಷಾರ್ ಮೆಹ್ತಾ

0

ಮಾನ್ಯ ಪ್ರಧಾನಿ ನರೇಂದ್ರ ಮೋದಿ ಅವರು ಪಂಜಾಬ್ ಗೆ ಭೇಟಿ ನೀಡಿದ ಸಂದರ್ಭದ ಸಂಚಾರದ ವಿವರ ಹಾಗೂ ಅಲ್ಲಿ ಆಗಿರುವ ಭದ್ರತಾ ಲೋಪಗಳ ಬಗ್ಗೆ ಈಗ ಸಂಗ್ರಹಿಸಿರುವ ವಿವರಗಳನ್ನು ತಕ್ಷಣವೇ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ನ ರಿಜಿಸ್ಟರ್ ಜನರಲ್ ಗೆ ಸಲ್ಲಿಸಿ ಎಂದು ಪಂಜಾಬ್ ಪೊಲೀಸ್ ಇಲಾಖೆ, ಕೇಂದ್ರದ ತನಿಖಾ ಸಂಸ್ಥೆಗಳಿಗೆ ಸುಪ್ರೀಂಕೋರ್ಟ್ ಆದೇಶವನ್ನು ಸೂಚಿಸಿದೆ.

ಮೋದೀಜಿ ಅವರ ಪಂಜಾಬ್ ಭೇಟಿಯ ಸಂದರ್ಭದಲ್ಲಿ ಆದ ಭದ್ರತಾ ಲೋಪದ ವಿರುದ್ಧ ಸ್ವತಂತ್ರ ತನಿಖೆ ನಡೆಸಬೇಕು. ಈ ಬಗ್ಗೆ ತನಿಖೆ ನಡೆಸಲು ಪಂಜಾಬ್ ಸರ್ಕಾರವು ರಚಿಸಿರುವ ಸಮಿತಿಯನ್ನು ವಜಾ ಮಾಡಬೇಕು ಎಂದು ಲಾಯರ್ಸ್ ವಾಯ್ಸ್ ಎಂಬ ಸಂಸ್ಥೆ ಸಲ್ಲಿಸಿದ ಅರ್ಜಿಯ ವಿಚಾರಣೆ ವೇಳೆ ಸುಪ್ರೀಂಕೋರ್ಟ್ ಈ ಸೂಚನೆಯನ್ನು ನೀಡಿದೆ.

ಪಂಜಾಬ್ ಸರ್ಕಾರ ಮತ್ತು ಕೇಂದ್ರ ಸರ್ಕಾರವು ಈ ಘಟನೆ ಕುರಿತು ತನಿಖೆ ನಡೆಸಲು ರಚಿಸಿರುವ ಸಮಿತಿಗಳು ತಮ್ಮ ತನಿಖೆಯನ್ನು, ಅರ್ಜಿಯ ಮುಂದಿನ ವಿಚಾರಣೆ ಯವರೆಗೆ ನಿಲ್ಲಿಸುವಂತೆ ಮುಖ್ಯನ್ಯಾಯಮೂರ್ತಿ ಎನ್. ವಿ. ರಮಣ ಅದರ ನೇತೃತ್ವದ ಪೀಠವು ಆದೇಶಿಸಿದೆ.

ಮಾನ್ಯ ಪ್ರಧಾನಿ ನರೇಂದ್ರ ಮೋದಿ ಅವರ ಸಂಚಾರದ ವಿವರ ಹಾಗೂ ಘಟನೆಗೆ ಸಂಬಂಧಿಸಿದಂತೆ ಇದುವರೆಗೆ ಕಲೆಹಾಕಿರುವ ವಿವರಗಳನ್ನು ತಕ್ಷಣವೇ ಸಂಗ್ರಹಿಸಬೇಕು. ಹಾಗೂ ಭದ್ರಪಡಿಸಬೇಕು ಎಂದು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ನ ರಿಜಿಸ್ಟರ್ ಜನರಲ್ ಗೆ ಪೀಠವು ಸೂಚನೆ ನೀಡಿದೆ.

ಇದು ಅಪರೂಪದವಾದ ಘಟನೆಯಾಗಿದೆ. ಜಾಗತಿಕ ಸಮುದಾಯದ ಎದುರು ಅಪಮಾನಕ್ಕೆ ತುತ್ತಾಗುವ ಅಂತಹ ಘಟನೆ. ಇದು ಗಡಿಯಾಚೆಗಿನ ಭಯೋತ್ಪಾದನೆ ಯಾಗಿರುವ ಸಾಧ್ಯತೆಯಿದೆ. ನಿಷೇಧಿತ ಉಗ್ರ ಸಂಘಟನೆ ಸಿಖ್ ಫಾರ್ ಜಸ್ಟಿಸ್ ಇಂತಹದ್ದೇ ಚಟುವಟಿಕೆಗೆ ಕರೆನೀಡಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಆದ್ದರಿಂದ ಈ ಬಗ್ಗೆ ಸ್ವತಂತ್ರ ತನಿಖೆ ಅಗತ್ಯವಿದೆ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಪ್ರತಿಪಾದಿಸಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಜಮ್ಮು ಕಾಶ್ಮೀರ- ಮೂವರು ಉಗ್ರರ ಹತ್ಯೆ

0

ಹೊಸ ವರ್ಷದ ಆರಂಭದಿಂದಲೇ ಜಮ್ಮು-ಕಾಶ್ಮೀರದಲ್ಲಿ ಉಗ್ರ ನಿಗ್ರಹ ಕಾರ್ಯಾಚರಣೆ ತೀವ್ರಗೊಳಿಸಿರುವ ಭದ್ರತಾ ಸಿಬ್ಬಂದಿ ಮೂವರು ಉಗ್ರರನ್ನು ಹತ್ಯೆಗೈದಿದ್ದಾರೆ.
ಇದರೊಂದಿಗೆ ಹೊಸವರ್ಷದ ಮೊದಲ ವಾರದಲ್ಲಿಯೇ 16 ಉಗ್ರರನ್ನು ಹೊಡೆದುರುಳಿಸಿದಂತಾಗಿದೆ.
ಎನ್ ಕೌಂಟರ್ ಸ್ಥಳದಿಂದ 3 ಎಕೆ 56 ರೈಫಲ್ ಸೇರಿ ಹಲವು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಮೂವರಲ್ಲಿ ಒಬ್ಬರನ್ನು ಶ್ರೀನಗರದ ವಸೀಂ ಎಂದು ತಿಳಿದುಬಂದಿದ್ದು, ಉಳಿದ ಇಬ್ಬರ ಕುರಿತು ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಬುದ್ಗಾಮ್ ಜಿಲ್ಲೆಯ ಜೊಲ್ವಾ ಪ್ರದೇಶದಲ್ಲಿ ಉಗ್ರರು ಅಡಗಿರುವ ಕುರಿತು ಮಾಹಿತಿ ಪಡೆದ ಯೋಧರು ರಾತ್ರಿಯಿಂದಲೇ ಕಾರ್ಯಾಚರಣೆ ಕೈಗೊಂಡಿದ್ದರು. ಗುಂಡಿನ ಚಕಮಕಿಯಲ್ಲಿ ಜೈಷೆ ಮೊಹಮ್ಮದ್ ಉಗ್ರ ಸಂಘಟನೆಯ ಮೂವರನ್ನು ಹೊಡೆದುರುಳಿಸಲಾಗಿದೆ ಎಂದು ಕಾಶ್ಮೀರ ಐಜಿಪಿ ವಿಜಯ್ ಕುಮಾರ್ ಮಾಹಿತಿ ನೀಡಿದರು.
ಜಮ್ಮು-ಕಾಶ್ಮೀರದಲ್ಲಿ 2022ರ ಮೊದಲ ವಾರದಲ್ಲಿಯೇ ಭದ್ರತಾ ಸಿಬ್ಬಂದಿಯ ಹಲವು ಕಾರ್ಯಾಚರಣೆ ಕೈಗೊಳ್ಳುವ ಮೂಲಕ 16 ಉಗ್ರರನ್ನು ಹತ್ಯೆಗೈದಿದ್ದಾರೆ. ಪುಲ್ವಾಮ, ಕುಲ್ಗಾಮ್ , ಶ್ರೀನಗರ ಸೇರಿ ಹಲವು ಜಿಲ್ಲೆಗಳಲ್ಲಿ ಯೋಧರು ಸತತವಾಗಿ ಕಾರ್ಯಾಚರಣೆ ಕೈಗೊಳ್ಳುವ ಮೂಲಕ ಉಗ್ರರನ್ನು ಹೊಡೆದುರುಳಿಸಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ವೀರ್ ಗಾಥಾ ರಚನಾ ಸ್ಪರ್ಧೆ: ರಾಜ್ಯದ ಐವರು ವಿಜೇತರು

0

ಸ್ವಾತಂತ್ರ್ಯ ಸುವರ್ಣ ಮಹೋತ್ಸವದ ಅಂಗವಾಗಿ ರಕ್ಷಣಾ ಸಚಿವಾಲಯ ಶಾಲಾ ಮಕ್ಕಳಿಗೆ ಹಮ್ಮಿಕೊಂಡಿದ್ದ ವೀರ್ ಗಾಥಾ ಸ್ಪರ್ಧೆಯಲ್ಲಿ ರಾಜ್ಯದ ಐವರು ವಿದ್ಯಾರ್ಥಿಗಳು ಪ್ರಶಸ್ತಿ ಪಡೆದಿದ್ದಾರೆ.
11 ಮತ್ತು 12ನೇ ತರಗತಿ ವಿಭಾಗದಲ್ಲಿ ಬೆಂಗಳೂರಿನ ಸೇಂಟ್ ಜೋಸೆಫ್ ಕಂಪೋಸಿಟ್ ಕಾಲೇಜಿನ ಆಕಾಂಕ್ಷಾ ವಿ.ಮಾಲ್ಡೆ, 9 ಮತ್ತು 10ನೇ ತರಗತಿ ವಿಭಾಗದಲ್ಲಿ ಶಿವಮೊಗ್ಗದ ಜ್ಞಾನದೀಪ ಶಾಲೆಯ ಎಸ್. ಅಮೃತಾ, ಕಲಬುರ್ಗಿ ಜಿಲ್ಲೆ ಚಿಂಚೋಳಿಯ ವಿಕ್ಯಾಟ್ ಡಿಎವಿ ಮತ್ತು 3ರಿಂದ 5ನೇ ತರಗತಿ ವಿಭಾಗದಲ್ಲಿ ಮಾರತ್ತ ಹಳ್ಳಿಯ ಸೇಂಟ್ ಪ್ಯಾಟ್ರಿಕ್ಸ್ ಅಕಾಡೆಮಿಯ ನಂದಿಕಾ ಎ. ಕುಮಾರ್ ಮತ್ತು ಮಂಗಳೂರಿನ ಅಮೃತ ವಿದ್ಯಾಲಯಂ ಕುಂಟಾಡಿ ಪ್ರಥಮ್ ಕಿಣಿ ವೀರ್ ಗಾಥಾ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಮಕ್ಕಳಲ್ಲಿ ದೇಶಭಕ್ತಿ ಮೂಡಿಸುವ ಸಲುವಾಗಿ ಶಿಕ್ಷಣ ಸಚಿವಾಲಯ ಹಾಗೂ ಸಿಬಿಎಸ್ ಇ ಸಹಯೋಗದಲ್ಲಿ ರಕ್ಷಣಾ ಸಚಿವಾಲಯ ವೀರಯೋಧರ ಶೌರ್ಯ, ಸಾಹಸ, ತ್ಯಾಗ ಮಾಡಿದ ಮತ್ತು ಶೌರ್ಯ ಪ್ರಶಸ್ತಿ ಪಡೆದವರ ಬಗ್ಗೆ ಕತೆಗಳನ್ನೊಳಗೊಂಡ ವೀರ್ ಗಾಥಾ ಸ್ಪರ್ಧೆಯನ್ನು ಹಮ್ಮಿಕೊಂಡಿತ್ತು.
ದೇಶದ ಒಟ್ಟು 4,788 ಶಾಲೆಗಳ 8,03,900 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಹಲೋ ಹಂತಗಳಲ್ಲಿ ಸ್ಪರ್ಧೆ ನಡೆದು ಅಂತಿಮ ಹಂತದ ಸೂಪರ್ -25 ಆಯ್ಕೆ ನಡೆಯಿತು. ಅದರಲ್ಲಿ ರಾಜ್ಯದ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.
ವಿಜೇತರಿಗೆ ಜನವರಿ 25ರಂದು ಹೊಸದಿಲ್ಲಿಯಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ ಎಂದು ತಿಳಿದುಬಂದಿದೆ.