Friday, February 13, 2026
Friday, February 13, 2026
Home Blog Page 1776

ಹೊಸ ಪಡಿತರ ಚೀಟಿ ವಿಲೇವಾರಿ

0

ಪಡಿತರ ಚೀಟಿಗೆ ಹೊಸದಾಗಿ ಅರ್ಜಿ ಸಲ್ಲಿಸಿ, ಕಳೆದ ಮೂರ್ನಾಲ್ಕು ವರ್ಷಗಳಿಂದ ವಿಲೇವಾರಿಯಾಗದೆ ಬಾಕಿ ಇದ್ದ ಲಕ್ಷಾಂತರ ಮಂದಿಗೆ ಇದೀಗ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಪಡಿತರ ಚೀಟಿಗಳನ್ನು ಮಂಜೂರು ಮಾಡಿದೆ.
ತಾಲೂಕು ಕಚೇರಿಗಳಲ್ಲಿರುವ ಆಹಾರ ಇಲಾಖೆ ಶಾಖೆ ಅಥವಾ ಆಯಾ ಕ್ಷೇತ್ರದ ಆಹಾರ ಇಲಾಖೆಯ ಉಪ ಕಚೇರಿಗಳಲ್ಲಿ ಸ್ವೀಕೃತಿ ಪತ್ರದೊಂದಿಗೆ ಹೊಸ ಕಾರ್ಡ್ ಗಳನ್ನು ಪಡೆಯಬಹುದು.
ಈಗ ಹೊಸ ಪಡಿತರ ಚೀಟಿಗಳಲ್ಲಿ ತಿದ್ದುಪಡಿಗೂ ಅವಕಾಶ ಕಲ್ಪಿಸಲಾಗಿದೆ. ಹೊಸ ಪಡಿತರ ಚೀಟಿಗೆ ಆಧಾರ್ ಕಾರ್ಡ್ ಮತ್ತು ಮನೆಯಲ್ಲಿ ಹಿರಿಯ ಮಹಿಳೆಯ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಲಗತ್ತಿಸುವುದು ಕಡ್ಡಾಯ.
ಕಾರ್ಡ್ ನಲ್ಲಿ ಹೆಸರು ಸೇರಿಸಬೇಕಾದರೆ ಆಧಾರ್ ನಂಬರ್ ಜೊತೆಗೆ ಜಾತಿ ಮತ್ತು ಆದಾಯ ಪತ್ರ ಕಡ್ಡಾಯವಾಗಿ ಇರಬೇಕು. ಇದರಲ್ಲಿ ಆರು ವರ್ಷದೊಳಗಿನ ಮಕ್ಕಳನ್ನು ಸೇರ್ಪಡೆ ಮಾಡಬೇಕೆಂದರೆ ಮೊಬೈಲ್ ನಂಬರ್ ಜೋಡಣೆಯಾಗಿರುವ ಆಧಾರ್ ಸಂಖ್ಯೆ ಮತ್ತು ಜನನ ಪ್ರಮಾಣ ಪತ್ರ ಕಡ್ಡಾಯವಾಗಿ ಬೇಕಾಗುತ್ತದೆ.
ಅರ್ಹತೆಯಿಲ್ಲದವರೂ ಎಪಿಎಲ್ ಕಾರ್ಡ್ ಗಳನ್ನು ಪಡೆದು ಇಲಾಖೆಗೆ ವಂಚಿಸುತ್ತಿದ್ದರು. ಕೆಲವರು ಅನಧಿಕೃತವಾಗಿ ಕಾರ್ಡುಗಳನ್ನು ಹೊಂದಿದ್ದು , ಪಡಿತರ ಪಡೆದು ಮಾರಿಕೊಳ್ಳುತ್ತಾ, ಅರ್ಹರಿಗೆ ಅನ್ನಕ್ಕೆ ಹೊಡೆತ ನೀಡಿದ್ದರು. ಹೀಗಾಗಿ ಎಪಿಎಲ್ ಕಾರ್ಡ್ ಹಿಂಪಡೆದು, ಬಿಪಿಎಲ್ ಪಟ್ಟಿಗೆ ಸೇರಿಸುವುದು, ಅರ್ಹರಲ್ಲದಿದ್ದರೂ ಯಾರದು ಹೆಸರನ್ನು ಪಟ್ಟಿಗೆ ಸೇರಿಸುವುದು ಸೇರಿದಂತೆ ಹಲವು ಅಕ್ರಮಗಳು ನಡೆಯುತ್ತಿದ್ದವು. ಹೀಗಾಗಿ ಅವುಗಳನ್ನು ತಡೆದು ಅನರ್ಹ ಪಡಿತರ ಚೀಟಿಗಳನ್ನು ರದ್ದುಗೊಳಿಸಲು ಇಲಾಖೆಯು ಹೊಸದಾಗಿ ಸಲ್ಲಿಸಿದ ಅರ್ಜಿಗಳ ವಿಲೇವಾರಿಯನ್ನು 2017ರಿಂದ ತಡೆಹಿಡಿಯಲಾಗಿತ್ತು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಗಾಂಧಿ ಸಾಕ್ಷಿ ಕಾಯಕ ತಂತ್ರಾಂಶ ಬಿಡುಗಡೆ

0

ಗ್ರಾಮೀಣ ಕಾಮಗಾರಿಗಳ ಭೌತಿಕ ಮತ್ತು ಆರ್ಥಿಕ ಪ್ರಗತಿ ನಿಖರತೆಗಾಗಿ ಗಾಂಧಿ ಸಾಕ್ಷಿ ಕಾಯಕ ತಂತ್ರಾಂಶ ಉನ್ನತೀಕರಿಸಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಗಾಂಧಿ ಸಾಕ್ಷಿ ಕಾಯಕ 2.0 ತಂತ್ರಾಂಶವನ್ನು ವಿಧಾನಸೌಧದಲ್ಲಿ ಬಿಡುಗಡೆಗೊಳಿಸಿತು.
ಗ್ರಾಮೀಣ ಪ್ರದೇಶದಲ್ಲಿ ನಿರ್ಮಿತಿ ಕೇಂದ್ರ ,ಗ್ರಾಪಂ,ಕೆಆರ್ ಐಡಿಎಲ್ ಸೇರಿ ಹಲವು ಸಂಸ್ಥೆಗಳು ಸಿವಿಲ್ ಕಾಮಗಾರಿಗಳನ್ನು ನಡೆಸುತ್ತಿವೆ. ಈ ಮಾಹಿತಿಯನ್ನು ಒಂದೇ ವೇದಿಕೆಯಲ್ಲಿ ತರಲು ಮತ್ತು ಪಾರದರ್ಶಕತೆ ತರಲು ತಂತ್ರಾಂಶ ಅಭಿವೃದ್ಧಿಪಡಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪನವರು ತಿಳಿಸಿದ್ದಾರೆ.
ಗ್ರಾಮೀಣ ಪ್ರದೇಶದಲ್ಲಿ ಕೈಗೊಳ್ಳಲಿರುವ ರಾಜ್ಯ ಸರ್ಕಾರದ ಯಾವುದೇ ಸಿವಿಲ್ ಕಾಮಗಾರಿಗಳ ಪ್ರಸ್ತಾವನೆಯಿಂದ ಟೆಂಡರ್, ಗುತ್ತಿಗೆದಾರರ ಮಾಹಿತಿ, ಭೌತಿಕ ಪ್ರಗತಿ ಮತ್ತು ಆನ್ಲೈನ್ ಪಾವತಿ ಯವರೆಗೂ ಹಂತ ಹಂತದ ಮಾಹಿತಿಯನ್ನು ಅಳವಡಿಸುವ ತಂತ್ರಾಂಶ ಇದಾಗಿದೆ.
ಕಾಮಗಾರಿ ಆರಂಭಿಸುವ ಮುನ್ನವೇ ಕಾಮಗಾರಿಗಳನ್ನು ಅನುಷ್ಠಾನಗೊಳಿಸುವ ಪ್ರದೇಶದ ಭೌಗೋಳಿಕ ಚಿತ್ರದಲ್ಲಿ ಗುರುತಿಸುವ ವಿಧಾನವನ್ನು ಈ ತಂತ್ರಾಂಶ ಹೊಂದಿದೆ.
ಈ ತಂತ್ರಾಂಶದಿಂದ ಕಾಮಗಾರಿಗಳ ನಕಲು ತಡೆಯಬಹುದು ಹಾಗೂ ಬೌದ್ಧಿಕ ಪ್ರಗತಿಯನ್ನು ಹಂತಹಂತವಾಗಿ ತಂತ್ರಾಂಶದಲ್ಲಿ ಅಳವಡಿಸಬಹುದು.ಆನ್ ಲೈನ್ ನಲ್ಲೇ ಗುತ್ತಿಗೆದಾರರಿಗೆ ಬಿಲ್ ಪಾವತಿ ವ್ಯವಸ್ಥೆಯನ್ನೂ ಅಳವಡಿಸಲಾಗಿದೆ ಎಂದು ತಿಳಿದುಬಂದಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಮನೆಯಲ್ಲಿ ಕೋವಿಡ್ ಸೋಂಕಿತರಿದ್ದರೆ ಮಾಹಿತಿ

0

ಕೊರೋನಾ ಸೋಂಕು ಹೆಚ್ಚಿರುವ ಹಿನ್ನೆಲೆಯಲ್ಲಿ ಸೋಂಕು ಪೀಡಿತರು, ಸೌಮ್ಯ ಲಕ್ಷಣ ಇರುವವರು ಹಾಗೂ ಲಕ್ಷಣಗಳೇ ಇಲ್ಲದವರು ಮನೆಯಲ್ಲಿಯೇ ಐಸೋಲೇಟ್ ಆಗಲು ಆರೋಗ್ಯ ಇಲಾಖೆ ಸೂಚಿಸಿದೆ. ಈ ಸಂಬಂಧ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

ಕೊರೋನಾ ಸೌಮ್ಯ ಲಕ್ಷಣಗಳನ್ನು ಹೊಂದಿರುವ, ಲಕ್ಷಣ ರಹಿತ ಸೋಂಕಿತರಿಗೆ ಮಾತ್ರ ಈ ನಿಯಮ ಅನ್ವಯವಾಗುತ್ತದೆ. ಸಣ್ಣ ಪ್ರಮಾಣದಲ್ಲಿ ಉಸಿರಾಟ ತೊಂದರೆ ಆಕ್ಸಿಜನ್ ಮಟ್ಟ ಶೇ. 93ಕ್ಕಿಂತ ಕಡಿಮೆ ಇದ್ದವರು ಯಾವುದೇ ಕಾರಣಕ್ಕೂ ಮನೆಯಲ್ಲಿ ಐಸೋಲೇಟ್ ಆಗಬಾರದು.

ಇಂಥವರು ತಕ್ಷಣವೇ ಆಸ್ಪತ್ರೆಗೆ ದಾಖಲಾಗಬೇಕು ಎಂದು ಮಾರ್ಗಸೂಚಿಯಲ್ಲಿ ಉಲ್ಲೇಖಿಸಲಾಗಿದೆ.

ಸೋಂಕಿನ ಲಕ್ಷಣಗಳು ಇಲ್ಲದವರು ಈ ಅಂಶಗಳನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ಸೋಂಕಿತರನ್ನು ನೋಡಿಕೊಳ್ಳುವವರು ಕಡ್ಡಾಯವಾಗಿ 2 ಡೋಸ್ ಕೋವಿಡ್ ಲಸಿಕೆ ಪಡೆದುಕೊಂಡಿರಬೇಕು. ಮನೆಯಲ್ಲಿಯೇ ಐಸೋಲೇಟ್ ಆಗಿರುವ ಸೌಮ್ಯ ಅಥವಾ ಲಕ್ಷಣ ರಹಿತ ಸೋಂಕಿತರಿಗೆ ಮಾರ್ಗದರ್ಶನ ನೀಡಲು, ಜಿಲ್ಲೆ ಮಟ್ಟದಲ್ಲಿ ಕಂಟ್ರೋಲ್ ರೂಂ ಗಳ ಸ್ಥಾಪಿಸಿ, ಅದರ ನಂಬರ್ ನೀಡಲಾಗುತ್ತದೆ. ಅವರಿಂದ ಅಗತ್ಯ ಮಾಹಿತಿ ಪಡೆಯಬಹುದು.

60 ವರ್ಷ ಮೇಲ್ಪಟ್ಟವರ ಜೊತೆಗೆ ಇತರೆ ರೋಗಗಳಿಂದ ಬಳಲುತ್ತಿರುವವರು ಕೊರೋನಾ ಸೋಂಕಿಗೆ ಒಳಗಾಗಿ ಸೌಮ್ಯ ಲಕ್ಷಣಗಳನ್ನು ಹೊಂದಿದ್ದರೆ, ಅಥವಾ ಲಕ್ಷಣ ರಹಿತರಾಗಿದ್ದರೆ, ಅವರು ಹೋಮ್ ಐಸೋಲೇಷನ್ ಒಳಗಾಗುವಂತಿಲ್ಲ. ಸಂಬಂಧಪಟ್ಟ ವೈದ್ಯರ ಹತ್ತಿರ ಸಂಪೂರ್ಣ ತಪಾಸಣೆ ಮಾಡಿಸಿಕೊಳ್ಳಬೇಕು. ಅವರ ಸಲಹೆ ಮೇರೆಗೆ ಮನೆಯಲ್ಲಿ ಐಸೋಲೇಟ್ ಆಗಬೇಕು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ರಾಜ್ಯಮಟ್ಟದ ಯುವಜನೋತ್ಸವ ಶಿವಮೊಗ್ಗ ಜಿಲ್ಲೆ ಪ್ರಥಮ ಸ್ಥಾನ

0

ಆದಿಚುಂಚನಗಿರಿಯಲ್ಲಿ ನಡೆದ ರಾಜ್ಯ ಮಟ್ಟದ ಯುವಜನೋತ್ಸವದ 34 ಸ್ಪರ್ಧಿಗಳ ಪೈಕಿ 6 ಸ್ಪರ್ಧೆಗಳಲ್ಲಿ ಶಿವಮೊಗ್ಗ ಜಿಲ್ಲಾ ತಂಡ ಪ್ರಥಮ ಸ್ಥಾನ ಗಳಿಸಿದೆ.
ನಾಗಮಂಗಲ ತಾಲೂಕಿನ ಆದಿಚುಂಚನಗಿರಿಯಲ್ಲಿ ನಡೆದ ರಾಜ್ಯ ಮಟ್ಟದ ಯುವಜನೋತ್ಸವದಲ್ಲಿ ಸ್ಪರ್ಧೆಗಳ ವಿಜೇತರಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮತ್ತು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ್ ಅವರು ಬಹುಮಾನ ವಿತರಿಸಿದರು.
ಜನಪದ ಗೀತೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿ. ರಾಮು ತಂಡ ಪ್ರಥಮ ಸ್ಥಾನ, ಚಾಮರಾಜನಗರ ಜಿಲ್ಲೆಯ ಸಿದ್ದು ಮತ್ತು ತಂಡ ದ್ವಿತೀಯ ಮತ್ತು ಚಿಕ್ಕಮಗಳೂರು ಜಿಲ್ಲೆಯ ಸುಪ್ರೀತ್ ತಂಡ ತೃತೀಯ ಸ್ಥಾನ ಪಡೆದುಕೊಂಡಿತು. ಏಕಾಂತ ನಾಟಕ ಸ್ಪರ್ಧೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಅಭಿಷೇಕ ಕಳಸ ಪ್ರಥಮ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬಿ. ನವೀನ್ ಕುಮಾರ್ ದ್ವಿತೀಯ ಮತ್ತು ಮಂಡ್ಯ ಜಿಲ್ಲೆಯ ಅಭಿಷೇಕ್ ತೃತೀಯ ಸ್ಥಾನ ಪಡೆದುಕೊಂಡರು.
ಜನಪದ ನೃತ್ಯ ಸ್ಪರ್ಧೆ ವಿಭಾಗದಲ್ಲಿ ಮಂಡ್ಯ ಜಿಲ್ಲೆಯ ಚೈತ್ರ ಮತ್ತು ತಂಡ ಪ್ರಥಮ, ಹಾಸನ ಜಿಲ್ಲೆಯ ತೇಜಸ್ ಪ್ರಭಾಕರ್ ತಂಡ ದ್ವಿತೀಯ, ಬಾಗಲಕೋಟೆಯ ಗಜನನ ಯುವಕರ ಸಂಘ ಕೋಟಕಲ್ ತೃತೀಯ ಸ್ಥಾನ ಗೆದ್ದುಕೊಂಡಿದೆ.
ಗಿಟಾರ್ ಸ್ಪರ್ಧೆಯಲ್ಲಿ ದಾವಣಗೆರೆ ಜಿಲ್ಲೆಯ ಬಿ.ಆರ್. ಚಂದನಾ ಪ್ರಥಮ, ಶಿವಮೊಗ್ಗ ಜಿಲ್ಲೆಯ ಸಾಧಿಕ್ ತೃತೀಯ ಸ್ಥಾನ ಗೆದ್ದುಕೊಂಡಿದ್ದಾರೆ . ಛಾಯಾಚಿತ್ರ ಸ್ಪರ್ಧೆಯಲ್ಲಿ ಶಿವಮೊಗ್ಗ ಜಿಲ್ಲೆಯ ಸುಕೇಶ್ ಪ್ರಥಮ ಸ್ಥಾನ ಪಡೆದಿದ್ದಾರೆ.
ಭಾಷಣ ಸ್ಪರ್ಧೆಯಲ್ಲಿ ಶಿವಮೊಗ್ಗ ಜಿಲ್ಲೆಯ ಶಾಲಿನಿ ಪ್ರಥಮ, ಧಾರವಾಡ ಜಿಲ್ಲೆಯ ಆಕಾಶ್ ದ್ವಿತೀಯ, ಸೃಜನಶೀಲ ಬರವಣಿಗೆ ಸ್ಪರ್ಧೆಯಲ್ಲಿ ಶಿವಮೊಗ್ಗ ಜಿಲ್ಲೆಯ ಹಸೀಬ್ ತಸ್ಲೀಂ ಪ್ರಥಮ ಸ್ಥಾನ, ಯೋಗ ಸ್ಪರ್ಧೆಯಲ್ಲಿ ಶಿವಮೊಗ್ಗ ಜಿಲ್ಲೆಯ ನಿರ್ಮಲಾ ಕೋಡ್ಲಿಕರ್ ಪ್ರಥಮ ಸ್ಥಾನ ಪಡೆದಿದ್ದಾರೆ.
ವಾಟರ್ ಪೇಂಟಿಂಗ್ ನಲ್ಲಿ ಬಾಗಲಕೋಟೆ ಜಿಲ್ಲೆಯ ಬಸವರಾಜ್ ಕೋಟೆಕಲ್ ಪ್ರಥಮ, ಶಿವಮೊಗ್ಗ ಜಿಲ್ಲೆಯ ಯೋಗೇಶ್ ದ್ವಿತೀಯ ಸ್ಥಾನ ಪಡೆದಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಕೆಪಿಎಸ್ ಸಿ 2011 ರ ಗೆಜೆಟೆಡ್ “ಪ್ರೊಬೆಷನರಿ ಅಭ್ಯರ್ಥಿಗಳಿಗೆ ರಕ್ಷಣೆ

0

ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ ಸಿ) 2011ನೇ ಸಾಲಿನಲ್ಲಿ ನಡೆಸಿದ್ದ ಗೆಜೆಟೆಡ್ ಪ್ರೊಬೇಷನರಿ ಅಧಿಕಾರಿಗಳ ನೇಮಕಾತಿ ಪರೀಕ್ಷೆಯಲ್ಲಿ ಆಯ್ಕೆಯಾಗಿದ್ದ 362 ಅಭ್ಯರ್ಥಿಗಳಿಗೆ ರಕ್ಷಣೆ ನೀಡಲು ಅಗತ್ಯ ಕ್ರಮ ವಹಿಸಲು ಸಚಿವ ಸಂಪುಟ ಸಭೆ ನಿರ್ಧರಿಸಿದೆ.
ಈ ಮಾಹಿತಿ ನೀಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ, ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಲು ಸಂಪುಟ ತೀರ್ಮಾನಿಸಿದೆ. ಅದಕ್ಕೆ ಪೂರಕವಾಗಿ ಕಡತಗಳನ್ನು ಅಧ್ಯಯನ ಮಾಡಿ, ಪ್ರಸ್ತಾವ ಸಿದ್ಧಪಡಿಸುವಂತೆ ಮುಖ್ಯಮಂತ್ರಿಯವರು ನನಗೆ ಜವಾಬ್ದಾರಿ ನೀಡಿದ್ದಾರೆ ಎಂದು ಹೇಳಿದರು.
2011ರಲ್ಲಿ 362 ಗೆಜೆಟೆಡ್ ಪ್ರೋಬೇಷನರಿ ಹುದ್ದೆಗಳ ಭರ್ತಿಗೆ ಕೆಪಿಎಸ್ ಸಿ ನಡೆಸಿದ ಪರೀಕ್ಷೆಯಲ್ಲಿ ಅಕ್ರಮ, ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಈ ಕುರಿತು ಸಿಐಡಿ ತನಿಖೆಯೂ ನಡೆದಿತ್ತು. 362 ಅಭ್ಯರ್ಥಿಗಳ ನೇಮಕಾತಿ ರದ್ದುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿತ್ತು.
ಈ ಪ್ರಕರಣದಲ್ಲಿ ಕೆಪಿಎಸ್ ಸಿಯ ಆಗಿನ ಅಧ್ಯಕ್ಷರು ಮತ್ತು ಸದಸ್ಯರ ವಿರುದ್ಧ ವಿಚಾರಣೆಗೆ ಅನುಮತಿ ನೀಡಲು ಸರ್ಕಾರ ನಿರಾಕರಿಸಿತ್ತು.
ಎಲ್ಲಾ 362 ಜನರಿಗೂ ಮರು ನೇಮಕಾತಿ ಆದೇಶ ನೀಡಬೇಕೆಂಬ ಆಗ್ರಹ ಕೇಳಿಬಂದಿತ್ತು. ದಕ್ಷಿಣೆ ನೀಡುವುದಾಗಿ ಸರ್ಕಾರ ವಿಧಾನಮಂಡಲದಲ್ಲೇ ಭರವಸೆ ನೀಡಿತ್ತು. ತುಮಕೂರು ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಅವರೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಇತ್ತೀಚಿಗೆ ಪತ್ರ ಬರೆದು ಇದೇ ಬೇಡಿಕೆ ಮುಂದಿಟ್ಟಿದ್ದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಇ ಪಹಣಿ ಆದಾಯ ಮತ್ತು ಜಾತಿ ಪ್ರಮಾಣಪತ್ರ ಮನೆಬಾಗಿಲ ಸೇವೆ

0

ರಾಜ್ಯದ ಅಂದಾಜು 62.85 ಲಕ್ಷ ರೈತರ ಪಹಣಿ, ಅಟ್ಲಾಸ್ ( ಹಿಸ್ಸಾ ಸ್ಕೆಚ್) ಆದಾಯ ಮತ್ತು ಜಾತಿ ಪ್ರಮಾಣ ಪತ್ರವನ್ನು ಅವರವರ ಮನೆಮನೆಗೆ ಉಚಿತವಾಗಿ ತಲುಪಿಸುವ ಕಂದಾಯ ಇಲಾಖೆ ಮನೆಬಾಗಿಲಿಗೆ ಯೋಜನೆ ಗೆ ಇದೆ ಜ.26ರಂದು ಸರ್ಕಾರ ಚಾಲನೆ ನೀಡಲಿದೆ.
ಈ ಸಂಬಂಧ ಸುತ್ತೋಲೆ ಹೊರಡಿಸಿರುವ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್ , ಇ- ಆಡಳಿತ ಇಲಾಖೆಯಿಂದ ಪಹಣಿ,ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಕುಟುಂಬವಾರು ಪಡೆದು ಮತ್ತು ಮೋಜಣಿ ತಂತ್ರಾಂಶದಿಂದ ಸರ್ವೆ ನಕ್ಷೆ ( ಅಟ್ಲಾಸ್) ಮುದ್ರಿಸಿ, ಆ ದಾಖಲೆಗಳನ್ನು ಪ್ಲಾಸ್ಟಿಕ್ ಲಕೋಟೆಯಲ್ಲಿರಿಸಿ ಪ್ರತಿ ರೈತ ಕುಟುಂಬದ ಮನೆ ಬಾಗಿಲಿಗೆ ತಲುಪಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.
ಈ ಯೋಜನೆಗೆ ರಾಜ್ಯ ಮಟ್ಟದಲ್ಲಿ ಗಣರಾಜ್ಯೋತ್ಸವ ದಿನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ.
ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು , ತಾಲೂಕು ಮಟ್ಟದಲ್ಲಿ ಸ್ಥಳೀಯ ಶಾಸಕರು ಚಾಲನೆ ನೀಡಲಿದ್ದಾರೆ.
ಕಂದಾಯ ಇಲಾಖೆಯ ಭೂಮಿ ಉಸ್ತುವಾರಿ ಕೋಶವು ಪಹಣಿ ಮತ್ತು ಸರ್ವೆ ನಕ್ಷೆಯನ್ನು ಹಾಗೂ ಅಟಲ್ ಜೀ ಜನಸ್ನೇಹಿ ನಿರ್ದೇಶನಾಲಯವು ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ಕುಟುಂಬವಾರು ಅನುಕೂಲವಾಗುವಂತೆ ಪಿಡಿಎಫ್ ನಮೂನೆಯಲ್ಲಿ ಸಿದ್ಧಪಡಿಸಿಕೊಳ್ಳಬೇಕು.
ಈ ಪಿಡಿಎಫ್ ದಾಖಲೆಯನ್ನು ಜಿಲ್ಲೆಯಲ್ಲಿ ಮುದ್ರಿಸಲು ಅನುಕೂಲವಾಗುವಂತೆ ಜಿಲ್ಲಾಧಿಕಾರಿಗಳಿಗೆ ಜ.15ರ ಒಳಗೆ ಕಳುಹಿಸಬೇಕು ಎಂದು ಅವರು ಸೂಚಿಸಿದ್ದಾರೆ.
ಜಿಲ್ಲಾಧಿಕಾರಿಗಳು ಪಿಡಿಎಫ್ ದಾಖಲೆಗಳನ್ನು ನಿಗದಿತ ಅವಧಿಯಲ್ಲಿ ಮುದ್ರಿಸಲು ಸಾಮರ್ಥ್ಯವಿರುವ ಮುದ್ರಣಾಲಯವನ್ನು ಜಿಲ್ಲೆಯಲ್ಲಿ ಗುರುತಿಸಬೇಕು.
ಮುದ್ರಣವಾದ ದಾಖಲೆಗಳನ್ನು ನೀಡಲು ಅಗತ್ಯ ಸಂಖ್ಯೆಯ ಲಕೋಟೆಯನ್ನು ಭೂಮಾಪನ ಇಲಾಖೆಯ ಆಯುಕ್ತರು ಜಿಲ್ಲೆಗಳಿಗೆ ಒದಗಿಸಬೇಕು.
ದಾಖಲೆಗಳನ್ನು ಪ್ಲಾಸ್ಟಿಕ್ ಲಕೋಟೆಯಲ್ಲಿ ಇರಿಸಿ ಕಂದಾಯ ಅಧಿಕಾರಿಗಳು ವಿಳಂಬ ಇಲ್ಲದಂತೆ 26ರಂದೇ ರಾಜ್ಯದ ಎಲ್ಲ ರೈತರ ಮನೆಬಾಗಿಲಿಗೆ ತಲುಪಿಸಬೇಕು.
ಯೋಜನೆಗೆ ಅಗತ್ಯವಿರುವ ಅನುದಾನವನ್ನು ಜಿಲ್ಲಾಧಿಕಾರಿಗಳಿಗೆ ನೀಡಲಾಗುತ್ತದೆ ಎಂದು ತಿಳಿದುಬಂದಿದೆ. ಈ ರೀತಿಯ ಹೊಸ ಪ್ರಯತ್ನವು ರಾಜ್ಯದ ಎಲ್ಲಾ ರೈತ ಕುಟುಂಬಗಳಿಗೆ ಅನುಕೂಲಕರವಾಗಲಿದೆ. ಇದರಿಂದ ಆದಾಯ ಪ್ರಮಾಣ ಪತ್ರ ಮತ್ತು ಪಹಣಿ ಪಡೆಯಲು ರೈತರು ಸಂಬಂಧಪಟ್ಟ ಇಲಾಖೆಗಳಿಗೆ ಅಲೆಯುವುದು ತಪ್ಪಿದಂತಾಗುತ್ತದೆ. ಈ ಸಂಬಂಧ ನಡೆಯುವ ಭ್ರಷ್ಟಾಚಾರವೂ ಕೂಡ ತಿಲಾಂಜಲಿ ಕೊಟ್ಟಂತಾಗುತ್ತದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಏರಿಕೆ

0

ಕೊರೋನಾ ಸೋಂಕು ಹೆಚ್ಚಿರುವ ಹಿನ್ನೆಲೆಯಲ್ಲಿ ಸೋಂಕು ಪೀಡಿತರು, ಸೌಮ್ಯ ಲಕ್ಷಣ ಇರುವವರು ಹಾಗೂ ಲಕ್ಷಣಗಳೇ ಇಲ್ಲದವರು ಮನೆಯಲ್ಲಿಯೇ ಐಸೋಲೇಟ್ ಆಗಲು ಆರೋಗ್ಯ ಇಲಾಖೆ ಸೂಚಿಸಿದೆ. ಈ ಸಂಬಂಧ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

ಕೊರೋನಾ ಸೌಮ್ಯ ಲಕ್ಷಣಗಳನ್ನು ಹೊಂದಿರುವ, ಲಕ್ಷಣ ರಹಿತ ಸೋಂಕಿತರಿಗೆ ಮಾತ್ರ ಈ ನಿಯಮ ಅನ್ವಯವಾಗುತ್ತದೆ. ಸಣ್ಣ ಪ್ರಮಾಣದಲ್ಲಿ ಉಸಿರಾಟ ತೊಂದರೆ ಆಕ್ಸಿಜನ್ ಮಟ್ಟ ಶೇ. 93ಕ್ಕಿಂತ ಕಡಿಮೆ ಇದ್ದವರು ಯಾವುದೇ ಕಾರಣಕ್ಕೂ ಮನೆಯಲ್ಲಿ ಐಸೋಲೇಟ್ ಆಗಬಾರದು.

ಇಂಥವರು ತಕ್ಷಣವೇ ಆಸ್ಪತ್ರೆಗೆ ದಾಖಲಾಗಬೇಕು ಎಂದು ಮಾರ್ಗಸೂಚಿಯಲ್ಲಿ ಉಲ್ಲೇಖಿಸಲಾಗಿದೆ.

ಸೋಂಕಿನ ಲಕ್ಷಣಗಳು ಇಲ್ಲದವರು ಈ ಅಂಶಗಳನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ಸೋಂಕಿತರನ್ನು ನೋಡಿಕೊಳ್ಳುವವರು ಕಡ್ಡಾಯವಾಗಿ 2 ಡೋಸ್ ಕೋವಿಡ್ ಲಸಿಕೆ ಪಡೆದುಕೊಂಡಿರಬೇಕು. ಮನೆಯಲ್ಲಿಯೇ ಐಸೋಲೇಟ್ ಆಗಿರುವ ಸೌಮ್ಯ ಅಥವಾ ಲಕ್ಷಣ ರಹಿತ ಸೋಂಕಿತರಿಗೆ ಮಾರ್ಗದರ್ಶನ ನೀಡಲು, ಜಿಲ್ಲೆ ಮಟ್ಟದಲ್ಲಿ ಕಂಟ್ರೋಲ್ ರೂಂ ಗಳ ಸ್ಥಾಪಿಸಿ, ಅದರ ನಂಬರ್ ನೀಡಲಾಗುತ್ತದೆ. ಅವರಿಂದ ಅಗತ್ಯ ಮಾಹಿತಿ ಪಡೆಯಬಹುದು.

60 ವರ್ಷ ಮೇಲ್ಪಟ್ಟವರ ಜೊತೆಗೆ ಇತರೆ ರೋಗಗಳಿಂದ ಬಳಲುತ್ತಿರುವವರು ಕೊರೋನಾ ಸೋಂಕಿಗೆ ಒಳಗಾಗಿ ಸೌಮ್ಯ ಲಕ್ಷಣಗಳನ್ನು ಹೊಂದಿದ್ದರೆ, ಅಥವಾ ಲಕ್ಷಣ ರಹಿತರಾಗಿದ್ದರೆ, ಅವರು ಹೂ ಐಸೋಲೇಷನ್ ಹೋಮ್ ಒಳಗಾಗುವಂತಿಲ್ಲ. ಸಂಬಂಧಪಟ್ಟ ವೈದ್ಯರ ಹತ್ತಿರ ಸಂಪೂರ್ಣ ತಪಾಸಣೆ ಮಾಡಿಸಿಕೊಳ್ಳಬೇಕು. ಅವರ ಸಲಹೆ ಮೇರೆಗೆ ಮನೆಯಲ್ಲಿ ಐಸೋಲೇಟ್ ಆಗಬೇಕು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ದಕ್ಷಿಣಾ ಆಫ್ರಿಕಾಕ್ಕೆ ಮಣಿದ ಭಾರತ

0

ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಎರಡನೇ ಟೆಸ್ಟ್ ನಲ್ಲಿ ಭಾರತ ತಂಡವು ಸೋಲನ್ನು ಅನುಭವಿಸಿದೆ.
ಜೋಹಾನ್ಸ್ ಬರ್ಗ್ ನ ಇಂಪೀರಿಯಲ್ ವಾಂಡರರ್ಸ್ ಕ್ರೀಡಾಂಗಣದಲ್ಲಿ ದಕ್ಷಿಣ ಆಫ್ರಿಕಾ ತಂಡವು ಸುಲಭದ ಜಯ ಗಳಿಸಿತು.
ದಕ್ಷಿಣಾ ಆಫ್ರಿಕಾ ವಿರುದ್ಧ ಟೆಸ್ಟ್ ಸರಣಿಯಲ್ಲಿ ಗೆದ್ದು ಇತಿಹಾಸ ಸೃಷ್ಟಿಸುವ ಕನಸು ಕಂಡಿದ್ದ ಭಾರತ ತಂಡಕ್ಕೆ ನಿರಾಸೆ ಯ ಕಾರ್ಮೋಡ ಕವಿಯಿತು.
ಮೊದಲ ಇನ್ನಿಂಗ್ಸ್ ನಲ್ಲಿ 7 ವಿಕೆಟ್ ಗಳಿಸಿದ್ದ ಭಾರತ ತಂಡದ ಮಧ್ಯಮ ವೇಗಿ ಶಾರ್ದೂಲ್ ಠಾಕೂರ್ ಅವರಿಗೆ ಈ ಇನ್ನಿಂಗ್ಸ್ ನಲ್ಲಿ ಕೇವಲ ಒಂದು ವಿಕೆಟ್ ಮಾತ್ರ ಲಭಿಸಿತು.
ಆದರೆ, ವಾಂಡರರ್ಸ್ ನಲ್ಲಿ ಭಾರತಕ್ಕೆ ಇದು 6 ನೇ ಪಂದ್ಯ.ಇದಕ್ಕೂ ಮುನ್ನ ಇಲ್ಲಿ ಭಾರತ ತಂಡಕ್ಕೆ 2 ಗೆಲುವು ಲಭಿಸಿದ್ದು ಮತ್ತು 3 ಡ್ರಾ ಆಗಿವೆ.
ಆದರೆ, ಸರಣಿಯ ಮೊದಲ ಪಂದ್ಯವನ್ನು ಭಾರತ ತಂಡವು ಜಯಿಸಿತ್ತು.ಸೆಂಚುರಿಯನ್ ಕ್ರೀಡಾಂಗಣದಲ್ಲಿ ಗೆದ್ದ ಏಷ್ಯಾದ ಮೊದಲ ತಂಡವೆಂದು ಖ್ಯಾತಿ ಪಡೆದಿತ್ತು.
ನಾಯಕ ಡೀನ್ ಎಲ್ಗರ್ ಜೊತೆಗೆ 3 ನೇ ವಿಕೆಟ್ ಗೆ 82 ರನ್ ಸೇರಿಸಿದ್ದ ವ್ಯಾನ್ ಡರ್ ಡೆಸೆ(40) ರನ್ ಗಳಿಸಿದರು.ಇವರ ವಿಕೆಟ್ ಅನ್ನು ಶಮಿ ಕಬಳಿಸಿದರು.ಆದರೆ,ಡೀನ್ ಜೊತೆಗೂಡಿದ ಭರವಸೆಯ ಆಟಗಾರ ತೆಂಬಾ ಬವುಮಾ ಅಜೇಯ 45 ಎಸೆತಗಳಲ್ಲಿ 23 ರನ್ ಗಳಿಸಿ ತಂಡವನ್ನು ಸುರಕ್ಷಿತವಾಗಿ ಗೆಲುವಿನತ್ತ ಮುನ್ನಡೆಸಿದರು.
ದಕ್ಷಿಣಾ ಆಫ್ರಿಕಾ ತಂಡವು ಮೊದಲ ಇನ್ನಿಂಗ್ಸ್ ನಲ್ಲಿ ಅಲ್ಪ ಮೊತ್ತದ ಮುನ್ನಡೆ ಗಳಿಸಲು ಬವುಮಾ ಅವರ ಅರ್ಧಶತಕ ನೆರವಾಗಿತ್ತು.

ಎಲ್ಗರ್ ಬಳಗವು ಬುಧವಾರ ದಿನದಾಟದ ಮುಕ್ತಾಯದ ವೇಳೆಗೆ 2 ವಿಕೆಟ್ ಕಳೆದುಕೊಂಡು 118 ರನ್ ಗಳಿಸಿತ್ತು.ಗುರುವಾರ ಬೆಳಗ್ಗೆಯಿಂದಲೇ ಸುರಿದ ಮಳೆಯಿಂದಾಗಿ ಮಧ್ಯಾಹ್ನ ಆಟ ಆರಂಭವಾಯಿತು.
ತಕ್ಕ ಆಟವಾಡಿದ ನಾಯಕ ಡೀನ್ ಎಲ್ಗರ್ ಅಜೇಯ 118 ಎಸೆತಗಳಲ್ಲಿ 10 ಬೌಂಡರಿ ಬಾರಿಸಿ 96 ರನ್ ಗಳಿಸಿಕೊಂಡರು.ಇದರಿಂದಾಗಿ ದಕ್ಷಿಣ ಆಫ್ರಿಕಾ ತಂಡಕ್ಕೆ ಎರಡನೇ ಟೆಸ್ಟ್ ನಲ್ಲಿ 7 ವಿಕೆಟ್ ಗಳಿಂದ ಗೆಲುವಿನ ಕಾಣಿಕೆ ನೀಡಿದರು.ಇದರೊಂದಿಗೆ 3 ಪಂದ್ಯಗಳ ಸರಣಿಯಲ್ಲಿ 1-1 ರ ಸಮಬಲ ಕಾರಣರಾದರು.
ದಕ್ಷಿಣಾ ಆಫ್ರಿಕಾದಲ್ಲಿ ಮೊದಲ ಬಾರಿ ಸರಣಿ ಗೆಲ್ಲುವ ಕನಸು ಕಾಣುತ್ತಿರುವ ಭಾರತಕ್ಕೆ ಇದೇ ಜನವರಿ 11 ರಿಂದ ಕೇಪ್ ಟೌನ್ ನಲ್ಲಿ ಆರಂಭವಾಗಲಿರುವ ಪಂದ್ಯದಲ್ಲಿ ಜಯಿಸಬೇಕಾಗಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಶಿವಮೊಗ್ಗ ಜಿಲ್ಲೆ: ಕೋವಿಡ್ ಬಿಗಿ ಮಾರ್ಗಸೂಚಿ-ಜಿಲ್ಲಾಧಿಕಾರಿ

0

ಈಗಾಗಲೇ ಸರ್ಕಾರವು ರಾಜ್ಯಾದ್ಯಂತ ವಾರಾಂತ್ಯ ಕರ್ಫ್ಯೂ ಘೋಷಿಸಿದೆ.
ಎರಡೂ ದಿನ ಶಿವಮೊಗ್ಗ ಜಿಲ್ಲೆಯ ಎಲ್ಲಾ ಪ್ರವಾಸಿ ತಾಣಗಳಿಗೆ ಪ್ರವೇಶ ನಿಷೇಧಿಸಲಾಗಿದೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಜಾರಿಗೊಳಿಸುವ ಕುರಿತು ಹಮ್ಮಿಕೊಂಡಿದ್ದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಮಾತನಾಡಿದರು.
ಪ್ರತಿದಿನ ರಾತ್ರಿ 10ರಿಂದ ಬೆಳಗ್ಗೆ 5ರವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ಸರ್ಕಾರ ಹೊರಡಿಸಿರುವ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಿಲ್ಲೆಯಲ್ಲಿ ಜಾರಿಗೆ ತರಲು ಕ್ರಮ ಕೈಗೊಳ್ಳಬೇಕು ಎಂದರು.
ಸರ್ಕಾರದ ಮಾರ್ಗಸೂಚಿ ಪ್ರಕಾರ ಶಾಲಾ, ಕಾಲೇಜು ನಡೆಸಬೇಕು. ಯಾವುದೇ ಪ್ರದೇಶದಲ್ಲಿ ಹೆಚ್ಚಿನ ಕೋವಿಡ್ ಪಾಸಿಟಿವ್ ಪ್ರಕರಣಗಳು ಕಂಡುಬಂದರೆ ಆ ಪ್ರದೇಶವನ್ನು ಕ್ಲಸ್ಟರ್ ಎಂದು ಗುರುತಿಸಲಾಗುವುದು.
ಅಂತಹ ಕ್ಲಸ್ಟರ್ ವ್ಯಾಪ್ತಿಯ ಶಾಲೆ-ಕಾಲೇಜುಗಳನ್ನು ಮುಚ್ಚಲು ಕ್ರಮ ವಹಿಸಬೇಕು. ಕೋವಿಡ್ ಹರಡುವಿಕೆ ತಡೆಯಲು ವಸತಿ ಶಾಲೆಗಳು, ಆಶ್ರಯದಾಣಗಳು ಮುಂತಾದ ಕಡೆಗಳಲ್ಲಿ ನಿರಂತರವಾಗಿ ಸ್ಯಾಂಪಲ್ ಸಂಗ್ರಹಿಸಬೇಕು. ತಪಾಸಣೆ ನಡೆಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಸಭೆ-ಸಮಾರಂಭಗಳನ್ನು ನಡೆಸುವ ಪೂರ್ವದಲ್ಲಿ ಸ್ಥಳೀಯ ಆಡಳಿತದಿಂದ ಅನುಮತಿ ಕಡ್ಡಾಯವಾಗಿ ಪಡೆದಿರಬೇಕು ಎಂದು ತಿಳಿಸಿದರು.
ಮಹಾರಾಷ್ಟ್ರ, ಕೇರಳ, ಗೋವಾ ರಾಜ್ಯಗಳಿಂದ ಬರುವ ಪ್ರಯಾಣಿಕರ ತಪಾಸಣೆ ಮಾಡಬೇಕು. ಅದಕ್ಕಾಗಿ ಶಿವಮೊಗ್ಗ, ಭದ್ರಾವತಿ ಬಸ್ ನಿಲ್ದಾಣ ಹಾಗೂ ಆಗುಂಬೆ ಚೆಕ್ ಪೋಸ್ಟ್ ನಲ್ಲಿ ವ್ಯವಸ್ಥೆ ಮಾಡಬೇಕು. ಹೊರರಾಜ್ಯ, ಹೊರದೇಶಗಳಿಂದ ಬಂದವರ ಸಂಪೂರ್ಣ ಮಾಹಿತಿ ಸಂಗ್ರಹಿಸಬೇಕು ಅಂಥವರ ಮೇಲೆ ನಿಗಾ ಇರಿಸಬೇಕು ಎಂದರು.
ಕೋವಿಡ್ ನಿಯಂತ್ರಣಕ್ಕೆ ಈಗಾಗಲೇ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಪ್ರತಿ ತಾಲೂಕಿನಲ್ಲಿ ಕನಿಷ್ಠ 150 ಹಾಸಿಗೆ ಸಾಮರ್ಥ್ಯದ ಹಾಸ್ಟೆಲ್ ಅಥವಾ ಸಮುದಾಯ ಭವನಗಳನ್ನು ಗುರುತಿಸಬೇಕು. ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು.ಕೋವಿಡ್ ರೋಗಿಗಳಿಗಾಗಿಯೇ ಒಟ್ಟು 1500 ಹಾಸಿಗೆ ಮೀಸಲಿಡಬೇಕು. 15 ವರ್ಷದಿಂದ 18 ವರ್ಷದ ಒಳಗಿನ ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ಕಾರ್ಯ ಚುರುಕುಗೊಳಿಸಬೇಕು. ಪ್ರತಿಯೊಬ್ಬರಿಗೂ ತ್ವರಿತವಾಗಿ ಲಸಿಕೆ ನೀಡಬೇಕು. ವಾರಾಂತ್ಯ ಕರ್ಫ್ಯೂ ಸಮಯದಲ್ಲಿ ಲಸಿಕೆ ನೀಡುವ ಕಾರ್ಯಕ್ಕೆ ಯಾವುದೇ ಅಡ್ಡಿ ಇರಬಾರದು ಎಂದು ತಾಕೀತು ಮಾಡಿದರು.
ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್. ವೈಶಾಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ. ಲಕ್ಷ್ಮಿ ಪ್ರಸಾದ್ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಸಿಎಪಿಎಫ್ ಸಿಬ್ಬಂದಿಗೆ ಆಯುಷ್ಮಾನ್ ಭಾರತ್ ಯೋಜನೆ

0

ಕೇಂದ್ರ ಸರ್ಕಾರದ ‘ಆಯುಷ್ಮಾನ್ ಭಾರತ್’ ವ್ಯಾಪ್ತಿಗೆ ದೇಶದಾದ್ಯಂತ ಇರುವ ಎಲ್ಲಾ ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗಳನ್ನು ತರುವ ಕಾರ್ಯ ಪೂರ್ಣಗೊಳ್ಳಲಿದೆ ಎಂದು ತಿಳಿದುಬಂದಿದೆ.

ಕೇಂದ್ರ ಸರ್ಕಾರದ ಆರೋಗ್ಯ ಸೇವಾ ಯೋಜನೆಗಳ ಪೈಕಿ ಮಹತ್ವದ ಯೋಜನೆ ಇದಾಗಿದೆ. ‘ಯೋಜನೆಗೆ ಸಿಎಪಿಎಫ್ ಸಿಬ್ಬಂದಿ ಹಾಗೂ ಅವರ ಕುಟುಂಬಸ್ಥರು ದೇಶಾದ್ಯಂತ ಯೋಜನೆಗೆ ನೋಂದಣಿ ಮಾಡಿಕೊಂಡಿರುವ 24 ಸಾವಿರ ಆಸ್ಪತ್ರೆಗಳಲ್ಲಿ ಕ್ಯಾಷ್ ಲೆಸ್ ಚಿಕಿತ್ಸೆ ಪಡೆಯಲು ಅರ್ಹರಾಗಿರುತ್ತಾರೆ’ ಎಂದು ಗೃಹ ಖಾತೆಯ ಸಹಾಯಕ ಸಚಿವ ನಿತ್ಯಾನಂದ ರಾಯ್ ಅವರು ತಿಳಿಸಿದ್ದಾರೆ.

2021 ರ ನವೆಂಬರ್ 2 ರಿಂದ ಇದುವರೆಗೆ ಕೇಂದ್ರೀಯ ಅರೆಸೈನಿಕ ಪಡೆಗಳು, ಸಶಸ್ತ್ರ ಪಡೆಗಳಿಗೆ ಒಟ್ಟಾರೆ 35 ಲಕ್ಷ ಆಯುಷ್ಮಾನ್ ಕಾರ್ಡ್ ಗಳನ್ನು ವಿತರಿಸಲಾಗಿದೆ.