Wednesday, February 11, 2026
Wednesday, February 11, 2026
Home Blog Page 1797

ಹೊಟೆಲ್ ವಸತಿ ಬಗ್ಗೆ ನಿರ್ಬಂಧ ಸಡಿಲ

0

ಕೊರೊನಾ ಸೋಂಕು ಹರಡುವಿಕೆ ನಿಯಂತ್ರಣಕ್ಕಾಗಿ ಸರ್ಕಾರ ನಿರ್ಬಂಧಗಳನ್ನು ಹೊರಡಿಸಿದೆ. ಈ ಕ್ರಮಗಳಡಿ 2021 ಡಿ. 30 ರಿಂದ 2022ರ ಜ. 2ರವರೆಗೆ ಹೋಟೆಲ್ ಗಳಲ್ಲಿ ವಾಸ್ತವ್ಯಕ್ಕೆ ಸಾಮರ್ಥ್ಯದ ಶೇ. 50ರಷ್ಟು ಮಾತ್ರ ಬಳಕೆ ನಿಯಮ ಅನ್ವಯಿಸುವುದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಡಿಸೆಂಬರ್ 30ರಿಂದ ಜನವರಿ 2 ರವರೆಗೆ ರೆಸ್ಟೋರೆಂಟ್, ಹೋಟೆಲ್, ಕ್ಲಬ್ ಗಳಲ್ಲಿ ಕೊರೋನಾ ನಿಯಂತ್ರಣಕ್ಕೆ ಪೂರಕವಾದ ನಡುವಳಿಕೆಗಳನ್ನು ಕಡ್ಡಾಯವಾಗಿ ಪಾಲಿಸುವ ಷರತ್ತಿಗೆ ಒಳಪಟ್ಟಂತೆ ಆಸನ ಸಾಮರ್ಥ್ಯದ ಶೇ. 50 ರಷ್ಟು ಮಾತ್ರ ಬಳಕೆಗೆ ಅವಕಾಶ ನೀಡಲಾಗಿದೆ. ಆದರೆ ಹೋಟೆಲ್ಗಳ ಕೊಠಡಿಗಳಲ್ಲಿ ವಾಸ್ತವ್ಯಕ್ಕೆ ಯಾವುದೇ ನಿರ್ಬಂಧವಿಲ್ಲದೆ ಕಾರಣ ಇದು ಅನ್ವಯಿಸುವುದಿಲ್ಲ. ಹೋಟೆಲ್ ಗಳು ಅನುಮೋದಿತ ಸಾಮರ್ಥ್ಯಕ್ಕೆ ಅನುಗುಣವಾಗಿ ಕೊಠಡಿಗಳಲ್ಲಿ ಆದ್ಯತೆ ಕಲ್ಪಿಸಬೇಕು ಎಂದು ಸ್ಪಷ್ಟಪಡಿಸಲಾಗಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

ಸಂಜೆ ಇಂಜಿನಿಯರಿಂಗ್ ಕಾಲೇಜುಗಳು ಬಂದ್

0

ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿಯ ಆದೇಶದ ಮೇರೆಗೆ ಪ್ರಸ್ತುತ ಶೈಕ್ಷಣಿಕ ವರ್ಷದಿಂದ ರಾಜ್ಯಾದ್ಯಂತ ಎಲ್ಲಾ ಸಂಜೆ ಇಂಜಿನಿಯರಿಂಗ್ ಕಾಲೇಜುಗಳನ್ನು ಸರ್ಕಾರ ಬಂದ್ ಮಾಡಿದೆ.

ಸರ್ಕಾರದ ಸೂಚನೆಯ ಹಿನ್ನೆಲೆಯಲ್ಲಿ ಇಂಜಿನಿಯರಿಂಗ್ ಕಾಲೇಜುಗಳ ಬಾಗಿಲು ಮುಚ್ಚಿದೆ. ರೆಗ್ಯುಲರ್ ಕಾಲೇಜುಗಳಿಗೆ ಸಂಯೋಜನೆ ಮಾಡಲು ಶಿಕ್ಷಣ ಸಂಸ್ಥೆಗಳು ಕ್ರಮ ಕೈಗೊಂಡಿವೆ. ಆದ್ದರಿಂದ ಎಲ್ಲಾ ಕಾಲೇಜುಗಳಲ್ಲಿ ನಾಲ್ಕು ವರ್ಷದ ಇಂಜಿನಿಯರಿಂಗ್ ಪದವಿಗಳು ಮಾತ್ರ ಲಭ್ಯವಿರುತ್ತವೆ. ಡಿಪ್ಲೊಮಾ ಅಭ್ಯರ್ಥಿಗಳು ಎಂದಿನಂತೆ ಎರಡು ವರ್ಷದ ಇಂಜಿನಿಯರಿಂಗ್ ಪದವಿಗೆ ಅಂದರೆ 3 ಸೆಮಿಸ್ಟರ್ ಲ್ಯಾಟರಲ್ ಎಂಟ್ರಿ ಮೂಲಕ ಪ್ರವೇಶ ಪಡೆಯಬಹುದು.

ಕರ್ನಾಟಕದಲ್ಲಿ 12 ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಸಂಜೆ ಎಂಜಿನಿಯರಿಂಗ್ ಕಾಲೇಜುಗಳಿವೆ. ಹತ್ತನೇ ತರಗತಿ ನಂತರ ಮೂರು ವರ್ಷಗಳ ಡಿಪ್ಲೋಮಾ ಶಿಕ್ಷಣ ಪಡೆದ ಅಭ್ಯರ್ಥಿಗಳಿಗೆ ಮಾತ್ರ ಪ್ರವೇಶ ನೀಡಲಾಗುತ್ತದೆ. ಡಿಪ್ಲೋಮೋ ಶಿಕ್ಷಣ ಪಡೆದ ವಿದ್ಯಾರ್ಥಿಗಳು ಸರ್ಕಾರಿ ಅಥವಾ ಖಾಸಗಿ ಸಂಸ್ಥೆಗಳಲ್ಲಿ ಹಗಲಿನ ಹೊತ್ತು ಕೆಲಸ ಮಾಡುತ್ತಿದ್ದರು. ನಂತರ ಎಂಜಿನಿಯರಿಂಗ್ ಕಾಲೇಜುಗಳಿಗೆ ದಾಖಲಾಗಿ ಎಂಜಿನಿಯರಿಂಗ್ ಪದವಿ ಪಡೆಯುತ್ತಿದ್ದರು. ಆದರೆ ಉದ್ಯೋಗದ ಒತ್ತಡದ ನಡುವೆ ಇಂಜಿನಿಯರಿಂಗ್ ಪದವಿ ಪೂರೈಸುವುದು ವಿದ್ಯಾರ್ಥಿಗಳಿಗೆ ಸವಾಲಾಗಿದೆ. ಎಂಜಿನಿಯರಿಂಗ್ ಶಿಕ್ಷಣದ ಗುಣಮಟ್ಟದ ಮೇಲೆ ಪರಿಣಾಮ ಬೀರುತ್ತಿದೆ. ಇಷ್ಟಲ್ಲದೆ, ಈ ಕಾಲೇಜುಗಳ ನಿರ್ವಹಣೆ ಸಹ ದುಬಾರಿಯಾಗಿದೆ. ಈ ಕಾರಣದಿಂದ 2020-21 ನೇ ಸಾಲಿನಲ್ಲಿ ಎಐಸಿಟಿಇ ಸಂಜೆ ಇಂಜಿನಿಯರಿಂಗ್ ಕಾಲೇಜುಗಳನ್ನು ಬಂದ್ ಮಾಡಲು ನಿರ್ಧರಿಸಿದೆ.

ಇಷ್ಟೊತ್ತಿಗಾಗಲೇ ಎಲ್ಲ ಇಂಜಿನಿಯರಿಂಗ್ ಕಾಲೇಜುಗಳು ಕೋರ್ಸ್ ಮತ್ತು ಸಿಇಟಿ ಸೀಟುಗಳು ಹಂಚಿಕೆಯಾಗಿದ್ದವು. ಈ ಕಾರಣಕ್ಕೆ ಕಾಲೇಜು ಬಂದ್ ಮಾಡುವ ಪ್ರಕ್ರಿಯೆಯನ್ನು ಕೈಬಿಡಲಾಗಿತ್ತು. ಆದರೆ ಜೂನ್ ತಿಂಗಳಿನಲ್ಲಿ ಅಧಿಕೃತ ಆದೇಶ ಹೊರಡಿಸಿದ ಎಐಸಿಟಿಇ ದೇಶದಾದ್ಯಂತ ಎಲ್ಲಾ ಸಂಜೆ ಇಂಜಿನಿಯರಿಂಗ್ ಕಾಲೇಜುಗಳನ್ನು ಬಂದ್ ಮಾಡಲು ಸೂಚನೆ ನೀಡಿದೆ.

ಸರ್ಕಾರದ ಕ್ರಮದಿಂದಾಗಿ ಉದ್ಯೋಗದ ಜೊತೆಗೆ, ಎಂಜಿನಿಯರಿಂಗ್ ಪದವಿ ಪಡೆಯಬಹುದೆಂಬ ಅಭ್ಯರ್ಥಿಗಳ ಆಸೆಗೆ ತಣ್ಣೀರು ಎರಚಿದಂತಾಗಿದೆ. ಆರ್ಥಿಕ ಸಮಸ್ಯೆಯಿಂದ ಬಳಲುತ್ತಿದ್ದ ಅಭ್ಯರ್ಥಿಗಳು ಕೆಲಸ ಮಾಡಿಕೊಂಡು ಸಂಪಾದಿಸಿದ ಹಣದಲ್ಲಿ ಎಂಜಿನಿಯರಿಂಗ್ ಪದವಿ ಪೂರೈಸುವುದು ಕನಸಿನ ಮಾತಾಗಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

ಕಾಂಗ್ರೆಸ್ ಪಕ್ಷಕ್ಕೆ ಸಾಮಾಜಿಕ ನ್ಯಾಯ ಮೊದಲ ಆದ್ಯತೆ

0

ಕಾಂಗ್ರೆಸ್ ಸಂಸ್ಥಾಪನಾ ದಿನವನ್ನು ಅಂತಃಕರಣಪೂರ್ವಕವಾಗಿ ಹಬ್ಬದ ರೀತಿಯಲ್ಲಿ ಆಚರಿಸುವ ಮೂಲಕ ಕಾಂಗ್ರೆಸ್ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕೆಲಸ ಮಾಡಬೇಕು ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪನವರು ತಿಳಿಸಿದ್ದಾರೆ.
ಸಾಗರದ ಗಾಂಧಿ ಮಂದಿರದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ನಡೆದ ಕಾಂಗ್ರೆಸ್ ನ 136ನೇ ಸಂಸ್ಥಾಪನ ದಿನವನ್ನು ಆಚರಿಸಲಾಯಿತು.
ಬದಲಾದ ದಿನಗಳಲ್ಲಿ ಕಾಂಗ್ರೆಸ್ ದೇಶಕ್ಕೆ ನೀಡಿದ ಕೊಡುಗೆಯನ್ನು ಜನ ಮರೆಯುತ್ತಿರುವುದು ಬೇಸರದ ಸಂಗತಿ. ಯುವಜನರು ಕಾಂಗ್ರೆಸ್ ಪಕ್ಷ ಹುಟ್ಟಿದ್ದು, ಬೆಳೆದು ಬಂದಿದ್ದು ಮತ್ತು ದೇಶಕ್ಕೆ ನೀಡಿದ ಕೊಡುಗೆಗಳ ಬಗ್ಗೆ ಅರಿತುಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಾಂಗ್ರೆಸ್ ಪಕ್ಷ ಅಧಿಕಾರ ಅನುಭವಿಸಲು ಹುಟ್ಟಿದ ಪಕ್ಷವಲ್ಲ. ಬದಲಾಗಿ ಜನರಿಗೆ ಸಾಮಾಜಿಕ ನ್ಯಾಯ ಕೊಡಬೇಕು ಎನ್ನುವುದು ಕಾಂಗ್ರೆಸ್ ಪಕ್ಷದ ಮೊದಲ ಆದ್ಯತೆಯಾಗಿದೆ. ದೇಶದ ಭವಿಷ್ಯವನ್ನು ನಿರ್ಮಿಸುವ ಮಹತ್ತರ ಉದ್ದೇಶದಿಂದ ಗಾಂಧೀಜಿ ನೇತೃತ್ವದಲ್ಲಿ ಜನ್ಮ ತಾಳಿದ ಕಾಂಗ್ರೆಸ್ ಪಕ್ಷದ ಸಂಸ್ಥಾಪನ ದಿನ ಚಾರಿತ್ರಿಕ ದಿನ ಗಳಲ್ಲಿ ಒಂದಾಗಿದೆ. ಇಂತಹ ದಿನವನ್ನು ಸಾಂಕೇತಿಕವಾಗಿ ಆಚರಿಸದೇ ಶ್ರದ್ಧಾಭಕ್ತಿಯಿಂದ ಆಚರಿಸಬೇಕು. ದೇಶಕ್ಕೆ ಸ್ವಾತಂತ್ರ್ಯ ತಂದುಕೊಡುವಲ್ಲಿ ಕಾಂಗ್ರೆಸ್ ಪಾತ್ರ ಅಮೂಲ್ಯವಾದದ್ದು ಎಂದರು.
ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಅಧ್ಯಕ್ಷ ಬಿ.ಆರ್. ಜಯಂತ್ ಅಧ್ಯಕ್ಷತೆ ವಹಿಸಿದ್ದರು. ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮಧುಮಾಲತಿ, ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷ ಕೆ. ಸಿದ್ದಪ್ಪ, ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ ತೀ.ನ. ಶ್ರೀನಿವಾಸ್ , ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ತಸ್ರೀಫ್ ಇಬ್ರಾಹಿಂ, ರಫೀಕ್ ಬಾಬಾಜಾನ್, ಲಲಿತಮ್ಮ, ಸರಸ್ವತಿ ನಾಗರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

ಅಮೂಲ್ಯ ರಕ್ತಚಂದನ ಕಳ್ಳಸಾಗಣೆ ಪ್ರಕರಣ ಪತ್ತೆ

0

ಅಳಿವಿನಂಚಿನಲ್ಲಿರುವ ರಕ್ತಚಂದನದ ದಿಮ್ಮಿಗಳನ್ನು ಕಸ್ಟಮ್ಸ್ ಅಧಿಕಾರಿಗಳ ನೆರವಿನಲ್ಲೇ ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ವಿದೇಶಗಳಿಗೆ ಕಳ್ಳಸಾಗಣೆ ಮಾಡುತ್ತಿರುವುದು ಪತ್ತೆಯಾಗಿದೆ.
ಕಂದಾಯ ಗುಪ್ತಚರ ನಿರ್ದೇಶನಾಲಯ ಅಧಿಕಾರಿಗಳು ನೀಡಿದ್ದ ದೂರನ್ನು ಆಧರಿಸಿ ಸಿಬಿಐನ ಭ್ರಷ್ಟಾಚಾರ ನಿಗ್ರಹ ದಳದ ಬೆಂಗಳೂರು ಘಟಕ ಪ್ರಾಥಮಿಕ ತನಿಖೆ ನಡೆಸಿತ್ತು. ಈ ಸಂದರ್ಭದಲ್ಲಿ ಲಭಿಸಿರುವ ಸಾಕ್ಷ್ಯಗಳ ಆಧಾರದಲ್ಲಿ ಡಿಸೆಂಬರ್ 22ರಂದು ಎಫ್ಐಆರ್ ದಾಖಲು ಮಾಡಲಾಗಿದೆ.
ಈ ಸಂಬಂಧ ಕಸ್ಟಮ್ಸ್ ನ ಇಬ್ಬರು ಸೂಪರಿಂಟೆಂಡ್ ಗಳು , ಒಬ್ಬ ಇನ್ ಸ್ಪೆಕ್ಟರ್ ಮತ್ತು ಕಳ್ಳಸಾಗಣೆ ಜಾಲದ ಇಬ್ಬರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿರುವ ಸಿಬಿಐ, ತನಿಖೆ ಆರಂಭಿಸಿದೆ.
ಈ ವರ್ಷದ ಜೂನ್ ಮತ್ತು ಜುಲೈ ತಿಂಗಳಿನಲ್ಲಿ ಏಳು ಬಾರಿ ಸರಕು ಸಾಗಣೆ ವಿಮಾನಗಳ ಮೂಲಕ ಬೃಹತ್ ಪ್ರಮಾಣದ ರಕ್ತಚಂದನದ ದಿಮ್ಮಿಗಳನ್ನು ಕಳ್ಳಸಾಗಣೆ ಮಾಡಿರುವುದು ಪ್ರಾಥಮಿಕ ತನಿಖೆಯಲ್ಲಿ ದೃಢಪಟ್ಟಿದೆ.
ಹಲವು ಕಂಪನಿಗಳ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ರಕ್ತಚಂದನ ಕಳ್ಳಸಾಗಣೆ ಮಾಡಲಾಗಿದೆ. ಸತೀಶ್ ಕುಮಾರ್ ಮತ್ತು ನಝೀಬ್ ಸಾಗಣೆ ಮಾಡಿದ ಸರಕುಗಳನ್ನು ತೆರೆದ ತಪಾಸಣೆ ಅಥವಾ ಸ್ಕ್ಯಾನಿಂಗ್ ಗೆ ಒಳಪಡಿಸಿದೇ ಕಸ್ಟಮ್ಸ್ ಅಧಿಕಾರಿಗಳು ಕಳ್ಳಸಾಗಣೆಗೆ ನೆರವು ನೀಡಿದ್ದಾರೆ ಎಂಬ ಆರೋಪ ಎಫ್ಐಆರ್ ನಲ್ಲಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

ತೆರಿಗೆದಾರರಿಗೆ ಭೇಷ್ ಎಂದ ಆಯಕರ ಇಲಾಖೆ

0

ಪ್ರಸಕ್ತ ಹಣಕಾಸು ವರ್ಷದಲ್ಲಿ ತೆರಿಗೆ ಮೂಲಕ ಇನ್ನಷ್ಟು ವರಮಾನ ಸಂಗ್ರಹಿಸಲು ಇನ್ನೂ ಕಾಲಾವಕಾಶ ಇದೆ. ಹೀಗಾಗಿ, ತೆರಿಗೆ ವರಮಾನವು ನಿಗದಿ ಮಾಡಿಕೊಂಡಿದ್ದ ಗುರಿಗಿಂತಲೂ ದೊಡ್ಡಪ್ರಮಾಣದಲ್ಲಿ ಜಾಸ್ತಿ ಇರುವ ಸಾಧ್ಯತೆ ಇದೆ.
ಕೋವಿಡ್ ಅಪ್ಪಳಿಸುವುದಕ್ಕೂ ಮೊದಲಿನ 2019-20ನೇ ಹಣಕಾಸು ವರ್ಷದಲ್ಲಿ ಆಗಿದ್ದಕ್ಕಿಂತ ಹೆಚ್ಚಿನ ಮೊತ್ತದ ತೆರಿಗೆ ಸಂಗ್ರಹವು ಪ್ರಸಕ್ತ ವರ್ಷದಲ್ಲಿ ಆಗಬಹುದು ಎಂದು ಅಂದಾಜು ಮಾಡಲಾಗಿದೆ.
ಕೇಂದ್ರ ಸರ್ಕಾರದ ತೆರಿಗೆ ಸಂಗ್ರಹವು ಪ್ರಸಕ್ತ ಆರ್ಥಿಕ ವರ್ಷದಲ್ಲಿ ನಿಗದಿತ ಗುರಿಗಿಂತ ಭಾರಿ ಪ್ರಮಾಣದಲ್ಲಿ ಹೆಚ್ಚಿನ ಮಾಡುವ ಸಾಧ್ಯತೆ ಇದೆ. ಇದರಿಂದಾಗಿ, ಕೇಂದ್ರದ ವಿತ್ತೀಯ ಕೊರತೆ ಪ್ರಮಾಣವೂ ಕಡಿಮೆ ಆಗುವ ನಿರೀಕ್ಷೆಯಿದೆ ಎಂದು ತಿಳಿದುಬಂದಿದೆ.
ಏಪ್ರಿಲ್ ನಿಂದ ಡಿಸೆಂಬರ್ ಮಧ್ಯ ಭಾಗದವರೆಗೆ ಆಗಿರುವ ನಿವ್ವಳ ನೇರ ತೆರಿಗೆ ಸಂಗ್ರಹವು 9.45 ಲಕ್ಷ ಕೋಟಿಗಿಂತ ಹೆಚ್ಚು. ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ 5.88 ಲಕ್ಷ ಕೋಟಿ ನಿವ್ವಳ ನೇರ ತೆರಿಗೆ ಸಂಗ್ರಹ ಆಗಿತ್ತು. ಅಂದರೆ, ಈ
ವರ್ಷದಲ್ಲಿ ನಿವ್ವಳ ನೇರ ತೆರಿಗೆ ಸಂಗ್ರಹದಲ್ಲಿ ಇದುವರೆಗೆ ಆಗಿರುವ ಹೆಚ್ಚಳವು ಶೇಕಡ 60.8ರಷ್ಟಾಗಿದೆ.
ತೆರಿಗೆ ಸಂಗ್ರಹ ವ್ಯವಸ್ಥೆಯನ್ನು ಉತ್ತಮವಾಗಿ ಅನುಷ್ಠಾನಕ್ಕೆ ತಂದಿದ್ದು ಮತ್ತು ತೆರಿಗೆ ಪಾವತಿದಾರರು ನಿಯಮಗಳನ್ನು ಪಾಲಿಸಿದ್ದರಿಂದಾಗಿ ಈ ಕಟ್ಟಿದ ತೆರಿಗೆ ಸಂಗ್ರಹವಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ತೆರಿಗೆಯೇತರ ವರಮಾನ ಮೂಲವಾದ ಹೂಡಿಕೆ ಹಿಂತೆಗೆತವು ಗುರಿಯನ್ನು ತಲುಪಲೇ ಇದ್ದರೂ, ಕೇಂದ್ರದ ವಿತ್ತೀಯ ಕೊರತೆಯು ಒಟ್ಟು ಆಂತರಿಕ ಉತ್ಪಾದನೆಯ (ಜಿಡಿಪಿ) ಶೇಕಡ 6.5ಕ್ಕೆ ನಿತಿ ಆಗಬಹುದು ಎಂದು ಅಂದಾಜಿಸಲಾಗಿದೆ. ಈ ಮೊದಲು ವಿತ್ತೀಯ ಕೊರತೆಯು ಶೇ 6.8ರಷ್ಟು ಇರಲಿದೆ ಎಂದು ಅಂದಾಜು ಮಾಡಲಾಗಿತ್ತು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

ದ್ವೇಷಪೂರಿತ ಭಾ಼ಷಣಗಳ ಬಗ್ಗೆ ಕ್ರಮಕ್ಕೆ ವಕೀಲರ ಮನವಿ

0

ಜನಾಂಗೀಯ ಶುದ್ಧೀಕರಣಕ್ಕಾಗಿ ಮುಸ್ಲಿಮರ ನರಮೇಧ ನಡೆಸಬೇಕು ಎಂದು ಕರೆ ಕೊಟ್ಟಿದ್ದ ದ್ವೇಷ ಭಾಷಣದ ವಿರುದ್ಧ ಸ್ವಯಂ ಪ್ರೇರಿತವಾಗಿ ವಿಚಾರಣೆ ನಡೆಸಬೇಕು ಎಂದು ಸುಪ್ರೀಂಕೋರ್ಟ್ ನ ಹಿರಿಯ ವಕೀಲರು ಹಾಗೂ ವಕೀಲರ ಗುಂಪೊಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಅವರಿಗೆ ಮನವಿ ಮಾಡಿದ್ದಾರೆ.

ಈ ರೀತಿ ಮಾತನಾಡುವುದೇ ಸರಿ ಎಂಬ ಸನ್ನಿವೇಶ ಈಗಲೂ ನಿರ್ಮಾಣವಾಗಿದೆ. ಆದ್ದರಿಂದ ಹೀಗೆ ಮಾತನಾಡುವುದನ್ನು ತಡೆಯುವುದಕ್ಕೆ ನ್ಯಾಯಾಲಯದ ಮಧ್ಯಪ್ರವೇಶ ಅಗತ್ಯವಾಗಿದೆ ಎಂದು ಪತ್ರದಲ್ಲಿ ಪ್ರತಿಪಾದಿಸಲಾಗಿದೆ.

ಕೇಂದ್ರದ ಮಾಜಿ ಸಚಿವ ಸಲ್ಮಾನ್ ಖುರ್ಷಿದ್, ಪಟ್ನಾ ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಅಂಜನ ಪ್ರಕಾಶ್, ಹಿರಿಯ ವಕೀಲರಾದ ದುಶ್ಯಂತ ದವೆ, ಬಸವ ಪಿ. ಪಾಟೀಲ ಮತ್ತು ಇತರರು ಈ ಪತ್ರ ಬರೆದಿದ್ದಾರೆ.

ಹಿಂದೂ ಯುವ ವಾಹಿನಿ ಸಂಘಟನೆಯು ದೆಹಲಿ ಮತ್ತು ಹರಿದ್ವಾರದಲ್ಲಿ ಕ್ರಮವಾಗಿ ಇದೆ 17 ಹಾಗೂ 19ರಂದು ಆಯೋಜಿಸಿದ್ದ ಕಾರ್ಯಕ್ರಮಗಳಲ್ಲಿ ದ್ವೇಷ ಭಾಷಣ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಈ ರೀತಿಯ ಭಾಷಣ ಮಾಡಿದವರ ವಿರುದ್ಧ ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ನೇರವಾಗಿ ಕ್ರಮಕೈಗೊಳ್ಳಬೇಕು ಎಂದು ಪತ್ರದಲ್ಲಿ ಆಗ್ರಹಿಸಿದ್ದಾರೆ. ಇಂತಹ ಭಾಷಣಗಳು ದೇಶದ ಏಕತೆ ಹಾಗೂ ಸಮಗ್ರತೆಗೆ ಬಹುದೊಡ್ಡ ಬೆದರಿಕೆ. ಇಷ್ಟಲ್ಲದೆ ಈ ದೇಶದಲ್ಲಿರುವ ಲಕ್ಷಾಂತರ ಮುಸ್ಲಿಂ ಮೌರ್ಯರ ಜೀವಕ್ಕೂ ಅಪಾಯ ಎದುರಾಗಬಹುದು. ಇಂತಹ ಬಾಷಣಗಳ ಸರಣಿಯೇ ನಡೆದಿದೆ. ಆ ಸರಣಿಗೆ ದೆಹಲಿ ಹಾಗೂ ಹರಿದ್ವಾರದ ಭಾಷಣಗಳು ಇತ್ತೀಚಿನ ಸೇರ್ಪಡೆ ಎಂದು ಪತ್ರದಲ್ಲಿ ವಿವರಿಸಲಾಗಿದೆ.

ಈ ಹಿಂದೆ ಇಂತಹ ಭಾಷಣ ಮಾಡಿದ್ದ ಸಂದರ್ಭದಲ್ಲಿಯೂ ಭಾಷಣ ಮಾಡಿದವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ ಗಳ ಅಡಿಯಲ್ಲಿ ಯಾವ ಕ್ರಮವನ್ನು ಕೈಗೊಳ್ಳಲಾಗಿಲ್ಲ ಎಂಬುದು ಪತ್ರದಲ್ಲಿ ತಿಳಿಸಲಾಗಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

ಮಳೆಯ ಕಾರಣ ಕ್ರಿಕೆಟ್ ಎರೆಡನೇ ದಿನದಾಟ ವಿಳಂಬ

0

ದಕ್ಷಿಣಾ ಆಫ್ರಿಕಾ ಮತ್ತು ಭಾರತ ತಂಡಗಳ ನಡುವಿನ ಟೆಸ್ಟ್ ಸರಣಿ ಪಂದ್ಯಾವಳಿಯ 2 ನೇ ದಿನದಾಟದ ಪಂದ್ಯವು ಮಳೆಯ ಅಭಾವದಿಂದ ರದ್ದಾಗಿದೆ.
ಸೋಮವಾರ ಸುರಿದ ಮಳೆಯಿಂದಾಗಿ ಪಂದ್ಯವು ಸ್ಥಗಿತಗೊಂಡಿತ್ತು. ಮಧ್ಯಾಹ್ನದವರೆಗೂ ಮುಂದುವರಿದ ಬಿದ್ದ ಮಳೆಯ ಕಾರಣ ಪಿಚ್ ಹೊದ್ದಿಕೆಯಾಗಿ ಆಟಕ್ಕೆ ಸುಕ್ತವಾಗಳಿರಲಿಲ್ಲ ಈ ಅವಧಿಯಲ್ಲಿ ಎರಡು ಸಲ ಸ್ವಲ್ಪ ಹೊತ್ತು ಮಳೆ ಸ್ಥಗಿತವಾಗಿತ್ತು.ಆಗ ಪಿಚ್ ಮತ್ತು ಹೊರಾಂಗಣದ ಸ್ಥಿತಿಗತಿಯನ್ನು ಅಂಪೈರ್ ಗಳು ಪರಿಶೀಲಿಸಿದರು.
ಮೊದಲ ದಿನವೇ ಉತ್ತಮ ಮೊತ್ತ ಕಲೆ ಹಾಕಿದ್ದ ಭಾರತ ತಂಡವು ಎರಡನೇ ದಿನದಾಟದಲ್ಲಿ 550 ಕ್ಕೂ ಹೆಚ್ಚು ರನ್ ಗಳ ಮೊತ್ತವನ್ನು ಕಲೆ ಹಾಕುವ ಗುರಿ ಹೊಂದಿತ್ತು.ಆದರೆ,ಇದೀಗ ಒಂದಿಡೀ ದಿನದಾಟ ರದ್ದಾದ ಕಾರಣ ತನ್ನ ಯೋಜನೆ ಬದಲಿಸುವ ಸಾಧ್ಯತೆ ಇದೆ ಎಂದು ತಂಡದ ಮೂಲಗಳು ತಿಳಿಸಿವೆ.ಇನ್ನುಳಿದ 3 ದಿನಗಳಲ್ಲಿ ಒಟ್ಟು 270 ಓವರ್ ಗಳ ಆಟ ನಡೆಯುವ ನಿರೀಕ್ಷೆ ಇದೆ.ಆದರೆ,3 ಮತ್ತು 4 ನೇ ದಿನವೂ ಮೋಡ ಮುಸುಕಿದ ವಾತಾವರಣ ಹಾಗೂ ಕೊನೆಯ ದಿನದಂದು ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾನುವಾರ ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ್ದ ಭಾರತ ತಂಡವು 90 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 272 ರನ್ ಗಳಿಸಿತು.ಶತಕ ಗಳಿಸಿದ K.L ರಾಹುಲ್ ಮತ್ತು ಲಯ ಕಂಡುಕೊಂಡಿದ್ದ ಅಜಿಂಕ್ಯ ರಹಾನೆ ಕ್ರೀಸ್ ನಲ್ಲಿದ್ದರು.ಆದರೆ, ಸೋಮವಾರ ಬೆಳಗ್ಗೆಯಿಂದಲೇ ಮಳೆ ಶುರುವಾಗಿದ್ದರಿಂದ ಆಟಗಾರರು ಕಣಕ್ಕಿಳಿಯಲಿಲ್ಲ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

ವಿದ್ಯಾರ್ಥಿಗಳಲ್ಲಿ ಆತ್ಮಹತ್ಯೆ: ವಿವಿಧ ಕಾರಣಗಳು

0

ದೇಶದಾದ್ಯಂತ ವಿದ್ಯಾರ್ಥಿಗಳ ಆತ್ಮಹತ್ಯೆ ಸಂಖ್ಯೆಯೂ ಹೆಚ್ಚುತ್ತಿದೆ. ವಿದ್ಯಾರ್ಥಿಗಳ ಆತ್ಮಹತ್ಯೆ ಶಿಕ್ಷಣಕ್ಕಾಗಿ ಹೆತ್ತವರು ಮಾಡಿದ ಸಾಲ, ಬಡತನ, ಪ್ರೇಮ ವೈಫಲ್ಯ ಈ ಕಾರಣಗಳಿಂದ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿವೆ.

ಕಳೆದ ವರ್ಷಕ್ಕೂ ಕೋವಿಡ್ ತೀವ್ರವಾಗಿದ್ದ ಸಂದರ್ಭದಲ್ಲಿ ದೇಶಾದ್ಯಂತ 12,500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದರು. ಆದರೆ ಈ ವರ್ಷ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದು ಪ್ರತಿ ದಿನಕ್ಕೆ 35 ಕ್ಕಿಂತ ಹೆಚ್ಚು ಮಂದಿ ಸಾವಿಗೆ ಶರಣಾಗುತ್ತಿದ್ದಾರೆ. 2019ಕ್ಕೆ ಹೋಲಿಸಿದರೆ ಈ ಪ್ರಮಾಣ ಶೇ. 21ರಷ್ಟು ಹೆಚ್ಚಾಗಿದೆ. ಆತ್ಮಹತ್ಯೆ ಮಾಡಿಕೊಳ್ಳುವವರ ಸಂಖ್ಯೆ ಮತ್ತಷ್ಟು ಏರುವ ನಿರೀಕ್ಷೆಯಿದೆ ಎಂಬ ಆತಂಕಕಾರಿ ವಿಷಯ ತಿಳಿದುಬಂದಿದೆ.

ಆತ್ಮಹತ್ಯೆಗೆ ಕೋವಿಡ್ ನಿಂದಾದ ಅನಿರೀಕ್ಷಿತ ಆಘಾತ, ಗೃಹಬಂಧನ. ಕುಟುಂಬದ ಸಾಮಾಜಿಕ ಆರ್ಥಿಕ ಸಾಮರ್ಥ್ಯ ದುರ್ಬಲ. ಶಿಕ್ಷಣ ಸಂಬಂಧಿತ ಒತ್ತಡ. ಸಹಪಾಠಿಗಳು ಗೆಳೆಯರಿಂದ ದೂರವಿದ್ದ ಕಾರಣಕ್ಕೆ ಜಿಗುಪ್ಸೆಗೊಂಡು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ.

ಕಳೆದ ವರ್ಷ ಕರ್ನಾಟಕ, ಮಹಾರಾಷ್ಟ್ರ, ಒಡಿಶಾ, ಜಾರ್ಖಂಡ್, ಮಧ್ಯಪ್ರದೇಶ, ತಮಿಳುನಾಡು ರಾಜ್ಯಗಳಲ್ಲಿ 6598 ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪ್ರತಿ ದಿನಕ್ಕೆ 35 ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೇಂದ್ರಾಡಳಿತ ಪ್ರದೇಶ ಹಾಗೂ ಇತರ ರಾಜ್ಯಗಳಲ್ಲಿ ಒಟ್ಟು 5928 ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಸಮಸ್ಯೆಗಳನ್ನು ಎದುರಿಸುವ ಸಾಮರ್ಥ್ಯ ಇಲ್ಲದಿರುವುದು, ಕಾಲೇಜುಗಳಲ್ಲಿ ಸೂಕ್ತ ಕೌನ್ಸೆಲಿಂಗ್ ಕೊರತೆ, ತಮ್ಮ ಸಮಸ್ಯೆಗಳನ್ನು ಕುಟುಂಬದ ಅಥವಾ ಬೇರೆಯವರ ಜತೆ ಹಂಚಿಕೊಳ್ಳಲು ಸಾಧ್ಯವಾಗದೇ ಇರುವುದು, ಕೆಲವೊಮ್ಮೆ ಅತಿಯಾದ ಮೊಬೈಲ್ ಬಳಕೆಯು ಆತ್ಮಹತ್ಯೆ ಹಾದಿ ತುಳಿಯಲು ಕಾರಣವಾಗುತ್ತಿದೆ”. ಎಂದು ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ರೆನ್ನಿ ಡಿಸೋಜ ತಿಳಿಸಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

ಉತ್ತಮ ಆರೋಗ್ಯ ಸೇವೆ: ಕೇರಳ ಪ್ರಥಮ ಸ್ಥಾನ

0

ಆರೋಗ್ಯ ಸೌಲಭ್ಯ ಮತ್ತು ಆರೋಗ್ಯ ಸೇವೆ ಗುಣಮಟ್ಟದ ಕುರಿತು ನೀತಿ ಆಯೋಗ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ಆರೋಗ್ಯ ಸೂಚ್ಯಂಕದ ದೊಡ್ಡ ರಾಜ್ಯಗಳ ವಿಭಾಗದಲ್ಲಿ ಕೇರಳ ಮತ್ತೊಮ್ಮೆ ಅಗ್ರಸ್ಥಾನ ಪಡೆದಿದೆ.

2019-20 ನೇ ವರ್ಷವನ್ನು ಮೂಲ ವರ್ಷವಾಗಿ ಇಟ್ಟುಕೊಂಡು ಸೂಚ್ಯಂಕ ಸಿದ್ಧಪಡಿಸಿದೆ. ಉತ್ತಮ ಆರೋಗ್ಯ ಸೇವೆಗಳಿಗಿರುವ ರಾಜ್ಯಗಳಲ್ಲಿ ತಮಿಳುನಾಡು ಹಾಗೂ ತೆಲಂಗಣ ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನಪಡೆದಿವೆ. ಕರ್ನಾಟಕವು 8ನೇ ಸ್ಥಾನ ಪಡೆದಿದೆ. ಉತ್ತರಪ್ರದೇಶ ಕೊನೆಯ ಸ್ಥಾನದಲ್ಲಿದೆ.

ಸಮಗ್ರ ಆರೋಗ್ಯ ಸೇವೆ ಹಾಗೂ ಆರೋಗ್ಯ ಸೇವೆಗಳ ಗುಣಮಟ್ಟದ ಪ್ರಗತಿ ಎಂಬ ಎರಡು ವಿಭಾಗಗಳಲ್ಲಿ ವರದಿ ತಯಾರಿಸಲಾಗಿದೆ. ಅಲ್ಲದೆ, ಬೃಹತ್ ರಾಜ್ಯ, ಸಣ್ಣ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಂದ ವಿಂಗಡಿಸಲಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯ ಹಾಗೂ ಕುಟುಂಬ ಕಲ್ಯಾಣ ಸಚಿವಾಲಯವು ವಿಶ್ವಬ್ಯಾಂಕ್ ಸಹಕಾರದಿಂದ ಸುಮಾರು 24 ಅಂಶಗಳನ್ನು ಪರಿಗಣಿಸಿ ಸೂಚ್ಯಂಕ ತಯಾರಿಸಿದೆ.

‘ಗುಣಮಟ್ಟದ ಆರೋಗ್ಯ ಸೇವೆಗಳನ್ನು ಒದಗಿಸುವಲ್ಲಿ ಎಲ್ಲಾ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳು ಹೆಚ್ಚಿನ ಪ್ರಯತ್ನ ಮಾಡುತ್ತೇವೆ. ಇದಕ್ಕಾಗಿ ನೀತಿಗಳನ್ನು ರೂಪಿಸುತ್ತಿವೆ. ಇದು ಸ್ಪರ್ಧಾತ್ಮಕ ಹಾಗೂ ಸಹಕಾರ ಮನೋಭಾವದ ಒಕ್ಕೂಟ ವ್ಯವಸ್ಥೆಯ ದ್ಯೋತಕವಾಗಿದೆ’ ಎಂದು ನೀತಿ ಆಯೋಗದ ಉಪಾಧ್ಯಕ್ಷ ರಾಜೀವ್ ಕುಮಾರ್ ತಿಳಿಸಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

ಏಷ್ಯ ಕಪ್ ಕ್ರಿಕೆಟ್ 19 ಸೆಮಿ ಗೆ ಭಾರತ ಪ್ರವೇಶ

0

ಏಷ್ಯ ವಿಶ್ವಕಪ್ 19 ವರ್ಷದೊಳಗಿನವರ ಕ್ರಿಕೆಟ್ ಲೀಗ್ ಟೂರ್ನಿಯ ಕೊನೆಯ ಹಂತದ ಪಂದ್ಯವು ಭಾರತ ಮತ್ತು ಆಫ್ಘಾನಿಸ್ತಾನ ತಂಡಗಳ ನಡುವೆ ಪಂದ್ಯ ನಡೆಯಿತು. ಆಫ್ಘಾನಿಸ್ತಾನದ ವಿರುದ್ಧ ಭಾರತ ಜಯ ಸಾಧಿಸಿ ಸೆಮಿಫೈನಲ್ ಗೆ ಕಾಲಿಟ್ಟಿದೆ.
ICC ಅಕಾಡೆಮಿ ಗ್ರೌಂಡ್ ನಲ್ಲಿ ಸೋಮವಾರ ಕೊನೆಯ ಪಂದ್ಯದಲ್ಲಿ ಟಾಸ್ ಗೆದ್ದ ಆಫ್ಘಾನಿಸ್ತಾನ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು 50 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 259 ರನ್ ಗಳಿಸಿತು.
260 ರನ್ ಗಳ ಗೆಲುವಿನ ಗುರಿ ಬೆನ್ನತ್ತಿ ಆಡಿದ ಭಾರತ ತಂಡ ಕೇವಲ 48.2 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 262 ರನ್ ಬಾರಿಸಿ ಜಯ ಸಾಧಿಸಿತು.
“A” ಗುಂಪಿನಲ್ಲಿರುವ ಭಾರತ ಒಟ್ಟು 4 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದು ಸೆಮೀಸ್ ಗೆ ಪ್ರವೇಶ ಪಡೆದಿದೆ.
ಮೊದಲ ಹಂತದ ವಿಕೆಟ್ ಜೊತೆಯಾಟದಲ್ಲಿ ಅಂಕಣಕ್ಕೆ ಇಳಿದ ಹರ್ನೂಲ್ ಸಿಂಗ್(65) ಮತ್ತು ಲಿಂಗ್ ಕ್ರಿಶ್ ರಘುವಂಶಿ(35) ಮೊದಲ ವಿಕೆಟ್ ಜೊತೆಯಾಟದಲ್ಲಿ ತಂಡಕ್ಕೆ 104 ರನ್ ಸೇರಿಸಿದರು.ಆದರೆ,ಬಳಿಕ ನಿರಂತರ ವಿಕೆಟ್ ಒಪ್ಪಿಸಿ 197 ರನ್ ಗಳಿಗೆ 6 ವಿಕೆಟ್ ಕಳೆದುಕೊಂಡಿತು.ಸೋಲಿನ ಸಂಕಷ್ಟಕ್ಕೆ ಸಿಲುಕಿದ ಭಾರತ ತಂಡವನ್ನು ನಂತರ ಬಂದ ಜೊತೆ ಆಟಗಾರರಾದ ರಾಜ್ ಬಾವಾ ಹಾಗೂ ಕುಶಾಲ್ ಇನ್ನೂ 10 ಎಸೆತ ಬಾಕಿ ಇರುವಂತೆಯೇ ಭಾರತ ತಂಡಕ್ಕೆ ಗೆಲುವು ತಂದು ಕೊಟ್ಟು ತಂಡವು ಸೆಮಿಫೈನಲ್ ಹಂತಕ್ಕೆ ತಲುಪುವುದಕ್ಕೆ ಕಾರಣರಾದರು.