Wednesday, February 11, 2026
Wednesday, February 11, 2026
Home Blog Page 1803

ಕೋವಿಡ್ ಆತಂಕ ಬೇಡ ನಿಯಮ ಪಾಲಿಸಿ- ಮೋದೀಜಿ

0

ದೇಶದ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಜನವರಿ 3 ರಿಂದ ಕೋವಿಡ್ ತಳಿ ಲಸಿಕೆ ನೀಡಲಾಗುವುದು ಎಂದು ಮಾನ್ಯ ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದ್ದಾರೆ.

ಶಾಲಾ-ಕಾಲೇಜಿಗೆ ಹೋಗುವ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕಲಾಗುತ್ತದೆ ಎಂದು ಮೋದಿಜಿ ಅವರು ತಿಳಿಸಿದ್ದಾರೆ.
ದೇಶವನ್ನು ಉದ್ದೇಶಿಸಿ ಭಾಷಣ ಮಾಡಿದಂತಹ ಸಂದರ್ಭದಲ್ಲಿ, ಗಂಭೀರ ಆರೋಗ್ಯ ಸಮಸ್ಯೆ ಇರುವ 60 ವರ್ಷ ಮೇಲ್ಪಟ್ಟವರಿಗೆ ಮುಂಜಾಗ್ರತಾ ಕ್ರಮವಾಗಿ ಬೂಸ್ಟರ್ ಲಸಿಕೆ ನೀಡಲಾಗುತ್ತದೆ ಎಂದು ಮೋದಿಜಿ ಅವರು ಹೇಳಿದರು.

ಕೊರೋನಾ ರೂಪಾಂತರ ತಳಿ ಓಮಿಕ್ರಾನ್ ಬಗ್ಗೆ ಆತಂಕ ಬೇಡ. ನಿಯಮಾವಳಿಗಳನ್ನು ಪಾಲಿಸಿ ಎಂದು ಮೋದಿಜಿ ಅವರು ಜನರಿಗೆ ಕರೆ ನೀಡಿದ್ದಾರೆ.

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನ ಮತ್ತು ಕ್ರಿಸ್ಮಸ್ ಹಬ್ಬದ ಸಂದರ್ಭದಲ್ಲಿ ಮೋದಿಜಿ ಅವರು ಈ ಮಹತ್ವದ ಘೋಷಣೆ ಮಾಡಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

ಡ್ರಗ್ ಪೆಡ್ಲರ್ ಜಾಲ ನಿರ್ದಾಕ್ಷೀಣ್ಯ ಕ್ರಮ

0

ಹೊಸ ವರ್ಷದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಮೋಜು ಮಸ್ತಿಯ ಪಾರ್ಟಿಗಳಿಗೆ ಮಾದಕ ವಸ್ತುಗಳನ್ನು ಪೂರೈಸಲು ತಯಾರಿ ನಡೆಸಿದ್ದ ಡ್ರಗ್ ಪೆಡ್ಲರ್ ಗಳ ಜಾಲವನ್ನು ಬೆಂಗಳೂರು ನಗರ ಪೊಲೀಸರು ಬಗ್ಗು ಬಡಿಯುತ್ತಿದ್ದಾರೆ.
ಈ ತಿಂಗಳಲ್ಲಿ ಇಲ್ಲಿಯವರೆಗೆ 60ಕ್ಕೂ ಹೆಚ್ಚು ಡ್ರಗ್ಸ್ ಪ್ರಕರಣಗಳಲ್ಲಿ 168 ಕೆ.ಜಿ ಗಾಂಜಾ,18 ಲೀಟರ್ ಹಶಿಷ್ ಆಯಿಲ್ ,50 ಗ್ರಾಂ ಕೊಕೇನ್, 500 ಎಕ್ಸ್ ಟೆಸ್ಸಿ ಮಾತ್ರೆ, 120 ಎಲ್ ಎಸ್ ಡಿ ಸ್ಟ್ರಿಪ್ಸ್ ಜಪ್ತಿ ಮಾಡಲಾಗಿದೆ, ಎಂದು ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಮಾಹಿತಿ ನೀಡಿದ್ದಾರೆ.
ಮಾದಕ ವಸ್ತು ಪೂರೈಕೆ ಜಾಲದ ವಿರುದ್ಧ ಸಮರ ಸಾರಿದ್ದೇವೆ. ಡ್ರಗ್ಸ್ ಪೆಡ್ಲರ್ ಗಳ ಚಲನವಲನಗಳ ಮೇಲೆ ನಿಗಾ ಇಡಲಾಗಿದೆ. ಯಾವುದೇ ಮಾದಕ ಪದಾರ್ಥ ಮಾರಾಟ, ಪೂರೈಕೆಗೆ ಅವಕಾಶ ನೀಡುವುದಿಲ್ಲ. ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.
ಮಾದಕವಸ್ತು ಪೂರೈಕೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ನಗರದ 8 ವಲಯಗಳ ಡಿಸಿಪಿಗಳ ಜೊತೆ ಚರ್ಚೆ ನಡೆಸಿದ್ದಾರೆ. ಡ್ರಗ್ಸ್ ತಡೆಗಟ್ಟಲು ಆಯಾ ವ್ಯಾಪ್ತಿಯಲ್ಲಿ ಕಠಿಣ ಕ್ರಮ ಕೈಗೊಳ್ಳುವಂತೆ ಡಿಸಿಪಿ ಗಳಿಗೆ ಸೂಚಿಸಿದ್ದಾರೆ.
ನಗರದಲ್ಲಿನ ಕಾನೂನು ಸುವ್ಯವಸ್ಥೆಯ 112 ಪೋಲೀಸ್ ಠಾಣೆ ವ್ಯಾಪ್ತಿಯಲ್ಲೂ ಇನ್ಸ್ ಪೆಕ್ಟರ್ ನೇತೃತ್ವದ ತಂಡ ವಿಶೇಷ ಕಾರ್ಯಾಚರಣೆ ಕೈಗೊಂಡಿದೆ. ಡ್ರಗ್ ಪೆಡ್ಲರ್ ಗಳ ಚಲನವಲನಗಳ ಮೇಲೆ ಹದ್ದಿನ ಕಣ್ಣಿಡಲಾಗಿದೆ. ಸಿಸಿಬಿ ಪೊಲೀಸರು ನಗರ ಸೇರಿದಂತೆ ನಗರದ ಹೊರವಲಯಗಳ ಮೇಲೂ ನಿಗಾ ಇಟ್ಟಿದ್ದಾರೆ ಎಂದು ತಿಳಿದುಬಂದಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

ಎಲ್ಲ ಕಡತ ವಿಲೇವಾರಿ ಮೂಲಕ ‘ಉತ್ತಮ ಆಡಳಿತ ದಿನ’ ಆಚರಿಸಿದ ಸಚಿವ ಅಶ್ವತ್ಥನಾರಾಯಣ

0

ರಾಜ್ಯ ಸರ್ಕಾರದಲ್ಲಿ ಮೂರು ಇಲಾಖೆಗಳನ್ನು ನಿರ್ವಹಿಸುತ್ತಿರುವ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಅವರು ತಮ್ಮ ಇಲಾಖೆಗಳಿಗೆ ಸಂಬಂಧಿಸಿದಂತೆ ತಮ್ಮ ಮುಂದೆ ಇದ್ದ ಎಲ್ಲ ಕಡತಗಳನ್ನು ವಿಲೇವಾರಿ ಮಾಡುವುದರ ಮೂಲಕ ಮಾಜಿ ಪ್ರಧಾನಿ ಎ.ಬಿ.ವಾಜಪೇಯಿ ಅವರ ಗೌರವಾರ್ಥದ “ಉತ್ತಮ ಆಡಳಿತ ದಿನ”ವನ್ನು ವಿಶಿಷ್ಟವಾಗಿ ಆಚರಿಸಿದರು.
ತಾವು ನಿರ್ವಹಿಸುವ ಉನ್ನತ ಶಿಕ್ಷಣ, ಎಲೆಕ್ಟ್ರಾನಿಕ್ಸ್, ಐಟಿ/ಬಿಟಿ ಹಾಗೂ ವಿಜ್ಞಾನ & ತಂತ್ರಜ್ಞಾನ, ಮತ್ತು ಕೌಶಲಾಭಿವೃದ್ಧಿ-ಉದ್ಯಮಶೀಲತೆ-ಜೀವನೋಪಾಯ ಇಲಾಖೆಗಳಿಗೆ ಬಂದಿರುವ ಎಲ್ಲಾ ಕಡತಗಳನ್ನು ಪರಿಶೀಲಿಸಿ ವಿಲೇವಾರಿ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಈ ಮುನ್ನ ಯಡಿಯೂರಪ್ಪನವರು ರಾಜೀನಾಮೆ ನೀಡಿ ಹೊಸ ಮುಖ್ಯಮಂತ್ರಿ ಆಯ್ಕೆಗೊಂಡ ಸಂದರ್ಭದಲ್ಲಿ ಕೂಡ ಸಚಿವರು ತಮ್ಮ ಇಲಾಖೆಗಳಲ್ಲಿ ಯಾವುದೇ ಕಡತ ಬಾಕಿ ಉಳಿಸಿಕೊಳ್ಳದೆ ವಿಲೇವಾರಿ ಮಾಡಿದ್ದರು ಎನ್ನುವುದು ಗಮನಾರ್ಹ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

ಬೆಳೆ ಪರಿಹಾರ ಹೆಚ್ಚಳ ಐತಿಹಾಸಿಕ ತೀರ್ಮಾನ : ಸಿಎಂ

0

ಬೆಳಗಾವಿಯಲ್ಲಿ ನಡೆದ ಹತ್ತು ದಿನಗಳ ಅಧಿವೇಶನದಲ್ಲಿ ರೈತರ ಸಮಸ್ಯೆಗಳಿಗೆ ರಾಜ್ಯ ಸರ್ಕಾರ ಸ್ಪಂದಿಸಿದೆ ಹಾಗೂ ಉತ್ತರ ಕರ್ನಾಟಕದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ಸಿಕ್ಕಿರುವುದು ಸಾರ್ಥಕಗೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಹೇಳಿದರು.

ಉತ್ತರ ಕರ್ನಾಟಕದ ಹಲವಾರು ಜ್ವಲಂತ ಸಮಸ್ಯೆಗಳಿಗೆ ಈ ಭಾರಿಯ ಅಧಿವೇಶನದಲ್ಲಿ ಉತ್ತರ ಸಿಕ್ಕಿದೆ. ಉತ್ತರ ಕರ್ನಾಟಕ ಭಾಗದ ನೀರಾವರಿ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.

ಉತ್ತರ ಕರ್ನಾಟಕ ಭಾಗದ ಹೆಸ್ಕಾಂನ ಆರ್ಥಿಕ ಪುನಶ್ಚೇತನ, ರೈಲ್ವೆ ಯೋಜನೆಗಳು, ಸಸಾಲಟ್ಟಿ ಮತ್ತು ಮಂಟೂರುಗಳ ನೀರಾವರಿ ಯೋಜನೆಗೆ ಅಧಿವೇಶನದಲ್ಲಿ ಅನುಮೋದನೆ ನೀಡಲಾಗಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

ಈ ಬಾರಿ ಸುರಿದಂತಹ ಅಕಾಲಿಕ ಮಳೆ ಹಾಗೂ ಪ್ರವಾಹದಿಂದ ರೈತರು ಎದುರಿಸುತ್ತಿರುವ ತೊಂದರೆಗಳ ಬಗ್ಗೆ ಅಧಿವೇಶನದಲ್ಲಿ ಸುದೀರ್ಘವಾಗಿ ಚರ್ಚಿಸಲಾಗಿದೆ. ಅಲ್ಲದೆ ಆ ಸಮಸ್ಯೆಗಳಿಗೆ ತ್ವರಿತ ಪರಿಹಾರದ ಮೊತ್ತ ಹೆಚ್ಚಳ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಹಿರಿಯ ನಾಯಕರಾದ ಬಿ.ಎಸ್.ಯಡಿಯೂರಪ್ಪ ಮತ್ತು ಪ್ರತಿಪಕ್ಷದ ನಾಯಕರು ಪ್ರಸ್ತಾಪಿಸಿದ್ದಾರೆ. ಅದಕ್ಕೆ ಸರ್ಕಾರವು ಮಾನವೀಯವಾಗಿ ಸ್ಪಂದಿಸಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ರೈತರ ಬೆಳೆ ಹಾನಿಗೆ ರಾಜ್ಯಸರ್ಕಾರ ಸ್ಪಂದಿಸಿ ದುಪ್ಪಟ್ಟು ಪರಿಹಾರ ನೀಡಲು ನಿರ್ಧರಿಸಿದೆ. ಒಣಬೇಸಾಯದ ಪ್ರತಿ ಹೆಕ್ಟೇರ್ ಗೆ 6,800 ರೂ. ಗಳಿಂದ ಪರಿಹಾರವನ್ನು 13,600 ರೂ.ಗಳಿಗೆ, ನೀರಾವರಿ ಜಮೀನಿನ ಪ್ರತಿ ಹೆಕ್ಟೇರ್ ಬೆಳೆ ಹಾನಿಗೆ 13,500 ರೂ. ಗಳಿಂದ ಪರಿಹಾರವನ್ನು 25,000 ರೂ.ಗಳಿಗೆ ಹಾಗೂ ತೋಟಗಾರಿಕೆ ಬೆಳೆಯ ಪ್ರತಿ ಹೆಕ್ಟೇರ್ ಬೆಳೆ ಹಾನಿಗೆ 18,000 ರೂ. ಗಳಿಂದ ಪರಿಹಾರವನ್ನು 28,000 ರೂ.ಗಳಿಗೆ ರೈತರಿಗೆ ನೀಡಲು ನಿರ್ಧರಿಸಿದೆ. ಇದು ಒಂದು ಐತಿಹಾಸಿಕವಾದ ತೀರ್ಮಾನ ಎಂದು ಸಿಎಂ ಬೊಮ್ಮಾಯಿ ಹೇಳಿದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

ಮಂಕಿ ಪಾರ್ಕ್: ಮಂಗನ ಕಾಯಿಲೆ ಭಯ

0

ಹೊಸನಗರ ತಾಲೂಕಿನ ಸಂಪೇಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ಥಾಪಿಸಲು ಆಯೋಜಿಸಿರುವ ನ ಮಂಕಿ ಪಾರ್ಕ್ ನಿರ್ಮಾಣಕ್ಕೆ ಗ್ರಾಮಸ್ಥರಿಂದ ವ್ಯಾಪಕ ವಿರೋಧ ಕೇಳಿಬರುತ್ತಿದೆ.

ಮಲೆನಾಡ ಮಹತ್ವಾಕಾಂಕ್ಷಿ ಯೋಜನೆ ಮಂಕಿ ಪಾರ್ಕ್ ಸ್ಥಾಪನೆಗೆ ನಿಗದಿಯಾಗಿದ್ದ, ತಾಲೂಕಿನ ನಾಗೋಡಿ ಗ್ರಾಮದಲ್ಲಿನ ಜನರ ವಿರೋಧ ಕೇಳಿಬರುತ್ತಿದೆ. ಇದರಿಂದ ಮಂಕಿ ಪಾರ್ಕ್ ಸ್ಥಾಪನೆಗೆ ಅಡಚಣೆ ಉಂಟಾಗಿತ್ತು. ಬಳಿಕ ಅಲ್ಲಿಂದ ಸ್ಥಳಾಂತರವಾಗಿ ಸಂಪೇಕಟ್ಟೆ ಗ್ರಾಮಪಂಚಾಯತ್ ವ್ಯಾಪ್ತಿಯ ಮತ್ತಿಕೈ ಗ್ರಾಮದಲ್ಲಿ ಮಂಕಿ ಪಾರ್ಕ್ ನಿರ್ಮಾಣ ಮಾಡಲು ಉದ್ದೇಶಿಸಲಾಗಿತ್ತು. ಪ್ರಥಮ ಹಂತದ ಕಾರ್ಯಾಚರಣೆ ನಡೆದಿದೆ. ಮತ್ತೆ ಅಲ್ಲೂ ಕೂಡ ಮಂಕಿ ಪಾರ್ಕ್ ನಿರ್ಮಿಸುವುದರ ಬಗ್ಗೆ ಗ್ರಾಮಸ್ಥರಿಂದ ವಿರೋಧ ಬಂದಿದೆ. ಇಲ್ಲಿಯೂ ಸಹ ಮಂಕಿ ಪಾರ್ಕ್ ಸ್ಥಾಪನೆ ಕಷ್ಟಕರವೆನೋ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.

ಈ ಹಿಂದೆ ನಿಟ್ಟೂರು -ನಾಗೋಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸ. ನಂ 305 ರಲ್ಲಿ ಮಂಕಿ ಪಾರ್ಕ್ ಸ್ಥಳ ಗುರುತಿಸಿದ ಸರ್ಕಾರ ಬಜೆಟ್ ನಲ್ಲಿ 6.25 ಕೋಟಿ ಹಣವನ್ನು ಮೀಸಲಿಟ್ಟಿತ್ತು. ಆದರೆ ಸ್ಥಳೀಯರ ಬಾರಿ ವಿರೋಧದಿಂದಾಗಿ ಈ ಸ್ಥಳದಲ್ಲಿ ಯೋಜನೆಯನ್ನು ಕೈಬಿಡಲಾಗಿತ್ತು.

ಏಕೆ ವಿರೋಧ ಕೇಳಿ ಬರುತ್ತಿದೆ ಎಂದರೆ, ಮತ್ತಿಕೈ ಭಾಗದ ಸ. ನಂ.147 ರಲ್ಲಿ 120 ಎಕರೆ ಅರಣ್ಯದ ಜಾಗವಿದೆ. ಅಲ್ಲದೆ ಹಿನ್ನೀರು ಹಾಗೂ ದಟ್ಟಾರಣ್ಯ ಹೊಂದಿಕೊಂಡಂತೆ ಇದೆ. ಪ್ರಾಯೋಗಿಕವಾಗಿ 6 ಎಕರೆ ಜಾಗವನ್ನು ಗುರುತಿಸಿ ಮಂಕಿ ಪಾರ್ಕ್ ಗೆ ಸೂಕ್ತ ಸ್ಥಳ ಎಂಬ ತೀರ್ಮಾನಕ್ಕೆ ಬರಲಾಗಿತ್ತು. ಆದರೆ ಜನವಸತಿಯಿಂದ ದೂರವಿರುವ ದಟ್ಟಾರಣ್ಯದಲ್ಲಿ ಸ್ಥಾಪಿಸಲು ಯಾವುದೇ ತಕರಾರಿಲ್ಲ. ಜನವಸತಿ ಪ್ರದೇಶವಿರುವ ಜಾಗದ ಹತ್ತಿರ ಮಂಕಿ ಪಾರ್ಕ್ ಮಾಡಲಾಗುತ್ತದೆ ಎಂಬ ವದಂತಿ ಎಲ್ಲೆಡೆ ಹರಡಿತ್ತು. ಇದಕ್ಕೆ ವಿರೋಧದ ಕೂಗು ಕೂಡ ಹೆಚ್ಚಾಯಿತು.

ಉದ್ದೇಶಿತ ಯೋಜನೆಗೆ ಸ್ಥಳೀಯ ಪ್ರೀತಿ ಎಂಬ ಹತ್ತನೇ ತರಗತಿ ವಿದ್ಯಾರ್ಥಿನಿ ಗ್ರಾಮ ಪಂಚಾಯಿತಿಗೆ ಮನವಿ ಯೋಜನೆ ವಿರೋಧಿಸಿ ಮನವಿ ಸಲ್ಲಿಸಿದ್ದಾರೆ. ನಮ್ಮ ಮನೆಯ ಹಿಂಭಾಗದಲ್ಲಿ ಮಂಗಗಳ ಉದ್ಯಾನ ನಿರ್ಮಾಣ ಮಾಡುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಮಂಗನ ಕಾಯಿಲೆ ಮಾರಣಾಂತಿಕ ವಾದದ್ದು. ಮಂಗಗಳಿಂದ ಹರಡುವ ಕಾಯಿಲೆ ಯಿಂದ ನಮ್ಮ ಮೇಲೆ ಪ್ರಭಾವ ಉಂಟಾಗುತ್ತದೆ. ಆದ್ದರಿಂದ ಮಂಕಿ ಪಾರ್ಕ್ ಸ್ಥಳಾಂತರಿಸಬೇಕು ಎಂದು ಹೇಳಿದ್ದಾಳೆ.

ವಿದ್ಯಾರ್ಥಿನಿ ಮನವಿಯನ್ನು ಸರ್ಕಾರ ಪುರಸ್ಕರಿಸುತ್ತದೆಯೇ ಕಾದುನೋಡಬೇಕಾಗಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

ಅಧಿವೇಶನ ಕುರಿತು ವಿಶ್ವೇಶ್ವರ ಹೆಗಡೆ ಕಾಗೇರಿ

0

ಈ ಬಾರಿ ನಡೆದ ವಿಧಾನಸೌಧ ಅಧಿವೇಶನದಲ್ಲಿ ಶೇ.75 ರಷ್ಟು ಸದಸ್ಯರು ಹಾಜರಿದ್ದರು ಎಂದು ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ತಿಳಿಸಿದ್ದಾರೆ.

‘ಸದನಕ್ಕೆ ಗೈರು ಹಾಜರಾಗಲು ಎಂಟು ಸದಸ್ಯರು ಪೂರ್ವ ಅನುಮತಿ ಪಡೆದಿದ್ದರು’ ಎಂದು ವಿಶ್ವೇಶ್ವರ ಹೆಗಡೆ ಕಾಗೇರಿಯವರು ತಿಳಿಸಿದರು.

ಈ ವರ್ಷ 40 ದಿನಗಳ ಅಧಿವೇಶನ ನಡೆದಿದೆ. ಪ್ರತಿವರ್ಷ 60 ದಿನಗಳ ಕಾಲ ಅಧಿವೇಶನ ನಡೆಯಬೇಕು ಎಂಬುದು ನಮ್ಮ ಹಂಬಲ. ಕೊರೋನಾ ಸೋಂಕಿನ ಕಾರಣದಿಂದ ಕಳೆದ ಎರಡು ವರ್ಷದಿಂದ 60 ದಿನಗಳ ಅಧಿವೇಶನ ನಡೆದಿರಲಿಲ್ಲ. ಮುಂದಿನ ವರ್ಷ ಹೆಚ್ಚಿನ ದಿನ ಅಧಿವೇಶನ ನಡೆಸುವ ಸಂಬಂಧ ಮುಖ್ಯಮಂತ್ರಿ ಅವರೊಂದಿಗೆ ಸಮಾಲೋಚನೆ ನಡೆಸುತ್ತೇನೆ ಎಂದು ವಿಶ್ವೇಶ್ವರ ಹೆಗಡೆ ಅವರು ಹೇಳಿದರು.

ಬೆಳಗಾವಿಯಲ್ಲಿ 52 ಗಂಟೆಗಳ ಕಾಲ ಕಾರ್ಯಕಲಾಪ ನಡೆಸಲಾಯಿತು. ಒಟ್ಟು 2426 ಪ್ರಶ್ನೆಗಳನ್ನು ಸ್ವೀಕರಿಸಲಾಗಿದೆ. ಸದನದಲ್ಲಿ ಉತ್ತರಿಸಬೇಕಾದ 150 ಪ್ರಶ್ನೆಗಳ ಪೈಕಿ 149 ಪ್ರಶ್ನೆಗಳಿಗೆ ಉತ್ತರ ನೀಡಲಾಗಿದೆ. ಲಿಖಿತ ಮೂಲಕ ಉತ್ತರಿಸುವ 2032 ಪ್ರಶ್ನೆಗಳ ಪೈಕಿ 1921 ಪ್ರಶ್ನೆಗಳಿಗೆ ಉತ್ತರಗಳನ್ನು ಮಂಡಿಸಲಾಗಿದೆ. ಈ ಮೂಲಕ ಶೇ.99 ರಷ್ಟು ಸಾಧನೆ ಮಾಡಲಾಗಿದೆ ಎಂದು ವಿಶ್ವೇಶ್ವರ ಹೆಗಡೆ ಅವರು ತಿಳಿಸಿದರು.

ಅತಿವೃಷ್ಟಿ ಕುರಿತು ಚರ್ಚೆಯಲ್ಲಿ 37 ಸದಸ್ಯರು ಭಾಗವಹಿಸಿದ್ದರು. 8 ಗಂಟೆ 38 ನಿಮಿಷಗಳ ಕಾಲ ಹಾಗೂ ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತು 13 ಸದಸ್ಯರು ಭಾಗವಹಿಸಿದ್ದರು. 5 ಗಂಟೆ 45 ನಿಮಿಷಗಳ ಕಾಲ ಚರ್ಚಿಸಲಾಗಿದೆ ಎಂದು ವಿಶ್ವೇಶ್ವರ ಹೆಗಡೆ ಅವರು ಮಾಹಿತಿ ನೀಡಿದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

ಜಾಲತಾಣಗಳ ವ್ಯಸನಿಗಳಾಗಬೇಡಿ

0

ವಿದ್ಯಾರ್ಥಿಗಳು ಜಾಲತಾಣಗಳ ವ್ಯಸನಿಗಳಾಗದೆ ವ್ಯಕ್ತಿತ್ವ ವಿಕಸನ, ಕೌಶಲ್ಯ ಅಭಿವೃದ್ಧಿ ಹಾಗೂ ಅಗತ್ಯಕ್ಕೆ ಅನುಗುಣವಾಗಿ ಜಾಲತಾಣಗಳನ್ನು ಬಳಸಬೇಕು ಎಂದು ಕುವೆಂಪು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವ ಪ್ರೊ. ಸಿ. ಎಂ. ತ್ಯಾಗರಾಜ್ ಅವರು ಸಲಹೆ ನೀಡಿದ್ದಾರೆ.

ಡಿವಿಎಸ್ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಕಾಲೇಜು ಮತ್ತು ಕುವೆಂಪು ವಿಶ್ವವಿದ್ಯಾಲಯದ ಸಹಯೋಗದಲ್ಲಿ ನೆಹರು ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಮೂರು ದಿನಗಳ 34ನೇ ಅಂತರಕಾಲೇಜು ಆಟೋಟ ಕ್ರೀಡಾಕೂಟದ ಸಮಾರೋಪದಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಪದಕ ವಿತರಣೆ ಮಾಡಲಾಯಿತು.

“ಪ್ರಸ್ತುತ ಪ್ರತಿಯೊಂದು ಬೆಳವಣಿಗೆಯ ಮೇಲೂ ಸಾಮಾಜಿಕ ಜಾಲತಾಣದ ಪ್ರಭಾವವಿದೆ” ಎಂದು ತ್ಯಾಗರಾಜ್ ಅವರು ವಿಶ್ಲೇಷಿಸಿದರು.

“ವಿದ್ಯಾವಂತರೇ ಹೆಚ್ಚಾಗಿ ಸೈಬರ್ ವಂಚನೆಗೆ ಒಳಗಾಗುತ್ತಿರುವುದು ಕಳವಳಕಾರಿ ವಿಚಾರ. ಸೈಬರ್ ವಂಚಕರು ಒಡ್ಡುವ ಆಮಿಷಗಳಿಗೆ ಬಲಿಯಾಗಬಾರದು. ಪಾಸ್ವರ್ಡ್ ಗೌಪ್ಯತೆ ಕಾಪಾಡಿಕೊಳ್ಳಬೇಕು. ಮಾದಕ ವಸ್ತುಗಳಿಗೆ ಬಲಿಯಾಗಬಾರದು” ಎಂದು ಆರ್ಥಿಕ ಮತ್ತು ಮಾದಕವಸ್ತು ನಿಯಂತ್ರಣ ಠಾಣೆಯ ಇನ್ಸ್ಪೆಕ್ಟರ್ ಗುರುರಾಜ್ ಅವರು ಎಚ್ಚರಿಸಿದರು.

ಡಿವಿಎಸ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎಸ್. ರಾಜಶೇಖರ್, ಪ್ರಾಂಶುಪಾಲರಾದ ಡಾ. ಎಂ. ವೆಂಕಟೇಶ್, ದೈಹಿಕ ಶಿಕ್ಷಣ ನಿರ್ದೇಶಕ ಸಚಿನ್ ಇನ್ನು ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

ರಾಜ್ಯದಲ್ಲಿ ಮತ್ತಷ್ಟು ಕೊರೋನ ಪತ್ತೆ

0

ರಾಜ್ಯದಲ್ಲಿ ಮತ್ತೆ ಕೊರೊನಾ ಸೋಂಕು ಸ್ಪೋಟಗೊಂಡಿದೆ. ಕೆಲ ದಿನಗಳಿಂದ ರಾಜ್ಯದಲ್ಲಿ ಕೊರೊನಾ ಸೋಂಕು ಕಡಿಮೆಯಾಗಿತ್ತು. ಆದರೆ ಶುಕ್ರವಾರ 1,14,559 ಜನರನ್ನ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅದರಲ್ಲಿ 405 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.

ರಾಜ್ಯದಲ್ಲಿ ಈ ಮೂಲಕ ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆ 30,03,969 ಕ್ಕೆ ಏರಿಕೆಯಾಗಿದೆ. ಇದುವರೆಗೆ ಕೋವಿಡ್ ಸೋಂಕಿನಿಂದ 38,305 ಜನರು ಮೃತಪಟ್ಟಿದ್ದಾರೆ. ಈವರೆಗೆ 267 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.

ರಾಜ್ಯದಲ್ಲಿ ಸೋಂಕಿನ ಪ್ರಮಾಣ ಶೇ.0.35, ಸಾವಿನ ಪ್ರಮಾಣ ಶೇ.0.98 ರಷ್ಟಿದೆ. ಬೆಂಗಳೂರು ನಗರದಲ್ಲಿ 254, ದಕ್ಷಿಣಕನ್ನಡ 20, ಉತ್ತರ ಕನ್ನಡ 32 ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. 11 ಜಿಲ್ಲೆಗಳಲ್ಲಿ ಯಾವುದೇ ಸೋಂಕಿತ ಪ್ರಕರಣಗಳು ವರದಿಯಾಗಿಲ್ಲ. ಬೆಂಗಳೂರು ನಗರದಲ್ಲಿ ಇಬ್ಬರು, ಮೈಸೂರು ಜಿಲ್ಲೆ ಮತ್ತು ಬೆಳಗಾವಿಯಲ್ಲಿ ತಲಾ ಒಬ್ಬರು ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

ಜನವರಿ 9 ಮೇಕೆದಾಟಿಗೆ ಕಾಂಗ್ರೆಸ್ ಪಾದಯಾತ್ರೆ

0

ಕಾಂಗ್ರೆಸ್ ಮೇಕೆದಾಟು ಯೋಜನೆ ಜಾರಿಗೊಳಿಸುವಂತೆ ಒತ್ತಾಯಿಸಿ ಜನವರಿ 9ರಿಂದ ಪಾದಯಾತ್ರೆಯನ್ನು ನಡೆಸಲು ತೀರ್ಮಾನಿಸಿದೆ. ಈ ಹಿನ್ನೆಲೆಯಲ್ಲಿ ಶುಕ್ರವಾರ ಕಾಂಗ್ರೆಸ್ ವತಿಯಿಂದ ಕಾವೇರಿಯ ಉಗಮಸ್ಥಾನ ತಲಕಾವೇರಿಯಲ್ಲಿ ಪೂಜೆ ಸಲ್ಲಿಸಲಾಯಿತು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖರು ಸೇರಿದಂತೆ ಹಲವರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಾತ್ರೆಗೆ ಯಶಸ್ಸು ಮತ್ತು ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಬರುವಂತೆ ಪ್ರಾರ್ಥನೆ ಸಲ್ಲಿಸಿದರು.

ಪ್ರತಿವರ್ಷವೂ ಕಾವೇರಿ ನದಿಯಿಂದ 104 ಟಿಎಂಸಿಗೂ ಹೆಚ್ಚು ನೀರು ಸಮುದ್ರದ ಪಾಲಾಗುತ್ತಿದೆ. ಮೇಕೆದಾಟು ಅಣೆಕಟ್ಟು ಕಟ್ಟಿದರೆ ನೀರು ಉಳಿಸುವ ಮೂಲಕ ಎರಡು ರಾಜ್ಯಗಳೂ ಪ್ರಯೋಜನ ಪಡೆದುಕೊಳ್ಳಬಹುದು. ವಿದ್ಯುತ್ ಉತ್ಪಾದನೆಯೂ ಸಾಧ್ಯವಿದೆ. ಸುಮಾರು 9,900 ಕೋಟಿ ರೂ. ಮೊತ್ತದ ಯೋಜನೆಯ ವಿಸ್ತೃತ ವರದಿಯ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ಸಲ್ಲಿಸಲಾಗಿದೆ. ಅದಕ್ಕೆ ಕೇಂದ್ರ ಸರ್ಕಾರದ ಒಪ್ಪಿಗೆ ನೀಡಿದೆ. ಸುಪ್ರೀಂಕೋರ್ಟ್ ಕೂಡ ಕುಡಿಯುವ ನೀರಿನ ವ್ಯವಸ್ಥೆಗೆ ಯಾರ ಅಡಚಣೆಯೂ ಬೇಡ ಎಂದಿದೆ. ಯೋಜನೆಗೆ ಕೇಂದ್ರ ಸರ್ಕಾರದ ಪರಿಸರ ಇಲಾಖೆಯಿಂದ ಒಪ್ಪಿಗೆ ಮಾತ್ರ ಸಿಗಬೇಕಿದೆ” ಎಂದು ತಲಕಾವೇರಿಯಲ್ಲಿ ಕಾವೇರಿ ಗೆ ಪ್ರಾರ್ಥನೆ ಸಲ್ಲಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು.

ಮೇಕೆದಾಟು ಯೋಜನೆ ಕೂಡಲೇ ಆರಂಭಿಸಲು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಮೇಲೆ ಒತ್ತಡ ಹಾಕಲು 2022ರ ಜನವರಿ 9ರಿಂದ ಕಾಂಗ್ರೆಸ್ ಪಕ್ಷ ಪಾದಯಾತ್ರೆ ನಡೆಸಲಿದೆ” ಎಂದು ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ, ಮಾಜಿ ಸಚಿವ ಹೆಚ್.ಎಂ. ರೇವಣ್ಣ, ಡಿಸಿಸಿ ಕಾರ್ಯಾಧ್ಯಕ್ಷ ಧರ್ಮಜ ಉತ್ತಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

ಶಿವಮೊಗ್ಗ-ಬೆಂಗಳೂರು : ವಿಸ್ಟಾಡೋಮ್ ಬೋಗಿ

0

ಪ್ರವಾಸೋದ್ಯಮವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರೈಲ್ವೆ ಇಲಾಖೆಯು ಶಿವಮೊಗ್ಗ ಬೆಂಗಳೂರು ನಡುವಿನ ಒಂದು ರೈಲಿಗೆ ಬೋಗಿಯನ್ನ ವಿಸ್ಟಾಡೋಮ್ ಅಳವಡಿಸಲು ನಿರ್ಧರಿಸಿದೆ.

ಬೆಂಗಳೂರು-ಮಂಗಳೂರು ಮಾರ್ಗದಲ್ಲಿ ವಿಸ್ಟಾಡೋಮ್ ಗೆ ಭಾರಿ ಬೇಡಿಕೆ ಬಂದ ಬಳಿಕ ಶಿವಮೊಗ್ಗ- ಬೆಂಗಳೂರು ಮಾರ್ಗದಲ್ಲೂ ವಿಸ್ಟಾಡೋಮ್ ಅನ್ನು ಪ್ರಾಯೋಗಿಕವಾಗಿ ಅಳವಡಿಸಲಾಗುತ್ತಿದೆ.

ಯಶವಂತಪುರ- ಶಿವಮೊಗ್ಗ, ಶಿವಮೊಗ್ಗ ಯಶವಂತಪುರ ಇಂಟರ್ಸಿಟಿ ಎಕ್ಸ್ ಪ್ರೆಸ್ ರೈಲಿಗೆ ತಾತ್ಕಾಲಿಕವಾಗಿ ವಿಸ್ಟಾಡೋಮ್ ಬೋಗಿ ಅಳವಡಿಸಲಾಗುತ್ತಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಡಿಸೆಂಬರ್ 25 ರಿಂದ ಮಾರ್ಚ್ 31ರವರೆಗೆ ಈ ಬೋಗಿಯಲ್ಲಿ ವಿಸ್ಟಾಡೋಮ್ ಇರಲಿದೆ. ವಿಸ್ಟಾಡೋಮ್ ಬೋಗಿಯಲ್ಲಿ ಹವಾನಿಯಂತ್ರಿತ ವ್ಯವಸ್ಥೆ ಜೊತೆಗೆ ಪ್ರಕೃತಿ ಸೌಂದರ್ಯ ಸವಿಯಲು ದೊಡ್ಡದಾದ ಗಾಜಿನ ಕಿಟಕಿಗಳು ಮತ್ತು ಛಾವಣಿ ವ್ಯವಸ್ಥೆ ಇರಲಿದೆ. ಈ ಬೋಗಿಗಳಲ್ಲಿ ಪ್ರಯಾಣಿಕರು ಕೂರುವ ಸೀಟುಗಳು ಯಾವುದೇ ದಿಕ್ಕಿಗೆ ತಿರುಗಿಸುವಂತಿರುತ್ತವ ವ್ಯವಸ್ಥೆಯನ್ನು ಈ ಬೋಗಿಗಳಲ್ಲಿ ಕಾಣಬಹುದಾಗಿದೆ.