Wednesday, February 11, 2026
Wednesday, February 11, 2026
Home Blog Page 1808

ಅಕ್ರಮ ಕಟ್ಟಡ ತಪಾಸಣೆ ನಡೆಸಿ ಕಾನೂನು ಕ್ರಮ

0

ಕರ್ನಾಟಕ ಮುನ್ಸಿಪಲ್ ಕಾಯ್ದೆ -1976ರ ಅಡಿ ಸಹಾಯಕ ಇಂಜಿನಿಯರ್ ಗಳು, ಕಾರ್ಯಪಾಲಕ ಇಂಜಿನಿಯರ್ ಗಳು, ತಮ್ಮ ವ್ಯಾಪ್ತಿಯಲ್ಲಿ ಅನಧಿಕೃತ ಅಥವಾ ಅಕ್ರಮ ಕಟ್ಟಡಗಳ ತಪಾಸಣೆ ನಡೆಸಬೇಕು. ಒಂದು ವೇಳೆ ಅಂತಹ ಕಟ್ಟಡಗಳು ಕಂಡುಬಂದರೆ ತಡಮಾಡದೆ ಕಾನೂನು ಪ್ರಕಾರ ಕ್ರಮ ಜರುಗಿಸಬೇಕು ಎಂದು ನ್ಯಾಯಪೀಠ ಸೂಚಿಸಿದೆ.
ಶಿವಮೊಗ್ಗದ ಕೆ.ಎಸ್. ಈಶ್ವರಪ್ಪ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಪ್ರಕಟಿಸಿದ್ದು, ಅರ್ಜಿದಾರರಿಗೆ 50 ಸಾವಿರ ರೂಪಾಯಿ ದಂಡ ವಿಧಿಸಿದೆ.
ಕ್ರಮ ಕೈಗೊಳ್ಳುವಲ್ಲಿ ವಿಫಲವಾದರೆ ಹಾಗೂ ತಮ್ಮ ಕರ್ತವ್ಯದಲ್ಲಿ ಲೋಪ ಎಸಗಿದರೆ ಅಂತಹ ಅಧಿಕಾರಿಗಳ ವಿರುದ್ಧ ಪಾಲಿಕೆಗಳ ಆಯುಕ್ತರು ಇಲಾಖಾ ವಿಚಾರಣೆ ನಡೆಸಬೇಕು. ತಪ್ಪೆಸಗಿರುವುದು ಕಂಡುಬಂದರೆ ಅವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು ಎಂದು ತಿಳಿಸಿದೆ.
ಸಾಮಾನ್ಯ ಜನರು ಅಕ್ರಮ ಅಥವಾ ಅನಧಿಕೃತ ಕಟ್ಟಡಗಳನ್ನು ನಿರ್ಮಿಸುವ ಸಂದರ್ಭದಲ್ಲಿ ಅಧಿಕಾರಿಗಳು ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಲಾಭ ಪಡೆಯುತ್ತಾರೆ. ಇದರಿಂದ ಜನರೂ ವಂಚನೆಗೆ ಒಳಗಾಗುತ್ತಾರೆ ಎಂದು ನ್ಯಾಯಮೂರ್ತಿಗಳಾದ ಎಂ. ನಾಗಪ್ರಸನ್ನ ಅವರು ತಿಳಿಸಿದ್ದಾರೆ.
ಅಕ್ರಮ ಅಥವಾ ಅನಧಿಕೃತ ಕಟ್ಟಡಗಳ ವಿರುದ್ಧ ಕಾನೂನು ಕ್ರಮ ಜರುಗಿಸದೇ ನಿರ್ಲಕ್ಷ ತೋರುವ ಅಧಿಕಾರಿಗಳ ವಿರುದ್ಧ ಇಲಾಖಾ ವಿಚಾರಣೆ ನಡೆಸಿ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದು ಹೈಕೋರ್ಟ್, ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರಿಗೆ ಕಟ್ಟುನಿಟ್ಟಿನ ಆದೇಶ ಮಾಡಿದೆ.
ಅರ್ಜಿದಾರರು ದಂಡದ ಮೊತ್ತವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಜಮೆ ಮಾಡಬೇಕು. ಅರ್ಜಿದಾರರ ವಿರುದ್ಧ ಕೈಗೊಂಡಿರುವ ಕ್ರಮವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಬೇಕು ಎಂದು ನ್ಯಾಯಪೀಠ ಮಹಾನಗರ ಪಾಲಿಕೆಗೆ ಆದೇಶಿಸಿದೆ.

ಅಕ್ರಮ ಕಟ್ಟಡ ತೆರವಿಗೆ ಶಿವಮೊಗ್ಗ ಮಹಾನಗರ ಪಾಲಿಕೆ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಈಶ್ವರಪ್ಪ ಹೈಕೋರ್ಟ್ ಮೆಟ್ಟಿಲೇರಿದ್ದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

ಬಟ್ಟೆಗಳ ಮೇಲೆ ಜಿಎಸ್ಟಿ ಏರಿಕೆ ಬೇಡ : ಸರ್ಕಾರಕ್ಕೆ ಮನವಿ

0

ಕೇಂದ್ರ ಸರ್ಕಾರ ಜನವರಿಯಿಂದ ಬಟ್ಟೆಗಳ ಹಾಗೂ ಪಾದರಕ್ಷೆಗಳ ಮೇಲೆ ಜಿಎಸ್ಟಿ ದರ ಶೇ.5 ರಿಂದ ಶೇ.12ಕ್ಕೆ ಏರಿಸಿದೆ. ಕೇಂದ್ರ ಸರ್ಕಾರದ ಈ ಕ್ರಮವನ್ನು ವಿರೋಧಿಸಿ ಗಾರ್ಮೆಂಟ್ಸ್ ಹಾಗೂ ರಿಟೇಲ್ ವ್ಯಾಪಾರ ವಲಯದ ಸಂಘಟನೆಗಳು ಜಿಎಸ್ಟಿ ಏರಿಕೆ ವಿರುದ್ಧ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿವೆ.

ಕೇಂದ್ರ ಸರ್ಕಾರ ಈ ಬಗ್ಗೆ ಜಿಎಸ್ಟಿ ಮಂಡಳಿ ಸಭೆಯಲ್ಲಿ ತೀರ್ಮಾನವಾಗಲಿದೆ ಎಂದು ಹಾರಿಕೆಯ ಉತ್ತರ ನೀಡಿದೆ. ಸೆಪ್ಟೆಂಬರ್ ನಲ್ಲಿ ಕೊನೆಯ ಬಾರಿಗೆ ಜಿಎಸ್ಟಿ ಮಂಡಳಿಯ ಸಭೆ ನಡೆದಿತ್ತು. ಡಿಸೆಂಬರ್ ಮೂರನೇ ವಾರದಲ್ಲಿ ನಡೆಯಬೇಕಿದ್ದ ಸಭೆ ಮುಂದೂಡಲಾಗಿದೆ. ಈ ನಿಟ್ಟಿನಲ್ಲಿ 2022ರ ಜನವರಿ ಒಂದರಿಂದ ಬಟ್ಟೆ ಹಾಗೂ ಪಾದರಕ್ಷೆಗಳ ಮೇಲಿನ ಜಿಎಸ್ಟಿ ತರ ದರ ಹೆಚ್ಚಳವಾಗಲಿದೆ.

ಜಿಎಸ್ಟಿ ಏರಿಕೆಯಿಂದಾಗಿ ಭಾರೀ ಸಂಕಷ್ಟ ಎದುರಾಗಲಿದೆ. ಆದರೆ ಮಾರುಕಟ್ಟೆಯಲ್ಲಿ ಬಟ್ಟೆಗಳ ಮೇಲೆ ದರ ಹೆಚ್ಚಾದರೆ ಉತ್ಪನ್ನಗಳಿಗೆ ಬೇಡಿಕೆ ಕಡಿಮೆಯಾಗಲಿದೆ. ಬೇಡಿಕೆ ಕಡಿಮೆಯಾದರೆ ಗಾರ್ಮೆಂಟ್ಸ್ ಗಳು ಉತ್ಪಾದನೆಯನ್ನು ತಗ್ಗಿಸಬೇಕಾಗುತ್ತದೆ. ಇಂದರಿಂದ ಗಾರ್ಮೆಂಟ್ಸ್ ನಲ್ಲಿ ಉದ್ಯೋಗ ಕಡಿತ ಎದುರಾಗಬಹುದು. ಆದ್ದರಿಂದ ಸರ್ಕಾರ ಜಿಎಸ್ಟಿ ದರ ಏರಿಕೆ ಪ್ರಸ್ತಾವವನ್ನು ಹಿಂತೆಗೆದುಕೊಳ್ಳಬೇಕು ಎಂದು ಉದ್ದಿಮೆ ವಲಯದ ಸಂಘಟನೆಗಳು ಒತ್ತಾಯಿಸಿವೆ.

ಕಳೆದ ಕೆಲವರ್ಷಗಳಿಂದ ನೆರೆಯ ಬಾಂಗ್ಲಾದೇಶದಿಂದ ಭಾರತಕ್ಕೆ ಗಾರ್ಮೆಂಟ್ಸ್ ಉತ್ಪನ್ನಗಳ ರಫ್ತು ಗಣನೀಯ ಪ್ರಮಾಣದಲ್ಲಿ ಹೆಚ್ಚಾಗಿದೆ. ಭಾರತಕ್ಕೆ ಹೋಲಿಸಿದರೆ ಬಾಂಗ್ಲಾದೇಶದಲ್ಲಿ ಉತ್ಪಾದನೆಯ ವೆಚ್ಚ ಕಡಿಮೆಯಾಗಿರುವುದು ಇದಕ್ಕೆ ಮತ್ತೊಂದು ಕಾರಣವಾಗಿದೆ. ಹೀಗಾಗಿ ಜಿಎಸ್ಟಿ ಯನ್ನು ಹೆಚ್ಚಿಸಿ ಮಾರುಕಟ್ಟೆಯಲ್ಲಿ ಉತ್ಪನ್ನಗಳ ಬೇಡಿಕೆ ಕುಸಿದರೆ, ಬಾಂಗ್ಲಾದೇಶದ ಅಗ್ಗದ ಉತ್ಪನ್ನಗಳು ಇದ್ದರೂ ಪಡಿಸುವುದು ಕೂಡ ಸವಾಲಾಗಿ ಪರಿಣಮಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ.

ಜಿಎಸ್ಟಿ ತಜ್ಞ ಬಿ.ಟಿ.ಮನೋಹರ್ ಅರುವ ‘ಸಂಸ್ಕರಿತ ಉತ್ಪನ್ನಕ್ಕಿಂತ ಕಚ್ಚಾ ವಸ್ತುಗಳ ಮೇಲಿನ ತೆರಿಗೆ ಜಾಸ್ತಿ ಇರುವುದರಿಂದ ಸರಿದೂಗಿಸಲು ಜಿಎಸ್ಟಿ ಮಂಡಳಿ ತೆರಿಗೆ ಹೆಚ್ಚಳ ಮಾಡಿದೆ. ಆದರೆ ಇದರಿಂದ ಮಾರುಕಟ್ಟೆಯಲ್ಲಿ ಉತ್ಪನ್ನ ಮಾರಾಟ ಪ್ರಮಾಣ ತಿಳಿಯುವ ಸಾಧ್ಯತೆ ಇದೆ. ಗ್ರಾಹಕರಿಗೆ ದರ ಹೆಚ್ಚಳದ ಬಿಸಿ ತಟ್ಟಲಿದೆ’ ಎಂದು ಹೇಳಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

ಹೊಸ ತಂತ್ರಾಂಶ ವಿಜ್ಞಾನಕ್ಕೆ ಹೊಸ ಪೀಳಿಗೆ ಹೊಂದಿಕೊಳ್ಳಬೇಕು

0

ಓಬಿರಾಯನ ಕಳೆದ ಮೆಕಾಲೆ ಶಿಕ್ಷಣ ನೀತಿಯನ್ನು ಆದರಿಸಿ ಇಂದಿನ ಬದುಕಿನ ಸವಾಲುಗಳನ್ನು ಎದುರಿಸಲು ಸಾಧ್ಯವಿಲ್ಲ. ಕಲಿಯುವ ವಿದ್ಯೆ ಹಾಗೂ ಬಳಕೆಯಾಗುವ ವಿದ್ಯೆ ನಡುವೆ ವ್ಯತ್ಯಾಸವಿದೆ. ಇವುಗಳ ನಡುವೆ ಸಮತೋಲನ ತರುವ ನಿಟ್ಟಿನಲ್ಲಿ ಹೊಸ ಶಿಕ್ಷಣ ನೀತಿ ಜಾರಿಗೆ ತರಲಾಗುತ್ತಿದೆ ಎಂದು ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದರು.

ಬೆಳಗಾವಿಯ ಹಿರೇಬಾಗೇವಾಡಿಯ ಮಲ್ಲಪ್ಪನ ಗುಡ್ಡದ 126 ಎಕರೆ ಪ್ರದೇಶದಲ್ಲಿ ನಿರ್ಮಿಸುತ್ತಿರುವ, ರಾಣಿ ಚೆನ್ನಮ್ಮ ವಿವಿ ಕಟ್ಟಡಗಳ ನಿರ್ಮಾಣಕ್ಕೆ ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಭೂಮಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡುತ್ತಿದ್ದರು.

“ಇಂದು ಜ್ಞಾನಾರ್ಜನೆ ವಿಚಾರದಲ್ಲಿ ಬಹಳಷ್ಟು ಬದಲಾವಣೆಗಳಾಗುತ್ತಿವೆ. ತಂತ್ರಾಂಶ ವಿಜ್ಞಾನಕ್ಕೆ ಜಗತ್ತು ಬದಲಾಗಿದೆ. ಮುಂದಿನ ಪೀಳಿಗೆ ಇಂತಹ ಬದಲಾವಣೆಗಳಿಗೆ ಹೊಂದಿಕೊಳ್ಳಲು ಹೊಸ ಶಿಕ್ಷಣ ನೀತಿ ಸಹಾಯಕವಾಗಿದೆ. ವಿಶ್ವವಿದ್ಯಾಲಯಗಳು ಶೈಕ್ಷಣಿಕವಾಗಿ ಚಿಂತನೆಗಳನ್ನು ಅಳವಡಿಸಿಕೊಳ್ಳುವ ಅಗತ್ಯವಿದೆ. ಜಗತ್ತಿನ ಶಕ್ತಿ ಜ್ಞಾನದ ಕಡೆಗೆ ವಾಲುತ್ತಿದೆ. ವಿವಿಗಳು ಇದನ್ನು ಅರಿತುಕೊಂಡು ಶಿಕ್ಷಣ ಗುಣಮಟ್ಟವನ್ನು ಸುಧಾರಿಸಬೇಕು ಎಂದು ಬೊಮ್ಮಾಯಿ ಅವರು ಸಲಹೆ ನೀಡಿದರು.

“ಈ ಭಾಗದ ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ಸೌಲಭ್ಯ ಒದಗಿಸುವ ಉದ್ದೇಶದಿಂದ ವಿಶ್ವವಿದ್ಯಾಲಯಕ್ಕೆ ಭೂಮಿ ಒದಗಿಸಲಾಗಿದೆ. ಬೆಳಗಾವಿ ಜಿಲ್ಲೆಯ ಶೈಕ್ಷಣಿಕ ಗುಣಮಟ್ಟವನ್ನು ಇನ್ನಷ್ಟು ಉತ್ತಮಪಡಿಸುವ ನಿಟ್ಟಿನಲ್ಲಿ ಸರ್ಕಾರ ಎಲ್ಲ ಸೌಲಭ್ಯಗಳನ್ನು ಒದಗಿಸಲಿದೆ. ಈ ಭಾಗದ ಸವಾಲು ಹಾಗೂ ಸಮಸ್ಯೆಗಳನ್ನು ಅರಿತುಕೊಂಡು ಅವುಗಳ ನಿವಾರಣೆಗಾಗಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಕಾರ್ಯ ನಿರ್ವಹಿಸಬೇಕು. ಸೂಪರ್ 30 ಯೋಜನೆ ಮೂಲಕ ಮುಂದಿನ ಬಂದು ವರ್ಷದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಶಿಕ್ಷಣ ಗುಣಮಟ್ಟ ಸುಧಾರಣೆಗೆ ಸರ್ಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಡಾ. ಸಿ. ಎನ್. ಅಶ್ವತ್ಥನಾರಾಯಣ ಅವರು ಭರವಸೆ ನೀಡಿದರು.

ಈ ವೇಳೆಯಲ್ಲಿ ಮಾತನಾಡಿದ ಮುಜರಾಯಿ, ಹಜ್ ಮತ್ತು ವಕ್ಛ್ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕೌಶಲ್ಯ ಹಾಗೂ ತಂತ್ರಜ್ಞಾನಾಧಾರಿತ ಶಿಕ್ಷಣದ ಅಗತ್ಯವಿದೆ ಎಂದು ಪ್ರತಿಪಾದಿಸಿದರು.

ಈ ಸಂದರ್ಭದಲ್ಲಿ ವಿವಿ ಕುಲಪತಿ ಪ್ರೊ.ಎಂ. ರಾಮಚಂದ್ರಗೌಡ, ವಿಧಾನಪರಿಷತ್ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ವಿಧಾನಪರಿಷತ್ ಸದಸ್ಯರಾದ ಅರುಣ್ ಶಹಾಪುರ, ಡಾ. ಸಾಬಣ್ಣ ತಳವಾರ, ಸಿಂಡಿಕೇಟ್ ಸದಸ್ಯರು , ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

ಆಮ್ಲಜನಕ ಕೊರತೆಯಾಗದಂತೆ ಕ್ರಮ

0

ಕೊರೊನಾ 2ನೇ ಅಲೆ ವೇಳೆ ದೇಶಾದ್ಯಂತ ಉಂಟಾಗಿದ್ದ ಆಮ್ಲಜನಕ ಕೊರತೆ ಭವಿಷ್ಯದಲ್ಲಿ ಮತ್ತೊಮ್ಮೆ ತಲೆದೋರದಂತೆ ಎಚ್ಚರಿಕೆ ವಹಿಸುತ್ತಿರುವ ಕೇಂದ್ರ ಸರ್ಕಾರವು ಆರೋಗ್ಯ ಸೇವೆ ಸಿಬ್ಬಂದಿಗೆ ವೈದ್ಯಕೀಯ ಬಳಕೆ ಆಮ್ಲಜನಕದ ವ್ಯವಸ್ಥಿತ ನಿರ್ವಹಣೆ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದೆ.
ದೇಶಾದ್ಯಂತ ಓಮಿಕ್ರಾನ್ ಸೋಂಕಿನ ಪ್ರಕರಣಗಳು ದ್ವಿಶತಕ ಬಾರಿಸಿದ ಬೆನ್ನಲ್ಲೇ ದಿಲ್ಲಿ ಏಮ್ಸ್ ನಿರ್ದೇಶಕ ಹಾಗೂ ಹಿರಿಯ ಶ್ವಾಸಕೋಶ ತಜ್ಞ ವೈದ್ಯ ಡಾ. ರಣದೀಪ್ ಗುಲೇರಿಯಾ ಅವರು ಜನಸಾಮಾನ್ಯರಿಗೆ ಎಚ್ಚರಿಕೆ ನೀಡಿದ್ದಾರೆ.
“ರೂಪಾಂತರಿ ವೈರಾಣುವನ್ನು ನಿಯಂತ್ರಿಸುವ ಲಸಿಕೆಗಳ ಮಿಶ್ರಣ ‘ಬೈವೆಲೆಂಟ್ ಲಸಿಕೆ’ ಗಳು ಶೀಘ್ರವೇ ಮಾರುಕಟ್ಟೆಗೆ ಬರಲಿವೆ. ಇದನ್ನು ಸೆಕೆಂಡ್ ಜನರೇಶನ್ ವ್ಯಾಕ್ಸಿನ್ ಎನ್ನಲಾಗುತ್ತದೆ. ಇವುಗಳಿಂದ ಕೊರೊನಾದ ಹೊಸ ರೂಪಾಂತರಿಗಳಿಗೆ ಪರಿಣಾಮಕಾರಿ ಅಂಕುಶ ಸಾಧ್ಯವಾಗಲಿದೆ. ಅಲ್ಲಿಯವರೆಗೂ ಕೊರೊನಾ ಮುನ್ನೆಚ್ಚರಿಕೆ ಕ್ರಮಗಳಾದ ಮಾಸ್ಕ್ ಧಾರಣೆ, ಸಾಮಾಜಿಕ ಅಂತರ ತಪ್ಪದೇ ಪಾಲಿಸಬೇಕು ಎಂದು ಸೂಚಿಸಿದ್ದಾರೆ.
ಸದ್ಯ ಕೊರೊನಾ ನಿರೋಧಕ ಲಸಿಕೆಯ ಎರಡೂ ಡೋಸ್ ಗಳನ್ನು ಪಡೆದಿರುವವರಿಗೆ ಬೂಸ್ಟರ್ ಡೋಸ್ ನೀಡುವ ಅಗತ್ಯವಿಲ್ಲ. ಪ್ರಾಕೃತಿಕವಾಗಿ ಉಂಟಾಗುವ ಸೋಂಕಿಗೆ ದೇಹದಲ್ಲಿ ರೋಗ ನಿರೋಧಕ ತೆಯನ್ನು ಹೆಚ್ಚಿಸುವುದು ಅತ್ಯಗತ್ಯ ಎಂದು ಲಸಿಕೆ ಅಭಿಯಾನ ರಾಷ್ಟ್ರೀಯ ತಾಂತ್ರಿಕ ಸಲಹಾ ಸಮಿತಿ ಸದಸ್ಯ ಡಾ. ಜಯಪ್ರಕಾಶ್ ಮುಳಿಯಿಲ್ ಅಭಿಪ್ರಾಯಪಟ್ಟಿದ್ದಾರೆ.
ಬಹಳ ಬಾರಿ ರಚನೆ ಮಾರ್ಪಡಿಸಿಕೊಂಡಿರುವ ಕೊರೊನಾ ರೂಪಾಂತರಿಯಾದ ಓಮಿಕ್ರಾನ್ ಮಾರಣಾಂತಿಕ ವಲ್ಲ ಎನ್ನುವುದು ತಪ್ಪು ಭಾವನೆ. ಒಂದೇ ಒಂದು ಬಾರಿ ರೂಪಾಂತರಗೊಂಡರೂ ಕೊರೊನಾ ಮಾರಣಾಂತಿಕವಾಗಬಲ್ಲದು. ಅದರ ರಚನೆಯ ಸೂಕ್ಷ್ಮ ಅಧ್ಯಯನ ಬಾಕಿ ಇದೆ ಎಂದು ತಿಳಿಸಿದ್ದಾರೆ.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಆಸ್ಪತ್ರೆಗಳು ಮತ್ತು ಕ್ವಾರಂಟೈನ್ ಕೇಂದ್ರಗಳಿಗೆ ಪೂರೈಕೆಯಾಗುವ ಆಮ್ಲಜನಕ ಪ್ರಮಾಣದಲ್ಲಿ ಸೋರಿಕೆ ತಡೆಯುವುದು ಹಾಗೂ ಕೌಶಲ್ಯಪೂರ್ಣವಾಗಿ ಸಂಗ್ರಹದಲ್ಲಿರುವ ಆಮ್ಲಜನಕವನ್ನು ಅಗತ್ಯ ಇರುವ ಸೋಂಕಿತರಿಗೆ ವ್ಯವಸ್ಥಿತವಾಗಿ ನೀಡುವ ಬಗ್ಗೆ ಕಾರ್ಯಕ್ರಮದ ಮೂಲಕ ತಿಳಿಸಲಾಗುವುದು. ಭವಿಷ್ಯದಲ್ಲಿ ಕೊರೊನಾ ಅಲೆಗಳು ಪುನಃ ಅಪ್ಪಳಿಸಿದ್ದಲ್ಲಿ ಆರೋಗ್ಯ ಸೇವಾಕ್ಷೇತ್ರವು ತತ್ತರಿಸದಂತೆ ಮುನ್ನೆಚ್ಚರಿಕೆ ಕ್ರಮವು ಇದಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ತಿಳಿಸಿದೆ.
ಪ್ರತಿ ಜಿಲ್ಲೆಯಲ್ಲಿ ಆಮ್ಲಜನಕ ಆಡಳಿತ ಕಾರ್ಯಕ್ರಮದಲ್ಲಿ ತರಬೇತಿ ಪೂರ್ಣಗೊಳಿಸಿದವರು ಇರಲಿದ್ದಾರೆ.
ಅವರಿಂದ ಅಗತ್ಯ ಮಾರ್ಗದರ್ಶನವನ್ನು ವೈದ್ಯಾಧಿಕಾರಿಗಳು, ಆಸ್ಪತ್ರೆಗಳು ಪಡೆಯಲು ಅನುಕೂಲವಾಗಲಿದೆ. ದೇಶದ ವಿವಿಧ ಜಿಲ್ಲೆಗಳಲ್ಲಿ ಇದುವರೆಗೂ ಪಿಎಂ ಕೇರ್ಸ್ ನಿಧಿ ಅಡಿಯಲ್ಲಿ 1,225 ಆಮ್ಲಜನಕ ಉತ್ಪಾದನೆ ಘಟಕಗಳನ್ನು ಕೇಂದ್ರ ಸರ್ಕಾರವು ಸ್ಥಾಪಿಸಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

0

ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ಕಂಡಿಸಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನಾ ಜಾಥಾವನ್ನು ನಡೆಸಿದರು. ತರಕಾರಿಗಳನ್ನು ಮಾರಾಟ ಮಾಡುವ ಮುಖಾಂತರ ಪ್ರತಿಭಟನೆ ನಡೆಸಿದರು.

ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪ ಅಮರನಾಥ್ ನೇತೃತ್ವದಲ್ಲಿ ಅಲಾರವಾಡ ದಿಂದ ಸುವರ್ಣ ವಿಧಾನಸೌಧದ ತನಕ ಪ್ರತಿಭಟನಾ ಜಾಥಾ ನಡೆಸಲಾಯಿತು. ಇದೇ ಸಂದರ್ಭದಲ್ಲಿ ತರಕಾರಿ, ದಿನಸಿ ಪದಾರ್ಥಗಳನ್ನು ಮಾರಾಟ ಮಾಡಿ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.

“ಬೆಲೆ ಏರಿಕೆಯಿಂದ ಜನಸಾಮಾನ್ಯರ ಬದುಕು ದುರಸ್ತ ವಾಗಿದೆ. ತರಕಾರಿ, ಎಣ್ಣೆ, ಗ್ಯಾಸ್ ಮತ್ತು ದಿನಸಿ ಪದಾರ್ಥಗಳ ಬೆಲೆ ಏರಿಕೆಯಾಗಿದೆ. ಬೆಲೆ ಏರಿಕೆಯ ಸಮಸ್ಯೆ ಬಗೆಹರಿಸಿ ದಿನಬಳಕೆ ವಸ್ತುಗಳ ಬೆಲೆ ಏರಿಕೆಗೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಆದರೆ, ಇದನ್ನು ಬಿಟ್ಟು ಸಂವಿಧಾನಬಾಹಿರ ಕಾನೂನು ತರುವುದರಲ್ಲಿ ಮುಳುಗಿದೆ. ಮೊದಲು ವಸ್ತುಗಳ ಬೆಲೆ ಕಡಿಮೆ ಮಾಡುವ ಬಗ್ಗೆ ಚಿಂತನೆ ಮಾಡಿ. ಹಾಗೂ ರೈತರಿಗೆ ಪರಿಹಾರ ಕೊಡಿ ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

‘ ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಬಡವರು ಜೀವನ ನಡೆಸುವುದು ಕಷ್ಟವಾಗುತ್ತಿದೆ’ ಎಂದು ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಅವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

ಜಮೀನು ಒತ್ತುವರಿ ವಿರುದ್ಧ ಕ್ರಮ

0

ಕಂದಾಯ ಸಚಿವ ಆರ್ ಅಶೋಕ್ ಅವರು ವಿಧಾನಪರಿಷತ್ತಿನಲ್ಲಿ ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಂಡವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ಹೇಳಿದರು.

ರಾಜ್ಯದಲ್ಲಿ ಒಟ್ಟು 14,27,195 ಕರೆ ಸರ್ಕಾರಿ ಜಮೀನು ಒತ್ತುವರಿಯಾಗಿದೆ ಒತ್ತುವರಿ ತೆರವುಗೊಳಿಸಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿಯೊಂದನ್ನು ರಚಿಸಲಾಗಿದೆ.

ಈ ನಿಟ್ಟಿನಲ್ಲಿ ಎಲ್ಲಾ ಜಿಲ್ಲಾಧಿಕಾರಿಗಳು ಕ್ರಮಬದ್ಧ ಯೋಜನೆ ಪಡಿಸಿಕೊಂಡಿದ್ದಾರೆ. ಒತ್ತುವರಿಯಾಗಿರುವ ಸರ್ಕಾರಿ ಜಮೀನುಗಳನ್ನು ತೆರವು ಗೊಳಿಸಲು ಕ್ರಮ ವಹಿಸುತ್ತಿದ್ದಾರೆ ಎಂದು ಆರ್.ಅಶೋಕ್ ಅವರು ಕಾಂಗ್ರೆಸ್ ನ ಬಿ.ಕೆ.ಹರಿಪ್ರಸಾದ್ ಕೇಳಿದ ಪ್ರಶ್ನೆಗೆ ಉತ್ತರಿಸಿದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

ಪ್ರಾದೇಶಿಕ ಅಸಮಾನತೆ ಬೇಡ

0

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪಕ್ಷಭೇದ ಮರೆತು ಉತ್ತರ ಕರ್ನಾಟಕದ ಅಭಿವೃದ್ಧಿಗೆ ಅನುಕೂಲವಾಗುವ ನಿಟ್ಟಿನಲ್ಲಿ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಬೇಕು ಎಂದು ಸರ್ಕಾರಕ್ಕೆ ಸಲಹೆ ನೀಡಿದರು.

ಬಿ.ಎಸ್.ಯಡಿಯೂರಪ್ಪ ಅವರು ಡಿಸಿಎಂ ಆಗಿದ್ದಾಗ 2006 ಬೆಳಗಾವಿಯಲ್ಲಿ ನಡೆದ ಮೊದಲ ಅಧಿವೇಶನದಲ್ಲಿ ನಂಜುಂಡಪ್ಪ ಸಮಿತಿ ವರದಿ ಶಿಫಾರಸಿನಂತೆಯೇ ವಿಶೇಷ ಅಭಿವೃದ್ಧಿ ಯೋಜನೆ ಜಾರಿಗೊಳಿಸುವುದಾಗಿ ಘೋಷಿಸಿದೆ. 2007-2008ರ ಬಜೆಟ್ ನಲ್ಲಿ ಈ ವಿಶೇಷ ಅಭಿವೃದ್ಧಿ ಯೋಜನೆಯನ್ನು ಎಂಟು ವರ್ಷದಲ್ಲಿ ಅನುಷ್ಠಾನಗೊಳಿಸುವುದಾಗಿ ಘೋಷಿಸಲಾಗಿದ್ದರೂ ನಿರೀಕ್ಷಿತ ಗುರಿ ಸಾಧನೆಯಾಗಿಲ್ಲ ಎಂದು ತಿಳಿಸಿದರು.

‘ಉತ್ತರ-ದಕ್ಷಿಣ ಕರ್ನಾಟಕದ ಭೇದಭಾವವಿಲ್ಲದೆ ರಾಜ್ಯದ ಅಭಿವೃದ್ಧಿಯಾದಾಗ ಸಮತೋಲಿತ ಬೆಳವಣಿಗೆ ಸಾಧ್ಯ. ಕುಂಟುತ್ತ ಸಾಗಿರುವ ಯೋಜನೆಗಳು ಜನರಲ್ಲಿ ಬೇಸರ ಮೂಡಿಸುತ್ತಿದೆ. ಹಾಗಾಗಿ ಹೆಚ್ಚು ಅನುದಾನ ಕಾಯ್ದಿರಿಸಿ ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು’ ಎಂದು ಹೇಳಿದರು.

“ಕಾಂಗ್ರೆಸ್ನವರು ಕೃಷ್ಣ ಯೋಜನೆಗಳಿಗೆ ಪ್ರತಿವರ್ಷ 10,000 ಕೋಟಿ ರೂ. ನೀಡುವುದಾಗಿ ಘೋಷಿಸಿದ್ದರು. ಆದರೆ ಐದು ವರ್ಷದಲ್ಲಿ ಕಚ್ಚು ಮಾಡಿದ್ದು 7000 ಕೋಟಿ ಮಾತ್ರ. ನೀರಾವರಿ ಯೋಜನೆಗಳ ಅನುಷ್ಠಾನದಲ್ಲಿ 2008 ರಿಂದ 2013ರ ಅವಧಿಯನ್ನು ಸುವರ್ಣ ಯುಗ ಎಂದು ಜನ ಭಾವಿಸಿದ್ದಾರೆ” ಎಂದು ಬಿ.ಎಸ್.ಯಡಿಯೂರಪ್ಪ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

ಪ್ರಳಯ್ ಖಂಡಾಂತರ ಕ್ಷಿಪಣಿ ಯಶಸ್ವಿ

0

ದೇಶಿಯವಾಗಿ ನಿರ್ಮಿಸಿರುವ ಭೂಮಿಯಿಂದ ಭೂಮಿಗೆ ನೆಗೆಯುವ ‘ಪ್ರಳಯ್’ ಖಂಡಾಂತರ ಕ್ಷಿಪಣಿಯ ಪ್ರಯೋಗಾರ್ಥ ಉಡಾವಣೆ ಯಶಸ್ವಿಯಾಗಿದೆ.
ಮೊದಲ ದೇಶಿಯ ಕ್ಷಿಪಣಿ ಅಭಿವೃದ್ಧಿಪಡಿಸಿ, ಯಶಸ್ವಿಯಾಗಿ ಪ್ರಯೋಗ ನಡೆಸಿದ ಡಿಆರ್ ಡಿಒಗೆ ಅಭಿನಂದನೆಗಳು. ಭೂಮಿಯಿಂದ ಭೂಮಿಗೆ ನೆಗೆಯುವ ಕ್ಷಿಪಣಿಗಳ ಅಭಿವೃದ್ಧಿಯಲ್ಲಿ ಭಾರತವು ಮೈಲುಗಲ್ಲು ಸಾಧಿಸಿದೆ. ಇಂತಹ ಸಾಧನೆಗೆ ಕಾರಣವಾದ ಪ್ರತಿಯೊಬ್ಬರಿಗೂ ಅಭಿನಂದನೆಗಳು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.
ಸುಮಾರು 150-500 ಕಿ.ಮೀ‌. ವರೆಗಿನ ಗುರಿ ತಲುಪುವ ಸಾಮರ್ಥ್ಯ ಹೊಂದಿರುವ ಪ್ರಳಯ್ ಕ್ಷಿಪಣಿಯಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸಲಾಗಿದೆ. ಕ್ಷಿಪಣಿ ಮಾರ್ಗದರ್ಶನಕ್ಕಾಗಿ ಅತ್ಯಾಧುನಿಕ ನ್ಯಾವಿಗೇಷನ್ ಮತ್ತು ಏವಿಯಾನಿಕ್ಸ್ ತಂತ್ರಜ್ಞಾನ ಅಳವಡಿಕೆಯಾಗಿದೆ. ಇದರಿಂದ ಗಡಿಯಲ್ಲಿ ರಕ್ಷಣಾ ವ್ಯವಸ್ಥೆ ಬಲವಾಗಲಿದೆ ಎಂದು ಡಿಆರ್ ಡಿಒ ಮಾಹಿತಿ ನೀಡಿದೆ.
ಪ್ರಳಯ್ ಕ್ಷಿಪಣಿ ತಯಾರಿಕೆಗಾಗಿ ಸುಮಾರು 333 ಕೋಟಿ ರೂಪಾಯಿ ವ್ಯಯಿಸಲಾಗಿದೆ.
ಒಡಿಶಾದ ಬಾಲಾಸೋರ್ ನಲ್ಲಿರುವ ಎಪಿಜೆ ಅಬ್ದುಲ್ ಕಲಾಂ ದ್ವೀಪದಿಂದ ಬೆಳಿಗ್ಗೆ 11.06ಕ್ಕೆ ಉಡಾವಣಾ ವಾಹಕ ‘ಪೃಥ್ವಿ’ಯು ‘ಪ್ರಳಯ್’ ಅನ್ನು ಹೊತ್ತು ನೆಗೆಯಿತು. ನಿಗದಿತ ಸಮಯದಲ್ಲಿ ನಿರ್ದಿಷ್ಟ ಗುರಿ ತಲುಪಿತು ಎಂದು ಕ್ಷಿಪಣಿಯನ್ನು ಅಭಿವೃದ್ಧಿಪಡಿಸಿರುವ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ತಿಳಿಸಿದೆ.
ಅತ್ಯಾಧುನಿಕ ಕ್ಷಿಪಣಿಯು ಆಕಾಶದಲ್ಲಿಯೂ ಕ್ಷಿಪಣಿಗಳನ್ನು ಹೊಡೆದುರುಳಿಸುವ ಸಾಮರ್ಥ್ಯ ಹೊಂದಿದೆ. ಕಡಿಮೆ ಪ್ರಮಾಣದ ಅಂತರದಲ್ಲಿ ವೈರಿಗಳ ಮೇಲೆ ನಿಗಾ ಇಡುವ ದಿಸೆಯಲ್ಲಿ ಕ್ಷಿಪಣಿಯು ಪ್ರಮುಖ ಪಾತ್ರ ನಿರ್ವಹಿಸಲಿದೆ ಎಂದು ತಿಳಿದು ಬಂದಿದೆ.
ದೇಶಿಯ ಕ್ಷಿಪಣಿ ಅಭಿವೃದ್ಧಿಗೆ 2015ರಲ್ಲಿಯೇ ಅನುಮೋದನೆ ದೊರೆತಿತ್ತು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

ಫ್ರಾನ್ಸ್ ನಲ್ಲಿ ಒಮಿಕ್ರಾನ್ ಗಂಭೀರ

0

ಓಮಿಕ್ರಾನ್ ಕರೋನವೈರಸ್ ರೂಪಾಂತರದ ತ್ವರಿತ ಹರಡುವಿಕೆಯಿಂದಾಗಿ ಫ್ರಾನ್ಸ್ ಶೀಘ್ರದಲ್ಲೇ ದಿನಕ್ಕೆ 100,000 ಹೊಸ ಕೋವಿಡ್ -19 ಪ್ರಕರಣಗಳನ್ನು ಕಾಣಬಹುದು. ಆದರೂ ಹೊಸ ನಿರ್ಬಂಧಗಳನ್ನು ಪರಿಚಯಿಸಲು ಸರ್ಕಾರ ಯೋಚಿಸುತ್ತಿಲ್ಲ ಎಂದು ಆರೋಗ್ಯ ಸಚಿವ ಆಲಿವರ್ ವೆರಾನ್ ಹೇಳಿದ್ದಾರೆ.
ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ವೈರಸ್ ಅನ್ನು ನಿಯಂತ್ರಣದಲ್ಲಿಡಲು ವೇಗವರ್ಧಿತ ಲಸಿಕೆ ಬೂಸ್ಟರ್ ಪ್ರೋಗ್ರಾಂ ಅನ್ನು ಕಾಯುತ್ತಿದ್ದೇವೆ. ಕ್ರಿಸ್‌ಮಸ್‌ ವೇಳೆಗೆ 22-23 ಮಿಲಿಯನ್ ಬೂಸ್ಟರ್ ಡೋಸ್‌ಗಳನ್ನು ನೀಡಲಾಗುವುದು ಎಂದು ಅವರು ನಿರೀಕ್ಷಿಸಿದ್ದೆವೆ ಎಂದರು. ವೈರಸ್ ಹರಡುವಿಕೆಯ ವೇಗವನ್ನು ಕಡಿಮೆ ಮಾಡುವುದು ಉದ್ದೇಶವಲ್ಲ ಏಕೆಂದರೆ ರೂಪಾಂತರವು ತುಂಬಾ ಹಾನಿಕಾರಕವಾಗಿದೆ. ಆಸ್ಪತ್ರೆಗಳಲ್ಲಿ ಗಂಭೀರ ಪ್ರಕರಣಗಳ ಅಪಾಯವನ್ನು ಮಿತಿಗೊಳಿಸುವುದು ಉದ್ದೇಶವಾಗಿದೆ ಎಂದು ವೆರಾನ್ ಹೇಳಿದರು. ಇದಕ್ಕಾಗಿಯೇ ನಾವು ಬೂಸ್ಟರ್ ಶಾಟ್‌ಗಳನ್ನು ವೇಗವಾಗಿ ವಿತರಿಸಲಿದ್ದೆವೆ.
ಓಮಿಕ್ರಾನ್ ಯುರೋಪ್‌ನಲ್ಲಿ ವಿಭಜಿತ ಪ್ರತಿಕ್ರಿಯೆಯನ್ನು ಹುಟ್ಟುಹಾಕಿದೆ. ಸಾಂಕ್ರಾಮಿಕ ರೋಗದ ಐದನೇ ತರಂಗವನ್ನು ಎದುರಿಸುತ್ತಿರುವ ಫ್ರಾನ್ಸ್ ದಿನಕ್ಕೆ ಸುಮಾರು 70,000 ಕೊರೊನಾ ವೈರಸ್ ಸೋಂಕನ್ನು ವರದಿ ಮಾಡುತ್ತಿದೆ. ಓಮಿಕ್ರಾನ್ ರೂಪಾಂತರವು ಜನವರಿಯ ಆರಂಭದಲ್ಲಿ ಫ್ರಾನ್ಸ್‌ನಲ್ಲಿ ವೈರಸ್‌ನ ಪ್ರಬಲ ತಳಿಯಾಗಲಿದೆ ಎಂದು ಹೇಳಿದರು. ಫ್ರಾನ್ಸ್ ನಲ್ಲಿ, ಜನರು ಬಾರ್‌ಗಳು, ರೆಸ್ಟೋರೆಂಟ್‌ಗಳು, ವಸ್ತುಸಂಗ್ರಹಾಲಯಗಳು ಮತ್ತು ಇತರ ಮನರಂಜನಾ ಸ್ಥಳಗಳಿಗೆ ಪ್ರವೇಶಿಸಲು ಆರೋಗ್ಯ ಪಾಸ್ ಅಗತ್ಯವಿದೆ. ಇತ್ತೀಚೆಗೆ ಫ್ರಾನ್ಸ್ ರಾತ್ರಿ ಕ್ಲಬ್‌ಗಳನ್ನು ಮುಚ್ಚಿದೆ. ಹೊಸ ವರ್ಷದ ಮುನ್ನಾ ದಿನದ ಪಟಾಕಿ ಪ್ರದರ್ಶನಗಳನ್ನು ರದ್ದುಗೊಳಿಸಿದೆ. ಆದಾಗ್ಯೂ, ಈ ಹಂತದಲ್ಲಿ ಹೆಚ್ಚಿನ ನಿರ್ಬಂಧಗಳು ಅಥವಾ ಶಾಲಾ ರಜಾದಿನಗಳ ವಿಸ್ತರಣೆ ಮಾಡಲಾಗಿದೆ ಎಂದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

ನೀರಾವರಿ ಯೋಜನೆ ಅನುಷ್ಠಾನವಾಗಲಿ

0

ರಾಜ್ಯದಲ್ಲಿ ಸರ್ಕಾರ ಅಧಿಕಾರಕ್ಕೆ ಬಂದರೂ ಸಹ ನೀರಾವರಿ ಯೋಜನೆಗಳು ವರೆಗೂ ಕಾರ್ಯಗತವಾಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರು ವಿಧಾನಪರಿಷತ್ತಿನಲ್ಲಿ ಬೇಸರವನ್ನು ವ್ಯಕ್ತಪಡಿಸಿದರು.

2013ರಲ್ಲಿ ಕೃಷ್ಣಾ ನ್ಯಾಯಾಧಿಕರಣ ಎರಡರ ಅಂತಿಮ ತೀರ್ಪು ಪ್ರಕಟವಾಗಿದ್ದರೂ ಸಹ ಈವರೆಗೂ ಯೋಜನೆ ಮಾತ್ರ ಅನುಷ್ಠಾನವಾಗಿಲ್ಲ. ಮಹದಾಯಿ ಯೋಜನೆ 2006ರಲ್ಲಿ ಶಂಕುಸ್ಥಾಪನೆ ನೆರವೇರಿಸಿದರು ಈವರೆಗೆ ಪೂರ್ಣಗೊಂಡಿಲ್ಲ. 2006 ರಲ್ಲಿ ಭದ್ರಾ ಮೇಲ್ದಂಡೆ ಯೋಜನೆ ಜಾರಿಗೆ ತೀರ್ಮಾನ ವಾಗಿದ್ದರೂ ಈವರೆಗೆ ರಾಷ್ಟ್ರೀಯ ಯೋಜನೆಯನ್ನು ಘೋಷಿಸುವುದಿಲ್ಲ ಕೇಂದ್ರದಿಂದ ಉತ್ತರಸಿಕ್ಕಿಲ್ಲ. ಮೇಕೆದಾಟು ಯೋಜನೆಗೆ 1996 ಇಂದ ಚಿಂತನೆಯಲ್ಲಿದೆ ಆದರೆ ಈವರೆಗೂ ಕಾರ್ಯಗತವಾಗಿಲ್ಲ ಎಂದು ತಿಳಿಸಿದರು.

“ಮೇಕೆದಾಟು ಯೋಜನೆ ಕುರಿತಂತೆ ಎಚ್.ಡಿ.ಕುಮಾರಸ್ವಾಮಿ ಅವರು ಮೇಕೆದಾಟು ಯೋಜನೆಗೆ ಸಂಬಂಧಪಟ್ಟಂತೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು, ಇದರಲ್ಲಿ ಉಲ್ಲೇಖಿಸಿರುವ ಅಂಶಗಳನ್ನು ಪರಿಶೀಲಿಸಬೇಕು. ಮೊದಲ ಹಂತದ ಯೋಜನೆ ಜಾರಿಗೆ ಪ್ರಯತ್ನಿಸಬೇಕು. 2050ರ ವೇಳೆಗೆ ಬೆಂಗಳೂರಿನ ಜನಸಂಖ್ಯೆ 3.5 ಕೋಟಿಗೆ ತಲುಪುವ ಅಂದಾಜಿದೆ. ಆ ನಿಟ್ಟಿನಲ್ಲಿ ಯೋಜನೆ ಅನುಷ್ಠಾನವಾಗಿದೆ” ಎಂದು ಸಲಹೆ ನೀಡಿದರು.

ಇದೇ ವೇಳೆ ‘ಚುನಾವಣೆ ಹೆಸರಿನಲ್ಲಿ ಕಾಂಗ್ರೆಸ್ನ ಮೇಕೆದಾಟು ಸುತ್ತಾಡಿಕೊಂಡು ಬರುತ್ತಾರಂತೆ. ಮೇಕೆದಾಟಿನೆಡೆಗೆ ಅವರ ನಡಿಗೆಯಂತೆ. ಜೆಡಿಎಸ್ ನವರು ಈ ಹೋರಾಟ ಕೈಗೆತ್ತಿಕೊಳ್ಳುತ್ತಾರೆ ಎಂದು ತರಾತುರಿಯಲ್ಲಿ ಹೊರಟಿದ್ದಾರೆ’ ಎಂದು ಟೀಕಿಸಿದರು.