Tuesday, February 10, 2026
Tuesday, February 10, 2026
Home Blog Page 1815

ಶಿವಮೊಗ್ಗ ಜಿಲ್ಲೆಯ ಪ್ರಥಮ ಓಮಿಕ್ರಾನ್ ಪ್ರಕರಣ ಪತ್ತೆ!

0

ಶಿವಮೊಗ್ಗ ಜಿಲ್ಲೆಯ ಪ್ರಥಮ ಓಮಿಕ್ರಾನ್ ಪ್ರಕರಣ ಭದ್ರಾವತಿಯಲ್ಲಿ ಪತ್ತೆಯಾಗಿದೆ. ಇದರಿಂದ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಭದ್ರಾವತಿಯಲ್ಲಿ ಓರ್ವ ವಿದ್ಯಾರ್ಥಿನಿಗೆ ಓಮಿಕ್ರಾನ್ ಸೋಂಕು ತಗಲಿರುವ ಬಗ್ಗೆ ಆರೋಗ್ಯ ಸಚಿವ ಡಾ. ಸುಧಾಕರ್ ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.

ಶಿವಮೊಗ್ಗ ನಗರ ಹಾಗೂ ಭದ್ರಾವತಿಯಲ್ಲಿ ಕ್ಲಸ್ಟರ್ ಹಂತದಲ್ಲಿ ಪ್ರಕರಣಗಳು ಕಂಡುಬಂದಿದೆ. ಕೇರಳದಿಂದ ಬಂದ ನರ್ಸಿಂಗ್ ವಿದ್ಯಾರ್ಥಿನಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರಿಂದಾಗಿ ಈಕೆಯೊಂದಿಗೆ ಸಂಪರ್ಕ ಹೊಂದಿರುವವರಲ್ಲಿ ಆಂತಕ ಉಂಟಾಗಿದೆ.

ಕಳೆದ ಎರಡು ವಾರಗಳ ಹಿಂದೆಯಷ್ಟೇ ಭದ್ರಾವತಿಯ, ಖಾಸಗಿ ನರ್ಸಿಂಗ್ ಕಾಲೇಜಿನ 27 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿತ್ತು. ಇವರ ಪ್ರಾಥಮಿಕ ಸಂಪರ್ಕದಲ್ಲಿದ್ದ 218 ಜನರ ಮಾದರಿಯನ್ನು ಸಂಗ್ರಹಿಸಲಾಗಿತ್ತು. ಆದರೆ, ಅವರಲ್ಲಿ 27 ಜನರ ವರದಿ ಪಾಸಿಟಿವ್ ಬಂದಿತ್ತು. ಅನಂತರ , ಸೋಂಕಿತರ ಗಂಟಲು ದ್ರವದ ಮಾದರಿಯನ್ನು ಹೆಚ್ಚಿನ ಪರೀಕ್ಷೆಗಾಗಿ ಬೆಂಗಳೂರಿಗೆ ಕಳಿಸಲಾಗಿತ್ತು. ಈ ಪೈಕಿ ಒಬ್ಬ ವಿದ್ಯಾರ್ಥಿನಿ ಯಲ್ಲಿ ಓಮಿಕ್ರಾನ್ ವೈರಸ್ ಪತ್ತೆಯಾಗಿದೆ. ಈ ವಿದ್ಯಾರ್ಥಿನಿ ವಿದೇಶಕ್ಕೆ ಪ್ರಯಾಣಿಸಿಲ್ಲ. ಆದರೆ ವಿದೇಶದಿಂದ ಬಂದವರೊಂದಿಗೆ ಸಂಪರ್ಕ ಹೊಂದಿರುವುದು ದೃಢವಾಗಿದೆ. ಆದ್ದರಿಂದ ಸೋಂಕು ತಗುಲಿದೆ ಎನ್ನುವುದು ಆರೋಗ್ಯ ಇಲಾಖೆಗಳ ಮೂಲಗಳು ತಿಳಿಸಿವೆ. ಈಕೆ ಕೊರೋನಾದ 2 ಡೋಸ್ ಕೋವಿಶೀಲ್ಡ್ ಲಸಿಕೆಯನ್ನು ಕೂಡ ಪಡೆದುಕೊಂಡಿದ್ದಾಳೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

ಅನುದಾನಿತ ಪಿಯು ಕಾಲೇಜುಗಳ ಉಪನ್ಯಾಸಕರಿಗೆ ಶುಭ ಸುದ್ದಿ

0

ರಾಜ್ಯದ ಖಾಸಗಿ ಅನುದಾನಿತ ಪದವಿಪೂರ್ವ ಕಾಲೇಜುಗಳಿಗೆ 2008ಕ್ಕಿಂತ ಮೊದಲು ನೇಮಕಗೊಂಡ ಅಥವಾ ನಂತರ ಸರ್ಕಾರದ ಅನುದಾನಕ್ಕೆ ಒಳಪಟ್ಟ ಉಪನ್ಯಾಸಕರಿಗೆ ಬಿ. ಇಡಿ ಯಿಂದ ವಿನಾಯಿತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ.

ಸರ್ಕಾರದ ತೀರ್ಮಾನದಿಂದಾಗಿ ಅನುದಾನಿತ ಪಿಯು ಕಾಲೇಜುಗಳ ಉಪನ್ಯಾಸಕರ ಹಲವು ವರ್ಷಗಳ ಹೋರಾಟಕ್ಕೆ, ಜಯ ಸಿಕ್ಕಂತಾಗಿದೆ. ಸಾವಿರಕ್ಕೂ ಹೆಚ್ಚು ಉಪನ್ಯಾಸಕರಿಗೆ ಇದು ಅನುಕೂಲಕರವಾಗಿದೆ.

ಬಿ. ಇಡಿ ಮಾಡದ ಕಾರಣಕ್ಕೆ ಈ ಹಿಂದೆ ಸರ್ಕಾರ ವೇತನಾನುದಾನಕ್ಕೆ ಒಳಪಡಿಸದೆ ತಿರಸ್ಕರಿಸಲಾಗಿದ್ದನ್ನು, ಅರ್ಹ ಉಪನ್ಯಾಸಕರ ಪ್ರಸ್ತಾವನೆಗೆ ಪುನರ್ ಪರಿಶೀಲಿಸಲಾಗಿದೆ. ಮತ್ತೇ ನಿರ್ದೇಶನಲಾಯಕ್ಕೆ ಸಲ್ಲಿಸುವಂತೆ ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಎಲ್ಲಾ ಜಿಲ್ಲಾ ಉಪನಿರ್ದೇಶಕರಿಗೆ ಆದೇಶ ನೀಡಿದ್ದಾರೆ.

ಪದವಿಪೂರ್ವ ಹಂತದಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಇದರ ಸಲುವಾಗಿ ಸರ್ಕಾರ ಹಾಗೂ ಖಾಸಗಿ ಅನುದಾನಿತ ಪಿಯು ಕಾಲೇಜುಗಳ ಉಪನ್ಯಾಸಕರು ಸ್ನಾತಕೋತ್ತರ ಪದವಿಯೊಂದಿಗೆ ಬಿ. ಇಡಿ ಪದವಿ ಪಡೆಯುವುದನ್ನು ಕಡ್ಡಾಯಗೊಳಿಸಿ, ಫೆ.4ರಂದು ಆದೇಶ ಹೊರಡಿಸಲಾಗಿತ್ತು. ಆದ್ದರಿಂದ 2008ರ ಫೆ.2 ರ ನಂತರ ಸರ್ಕಾರಿ ಪಿಯು ಕಾಲೇಜುಗಳ ಉಪನ್ಯಾಸಕರಾಗಿ ಆಯ್ಕೆಯಾದವರಿಗೆ ಬಿ.ಇಡಿ ಪದವಿಯನ್ನು ಕಡ್ಡಾಯ ಮಾಡಲಾಗಿತ್ತು.

ಬಿ. ಇಡಿ ಪದವಿ ಪೂರೈಸಲು ಸರ್ಕಾರಿ ಪಿಯು ಕಾಲೇಜು ಉಪನ್ಯಾಸಕರಿಗೆ ವೇತನ ಸಹಿತ ರಜೆ ನೀಡುವ ಅವಕಾಶವನ್ನು ಸರ್ಕಾರ ಕಲ್ಪಿಸಿದೆ. ಖಾಸಗಿ ಅನುದಾನಿತ ಕಾಲೇಜುಗಳ ಉಪನ್ಯಾಸಕರಿಗೆ ಇಂತಹ ಸೌಲಭ್ಯ ಕಲ್ಪಿಸದೆ ನಿರಾಕರಿಸಿತ್ತು. ಅಲ್ಲದೇ, ವೇತನಾನುದಾನಕ್ಕೆ ಒಳಪಡಿಸುವಂತೆ 2008ರ ನಂತರ ಇಲಾಖೆಗೆ ಸಲ್ಲಿಸಿದ ಹಲವು ಉಪನ್ಯಾಸಕರ ಪ್ರಸ್ತಾವನೆಗಳನ್ನು ತಿರಸ್ಕರಿಸಲಾಗಿತ್ತು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

ಮತದಾರರ ಪಟ್ಟಿಗೆ ಆಧಾರ್ ಜೋಡಣೆ ವಿಧೇಯಕ ಮಂಡನೆ

0

ಮತದಾರರ ಗುರುತಿನ ಚೀಟಿ ಜೊತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡುವ ವಿಧೇಯಕವನ್ನು ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲೇ ಮಂಡಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ.
ಆಧಾರ್ ಮತ್ತು ಮತದಾರರ ಚೀಟಿ ಜೋಡಣೆಯಾದರೆ ಹಲವು ಪ್ರಯೋಜನಗಳಿವೆ. ಮುಖ್ಯವಾಗಿ ನಕಲಿ ಮತದಾನದ ಕಿರಿಕಿರಿ ತಪ್ಪಲಿದೆ. ಮತಗಟ್ಟೆ ಅಧಿಕಾರಿಯು ಮತದಾರರ ಆಧಾರ್ ಗುರುತಿನ ಚೀಟಿ ಪಡೆದು ದಾಖಲು ಮಾಡಿಕೊಳ್ಳುತ್ತಾರೆ. ಒಮ್ಮೆ ಮತದಾರರ ಆಧಾರ್ ಕಾರ್ಡ್ ಸಂಖ್ಯೆ ದಾಖಲಾದರೆ, ಮತ್ತೊಂದು ಬೂತ್ ಗೆ ಹೋಗಿ ನಕಲಿ ಮತದಾನ ಮಾಡಿ ವಂಚಿಸುವುದು ತಪ್ಪುತ್ತದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಚುನಾವಣಾ ಕಾನೂನುಗಳ ತಿದ್ದುಪಡಿ ವಿಧೇಯಕ -2021 ಮಂಡನೆಗೆ ಸಿದ್ಧಗೊಂಡಿದೆ. ವಿಧೇಯಕ ಪ್ರತಿಯು ಲೋಕಸಭೆ ಸದಸ್ಯರಿಗೆ ವಿತರಣೆಯಾಗಿದೆ. ಸದನದಲ್ಲಿ ಮಂಡನೆಯಾಗುವ ಸಾಧ್ಯತೆ ಇದೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಆಧಾರ್ ಜೋಡಣೆ ಕಾಯ್ದೆ ಬಂದ ಬಳಿಕ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ಬಯಸಿ ಸಲ್ಲಿಸುವ ಯಾವುದೇ ಅರ್ಜಿಯನ್ನು ಏಕಾಏಕಿ ನಿರಾಕರಿಸಲಾಗುವುದಿಲ್ಲ. ಆಧಾರ್ ಗೆ ಪರ್ಯಾಯ ದಾಖಲಾತಿ ನೀಡಿಯೂ ಮತದಾರರ ಪಟ್ಟಿಯಲ್ಲಿ ಉಳಿಯಲು ಅವಕಾಶ ಇದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಶಿಗ್ಗಾವಿಯಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಪ್ರತಿಮೆ ಅನಾವರಣ

0

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಮ್ಮ ತವರು ಕ್ಷೇತ್ರ ಹಾವೇರಿಯ ಶಿಗ್ಗಾವಿನಲ್ಲಿ ಭಾವುಕರಾಗಿ ಆನಂದಬಾಷ್ಪ ಸುರಿಸಿದ ಪ್ರಸಂಗ ವರದಿಯಾಗಿದೆ.
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ನಿಮ್ಮೂರಿಗೆ ಬಂದಾಗ ನನಗೆ ಪ್ರೀತಿ ತೋರಿಸಿ, ರೊಟ್ಟಿ ತಿನಿಸಿ, ನವಣಕ್ಕಿ ಅನ್ನ ಹಾಕಿದ ಶಿಗ್ಗಾವಿ ಜನರನ್ನು ಮರೆಯಲ್ಲ. ನಾನು ಏನೇ ಕೆಲಸ ಮಾಡಿದರೂ ಈ ಕ್ಷೇತ್ರದ ಋಣ ತೀರಿಸಲು ಸಾಧ್ಯವಿಲ್ಲ ಎಂದರು.
ಶಿಗ್ಗಾವಿಯ ಶರೀಫ ಭವನದ ಆವರಣದಲ್ಲಿ ಪಂಚಮಸಾಲಿ ಸಮಾಜದ ಕಲ್ಯಾಣ ಮಂಟಪದ ಶಂಕುಸ್ಥಾಪನೆ ಮತ್ತು ವೀರರಾಣಿ ಕಿತ್ತೂರು ಚೆನ್ನಮ್ಮ ಪ್ರತಿಮೆ ಅನಾವರಣ ಸಮಾರಂಭವನ್ನು ಉದ್ಘಾಟಿಸಿದರು.
ಇತ್ತೀಚಿಗೆ ನಿಮ್ಮನ್ನು ನೋಡಲು ಆಗಿಲ್ಲ. ನೋಡಿದಾಗ ಭಾವನೆಗಳು ಉಕ್ಕಿ ಬರುತ್ತಿವೆ. ಬಹಳ ದೊಡ್ಡ ಜವಾಬ್ದಾರಿ ನನ್ನ ಮೇಲಿದೆ. ರಾಜ್ಯದ ಸಮಗ್ರ ಅಭಿವೃದ್ಧಿ ಚಿಂತನೆಗಳ ಜೊತೆಗೆ ಇಂದು ಎಲ್ಲ ಸಮುದಾಯದ ಜನರ ಆಶೋತ್ತರಗಳು ಹೆಚ್ಚಿವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು.
ನಿಮ್ಮೆಲ್ಲರ ಆಶೀರ್ವಾದದಿಂದ ಗೃಹ, ಜಲಸಂಪನ್ಮೂಲ ಸಚಿವನಾದರೂ ಶಿಗ್ಗಾವಿ ಕ್ಷೇತ್ರದ ಒಳಗಡೆ ಬಂದಾಗ ನಿಮ್ಮ ಬಸವರಾಜ ಬೊಮ್ಮಾಯಿ ಆಗಿದ್ದೆ. ಈಗ ಮುಖ್ಯಮಂತ್ರಿಯಾಗಿದ್ದರೂ ನಾನು ನಿಮ್ಮ ಬಸವರಾಜ ಬೊಮ್ಮಾಯಿಯಷ್ಟೇ ಎಂದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಜನಮೆಚ್ಚುಗೆ ಪಡೆದವರಿಗೆ ಟಿಕೆಟ್

0

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜನ ಮೆಚ್ಚುಗೆ ಪಡೆಯುವವರಿಗೆ ಪಕ್ಷದಿಂದ ಟಿಕೆಟು ನೀಡಲಾಗುವುದು ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಶಿವಮೊಗ್ಗ ನಗರದ ಪೆಸಿಟ್ ಕಾಲೇಜಿನಲ್ಲಿರುವ ಪ್ರೇರಣ ಸಭಾಂಗಣದಲ್ಲಿ ಜಿಲ್ಲಾ ಬಿಜೆಪಿಯಿಂದ ಆಯೋಜಿಸಿದ್ದ ವಿಧಾನಪರಿಷತ್ತಿಗೆ ನೂತನವಾಗಿ ಆಯ್ಕೆಯಾದ ಡಿ.ಎಸ್. ಅರುಣ್ ಅಭಿನಂದನಾ ಸಮಾರಂಭದಲ್ಲಿ ಮಾತನಾಡತ್ತಿದ್ದರು.
ಕಳೆದ ವಿಧಾನಪರಿಷತ್ ಚುನಾವಣೆಯಲ್ಲಿ 20 ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧಿಸಿತ್ತು. ಅದರಲ್ಲಿ ಮೈಸೂರು ಮತ್ತು ತುಮಕೂರಿನಲ್ಲಿ ಕೆಲವೊಂದು ಪ್ರಮಾದಗಳಿಂದಾಗಿ ಹಿನ್ನಡೆಯಾಗಿದೆ. ಆದರೆ, ನಮ್ಮ ಪ್ರಯತ್ನದಲ್ಲಿ ಯಾವುದೇ ಕೊರತೆಯಾಗಿಲ್ಲ ಎಂದರು.
ಬರುವ ವಿಧಾನಸಭೆ ಚುನಾವಣೆಯಲ್ಲಿ ಪೂರ್ಣ ಬಹುಮತ ಪಡೆಯುವುದು ನಮ್ಮ ಉದ್ದೇಶವಾಗಿದೆ. ಅದಕ್ಕಾಗಿ ಮತ್ತೊಮ್ಮೆ ರಾಜ್ಯದ ಪ್ರವಾಸ ಮಾಡುವೆ‌. ಪ್ರತಿಯೊಂದು ಜಿಲ್ಲೆಯಲ್ಲಿ ಒಂದೊಂದು ದಿನ ವಾಸ್ತವ್ಯ ಹೂಡಿ ಸ್ಥಳೀಯ ಮುಖಂಡರೊಂದಿಗೆ ಸಭೆ ಮಾಡಲಾಗುವುದು. ಜನ ಮೆಚ್ಚುಗೆ ಪಡೆದವರಿಗೆ ಪಕ್ಷದಿಂದ ಸ್ಪರ್ಧಿಸಲು ಟಿಕೆಟ್ ನೀಡಲಾಗುವುದು ಎಂದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಸಹಾಯಧನ ಸದ್ಬಳಕೆಯಾಗಲಿ – ಬಿಎಸ್ ವೈ

0

ಕೋವಿಡ್ ನಿಂದ ಮೃತಪಟ್ಟವರ ಕುಟುಂಬದವರಿಗೆ ಶಿಕಾರಿಪುರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಪರಿಹಾರದ ಚೆಕ್ ವಿತರಿಸಿದ್ದಾರೆ.

ಕೊರೋನಾ ದಿಂದ ಅನೇಕ ಸಾವು-ನೋವುಗಳು ಸಂಭವಿಸಿವೆ. ಇದರಿಂದ ಅವರ ಕುಟುಂಬಗಳು ದೃತಿಗೆಡದೇ ಧೈರ್ಯದಿಂದ ಜೀವನ ನಡೆಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಾಂತ್ವನವನ್ನು ಹೇಳಿದ್ದಾರೆ.

“ಕೊರೋನಾದಿಂದ ಮೃತಪಟ್ಟವರಿಗೆ ನಾನು, ಮುಖ್ಯಮಂತ್ರಿಯಾಗಿದ್ದಂತಹ ಸಂದರ್ಭದಲ್ಲಿ ಘೋಷಣೆ ಮಾಡಿದಂತೆ ಒಂದು ಲಕ್ಷ ರೂಪಾಯಿಗಳನ್ನು ಪ್ರಸ್ತುತ ವಿತರಣೆ ಮಾಡುತ್ತಿದ್ದೇನೆ. ಈ ಹಣವನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಕೇಂದ್ರ ಸರ್ಕಾರ ಕೂಡ 50 ಸಾವಿರ ರೂ. ಗಳನ್ನು ನೀಡುತ್ತದೆ. ಮುಂದಿನ ದಿನಗಳಲ್ಲಿ ಮೂರನೇ ಅಲೆಯಿಂದ ಅನೇಕ ಸಾವು-ನೋವು ಸಂಭವಿಸದಂತೆ ಪ್ರತಿಯೊಬ್ಬರೂ ಕೂಡ ಎಚ್ಚರವಾಗಿರಬೇಕು. ಕೋವಿಡ್ ಲಸಿಕೆಯನ್ನು ಪಡೆದುಕೊಳ್ಳಬೇಕು ಎಂದರು ಸಲಹೆ ನೀಡಿದರು.

‘ ಶಿಕಾರಿಪುರ ತಾಲೂಕಿನಲ್ಲಿ 46 ಬಿಪಿಎಲ್ ಕುಟುಂಬಗಳಿಗೆ ಕೋವಿಡ್ ಪರಿಹಾರ ನಿಧಿ ತಲಾ ಒಂದು ಲಕ್ಷ ರೂಪಾಯಿ ಹಣ ದೊರೆಯುತ್ತಿದೆ. ಜೊತೆಗೆ ಕೇಂದ್ರ ಸರ್ಕಾರದ 50 ಸಾವಿರ ರೂಪಾಯಿ ಕೂಡ ದೊರೆಯುತ್ತದೆ. 45 ಎಪಿಎಲ್ ಕಾರ್ಡ್ ಕುಟುಂಬದವರಿಗೆ ಕೇಂದ್ರ ಸರ್ಕಾರ 50 ಸಾವಿರ ರೂಪಾಯಿ ನೀಡುತ್ತಿದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಾಲೂಕಿನ ಜನರಿಗಾಗಿ ಸಾವಿರಾರು ಕೋಟಿ ರೂಪಾಯಿ ವೆಚ್ಚದಲ್ಲಿ ನೀರಾವರಿ ಯೋಜನೆ ಅನುಷ್ಠಾನ ಮಾಡಿದ್ದಾರೆ ಎಂದು ಸಂಸದ ಬಿ.ವೈ. ರಾಘವೇಂದ್ರ ಅವರು ಹೇಳಿದ್ದಾರೆ.

ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ರುದ್ರೇಗೌಡ್ರು, ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಕೊಳಗಿ ರೇವಣಪ್ಪ ಇನ್ನು ಮುಂತಾದವರು ಉಪಸ್ಥಿತರಿದ್ದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಗುತ್ತಿಗೆ ಪದ್ಧತಿ ರದ್ದುಮಾಡಿ- ಕಾರ್ಮಿಕರ ಬೇಡಿಕೆ

0

ಗುತ್ತಿಗೆ ಪದ್ಧತಿ ರದ್ದು ಮಾಡಬೇಕು. ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ಮತ್ತು ಕಾರ್ಪೊರೇಟ್ ಮಾಲೀಕರ ಪರವಾಗಿರುವ 4 ಕಾರ್ಮಿಕ ಸಂಹಿತೆಗಳನ್ನು ರೈತ ವಿರೋಧಿ ಕೃಷಿ ಕಾಯ್ದೆಗಳ ರೀತಿಯಲ್ಲೇ ಹಿಂದಕ್ಕೆ ಪಡೆಯಬೇಕು ಎಂದು ಒತ್ತಾಯಿಸಿ ಕಾರ್ಮಿಕ ಹಕ್ಕುಗಳ ಹೋರಾಟ ಸಮಿತಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದವು.

‘ಬೆವರಿನ ಪಾಲು, ಘನತೆಯ ಬಾಳು’ ಧ್ಯೇಯ ವಾಕ್ಯದೊಂದಿಗೆ ನಡೆದ ಕಾರ್ಮಿಕ ಹಕ್ಕೊತ್ತಾಯ ಸಮಾವೇಶ ನಡೆಯಿತು. ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನದ ವರೆಗೆ ಪ್ರತಿಭಟನಾಕಾರರು ಮೆರವಣಿಗೆ ನಡೆಸಿದರು.
ಮೆರವಣಿಗೆಯಲ್ಲಿ ಸಾವಿರಾರು ಜನರು ಪಾಲ್ಗೊಂಡಿದ್ದರು.

ಕಾರ್ಮಿಕರ ಆಯ್ಕೆ ಹೋರಾಟ ಚಿರಾಯುವಾಗಲಿ, ಗುತ್ತಿಗೆ ಪದ್ಧತಿ ಬೇಡವೇ ಬೇಡ, ಕಾರ್ಮಿಕ ವಿರೋಧಿ ಕಾಯ್ದೆಗಳು ರದ್ದಾಗಬೇಕು ಎಂಬ ಘೋಷಣೆಗಳನ್ನು ಕೂಗುವ ಮೂಲಕ ಪ್ರತಿಭಟನಾಕಾರರು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿರುದ್ಧ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಕೆಂಪು ಹಾಗೂ ನೀಲಿ ಧ್ವಜಗಳನ್ನು ರಾರಾಜಿಸಿದವು.

ಈ ಸಂದರ್ಭದಲ್ಲಿ ಕರ್ನಾಟಕ ಶ್ರಮಿಕ ಶಕ್ತಿಯ ರಾಜ್ಯ ಘಟಕದ ಅಧ್ಯಕ್ಷ ವರದ ರಾಜೇಂದ್ರ, ಪಿಯುಸಿ ರಾಜ್ಯಘಟಕದ ಅಧ್ಯಕ್ಷ ಆರ್. ಮಾನಸಯ್ಯ ಇನ್ನು ಮುಂತಾದವರು ಉಪಸ್ಥಿತರಿದ್ದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ತಪ್ಪಿತಸ್ಥರ ವಿರುದ್ಧ ಕ್ರಮ- ಬಿಎಸ್ ವೈ.

0

ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿ ಉದ್ದೇಶಪೂರ್ವಕವಾಗಿ ಕೆಲವರು ಗೊಂದಲಗಳನ್ನ ಸೃಷ್ಟಿಸಿದ್ದಾರೆ. ಸಂಗೊಳ್ಳಿ ರಾಯಣ್ಣ ಪ್ರತಿಮೆ ಹಾಳು ಮಾಡಿರುವುದನ್ನು ಸಹಿಸಲು ಸಾಧ್ಯವಿಲ್ಲ. ಅಪರಾಧಿಗಳು ಯಾರೇ ಆಗಿರಲಿ, ಅವರ ವಿರುದ್ಧ ಕಠಿಣ ಕ್ರಮ ಜರುಗಿಸುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದರು.

‘ ಮಹಾತ್ಮರ ಪ್ರತಿಮೆ ವಿಚಾರವಾಗಿ ವಿಧಾನಮಂಡಲದಲ್ಲಿ ಈ ಬಗ್ಗೆ ಸುಧೀರ್ಘವಾಗಿ ಚರ್ಚೆ ಮಾಡುತ್ತೇವೆ. ಈ ರೀತಿ ಘಟನೆಗಳು ಮರುಕಳಿಸದಂತೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ. ಘಟನೆ ಬಗ್ಗೆ ಮುಖ್ಯಮಂತ್ರಿ ಬೊಮ್ಮಾಯಿ ಅವರು ಕಠಿಣ ಕ್ರಮ ಜರುಗಿಸುವಂತೆ ಗೃಹ ಸಚಿವರಿಗೆ ಸೂಚಿಸಿದ್ದಾರೆ. ಗಲಭೆಗೆ ಸಂಬಂಧಿಸಿ ಈಗಾಗಲೇ 23 ಜನರನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ. ಘಟನೆಯಲ್ಲಿ ಇನ್ನು ಯಾರೆಲ್ಲ ಶಾಮೀಲಾಗಿದ್ದಾರೆಯೋ ಅವರನ್ನು ಬಂಧಿಸುವ ಕೆಲಸ ಮುಂದುವರಿಸುತ್ತೇವೆ ಎಂದು ಯಡಿಯೂರಪ್ಪ ಅವರು ತಿಳಿಸಿದರು.

ಎಂಇಎಸ್ ಈ ಮಟ್ಟಿಗೆ ಬೆಳೆಯಲು ಹಿಂದೆ ಬಿಜೆಪಿ ನೀಡಿದ್ದ ಬೆಂಬಲವೇ ಕಾರಣ ಎಂಬ ಆರೋಪಕ್ಕೆ ಪ್ರತ್ಯುತ್ತರವಾಗಿ, ‘ಯಾರೋ ಕೆಲವರು ವಾಸ್ತವಿಕ ಸಂಗತಿ ತಿಳಿಯದವರು ಮಾಡಿದ ಆರೋಪಕ್ಕೆ ಅರ್ಥವಿಲ್ಲ. ಯಾರೇ ಅಪರಾಧ ಮಾಡಿದರೂ ಕ್ಷಮಿಸುವ ಪ್ರಶ್ನೆಯೇ ಇಲ್ಲ. ತಪ್ಪು ಮಾಡಿದವರ ಮೇಲೆ ಕ್ರಮ ಜರುಗಿಸಿ ಜೈಲಿಗೆ ಕಳುಹಿಸಿರುವುದೇ ಇದಕ್ಕೆ ಉದಾಹರಣೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಮಾಧ್ಯಮ ಮಿತ್ರರಿಗೆ ತಿಳಿಸಿದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಎಲ್ಲರೂ ಲಸಿಕೆ ಪಡೆಯಿರಿ-ಡಾ.ಹಾಫಿಜ್

0

ಶಿರಾಳಕೊಪ್ಪದ ಅಲ್ ಅಮೀನ್ ವಿದ್ಯಾಸಂಸ್ಥೆಯಲ್ಲಿ ಯುನಿಸೆಫ್ ಐಐಎಚ್ಎಂಆರ್ ಹಾಗೂ ಆರೋಗ್ಯವ ಇಲಾಖೆಯ ವತಿಯಿಂದ ನಡೆದ ಕೊರೊನಾ ಲಸಿಕೆ ಜಾಗೃತಿ ಮತ್ತು ಪ್ರಾಮುಖ್ಯ ಎಂಬ ಶಿಬಿರವನ್ನು ನಡೆಸಲಾಯಿತು.

‘ಅಲ್ಪಸಂಖ್ಯಾತ ಸಮುದಾಯದಲ್ಲಿ ಶಿಕ್ಷಣದ ಕೊರತೆಯಿಂದಾಗಿ ಲಸಿಕೆಯ ವಿಚಾರದಲ್ಲಿ ಗೊಂದಲಗಳು ಸೃಷ್ಟಿಯಾಗಿವೆ. ದೇಶದ ಪ್ರಧಾನಿ, ರಾಷ್ಟ್ರಪತಿ ಮತ್ತು ಮಕ್ಕಾ, ಮದೀನ ದಲ್ಲಿ ಇರುವಂತಹ ಸಮುದಾಯದ ಗುರುಗಳು ಕೂಡ ಲಸಿಕೆಯನ್ನು ಪಡೆದುಕೊಂಡಿದ್ದಾರೆ. ಸಮಾಜದಲ್ಲಿ ಇರುವಂತಹ ಪ್ರಜ್ಞಾವಂತರು,ಮುಂದೆ ಬಂದು ಜನರಲ್ಲಿರುವ ಗೊಂದಲಗಳನ್ನು ಹೋಗಲಾಡಿಸಬೇಕು. ಈ ಮೂಲಕ ಕೊರೋನಾ ಜನರನ್ನು ಬಾಧಿಸದಂತೆ ತಡೆಗಟ್ಟಬಹುದು ಎಂದು ಡಾ. ಹಾಫಿಜ್ ಅವರು ತಿಳಿಸಿದರು.

‘ಯಾವುದೇ ರೀತಿಯಾದ ವದಂತಿಗಳಿಗೆ ಕಿವಿಗೊಡದೇ, ಆರೋಗ್ಯ ಸಿಬ್ಬಂದಿಯೊಂದಿಗೆ ಸಹಕರಿಸಿ ಲಸಿಕೆಯನ್ನು ಜನಸಾಮಾನ್ಯರು ಪಡೆಯಬೇಕು. ಈಗಾಗಲೇ ಪಾಶ್ಚಿಮಾತ್ಯ ದೇಶಗಳಲ್ಲಿ ಮೂರನೇ ಅಲೆ ಶುರುವಾಗಿದೆ. ಕೊರೋನಾ ಇನ್ನಷ್ಟು ಶಕ್ತಿಶಾಲಿಯಾಗಿ ಮನುಷ್ಯರ ಮೇಲೆ ದಾಳಿ ಮಾಡುವ ಆತಂಕ ಇದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ಚಂದ್ರಪ್ಪ ಅವರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಪುರಸಭೆ ಸದಸ್ಯ ಅನಿಲ್ ಕುಮಾರ್, ವೈದ್ಯರಾದ ಹೇಮಂತ್ ಕುಮಾರ್, ಜಾಮಿಯಾ ಮಸೀದಿಯ ಮುಖ್ಯಸ್ಥರಾದ ಬಾಷಾ ಸಾಬ್ ಇನ್ನು ಮುಂತಾದ ಗಣ್ಯರು ಉಪಸ್ಥಿತರಿದ್ದರು.

ಕೋವಿಡ್ ನಿರ್ನಾಮ ಮಾಡಲು ದೇಶದ ಪ್ರತಿಯೊಬ್ಬ ನಾಗರಿಕನೂ ತಪ್ಪದೇ ಕೋವಿಡ್ ಲಸಿಕೆ ತೆಗೆದುಕೊಳ್ಳಬೇಕು ಎಂದು ಸಾಹಿತಿ ಡಾ. ಹಾಫಿಜ್ ಕರ್ನಾಟಕಿ ಅವರು ಸಲಹೆ ನೀಡಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಮತ್ತೊಬ್ಬ ಉಗ್ರನ ಹತ್ಯೆ

0

ಭಾರತೀಯ ಭದ್ರತಾಪಡೆಗಳು ಕಾರ್ಯಾಚರಣೆ ನಡೆಸಿ ಪಾಕಿಸ್ತಾನ ಘೋಷಿತ ಲಷ್ಕರೆ ತಯ್ಬಾ ಸಂಘಟನೆಯ ಪ್ರಮುಖ ಉಗ್ರ ಸೈಫುಲ್ಲಾನನ್ನು ಹತ್ಯೆಗೈದಿದ್ದಾವೆ.

2016ರಲ್ಲಿ ಅಕ್ರಮವಾಗಿ ಗಡಿಯಲ್ಲಿ ನುಸುಳಿ ಜಮ್ಮು ಮತ್ತು ಕಾಶ್ಮೀರ ಪ್ರವೇಶಿಸಿದ್ದ ಪಾಕಿಸ್ತಾನದ ಕರಾಚಿ ಮೂಲದ ಸೈಫುಲ್ಲಾ ಲಷ್ಕರ್ ಸಂಘಟನೆಯ ದಾಳಿಗಳಿಗೆ ಭಾರತದಲ್ಲಿ ಸಂಚು ರೂಪಿಸುವ ಪ್ರಮುಖ ಹೊಣೆ ಹೊತ್ತಿದ್ದ ಎಂದು ತಿಳಿದುಬಂದಿದೆ.

ಶ್ರೀನಗರ ಹೊರಭಾಗದ ಹರ್ವಾನ್ ಪ್ರದೇಶದಲ್ಲಿ ಸೈಫುಲ್ಲಾ ಅಡಗಿರುವ ಬಗ್ಗೆ ಬಂದಂತಹ ಖಚಿತ ಮಾಹಿತಿಯ ಮೇರೆಗೆ ಭಾರತೀಯ ಭದ್ರತಾ ಪಡೆಗಳ ಜೊತೆ ಸ್ಥಳೀಯ ಪೊಲೀಸರು ಕೈಜೋಡಿಸಿ ಜಂಟಿ ಶೋಧ ಕಾರ್ಯ ನಡೆಸಿದರು. ಈ ಸಂದರ್ಭದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಉಗ್ರ ಸೈಫುಲ್ಲಾ ಮೃತಪಟ್ಟಿದ್ದಾನೆ. ಮೃತ ಉಗ್ರ ಅಬ್ಬು ಖಾಲಿದ್ ಅಲಿಯಾಸ್ ಶಾವಾಜ್ ಎಂದೂ ಸಹ ಗುರುತಿಸಿಕೊಂಡಿದ್ದ ಎಂದು ಮೂಲಗಳು ತಿಳಿಸಿವೆ.

“ಸೈಫುಲ್ಲಾ ಹತ್ಯೆಯ ಮೂಲಕ ಕಳೆದ 33 ದಿನಗಳಲ್ಲಿ ಕಣಿವೆ ರಾಜ್ಯದಲ್ಲಿ ಅಡಗಿದ್ದ ಮೂವರು ಪಾಕಿಸ್ತಾನ ಉಗ್ರರನ್ನು ಭಾರತೀಯ ಭದ್ರತಾ ಪಡೆ ಬೇಟೆಯಾಡಿದಂತಾಗಿದೆ. ನಾಗರಿಕ ಹತ್ಯೆಗಳ ಆತಂಕ ಕ್ಷೀಣಿಸುತ್ತಿರುವ ಸಂದರ್ಭದಲ್ಲಿ ಭದ್ರತಾ ಪಡೆಗಳು ಉಗ್ರರನ್ನು ಹೊಡೆದುರುಳಿಸಿ ಕಾಶ್ಮೀರದ ಜನರ ಆತ್ಮಸ್ಥೈರ್ಯ ಹೆಚ್ಚಿಸಿದೆ” ಎಂದು ಪೊಲೀಸರು ತಿಳಿಸಿದ್ದಾರೆ.