Tuesday, February 10, 2026
Tuesday, February 10, 2026
Home Blog Page 1822

ಶಿವಮೊಗ್ಗದಲ್ಲಿ ಪೋಲಿಸ್ ವಾರ್ಷಿಕ ಕ್ರೀಡಾಕೂಟ

0

ಸಮಾಜದ ಶಾಂತಿ ಕಾಪಾಡಲು ಕರ್ತವ್ಯ ನಿರ್ವಹಿಸುವ ಪೊಲೀಸರಿಗಾಗಿ ನಗರದ ಡಿ ಎ ಆರ್ ಮೈದಾನದಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಪೊಲೀಸ್ ವಾರ್ಷಿಕ ಕ್ರೀಡಾಕೂಟ ಆಯೋಜಿಸಲಾಗಿತ್ತು.

ಮಾನ್ಯ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಕ್ರೀಡಾ ಜ್ಯೋತಿ ಹಸ್ತಾಂತರದ ಮೂಲಕ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. “ಹೆಚ್ಚಿನ ಪೊಲೀಸರು ದೈಹಿಕ ಸದೃಢತೆ ಬಗ್ಗೆ ಗಮನ ಕೊಡುವುದಿಲ್ಲ, ಸದಾ ಒತ್ತಡದ ನಡುವೆಯೇ ಕಾರ್ಯನಿರ್ವಹಿಸುತ್ತಾರೆ. ಕುಟುಂಬದೊಂದಿಗೆ ಸಮಯ ಕಳೆಯಲು ಕೂಡ ಪೊಲೀಸರಿಗೆ ಸಾಧ್ಯವಾಗುವುದಿಲ್ಲ. ಇದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ. ಹೀಗಾಗಿ ವತ್ತಡ ಬದಿಗಿರಿಸಿ ಇಂತಹ ಕ್ರೀಡಾಕೂಟಗಳಲ್ಲಿ ಭಾಗವಹಿಸಬೇಕು” ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಜಿಲ್ಲಾ ಪೊಲೀಸ್ ಅಧೀಕ್ಷಕ ಬಿ.ಎಂ.ಲಕ್ಷ್ಮೀಪ್ರಸಾದ್, ಡಿ ವೈ ಎಸ್ ಪಿ ಪ್ರಶಾಂತ್ ಮನ್ನೋಳಿ, ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕ್ರೀಡಾಕೂಟದಲ್ಲಿ ಭಾಗಿಯಾಗಿದ್ದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಪ್ರವಾಸೋದ್ಯಮಕ್ಕೆ ಬೇಡಿಕೆ ಡಿಸೆಂಬರ್ ಶುಭಾರಂಭ

0

ಪ್ರವಾಸೋದ್ಯಮ ಮತ್ತು ಟ್ರಾವೆಲ್ ವಲಯದ ಚಟುವಟಿಕೆಗಳು ಈ ಡಿಸೆಂಬರ್ ನಲ್ಲಿ ಚುರುಕಾಗಿವೆ. ಜೊತೆಗೆ ಪ್ರವಾಸಿಗರು ಪ್ರವಾಸವನ್ನು ಹೆಚ್ಚಾಗಿ ಕೈಗೊಳ್ಳುತ್ತಿದ್ದಾರೆ ಎಂದು ಮಹಿಂದ್ರಾ ಹಾಲಿಡೇಸ್ ಅಂಡ್ ರೆಸಾರ್ಟ್ಸ ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಓ ಕವೀಂದರ್ ಸಿಂಗ್ ತಿಳಿಸಿದ್ದಾರೆ.
ದೇಶೀಯವಾಗಿ ಪ್ರವಾಸಕ್ಕೆ ಗೋವಾ, ರಾಜಸ್ಥಾನ, ಹಿಮಾಚಲ ಪ್ರದೇಶ, ಮಹಾರಾಷ್ಟ್ರ, ಕೇರಳ ಪ್ರಮುಖ ತಾಣಗಳಾಗಿವೆ. ಅಂತರ್ರಾಷ್ಟ್ರೀಯವಾಗಿ ಮಾಲ್ಡೀವ್ಸ್ ಮತ್ತು ದುಬೈ ಹೊರಹೊಮ್ಮಿದೆ ಎಂದು ಅವರು ಸಂದರ್ಶನವೊಂದರಲ್ಲಿ ತಿಳಿಸಿದ್ದಾರೆ.
ಮುಂಬರುವ ದಿನಗಳಲ್ಲಿ ರೆಸಾರ್ಟ ಗಳಲ್ಲಿ ಶೇ.90ಕ್ಕೂ ಹೆಚ್ಚು ಭರ್ತಿಯಾಗುವ ನಿರೀಕ್ಷೆಯಿದೆ‌. ಅಕ್ಟೋಬರ್ ಗಿಂತಲೂ ಡಿಸೆಂಬರ್ ಹೆಚ್ಚು ಉತ್ತಮ ವಹಿವಾಟು ದಾಖಲಿಸುತ್ತಿದೆ. ಓಮಿಕ್ರಾನ್ ಹಿನ್ನೆಲೆಯಲ್ಲಿ ರೆಸಾರ್ಟ್ ಗಳ ಬುಕ್ಕಿಂಗ್ ಏನೂ ಕಡಿಮೆಯಾಗಿಲ್ಲ. ಜನವರಿ ಮತ್ತು ಫೆಬ್ರವರಿಯಲ್ಲಿಯೇ ಚೆನ್ನಾಗಿ ಫ್ರೀ ಬುಕ್ಕಿಂಗ್ ಆಗಿತ್ತು.
ಪ್ರಸಕ್ತ ತ್ರೈಮಾಸಿಕದಲ್ಲಿ ಮತ್ತಷ್ಟು ಹೆಚ್ಚು ಮಂದಿ ಬುಕ್ ಮಾಡುವ ನಿರೀಕ್ಷೆಯಿದೆ ಎಂದು ತಿಳಿಸಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಮೊಬೈಲ್ ಕಳವು ಜಾಲ : ಭದ್ರಾವತಿಯಲ್ಲಿ ಪತ್ತೆ

0

ಕಳ್ಳತನ ಮಾಡಿದ್ದ ಭಾರಿ ಸಂಖ್ಯೆಯ ಮೊಬೈಲ್ ಫೋನ್ ಗಳನ್ನು ಮಾರಾಟ ಮಾಡುವ ಉದ್ದೇಶದಿಂದ ಭದ್ರಾವತಿಗೆ ತರುತ್ತಿದ್ದ ವೇಳೆ ಸೀಗೇಭಾಗಿಯ ಬಳಿ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

ಬಂಧಿತ ಆರೋಪಿಗಳನ್ನು ಭದ್ರಾವತಿಯ ಬಾವಿ ಕಾಲೋನಿಯ ನಿವಾಸಿ ಶ್ರೀನಿವಾಸ್ (26) ಹಾಗೂ ದುರ್ಗಿ ನಗರದ ಅಜಾನ್ ಅಲಿಯಾಸ್ (38) ಬಾಬು ಎಂದು ತಿಳಿದುಬಂದಿದೆ.

ಬಂಧಿತ ಆರೋಪಿಗಳಿಂದ ಬ್ಯಾಗ್ ನಲ್ಲಿ ಇದ್ದಂತಹ ಸುಮಾರು 11 ಲಕ್ಷ ರೂ. ಮೌಲ್ಯದ ವಿವಿಧ ಕಂಪನಿಯ ಒಟ್ಟು 120 ಮೊಬೈಲ್ ಫೋನ್, 1 ಲ್ಯಾಪ್ ಟಾಪ್ ಹಾಗೂ ಕೃತ್ಯಕ್ಕೆ ಬಳಸಲಾಗಿದ್ದ ಬೈಕ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಸಂಬಂಧ ಆರೋಪಿಗಳ ವಿರುದ್ಧ ಭದ್ರಾವತಿ ಹಳೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಎಪಿಎಂಸಿ ಕಾಯಿದೆ ಸದ್ಯಕ್ಕೆ ಹಿಂಪಡೆ ಇಲ್ಲ

0

ಬೆಳಗಾವಿ : ರಾಜ್ಯ ಸರ್ಕಾರವು ಕೃಷಿ ಉತ್ಪನ್ನ ಮಾರುಕಟ್ಟೆ ಕಾಯ್ದೆಯನ್ನು ಅಧಿವೇಶನದಲ್ಲಿ ರದ್ದು ಮಾಡುವುದಿಲ್ಲ ಎಂದು ಹೇಳಿದೆ. ಕೇಂದ್ರ ಸರ್ಕಾರ ಹಿಂಪಡೆದ ಮೂರು ಕೃಷಿ ಕಾಯ್ದೆ ಹಿನ್ನೆಲೆಯಲ್ಲಿ ಈ ಒಂದು ಕಾಯ್ದೆ ಬಗ್ಗೆ ಮಾತ್ರ ಪ್ರಸ್ತಾಪಿಸಲಾಗಿದೆ.

ಮೂರು ಕೃಷಿ ಕಾಯ್ದೆಗಳನ್ನು ರಾಜ್ಯವು ರದ್ದುಗೊಳಿಸಬೇಕು. ಇಲ್ಲದಿದ್ದರೆ ಬೆಳಗಾವಿಯ ಸುವರ್ಣಸೌಧಕ್ಕೆ ಮುತ್ತಿಗೆ ಹಾಕುವುದಾಗಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಘೋಷಣೆ ಮಾಡಿದ್ದವು.

ರಾಜ್ಯದ ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ಅವರು ಪ್ರಸ್ತುತ ಕೃಷಿ ಕಾಯ್ದೆ ಕೃಷಿಕರ ಹಿತಾಸಕ್ತಿ ರಕ್ಷಿಸುತ್ತದೆ ಎಂದು ಹೇಳಿದ್ದಾರೆ.

ಪ್ರಸ್ತುತ ಎಪಿಎಂಸಿ ಕಾಯ್ದೆಯು ಕೃಷಿಕರಿಗೆ ಕೃಷಿ ಉತ್ಪನ್ನಗಳನ್ನ ಎಪಿಎಂಸಿ ಮಾರುಕಟ್ಟೆ ಪ್ರಾಂಗಣ ಮತ್ತು ಹೊರಗಡೆಯಲ್ಲಿ ಮಾರಾಟ ಮಾಡಲು ಅವಕಾಶ ಕಲ್ಪಿಸುತ್ತದೆ ಎಂದು ಸಚಿವರು ನುಡಿದರು.

ಈ ಕ್ರಮದಿಂದ ಬೆಳಗಾವಿ ಅಧಿವೇಶನದಲ್ಲಿ ಕೃಷಿ ಕಾಯ್ದೆಗಳನ್ನು ಹಿಂಪಡೆಯುವ ಬಗ್ಗೆ ರಾಜ್ಯ ಸರ್ಕಾರವು ಭರವಸೆ ಕೊಟ್ಟದ್ದನ್ನ ಪಾಲಿಸಿಲ್ಲ ಹೀಗಾಗಿ ನಾವು ಪ್ರತಿಭಟನೆ ಮುಂದುವರೆಸುವುದು ಅನಿವಾರ್ಯವಾಗಿದೆ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಶ್ರೀ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ.

ಮುಖ್ಯಮಂತ್ರಿ ಬೊಮ್ಮಾಯಿ ಅವರು ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ. ಪಕ್ಷದ ವರಿಷ್ಠರ ಸೂಚನೆ ನಿರೀಕ್ಷೆ ಮಾಡುತ್ತಿದ್ದು, ಸೂಕ್ತ ನಿರ್ಧಾರ ಪಡೆದುಕೊಳ್ಳುತ್ತೇವೆ ಎಂದು ಹೇಳಿದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ವಿಜಯ್ ದಿವಸ್ ಆಚರಣೆಯಂದು ಇಂದಿರಾ ಸ್ಮರಣೆಬೇಕು

0

ಪಾಕಿಸ್ತಾನ ವಿರುದ್ಧದ 1971ರ ಯುದ್ಧದ ಗೆಲುವಿನ 50ನೇ ವರ್ಷಾಚರಣೆ ವಿಜಯ್ ದಿವಸ್ ಈ ಸಂದರ್ಭದಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರನ್ನು ಸ್ಮರಿಸದೇ ಇರುವುದು ವಾಗ್ವದಕ್ಕೆ ಕಾರಣವಾಗಿದೆ.

1971 ರಲ್ಲಿ ಇಂದಿರಾ ಗಾಂಧಿ ಪ್ರಧಾನಿ ಆಗಿದ್ದಂತೆ ಆ ಸಂದರ್ಭ. ಯುದ್ಧದಲ್ಲಿ ಭಾರತೀಯ ಸೇನೆ ಪಾಕಿಸ್ತಾನವನ್ನು ಹಿಮ್ಮೆಟ್ಟಿಸಿತ್ತು. ಪಾಕಿಸ್ತಾನದ ಭಾಗವಾಗಿದ್ದ ಬಾಂಗ್ಲಾದೇಶ ಯುದ್ಧದ ನಂತರ ಪ್ರತ್ಯೇಕ ರಾಷ್ಟ್ರವಾಗಿ ಅಸ್ತಿತ್ವಕ್ಕೆ ಬಂದಿತು.

ವಿಜಯ್ ದಿವಸ್ ಆಚರಣೆಯ ವೇಳೆಯಲ್ಲಿ ಇಂದಿರಾ ಗಾಂಧಿ ಅವರನ್ನು ಸ್ಮರಿಸದ ಕ್ರಮವನ್ನು ಕಾಂಗ್ರೆಸ್ ಪಕ್ಷ ಇದನ್ನು ಖಂಡಿಸಿದೆ. ಕೇಂದ್ರ ಸರ್ಕಾರವು ಸಣ್ಣತನದ ರಾಜಕಾರಣದಲ್ಲಿ ತೊಡಗಿದೆ ಎಂದು ಟೀಕಿಸಿದ್ದಾರೆ.

ಬಾಂಗ್ಲಾದೇಶದ ಮುಕ್ತಿಯಲ್ಲಿ ಇಂದಿರಾಗಾಂಧಿ ಮುಖ್ಯಪಾತ್ರ ವಹಿಸಿದ್ದ ನ್ನು ಸರ್ಕಾರ ಗುರುತಿಸಿರುವುದು ದುರದೃಷ್ಟಕರ ಎಂದು ರಾಜ್ಯಸಭೆಯ ವಿರೋಧ
ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಯುದ್ಧದಲ್ಲಿ ಉನ್ನತ ನಾಯಕತ್ವ ತೋರಿದ್ದ, ಇಂದಿರಾಗಾಂಧಿ ಅವರ ಹೆಸರು ಉಲ್ಲೇಖಿಸದೇ ಕೇಂದ್ರ ಸರ್ಕಾರ ಸಣ್ಣತನದ ರಾಜಕಾರಣ ಮಾಡುತ್ತಿದೆ ಎಂದು ಪಕ್ಷದ ವಕ್ತಾರ ರಣದೀಪ್ ಸುರ್ಜೆವಾಲಾ ಆರೋಪಿಸಿದ್ದಾರೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಅವರು, ದೇಶದ ಪ್ರಥಮ, ಏಕೈಕ ಮಹಿಳಾ ಪ್ರಧಾನಿ ಇಂದಿರಾ ಗಾಂಧಿ. ಅವರನ್ನು ವಿಜಯ್ ದಿವಸ್ಎಸ್ ವೇಳೆ ಸ್ತ್ರೀ ದ್ವೇಷಿಯಾದ ಬಿಜೆಪಿ ಸರ್ಕಾರ ಮರೆತಿದೆ ಎಂದು ವ್ಯಂಗ್ಯವಾಗಿ ಹೇಳಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಸಹ್ಯಾದ್ರಿ ನಾರಾಯಣ ಆಸ್ಪತ್ರೆ ಶಾಖೆ ಉದ್ಘಾಟನೆ

0

ಸಹ್ಯಾದ್ರಿ ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ 11ನೇ ವಾರ್ಷಿಕೋತ್ಸವ ಪ್ರಯುಕ್ತ ನಗರದ ಶಿವಮೂರ್ತಿ ವೃತ್ತದ ಬಳಿಯ ಕುವೆಂಪು ರಸ್ತೆಯಲ್ಲಿ ಅತ್ಯಾಧುನಿಕ ನಾರಾಯಣ ಮಲ್ಟಿ ಸ್ಪೆಷಾಲಿಟಿ ಕ್ಲಿನಿಕ್ ಆರಂಭವಾಗಿದೆ.

ಈ ನೂತನ ಶಾಖೆಯನ್ನು ಕನ್ನಡದ ಖ್ಯಾತ ಚಲನಚಿತ್ರ ನಟಿ ಸುಧಾರಾಣಿ ಅವರು ಉದ್ಘಾಟಿಸಿ ಶುಭಹಾರೈಸಿದರು.

ನಾರಾಯಣ ಮಲ್ಟಿಸ್ಪೆಷಾಲಿಟಿ ಕ್ಲಿನಿಕ್ ಅತ್ಯಾಧುನಿಕ ಸೌಕರ್ಯಗಳೊಂದಿಗೆ ಸೇವೆಗೆ ಸನ್ನದ್ಧವಾಗಿದೆ. ಒಂದೇ ಸೂರಿನಡಿಯಲ್ಲಿ 5 ಓಪಿಡಿ ಸೇವೆಯ ಕೊಠಡಿಗಳು, ಟಿಎಂಟಿ, ಹೊಲ್ಟರ್,ಇಸಿಜಿ, ಎಕೋ, ಬಯೋಥೆಸಿ ಮೀಟರ್, ಅಲ್ಟ್ರಾಸೌಂಡ್ ಮತ್ತು ಎಕ್ಸ್-ರೇ ತಪಾಸಣೆ ವ್ಯವಸ್ಥೆ ಇದೆ. ನುರಿತ ಹಾಗೂ ಅನುಭವ ಸಿಬ್ಬಂದಿ ಸಹ ಇದ್ದಾರೆ ಎಂದು ಆಸ್ಪತ್ರೆಯ ಮಾರ್ಕೆಟಿಂಗ್ ವಿಭಾಗದ ಮುಖ್ಯಸ್ಥ ರಾಜಾಸಿಂಗ್ ತಿಳಿಸಿದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಮೇಕೆದಾಟು ಸಮಗ್ರ ಯೋಜನೆ ಸಿದ್ಧ

0

ಮೇಕೆದಾಟು ಯೋಜನೆಯ ಸಮಗ್ರ ಯೋಜನಾ ವರದಿ ಸಿದ್ಧಪಡಿಸಲಾಗಿದೆ. ಅದು ಈಗ ಕೇಂದ್ರ ಸರ್ಕಾರದ ವಿವಿಧ ನಿರ್ದೇಶನಾಲಯ ಗಳಲ್ಲಿ ಪರಿಶೀಲನೆಯಲ್ಲಿದೆ ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ತಿಳಿಸಿದ್ದಾರೆ.

ವಿಧಾನಪರಿಷತ್ತಿನಲ್ಲಿ ಬಿಜೆಪಿಯ ತೇಜಸ್ವಿನಿ ಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮೇಕೆದಾಟು ಸಮತೋಲನ ಜಲಾಶಯ ಮತ್ತು ಕುಡಿಯುವ ನೀರಿನ ಯೋಜನೆಯನ್ನು ಕಾವೇರಿ ನದಿಗೆ ಅಡ್ಡಲಾಗಿ ಆರ್ಕಾವತಿ ಹಾಗೂ ಕಾವೇರಿ ನದಿಯ ಸಂಗಮದ ಸಮೀಪದಲ್ಲಿ ನಿರ್ಮಿಸಿ 67.16 ಟಿಎಂಸಿ ಅಡಿ ನೀರು ಶೇಖರಿಸಲು 9 ಸಾವಿರಕೋಟಿ ಅಂದಾಜು ವೆಚ್ಚದ ಡಿಪಿಆರ್ ತಯಾರಿಸಿ ಕೇಂದ್ರಕ್ಕೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ಸುಪ್ರಿಂಕೋರ್ಟ್ ನಿಂದ ಯೋಜನೆಯ ಮೂಲಕ ಹಂಚಿಕೆಯಾಗಿರುವ 4. 75 ಟಿಎಂಸಿ ಅಡಿ ನೀರನ್ನು ಬೆಂಗಳೂರು ನಗರವೂ ಸೇರಿದಂತೆ ಕುಡಿಯುವ ಹಾಗೂ ಉಪಯೋಗ ದೇಶಕ್ಕೆ ಬಳಸಲು ಉದ್ದೇಶಿಸಲಾಗಿದೆ.

400 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದಿಸಲು ಕೂಡ ಯೋಜನೆ ಕೈಗೆತ್ತಿಕೊಳ್ಳಲಾಗಿದೆ ಎಂದು ಕೂಡ ತಿಳಿಸಿದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ ಸೂಕ್ತವಾಗಿಲ್ಲ

0

ಏಳು ವರ್ಷದಿಂದ ಒಂದು ಸಣ್ಣ ತಾಂತ್ರಿಕ ಸಮಸ್ಯೆಯಿಂದಾಗಿ ರಾಜ್ಯದ ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ ಕಲ್ಪಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ.

ಕೇಂದ್ರ ಸರ್ಕಾರ ಎಲ್ಲ ಬೆಳೆಗಳಿಗೆ ನೀಡುವಂತೆ ಮೆಕ್ಕೆಜೋಳಕ್ಕೆ ಉತ್ತಮ ಬೆಂಬಲ ಬೆಲೆ ನೀಡಿದೆ. ಆದರೆ ಈ ಬೆಲೆ ಮಾತ್ರ ಕರ್ನಾಟಕ ರೈತರಿಗೆ ಸಿಕ್ಕಿಲ್ಲ.

ದೇಶದಲ್ಲಿ ಬೆಳೆಯುವ ಮೆಕ್ಕೆಜೋಳದಲ್ಲಿ ಶೇ.16.5 ರಷ್ಟು ರಾಜ್ಯದಾಗಿದೆ. ರಾಜ್ಯದ ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಹಾವೇರಿ, ವಿಜಯಪುರ, ಬಳ್ಳಾರಿ ಕರ್ನಾಟಕ ಮತ್ತು ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಮೆಕ್ಕೆಜೋಳ ಬೆಳೆಯಲಾಗುತ್ತದೆ. ಈ ವರ್ಷ ರಾಜ್ಯದಲ್ಲಿ ಬಿತ್ತನೆ14.16 ಲಕ್ಷ ಹೆಕ್ಟೇರ್ ಮೆಕ್ಕೆಜೋಳ ಬಿತ್ತನೆ ಆಗಿದ್ದು ಸುಮಾರು 42.48 ಕೋಟಿ ಟನ್ ಉತ್ಪನ್ನ ನಿರೀಕ್ಷಿಸಲಾಗಿದೆ.

2014 ಕ್ಕೂ ಮೊದಲು ರಾಜ್ಯದ ಮೆಕ್ಕೆಜೋಳ ಬೆಳೆಗಾರರು ಕೂಡಾ ಬೆಂಬಲ ಬೆಲೆ ಪಡೆದುಕೊಳ್ಳುತ್ತಿದ್ದರು. 2013-14 ರಲ್ಲಿ ಮೆಕ್ಕೆಜೋಳವನ್ನು ವಾಡಿಕೆಗಿಂತ ಶೇ.20ರಷ್ಟು ಹೆಚ್ಚು ಬೆಳೆಯದಿದ್ದರೂ ಸಹ ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳ ವನ್ನು ಖರೀದಿ ಮಾಡಲಾಗಿತ್ತು.

ಕೇಂದ್ರ ಸರ್ಕಾರವು ಈ ವರ್ಷ ಮೆಕ್ಕೆಜೋಳಕ್ಕೆ 1870 ರೂ. ಬೆಂಬಲ ಬೆಲೆ ನೀಡಿದ್ದು ಕರ್ನಾಟಕ ಹೊರತುಪಡಿಸಿ ಇತರೆ ರಾಜ್ಯಗಳ ರೈತರು ಲಾಭ ಪಡೆಯುತ್ತಿದ್ದಾರೆ. ರಾಜ್ಯದ ಮಾರುಕಟ್ಟೆಯಲ್ಲಿ ಮೆಕ್ಕೆಜೋಳಕ್ಕೆ 1510 ರೂ ಕನಿಷ್ಠ 1630 ರೂ ಮಾದರಿಯ ಬೆಲೆ ಇದೆ. ರೈತರು ಬೆಂಬಲ ಬೆಲೆಗೆ ಹೋಲಿಸಿದರೆ ಪ್ರತಿ ಕ್ವಿಂಟಾಲ್ ಗೆ 366 ನಷ್ಟಕ್ಕೆ ಒಳಗಾಗುತ್ತಿದ್ದಾರೆ.

‘ಬೆಂಬಲ ಯೋಜನೆ ಎಂದ ಮೇಲೆ ಅಲ್ಲಿ ಸಾರ್ವಜನಿಕ ಪಡಿತರ ವಿತರಣೆ ವ್ಯವಸ್ಥೆ ಎಂಬ ತಾಂತ್ರಿಕ ಕಾರಣವನ್ನು ಮುಂದಿಡಬಾರದು. ಗುಣಮಟ್ಟದ ಉತ್ಪನ್ನಕ್ಕೆ ರಾಜಿ ಆಗುವುದು ಬೇಡ, ಆದರೆ ಅಂತಹ ತಾಂತ್ರಿಕ ನೆಪವೊಡ್ಡಿ ಖರೀದಿ ಮಾಡದೆ ಇರುವುದು ತಪ್ಪು ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರದ ಮನವೊಲಿಸುವ ಶಕ್ತಿಯೇ ಇಲ್ಲ’ ರೈತ ಮುಖಂಡ ತೇಜಸ್ವಿ ಪಟೇಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಸ್ವಾಯತ್ತಸಂಸ್ಥೆಯಾಗಿ ಬೆಂಗಳೂರು ವಿವಿ ಇಂಜಿನಿಯರಿಂಗ್ ಕಾಲೇಜು

0

ಬೆಂಗಳೂರಿನ ವಿಶ್ವವಿದ್ಯಾಲಯ ಎಂಜಿನಿಯರಿಂಗ್ ಕಾಲೇಜು ಅನ್ನು ಪುಣೆಯ ಕಾಲೇಜು ಆಫ್ ಇಂಜಿನಿಯರಿಂಗ್ ಮತ್ತು ಐಐಟಿ ಮಾದರಿಯಲ್ಲಿ ಸ್ವಾಯತ್ತ ಸಂಸ್ಥೆಯನ್ನಾಗಿ ಪರಿವರ್ತಿಸುವ ಉದ್ದೇಶದಿಂದ ವಿಧಾನಸಭೆಯಲ್ಲಿ ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯ, ಮಸೂದೆ 2021 ಮಂಡಿಸಲಾಯಿತು.

ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ಮಸೂದೆಯನ್ನು ಮಂಡಿಸಿದರು.

ಇಂಜಿನಿಯರಿಂಗ್ ಮತ್ತು ಸಂಬಂಧಿತ ಜ್ಞಾನ ಕ್ಷೇತ್ರಗಳಲ್ಲಿ ಜಾಗತಿಕ ಉತ್ಕೃಷ್ಟ ಗುಣಮಟ್ಟಗಳನ್ನು ಒಂದು ಸಂಸ್ಥೆಯನ್ನು ಸಶಕ್ತಗೊಳಿಸುವ ಉದ್ದೇಶದಿಂದ ಸ್ವಾಯತ್ತತೆ ನೀಡಲು ಉದ್ದೇಶಿಸಲಾಗಿದೆ. ಅದಕ್ಕೆ ಪೂರಕವಾಗಿ ಸಂಸ್ಥೆಯ ಹೆಸರನ್ನು ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯ ಬದಲಿಸಲು ಮಸೂದೆಯಲ್ಲಿ ಪ್ರಸ್ತಾಪಿಸಲಾಗಿದೆ.

ಈ ಸಂಸ್ಥೆಯನ್ನು ರಾಷ್ಟ್ರಮಟ್ಟದ ಎಂಜಿನಿಯರಿಂಗ್ ಕಾಲೇಜುಗಳಲ್ಲೇ ಉನ್ನತ ಸ್ಥಾನಕ್ಕೆ ಮೇಲ್ದರ್ಜೆಗೇರಿಸಲು ಸರ್ಕಾರ ಎಸ್. ವಿ. ರಂಗನಾಥ್ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಪ್ರವೇಶ ಶುಲ್ಕ ಐದು ನೂರು ರೂಪಾಯಿಗಳು.

0

ಸ್ಮಾರ್ಟ್ ಸಿಟಿ ಶಿವಮೊಗ್ಗ ಕೆನಲ್ ಕ್ಲಬ್ ವತಿಯಿಂದ ಡಿ.19ರಂದು ಎನ್ ಇಎಸ್ ಮೈದಾನದಲ್ಲಿ ರಾಜ್ಯಮಟ್ಟದ ಶ್ವಾನ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ ಎಂದು ಕ್ಲಬ್ ಅಧ್ಯಕ್ಷ ಪ್ರೀತಮ್ ತಿಳಿಸಿದ್ದಾರೆ.

ಮುನ್ನೂರಕ್ಕೂ ಅಧಿಕ ಹೆಚ್ಚು ಶ್ವಾನಗಳು ಭಾಗವಹಿಸುವ ನಿರೀಕ್ಷೆಯಿದೆ. ಒಟ್ಟು 1 ಲಕ್ಷ ಮೌಲ್ಯದ ಬಹುಮಾನವಿದೆ. ಮೊದಲ ಬಹುಮಾನ 25000, ಎರಡನೇ ಬಹುಮಾನ 20000, ಹಾಗೂ ಮೂರನೇ ಬಹುಮಾನ 15000 ಇದೆ.

ಇದರ ಜೊತೆಗೆ ಉತ್ತಮ ಶ್ವಾನಕ್ಕೆ 5 ಸಾವಿರದಿಂದ ಹಿಡಿದು 1000 ವರೆಗೆ ಬಹುಮಾನವಿರುತ್ತದೆ ಎಂದು ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.

ಪ್ರದರ್ಶನಕ್ಕೆ ಮುನ್ನೂರು ಪ್ರವೇಶ ಶುಲ್ಕ ನಿಗದಿಪಡಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ,
7676441122/ 9964289695 ಕ್ಕೆ ಸಂಪರ್ಕಿಸಬಹುದು.