Monday, February 9, 2026
Monday, February 9, 2026
Home Blog Page 1823

ಶಿವಮೊಗ್ಗದಲ್ಲಿ ಆಯುಷ್ ವಿವಿ ವಿಧೇಯಕ ಮಂಡನೆ

0

ಶಿವಮೊಗ್ಗದಲ್ಲಿ ಕರ್ನಾಟಕ ಆಯುಷ್ ವಿಶ್ವವಿದ್ಯಾಲಯ ಸ್ಥಾಪಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಆಯುಷ್ ವಿಶ್ವವಿದ್ಯಾಲಯ ವಿಧೇಯಕ-2021ನ್ನು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ವಿಧಾನಸಭೆಯಲ್ಲಿ ಮಂಡಿಸಿದರು.

‘ಆಯುರ್ವೇದ ಕ್ಷೇತ್ರದಲ್ಲಿ ಉನ್ನತ ಶಿಕ್ಷಣ ನೀಡುವ ಹಾಗೂ ವೈದ್ಯ ಪದ್ಧತಿ ಮೂಲಕ ಜನರಿಗೆ ಉತ್ತಮ ಆರೋಗ್ಯ ಮತ್ತು ಕ್ಷೇಮ ಒದಗಿಸುವುದು ವಿವಿ ಸ್ಥಾಪನೆಯ ಉದ್ದೇಶವಾಗಿದೆ’ ಎಂದು ಸಚಿವರು ತಿಳಿಸಿದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಕನ್ನಡಧ್ವಜಕ್ಕೆ ಅಪಮಾನ ಚಿತ್ರನಟರ ಪ್ರತಿಕ್ರಿಯೆ

0

ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಶಿವಸೇನಾ ಕಾರ್ಯಕರ್ತರು ಕನ್ನಡ ಬಾವುಟವನ್ನು ಸುಟ್ಟು ಹಾಕಿದ್ದಾರೆ. ಇದನ್ನು ಕನ್ನಡ ಚಿತ್ರರಂಗದ ಅನೇಕ ಕಲಾವಿದರು ಖಂಡಿಸಿದ್ದಾರೆ.

ಸಾಮಾಜಿಕ ಜಾಲತಾಣ ವಾದ ಟ್ವಿಟ್ಟರ್ ಮೂಲಕ ತಮ್ಮ ಆಕ್ರೋಶ, ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಶಿವರಾಜ್ ಕುಮಾರ್, ದರ್ಶನ್ ಅವರು ಕರುನಾಡು ಧ್ವಜ ಸುಟ್ಟ ವರಿಗೆ ತಕ್ಕ ಶಿಕ್ಷೆ ಆಗಲೇಬೇಕು ಎಂದು ಆಗ್ರಹಿಸಿದ್ದಾರೆ.

‘ನಮ್ಮ ನಾಡಧ್ವಜ ಸುಟ್ಟ ವರಿಗೆ ತಕ್ಕ ಶಿಕ್ಷೆಯಾಗಲಿ. ನಿಜವಾದ ಕನ್ನಡಪರ ಹೋರಾಟಗಾರರನ್ನು ಬಿಡುಗಡೆಗೊಳಿಸಿ. ಜೈ ಕನ್ನಡ. ಜೈ ಕರ್ನಾಟಕ’ ಎಂದು ಶಿವರಾಜ್ ಕುಮಾರ್ ಅವರು ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಕನ್ನಡ ಧ್ವಜವನ್ನು ಸುಟ್ಟಿದ್ದು ತೀವ್ರ ಬೇಸರ ತಂದಿದೆ. ಸರ್ಕಾರ ಈ ಕೂಡಲೇ ಇದರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಂಡು ಕನ್ನಡಿಗರ ಸ್ವಾಭಿಮಾನವನ್ನು ರಕ್ಷಿಸಬೇಕು ಎಂದು ನಟರಾದ ಧ್ರುವ ಸರ್ಜಾ ಅವರು ತಿಳಿಸಿದ್ದಾರೆ.

ಕನ್ನಡ ಬಾವುಟ ಅಪಮಾನಿಸಿದ ಅವರ ಮೇಲೆ ಕಾನೂನು ಕ್ರಮಕ್ಕೆ ಒತ್ತಾಯ ಮಾಡುತ್ತೇನೆ. ಕನ್ನಡಪರ ಈ ವಿಷಯಕ್ಕೆ ಹೋರಾಟ ಮಾಡಿದ ಕನ್ನಡ ಸೈನಿಕರನ್ನು ದಯಮಾಡಿ ಬಿಡುಗಡೆಗೊಳಿಸಿ. ಕರ್ನಾಟಕದಲ್ಲಿ ಕನ್ನಡ ಭಾಷೆ ಸಾರ್ವಭೌಮ ಎಂದು ಮುಖ್ಯಮಂತ್ರಿಗೆ ಟ್ವೀಟ್ ಮೂಲಕ ನಟ ಜಗ್ಗೇಶ್ ಅವರು ಆಗ್ರಹಿಸಿದ್ದಾರೆ.

ನಮ್ಮ ಕರುನಾಡ ಧ್ವಜ ಸುಟ್ಟ ಹೇಡಿಗಳಿಗೆ ತಕ್ಕ ಶಿಕ್ಷೆ ಆಗಲೇಬೇಕು. ನಿಜವಾಗಿ ಕನ್ನಡಪರ ಹೋರಾಟ ಮಾಡುವವರನ್ನು ಬಿಡುಗಡೆಗೊಳಿಸಿ. ಕನ್ನಡ ತಾಯಿ, ತಾಯಿನಾಡು ವಿಷಯಕ್ಕೆ ಈ ರೀತಿ ಅವಮಾನ ಮಾಡಿರುವವರಿಗೆ ತಕ್ಕ ಪಾಠ ಕಲಿಸಲೇಬೇಕು. ದಯಮಾಡಿ ತಕ್ಕ ಕ್ರಮ ಕೈಗೊಳ್ಳಬೇಕಾಗಿ ವಿನಂತಿ ಎಂದು ದರ್ಶನ್ ಅವರು ಟ್ವೀಟ್ ಮೂಲಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಟ್ವೀಟ್ ಖಾತೆಯನ್ನು ತಮ್ಮ ಟ್ವೀಟ್ ಗೆ ಟ್ಯಾಗ್ ಮಾಡಿದ್ದಾರೆ. ಆ ಮೂಲಕ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಕ್ರಿಪ್ಟೋಕರೆನ್ಸಿ ಜಾಗತಿಕ ನೀತಿ ಮುಖ್ಯ

0

ಕ್ರಿಪ್ಟೋಕರೆನ್ಸಿಗಳನ್ನು ನಿಯಂತ್ರಣಕ್ಕೆ ಒಳಪಡಿಸಬೇಕಾದ ಅಗತ್ಯವಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿಯ ಮುಖ್ಯ ಅರ್ಥಶಾಸ್ತ್ರಜ್ಞೆ ಗೀತಾ ಗೋಪಿನಾಥ್ ತಿಳಿಸಿದ್ದಾರೆ.

ಪ್ರವರ್ಧಮಾನಕ್ಕೆ ಬರುತ್ತಿರುವ ಅರ್ಥ ವ್ಯವಸ್ಥೆಗಳ ಪಾಲಿಗೆ ಕ್ರಿಪ್ಟೋಕರೆನ್ಸಿ ಗಳು ಒಂದು ಸವಾಲು. ಅಲ್ಲಿ ಕ್ರಿಪ್ಟೋಕರೆನ್ಸಿ ಗಳ ಬಳಕೆಯು ಹೆಚ್ಚು ಆಕರ್ಷಕವಾಗಿರುತ್ತದೆ ಎಂದು ಗೀತಾ ಅವರು ರಾಷ್ಟ್ರೀಯ ಅರ್ಥಶಾಸ್ತ್ರ ಸಂಶೋಧನಾ ಮಂಡಳಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ತಿಳಿಸಿದ್ದಾರೆ.

ಕ್ರಿಪ್ಟೋಕರೆನ್ಸಿ ಗಳನ್ನು ಕಾನೂನಿನ ನಿಯಂತ್ರಣಕ್ಕೆ ಒಳಪಡಿಸುವ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ದೇಶದಲ್ಲಿ ಈಗ ಕ್ರಿಪ್ಟೋಕರೆನ್ಸಿ ಗಳಿಗೆ ನಿಷೇಧವೂ ಇಲ್ಲ. ಅವುಗಳನ್ನು ನಿಯಂತ್ರಣಕ್ಕೆ ಒಳಪಡಿಸುವ ಕಾನೂನು ಸಹ ಒಳಗೊಂಡಿಲ್ಲ.

ಈ ಕರೆನ್ಸಿಗಳನ್ನು ನಿಯಂತ್ರಿಸಬೇಕಾದ ಅಗತ್ಯ ಇದೆ. ವಿಶ್ವದಾದ್ಯಂತ ಅನೇಕ ದೇಶಗಳು ವಿಧವಿಧವಾದ ಕ್ರಮಗಳನ್ನು ಕೈಗೊಳ್ಳಲು ಮುಂದಾಗುತ್ತಿವೆ. ಇವುಗಳನ್ನು ನಿಷೇಧಿಸುವುದರ ಲ್ಲಿಯೂ ಸವಾಲುಗಳಿವೆ ಎಂದು ಅವರು ತಿಳಿಸಿದ್ದಾರೆ.

ಕ್ರಿಪ್ಟೋಕರೆನ್ಸಿ ವೈವಾಟು ಗಳು ದೇಶಗಳ ಗಡಿಗಳನ್ನು ಮೀರಿ ನಡೆಯುವ ಕಾರಣ, ಕ್ರಿಪ್ಟೋಕರೆನ್ಸಿ ಗಳಿಂದ ಸೃಷ್ಟಿಯಾಗುವ ಸಮಸ್ಯೆಗಳನ್ನು ಬಗೆಹರಿಸುವುದು ಯಾವುದೇ ದೇಶದಿಂದ ಸಾಧ್ಯವಿಲ್ಲ. ಆದ್ದರಿಂದ ಈ ವಿಚಾರವಾಗಿ ಜಾಗತಿಕ ಮಟ್ಟದಲ್ಲಿ ನೀತಿಯನ್ನು ರೂಪಿಸಬೇಕು ಎಂದು ಅವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಭಾರತದಲ್ಲಿ ಹಣದುಬ್ಬರ ಪ್ರಮಾಣವು ಹೆಚ್ಚಿನ ಮಟ್ಟದಲ್ಲಿದೆ. ಈ ಸಂದರ್ಭದಲ್ಲಿ ಹೊಂದಾಣಿಕೆಯ ಹಣಕಾಸು ನೀತಿಯನ್ನು ಇನ್ನು ಕೆಲವು ತಿಂಗಳವರೆಗೂ ಮುಂದುವರಿಸಬೇಕು.

ಅನಂತರದಲ್ಲಿ ಹಂತಹಂತವಾಗಿ ಈ ನೀತಿಯಿಂದ ಹಿಂದಕ್ಕೆ ಸರಿಯಬಹುದು ಎಂದು ಗೀತಾ ಅವರು ತಿಳಿಸಿದರು. ದೇಶದ ಸಗಟು ಹಣದುಬ್ಬರ ದರವು ನವೆಂಬರ್ ತಿಂಗಳಿನಲ್ಲಿ ಶೇ.14.23 ಕ್ಕೆ ತಲುಪಿದೆ. ಇದು ಹನ್ನೆರಡು ವರ್ಷಗಳ ಗರಿಷ್ಠ ಮಟ್ಟ. ಹೊಂದಾಣಿಕೆಯ ಹಣಕಾಸು ನೀತಿಯನ್ನು ಮುಂದುವರಿಸಿ ಕೊಳ್ಳುವುದರ ಜೊತೆಯಲ್ಲಿ ಹಣದುಬ್ಬರ ಪ್ರಮಾಣದ ಮೇಲೆ ಗಮನ ನೀಡಬೇಕು ಎಂದು ಅಂತರಾಷ್ಟ್ರೀಯ ಹಣಕಾಸು ನಿಧಿಯ ಮುಖ್ಯ ಅರ್ಥಶಾಸ್ತ್ರಜ್ಞೆ ಗೀತಾ ಗೋಪಿನಾಥ್ ಅವರು ತಿಳಿಸಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಬಸಿಗಾಲುವೆ ಕಾಮಗಾರಿ ಅನುದಾನಕ್ಕೆ ಮನವಿ

0

ಕೇಂದ್ರದ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಪ್ರಮುಖ ಜಲಾಶಯಗಳ ವ್ಯಾಪ್ತಿಯಲ್ಲಿ ಬಸಿಗಾಲುವೆ ಕಾಮಗಾರಿಕೆ 158 ಕೋಟಿ ರೂ. ಅನುದಾನ ಬಿಡುಗಡೆ ಮಾಡುವಂತೆ ಸಂಸದ ಬಿವೈ ರಾಘವೇಂದ್ರ ಅವರು ಮನವಿ ಸಲ್ಲಿಸಿದರು.

ಶಿವಮೊಗ್ಗ ಜಿಲ್ಲೆಯ ಸಂಸದ ಬಿ.ವೈ.ರಾಘವೇಂದ್ರ ಅವರ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಅಂಬ್ಲಿಗೊಳ ಜಲಾಶಯ, ಭದ್ರಾ ಯೋಜನೆ, ಜಂಬದಹಳ್ಳ, ಗೊಂದಿ, ತುಂಗಾ ಅಣೆಕಟ್ಟು ಯೋಜನೆ ಮತ್ತು ತುಂಗಾ ಮೇಲ್ದಂಡೆ ಯೋಜನೆ ಪ್ರದೇಶಗಳ ಒಟ್ಟು 21,350 ಹೆಕ್ಟೇರ್ ನಲ್ಲಿ ಬಸಿಗಾಲುವೆ ನಿರ್ಮಿಸಬೇಕಾಗಿದೆ. ಬಸಿಗಾಲುವೆ ಕಾಮಗಾರಿಯಿಂದ ಭೂಮಿಯಲ್ಲಿ ನೀರಿನ ಹಾಗೂ ಉಪ್ಪಿನ ಅಂಶ ಕಡಿಮೆಯಾಗಿ ತೋಟ ಹಾಗೂ ಕೃಷಿ ಬೆಳೆಯಲ್ಲಿ ಹೆಚ್ಚು ಇಳುವರಿಯನ್ನು ಪಡೆಯಬಹುದಾಗಿದೆ.

ಈ ನಿಟ್ಟಿನಲ್ಲಿ ಕಾಮಗಾರಿಗೆ ಅಗತ್ಯವಾದ ಅನುದಾನವನ್ನು ಬಿಡುಗಡೆ ಮಾಡಬೇಕೆಂದು ಸಂಸದ ಬಿ.ವೈ.ರಾಘವೇಂದ್ರ ಅವರು ಕೇಂದ್ರ ಜಲಸಂಪನ್ಮೂಲ ಸಚಿವರಲ್ಲಿ ವಿನಂತಿಸಿದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಭತ್ತ ಖರೀದಿ ನೋಂದಣಿ ಪ್ರಕ್ರಿಯೆ ಆರಂಭ

0

ರಾಜ್ಯ ಸರ್ಕಾರ ರೈತರಿಂದ ಭತ್ತ ಖರೀದಿಸಲು ಭತ್ತಕ್ಕೆ ಬೆಂಬಲ ಬೆಲೆ ನೊಂದಣಿ ಪ್ರಕ್ರಿಯೆ ಆರಂಭಿಸಿದೆ.

ಪ್ರಸ್ತುತ ಸಾಲಿನ ಮುಂಗಾರಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿ ಕೇಂದ್ರಗಳಲ್ಲಿ ನೊಂದಣಿ ಪ್ರಕ್ರಿಯೆ ಆರಂಭಗೊಂಡಿದೆ ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದ್ದಾರೆ.

ಶಿವಮೊಗ್ಗ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕುಗಳ ಎಪಿಎಂಸಿ ಆವರಣದಲ್ಲಿರುವ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಖರೀದಿ ಕೇಂದ್ರಗಳಲ್ಲಿ ಭತ್ತ ಖರೀದಿಸಲಾಗುತ್ತಿದೆ. ರೈತರು ಈ ಸದವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಪ್ರತಿ ಎಕರೆಗೆ 25 ಕ್ವಿಂಟಾಲ್ ನಂತೆ ಹಾಗೂ ಗರಿಷ್ಠ 40 ಕ್ವಿಂಟಾಲ್ ಮೀರದಂತೆ ಭತ್ತವನ್ನು ನೀಡಲು ರೈತರು ಇಚ್ಚಿಸಿದರೆ ಖರೀದಿ ಕೇಂದ್ರಗಳಲ್ಲಿ ಕೃಷಿ ಇಲಾಖೆಯಿಂದ ಜಾರಿಗೊಳಿಸಿರುವ ಫ್ರೂಟ್ಸ್ ತಂತ್ರಾಂಶದ ಗುರುತಿನ ಪತ್ರ, ಆಧಾರ್ ಸಂಖ್ಯೆ ಮತ್ತು ತಮ್ಮ ಬ್ಯಾಂಕ್ ಖಾತೆಯ ಎಲ್ಲಾ ವಿವರ ಹೊಂದಿರುವ ಪಾಸ್ ಬುಕ್ ಇತ್ತೀಚಿನ ದೃಡೀಕೃತ ಪ್ರತಿಯೊಂದಿಗೆ ಹೆಸರನ್ನು ನೋಂದಣಿ ಮಾಡಿಕೊಳ್ಳಬಹುದು ಎಂದು ತಿಳಿಸಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಓಮಿಕ್ರಾನ್ ಪೂರ್ಣಲಕ್ಷಣ ಡಿಸೆಂಬರಿನಲ್ಲಿ ಲಭ್ಯ

0

ಕೋವಿಡ್ ವೈರಸ್ ನ ರೂಪಾಂತರಿ ತಳಿ ಓಮಿಕ್ರಾನ್ ನ ಪ್ರಭಾವದಿಂದ ಉಂಟಾಗುವ ಪರಿಣಾಮ ಕುರಿತಂತೆ ಡಿಸೆಂಬರ್ ತಿಂಗಳ ಅಂತ್ಯದಲ್ಲಿ ಸಂಪೂರ್ಣ ಸ್ಪಷ್ಟ ಚಿತ್ರಣ ದೊರೆಯಲಿದೆ ಎಂದು ಹಿರಿಯ ವೈರಾಣು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಹಿರಿಯ ವಿಜ್ಞಾನಿ ಹಾಗೂ ಇನ್ಸ್ಟಿಟ್ಯೂಟ್ ಆಫ್ ಜಿನೊಮಿಕ್ಸ್ ಮತ್ತು ಇಂಟಿಗ್ರೇಟೆಡ್ ಬಯೋಲಜಿ (ಐಜಿಐಬಿ) ನಿರ್ದೇಶಕರಾದ ಡಾ.ಅನುರಾಗ್ ಅಗರ್ವಾಲ್ ಅವರು “ವೈರಾಣುಗಳು ಹೊಸ ರೂಪಾಂತರಿಗಳ ದಾಳಿಯು ಆರಂಭದಲ್ಲಿ ಸೌಮ್ಯ ಲಕ್ಷಣ ಗಳಿಂದಲೇ ಕೂಡಿರುತ್ತದೆ. ಹಾಗಂತ ನಿರ್ಲಕ್ಷ್ಯ ಮಾಡಿದಲ್ಲಿ ಹೆಚ್ಚಿನ ಜನಸಂಖ್ಯೆಯು ಸೋಂಕಿಗೆ ತುತ್ತಾಗಿ, ಗಂಭೀರ ಅನಾರೋಗ್ಯ ತೊಂದರೆಗೆ ಈಡಾಗುತ್ತಾರೆ. ಇದರ ಪರಿಣಾಮ ಆರೋಗ್ಯ ವ್ಯವಸ್ಥೆಯ ಮೇಲೆ ಒತ್ತಡ ಹೆಚ್ಚುತ್ತದೆ. ಓಮಿಕ್ರಾನ್ ಆರ್ಭಟದ ಬಗ್ಗೆ ಡಿಸೆಂಬರ್ ಅಂತ್ಯಕ್ಕೆ ಸ್ಪಷ್ಟ ಚಿತ್ರಣ ಸಿಗಲಿದೆ” ಎಂದು ತಿಳಿಸಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಜ.ನರವಣೆ ಸಿಡಿಎಸ್ ತಾತ್ಕಾಲಿಕ ಕಾರ್ಯಾಧ್ಯಕ್ಷರು.

0

ಇತ್ತೀಚಿಗಷ್ಟೇ, ಭಾರತೀಯ ರಕ್ಷಣಾ ಪಡೆಗಳ ಮುಖ್ಯಸ್ಥ ಜ. ಬಿಪಿನ್ ರಾವತ್ ಹೆಲಿಕ್ಯಾಪ್ಟರ್ ಅಪಘಾತದಲ್ಲಿ ಅಸುನೀಗಿದ್ದರು. ಅದರಿಂದ ತೆರವಾದ ಸಿಡಿಎಸ್ ಮುಖ್ಯಸ್ಥರ ಸಮಿತಿಗೆ ತಾತ್ಕಾಲಿಕ ಕಾರ್ಯಾಧ್ಯಕ್ಷರಾಗಿ ಜ. ಎನ್.ಎಂ. ನರವಣೆ ಅವರಿಗೆ ಕಾರ್ಯಭಾರ ವಹಿಸಲಾಗಿದೆ.

ಇದು ಅಧಿಕೃತ ಕ್ರಮಗಳಲ್ಲಿ ಒಂದು ಪ್ರಕ್ರಿಯೆಯಾಗಿದೆ. ನೂತನ ಮುಖ್ಯಸ್ಥರ ನೇಮಕಾತಿವರೆಗೆ, ತಾತ್ಕಾಲಿಕವಾಗಿ ಜ. ಸರವಣೆ ಅವರು ಕಾರ್ಯಭಾರ ನಿರ್ವಹಿಸುತ್ತಾರೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಹೆಣ್ಣುಮಕ್ಕಳ ವಿವಾಹದ ವಯಸ್ಸು 21 ಕ್ಕೆ ಏರಿಕೆ

0

ಹೆಣ್ಣುಮಕ್ಕಳ ವಿವಾಹದ ವಯಸ್ಸು ಕನಿಷ್ಠ ಈಗಿನ 18 ವರ್ಷದಿಂದ 21 ವರ್ಷಕ್ಕೆ ಏರಿಸುವ ಬಗ್ಗೆ ಕಾಯ್ದೆ ರೂಪಿಸಲು ಕೇಂದ್ರ ಸರ್ಕಾರ ಸಂಪುಟ ಸಭೆಯಲ್ಲಿ ಒಪ್ಪಿಗೆಯನ್ನು ನೀಡಿದೆ.

ವಿವಾಹದ ಕನಿಷ್ಠ ವಯಸ್ಸು 43 ವರ್ಷದ ನಂತರ ಬದಲಾವಣೆಯಾಗಿದೆ. ಬಾಲ್ಯ ವಿವಾಹ ನಿರ್ಬಂಧ ಕಾಯ್ದೆ 1929 ಕ್ಕೆ 1978 ರಲ್ಲಿ ತಿದ್ದುಪಡಿ ತರಲಾಗಿದೆ. ಹೆಣ್ಣುಮಕ್ಕಳ ಮದುವೆಯ ಕನಿಷ್ಠ ವಯಸ್ಸನ್ನು 15ರಿಂದ 18 ಕ್ಕೆ ಏರಿಸಲಾಗಿತ್ತು. ಬಾಲ್ಯ ವಿವಾಹ ತಡೆ ಕಾಯ್ದೆಯನ್ನು 2006 ರಲ್ಲಿ ತರಲಾಗಿತ್ತು. ಮೊದಲಿಗೆ ಬಾಲ್ಯ ವಿವಾಹ ತಡೆ ಕಾಯ್ದೆ 2006ಕ್ಕೆ ತಿದ್ದುಪಡಿ ಮಾಡಲಾಗಿತ್ತು. ಬಳಿಕ, ವಿಶೇಷ ವಿವಾಹ ಕಾಯ್ದೆ, ಹಿಂದೂ ವಿವಾಹ ಕಾಯ್ದೆ 1955 ಇಂತಹ ವೈಯಕ್ತಿಕ ಕಾನೂನು ಗಳಿಗೂ ತಿದ್ದುಪಡಿ ತರಬೇಕಾಗುತ್ತದೆ. ಈ ಎಲ್ಲಾ ಕಾಯ್ದೆಗಳಲ್ಲಿ ಹೆಣ್ಣಿನ ವಿವಾಹದ ಕನಿಷ್ಠ ವಯಸ್ಸು 18 ಹಾಗೂ ಗಂಡಿನ ಮದುವೆಯ ವಯಸ್ಸು ಕನಿಷ್ಠ 21 ಎಂದು ಪರಿಗಣಿಸಲಾಗಿತ್ತು.

ಸಮತಾ ಪಾರ್ಟಿಯ ಮುಖ್ಯಸ್ಥೆಯಾಗಿದ್ದ, ಜಯಾ ಜೇಟ್ಲಿ ಅವರ ನೇತೃತ್ವದಲ್ಲಿ ನೀತಿ ಆಯೋಗವು 2020 ರ ಜೂನ್ ತಿಂಗಳಿನಲ್ಲಿ ಕಾರ್ಯಪಡೆಯೊಂದನ್ನು ರಚಿಸಿತ್ತು.

ತಾಯಿಯಾಗುವ ವಯಸ್ಸು, ಹೆರಿಗೆ ಸಂದರ್ಭದಲ್ಲಿ ತಾಯಿಯಂದಿರ ಸಾವಿನ ಪ್ರಮಾಣ ತಗ್ಗಿಸುವುದು, ಮಹಿಳೆಯರು ಹಾಗೂ ಮಕ್ಕಳ ಪೌಷ್ಠಿಕತೆ ಹೆಚ್ಚಳದಂತಹ ವಿಚಾರಗಳ ಬಗ್ಗೆ ಶಿಫಾರಸುಗಳನ್ನು ಸಲ್ಲಿಸುವುದು ಈ ಕಾರ್ಯಪಡೆಯ ಉದ್ದೇಶವಾಗಿತ್ತು.

ಕಾರ್ಯಪಡೆಯು ಯುವಜನರು ಮತ್ತು ಸಂಘಟನೆಗಳ ಜೊತೆಗೆ ಸಮಾಲೋಚನೆ ನಡೆಸಿತ್ತು. ದೇಶದ ಎಲ್ಲೆಡೆ 16 ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳಿಗೆ ಪ್ರಶ್ನಾವಳಿ ಕೊಟ್ಟು ಪ್ರತಿಕ್ರಿಯೆಯನ್ನು ಪಡೆದುಕೊಳ್ಳಲಾಯಿತು. ವಿವಾಹದ ಕನಿಷ್ಠ ವಯಸ್ಸು 22 ಅಥವಾ 23 ವರ್ಷಕ್ಕೆ ಹೆಚ್ಚಿಸಬೇಕು ಎಂದು ಹೆಚ್ಚಿನವರು ಹೇಳಿದ್ದಾರೆ. ಆದರೆ, ಈಗ ವಿವಾಹದ ಕನಿಷ್ಠ ವಯಸ್ಸನ್ನು 21 ವರ್ಷಕ್ಕೆ ಏರಿಸಲು ಶಿಫಾರಸು ಮಾಡಿದ್ದೇವೆ ಎಂದು ಜಯಾ ಜೇಟ್ಲಿ ಅವರು ತಿಳಿಸಿದ್ದಾರೆ.

ತಾಯಂದಿರು ಹಾಗೂ ನವಜಾತ ಶಿಶುಗಳು ಅಪೌಷ್ಟಿಕತೆಯಿಂದ ಬಳಲದಂತೆ ನೋಡಿಕೊಳ್ಳಬೇಕು. ಹೆಣ್ಣು ಮಕ್ಕಳ ಆರೋಗ್ಯ ತಪಾಸಣೆಯನ್ನು ಶಾಲೆಯಲ್ಲಿ ಪ್ರತಿ ತಿಂಗಳು ನಡೆಸುವ ವ್ಯವಸ್ಥೆ ಮಾಡಬೇಕು. ಈ ಅಂಶಗಳು ಶಿಫಾರಸಿನಲ್ಲಿದೆ. ಶಾಲಾ ಪಠ್ಯ ಕ್ರಮದಲ್ಲಿ ಲೈಂಗಿಕ ಶಿಕ್ಷಣವನ್ನೂ ಸೇರಿಸಬೇಕು ಎಂಬ ಸಲಹೆಯನ್ನೂ ನೀಡಲಾಗಿದೆ.

ಶೇ.50ರಿಂದ 60 ರಷ್ಟು ಹೆಣ್ಣು ಮಕ್ಕಳಿಗೆ 21 ವರ್ಷಕ್ಕೆ ಮೊದಲೇ ವಿವಾಹವಾಗುತ್ತಿದೆ. ಕಾಯ್ದೆಗೆ ತಿದ್ದುಪಡಿ ಆದರೆ, ಇಂತಹ ಎಲ್ಲಾ ವಿವಾಹವು ಅಪರಾಧ ಎಂದು ಪರಿಗಣಿತವಾಗುತ್ತದೆ.

ಕಾಯ್ದೆಯಿಂದ ಮಾತ್ರ ಬದಲಾವಣೆ ಸಾಧ್ಯವಿಲ್ಲ. ಮೇಲ್ಮಧ್ಯಮ ಹಾಗೂ ಮಧ್ಯಮ ವರ್ಗದ ಕುಟುಂಬಗಳಲ್ಲಿ ಹೆಣ್ಣುಮಕ್ಕಳ ವಿವಾಹ 21 ವರ್ಷಗಳಿಗಿಂತಲೂ ಬಹಳ ತಡವಾಗಿ ಆಗುತ್ತದೆ. ಕಾಯ್ದೆಯ ನಿರ್ಬಂಧ ಇಲ್ಲದೆಯೇ ಇದು ಸಾಧ್ಯವಾಗಿದೆ ಎಂದು ಆಕ್ಸ್ ಫ್ಯಾಮ್ ಇಂಡಿಯಾದ ಲಿಂಗತ್ವ ನ್ಯಾಯ ಘಟಕದ ಪ್ರಧಾನ ತಜ್ಞೆ ಅಮಿತಾ ಪಿತ್ರೆ ಅವರು ಹೇಳಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಶಿವಮೊಗ್ಗದಲ್ಲಿ ಜವಳಿ ವರ್ತಕರ ಪ್ರತಿಭಟನೆ

0

ಬಟ್ಟೆಗಳ ಮೇಲಿನ ಜಿಎಸ್ ಟಿ ಏರಿಕೆ ಮಾಡುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಶಿವಮೊಗ್ಗದ ಜವಳಿ ವರ್ತಕರು, ತಮ್ಮ ಅಂಗಡಿಗಳನ್ನು ಬಂದ್ ಮಾಡಿದ್ದರು. ನಂತರ ಶಿವಮೊಗ್ಗ ನಗರದ ರಾಮಣ್ಣ ಶ್ರೇಷ್ಠಿ ಪಾರ್ಕ್ ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ.

ಮುಂದಿನ ವರ್ಷದ ಮೊದಲ ತಿಂಗಳಿನಿಂದ ಕೇಂದ್ರ ಸರ್ಕಾರವು ಬಟ್ಟೆಗಳ ಮೇಲೆ ಶೇ.5 ರಷ್ಟಿದ್ದ, ಜಿಎಸ್ ಟಿ ದರವನ್ನು ಶೇ.12ಕ್ಕೆ ಏರಿಸುತ್ತಿದೆ.

ಪ್ರತಿಯೊಬ್ಬ ಮನುಷ್ಯನಿಗೂ ಮೂಲಭೂತ ಸೌಕರ್ಯಗಳಲ್ಲಿ ಉಡುಪು ಪ್ರಮುಖವಾಗಿದೆ. ಈ ಮೂಲಭೂತ ವಸ್ತುವಿನ ಮೇಲೆ ಜಿಎಸ್ ಟಿ ಹೇರುತ್ತಿರುವುದು, ಅನ್ಯಾಯದ ಪರಮಾವಧಿ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ಕೊರೋನಾ ಲಾಕ್ ಡೌನ್ ಕಾರಣದಿಂದ ಎರಡು ವರ್ಷಗಳಿಂದ ಜವಳಿ ವರ್ತಕರಿಗೆ ವ್ಯಾಪಾರವೇ ಇಲ್ಲದಂತೆ ಆಗಿದೆ. ಅವರ ಬದುಕು ದುಸ್ತರವಾಗಿದೆ. ಈಗಲೂ ಸಹ ಚೇತರಿಸಿಕೊಳ್ಳಲಾಗದೇ ಪರದಾಡುತ್ತಿದ್ದಾರೆ.
ಈ ಸಂದರ್ಭದಲ್ಲಿ ಅವರಿಗೆ ಗಾಯದ ಮೇಲೆ ಬರೆ ಎಳೆದಂತೆ ಕೇಂದ್ರಸರ್ಕಾರ ಮತ್ತೆ ಜಿಎಸ್ ಟಿ ದರವನ್ನು ಏರಿಕೆ ಮಾಡುತ್ತಿರುವುದು ಖಂಡನೀಯ ಎಂದು ಆರೋಪಿಸಿದ್ದಾರೆ.

ಜಿಎಸ್ ಟಿ ಹೆಚ್ಚಳ ಮಾಡಿದರೆ ಗ್ರಾಹಕರಿಗೆ ಹೊರೆಯಾಗಲಿದೆ. ಪ್ರಸ್ತುತ ಇರುವ ಶೇ.5ರಷ್ಟು ಜಿಎಸ್ ಟಿ ದರವೇ ಹೊರೆಯಾಗಿದೆ. ಇದನ್ನು ಈಗ ಶೇ. 12 ಕ್ಕೆ ಹೆಚ್ಚಿಸುತ್ತಿರುವುದು, ಗುಬ್ಬಿಯ ಮೇಲೆ ಬ್ರಹ್ಮಾಸ್ತ್ರ ಹುಡಿದಂತಾಗುತ್ತಿದೆ ಎಂದು ಟೀಕಿಸಿದ್ದಾರೆ.

ಪ್ರತಿಭಟನಾ ಸಂದರ್ಭದಲ್ಲಿ ಜವಳಿ ವರ್ತಕರ ಸಂಘದ ಅಧ್ಯಕ್ಷ ಟಿ. ಆರ್. ವೆಂಕಟೇಶಮೂರ್ತಿ, ಪ್ರಧಾನ ಕಾರ್ಯದರ್ಶಿ ಪಿ. ವಿ. ಪ್ರಭಾಕರ್ ಇನ್ನು ಮುಂತಾದವರು ಉಪಸ್ಥಿತರಿದ್ದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಬಗರ್ ಹುಕುಂ ಸಾಗುವಳಿ ರೈತರ ಪ್ರತಿಭಟನೆ

0

ಶಿವಮೊಗ್ಗದ, ಅಗಸವಳ್ಳಿ ಗ್ರಾಮದ ರೈತರು ಹಲವು ವರ್ಷಗಳಿಂದ ಬಗರ್ ಹುಕುಂ ಸಾಗುವಳಿ ಮಾಡಿಕೊಂಡು ಬರುತ್ತಿದ್ದಾರೆ. ಬಗರ್ ಹುಕುಂ ರೈತರಿಗೆ ಸಾಗುವಳಿ ಚೀಟಿ ನೀಡುವಂತೆ ಆಗ್ರಹಿಸಿ, ಇಲ್ಲಿನ ರೈತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಅಗಸವಳ್ಳಿಯ ರೈತರು ಸುಮಾರು ಐವತ್ತು ವರ್ಷಗಳಿಂದ ಬಗರ್ ಹುಕುಂ ಸಾಗುವಳಿ ಮಾಡಿಕೊಂಡು ಬರುತ್ತಿದ್ದಾರೆ. ಸರ್ಕಾರಕ್ಕೆ ಈ ಬಗ್ಗೆ ಫಾರಂ ನಂ.50,53 ಹಾಗೂ 57 ರಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಸಾಗುವಳಿದಾರರು ಎಲ್ಲಾ ಹಿಂದುಳಿದ ವರ್ಗಗಳಿಗೆ ಸೇರಿದವರಾಗಿದ್ದಾರೆ. ಬಗರ್ ಹುಕುಂ ಸಾಗುವಳಿಯಿಂದಲೇ ರೈತರ ಜೀವನ ನಡೆಯಬೇಕಾಗಿದೆ. ಕೆಲವರು ಸುಳ್ಳು ಹೇಳಿ ನಿವೇಶನ ಪಡೆದುಕೊಂಡಿದ್ದಾರೆ. ಆದ್ದರಿಂದ ನಿಜವಾದ ಸಾಗುವಳಿದಾರರಿಗೆ ಸಾಗುವಳಿ ಚೀಟಿ ಕೊಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಸರ್ಕಾರವು ಈ ಹಿಂದೆ ಬಗರ್ ಹುಕುಂ ಜಮೀನುಗಳನ್ನು ಸರ್ವೆ ಮಾಡಲು ಆದೇಶವನ್ನು ನೀಡಿತ್ತು. ಆದರೆ, ಸರ್ವೆ ನಡೆಯಲಿಲ್ಲ. 2008ರಲ್ಲಿ ಸರ್ವೆ ನಡೆದಿದೆ. ಅದರ ಪ್ರಕಾರವೇ ಸಾಗುವಳಿ ಚೀಟಿ ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಟಿ. ಪೆರುಮಾಳ್, ಗಂಗಾಧರ್, ಓಂಕಾರಪ್ಪ ಹೀಗೆ ಹಲವಾರು ಮಂದಿ ಉಪಸ್ಥಿತರಿದ್ದರು.