Monday, August 10, 2026
Monday, August 10, 2026
Home Blog Page 183

Madhu Bangarappa ಸಂಪರ್ಕ ಸಭೆಯಲ್ಲಿ 65 ಕ್ಕೂ ಹೆಚ್ಚು ಅರ್ಜಿಗಳ ವಿಲೇವಾರಿ ಮಾಡಿದ ಸಚಿವ ಮಧು ಬಂಗಾರಪ್ಪ

0

Madhu Bangarappa ಚಂದ್ರಗುತ್ತಿಯಲ್ಲಿ ನಡೆದ ಜನ ಸಂಪರ್ಕ ಸಭೆಯಲ್ಲಿ‌ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು‌ ಬಂಗಾರಪ್ಪನವರು ಬಗರ್ ಹುಕುಂ, ಕುಡಿಯುವ ನೀರಿನ ಸಮಸ್ಯೆ, ರಸ್ತೆಗಳ ಡಾಂಬರೀಕರಣ, ಭೂ ದಾಖಲೆಗಳ ತಿದ್ದುಪಡಿ, ಮೆಸ್ಕಾಂ‌ ಇಲಾಖೆ ಸೇರಿದಂತೆ
65ಕ್ಕೂ ಹೆಚ್ಚು ಅರ್ಜಿಗಳನ್ನು‌ ಸಾರ್ಜನಿಕರಿಂದ ಸ್ವೀಕರಿಸಿ, ಸ್ಥಳದಲ್ಲೇ ಪರಿಶೀಲಿಸಿ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮ‌ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.

Madhu Bangarappa ಗುಡ್ಡೆಕೊಪ್ಪದ ಗ್ರಾಮಸ್ಥರು, ೨೦೨೧ ರಿಂದ ಸರ್ವೇ ಕಾರ್ಯ ಆಗಿಲ್ಲವೆಂದು, ಚಂದ್ರಗುತ್ತಿಯಲ್ಲಿ ಸಮಗ್ರ ವಿದ್ಯುತ್ ಪೂರೈಕೆ ಆಗುತ್ತಿಲ್ಲವೆಂದು ಅರ್ಜಿ ನೀಡಿದರು.
ತ್ಯಾವರೆತಪ್ಪ ಗ್ರಾಮದಲ್ಲಿ ಸ್ಮಶಾನ ಜಾಗದಲ್ಲಿ‌ ಕಲ್ಲು‌ಕ್ವಾರಿ ಚಟುವಟಿಕೆ ನಡೆಯುತ್ತಿದ್ದು ಅದನ್ನು ತೆರವುಗೊಳಿಸಬೇಕೆಂದು ಹಾಗೂ ಗ್ರಾಮದ ಕೆಲವರು ತಮಗೆ ಪಡಿತರ ಚೀಟಿಗಳನ್ನು ಕೊಡಿಸುವಂತೆ ಮನವಿ‌ ಮಾಡಿದರು.
ಪುರದೂರು ಗ್ರಾಮ‌ದ ಪ್ರವಾಹದ ಸಂತ್ರಸ್ತರು ಸೂಕ್ತ ದಾಖಲೆಗಳನ್ನು‌ ನೀಡಿರಿ‌, ಮನೆಗಳನ್ನು ಒದಗಿಸಲಾಗುವುದು ಎಂದು ಸಚಿವರು ತಿಳಿಸಿದರು.

Department of Soldiers Welfare and Rehabilitation ಡೆಹ್ರಾಡೂನ್ ಶಾಲೆಯ 8 ನೇ ತರಗತಿಗೆ ಪ್ರವೇಶಾತಿಗೆ ಅರ್ಹತಾ ಪರೀಕ್ಷೆ

0

Department of Soldiers Welfare and Rehabilitation ಜನವರಿ 2027ನೇ ಅಧಿವೇಶನಕ್ಕಾಗಿ ಡೆಹರಾಡೂನ್ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್‌ನಲ್ಲಿ 8ನೇ ತರಗತಿಗೆ ಪ್ರವೇಶ ಬಯಸುವ ಕರ್ನಾಟಕ ರಾಜ್ಯದ 02-01-2014 ರಿಂದ 01-07-2015 ರೊಳಗೆ ಜನಿಸಿರುವ ಬಾಲಕ ಮತ್ತು ಬಾಲಕಿಯರಿಗೆ ಅರ್ಹತಾ ಪ್ರವೇಶ ಪರೀಕ್ಷೆಯು ದಿನಾಂಕ: 07-06-2026 ರಂದು ಬೆಂಗಳೂರು ಕೇಂದ್ರದಲ್ಲಿ ನಡೆಯಲಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.

ಭರ್ತಿ ಮಾಡಿದ ಅರ್ಜಿಯನ್ನು ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಬೆಂಗಳೂರು – 560025 ಇವರಿಗೆ ಏ. 05 ರೊಳಗಾಗಿ ಸಲ್ಲಿಸುವಂತೆ ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ನಿರ್ದೇಶನಾಲಯದ ದೂರವಾಣಿ ಸಂಖ್ಯೆ : 080-25589459 ಹಾಗೂ ಜಾಲತಾಣ www.rimc.gov.in ವನ್ನು ಸಂಪರ್ಕಿಸಬಹುದಾಗಿದೆ

Shivamogga District Minority Welfare Department ವಸತಿಶಾಲೆಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

0

Shivamogga District Minority Welfare Department ಶಿವಮೊಗ್ಗ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ / ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ 2026-27ನೇ ಸಾಲಿನ 6ನೇ ತರಗತಿಗೆ ಪ್ರವೇಶಾತಿಗಾಗಿ ಅಲ್ಪಸಂಖ್ಯಾತ ಸಮುದಾಯ ಹಾಗೂ ಹಿಂದೂಳಿದ ವರ್ಗದ ಸಮುದಾಯದ ವಿದ್ಯಾರ್ಥಿಗಳಿಂದ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಿದೆ.
ವಿದ್ಯಾರ್ಥಿಯು ಸರ್ಕಾರದಿಂದ ಅನುಮೋದಿಸಲ್ಪಟ್ಟ ಶಾಲೆಯಿಂದ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರಬೇಕು/ಉತ್ತೀರ್ಣರಾಗಿರಬೇಕು. ದಾಖಲೆಗಳ ಪರಿಶೀಲನೆ ಸಂದರ್ಭದಲ್ಲಿ ಅಂಕಪಟ್ಟಿಯನ್ನು ಹೊಂದಿರಬೇಕು. ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿದ್ದು, 11 ರಿಂದ 13 ವರ್ಷದ ವಯೋಮಾನದವರಾಗಿರಬೇಕು.
ಅರ್ಹ ವಿದ್ಯಾರ್ಥಿಗಳು ಸೇವಾಸಿಂದು ಪೋರ್ಟಲ್ https://sevasindhuservices.karnataka.gov.in ರಲ್ಲಿ ಫೆ.28 ರೊಳಗಾಗಿ ಸಲ್ಲಿಸುವುದು. ಅಥವಾ ಹತ್ತಿರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ಶಾಲೆಗಳು, ಅಲ್ಪಸಂಖ್ಯಾತರ ತಾಲೂಕು ಮಾಹಿತಿ ಕೇಂದ್ರಗಳು ಮತ್ತು ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿಯೂ ಕೂಡ ಉಚಿತವಾಗಿ ಸಲ್ಲಿಸಬಹುದಾಗಿದೆ ಎಂದು ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿರುತ್ತಾರೆ.
Shivamogga District Minority Welfare Department ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, 1ನೇ ಮಹಡಿ, ಸತ್ಯಶ್ರೀ ಆರ್ಕೆಡ್ 5ನೇ ಪ್ಯಾರಲಲ್ ರಸ್ತೆ, ದುರ್ಗಿಗುಡಿ, ದೂ.ಸಂ.: 08182-220206, ಶಿವಮೊಗ್ಗ ಮೇಲಿನಹನಸವಾಡಿ ಡಾ|| ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಯ ಪ್ರಾಂಶುಪಾಲರು -9483623537, ಭದ್ರಾವತಿಯ ದೊಡ್ಡೆರಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರು-9591237905, ಶಿರಾಳಕೊಪ್ಪ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರು-8310350361, ಶಿಕಾರಿಪುರ ಉಡುಗಣಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರು -9036866642, ಸಾಗರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಳರು-9740800706, ಅಲ್ಪಸಂಖ್ಯಾತರ ಜಿಲ್ಲಾ ಮಾಹಿತಿ ಕೇಂದ್ರ ಶಿವಮೊಗ್ಗ-7676888388, ಅಲ್ಪಸಂಖ್ಯಾತರ ತಾಲೂಕು ಮಾಹಿತಿ ಕೇಂದ್ರ, ಭದ್ರಾವತಿ-9538853680, ತೀರ್ಥಹಳ್ಳಿ-8861982835, ಸೊರಬ-9513815513, ಶಿಕಾರಿಪುರ-7829136724, ಹೊಸನಗರ-9008447029, ಸಾಗರ-7338222907 ಗಳನ್ನು ಸಂಪರ್ಕಿಸುವುದು.

Karnataka Open University ರಾಜ್ಯದ ಮುಕ್ತ ವಿವಿಯಿಂದ ವಿವಿಧ ಕೋರ್ಸುಗಳ ಅಧ್ಯಯನಕ್ಕೆ ಪ್ರವೇಶಾತಿಗೆ ಅರ್ಜಿ ಆಹ್ವಾನ

0

Karnataka Open University ಕರ್ನಾಟಕರಾಜ್ಯ ಮುಕ್ತ ವಿಶ್ವವಿದ್ಯಾನಿಲಯ, ಮುಕ್ತ ಗಂಗೋತ್ರಿ, ಮೈಸೂರು-06, ರ ವತಿಯಿಂದ ಶಿವಮೊಗ್ಗ ಪ್ರಾದೇಶಿಕ ಕೇಂದ್ರದಲ್ಲಿ 2025-26ನೇ ಸಾಲಿನ ಶ್ಯೆಕ್ಷಣಿಕ ವರ್ಷದ ಜನವರಿ ಆವೃತಿಯ ಪ್ರಥಮ ವರ್ಷದ ಬಿ.ಎ,/ಬಿ.ಕಾಂ, ಬಿ.ಎಸ್ಸಿ, ಬಿ.ಸಿ.ಎ, ಬಿ.ಬಿ.ಎ, ಬಿ.ಎಲ್.ಐ.ಸಿ,ಬಿ.ಎಸ್.ಡಬ್ಲ್ಯೂ., ಎಂ.ಎ,/ಎಂ.ಕಾಂ,, ಎಂ.ಎಸ್.ಡಬ್ಲ್ಯೂ, ಎಂ.ಸಿಎ, ಎಂ.ಎಸ್ಸಿ, ಎಂ.ಬಿ.ಎ., ಎಂ.ಎಲ್.ಐ.ಎಸ್ಸಿ., ಪಿ.ಜಿ., ಡಿಪ್ಲೋಮಾ ಕೋರ್ಸ್ಗಳಿಗೆ ಪ್ರವೇಶಾತಿಗಾಗಿ ಮಾ.31ರೊಳಗಾಗಿ ಅರ್ಜಿ ಸಲ್ಲಿಸುವಂತೆ ಪ್ರಾದೇಶಿಕ ನಿಯಂತ್ರಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಬಿ.ಪಿ.ಎಲ್. ಪಡಿತರ ಚೀಟಿ ಹೊಂದಿರುವ ಮಹಿಳಾ ವಿದ್ಯಾರ್ಥಿನಿಯರಿಗೆ ಬೋಧನಾ ಶುಲ್ಕದಲ್ಲಿ ಶೇ 10%, ಡಿಫೆನ್ಸ್ ಹಾಗೂ ಎಕ್ಸ್ ಸರ್ವೀಸ್‌ಮೆನ್ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕದಲ್ಲಿ ಶೇ 10%, ಬ್ಯಾಡ್ಜ್ ಹೊಂದಿರುವ ಆಟೋ ಕ್ಯಾಬ್ ಚಾಲಕರು ಮತ್ತು ಅವರ ಮಕ್ಕಳಿಗೆ ಬೋಧನಾ ಶುಲ್ಕದಲ್ಲಿ ಶೇ 10% ರಿಯಾಯಿತಿ ನೀಡಲಾಗುತ್ತದೆ ಹಾಗೂ ತೃತೀಯಾ ಲಿಂಗದ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶಾತಿಯನ್ನು ನೀಡಲಾಗುತ್ತಿದೆ. ಐ.ಟಿ.ಐ. ಹಾಗೂ ಡಿಪ್ಲೋಮಾ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಪ್ರಥಮಬಿ.ಎ/ಬಿ.ಕಾಂ ಪ್ರವೇಶಾತಿಗೆ ಅವಕಾಶವಿರುತ್ತದೆ. ಪ್ರವೇಶಾತಿ ಪಡೆದ ವಿದ್ಯಾರ್ಥಿಗಳಿಗೆ ಸಂಬಂಧ ಪಟ್ಟ ದಾಖಲಾತಿಗಳನ್ನು ನೀಡಿದಲ್ಲಿ ವಿದ್ಯಾರ್ಥಿ ವೇತನವನ್ನು ಸರ್ಕಾರದಿಂದ ಪಡೆಯಬಹುದಾಗಿರುತ್ತದೆ.
Karnataka Open University ಹೆಚ್ಚಿನ ಮಾಹಿತಿಗಾಗಿ ಸ್ವಾಮಿ ಬಿ.ಎಮ್ ಪ್ರಾದೇಶಿಕ ನಿರ್ದೇಶಕರು, ಕ.ರಾ.ಮು.ವಿ ಪ್ರಾದೇಶಿಕ ಕೇಂದ್ರ, ಆಲ್ಕೋಳ, ಸರ್ಕಲ್, ಎಲ್.ಐ.ಸಿ. ಕಚೇರಿ ಹತ್ತಿರ, ಸಾಗರ ರಸ್ತೆ, ಶಿವಮೊಗ್ಗ, ದೂ.ಸಂ.: 9900667916/ 9739803295/ 9480765905 ಗಳನ್ನು ಸಂಪರ್ಕಿಸುವುದು.

Kote Sri Marikamba ಮಾರಿಕಾಂಬೆ ಜಾತ್ರೆ ಪ್ರಯುಕ್ತ ಶಿವಮೊಗ್ಗ ನಗರದಲ್ಲಿ ವಾಹನ ಸಂಚಾರಕ್ಕೆ ತಾತ್ಕಾಲಿಕ ಬದಲಿ ಮಾರ್ಗಸೂಚಿ- ಪ್ರಭುಲಿಂಗ ಕವಳಿಕಟ್ಟಿ

0

Kote Sri Marikamba ಕೋಟೆ ಶ್ರೀ ಮಾರಿಕಾಂಬ ದೇವರ ಜಾತ್ರಾ ಮಹೋತ್ಸವವು ಫೆ.24 ರಿಂದ 28 ರವರೆಗೆ ಜರುಗಲಿದ್ದು, ಈ ಸಂದರ್ಭದಲ್ಲಿ ರಾಜಬೀದಿ ಉತ್ಸವ, ಸಾಂಸ್ಕೃತಿಕ ಕಾರ್ಯಕ್ರಮಗಳು, ಪೂಜೆ/ಹರಕೆ/ಪ್ರಸಾದ ವಿನಿಯೋಗ, ರಾಜ್ಯ ಮಟ್ಟದ ಬಯಲು ಕುಸ್ತಿ ಹಾಗೂ ಇನ್ನಿತರ ಕಾರ್ಯಕ್ರಮಗಳು ನಡೆಯುವುದರಿಂದ ಜಾತ್ರಾ ಉತ್ಸವದಲ್ಲಿ ಸಾವಿರಾರು ಭಕ್ತಾದಿಗಳು ದೇವಸ್ಥಾನಕ್ಕೆ ಕಾರು, ದ್ವಿಚಕ್ರ, ಬಸ್ ಹಾಗೂ ಇತರೆ ವಾಹನಗಳಲ್ಲಿ ಬರುವುದರಿಂದ ವಾಹನ ಸಂಚಾರ ದಟ್ಟಣೆ ಹೆಚ್ಚಾಗುವ ಕಾರಣ ನಗರದ ಗಾಂಧಿಬಜಾರ್ ಮತ್ತು ಮಾರಿಕಾಂಬ ದೇವಸ್ಥಾನದ ಸುತ್ತಮುತ್ತಲಿನ ಹಾಗೂ ಹೊಳಬಸ್ ಸ್ಟ್ಯಾಪ್, ಶಂಕರಮಠ ರಸ್ತೆ, ಬಿ.ಹೆಚ್.ರಸ್ತೆ, ಕೋಟೆ ರಸ್ತೆ, ಎಸ್.ಪಿ.ಎಂ.ರಸ್ತೆ, ರಾಮಣ್ಣ ಶ್ರೇಷ್ಠಿ ಪಾರ್ಕ್, ಶಿವಪ್ಪ ನಾಯಕ ಸರ್ಕಲ್ ಹಾಗೂ ಸುತ್ತಮುತ್ತ ಸುಗುಮ ಸಂಚಾರದ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ ಮಾರ್ಗಗಳನ್ನು ಈ ಕೆಳಗಿನಂತೆ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅದೇಶ ಹೊರಡಿಸಿದ್ದಾರೆ.
ಕೋಟೆ ಶ್ರೀ ಮಾರಿಕಾಂಬ ದೇವಸ್ಥಾನದ ಸುತ್ತಮುತ್ತ 500 ಮೀಟರ್ ವ್ಯಾಪ್ತಿಯಲ್ಲಿ ಬರುವ ಎಲ್ಲಾ ರಸ್ತೆಗಳಲ್ಲಿ ಎಲ್ಲಾ ವಾಹನಗಳ ಸಂಚಾರ ನಿಷೇಧ ಮಾಡುವುದು. ಫೆ. 24 ರಿಂದ 28ರವರೆಗೆ ಹೊಳಬಸ್ ಸ್ಟಾಪ್‌ನಿಂದ – ಬೆಕ್ಕಿನ ಕಲ್ಮಠ-ರಾಮಣ್ಣ ಶ್ರೇಷ್ಠಿ ಪಾರ್ಕ್ವರೆಗೆ ಎಲ್ಲಾ ವಾಹನಗಳ ಸಂಚಾರ ಮತ್ತು ನಿಲುಗಡೆ ನಿಷೇಧ ಮಾಡುವುದು. ಫೆ. 24 ರಂದು ಬೆಳಗ್ಗೆ 3.00 ಗಂಟೆಯಿಂದ ರಾ.11.00 ಗಂಟೆಯವರೆಗೆ ರಾಮಣ್ಣ ಶ್ರೇಷ್ಠಿ ಪಾರ್ಕ್ನಿಂದ ಗಾಂಧಿ ಬಜಾರ್-ಶಿವಪ್ಪನಾಯಕ ಸರ್ಕಲ್‌ವರೆಗೆ ಮತ್ತು ಶಿವಪ್ಪ ನಾಯಕ ಸರ್ಕಲ್ ಸುತ್ತಮುತ್ತ 500 ಮೀಟರ್ ವ್ಯಾಪ್ತಿಯಲ್ಲಿ ಎಲ್ಲಾ ವಾಹನಗಳ ಸಂಚಾರ ಮತ್ತು ನಿಲುಗಡೆ ನಿಷೇಧ ಮಾಡುವುದು.
Kote Sri Marikamba ಬೆಂಗಳೂರು- ಭದ್ರಾವತಿ-ಎನ್.ಆರ್.ಪುರ ಕಡೆಯಿಂದ ಬರುವ ಭಾರಿ ವಾಹನಗಳು ಮತ್ತು ಬಸ್‌ಗಳು ಎಂಆರ್‌ಎಸ್ ಸರ್ಕಲ್ ಬೈಪಾಸ್ ಮೂಲಕ ಶಿವಮೊಗ್ಗ ನಗರ ಪ್ರವೇಶ ಮಾಡುವುದು. ಚಿತ್ರದುರ್ಗ-ಹೊಳೆಹೊನ್ನೂರು ಕಡೆಯಿಂದ ಬರುವ ಭಾರಿ ವಾಹನಗಳು ಮತ್ತು ಬಸ್‌ಗಳು ವಿದ್ಯಾನಗರ-ಎಂ.ಆರ್.ಎಸ್. ಸರ್ಕಲ್ ಬೈಪಾಸ್ ಮೂಲಕ ಶಿವಮೊಗ್ಗ ನಗರ ಪ್ರವೇಶ ಮಾಡುವುದು. ಹೊನ್ನಾಳಿ-ಹೊಳಲೂರು ಕಡೆಯಿಂದ ಬರುವ ಭಾರಿ ವಾಹನಗಳು, ಸರಕು ಸಾಗಣೆ ವಾಹನಗಳು ಮತ್ತು ಬಸ್‌ಗಳು ಸಂಗೊಳ್ಳಿ ರಾಯಣ್ಣ ಸರ್ಕಲ್- ಕೆಇಬಿ ಸರ್ಕಲ್- ರೈಲ್ವೆ ಸ್ಟೇಷನ್-ಉಷಾ ನರ್ಸಿಂಗ್ ಹೋಂ ಸರ್ಕಲ್- 100 ಅಡಿ ರಸ್ತೆ ಮೂಲಕ ಶಿವಮೊಗ್ಗ ನಗರ ಪ್ರವೇಶ ಮಾಡುವುದು. ಶಿಕಾರಿಪುರ ಸವಳಂಗದಿಂದ ಬರುವ ಎಲ್ಲಾ ಭಾರಿ ವಾಹನ, ಎಲ್ಲಾ ಬಸ್‌ಗಳನ್ನು ಉಷಾ ನರ್ಸಿಂಗ್ ಹೋಂ, ಲಕ್ಷ್ಮೀ ಟಾಕೀಸ್, ಪೊಲೀಸ್ ಚೌಕಿ, ಆಲ್ಕೋಳ ಮುಖಾಂತರ ಸಾಗರ ರಸ್ತೆಯಲ್ಲಿ ಹೋಗುವುದು. ಸರ್ಕಾರಿ ಮತ್ತು ಖಾಸಗಿ ಬಸ್ ನಿಲ್ದಾಣದಿಂದ ಬೆಂಗಳೂರು, ಭದ್ರಾವತಿ ಕಡೆಗೆ ಸಂಚರಿಸುವ ಎಲ್ಲಾ ವಾಹನಗಳು ಸಂದೇಶ್ ಮೋಟಾರ್ಸ್-ಬೈಪಾಸ್ ರಸ್ತೆ ಮೂಲಕ ಸಂಚರಿಸುವುದು. ಸರ್ಕಾರಿ ಮತ್ತು ಖಾಸಗಿ ಬಸ್ ನಿಲ್ದಾಣದಿಂದ ಹೊನ್ನಾಳಿ, ಶಿಕಾರಿಪುರ, ಸೊರಬ, ಹರಿಹರ, ದಾವಣಗೆರೆಗೆ ಹೋಗುವ ಎಲ್ಲಾ ಬಸ್‌ಗಳು ಮತ್ತು ಭಾರಿ ಸರಕು ವಾಹನಗಳು ಸಾಗರ ರಸ್ತೆ ಮುಖಾಂತರವಾಗಿ ಹೆಲಿಪ್ಯಾಡ್ ಸರ್ಕಲ್, ಆಲ್ಕೊಳ ಸರ್ಕಲ್, ಪೊಲೀಸ್ ಚೌಕಿ, ಉಷಾ ನರ್ಸಿಂಗ್ ಹೋಂ, ಸವಳಂಗ ರಸ್ತೆ ಮೂಲಕ ಹೋಗುವುದು.
ಈ ಎಲ್ಲಾ ಮಾರ್ಗ ಬದಲಾವಣೆಗಳು ಪೊಲೀಸ್ ವಾಹನಗಳು, ಅತೀಗಣ್ಯ ವ್ಯಕ್ತಿಗಳ ವಾಹನಗಳು, ಅಂಬುಲೆನ್ಸ್ ಹಾಗೂ ಮೂಲಭೂತ ಸೌಕರ್ಯ ಒದಗಿಸುವ ವಾಹನಗಳನ್ನು ಅನುಕೂಲಕ್ಕೆ ತಕ್ಕಂತೆ ಹೊರತುಪಡಿಸಿ ಸಂಚರಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳ ಆದೇಶದಲ್ಲಿ ಸೂಚಿಸಲಾಗಿದೆ.

B.S. Yediyurappa ಜಿಎಸ್ಎಸ್ ಅವರ ಸಾಹಿತ್ಯ ಸೇವೆ ಸ್ಮರಣೀಯ – ಮಾಜಿ ಸೀಎಂ ಬಿ.ಎಸ್.ಯಡಿಯೂರಪ್ಪ

0

B.S. Yediyurappa ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ರಾಷ್ಟ್ರಕವಿ ಡಾ. ಜಿ. ಎಸ್. ಶಿವರುದ್ರಪ್ಪ ಅವರ ಜನ್ಮಶತಮಾನೋತ್ಸವದ ಅಂಗವಾಗಿ ಆಯೋಜಿಸಲಾದ ಕಾವ್ಯಸೌರಭ ಹಾಗೂ ಜಿ.ಎಸ್‌.ಎಸ್‌. ಪುರಸ್ಕಾರ ಸಮಾರಂಭ ಭಾವಪೂರ್ಣವಾಗಿ ನೆರವೇರಿತು.

ಈ ಮಹತ್ವದ ಕಾರ್ಯಕ್ರಮದಲ್ಲಿ ಕೇಂದ್ರ ಸಂಸದೀಯ ಮಂಡಳಿ ಹಾಗೂ ಚುನಾವಣಾ ಸಮಿತಿ ಸದಸ್ಯರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಿ. ಎಸ್. ಯಡಿಯೂರಪ್ಪ ಅವರು ಭಾಗವಹಿಸಿ, ಕವಿಯ ಸಾಹಿತ್ಯಸೇವೆ ಹಾಗೂ ಕನ್ನಡ ಸಾಹಿತ್ಯಕ್ಕೆ ನೀಡಿದ ಅಪಾರ ಕೊಡುಗೆಗಳನ್ನು ಸ್ಮರಿಸಿದರು.

B.S. Yediyurappa ಕಾವ್ಯ, ಸಂಸ್ಕೃತಿ ಮತ್ತು ಸಾಹಿತ್ಯದ ಸೌಂದರ್ಯ ಒಂದೇ ವೇದಿಕೆಯಲ್ಲಿ ಅರಳಿದ ಈ ಕ್ಷಣಗಳು ಎಲ್ಲರ ಮನಗಳಲ್ಲಿ ಸ್ಮರಣೀಯವಾಗಿ ಉಳಿದವು. ಕನ್ನಡದ ಕಾವ್ಯ ಪರಂಪರೆಯನ್ನು ಮುಂದಿನ ಪೀಳಿಗೆಗೆ ತಲುಪಿಸುವ ಸಂಕಲ್ಪದೊಂದಿಗೆ ಕಾರ್ಯಕ್ರಮ ಯಶಸ್ವಿಯಾಗಿ ಸಂಪನ್ನಗೊಂಡಿತು

Bhadravati VISL ಭದ್ರಾವತಿ ವಿಐಎಸ್ ಎಲ್ ನಿಂದ ಉಚಿತ ಆರೋಗ್ಯ ಶಿಬಿರ

0

Bhadravati VISL ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಾದ ಸಹ್ಯಾದ್ರಿ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ (ಶಿವಮೊಗ್ಗ), ಶಂಕರ ಕಣ್ಣಿನ ಆಸ್ಪತ್ರೆ (ಶಿವಮೊಗ್ಗ), ವಿಐಎಸ್‌ಎಲ್ ಆಸ್ಪತ್ರೆ, ಭದ್ರಾವತಿ ತಾಲ್ಲೂಕು ಸರ್ಕಾರಿ ಆಸ್ಪತ್ರೆ, ಮತ್ತು ಇಸ್ಪಾತ್ ಮಹಿಳಾ ಸಮಾಜದ ಸಹಯೋಗದೊಂದಿಗೆ ಭದ್ರಾವತಿಯ ಅರಬಿಳಚಿ ಕ್ಯಾಂಪ್ ಗ್ರಾಮದಲ್ಲಿ ಸಮಗ್ರ ಉಚಿತ ವೈಧ್ಯಕೀಯ ಆರೋಗ್ಯ ತಪಾಸಣಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿತ್ತು.

ಹೃದಯಶಾಸ್ತ್ರ ಮೂಳೆ ಚಿಕಿತ್ಸೆ, ಸಾಮಾನ್ಯ ತಪಾಸಣೆ, ನೇತ್ರವಿಜ್ಞಾನ, ದಂತವೈದ್ಯಶಾಸ್ತ್ರ ಮತ್ತು ಸ್ತ್ರೀರೋಗ ಶಾಸ್ತ್ರದಂತಹ ಕ್ಷೇತ್ರಗಳಲ್ಲಿ ಅನುಭವಿ ತಜ್ಞವೈದ್ಯರು ಭಾಗವಹಿಸುವ ಮೂಲಕ ಆರೋಗ್ಯ ಸಮಾಲೋಚನೆ ಮತ್ತು ರೋಗನಿರ್ಣಯ ಸೇವೆಗಳನ್ನು ನೀಡಲಾಯಿತು.

ಇದರ ಅಂಗವಾಗಿ ರಕ್ತದೊತ್ತಡ (ಬಿಪಿ), ರಕ್ತದಲ್ಲಿನ ಸಕ್ಕರೆ ಪರೀಕ್ಷೆ, ಕಣ್ಣಿನ ಪರೀಕ್ಷೆ, ದಂತ ತಪಾಸಣೆ, ಎಲೆಕ್ಟ್ರೋಕಾರ್ಡಿಯೋಗ್ರಾಮ್ (ಇಸಿಜಿ) ಮತ್ತು ಸ್ತ್ರೀ ಸಂಬಂಧಿತ ರೋಗಗಳ ತಪಾಸಣೆಗಳನ್ನು ಮಾಡಲಾಯಿತು.

ಇಸ್ಪಾತ್ ಮಹಿಳಾ ಸಮಾಜದ ಅಧ್ಯಕ್ಷರಾದ ಶ್ರೀಮತಿ ನಿಶಾ ಅನೂಪ್ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.

Bhadravati VISL ಇವರೊಂದಿಗೆ ವಿಐಎಸ್‌ಎಲ್‌ನ ಪ್ರಭಾರಿ ಕಾರ್ಯಪಾಲಕ ನಿರ್ದೆಶಕರಾದ ಶ್ರೀ ಬಿ. ವಿಶ್ವನಾಥ, ಶ್ರೀ ಟಿ. ರವಿಚಂದ್ರನ್, ಪ್ರಭಾರಿ ಮಹಾ ಪ್ರಬಂಧಕರು (ಸ್ಥಾವರ), ಡಾ. ಕೆ.ಎಸ್. ಸುಜೀತ್ ಕುಮಾರ್, ಡಾ‌. ಟಿ.ಎನ್. ಸುಷ್ಮಾ, ಡಾ. ಎಸ್.ಎನ್. ಸುರೇಶ್, ಇಸ್ಪಾತ್ ಮಹಿಳಾ ಸಮಾಜದ ಉಪಾಧ್ಯಕ್ಷರಾದ ಶ್ರೀಮತಿ ಪಂಕಜ ವಿಶ್ವನಾಥ್, ಶ್ರೀಮತಿ ಸುಗಂಧೀ ರವಿಚಂದ್ರನ್, ಕಾರ್ಯದರ್ಶಿಯಾದ ಶ್ರೀಮತಿ ಈಶ್ವರೀ ನಾಥನ್, ಜಂಟಿ ಕಾರ್ಯದರ್ಶಿಯಾದ ಶ್ರೀಮತಿ ಶ್ರವಂತಿ ರೆಡ್ಡಿ, ಶ್ರೀ ಎಮ್.ಎಲ್. ಯೋಗೀಶ್, ಅರಬಿಳಚಿ ಗ್ರಾಮದಿಂದ ಶ್ರೀ ಶಿವುಮೇಸ್ತ್ರಿ, ಶ್ರೀ ಮುರುಗೇಶ, ಶ್ರೀ ರಾಮಲಿಂಗಮ್, ಸಹ್ಯಾದ್ರಿ ನಾರಾಯಣ ಆಸ್ಪತ್ರೆಯ ಡಾ. ಪ್ರಶಾಂತಿ, ಡಾ.ಸಹನ ಪೂಜಾರಿ, ಕು. ತಹೀನಾ, ಕು. ಶಿನ್ಸಿ ಮತ್ತು ಶ್ರೀ ಗಣೇಶ್. ಶಂಕರ ಕಣ್ಣಿನ ಆಸ್ಪತ್ರೆಯ ಡಾ|| ಲಕ್ಷಿತ, ಶ್ರೀ ಪ್ರದೀಪ್ ಮತ್ತು ತಂಡದವರು ಉಪಸ್ಥಿತರಿದ್ದರು. 196 ಗ್ರಾಮಸ್ಥರು ಈ ಶಿಬಿರದ ಸದುಪಯೋಗಪಡಿಸಿಕೊಂಡರು.
ವಿಐಎಸ್‌ಎಲ್‌ವತಿಯಿಂದ ಉಚಿತ ಔಷಧಿಗಳನ್ನು ವಿತರಿಸಲಾಯಿತು.

Shakahaari Film ಕನ್ನಡ ಚಿತ್ರ “ಶಾಖಾಹಾರಿ” ಗೆ ಫಿಲ್ಮ್ ಫೇರ್ ಅವಾರ್ಡ್

0

Shakahaari Film ಶಿವಮೊಗ್ಗದ ಕೀಳಂಬಿ ಮೀಡಿಯ (ಪ್ರೈ) ಲಿಮಿಟೆಡ್‌ ಕಂಪನಿ ನಿರ್ಮಾಣದ ” ಶಾಖಾಹಾರಿ” ಸಿನಿಮಾ ಮತ್ತೆ ಸುದ್ದಿ ಮಾಡಿದೆ. ಈ ಬಾರಿಯ ಪ್ರತಿಷ್ಢಿತ ಫಿಲ್ಮ್ ಫೇರ್ ಅವಾರ್ಡ್ ತನ್ನ ಮಡಿಲಿಗೆ ಬಾಚಿಕೊಂಡಿದೆ.
“ಉತ್ತಮ ಚಿತ್ರ” ವಾಗಿ ಪ್ರಶಸ್ತಿ‌ಗೆ ಭಾಜನವಾಗಿದೆ. ಕನ್ನಡ ಸಿನಿಮಾರಂಗಕ್ಕೆ ಹೆಮ್ಮೆ ಮತ್ತು ಕೀರ್ತಿ‌ ತಂದಿದೆ.
ನಿರ್ಮಾಪಕ. ರಾಜೇಶ್ ಕೀಳಂಬಿ ಮತ್ತು ನಿರ್ದೇಶಕ ಸಂದೀಪ್ ಸುಂಕದ್ ‌ ಸುಂದರ ವೇದಿಕೆಯಲ್ಲಿ ಪ್ರಶಸ್ತಿ ಸ್ವೀಕರಿಸಿದರು.

Shakahaari Film 70ನೇ ಫಿಲ್ಮ್‌ಫೇರ್ ಪ್ರಶಸ್ತಿಗಳ ದಕ್ಷಿಣ ಪ್ರಶಸ್ತಿ ಪ್ರದಾನ ಸಮಾರಂಭವು ಫೆಬ್ರವರಿ 22 ರಂದು ಕೊಚ್ಚಿಯ ಆಡ್ಲಕ್ಸ್ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯಿತು. ಈ ಸಮಾರಂಭದಲ್ಲಿ ತಮಿಳು, ತೆಲುಗು, ಮಲಯಾಳಂ ಮತ್ತು ಕನ್ನಡ ಸಿನಿಮಾ ಸೇರಿದಂತೆ ಪ್ರಾದೇಶಿಕ ಉದ್ಯಮಗಳ ಚಲನಚಿತ್ರಗಳು ಮತ್ತು ಪ್ರತಿಭೆಗಳನ್ನು ಗೌರವಿಸಲಾಯಿತು. ಅಲ್ಲು ಅರ್ಜುನ್ ಅವರ ಪುಷ್ಪ 2: ದಿ ರೂಲ್ ತೆಲುಗು ವಿಭಾಗದಲ್ಲಿ ಪ್ರಾಬಲ್ಯ ಸಾಧಿಸಿದರೆ ಮತ್ತು ಅಮರನ್ ತಮಿಳು ಸಿನಿಮಾದಲ್ಲಿ ಪ್ರಮುಖ ವಿಜೇತರಾಗಿ ಹೊರಹೊಮ್ಮಿದರೆ, ಗರಿಷ್ಠ ಮಲಯಾಳಂ ಗೌರವಗಳು ಪೃಥ್ವಿರಾಜ್ ಅವರ ಆಡುಜೀವಿತಮ್‌ಗೆ ದಕ್ಕಿದವು. ಕನ್ನಡ ವಿಭಾಗದಲ್ಲಿ, “ಶಾಖಾಹಾರಿ” ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಗೆದ್ದರೆ, ನಟನಾ ಪ್ರಶಸ್ತಿಗಳನ್ನು ಬಘೀರಾ ಚಿತ್ರಕ್ಕಾಗಿ ಶ್ರೀ ಮುರಳಿ ಮತ್ತು ಕೋಲಿ ಎಸ್ರು ಚಿತ್ರಕ್ಕಾಗಿ ಅಕ್ಷತಾ ಪಾಂಡವಪುರ ಅವರಿಗೆ ನೀಡಲಾಯಿತು.

ಬ್ರ್ಯಾಂಡ್ ಕರ್ನಾಟಕದ ಯೋಜನೆಯಡಿ ಮರುಪಾವತಿ ಪಡೆಯಲು ಅವಕಾಶ

0

ಬಾಂಬೆ ಇಂಜಿನಿಯರ್ ಗ್ರೂಪ್ ಮತ್ತು ಸೆಂಟರ್, ಪುಣೆ ಯುಹೆಚ್‌ಕ್ಯೂ ಕೋಟಾದಡಿಯಲ್ಲಿ 17 1/2 ರಿಂದ 21 ವರ್ಷದೊಳಗಿನ ಮಾಜಿ ಸೈನಿಕರ ಮಕ್ಕಳು ಮತ್ತು ಅವಲಂಬಿತರಿಗಾಗಿ ಅಗ್ನಿವೀರ್ ನೇಮಕಾತಿ ನಡೆಯಲಿದೆ
ಈ ನೇಮಕಾತಿಯು ಅಗ್ನಿಪಥ್ ಯೋಜನೆಯ ಭಾಗವಾಗಿದ್ದು, ಅಭ್ಯರ್ಥಿಗಳು ಫೆ.23 ರಿಂದ 25 ರವರೆಗೆ ಅಗ್ನಿವೀರ್ (ಜನರಲ್ ಡ್ಯೂಟಿ, ಟೆಕ್ನಿಕಲ್), ಅಗ್ನಿವೀರ್ (ಟ್ರೇಡ್ಸ್ಮನ್ – 8 ಮತ್ತು 10ನೇ ತರಗತಿ ಉತ್ತೀರ್ಣ) ಹಾಗೂ ಅಗ್ನಿವೀರ್ ಸ್ಪೋರ್ಟ್ಸ್ಮನ್ (ಒಪನ್ ಕ್ಯಾಟೆಗರಿ) ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.
ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ವೆಬ್‌ಸೈಟ್ www.bsakirkee.org ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪ ನಿರ್ದೇಶಕ (ಪ್ರಭಾರ) ಡಾ.ಸಿ.ಎ.ಹಿರೇಮಠ ತಿಳಿಸಿದ್ದಾರೆ.

Manasadhara Trust ರಾಷ್ಟ್ರೀಯ ಹಾಕಿ ಚಾಂಪಿಯನ್ ಶಿಪ್ ಶಿಬಿರಕ್ಕೆ ಶಿವಮೊಗ್ಗದ ಕು.ಎಂ.ಮನ್ಮಥಾ ಮತ್ತು ಕು.ಹೆಚ್.ಬಿ.ಕೀರ್ತನಾ ಆಯ್ಕೆ

0

Manasadhara Trust ಮಾನಸಾಧಾರ ಟ್ರಸ್ಟ್ (ರಿ) ನ ಮನಃಸ್ಫೂರ್ತಿ ವಿಶೇಷ ಶಾಲೆಯ ವಿದ್ಯಾರ್ಥಿನಿಯರಾದ ಕು.ಮನ್ಯಥಾ.ಎಂ ಮತ್ತು ಕು.ಕೀರ್ತನಾ.ಹೆಚ್.ಬಿ ಯವರು ಇದೆ ಫೆಬ್ರವರಿ 22 ರಿಂದ 27 ರವರೆಗೆ ಹರಿಯಾಣದ ರೋಹ್ತಕ್‌ನಲ್ಲಿ ನಡೆಯಲಿರುವ ಸ್ಪೆಷಲ್ ಒಲಂಪಿಕ್ ಭಾರತ್ ನ ರಾಷ್ಟ್ರ ಮಟ್ಟದ ಹಾಕಿ ಚಾಂಪಿಯನ್‌ ಶಿಪ್ ಕ್ಯಾಂಪಿಗೆ ಆಯ್ಕೆಯಾಗಿದ್ದು ಜೊತೆಗೆ ಮನಃಸ್ಫೂರ್ತಿ ವಿಶೇಷ ಶಾಲೆಯ ಪ್ರಾಂಶುಪಾಲರಾದ ಶ್ರೀ ಮತಿ ಜ್ಯೋತಿ ಅರುಣ್ ಕುಮಾರ್ ರವರು ಕ್ರೀಡಾಪಟುಗಳಿಗೆ ತರಬೇತಿ ಮತ್ತು ಮಾರ್ಗದರ್ಶನ ನೀಡಲು ಕೋಚ್ ಆಗಿ ಆಯ್ಕೆಯಾಗಿದ್ದಾರೆ.

Manasadhara Trust ಈ ಕುರಿತು ಮಾನಸ ಸಮೂಹ ಸಂಸ್ಥೆಯು ಸಂತೋಷ ವ್ಯಕ್ತಪಡಿಸಿದ್ದು, ವಿದ್ಯಾರ್ಥಿನಿಯರ ಪರಿಶ್ರಮ, ಸಮರ್ಪಣೆ ಮತ್ತು ದೃಢನಿಶ್ಚಯವೇ ಈ ಸಾಧನೆಗೆ ಕಾರಣವೆಂದು ತಿಳಿಸಿದೆ. ಮನಃಸ್ಫೂರ್ತಿ ವಿಶೇಷ ಶಾಲೆಯ ವಿದ್ಯಾರ್ಥಿನಿಯರಿಗೆ ರಾಷ್ಟ್ರ ಮಟ್ಟದ ಹಾಕಿ ಚಾಂಪಿಯನ್‌ಶಿಪ್ ಕ್ಯಾಂಪಿನಲ್ಲಿ ಭಾಗವಹಿಸುವ ಅವಕಾಶ ದೊರೆತಿರುವುದು ಸಂಸ್ಥೆಗೆ ಹೆಮ್ಮೆಯ ವಿಚಾರವಾಗಿದೆ. ರಾಷ್ಟ್ರೀಯ ಮಟ್ಟದಲ್ಲಿ ವಿದ್ಯಾರ್ಥಿನಿಯರು ಇನ್ನಷ್ಟು ಉತ್ತಮ ಸಾಧನೆ ಮಾಡಿ ಸಂಸ್ಥೆಯ ಗೌರವ ಹೆಚ್ಚಿಸಲಿ ಎಂದು ಶುಭಾಶಯ ಕೋರಲಾಗಿದೆ. ಫೆಬ್ರವರಿ 22 ರಂದು ಹರಿಯಾಣಕ್ಕೆ ಹೋಗುತ್ತಿರುವ ಕು.ಮನ್ಯಥಾ.ಎಂ, ಕು.ಕೀರ್ತನಾ.ಹೆಚ್.ಬಿ ಮತ್ತು ಶ್ರೀಮತಿ ಜ್ಯೋತಿ ಅರುಣ್ ಕುಮಾರ್ ರವರಿಗೆ ಮಾನಸ ಸಮೂಹ ಸಂಸ್ಥೆಗಳ ನಿರ್ದೇಶಕರಾದ ಡಾ.ರಜನಿ.ಎ.ಪೈ, ಶೈಕ್ಷಣಿಕ ನಿರ್ದೇಶಕರಾದ ಡಾ.ಪ್ರೀತಿ.ವಿ.ಶಾನ್ ಭಾಗ್, ಸಂಸ್ಥೆಯ ಖ್ಯಾತ ನರರೋಗ ತಜ್ಞರಾದ ಡಾ. ವಾಮನ್ ಶಾನ್ ಭಾಗ್, ಮನಃಸ್ಫೂರ್ತಿ ಕಲಿಕಾ ಕೇಂದ್ರದ ಪ್ರಾಂಶುಪಾಲರಾದ ಶ್ರೀಮತಿ ರಂಗನಾಯಕಿ ಹಾಗೂ ಮನಃಸ್ಫೂರ್ತಿಯ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.