Monday, August 10, 2026
Monday, August 10, 2026
Home Blog Page 184

ವಿದ್ಯಾರ್ಥಿಗಳೆ ರಸ್ತೆ ನಿಯಮ ಕಡ್ಡಾಯ ಪಾಲಿಸಿ- ಎಲ್. ಸ್ವಪ್ನಾ

0

ಆರಕ್ಷಕ ದಿನಾಚರಣೆಯ ಅಂಗವಾಗಿ, ದಿನಾಂಕ 21-02-2026 ರಂದು ಶಿವಮೊಗ್ಗ ನಗರದಲ್ಲಿ
ಶಿವಮೊಗ್ಗ ಪೊಲೀಸ್ ಸಂಚಾರ ವಿಭಾಗವು ರಸ್ತೆ ನಿಯಮಗಳ ಬಗ್ಗೆ ಜಾಗೃತಿ ಕಾರ್ಯಕ್ರಮ ನಡೆಸಿತು.

ಶಿವಮೊಗ್ಗದ ಸೋಮಿನಕೊಪ್ಪದಲ್ಲಿರುವ ಅಲ್ಪಸಂಖ್ಯಾತರ ಮೌಲಾನಾ ಶಾಲೆಯಲ್ಲಿ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯ ಪಿಎಸ್ಐ ಶ್ರೀಮತಿ ಸ್ವಪ್ನಾ.ಎಲ್ ರವರು ವಿದ್ಯಾರ್ಥಿಗಳಿಗೆ ರಸ್ತೆ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವ ಅಗತ್ಯತೆ ಕುರಿತು ಜಾಗೃತಿ ಮೂಡಿಸಿದರು.

Madhu Bangarappa ಮುಂದಿ ಜಾತ್ರೆಯ ಹೊತ್ತಿಗೆ ಚಂದ್ರಗುತ್ತಿ ದೇವಾಲಯದ ಸಮಗ್ರ ಮೂಲ ಸೌಕರ್ಯಗಳ ಅಭಿವೃದ್ದಿ – ಮಧು ಬಂಗಾರಪ್ಪ

0

Madhu Bangarappa ಚಂದ್ರಗುತ್ತಿ ದೇವಾಲಯವನ್ನು ಸಮಗ್ರ ಅಭಿವೃದ್ಧಿ ಮಾಡುವ ಉದ್ದೇಶದಿಂದಾಗಿ ಪ್ರಾಧಿಕಾರ ರಚಿಸಲಾಗಿದ್ದು, ಅಭಿವೃದ್ದಿಗೆ ಸಂಪೂರ್ಣ ಅನುದಾನ ತರುವ ಜವಾಬ್ದಾರಿ ನನ್ನದು. ಮುಂದಿನ ಜಾತ್ರೆಯೊಳಗೆ ಎಲ್ಲ ರೀತಿಯ ಮೂಲಭೂತ ಸೌಕರ್ಯಗಳನ್ನು ನೀಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪ ಭರವಸೆ ನೀಡಿದರು.
ಶನಿವಾರ ಅವರು ಚಂದ್ರಗುತ್ತಿಯ ರೇಣುಕಾಂಬ ದೇವಾಲಯದ ಮೂಲಭೂತ ಸೌಕರ್ಯದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿದ ನಂತರ ಜನಸಂಪರ್ಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.‌
ರೂ. 2.84 ಕೋಟಿ ವೆಚ್ಚದ ಮೂಲಭೂತ ಸೌಕರ್ಯಗಳ ಕಾಮಗಾರಿಗೆ ಇಂದು ಶಂಕುಸ್ಥಾಪನೆ ನೆರವೇರಿಸಲಾಗಿದೆ.
ಜನವರಿ ಮಾಹೆಯಲ್ಲಿ ಚಂದ್ರಗುತ್ತಿ ದೇವಾಲಯ ಅಭಿವೃದ್ದಿ ಪ್ರಾಧಿಕಾರ ರಚನೆಯಾಗಿದ್ದು, ಇದರಿಂದಾಗಿ ದೇವಾಲಯದ ಸಮಗ್ರ ಅಭಿವೃದ್ಧಿ ಸಾಧ್ಯವಾಗಲಿದೆ. ಕೇಂದ್ರ ಪುರಾತತ್ವ ಇಲಾಖೆ ಹಾಗೂ ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಕೆಲಸಗಳನ್ನು ಮಾಡಬೇಕಾಗಿದೆ.
ದೇವಸ್ಥಾನದ ಮುಖ್ಯ ದ್ವಾರದಿಂದ ಹತ್ತಲು ಮೆಟ್ಟಿಲುಗಳಿವೆ. ಆದರೆ ದೇವಸ್ಥಾನದ ಇನ್ನೊಂದು ಕಡೆಯಿಂದ ಇಳಿಯಲು ಮೆಟ್ಟಿಲು ನಿರ್ಮಿಸಲಾಗುವುದು. ಹಾಗೂ ಛಾವಣಿ ನಿರ್ಮಿಸಲಾಗುವುದು.
ದೇವಸ್ಥಾನದ ಕಿಟಕಿಗಳು ಹಾಳಾಗಿವೆ ಹಾಗೂ ದೇವಸ್ಥಾನ ಕಟ್ಟಡ ಸೋರುತ್ತಿದ್ದು‌ ರಿಪೇರಿ ಮಾಡಲಾಗುವುದು. ದೇವಸ್ಥಾನ ಬಳಿ ಅರಣ್ಯ ವ್ಯಾಪ್ತಿಗೆ ಬರುವ ಹತ್ತು ಎಕರೆ ಜಮೀನಿನಲ್ಲಿ ಜಾತ್ರೆ ಮತ್ತಿತರೆ ಉತ್ಸವದಲ್ಲಿ ಭಕ್ತಾದಿಗಳು ಉಳಿದುಕೊಳ್ಳಲು ಡಾರ್ಮಿಟರಿ, ಶೌಚಾಲಯ ವ್ಯವಸ್ಥೆ, ಪಾರ್ಕಿಂಗ್ ಇನ್ನಿತರೆ ಮೂಲಭೂತ ವ್ಯವಸ್ಥೆ ಮಾಡುವ ಯೋಜನೆ ಇದ್ದು ಅರಣ್ಯ ಇಲಾಖೆಯಿಂದ ಕ್ಲಿಯರೆನ್ಸ್ ಪಡೆದ ತಕ್ಷಣ ಕಾಮಗಾರಿ ಆರಂಭಿಸಲಾಗುವುದು. ಮೊದಲು ಹಣ ಇದ್ದರೂ ಅಭಿವೃದ್ದಿಪಡಿಸಲು ಜಾಗ ಇರಲಿಲ್ಲ.
ಚಂದ್ರಗುತ್ತಿ ದೇವಾಲಯದ ಮೂಲಭೂತ ಅಭಿವೃದ್ದಿಗಾಗಿ ಪ್ರವಾಸೋದ್ಯಮ ಮತ್ತು ಮುಜರಾಯಿ ಇಲಾಖೆಗಳು ಸೇರಿ ಸಮಗ್ರ ಯೋಜನೆ ತಯಾರಿಸಿ ನೀಡಿರಿ. ಶೇ. ೧೦೦ ರಷ್ಟು ಹಣವನ್ನು ಒದಗಿಸುವ ಜವಾಬ್ದಾರಿ ನನ್ನದಾಗಿದ್ದು ಮುಂದಿನ ಜಾತ್ರೆ ವೇಳೆಗೆ ಭಕ್ತಾಧಿಗಳು ಉಳಿಯುವ ವ್ಯವಸ್ಥೆ ಮತ್ತು ಮೂಲಭೂತ ಸೌಕರ್ಯಗಳ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು.‌
ಸೊರಬ ತಾಲ್ಲೂಕಿನಲ್ಲಿ ಗುಡವಿ, ಕೋಟಿಪುರ, ಚಂದ್ರಗುತ್ತಿ, ಬಂಗಾರಧಾಮ, ಬನವಾಸಿ ಪ್ರವಾಸಿ ತಾಣಗಳಿವೆ. ಜಿಲ್ಲೆಯಲ್ಲಿ ೬೪ ಪ್ರವಾಸಿ ತಾಣಗಳಿದ್ದು ಜಿಲ್ಲೆ ಉತ್ತಮ‌ಪ್ರವಾಸಿ ತಾಣವಾಗುತ್ತಿದೆ.
Madhu Bangarappa ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಮೂಲಕ ರೂ. ೩೪೧ ಕೋಟಿ ಹಣ ಯಾರ ಮಧ್ಯಸ್ಥಿಕೆ ಇಲ್ಲದೆ ನೇರವಾಗಿ ಫನಾನುಭವಿಗಳಿಗೆ ತಲುಪತ್ತಿದ್ದು ಬಡವರ ಬಾಳಿಗೆ ಆಸರೆಯಾಗಿದೆ.
ದುಡಿಯುವ ಕೈಗಳಿಗೆ ಕೆಲಸ ನೀಡುವ ಮಹಾತ್ಮಾ ಗಾಂಧಿ ನರೇಗಾ ಯೋಜನೆಯನ್ನು ಬದಲಾಯಿಸಿ, ಕೇಂದ್ರದ ನಿಯಂತ್ರಣಕ್ಕೆ ಒಳಪಟ್ಟ ಯೋಜನೆ ತಂದಿರುವುದನ್ನು‌ ತೀವ್ರವಾಗಿ ವಿರೋಧಿಸುತ್ತೇವೆ ಎಂದರು.
ಕಾನೂನಾತ್ಮಕವಾಗಿ ಉಳುಮೆ ಮಾಡುತ್ತಿರುವ ಬಗರ್ ಹುಕುಂ ರೈತರನ್ನು ಯಾವುದೇ ಅಧಿಕಾರಿಗಳು ಒಕ್ಕಲೆಬ್ಬಿಸುವಂತಿಲ್ಲ. ಬಡವರಿಗೆ ಹಕ್ಕುಪತ್ರ ನೀಡುವುದು ನಮ್ಮ ಜವಾಬ್ದಾರಿಯಾಗಿದ್ದು ಅದನ್ನು ನಾವು ಮಾಡುತ್ತೇವೆ.
ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷಸಿ.ಎಸ್.ಚಂದ್ರಭೂಪಾಲ,
ಸಾಗರ ಎಸಿ ವೀರೇಶ್ ಕುಮಾರ್ , ಸೂಪರಿಂಟೆಂಡಿಂಗ್ ಆರ್ಕಿಯಾಲಜಿಸ್ಟ್ ಡಾ.ಸುಜಿತ್ ನಯನ್, ಸೊರಬ ತಹಶೀಲ್ದಾರರಾದ ಪುರಂದರ ಕೆ , ಸೊರಬ ಇಓ ಶಶಿಧರ್, ಚಂದ್ರಗುತ್ತಿ ದೇವಾಲಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಮೀಳಾ ಕುಮಾರಿ ಮುಖಂಡರಾದ ಗಣಪತಿ, ಸದಾನಂದಗೌಡ, ಅಣ್ಣಪ್ಪ ಇತರೆ ಮುಖಂಡರು, ಚಂದ್ರಗುತ್ತಿ ಗ್ರಾಮದ ಪ್ರಮುಖರು ಹಾಜರಿದ್ದರು.

ಶಿವಮೊಗ್ಗ ಫ್ರೀಡಂ ಪಾರ್ಕ್ ಸನಿಹ ಸುಗಮ ಸಂಚಾರಕ್ಕೆ ಪಾದಚಾರಿ ಮಾರ್ಗದಲ್ಲಿದ್ದ ವ್ಯಾಪಾರಿಗಳ ತೆರವು

0

ಶಿವಮೊಗ್ಗ ನಗರದ 100 ಅಡಿ ರಸ್ತೆ ವ್ಯಾಪ್ತಿಯಲ್ಲಿರುವ ಲಕ್ಷ್ಮೀ ಟಾಕೀಸ್ ವೃತ್ತದಿಂದ ರಾಜಕುಮಾರ ವೃತ್ತ ಹಾಗೂ ಮೇದಾರ ಕೇರಿ ರಸ್ತೆ ಪ್ರದೇಶದಲ್ಲಿ, ಜೊತೆಗೆ ಫ್ರೀಡಂ ಪಾರ್ಕ್ ಎದುರು ಭಾಗದಲ್ಲಿ, ಮಹಾನಗರ ಪಾಲಿಕೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯವರ ಸಹಕಾರದೊಂದಿಗೆ ಪಾದಚಾರಿ ಮಾರ್ಗ (ಫುಟ್‌ಪಾತ್) ತೆರವು ಕಾರ್ಯಾಚರಣೆಯನ್ನ ಸಂಚಾರಿ ಪೊಲೀಸ್ ಸಿಬ್ಬಂದಿ ಕೈಗೊಂಡಿದ್ದರು.
ಕಾರ್ಯಾಚರಣೆ ವೇಳೆ ಪಾದಚಾರಿ ಮಾರ್ಗದಲ್ಲಿ ಇರಿಸಲಾದ ಅಂಗಡಿ ಫಲಕಗಳು, ಫಾಸ್ಟ್ ಫುಡ್ ಗಾಡಿಗಳು ಹಾಗೂ ಇತರೆ ವಸ್ತುಗಳನ್ನು ತೆರವುಗೊಳಿಸಲಾಯಿತು.

ಪಾದಚಾರಿಗಳು ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆ ಉಂಟಾಗುವ ರೀತಿಯಲ್ಲಿ ಪಾದಚಾರಿ ಮಾರ್ಗ ಮತ್ತು ರಸ್ತೆಯ ಮೇಲಿನ ಯಾವುದೇ ವಸ್ತುಗಳನ್ನು ಇಟ್ಟುಕೊಳ್ಳಬಾರದು ಎಂದು ಸಂಬಂಧಿತರಿಗೆ ಸಂಚಾರಿ ಪೊಲೀಸ್ ಸಿಬ್ಬಂದಿಗಳು ಕಟ್ಟು ನಿಟ್ಟಿನ ಸೂಚನೆಗಳನ್ನು ನೀಡಿದರು

ಎಸ್ಎಸ್ಎಲ್ ಸಿ ಮತ್ತು ಪಿಯು ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ

0

ಎಸ್ಎಸ್ಎಲ್ ಸಿ ವೇಳಾಪಟ್ಟಿ ಪ್ರಕಟ

ಮಾರ್ಚ್ 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ ಪರೀಕ್ಷಾ ವೇಳಾಪಟ್ಟಿ ಹೀಗಿದೆ

ಮಾರ್ಚ್ 18 ಪ್ರಥಮ ಭಾಷೆ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಸಂಸ್ಕೃತ

ಮಾರ್ಚ್ 23 ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ಥಾನಿ ಸಂಗೀತ, ಕರ್ನಾಟಕ ಸಂಗೀತ

ಮಾರ್ಚ್ 25 ದ್ವಿತೀಯ ಭಾಷೆ ಇಂಗ್ಲೀಷ್, ಕನ್ನಡ

ಮಾರ್ಚ್ 28 ಗಣಿತ, ಸಮಾಜಶಾಸ್ತ್ರ

ಮಾರ್ಚ್ 30 ತೃತೀಯ ಭಾಷೆ ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಉರ್ದು, ಸಂಸ್ಕೃತ, ಕೊಂಕಣಿ, ತುಳು, ಮರಾಠಿ ಮತ್ತು ಎನ್‌ಎಸ್‌ಕ್ಯೂಎಫ್ ವಿಷಯಗಳು

ಏಪ್ರಿಲ್ 01 ಜೆಟಿಎಸ್ ವಿಷಯಗಳು ಮತ್ತು ಅರ್ಥಶಾಸ್ತ್ರ

ಏಪ್ರಿಲ್ 02 ಸಮಾಜ ವಿಜ್ಞಾನ

ಪಿಯು ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ

ಫೆಬ್ರವರಿ 28ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ ಪರೀಕ್ಷಾ ವೇಳಾಪಟ್ಟಿ ಹೀಗಿದೆ

ಫೆಬ್ರವರಿ 28 ಕನ್ನಡ, ಅರೇಬಿಕ್

ಮಾರ್ಚ್ 02 ಭೂಗೋಳಶಾಸ್ತ್ರ, ಸಂಖ್ಯಾಶಾಸ್ತ್ರ, ಮನಃಶಾಸ್ತ್ರ

ಮಾರ್ಚ್ 03. ಇಂಗ್ಲೀಷ್

ಮಾರ್ಚ್ 04. ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್

ಮಾರ್ಚ್ 05. ಇತಿಹಾಸ

ಮಾರ್ಚ್ 06. ಭೌತಶಾಸ್ತ್ರ

ಮಾರ್ಚ್ 07 ,ಐಚ್ಛಿಕ ಕನ್ನಡ, ವ್ಯವಹಾರ ಅಧ್ಯಯನ, ಭೂಗರ್ಭಶಾಸ್ತ್ರ

ಮಾರ್ಚ್ 09. ರಸಾಯನಶಾಸ್ತ್ರ, ಶಿಕ್ಷಣಶಾಸ್ತ್ರ, ಮೂಲಗಣಿತ

ಮಾರ್ಚ್ 10. ಅರ್ಥಶಾಸ್ತ್ರ

ಮಾರ್ಚ್ 11. ತರ್ಕಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗೃಹವಿಜ್ಞಾನ

ಮಾರ್ಚ್ 12 .ಹಿಂದಿ

ಮಾರ್ಚ್ 13. ರಾಜ್ಯಶಾಸ್ತ್ರ

ಮಾರ್ಚ್ 14 .ಲೆಕ್ಕಶಾಸ್ತ್ರ, ಗಣಿತ

ಮಾರ್ಚ್ 16. ಸಮಾಜಶಾಸ್ತ್ರ, ಜೀವಶಾಸ್ತ್ರ, ಗಣಕ ವಿಜ್ಞಾನ

ಮಾರ್ಚ್ 17 .ಹಿಂದೂಸ್ತಾನಿ ಸಂಗೀತ, ಎಲೆಕ್ಟ್ರಾನಿಕ್ಸ್ ಮತ್ತು ಯಂತ್ರಾಂಶ, ಉಡುಪುಗಳ ತಯಾರಿಕೆ ಮತ್ತು ಗೃಹಪಯೋಗಿ ವಸ್ತುಗಳು, ಮಾಹಿತಿ ತಂತ್ರಜ್ಞಾನ, ರೀಟೈಲ್,

Shivamogga District Minority Welfare Department ಅಬ್ದುಲ್ ಕಲಾಂ / ಮೊರಾರ್ಜಿ ದೇಸಾಯಿ ವಸತಿ ಶಾಲೆಯ 6ನೇ ತರಗತಿಗೆ ಪ್ರವೇಶಾತಿಗೆ ಹಿಂದುಳಿದ ವರ್ಗಗಳ ಇಲಾಖೆ ಪ್ರಕಟಣೆ

0

Shivamogga District Minority Welfare Department ಶಿವಮೊಗ್ಗ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ / ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ 2026-27ನೇ ಸಾಲಿನ 6ನೇ ತರಗತಿಗೆ ಪ್ರವೇಶಾತಿಗಾಗಿ ಅಲ್ಪಸಂಖ್ಯಾತ ಸಮುದಾಯ ಹಾಗೂ ಹಿಂದೂಳಿದ ವರ್ಗದ ಸಮುದಾಯದ ವಿದ್ಯಾರ್ಥಿಗಳಿಂದ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಿದೆ.

ವಿದ್ಯಾರ್ಥಿಯು ಸರ್ಕಾರದಿಂದ ಅನುಮೋದಿಸಲ್ಪಟ್ಟ ಶಾಲೆಯಿಂದ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರಬೇಕು/ಉತ್ತೀರ್ಣರಾಗಿರಬೇಕು.

ದಾಖಲೆಗಳ ಪರಿಶೀಲನೆ ಸಂದರ್ಭದಲ್ಲಿ ಅಂಕಪಟ್ಟಿಯನ್ನು ಹೊಂದಿರಬೇಕು. ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿದ್ದು, 11 ರಿಂದ 13 ವರ್ಷದ ವಯೋಮಾನದವರಾಗಿರಬೇಕು.
ಅರ್ಹ ವಿದ್ಯಾರ್ಥಿಗಳು ಸೇವಾಸಿಂದು ಪೋರ್ಟಲ್ https://sevasindhuservices.karnataka.gov.in ರಲ್ಲಿ ಫೆ.28 ರೊಳಗಾಗಿ ಸಲ್ಲಿಸುವುದು.

ಅಥವಾ ಹತ್ತಿರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ಶಾಲೆಗಳು, ಅಲ್ಪಸಂಖ್ಯಾತರ ತಾಲೂಕು ಮಾಹಿತಿ ಕೇಂದ್ರಗಳು ಮತ್ತು ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿಯೂ ಕೂಡ ಉಚಿತವಾಗಿ ಸಲ್ಲಿಸಬಹುದಾಗಿದೆ ಎಂದು ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

Shivamogga District Minority Welfare Department ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, 1ನೇ ಮಹಡಿ, ಸತ್ಯಶ್ರೀ ಆರ್ಕೆಡ್ 5ನೇ ಪ್ಯಾರಲಲ್ ರಸ್ತೆ, ದುರ್ಗಿಗುಡಿ, ದೂ.ಸಂ.: 08182-220206, ಶಿವಮೊಗ್ಗ ಮೇಲಿನಹನಸವಾಡಿ ಡಾ|| ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಯ ಪ್ರಾಂಶುಪಾಲರು -9483623537, ಭದ್ರಾವತಿಯ ದೊಡ್ಡೆರಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರು-9591237905, ಶಿರಾಳಕೊಪ್ಪ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರು-8310350361, ಶಿಕಾರಿಪುರ ಉಡುಗಣಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರು -9036866642, ಸಾಗರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಳರು-9740800706, ಅಲ್ಪಸಂಖ್ಯಾತರ ಜಿಲ್ಲಾ ಮಾಹಿತಿ ಕೇಂದ್ರ ಶಿವಮೊಗ್ಗ-7676888388, ಅಲ್ಪಸಂಖ್ಯಾತರ ತಾಲೂಕು ಮಾಹಿತಿ ಕೇಂದ್ರ, ಭದ್ರಾವತಿ-9538853680, ತೀರ್ಥಹಳ್ಳಿ-8861982835, ಸೊರಬ-9513815513, ಶಿಕಾರಿಪುರ-7829136724, ಹೊಸನಗರ-9008447029, ಸಾಗರ-7338222907 ಗಳನ್ನು ಸಂಪರ್ಕಿಸುವುದು.

ತೀರ್ಥಹಳ್ಳಿ ಬಳಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷ!. ರೈತರಲ್ಲಿ ಬೆಳೆ ನಾಶದ ಆತಂಕ

0

ತೀರ್ಥಹಳ್ಳಿಯಲ್ಲಿ ಕಾಣಿಸಿಕೊಂಡ ಕಾಡುಕೋಣಗಳ ಹಿಂಡು

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಮೇಲಿನಕುರುವಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ತೀರಳೆಬೈಲಿನಲ್ಲಿ ಕಾಡುಕೋಣಗಳ ಹಿಂಡು ಕಂಡುಬಂದಿವೆ.

ಬೆಳ್ಳಂ ಬೆಳಗ್ಗೆ 10 ಕ್ಕೂ ಹೆಚ್ಚು ಕಾಡುಕೋಣಗಳು ಕಾಣಿಸಿಕೊಂಡಿದ್ದು,
ರೈತರು ಬೆಳೆದ ಹಾಳು ಮಾಡಿವೆ.

ಕಾಡುಕೋಣಗಳಿಂದ ಸಾರ್ವಜನಿಕರಲ್ಲಿ ಆತಂಕ ಮನೆ ಮಾಡಿದೆ

S.N.Channabasappa ನಗರದೇವತೆಯ ಜಾತ್ರೆಯನ್ನು ಅಚ್ಚುಕಟ್ಟಾಗಿ ಎಲ್ಲರ ಸಹಕಾರದಿಂದ ಆಚರಿಸೋಣ-ಶಾಸಕ ಎಸ್.ಎನ್‌.ಚನ್ನಬಸಪ್ಪ

0

​​S.N.Channabasappa ನಮ್ಮ ಶಿವಮೊಗ್ಗ ನಗರದ ಅಧಿದೇವತೆ, ಶ್ರೀ ಕೋಟೆ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವವು ಅತ್ಯಂತ ಸನಿಹದಲ್ಲಿದ್ದು, ಲಕ್ಷಾಂತರ ಭಕ್ತರು ಪಾಲ್ಗೊಳ್ಳುವ ಈ ವೈಭವದ ಜಾತ್ರೆಯನ್ನು ಅಚ್ಚುಕಟ್ಟಾಗಿ ಮತ್ತು ಯಶಸ್ವಿಯಾಗಿ ನಡೆಸೋಣ ಎಂದು ಶಾಸಕ ಎಸ್.ಎನ್ ಚನ್ನಬಸಪ್ಪ ಕರೆನೀಡಿದರು.

ಜಾತ್ರೆ ನಡೆಸುವ ನಿಟ್ಟಿನಲ್ಲಿ ಇಂದು ಪೂರ್ವಭಾವಿಯಾಗಿ ಆಯೋಜಿಸಲಾಗಿದ್ದ ಸಿದ್ಧತಾ ಸಭೆಯಲ್ಲಿ ಶಿವಮೊಗ್ಗ ನಗರ ಕ್ಷೇತ್ರದ ಶಾಸಕ ಎಸ್ .ಎನ್. ಚನ್ನಬಸಪ್ಪ ಪಾಲ್ಗೊಂಡಿದ್ದರು.

​ಇದೇ ಸಂದರ್ಭದಲ್ಲಿ, ಜಾತ್ರೆಗೆ ಆಗಮಿಸುವ ಸಾವಿರಾರು ಭಕ್ತಾದಿಗಳ ಕುಡಿಯುವ ನೀರಿನ ಅನುಕೂಲಕ್ಕಾಗಿ ನಿರ್ಮಿಸಲಾಗಿರುವ ನೂತನ ಬೋರ್‌ವೆಲ್ ಅನ್ನು ಉದ್ಘಾಟಿಸಿದರು.

ಭಕ್ತರಿಗೆ ಯಾವುದೇ ರೀತಿಯ ಮೂಲಸೌಕರ್ಯದ ಕೊರತೆಯಾಗದಂತೆ ಸಕಲ ಸಿದ್ಧತೆಗಳನ್ನು ಕೈಗೊಳ್ಳಲು ಸಮಿತಿಯೊಂದಿಗೆ ಶಾಸಕ ಚೆನ್ನಿ ಸೂಚಿಸಿದರು.

S.N.Channabasappa ಈ​ ಸಂದರ್ಭದಲ್ಲಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕಿಯಾದ ಶ್ರೀಮತಿ ಶಾರದಾ ಪೂರ್ಯನಾಯ್ಕ್, ದೇವಸ್ಥಾನ ಸಮಿತಿಯ ಅಧ್ಯಕ್ಷರಾದ ಶ್ರೀ ಎಸ್.ಕೆ. ಮರಿಯಪ್ಪ, ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಎನ್. ಮಂಜುನಾಥ್, ಮಹಾನಗರ ಪಾಲಿಕೆಯ ಮಾಜಿ ಸದಸ್ಯರಾದ ಶ್ರೀ ಪ್ರಭಾಕರ್ ಪಿ, ಪ್ರಮುಖರಾದ ಶ್ರೀ ಜ್ಞಾನೇಶ್ವರ್ ಸೇರಿದಂತೆ ಸಮಿತಿಯ ಗೌರವಾನ್ವಿತ ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

DVS College ಶಿವಮೊಗ್ಗದಲ್ಲಿ ಯಶಸ್ವಿಯಾಗಿ ನಡೆದ ರಾಷ್ಟ್ರೀಯ ಹಿಂದಿ ಸಮ್ಮೇಳನ

0

DVS College ಡಿ ವಿ ಎಸ್ ಕಾಲೇಜಿನ ಸಿಂಗಾರ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಹಿಂದಿ ಸಮ್ಮೇಳನವು ಭಾರತೀಯ ಸಾಹಿತ್ಯ ಮೇ ಸಂತ ಪರಂಪರ ಎಂಬ ವಿಷಯದಲ್ಲಿ ಸಮ್ಮೇಳನವನ್ನು ಹಮ್ಮಿಕೊಂಡಿದ್ದು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಮಿತಿ ಅಧ್ಯಕ್ಷರಾದ ಬಸಪ್ಪಗೌಡರು
ವಹಿಸಿದ್ದರು.

ಸಮ್ಮೇಳನದ ಉದ್ಘಾಟನೆಯನ್ನು ಮಹಾರಾಷ್ಟ್ರದ ಪ್ರೊಫೆಸರ್ ಬಿರಾದರ್ ಹಾಗೂ ಕೇರಳ ಸೆಂಟ್ರಲ್ ಯುನಿವರ್ಸಿಟಿಯ ತಾರಾ ಎಸ್ ಪವಾರ್ ಉದ್ಘಾಟಿಸಿದರು.

ಈ ಕಾರ್ಯಕ್ರಮದಲ್ಲಿ ಸಮಿತಿಯ ಕಾರ್ಯದರ್ಶಿಗಳು ಸಹಕಾರದರ್ಶಿಗಳು ಸದಸ್ಯರು ಹಾಗೂ ಪ್ರಾಚಾರ್ಯರು ವಿದ್ಯಾರ್ಥಿಗಳು ವಿವಿಧ ಕಾಲೇಜಿನಿಂದ ಬಂದ ಉಪನ್ಯಾಸಕರು ಪಾಲ್ಗೊಂಡು ಸಮ್ಮೇಳನವನ್ನು ಯಶಸ್ವಿಗೊಳಿಸಿದರು.

DVS College ಇದರಲ್ಲಿ ವಿದ್ಯಾರ್ಥಿಗಳು ಸಹ ಪಾಲ್ಗೊಂಡು ಸಂತ ಸಾಹಿತ್ಯದ ಪರಂಪರೆಯನ್ನು ಅರಿತುಕೊಂಡರು. ಈ ಸಮ್ಮೇಳನದ ಸಂಚಲವನ್ನು ಹಿಂದಿ ವಿಭಾಗದ ಡಾ. ಎಮ್ ಸಿದ್ದಯ್ಯರವರು ವಹಿಸಿದ್ದರು

ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಸರ್ಕಾರಿ ನಗರ ಸಾರಿಗೆ ಬಸ್ ಸೌಕರ್ಯಕ್ಕೆ ಮನವಿ

0

ಹಲವು ವರ್ಷಗಳ ಹಿಂದೆ ಇದ್ದಂತೆಯೇ ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಸರ್ಕಾರಿ ಸಿಟಿ ಬಸ್ ಓಡಿಸುವಂತೆ ಕರುನಾಡು ಸಂರಕ್ಷಣಾ ವೇದಿಕೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.

ಈ ಕುರಿತಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದ ವೇದಿಕೆ ಜಿಲ್ಲಾಧ್ಯಕ್ಷ ಎಸ್.ಪಿ. ಶಿವಮೂರ್ತಿ, ದಶಕಗಳ ಹಿಂದಿನಿಂದಲೂ ನಗರದಲ್ಲಿ ಸಂಚರಿಸುತ್ತಿದ್ದ ಸರ್ಕಾರಿ ಸಾರಿಗೆ ಬಸ್ ಸಂಚಾರವನ್ನು ಖಾಸಗಿ ಬಸ್’ನವರ ಒತ್ತಡಕ್ಕೆ ಮಣಿದು ನಿಲ್ಲಿಸಲಾಯಿತು. ಇದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದ್ದು, ನಗರದಲ್ಲಿ ಸರ್ಕಾರಿ ಸಿಟಿ ಬಸ್’ಗಳನ್ನು ಮತ್ತೆ ಆರಂಭಿಸಬೇಕು ಎಂದು ಮನವಿ ಮಾಡಿದರು.

ಶಿವಮೊಗ್ಗ ನಗರದ ಕಾಶಿಪುರದಿಂದ ಕರಿಯಣ್ಣ ಬಿಲ್ಡಿಂಗ್, ಪೊಲೀಸ್ ಚೌಕಿ, ಲಕ್ಷ್ಮೀ ಟಾಕೀಸ್ ಮುಖಾಂತರ, ಉಷಾ ನರ್ಸಿಂಗ್ ಹೋಂ, ಸವಳಂಗ ರಸ್ತೆ ಮುಖಾಂತರ ಕೋರ್ಟ್ ಸರ್ಕಲ್, ನೆಹರೂ ರಸ್ತೆಯಿಂದ ಅರ್ಮಿ ಅಹಮದ್ ಸರ್ಕಲ್ ಮುಖಾಂತರ ಮುಖ್ಯ ಬಸ್ ನಿಲ್ದಾಣ ಹಾಗೂ ಬಸ್ಟಾಂಡ್’ನಿಂದ ಅಣ್ಣಾನಗರ, ಟಿಪ್ಪುನಗರ, ಗೋಪಾಳವರೆಗೂ ಸುಮಾರು ವರ್ಷಗಳಿಂದಲೂ ನಗರ ಸಾರಿಗೆ ಬಸ್’ಗಳು ಸಂಚರಿಸುತ್ತಿದ್ದವು.

ಆದರೆ, ಮಧ್ಯಂತರದಲ್ಲಿ ಖಾಸಗಿ ಬಸ್’ನವರ ಒತ್ತಡದ ಮೇರೆಗೆ ನಿಲ್ಲಿಸಿಲಾಗಿದೆ ಎಂದು ಆರೋಪಿಸಿದರು.
ಸರ್ಕಾರಿ ನಗರ ಸಾರಿಗೆ ಬಸ್’ಗಳು ಸಾರ್ವಜನಿಕರಿಗೆ ವಯೋವೃದ್ಧರಿಗೆ, ಕೂಲಿ ಕಾರ್ಮಿಕರಿಗೆ, ಶಾಲಾ ಮಕ್ಕಳಿಗೆ ಮತ್ತು ದಿನನಿತ್ಯ ಕೆಲಸಕ್ಕೆ ಬರುವ ಮಹಿಳೆಯರಿಗೆ ಮತ್ತು ಸಾರ್ವಜನಿಕರಿಗೆ ಅನಾನುಕೂಲವಾಗಿತ್ತು.

ಸದರಿ ಬಸ್ಸನ್ನು ಮತ್ತು ಶಿವಮೊಗ್ಗ ನಗರಕ್ಕೆ ಬರುವ ರೈಲುಗಳ ವೇಳಾಪಟ್ಟಿಯಂತೆ ಪ್ರತಿಯೊಂದು ರೈಲಿಗೂ ಒಂದೊಂದು ಬಸ್ಸನ್ನು ಓಡಿಸಬೇಕು ಎಂದು ಮನವಿ ಮಾಡಿದ್ದಾರೆ.

ರೈಲು ನಿಲ್ದಾಣದಿಂದ ಮುಖ್ಯ ಬಸ್ ನಿಲ್ದಾಣದವರೆಗೂ ಹಾಗೂ ಶಿವಮೊಗ್ಗ ನಗರದ ಮುಖ್ಯ ಬಸ್ ನಿಲ್ದಾಣದಿಂದ ಬಿಎಚ್ ರಸ್ತೆಯ ಮುಖಾಂತರ ಹೊಳೆ ಬಸ್ ನಿಲ್ದಾಣ, ಗುರುಪುರ, ಪುರಲೆವರೆಗೂ ಮತ್ತು ರಾಗಿಗುಡ್ಡದಿಂದ ನಗರಕ್ಕೆ ಹಾಗೂ ಬೊಮ್ಮನಕಟ್ಟೆಯಿಂದ ಶಿವಮೊಗ್ಗ ನಗರದ ಒಳಗಡೆ ಈ ಕೂಡಲೇ ಸರ್ಕಾರಿ ಬಸ್ಸುಗಳನ್ನು ವ್ಯವಸ್ಥೆ ಮಾಡಿಕೊಡಬೇಕಾಗಿ ಮನವಿ ಮಾಡಿದ್ದಾರೆ.

ಇನ್ನು, ಸರ್ಕಾರದ ಶಕ್ತಿಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಇರುವುದರಿಂದ ಸರ್ಕಾರಿ ನಗರ ಸಾರಿಗೆ ಬಸ್ ಸಂಚಾರ ಮರು ಆರಂಭಿಸಿದರೆ ಎಲ್ಲಾ ಮಹಿಳೆಯರಿಗೂ ಅನುಕೂಲವಾಗಲಿದೆ.

ಈ ಹಿನ್ನೆಲೆಯಲ್ಲಿ ಈ ಕೂಡಲೇ ಸರ್ಕಾರಿ ನಗರ ಸಾರಿಗೆ ಬಸ್ ಸಂಚಾರ ಆರಂಭಿಸಬೇಕು ಎಂದು ಒತ್ತಾಯಿಸಿದ್ದಾರೆ.
ಸುಮಾರು ಆರು ತಿಂಗಳ ಹಿಂದೆ ಕೆಎಸ್’ಆರ್’ಟಿಸಿ ವಿಭಾಗೀಯ ಕಚೇರಿಗೆ ಮನವಿ ಸಲ್ಲಿಸಲಾಗಿದೆ. ಆದರೆ, ಖಾಸಗಿ ಬಸ್’ನವರ ಒತ್ತಡಕ್ಕೆ ಮಣಿದು ಸರ್ಕಾರಿ ನಗರ ಸಾರಿಗೆ ಬಸ್ ಸಂಚಾರ ಆರಂಭಿಸದೇ ಅನ್ಯಾಯ ಮಾಡಲಾಗುತ್ತಿದೆ. ತಕ್ಷಣವೇ ಸಾರ್ವಜನಿಕರ ಅನುಕೂಲಕ್ಕಾಗಿ ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ ಸರ್ಕಾರಿ ನಗರ ಸಾರಿಗೆ ಬಸ್ ಸಂಚಾರ ಆರಂಭಿಸಬೇಕು.

ಒಂದು ವೇಳೆ ಇದನ್ನು ನಿರ್ಲಕ್ಷಿಸಿದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುತ್ತೇವೆ ಎಂದಿದ್ದಾರೆ.
ಈ ಸಂದರ್ಭದಲ್ಲಿ ವೇದಿಕೆಯ ಪಿ. ಶಿವಣ್ಣ, ಈಶ್ವರ, ಸಿ. ಮೂರ್ತಿ, ಅರುಣ, ನಿರಂಜನ್, ಶ್ರೀನಿವಾಸ್, ದೇವೇಂದ್ರಪ್ಪ, ನಾಗರಾಜ್, ದೇವರಾಜ್ ಸೇರಿದಂತೆ ಸಂಘಟನೆಯ ಕಾರ್ಯಕರ್ತರುಗಳು ಮತ್ತು ಪದಾಧಿಕಾರಿಗಳು ಇದ್ದರು.

ಬಿಜೆಪಿ ಶಾಸಕರು ಹತಾಶೆಯಿಂದ ಸುಳ್ಳುಆರೋಪಗಳ ಸುರಿಮಳೆ ಮಾಡುತ್ತಿದ್ದಾರೆ- ಚೇತನ್ ಕೆ.ಗೌಡ

0

ರಾಜ್ಯದ ಕಾಂಗ್ರೆಸ್ ಸರ್ಕಾರದ ಜನಪರ ಆಡಳಿತ ಮತ್ತು ಗ್ಯಾರಂಟಿ ಯೋಜನೆಗಳ ಯಶಸ್ಸನ್ನು ಕಂಡು ಕಂಗೆಟ್ಟಿರುವ ಬಿಜೆಪಿ ಶಾಸಕರು ಹತಾಶೆಯಿಂದ ಸುಳ್ಳು ಆರೋಪಗಳ ಸುರಿಮಳೆಗೈಯುತ್ತಿದ್ದಾರೆ.

ನಮ್ಮ ಸರ್ಕಾರವು ‘ಗೃಹಲಕ್ಷ್ಮಿ’ ಯೋಜನೆಯಡಿ ರಾಜ್ಯದ 1.1 ಕೋಟಿಗೂ ಅಧಿಕ ಮಹಿಳೆಯರ ಖಾತೆಗೆ ಪ್ರತಿ ತಿಂಗಳು ಯಾವುದೇ ಮಧ್ಯವರ್ತಿಗಳಿಲ್ಲದೆ ನೇರವಾಗಿ 2,000 ರೂ. ತಲುಪಿಸುತ್ತಿದ್ದು, ಮಹಿಳಾ ಸಬಲೀಕರಣದ ಈ ಕ್ರಾಂತಿಯನ್ನು ‘ವಂಚನೆ’ ಎನ್ನುವ ಬಿಜೆಪಿ ನಾಯಕರು ನಾಡಿನ ತಾಯಂದಿರಿಗೆ ಅಪಮಾನ ಮಾಡುತ್ತಿದ್ದಾರೆ.

ಎಸ್‌ಸಿ/ಎಸ್‌ಟಿ ಸಮುದಾಯದ ಅಭಿವೃದ್ಧಿಗಾಗಿ ನಮ್ಮ ಸರ್ಕಾರವು ಎಸ್‌ಸಿಪಿ/ಟಿಎಸ್‌ಪಿ ಅಡಿಯಲ್ಲಿ ದಾಖಲೆಯ 39,121 ಕೋಟಿ ರೂ. ಅನುದಾನ ಮೀಸಲಿಟ್ಟಿದ್ದರೆ, ಬಿಜೆಪಿಯವರು ಕೇವಲ ಸುಳ್ಳು ಹಬ್ಬಿಸುವ ಕೆಲಸ ಮಾಡುತ್ತಿದ್ದಾರೆ.

ಬರಗಾಲದ ಸಂದರ್ಭದಲ್ಲಿ ಕೇಂದ್ರ ಸರ್ಕಾರವು ರಾಜ್ಯಕ್ಕೆ ನೀಡಬೇಕಿದ್ದ 18,171 ಕೋಟಿ ರೂ. ಬರ ಪರಿಹಾರವನ್ನು ನೀಡದೆ ದ್ರೋಹ ಬಗೆದಿದ್ದರೂ, ನಮ್ಮ ಸರ್ಕಾರವು ತನ್ನ ಸ್ವಂತ ಬೊಕ್ಕಸದಿಂದ 33 ಲಕ್ಷಕ್ಕೂ ಅಧಿಕ ರೈತರಿಗೆ ತಲಾ 2000 ರೂ.ಗಳಂತೆ ಮೊದಲ ಹಂತದ ಪರಿಹಾರವನ್ನು ವಿತರಿಸಿ ರೈತಪರ ಕಾಳಜಿ ಮೆರೆದಿದೆ. ಕಮಿಷನ್ ಆರೋಪ ಮಾಡುವ ಬಿಜೆಪಿ ನಾಯಕರು ಮೊದಲು ಕೇಂದ್ರ ಸರ್ಕಾರದ ಅಡಿಯಲ್ಲಿ ಕೌಶಲ್ಯ ಅಭಿವೃದ್ಧಿ (Skill Development) ಯೋಜನೆಗಳಲ್ಲಿ ನಡೆದಿರುವ ಸುಮಾರು 10,000 ಕೋಟಿ ರೂಪಾಯಿಗಳಿಗೂ ಅಧಿಕ ಮೊತ್ತದ ಬೃಹತ್ ಹಗರಣಗಳಿಗೆ ಉತ್ತರಿಸಲಿ; ಯುವಕರಿಗೆ ಉದ್ಯೋಗ ನೀಡುವ ಹೆಸರಿನಲ್ಲಿ ಸಾವಿರಾರು ಕೋಟಿ ಸಾರ್ವಜನಿಕ ಹಣವನ್ನು ಲೂಟಿ ಹೊಡೆದಿರುವ ಬಿಜೆಪಿಗೆ ಪಾರದರ್ಶಕ ಆಡಳಿತ ನೀಡುತ್ತಿರುವ ಕಾಂಗ್ರೆಸ್ ಸರ್ಕಾರವನ್ನು ಟೀಕಿಸುವ ಯಾವುದೇ ನೈತಿಕ ಹಕ್ಕಿಲ್ಲ ಎಂದು ಕರ್ನಾಟಕ ರಾಜ್ಯ ಜವಳಿ ಮತ್ತು ಕೈಮಗ್ಗ (ವಿದ್ಯುತ್) ನಿಗಮ ಹಾಗೂ ಅಧ್ಯಕ್ಷರು , ಯುವ ಕಾಂಗ್ರೆಸ್ ಮುಖಂಡರಾದ ಚೇತನ್ ಕೆ. ಗೌಡ ಅವರು ತಿಳಿಸಿದ್ದಾರೆ.