Friday, February 6, 2026
Friday, February 6, 2026
Home Blog Page 1867

ಫಲಾನುಭವಿಗಳಿಗೆ ತಕ್ಷಣ ಪರಿಹಾರ ನೀಡಿ- ಸೆಲ್ವ ಕುಮಾರ್

0

ಶಿವಮೊಗ್ಗದ, ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ರೈತರ ಆತ್ಮಹತ್ಯೆ, ಆಕಸ್ಮಿಕ ಸಾವು, ಹಾವು ಕಡಿತ ಹೀಗೆ ಮುಂತಾದ ಪ್ರಕರಣಗಳಲ್ಲಿ ಸಂತ್ರಸ್ಥರ ಕುಟುಂಬಕ್ಕೆ ತಕ್ಷಣವೇ ಪರಿಹಾರ ನೀಡಬೇಕು. ಇದಕ್ಕೆ ಜಿಲ್ಲಾಡಳಿತ ಅನುದಾನ ಬಳಸಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್. ಸೆಲ್ವಕುಮಾರ್ ಸೂಚಿಸಿದ್ದಾರೆ.

ಸಹಾಯಧನವನ್ನು ನೀಡಲು ಸರ್ಕಾರ ಅನುದಾನ ಬಿಡುಗಡೆ ಮಾಡುವವರೆಗೂ ಮಂದಗತಿಯಲ್ಲಿ ಕಾರ್ಯ ನಿರ್ವಹಿಸಬಾರದು. ಜಿಲ್ಲಾಡಳಿತದ ಅನುದಾನವನ್ನು ಬಳಸಿಕೊಂಡು ಶೀಘ್ರದಲ್ಲಿ ಪರಿಹಾರಧನ ವಿತರಿಸಲು ಕ್ರಮ ಕೈಗೊಳ್ಳಬೇಕು. ಪ್ರಸ್ತುತ ಸಮಯದಲ್ಲಿ ಸುರಿಯುತ್ತಿರುವ ಮಳೆಯಿಂದ ಆಗುತ್ತಿರುವ ಬೆಳೆ, ಜೀವ ಹಾನಿ ಮಾಹಿತಿ ಪಡೆದು ತಕ್ಷಣ ವರದಿ ಸಲ್ಲಿಸಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿ ಸರ್ಕಾರ ವಿವಿಧ ಇಲಾಖೆಗಳ ಮೂಲಕ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳನ್ನು ಅದರ ಗಡವು ಮೀರುವ ಒಳಗೆ ಪೂರ್ಣಗೊಳಿಸಬೇಕು.

ವಸತಿ ಯೋಜನೆಗಳಲ್ಲಿ ಆಯ್ಕೆಯಾದ ಫಲಾನುಭವಿಗಳು ಕೆಲವು ವರ್ಷಗಳಿಂದ ಮನೆ ಕಟ್ಟಿಕೊಂಡಿಲ್ಲ. ಕಳೆದ ಬಾರಿಯ ಮಳೆಯ ಪರಿಣಾಮವಾಗಿ ಅನೇಕ ಮನೆಗಳು ನೆಲ ಸಮಾಧಿಯಾಗಿವೆ. ನಿರಾಶ್ರಿತರಿಗೆ ನೂತನ ಕಟ್ಟಡ ನಿರ್ಮಾಣಕ್ಕೆ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ. ಆದರೆ ಹಲವು ಫಲಾನುಭವಿಗಳು ಮನೆಗಳನ್ನು ನಿರ್ಮಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಈ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆಯಬೇಕು. ಫಲಾನುಭವಿಗಳು ಈಗಾಗಲೇ ಮನೆ ನಿರ್ಮಿಸಿಕೊಂಡಿದ್ದಾರೆ. ಅಂತಹ ಫಲಾನುಭವಿಗಳಿಗೆ ನಿಯಮಾನುಸಾರ ಅನುದಾನ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್. ವೈಶಾಲಿ, ಅಪರ ಜಿಲ್ಲಾಧಿಕಾರಿ ನಾಗೇಂದ್ರ ಎಫ್. ಹೊನ್ನಳ್ಳಿ ಸಭೆಯಲ್ಲಿ ಉಪಸ್ಥಿತರಿದ್ದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಆಸ್ಟ್ರೇಲಿಯಾ : ಕೋವಿಡ್ ಅಲೆ !

0

ಸತತ ಒಂದೂವರೆ ವರ್ಷದಿಂದ ಇಡೀ ವಿಶ್ವಕ್ಕೆ ಕೋವಿಡ್-19 ಸಾಂಕ್ರಾಮಿಕವಾಗಿ ಪರಿಣಮಿಸಿದೆ. ಈ ಸೋಂಕಿನ ನಾಲ್ಕನೇ ಅಲೆಯ ನಿಯಂತ್ರಣ ಹಾಗೂ ಸಾವು ನೋವುಗಳಿಂದ ಪಾರಾಗಲು ಆಸ್ಟ್ರೇಲಿಯಾ ಸರ್ಕಾರ ಹತ್ತು ದಿನಗಳಲ್ಲಿ ಜಾರಿಗೆ ನಿರ್ಧರಿಸಿ ಪ್ರಧಾನಿ ಅಲೆಗ್ಸಾಂಡರ್ ಶಾಲೆನ್ ಬರ್ಗ್ ಆದೇಶ ಹೊರಡಿಸಿದ್ದಾರೆ.

ಲಾಕ್ ಡೌನ್ ಸಮಯದಲ್ಲಿ ಅಂಗಡಿ ಮುಂಗಟ್ಟುಗಳು ಮುಚ್ಚಲಿವೆ. ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ನಿರ್ಬಂಧ ಹೇರಲಾಗಿದೆ. ಶಾಲೆಗಳು ತೆರೆದಿದ್ದು, ಪೋಷಕರೊಂದಿಗೆ ಮಾತ್ರವೇ ಮಕ್ಕಳು ತೆರಳಲು ಅವಕಾಶ ನೀಡಲಾಗಿದೆ. ಶಿಕ್ಷಕರಿಂದ ಅಗತ್ಯ ಮಾರ್ಗದರ್ಶನಗಳನ್ನು ಪಡೆಯಲು ಈ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ಆಸ್ಟ್ರೇಲಿಯದ 10 ಸಾವಿರ ಜನರಲ್ಲಿ ಏಳು ದಿನಗಳಿಂದ ಹೊಸ ಕೊರೊನಾ ಸೋಂಕು ಪತ್ತೆಯಾಗಿದೆ. ಆಸ್ಟ್ರೇಲಿಯದಲ್ಲಿ ಇದುವರೆಗೂ ಅತ್ಯಂತ ಕಡಿಮೆ ಪ್ರಮಾಣದ ಲಸಿಕೆ ಪಶ್ಚಿಮ ಯೂರೋಪ್ ನಲ್ಲಿ ನೀಡಲಾಗಿದೆ ಎಂದು ದಾಖಲಾಗಿದೆ. ಕೇವಲ ಶೇ. 65 ರಷ್ಟು ಜನರು ಮಾತ್ರ ಕೋವಿಡ್ -19 ನಿರೋಧಕ ಲಸಿಕೆಯನ್ನು ಪಡೆದಿದ್ದಾರೆ. 89 ಲಕ್ಷ ಜನಸಂಖ್ಯೆಯುಳ್ಳ ಆಸ್ಟ್ರೇಲಿಯಾದಲ್ಲಿ ಒಟ್ಟು ಇದುವರೆಗೆ 11,525 ಸೋಂಕಿತರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಬೆಳೆ ಹಾನಿ ಸಮೀಕ್ಷೆ ನಡೆಸಿ- ಕೃಷಿ ಸಚಿವ

0

ರಾಜ್ಯದಲ್ಲಿ ಎರಡು ವಾರದಿಂದೀಚೆಗೆ ಸುರಿಯುತ್ತಿರುವ ಅಕಾಲಿಕ ಮಳೆಯಿಂದಾಗಿ ಅಪಾರ ಬೆಳೆ ನಷ್ಟ ಉಂಟಾಗಿದೆ. ರೈತರು ಬೆಳೆದ ಬೆಳೆಗಳು ಸಂಪೂರ್ಣ ನೀರು ಪಾಲಾಗಿದ್ದು ಹೊಲಗದ್ದೆಗಳು ಜಲಾವೃತವಾಗಿದೆ.

ಹಾವೇರಿ ಜಿಲ್ಲೆಯ ಹಿರೆಕೆರೂರು ತಾಲೂಕಿನಲ್ಲಿ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ರೈತರ ಬೆಳೆಗಳಿಗೆ ಹಾನಿಯಾಗಿರುವ ಹಿನ್ನೆಲೆಯಲ್ಲಿ ಮಾನ್ಯ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ಹಳ್ಳೂರ್, ಚಟ್ನಹಳ್ಳಿ ಹಾಗೂ ಪುರದ ಕೆರೆ ಗ್ರಾಮಗಳಿಗೆ ಭೇಟಿ ನೀಡಿ. ಪರಿಶೀಲನೆ ನಡೆಸಿ ರೈತರಿಗೆ ಸಾಂತ್ವನ ಹೇಳಿದರು.

ಸಚಿವರು ಮಾತನಾಡಿ ಅಕಾಲಿಕ ಮಳೆಯಿಂದ ಹಾನಿಯಾದ ಬೆಳೆಗಳ ಸಮೀಕ್ಷೆ ನಡೆಸಿ, ಕ್ಷಣ ವರದಿಯನ್ನು ಕೊಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಮಳೆಹಾನಿ ಪ್ರದೇಶಕ್ಕೆ ಡಿಸಿ ಗಳು ಭೇಟಿ ಮಾಡಬೇಕು- ಸಿ.ಎಂ

0

ರಾಜ್ಯದಲ್ಲಿ ಸುರಿಯುತ್ತಿರುವ ಮಳೆಯ ಪರಿಣಾಮವಾಗಿ ಅನೇಕ ಬೆಳೆ ಹಾನಿಯಾಗಿದೆ. ಮಳೆಯಿಂದ ಉಂಟಾದ ಹಾನಿಯ ಪರಿಹಾರ ಕಾರ್ಯಕ್ಕಾಗಿ ತಕ್ಷಣವೇ 130 ಕೋಟಿ ಬಿಡುಗಡೆ ಮಾಡುವಂತೆ ಮಾನ್ಯ ಮುಖ್ಯಮಂತ್ರಿ ಅವರು ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ.

ಭ ತ್ತ, ಜೋಳ ಸೇರಿದಂತೆ ವಿವಿಧ ಬೆಳೆಗಳ ಹಾನಿಯ ಬಗ್ಗೆ ಪ್ರಾಥಮಿಕ ಮಾಹಿತಿ ಇದ್ದು, ನಿಖರವಾದ ಮಾಹಿತಿಯನ್ನು ಪ್ರತಿ ಜಿಲ್ಲೆಯಿಂದ ಪಡೆಯುತ್ತಿದ್ದೇನೆ. ಸಮೀಕ್ಷೆ ನಂತರ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದರು.

ಕಳೆದೆರಡು ತಿಂಗಳಿನಿಂದ ಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಉಂಟಾದ ಹಾನಿಯ ಉಂಟಾದ ಹಾನಿಯ ಕುರಿತು ಗೃಹ ಕಚೇರಿ ಕೃಷ್ಣಾದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಸಿಇಒಗಳ ಸಂವಾದ ನಡೆಸಿದರು.

ಮಳೆಯ ಪರಿಣಾಮವಾಗಿ ಹಾನಿಗೊಳಗಾದ ಮನೆಗಳಿಗೆ ತಕ್ಷಣವೇ 10 ಸಾವಿರ ಪರಿಹಾರ ನೀಡಬೇಕು. ಸಾಂತ್ವನ ಕೇಂದ್ರಗಳಲ್ಲಿ ವಾಸ್ತವ್ಯದ ವ್ಯವಸ್ಥೆ ಮಾಡಬೇಕು. ಪರಿಹಾರ ಕಾರ್ಯಕ್ಕೆ ಈ ಹಿಂದಿನ ವರ್ಷಗಳಲ್ಲಿ ಹೊರತುಪಡಿಸಿ ರುವ ಮಾರ್ಗಸೂಚಿಗಳನ್ನು ಪಾಲಿಸಲು ಅವರು ಸಲಹೆ ನೀಡಿದರು ಎಂದು ಮೂಲಗಳು ತಿಳಿಸುತ್ತವೆ.

ಪ್ರತಿಯೊಂದು ಜಿಲ್ಲೆಯ ಜಿಲ್ಲಾಧಿಕಾರಿಗಳು ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಬೇಕು. ಬೆಳೆ ಮತ್ತು ಇತರ ಹಾನಿಯ ಬಗ್ಗೆ ಮಾಡಿಟ್ಟುಕೊಳ್ಳಬೇಕು. ಕೇಂದ್ರ ತಂಡ ಬರುವುದು ಇನ್ನೂ ಒಂದು ತಿಂಗಳಾಗಬಹುದು. ಆ ಸಂದರ್ಭದಲ್ಲಿ ಬೆಳೆಯೇ ಇರುವುದಿಲ್ಲ. ಅದಕ್ಕೋಸ್ಕರ ಹಾನಿಯ ಕುರಿತ ವಿಡಿಯೋ ಮಾಡಬಹುದು ಎಂದು ಅಧಿಕಾರಿಗಳಿಗೆ ಕಂದಾಯ ಸಚಿವ ಆರ್ .ಅಶೋಕ್ ಅವರು ಸಲಹೆ ನೀಡಿದರು.

ಸಭೆಯಲ್ಲಿ ವಸತಿ ಸಚಿವ ವಿ. ಸೋಮಣ್ಣ, ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ತೋಟಗಾರಿಕಾ ಸಚಿವ ಮುನಿರತ್ನ, ಮುಖ್ಯಮಂತ್ರಿ ಅವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಉಪಸ್ಥಿತರಿದ್ದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಕರ್ನಾಟಕ: ಉದ್ಯಮ ಸ್ನೇಹಿ ರಾಜ್ಯ

0

ಬೆಂಗಳೂರಿನಲ್ಲಿ ತಂತ್ರಜ್ಞಾನ ಶೃಂಗ ಸಭೆಯ ಎರಡನೇ ದಿನ ‘ಬೆಂಗಳೂರು ನೆಕ್ಟ್ಸ್’ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು.

ರಾಜ್ಯದಲ್ಲಿ ನವೋದ್ಯಮ ಹೆಚ್ಚಲು ಮತ್ತು ಇರುವ ಉದ್ಯಮಗಳು ಅಭಿವೃದ್ಧಿ ಕಾಣಲು ಇಲ್ಲಿನ ಸಂಸ್ಕೃತಿ ಕಾರಣ ಎಂದು ರಾಜ್ಯ ಸ್ಮಾರ್ಟ್ ಅಪ್ ಗ್ರೂಪ್ ನ ಮುಖ್ಯಸ್ಥ ಪ್ರಶಾಂತ್ ಪ್ರಕಾಶ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಈಗ ಶತಕೋಟಿ ಡಾಲರ್ ವಹಿವಾಟಿನ ಯೂನಿಕಾರ್ನ್ ಕಂಪನಿಗಳು ಸದ್ದು ಮಾಡುತ್ತಿವೆ. ಇನ್ನು ಒಂದೆರಡು ವರ್ಷಗ ಳಲ್ಲಿ 10 ಕೋಟಿ ಡಾಲರ್ ವಹಿವಾಟು ನಡೆಸುವ ಡೆಕಾಕಾರ್ನ್ ಕಂಪನಿಗಳು ರಾರಾಜಿಸಲಿವೆ ಎಂದರು. ಇದರ ಶ್ರೇಯಸ್ಸು ಶೇ. 90ರಷ್ಟು ನಮ್ಮ ರಾಜ್ಯದ ಸಂಸ್ಕೃತಿಗೆ ಸಲ್ಲಬೇಕು. ಇಲ್ಲಿ ಯಾವ ಪಕ್ಷದ ಸರ್ಕಾರ ಬಂದರು ಉದ್ಯಮ ಸ್ನೇಹಿಯಾಗಿರುತ್ತದೆ. ವಿಷನ್ ಗ್ರೂಪ್ ಗಳನ್ನು ಸ್ಥಾಪಿಸುವುದವರಲ್ಲಿ ನಮ್ಮವರೇ ಮೊದಲಿಗರು ಎಂದು ರಾಜ್ಯ ಸ್ಮಾರ್ಟ ವಿಷನ್ ಗ್ರೂಪ್ ನ ಮುಖ್ಯಸ್ಥ ತಿಳಿಸಿದರು.

‘ಇಂಥ ಸ್ಟಾರ್ಟಪ್ ಸ್ನೇಹಿ ವಾತಾವರಣ ಇರುವುದರಿಂದಲೇ ದೆಹಲಿ ಮತ್ತು ಜೈಪುರ ಗಳಿಂದ ಕಂಪನಿಗಳು ನಂತರ ಗೊಂಡವು’ ಎಂದು ಸುಜಿತ್ ಕುಮಾರ್ ಹರ್ಷಿಲ್ ಮಾಥೂರ್ ಹೇಳಿದರು.

ಕಿಂಡ್ರೆಲ್ ಕಂಪನಿಯ ಲಿಂಗರಾಜ ಸಾಹುಕಾರ್ ಅವರು ತಮ್ಮ ಸ್ಟಾರ್ಟಪ್ ನಲ್ಲಿ 19000 ಉದ್ಯೋಗಿಗಳು ಇರುವುದನ್ನು ತಿಳಿಸಿದರು.

ವಾಹನಗಳ ಖರೀದಿ : ಇಳಿಕೆ

0

ಭಾರತದಲ್ಲಿ ಹಬ್ಬಗಳು ತನ್ನದೇ ಆದಂತಹ ವಿಶೇಷತೆಯನ್ನು ಹೊಂದಿದೆ ಆ ಸಮಯದಲ್ಲಿ ಜನರು ವಾಹನಗಳನ್ನು ಹೆಚ್ಚಾಗಿ ಕೊಳ್ಳುತ್ತಾರೆ. ಹೀಗಾಗಿ ಹಬ್ಬಗಳ ಸಮಯದಲ್ಲಿ ವಾಹನಗಳ ರಿಟೈಲ್ ಮಾರಾಟವು ಹೆಚ್ಚಾಗಿ ನಡೆಯುತ್ತದೆ ಆದರೆ ಪ್ರಸ್ತುತ ವರ್ಷದ ಹಬ್ಬದ ಸಮಯದಲ್ಲಿ ವಾಹನಗಳ ರಿಟೈಲ್ ಮಾರಾಟವು ಶೇ. 8ರಷ್ಟು ಇಳಿಕೆ ಕಂಡಿದೆ ಎಂದು ಭಾರತೀಯ ವಾಹನ ವಿತರಕರ ಸಂಘಟನೆಗಳ ಒಕ್ಕೂಟವು ತಿಳಿಸಿದೆ.

ದ್ವಿಚಕ್ರ ಮತ್ತು ವಾಣಿಜ್ಯ ವಾಹನಗಳನ್ನು ಹೊರತುಪಡಿಸಿ ಮಿಕ್ಕೆಲ್ಲಾ ವಾಹನಗಳ ಮಾರಾಟ ಕಳೆದ ವರ್ಷಕ್ಕಿಂತ ಇಳಿಕೆ ಕಂಡಿದೆ ಪ್ರಯಾಣಿಕ ವಾಹನಗಳ ಮಾರಾಟ ಶೇ. 26 ರಷ್ಟು ಇಳಿಕೆ ಆದರೆ. ದ್ವಿಚಕ್ರ ವಾಹನ ಮಾರಾಟ ಶೇ. 18 ರಷ್ಟು ಇಳಿಕೆಯಾಗಿದೆ.

ಹತ್ತು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಹಬ್ಬದ ಸಮಯದಲ್ಲಿ ವಾಹನಗಳ ಮಾರಾಟದಲ್ಲಿ ಕುಸಿತ ಕಂಡಿದೆ. ಭಾರತದ ಮೇಲೆ ಸೆಮಿಕಂಡಕ್ಟರ್ ಕೊರತೆಯು ಪರಿಣಾಮ ಬೀರಿದೆ. ಐಷಾರಾಮಿ ವಾಹನಗಳಾದ ಎಕ್ಸ್ ಯು ವಿ, ಕಾಂಪ್ಯಾಕ್ಟ್ ವಾಹನಗಳನ್ನು ಗ್ರಾಹಕರಿಗೆ ನೀಡಲು ಸಾಧ್ಯವಾಗುತ್ತಿಲ್ಲ ಎಂದು ಒಕ್ಕೂಟದ ಅಧ್ಯಕ್ಷ ವಿಂಕೇಶ್ ಗುಲಾಟಿ ತಿಳಿಸಿದ್ದಾರೆ.

ಮಹಿಳಾ ಉದ್ಯಮಿಗಳಿಗೆ ಪ್ರೋತ್ಸಾಹ- ಸಿಎಂ

0

ಅಂತರಾಷ್ಟ್ರೀಯ ಮಹಿಳಾ ಉದ್ಯಮಿಗಳ ದಿನಾಚರಣೆ’ ಅಂಗವಾಗಿ ಗ್ರಾಮಗಳ ಸ್ತ್ರೀಶಕ್ತಿ ಸಂಘ ಗಳಿಂದ ಹಿಡಿದು ಬೃಹತ್ ಮಟ್ಟದ ಉದ್ಯಮಗಳಿಗಾಗಿಯೇ ಉತ್ತಮ ಆರ್ಥಿಕ ವ್ಯವಸ್ಥೆ ಕಲ್ಪಿಸಲು ಮಹಿಳೆಯರಿಗೆ ಪ್ರತ್ಯೇಕ ಆರ್ಥಿಕ ಸಂಸ್ಥೆ ರಚಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದಂತಹ ‘ಒಗ್ಗಟ್ಟಾಗಿ ಬೆಳೆಯೋಣ’ ಎಂಬ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಅಂಧ ಮಹಿಳೆಯರಿಗೆ ವಿಶೇಷ ಕಾರ್ಯಕ್ರಮವನ್ನು ಒಂದುವಾರದೊಳಗೆ ರೂಪಿಸಿ ಮಹಿಳೆಯರು ಉದ್ಯೋಗ ಹೊಂದುವಂತೆ ವಿಶೇಷ ಯೋಜನೆ ಜಾರಿ ಮಾಡಲಾಗುವುದು’ ಎಂದು ಸಿಎಂ ತಿಳಿಸಿದರು.

2019ರ ಕೈಗಾರಿಕಾ ನೀತಿ ಒಳಗೊಂಡಿದ್ದ ಮಹಿಳಾ ಉದ್ಯಮಿಗಳಿಗೆ ನೀಡುವ ಪ್ರೋತ್ಸಾಹಕಗಳ ಅಧ್ಯಾಯನವನ್ನು 2020-25ರ ನೀತಿಯಲ್ಲಿ ಸೇರಿಸಲಾಗುವುದು. ಈಗಾಗಲೇ ಮಹಿಳಾ ಉದ್ಯಮಿಗಳಿಗೆ ನೀಡುವ ನೀಡುವ ಅನುದಾನದಲ್ಲಿ ರಿಯಾಯಿತಿ ನೀಡಲಾಗಿದೆ. ಜಮೀನು ಖರೀದಿಗೆ ರಿಯಾಯಿತಿ ಒದಗಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಬೊಮ್ಮಾಯಿ ತಿಳಿಸಿದರು.

ಕೆ ಆರ್ ಎಸ್ ಜಲಾಶಯ ತುಂಬುತ್ತಿದೆ

0

ರಾಜ್ಯದಲ್ಲಿ ಎರಡು ವಾರಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕೆಆರ್ ಎಸ್ ಜಲಾಶಯಕ್ಕೆ ಒಳ ಹರಿವು ಹೆಚ್ಚಾಗಿದೆ.ಕೆಆರ್ ಎಸ್ ಜಲಾಶಯದಲ್ಲಿ ನೀರಿನ ಮಟ್ಟ ಹೆಚ್ಚಾದ ಹಿನ್ನೆಲೆ 18 ಸಾವಿರ ಕ್ಯುಸೆಕ್ ನೀರನ್ನು ಜಲಾಶಯದಿಂದ ಹೊರಗೆ ಬಿಡಲಾಗುತ್ತಿದೆ. ಇದರಿಂದ ಕಾವೇರಿ ನದಿಯು ಮೈದುಂಬಿ ಹರಿಯುತ್ತಿದೆ. ಕಾವೇರಿ ನದಿಯಲ್ಲಿ ನೀರಿನ ಸೆಳೆತ ಹೆಚ್ಚಾಗಿರುವುದರಿಂದ ಶ್ರೀರಂಗಪಟ್ಟಣ, ನಿಮಿಷಾಂಬ ದೇವಾಲಯದ ಬಳಿ ನದಿಗೆ ಯಾರು ಇಳಿಯದಂತೆ ಬ್ಯಾರಿಕೇಡ್ ಅಳವಡಿಸಲಾಗಿದೆ ಹಾಗೂ ನದಿಪಾತ್ರದ ಜನರಿಗೆ ಎಚ್ಚರಿಕೆ ನೀಡಲಾಗಿದೆ.

ಕೆ ಆರ್ ಎಸ್ ಜಲಾಶಯಕ್ಕೆ 18 ಸಾವಿರ ಕ್ಯುಸೆಕ್ಸ್ ನೀರು ಹರಿದು ಬಂದಿದ್ದು ಜಲಾಶಯದ ನೀರಿನ ಗರಿಷ್ಠ ನೀರಿನ ಮಟ್ಟ 124.80 ಅಡಿ ಹೆಚ್ಚಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಇದೇ ದಿನದ ಅವಧಿಯಲ್ಲಿ 47.16 ಟಿಎಂಸಿ ಅಡಿಗಳಷ್ಟು ನೀರಿತ್ತು. ಈ ಬಾರಿ ಜಲಾಶಯದಲ್ಲಿ ಸದ್ಯ 49.45 ಟಿಎಂಸಿ ಅಡಿಗಳಷ್ಟು ನೀರು ಸಂಗ್ರಹವಾಗಿದೆ ಎಂದು ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಇಂಜಿನಿಯರ್ ರಾಮಮೂರ್ತಿ ತಿಳಿಸಿದರು.

ಗಗನಕ್ಕೇರಿದ ತರಕಾರಿ ಬೆಲೆ

0

ಅಕಾಲಿಕ ಮಳೆಯಿಂದಾಗಿ ರಾಜ್ಯಾದ್ಯಂತ ಅಪಾರ ಬೆಳೆ ನಷ್ಟ ಉಂಟಾದ ಪರಿಣಾಮ ಈಗ ತರಕಾರಿ ಬೆಲೆ ಗ್ರಾಹಕರ ಕೈಗೆ ನಿಟುಕಲಾಗದಷ್ಟು ದುಬಾರಿಯಾಗಿದೆ.

 ರೈತರು ಕಷ್ಟಪಟ್ಟು ಬೆಳೆದ ಬೆಳೆಗಳು ಮಳೆಯಿಂದಾಗಿ ನೀರುಪಾಲಾಗಿದೆ. ಇದರಿಂದ ರೈತರು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಕಾರಣದಿಂದ ತರಕಾರಿ ಬೆಲೆಗಳು ದುಬಾರಿಯಾಗಿದ್ದು ಬಡ ಹಾಗೂ ಮಧ್ಯಮ ವರ್ಗದವರು ತರಕಾರಿ ಕೊಳ್ಳುವುದು ಕಷ್ಟವಾಗಿದೆ.

ಶಿವಮೊಗ್ಗದಲ್ಲಿ ವಾರದಿಂದೀಚೆಗೆ ಬಿಟ್ಟು ಬಿಡದೆ ವರುಣ ಆರ್ಭಟ ಹೆಚ್ಚಾಗಿದೆ. ಮಾರುಕಟ್ಟೆಯಲ್ಲಿ ತರಕಾರಿಗಳಾದ ಟೊಮೇಟೊ ಕೆಜಿಗೆ 70 ರೂಪಾಯಿ, ಬೀನ್ಸ್ ಕೆಜಿಗೆ 50.ರೂ , ಜವಳಿಕಾಯಿ ಕೆಜಿಗೆ 50.ರೂ, ಗೆಡ್ಡೆಕೋಸು 40.ರೂ ಹಾಗೂ ಈರುಳ್ಳಿ ಕೆಜಿಗೆ 40 ರಿಂದ 50 ರೂಪಾಯಿಗಳಷ್ಟು ಹೆಚ್ಚಳವಾಗಿದೆ. ಸೊಪ್ಪುಗಳು ಪ್ರತಿ ಕಟ್ಟಿಗೆ 10ರಿಂದ 20 ರೂಪಾಯಿ ಬೆಲೆ ಏರಿಕೆಯಾಗಿದೆ.

ಮಳೆಯನ ರಂಪಾಟ ಹೀಗೆ ಮುಂದುವರೆದರೆ ತರಕಾರಿಯ ಆವಕ ಕಡಿಮೆಯಾಗಿ ತರಕಾರಿ ಕ್ಷಾಮ ತಲೆದೋರಿತು ಎಂಬ ಆತಂಕ ಗ್ರಾಹಕರಲ್ಲಿ ಕಾಡುತ್ತಿದೆ.

ಡಿಜಿಟಲ್ ಕರೆನ್ಸಿ ಭಾರತದಲ್ಲಿ ಚಲಾವಣೆ ಪ್ರಯೋಗ?

0

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ 2022ರ ಮಾರ್ಚ್ ತಿಂಗಳಲ್ಲಿ ಪ್ರಾಯೋಗಿಕವಾಗಿ ಡಿಜಿಟಲ್ ಕರೆನ್ಸಿಯನ್ನು ಜಾರಿಗೆ ತರುವ ನಿರೀಕ್ಷೆ ಇದೆ. ಈ ಕುರಿತು ಆರ್ ಬಿ ಐ ಹಿರಿಯ ಅಧಿಕಾರಿ ಪಿ. ವಾಸುದೇವನ್ ಎಸ್ ಬಿ ಐ ಕಾರ್ಯಕ್ರಮದಲ್ಲಿ ತಿಳಿಸಿದ್ದಾರೆ.

ಸಿಬಿಡಿಸಿ ಎಂಬುದು ಸಾಮಾನ್ಯ ವಿಷಯವಲ್ಲ. ಇದನ್ನು ಅವಸರದಲ್ಲಿ ಬಿಡುಗಡೆ ಮಾಡಲು ಸಾಧ್ಯವಾಗದು. ಎಲ್ಲಾ ಆಯಾಮಗಳು, ಸಿದ್ಧತೆಗಳ ನ್ನು ಮಾಡುವುದು ಅನಿವಾರ್ಯ ಎಂದು ವಾಸುದೇವನ್ ಹೇಳಿದ್ದಾರೆ.

ಪ್ರಸ್ತುತ ಸಮಯದಲ್ಲಿ ಚಲಾವಣೆಯಲ್ಲಿರುವ ಕರೆನ್ಸಿ ರೂಪಾಯಿಗೆ ಪರ್ಯಾಯವಾಗಿ ಬಳಸಬಹುದಾದ, ವರ್ಚುವಲ್ ಕರೆನ್ಸಿ ಡಿಜಿಟಲ್ ಕರೆನ್ಸಿ. ಸೆಂಟ್ರಲ್ ಬ್ಯಾಂಕ್ ಡಿಜಿಟಲ್ ಕರೆನ್ಸಿಯನ್ನು ಸಿಬಿಸಿಸಿ ಚಲಾವಣೆಗೆ ತರಲು ಆರ್ ಬಿ ಐ ನಿರ್ಧರಿಸಿದೆ.
ಇದು ಬಿಟ್ ಕಾಯಿನ್ ಮಾದರಿಯಾಗಿತ್ತು ಕರೆನ್ಸಿ ಅಲ್ಲ. ಬಿಟ್ ಕಾಯಿನ್ ಡಿಜಿಟಲ್ ದತ್ತಾಂಶಗಳಿಗೆ ಸಂಗ್ರಹಿಸಲಾಗಿರುತ್ತದೆ. ಯಾವುದೇ ಸರ್ಕಾರಿ ನಿಯಂತ್ರಕ ವ್ಯವಸ್ಥೆಗೆ ಸಂಬಂಧಿಸಿರುವುದಿಲ್ಲ. ಆದರೆ ಆರ್ ಬಿ ಐ ಡಿಜಿಟಲ್ ಕರೆನ್ಸಿ ಸರ್ಕಾರದ ಮಾನ್ಯತೆಗಳನ್ನು ಹೊಂದಿರುತ್ತದೆ.

ಆರ್ ಬಿ ಐ ಕರೆನ್ಸಿ ಯಿಂದ ಕಾಗದದ ನೋಟುಗಳ ಮೇಲಿನ ಅವಲಂಬನೆ ಕಡಿಮೆಯಾಗಲಿದೆ. ಹಣಕಾಸು ವರ್ಗಾವಣೆಗೆ ತಂತ್ರಜ್ಞಾನದ ನೆರವಿನಿಂದ ಸುಲಭವಾಗಲಿದೆ. ಖಾಸಗಿ ಕ್ರಿಪ್ಟೋ ಕರೆನ್ಸಿಗಳಿಗೆ ಪರ್ಯಾಯವಾಗಿ ಡಿಜಿಟಲ್ ಕರೆನ್ಸಿಯನ್ನು ಚಲಾವಣೆ ಗೊಳಿಸಬಹುದಾಗಿದೆ.