Department of Kannada and Culture ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಶಿವಮೊಗ್ಗ ಹಾಗೂ ಜಿಲ್ಲಾ ಕುಂಬಾರರ ಸಂಘ ಇವರುಗಳ ಸಂಯಕ್ತಾಶ್ರಯದಲ್ಲಿ ಫೆ.20 ರ ಬೆಳಗ್ಗೆ 11 ಗಂಟೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ಸಂತ ಕವಿ ಸರ್ವಜ್ಞ ಜಯಂತಿಯನ್ನು ಏರ್ಪಡಿಸಲಾಗಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧುಬಂಗಾರಪ್ಪ ಇವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಶಾಸಕ ಎಸ್.ಎನ್. ಚನ್ನಬಸಪ್ಪರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ತಂಗಡಗಿ ಶಿವರಾಜ್ ಸಂಗಪ್ಪರವರು ವಿಶೇಷ ಆಹ್ವಾನಿತರಾಗಿ ಉಪಸ್ಥಿತರಿರಲಿದ್ದಾರೆ.
ಕಾರ್ಯಕ್ರಮದಲ್ಲಿ ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ಪಾಲಿಕೆ ಮಹಾಪೌರರು, ಜನಪ್ರತಿನಿಧಿಗಳು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು, ಜಿಲ್ಲೆಯ ಎಲ್ಲಾ ಗೌರವಾನ್ವಿತ ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿವರ್ಗ ಮತ್ತು ವಿವಿಧ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಹಾಗೂ ಸದಸ್ಯರು, ಜಿಲ್ಲಾ ಮತ್ತು ತಾಲೂಕು ಕುಂಬಾರ ಸಂಘಗಳ ಅಧ್ಯಕ್ಷರುಗಳು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿ.ಪಂ ಸಿಇಓ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ಮಹಾನಗರ ಪಾಲಿಕೆ ಆಯುಕ್ತರು ಮತ್ತು ಇನ್ನಿತರ ಗಣ್ಯರು, ಅಧಿಕಾರಿಗಳು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
Department of Kannada and Culture ಕರ್ನಾಟಕ ನಾಟಕ ಅಕಾಡೆಮಿಯ ಜಿಲ್ಲಾ ಸಂಚಾಲಕರು ಹಾಗೂ ಕನ್ನಡ ಉಪನ್ಯಾಸಕ ಡಾ. ಗಣೇಶ ಆರ್. ಕೆಂಚನಾಲ್ ಇವರಿಂದ ವಿಶೇಷ ಉಪನ್ಯಾಸ ಆಯೋಜಿಸಲಾಗಿದೆ.
Department of Kannada and Culture ಫೆ.20. ಕವಿ ಸರ್ವಜ್ಞ ಜಯಂತಿ ಆಚರಣೆಗೆ ಜಿಲ್ಲಾಡಳಿತ ಸಜ್ಜು
Water Supply and Drainage Board ನಿರುದ್ಯೋಗಿಗಳಿಗೆ ಸಿಹಿಸುದ್ದಿ!. ಫೆ.21. ಶಿವಮೊಗ್ಗದಲ್ಲಿಉದ್ಯೋಗ ಮೇಳ
Water Supply and Drainage Board ಶಿವಮೊಗ್ಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ 2025-26 ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕರವಸೂಲಾತಿ ಮಾಡಲು ಫೆ. 22 ರ ಭಾನುವಾರದಂದು ಶರಾವತಿ ನಗರ ಎ ಬ್ಲಾಕ್ ಆದಿಚುಂಚನಗಿರಿ ಶಾಲೆ ಎದುರು ನರ್ಸ್ ಕ್ವಾಟರ್ಸ್ ಹತ್ತಿರ, ಗೋಪಾಳ 100 ಅಡಿ ರಸ್ತೆ ವಿನಾಯಕ ವೃತ್ತ ಗಣಪತಿ ದೇವಸ್ಥಾನದ ಮುಂಭಾಗ, ಬಿ.ಹೆಚ್.ರಸ್ತೆ ಸಹ್ಯಾದ್ರಿ ಕಾಲೇಜ್ ಮೊದಲನೆ ಗೇಟ್ ಹತ್ತಿರ, ಬೊಮ್ಮನಕಟ್ಟೆ ಅಪೂರ್ವ ಕಾಲೇಜಿನ ಹತ್ತಿರ ಹಾಗೂ ವಿನೋಬನಗರ ಪೊಲೀಸ್ ಚೌಕಿ ಪೊಲೀಸ್ ಠಾಣೆ ಎದುರು ವಿಶೇಷ ಕರ ವಸೂಲಾತಿ ಕೌಂಟರ್‌ಗಳನ್ನು ತೆರೆಯಲಾಗಿದೆ.
Water Supply and Drainage Board ಸಾರ್ವಜನಿಕರು ಇದರ ಸದುಪಯೋಗ ಪಡೆದು ನೀರಿನ ಬಾಕಿ ಕಂದಾಯ ಹಾಗೂ ಬಾಕಿ ಕರವಸೂಲಾತಿ ಉಳಿಸಿಕೊಂಡಿರುವ ಗ್ರಾಹಕರು ಕಂದಾಯ ಪಾವತಿ ಮಾಡಿಕೊಳ್ಳಬೇಕೆಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.
ಹೊನ್ನಾಳಿ ಹಿರೇಕಲ್ಮಠದಲ್ಲಿ ಫೆ.27 ರಿಂದ ಮಾರ್ಚ್ 2 ವರೆಗೆ ಕೃಷಿಮೇಳ
ಹೊನ್ನಾಳಿ ಹಿರೇಕಲ್ಮಠದಲ್ಲಿ ರಾಜ್ಯಮಟ್ಟದ ಕೃಷಿ ಮೇಳವು ಇದೇ ತಿಂಗಳು 27 28 ಹಾಗೂ 1.2.ರಂದು ನಾಲ್ಕು ದಿನಗಳ ಕಾಲ ಕೃಷಿ ಮೇಳವು ನಡೆಯಲಿದೆ. ಲಿಂಗೈಕ್ಯ ಶ್ರೀ ಮೃತ್ಯುಂಜಯ ಶಿವಾಚಾರ್ಯ ಮಹಾಸ್ವಾಮೀಜಿಯವರ 56ನೇ ಪುಣ್ಯರಾಧನೆ ಹಾಗೂ ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಜಿಯವರ 11ನೇ ವರ್ಷದ ಪುಣ್ಯ ಸ್ಮರಣೆ ಪ್ರಯುಕ್ತ ನಡೆಯಲಿದೆ.
ದತ್ತಿ ಉಪನ್ಯಾಸ ಹಾಗೂ ಸಾಮೂಹಿಕ ವಿವಾಹ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಈ ಕಾರ್ಯಕ್ರಮದ ಜೊತೆಗೆ ರಾಜ್ಯಮಟ್ಟದ ಕೃಷಿ ಮೇಳವು ನಡೆಯಲಿದ್ದು ರಾಜಕೀಯ ಮುಖಂಡರು ಹಾಗೂ ಚಲನಚಿತ್ರದ ಕಲಾವಿದರು. ಹಾಗೂ ರಾಜ್ಯದ ಪ್ರಗತಿಪರ ರೈತರಿಗೆ ಅಭಿನಂದಿಸಲಾಗುವುದು. ರೈತರಿಗಾಗಿ ಕೃಷಿಘೋಷ್ಠಿ ಕೃಷಿ ಉಪಕರಣಗಳ ಮಳಿಗೆ ಹಾಗೂ ಪ್ರಸಾದ ವ್ಯವಸ್ಥೆ ಹಾಗೂ ಧಾರ್ಮಿಕ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದಂತಹ ಗಣ್ಯ ಮಾನ್ಯರಿಗೆ ಅಭಿನಂದನಾ ಸಮಾರಂಭ ನಡೆಯಲಿದೆ.
ದಾವಣಗೆರೆ ಜಿಲ್ಲೆ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ, ಶಾಸಕ ಡಿಜಿ ಶಾಂತನಗೌಡ್ರು ಹಾಗೂ ಹೆಚ್ ಪಿ ಮಂಜಪ್ಪ ಹಾಗೂ ಮಾಜಿ ಸಚಿವ ರೇಣುಕಾಚಾರ್ಯ ಅವರ ಮುಖಂಡತ್ವದಲ್ಲಿ ಹಾಗೂ ಪರಮಪೂಜ್ಯ ಶ್ರೀ ಡಾ. ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಮಹಾಸ್ವಾಮಿಜಿಯವರ ಮಾರ್ಗ ದರ್ಶನದಲ್ಲಿ ನಡೆಯುವುದು.
ಶಿವಮೊಗ್ಗದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಶ್ರೀಗಳು ಈ ಕುರಿತು ವಿವರ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಕೆಪಿ ಕುಬೇಂದ್ರಪ್ಪ. ಧನರಾಜ್ ವಿಜಯಕುಮಾರ್, ಹೆಚ್ ಎ ರಂಜಿತ್, ಕತ್ತಿಗೆ ನಾಗರಾಜ್, ರಘು, ಹೊಸಕೆರೆ ಸುರೇಶ್, ರುದ್ರೇಶ್ ಶಿವು ಹಾಲಸ್ವಾಮಿ. ಬಿ ಸುರೇಶ್ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು
Chandragutti Festival ಚಂದ್ರಗುತ್ತಿ ದೇವಿಜಾತ್ರೆಯಲ್ಲಿ ಬೆತ್ತಲೆ ಸೇವೆ ನಿಷೇಧಿಸಿ ಡೀಸಿ ಅವರ ಆದೇಶ
Chandragutti Festival ಸೊರಬ ತಾಲ್ಲೂಕಿನ ಚಂದ್ರಗುತ್ತಿ ಗ್ರಾಮದಲ್ಲಿ ಫೆ.24 ಮತ್ತು 25 ರಂದು ಶ್ರೀ ರೇಣುಕಮ್ಮ ದೇವಿ ಜಾತ್ರೆ ನಡೆಯುತ್ತಿದ್ದು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಈ 2 ದಿನಗಳ ಕಾಲ ಬೆತ್ತಲೆ ಸೇವೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿಯವರು ಆದೇಶಿಸಿದ್ದಾರೆ.
ಕರ್ನಾಟಕ ಪೊಲೀಸ್ ಕಾಯ್ದೆ 1963 ರ ಕಲಂ 35 ರನ್ವಯ ರೇಣುಕಮ್ಮ ದೇವಿಯ ಜಾತ್ರಾ ಮಹೋತ್ಸವದಲ್ಲಿ ವರದಾ ನದಿಯಲ್ಲಿ ಧಾರ್ಮಿಕ ಸ್ನಾನ ಮಾಡುವುದು, ದೇವರಿಗೆ ಮುಡಿ ಕೊಡುವುದು, ಪಡ್ಲಿಗಿ ತುಂಬಿಸುವುದು ಮತ್ತು ‘ಬೆತ್ತಲೆ ಸೇವೆ’ ಯನ್ನು ನಿಷೇಧಿಸಿ ಆದೇಶ ಹೊರಡಿಸಿರುತ್ತಾರೆ. ಈ ನಿಷೇಧಾಜ್ಞೆಯು ಶ್ರೀ ರೇಣುಕಮ್ಮ ದೇವಿಯ ರಥೋತ್ಸವ, ಪೂಜಾ ಕಾರ್ಯಗಳು ಮತ್ತು ಧಾರ್ಮಿಕ ವಿಧಿವಿಧಾನಗಳನ್ನು ನಡೆಸುವುದಕ್ಕೆ ಅನ್ವಯಿಸುವುದಿಲ್ಲವೆಂದು ತಿಳಿಸಿದ್ದಾರೆ
Dinesh Gundu Rao ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಬಂದವರು ಯಾರೂ ‘ ಔಷಧ ಇಲ್ಲ” ಎಂದು ವಾಪಾಸ್ ಹೋಗಬಾರದು- ಸಚಿವ ದಿನೇಶ್ ಗುಂಡೂರಾವ್
Dinesh Gundu Rao ಕರ್ನಾಟಕ ಸಾರ್ವತ್ರಿಕ ಆರೋಗ್ಯ ಆಂದೋಲನ ವತಿಯಿಂದ ಬೆಂಗಳೂರಿನ ಗಾಂಧಿಭವನದಲ್ಲಿ ಇಂದು ಹಮ್ಮಿಕೊಂಡಿದ್ದ ಆರೋಗ್ಯ ಹಕ್ಕಿನ ಜಾಥಾ-2026ರ ಸಮಾರೋಪ ಕಾರ್ಯಕ್ರಮದಲ್ಲಿ ರಾಜ್ಯದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪಾಲ್ಗೊಂಡು ಮಾತನಾಡಿದರು.
2025-26ನೇ ಸಾಲಿನ ವಾರ್ಷಿಕ ಬೇಡಿಕೆ ಪಟ್ಟಿಗೆ ಸಂಬಂಧಿಸಿದಂತೆ ಸರ್ಕಾರಿ ಆಸ್ಪತ್ರೆಗಳಿಗೆ ಅಗತ್ಯವಿರುವ ಔಷಧಿಗಳನ್ನು ಒದಗಿಸಲು ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ (ಕೆಎಸ್‌ಎಂಸಿಎಲ್) ವತಿಯಿಂದ ಔಷಧಿಗಳ ಖರೀದಿ ಪ್ರಕ್ರಿಯೆ ಆರಂಭಿಸಲಾಗಿದ್ದು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳ್ಳಲಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು
.
ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಆಗಮಿಸುವ ಯಾರೊಬ್ಬರೂ “ಔಷಧ ಇಲ್ಲ” ಎಂದು ವಾಪಸ್ ಹೋಗಬಾರದು. ಆ ನಿಟ್ಟಿನಲ್ಲಿ ನಮ್ಮ ಸರ್ಕಾರ ಹಲವು ಕಾರ್ಯಕ್ರಮಗಳನ್ನು ರೂಪಿಸಿದ್ದು, ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿಯೂ ಸಮರ್ಪಕ ಔಷಧಗಳು ಲಭ್ಯವಾಗುವಂತೆ ಕ್ರಮ ಕೈಗೊಳ್ಳುತ್ತಿದೆ. ತಂತ್ರಜ್ಞಾನ ಬಳಸಿಕೊಂಡು ಯಾವ ಆಸ್ಪತ್ರೆಗಳಲ್ಲಿ ಯಾವ ಔಷಧಗಳ ಸಂಗ್ರಹ ಎಷ್ಟಿದೆ ಎಂಬುದನ್ನು ಟ್ರ್ಯಾಕ್ ಮಾಡುತ್ತಿದ್ದು, ಈ ಪ್ರಕ್ರಿಯೆ ಕೂಡ ಇನ್ನಷ್ಟು ಸರಳವಾಗಲಿದೆ.
ನಮ್ಮ ಸರ್ಕಾರ ಆರೋಗ್ಯ ವ್ಯವಸ್ಥೆಯಲ್ಲಿ ಅಮೂಲಾಗ್ರ ಸುಧಾರಣೆಗಳನ್ನು ನಿರಂತರವಾಗಿ ತರುತ್ತಿದ್ದು, ಗುಣಮಟ್ಟದ ಔಷಧ ಪೂರೈಕೆಯ ಬದ್ಧತೆಯೊಂದಿಗೆ ಕಾರ್ಯನಿರ್ವಹಿಸುತ್ತಿದೆ ಎಂದು ಸಚಿವರು ತಿಳಿಸಿದರು
Karnataka Janapada Parishath ಶಿವಮೊಗ್ಗ ಜಿಲ್ಲಾ ಏಳನೇ ಜಾನಪದ ಸಮ್ಮೇಳನ: ಹಿರಿಯ “ಜನಪದ ಧ್ವನಿ” ಕೆ. ಯುವರಾಜ್ ಸರ್ವಾಧ್ಯಕ್ಷತೆ
Karnataka Janapada Parishath ಕರ್ನಾಟಕ ಜಾನಪದ ಪರಿಷತ್ತು ವತಿಯಿಂದ ಮಾ.21 ರಂದು ಶನಿವಾರ ಆಲದಹಳ್ಳಿ ಸೋಮಿನ ಕೊಪ್ಪದಲ್ಲಿ ಜಿಲ್ಲಾ ಮಟ್ಟದ 7 ನೇ , ಸರ್ವಾಧ್ಯಕ್ಷರಾಗಿ ಜಾನಪದ ಗಾಯಕ ಕೆ. ಯುವರಾಜ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಅಧ್ಯಕ್ಷರಾದ ಡಿ. ಮಂಜುನಾಥ ತಿಳಿಸಿದ್ದಾರೆ.
ಕಜಾಪ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸಮ್ಮೇಳನ ಸರ್ವಾಧ್ಯಕ್ಷರ ಆಯ್ಕೆ ಮಾಡಲಾಯಿತು. ಜಿಲ್ಲೆಯ ಸುಮಾರು ಇಪ್ಪತ್ತು ವಿವಿಧ ಪ್ರಕಾರದ ಜಾನಪದ ಕಲಾ ತಂಡಗಳು ಸಮ್ಮೇಳನದಲ್ಲಿ ಭಾಗವಹಿಸಲಿದೆ ಎಂದು ತಿಳಿಸಿದ್ದಾರೆ.
ಫೆ.19, 20 & 21 ರಂದು ತಾವರೆಚಟ್ನಳ್ಳಿ ವಿದ್ಯುತ್ ಕೇಂದ್ರದ ನಿರ್ವಹಣೆ ಕಾರ್ಯ : ಕುವೆಂಪು ನಗರದ ಸೂಡಾ ಸಿ & ಡಿ ಬ್ಲಾಕ್ ಸುತ್ತಮುತ್ತ ವಿದ್ಯುತ್ ವ್ಯತ್ಯಯ
ಫೆ.19, 20 ಮತ್ತು 21 ರಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ತಾವರೆಚಟ್ನಹಳ್ಳಿ ವಿವಿ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಕುವೆಂಪುನಗರದ ಸೂಡಾ ಸಿ ಮತ್ತು ಡಿ ಬ್ಲಾಕ್, ಶಿವಕುಮಾರಸ್ವಾಮಿ ಲೇಔಟ್ ಮತ್ತು ಇನ್ಫಾ ಸಿಟಿ, ಮ್ಯಾಕ್ಸ್ ಲೇಔಟ್, ಎಂಇಎಸ್ ಲೇಔಟ್, ರೆಡ್ಡಿ ಲೇಔಟ್, ಸವಳಂಗ ರಸ್ತೆ ಹಾಗೂ ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಹಳ್ಳಿ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚನ್ನಮುಂಬಾಪುರ, ಮತ್ತೋಡು, ರತ್ನಗಿರಿ ನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜು, ಕೃಷಿ ಕಾಲೇಜು, ಗೋಂದಿ ಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಬೀರನಕೆರೆ, ಕಲ್ಲಾಪುರ, ಬಸವನಗಂಗೂರು, ಮೇಲಿನ ಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.
ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದಿಂದ ಆಹಾರವಾಹಿನಿ ಸೌಲಭ್ಯ ಯೋಜನೆ: ಸಹಾಯಧನಕ್ಕೆ ಅರ್ಜಿ ಆಹ್ವಾನ
ಕರ್ನಾಟಕ ವೀರಶೈವ ಲಿಂಗಾಯತ ಸಮುದಾಯದ ಅಭಿವೃದ್ದಿ ನಿಗಮದ ವತಿಯಿಂದ 2025-26 ನೇ ಸಾಲಿಗೆ ಆಹಾರ ವಾಹಿನಿ ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿ ಮಳಿಗೆಗಳನ್ನು ನಾಲ್ಕು ಚಕ್ರಗಳ ಇವಿ-ಗೂಡ್ಸ್ ವಾಹನಗಳನ್ನು ಅಗತ್ಯಕ್ಕೆ ತಕ್ಕಂತೆ ನವೀಕರಿಸಿ ಫಲಾನುಭವಿಗಳಿಗೆ ವಿತರಿಸುವ ಯೋಜನೆಯಲ್ಲಿ ನಿಗಮದಿಂದ ವಾಹನ ಖರೀದಿಗೆ ರೂ.3.00 ಲಕ್ಷಗಳ ಸಹಾಯಧನವನ್ನು ಪಡೆಯಲು ಸೇವಾಸಿಂದು ಪೋರ್ಟೆಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯು ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಅಲೆಮಾರಿ/ಅರೆಅಲೆಮಾರಿ ಸಮುದಾಯ, ಒಕ್ಕಲಿಗ, ಅಂಬಿಗ, ಕಾಡುಗೊಲ್ಲ, ಹಟ್ಟಿಗೊಲ್ಲ, ಮರಾಠ ಮತ್ತು ಇದರ ಉಪಜಾತಿ ಸಮುದಾಯಗಳನ್ನು ಹೊರತುಪಡಿಸಿ ವೀರಶೈವ ಲಿಂಗಾಯತ ಸಮುದಾಯಕ್ಕೆ ಮಾತ್ರ ಸೇರಿದವರಾಗಿರಬೇಕು.
ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು, ಆಧಾರ್ ಕಾರ್ಡ್ ನಲ್ಲಿರುವಂತೆ ಅರ್ಜಿದಾರರ ಹೆಸರು ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇರುವಂತೆ ಹೊಂದಾಣಿಕೆಯಾಗಬೇಕು.ಕುಟುಂಬದ ವಾರ್ಷಿಕ ವರಮಾನ ರೂ.3.00 ಲಕ್ಷಗಳ ಒಳಗಿರಬೇಕು ಹಾಗೂ ಅರ್ಜಿದಾರರ ವಯಸ್ಸು 21 ರಿಂದ 45 ವರ್ಷ ಒಳಗಿನವರಾಗಿರಬೇಕು.
ಒಂದು ಬಾರಿ ನಿಗಮದ ಯಾವುದಾದರು ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸುವಂತಿಲ್ಲ. ಸರ್ಕಾರದ ವಿವೇಚನಾ ಕೋಟಾ/ನಿಗಮದ ಅಧ್ಯಕ್ಷರು/ನಿರ್ದೇಶಕರ ಮಂಡಳಿಯ ವಿವೇಚನಾ ಕೋಟಾದಲ್ಲಿ ಸೌಲಭ್ಯ ಪಡೆಯಬಯಸುವವರೂ ಸಹ ಆನ್‌ಲೈನ್‌ನಲ್ಲಿಯೇ ಅರ್ಜಿಯನ್ನು ಸಲ್ಲಿಸಬೇಕು.
ಆಸಕ್ತರು ಸೇವಾಸಿಂದು ಪೋರ್ಟೆಲ್ http://sevasindhukarnataka.gov.in ಮೂಲಕ ಗ್ರಾಮ ಒನ್, ಬೆಂಗಳೂರು ಒನ್, ಮತ್ತು ಕರ್ನಾಟಕ ಒನ್, ಸೇವಾ ಕೇಂದ್ರಗಳಲ್ಲಿ ಮಾ. 06 ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ನಿಗಮದ ಜಾಲತಾಣ http://kvldcl.karnataka.gov.in ಹಾಗೂ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಟ್ಟಡ, ಬಾಲರಾಜ್ ಅರಸ್ ರಸ್ತೆ, ಕೆ.ಇ.ಬಿ. ಸರ್ಕಲ್ ಹತ್ತಿರ, ಶಿವಮೊಗ್ಗ,ದೂ. ಸಂ:08182-229634ನ್ನು ಸಂಪರ್ಕಿಸುವುದು.
‘ತರಕಾರಿ ಬೀಜಗಳ ಕಿಟ್ ‘ ಪಡೆಯಲು ಆಸಕ್ತ ರೈತರಿಂದ ಅರ್ಜಿ ಆಹ್ವಾನ
ಶಿವಮೊಗ್ಗ ತಾಲ್ಲೂಕು ತೋಟಗಾರಿಕೆ ಇಲಾಖೆಯ ವತಿಯಿಂದ 2025-26 ನೇ ಸಾಲಿನಲ್ಲಿ ಸಮಗ್ರ ತೋಟಗಾರಿಕೆ ಅಭಿವೃದ್ದಿ ಯೋಜನೆಯಡಿ ‘ತರಕಾರಿ ಬೀಜಗಳ ಕಿಟ್’ ಗಳನ್ನು ರೈತರಿಗೆ ವಿತರಿಸಲು ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಫೆ.23 ಕಡೆಯ ದಿನವಾಗಿದ್ದು ರೈತರು ತಮ್ಮ ಜಮೀನಿಗೆ ಸಂಬಂಧಪಟ್ಟ ಪ್ರಸ್ತುತ ವರ್ಷದ ಪಹಣಿ/ಆರ್‌ಟಿಸಿ, ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್‌ಬುಕ್ ಜೆರಾಕ್ಸ್ ಪ್ರತಿಗಳನ್ನು ಸಲ್ಲಿಸಬೇಕು.
ಆಸಕ್ತ ರೈತರು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ, ಗಾಂಧಿಪಾರ್ಕ್, ಶಿವಮೊಗ್ಗ ಇವರನ್ನು ಅಥವಾ ಹೋಬಳಿ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಿ ಅರ್ಜಿಯನ್ನು ಪಡೆದು ಸಲ್ಲಿಸಬಹುದು ಎಂದು ಶಿವಮೊಗ್ಗ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.
