ಕೋವಿಡ್ ಬಗೆಗಿನ ಪ್ರಚಾರದ ನಡುವೆಯೂ ನೂರು ಕೋಟಿ ಲಸಿಕೆ ನೀಡಿರುವುದು ದೇಶದ ಸಾಧನೆಯಾಗಿದೆ. ಅನೇಕರು ಇದರ ಬಗ್ಗೆ ಸಲ್ಲದ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಆದರೆ ಪ್ರಧಾನಿಗಳು ಯಾವುದಕ್ಕೂ ತಲೆಕೆಡಿಸಿಕೊಳ್ಳದೆ ತಮ್ಮ ಕೆಲಸ ತಾವು ಮಾಡಿ ದೇಶದಲ್ಲಿ ಒಂದು ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಇದಕ್ಕೆ ಸಹಕರಿಸಿದ ಎಲ್ಲರಿಗೂ ಅಭಿನಂದನೆಗಳು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರು ಶಿವಮೊಗ್ಗದ ಆರೋಗ್ಯ ತರಬೇತಿ ಕೇಂದ್ರದಲ್ಲಿ ಆಯೋಜಿಸಿದ್ದ ಕೊರೊನ ವಾರಿಯರ್ಸ್ ಸನ್ಮಾನ ಸಮಾರಂಭದಲ್ಲಿ ಮಾತನಾಡುತ್ತಿದ್ದರು.
ಈ ಸಂದರ್ಭದಲ್ಲಿ ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ, ಗೃಹಸಚಿವ ಅರಗ ಜ್ಞಾನೇಂದ್ರ, ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ, ಜಿಲ್ಲಾ ಆರೋಗ್ಯ ಅಧಿಕಾರಿ ರಾಜೇಶ್ ಸುರಗಿಹಳ್ಳಿ, ಮಹಾನಗರ ಪಾಲಿಕೆ ಮೇಯರ್ ಸುನಿತಾ ಅಣ್ಣಪ್ಪ ಸೇರಿದಂತೆ ಅಧಿಕಾರಿಗಳು, ಪಕ್ಷದ ಮುಖಂಡರು ಉಪಸ್ಥಿತರಿದ್ದರು.
ಹಿಂಸಾತ್ಮಕ ಕ್ಯಾಪಿಟಲ್ ದಂಗೆ ಮತ್ತು ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್ ಮತ್ತು ಟ್ವಿಟರ್ ನಿಂದ ನಿಷ್ಕ್ರಿಯಗೊಳಿಸಿದ ನಂತರ ತನ್ನ ಅಂತರ್ಜಾಲದ ಪ್ರಾಬಲ್ಯವನ್ನು ಮರುಪಡೆಯಲು ಯುಎಸ್ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮದೇ ಸಾಮಾಜಿಕ ಜಾಲತಾಣವನ್ನು ಆರಂಭಿಸುವ ಯೋಜನೆಯನ್ನು ಘೋಷಿಸಿದ್ದಾರೆ. “Truth social” ಮೀಡಿಯಾ ಮತ್ತು ಟೆಕ್ನಾಲಜಿ ಗ್ರೂಪ್ ಎಂಬ ಮಾಧ್ಯಮ ಸಂಸ್ಥೆ ಜೊತೆಗೆ “ಟ್ರುಥ್” (ಸತ್ಯ) ಎಂಬ ಆಪ್ ಆರಂಭಿಸುವುದಾಗಿ ತಿಳಿಸಿದ್ದಾರೆ. ಇದು ಈಗಾಗಲೇ ಆಪಲ್ ನ ಆಫ್ ಸ್ಟೋರ್ ನಲ್ಲಿ ಫ್ರೀ- ಆರ್ಡರ್ ಗೆ ಲಭ್ಯವಿದೆ ಎಂದು ಹೇಳಿದ್ದಾರೆ. “ನಾವು ಟ್ವಿಟರ್ ನಲ್ಲಿ ತಾಲಿಬಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಇರುವ ಜಗತ್ತಿನಲ್ಲಿ ವಾಸಿಸುತ್ತಿದ್ದೇವೆ. ಸಮಾಜಘಾತುಕ ಶಕ್ತಿಗಳಿಗೆ ಅವಕಾಶ ಇರುವ ಟ್ವಿಟರ್ ನಲ್ಲಿ ಅಮೆರಿಕ ಜನರ ಆಗಿನ ಅಧ್ಯಕ್ಷರಾಗಿದ್ದವರಿಗೆ ಮಾತ್ರ ನಿರ್ಬಂಧ ಹೇರಲಾಗಿದೆ. ಇದನ್ನು ಸಹಿಸಲು ಸಾಧ್ಯವಿಲ್ಲ ” ಎಂದು ಟ್ರಂಪ್ ಕಿಡಿಕಾರಿದ್ದಾರೆ. ವಿಶ್ವದ ದಿಗ್ಗಜ ಸಾಮಾಜಿಕ ಜಾಲತಾಣ ಕಂಪನಿಗಳಿಗೆ ಸಮವಾದ ಪೈಪೋಟಿಯನ್ನು ತಮ್ಮ ಹೊಸ ಆಪ್ ನೀಡುವುದರಲ್ಲಿ ಸಂದೇಹವಿಲ್ಲ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ಆಕ್ವಿಸಿಷನ್ ಕಾರ್ಪೊರೇಷನ್ ಎಂಬ ಕಂಪನಿಯ ಜೊತೆಗೂಡಿ ಆಪ್ ಅಭಿವೃದ್ಧಿಗೊಳಿಸಲಾಗಿದ್ದು, ಇದು ಸುದ್ದಿ, ಆನ್ಲೈನ್ ಗೇಮ್ಸ್, ಹಾಗೂ ಮನರಂಜನಾ ಕಾರ್ಯಕ್ರಮಗಳನ್ನು ಸಹ ಒದಗಿಸುತ್ತದೆ ಎಂದು ಹೇಳಿದ್ದಾರೆ.ತಾವು ಅಮೇರಿಕಾ ಅಧ್ಯಕ್ಷಗಾದಿಯನ್ನ ಏರುವಲ್ಲಿ ಸಾಮಾಜಿಕ ಜಾಲತಾಣಗಳು ಪ್ರಮುಖ ಪಾತ್ರ ವಹಿಸಿವೆ ಎಂಬುದನ್ನು ಸ್ಮರಿಸಿಕೊಂಡಿದ್ದಾರೆ. ಈಗಾಗಲೇ ವರ್ಷಾರಂಭದಲ್ಲೇ “From the desk of Donald J Trump ” ಎಂಬ ಬ್ಲಾಗ್ ಬರವಣಿಗೆಯಲ್ಲಿ ಸಕ್ರಿಯರಾಗಿದ್ದಾರೆ.ಬಹಳ ಮಂದಿ ಸಧ್ಯದ ಬೃಹತ್ ಸಾಮಾಜಿಕ ಜಾಲತಾಣ ಸಂಘಟನೆಯ ( Big Tech) ವಿರುದ್ಧ ಸೆಟೆದು ನಿಲ್ಲುವ ಪ್ರಯತ್ನ ಯಾರಾದರೂ ಮಾಡಬಹುದಲ್ಲ ? ಎಂಬ ಪ್ರಶ್ನೆಗೆ ತಾವು ಸಧ್ಯದಲ್ಲೇ ಎದ್ದು ನಿಲ್ಲುವುದಾಗಿ ಹೇಳಿದ್ದಾರೆ. ತಂತ್ರಜ್ಞಾನವು ಅತ್ಯಂತ ತೀವ್ರಗತಿಯಲ್ಲಿ ಬೆಳೆಯುತ್ತಿರುವ ಇಂದಿನ ಜಗತ್ತಿನಲ್ಲಿ ಮಾಧ್ಯಮಗಳಲ್ಲಿ ಆಂತರಿಕ ಪೈಪೋಟಿ ಇದೆ. ಇಂತಹ ಸಂದರ್ಭದಲ್ಲಿ ವೈಜ್ಞಾನಿಕ ಪ್ರಗತಿಯ ಮುಂಚೂಣಿಯಲ್ಲಿರುವ ಅಮೆರಿಕಾದ ಮಾಜಿ ಅಧ್ಯಕ್ಷರೊಬ್ಬರು ಸಾಮಾಜಿಕ ಜಾಲತಾಣವನ್ನು ಆರಂಭ ಮಾಡಿರುವುದು ಎಲ್ಲರ ಗಮನ ಸೆಳೆಯುವಂತಿದೆ. ಪ್ರಸಕ್ತ ಅವರು ಆರಂಭಿಸಿರುವ “ಟ್ರುಥ್ ಸೋಶಿಯಲ್” ಜಾಲತಾಣ ಹೇಗೆ ಇಡೀ ಜಗತ್ತನ್ನು ವ್ಯಾಪಿಸುತ್ತದೆ ಎಂದು ಕಾದು ನೋಡಬೇಕಿದೆ.
ಅಕಾಲಿಕ ಮಳೆಯಿಂದಾಗಿ ಬೆಳೆ ನಾಶ ಆಗಿರುವ ರೈತರಿಗೆ ದೆಹಲಿ ಸರ್ಕಾರವು ಪರಿಹಾರ ಘೋಷಣೆ ಮಾಡಿದೆ. ದೆಹಲಿ ಮುಖ್ಯಮಂತ್ರಿ ಶ್ರೀ ಅರವೀಂದ್ ಕೇಜ್ರಿವಾಲ್ ಅವರು ಪ್ರತಿ ಹೆಕ್ಟೇರ್ ಗೆ 50 ಸಾವಿರ ರೂಪಾಯಿಗಳ ಪರಿಹಾರ ಧನ ನೀಡುವುದಾಗಿ ತಿಳಿಸಿದ್ದಾರೆ.
ದೇಶದಲ್ಲಿಯೇ ಇದು ಅತ್ಯಂತ ಹೆಚ್ಚಿನ ಪರಿಹಾರವಾಗಿದೆ. ಇನ್ನಾ 2 ತಿಂಗಳಲ್ಲಿ ರೈತರಿಗೆ ಪರಿಹಾರ ತಲುಪಿಸಲಾಗುವುದು. ಬರುವ 15 ದಿನಗಳಲ್ಲಿ ಬೆಳೆ ನಾಶ ಸಮೀಕ್ಷೆ ಪೂರೈಸಲು ಅಧಿಕಾರಿಗಳಿಗೆ ಆದೇಶಿಸಿ, ರೈತರ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಲು ತಿಳಿಸಿದ್ದಾರೆ.
ಕೆಲವು ದಿನಗಳ ಹಿಂದೆ ಕೃಷಿಕರ ತಂಡವು ತಮ್ಮನ್ನು ಬೇಟಿ ಮಾಡಿ ಅಕಾಲಿಕ ಮಳೆಯ ಪರಿಣಾಮವನ್ನು ಗಮನಕ್ಕೆ ತಂಡವು ತಂದಿದೆ. ಚಿಂತಿಸಬೇಡಿರಿ ಎಂದು ಧೈರ್ಯ ತುಂಬಿರುವುದಾಗಿ ಅರವೀಂದ್ ಕೇಜ್ರಿವಾಲ್ ತಿಳಿಸಿದ್ದಾರೆ. ದೇಶದ ಇತರ ರಾಜ್ಯಗಳು ಕೇವಲ 8-10 ಸಾವಿರ ರೂಪಾಯಿಗಳ ಪರಿಹಾರ ನೀಡುತ್ತಿದೆ. ತಾವು ನೀಡಿದ ಈ ಪರಿಹಾರದ ಮೊತ್ತವು ಅತ್ಯಂತ ಅಧಿಕ ಎಂದು ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಬಿಜೆಪಿ ಪಕ್ಷವು ಪರಿಹಾರ ಮೊತ್ತ ಕಡಿಮೆಯಾಗಿದೆ ಅದನ್ನು ಪ್ರತಿ ಹೆಕ್ಟೇರ್ ಗಿಂತ ಪ್ರತಿ ಎಕರೆಗೆ ಹೆಚ್ಚಿಸಬೇಕು ಹಾಗೂ ಡಿಸೈಲ್, ವಿದ್ಯುತ್, ಕೃಷಿ ಉಪಕರಣಗಳ ಖರೀದಿಯಲ್ಲಿ ರೈತರಿಗೆ ಸಹಾಯಧನ ನೀಡಬೇಕು ಎಂದು ಒತ್ತಾಯ ಮಾಡಿದೆ.
ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ. ಶೇ.3 ರಷ್ಟು ತುಟ್ಟಿಭತ್ಯೆ ಹೆಚ್ಚಿಳ ಮಾಡಲಾಗಿದೆ ಎಂದು ತಿಳಿದುಬಂದಿದೆ. ಕೋವಿಡ್-19 ರ ಭೀತಿಯ ನಡುವೆಯೇ ಸರ್ಕಾರವು ತುಟ್ಟಿಭತ್ಯೆ ಮತ್ತು ಬೆಲೆ ಏರಿಕೆ ಪರಿಹಾರವನ್ನು ತಡೆಹಿಡಿದಿತ್ತು. ಜನವರಿ 1, 2020 ರಿಂದ ಜುಲೈ1, 2020 ಜನವರಿ 1, 2021ರ ತುಟ್ಟಿಭತ್ಯೆಗಳನ್ನು ಸರ್ಕಾರಿ ನೌಕರರಿಗೆ ನೀಡಿರಲಿಲ್ಲ. ಕೋವಿಡ್ 19 ರ ಸಾಂಕ್ರಾಮಿಕ ರೋಗವನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರವು ಡಿಎ ಮತ್ತು ಡಿಆರ್ ನ ಹೆಚ್ಚುವರಿ ಕಂತುಗಳನ್ನು ಸ್ಥಗಿತಗೊಳಿಸಿತ್ತು. ಪ್ರಸ್ತುತ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಶೇಕಡಾ 3 ರಷ್ಟು ತುಟ್ಟಿಭತ್ಯೆ (Dearness allowance -DA) ನೀಡುವ ಪ್ರಸ್ತಾವಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಹೊಸ ಪ್ರಸ್ತಾವವು ಅನುಷ್ಠಾನಕ್ಕೆ ಬಂದ ನಂತರ ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯು ಶೇ.31 ಕ್ಕೆ ಏರಿಕೆಯಾಗಲಿದೆ ಎಂದು ತಿಳಿದುಬಂದಿದೆ. ಈ ಕುರಿತು ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಸುದ್ದಿಗೋಷ್ಠಿ ನಡೆಸಿ ಮಾಹಿತಿಯನ್ನು ನೀಡಿದ್ದಾರೆ. 47.14 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 68.62 ಲಕ್ಷ್ಮಿ ಪಿಂಚಣಿದಾರರಿಗೆ ಅನುಕೂಲವಾಗುವಂತೆ ಕೇಂದ್ರ ಕ್ಯಾಬಿನೆಟ್ ತುಟ್ಟಿಭತ್ಯೆ ಮತ್ತು ಅನ್ಯಾಯ ಪರಿಹಾರವನ್ನು ಶೇಕಡಾ 3 ರಿಂದ 31 ಕ್ಕೆ ಹೆಚ್ಚಿಸಿದೆ ಎಂದು ಹೇಳಿದರು.
ಶಿವಮೊಗ್ಗದಲ್ಲಿ ನಾಡದೇವಿ ಚಾಮುಂಡೇಶ್ವರಿಯ ವೈಭವದ ರಾಜಬೀದಿ ಮೆರವಣಿಗೆ ಆರಂಭವಾಗಿದೆ. ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನದ ಮುಂದೆ ನಂದಿ ಕೋಲಿಗೆ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನಿಡಲಾಯಿತು. ಮೇಯರ್ ಸುನೀತಾ ಅಣ್ಣಪ್ಪ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಪಾಲಿಕೆ ಸದಸ್ಯರು, ಅಧಿಕಾರಿಗಳು ನಂದಿ ಪೂಜೆಯಲ್ಲಿ ಪಾಲ್ಗೊಂಡಿದ್ದರು. ಲಾರಿ ಮೇಲೆ ಅಂಬಾರಿ ನಾಡದೇವಿ ಚಾಮುಂಡೇಶ್ವರಿಯ ಮೂರ್ತಿಗೆ ಹೂವು ಹಾಕಿ ನಮನ ಸಲ್ಲಿಸಲಾಯಿತು. ಈ ಭಾರಿ ಲಾರಿಯಲ್ಲಿ ನಾಡದೇವಿಯ ಮೆರವಣಿಗೆ ನಡೆಸಲಾಗುತ್ತಿದೆ. ಸಕ್ರೆಬೈಲು ಬಿಡಾರದಿಂದ ಬಂದಿರುವ ಸಾಗರ ಮತ್ತು ಭಾನುಮತಿ ಆನೆಗಳು ಮೆರವಣಿಗೆಯಲ್ಲಿವೆ. ವೈಭವದ ಹೆಚ್ಚಿಸಿದ ಸಾಂಸ್ಕೃತಿಕ ಕಲಾ ತಂಡ ಮೆರವಣಿಗೆಯಲ್ಲಿ ವಿವಿಧ ಸಾಂಸ್ಕೃತಿಕ ಕಲಾತಂಡಗಳು ಪಾಲ್ಗೊಂಡಿವೆ. ಇವು ಮೆರವಣಿಗೆಯ ವೈಭವ ಹೆಚ್ಚಿಸಿದೆ.
ವಿಶ್ವದಾದ್ಯಂತ ಕೋವಿಡ್ – 19 ಸನ್ನಿವೇಶದ ಪರಿಣಾಮ ನಿಗದಿತ ಕ್ರಿಕೆಟ್ ಟಿ – 20 ವಿಶ್ವಕಪ್ ಪಂದ್ಯ ತಡವಾಗಿದೆ. ಹಾಗಾಗಿ ಮುಂದೆ ನಡೆಯಲಿರುವ. ಟಿ – 20 ವಿಶ್ವಕಪ್ ಅಭ್ಯಾಸ ಪಂದ್ಯದಲ್ಲಿ ಭಾರತ ಗೆಲ್ಲುವ ಮೂಲಕ ಭರವಸೆ ಭಾಷ್ಯ ಬರೆದಿದೆ. ದುಬೈನಲ್ಲಿ ನಡೆದ ಎರಡನೇ ಅಭ್ಯಾಸ ಪಂದ್ಯದಲ್ಲಿ ಭಾರತ ತಂಡದ ನಾಯಕತ್ವ ವಹಿಸಿರುವ ರೋಹಿತ್ ಶರ್ಮಾ ಅರ್ಧಶತಕವನ್ನು ಗಳಿಸಿದರು. ಆಸ್ಟ್ರೇಲಿಯಾ ತಂಡದ ವಿರುದ್ಧ ಭಾರತ ತಂಡವು 9 ವಿಕೆಟ್ ಗಳಿಂದ ಭರ್ಜರಿ ಜಯಗಳಿಸಿತು. ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಆಸ್ಟ್ರೇಲಿಯಾ 20 ಓವರ್ ಗಳಲ್ಲಿ 5 ವಿಕೆಟ್ ಗಳಿಗೆ 155 ರನ್ ಗಳಿಸಿತು. ಆಸ್ಟ್ರೇಲಿಯಾ ತಂಡದ 152 ರನ್ ಗಳನ್ನು ಬೆನ್ನತ್ತಿದ ಭಾರತ 17.5 ಓವರ್ ಗಳಲ್ಲಿ 1 ವಿಕೆಟ್ ಗೆ 153ರನ್ ಗಳಿಸಿ ಜಯಗಳಿಸಿದೆ. ಭಾರತದ ಸ್ಪಿನ್ ಜೋಡಿ ಎಂದೇಹೆಸರುವಾಸಿಯಾಗಿರುವ R.ಅಶ್ವಿನ್ ಮತ್ತು ರವೀಂದ್ರ ಜಡೇಜರವರ ಸ್ಪಿನ್ ಮೋಡಿಗೆ ಆಸ್ಟ್ರೇಲಿಯಾ ತಂಡ ತತ್ತರಿಸಿತು. ರೋಹಿತ್ ಮತ್ತು K.L.ರಾಹುಲ್. ಮೊದಲ ವಿಕೆಟ್ ಜೊತೆಯಾಟದಲ್ಲಿ 68ರನ್ ಗಳಿಸಿ. ಭಾರತ ತಂಡದ ಗೆಲುವಿಗೆ ಭದ್ರ ಬುನಾಧಿ ಹಾಕಿದರು. ವಿರಾಟ್ ಕೊಹ್ಲಿಯ ಬದಲು 3ನೇ ಕ್ರಮಾಂತದಲ್ಲಿ ಆಡಿದ ಸೂರ್ಯ ಕುಮಾರ್ ಯಾಧವ್ 38ರನ್ ಗಳಿಸುವ ಮೂಲಕ ಭರವಸೆ ಮೂಡಿಸಿದರು.ಹಾರ್ದಿಕ್ ಪಾಂಡ್ಯ ಮತ್ತು ಸೂರ್ಯ ಕುಮಾರ್ ಜೊತೆಗೂಡಿ ಭಾರತ ತಂಡವನ್ನು ಗೆಲುವಿನ ಧಡ ಸೇರಿಸಿದರು.
ರಾಜ್ಯದಲ್ಲಿ ಕೋವಿಡ್-19 ರ ಸೊಂಕಿನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳನ್ನು ಸರ್ಕಾರಿ ವಸತಿ ಶಾಲೆಗಳಿಗೆ ನೇರವಾಗಿ ದಾಖಲಿಸಲು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ (ಕ್ರೈಸ್) ನಿರ್ಧರಿಸಿದೆ. ಮೊರಾರ್ಜಿ ದೇಸಾಯಿ , ಕಿತ್ತೂರು ರಾಣಿ ಚನ್ನಮ್ಮ, ಅಟಲ್ ಬಿಹಾರಿ ವಾಜಪೇಯಿ ಹಾಗೂ ಡಾ.ಬಿ.ಆರ್.ಅಂಬೇಡ್ಕರ್, ಶ್ರೀಮತಿ ಇಂದಿರಾ ಗಾಂಧಿ, ಏಕಲವ್ಯ ಮಾದರಿ ವಸತಿ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ವಿದ್ಯಾರ್ಥಿಗಳು 5 ನೇ ತರಗತಿಯಲ್ಲಿ ಪ್ರವೇಶ ಪರೀಕ್ಷೆ ಬರೆಯುವ ಮೂಲಕ ವಸತಿ ಶಾಲೆಗಳಿಗೆ ಆಯ್ಕೆಯಾಗುತ್ತಾರೆ. ಆದರೆ, ಕೋವಿಡ್ – 19ರ ಸಾಂಕ್ರಾಮಿಕ ರೋಗದಿಂದ ಮೃತಪಟ್ಟ ಪೋಷಕರ ಪರಿಶಿಷ್ಟ ಜಾತಿ , ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಮಕ್ಕಳು ರಾಜ್ಯದ ಯಾವುದೇ ವಸತಿ ಶಾಲೆಗಳಲ್ಲಿ ಖಾಲಿ ಇರುವ ಸ್ಥಾನಕ್ಕೆ ನೇರವಾಗಿ ಪ್ರವೇಶ ಕಲ್ಪಿಸಲು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ತೀರ್ಮಾನಿಸಿದೆ. ರಾಜ್ಯದಲ್ಲಿ ಒಟ್ಟು 826 ವಸತಿ ಶಾಲೆಗಳಿವೆ. ಅದರಲ್ಲಿ 40,540 ಸೀಟುಗಳಿವೆ. ಇಲ್ಲಿ 6 ರಿಂದ 12 ನೇ ತರಗತಿಯವರೆಗೆ ವಿದ್ಯಾಭ್ಯಾಸ ಮಾಡಬಹುದಾಗಿದೆ. ಸರ್ಕಾರಿ, ಅನುದಾನಿತ ಹಾಗೂ ನೋಂದಾಯಿತ ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಿಂದ ಮಕ್ಕಳು ಪ್ರವೇಶ ಪರೀಕ್ಷೆಯೊಂದಿಗೆ ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಬರುವ ಯಾವುದೇ ವಸತಿ ಶಾಲೆಗೆ ಪ್ರವೇಶ ಪರೀಕ್ಷೆಯೊಂದಿಗೆ 6 ನೇ ತರಗತಿಗೆ ದಾಖಲಾಗಬಹುದು. 11ನೇ ತರಗತಿಗೆ ಪ್ರವೇಶ ಪರೀಕ್ಷೆ ಇಲ್ಲದೇ ಹಾಗೂ 10 ನೇ ತರಗತಿಗೆ ಮೆರಿಟ್ ಆಧಾರದ ಮೇಲೆ ದಾಖಲಿಸಬಹುದಾಗಿದೆ. ಕ್ರೈಸ್ ತೀರ್ಮಾನದ ಕುರಿತಂತೆ ರಾಜ್ಯ ಮಕ್ಕಳ ರಕ್ಷಣಾ ನಿರ್ದೇಶನಾಲಯದಿಂದ ಜಿಲ್ಲಾಧಿಕಾರಿಗಳು , ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಿಗೆ ಮಾಹಿತಿ ರವಾನಿಸಿದೆ.
ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿಯನ್ನು ಹೆಚ್ಚಿಸಬೇಕೆಂಬ ವಾಲ್ಮೀಕಿ ಸಮುದಾಯದ ಬೇಡಿಕೆಯನ್ನು ನ್ಯಾಯಯುತವಾಗಿ ಒದಗಿಸಲು ಪ್ರಯತ್ನಿಸುತ್ತೇನೆ. ಆದರೆ, ಇದು ಸುಲಭವಲ್ಲ , ಸವಾಲಿನ ಕೆಲಸ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು , “ಯಾವ ರೀತಿ ಮೀಸಲಾತಿ ಹೆಚ್ಚಿಸಬಹುದೆಂಬ ಬಗ್ಗೆ ಕಾನೂನು ತಜ್ಞರ ಸಮಿತಿ ರಚಿಸಲಾಗಿದೆ. ನಾಡಿನ ಹಿತ ಮತ್ತು ಜನಾಂಗದ ಹಿತ ಗಮನದಲ್ಲಿ ಇಟ್ಟುಕೊಂಡು ತೀರ್ಮಾನ ತೆಗೆದುಕೊಳ್ಳಬೇಕಾಗಿದೆ ” ಎಂದರು.
ಇದೇ ಸಂದರ್ಭದಲ್ಲಿ ಅವರು, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಾಮಾಜಿಕ ಮಾಧ್ಯಮಗಳಾದ ಫೇಸ್ಬುಕ್, ಇನ್ಸ್ಟಾಗ್ರಾಮ್, ಹಾಗೂ ಟ್ವಿಟರ್, ಯ್ಯೂಟುಬ್ ಚಾನೆಲ್ ಗೆ ಚಾಲನೆ ನೀಡಿದರು. ” ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸುವ ಬಗ್ಗೆ ಮುಖ್ಯಮಂತ್ರಿ ಬೊಮ್ಮಾಯಿಯವರಲ್ಲಿ ಬೇಡಿಕೆ ಇಟ್ಟಾಗಿದೆ. ಅವರು ಮೀಸಲಾತಿಯನ್ನು ಹೆಚ್ಚಿಸುತ್ತಾರೆಂಬ ವಿಶ್ವಾಸವೂ ಇದೆ”.ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಹೇಳಿದರು. ಕಾರ್ಯಕ್ರಮದಲ್ಲಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ, ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ವಿ.ರಾಮಚಂದ್ರ, ವಿಧಾನ ಪರಿಷತ್ ಸದಸ್ಯ ಶಾಂತರಾಮ ಸಿದ್ದಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣ ರಾಜಕಾರಣದ ಕೈಪಿಡಿ ಎಂದು ಕುವೆಂಪು ವಿವಿ ಪ್ರಾಧ್ಯಾಪಕ ಡಾ. ಶಿವಾನಂದ ಕೆಳಗಿನಮನಿ ಹೇಳಿದ್ದಾರೆ.
ಶಿವಮೊಗ್ಗದ ಜಿಲ್ಲಾಡಳಿತ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು. ನಗರದ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಿದ್ದ ಈ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದ ಅವರು ರಾಮಾಯಣ ವಾಲ್ಮೀಕಿ ಬರೆದ ಅತ್ಯಂತ ಶ್ರೇಷ್ಠ ಕೃತಿಯಾಗಿದೆ. ಜನಜೀವನವನ್ನು ಪವಿತ್ರಗೊಳಿಸಿದೆ. ಕುಟುಂಬಗಳಿಗೆ ಗೌರವ ನೀಡಿದೆ. ಸಂಸ್ಕೃತಿಯ ಪ್ರತೀಕವಾಗಿದೆ. ವಿಶೇಷವಾಗಿ ರಾಜಕೀಯ ತಿಳಿವಳಿಕೆ ನೀಡಿದೆ. ರಾಜಕಾರಣದ ಅತ್ಯಂತ ಸೂಕ್ಷ್ಮ ವಿಷಯಗಳು ಇಡೀ ರಾಮಾಯಣದ ತುಂಬಾ ಅಡಗಿವೆ. ರಾಜಧರ್ಮವನ್ನು ಅದು ಹೇಳುತ್ತದೆ. ರಾಮಾಯಣ ಕೃತಿ ರಾಜಕಾರಣದ ಗೃಹಸ್ಥಾಶ್ರಮವೂ ಆಗಿದೆ. ಹಾಗಾಗಿಯೇ ಇದು ರಾಜಕಾರಣದ ಕೈಪಿಡಿ ಎಂದರು.
ಶ್ರೀರಾಮ ಆದರ್ಶ ಎಂಬ ಭಾವನೆಯನ್ನು ಬೆಳೆಸುತ್ತದೆ. ಇಡೀ ರಾಮಾಯಣದ ಕತೆ ಒಂದು ಸಾಮಾನ್ಯ ಜೀವನದ ನೆಲೆಯನ್ನು ಒದಗಿಸುವುದರ ಜೊತೆಗೆ ದ್ವೇಷವನ್ನು ಅಳಿಸುವ ಮತ್ತು ಕರ್ತವ್ಯದ ಸಂಘರ್ಷವನ್ನು ತಿಳಿಸುವ ಜೊತೆಗೆ ಸಾಹಿತ್ಯವನ್ನು ಗುರುತಿಸುವ ಕೆಲಸವನ್ನು ರಾಮಾಯಣ ಕೃತಿ ಮಾಡುತ್ತದೆ. ಸಾಹಿತ್ಯದ ಮೊದಲ ಸೃಷ್ಠಿಯೇ ರಾಮಾಯಣ ಕೃತಿಯಾಗಿದೆ ಎಂದು ಹೇಳಿದರು. ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರು ರಾಮಾಯಣ, ಸಂಸ್ಕೃತಿಯ ಪ್ರತೀಕವಾಗಿದೆ. ಶ್ರೀರಾಮ ಒಬ್ಬ ಆದರ್ಶ ಪುರುಷ ಎನ್ನುವುದಕ್ಕೆ ವಾಲ್ಮೀಕಿ ರಾಮಾಯಣದಲ್ಲಿ ಬೇಕಾದಷ್ಟು ಉದಾಹರಣೆಗಳಿವೆ. ಆದರೆ, ಪ್ರಸಕ್ತ ಕೆಲವು ರಾಜಕಾರಣಿಗಳು ಶ್ರೀರಾಮನನ್ನು ಕೇವಲ ರಾಜಕಾರಣಕ್ಕಾಗಿ ಎಳೆದು ತರುತ್ತಿರುವುದು ಅತ್ಯಂತ ದುರಂತವಾಗಿದೆ. ಜಗತ್ತೇ ಶ್ರೀರಾಮ ಹುಟ್ಟಿದ ಜಾಗ ಅಯೋಧ್ಯೆ ಎಂದು ಒಪ್ಪಿಕೊಂಡರೆ ಕೆಲವರು ಮಾತ್ರ ಇದಕ್ಕೆ ಆಧಾರ ಎಲ್ಲಿ ಎಂದು ಕೇಳುತ್ತಾರೆ. ವಾಲ್ಮೀಕಿ ಎಂದರೆ ಚರ್ಚೆಯ ವಸ್ತುವೇ ಅಲ್ಲ, ಎಲ್ಲರೂ ಅವರನ್ನು ಪ್ರೀತಿಸುತ್ತಾರೆ. ಆತ ಸೀಮಿತವಾಗಿಲ್ಲ. ಭಾರತೀಯ ಸಂಸ್ಕೃತಿಯ ಪ್ರತೀಕವಾಗಿದ್ದಾರೆ. ರಾಮಾಯಣ ಅದೊಂದು ಪುಸ್ತಕವಲ್ಲ, ಜೀವನ ಧರ್ಮವಾಗಿದೆ ಎಂದರು.
ಈ ಕಾರ್ಯಕ್ರಮದಲ್ಲಿ ಶಾಸಕರಾದ ಆರ್. ಪ್ರಸನ್ನಕುಮಾರ್, ಆಯನೂರು ಮಂಜುನಾಥ್, ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ, ಸೂಡಾ ಅಧ್ಯಕ್ಷ ಎಸ್.ಎಸ್. ಜ್ಯೋತಿ ಪ್ರಕಾಶ್, ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಎಸ್. ದತ್ತಾತ್ರಿ, ವಾಲ್ಮೀಕಿ ಅಭಿವೃದ್ಧಿ ನಿಗಮದ ನಿರ್ದೇಶಕ ಬಿ.ಎಸ್. ನಾಗರಾಜ್, ಪಾಲಿಕೆ ಸದಸ್ಯ ಡಿ. ನಾಗರಾಜ್, ವಿಶ್ವಾಸ್, ವಾಲ್ಮೀಕಿ ಸಮಾಜದ ಪ್ರಮುಖರಾದ ಶಿವಪ್ಪ, ರೂಪಾ ಲಕ್ಷ್ಮಣ್, ಸೀತಾರಾಮ್, ಶಿವಾಜಿ, ಲಕ್ಷ್ಮಣಪ್ಪ, ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್, ಜಿಲ್ಲಾ ಪೊಲೀಸ್ ಅಧೀಕ್ಷಕ ಬಿ.ಎಂ. ಲಕ್ಷ್ಮಿಪ್ರಸಾದ್, ಅಪರ ಜಿಲ್ಲಾಧಿಕಾರಿ ನಾಗೇಂದ್ರ ಹೊನ್ನಳ್ಳಿ, ಜಿಪಂ ಸಿಇಒ ಎಂಎಲ್ ವೈಶಾಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಹೆಚ್. ಉಮೇಶ್ ಮೊದಲಾದವರು ಉಪಸ್ಥಿತರಿದ್ದರು.
ಇತ್ತೀಚಿಗೆ ಆಫಘಾನಿಸ್ತಾನದ ಆಂತರಿಕ ಯುದ್ಧದಲ್ಲಿ ಸಾವಿಗೀಡಾದ ಸಂಬಂಧಿಕರಿಗೆ ನಿವೇಶನ ನೀಡುವುದಾಗಿ ಅಲ್ಲಿನ ಪ್ರಸ್ತುತ ತಾಲಿಬಾನ್ ಸರ್ಕಾರದ ಒಳಾಡಳಿತದ ಮಂತ್ರಿ ಸಿರಾಜುದ್ದೀನ್ ಹಕ್ಕಾನಿ ಹೇಳಿದ್ದಾರೆ.
ಕಾಬುಲ್ ಹೋಟೆಲ್ನಲ್ಲಿ ಸೇರಿದ್ದ ಸಾರ್ವಜನಿಕರನ್ನು ಉದ್ದೇಶಿಸಿ ಅವರು ಮಾತನಾಡಿದರು. ಸಾವಿಗೀಡಾದವರ ಸಂಬಂಧಿಗಳ ಪ್ರತಿ ಕುಟುಂಬಕ್ಕೆ ಒಂದು ನಿವೇಶನ ಮತ್ತು 10 ಸಾವಿರ ಆಫಘಾನಿಸ್ (112 USG) ಹಣ ಪರಿಹಾರ ನೀಡಿದೆ. ಈ ಕ್ರಮದ ಮೂಲಕ ಜಗತ್ತಿಗೆ ತನ್ನ ಪ್ರಜಾ ಪ್ರೀತಿಯನ್ನ ತೋರಿಸಿದೆ. ತನ್ನವರನ್ನೇ ಅಮಾನುಷವಾಗಿ ಮಾರಣಹೋಮಗೈದ ಅಲ್ಲಿನ ತಾಲಿಬಾನಿಗಳ ಈ ನಾಟಕ ಕಣ್ಣೊರೆಸುವ ತಂತ್ರವಾಗಿದೆ ಎನ್ನದೇ ವಿಧಿಯಿಲ್ಲ.
ಈಗಾಗಲೇ ಅಮೆರಿಕ ನಿರೀಕ್ಷಿಸಿದಂತೆ ಆಫಘಾನಿಸ್ತಾನದ ಇಡಿ ಜನಸಂಖ್ಯೆಯು ಬಡತನಕ್ಕೆ ಜಾರಿ ಬೀಳುವ ಸಂದರ್ಭವಿದೆ. ಈ ಅಭಿಪ್ರಾಯದ ವಿರುದ್ಧ ಇಡೀ ಜಗತ್ತನ್ನು ನೆರವಿಗಾಗಿ ತನ್ನತ್ತ ಸೆಳೆಯುವ ಪ್ರಯತ್ನ ಇದಾಗಿದೆ. ಈ ಪರಿಹಾರ ಘೋಷಣೆ ಮಾಡಿರುವುದು ತಾಲಿಬಾನಿಗಳ ಸರ್ಕಾರದಲ್ಲಿ ಆಂತರಿಕವಾಗಿ ಭಿನ್ನಾಭಿಪ್ರಾಯಕ್ಕೂ ಕಾರಣವಾಗಿದೆ.
ಅಮೇರಿಕಾದ ಬಾಂಬ್ ದಾಳಿಯಲ್ಲಿ ಸಾವಿಗೀಡಾದ ತನ್ನ ಸೈನಿಕರ ಹುತಾತ್ಮರು ಎಂದು ಕರೆದುಕೊಂಡಿದೆ.ಮಹಿಳೆಯರು ಮತ್ತು ಮಕ್ಕಳನ್ನು ಅಮಾನವೀಯವಾಗಿ ನಡೆಸಿಕೊಂಡ ತಾಲಿಬಾನ್ ಸರ್ಕಾರ ಇನ್ನೂ ಏನೇನು ನಾಟಕವಾಡುತ್ತದೋ ಗೊತ್ತಿಲ್ಲ. ಒಟ್ಟಿನಲ್ಲಿ ಈ ಪರಿಹಾರ ಘೋಷಣೆ ಜಗತ್ತಿನ ಇತರ ದೇಶಗಳನ್ನ ಹುಬ್ಬೇರಿಸುವಂತೆ ಮಾಡಿದೆ.