Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
KLIVE at Google News App
KLIVE Android App on Google Play Store
Download the most loved Klive App for your Android phone or tablet.
ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಮಟ್ಟದಲ್ಲಿ ಉದ್ಯೋಗಾವಕಾಶಗಳನ್ನು ತಂದುಕೊಡುವ ಮೂರು ವರ್ಷಗಳ ಒಡಂಬಡಿಕೆಗೆ ಕರ್ನಾಟಕ ಸರ್ಕಾರ ಮತ್ತು ಬ್ರಿಟಿಷ್ ಕೌನ್ಸಿಲ್ ಸಂಸ್ಥೆಗಳು ಅಂಕಿತ ಹಾಕಿವೆ.
ವಿಕಾಸಸೌಧದಲ್ಲಿ ಇದರ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರದ ಪರವಾಗಿ ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕುಮಾರ ನಾಯಕ್ ಮತ್ತು ಬ್ರಿಟಿಷ್ ಕೌನ್ಸಿಲ್ ಪರವಾಗಿ ಆ ಸಂಸ್ಥೆಯ ದಕ್ಷಿಣ ಭಾರತ ಮಟ್ಟದ ನಿರ್ದೇಶಕ ಜನಕ ಪುಷ್ಪನಾಥನ್ ಅಂಕಿತ ಹಾಕಿ, ಒಡಂಬಡಿಕೆ ವಿನಿಮಯ ಮಾಡಿಕೊಂಡರು.
ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಮತ್ತು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಅಶ್ವತ್ಥನಾರಾಯಣ, ಈ ಒಡಂಬಡಿಕೆಯು ರಾಜ್ಯದ ಪ್ರಾಥಮಿಕ, ಪ್ರೌಢ ಮತ್ತು ಉನ್ನತ ಶಿಕ್ಷಣದ ವಿದ್ಯಾರ್ಥಿಗಳಲ್ಲಿ ಕೌಶಲ್ಯಾಭಿವೃದ್ಧಿ, ಇಂಗ್ಲಿಷ್ ಕಲಿಕೆ ಮತ್ತು ಸಂಶೋಧನೆಗೆ ಅಗತ್ಯವಾದ ಶಿಸ್ತನ್ನು ಕಲಿಸಲಿದೆ. ರಾಜ್ಯ ಮತ್ತು ಇಂಗ್ಲೆಂಡ್ ನ ಶಿಕ್ಷಣ ಸಂಸ್ಥೆಗಳ ಜತೆ ವಿದ್ಯಾರ್ಥಿಗಳ ವಿನಿಮಯ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಶೈಕ್ಷಣಿಕ ನಾಯಕತ್ವ ಬೆಳೆಸುವ ವಿಷಯದಲ್ಲಿ ಒಪ್ಪಂದ ಗಮನಹರಿಸಲಿದೆ. ಇದರಿಂದಾಗಿ ರಾಜ್ಯದ ಸಾಮಾಜಿಕ ಮತ್ತು ಆರ್ಥಿಕ ಪರಿಸ್ಥಿತಿಗಳಲ್ಲಿ ಸಕಾರಾತ್ಮಕ ಬದಲಾವಣೆ ಆಗಲಿದೆ ಎಂದು ಅಶ್ವತ್ಥನಾರಾಯಣ ಅವರು ಹೇಳಿದ್ದಾರೆ.
ಬ್ರಿಟಿಷ್ ಕೌನ್ಸಿಲ್ ನೊಂದಿಗೆ ಕಳೆದೊಂದು ದಶಕದಿಂದ ರಾಜ್ಯದ ಸಂಬಂಧ ಹಲವು ಪಟ್ಟು ಸುಧಾರಿಸಿದೆ. ಈ ಸಹಭಾಗಿತ್ವದ ಮೂಲಕ ರಾಜ್ಯದ ವಿ.ವಿ.ಗಳ ಪಠ್ಯಗಳನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಏರಿಸಲಾಗಿದೆ. ಜೊತೆಗೆ, ಒಳ್ಳೆಯ ಉದ್ಯೋಗ ಸೃಷ್ಟಿಯಾಗುತ್ತಿವೆ ಎಂದು ಅಶ್ವತ್ಥನಾರಾಯಣ ಅವರು ಹೇಳಿದ್ದಾರೆ.
ಈ ಒಡಂಬಡಿಕೆಯು ರಾಜ್ಯದ ಉನ್ನತ ಶಿಕ್ಷಣ ವಲಯದಲ್ಲಿ ವಿದ್ಯಾರ್ಥಿಗಳು ಉದ್ಯೋಗವನ್ನು ಪಡೆಯಲು ಬೇಕಾದ ಕೌಶಲ್ಯಗಳನ್ನು ಹೆಚ್ಚಿಸಲಿದೆ. ಜೊತೆಗೆ ಯುನೈಟೆಡ್ ಕಿಂಗ್ಡಂ ಮತ್ತು ಭಾರತದ ನಡುವೆ ಶೈಕ್ಷಣಿಕ ಸಂಶೋಧನಾ ಉಪಕ್ರಮ ಮತ್ತು ಗೋಯಿಂಗ್ ಗ್ಲೋಬಲ್ ಕಾರ್ಯಕ್ರಮಗಳ ಮೂಲಕ ಈ ಸಹಭಾಗಿತ್ವವನ್ನು ಇನ್ನಷ್ಟು ವಿಸ್ತರಿಸಲಾಗುವುದು ಎಂದು ಅವರು ಅಶ್ವತ್ಥನಾರಾಯಣ ಅವರು ತಿಳಿಸಿದ್ದಾರೆ.
ಬಹುಮುಖ್ಯವಾಗಿ ಐಟಿಐ, ಎಂಜಿನಿಯರಿಂಗ್ ಮತ್ತು ವ್ಯವಸ್ಥಾಪನಾ ವಿಜ್ಞಾನಗಳನ್ನು ಓದುತ್ತಿರುವವರಿಗೆ ಇದರಿಂದ ಅಪಾರ ಲಾಭವಾಗಲಿದೆ. ಅಲ್ಲದೆ, ಕರ್ನಾಟಕದ ವಿದ್ಯಾರ್ಥಿಗಳು ಇಂಗ್ಲೆಂಡಿನ ವಿಶ್ವವಿದ್ಯಾಲಯಗಳಿಗೆ ತೆರಳಿ ಉನ್ನತಾಧ್ಯಯನ ಮಾಡಲು ಅವಕಾಶವಾಗಲಿದೆ ಎಂದು ಅಶ್ವತ್ಥನಾರಾಯಣ ಅವರು ಮಾಹಿತಿ ನೀಡಿದ್ದಾರೆ.
ಎರಡೂ ಕಡೆಯ ಉತ್ಕೃಷ್ಟತಾ ಕೇಂದ್ರಗಳು ಸುಸ್ಥಿತ ಸಹಭಾಗಿತ್ವವನ್ನು ಹೊಂದುವ ಮೂಲಕ ಸಂಶೋಧನೆ ಮತ್ತು ನಾವೀನ್ಯತೆಗಳಿಗೆ ಹೆಚ್ಚು ಉತ್ತೇಜನ ನೀಡಲಿವೆ. ಇದರಿಂದಾಗಿ, ರಾಜ್ಯದ ವಿದ್ಯಾರ್ಥಿಗಳು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್, ಮಶೀನ್ ಲರ್ನಿಂಗ್, ಎಡ್-ಟೆಕ್, ಜೀವವಿಜ್ಞಾನಗಳು ಮತ್ತು ಸೈಬರ್ ಸೆಕ್ಯುರಿಟಿಯಂತಹ ಅತ್ಯಾಧುನಿಕ ಕೋರ್ಸ್ ಗಳನ್ನು ಕಲಿಯಬಹುದು ಎಂದು ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಮಾತನಾಡಿದ ಇಂಗ್ಲೆಂಡ್ ಸರ್ಕಾರದ ಅಂತರರಾಷ್ಟ್ರೀಯ ಶಿಕ್ಷಣ ಚಾಂಪಿಯನ್, ಶಿಕ್ಷಣ ತಜ್ಞ ಸರ್ ಸ್ಟೀವ್ ಸ್ಮಿತ್, ಈ ವರ್ಷದ ಮೇ ತಿಂಗಳಲ್ಲಿ ತಮ್ಮ ದೇಶದಲ್ಲಿ ನಡೆಯಲಿರುವ ವಿಶ್ವ ಶಿಕ್ಷಣ ಒಕ್ಕೂಟದ ಸಮಾವೇಶಕ್ಕೆ ಸಚಿವರನ್ನು ಆಹ್ವಾನಿಸಿದ್ದಾರೆ. ಇದರಂತೆ, ರಾಜ್ಯದಿಂದ ಉನ್ನತ ಶಿಕ್ಷಣ ಸಚಿವರ ನೇತೃತ್ವದಲ್ಲಿ ತೆರಳಲಿರುವ ನಿಯೋಗದಲ್ಲಿ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಪ್ರತಿನಿಧಿಗಳು, ಹಲವು ವಿ.ವಿ.ಗಳ ಕುಲಪತಿಗಳು ಮತ್ತು ಇಲಾಖೆಯ ಕೆಲವು ಉನ್ನತಾಧಿಕಾರಿಗಳು ಇರಲಿದ್ದಾರೆ.
ಕಾರ್ಯಕ್ರಮದಲ್ಲಿ ಬ್ರಿಟಿಷ್ ಕೌನ್ಸಿಲ್ ಸಂಸ್ಥೆಯ ದಕ್ಷಿಣ ಏಷ್ಯಾ ಪ್ರಾದೇಶಿಕ ನಿರ್ದೇಶಕ ಆಡ್ರಿಯನ್ ಚಾಡ್ವಿಕ್, ಪ್ರಾಥಮಿಕ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ, ಉನ್ನತ ಶಿಕ್ಷಣ ಪರಿಷತ್ ಉಪಾಧ್ಯಕ್ಷ ಪ್ರೊ ತಿಮ್ಮೇಗೌಡ, ಕಾರ್ಯನಿರ್ವಾಹಕ ನಿರ್ದೇಶಕ ಗೋಪಾಲಜೋಶಿ, ಆಡಳಿತಾಧಿಕಾರಿ ಡಾ.ತಾಂಡವಗೌಡ ಉಪಸ್ಥಿತರಿದ್ದರು.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
KLIVE at Google News App
KLIVE Android App on Google Play Store
Download the most loved Klive App for your Android phone or tablet.
ವಿಶ್ವದಲ್ಲೇ ಮೊದಲ ಬಾರಿಗೆ ಹಂದಿ ಹೃದಯ ಕಸಿಗೊಳಗಾಗಿದ್ದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಹಂದಿ ಹೃದಯ ಕಸಿಗೊಳಗಾಗಿದ್ದ ಡೇವಿಡ್ ಬೆನೆಟ್(58) ಶಸ್ತ್ರಚಿಕಿತ್ಸೆ ನಡೆದು 2 ತಿಂಗಳ ನಂತರ ಸಾವನ್ನಪ್ಪಿದ್ದಾರೆ.
ಅಮೆರಿಕ ವೈದ್ಯರು 2022ರ ಜನವರಿ 11 ರಂದು ವ್ಯಕ್ತಿಗೆ ಹಂದಿ ಹೃದಯ ಕಸಿ ಮಾಡಿದ್ದರು. ಆದರೆ ಹೃದಯ ಕಸಿ ಅಳವಡಿಕೆ ಯಶಸ್ವಿಯಾಗಿದ್ದರೂ ಡೇವಿಡ್ ಸಾವನ್ನಪ್ಪಿದ್ದಾರೆ. ಹೃದಯ ಕಸಿ ಆದ ನಂತರ ಆರೋಗ್ಯ ಹದಗೆಡುತ್ತಾ ಬಂದಿತ್ತು ಎಂದು ಅಮೆರಿಕದ ಮೇರಿಲ್ಯಾಂಡ್ ಮೆಡಿಕಲ್ ಸೆಂಟರ್ ವಿವಿ ಪ್ರಕಟಣೆಯಲ್ಲಿ ಹೊರಡಿಸಿದ್ದಾರೆ.
ಸ್ಥಳೀಯವಾಗಿ ಮಾರ್ಪಡಿಸಲಾದ ಹಂದಿಯೊಂದರ ಹೃದಯವನ್ನು 58 ವರ್ಷದ ವ್ಯಕ್ತಿಗೆ ಯಶಸ್ವಿಯಾಗಿ ಕಸಿ ಮಾಡುವ ಮೂಲಕ ಯುಎಸ್ನ ಶಸ್ತ್ರಚಿಕಿತ್ಸಕರು ಇತಿಹಾಸ ಸೃಷ್ಟಿಸಿದ್ದರು. ಇದು ವೈದ್ಯಕೀಯ ಲೋಕದಲ್ಲಿಯೇ ಪ್ರಥಮವಾಗಿದೆ. ಹಾಗೇ, ಮುಂದೊಂದು ದಿನ ಅಂಗಾಂಗ ದಾನ ಕೊರತೆಯ ಗಂಭೀರತೆಯನ್ನು ಕಡಿಮೆ ಮಾಡಬಲ್ಲದು ಎಂಬ ಆಶಯವನ್ನೂ ಮೂಡಿಸಿತ್ತು. ಅಂದಹಾಗೆ, ಈ ಐತಿಹಾಸಿಕ ವೈದ್ಯಕೀಯ ಪ್ರಕ್ರಿಯೆ ನಡೆದಿದೆ. ಯುಎಸ್ನ ಮೇರಿಲ್ಯಾಂಡ್ ಯೂನಿವರ್ಸಿಟಿಯ ಮೆಡಿಕಲ್ ಸ್ಕೂಲ್ನಲ್ಲಿ ಆದರೆ ಈಗ ಶಸ್ತ್ರಚಿಕಿತ್ಸೆ ನಡೆದ ಎರಡು ತಿಂಗಳ ನಂತರ ವ್ಯಕ್ತಿ ಮೃತಪಟ್ಟಿದ್ದಾರೆ ಎಂಬ ವಿಷಯ ಹೊರಬಿದ್ದಿದೆ.
ಮೇರಿಲ್ಯಾಂಡ್ ನಿವಾಸಿ ಬೆನೆಟ್ ಹೃದಯ ಮತ್ತು ಶ್ವಾಸಕೋಶ ಬೈಪಾಸ್ ಕಾರಣದಿಂದ ಹಲವು ತಿಂಗಳುಗಳಿಂದ ಹಾಸಿಗೆಯಲ್ಲೇ ಮಲಗಿದ್ದರು. ಇವರ ಆರೋಗ್ಯ ತುಂಬ ಕ್ಷೀಣವಾಗಿದ್ದ ಕಾರಣ, ಮತ್ತೊಂದು ಮನುಷ್ಯ ಹೃದಯವನ್ನೇ ಕಸಿ ಮಾಡಲು ಸಾಧ್ಯವಾಗಿರಲಿಲ್ಲ. ಆದ್ದರಿಂದ ತಳಿ ಮಾರ್ಪಾಡು ಮಾಡಿದ ಹಂದಿಯ ಹೃದಯವನ್ನು ಕಸಿ ಮಾಡಲಾಗಿತ್ತು. ಆದರೆ 2 ತಿಂಗಳಲ್ಲಿಯೇ ಡೇವಿಡ್ ಬೆನೆಟ್ ಅವರು ಮೃತಪಟ್ಟಿದ್ದಾರೆ.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
KLIVE at Google News App
KLIVE Android App on Google Play Store
Download the most loved Klive App for your Android phone or tablet.
ಗೋವಾ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.
ಚುನಾವಣೆಯಲ್ಲಿ ಗೆದ್ದ ಮೂವರು ಪಕ್ಷೇತರ ಅಭ್ಯರ್ಥಿಗಳು ಬಿಜೆಪಿಗೆ ಬೆಂಬಲ ಘೋಷಣೆ ಮಾಡಿದ್ದು, ಪಕ್ಷ ಸರ್ಕಾರ ರಚನೆ ಮಾಡಲಿದೆ.
40 ಸದಸ್ಯ ಬಲದ ವಿಧಾನಸಭೆಯಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 21. ಫೆಬ್ರವರಿ 14ರಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.
ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮಾತನಾಡಿ, “ಚುನಾವಣೆ ಗೆಲುವಿಗೆ ಪಕ್ಷದ ಕಾರ್ಯಕರ್ತರು ಕಾರಣ. ಬಿಜೆಪಿ ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲಿದೆ” ಎಂದು ಹೇಳಿದರು.
ಇಂದು ಸಂಜೆ ರಾಜ್ಯಪಾಲರನ್ನು ಭೇಟಿ ಮಾಡಲು ಬಿಜೆಪಿ ಸಮಯ ಕೇಳಿದೆ. ರಾಜ್ಯಪಾಲರ ಬಳಿ ಸರ್ಕಾರ ರಚನೆ ಮಾಡಲು ಪಕ್ಷ ಹಕ್ಕು ಮಂಡಿಸಲಿದೆ. ಮೂವರು ಪಕ್ಷೇತರ ಶಾಸಕರು ಸಹ ಬಿಜೆಪಿಗೆ ಬೆಂಬಲ ಘೋಷಣೆ ಮಾಡಿದ್ದಾರೆ. ಬಿಕೋಲಿಮ್ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಡಾ. ಚಂದ್ರಕಾಂತ್ ಮತ್ತು ಕಾರ್ಟೈಮ್ ಕ್ಷೇತ್ರದ ಶಾಸಕ ಮಾನುಯೆಲ್ ವಾಝ್ ಮತ್ತು ಕರ್ಟೋರಿಮ್ ಕ್ಷೇತ್ರದ ಶಾಸಕ ಅಲೆಕ್ಸಿಯೊ ರೆಜಿನಾಲ್ಡೊ ಬಿಜೆಪಿಗೆ ಬೆಂಬಲ ಘೋಷಣೆ ಮಾಡಿದ್ದಾರೆ.
ಬಿಜೆಪಿ ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲಿದೆ. ನಾವು ಎಂಜಿಪಿ ಮತ್ತು ಪಕ್ಷೇತರ ಶಾಸಕರನ್ನು ಒಟ್ಟಿಗೆ ಕರೆದುಕೊಂಡು ಹೋಗುತ್ತೇವೆ” ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
KLIVE at Google News App
KLIVE Android App on Google Play Store
Download the most loved Klive App for your Android phone or tablet.
ಉಕ್ರೇನಿಯನ್ ಪ್ರಯೋಗಾಲಯಗಳಲ್ಲಿ ಜೈವಿಕ ಶಸ್ತ್ರಾಸ್ತ್ರಗಳನ್ನು ತಯಾರಿಸಲಾಗಿದೆ ಎಂಬ ರಷ್ಯಾದ ಆರೋಪಗಳಿಗೆ ಪ್ರತಿಕ್ರಿಯಿಸಿದ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ತಮ್ಮ ದೇಶದಲ್ಲಿ ‘ಯಾವುದೇ ರಾಸಾಯನಿಕ ಅಥವಾ ಯಾವುದೇ ಸಾಮೂಹಿಕ ವಿನಾಶಕಾರಿ ಶಸ್ತ್ರಾಸ್ತ್ರಗಳನ್ನು ಅಭಿವೃದ್ಧಿಪಡಿಸಲಾಗಿಲ್ಲ’ ಎಂದು ಹೇಳಿದ್ದಾರೆ.
ಶುಕ್ರವಾರ ಬೆಳಿಗ್ಗೆ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ ಅವರ ಇತ್ತೀಚಿನ ವೀಡಿಯೊ ಸಂದೇಶದಲ್ಲಿ, ಝೆಲೆನ್ಸ್ಕಿ ಹೀಗೆ ಹೇಳಿದರು: ‘ನಾನು ಉಕ್ರೇನ್ ರಾಷ್ಟ್ರದ ಅಧ್ಯಕ್ಷ. ಮತ್ತು ಇಬ್ಬರು ಮಕ್ಕಳ ತಂದೆ. ಮತ್ತು ನನ್ನ ಭೂಮಿಯಲ್ಲಿ ಯಾವುದೇ ರಾಸಾಯನಿಕ ಅಥವಾ ಸಾಮೂಹಿಕ ವಿನಾಶದ ಯಾವುದೇ ಇತರ ಶಸ್ತ್ರಾಸ್ತ್ರಗಳನ್ನು ಅಭಿವೃದ್ಧಿಪಡಿಸಲಾಗಿಲ್ಲ.ಇಡೀ ಜಗತ್ತಿಗೆ ಅದು ತಿಳಿದಿದೆ. ಅದು ನಿಮಗೆ ತಿಳಿದಿದೆ. ಮತ್ತು ರಷ್ಯಾ ನಮ್ಮ ವಿರುದ್ಧ ಏನಾದರೂ ಮಾಡಿದರೆ, ಅದು ಅತ್ಯಂತ ತೀವ್ರವಾದ ನಿರ್ಬಂಧಗಳ ಪ್ರತಿಕ್ರಿಯೆಯನ್ನು ಪಡೆಯುತ್ತದೆ.’ ಎಂದು ಹೇಳಿದ್ದಾರೆ.
ಯುಎಸ್ ಡಿಪಾರ್ಟ್‌ಮೆಂಟ್ ಆಫ್ ಡಿಫೆನ್ಸ್‌ನಿಂದ ಧನಸಹಾಯದೊಂದಿಗೆ ಉಕ್ರೇನಿಯನ್ ಪ್ರಯೋಗಾಲಯಗಳಲ್ಲಿ ಜೈವಿಕ ಶಸ್ತ್ರಾಸ್ತ್ರಗಳ ಘಟಕಗಳನ್ನು ತಯಾರಿಸಲಾಗಿದೆ ಎಂದು ‘ಇತ್ತೀಚೆಗೆ ಪತ್ತೆಯಾದ ದಾಖಲೆಗಳು’ ತೋರಿಸಿವೆ ಎಂದು ರಷ್ಯಾದ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ಅಧ್ಯಕ್ಷರು, ‘ಇದು ನನಗೆ ನಿಜವಾಗಿಯೂ ಚಿಂತೆ ಮಾಡುತ್ತದೆ, ಏಕೆಂದರೆ ನಮಗೆ ಪದೇ ಪದೇ ಮನವರಿಕೆಯಾಗಿದೆ: ನೀವು ರಷ್ಯಾದ ಯೋಜನೆಗಳನ್ನು ತಿಳಿದುಕೊಳ್ಳಲು ಬಯಸುತ್ತೀರಿ.ರಾಸಾಯನಿಕ ದಾಳಿಯನ್ನು ಸಿದ್ಧಪಡಿಸುವ ಈ ಆರೋಪಗಳು ಯಾವುವು? ನೀವು ಉಕ್ರೇನ್‌ನ ‘ಡಿ-ಕೆಮಿಕಲೈಸೇಶನ್’ ಮಾಡಲು ನಿರ್ಧರಿಸಿದ್ದೀರಾ? ಅಮೋನಿಯಾವನ್ನು ಬಳಸುತ್ತೀರಾ? ರಂಜಕವನ್ನು ಬಳಸಿದ್ದೀರಾ? ನೀವು ನಮಗಾಗಿ ಇನ್ನೇನು ಸಿದ್ಧಪಡಿಸಿದ್ದೀರಿ?’ 16 ದಿನಗಳಿಂದ ಉಕ್ರೇನ್ ವಿರುದ್ಧ ತನ್ನ ಯುದ್ಧವನ್ನು ಮುಂದುವರೆಸಿರುವ ರಷ್ಯಾವನ್ನು ಅವರು ಪ್ರಶ್ನಿಸಿದ್ದಾರೆ. ತನ್ನ ಇತ್ತೀಚಿನ ಆರೋಪದಲ್ಲಿ, ರಷ್ಯಾದ ರಕ್ಷಣಾ ಸಚಿವಾಲಯವು ಗುರುವಾರ ಉಕ್ರೇನ್‌ಗೆ ಜೈವಿಕ ಶಸ್ತ್ರಾಸ್ತ್ರಗಳನ್ನು ಅಭಿವೃದ್ಧಿಪಡಿಸಲು ಮತ್ತು ರಷ್ಯಾದ ಮೂಲಕ ವಲಸೆ ಬರುವ ವೈರಸ್-ವಾಹಕ ಪಕ್ಷಿಗಳನ್ನು ಬಳಸಲು ಸಹಾಯ ಮಾಡುತ್ತಿದೆ ಎಂದು ಹೇಳಿಕೊಂಡಿದೆ ಎಂದು ಬಿಬಿಸಿ ವರದಿ ಮಾಡಿದೆ.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
KLIVE at Google News App
KLIVE Android App on Google Play Store
Download the most loved Klive App for your Android phone or tablet.
ಯುದ್ಧ ಪೀಡಿತ ಉಕ್ರೇನ್‌ನಿಂದ ಭಾರತೀಯ ಪ್ರಜೆಗಳನ್ನು ಆಪರೇಷನ್ ಗಂಗಾ ಕಾರ್ಯಾಚರಣೆಯ ಮೂಲಕ ಭಾರತ ಸರ್ಕಾರ ರಕ್ಷಣೆ ಮಾಡುತ್ತಿದೆ.
ಮಾನವೀಯತೆ ಮೆರೆದ ಭಾರತ ಸರ್ಕಾರ ತನ್ನ ದೇಶದ ವಿದ್ಯಾರ್ಥಿಗಳ ಜೊತೆ ಬಾಂಗ್ಲಾದ 13, ಪಾಕಿಸ್ತಾನ ಹಾಗೂ ನೇಪಾಳದ ತಲಾ ಒಬ್ಬ ವಿದ್ಯಾರ್ಥಿಯನ್ನು ರಕ್ಷಣೆ ಮಾಡಿದೆ.
ಆದರೆ ಇತರ ದೇಶಗಳು ಭಾರತದಂತೆ ತನ್ನ ಪ್ರಜೆಗಳ ರಕ್ಷಣೆಗೆ ಮುಂದಾಗಿಲ್ಲ. ಈ ಹಿನ್ನೆಲೆಯಲ್ಲಿ ನೇಪಾಳ ತನ್ನ ವಿದ್ಯಾರ್ಥಿಗಳನ್ನು ರಕ್ಷಿಸುವಂತೆ ಭಾರತ ಸರ್ಕಾರಕ್ಕೆ ಮನವಿ ಮಾಡಿತ್ತು.
ಹೀಗೆ ಭಾರತದ ಅಧಿಕಾರಿಗಳಿಂದ ರಕ್ಷಿಸಲ್ಪಟ್ಟ ಪಾಕಿಸ್ತಾನ ವಿದ್ಯಾರ್ಥಿ ಪ್ರಧಾನಿ ಮೋದಿ ಹಾಗೂ ಭಾರತೀಯ ರಾಯಭಾರ ಕಚೇರಿ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ್ದಾಳೆ. ಯುದ್ಧಪೀಡಿತ ಉಕ್ರೇನ್‌ನಿಂದ ಸ್ಥಳಾಂತರಿಸಲು ಸಹಾಯ ಮಾಡಿದ್ದಕ್ಕಾಗಿ ಪ್ರಧಾನಿ ಮೋದಿ ಮತ್ತು ಭಾರತೀಯ ಅಧಿಕಾರಿಗಳಿಗೆ ಪಾಕಿಸ್ತಾನಿ ಪ್ರಜೆ ಅಸ್ಮಾ ಶಫೀಕ್ ಧನ್ಯವಾದ ಸಲ್ಲಿಸಿದ್ದಾಳೆ.
ಸುದ್ದಿ ಸಂಸ್ಥೆ ANI ಪಾಕಿಸ್ತಾನಿ ಪ್ರಜೆ ಅಸ್ಮಾ ಶಫೀಕ್ ಅವರ ವೀಡಿಯೊವನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದು, ವೀಡಿಯೊದಲ್ಲಿ, ಅಸ್ಮಾ, ‘ಹಲೋ, ನನ್ನ ಹೆಸರು ಅಸ್ಮಾ ಶಫೀಕ್ ಮತ್ತು ನಾನು ಪಾಕಿಸ್ತಾನದಿಂದ ಬಂದಿದ್ದೇನೆ. ಯುದ್ಧಪೀಡಿತ ಉಕ್ರೇನ್‌ನಲ್ಲಿ ಬಹಳ ಕಷ್ಟದ ಪರಿಸ್ಥಿತಿಯಲ್ಲಿ ಸಿಲುಕಿದ್ದ ನಮಗೆ ಅಲ್ಲಿ ಎಲ್ಲಾ ರೀತಿಯಲ್ಲಿ ಬೆಂಬಲ ನೀಡಿದ್ದಕ್ಕಾಗಿ ಕೈವ್‌ನ ಭಾರತೀಯ ರಾಯಭಾರ ಕಚೇರಿಗೆ ನಾನು ತುಂಬಾ ಕೃತಜ್ಞಳಾಗಿದ್ದೇನೆ ಮತ್ತು ಭಾರತದ ಪ್ರಧಾನ ಮಂತ್ರಿಯವರಿಗೆ ನಾನು ಧನ್ಯವಾದ ಅರ್ಪಿಸುತ್ತೇನೆ. ನಮ್ಮನ್ನು ಬೆಂಬಲಿಸಿದ್ದಕ್ಕಾಗಿ ತುಂಬಾ ಧನ್ಯವಾದಗಳು.
ಭಾರತೀಯ ರಾಯಭಾರ ಕಚೇರಿಯಿಂದಾಗಿ ನಾವು ಸುರಕ್ಷಿತವಾಗಿ ಮನೆಗೆ ಹೋಗುತ್ತೇವೆ ಎಂದು ನಾನು ಭಾವಿಸುತ್ತೇನೆ ಎಂದು ಆಕೆ ಹೇಳಿದ್ದಾಳೆ.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
KLIVE at Google News App
KLIVE Android App on Google Play Store
Download the most loved Klive App for your Android phone or tablet.
ರಷ್ಯಾ ಯುದ್ಧ ಸಾರಿದಾಗ ಉಕ್ರೇನ್‌ನ ನೆರವಿಗೆ ಬರಲಿಲ್ಲ ಎಂಬ ಟೀಕೆ ಎದುರಿಸುತ್ತಿರುವ ಜಗತ್ತಿನ ದೊಡ್ಡಣ್ಣ ಅಮೆರಿಕ ಇದೀಗ ಉಕ್ರೇನ್‌ಗೆ ಬರೋಬ್ಬರಿ 1 ಲಕ್ಷ ಕೋಟಿ ರು. (13.6 ಬಿಲಿಯನ್ ಡಾಲರ್) ನೆರವು ಘೋಷಿಸಿದೆ ಎಂದು ತಿಳಿದುಬಂದಿದೆ.
ಉಕ್ರೇನ್‌ನಲ್ಲಿ ನಿರಾಶ್ರಿತರಾಗಿರುವ 20 ಲಕ್ಷಕ್ಕೂ ಅಧಿಕ ಜನರಿಗೆ ಆಶ್ರಯ ನೀಡಲು ಮುಂದೆ ಬರುವ ಪೂರ್ವ ಯುರೋಪಿಯನ್ ರಾಷ್ಟ್ರಗಳಿಗೆ ಸುಮಾರು 50 ಸಾವಿರ ಕೋಟಿ ರೂ. ನೆರವು ಲಭಿಸಲಿದೆ ಎನ್ನಲಾಗಿದೆ. ಇನ್ನುಳಿದ ಹಣ ಉಕ್ರೇನ್‌ನ ಮರುನಿರ್ಮಾಣಕ್ಕೆ ಬಳಕೆಯಾಗಲಿದೆ ಎಂದು ಶ್ವೇತಭವನದ ಮೂಲಗಳು ಹೇಳಿವೆ.
ಉಕ್ರೇನ್ ಮತ್ತು ಅದರ ಯುರೋಪಿಯನ್ ಸ್ನೇಹಿತ ರಾಷ್ಟ್ರಗಳಿಗೆ ಈ ಹಣ ಲಭಿಸಲಿದೆ ಎಂದು ತಿಳಿದುಬಂದಿದೆ.
ಉಕ್ರೇನ್‌ಗೆ ಅಮೆರಿಕದಿಂದ 10 ಬಿಲಿಯನ್ ಡಾಲರ್ ಮಾನವೀಯ ನೆರವು ನೀಡಲು ಅನುಮತಿ ನೀಡಬೇಕೆಂದು ಅಧ್ಯಕ್ಷ ಜೋ ಬೈಡನ್ ಕಳೆದ ವಾರ ಅಮೆರಿಕದ ಸಂಸತ್ತನ್ನು ಕೋರಿದ್ದರು.
ಆ ಕೋರಿಕೆಯನ್ನು ಮೀರಿ ಅಮೆರಿಕದ ರಿಪಬ್ಲಿಕನ್ ಮತ್ತು ಡೆಮಾಕ್ರೆಟಿಕ್ ಪಕ್ಷಗಳ ಸಂಸದರು ಒಮ್ಮತದಿಂದ 13.6 ಬಿಲಿಯನ್ ಡಾಲರ್ ನೆರವು ನೀಡಲು ಬುಧವಾರ ಒಪ್ಪಿಗೆ ನೀಡಿದ್ದಾರೆ.
ಇದೇ ವೇಳೆ, ಕೊರೋನಾ ವಿರುದ್ಧ ಹೋರಾಡಲು ಇಡೀ ವರ್ಷ 115 ಲಕ್ಷ ಕೋಟಿ ರೂ. ಖರ್ಚು ಮಾಡುವುದಕ್ಕೂ ಸಂಸದರು ಅಮೆರಿಕದ ಸರ್ಕಾರಕ್ಕೆ ಒಪ್ಪಿಗೆ ನೀಡಿದ್ದಾರೆ ಎನ್ನಲಾಗಿದೆ.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
KLIVE at Google News App
KLIVE Android App on Google Play Store
Download the most loved Klive App for your Android phone or tablet.
ತ್ರಿಪುರಾದಲ್ಲಿ ಮಹಿಳೆಯರಿಗಾಗಿ ಶೇ.33% ಸರ್ಕಾರಿ ಉದ್ಯೋಗಗಳು, 200 ಕೋಟಿ ವೆಚ್ಚದಲ್ಲಿ ವಿಶ್ವವಿದ್ಯಾಲಯವನ್ನು ನಿರ್ಮಿಸುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭರವಸೆ ನೀಡಿದ್ದಾರೆ.
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಅವರು ತ್ರಿಪುರಾದಲ್ಲಿ ಶೇ.33ರಷ್ಟು ಸರ್ಕಾರಿ ಉದ್ಯೋಗಗಳನ್ನು ಮಹಿಳೆಯರಿಗೆ ಮೀಸಲಿಡಲಾಗುತ್ತದೆ ಎಂದು ಅಮಿತ್ ಶಾ ಅವರು ಘೋಷಿಸಿದ್ದಾರೆ.
ಈಶಾನ್ಯ ರಾಜ್ಯದಲ್ಲಿ ಬಿಜೆಪಿ-ಐಪಿಎಫ್‍ಟಿ ಸರ್ಕಾರದ ನಾಲ್ಕನೇ ವಾರ್ಷಿಕೋತ್ಸವದ ಅಂಗವಾಗಿ ಅಗರ್ತಲಾದಲ್ಲಿ ನಡೆದ ಜಾಥಾವನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಪ್ಲಬ್ ದೇಬ್ ಅವರ ಆಡಳಿತವು ರಾಜಕೀಯ ಹಿಂಸಾಚಾರಕ್ಕೆ ಪೂರ್ಣ ವಿರಾಮ ಹಾಕಿದೆ. ನಾವು 200 ಕೋಟಿ ರೂಪಾಯಿ ವೆಚ್ಚದಲ್ಲಿ ರಾಷ್ಟ್ರೀಯ ವಿಧಿ ವಿಜ್ಞಾನ ವಿಶ್ವವಿದ್ಯಾಲಯವನ್ನು ಸ್ಥಾಪಿಸುತ್ತೇವೆ. ರಾಜ್ಯದ ಯುವಜನರಿಗಾಗಿ ಕೇವಲ 4 ವರ್ಷಗಳಲ್ಲಿ ಪ್ರತಿ ವ್ಯಕ್ತಿಯ ಆದಾಯವು 13% ರಿಂದ 1.30 ಲಕ್ಷಕ್ಕೆ ಏರಿದೆ ಎಂದು ಅಮಿತ್ ಶಾ ಅವರು ವಿವರಿಸಿದ್ದಾರೆ.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
KLIVE at Google News App
KLIVE Android App on Google Play Store
Download the most loved Klive App for your Android phone or tablet.
ಜನರ ತೀರ್ಪನ್ನು ನಾವು ನಮ್ರತೆಯಿಂದ ಸ್ವೀಕರಿಸುತ್ತೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಿಳಿಸಿದ್ದಾರೆ. ಪಂಚರಾಜ್ಯದಲ್ಲಿ ಕೈ ಪಕ್ಷಕ್ಕೆ ಭಾರೀ ಮುಖಭಂಗವಾಗಿದೆ. ಕಾಂಗ್ರೆಸ್ ಕಾರ್ಯಕರ್ತರು ಮತ್ತು ನಾಯಕರು ಚುನಾವಣೆ ಫಲಿತಾಂಶದಿಂದ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ
ಈ ಕುರಿತು ರಾಹುಲ್ ಗಾಂಧಿ ಟ್ವಿಟ್ಟರ್ ನಲ್ಲಿ, ಜನರ ತೀರ್ಪನ್ನು ನಾವು ನಮ್ರತೆಯಿಂದ ಸ್ವೀಕರಿಸುತ್ತಿದ್ದೇನೆ.
ಜನ ಮತ್ತು ದೇಶವನ್ನು ಗೆದ್ದವರಿಗೆ ಶುಭಾಶಯಗಳು ಎಂದು ಹಾರೈಸಿದ್ದಾರೆ.ನಮ್ಮ ಪಕ್ಷಕ್ಕಾಗಿ ದುಡಿದ ಎಲ್ಲ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಸ್ವಯಂಸೇವಕರಿಗೆ ಅವರ ಶ್ರಮ ಮತ್ತು ಸಮರ್ಪಣೆಗಾಗಿ ನನ್ನ ಕೃತಜ್ಞತೆಗಳು. ನಾವು ಈ ಸೋಲಿನಿಂದ ಕಲಿಯುತ್ತೇವೆ. ನಾವು ಭಾರತದ ಜನರ ಹಿತಾಸಕ್ತಿಗಳಿಗಾಗಿ ಕೆಲಸ ಮಾಡುತ್ತಲೇ ಇರುತ್ತೇವೆ ಎಂದು ಬರೆದು ಟ್ವೀಟ್ ಮಾಡಿದ್ದಾರೆ.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
KLIVE at Google News App
KLIVE Android App on Google Play Store
Download the most loved Klive App for your Android phone or tablet.
ಬಿಜೆಪಿಯು ಬಡವರ ಪರ ಮತ್ತು ಸಕ್ರಿಯ ಆಡಳಿತಕ್ಕೆ ಜನರ ಬೆಂಬಲ ಎಂಬುದನ್ನು ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಸಾಬೀತುಪಡಿಸಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ವರ್ಣಿಸಿದ್ದಾರೆ.
ದೆಹಲಿಯ ಬಿಜೆಪಿ ಹೆಡ್ ಕ್ವಾಟ್ರಸ್‌ನಲ್ಲಿ ಮಾತನಾಡಿದ ಅವರು, ಮಾ.10ರಿಂದ ಹೋಳಿ ಆರಂಭವಾಗಲಿದೆ ಎಂದು ನಾವು ಮೊದಲೇ ಹೇಳಿದ್ದೆವು.
ಇದು ನಮ್ಮ ಎನ್‌ಡಿಎ ಕಾರ್ಯಕರ್ತರ ವಿಜಯ. ಈ ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗವಹಿಸಿದ್ದಕ್ಕಾಗಿ, ಬಿಜೆಪಿಗೆ ವಿಜಯವನ್ನು ಖಚಿತಪಡಿಸಿದ್ದಕ್ಕಾಗಿ ನಾನು ಎಲ್ಲಾ ಮತದಾರರಿಗೆ ಧನ್ಯವಾದ ಅರ್ಪಿಸುತ್ತೇನೆ.
ಇದೇ ಮೊದಲ ಬಾರಿಗೆ ಎರಡನೇ ಅವಧಿಗೆ ಸಿಎಂ ಆಗಿ ಯೋಗಿ ಆದಿತ್ಯನಾಥ್ ಅವರು ಆಯ್ಕೆಯಾಗಿದ್ದಾರೆ ಎಂದು ಅಭಿನಂದನೆ ಸಲ್ಲಿಸುತ್ತೇನೆ. ಈ ಚುನಾವಣೆಗಳಲ್ಲಿ ಮಹಿಳೆಯರು ನಿರ್ಣಾಯಕ ಪಾತ್ರ ವಹಿಸಿದ್ದಾರೆ. ಅವರು ನಮಗೆ ಆಶೀರ್ವಾದ ಮಾಡಿದ್ದಾರೆ. ಮಹಿಳಾ ಮತದಾರರು ಪ್ರಾಬಲ್ಯ ಹೊಂದಿರುವ ಕ್ಷೇತ್ರಗಳಲ್ಲಿ ನಾವು ಅದ್ಭುತವಾಗಿ ಗೆದ್ದಿದ್ದೇವೆ. ಈ ವಿಜಯದಲ್ಲಿ ನಮ್ಮ ನಾರಿ ಶಕ್ತಿ ನಮ್ಮ ಪಾಲುದಾರರಾಗಿದ್ದಾರೆ ಎಂದು ಮಾನ್ಯ ಪ್ರಧಾನಿ ನರೇಂದ್ರ ಮೋದಿ ಅವರು ಸ್ಮರಿಸಿಕೊಂಡಿದ್ದಾರೆ.
ಗೋವಾದಲ್ಲಿ ಎಲ್ಲಾ ಎಕ್ಸಿಟ್ ಪೋಲ್‌ಗಳು ತಪ್ಪು ಎಂಬುದು ಸಾಬೀತಾಗಿದೆ. ಉತ್ತರಾಖಂಡದಲ್ಲಿ ಬಿಜೆಪಿ ಹೊಸ ಇತಿಹಾಸ ಬರೆದಿದೆ. ರಾಜ್ಯದಲ್ಲಿ ಮೊದಲ ಬಾರಿಗೆ ಪಕ್ಷವೊಂದು ಸತತ ಎರಡನೇ ಅವಧಿಗೆ ಅಧಿಕಾರಕ್ಕೆ ಬಂದಿದೆ ಎಂದು ಐದು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಕ್ರಿಯಿಸಿದ್ದಾರೆ.